Tag: ಪ್ಯಾಲಿಸ್ತೀನ್‌

  • ಕೇಂದ್ರದವರೇ ಪ್ಯಾಲೆಸ್ತೀನ್‌ಗೆ ಬೆಂಬಲ ಇದೆ ಅಂತಾರೆ, ಧ್ವಜ ತೋರಿಸೋದ್ರಲ್ಲಿ ತಪ್ಪೇನಿದೆ ಅಂತ ವಾದ ಮಾಡ್ತಾರೆ: ಪರಮೇಶ್ವರ್‌

    ಕೇಂದ್ರದವರೇ ಪ್ಯಾಲೆಸ್ತೀನ್‌ಗೆ ಬೆಂಬಲ ಇದೆ ಅಂತಾರೆ, ಧ್ವಜ ತೋರಿಸೋದ್ರಲ್ಲಿ ತಪ್ಪೇನಿದೆ ಅಂತ ವಾದ ಮಾಡ್ತಾರೆ: ಪರಮೇಶ್ವರ್‌

    – 17, 18 ವರ್ಷದ ಹುಡುಗರಿಗೆ ಪ್ರಚೋದನೆ ಕೊಟ್ಟಿದ್ದಾರೆ ಎಂದ ಸಚಿವರು

    ಬೆಂಗಳೂರು: ಕೇಂದ್ರ ಸರ್ಕಾರದವರೇ ಪ್ಯಾಲೆಸ್ತೀನ್‌ಗೆ ನಮ್ಮ ಬೆಂಬಲ ಇದೆ ಅಂತ ಹೇಳಿಕೆ ಕೊಟ್ಟಿದ್ದಾರೆ. ಹಾಗಾಗಿ ಧ್ವಜ (Palestine Flag) ತೋರಿಸುವುದರಲ್ಲಿ ತಪ್ಪೇನಿದೆ ಅಂತ ಬಂಧಿತರು ವಾದ ಮಾಡ್ತಾರೆ ಎಂದು ರಾಜ್ಯ ಗೃಹಸಚಿವ ಜಿ. ಪರಮೇಶ್ವರ್‌ (G Parameshwara) ಹೇಳಿದ್ದಾರೆ.

    ಪ್ಯಾಲೆಸ್ತೀನ್‌ ಧ್ವಜ ಪ್ರದರ್ಶಿಸಿದ ಪ್ರಕರಣದ ಕುರಿತು ಮಾತನಾಡಿದ ಅವರು, ಮೂರು ಜಿಲ್ಲೆಗಳಲ್ಲಿ ನಮಗೆ ಪ್ಯಾಲೆಸ್ತೀನ್‌ ಧ್ವಜ ಪ್ರದರ್ಶನ ಘಟನೆಗಳು ಕಂಡುಬಂದಿವೆ. ಪ್ಯಾಲೆಸ್ತೀನ್‌ ಧ್ವಜ ಪ್ರದರ್ಶನ ಮಾಡಿದವರನ್ನೆಲ್ಲ ಬಂಧನ ಮಾಡಲಾಗಿದೆ. ಆದ್ರೆ ಕೇಂದ್ರ ಸರ್ಕಾರದವರೇ ಪ್ಯಾಲೆಸ್ತೀನ್‌ಗೆ (Palestine) ನಮ್ಮ ಬೆಂಬಲ ಇದೆ ಅಂತ ಹೇಳಿಕೆ ಕೊಟ್ಟಿದ್ದಾರೆ. ಹೀಗಿರುವಾಗ ಧ್ವಜ ತೋರಿಸುವುದರಲ್ಲಿ ತಪ್ಪೇನಿದೆ ಅಂತ ಅವ್ರು ವಾದ ಮಾಡ್ತಾರೆ. ಆದರೂ ಕೂಡ ನಾವು ಅವರನ್ನು ಬಂಧಿಸಿದ್ದೇವೆ ಎಂದು ಹೇಳಿದ್ದಾರೆ.

    ಪ್ಯಾಲೆಸ್ತೀನ್‌ ಧ್ವಜ ಹಾರಿಸಲು ಯಾರು ಪ್ರಚೋದನೆ ಕೊಟ್ರು ಅಂತ ತನಿಖೆ ಮಾಡ್ತಿದ್ದೇವೆ. ಎಲ್ಲ ಚಿಕ್ಕ ಚಿಕ್ಕ ಹುಡುಗರಿಗೆ 17, 18 ವರ್ಷದ ಹುಡುಗರಿಗೆ ಪ್ರಚೋದನೆ ಕೊಟ್ಟಿದ್ದಾರೆ ಅಂತ ಮಾಹಿತಿ ಬಂಧ ಮೇಲೆ ಬಂಧಿಸಿದ್ದೇವೆ ಎಂದು ವಿವರಿಸಿದ್ದಾರೆ. ಇದನ್ನೂ ಓದಿ: ಜೈಲಲ್ಲಿ ಕಿರಿಕಿರಿ ಮಾಡಿದ್ರೆ ಬೇಲ್‌ಗೆ ಕಷ್ಟವಾಗುತ್ತೆ – ವಕೀಲರ ಎಚ್ಚರಿಕೆ ಬಳಿಕ ಎಚ್ಚೆತ್ತುಕೊಂಡ ದರ್ಶನ್!

