Tag: ಪೊಲೀಸ್ ಆಯುಕ್ತ ಭಾಸ್ಕರ್ ರಾವ್

  • ಮಧ್ಯರಾತ್ರಿ ನಟಿ ಸುಧಾರಾಣಿಯನ್ನು ಕಾಯಿಸಿದ ಖಾಸಗಿ ಆಸ್ಪತ್ರೆ ವಿರುದ್ಧ ಕ್ರಮ: ಸಚಿವ ಸುಧಾಕರ್

    ಮಧ್ಯರಾತ್ರಿ ನಟಿ ಸುಧಾರಾಣಿಯನ್ನು ಕಾಯಿಸಿದ ಖಾಸಗಿ ಆಸ್ಪತ್ರೆ ವಿರುದ್ಧ ಕ್ರಮ: ಸಚಿವ ಸುಧಾಕರ್

    ಬೆಂಗಳೂರು: ನಟಿ ಸುಧಾರಾಣಿ ಅವರು ಆಸ್ಪತ್ರೆಗೆ ತೆರಳಿದ್ದ ವೇಳೆ ಚಿಕಿತ್ಸೆ ನೀಡಲು ನಿರಾಕರಿಸಿ, ಕಾಯಿಸಿದ ಖಾಸಗಿ ಆಸ್ಪತ್ರೆಯ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ಹೇಳಿದ್ದಾರೆ.

    ಈ ಕುರಿತು ಟ್ವೀಟ್ ಮಾಡಿರುವ ಸಚಿವರು, ನಟಿ ಸುಧಾರಾಣಿ ಆರೋಗ್ಯ ಸಮಸ್ಯೆಯಿಂದ ಶೇಷಾದ್ರಿಪುರಂ ಅಪೋಲೋ ಆಸ್ಪತ್ರೆಗೆ ಬಂದರೂ ಚಿಕಿತ್ಸೆಗೆ ತಡಮಾಡಿದ್ದಾರೆ ಎಂಬ ಸುದ್ದಿ ಮಾಧ್ಯಮಗಳಲ್ಲಿ ನೋಡಿದೆ. ಅವರಷ್ಟೇ ಅಲ್ಲ ಸಾಮಾನ್ಯ ವ್ಯಕ್ತಿ ಯಾರೇ ಆಗಲಿ ಚಿಕಿತ್ಸೆ ಸಿಗದೇ ಪರದಾಡಬಾರದು. ಆ ಖಾಸಗಿ ಆಸ್ಪತ್ರೆಯ ವಿರುದ್ಧ ಶಿಸ್ತು ಕ್ರಮವಹಿಸಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.

    ನಡೆದಿದ್ದೇನು?
    ನಟಿ ಸುಧಾರಾಣಿ ಅವರ ಅಣ್ಣನ ಮಗಳು ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಪರಿಣಾಮ ತಡರಾತ್ರಿ ಯುವತಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಆದರೆ ನಗರ ಖಾಸಗಿ ಆಸ್ಪತ್ರೆಯ ಬಳಿ ತೆರಳಿದ ಸಂದರ್ಭದಲ್ಲಿ ಆಸ್ಪತ್ರೆಯ ವೈದ್ಯರು ಪ್ರಥಮ ಚಿಕಿತ್ಸೆಯನ್ನು ನೀಡಲು ನಿರಾಕರಿಸಿದ್ದರು. ಅಲ್ಲದೇ ಆಸ್ಪತ್ರೆಯ ಒಳಗೂ ಪ್ರವೇಶ ನೀಡದೆ ತಡೆದಿದ್ದರು. ಕೊನೆಗೆ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್‍ಗೆ ಕರೆ ಮಾಡಿ ಸುಧಾರಾಣಿ ಅವರು ಸಹಾಯ ಪಡೆದುಕೊಂಡಿದ್ದರು.

    ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿರುವ ಸುಧಾರಾಣಿ ಅವರು, ಕಿಡ್ನಿ ಸ್ಟೋನ್‍ನಿಂದ ಬಳಲುತ್ತಿದ್ದ ಯುವತಿಯನ್ನು ಸೌಜನ್ಯಕ್ಕೂ ಚೆಕ್ ಮಾಡದೇ ವೆಂಟಿಲೇಟರ್ ಮತ್ತು ಬೆಡ್‍ಗಳಿಲ್ಲ ಅಂತ ಗಂಟೆಗಳ ಕಾಲ ಆಸ್ಪತ್ರೆಯ ಮುಂಭಾಗದಲ್ಲಿ ನಿಲ್ಲಿಸಿದ್ದಾರೆ. ಪ್ರಥಮ ಚಿಕಿತ್ಸೆಯಾದರೂ ನೀಡಿ ಎಂದರೇ ವೆಂಟಿಲೇಟರ್ ಇಲ್ಲ, ಬೆಡ್ ಇಲ್ಲ ಎಂಬುದನ್ನೇ ಹೇಳುತ್ತಾರೆ. ವೈದ್ಯರೇ ಹೀಗೆ ಮಾಡಿದರೆ ಸಾಮಾನ್ಯ ಜನರಿಗೆ ಯಾವ ಸ್ಥಿತಿ ಬರುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.

