Tag: ಪ್ಯಾನ್ ಇಂಡಿಯಾ

  • ಪ್ಯಾನ್ ಇಂಡಿಯಾ ಸಿನಿಮಾ ಘೋಷಣೆ ಮಾಡಿದ ನಿರ್ದೇಶಕ ಸ್ಮೈಲ್ ಶ್ರೀನು

    ಪ್ಯಾನ್ ಇಂಡಿಯಾ ಸಿನಿಮಾ ಘೋಷಣೆ ಮಾಡಿದ ನಿರ್ದೇಶಕ ಸ್ಮೈಲ್ ಶ್ರೀನು

    ಸಿನಿಮಾ ರಂಗದಿಂದ ಸಣ್ಣದೊಂದು ಬಿಡುವು ಮಾಡಿಕೊಂಡು ರಾಜಕೀಯ ಕ್ಷೇತ್ರಕ್ಕೂ ಕಾಲಿಟ್ಟಿದ್ದ ನಿರ್ದೇಶಕ ಸ್ಮೈಲ್ ಶ್ರೀನು (Smile Srinu), ಮತ್ತೆ ಈಗ ಚಿತ್ರರಂಗಕ್ಕೆ ವಾಪಸ್ಸಾಗಿದ್ದಾರೆ. ಮತ್ತೆ ಎಂದಿನಂತೆ ತಮ್ಮ ನಿರ್ದೇಶಕನ ಕ್ಯಾಪ್ ತೊಟ್ಟಿದ್ದಾರೆ. ಈ ಬ್ಯಾರಿ ಅವರು ಪ್ಯಾನ್ ಇಂಡಿಯಾ (Pan India) ಸಿನಿಮಾಗೆ ಪ್ಲ್ಯಾನ್ ಮಾಡಿದ್ದಾರೆ.

    ಈ ಹಿಂದೆ ತೂಫಾನ್, ಬಳ್ಳಾರಿ ದರ್ಬಾರ್ ಅಲ್ಲದೆ  ಇತ್ತೀಚೆಗೆ ತೆರೆಕಂಡ ಓ ಮೈ ಲವ್ ಚಿತ್ರಗಳ ನಂತರ ಸ್ಮೈಲ್ ಶ್ರೀನು ಅವರೀಗ ದೊಡ್ಡ ಮಟ್ಟದ ಪ್ಯಾನ್ ಇಂಡಿಯಾ ಚಿತ್ರವೊಂದನ್ನು ನಿರ್ದೇಶಿಸಲು  ಸಜ್ಜಾಗಿದ್ದಾರೆ. ತಮ್ಮ ಪ್ರತೀ ಸಿನಿಮಾದಲ್ಲೂ ವಿಭಿನ್ನತೆ ಕಾಪಾಡಿಕೊಂಡು ಬರುತ್ತಿರುವ ನಿರ್ದೇಶಕ  ಶ್ರೀನು, ಈ ಚಿತ್ರದ ಮೂಲಕ   ಕನ್ನಡಕ್ಕೆ ಹೊಸಥರದ ಕಾನ್ಸೆಪ್ಟ್ ಹೊತ್ತು ತರುತ್ತಿದ್ದಾರೆ.

    ಈಗಾಗಲೇ ಹೊಸ ಚಿತ್ರದ  ಸ್ಕ್ರಿಪ್ಟ್ ವರ್ಕ್  ಶುರುವಾಗಿದ್ದು, ತಾರಾಗಣದ ಆಯ್ಕೆ ಪ್ರಕ್ರಿಯೆಗೆ  ಕೂಡ ಸಿದ್ದತೆ ನಡೆಯುತ್ತಿದೆ. ಕನ್ನಡ, ತೆಲುಗು ಸೇರಿ ಎರಡು ಭಾಷೆಗಳಲ್ಲಿ ಏಕಕಾಲದಲ್ಲಿ  ತಯಾರಾಗಲಿರುವ ಈ ಸಿನಿಮಾಕ್ಕೆ ಮೈರಾ ಎಂಬ ಶೀರ್ಷಿಕೆಯನ್ನು  ಫೈನಲ್ ಮಾಡಲಾಗಿದೆ.  ದಕ್ಷಿಣ ಭಾರತದ ಉಳಿದೆಲ್ಲ ಭಾಷೆಗಳಿಗೂ ಈ ಸಿನಿಮಾ ಡಬ್ ಆಗಲಿದೆ. ಹೀಗಾಗಿ ಎಲ್ಲಾ ಭಾಷೆಗಳಿಗೂ  ಹೊಂದುವಂತೆ ಮೈರಾ ಎಂಬ ಟೈಟಲ್ ಇಟ್ಟಿದ್ದಾರೆ.

    ನಿರ್ದೇಶಕ ಶ್ರೀನಿ ಅವರ. ಚಿತ್ರದಲ್ಲಿ ಈ ಸಲ  ಸ್ಟಾರ್ ನಟರು ಇರಲಿದ್ದಾರಾ ಅಥವಾ ಹೊಸ ಪ್ರತಿಭೆಗಳಿಗೆ  ಅವಕಾಶ ನೀಡುತ್ತಾರಾ ಎಂಬುದಕ್ಕೆ ಮುಂದಿನ ದಿನಗಳಲ್ಲಿ ಉತ್ತರ ಸಿಗಬಹುದು. ಯಾಕೆಂದರೆ, ಸದ್ಯ ಸ್ಕ್ರಿಪ್ಟ್ ಕೆಲಸದಲ್ಲಿ ಮಗ್ನರಾಗಿರುವ ಶ್ರೀನು, ಮೊದಲು ಕಥೆ, ಚಿತ್ರಕಥೆ ಮುಗಿಸಿ ಆನಂತರ ತಾರಾಗಣದ ಆಯ್ಕೆಯಲ್ಲಿ ತೊಡಗಿಸಿಕೊಳ್ಳಲಿದ್ದಾರೆ.

     

    ಇತ್ತೀಚೆಗೆ ಕನ್ನಡದಲ್ಲಿ ಕಂಟೆಂಟ್‌ ಸಿನಿಮಾಗಳಿಗೆ ಬೇಡಿಕೆ ಹೆಚ್ಚಿದೆ. ಹಾಗೆಯೇ ಕನ್ನಡದ ತಂತ್ರಜ್ಞರು, ನಿರ್ದೇಶಕರು ಪರಭಾಷೆಯಲ್ಲೂ ದೊಡ್ಡ ಛಾಪು ಮೂಡಿಸುತ್ತಿದ್ದಾರೆ. ನಾನು ಈಗಾಗಲೇ ಕನ್ನಡ ಮತ್ತು ತೆಲುಗು ಎರಡೂ ಚಿತ್ರರಂಗದಲ್ಲಿ ತೊಡಗಿಕೊಂಡಿರುವುದರಿಂದ  ತೆಲುಗು ಇಂಡಸ್ಟ್ರಿಗೂ ಪರಿಚಿತನಾಗಿದ್ದೇನೆ. ಇದು ಕಂಪ್ಲೀಟ್ ಹೊಸ ರೀತಿಯ, ಈಗಿನ ಟ್ರೆಂಡ್‌ಗೆ ಹೊಂದುವಂಥ ಕಥೆ ಇರುವ ಚಿತ್ರ.  ಬಿಗ್ ಬಜೆಟ್ ನಲ್ಲಿ ತಯಾರಾಗಲಿರುವ ಈ ಚಿತ್ರವು ಬೃಹತ್ ತಾರಾಗಣದ ಜೊತೆಗೆ ತಾಂತ್ರಿಕ ವರ್ಗವೂ ಅದ್ಧೂರಿಯಾಗಿರಲಿದೆ. ಚಿತ್ರ ಸದ್ಯ ಸ್ಕ್ರಿಪ್ಟ್ ಹಂತದಲ್ಲಿದ್ದು ಹಂತ ಹಂತವಾಗಿ ಎಲ್ಲ‌  ಮಾಹಿತಿ  ತಿಳಿಸುವುದಾಗಿ  ನಿರ್ದೇಶಕ ಸ್ಮೈಲ್ ಶ್ರೀನು ಹೇಳಿದ್ದಾರೆ. ಇದನ್ನು ಹೊರತುಪಡಿಸಿ ಕನ್ನಡದಲ್ಲಿಯೇ ಎರಡು ಸಿನಿಮಾಗಳನ್ನು ನಿರ್ದೇಶನ ಮಾಡುತ್ತಿರುವುದಾಗಿ  ಶ್ರೀನು ಹೇಳಿದ್ದಾರೆ.

  • ‘ಭೈರತಿ ರಣಗಲ್’ ಪ್ಯಾನ್ ಇಂಡಿಯಾ ಸಿನಿಮಾ: ಮಾ.5ಕ್ಕೆ ಟೈಟಲ್ ಡಿಸೈನ್ ರಿಲೀಸ್

    ‘ಭೈರತಿ ರಣಗಲ್’ ಪ್ಯಾನ್ ಇಂಡಿಯಾ ಸಿನಿಮಾ: ಮಾ.5ಕ್ಕೆ ಟೈಟಲ್ ಡಿಸೈನ್ ರಿಲೀಸ್

    ಫ್ತಿ (Mufti,) ಸಿನಿಮಾದ ನಂತರ ನಿರ್ದೇಶಕ ನರ್ತನ್ (Narthan) ಹಾಗೂ ನಟ ಶಿವರಾಜ್ ಕುಮಾರ್ (Shivraj Kumar) ಮತ್ತೆ ಒಂದಾಗಿದ್ದು, ಈ ಬಾರಿ ಜೋಡಿಯು ಪ್ಯಾನ್ ಇಂಡಿಯಾ (Pan India) ಸಿನಿಮಾವನ್ನು ಮಾಡಲಿದೆ. ‘ಭೈರತಿ ರಣಗಲ್’ (Bhairati Rangal) ಹೆಸರಿನಲ್ಲಿ ಈ ಸಿನಿಮಾ ಹಲವು ಭಾಷೆಗಳಲ್ಲಿ ಮೂಡಿ ಬರುತ್ತಿದ್ದು, ಸಿನಿಮಾದ ಟೈಟಲ್ ಡಿಸೈನ್ ಅನ್ನು ಮಾರ್ಚ್ 5ರಂದು ರಿಲೀಸ್ ಮಾಡುವುದಾಗಿ ಚಿತ್ರತಂಡ ಘೋಷಣೆ ಮಾಡಿದೆ.

