Tag: ಪೇದೆ ಮಣಿಕಂಠ

  • ಸಮನ್ಸ್ ನೀಡಲು ಹೋದಾಗ ಪೊಲೀಸ್ ಪೇದೆ ಮೇಲೆಯೇ ಹಲ್ಲೆ!

    ಸಮನ್ಸ್ ನೀಡಲು ಹೋದಾಗ ಪೊಲೀಸ್ ಪೇದೆ ಮೇಲೆಯೇ ಹಲ್ಲೆ!

    ಚಿತ್ರದುರ್ಗ: ಹಿರಿಯೂರು ತಾಲೂಕಿನ ಹೂವಿನಹೊಳೆ ಗ್ರಾಮದಲ್ಲಿ ಕರ್ತವ್ಯ ನಿರತ ಪೊಲೀಸ್ ಪೇದೆ ಮೇಲೆ ವ್ಯಕ್ತಿಯೊಬ್ಬ ಹಲ್ಲೆ ನಡೆಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

    ಜಯಪ್ಪ ಹಲ್ಲೆಗೊಳಗಾದ ಪೊಲೀಸ್ ಪೇದೆಯಾಗಿದ್ದಾರೆ. ಇವರು ಹಿರಿಯೂರು ತಾಲೂಕಿನ ಅಬ್ಬಿನಹೊಳೆ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಕೋರ್ಟ್ ನಿಂದ ಸಮನ್ಸ್ ಬಂದಿದ್ದನ್ನು ಮಣಿಕಂಠ ಹಾಗೂ ಆತನ ಸಹಚರರಿಗೆ ನೀಡಲು ಪೇದೆ ಜಯಪ್ಪ ಅವರು ಹೂವಿಹೊಳೆ ಗ್ರಾಮಕ್ಕೆ ಹೋಗುತ್ತಿದ್ದರು. ಈ ವೇಳೆ ಸಮನ್ಸ್ ಪಡೆಯುವ ಮಣಿಕಂಠ ಎಂಬಾತ ಪೇದೆ ಮೇಲೆ ಹಲ್ಲೆ ನಡೆಸಿದ್ದಾನೆ.

    ಈ ಸಂಬಂಧ ಅಬ್ಬಿನಹೊಳೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.