Tag: ಪೊಲೀಸ್ ವರಿಷ್ಠಾಧಿಕಾರಿ

  • ಹೊನ್ನಾವರ ಮೀನುಗಾರರ ಮೇಲೆ ದೌರ್ಜನ್ಯ – ಜಿಲ್ಲಾಧಿಕಾರಿ, ಎಸ್ಪಿಗೆ ಸಮನ್ಸ್ ಜಾರಿ

    ಹೊನ್ನಾವರ ಮೀನುಗಾರರ ಮೇಲೆ ದೌರ್ಜನ್ಯ – ಜಿಲ್ಲಾಧಿಕಾರಿ, ಎಸ್ಪಿಗೆ ಸಮನ್ಸ್ ಜಾರಿ

    ಕಾರವಾರ: ಉತ್ತರ ಕನ್ನಡ ಜಿಲ್ಲಾಧಿಕಾರಿ(DC) ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ರಾಷ್ಟ್ರೀಯ ಮಾನವ ಹಕ್ಕು ಆಯೋಗದಿಂದ ಸಮನ್ಸ್ ಜಾರಿ ಮಾಡಲಾಗಿದೆ.

    ಹೊನ್ನಾವರದ ಕಾಸರಕೋಡದ ಮೀನುಗಾರರು ಹಾಗೂ ಮೀನುಗಾರಿಕಾ ಮಹಿಳೆಯರ ಮೇಲೆ ದೌರ್ಜನ್ಯದ ಕುರಿತು ದಾಖಲಾದ ದೂರಿನನ್ವಯ ಸಮನ್ಸ್ ಜಾರಿ ಮಾಡಿದೆ. ಕಾಸರಕೋಡ ಖಾಸಗಿ ಬಂದರು ಕಾಮಗಾರಿ ಸ್ಥಗಿತಗೊಳಿಸುವಂತೆ ಹಾಗೂ ಬಂದರಿಗೆ ರಸ್ತೆ ಕಾಮಗಾರಿ ಸ್ಥಗಿತ ಗೊಳಿಸುವಂತೆ ಆಗ್ರಹಿಸಿ ಜ.24ರಂದು ಮೀನುಗಾರರು ಪ್ರತಿಭಟನೆ ನಡೆಸಿದ್ದರು. ಪ್ರತಿಭಟನೆ ವೇಳೆ ಪ್ರತಿಭಟನಾ ನಿರತ ಮೀನುಗಾರರು ಹಾಗೂ ಮೀನುಗಾರಿಕಾ ಮಹಿಳೆಯರನ್ನು ಎಫ್‍ಐಆರ್ ಸಹ ದಾಖಲಿಸದೇ ಬಂಧಿಸಿ ಸಂಜೆ ವೇಳೆ ಬಿಡುಗಡೆಗೊಳಿಸಲಾಗಿತ್ತು. ಇದನ್ನೂ ಓದಿ: ಅಪ್ರಾಪ್ತೆಯನ್ನು ಕಿಡ್ನ್ಯಾಪ್ ಮಾಡಿ, ಅತ್ಯಾಚಾರ

    ಈ ವೇಳೆ ಮೀನುಗಾರರು ಹಾಗೂ ಮೀನುಗಾರಿಕಾ ಮಹಿಳೆಯರ ಮೇಲೆ ಪೊಲೀಸರು ದೌರ್ಜನ್ಯ ನಡೆಸಿದ್ದರು ಎಂದು ಆರೋಪಿಸಿ ರಾಷ್ಟ್ರೀಯ ಮಾನವಹಕ್ಕು ಆಯೋಗಕ್ಕೆ ಮೇ 6ರಂದು ದೂರು ದಾಖಲಿಸಿದ್ದರು. ಈ ದೂರಿನನ್ವಯ ಜುಲೈ 19ರಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಪೆನ್ನೇಕರ್ ಅವರಿಗೆ ವರದಿ ಸಲ್ಲಿಸುವಂತೆ ಸೂಚಿಸಲಾಗಿತ್ತು. ಆದರೆ ಪೊಲೀಸ್ ಇಲಾಖೆಯಿಂದ ಯಾವುದೇ ವರದಿ ಸಹ ಸಲ್ಲಿಕೆಯಾಗದ ಹಿನ್ನೆಲೆಯಲ್ಲಿ ಇಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸಮನ್ಸ್ ಜಾರಿ ಮಾಡಲಾಗಿದೆ. ಇದನ್ನೂ ಓದಿ: ಬಾಬರಿ ಮಸೀದಿ ಕೇಸ್ ಬಳಿಕ ನಾವು ಅದೇ ಹಾದಿಯಲ್ಲಿ ಸಾಗುತ್ತಿದ್ದೇವೆ: ಓವೈಸಿ

