Tag: ಪೊಕ್ಸೊ ಕಾಯ್ದೆ

  • 14ರ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ನಾಲ್ವರು ಸಹೋದರರು

    14ರ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ನಾಲ್ವರು ಸಹೋದರರು

    ಲಕ್ನೋ: 14 ವರ್ಷದ ಬಾಲಕಿ ಮೇಲೆ ನಾಲ್ವರು ಅಣ್ಣ-ತಮ್ಮಂದಿರು ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

    ಆರೋಪಿಗಳು 23 ರಿಂದ 28 ವರ್ಷದೊಳಗಿನ ಸಹೋದರರು ಎಂದು ಗುರುತಿಸಲಾಗಿದೆ. ಬಾಲಕಿಯ ಮನೆಗೆ ನುಗ್ಗಿ ಅವರಲ್ಲಿ ಒಬ್ಬನು ಆಕೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಉಳಿದವರು ಮೊಬೈಲ್ ಫೋನ್‍ಗಳಲ್ಲಿ ಈ ಕೃತ್ಯವನ್ನು ಚಿತ್ರೀಕರಿಸಿದ್ದಾರೆ. ಬಾಲಕಿಯ ಕುಟುಂಬ ಸದಸ್ಯರು ಪೊಲೀಸ್ ರನ್ನು ಸಂಪರ್ಕಿಸಿದರೆ ವೀಡಿಯೊವನ್ನು ಸೋಷಿಯಲ್ ಮೀಡಿಯಾಗಳಲ್ಲಿ ಅಪ್‍ಲೋಡ್ ಮಾಡುವುದಾಗಿ ಆರೋಪಿಗಳು ಬೆದರಿಕೆ ಹಾಕಿದ್ದಾರೆ.

    ಸಂತ್ರಸ್ತೆಯ ತಂದೆ ಆರೋಪಿಗಳ ಕುಟುಂಬವನ್ನು ಸಂಪರ್ಕಿಸಿದಾಗ ಆರೋಪಿ ಡ್ಯಾನಿಶ್ ಮತ್ತು ಅವರ ಮೂವರು ಸಹೋದರರು ಗಲಾಟೆ ಮಾಡಿದ್ದಾರೆ. ಬಾಲಕಿ ತಂದೆ ಮಗಳು ಪೊಲೀಸರನ್ನು ಸಂಪರ್ಕಿಸಿದರೆ ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಬಾಲಕಿಯ ಪೋಷಕರು ತಿಳಿಸಿದ್ದಾರೆ.

    ಐಪಿಸಿ ಸೆಕ್ಷನ್ 354 (ತೊಂದರೆ ನೀಡುವುದು), 323 (ಸ್ವಯಂಪ್ರೇರಣೆಯಿಂದ ನೋವನ್ನುಂಟುಮಾಡುವುದು), 452 (ಮನೆ ಅತಿಕ್ರಮಣ), 504 (ಉದ್ದೇಶಪೂರ್ವಕ ಅವಮಾನ), 506 (ಕ್ರಿಮಿನಲ್ ಬೆದರಿಕೆ) ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೊಕ್ಸೊ) ಕಾಯ್ದೆಯ ಅಡಿಯಲ್ಲಿ ಆರೋಪಿಗಳ ವಿರುದ್ಧ ಸ್ಟೇಷನ್ ಹೌಸ್ ಆಫೀಸರ್ (ಎಸ್‍ಎಚ್‍ಒ) ಶ್ರೀಕಾಂತ್ ದ್ವಿವೇದಿ ಪ್ರಕರಣ ದಾಖಲಿಸಿದ್ದಾರೆ.

  • ಮದ್ವೆಯಾಗುವುದಾಗಿ ನಂಬಿಸಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ- ಅಪರಾಧಿಗೆ ಜೀವಾವಧಿ ಶಿಕ್ಷೆ

    ಮದ್ವೆಯಾಗುವುದಾಗಿ ನಂಬಿಸಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ- ಅಪರಾಧಿಗೆ ಜೀವಾವಧಿ ಶಿಕ್ಷೆ

    ಚಾಮರಾಜನಗರ: ಅಪ್ರಾಪ್ತ ವಯಸ್ಸಿನ ದಲಿತ ಬಾಲಕಿಯನ್ನು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರವೆಸಗಿದ್ದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿ ಚಾಮರಾಜನಗರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ.