    ಇದೇ ವೇಳೆ ನಾಗಮಂಗಲದಲ್ಲಿ ಪಾಕ್ ಪರ ಘೋಷಣೆ ಕೂಗಿದ ಆರೋಪ ವಿಚಾರ ಕುರಿತು ಮಾತನಾಡಿ, ಇದರ ಬಗ್ಗೆ ನಮಗೆ ಮಾಹಿತಿ ಇಲ್ಲ. ಅಧಿಕಾರಿಗಳು ಪರಿಶೀಲನೆ ಮಾಡ್ತಾರೆ. ಬಿಜೆಪಿಯವರು ತಪ್ಪು ಮಾಹಿತಿ ಕೊಟ್ಟಿದ್ದಾರೆ ಎಂದು ನುಡಿದಿದ್ದಾರೆ. ಇದನ್ನೂ ಓದಿ: ಬಳ್ಳಾರಿ ಜೈಲಿನಲ್ಲಿ ಚೇರ್‌ಗೆ ಬೇಡಿಕೆ ಇಟ್ಟ ದರ್ಶನ್ – `ದಾಸ’ನ ಆಸೆಗೆ ತಣ್ಣೀರು ಎರಚಿದ ಜೈಲಧಿಕಾರಿಗಳು

    ನಾಗಮಂಗಲ ಗಲಭೆ ಬಗ್ಗೆ ಡಿಸೈನ್‌ ಮಾಡ್ಕೊಂಡಿದ್ದಾರೆ:
    ಇನ್ನೂ ನಾಗಮಂಗಲ ಗಲಭೆ (Nagamangala Violence) ವಿಚಾರ ಕುರಿತು ಮಾತನಾಡಿದ ಪರಮೇಶ್ವರ್‌, ನಾಗಮಂಗಲ ಪ್ರಕರಣವನ್ನೇ ದೊಡ್ಡ ವಿಷಯ ಮಾಡಲು ಬಿಜೆಪಿಯವ್ರು ಮಾತಾಡಿಕೊಂಡಿದ್ದಾರೆ. ನಾವು ಕಾನೂನು ಪ್ರಕಾರ ಮುಲಾಜಿಲ್ಲದೇ ಕ್ರಮ ತಗೋತಿದ್ದೀವಿ. ಆದ್ರೆ ಬಿಜೆಪಿಯವ್ರು ದಿನಕ್ಕೊಂದು ಹೇಳಿಕೆ ಕೊಡ್ತಿದ್ದಾರೆ. ಆರೀತಿ ದಿನಕ್ಕೊಬ್ಬರು ಒಂದೊಂದು ಹೇಳಿಕೆ ಕೊಡಬೇಕು ಅಂತ ಅವರು ಡಿಸೈನ್ ಮಾಡಿಕೊಂಡಿದ್ದಾರೆ ಎಂದು ಕಿಡಿ ಕಾರಿದ್ದಾರೆ. ಇದನ್ನೂ ಓದಿ: ಅತಿ ವೇಗವಾಗಿ ಹರಡುವ ಕೋವಿಡ್‌ ಹೊಸ ತಳಿ ಪತ್ತೆ – ಯುಕೆ, ಯುಎಸ್‌, ಉಕ್ರೇನ್‌ ಸೇರಿ 27 ದೇಶಗಳಿಗೆ XEC ಆತಂಕ

  • ಲಂಡನ್‌ನಲ್ಲಿ ಇಸ್ರೇಲ್‌, ಪ್ಯಾಲೆಸ್ತೀನ್‌ ಪರ ಪ್ರತಿಭಟನಾಕಾರರ ನಡುವೆ ಘರ್ಷಣೆ

    ಲಂಡನ್‌ನಲ್ಲಿ ಇಸ್ರೇಲ್‌, ಪ್ಯಾಲೆಸ್ತೀನ್‌ ಪರ ಪ್ರತಿಭಟನಾಕಾರರ ನಡುವೆ ಘರ್ಷಣೆ

    – ‘ಇಸ್ರೇಲ್ ಭಯೋತ್ಪಾದಕ ರಾಷ್ಟ್ರ.. ಅಲ್ಲಾಹು ಅಕ್ಬರ್‌’ ಎಂದು ಕೂಗಿದ ಪ್ಯಾಲಿಸ್ತೀನ್‌ ಪರವಾದಿಗಳು

    ಲಂಡನ್‌: ಇಸ್ರೇಲ್-ಹಮಾಸ್ (Israel-Hamas Clash) ಸಂಘರ್ಷದ ವಿರುದ್ಧ ಪ್ರತಿಭಟನಾ ರ‍್ಯಾಲಿ ನಡೆಸುತ್ತಿದ್ದ ಸಂದರ್ಭದಲ್ಲಿ ಪ್ಯಾಲೆಸ್ತೀನ್ ಮತ್ತು ಇಸ್ರೇಲಿ ಪರ ಪ್ರತಿಭಟನಾಕಾರರ ಗುಂಪುಗಳು ಲಂಡನ್‌ನ ಹೈಸ್ಟ್ರೀಟ್ ಕೆನ್ಸಿಂಗ್ಟನ್ ಟ್ಯೂಬ್ ಸ್ಟೇಷನ್‌ನಲ್ಲಿ ಪರಸ್ಪರ ಘರ್ಷಣೆಗೆ ಇಳಿದ ಘಟನೆ ನಡೆದಿದೆ.

