Tag: ಪೋರ್ಶೆ ಕಾರು

  • Viral Video: ಬಾನೆಟ್‌ ಮೇಲೆ ವ್ಯಕ್ತಿಯನ್ನ ಮಲಗಿಸಿ BMW ಕಾರು ಚಲಾಯಿಸಿದ ಅಪ್ರಾಪ್ತ!

    Viral Video: ಬಾನೆಟ್‌ ಮೇಲೆ ವ್ಯಕ್ತಿಯನ್ನ ಮಲಗಿಸಿ BMW ಕಾರು ಚಲಾಯಿಸಿದ ಅಪ್ರಾಪ್ತ!

    ಮುಂಬೈ: ಪೋರ್ಶೆ ಕಾರು ಅಪಘಾತದ ಬೆನ್ನಲ್ಲೇ ಮುಂಬೈನ 17 ವರ್ಷದ ಹುಡುಗನೊಬ್ಬ ವ್ಯಕ್ತಿಯೊಬ್ಬನನ್ನು BMW ಕಾರಿನ ಮೇಲೆ ಮಲಗಿಸಿಕೊಂಡು ಕಲ್ಯಾಣ್‌ನ ಜನನಿಬಿಡ ರಸ್ತೆಯಲ್ಲಿ ಪರವಾನಗಿ ಇಲ್ಲದೆ ಓಡಿಸಿದ ಘಟನೆ ಬೆಳಕಿಗೆ ಬಂದಿದೆ.

    ಪುಣೆ ಪೋರ್ಶೆ ಕಾರು ಅಪಘಾತದಲ್ಲಿ (Pune Porsche Car Accident) ಅಪ್ರಾಪ್ತ ತನ್ನ ಐಷಾರಾಮಿ ಕಾರನ್ನು ಬೈಕ್‌ಗೆ ಡಿಕ್ಕಿಯಾಗಿಸಿ ಇಬ್ಬರು ಟೆಕ್ಕಿಗಳ ಸಾವಿಗೆ ಕಾರಣವಾಗಿದ್ದನು. ಈ ಘಟನೆಯ ಬಗ್ಗೆ ಭಾರೀ ಆಕ್ರೋಶದ ನಡುವೆ ಈ ಘಟನೆ ಬೆಳಕಿಗೆ ಬಂದಿದೆ. ಈ ಸ್ಟಂಟ್‌ ವೀಡಿಯೋ ಸೋಶಿಯಲ್‌ ಮೀಡಿಯಾದಲ್ಲಿ ಭಾರೀ ವೈರಲ್ ಆದ ಬಳಿಕ ಪೊಲೀಸರು ಕ್ರಮ ಕೈಗೊಂಡಿದ್ದಾರೆ.

    ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ವೀಡಿಯೋ ವೈರಲ್ ಆದ ತಕ್ಷಣ, ಪೊಲೀಸರು ಕಾರಿನ ಬಾನೆಟ್ ಮೇಲೆ ಮಲಗಿದ್ದ ವ್ಯಕ್ತಿಯನ್ನು ಸುಭಮ್ ಮಿಥಿಲಾ ಎಂದು ಗುರುತಿಸಿದ್ದಾರೆ. ಕಾರು ಚಾಲಕ 17 ವರ್ಷದ ಹುಡುಗ ಮತ್ತು ಅವನ ತಂದೆ, ನಿವೃತ್ತ ಸರ್ಕಾರಿ ಅಧಿಕಾರಿಯನ್ನು ಬಂಧಿಸಿದ್ದಾರೆ. ಪೊಲೀಸರ ಪ್ರಕಾರ, ಅಪ್ರಾಪ್ತರು ಶನಿವಾರ ಥಾಣೆ ಜಿಲ್ಲೆಯ ಕಲ್ಯಾಣ್ ನಗರದ ಜನನಿಬಿಡ ಶಿವಾಜಿ ಚೌಕ್ ಪ್ರದೇಶದಲ್ಲಿ ಕಾರನ್ನು ಚಲಾಯಿಸಿದ್ದಾರೆ. ಇದನ್ನೂ ಓದಿ: ರಾಜ್ಯ ಸರ್ಕಾರದ ಹನಿಮೂನ್ ಪೀರಿಯೆಡ್ ಮುಗಿದಿದ್ರೂ ಇನ್ನೂ ಅಭಿವೃದ್ಧಿ ಕೆಲಸ ಮಾಡ್ತಿಲ್ಲ: ವಿಜಯೇಂದ್ರ