    Live Tv
    [brid partner=56869869 player=32851 video=960834 autoplay=true]

  • 15 ವರ್ಷದ ಹುಡುಗಿ ಮೇಲೆ ಅತ್ಯಾಚಾರ- ಇಬ್ಬರು ಅಪ್ರಾಪ್ತರು ಸೇರಿ ನಾಲ್ವರ ಬಂಧನ

    ಕೋಲ್ಕತ್ತಾ: ಇತ್ತೀಚೆಗಷ್ಟೇ ಹಿಂಸಾಚಾರ ಕೃತ್ಯ ನಡೆದು, ತನಿಖೆ ಸಿಬಿಐ ಹಂತದಲ್ಲಿರುವಾಗಲೇ ಪಶ್ಚಿಮ ಬಂಗಳಾದ ಬೀರ್ಭುಮ್ ಜಿಲ್ಲೆಯಲ್ಲಿ ಅಪ್ರಾಪ್ತ ಹುಡುಗಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ. ಏಪ್ರಿಲ್ 14ರ ರಾತ್ರಿ 15 ವರ್ಷದ ಅಪ್ರಾಪ್ತ ಹುಡುಗಿಯ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಇಂದು ಬೆಳಕಿಗೆ ಬಂದಿದೆ.

    CRIME 2

    ಘಟನೆಗೆ ಸಂಬಂಧಿಸಿದಂತೆ 14 ವರ್ಷದ ಇಬ್ಬರು ಹುಡುಗರು ಸೇರಿ ನಾಲ್ವರು ಆರೋಪಿಗಳನ್ನು ಬೀರ್ಭುಮ್ ಜಿಲ್ಲೆಯಲ್ಲಿ ಬಂಧಿಸಲಾಗಿದ್ದು, ಆರೋಪಿಗಳು ಸ್ಥಳೀಯ ಬುಡಕಟ್ಟು ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಲಕ್ಷ್ಮೀರಾಮ್ ಸೂರೇನ್ ಮತ್ತು ಸುನೀಲ್ ಇಬ್ಬರು ಯುವಕರನ್ನು ಭಾನುವಾರ ತಡರಾತ್ರಿ ಪರುಯಿ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರದೇಶದಲ್ಲಿ ಬಂಧಿಸಿದ ಕೆಲವೇ ಗಂಟೆಗಳಲ್ಲಿ ಅಪ್ರಾಪ್ತ ಬಾಲಕರನ್ನೂ ಪತ್ತೆಹಚ್ಚಲಾಗಿದೆ ಎಂದು ಜಿಲ್ಲಾಪೊಲೀಸ್ ವರಿಷ್ಠಾಧಿಕಾರಿ ಹೇಳಿದ್ದಾರೆ. ಇದನ್ನೂ ಓದಿ: ತಂದೆಯನ್ನು ಕೊಂದ ಮಾನಸಿಕ ಅಸ್ವಸ್ಥೆ ಅರೆಸ್ಟ್

    ಹುಡುಗಿಯು ಇಲ್ಲಿನ ಶಾಂತಿನಿಕೇತನ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರದೇಶದಲ್ಲಿ ಸ್ಥಳೀಯ ಯುವಕನೊಂದಿಗೆ ಕುಳಿತಿದ್ದಾಗ, ಆತನನ್ನು ಗೆಳೆಯನೆಂದು ಭಾವಿಸಿ, ಕೆಲ ಯುವಕರು ಇಬ್ಬರ ಮೇಲೆ ಮೇಲೆ ಹಲ್ಲೆ ನಡೆಸಿ, ಬಾಲಕಿಯನ್ನು ನಿರ್ಜನ ಪ್ರದೇಶಕ್ಕೆ ಎಳೆದೊಯ್ದು ಅತ್ಯಾಚಾರ ನಡೆಸಿದ್ದಾರೆ ಎನ್ನಲಾಗಿದೆ.

    CRIME (1)

    ಸ್ಥಳೀಯ ನ್ಯಾಯಾಲಯವು ಸೋಮವಾರ ಇಬ್ಬರು ಯುವಕರನ್ನು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ಅಪ್ರಾಪ್ತ ಬಾಲಕರನ್ನು ರಿಮ್ಯಾಂಡ್ ರೂಂಗೆ ಕಳುಹಿಸಲಾಗಿದೆ. ಪೊಲೀಸರು ಭಾರತೀಯ ದಂಡ ಸಂಹಿತೆ (ಐಪಿಸಿ) ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೋ) ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ಅತ್ಯಾಚಾರದಲ್ಲಿ ನಾಲ್ವರು ಭಾಗಿಯಾಗಿದ್ದಾರೆಯೇ ಇಲ್ಲವೇ ಎಂಬುದನ್ನು ತನಿಖೆ ನಡೆಸಲಾಗುತ್ತಿದೆ ಎಂದು ಬಿರ್ಭೂಮ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾಗೇಂದ್ರ ನಾಥ್ ತ್ರಿಪಾಠಿ ಎಚ್‌ಟಿಗೆ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಇದನ್ನೂ ಓದಿ: ಸಿನಿಮೀಯ ರೀತಿ ದರೋಡೆಕೋರನನ್ನೇ ಹಿಡಿದ ಮನೆಯವರು

    ಪಶ್ಚಿಮ ಬಂಗಾಳ ಮಹಿಳಾ ಆಯೋಗದ ಅಧ್ಯಕ್ಷೆ ಲೀನಾ ಗಂಗೋಪಾಧ್ಯಾಯ ಅವರು ಬಾಲಕಿಯನ್ನು ಭೇಟಿಯಾಗಿ, ಆಕೆಯ ಕುಟುಂಬಸ್ಥರು ಹಾಗೂ ಪೊಲೀಸರೊಂದಿಗೆ ಮಾತುಕತೆ ನಡೆಸಿದ್ದಾರೆ.

  • ಅಲ್ಲಾಹು ಅಕ್ಬರ್ ಘೋಷಣೆ ಕೂಗಿದ್ದ ಮುಸ್ಕಾನ್ ಕುಟುಂಬದ ವಿರುದ್ಧ ದೂರು

    ಅಲ್ಲಾಹು ಅಕ್ಬರ್ ಘೋಷಣೆ ಕೂಗಿದ್ದ ಮುಸ್ಕಾನ್ ಕುಟುಂಬದ ವಿರುದ್ಧ ದೂರು

    ಮಂಡ್ಯ: ಮಂಡ್ಯದ ಪದವಿ ಪೂರ್ವ ಕಾಲೇಜಿನಲ್ಲಿ ಅಲ್ಲಾಹು ಅಕ್ಬರ್ ಎಂದು ಘೋಷಣೆ ಕೂಗಿದ್ದ ವಿದ್ಯಾರ್ಥಿನಿ ಮುಸ್ಕಾನ್ ಮತ್ತು ಕುಟುಂಬದ ವಿರುದ್ಧ NIA  (ಕೇಂದ್ರೀಯ ತನಿಖಾ ದಳ) ತನಿಖೆ ನಡೆಸುವಂತೆ ಒತ್ತಾಯಿಸಿ ಅನಂತ ಕುಮಾರ್ ಅಭಿಮಾನಿಗಳ ಸಂಘವು ಒತ್ತಾಯಿಸಿದೆ.

    ಭಾರತದ ಆತಂರಿಕ ಭದ್ರತೆಗೆ ಅಪಾಯವಿದ್ದು, ಮುಸ್ಕಾನ್ ಕುಟುಂಬದ ವಿರುದ್ಧ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಪ್ರಕರಣ ದಾಖಲಿಸಿ ತನಿಖೆ ನಡೆಸುವಂತೆ ಸಂಘದ ಅನಿಲ್ ಮಂಡ್ಯ ಜಿಲ್ಲೆಯ ಎಸ್‌ಪಿಗೆ ದೂರು ನೀಡಲು ಮುಂದಾಗಿದ್ದಾರೆ. ಇದನ್ನೂ ಓದಿ: ಮದ್ಯ ಸೇವನೆಗೆ ಹಣಕೊಡಲಿಲ್ಲವೆಂದು ತಂದೆಯನ್ನೆ ಕೊಂದ ಪಾಪಿ

    ALKHAIDA

    ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅನಿಲ್, ಅಲ್ಲಾಹು ಅಕ್ಬರ್ ಘೋಷಣೆ ಕೂಗಿದ್ದ ಮುಸ್ಕಾನ್ ವಿದ್ಯಾರ್ಥಿನಿಗೆ ಹಲವಾರು ಮುಸ್ಲಿಂ ಮುಖಂಡರು ಹಣ, ಹುಡುಗೊರೆ ನೀಡಿ ವಿದ್ಯಾರ್ಥಿನಿಯನ್ನು ಬೆಂಬಲಿಸಿದ್ದಾರೆ. ಹೊರ ರಾಜ್ಯದವರೂ ಶಹಬ್ಬಾಸ್ ಗಿರಿ ನೀಡಿದ್ದಾರೆ. ಈ ನಡುವೆ ಆಲ್‌ಖೈದಾ ಸಹ ಬೆಂಬಲ ವ್ಯಕ್ತಪಡಿಸಿದ್ದು, ಇದರ ಹಿಂದೆ ಉಗ್ರ ಸಂಘಟನೆಗಳ ಕೈವಾಡವಿದೆ ಎನ್ನುವ ಆತಂಕ ಶುರುವಾಗಿದೆ. ಇದನ್ನು ತನಿಖೆ ಮೂಲಕ ಪತ್ತೆಹಚ್ಚಬೇಕು ಎಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: ACಯ ವಿಷಾನಿಲ ಸೋರಿಕೆ- ಒಂದೇ ಕುಟುಂಬದ ನಾಲ್ವರು ಸಾವು

    ಈಚೆಗಷ್ಟೇ ಹೈಕೋರ್ಟ್ ನ್ಯಾಯಾಧೀಶರು ಸಹ ಆಲ್‌ಖೈದಾ ಪ್ರಸಂಶೆಯ ಹಿಂದೆ ದೊಡ್ಡ ಷಡ್ಯಂತರ ಇರಬಹುದು ಎಂಬ ಶಂಕೆ ವ್ಯಕ್ತಪಡಿಸಿದ್ದಾರೆ. ಇದು ದೇಶದ ಆಂತರಿಕ ಭದ್ರತೆಯ ವಿಚಾರ ಆಗಿರುವುದರಿಂದ ಇದನ್ನು ಎನ್‌ಐಎ ತನಿಖೆಗೆ ಒಳಪಡಿಸಬೇಕು. ಮುಸ್ಕಾನ್ ಕುಟುಂಬದವರ ಪಾಸ್‌ ಪೋರ್ಟ್‌ ಇದ್ದಲ್ಲಿ ವಶಪಡಿಸಿಕೊಂಡು ಅವರು ದೇಶದಿಂದ ಹೊರ ಹೋಗದಂತೆ ನೋಡಿಕೊಳ್ಳಬೇಕು. ಜೊತೆಗೆ ಅವರನ್ನು ಪ್ರಸಂಶಿಸಿದ ಮುಖಂಡರನ್ನೂ ವಿಚಾರಣೆಗೆ ಒಳಪಡಿಸಬೇಕು ಎಂದು ಮನವಿ ಮಾಡಿದ್ದಾರೆ.