    ಇಸ್ರೇಲ್‌ನಲ್ಲಿ (Israel) ಯುದ್ಧ ನಡೆಯುತ್ತಿದ್ದರೆ, ಇತ್ತ ಲಂಡನ್‌ನಲ್ಲಿ (London) ಎರಡೂ ಕಡೆಯ ಜನರು ಘರ್ಷಣೆಗಿಳಿದಿದ್ದರು. ಇಸ್ರೇಲಿ-ಪ್ಯಾಲೇಸ್ಟಿನಿಯನ್ ಪ್ರತಿಭಟನಾಕಾರರ ನಡುವಿನ ಉದ್ವಿಗ್ನತೆಯನ್ನು ತಡೆಯಲು ಪೊಲೀಸ್ ಅಧಿಕಾರಿಗಳು ಹರಸಾಹಸ ಪಟ್ಟರು. ಇದನ್ನೂ ಓದಿ: ಗಾಜಾ ಸೀಜ್‌ಗೆ ಇಸ್ರೇಲ್ ಆದೇಶದ ಬೆನ್ನಲ್ಲೇ ಒತ್ತೆಯಾಳುಗಳನ್ನು ಕೊಲ್ಲುವ ಬೆದರಿಕೆ ಹಾಕಿದ ಹಮಾಸ್

    ಇಸ್ರೇಲಿ ರಾಯಭಾರ ಕಚೇರಿಯ ಹೊರಗೆ ನಡೆಯುತ್ತಿರುವ ಪ್ಯಾಲೆಸ್ತೀನ್ ಪರವಾದ ರ‍್ಯಾಲಿ ವೇಳೆ ಮುಖಾಮುಖಿಯಾದ ಪ್ರತಿಭಟನಾಕಾರರನ್ನು ಪೊಲೀಸ್ ಅಧಿಕಾರಿಗಳು ಪ್ರಯತ್ನಿಸುತ್ತಿರುವ ದೃಶ್ಯಗಳ ವೀಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿದೆ.

    ಸೋಮವಾರ ಸಂಜೆ ಸುಮಾರು 6 ಗಂಟೆ ಸುಮಾರಿಗೆ ಈ ಘಟನೆ ನಡೆಯಿತು. ಇಸ್ರೇಲಿ ರಾಯಭಾರ ಕಚೇರಿಯ ಮುಂದೆ ಪ್ಯಾಲೆಸ್ತೀನ್ ಪರ ಪ್ರತಿಭಟನೆಗೆ ಸಾವಿರಾರು ಜನರು ಜಮಾಯಿಸಿದರು. ಕೆಲವು ಪ್ರತಿಭಟನಾಕಾರರು ಧ್ವಜಗಳನ್ನು ಹಿಡಿದು ಘೋಷಣೆ ಕೂಗಿದರು. ‘ಇಸ್ರೇಲ್ ಭಯೋತ್ಪಾದಕ ರಾಷ್ಟ್ರ’ ಹಾಗೂ ‘ಅಲ್ಲಾಹು ಅಕ್ಬರ್‌’ ಎಂದು ಪ್ರತಿಭಟನಾಕಾರರು ಘೋಷಣೆ ಕೂಗಿದರು. ಕೆಲವರು ರಾಯಭಾರಿ ಕಚೇರಿಯತ್ತ ಪಟಾಕಿ ಸಿಡಿಸಿದರು. ಇದನ್ನೂ ಓದಿ: ಹಮಾಸ್ ವಿರುದ್ಧ ಫೀಲ್ಡ್‌ಗಿಳಿದ ಇಸ್ರೇಲ್‍ನ ಮಾಜಿ ಪ್ರಧಾನಿ

    ಅಕ್ಟೋಬರ್ 7 ರಂದು ಹಮಾಸ್ ಬಂಡುಕೋರರು ಇಸ್ರೇಲ್ ಮೇಲೆ ಹಠಾತ್‌ ದಾಳಿ ನಡೆಸಿದರು. ದೇಶದ ದಕ್ಷಿಣ ಮತ್ತು ಮಧ್ಯ ಭಾಗಗಳಿಗೆ ರಾಕೆಟ್‌ಗಳ ಸುರಿಮಳೆ ಸುರಿಸಿ 700 ಕ್ಕೂ ಹೆಚ್ಚು ಜನರನ್ನು ಹತ್ಯೆ ಮಾಡಲಾಯಿತು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]