    ಹಿರಿಯ ಪೊಲೀಸ್ ಇನ್ಸ್‌ಪೆಕ್ಟರ್ ಸುರೇಶ್ ಗುಂಡ್ ಮಾತನಾಡಿ, ಸಾಮಾಜಿಕ ಮಾಧ್ಯಮದ ರೀಲ್ಸ್‌ಗಳಿಂದ ಪ್ರೇರಿತನಾಗಿ ಅಪ್ರಾಪ್ತ ತಂದೆ 5 ಲಕ್ಷ ರೂ.ಗೆ ಸೆಕೆಂಡ್ ಹ್ಯಾಂಡ್ ಬಿಎಂಡಬ್ಲ್ಯು ಕಾರನ್ನು ಖರೀದಿಸುವಂತೆ ಹಠ ಹಿಡಿದಿದ್ದಾನೆ. ಅಲ್ಲದೇ ಡ್ರೈವಿಂಗ್ ಲೈಸೆನ್ಸ್ ಇಲ್ಲದೆ ರಸ್ತೆಯಲ್ಲಿ ಓಡಿಸಿದ್ದಾನೆ. ಇನ್ನು ಕಾರಿನ ಕಾರಿನ ಮಾಲೀಕರಿಗೆ ನೋಟಿಸ್ ಜಾರಿ ಮಾಡಲಾಗಿದೆ ಎಂದರು.‌

  • ಪೋರ್ಶೆ ಕಾರು ಅಪಘಾತ ಕೇಸ್‌; ಅಪ್ರಾಪ್ತನ ರಕ್ತದ ಮಾದರಿ ವರದಿ ಬದಲಾಯಿಸಲು ವೈದ್ಯರಿಗೆ 3 ಲಕ್ಷ ಲಂಚ

    ಪೋರ್ಶೆ ಕಾರು ಅಪಘಾತ ಕೇಸ್‌; ಅಪ್ರಾಪ್ತನ ರಕ್ತದ ಮಾದರಿ ವರದಿ ಬದಲಾಯಿಸಲು ವೈದ್ಯರಿಗೆ 3 ಲಕ್ಷ ಲಂಚ

    ಮುಂಬೈ: ಪುಣೆಯಲ್ಲಿ (Pune) ಅಪ್ರಾಪ್ತ ಚಲಾಯಿಸುತ್ತಿದ್ದ ಪೋರ್ಶೆ ಕಾರು ಡಿಕ್ಕಿ ಹೊಡೆದು ಇಬ್ಬರು ಟೆಕ್ಕಿಗಳು ಸಾವನ್ನಪ್ಪಿದ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್‌ ಸಿಕ್ಕಿದೆ. ಕಾರು ಅಪಘಾತ ಮಾಡಿದ ಅಪ್ರಾಪ್ತನ ರಕ್ತದ ಮಾದರಿ ವರದಿ ಬದಲಾಯಿಸಲು ಆತನ ಕುಟುಂಬಸ್ಥರು 3 ಲಕ್ಷ ರೂ. ಲಂಚ ಕೊಟ್ಟಿದ್ದ ಪ್ರಕರಣ ಬೆಳಕಿಗೆ ಬಂದಿದೆ.

    ಪುಣೆ ಪೋರ್ಶೆ (Porsche Car) ಅಪಘಾತ ಪ್ರಕರಣದಲ್ಲಿ 17 ವಯಸ್ಸಿನ ಆರೋಪಿಯ ರಕ್ತ ಪರೀಕ್ಷೆಯ ವರದಿಯನ್ನು ದುರ್ಬಳಕೆ ಮಾಡಿಕೊಂಡ ಆರೋಪದಲ್ಲಿ ಇಬ್ಬರು ವೈದ್ಯರೊಂದಿಗೆ ನಿನ್ನ ಪ್ಯೂನ್‌ ಬಂದಿತನಾಗಿದ್ದ. ಈತ ವೈದ್ಯರಿಗೆ 3 ಲಕ್ಷ ರೂ. ಲಂಚ ನೀಡಿದ್ದಾನೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಪೋರ್ಶೆ ಕಾರು ಅಪಘಾತ ಪ್ರಕರಣ- ಇಬ್ಬರು ವೈದ್ಯರ ಬಂಧನ

    ಅತುಲ್ ಘಟಕಾಂಬಳೆ ಎಂಬ ಪ್ಯೂನ್ ಮಧ್ಯವರ್ತಿಯಾಗಿ, ಅಪ್ರಾಪ್ತನ ಕುಟುಂಬದಿಂದ ಇಬ್ಬರು ವೈದ್ಯರಿಗೆ 3 ಲಕ್ಷ ರೂ. ಲಂಚವನ್ನು ಸಂಗ್ರಹಿಸಿದ್ದ. ಸಸೂನ್ ಆಸ್ಪತ್ರೆಯ ಡಾ. ಅಜಯ್ ತವಾಡೆ ಮತ್ತು ಡಾ. ಹರಿ ಹಾರ್ನರ್ ಅವರನ್ನು ಪುಣೆ ಕ್ರೈಂ ಬ್ರಾಂಚ್ ನಿನ್ನೆ ಬಂಧಿಸಿದೆ.

