Tag: ಪೋನ್

  • ಬಾಲಿವುಡ್ ಡ್ರಗ್ಸ್ ವ್ಯೂಹದಲ್ಲಿ ಶಾರೂಖ್ ಪುತ್ರ? – ಆರ್ಯನ್ ಫೋನ್ ಎನ್‍ಸಿಬಿ ವಶಕ್ಕೆ

    ಬಾಲಿವುಡ್ ಡ್ರಗ್ಸ್ ವ್ಯೂಹದಲ್ಲಿ ಶಾರೂಖ್ ಪುತ್ರ? – ಆರ್ಯನ್ ಫೋನ್ ಎನ್‍ಸಿಬಿ ವಶಕ್ಕೆ

    ಮುಂಬೈ: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ಶಾರೂಖ್ ಖಾನ್ ಪುತ್ರ ಆರ್ಯನ್‌ನನ್ನು ವಶಪಡಿಸಿಕೊಂಡಿರುವ ಮುಂಬೈ ಎನ್‍ಸಿಬಿ ಅಧಿಕಾರಿಗಳು ಅವರ ಫೋನ್ ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಸಿಂದಗಿ, ಹಾನಗಲ್ ಉಪ ಚುಣಾವಣೆ- ಇಂದು ಹೈಕಮಾಂಡ್ ಕೈ ಸೇರಲಿದೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ
    ಸದ್ಯ ಆರ್ಯನ್ ಫೋನ್ ವಶಪಡಿಸಿಕೊಂಡಿರುವ ಎನ್‍ಸಿಬಿ ಅಧಿಕಾರಿಗಳು ಸ್ಕ್ಯಾನ್ ಮಾಡುತ್ತಿದ್ದಾರೆ ಮತ್ತು ಫೋನ್ ಚಾಟ್ ಲಿಸ್ಟ್ ಕುರಿತಂತೆ ಪರಿಶೀಲನೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಸಮುದ್ರದ ಮಧ್ಯೆ ಡ್ರಗ್ಸ್ ಪಾರ್ಟಿ- ಸ್ಟಾರ್ ನಟನ ಮಗ ಸೇರಿ ಹತ್ತು ಮಂದಿ ವಶಕ್ಕೆ
    ಶನಿವಾರ ಮುಂಬೈ ಸಮುದ್ರದ ಮಧ್ಯದಲ್ಲಿ ಹಡಗಿನಲ್ಲಿ ಡ್ರಗ್ಸ್ ಪಾರ್ಟಿ ಮಾಡಲಾಗುತ್ತಿತ್ತು ಎಂಬ ಖಚಿತ ಮಾಹಿತಿ ಮೇರೆಗೆ ಎನ್‍ಸಿಬಿ ಅಧಿಕಾರಿಗಳು ಐಷಾರಾಮಿ ಹಡಗಿನ ಮೇಲೆ ದಾಳಿ ನಡೆಸಿದ್ದಾರೆ. ಡ್ರಗ್ಸ್ ರೇವ್ ಪಾರ್ಟಿ ಮಾಡುತ್ತಿದ್ದ ಸ್ಟಾರ್ ನಟನ ಮಗ ಸೇರಿ ಒಟ್ಟು 10 ಮಂದಿಯನ್ನು ಎನ್‍ಸಿಬಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ದಾಳಿ ವೇಳೆ ಕೊಕೇನ್, ಎನ್‍ಡಿಎಂ, ಹಾಶಿಶ್ ಮಾದಕ ದ್ರವ್ಯಗಳನ್ನು ವಶಕ್ಕೆ ಪಡೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
  • ಗಂಭೀರ ಸಭೆಯಲ್ಲಿ ಬೇಜವಾಬ್ದಾರಿ ತೋರಿದ ಮಂತ್ರಿಗೆ ಶಾಸಕ ದೇವಾನಂದ ಚವ್ಹಾಣ್ ಕ್ಲಾಸ್!

    ಗಂಭೀರ ಸಭೆಯಲ್ಲಿ ಬೇಜವಾಬ್ದಾರಿ ತೋರಿದ ಮಂತ್ರಿಗೆ ಶಾಸಕ ದೇವಾನಂದ ಚವ್ಹಾಣ್ ಕ್ಲಾಸ್!

    ವಿಜಯಪುರ: ಕೆಡಿಪಿ ಸಭೆಯಲ್ಲಿ ಫೋನಿನಲ್ಲಿ ಹರಟೆ ಹೊಡೆಯುತ್ತಾ ಬೇಜವಾಬ್ದಾರಿ ಪ್ರದರ್ಶಿಸಿದ ಜಿಲ್ಲಾ ಉಸ್ತವಾರಿ ಹಾಗೂ ಕೈಗಾರಿಕಾ ಮಂತ್ರಿ ಎಂ.ಸಿ ಮನಗೋಳಿ ಅವರನ್ನು ನಾಗಠಾಣ ಶಾಸಕ ದೇವಾನಂದ ಚವ್ಹಾಣ್ ತರಾಟೆಗೆ ತೆಗೆದುಕೊಂಡಿದ್ದಾರೆ.

    ಕಳೆದ ಕೆಲ ದಿನಗಳ ಹಿಂದೆ ತಾವೇ ಸ್ವತಃ ಅಕ್ರಮ ಮರಳು ಸಾಗಿಸುತ್ತಿದ್ದ ಲಾರಿ ಹಿಡಿದು ಶಾಸಕ ದೇವಾನಂದ್ ಚವ್ಹಾಣ್ ಜನರಿಂದ ಭೇಷ್ ಎನಿಸಿಕೊಂಡಿದ್ದರು. ಈಗ ಸಭೆಯಲ್ಲಿ ಮಂತ್ರಿಗಳನ್ನೇ ತರಾಟೆಗೆ ತೆಗೆದುಕೊಳ್ಳುವ ಮೂಲಕ ಮತ್ತೆ ಸುದ್ದಿಯಾಗಿದ್ದಾರೆ.

    ಇಂದು ನಡೆದ ಕೆಡಿಪಿ ಸಭೆಯಲ್ಲಿ ಫೋನಿನಲ್ಲಿ ಹರಟೆ ಹೊಡೆಯುತ್ತಿದ್ದ ವಿಜಯಪುರ ಜಿಲ್ಲಾ ಉಸ್ತುವಾರಿ ಮಂತ್ರಿಗಳಿಗೆ ಸಖತ್ ಕ್ಲಾಸ್ ತೆಗೆದುಕೊಳ್ಳುವ ಮೂಲಕ ರೆಬಲ್ ಸ್ಟೈಲ್ ಪ್ರದರ್ಶಿಸಿದ್ದಾರೆ. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಬರಗಾಲದ ಕುರಿತಾಗಿ ಗಂಭೀರ ಚರ್ಚೆ ನಡೆಯುತ್ತಿತ್ತು. ಈ ವೇಳೆ ಸಚಿವ ಎಂ.ಸಿ ಮನಗೂಳಿ ಫೋನ್ ಸಂಭಾಷಣೆಯಲ್ಲಿ ನಿರತರಾಗಿದ್ದರು. ಇದನ್ನು ಕಂಡು ದೇವಾನಂದ ಅವರು ಸಿಡಿದೆದ್ದರು.

    ಸಭೆಯಲ್ಲಿ ಬರಗಾಲದ ಬಗ್ಗೆ ಗಂಭೀರ ಚರ್ಚೆ ನಡೆಯುತ್ತಿದೆ. ಇದಕ್ಕೆ ಪರಿಹಾರ ಹುಡುಕಬೇಕಾದ ನೀವೇ ಫೋನಿನಲ್ಲಿ ಮಾತನಾಡುತ್ತಾ ಕುಳಿತರೆ ಹೇಗೆ ಎಂದು ಸಖತ್ ಕ್ಲಾಸ್ ತೆಗೆದುಕೊಂಡರು. ಒಂದು ಕಡೆಗೆ ಶಾಸಕರೊಬ್ಬರು ಮಂತ್ರಿಗಳನ್ನ ತರಾಟೆಗೆ ತೆಗೆದುಕೊಳ್ಳುತ್ತಿದ್ದರೆ ಇನ್ನೊಂದೆಡೆ ಅಧಿಕಾರಿ ವರ್ಗ ಒಂದು ಕ್ಷಣ ಆಶ್ಚರ್ಯದಿಂದ ನೋಡುತ್ತಾ ಕುಳಿತಿತ್ತು.

    ಜಿಲ್ಲೆಯಲ್ಲಿ ಭೀಕರ ಬರಗಾಲ ಆವರಿಸಿದೆ. ನಾನು ಬರಗಾಲ ಪರಿಹಾರ ಕ್ರಮಕ್ಕಾಗಿ ಡಾಕ್ಯುಮೆಂಟ್ ರೆಡಿಮಾಡಿಕೊಂಡು ಬಂದಿದ್ದರೆ, ನೀವು ಫೋನಿನಲ್ಲಿ ಮಾತನಾಡ್ತಾ ನಿರ್ಲಕ್ಷ್ಯ ತೋರುವುದು ಎಷ್ಟು ಸರಿ ಎಂದು ಶಾಸಕ ದೇವಾನಂದ್ ಅವರು ಪ್ರಶ್ನಿಸಿದಾಗ ಸಚಿವರು ತುಟಿಕ್ ಪಿಟಿಕ್ ಎನ್ನದೆ ನಂತರ ಸಭೆ ವಿಚಾರದಲ್ಲಿ ಮಗ್ನರಾದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv