Tag: ಪೊಗರು ಸಿನಿಮಾ

  • ‘ಪೊಗರು’ ಚಿತ್ರದಲ್ಲಿ ಧ್ರುವ ಜೊತೆ ನಟಿಸಿದ್ದ ಬಾಡಿ ಬಿಲ್ಡರ್ ಜೋ ಲಿಂಡ್ನರ್

    ‘ಪೊಗರು’ ಚಿತ್ರದಲ್ಲಿ ಧ್ರುವ ಜೊತೆ ನಟಿಸಿದ್ದ ಬಾಡಿ ಬಿಲ್ಡರ್ ಜೋ ಲಿಂಡ್ನರ್

    ಬಾಡಿ ಬಿಲ್ಡಿಂಗ್‌ನಲ್ಲಿ ವಿಶ್ವ ವಿಖ್ಯಾತಿ ಪಡೆದಿದ್ದ ಜೋ ಲಿಂಡ್ನರ್ (Jo Lindner) ಅವರು ವಿಧಿವಶರಾಗಿದ್ದಾರೆ. ಫಿಟ್‌ನೆಸ್ & ಬಾಡಿ ಬಿಲ್ಡಿಂಗ್ ಕಡೆ ಅತಿಯಾದ ಕಾಳಜಿ ನೀಡುವವರಿಗೆ ಈ ಮೂಲಕ ಶಾಕಿಂಗ್ ಸುದ್ದಿ ಸಿಕ್ಕಿದೆ. 30 ವರ್ಷದ ವಯಸ್ಸಿನ ಜೋ ಲಿಂಡ್ನರ್ ಏಕಾಏಕಿ ಮರಣ ಹೊಂದಿರೋದು ಹಲವು ಅನುಮಾನಕ್ಕೆ ಕಾರಣ ಆಗಿದೆ. ಇದನ್ನೂ ಓದಿ:ಆಂಧ್ರದಲ್ಲಿ ಮದ್ಯಪ್ರಿಯರಿಗೆ ನಟ ಪವನ್ ಕಲ್ಯಾಣ್ ಬಂಪರ್ ಆಫರ್

    ‘ಪೊಗರು’ (Pogaru Kannada Film) ಸಿನಿಮಾದಲ್ಲಿ ಜೋ ಲಿಂಡ್ನರ್ (Jo Lindner) ಅವರು ನಟಿಸಿದ್ದರು. ಈ ಸಿನಿಮಾ ಕ್ಲೈಮ್ಯಾಕ್ಸ್‌ನಲ್ಲಿ ಧ್ರುವ ಸರ್ಜಾ ಜೊತೆ ಅಖಾಡದಲ್ಲಿ ಗುದ್ದಾಡಿದ್ದರು. ಧ್ರುವ ಜೊತೆ ಮಸ್ತ್ ಆಗಿ ಸೆಣಸಾಡಿದ್ದರು. ಪೊಗರು ಧ್ರುವ ಸರ್ಜಾ (Dhruva Sarja) ಜೊತೆ ಫೈಟ್ ಮಾಡಿದ್ದ ಜೋ ಲಿಂಡ್ನರ್ ಇದೀಗ ನಿಧನರಾಗಿದ್ದಾರೆ.

    ಬಾಡಿ ಬಿಲ್ಡಿಂಗ್, ಫಿಟ್‌ನೆಸ್ ಕಡೆ ಹೆಚ್ಚಿನ ಗಮನ ನೀಡುತ್ತಿದ್ದ ಜೋ ಲಿಂಡ್ನರ್ ಅವರಿಗೆ ಇನ್ಸ್ಟಾಗ್ರಾಂ ಖಾತೆಯಲ್ಲಿ 87 ಲಕ್ಷಕ್ಕೂ ಹೆಚ್ಚಿನ ಫಾಲೋವರ್ಸ್ ಇದ್ದು, ಸೋಷಿಯಲ್ ಮೀಡಿಯಾದಲ್ಲಿ ಆಕ್ಟೀವ್ ಆಗಿದ್ರು. ಯೂಟ್ಯೂಬರ್ ಆಗಿ ಕೂಡ ಗುರುತಿಸಿಕೊಂಡಿದ್ದರು. ಇದೀಗ ಜೋ ಲಿಂಡ್ನರ್ ನಿಧನಕ್ಕೆ ಆಪ್ತರು, ಅಭಿಮಾನಿಗಳು ಸಂತಾಪ ಸೂಚಿಸಿದ್ದಾರೆ.

    ನಂದಕಿಶೋರ್‌ ನಿರ್ದೇಶನದ ‘ಪೊಗರು’ ಸಿನಿಮಾ 2021ರಲ್ಲಿ ತೆರೆಕಂಡಿತ್ತು. ಧ್ರುವ ಸರ್ಜಾ, ರಶ್ಮಿಕಾ ಮಂದಣ್ಣ (Rashmika Mandanna) ಜೋಡಿಯ ಪೊಗರು ಸಿನಿಮಾ ಚಿತ್ರಮಂದಿರದಲ್ಲಿ ಮೋಡಿ ಮಾಡಿತ್ತು. ಇನ್ನೂ ರಶ್ಮಿಕಾ ನಟನೆಯ ಕನ್ನಡದ ಕಡೆಯ ಸಿನಿಮಾ ಇದಾಗಿದೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮನವಿಯನ್ನು ಪುರಸ್ಕರಿಸಿ, ಆಶೀರ್ವದಿಸಿ – ಮೌನ ಮುರಿದ ಧ್ರುವ ಸರ್ಜಾ

    ಮನವಿಯನ್ನು ಪುರಸ್ಕರಿಸಿ, ಆಶೀರ್ವದಿಸಿ – ಮೌನ ಮುರಿದ ಧ್ರುವ ಸರ್ಜಾ

    ಬೆಂಗಳೂರು: ಪೊಗರು ವಿವಾದದ ಬಗ್ಗೆ ನಟ ಧ್ರುವ ಸರ್ಜಾ ಮೌನ ಮುರಿದಿದ್ದು, ಟ್ವೀಟ್ ಮಾಡುವ ಮೂಲಕ ಆರೋಪಗಳಿಗೆ ಉತ್ತರ ನೀಡಿದ್ದಾರೆ.

    ನಮ್ಮ ಇಡೀ ಕುಟುಂಬ ಹನುಮ ಭಕ್ತರು. ಆಂಜನೇಯನ ಆಶೀರ್ವಾದವೇ ನಮಗೆ ಶ್ರೀರಕ್ಷೆ. ನಮ್ಮ ಇಡೀ ವಂಶವೇ ಹಿಂದುತ್ವದ ಪದ್ಧತಿಯನ್ನು ಆಚರಿಸುತ್ತ, ಗೌರವಿಸುತ್ತ ಬದುಕುತ್ತಿದೆ. ತಾತನವರ ಕಾಲದಿಂದಲೂ ಹಿಂದುತ್ವದ ಪ್ರತಿಪಾದಕರಾಗಿಯೇ ಬದುಕುತ್ತಿದ್ದೇವೆ. ಕಲೆಯೇ ಧರ್ಮ, ನಾವು ಎಲ್ಲ ಧರ್ಮಗಳನ್ನು ಗೌರವಿಸಿದ್ದೇವೆ. ಚಿತ್ರದ ಕಥೆ, ಪಾತ್ರಪೋಷಣೆಯಲ್ಲಿ ಯಾವುದೇ ಸಮುದಾಯಕ್ಕೆ ನೋವಾಗಿದೆ ಎನ್ನುವಂತಹ ಮಾತು ನಿಜಕ್ಕೂ ನಮ್ಮ ತಂಡಕ್ಕೆ ಬೇಸರ ತಂದಿದೆ ಎಂದು ಟ್ವೀಟ್‍ನಲ್ಲಿ ಸ್ಪಷ್ಟಪಡಿಸಿದ್ದಾರೆ.

    ನೋವಾಗಿದ್ದಕ್ಕಾಗಿಯೇ ಬೇಷರತ್ ಕ್ಷಮೆ ಕೇಳುತ್ತಿದ್ದೇನೆ. ನಿಮಗೆ ಬೇಸರವಾಗಿರುವ ದೃಶ್ಯಗಳನ್ನು ಕತ್ತರಿಸಿದ್ದೇವೆ. ಮತ್ತೆ ಸೆನ್ಸಾರ್ ಆದಮೇಲೆ ನಿಮ್ಮೆದುರು ಮಾತನಾಡೋಣ ಎಂದು ನಾನೇ ನಿರ್ಧರಿಸಿದ್ದೆ. ಈಗ ಅದನ್ನು ಸರಿಪಡಿಸಲು ತಂತ್ರಜ್ಞರ ತಂಡ ಸಿದ್ಧವಾಗಿದೆ. ನನ್ನ ಮನವಿಯನ್ನು ಪುರಸ್ಕರಿಸಿ ಎಂದಿನಂತೆ ನಿಮ್ಮ ಆಶೀರ್ವಾದವಿರಲಿ, ಜೈ ಹನುಮಾನ್ ಎಂದು ಧ್ರುವ ಸರ್ಜಾ ಬೇಷರತ್ ಕ್ಷಮೆಯಾಚಿಸಿದ್ದಾರೆ.

    ಚಿತ್ರದಲ್ಲಿನ ವಿವಾದಿತ ದೃಶ್ಯಗಳನ್ನು ಖಂಡಿಸಿ ಬ್ರಾಹ್ಮಣ ಸಮುದಾಯದವರು ಹೋರಾಟ ನಡೆಸಿದ್ದರು. 12 ರಿಂದ 14 ದೃಶ್ಯಗಳನ್ನು ತೆಗೆಯಲು ಮಂಡಳಿ ಅಧ್ಯಕ್ಷರು ಸಭೆಯಲ್ಲಿ ಬೇಡಿಕೆ ಇಟ್ಟಿದ್ದರು. ಚಪ್ಪಲಿ ಕಾಲಿನಿಂದ ಜನಿವಾರ ಹಾಕಿರುವ ಬ್ರಾಹ್ಮಣನನ್ನು ಒದೆಯುವ ದೃಶ್ಯಗಳಿವೆ. ಆ ದೃಶ್ಯಗಳನ್ನು ತೆಗೆದು ಹಾಕಬೇಕು ಎಂದು ಒತ್ತಾಯಿಸಲಾಗಿತ್ತು. ಆ ದೃಶ್ಯಗಳಿಗೆ ಕತ್ತರಿ ಹಾಕಲು ಪೊಗರು ಟೀಮ್ ಒಪ್ಪಿದ್ದು, ನಿರ್ದೇಶಕ ನಂದಕಿಶೋರ್ ಕ್ಷಮೆಯನ್ನು ಸಹ ಯಾಚಿಸಿದ್ದಾರೆ.

    ಅಖಿಲ ಕರ್ನಾಟಕ ಮಾಧ್ವ ಮಹಾಸಭಾ ಹಾಗೂ ಕರ್ನಾಟಕ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಪೊಗರು ಸಿನಿಮಾದ ವಿರುದ್ಧ ದೂರು ನೀಡಿ ದೃಶ್ಯಕ್ಕೆ ಕತ್ತರಿ ಹಾಕಬೇಕೆಂದು ಆಗ್ರಹಿಸಲಾಗಿತ್ತು.

    ಪೊಗರು ಸಿನಿಮಾದ ವಿರುದ್ಧ ರಾಜ್ಯದ ಹಲವೆಡೆ ಪ್ರತಿಭಟನೆ ನಡೆಸಲಾಗಿತ್ತು. ಮೈಸೂರು, ಕಲಬುರಗಿಯಲ್ಲಿ ಪ್ರತಿಭಟನೆ ನಡೆಸಲಾಗಿತ್ತು. ಅಲ್ಲದೆ ಧಾರವಾಡದಲ್ಲಿ ಸುದ್ದಿಗೋಷ್ಠಿ ನಡೆಸಿ ಆಕ್ಷೇಪಾರ್ಹ ದೃಶ್ಯ ತೆಗೆಯಲು ಒತ್ತಾಯ ಮಾಡಲಾಗಿತ್ತು.

  • ಕಾಲಿವುಡ್‍ಗೆ ಬಹದ್ಧೂರ್ ಹುಡುಗನ ಅದ್ಧೂರಿ ಎಂಟ್ರಿ

    ಕಾಲಿವುಡ್‍ಗೆ ಬಹದ್ಧೂರ್ ಹುಡುಗನ ಅದ್ಧೂರಿ ಎಂಟ್ರಿ

    ಬೆಂಗಳೂರು: ನಟ ಧ್ರುವ ಸರ್ಜಾ ಅಭಿನಯದ ಪೊಗರು ಸಿನಿಮಾ ಕಿಕ್ಕೇರಿಸುತ್ತಿದ್ದು, ಬಿಡುಗಡೆಗೆ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಹೊಸ ವರ್ಷದ ಆರಂಭದಲ್ಲಿಯೇ ಚಿತ್ರ ಬಿಡುಗಡೆಯಾಗಬಹುದು ಎಂದು ನಿರೀಕ್ಷಿಸಲಾಗಿದೆ. ಹೀಗಾಗಿ ಅಭಿಮಾನಿಗಳಲ್ಲಿ ಸಾಕಷ್ಟು ಕುತೂಹಲ ಮೂಡಿದೆ. ಇದೇ ಸಂದರ್ಭದಲ್ಲಿ ಧೃವಾ ಸರ್ಜಾ ತಮಿಳಿಗೆ ಕಾಲಿಡಲಿದ್ದಾರೆ ಎಂಬ ಸುದ್ದಿ ಸಹ ವೈರಲ್ ಆಗಿದೆ.