    ತನಿಖೆಯಿಂದ ಡಾ. ತವಡೆ ಮತ್ತು ಹದಿಹರೆಯದ ಆರೋಪಿಯ ತಂದೆ ಅಪಘಾತದ ದಿನ ಫೋನ್‌ನಲ್ಲಿ ಮಾತನಾಡಿದ್ದಾರೆ ಎಂದು ತಿಳಿದುಬಂದಿದೆ. ಬಾಲಾಪರಾಧಿಯ ತಂದೆ ವೈದ್ಯರಿಗೆ ಕರೆ ಮಾಡಿ ರಕ್ತದ ಮಾದರಿ ವರದಿಗಳನ್ನು ಬದಲಿಸಲು ಆಮಿಷ ಒಡ್ಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಪೋರ್ಶೆ ಕಾರು ಅಪಘಾತ ಪ್ರಕರಣ- ಆರೋಪಿ ಅಪ್ರಾಪ್ತನ ಅಜ್ಜ ಅರೆಸ್ಟ್‌

    ಆಸ್ಪತ್ರೆಯಲ್ಲಿ ಸಂಗ್ರಹಿಸಿ ವಿಧಿವಿಜ್ಞಾನ ಪರೀಕ್ಷೆಗೆ ಕಳುಹಿಸಿರುವ ಮಾದರಿಗಳು ಬಾಲಾಪರಾಧಿಗಳದ್ದಲ್ಲ ಎಂದು ಪುಣೆ ಪೊಲೀಸ್ ಆಯುಕ್ತ ಅಮಿತೇಶ್ ಕುಮಾರ್ ಹೇಳಿದ್ದರು. ಮೇ 19 ರಂದು ಬೆಳಗ್ಗೆ 11 ಗಂಟೆಯ ಸುಮಾರಿಗೆ, ಸ್ಯಾಸೂನ್ ಆಸ್ಪತ್ರೆಯಲ್ಲಿ ತೆಗೆದ ಅಪ್ರಾಪ್ತನ ರಕ್ತದ ಮಾದರಿಯನ್ನು ಡಸ್ಟ್‌ಬಿನ್‌ಗೆ ಎಸೆಯಲಾಯಿತು. ಇನ್ನೊಬ್ಬ ವ್ಯಕ್ತಿಯ ರಕ್ತದ ಮಾದರಿಯನ್ನು ತೆಗೆದುಕೊಂಡು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು.

    ಅಪ್ರಾಪ್ತರ ರಕ್ತದ ಮಾದರಿಗಳನ್ನು ಬದಲಾಯಿಸಲಾಗಿದ್ದು, ಭಾನುವಾರ ಬಂದ ವರದಿಯಲ್ಲಿ ಮದ್ಯದ ಯಾವುದೇ ಕುರುಹು ಕಂಡುಬಂದಿಲ್ಲ. ಆದರೆ ಆ ರಾತ್ರಿ ಆತ ಭೇಟಿ ನೀಡಿದ ಬಾರ್ ಒಂದರ ಸಿಸಿಟಿವಿ ದೃಶ್ಯಾವಳಿಯಲ್ಲಿ ಆತ ಸ್ನೇಹಿತರೊಂದಿಗೆ ಮದ್ಯಪಾನ ಮಾಡುತ್ತಿರುವುದು ಕಂಡುಬಂದಿದೆ.

  • ಪೋರ್ಶೆ ಕಾರು ಅಪಘಾತ ಪ್ರಕರಣ- ಇಬ್ಬರು ವೈದ್ಯರ ಬಂಧನ

    ಪೋರ್ಶೆ ಕಾರು ಅಪಘಾತ ಪ್ರಕರಣ- ಇಬ್ಬರು ವೈದ್ಯರ ಬಂಧನ

    ಪುಣೆ: ಪೋರ್ಶೆ ಕಾರು (Porsche Car Aciident) ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಇಬ್ಬರು ವೈದ್ಯರನ್ನು ಪುಣೆ ಕ್ರೈಂ ಬ್ರಾಂಚ್ ಪೊಲೀಸರು ಬಂಧಿಸಿದ್ದಾರೆ.

    ಸಾಸೂನ್ ಆಸ್ಪತ್ರೆಯ ಡಾ. ಶ್ರೀಹರಿ ಹಾರ್ಲರ್ ಮತ್ತು ಡಾ. ಅಜಯ್ ತಾವ್ರೆ ಬಂಧಿತರು. ಡಾ. ಅಜಯ್ ತಾವ್ರೆ, ಸಸೂನ್ ಆಸ್ಪತ್ರೆಯಲ್ಲಿ ಫೋರೆನ್ಸಿಕ್ ಮೆಡಿಸಿನ್ ಮತ್ತು ಟಾಕ್ಸಿಕಾಲಜಿ ಮುಖ್ಯಸ್ಥನಾದರೆ, ಡಾ. ಶ್ರೀಹರಿ ಹರ್ಲೋಲ್ ಅವರು ತುರ್ತು ವಿಭಾಗದಲ್ಲಿ ಮುಖ್ಯ ವೈದ್ಯಕೀಯ ಅಧಿಕಾರಿ.

    ಪುಣೆಯ ಸಸೂನ್ ಆಸ್ಪತ್ರೆಯ ವೈದ್ಯರು ಅಪ್ರಾಪ್ತರ ರಕ್ತದ ಮಾದರಿ ವರದಿ ತಿರುಚಿರುವ ಆರೋಪ ಕೇಳಿ ಬಂದಿತ್ತು. ಅಪಘಾತಕ್ಕೆ ಕಾರಣನಾದ ಅಪ್ರಾಪ್ತನನ್ನು ವೈದ್ಯಕೀಯ ಪರೀಕ್ಷೆಗಾಗಿ ಪುಣೆಯ ಸಸೂನ್ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಈ ವೇಳೆ ಆತನ ಕುಟುಂಬಸ್ಥರು ವೈದ್ಯರಿಗೆ ಹಣದ ಆಮಿಷವೊಡ್ಡಿದ್ದಾರೆ ಎಂದು ಆರೋಪಿಸಲಾಗಿತ್ತು. ಈ ಸಂಬಂಧ ಇಬ್ಬರ ಸುದೀರ್ಘ ವಿಚಾರಣೆಯ ನಂತರ ಬಂಧಿಸಲಾಯಿತು ಎಂದು ಪೊಲೀಸ್‌ ಅಧಿಕಾರಿ ತಿಳಿಸಿದ್ದಾರೆ.

    ಮೇ 19 ರಂದು ಮುಂಜಾನೆ 3:30 ರ ಸುಮಾರಿಗೆ ಕುಡಿದ ಅಮಲಿನಲ್ಲಿ ಅಪ್ರಾಪ್ತ ಆರೋಪಿಯು ತನ್ನ ಐಷಾರಾಮಿ ಪೋರ್ಶೆ ಕಾರಿನಿಂದ ಇಬ್ಬರ ಹತ್ಯೆಗೆ ಕಾರಣವಾದನು. ಆರಂಭದಲ್ಲಿ ಆರೋಪಿ ಮದ್ಯ ಸೇವಿಸಿಲ್ಲ ಎಂದು ತಿಳಿದು ಬಂದಿದ್ದು, ಸಿಸಿಟಿವಿ ದೃಶ್ಯಾವಳಿಯಲ್ಲಿ ಆತ ತನ್ನ ಸ್ನೇಹಿತರೊಂದಿಗೆ ಬಾರ್‌ನಲ್ಲಿ ಮದ್ಯ ಸೇವಿಸುತ್ತಿರುವುದು ಕಂಡುಬಂದಿದೆ. ಇದನ್ನೂ ಓದಿ: ಪೋರ್ಶೆ ಕಾರು ಅಪಘಾತ ಪ್ರಕರಣ- ಆರೋಪಿ ಅಪ್ರಾಪ್ತನ ಅಜ್ಜ ಅರೆಸ್ಟ್‌

