Tag: ಪೋಸ್ಟ್ ಮಾರ್ಟಂ ರಿಪೋರ್ಟ್

  • ನಮ್ಮ ಮೇಲೆ ಅತ್ಯಾಚಾರ ಮಾಡೋದನ್ನ ಈಗಲಾದ್ರೂ ನಿಲ್ಲಿಸಿ; ಟ್ರೈನಿ ವೈದ್ಯೆ ಕೇಸ್‌ ಬಗ್ಗೆ ಪೂನಂ ಪಾಂಡೆ ಪ್ರತಿಕ್ರಿಯೆ

    ನಮ್ಮ ಮೇಲೆ ಅತ್ಯಾಚಾರ ಮಾಡೋದನ್ನ ಈಗಲಾದ್ರೂ ನಿಲ್ಲಿಸಿ; ಟ್ರೈನಿ ವೈದ್ಯೆ ಕೇಸ್‌ ಬಗ್ಗೆ ಪೂನಂ ಪಾಂಡೆ ಪ್ರತಿಕ್ರಿಯೆ

    – ನಾವು ಹೇಗೆ ಬಟ್ಟೆ ಹಾಕ್ತೀವಿ? ನಡೆಯುತ್ತೇವೆ? ಮಾತಾಡ್ತೇವೆ? ಎಲ್ಲವನ್ನೂ ಕೇಳೋದೇಕೆ?

    ಮುಂಬೈ: ದಯವಿಟ್ಟು ನಮ್ಮ ಮೇಲೆ ಅತ್ಯಾಚಾರ ಮಾಡೋದನ್ನ ಈಗಲಾದ್ರೂ ನಿಲ್ಲಿಸಿ ಎಂದು ಮಾದಕ ನಟಿ ಪೂನಂ ಪಾಂಡೆ (Poonam Pandey) ಭಾವುಕ ಸಂದೇಶವೊಂದನ್ನ ಹಂಚಿಕೊಂಡಿದ್ದಾರೆ.

    ಕೋಲ್ಕತ್ತಾದಲ್ಲಿ ಇತ್ತೀಚೆಗೆ ತರಬೇತಿ ವೈದ್ಯೆಯ ಮೇಲಿನ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣದ (Kolkata Rape Murder Case) ಕುರಿತು ತಮ್ಮ ಸೋಷಿಯಲ್‌ ಮೀಡಿಯಾ ಇನ್‌ಸ್ಟಾಗ್ರಾಮ್‌ (Instagram) ಖಾತೆಯಲ್ಲಿ ಸಂದೇಶವೊಂದನ್ನು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಟ್ರೈನಿ ವೈದ್ಯೆ ಹತ್ಯೆ ಪ್ರಕರಣ: ಆರೋಪಿಯ ಹೊಡೆತಕ್ಕೆ ಕನ್ನಡಕ ಒಡೆದು ಬಿದ್ದ ಗಾಜಿನಿಂದ ಕಣ್ಣಲ್ಲಿ ರಕ್ತ!

     

    View this post on Instagram

     

    A post shared by Poonam Pandey (@poonampandeyreal)

    ಪೂನಂ ಪಾಂಡೆ ಇನ್‌ಸ್ಟಾದಲ್ಲಿ ಏನಿದೆ?
    ನಾಚಿಕೆಯಾಗಬೇಕು ನಮಗೆ?…
    ಅತ್ಯಾಚಾರಿಗಳು ಮುಕ್ತವಾಗಿ ನಡೆಯುವ, ಹಿಂಬಾಲಕರು ಕತ್ತಲಲ್ಲಿ ಅಡಗಿರುವ ಹಾಗೂ ಮಹಿಳೆಯರು ನಿರಂತರವಾಗಿ ಅಸುರಕ್ಷಿತರಾಗಿರುವ ಈ ಜಗತ್ತಿನಲ್ಲಿ ನಾವು ಏಕೆ ವಾಸಿಸುತ್ತಿದ್ದೇವೆ? ನಾವು ಇದನ್ನ ಪ್ರತಿದಿನ ಸಹಿಸಿಕೊಳ್ಳಲು ಏಕೆ ಒತ್ತಾಯಿಸಲ್ಪಡುತ್ತೇವೆ? ಅಸುರಕ್ಷತೆ ನಮಗೆ ಸಂಭವಿಸುತ್ತಿದೆ ಅದಕ್ಕೆ ನಾವು ದೂಷಿಸುತ್ತೇವೆ? ಇದನ್ನೂ ಓದಿ: ದೇಶ ಮೊದಲು.. ಭಾರತವನ್ನು ಬಲಪಡಿಸಲು ದೊಡ್ಡ ಸುಧಾರಣೆಗಳಿಗೆ ಬದ್ಧ: ಪ್ರಧಾನಿ ಮೋದಿ ಪ್ರತಿಜ್ಞೆ

    ನಾವು ಹೇಗೆ ಬಟ್ಟೆ ಧರಿಸುತ್ತೇವೆ? ಹೇಗೆ ನಡೆಯುತ್ತೇವೆ? ಹೇಗೆ ಮಾತನಾಡುತ್ತೇವೆ ಎಂಬುದನ್ನು ಕೇಳುತ್ತಾರೆ? ಏನು ಮಾಡಬೇಕು ಎಂಬುದನ್ನು ಹೇಳುತ್ತಾರೆ? ಆದ್ರೆ ನಾವು ಭಯವಿಲ್ಲದೇ ಬದುಕುವುದಕ್ಕೆ ಏಕೆ ಸಾಧ್ಯವಿಲ್ಲ? ಕಿರುಕುಳ ಅನುಭವಿಸದೇ ಏಕೆ ಅಸ್ತಿತ್ವದಲ್ಲಿರಲು ಧ್ಯವಿಲ್ಲ? ನಾವು ಸುರಕ್ಷತೆ, ಘನತೆ ಮತ್ತು ಗೌರವ ಬಯಸಿದಾಗ ನಮ್ಮ ಧ್ವನಿಯನ್ನು ಏಕೆ ಮೌನಗೊಳಿಸುತ್ತಾರೆ? ಇದನ್ನೂ ಓದಿ: Independence Day: ಕೆಂಪುಕೋಟೆಯಲ್ಲಿ ಸ್ವಾತಂತ್ರೋತ್ಸವದ ಸಂಭ್ರಮ – ಧ್ವಜಾರೋಹಣ ನೆರವೇರಿಸಿದ ಪ್ರಧಾನಿ

    ನಾವು ಬೇಡುವುದು ಒಂದೇ.. ದಯವಿಟ್ಟು ಇನ್ನಾದರೂ ನಮ್ಮ ಮೇಲೆ ಅತ್ಯಾಚಾರ ಮಾಡುವುದನ್ನು ನಿಲ್ಲಿಸಬಹುದೇ? ನಮ್ಮನ್ನು ಹಿಂಬಾಲಿಸುವುದನ್ನ ನಿಲ್ಲಿಸಬಹುದೇ? ದಯವಿಟ್ಟು ನಮಗೆ ಕಿರುಕುಳ ನೀಡೋದನ್ನ ನಿಲ್ಲಿಸಬಹುದೇ? ನಾವು ಭಯದಿಂದ ಬದುಕಲು ಬೇಸತ್ತಿದ್ದೇವೆ, ನಮ್ಮ ವಿರುದ್ಧ ಹಿಂಸಾಚಾರ ನಡೆದರೂ ಅಂತ್ಯವಿಲ್ಲದ ಸಮರ್ಥನೆಗಳಿಂದ ಬೇಸತ್ತಿದ್ದೇವೆ. ಇದೆಲ್ಲವೂ ನಿಲ್ಲಬೇಕಾದ ಅಗತ್ಯವಿದೆ. ಏಕೆಂದರೆ ನಾವು ಸಹ ಎಲ್ಲರಂತೆ ಯಾವುದೇ ಬೆದರಿಕೆಯಿಲ್ಲದೇ ಸರಳವಾಗಿ ಬದುಕಲು ಅರ್ಹರಿದ್ದೇವೆ ಎಂದು ಅವರು ಬರೆದುಕೊಂಡಿದ್ದಾರೆ.

    ಕೋಲ್ಕತ್ತಾ ಪ್ರಕರಣ ಏನು?
    ಕಳೆದ ಆ.9ರಂದು ಬೆಳಗ್ಗೆ ಸ್ನಾತಕೋತ್ತರ ತರಬೇತಿ ನಿರತ ವೈದ್ಯೆಯ ಶವ ಆಸ್ಪತ್ರೆಯ ಸೆಮಿನಾರ್ ಹಾಲ್‌ನಲ್ಲಿ ಅತ್ಯಾಚಾರ ಮತ್ತು ಕೊಲೆಯಾದ ರೀತಿಯಲ್ಲಿ ಪತ್ತೆಯಾಗಿತ್ತು. ಕೃತ್ಯ ನಡೆಸಿದ್ದ ಆರೋಪಿ ಸಂಜಯ್‌ನನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ. ಅಶ್ಲೀಲ ವೀಡಿಯೋಗಳಿಗೆ ವ್ಯಸನಿಯಾಗಿದ್ದ ಸಂಜಯ್ ಕೊಲೆಯ ನಂತರ ಸಾಕ್ಷ್ಯ ನಾಶಪಡಿಸಲು ರಕ್ತಸಿಕ್ತ ಬಟ್ಟೆಯನ್ನು ತೊಳೆದಿದ್ದ ಎನ್ನುವುದನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಈ ಹಿಂದೆ ಪೊಲೀಸ್ ಸ್ವಯಂಸೇವಕನಾಗಿದ್ದ ಈತ 4 ಬಾರಿ ಮದುವೆಯಾಗಿದ್ದು, ಪತ್ನಿಯರಿಗೆ ಆಗಾಗ ಕಿರುಕುಳ ನೀಡುತ್ತಿದ್ದ ಎಂದು ತನಿಖೆಯಿಂದ ತಿಳಿದುಬಂದಿದೆ. ಸದ್ಯ ಈ ಪ್ರಕರಣವನ್ನು ಕೇಂದ್ರೀಯ ತನಿಖಾ ದಳ (CBI) ತನಿಖೆ ನಡೆಸುತ್ತಿದೆ.

  • ಟ್ರೈನಿ ವೈದ್ಯೆ ಹತ್ಯೆ ಪ್ರಕರಣ: ಆರೋಪಿಯ ಹೊಡೆತಕ್ಕೆ ಕನ್ನಡಕ ಒಡೆದು ಬಿದ್ದ ಗಾಜಿನಿಂದ ಕಣ್ಣಲ್ಲಿ ರಕ್ತ!

    ಟ್ರೈನಿ ವೈದ್ಯೆ ಹತ್ಯೆ ಪ್ರಕರಣ: ಆರೋಪಿಯ ಹೊಡೆತಕ್ಕೆ ಕನ್ನಡಕ ಒಡೆದು ಬಿದ್ದ ಗಾಜಿನಿಂದ ಕಣ್ಣಲ್ಲಿ ರಕ್ತ!

    ಕೋಲ್ಕತ್ತಾ: ಆರ್‌ಜಿ ಕಾರ್ ವೈದ್ಯಕೀಯ ಕಾಲೇಜಿನಲ್ಲಿ ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ (Kolkata doctor rape and murder Case) ಮರಣೋತ್ತರ ಪರೀಕ್ಷೆಯ ವರದಿ ಬಂದಿದೆ. ಇದರಲ್ಲಿ ಆರೋಪಿಯ ಅಮಾನುಷ ಕೃತ್ಯಗಳು ಬಹಿರಂಗವಾಗಿದೆ. ಆರೋಪಿ ಸಂಜಯ್ ರಾಯ್ ವೈದ್ಯೆ ಮೇಲೆ ಅಮಾನುಷವಾಗಿ ಥಳಿಸಿದ್ದಾನೆ. ಅವನ ಹೊಡೆತಕ್ಕೆ ಟ್ರೈನಿ ವೈದ್ಯೆಯ ಕನ್ನಡಕ ಒಡೆದು ಕಣ್ಣಿಗೆ ಗಾಜು ಬಿದ್ದಿದೆ. ಇದರಿಂದಾಗಿ ಕಣ್ಣಿನಲ್ಲಿ ರಕ್ತ ಬಂದಿದೆ ವರದಿಯಲ್ಲಿದೆ.

    ಎಲ್ಲಿ ನೋಡಿದರೂ ರಕ್ತ..!
    ವೈದ್ಯೆಯ (Doctor) ಕಣ್ಣು ಮತ್ತು ಬಾಯಿ ಎರಡರಲ್ಲೂ ರಕ್ತ ಸುರಿಯುತ್ತಿತ್ತು. ವೈದ್ಯೆಯ ಮುಖವು ಗಾಯಗಳಿಂದ ತುಂಬಿದೆ. ಸಂತ್ರಸ್ತೆಯ ಖಾಸಗಿ ಅಂಗಗಳಲ್ಲಿಯೂ ತೀವ್ರ ರಕ್ತಸ್ರಾವವಾಗಿತ್ತು. ಹೊಟ್ಟೆ, ಎಡಗಾಲು, ಕುತ್ತಿಗೆ, ಬಲಗೈ, ಉಂಗುರ ಬೆರಳು ಮತ್ತು ತುಟಿಯ ಮೇಲೆ ಗಾಯಗಳಾಗಿವೆ ಎಂದು ಮರಣೋತ್ತರ ಪರೀಕ್ಷೆ ವರದಿಯಲ್ಲಿ ತಿಳಿಸಲಾಗಿದೆ. ಇದನ್ನೂ ಓದಿ: ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಹತ್ಯೆ ಖಂಡಿಸಿ ದೇಶದ್ಯಾಂತ ಪ್ರತಿಭಟನೆ

    ಪ್ರಕರಣ ಏನು?
    ಕಳೆದ ಶುಕ್ರವಾರ ಬೆಳಗ್ಗೆ ಸ್ನಾತಕೋತ್ತರ ತರಬೇತಿ ನಿರತ ವೈದ್ಯೆಯ ಶವ ಆಸ್ಪತ್ರೆಯ ಸೆಮಿನಾರ್ ಹಾಲ್‌ನಲ್ಲಿ ಅತ್ಯಾಚಾರ ಮತ್ತು ಕೊಲೆಯಾದ ರೀತಿಯಲ್ಲಿ ಪತ್ತೆಯಾಗಿತ್ತು. ಕೃತ್ಯ ನಡೆಸಿದ್ದ ಆರೋಪಿ ಸಂಜಯ್‌ನನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ. ಅಶ್ಲೀಲ ವೀಡಿಯೋಗಳಿಗೆ ವ್ಯಸನಿಯಾಗಿದ್ದ ಸಂಜಯ್ ಕೊಲೆಯ ನಂತರ ಸಾಕ್ಷ್ಯ ನಾಶಪಡಿಸಲು ರಕ್ತಸಿಕ್ತ ಬಟ್ಟೆಯನ್ನು  ತೊಳೆದಿದ್ದ ಎನ್ನುವುದನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಈ ಹಿಂದೆ ಪೊಲೀಸ್ ಸ್ವಯಂಸೇವಕನಾಗಿದ್ದ ಈತ 4 ಬಾರಿ ಮದುವೆಯಾಗಿದ್ದು, ಪತ್ನಿಯರಿಗೆ ಆಗಾಗ ಕಿರುಕುಳ ನೀಡುತ್ತಿದ್ದ ಎಂದು ತನಿಖೆಯಿಂದ ತಿಳಿದು ಬಂದಿದೆ.  ಇದನ್ನೂ ಓದಿ: ತರಬೇತಿ ವೈದ್ಯೆ ಮೇಲೆ ಅತ್ಯಾಚಾರ ಕೇಸ್‌ – ಅವಮಾನ ಸಹಿಸಲಾರದೇ ಪ್ರಾಂಶುಪಾಲ ರಾಜೀನಾಮೆ