    ಗೀತಾ ಪಿಕ್ಚರ್ಸ್ ನಿರ್ಮಾಣದಲ್ಲಿ ಮೂಡಿ ಬರುತ್ತಿರುವ ಎರಡನೇ ಸಿನಿಮಾ ಇದಾಗಿದ್ದು,  ಶಿವರಾಜ್ ಕುಮಾರ್ ಮತ್ತು ನಿರ್ದೇಶಕ ನರ್ತನ್ ಈ ಸಿನಿಮಾದ ಮೂಲಕ ಮತ್ತೆ ಒಂದಾಗಿದ್ದು ಸಾಕಷ್ಟು ಕುತೂಹಲ ಮೂಡಿಸಿದೆ. ಐದು ವರ್ಷಗಳ ನಂತರ ಮಫ್ತಿ ಸಿನಿಮಾದ ಭೈರತಿ ರಣಗಲ್ ಪಾತ್ರದ ಹಿನ್ನೆಲೆಯನ್ನು ಈ ಚಿತ್ರದಲ್ಲಿ ಬಿಚ್ಚಿಡಲಿದ್ದಾರೆ. ಹಾಗಾಗಿ ಇದು ಮಫ್ತಿ ಸಿನಿಮಾದ ಸೀಕ್ವೆಲ್ ಅಲ್ಲ, ಪ್ರೀಕ್ವೆಲ್ ಸಿನಿಮಾ ಎನ್ನಲಾಗುತ್ತಿದೆ. ಭೈರತಿ ರಣಗಲ್ ನ ರೋಚಕ ಸಂಗತಿಗಳನ್ನು ಈ ಸಿನಿಮಾದಲ್ಲಿ ತೋರಿಸಲಿದ್ದಾರಂತೆ ನಿರ್ದೇಶಕರು. ಇದನ್ನೂ ಓದಿ: 150 ಕೋಟಿ ಮೌಲ್ಯದ ಹೊಸ ಮನೆಯನ್ನು ಪೋಷಕರಿಗೆ ಗಿಫ್ಟ್ ನೀಡಿದ ಧನುಷ್

    ಮಫ್ತಿ ಸಿನಿಮಾದ ಮೂಲಕ ಸ್ಯಾಂಡಲ್ ವುಡ್ ನಲ್ಲಿ ಹೊಸ ಸಂಚಲನ ಮೂಡಿಸಿದ್ದ ನಿರ್ದೇಶಕ ನರ್ತನ್, ಆ ನಂತರ ಯಶ್ ಗಾಗಿ ಅವರು ಸಿನಿಮಾ ಮಾಡಲಿದ್ದಾರೆ ಎಂದು ಸುದ್ದಿಯಾಗಿತ್ತು. ಬರೋಬ್ಬರಿ ಎರಡ್ಮೂರು ವರ್ಷಗಳ ಕಾಲ ಯಶ್ ಹಿಂದೆ ಸುತ್ತಿದರು ನರ್ತನ್. ಒಂದು ವರ್ಷಕ್ಕೂ ಹೆಚ್ಚು ಕಾಲ ಕೂತು ಯಶ್ ಗಾಗಿ ಕಥೆ ಬರೆದರು. ಆನಂತರ ಆ ಸಿನಿಮಾ ಆಗಲಿಲ್ಲ. ನಾನಾ ಕಾರಣಗಳಿಂದಾಗಿ ಯಶ್ ಗಾಗಿ ನರ್ತನ್ ಸಿನಿಮಾ ಮಾಡುವುದಿಲ್ಲ ಎನ್ನುವ ವಿಷಯ ಹೊರಬಿತ್ತು.

    ಯಶ್ ಗಾಗಿ ಸಿನಿಮಾ ಆಗುವುದಿಲ್ಲ ಎಂದು ಗೊತ್ತಾಗುತ್ತಿದ್ದಂತೆಯೇ ತೆಲುಗು ನಟ ರಾಮ್ ಚರಣ್ ಗಾಗಿ ಮತ್ತೊಂದು ಕಥೆಯನ್ನು ಸಿದ್ದಮಾಡಿಕೊಂಡರಂತೆ ನರ್ತನ್. ಆ ಕಥೆಯನ್ನು ರಾಮ್ ಚರಣ್ ವರೆಗೂ ಮುಟ್ಟಿಸಿದರು ಎನ್ನುವ ಸುದ್ದಿಯಿದೆ. ಅದು ನಿಜವೋ, ಬರೀ ಗಾಳಿ ಸುದ್ದಿಯೋ ಅವರೇ ಹೇಳಬೇಕು. ಇತ್ತೀಚಿನ ದಿನಗಳಲ್ಲಿ ರಾಮ್ ಚರಣ್ ಕೂಡ ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ ಎಂದು ಹೇಳಲಾಗುತ್ತಿದೆ. ಪ್ರತಿಭಾವಂತ ನಿರ್ದೇಶಕನಿಗೆ ಹೀಗಾದಾಗ ಹತಾಸೆ ಆಗುವುದು ನಿಜ. ಹಾಗಂತ ನರ್ತನ್ ನನ್ನು ಕೈ ಬಿಡಲಿಲ್ಲ ಶಿವರಾಜ್ ಕುಮಾರ್.

    ಶಿವರಾಜ್ ಕುಮಾರ್ ವೃತ್ತಿ ಬದುಕಿನಲ್ಲಿ ಮಫ್ತಿ ಕೂಡ ಒಂದೊಳ್ಳೆ ಸಿನಿಮಾದ ಯಾದಿಯಲ್ಲಿದೆ. ಹಾಗಾಗಿ ತಮ್ಮದೇ ಬ್ಯಾನರ್ ಸಿನಿಮಾದಲ್ಲಿ ನರ್ತನ್ ಗೆ ಅವಕಾಶ ನೀಡಿದ್ದಾರೆ ಶಿವಣ್ಣ. ಈ ಸಿನಿಮಾಗೆ ‘ಭೈರತಿ ರಣಗಲ್’ ಎಂದು ಹೆಸರಿಟ್ಟಿದ್ದಾರೆ. ಮಫ್ತಿಯಲ್ಲಿ ಶಿವರಾಜ್ ಕುಮಾರ್ ಮಾಡಿದ್ದ ಪಾತ್ರದ ಹೆಸರು ಇದಾಗಿದೆ. ಈ ಸಿನಿಮಾ ಕುರಿತು ಗೀತಾ ಪಕ್ಚರ್ಸ್ ಹಲವು ಮಾಹಿತಿಗಳನ್ನು ಹಂಚಿಕೊಂಡಿದೆ.

    LIVE TV
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ‘ಇನ್ ಕಾರ್’ ಸಿನಿಮಾದಲ್ಲಿ ರಾಷ್ಟ್ರ ಪ್ರಶಸ್ತಿ ವಿಜೇತ ನಟಿ ರಿತಿಕಾ ಸಿಂಗ್

    ‘ಇನ್ ಕಾರ್’ ಸಿನಿಮಾದಲ್ಲಿ ರಾಷ್ಟ್ರ ಪ್ರಶಸ್ತಿ ವಿಜೇತ ನಟಿ ರಿತಿಕಾ ಸಿಂಗ್

    ರಾಷ್ಟ್ರ ಪ್ರಶಸ್ತಿ ವಿಜೇತೆ ನಟಿ ರಿತಿಕಾ ಸಿಂಗ್ (Ritika Singh) ನಟಿಸಿರುವ ’ಇನ್ ಕಾರ್’ (In Car) ಪ್ಯಾನ್ ಇಂಡಿಯಾ ಚಿತ್ರವು ಹರಿಯಾಣದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಂತ ನೈಜ ಅಂಶಗಳನ್ನು ಆರಿಸಿಕೊಂಡು ಅದನ್ನು ಚಿತ್ರರೂಪಕ್ಕೆ ತರಲಾಗಿದೆ. ರಚನೆ, ಚಿತ್ರಕಥೆ ಮತ್ತು ನಿರ್ದೇಶನ ಹರ್ಷವರ್ಧನ್ (Harsh Vardhan) ಅವರದ್ದು. ಅಂಜುಮ್‌ ಖುರೇಶಿ ಹಾಗೂ ಸಾಜಿದ್‌ ಖುರೇಶಿ ಜಂಟಿಯಾಗಿ ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ.

    ಸಸ್ಪೆನ್ಸ್, ಥ್ರಿಲ್ಲರ್ ಕಥೆಯು ಒಂದು ದಿನದಲ್ಲಿ ನಡೆಯುತ್ತದೆ. ಕಥಾನಾಯಕಿ ಮುಗ್ದೆ 23 ವಯಸ್ಸಿನ ಸಾಕ್ಷಿ ಗುಲಾಟಿ ಕಾಲೇಜಿಗೆ ಹೋಗಲು ಬಸ್‌ಗಾಗಿ ಕಾಯುತ್ತಿರುವಾಗ, ಸೋದರರಾದ ರಿಚ್ಚಿ, ಯಶ್ ಹಾಗೂ ಈತನ ಮಾಮ ಕಾರೊಂದರಲ್ಲಿ ಈಕೆಯನ್ನು ಅಪಹರಿಸುತ್ತಾರೆ. ಈಗಾಗಲೇ ಮುತ್ಸದ್ದಿ ಬ್ರಿಜೇಶ್ ಚಲಾಯಿಸುತ್ತಿದ್ದ ಆ ಕಾರನ್ನು ಹೈಜಾಕ್ ಮಾಡಿದ್ದು, ಕೊಲೆ ಕೇಸ್‌ನಲ್ಲಿ ಅಪರಾಧಿಯಾಗಿರುವ ರಿಚ್ಚಿಯನ್ನು ಪೋಲೀಸರಿಂದ ಮರೆಮಾಚಲು ವಾಹನವನ್ನು ಬಳಸಿಕೊಂಡಿರುತ್ತಾರೆ. ಇದನ್ನೂ ಓದಿ: ಸಂಬಂಧಿಕರ ಮದುವೆಯಲ್ಲಿ ಮಿಂಚಿದ ನಟಿ ರಾಧಿಕಾ ಪಂಡಿತ್

    ಆಕೆ ದುರಳರಿಂದ ರಕ್ಷಿಸಿಕೊಳ್ಳಲು ಎರಡು ಗಂಟೆ ಸಮಯವಿರುತ್ತದೆ. ಇಲ್ಲದಿದ್ದಲ್ಲಿ ಪಾಣಿಪತ್ ಬಳಿ ಇರುವ ಸುಟ್ಟುಹೋದ ಕಾರ್ಖಾನೆಯಲ್ಲಿ ಅತ್ಯಾಚಾರವೆಸಗಿ ನಂತರ ಸಾಯಿಸಲು ಸಂಚು ರೂಪಿಸಿರುತ್ತಾರೆ. ಎಲ್ಲರೂ ಸುರಕ್ಷಿತ ಸ್ಥಳ ತಲುಪಿದಾಗ ಇವಳನ್ನು ಏನು ಮಾಡುವುದೆಂದು ಚರ್ಚೆ ನಡೆಸುತ್ತಾರೆ. ಹಾಗೆಯೇ ಚಿತ್ರದಲ್ಲಿ ಮಹಿಳೆಯನ್ನು ಒಂದು ವಸ್ತುವಾಗಿ ತೋರಿಸಲಾಗಿದೆ. ರಿಚ್ಚಿ ತನ್ನ ಸಹೋದರಿಯೊಂದಿಗೆ ಸಂಬಂಧ ಹೊಂದಿದ್ದರಿಂದ ವ್ಯಕ್ತಿಯನ್ನು ಕೊಲೆ ಮಾಡಲು ಪರಾರಿಯಾಗಿರುತ್ತಾನೆ. ಪುರುಷರು ಮಹಿಳೆಯೊಂದಿಗಿನ ಅವರ ಸಂಬಂಧವನ್ನು ಅವಲಂಬಿಸಿದಾಗ ಹೇಗೆ ಕುರುಡರಾಗುತ್ತಾರೆ. ಇದೇ ಸಮಯದಲ್ಲಿ ಅವಳು ಇವರಿಂದ ತಪ್ಪಿಸಿಕೊಳ್ಳಲು ತನ್ನದೆ ಮಾರ್ಗಗಳನ್ನು ಕಂಡುಕೊಳ್ಳುತ್ತಾಳೆ. ಸಾಕ್ಷಿ ನರಕದಿಂದ ಬದುಕಿ ಬರುತ್ತಾಳಾ ಎನ್ನುವ ಕುತೂಹಲಕಾರಿ ಅಂಶಗಳು ಇದರಲ್ಲಿದೆ ಎನ್ನುತ್ತಾರೆ ನಿರ್ದೇಶಕರು.  ಈ ಸಿನಿಮಾವು ಕನ್ನಡ ಸೇರಿದಂತೆ ಹಿಂದಿ, ತೆಲುಗು, ತಮಿಳು ಹಾಗೂ ಮಲೆಯಾಳಂ ಭಾಷೆಗಳಲ್ಲಿ ಸಿದ್ದಗೊಂಡಿದೆ.

    LIVE TV
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಜ. 24ಕ್ಕೆ ‘ಕಬ್ಜ’ ಚಿತ್ರತಂಡದಿಂದ ಬಿಗ್ ಅನೌನ್ಸ್ ಮೆಂಟ್

    ಜ. 24ಕ್ಕೆ ‘ಕಬ್ಜ’ ಚಿತ್ರತಂಡದಿಂದ ಬಿಗ್ ಅನೌನ್ಸ್ ಮೆಂಟ್

    ಇಂಡಿಯನ್ ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಪ್ರಮುಖ ಪಾತ್ರದಲ್ಲಿ ಕಿಚ್ಚ ಸುದೀಪ್ ಅಭಿನಯಿಸಿರುವ, ಖ್ಯಾತ ನಿರ್ದೇಶಕ ಆರ್.ಚಂದ್ರು ನಿರ್ಮಿಸಿ, ನಿರ್ದೇಶಿಸಿರುವ ಪ್ಯಾನ್ ಇಂಡಿಯಾ ಸಿನಿಮಾ ಪ್ರಪಂಚದಾದ್ಯಂತ ನಿರೀಕ್ಷೆ ಹುಟ್ಟು ಹಾಕಿದೆ. ಇದು ಕನ್ನಡ ಚಿತ್ರರಂಗದ ಹೆಮ್ಮೆ, ಶ್ರೀ ಸಿದ್ದೇಶ್ವರ ಎಂಟರ್ಪ್ರೈಸಸ್ ಸಂಸ್ಥೆ ಈ ಚಿತ್ರವನ್ನು ಅದ್ದೂರಿಯಾಗಿ ನಿರ್ಮಿಸಿದೆ.

    ಭಾರತ ಮಾತ್ರವಲ್ಲದೆ ವಿವಿಧ ದೇಶಗಳಲ್ಲಿಯೂ ಕಬ್ಜ ಚಿತ್ರದ ಬಿಡುಗಡೆಗಾಗಿ ಕುತೂಹಲದಿಂದ ಕಾಯುತ್ತಿದ್ದಾರೆ. ಅಲ್ಲದೇ ಮೊನ್ನೆ ನಡೆದ ಐಎಂಡಿಬಿ 2023ರ ನಿರೀಕ್ಷಿತ ಸಿನಿಮಾಗಳ ಸರ್ವೆ ಪಟ್ಟಿಯಲ್ಲಿ ಕನ್ನಡಿಗರ ಕಬ್ಜ ಸಿನಿಮಾ ಸ್ಥಾನ ಪಡೆದಿರುವುದು ಕನ್ನಡಿಗರಿಗೆ ಹೆಮ್ಮೆಯ ವಿಷಯ. ಕಳೆದ ಮೂರ್ನಾಲ್ಕು ವರ್ಷಗಳಿಂದ ಸಾಲು ಸಾಲು ಯಶಸ್ವಿ ಸಿನಿಮಾಗಳ ಮೂಲಕ ಸ್ಯಾಂಡಲ್ ವುಡ್ ಮತ್ತಷ್ಟು ಎತ್ತರಕ್ಕೆ ಹೋಗಿದೆ. ಕೆಜಿಎಫ್, ವಿಕ್ರಾಂತ್ ರೋಣ, 777 ಚಾರ್ಲಿ ಹಾಗೂ ಕಾಂತಾರ ಯಶಸ್ಸಿನ ಬಳಿಕ ಕನ್ನಡದ ಕೀರ್ತಿ ಪತಾಕೆಯನ್ನು ಹಾರಿಸಲು ಈ ವರ್ಷ ಕಬ್ಜ ಸಜ್ಜಾಗಿದೆ. ಕಬ್ಜ ಚಿತ್ರ ಬಿಡುಗಡೆಯಾವಾಗ ಎಂಬುದು ಪ್ರತಿಯೊಬ್ಬರ ಮನೆ ಮಾತಾಗಿತ್ತು. ಈ ನಿಟ್ಟಿನಲ್ಲಿ ಇದೇ ಜನವರಿ 24ರಂದು ದೊಡ್ದದೊಂದು ವಿಷಯವನ್ನು ಹಂಚಿಕೊಳ್ಳಲಿದೆ ಕಬ್ಜ ಟೀಮ್. ಇದನ್ನೂ ಓದಿ:ಪತಿ ಜೊತೆಗಿನ ಲಿಪ್‌ಲಾಕ್ ಫೋಟೋ ಹಂಚಿಕೊಂಡ ʻಕಾಂಚನಾ 2ʼ ನಟಿ ಪೂಜಾ

    ಇದೇ ಮೊಟ್ಟ ಮೊದಲ ಬಾರಿಗೆ ಐದಕ್ಕೂ ಹೆಚ್ಚು ಭಾಷೆಗಳಲ್ಲಿ ಕಬ್ಜ ಸಿನಿಮಾ ತೆರೆಕಾಣುತ್ತಿದೆ. ಇಂಥದ್ದೊಂದು ಕನ್ನಡ ಸಿನಿಮಾ ಬೃಹತ್ ಮಟ್ಟದಲ್ಲಿ ಮೂಡಿ ಬರುತ್ತಿರೋದು ಸ್ಯಾಂಡಲ್ ವುಡ್ ಗೆ ಗೌರವ. ಇಂಥ ಪ್ರಯತ್ನಗಳಿಗೆ ಕನ್ನಡಿಗರು ಯಾವಾಗಲು ಪ್ರಶಂಶಿಸುತ್ತಾರೆ. ಈಗ ಕಬ್ಜ ರಿಲೀಸ್ ಡೇಟ್ ಅನೌನ್ಸ್ ಮಾಡಿದರೆ ಕನ್ನಡಿಗರು ಮಾತ್ರವಲ್ಲದೆ. ಭಾರತೀಯ ಚಿತ್ರರಂಗವೇ ಸಂತೋಷ ಪಡುತ್ತದೆ ಎಂಬುದರಲ್ಲಿ ಸಂಶಯವಿಲ್ಲ. ಕಾತುರತೆಗೆ ಬೇಗ ಚಂದ್ರು ಮತ್ತು ಟೀಂ ಡೇಟ್ ತಿಳಿಸಲಿ ಹಾಗೂ ಕಬ್ಜ ಚಿತ್ರವು ಮತ್ತೊಮ್ಮೆ ಗೆದ್ದು ಕನ್ನಡ ಕೀರ್ತಿ ಪತಾಕೆಯನ್ನು ವಿಶ್ವದಾದ್ಯಂತ ಹಾರಿಸಲಿ ಎಂಬುದು ಪ್ರತಿಯೊಬ್ಬ ಕನ್ನಡಿಗರ ಆಶಯ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ರಿಷಬ್ ಶೆಟ್ಟಿ ಈಗ ಪ್ಯಾನ್ ಇಂಡಿಯಾ ಸ್ಟಾರ್ : ಎಲ್ಲೆಲ್ಲೂ ಕಾಂತಾರ