  • ಖಾಸಗಿ ಆಸ್ಪತ್ರೆಯ ‘ಕರ್ಮಕಾಂಡ’ ಬಿಚ್ಚಿಟ್ಟ ನಟಿ ಸುಧಾರಾಣಿ

    ಖಾಸಗಿ ಆಸ್ಪತ್ರೆಯ ‘ಕರ್ಮಕಾಂಡ’ ಬಿಚ್ಚಿಟ್ಟ ನಟಿ ಸುಧಾರಾಣಿ

    ಬೆಂಗಳೂರು: ಸ್ಯಾಂಡಲ್‍ವುಡ್ ನಟಿ ಸುಧಾರಾಣಿ ಅವರು ಅನಾರೋಗ್ಯದಿಂದ ಬಳಲುತ್ತಿದ್ದ ಅಣ್ಣನ ಮಗಳಿಗೆ ಚಿಕಿತ್ಸೆ ಕೊಡಿಸಲು ತಡರಾತ್ರಿ ಪರದಾಡಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಅಣ್ಣನ ಮಗಳನ್ನು ಕರೆತಂದ ಸುಧಾರಾಣಿ ಅವರಿಗೆ ಆಸ್ಪತ್ರೆ ಸಿಬ್ಬಂದಿ ಚಿಕಿತ್ಸೆ ನೀಡಲು ನಿರಾಕರಿಸಿದ್ದಾರೆ.

    ಸುಧಾರಾಣಿ ಅವರ ಅಣ್ಣನ ಮಗಳು ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಪರಿಣಾಮ ತಡರಾತ್ರಿ ಯುವತಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಆದರೆ ನಗರ ಖಾಸಗಿ ಆಸ್ಪತ್ರೆಯ ಬಳಿ ತೆರಳಿದ ಸಂದರ್ಭದಲ್ಲಿ ಆಸ್ಪತ್ರೆಯ ವೈದ್ಯರು ಪ್ರಾಥಮಿಕ ಚಿಕಿತ್ಸೆಯನ್ನು ನೀಡಲು ನಿರಾಕರಿಸಿದ್ದಾರೆ. ಅಲ್ಲದೇ ಆಸ್ಪತ್ರೆಯ ಒಳಗೂ ಪ್ರವೇಶ ನೀಡದೆ ತಡೆದಿದ್ದಾರೆ.

    ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿರುವ ಸುಧಾರಾಣಿ ಅವರು, ಕಿಡ್ನಿ ಸ್ಟೋನ್‍ನಿಂದ ಬಳಲುತ್ತಿದ್ದ ಯುವತಿಯನ್ನು ಸೌಜನ್ಯಕ್ಕೂ ಚೆಕ್ ಮಾಡದೆ ವೆಂಟಿಲೇಟರ್ ಮತ್ತು ಬೆಡ್‍ಗಳಿಲ್ಲ ಅಂತ ಗಂಟೆಗಳ ಕಾಲ ಆಸ್ಪತ್ರೆಯ ಮುಂಭಾಗದಲ್ಲಿ ನಿಲ್ಲಿಸಿದ್ದಾರೆ. ಪ್ರಥಮ ಚಿಕಿತ್ಸೆಯಾದರೂ ನೀಡಿ ಎಂದರೇ ವೆಂಟಿಲೇಟರ್ ಇಲ್ಲ, ಬೆಡ್ ಇಲ್ಲ ಎಂಬುದನ್ನೇ ಹೇಳುತ್ತಾರೆ. ವೈದ್ಯರೇ ಹೀಗೆ ಮಾಡಿದರೆ ಸಾಮಾನ್ಯ ಜನರಿಗೆ ಯಾವ ಸ್ಥಿತಿ ಬರುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

    ಖಾಸಗಿ ಆಸ್ಪತ್ರೆಯ ವೈದ್ಯರ ಮೊಂಡಾಟದಿಂದ ರೋಸಿ ಹೋದ ಸುಧಾರಾಣಿ ಅವರು ಕೊನೆಗೆ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್‍ಗೆ ಕರೆ ಮಾಡಿ ಸಹಾಯ ಪಡೆದಿದ್ದಾರೆ. ಕಮೀಷನರ್ ಅವರಿಗೆ ಮಾತನಾಡುತ್ತಿದ್ದಂತೆ ವೈದ್ಯರು ಚಿಕಿತ್ಸೆ ನೀಡಿದ್ದಾರೆ.