    ಈ ಪ್ರಕರಣದಲ್ಲಿ ಆರೋಪಿಯ ಅಜ್ಜ ಮತ್ತು ತಂದೆ ಮತ್ತು ಇಬ್ಬರು ವೈದ್ಯರು ಸೇರಿದಂತೆ ಒಟ್ಟು 9 ಮಂದಿಯನ್ನು ಈಗಾಗಲೇ ಬಂಧಿಸಲಾಗಿದೆ. ಇವರಲ್ಲಿ ಪಬ್ ಮಾಲೀಕರು, ಇಬ್ಬರು ವ್ಯವಸ್ಥಾಪಕರು ಮತ್ತು ಇಬ್ಬರು ಸಿಬ್ಬಂದಿ ಸೇರಿದ್ದಾರೆ. ಅವರನ್ನು ಕೋಜಿ ರೆಸ್ಟೋರೆಂಟ್‌ನ ಮಾಲೀಕ ಪ್ರಹ್ಲಾದ್, ಅವರ ಮ್ಯಾನೇಜರ್ ಸಚಿನ್ ಕಾಟ್ಕರ್, ಬ್ಲಾಕ್ ಕ್ಲಬ್ ಹೋಟೆಲ್ ಮ್ಯಾನೇಜರ್ ಸಂದೀಪ್ ಸಾಂಗ್ಲೆ ಮತ್ತು ಅವರ ಸಿಬ್ಬಂದಿ ಜಯೇಶ್ ಬೋಂಕರ್ ಮತ್ತು ನಿತೇಶ್ ಶೇವಾನಿ ಎಂದು ಗುರುತಿಸಲಾಗಿದೆ. ಇವರೆಲ್ಲರೂ ಅಪ್ರಾಪ್ತ ಆರೋಪಿಗಳಿಗೆ ಮದ್ಯ ಬಡಿಸಿದ ಆರೋಪ ಹೊತ್ತಿದ್ದಾರೆ.

  • ಪೋರ್ಶೆ ಕಾರು ಅಪಘಾತ ಪ್ರಕರಣ- ಆರೋಪಿ ಅಪ್ರಾಪ್ತನ ಅಜ್ಜ ಅರೆಸ್ಟ್‌

    ಪೋರ್ಶೆ ಕಾರು ಅಪಘಾತ ಪ್ರಕರಣ- ಆರೋಪಿ ಅಪ್ರಾಪ್ತನ ಅಜ್ಜ ಅರೆಸ್ಟ್‌

    ಪುಣೆ: ಪೋರ್ಶೆ ಕಾರು ಅಪಘಾತ (Pune Porsche crash) ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಆರೋಪಿ ಅಪ್ರಾಪ್ತನ ಅಜ್ಜನನ್ನು ಪುಣೆ ಪೊಲೀಸರು (Pune Police) ಇಂದು ಬಂಧಿಸಿದ್ದಾರೆ.

    ಸುರೇಂದ್ರ ಅಗರ್ವಾಲ್ ಬಂಧಿತ ಅಜ್ಜ. ಕಾರು ಅಪಘಾತ ಸಂದರ್ಭದಲ್ಲಿ ತಾನೇ ಪೋರ್ಶೆಯನ್ನು ಚಲಾಯಿಸಿದ್ದಾಗಿ ಪೊಲೀಸರ ಮುಂದೆ ಹೇಳಿಕೆ ನೀಡಬೇಕು ಎಂದು ಚಾಲಕನಿಗೆ ಬೆದರಿಕೆ ಹಾಕಿರುವ ಹಿನ್ನೆಲೆಯಲ್ಲಿ ಸುರೇಂದ್ರರನ್ನು ಬಂಧನ ಮಾಡಲಾಗಿದೆ.

    ಪುಣೆ ಕ್ರೈಂ ಬ್ರಾಂಚ್ ದಾಖಲಿಸಿದ ಹೊಸ ಪ್ರಕರಣದಲ್ಲಿ ಸುರೇಂದ್ರ ಅಗರ್ವಾಲ್ ಅವರನ್ನು ಅವರ ನಿವಾಸದಿಂದ ಮುಂಜಾನೆ 3 ಗಂಟೆಗೆ ಬಂಧಿಸಲಾಯಿತು. ಈ ಮೂಲಕ ಪುಣೆ ಪೋರ್ಶೆ ಅಪಘಾತ ಪ್ರಕರಣದಲ್ಲಿ ಇದು ಮೂರನೇ ಎಫ್‌ಐಆರ್ ಆಗಿದೆ.

    ಇದಕ್ಕೂ ಮೊದಲು ಸುರೇಂದ್ರ ಅಗರ್ವಾಲ್ ಅವರ ಮಗ ಮತ್ತು ಮೊಮ್ಮಗನ ಬಗ್ಗೆ ಇನ್ನಷ್ಟು ತಿಳಿದುಕೊಳ್ಳಲು ಮತ್ತು ಅಪಘಾತದ ದಿನದಂದು ನಡೆಸಿದ ಸಂಭಾಷಣೆಯನ್ನು ಬಯಲಿಗೆಳೆಯಲು ಪ್ರಶ್ನಿಸಿದ್ದರು. ಅಗರ್ವಾಲ್ ಮಾಲೀಕರಾಗಿದ್ದ ರಿಯಾಲ್ಟಿ ಸಂಸ್ಥೆಯ ಹೆಸರಿನಲ್ಲಿ ಪೋರ್ಶೆ ನೋಂದಣಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಇನ್ನು ಗ್ಯಾಂಗ್‌ಸ್ಟರ್ ಛೋಟಾ ರಾಜನ್‌ಗೆ ಹಣ ಪಾವತಿಸಿದ ಆರೋಪದ ಮೇಲೆ ಶೂಟೌಟ್ ಪ್ರಕರಣದಲ್ಲಿ ಸುರೇಂದ್ರ ಅಗರ್ವಾಲ್ ವಿಚಾರಣೆ ಎದುರಿಸುತ್ತಿದ್ದಾರೆ ಎಂದು ಸಿಬಿಐ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಪೋರ್ಶೆ ಕಾರು ಅಪಘಾತ- ಇಬ್ಬರು ಪೊಲೀಸ್‌ ಅಧಿಕಾರಿಗಳ ಅಮಾನತು

    ಏನಿದು ಪ್ರಕರಣ: ಮೇ 19 ರಂದು ಪುಣೆಯಲ್ಲಿ 17 ವರ್ಷದ ಅಪ್ರಾಪ್ತ ಚಾಲನೆ ಮಾಡುತ್ತಿದ್ದ ಪೋರ್ಷೆ ಕಾರು ಬೈಕ್‍ಗೆ ಡಿಕ್ಕಿಯಾಗಿ ಮಧ್ಯಪ್ರದೇಶ ಮೂಲದ ವರ್ಷದ ಐಟಿ ವೃತ್ತಿಪರರಾದ ಅನೀಶ್ ಅವಧಿಯಾ (24) ಮತ್ತು ಅಶ್ವಿನಿ ಕೋಷ್ಟಾ ಅವರು ಸಾವನ್ನಪ್ಪಿದ್ದರು. ಬಳಿಕ ಪೊಲೀಸರು ಅಪ್ರಾಪ್ತನ ಬಳಿ ಪ್ರಬಂಧ ಬರೆಯುವಂತೆ ಸೂಚಿಸಿ ಜಾಮೀನು ನೀಡಿ ಬಿಡುಗಡೆ ಮಾಡಿದ್ದರು. ಪೋಲೀಸರ ಕ್ರಮದ ವಿರುದ್ಧ ಆಕ್ರೋಶ ವ್ಯಕ್ತವಾದ ಬಳಿಕ ಪೊಲೀಸರು ಅಪ್ರಾಪ್ತ ಆರೋಪಿಯನ್ನು ಬಂಧಿಸಿದ್ದರು.

    ಸದ್ಯ ಪುಣೆ ಪೊಲೀಸ್ ಕಮಿಷನರ್ ಅಮಿತೇಶ್ ಕುಮಾರ್ ಅವರು, ಬಾಲಾಪರಾಧಿಯನ್ನು ವಯಸ್ಕನಂತೆ ವಿಚಾರಣೆಗೆ ಒಳಪಡಿಸಲು ಮತ್ತು ರಿಮಾಂಡ್ ಹೋಮ್ಗೆ ಕಳುಹಿಸಲು ಬಾಲನ್ಯಾಯ ಮಂಡಳಿಯ ಮುಂದೆ ಪರಿಶೀಲನಾ ಅರ್ಜಿಯನ್ನು ಸಲ್ಲಿಸಿದ್ದಾರೆ ಎಂದು ಹೇಳಿದರು.

  • ಪೋರ್ಶೆ ಕಾರು ಅಪಘಾತ- ಇಬ್ಬರು ಪೊಲೀಸ್‌ ಅಧಿಕಾರಿಗಳ ಅಮಾನತು

    ಪೋರ್ಶೆ ಕಾರು ಅಪಘಾತ- ಇಬ್ಬರು ಪೊಲೀಸ್‌ ಅಧಿಕಾರಿಗಳ ಅಮಾನತು

    ಪುಣೆ: ಪೋರ್ಶೆ ಕಾರು ಅಪಘಾತ (Pune Porsche accident) ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಇಬ್ಬರು ಪೊಲೀಸ್‌ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.