    ಅರೇ ಇದೇನಪ್ಪಾ ಇದ್ದಕ್ಕಿದ್ದಂತೆ ಧೃವ ಸರ್ಜಾ ತಮಿಳು ಇಂಡಸ್ಟ್ರಿಗೆ ಕಾಲಿಟ್ರಾ, ಯಾವ ಸಿನಿಮಾ ಎಂದು ಯೋಚಿಸಬೇಡಿ. ಸ್ಯಾಂಡಲ್‍ವುಡ್‍ನಲ್ಲಿ ಸೆನ್ಸೇಶನ್ ಕ್ರಿಯೇಟ್ ಮಾಡಿರುವ ಪೊಗರು ಸಿನಿಮಾ ತಮಿಳಿಗೆ ಡಬ್ ಆಗುತ್ತಿದೆ. ಈ ಮೂಲಕ ತಮಿಳಿನಲ್ಲೂ ಧೃವ ಸರ್ಜಾ ಘರ್ಜಿಸಲಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡುವ ಮೂಲಕ ತಿಳಿಸಿರುವ ಧೃವ, ತಮಿಳು ಶೀರ್ಷಿಕೆಯನ್ನು ಬಹಿರಂಗಪಡಿಸಿದ್ದಾರೆ.

    ತಮಿಳಿನಲ್ಲಿ ಸೆಮ್ಮಾ ತಿಮಿರು ಎಂದು ಟೈಟಲ್ ಇಡಲಾಗಿದ್ದು, ಇದರಿಂದ ಅಭಿಮಾನಿಗಳ ಖುಷಿ ಇಮ್ಮಡಿಯಾಗಿದೆ. ಈಗಾಗಲೇ ತೆಲುಗಿಗೆ ಡಬ್ ಆಗುತ್ತಿದ್ದು, ಹಿಂದಿ ಡಬ್ಬಿಂಗ್ ಹಕ್ಕುಗಳು ಸಹ 7.2 ಕೋಟಿ.ರೂ.ಗೆ ಮಾರಾಟ ಆಗಿವೆ. ಹೀಗಾಗಿ ಬಹುಭಾಷೆಗಳಲ್ಲಿ ಸಿನಿಮಾ ಬಿಡುಗಡೆ ಆಗುತ್ತಿದೆ ಎಂದೇ ಹೇಳಬಹುದು. ಇದರಿಂದಾಗಿ ಧೃವ ಅಭಿಮಾನಿಗಳು ಸಖತ್ ಖುಷಿಯಾಗಿದ್ದಾರೆ.

    ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಸಿನಿಮಾ ಇಷ್ಟೊತ್ತಿಗೆ ತೆರೆ ಕಾಣಬೇಕಿತ್ತು. ಆದರೆ ಕೊರೊನಾ ಹಿನ್ನೆಲೆ ಸಿನಿಮಾ ಕೆಲಸಗಳು ಸ್ಥಗಿತಗೊಂಡಿದ್ದರಿಂದ ಬಿಡುಗಡೆ ತಡವಾಗಿದೆ. ನಂದಕಿಶೋರ್ ನಿರ್ದೇಶನ ಸಿನಿಮಾಗಿದ್ದು, ಧೃವ ಸರ್ಜಾಗೆ ಜೋಡಿಯಾಗಿ ರಶ್ಮಿಕಾ ಮಂದಣ್ಣ ನಟಿಸುತ್ತಿದ್ದಾರೆ. ರಶ್ಮಿಕಾ ಮಂದಣ್ಣ ಈಗಾಗಲೇ ತೆಲುಗು, ತಮಿಳು ಬಳಿಕ ಇದೀಗ ಬಾಲಿವುಡ್‍ಗೂ ಕಾಲಿಟ್ಟಿದ್ದಾರೆ. ಹೀಗಾಗಿ ಸಿನಿಮಾ ಯಶಸ್ಸು ಕಾಣಲಿದೆ ಎಂಬುದು ಸಿನಿಮಾ ತಂಡದ ವಿಶ್ವಾಸ ಹೀಗಾಗಿ ತಮಿಳು, ತೆಲುಗಿನಲ್ಲೂ ಸಿನಿಮಾ ಡಬ್ ಮಾಡಲಾಗುತ್ತಿದೆ.

    ಹಾಡುಗಳ ಮೂಲಕ ಸಖತ್ ಸದ್ದು ಮಾಡಿರುವ ಪೊಗರು ಸಿನಿಮಾ ಹೇಗಿರಲಿದೆ ಎಂಬುದು ಅಭಿಮಾನಿಗಳ ಕುತೂಹಲವಾಗಿದೆ. ಸಿನಿಮಾದ ಕರಾಬು ಹಾಡು ಸ್ಯಾಂಡಲ್‍ವುಡ್‍ನಲ್ಲಿ ಸಖತ್ ಸದ್ದು ಮಾಡುತ್ತಿದೆ. ಚಿತ್ರಕ್ಕಾಗಿ ಧೃವ ಸರ್ಜಾ ಸಹ ಭಾರೀ ವರ್ಕೌಟ್ ಮಾಡಿದ್ದು, ಚಿತ್ರ ಹೇಗೆ ಮೂಡಿ ಬರಲಿದೆ ಎಂಬುದನ್ನು ಕಾದು ನೋಡಬೇಕಿದೆ.