    ಚಾಮರಾಜನಗರದ ಗಾಳೀಪುರ ಬಡಾವಣೆಯ (ಹಾಲಿ ವಾಸ ಚಾಮರಾಜನಗರ ತಾಲೂಕು ಸರಗೂರು) ಶಮೀವುಲ್ಲಾ ಅಲಿಯಾಸ್ ಡಾಮ್ಟೆ ಅಲಿಯಾಸ್ ಸಲ್ಮಾನ್ ಅಲಿಯಾಸ್ ಪ್ರೀತಂ ಎಂಬ ಆರೋಪಿಗೆ ಐಪಿಸಿ ಕಲಂ 366ರ ಅನ್ವಯ 5 ವರ್ಷ ಸಾದಾ ಸಜೆ ಮತ್ತು 50 ಸಾವಿರ ರೂ. ದಂಡ, ಐಪಿಸಿ ಕಲಂ 376(ಎನ್) ಅನ್ವಯ 10 ವರ್ಷ ಕಠಿಣ ಸಜೆ ಹಾಗೂ 1 ಲಕ್ಷ ರೂ. ದಂಡ ಹಾಗೂ ಪೊಕ್ಸೊ ಕಾಯ್ದೆ ಕಲಂ 4 ರ ಅನ್ವಯ 7 ವರ್ಷ ಕಠಿಣ ಸಜೆ ಮತ್ತು 1 ಲಕ್ಷ ರೂ. ದಂಡ, ಪೊಕ್ಸೊ ಕಾಯ್ದೆ ಕಲಂ 6 ರ ಅನ್ವಯ 10 ವರ್ಷ ಕಠಿಣ ಸಜೆ ಮತ್ತು 1 ಲಕ್ಷ ರೂ. ದಂಡ ಮತ್ತು ಜೀವಾವಧಿ ಶಿಕ್ಷೆ ಹಾಗೂ 1 ಲಕ್ಷ ರೂ. ದಂಡ ವಿಧಿಸಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಸದಾಶಿವ ಎಸ್. ಸುಲ್ತಾನ್ ಪುರ ಅವರು ತೀರ್ಪು ನೀಡಿದ್ದಾರೆ.

    ಆರೋಪಿ ಶಮೀವುಲ್ಲಾ ಸ್ಟವ್ ಮತ್ತು ಮಿಕ್ಸಿ ರಿಪೇರಿ ಕೆಲಸ ಮಾಡುತ್ತಿದ್ದು, ಈತ ಚಾಮರಾಜನಗರ ಗ್ರಾಮವೊಂದರ ದಲಿತ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಪರಿಚಯ ಮಾಡಿಕೊಂಡು ಆಕೆಯನ್ನು ಪುಸಲಾಯಿಸಿ ಪ್ರೀತಿಸುವುದಾಗಿ ಹಾಗೂ ಮದುವೆ ಮಾಡಿಕೊಳ್ಳುವುದಾಗಿ ನಂಬಿಸಿ 2018ರ ಜುಲೈ 24 ರಂದು ತಮಿಳುನಾಡಿನ ತಮಿಳುಪುರ ಎಂಬ ಗ್ರಾಮಕ್ಕೆ ತನ್ನ ಮೋಟಾರ್ ಬೈಕ್ ನಲ್ಲಿ ಕರೆದೊಯ್ದಿದ್ದ.

    ಅಂದು ರಾತ್ರಿ ಬಾಲಕಿಯ ಇಷ್ಟಕ್ಕೆ ವಿರುದ್ಧವಾಗಿ ದೈಹಿಕ ಸಂಪರ್ಕ ಮಾಡಿದ್ದ. ನಂತರ ತಮಿಳುಪುರದಿಂದ ಹೊರಟು ಮೈಸೂರು ಜಿಲ್ಲೆಯ ಹುಣಸೂರಿನಲ್ಲಿರುವ ಖಾಸಗಿ ಲಾಡ್ಜ್‌ ವೊಂದರಲ್ಲಿ ಬಲವಂತವಾಗಿ ಇರಿಸಿ ಎರಡು ದಿನಗಳ ಕಾಲ ಬಾಲಕಿಯ ಇಷ್ಟಕ್ಕೆ ವಿರುದ್ಧವಾಗಿ ಅತ್ಯಾಚಾರ ಮಾಡಿದ್ದ. ಗ್ರಾಮಕ್ಕೆ ವಾಪಸ್ ಬಂದು ಬಾಲಕಿ ನಡೆದ ವಿಷಯ ತಿಳಿಸಿದ್ದಳು. ಈ ಬಗ್ಗೆ ಚಾಮರಾಜನಗರ ಪೂರ್ವ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಿಸಿಕೊಂಡು ಅಂದಿನ ಡಿವೈಎಸ್‍ಪಿ ಅವರು ಆರೋಪಿಯ ವಿರುದ್ಧ ನ್ಯಾಯಾಲಯಕ್ಕೆ ದೋಷರೋಪ ಪಟ್ಟಿ ಸಲ್ಲಿಸಿದ್ದರು. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕಿ ಟಿ.ಹೆಚ್.ಲೋಲಾಕ್ಷಿ ವಾದ ಮಂಡಿಸಿದ್ದರು.

    ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರು ಆರೋಪಿ ಅಪ್ರಾಪ್ತ ಬಾಲಕಿಯ ಮೇಲೆ ಎಸಗಿರುವ ಕೃತ್ಯ ಸಾಬೀತಾಗಿದೆ ಎಂದು ತೀರ್ಮಾನಿಸಿ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ. ಚಾಮರಾಜನಗರ ಜಿಲ್ಲಾ ನ್ಯಾಯಾಲಯದ ಇತಿಹಾಸದಲ್ಲಿ ಪೊಕ್ಸೊ ಕಾಯ್ದೆಯಡಿ ಜೀವಾವಧಿ ಶಿಕ್ಷೆ ವಿಧಿಸಿರುವುದು ಇದೇ ಮೊದಲು ಎಂದು ತಿಳಿದುಬಂದಿದೆ.

  • ಅಪ್ರಾಪ್ತ ಪುತ್ರಿ ಮೇಲೆಯೇ ಅತ್ಯಾಚಾರ ಎಸಗಿದ ಅಪ್ಪ

    ಅಪ್ರಾಪ್ತ ಪುತ್ರಿ ಮೇಲೆಯೇ ಅತ್ಯಾಚಾರ ಎಸಗಿದ ಅಪ್ಪ

    – ಬಾವನ ವಿಚಾರಣೆ ವೇಳೆ ಬಯಲಿಗೆ ಬಂತು ತಂದೆಯ ಕೃತ್ಯ

    ಮಂಗಳೂರು: ಅಪ್ರಾಪ್ತ ಪುತ್ರಿ ಮೇಲೆಯೇ ತಂದೆಯೊಬ್ಬ ಅತ್ಯಾಚಾರ ಎಸಗಿದ ಅಮಾನವೀಯ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

    ದಾವೂದ್ (42) ಅತ್ಯಾಚಾರ ಎಸಗಿದ ತಂದೆ. ಆರೋಪಿ ದಾವೂದ್‍ಗೆ ನಾಲ್ಕು ಜನ ಪತ್ನಿಯರಿದ್ದಾರೆ. ಕಾಮುಕ ತಂದೆ ಕಳೆದ ಕೆಲವು ದಿನಗಳಿಂದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ.

    ಏನಿದು ಪ್ರಕರಣ?:
    ಬಾಲಕಿಯ ಮೇಲೆ ಆಕೆಯ ಅಕ್ಕನ ಗಂಡ ಅತ್ಯಾಚಾರ ಎಸಗಿದ್ದ. ಈ ಸಂಬಂಧ ಸಂತ್ರಸ್ತೆಯ ತಾಯಿ ಬಂಟ್ವಾಳ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿ ಪೊಲೀಸರು ವಿಚಾರಣೆ ನಡೆಸಿದ್ದರು. ಈ ವೇಳೆ ಆರೋಪಿ ತನ್ನ ತಪ್ಪು ಒಪ್ಪಿಕೊಂಡಿದ್ದ. ಅಷ್ಟೇ ಅಲ್ಲದೇ ಬಾಲಕಿಯ ಮೇಲೆ ಆಕೆಯ ತಂದೆ ದಾವೂದ್ ಕೂಡ ನಿರಂತರವಾಗಿ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸರಿಗೆ ತಿಳಿಸಿದ್ದಾನೆ.

    ಬಂಧಿತ ಆರೋಪಿಯ ಹೇಳಿಕೆಯಿಂದಾಗಿ ಪ್ರಕರಣವು ಹೊಸ ತಿರುವು ಪಡೆದುಕೊಂಡಿತ್ತು. ಈ ಕುರಿತು ಮಕ್ಕಳ ಸಹಾಯವಾಣಿಯ ಸಿಬ್ಬಂದಿಯು ಸಂತ್ರಸ್ತೆಯನ್ನು ವಿಚಾರಣೆ ಮಾಡಿತ್ತು. ಆಗ ತಂದೆ ದಾವೂದ್ ಕೃತ್ಯ ಬೆಳಕಿಗೆ ಬಂದಿದೆ.

    ಈ ಕುರಿತು ಬಂಟ್ವಾಳ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತ ಬಾಲಕಿಯ ಅಕ್ಕನ ಗಂಡ ಹಾಗೂ ತಂದೆ ದಾವೂದ್ ವಿರುದ್ಧ ಪೊಕ್ಸೊ ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ.