Tag: ಪೌರತ್ವ ತಿದ್ದುಪಡಿ

  • ಪ್ರಣಾಳಿಕೆಯಲ್ಲಿ ಸಿಎಎ ಉಲ್ಲೇಖಿಸಲು ಭಯ – ಕಾಂಗ್ರೆಸ್‌ ವಿರುದ್ಧ ಪಿಣರಾಯಿ ಕಿಡಿ

    ಪ್ರಣಾಳಿಕೆಯಲ್ಲಿ ಸಿಎಎ ಉಲ್ಲೇಖಿಸಲು ಭಯ – ಕಾಂಗ್ರೆಸ್‌ ವಿರುದ್ಧ ಪಿಣರಾಯಿ ಕಿಡಿ

    ತಿರುವನಂತಪುರಂ: ಲೋಕಸಭಾ ಪ್ರಣಾಳಿಕೆಯಲ್ಲಿ (Lok Sabha Election) ಪೌರತ್ವ ತಿದ್ದುಪಡಿ ಕಾಯ್ದೆಯ (CAA) ಬಗ್ಗೆ ಯಾವುದೇ ಉಲ್ಲೇಖ ಮಾಡದ್ದಕ್ಕೆ ಕಾಂಗ್ರೆಸ್‌ (Congress) ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ (Pinarayi Vijayan) ವಾಗ್ದಾಳಿ ನಡೆಸಿದ್ದಾರೆ.

    ಕೊಲ್ಲಂನಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಅಧಿಕಾರಕ್ಕೆ ಬಂದರೆ ಜಿಎಸ್‌ಟಿ (GST) ಸೇರಿ, ಸಂವಿಧಾನವನ್ನು ಉಲ್ಲಂಘಿಸಿ ಜಾರಿಗೆ ತರಲಾದ ಹಲವು ಕಾನೂನುಗಳನ್ನು ವಾಪಸ್ ಪಡೆಯುವುದಾಗಿ ಕಾಂಗ್ರೆಸ್‌ ಹೇಳಿದೆ. ಆದರೆ ಸಿಎಎ ಬಗ್ಗೆ ಒಂದು ಶಬ್ದವನ್ನೂ ಉಲ್ಲೇಖಿಸಿಲ್ಲ ಎಂದು ಕಿಡಿಕಾರಿದರು.  ಇದನ್ನೂ ಓದಿ: ಏ.16ಕ್ಕೆ ವಿವಿಪ್ಯಾಟ್ ತಾಳೆಗೆ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ: ಸುಪ್ರೀಂ

    ಉದ್ದೇಶಪೂರ್ವಕವಾಗಿಯೇ ಸಿಎಎಯನ್ನು ಹೊರಗಿಡಲಾಗಿದೆ. ವಿವಾದಾತ್ಮಕ ವಿಷಯಗಳ ಬಗ್ಗೆ ಪ್ರಸ್ತಾಪಿಸಲು ಕಾಂಗ್ರೆಸ್‌ಗೆ ಇರುವ ಭಯವನ್ನು ಇದು ತೋರಿಸುತ್ತದೆ ಎಂದು ದೂರಿದರು.

    ಕಾಂಗ್ರೆಸ್‌ ವಿರುದ್ಧ ವಿಜಯನ್‌ ಕಿಡಿ ಕಾರುತ್ತಿರುವುದು ಇದು ಮೊದಲೆನಲ್ಲ. ರಾಹುಲ್‌ ಗಾಂಧಿ (Rahul Gandhi) ವಯನಾಡ್‌ನಲ್ಲಿ ಸ್ಪರ್ಧಿಸುತ್ತಿರುವುದಕ್ಕೆ ಅವರು ವಿರೋಧ ವ್ಯಕ್ತಪಡಿಸಿದ್ದರು. ಕೇರಳಲ್ಲಿ ಬಿಜೆಪಿ ಖಾತೆ ತೆರೆಯುವುದಿಲ್ಲ ಎನ್ನುವುದು ಎಲ್ಲರಿಗೂ ಗೊತ್ತಿರುವ ಸತ್ಯ ಹೀಗಿರುವಾಗ ಕೇರಳದಲ್ಲಿ ರಾಹುಲ್‌ ಗಾಂಧಿ ಸ್ಪರ್ಧೆ ಮಾಡುವುದು ಎಷ್ಟು ಸರಿ? ಬಿಜೆಪಿ (BJP) ಪ್ರಬಲವಿರುವ ರಾಜ್ಯಗಳಲ್ಲಿ ರಾಹುಲ್‌ ಸ್ಪರ್ಧಿಸಬೇಕು ಎಂದು ಎಂದು ಹೇಳಿದ್ದರು.  ಇದನ್ನೂ ಓದಿ: ಕೇಜ್ರಿವಾಲ್‌ ಇತರರೊಂದಿಗೆ ಸೇರಿ ಪಿತೂರಿ ನಡೆಸಿದ್ದಾರೆ – ಜಾಮೀನು ಅರ್ಜಿ ವಜಾ‌

    INDIA ಒಕ್ಕೂಟದಲ್ಲಿ ಸಿಪಿಎಂ ಪಕ್ಷವೂ ಭಾಗವಾಗಿದೆ. ಆದರೆ ಕೇರಳದಲ್ಲಿ ಕಾಂಗ್ರೆಸ್‌ ವಿರುದ್ಧ ಸಿಪಿಎಂ ಈ ಬಾರಿ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಿದೆ.

  • ಪೌರತ್ವ ಕಾಯ್ದೆ ವಿರೋಧಿಸಿ ಪ್ರತಿಭಟನೆ- ಮೂರನೇ ದಿನವೂ ಮುಂದುವರಿದ ನಿಷೇಧಾಜ್ಞೆ

    ಪೌರತ್ವ ಕಾಯ್ದೆ ವಿರೋಧಿಸಿ ಪ್ರತಿಭಟನೆ- ಮೂರನೇ ದಿನವೂ ಮುಂದುವರಿದ ನಿಷೇಧಾಜ್ಞೆ

    ಬೆಂಗಳೂರು: ನಗರದಾದ್ಯಂತ ಇಂದು ಸಹ ನಿಷೇಧಾಜ್ಞೆ ಜಾರಿಯಲ್ಲಿದ್ದು ಪೌರತ್ವ ಕಾಯ್ದೆ ವಿರೋಧಿಸಿ ಮತ್ತು ಪರವಾಗಿ ಯಾವುದೇ ಪ್ರತಿಭಟನೆ ಹಾಗೂ ಮೆರವಣಿಗೆ ಮಾಡದಂತೆ ಪೊಲೀಸರು ನಿಷೇಧಾಜ್ಞೆಯನ್ನು ಹೊರಡಿಸಿದ್ದಾರೆ. ಗುರುವಾರ ಮತ್ತು ಶುಕ್ರವಾರ ನಗರದಲ್ಲಿ ನಿಷೇಧಾಜ್ಞೆ ಇದ್ದರೂ ಹಲವಾರು ಮಂದಿ ಪ್ರತಿಭಟನೆ ಮಾಡಲು ಮುಂದಾಗಿದ್ದರು.

    ನಗರದಲ್ಲಿ ಇಂದು ಸಹ ಕೆಲವರು ಪ್ರತಿಭಟನೆ ನಡೆಸುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸ್ ಭದ್ರತೆಯನ್ನು ಹೆಚ್ಚಳ ಮಾಡಿಕೊಂಡಿದ್ದಾರೆ. ಪೊಲೀಸರ ಜೊತೆಗೆ ಕೆಎಸ್‍ಆರ್ ಪಿ ಹಾಗೂ ಸಿಎಆರ್ ತುಕಡಿಗಳ ನಿಯೋಜನೆ ಮಾಡಿಕೊಂಡಿರುವ ಪೊಲೀಸ್ ಇಲಾಖೆ ರಾಜಧಾನಿಯಲ್ಲಿ ಯಾವುದೇ ಪ್ರತಿಭಟನೆ ಹಾಗೂ ಮೆರವಣಿಗೆ ಆಗದಂತೆ ಮುನ್ನೆಚ್ಚರಿಕೆ ವಹಿಸಿದ್ದಾರೆ.

    ಇಂದು ಬೆಂಗಳೂರು ಎಂದಿನಂತೆ ಸಹಜ ಸ್ಥಿತಿಯಲ್ಲಿದೆ. 10 ಗಂಟೆಯ ಬಳಕ ಪ್ರತಿಭಟನೆ ಆಗುವ ಸಾಧ್ಯತೆಗಳಿವೆ. ಶಿವಾಜಿನಗರದಲ್ಲಿ ಒಂದು ಕೆಎಸ್‍ಆರ್ ಪಿ ತುಕಡಿ ನಿಯೋಜನೆ ಮಾಡಿದ್ದು ಯಾವುದೇ ಪ್ರತಿಭಟನೆಯಾಗದಂತೆ ಮುಂಜಾಗ್ರತ ಕ್ರಮ ಕೈಗೊಂಡಿದ್ದಾರೆ. ಶುಕ್ರವಾರ ಶಿವಾಜಿನಗರದ ಗಲ್ಲಿ ಗಲ್ಲಿಯಲ್ಲಿ ಪೊಲೀಸರು ಪೇರಡ್ ಮಾಡಿ ಜನರು ಆತಂಕ ಪಡುವ ಆಗತ್ಯವಿಲ್ಲ ಜೊತೆಗೆ ಪ್ರತಿಭಟನೆ ಮಾಡಬಾರದು ಎಂದು ತಿಳಿಸಿದ್ದಾರೆ.

  • ಇಂದು ಸಹ ಸೆಕ್ಷನ್ 144 ಜಾರಿ – 244 ಜನರ ವಶಕ್ಕೆ ಪಡೆದ ಪೊಲೀಸ್

    ಇಂದು ಸಹ ಸೆಕ್ಷನ್ 144 ಜಾರಿ – 244 ಜನರ ವಶಕ್ಕೆ ಪಡೆದ ಪೊಲೀಸ್

    ಬೆಂಗಳೂರು: ಪೌರತ್ವ ತಿದ್ದುಪಡಿ ವಿರೋಧಿಸಿ ಪ್ರತಿಭಟನೆ ಮಾಡುವ ಹಿನ್ನೆಲೆಯಲ್ಲಿ ಇಂದು ಸಹ ಬೆಂಗಳೂರು ನಗರದಾದ್ಯಂತ ನಿಷೇಧಾಜ್ಞೆ ಮುಂದುವರಿಯಲಿದೆ. ಗುರುವಾರ ನಗರದಲ್ಲಿ ನಿಷೇಧಾಜ್ಞೆ ಇದ್ದರೂ ಹಲವಾರು ಮಂದಿ ಪ್ರತಿಭಟನೆ ನಡೆಸಿದರು.

    ಗುರುವಾರ 244 ಜನರನ್ನು ವಶಕ್ಕೆ ಪಡೆದಿದ್ದ ಪೊಲೀಸರು 8 ಎಫ್‍ಐಆರ್ ಗಳನ್ನು ದಾಖಲಿಸಿದ್ದಾರೆ. ನಗರದಲ್ಲಿ ಇಂದು ಸಹ ಕೆಲವರು ಪ್ರತಿಭಟನೆ ನಡೆಸುವ ಸಾಧ್ಯತೆ ಹಿನ್ನೆಲೆಯಲ್ಲಿ ಭದ್ರತೆಯನ್ನು ಹೆಚ್ಚಳ ಮಾಡುಕೊಂಡಿರುವ ಪೊಲೀಸರು ಪ್ರತಿಭಟನೆ ಮಾಡದಂತೆ ಕರೆ ನೀಡಿದ್ದಾರೆ.

    ಪೊಲೀಸರ ಜೊತೆಗೆ ಕೆಎಸ್‍ಆರ್‍ಪಿ ಹಾಗೂ ಸಿಎಆರ್ ತುಕಡಿಗಳ ನಿಯೋಜನೆ ಮಾಡಿಕೊಂಡಿದ್ದು, ಟೌನ್ ಹಾಲ್ ಹಾಗೂ ಮೈಸೂರು ಬ್ಯಾಂಕ್ ಸರ್ಕಲ್ ಬಳಿ ಹೆಚ್ಚು ಪೊಲೀಸರನ್ನು ಭದ್ರತೆಗೆ ಬಳಸಿಕೊಂಡಿದ್ದಾರೆ.

    ಗುರುವಾರ ಬೆಳಗ್ಗೆ 10 ಗಂಟೆವರೆಗೆ ಸಹಜವಾಗಿದ್ದ ಸಿಲಿಕಾನ್ ಸಿಟಿ 10 ಗಂಟೆಯ ನಂತರ ನಿಷೇಧಜ್ಞೆಯ ನಡುವೆಯೂ ಸಾವಿರಾರು ಮಂದಿ ಟೌನ್‍ಹಾಲ್ ಹಾಗೂ ಮೈಸೂರು ಬ್ಯಾಂಕ್ ಸರ್ಕಲ್‍ನಲ್ಲಿ ಕೇಂದ್ರ ಸರ್ಕಾರದ ವಿರುದ್ಧ ದಿಕ್ಕಾರ ಕೂಗಿ ಪ್ರತಿಭಟನೆ ಮಾಡಿದ್ದರು.