Tag: ಪೊಲೀಸರ ದಾಳಿ

  • ನಟಿ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌ – ನಟ ದಿಲೀಪ್‌ ಮನೆ ಮೇಲೆ ಕೇರಳ ಪೊಲೀಸರ ದಾಳಿ

    ನಟಿ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌ – ನಟ ದಿಲೀಪ್‌ ಮನೆ ಮೇಲೆ ಕೇರಳ ಪೊಲೀಸರ ದಾಳಿ

    ತಿರುವನಂತಪುರಂ: 2017ರಲ್ಲಿ ನಟಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧ ವಿಭಾಗದ ಕೇರಳ ಪೊಲೀಸ್‌ ತಂಡವು ನಟ ದಿಲೀಪ್‌ ಮತ್ತು ಆತನ ಸಹೋದರನ ಮನೆ, ಕಚೇರಿಗಳ ಮೇಲೆ ದಾಳಿ ಮಾಡಿದೆ.

    ದಿಲೀಪ್‌ ಅವರಿಗೆ ಸಂಬಂಧಿಸಿದ್ದು ಎನ್ನಲಾದ ಆಡಿಯೋ ಕ್ಲಿಪ್‌ವೊಂದನ್ನು ಟಿವಿ ವಾಹಿನಿಯೊಂದು ಬಿಡುಗಡೆ ಮಾಡಿತ್ತು. ಹೀಗಾಗಿ ಭಾನುವಾರ ನಟನ ವಿರುದ್ಧ ಪ್ರಕರಣ ದಾಖಲಾಗಿತ್ತು. ನಟ, ತನಿಖಾಧಿಕಾರಿಗಳ ಮೇಲೆ ದಾಳಿ ನಡೆಸಲು ಸಂಚು ರೂಪಿಸಿದ್ದರು ಎಂಬ ಮಾಹಿತಿ ಆಡಿಯೋದಲ್ಲಿ ಇದೆ. ಇದನ್ನೂ ಓದಿ: ಲೋಕಲ್ ಕಂಟೈನ್ಮೆಂಟ್‍ಗೆ ಮೋದಿ ಸಲಹೆ

    ನಟಿಯೊಬ್ಬರ ಮೇಲಿನ ಹಲ್ಲೆ, ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ದಿಲೀಪ್‌ ವಿರುದ್ಧ ನಿರ್ದೇಶಕ ಬಾಲಚಂದ್ರಕುಮಾರ್‌ ಹಲವು ಹೇಳಿಕೆಗಳನ್ನು ನೀಡಿದ್ದರು. ತನಿಖಾಧಿಕಾರಿಗಳ ಮೇಲೆ ದಾಳಿ ನಡೆಸುವ ಸಂಚಿನ ಕುರಿತು ಹಲವು ಚರ್ಚೆಗಳು ನಡೆದಿದ್ದವು ಎಂದು ಕುಮಾರ್‌ ಗಂಭೀರ ಆರೋಪ ಮಾಡಿದ್ದಾರೆ.

    ಕಳೆದ ವರ್ಷ ನ.25 ರಂದು ಬಾಲಚಂದ್ರಕುಮಾರ್‌, ಕೇರಳ ಸಿಎಂಗೆ ದೂರು ಸಲ್ಲಿಸಿದ್ದರು. ನಟ ದಿಲೀಪ್‌ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ನಟನ ಮನೆಯಲ್ಲಿ ಪ್ರಮುಖ ಆರೋಪಿ ಪಲ್ಸರ್‌ ಸುನಿ ಕಾಣಿಸಿಕೊಂಡಿದ್ದನ್ನು ನಾನು ನೋಡಿದ್ದೇನೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ನಟಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ದಿಲೀಪ್‌ ಕೂಡ ಆರೋಪಿ ಎಂದು ದೂರಿದ್ದಾರೆ. ಇದನ್ನೂ ಓದಿ: UP Election – ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯಲ್ಲಿ 50 ಮಹಿಳೆಯರು, ಅತ್ಯಾಚಾರ ಸಂತ್ರಸ್ತೆ ತಾಯಿಯೂ ಅಭ್ಯರ್ಥಿ

    POLICE JEEP

    ನಟ ದಿಲೀಪ್‌ ಅವರಿಗೆ ಸಂಬಂಧಿಸಿದ ಮೂರು ಸ್ಥಳಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಲು ಅಧಿಕಾರಿಗಳ ಮೂರು ತಂಡಗಳನ್ನು ಕಳುಹಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಬದುಕುಳಿದಿದ್ದ ನಟಿ, ನಟ ದಿಲೀಪ್‌ ಕುಮಾರ್‌ ವಿರುದ್ಧ ತನಿಖೆಗೆ ಒತ್ತಾಯಿಸಿದ್ದರು. ಸಂತ್ರಸ್ತೆ ನಟಿ ತಮಿಳು, ತೆಲುಗು, ಮಲಯಾಳಂ ಭಾಷೆ ಸಿನಿಮಾಗಳಲ್ಲೂ ನಟಿಸಿದ್ದಾರೆ. ಪ್ರಕರಣದಲ್ಲಿ 10 ಆರೋಪಿಗಳಿದ್ದು, ಆರಂಭದಲ್ಲಿ 7 ಮಂದಿಯನ್ನು ಪೊಲೀಸರು ಬಂಧಿಸಿದ್ದರು. ನಂತರ ದಿಲೀಪ್‌ ಅವರನ್ನು ಬಂಧಿಸಿ ನಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿತ್ತು.

  • ಬೆಳ್ಳಂಬೆಳಗ್ಗೆ ರೌಡಿ ಶೀಟರ್ ಮನೆಗಳ ಮೇಲೆ ಪೊಲೀಸರ ದಾಳಿ

    ಬೆಳ್ಳಂಬೆಳಗ್ಗೆ ರೌಡಿ ಶೀಟರ್ ಮನೆಗಳ ಮೇಲೆ ಪೊಲೀಸರ ದಾಳಿ

    ಬೆಂಗಳೂರು: ಇಂದು ಬೆಳ್ಳಂಬೆಳಗ್ಗೆ ರೌಡಿಶೀಟರ್ ಮನೆಗಳ ಮೇಲೆ ಪೊಲೀಸರು ದಾಳಿ ನಡೆಸಿ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗದಂತೆ ಎಚ್ಚರಿಕೆ ನೀಡಿದ್ದಾರೆ.

    ಪಶ್ಚಿಮ ವಿಭಾಗದ 6 ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಮಾಗಡಿ ರೋಡ್ ಮತ್ತು ಕೆಪಿ ಅಗ್ರಹಾರ, ಬ್ಯಾಟರಾಯನ ಪುರ, ಕಾಟನ್ ಪೇಟೆ, ಜೆಜೆ ನಗರ, ಚಾಮರಾಜಪೇಟೆ ಹಾಗೂ ಕೆಂಗೇರಿ, ವಿಜಯನಗರದಲ್ಲಿ ವಾಸವಾಗಿರುವ ರೌಡಿಶೀಟರ್ ಹಾಗೂ ಗಾಂಜಾ ಪೆಡ್ಲರ್‌ಗಳ ಮನೆಗಳ ಮೇಲೆ ಡಿಸಿಪಿ, ಎಸಿಪಿ, ಇನ್ಸ್‌ಪೆಕ್ಟರ್‌ ದಾಳಿ ನಡೆಸಿ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗದಂತೆ ಬಿಸಿ ಮುಟ್ಟಿಸಿದ್ದಾರೆ. ಇದನ್ನೂ ಓದಿ: ನಾಳೆ ಪುನೀತ್ 11ನೇ ದಿನದ ಪುಣ್ಯಾರಾಧನೆ – ಅಪ್ಪು ಕುಟುಂಬಸ್ಥರಿಂದ ಭಾರೀ ಸಿದ್ಧತೆ

    ಪಶ್ಚಿಮ ವಿಭಾಗ ಡಿಸಿಪಿ ಸಂಜೀವ್ ಪಾಟೀಲ್ ನೇತೃತ್ವದಲ್ಲಿ ಈ ದಾಳಿ ನಡೆದಿದೆ. ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಪೆಡ್ಲರ್ ಗಳು, ಜೊತೆಗೆ ನ್ಯಾಯಲಯದಿಂದ ಸಮನ್ಸ್ ಇದ್ದರೂ ಕೂಡ ಹಾಜರಾಗದೇ ತಲೆ ಮರೆಸಿಕೊಂಡ ಆರೋಪಿಗಳು, ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾದಂತಹ ರೌಡಿಶೀಟರ್‍ಗಳನ್ನು ಕರೆತಂದು ಪೊಲೀಸ್ ಠಾಣೆಯಲ್ಲಿ ಎಚ್ಚರಿಕೆ ನೀಡಲಾಗಿದೆ.