    ಇನ್‌ಸ್ಪೆಕ್ಟರ್ ರಾಹುಲ್ ಜಗದಾಳೆ ಮತ್ತು ಸಹಾಯಕ ಪೊಲೀಸ್ ಇನ್ಸ್‌ಪೆಕ್ಟರ್ ವಿಶ್ವನಾಥ ತೋಡ್ಕರಿ ಅಮಾನತುಗೊಂಡ ಪೊಲೀಸ್‌ ಅಧಿಕಾರಿಗಳು. ಇವರಿಬ್ಬರು ಯರವಾಡ ಪೊಲೀಸ್ ಠಾಣೆಯವರಾಗಿದ್ದಾರೆ.

    ಕಾರು ಅಪಘಾತಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪ ಆರೋಪದ ಮೇಲೆ ಶುಕ್ರವಾರ ಅಮಾನತುಗೊಳಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ ಮನೋಜ್ ಪಾಟೀಲ್ ತಿಳಿಸಿದ್ದಾರೆ. ಇದನ್ನೂ ಓದಿ: ಮದ್ಯ ಕುಡಿಯಲು 90 ನಿಮಿಷದಲ್ಲಿ 48,000 ರೂ. ಖರ್ಚು ಮಾಡಿದ್ದ ಕಿಲ್ಲರ್‌ ಬಾಯ್‌ – ಮುಂದಾಗಿದ್ದೇನು ಗೊತ್ತೇ?

    ಅಪ್ರಾಪ್ತನೋರ್ವ ಕುಡಿದ ಅಮಲಿನಲ್ಲಿ ಕಾರು ಚಲಾಯಿಸಿ ಇಬ್ಬರು ಎಂಜಿನಿಯರ್‌ಗಳ ಸಾವಿಗೆ ಕಾರಣವಾಗಿದ್ದನು. ನಗರದ ಕಲ್ಯಾಣಿನಗರದಲ್ಲಿ ಕಾರು ಅಪಘಾತವಾಗಿ ಭಾರೀ ಪ್ರತಿಭಟನೆಯ ಬಳಿಕ ಯರವಾಡ ಪೊಲೀಸ್ ಠಾಣೆಯಲ್ಲಿ ಅಪಘಾತ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಿಸಿಕೊಳ್ಳುವಾಗ ಪೊಲೀಸ್ ಅಧಿಕಾರಿಗಳ ಲೋಪದೋಷವನ್ನು ಆಂತರಿಕ ತನಿಖೆಯು ಎತ್ತಿ ತೋರಿಸಿದೆ ಎಂದು ಪುಣೆ ಪೊಲೀಸ್ ಕಮಿಷನರ್ ಅಮಿತೇಶ್ ಕುಮಾರ್ ಈ ಹಿಂದೆ ತಿಳಿಸಿದ್ದರು.

    ಭಾನುವಾರ ಬೆಳಗ್ಗಿನ ಜಾವ 3 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದ್ದು, ರಾತ್ರಿ 11 ಗಂಟೆಗೆ ರಕ್ತದ ಮಾದರಿಗಳನ್ನು ಸಂಗ್ರಹಿಸಲಾಗಿದೆ ಎಂದು ಆಯುಕ್ತರು ತಿಳಿಸಿದ್ದಾರೆ. ಇದಲ್ಲದೆ ಅಪಘಾತ ಸಂಬಂಧ ಮೊದಲು ಐಪಿಸಿ ಸೆಕ್ಷನ್ 304 (ಎ) (ನಿರ್ಲಕ್ಷ್ಯದಿಂದ ಸಾವಿಗೆ ಕಾರಣ) ಅಡಿಯಲ್ಲಿ ದಾಖಲಿಸಲಾಯಿತು. ಆದರೆ ಭಾರೀ ಪ್ರತಿಭಟನೆಯ ಬಳಿಕ ನಂತರ ಸೆಕ್ಷನ್ 304 (ಹತ್ಯೆ) ಸೇರಿಸಲಾಯಿತು ಎಂದು ಅಮಿತೇಶ್‌ ಕುಮಾರ್‌ ವಿವರಿಸಿದ್ದಾರೆ.

  • ಬೆಂಗ್ಳೂರಲ್ಲಿ ನಿಲ್ಲದ ದೊಡ್ಡವರ ಮಕ್ಕಳ ಆಕ್ಸಿಡೆಂಟ್ – Textile ಮಾಲೀಕನ ಮಗನ ಕಾರು ಅಪಘಾತ

    ಬೆಂಗ್ಳೂರಲ್ಲಿ ನಿಲ್ಲದ ದೊಡ್ಡವರ ಮಕ್ಕಳ ಆಕ್ಸಿಡೆಂಟ್ – Textile ಮಾಲೀಕನ ಮಗನ ಕಾರು ಅಪಘಾತ

    – ಕಾರಿಗೆ ಡಿಕ್ಕಿಯಾಗಿ ಆಸ್ಪತ್ರೆಗೆ ಗೇಟ್‍ಗೆ ಗುದ್ದಿದ ಪೋರ್ಶೆ ಕಾರ್

    ಬೆಂಗಳೂರು: ದೊಡ್ಡವರ ಮಕ್ಕಳು ಇತ್ತೀಚೆಗೆ ನಡೆದಿದ್ದ ಸರಣಿ ಅಪಘಾತದ ಬಳಿಕವು ಎಚ್ಚೆತ್ತುಕೊಂಡಿಲ್ಲ. ಹೀಗಾಗಿ ಬೆಂಗಳೂರಿನಲ್ಲಿ ಮತ್ತೊಂದು ಐಷಾರಾಮಿ ಕಾರು ಅಪಘಾತ ನಡೆದಿದೆ.

    ಈ ಘಟನೆ ದೊಮ್ಮಲೂರು ರಸ್ತೆಯ ಮಿಲಿಟರಿ ಆಸ್ಪತ್ರೆ ಬಳಿ ನಡೆದಿದೆ. ಜಾವೆರ್ ಮೆವಾನಿ ಎಂಬಾತ ಕಾರು ಚಲಾಯಿಸುತ್ತಿದ್ದು, ಈತ ಟೆಕ್ಸ್ ಟೈಲ್ ಮಾಲೀಕ ಕರೀಂ ಮೆವಾನಿ ಪುತ್ರ. ಇಟಿಯೊಸ್ (Etios Car) ಕಾರಲ್ಲಿ ಕೇಶವಮೂರ್ತಿ, ಇಬ್ಬರು ಪ್ರಯಾಣಿಕರು ಪ್ರಯಾಣಿಸ್ತಿದ್ದರು. ಇದನ್ನೂ ಓದಿ: ಕೋರಮಂಗಲದಲ್ಲಿ ಭೀಕರ ಅಪಘಾತ – ಹೊಸೂರು ಶಾಸಕನ ಪುತ್ರ ಸಾವು

    ಇಂದಿರಾನಗರದಲ್ಲಿ ಮೋಜು ಮಸ್ತಿ ಮುಗಿಸಿ ಬರ್ತಿದ್ದ ಪೋರ್ಶೆ ಕಾರು (Porsche Car) ಅಪಘಾತಕ್ಕೀಡಾಗಿದೆ. ರೆಡ್ ಇಟಿಯೊಸ್ ಕಾರಿಗೆ ಹಿಂಬದಿಯಿಂದ ಪೋರ್ಶೆ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿಯಾದ ರಭಸಕ್ಕೆ ಎರಡೂ ಕಾರುಗಳು ಜಖಂಗೊಂಡಿವೆ. ಅದೃಷ್ಟವಶಾತ್ ಕಾರಿನಲ್ಲಿದ್ದವರು ಪ್ರಾಣಪಾಯದಿಂದ ಪಾರಾಗಿದ್ದಾರೆ. ಇದನ್ನೂ ಓದಿ: ಯಾವುದೇ ಸ್ಥಾನಮಾನ ಇಲ್ಲದಿದ್ರೂ ಕೊನೇ ಉಸಿರಿರುವವರೆಗೆ ಪಕ್ಷ ಸಂಘಟನೆ ಮಾಡ್ತೇನೆ: ಬಿಎಸ್‍ವೈ

    ಬಿಳಿ ಪೋರ್ಶೆ ಕಾರು 100 ಕಿ.ಮೀ.ಗಿಂತಲೂ ಹೆಚ್ಚಿನ ವೇಗದಲ್ಲಿತ್ತು. ಜಾವೆರ್ ಮೆವಾನಿ ನಿರ್ಲಕ್ಷ್ಯದಿಂದ ಐಷಾರಾಮಿ ಕಾರು ಅಪಘಾತಕ್ಕೀಡಾಗಿದೆ ಎಂದು ಹೇಳಲಾಗುತ್ತಿದ್ದು, ಈ ಸಂಬಂಧ ಹಲಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.