Tag: ಪೊಲಿಸ್ ಪೇದೆ

  • ವಿಧಾನಸೌಧದ ಒಳಗೆ ಎಣ್ಣೆ ಬಾಟ್ಲಿ ತಂದ ಪೊಲೀಸ್ ಪೇದೆ- ಕೈ ಜಾರಿ ಬಿದ್ದು ಪೀಸ್, ಪೀಸ್

    ವಿಧಾನಸೌಧದ ಒಳಗೆ ಎಣ್ಣೆ ಬಾಟ್ಲಿ ತಂದ ಪೊಲೀಸ್ ಪೇದೆ- ಕೈ ಜಾರಿ ಬಿದ್ದು ಪೀಸ್, ಪೀಸ್

    ಬೆಂಗಳೂರು: ಪೊಲೀಸ್ ಪೇದೆಯೊಬ್ಬ ವಿಧಾನಸೌಧ (Vidhanasoudha) ದೊಳಗೆ ಎಣ್ಣೆ ಬಾಟ್ಲಿ ತಂದು ಫಜೀತಿಗೆ ಸಿಲುಕಿದ ಪ್ರಸಂಗವೊಂದು ನಡೆದಿದೆ.

    ಹೌದು. ಕೆಂಗಲ್ ಗೇಟ್ (Kengal Gate) ಬಳಿ ಪೊಲೀಸಪ್ಪನ ಎಣ್ಣೆ ಬಾಟ್ಲಿ ಪುರಾಣ ನಡೆದಿದೆ. ವಿಧಾನಸೌಧ ಒಳಗಡೆಯಿಂದ ಹೊರೆಗೆ ಹೋಗುತ್ತಿದ್ದ ಮಫ್ತಿಯಲ್ಲಿದ್ದ ಪೊಲೀಸ್ ಪೇದೆ, ಬ್ಯಾಗ್ ನಲ್ಲಿ ಮದ್ಯದ ಬಾಟ್ಲಿ ತೆಗೆದುಕೊಂಡು ಹೋಗುತ್ತಿದ್ದರು. ಹೀಗೆ ಹೊರಗೆ ಹೋಗುವಾಗ ಬಾಟ್ಲಿ ಕೈ ಜಾರಿ ಬಿದ್ದಿದೆ. ಪರಿಣಾಮ ಪೀಸ್ ಪೀಸ್ ಆಗಿದೆ. ಆತುರವಾಗಿ ಚೂರಾದ ಬಾಟ್ಲಿ ಪೀಸ್ ಎತ್ತಿಕೊಂಡು ಪೇದೆ ಅಲ್ಲಿಂದ ಹೋಗಿದ್ದಾರೆ.

    ಇತ್ತ ವಿಚಾರ ತಿಳಿಯುತ್ತಿದ್ದಂತೆಯೇ ಮಾಧ್ಯಮದವರು ಸ್ಥಳಕ್ಕೆ ತೆರಳಿದ್ದು, ಕ್ಯಾಮೆರಾ ಕಂಡ ಕೂಡಲೇ ಪೊಲೀಸ್ ಪೇದೆ ವಿಧಾನಸೌಧದಿಂದ ಪರಾರಿಯಾಗಿದ್ದಾರೆ. ಸದ್ಯ ವಿಧಾನಸೌಧ ಭದ್ರತೆ ಪೊಲೀಸರು, ಬಾಟ್ಲಿ ತಂದ ಪೊಲೀಸ್ ಪೇದೆ ಯಾರು ಅಂತ ಮಾಹಿತಿ ನೀಡಿಲ್ಲ. ಇದನ್ನೂ ಓದಿ: ಸಿಎಂ ರಾಜೀನಾಮೆ ಕೊಡಬೇಕು- ಬೊಮ್ಮಾಯಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

    ಹಾಗಾದ್ರೆ ವಿಧಾನಸೌಧಕ್ಕೆ ಮದ್ಯದ ಬಾಟ್ಲಿ ಬಂದಿದ್ದು ಹೇಗೆ?, ಭದ್ರತೆ ತಪ್ಪಿಸಿ ಮದ್ಯದ ಬಾಟ್ಲಿ ವಿಧಾನಸೌಧದ ಒಳಗೆ ಹೋಗಿದ್ದು ಹೇಗೆ?, ವಿಧಾನಸೌಧದ ಒಳಗಿಂದ ಮದ್ಯದ ಬಾಟ್ಲಿ ಎಲ್ಲಿಗೆ ತೆಗೆದುಕೊಂಡು ಹೋಗ್ತಿದ್ದರು..?, ಪೊಲೀಸರೇ ಹೀಗೆ ಮಾಡಿದ್ರೆ ವಿಧಾನಸೌಧಕ್ಕೆ ರಕ್ಷಣೆ ಹೇಗೆ ಎಂಬ ಹಲವು ಪ್ರಶ್ನೆಗಳು ಹುಟ್ಟಿಕೊಂಡಿವೆ.

  • ಕಾರು ಚಾಲಕನನ್ನು 2 ದಿನ ಠಾಣೆಯಲ್ಲೇ ಕೂಡಿ ಹಾಕಿ ಹಲ್ಲೆಗೈದ ಪೊಲೀಸ್ ಪೇದೆ!

    ಕಾರು ಚಾಲಕನನ್ನು 2 ದಿನ ಠಾಣೆಯಲ್ಲೇ ಕೂಡಿ ಹಾಕಿ ಹಲ್ಲೆಗೈದ ಪೊಲೀಸ್ ಪೇದೆ!

    ಕಲಬುರಗಿ: ರೋಲ್ ಕಾಲ್ ಮಾಡುವದನ್ನು ಪ್ರಶ್ನಿಸಿದಕ್ಕೆ ಕಾರ್ ಚಾಲಕನನ್ನು ಪೇದೆಯೋರ್ವ ಅಮಾನವಿಯವಾಗಿ ಹಲ್ಲೆ ಮಾಡಿರುವ ಘಟನೆ ಕಲಬುರಗಿಯ ಮರತೂರ ಗ್ರಾಮದ ಹೊರವಲಯದಲ್ಲಿ ನಡೆದಿದೆ.

    ಕಳೆದ ಎರಡು ದಿನಗಳ ಹಿಂದೆ ಚಾಲಕ ಚಂದ್ರು ಮತ್ತು ಪೇದೆ ರವೀಂದ್ರ ಕುಮಾರ್ ನಡುವೆ ಈ ಜಗಳ ನಡೆದಿದೆ. ಘಟನೆಯ ನಂತರ ಯಾವುದೇ ದೂರು ಇಲ್ಲದೇ ಚಾಲಕನನ್ನು ಪೇದೆ ಹಾಗು ಆತನ ಸ್ನೇಹಿತರು ಎರಡು ದಿನಗಳ ಕಾಲ ಠಾಣೆಯಲ್ಲಿ ಕೂಡಿಸಿ ಅಮಾನವೀಯವಾಗಿ ಹಲ್ಲೆ ಮಾಡಿದ್ದಾರೆ.

     ಆ ಬಳಿಕ ಚಾಲಕನ ಚಿಕ್ಕಪ್ಪನ ಅಂತ್ಯಸಂಸ್ಕಾರ ನಡೆಯುತ್ತಿದ್ದು, ಬಿಡುಗಡೆ ಮಾಡುವಂತೆ ಚಾಲಕನ ಚಿಕ್ಕಪ್ಪ ವಿಶ್ವವಿದ್ಯಾಲಯ ಪಿಎಸ್‍ಐ ಜಗನಾಥ್‍ಗೆ ಕರೆ ಮಾಡಿದ್ದಾರೆ. ಈ ವೇಳೆ ಪೇದೆ ಅವರಿಗೂ ಕೂಡ ಅವಾಚ್ಯ ಶಬ್ದಗಳಿಂದ ಬೈದಿದ್ದಾನೆ. ಈ ವಿಷಯ ಗ್ರಾಮಸ್ಥರಿಗೆ ತಿಳಿಯುತ್ತಿದ್ದಂತೆಯೇ ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದಾರೆ. ಇದರಿಂದಾಗಿ ಚಾಲಕನನ್ನು ಠಾಣೆಯಿಂದ ಬಿಡುಗಡೆ ಮಾಡಲಾಗಿದೆ.