    ರಿಷಬ್ ಶೆಟ್ಟಿ ಈಗ ಪ್ಯಾನ್ ಇಂಡಿಯಾ ಸ್ಟಾರ್ : ಎಲ್ಲೆಲ್ಲೂ ಕಾಂತಾರ

    ನ್ನಡದ ಕಾಂತಾರ (Kantara) ಸಿನಿಮಾ ದೇಶದಾದ್ಯಂತ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಈಗಾಗಲೇ ರಿಲೀಸ್ ಆಗಿರುವ ಕನ್ನಡ, ಹಿಂದಿ, ತೆಲುಗು ಮತ್ತು ತಮಿಳು ಭಾಷೆಯಲ್ಲಿ ಚಿತ್ರವನ್ನು ಮೆಚ್ಚಿದ್ದಾರೆ. ಆಯಾ ಭಾಷೆಯ ಬಹುತೇಕ ನಟರು ಸಿನಿಮಾ ಕುರಿತು ಮಾತನಾಡಿದ್ದಾರೆ. ಅದರಲ್ಲೂ ರಿಷಬ್ ಶೆಟ್ಟಿ (Rishabh Shetty) ನಟನೆಗೆ ಫಿದಾ ಆಗಿದ್ದಾರೆ. ಕನ್ನಡಕ್ಕೆ ಮಾತ್ರ ಸೀಮಿತರಾಗಿದ್ದ ರಿಷಬ್ ಇದೀಗ ಪ್ಯಾನ್ ಇಂಡಿಯಾ ಸ್ಟಾರ್ (Pan India Star) ಆಗಿ ಬದಲಾಗಿದ್ದಾರೆ.

    ಮತ್ತೊಂದಡೆ ನಟ ರಿಷಬ್ ಶೆಟ್ಟಿ ತಮ್ಮ ಅಭಿಮಾನಿಗಳಿಗೆ ಡಬಲ್ ಖುಷಿ ಕೊಟ್ಟಿದ್ದಾರೆ. ಒಂದು ಕಡೆ ಇವರು ನಟಿಸಿ, ನಿರ್ದೇಶನ ಮಾಡಿರುವ ‘ಕಾಂತಾರ’ ಸಿನಿಮಾ ಬಾಕ್ಸ್ ಆಫೀಸಿನಲ್ಲಿ ದಾಖಲೆ ಮೂಡಿಸಿದ್ದರೆ, ಮತ್ತೊಂದು ಕಡೆ ಇವರ ನಿರ್ಮಾಣದ ‘ಶಿವಮ್ಮ’ ಚಿತ್ರಕ್ಕೆ 27ನೇ ಬೂಸಾನ್ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ಪ್ರಶಸ್ತಿ ದೊರೆತಿದೆ. ಇದು ಜೈ ಶಂಕರ್ ನಿರ್ದೇಶನ ಮಾಡಿ, ರಿಷಬ್ ನಿರ್ಮಾಣ ಮಾಡಿರುವ ಸಿನಿಮಾ. ಇದನ್ನೂ ಓದಿ:ಬಿಗ್ ಬಾಸ್ ವಿರುದ್ಧ ಮ್ಯಾಚ್ ಫಿಕ್ಸಿಂಗ್ ಆರೋಪ: ಗುರೂಜಿ ಮೇಲೆ ಕಿಚ್ಚ ಕೆಂಡಾಮಂಡಲ

    ಬೂಸಾನ್ ನಲ್ಲಿ ನಡೆಯುತ್ತಿರುವ 27ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ‘ಶಿವಮ್ಮ’ (Shivamma) ಚಿತ್ರ ಆಯ್ಕೆಯಾಗಿತ್ತು. ಇದೀಗ ಸ್ಪರ್ಧೆಯಲ್ಲೂ ಅದು ಗೆದ್ದಿದ್ದು, ಅತ್ಯುತ್ತಮ ಸಿನಿಮಾ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ. ಹಳ್ಳಿಗಾಡಿನ ಮಹಿಳೆಯೊಬ್ಬರು ಕಷ್ಟಪಟ್ಟು ಸಂಪಾದಿಸಿದ ಹಣವನ್ನು ನೆಟ್ ವರ್ಕ್ ವಹಿವಾಟಿನಲ್ಲಿ ಹೂಡಿಕೆ ಮಾಡಿ, ಅದರಿಂದ ಪಡುವ ಸಂಕಟವನ್ನು ಕುರಿತಾದ ಸಿನಿಮಾವಿದು.

    ಈ ಸಿನಿಮಾ ವೀಕ್ಷಿಸಿದ ತೀರ್ಪುಗಾರರು ನಿರ್ದೇಶಕ ಜೈ ಶಂಕರ್ (Jai Shankar) ಅವರ ಪ್ರಯತ್ನವನ್ನು ಶ್ಲ್ಯಾಘಿಸಿದ್ದಾರೆ. ಹಳ್ಳಿಗಾಡಿನಲ್ಲಿ ನಡೆಯುವ ಕಥೆಯನ್ನು ಆಳವಾಗಿ ಮತ್ತು ಸೂಕ್ಷ್ಮವಾಗಿ ಕಟ್ಟಿಕೊಟ್ಟ ನಿರ್ದೇಶಕರ ಜಾಣ್ಮೆಯನ್ನು ಕೊಂಡಾಡಿದ್ದಾರೆ. ಇಂತಹ ಸಿನಿಮಾಗೆ ರಿಷಬ್ ಹಣ ಹೂಡುವ ಮೂಲಕ ಹೊಸ ಹುಡುಗನ ಚಿತ್ರಕ್ಕೆ ಉತ್ತೇಜನ ನೀಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • 3ಡಿಯಲ್ಲಿ ಮೂಡಿ ಬರಲಿದೆ ‘ಅಜಯಂತೆ ರಂದಂ ಮೋಷನಂ’ ಪ್ಯಾನ್ ಇಂಡಿಯಾ ಸಿನಿಮಾ

    3ಡಿಯಲ್ಲಿ ಮೂಡಿ ಬರಲಿದೆ ‘ಅಜಯಂತೆ ರಂದಂ ಮೋಷನಂ’ ಪ್ಯಾನ್ ಇಂಡಿಯಾ ಸಿನಿಮಾ

    ಲಯಾಳಂ ಖ್ಯಾತ ನಟ ಟೊವಿನೋ ಥಾಮಸ್, ನಟಿ ಕೃತಿ ಶೆಟ್ಟಿ (Kriti Shetty) ಅಭಿನಯದ ನೂತನ ಪ್ಯಾನ್ ಇಂಡಿಯಾ ಸಿನಿಮಾ ‘ಅಜಯಂತೆ ರಂದಂ ಮೋಷನಂ’ (Ajayante Randam Moshanam) ಇಂದು ಸೆಟ್ಟೇರಿದೆ. ಫ್ಯಾಂಟಸಿ ಅಡ್ವೆಂಚರ್ ಸಿನಿಮಾ ಇದಾಗಿದ್ದು, 3ಡಿಯಲ್ಲಿ ತೆರೆ ಕಾಣಲಿರುವ ಬಿಗ್ ಬಜೆಟ್ ಚಿತ್ರದ ಮುಹೂರ್ತ ಇಂದು ಅದ್ದೂರಿಯಾಗಿ ನೆರವೇರಿದೆ. ಮಲಯಾಳಂ ಖ್ಯಾತ ನಟ ಟೊವಿನೋ ಥಾಮಸ್ (Tovino Thomas) ವೃತ್ತಿ ಜೀವನದ ಬಹು ವಿಶೇಷ ಸಿನಿಮಾ ಇದಾಗಿದೆ.  ಚಿತ್ರದಲ್ಲಿ ಟೊವಿನೋ ಥಾಮಸ್ ತ್ರಿಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಈ ಮೂಲಕ ಕಲಾವಿದನಾಗಿ ಮೊದಲ ಬಾರಿ ಬಹು ದೊಡ್ಡ ಜವಾಬ್ದಾರಿಯನ್ನು ನಿಭಾಯಿಸುತ್ತಿದ್ದು ಪ್ಯಾನ್ ಇಂಡಿಯಾ (Pan India)  ಸ್ಟಾರ್ ಆಗಿ ಹೊರ ಹೊಮ್ಮುತ್ತಿದ್ದಾರೆ.

    ಮೂರು ಯುಗಗಳನ್ನು ಸುತ್ತುವ ಕಥೆ ಚಿತ್ರದಲ್ಲಿದ್ದು ಟೊವಿನೋ ಥಾಮಸ್ ಮಣಿಯನ್, ಅಜಯನ್, ಕುಂಜಿಕೇಲು ಎಂಬ ಮೂರು ಪಾತ್ರಗಳಿಗೆ ಜೀವ ತುಂಬುತ್ತಿದ್ದಾರೆ. ಈ ಚಿತ್ರ ಸೌತ್ ಸಿನಿರಂಗದ ಸೆನ್ಸೇಷನಲ್ ನಟಿ ಕೃತಿ ಶೆಟ್ಟಿಗೂ ಸ್ಪೆಷಲ್ ಆಗಿದ್ದು ತೆಲುಗು, ತಮಿಳಿನಲ್ಲಿ ಮಿಂಚಿದ್ದ ಕೃತಿ ಈಗ ಮಲಯಾಳಂ ಚಿತ್ರರಂಗಕ್ಕೂ ಎಂಟ್ರಿ ನೀಡುತ್ತಿದ್ದಾರೆ. ನಟಿಯರಾದ ಐಶ್ವರ್ಯ ರಾಜೇಶ್, ಸುರಭಿ ಲಕ್ಷಿ ಕೂಡ ಚಿತ್ರದ ಪ್ರಮುಖ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ. ಇದನ್ನೂ ಓದಿ:`ಪುನೀತ ಪರ್ವ’ ಕಾರ್ಯಕ್ರಮಕ್ಕೆ ಸಿಎಂಗೆ ಆಹ್ವಾನ ನೀಡಿದ ಅಣ್ಣಾವ್ರ ಕುಟುಂಬ

     

    ‘ಅಜಯಂತೆ ರಂದಂ ಮೋಷನಂ’ ನಿರ್ದೇಶಕ ಜಿತಿನ್ ಲಾಲ್ ನಿರ್ದೇಶಿಸುತ್ತಿದ್ದು ಇದು ಇವರ ಮೊದಲ ಸಿನಿಮಾ. ಸುಜಿತ್ ನಂಬಿಯಾರ್ ಚಿತ್ರಕ್ಕೆ ಕಥೆ ಮತ್ತು ಚಿತ್ರಕಥೆಯನ್ನು ಬರೆದಿದ್ದು, ಬಾಸಿಲ್ ಜೋಸೆಫ್, ಕಿಶೋರ್, ಹರೀಶ್ ಉತ್ತಮನ್, ಹರೀಶ್ ಪೆರಾಡಿ, ಜಗದೀಶ್ ಚಿತ್ರದ ತಾರಾಬಳಗದಲ್ಲಿದ್ದಾರೆ. ಪ್ಯಾನ್ ಇಂಡಿಯಾ ಸಿನಿಮಾವಾಗಿ ನಿರ್ಮಾಣವಾಗುತ್ತಿರುವ 3ಡಿಯಲ್ಲಿ ತೆರೆ ಕಾಣುವ ‘ಅಜಯಂಂತೆ ರಂದಂ ಮೋಷನಂ’ ಚಿತ್ರವನ್ನು ಯುಜಿಎಂ ಪ್ರೊಡಕ್ಷನ್ ಅದ್ದೂರಿಯಾಗಿ ನಿರ್ಮಾಣ ಮಾಡುತ್ತಿದ್ದು, ಮ್ಯಾಜಿಕ್ ಫ್ರೇಮ್ಸ್ ಸಹ ನಿರ್ಮಾಣ ಮಾಡುತ್ತಿದೆ.

    ಚಿತ್ರದ ತಾಂತ್ರಿಕ ಬಳಗ ಅನುಭವಿ ತಂತಜ್ಞರಿಂದ ಕೂಡಿದ್ದು,  ತಮಿಳಿನ ಖ್ಯಾತ ಸಂಗೀತ ನಿರ್ದೇಶಕ ದೀಪು ನೈನನ್ ಥಾಮಸ್ ಸಂಗೀತ ನಿರ್ದೇಶನ, ಜೋಮನ್ ಟಿ ಜಾನ್ ಛಾಯಾಗ್ರಹಣ, ಶಮೀರ್ ಮೊಹಮ್ಮದ್ ಸಂಕಲನ ಚಿತ್ರಕ್ಕಿದೆ.

    Live Tv
    [brid partner=56869869 player=32851 video=960834 autoplay=true]

  • ಪ್ಯಾನ್ ಇಂಡಿಯಾ ಸಿನಿಮಾ ಇಂದಿನದ್ದಲ್ಲ : ರಾಜಮೌಳಿಗೆ ಟಾಂಗ್ ಕೊಟ್ಟ ಕಮಲ್ ಹಾಸನ್

    ಪ್ಯಾನ್ ಇಂಡಿಯಾ ಸಿನಿಮಾ ಇಂದಿನದ್ದಲ್ಲ : ರಾಜಮೌಳಿಗೆ ಟಾಂಗ್ ಕೊಟ್ಟ ಕಮಲ್ ಹಾಸನ್

    ಕ್ಷಿಣದ ಭಾರತದ ಸಿನಿಮಾಗಳು ಭಾರೀ ಬಜೆಟ್ ನಲ್ಲಿ ನಿರ್ಮಾಣವಾಗಿ, ಹಲವು ಭಾಷೆಗಳಿಗೆ ಡಬ್ ಆಗಿ ಭಾರೀ ಹವಾ ಕ್ರಿಯೇಟ್ ಮಾಡುತ್ತಿವೆ. ಹೀಗಾಗಿಯೇ ಪ್ಯಾನ್ ಇಂಡಿಯಾ ಕಲ್ಪನೆಗೂ ತುಸು ಹೆಚ್ಚಾಗಿಯೇ ದಕ್ಷಿಣದ ಸಿನಿಮಾ ರಂಗದಲ್ಲಿ ಕಾಣಿಸಿಕೊಳ್ಳುತ್ತಿದೆ. ಅದರಲ್ಲೂ ಆರ್.ಆರ್.ಆರ್, ಕೆಜಿಎಫ್ 2 ಸಿನಿಮಾಗಳು ಬಾಕ್ಸ್ ಆಫೀಸಿನಲ್ಲಿ ದಾಖಲೆ ಬರೆದಾಗಿನಿಂದ, ಪ್ಯಾನ್ ಇಂಡಿಯಾ ಚಳವಳಿ ಹುಟ್ಟಿದ್ದು ಇದೇ ಸಿನಿಮಾಗಳಿಂದ ಎನ್ನುವಂತೆ ಬಿಂಬಿಸಲಾಗುತ್ತಿದೆ. ಈ ಮಾತಿಗೆ ಕಮಲ್ ಹಾಸನ್ ಖಡಕ್ ಪ್ರತಿಕ್ರಿಯೆ ನೀಡಿದ್ದಾರೆ.  ಇದನ್ನೂ ಓದಿ : ಹಾಲಿವುಡ್ ಖ್ಯಾತ ನಟ ರೇ ಲಿಯೊಟ್ಟಾ ಮಲಗಿದ್ದಾಗಲೇ ನಿಧನ

    ಕಮಲ್ ಹಾಸನ್ ನೀಡಿರುವ ಪ್ರತಿಕ್ರಿಯೆಯನ್ನು ರಾಜಮೌಳಿ ಅವರಿಗೆ ಕೊಟ್ಟ ಟಾಂಗ್ ಎಂದೇ ತಮಿಳು ಸಿನಿಮಾ ರಂಗದಲ್ಲಿ ಬಿಂಬಿಸಲಾಗುತ್ತಿದೆ. ಅಷ್ಟಕ್ಕೂ ಕಮಲ್ ಹಾಸನ್ ಹೇಳಿದ್ದೇನು ಅಂದರೆ, ‘ಪ್ಯಾನ್ ಇಂಡಿಯಾ ಸಿನಿಮಾಗಳು ಈಗ ಹುಟ್ಟಿಲ್ಲ. ಹಲವು ವರ್ಷಗಳ ಹಿಂದೆಯೇ ಪ್ಯಾನ್ ಇಂಡಿಯಾ ಸಿನಿಮಾಗಳನ್ನು ಮಾಡಲಾಗಿದೆ. ಅವುಗಳಿಗೆ ಪ್ಯಾನ್ ಇಂಡಿಯಾ ಅಂತ ಹೆಸರು ಇರಲಿಲ್ಲವಷ್ಟೆ. ಈಗ ಅದನ್ನೇ ದೊಡ್ಡದು ಮಾಡಿ ಹೇಳಲಾಗುತ್ತಿದೆ ಎಂದು ತಮ್ಮ ಅಭಿಪ್ರಾಯವನ್ನು ವ್ಯಕ್ತ ಪಡಿಸಿದ್ದಾರೆ. ಇದನ್ನೂ ಓದಿ  : ಸಿನಿಮಾವಾಗಲಿದೆ ‘ಟೈಂಪಾಸ್’ ಬೆಡಗಿ ಪ್ರೋತಿಮಾ ಬೇಡಿ ಬಯೋಪಿಕ್

    ಆರ್.ಆರ್.ಆರ್, ಕೆಜಿಎಫ್ 2 ಸಿನಿಮಾಗಳಿಗಿಂತ ಮುಂಚೆಯೇ ಪ್ಯಾನ್ ಇಂಡಿಯಾ ಚಿತ್ರಗಳು ಬಂದಿವೆ. ಮಲಯಾಳಂನ ಚಮ್ಮೇನ್, ಮುಘಲ್ ಎ ಅಜಮ್ , ಪಡೋಸನ್ ರೀತಿಯ ಸಿನಿಮಾಗಳನ್ನು ಏನೆಂದು ಕರೆಯಬೇಕು? ನಮ್ಮದು ಹಲವು ಭಾಷೆಗಳನ್ನು ಹೊಂದಿದ ದೇಶ. ಅದನ್ನು ಅರ್ಥ ಮಾಡಿಕೊಂಡರೆ, ಎಲ್ಲವೂ ಅರ್ಥವಾದೀತು ಎಂದು ಮಾರ್ಮಿಕವಾಗಿ ಮಾತನಾಡಿದ್ದಾರೆ ಕಮಲ್ ಹಾಸನ್. ಇದನ್ನೂ ಓದಿ : ವಾರಕ್ಕೆ ಹತ್ತತ್ತು ಸಿನಿಮಾಗಳು ರಿಲೀಸ್ : ಥಿಯೇಟರ್ ಮಾತ್ರ ಖಾಲಿ ಖಾಲಿ

    ಬಾಲಿವುಡ್ ಮತ್ತು ದಕ್ಷಿಣದ ಸಿನಿಮಾಗಳು ಎಂದು ಬೇರ್ಪಡಿಸುವುದನ್ನು ನಾನು ಒಪ್ಪಲಾರೆ ಎಂದಿರುವ ಕಮಲ್ ಹಾಸನ್, ಎಲ್ಲವೂ ನಮ್ಮದೇ ಎಂದು ಸಾಗಬೇಕು. ತಾಜ್ ಮಹಲ್ ನನ್ನದು, ಮಧುರೈ ಮೀನಾಕ್ಷಿ ದೇವಾಲಯ ಕೂಡ ನನ್ನದೇ ಎಂದು ಹೇಳುವ ಮೂಲಕ ದೇಶ, ಭಾಷೆಯನ್ನು ಒಡೆಯಬೇಡಿ ಎಂದಿದ್ದಾರೆ ಕಮಲ್ ಹಾಸನ್.

  • ‘ಪ್ಯಾನ್ ಇಂಡಿಯಾ’ – ಸಿನಿಮಾಗಳಿಗೆ ಅಗೌರವ ತೋರುವ ಪದ, ಇದನ್ನು ತೆಗೆದುಹಾಕಬೇಕು: ಸಿದ್ಧಾರ್ಥ್

    ‘ಪ್ಯಾನ್ ಇಂಡಿಯಾ’ – ಸಿನಿಮಾಗಳಿಗೆ ಅಗೌರವ ತೋರುವ ಪದ, ಇದನ್ನು ತೆಗೆದುಹಾಕಬೇಕು: ಸಿದ್ಧಾರ್ಥ್

    – ಕಂಟೆಂಟ್ ಚೆನ್ನಾಗಿದ್ದರೆ ಅದಕ್ಕೆ ಹೆಸರಿಡಬೇಕಾಗಿಲ್ಲ

    ಕ್ಷಿಣ ಭಾರತದ ಸಿನಿಮಾಗಳು ಇಡೀ ವಿಶ್ವವೇ ತಮ್ಮ ಸಿನಿಮಾಗಳತ್ತ ತಿರುಗಿ ನೋಡುವಂತೆ ಮಾಡುತ್ತಿವೆ. ದಕ್ಷಿಣ ಸಿನಿಮಾಗಳು ಸೂಪರ್‌ಹಿಟ್‌ ಸಿನಿಮಾಗಳಾಗಿ ಹೊರಹೊಮ್ಮುತ್ತಿವೆ. ಅದಕ್ಕೆ ಈಗ ಸಿನಿಮಾರಂಗದಲ್ಲಿ ‘ಪ್ಯಾನ್ ಇಂಡಿಯಾ ಸ್ಟಾರ್’ ಎಂಬ ಪದ ಫುಲ್ ಫೇಮಸ್ ಆಗಿದೆ. ಎಲ್ಲ ನಟರು ಪ್ಯಾನ್ ಇಂಡಿಯಾ ಸ್ಟಾರ್ ಪಟ್ಟ ನಮ್ಮದಾಗಿಸಿಕೊಳ್ಳಬೇಕು ಎಂದು ಗಮನಹರಿಸುತ್ತಿದ್ದಾರೆ. ಆದರೆ ಬಹುಭಾಷಾ ನಟ ಸಿದ್ಧಾರ್ಥ್ ‘ಪ್ಯಾನ್-ಇಂಡಿಯನ್’ ಪದದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    Siddharth Slams Trolls Abusing His Mother: "My Country, My Religion... All Hacked By A Bunch Of Pitiful Woman-Hating Crowds"

    ನಟ ಸಿದ್ಧಾರ್ಥ್ ಹಿಂದಿ ಸೇರಿದಂತೆ ಐದಕ್ಕೂ ಹೆಚ್ಚು ಭಾಷೆಗಳಲ್ಲಿ ಕೆಲಸ ಮಾಡಿದ್ದಾರೆ. ದೇಶದ ಎರಡು ಜನಪ್ರಿಯ ಚಲನಚಿತ್ರೋದ್ಯಮಗಳಲ್ಲಿ ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ. ಆದರೆ ಸಂದರ್ಶನವೊಂದರಲ್ಲಿ ‘ಪ್ಯಾನ್-ಇಂಡಿಯನ್’ ಕುರಿತು ಮಾತನಾಡಿದ ಅವರು, ಚಿತ್ರರಂಗದಲ್ಲಿ ಇತ್ತೀಚೆಗೆ ಬಳಕೆಯಾಗುತ್ತಿರುವ ಪ್ಯಾನ್ ಇಂಡಿಯನ್ ಪದ ಸಿನಿಮಾಗಳಿಗೆ ಅಗೌರವ ತೋರುವ ಪದ. ಏಕೆಂದರೆ ಪ್ರಾದೇಶಿಕ ಸಿನಿಮಾ ಎಂದರೆ ಬಾಲಿವುಡ್‍ನಿಂದ ಬಂದ ಭಾರತೀಯ ಚಲನಚಿತ್ರ ಎಂದು ವಿವರಿಸಲು ಈ ಪದವನ್ನು ಬಳಸಲಾಗುತ್ತಿದೆ. ಅದು ಅಸಂಬದ್ಧ! ಎಲ್ಲ ಚಲನಚಿತ್ರಗಳು ಭಾರತೀಯ ಚಲನಚಿತ್ರಗಳೇ ಆಗಿರುತ್ತೆ ಎಂದು ಬೇಸರಿಸಿದ್ದಾರೆ. ಇದನ್ನೂ ಓದಿ: ಬೊಮ್ಮಾಯಿಯನ್ನು ಬದಲಾಯಿಸಲು RSS ಹೊರಟಿದೆ: ಸಿದ್ದು 

    ಕೆಜಿಎಫ್’ ಭಾರತೀಯ ಚಿತ್ರ
    15 ವರ್ಷಗಳ ಹಿಂದೆ ಪ್ಯಾನ್ ಇಂಡಿಯನ್ ಸಿನಿಮಾ ಇರಲಿಲ್ಲ. ಭಾರತೀಯ ಸಿನಿಮಾ ಭಾರತೀಯ ಸಿನಿಮಾ ಅಷ್ಟೇ ಆಗಿತ್ತು. ನನ್ನ ಬಾಸ್ ಮಣಿರತ್ನಂ ‘ರೋಜಾ’ ಎಂಬ ಚಲನಚಿತ್ರವನ್ನು ಮಾಡಿದರು. ಅದನ್ನು ಭಾರತದಲ್ಲಿ ಎಲ್ಲರೂ ನೋಡಿದರು. ಅದನ್ನು ನೋಡಿ ‘ಪ್ಯಾನ್ ಇಂಡಿಯನ್’ ಸಿನಿಮಾ ಎಂದು ಯಾರೂ ಹೇಳಿರಲಿಲ್ಲ. ಇಂದು ಬೆಂಗಳೂರಿನ ನನ್ನ ಸ್ನೇಹಿತರು ‘ಕೆಜಿಎಫ್’ ಮಾಡಿದ್ದಾರೆ. ಅವರ ಬಗ್ಗೆ ನನಗೆ ತುಂಬಾ ಹೆಮ್ಮೆ ಇದೆ. ‘ಕೆಜಿಎಫ್’ ಭಾರತೀಯ ಚಿತ್ರ. ಅದೊಂದು ಕನ್ನಡ ಚಿತ್ರ. ನೀವು ಯಾವುದೇ ಭಾಷೆಯಲ್ಲಿ ಇದನ್ನು ವೀಕ್ಷಿಸಬಹುದು. ಆದರೆ ಇದು ಕನ್ನಡ ಇಂಡಸ್ಟ್ರಿ ಮಾಡಿದ ಭಾರತೀಯ ಚಲನಚಿತ್ರವಾಗಿದೆ ಎಂದು ತಿಳಿಸಿದ್ದಾರೆ.

    ನೀವು ನನ್ನನ್ನು ಕೇಳಿದರೆ ಪ್ಯಾನ್ ಇಂಡಿಯಾ ಪದವನ್ನು ತೆಗೆದುಹಾಕಬೇಕು. ಅದನ್ನು ಭಾರತೀಯ ಚಲನಚಿತ್ರ ಎಂದು ಕರೆಯಬೇಕು. ಇಲ್ಲದಿದ್ದರೆ ಅದು ಯಾವ ಭಾಷೆಯಲ್ಲಿದೆ ಎಂಬುದನ್ನು ಉಲ್ಲೇಖಿಸಿ. ತಮಿಳು ಮತ್ತು ತೆಲುಗು ಚಿತ್ರರಂಗದಲ್ಲಿ ಸ್ಟಾರ್‍ಡಮ್ ಕಂಡುಕೊಂಡಿರುವ ತಮಿಳು ನಟ ನಾನು. ಬಾಲಿವುಡ್ ಸಿನಿಮಾದಲ್ಲಿ ನಟಿಸಲು ಹೋದ್ರೆ ನನ್ನನ್ನು ದಕ್ಷಿಣ ನಟ ಎಂದು ಕರೆಯುತ್ತಾರೆ. ದಕ್ಷಿಣ ಭಾರತದ ನಟನೆಂದೂ ಹೇಳುವುದಿಲ್ಲ. ಅದಕ್ಕೆ ನಾನು ಹೇಳುವುದು ಸಿನಿಮಾ ವಿಚಾರಕ್ಕೆ ಬಂದ್ರೆ ಅತ್ಯುತ್ತಮ ತಂತ್ರಜ್ಞರು, ಅತ್ಯುತ್ತಮ ಚಲನಚಿತ್ರಗಳನ್ನು ಮಾಡುತ್ತಾರೆ ಎಂದು ಉತ್ತರ ಕೊಟ್ಟಿದ್ದಾರೆ. ಇದನ್ನೂ ಓದಿ:  ಆ್ಯಸಿಡ್ ದಾಳಿಗೆ ಒಳಗಾದ ಯುವತಿಗೆ ಸಹಾಯಹಸ್ತ

    KGF 2 Yash (4)

    ಒಳ್ಳೆಯ ಸಿನಿಮಾ ಮಾಡಲು ಯಾವುದೇ ಭಾಷೆಯಾದರೂ ಪರವಾಗಿಲ್ಲ. ಚೆನ್ನೈನ ದೊಡ್ಡ ತಂತ್ರಜ್ಞರು ಹಿಂದಿ ಚಿತ್ರರಂಗದಲ್ಲಿ ಕೆಲಸ ಮಾಡಿದ್ದಾರೆ. ತೆಲುಗು ಚಿತ್ರರಂಗದ ದೊಡ್ಡ ನಿರ್ಮಾಪಕರು ಹಿಂದಿ ಚಿತ್ರರಂಗದಲ್ಲಿ ಕೆಲಸ ಮಾಡಿದ್ದಾರೆ. ಇಂದು ‘ಕೆಜಿಎಫ್’ನ ಮಹಾನ್ ಕನ್ನಡಿಗರು ಹಿಂದಿ ಚಿತ್ರರಂಗದಲ್ಲಿ ಕೆಲಸ ಮಾಡುತ್ತಿದ್ದಾರೆ. ಕಂಟೆಂಟ್ ಚೆನ್ನಾಗಿದ್ದರೆ ಅದಕ್ಕೆ ಹೆಸರಿಡಬೇಕಾಗಿಲ್ಲ. ಅದು ಎಲ್ಲೆಡೆ ಹೋಗುತ್ತದೆ ಎಂದಿದ್ದಾರೆ.

  • ಯೋಗರಾಜ್ ಭಟ್ಟರ ಪ್ಯಾನ್ ಇಂಡಿಯಾ ಚಿತ್ರದಲ್ಲಿ ಶಿವಣ್ಣ- ಪ್ರಭುದೇವ್?

    ಯೋಗರಾಜ್ ಭಟ್ಟರ ಪ್ಯಾನ್ ಇಂಡಿಯಾ ಚಿತ್ರದಲ್ಲಿ ಶಿವಣ್ಣ- ಪ್ರಭುದೇವ್?

    ಗಾಳಿಪಟ 2 ಸಿನಿಮಾದ ಸಂಪೂರ್ಣ ಶೂಟಿಂಗ್ ಮುಗಿಸಿ, ಇದೀಗ ಗರಡಿ ಚಿತ್ರದ ಚಿತ್ರೀಕರಣದಲ್ಲಿ ತೊಡಗಿರುವ ಯೋಗರಾಜ್ ಭಟ್ಟರು ಮತ್ತೊಂದು ಸಿನಿಮಾ ಮಾಡಲಿದ್ದಾರೆ ಎನ್ನುವ ಸುದ್ದಿ ಭಟ್ಟರ ಗರಡಿಯಿಂದ ಬಂದಿದೆ. ಈ ಸಿನಿಮಾ ಆಗುವುದಕ್ಕೆ ಇನ್ನೂ ಹಲವು ತಿಂಗಳು ಬೇಕಾದರೂ, ಕೆಲ ಕಾರಣಗಳಿಂದಾಗಿ ಈ ಸುದ್ದಿ ಮಹತ್ವ ಪಡೆದುಕೊಂಡಿದೆ. ಇದನ್ನೂ ಓದಿ : ವಿಜಯ್ ದುನಿಯಾದಲ್ಲಿ ‘ಭೀಮ’ ಎಂಟ್ರಿ : ನಟಿ ಮಾಲಾಶ್ರೀ ಬಳಿ ಇತ್ತು ಭೀಮ ಟೈಟಲ್

    ಹೊಸ ಸುದ್ದಿಯ ಪ್ರಕಾರ ಯೋಗರಾಜ್ ಭಟ್ ನಿರ್ದೇಶನದ ಈ ಹೊಸ ಸಿನಿಮಾದಲ್ಲಿ ಶಿವರಾಜ್ ಕುಮಾರ್ ಮತ್ತು ಪ್ರಭುದೇವ್ ಒಟ್ಟಾಗಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ. ಕೆಲ ತಿಂಗಳ ಹಿಂದೆಷ್ಟೇ ಪ್ರಭುದೇವ್ ನಟನೆಯ ಚಿತ್ರದಲ್ಲಿ ಪುನೀತ್ ರಾಜ್ ಕುಮಾರ್ ಪಾತ್ರ ಮಾಡಿದ್ದರು. ಇದೀಗ ಪುನೀತ್ ಅವರ ಸಹೋದರ ಶಿವರಾಜ್ ಕುಮಾರ್ ಜತೆ ಪ್ರಭದೇವ ನಟಿಸಲಿದ್ದಾರೆ ಎನ್ನುವುದು ಕುತೂಹಲದ ಸಂಗತಿ. ಇದನ್ನೂ ಓದಿ : ಕನ್ನಡದಲ್ಲೂ ಬಂತು ಬಾಲಿವುಡ್ ನ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ

    ಇದೊಂದು ಪ್ಯಾನ್ ಇಂಡಿಯಾ ಸಿನಿಮಾವಾಗಿದ್ದು, ಅದ್ಧೂರಿಯ ತಾರಾಗಣವೇ ಸಿನಿಮಾದಲ್ಲಿ ಇರಲಿದೆಯಂತೆ. ರಾಕ್ ಲೈನ್ ವೆಂಕಟೇಶ್ ಅವರ ನಿರ್ಮಾಣದಲ್ಲಿ ಈ ಸಿನಿಮಾ ಮೂಡಿ ಬರಲಿದ್ದು, ಭಾರೀ ಬಜೆಟ್ ನಲ್ಲಿಯೇ ತಯಾರು ಆಗಲಿದೆ ಎನ್ನುವ ಮಾಹಿತಿ ಸಿಕ್ಕಿದೆ. ಇದನ್ನೂ ಓದಿ : ಮಗನೊಂದಿಗೆ ನಿಖಿಲ್ ಕುಮಾರ್ ಸ್ವಾಮಿ ಜಾಲಿ ಟ್ರೀಪ್

    ಯೋಗರಾಜ್ ಭಟ್ ನಿರ್ದೇಶನದ ಗಾಳಿಪಟ ಬಿಡುಗಡೆಗೆ ರೆಡಿಯಾಗಿದೆ. ಗರಡಿ ಅರ್ಧಕರ್ಧ ಶೂಟಿಂಗ್ ಮುಗಿಸಿದೆ. ಈ ಎರಡೂ ಚಿತ್ರಗಳು ತೆರೆಗೆ ಬಂದ ಮೇಲೆ ಹೊಸ ಸಿನಿಮಾದ ಕೆಲಸ ಶುರುವಾಗಲಿದೆಯಂತೆ. ಈಗಾಗಲೇ ಪ್ಯಾನ್ ಇಂಡಿಯಾ ಪ್ರೇಕ್ಷಕರನ್ನು ಗಮನದಲ್ಲಿಟ್ಟುಕೊಂಡು ಯೋಗರಾಜ್ ಭಟ್ ಅವರು ಕಥೆ ಬರೆದಿದ್ದು. ಏಕಕಾಲಕ್ಕೆ ಹಲವು ಭಾಷೆಗಳಲ್ಲಿ ಈ ಚಿತ್ರವನ್ನು ಮಾಡಲಿದ್ದಾರಂತೆ ಭಟ್.

  • ದಕ್ಷಿಣದ ಮೊದಲ ಪ್ಯಾನ್ ಇಂಡಿಯಾ ಸಿನಿಮಾ : ಡಾ.ರಾಜ್ ನಟನೆಯ ‘ಮಹಿಷಾಸುರ ಮರ್ಧಿನಿ’

    ದಕ್ಷಿಣದ ಮೊದಲ ಪ್ಯಾನ್ ಇಂಡಿಯಾ ಸಿನಿಮಾ : ಡಾ.ರಾಜ್ ನಟನೆಯ ‘ಮಹಿಷಾಸುರ ಮರ್ಧಿನಿ’

    ದ್ಯ ದಕ್ಷಿಣ ಭಾರತದ ಸಿನಿಮಾ ರಂಗದಲ್ಲಿ ಪ್ಯಾನ್ ಇಂಡಿಯಾ ಸಿನಿಮಾಗಳದ್ದೇ ಸುದ್ದಿ. ಬಾಹುಬಲಿ, ಕಜಿಎಫ್ ಸಿನಿಮಾಗಳು ಬರುವ ಮುಂಚೆ ಇಂಥದ್ದೊಂದು ಶಬ್ದವನ್ನು ಕೇಳಿದ್ದು ಕಡಿಮೆ ಅಥವಾ ಇಲ್ಲವೇ ಇಲ್ಲ ಎನ್ನಬಹುದು. ಬಾಹುಬಲಿ ಸಿನಿಮಾ ರಿಲೀಸ್ ಆದಾಗಲೂ ಈ ಶಬ್ದಕ್ಕೆ ಅಷ್ಟೊಂದು ತೂಕವಿರಲಿಲ್ಲ. ಆದರೆ, ಕೆಜಿಎಫ್ ಚಾಪ್ಟರ್ 1 ರಿಲೀಸ್ ಆಗುತ್ತಿದ್ದಂತೆಯೇ ‘ಪ್ಯಾನ್ ಇಂಡಿಯಾ’ ಶಬ್ದಕ್ಕೆ ತೂಕ ಹೆಚ್ಚಾಯಿತು. ಈಗಂತೂ ತಲೆ ಚಿಟ್ಟು ಅನ್ನುವಷ್ಟರ ಮಟ್ಟಿಗೆ ಪ್ಯಾನ್ ಇಂಡಿಯಾ ಸಿನಿಮಾಗಳು ರಾರಾಜಿಸುತ್ತಿವೆ. ಇದನ್ನೂ ಓದಿ : ಕೆಜಿಎಫ್ 2 ಜೊತೆ ನೋಡಬಹುದು ಹೊಂಬಾಳೆ ಫಿಲ್ಮ್ಸ್ ನ ಮತ್ತೆರಡು ಸಿನಿಮಾ ಟೀಸರ್

    ಏನಿದು ಪ್ಯಾನ್ ಇಂಡಿಯಾ?

    ಹಲವು ಭಾಷೆಗಳಲ್ಲಿ ಏಕಕಾಲಕ್ಕೆ ನಿರ್ಮಾಣವಾಗಿವೆ, ಆಯಾ ಭಾಷೆಯ ನೋಡುಗರಿಗೆ ಒಂದೇ ಸಲ ಸಿನಿಮಾ ತೋರಿಸುವ ಸಿದ್ಧಾಂತವೇ ‘ಪ್ಯಾನ್ ಇಂಡಿಯಾ’. ಸಾಮಾನ್ಯವಾಗಿ ಎಲ್ಲ ಭಾಷೆಯ ನೋಡುಗರನ್ನು ಗಮನದಲ್ಲಿಟ್ಟುಕೊಂಡು ಇಂಥದ್ದೊಂದು ಸಿನಿಮಾ ಮಾಡುತ್ತಾರೆ. ಕಥೆಯ ಆಯ್ಕೆಯಿಂದ ಹಿಡಿದು ಅದರ ಗುಣಮಟ್ಟದವರೆಗೂ ಅದ್ಧೂರಿತನವನ್ನು ಕಾಪಾಡಿಕೊಂಡು ಬರಲಾಗುತ್ತದೆ. ಅಥವಾ ಆಯಾ ನೋಡುಗನ ಅಭಿರುಚಿಯನ್ನು ಮನದಲ್ಲಿಟ್ಟು ಸಿನಿಮಾ ಕಟ್ಟಲಾಗುತ್ತಿದೆ.

    ಆರು ದಶಕಗಳ ಹಿಂದೆಯೇ ಕನ್ನಡದಲ್ಲಿ ಪ್ಯಾನ್ ಇಂಡಿಯಾ ಸಿನಿಮಾ

    ಪ್ಯಾನ್ ಇಂಡಿಯಾ ಕಾನ್ಸೆಪ್ಟ್ ಈಗೀಗ ಪಾಪ್ಯುಲರ್ ಆದರೂ, ಅರವತ್ತೆರಡು ವರ್ಷಗಳ ಹಿಂದೆಯೇ ಕನ್ನಡದಲ್ಲಿ ಪ್ಯಾನ್ ಇಂಡಿಯಾ ಸಿನಿಮಾ ಬಂದಿದೆ. ಅದೂ ಈವರೆಗೂ ಕನ್ನಡದಲ್ಲಿ ಬಾರದೇ ಇರುವಷ್ಟು ಭಾಷೆಗಳಲ್ಲಿ ತೆರೆ ಕಂಡಿದೆ. ಬರೀ ತೆರೆ ಕಾಣುವುದು ಮಾತ್ರವಲ್ಲ ಬಾಕ್ಸ್ ಆಫೀಸ್ ಕಲೆಕ್ಷನ್ ವಿಷಯದಲ್ಲೂ ಅದು ದಾಖಲೆ ಬರೆದಿದೆ. ಆ ಸಿನಿಮಾ ಬೇರೆ ಯಾವುದೂ ಅಲ್ಲ, ಡಾ.ರಾಜ್ ಕುಮಾರ್ ನಟನೆಯ ‘ಮಹಿಷಾಸುರ ಮರ್ಧಿನಿ’. ಇದನ್ನೂ ಓದಿ : ವಿಜಯ್ ಕಿರಗಂದೂರು ತವರಿಗೆ ಭೇಟಿ ನೀಡಿ ಹಿರಿಯರ ಆಶೀರ್ವಾದ ಪಡೆದ ಕೆಜಿಎಫ್ ಟೀಂ

    ಅದು 1959ರ ಬ್ಲ್ಯಾಕ್ ಅಂಡ್ ವೈಟ್ ಯುಗದ ಸಿನಿಮಾ. ಈ ವೇಳೆಯಲ್ಲಿ ಸಿನಿಮಾ ನಿರ್ಮಾಣಗಳ ಸಂಖ್ಯೆಯೂ ತೀರಾ ಕಡಿಮೆ. 1959ರಲ್ಲಿ ತೆರೆಕಂಡ ಸಿನಿಮಾಗಳ ಸಂಖ್ಯೆ ಕೇವಲ ಆರೇ ಆರು. ಆ ಆರು ಸಿನಿಮಾಗಳಲ್ಲಿ ಮಹಿಷಾಸುರ ಮರ್ಧಿನಿ ಕೂಡ ಒಂದು. ಇದು ಪೌರಾಣಿಕ ಚಿತ್ರವಾಗಿದ್ದು, ಕನ್ನಡ, ತಮಿಳು, ತೆಲುಗು, ಹಿಂದಿ ಸೇರಿದಂತೆ ಒಟ್ಟು ಎಂಟು ಭಾಷೆಗಳಿಗೆ ಈ ಸಿನಿಮಾ ಡಬ್ ಆಗಿ ಬಿಡುಗಡೆ ಆಗಿತ್ತು. ಇದನ್ನೂ ಓದಿ: ಗ್ರೌಂಡ್ ರಿಪೋರ್ಟ್ : ರಿಲೀಸ್ ಹಿಂದಿನ ಪಕ್ಕಾ ಲೆಕ್ಕಾಚಾರ, ಆರ್.ಆರ್.ಆರ್ ದಾಖಲೆ ಮುರಿದ ಕೆಜಿಎಫ್ 2

    ಈ ಸಿನಿಮಾದ ಮತ್ತೊಂದು ವಿಶೇಷತೆ ಅಂದರೆ, ಡಾ.ರಾಜ್ ಕುಮಾರ್ ಅವರ ಜತೆ ತಮಿಳು ನಾಡಿನ ಮಾಜಿ ಮುಖ್ಯಮಂತ್ರಿ ದಿ.ಜಯಲಲಿತಾ ಅವರ ತಾಯಿ ಶ್ರೀಮತಿ ಸಂಧ್ಯಾ ಅವರು ಕೂಡ ನಟಿಸಿದ್ದಾರೆ. ಮಹಿಷಾಸುರನ ಪಾತ್ರವನ್ನು ಡಾ.ರಾಜ್ ನಿರ್ವಹಿಸಿದ್ದರೆ, ಚಾಮುಂಡೇಶ್ವರಿಯಾಗಿ ಸಂಧ್ಯಾ ಕಾಣಿಸಿಕೊಂಡಿದ್ದರು. ಉದಯಕುಮಾರ್, ಸಾಹುಕಾರ ಜಾನಿ, ನರಸಿಂಹರಾಜು ಸೇರಿದಂತೆ ಹಲವು ಕಲಾವಿದರು ಈ ಸಿನಿಮಾದ ತಾರಾ ಬಳಗದಲ್ಲಿದ್ದರು. ಇದನ್ನೂ ಓದಿ: ಯಶ್ ಅಭಿಮಾನಿಗಳಿಗಾಗಿ ಸ್ಪೆಷಲ್ ಶೋ ಡಿಮ್ಯಾಂಡ್: ರಾಕಿಭಾಯ್ ನಿರಂತರ ಪ್ರದರ್ಶನ

    ಈ ಸಿನಿಮಾ ಹಲವು ಪ್ರಥಮಗಳಿಗೆ ಕಾರಣವೂ ಆಯಿತು. ಈ ಸಿನಿಮಾದ ಮೂಲಕ ಡಾ.ರಾಜ್ ಕುಮಾರ್ ಅವರು ಗಾಯಕರಾಗಿ ಸಿನಿಮಾ ರಂಗಕ್ಕೆ ಪರಿಚಯವಾದರು. ಆ ಕಾಲದಲ್ಲೇ ಈ ಸಿನಿಮಾ ಬೆಂಗಳೂರಿನಲ್ಲಿ ನೂರು ದಿನಗಳ ಪ್ರದರ್ಶನ ಕಂಡಿತು. ಮದರಾಸಿನ ವಿಕ್ರಂ ಸ್ಟುಡಿಯೋದಲ್ಲಿ ಚಿತ್ರೀಖರಣಗೊಂಡ ಮೊಟ್ಟ ಮೊದಲ ಸಿನಿಮಾ ಕೂಡ ಇದಾಗಿದೆ. ನಿರ್ಮಾಪಕರಾದ ಬಿ.ಎಸ್.ರಂಗಾ ಅವರು ನಿರ್ಮಾಣ ಮಾಡುವುದರ ಜತೆಗೆ ಸಿನಿಮಾಟೋಗ್ರಾಫರ್ ಆಗಿಯೂ ಈ ಚಿತ್ರಕ್ಕೆ ಕೆಲಸ ಮಾಡಿದ್ದಾರೆ.