    ಒಟ್ಟು 180 ರೌಡಿಶೀಟರ್ ಮನೆಗಳ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸಲಾಗಿದ್ದು, 123 ಮಂದಿ ರೌಡಿಗಳು ಮತ್ತು ಡ್ರಗ್ ಪೆಡ್ಲರ್‍ಗಳನ್ನ ಠಾಣೆಗೆ ಕರೆತಂದು ಎಚ್ಚರಿಕೆ ನೀಡಿದೆ. ಇನ್ನೂ 600 ಮಂದಿ ಪೊಲೀಸರಿಂದ ಈ ಕಾರ್ಯಚರಣೆ ನಡೆಸಲಾಗಿದೆ. ಇದನ್ನೂ ಓದಿ: ಸ್ಪೆಷಲ್‌ ಚಿಕನ್ ಸೂಪ್ ಸಖತ್ ಟೇಸ್ಟಿ

  • ಕೊರೊನಾ ವೇಳೆ ಸಹಾಯ – ರಾಷ್ಟ್ರೀಯ ಯೂಥ್ ಕಾಂಗ್ರೆಸ್ ಅಧ್ಯಕ್ಷರ ಕಚೇರಿ ಮೇಲೆ ಪೊಲೀಸರ ದಾಳಿ

    ಕೊರೊನಾ ವೇಳೆ ಸಹಾಯ – ರಾಷ್ಟ್ರೀಯ ಯೂಥ್ ಕಾಂಗ್ರೆಸ್ ಅಧ್ಯಕ್ಷರ ಕಚೇರಿ ಮೇಲೆ ಪೊಲೀಸರ ದಾಳಿ

    ನವದೆಹಲಿ: ಕೊರೊನಾ ಸಂಕಷ್ಟ ಕಾಲದಲ್ಲಿ ಕಷ್ಟದಲ್ಲಿದ್ದ ವ್ಯಕ್ತಿಗಳಿಗೆ ಸಹಾಯ ಮಾಡುತ್ತಿದ್ದ ರಾಷ್ಟ್ರೀಯ ಯೂಥ್ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ್ ಬಿ.ವಿ ಅವರನ್ನು ದೆಹಲಿ ಪೊಲೀಸರು ವಿಚಾರಣೆ ನಡೆಸಿದ್ದಾರೆ.

    ಇಂದು ಬೆಳಗ್ಗೆ ದೆಹಲಿಯ ರೈಸಿನಾ ರಸ್ತೆಯಲ್ಲಿರುವ ಯೂಥ್ ಕಾಂಗ್ರೆಸ್ ಕಚೇರಿ ಮೇಲೆ ಧಿಡೀರ್ ದಾಳಿ ನಡೆಸಿದ ಪೊಲೀಸರು ಕಚೇರಿ ಪರಿಶೀಲನೆ ನಡೆಸಿ ಶ್ರೀನಿವಾಸ್ ಬಿ.ವಿ ಅವರನ್ನು ವಿಚಾರಣೆ ನಡೆಸಿದ್ದಾರೆ.

    ಶ್ರೀನಿವಾಸ್ ಕಳೆದೊಂದು ತಿಂಗಳಿನಿಂದ ಕೊರೊನಾ ಸಂಕಷ್ಟದಲ್ಲಿರುವ ಜನರಿಗೆ ಸಹಾಯ ಮಾಡುತ್ತಿದ್ದು ಇದಕ್ಕಾಗಿ ಅವರು ವಾರ್ ರೂಂ ರಚಿಸಿಕೊಂಡಿದ್ದಾರೆ. ಆನ್ಲೈನ್ ಮೂಲಕ ಬರುವ ಮನವಿಗಳಿಗೆ ಸ್ಪಂದಿಸಿ ಕೊರತೆಯಲ್ಲಿರುವ ಆಮ್ಲಜನಕ, ರೆಮ್ಡೆಸಿವಿರ್ ಪೂರೈಕೆ ಮಾಡುತ್ತಿದ್ದರು. ಅಲ್ಲದೇ ಬೀದಿ ಬದಿಯ ಜನರಿಗೆ ಊಟೋಪಚಾರ ವಿತರಿಸುತ್ತಿದ್ದರು.

    ಕೊರತೆಯಲ್ಲಿರುವ ಆಮ್ಲಜನಕ ಮತ್ತು ರೆಮ್ಡೆಸಿವಿರ್ ವಿತರಣೆಯಿಂದ ಅನುಮಾನಗೊಂಡ ಪೊಲೀಸರು ದಿಢೀರನೆ ಯೂಥ್ ಕಾಂಗ್ರೆಸ್ ಕಚೇರಿ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದರು ಮತ್ತು ಹಂಚಿಕೆಯಾಗುತ್ತಿರುವ ಆಮ್ಲಜನಕ ಮತ್ತು ರೆಮ್ಡೆಸಿವಿರ್ ಮೂಲದ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ.

    ವಿಚಾರಣೆ ಬಳಿಕ ಮಾತನಾಡಿದ ಶ್ರೀನಿವಾಸ ಬಿ.ವಿ, ನಮ್ಮಲ್ಲಿ ಮುಚ್ಚಿಡುವಂಥದ್ದು ಏನಿಲ್ಲ, ವಿಚಾರಣೆ ಮಾಡಲಿ ವಿಚಾರಣೆಯಿಂದ ನಮ್ಮಿಂದ ಯಾವ ತಪ್ಪು ಆಗಿಲ್ಲ ಎಂಬುದು ಸಾಬೀತಾಗಿದೆ. ಕಷ್ಟದಲ್ಲಿರುವವರಿಗೆ ಸಹಾಯ ಮಾಡುವುದನ್ನು ಮುಂದುವರೆಸುತ್ತೇವೆ ಎಂದು ಹೇಳಿದ್ದಾರೆ.

    ಶ್ರೀನಿವಾಸ್, ಕರ್ನಾಟಕದ ಭದ್ರಾವತಿ ಮೂಲದವರು ಸದ್ಯ ಆಲ್ ಇಂಡಿಯಾ ಯೂಥ್ ಕಾಂಗ್ರೆಸ್ ಅಧ್ಯಕ್ಷರಾಗಿದ್ದಾರೆ. ಕಳೆದೊಂದು ತಿಂಗಳಿನಿಂದ ಕೊರೊನಾ ಸಂಕಷ್ಟದಲ್ಲಿರುವ ಜನರಿಗೆ ಆಕ್ಸಿಜನ್ ರೆಮ್ಡೆಸಿವಿರ್ ಪೂರೈಕೆ ಮಾಡುವ ಮೂಲಕ ವ್ಯಾಪಕ ಸುದ್ದಿಯಲ್ಲಿದ್ದಾರೆ.

    ಗಂಭೀರ್ ಪ್ರತಿಕ್ರಿಯೆ: ಈ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಕ್ರಿಕೆಟಿಗ, ದೆಹಲಿಯ ಸಂಸದ ಗೌತಮ್ ಗಂಭೀರ್ ಪ್ರತಿಕ್ರಿಯಿಸಿ, ಕೆಲ ದಿನಗಳ ಹಿಂದೆ ಕೊರೊನಾ ಸಹಾಯ ಮಾಡುತ್ತಿರುವ ಹಿನ್ನೆಲೆಯಲ್ಲಿ ನಮ್ಮನ್ನು ದೆಹಲಿ ಪೊಲೀಸರು ಪ್ರಶ್ನಿಸಿದ್ದರು. ವಿಚಾರಣೆಯ ಸಂದರ್ಭದಲ್ಲಿ ನಾವು ಪೊಲೀಸರಿಗೆ ವಿವರಣೆ ನೀಡಿದ್ದೆವು. ಆದರೆ ಕಾಂಗ್ರೆಸ್ ಪ್ರಚಾರಕ್ಕಾಗಿ ಈ ದಾಳಿಯನ್ನು ಬಳಸುತ್ತಿದೆ ಎಂದು ಹೇಳಿದ್ದಾರೆ.