    ಸದ್ಯ ಪೊಲೀಸರ ಕೈಯಿಂದ ಬಿಡುಗಡೆಯಾದ ಚಂದ್ರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ: www.instagram.com/publictvnews

  • ಲವ್ ಮಾಡು ಅಂತಾ ಬೆನ್ನು ಬಿದ್ದ ಪೊಲೀಸ್ ಪೇದೆ- ಯುವತಿ ಆತ್ಮಹತ್ಯೆ

    ಲವ್ ಮಾಡು ಅಂತಾ ಬೆನ್ನು ಬಿದ್ದ ಪೊಲೀಸ್ ಪೇದೆ- ಯುವತಿ ಆತ್ಮಹತ್ಯೆ

    ಹೈದರಾಬಾದ್: 22 ವರ್ಷದ ಯುವತಿಯೊಬ್ಬಳು ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಹೈದರಾಬಾದ್ ಸಮೀಪದ ಎಚರಾಮ್ ಬಳಿ ನಡೆದಿದೆ.

    ಮೃತ ಯುವತಿಯನ್ನು ಎಂ ಶ್ಯಾಮಲಾ ಎಂದು ಗುರುತಿಸಲಾಗಿದೆ. ಈಕೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ಆತ್ಮಹತ್ಯೆಗೆ ಶರಣಾಗಿದ್ದಾಳೆ.

    ಪೊಲೀಸ್ ಪೇದೆಯೊಬ್ಬರು ಲವ್ ಮಾಡು ಅಂತಾ ಶ್ಯಾಮಲಾ ಬೆನ್ನು ಬಿದ್ದಿದ್ದೇ ಆತ್ಮಹತ್ಯೆಗೆ ಕಾರಣವೆಂದು ಪೋಷಕರು ಆರೋಪಿಸಿದ್ದಾರೆ. ತನ್ನ ಪ್ರೀತಿಯನ್ನು ಒಪ್ಪಿಕೊಳ್ಳುವಂತೆ ಪೊಲೀಸ್ ಪೇದೆ ಎಸ್ ನರಸಿಂಹ ಪೀಡಿಸುತ್ತಿದ್ದರು. ಆದ್ರೆ ಶ್ಯಾಮಾಲಾಳಿಗೆ ಮಾತ್ರ ಇದು ಇಷ್ಟವಿರಲಿಲ್ಲ. ಹೀಗಾಗಿ ಪೇದೆಯ ಕಿರುಕುಳದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಅಂತಾ ಯುವತಿಯ ಪೋಷಕರು ಆರೋಪ ಮಾಡಿದ್ದಾರೆ.

    ಯುವತಿ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿಕೊಂಡ ನಂತರ ಜೋರಾಗಿ ಕಿರುಚಾಡಿದ್ದು, ಈ ವೇಳೆ ಅಕ್ಕಪಕ್ಕದ ಮನೆಯವರು ತೆರಳಿ ಕೂಡಲೇ ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದ್ರೆ ಅದಾಗಲೇ ಆಕೆ ಮೃತಪಟ್ಟಿದ್ದಾಳೆ ಅಂತಾ ವೈದ್ಯರು ತಿಳಿಸಿದ್ದಾರೆ.

    ಸದ್ಯ ಯುವತಿಯ ಪೋಷಕರು ಎಚರಾಮ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪೇದೆ ಎಸ್ ನರಸಿಂಹ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

    ದೂರಿನಲ್ಲಿ ಪೊಲೀಸ್ ಪೇದೆ ತನ್ನ ಲವ್ ಪ್ರಪೋಸಲನ್ನು ಒಪ್ಪಿಕೊಳ್ಳುವಂತೆ ಆಕೆಗೆ ಕಿರುಕುಳ ಕೊಡುತ್ತಿದ್ದನು. ಇದರಿಂದ ಮನನೊಂದು ಶ್ಯಾಮಲಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಅಂತಾ ಉಲ್ಲೇಖಿಸಿರುವುದಾಗಿ ಪೊಲೀಸ್ ಇನ್ಸ್ ಪೆಕ್ಟರ್ ಜೆ ಮದನ್ ಮೋಹನ್ ರೆಡ್ಡಿ ತಿಳಿಸಿದ್ದಾರೆ.

    ಸದ್ಯ ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರೋ ಪೊಲೀಸರು ತನಿಖೆ ಆರಂಭಿಸಿದ್ದಾರೆ.