Tag: ಪ್ಯಾಲೆಸ್ಟೀನಿಯನ್ನರು

  • ನೆರವು ಕೇಂದ್ರದ ಬಳಿ ಇಸ್ರೇಲಿ ಪಡೆಗಳಿಂದ ಗುಂಡಿನ ದಾಳಿ – 26 ಮಂದಿ ಪ್ಯಾಲೆಸ್ಟೀನಿಯನ್ನರು ಸಾವು

    ನೆರವು ಕೇಂದ್ರದ ಬಳಿ ಇಸ್ರೇಲಿ ಪಡೆಗಳಿಂದ ಗುಂಡಿನ ದಾಳಿ – 26 ಮಂದಿ ಪ್ಯಾಲೆಸ್ಟೀನಿಯನ್ನರು ಸಾವು

    ಟೆಲ್‌ ಅವೀವ್: ಗಾಜಾದ (Gaza) ನೆರವು ಕೇಂದ್ರದ ಬಳಿ ಇಸ್ರೇಲ್‌ ಪಡೆಗಳು ಗುಂಡಿನ ದಾಳಿ ನಡೆಸಿದ ಪರಿಣಾಮ 26 ಮಂದಿ ಸಾವನ್ನಪ್ಪಿದ್ದು, 80 ಜನರು ಗಾಯಗೊಂಡಿದ್ದಾರೆ.

    ದಕ್ಷಿಣ ಗಾಜಾದ ರಫಾ ಪ್ರದೇಶದಲ್ಲಿ ಅಮೆರಿಕ ಬೆಂಬಲಿತ ನೆರವು ವಿತರಣಾ ಸ್ಥಳದ ಬಳಿ ಇಸ್ರೇಲ್ ಪಡೆಗಳು (Israeli Forces) ಗುಂಡಿನ ದಾಳಿ ನಡೆಸಿದವು. ಗಾಜಾ ಹ್ಯುಮಾನಿಟೇರಿಯನ್ ಫೌಂಡೇಶನ್ (GHF) ನಡೆಸುತ್ತಿರುವ ನೆರವು ಕೇಂದ್ರದ ಹತ್ತಿರ ಅಲ್-ಆಲಮ್ ವೃತ್ತದ ಬಳಿ ಭಾನುವಾರ ಸಾವಿರಾರು ಪ್ಯಾಲೆಸ್ಟೀನಿಯನ್ನರು ಜಮಾಯಿಸಿದ್ದರು. ಆಗ ಇಸ್ರೇಲಿ ಟ್ಯಾಂಕ್‌ಗಳು ಸಮೀಪಿಸಿ ಜನಸಮೂಹದ ಮೇಲೆ ಗುಂಡು ಹಾರಿಸಿವೆ. ಇದನ್ನೂ ಓದಿ: 100ಕ್ಕೂ ಹೆಚ್ಚು ಆತ್ಮಾಹುತಿ ಡ್ರೋನ್ ಸಾಗಿಸಬಲ್ಲ `ಬಾಹುಬಲಿ’ ಡ್ರೋನ್ ಸಿದ್ಧಪಡಿಸಿದ ಚೀನಾ!

    ಹಮಾಸ್ ಕದನ ವಿರಾಮ ಪ್ರಸ್ತಾಪ ಸಂಪೂರ್ಣವಾಗಿ ಸ್ವೀಕಾರಾರ್ಹವಲ್ಲ ಎಂದು ವಾಷಿಂಗ್ಟನ್ ತಿರಸ್ಕರಿಸಿದ ಸ್ವಲ್ಪ ಸಮಯದ ನಂತರ ಇದು ಸಂಭವಿಸಿದೆ. ಖಾನ್ ಯೂನಿಸ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಕೆಲವೇ ಕೆಲವು ಆಸ್ಪತ್ರೆಗಳಲ್ಲಿ ಒಂದಾದ ನಾಸರ್ ಆಸ್ಪತ್ರೆಗೆ ಗಾಯಾಳುಗಳನ್ನು ಕತ್ತೆ ಬಂಡಿಗಳಲ್ಲಿ ಕರೆದೊಯ್ಯಲಾಯಿತು.

    ರಫಾದಲ್ಲಿ ಕಾರ್ಯನಿರ್ವಹಿಸುತ್ತಿರುವ ಇಸ್ರೇಲಿ ಪಡೆಗಳು ಮಾನವೀಯ ನೆರವು ವಿತರಣಾ ಸ್ಥಳಗಳಲ್ಲಿ ಜಮಾಯಿಸಿದ್ದ ಹಸಿದ ನಾಗರಿಕರ ಮೇಲೆ ಹೊಸ ಹತ್ಯಾಕಾಂಡವನ್ನು ಎಸಗಿವೆ ಎಂದು ಹಮಾಸ್ ಆರೋಪಿಸಿತು. ಇದನ್ನೂ ಓದಿ: ಉಕ್ರೇನ್ ಗಡಿಯಲ್ಲಿ ರೈಲ್ವೆ ಬ್ರಿಡ್ಜ್ ಕುಸಿತ – ಹಳಿ ತಪ್ಪಿ 7 ಮಂದಿ ಸಾವು, 30 ಜನಕ್ಕೆ ಗಾಯ

    ಇಸ್ರೇಲ್ ಮತ್ತು ಯುನೈಟೆಡ್ ಸ್ಟೇಟ್ಸ್ ಬೆಂಬಲಿತ ಖಾಸಗಿ ಸಂಸ್ಥೆಯಾದ ಜಿಹೆಚ್‌ಎಫ್, ಇಸ್ರೇಲ್ ಎರಡು ತಿಂಗಳಿಗೂ ಹೆಚ್ಚು ಕಾಲದ ಸಂಪೂರ್ಣ ದಿಗ್ಬಂಧನವನ್ನು ಭಾಗಶಃ ತೆಗೆದುಹಾಕಿದ ನಂತರ ಮೇ 26 ರಿಂದ ಗಾಜಾ ಪಟ್ಟಿಯಲ್ಲಿ ಆಹಾರವನ್ನು ವಿತರಿಸುತ್ತಿದೆ. ಆದಾಗ್ಯೂ, ವಿಶ್ವಸಂಸ್ಥೆಯ ನೆರವು ಸಂಸ್ಥೆಗಳು ಜಿಹೆಚ್‌ಎಫ್‌ನ ನೆರವು ಕಾರ್ಯವಿಧಾನವನ್ನು ಟೀಕಿಸಿವೆ. ಇದು ಮಾನವೀಯ ತತ್ವಗಳನ್ನು ಉಲ್ಲಂಘಿಸುತ್ತದೆ ಮತ್ತು ಪ್ಯಾಲೆಸ್ಟೀನಿಯನ್ನರಿಗೆ ಅಪಾಯಗಳನ್ನು ಹೆಚ್ಚಿಸುತ್ತದೆ ಎಂದು ಹೇಳಿವೆ.

    ಗಾಜಾಗೆ ಹೆಚ್ಚಿನ ಪ್ರಮಾಣದ ಆಹಾರ ಸಹಾಯವನ್ನು ತ್ವರಿತವಾಗಿ ತಲುಪಿಸಲು ವಿಶ್ವಸಂಸ್ಥೆಯ ವಿಶ್ವ ಆಹಾರ ಕಾರ್ಯಕ್ರಮವು ಇಸ್ರೇಲ್‌ಗೆ ಕರೆ ನೀಡಿದೆ. ಹತಾಶೆಯು ಹೆಚ್ಚುತ್ತಿರುವ ಅಭದ್ರತೆಗೆ ಕಾರಣವಾಗಿದೆ ಎಂದು ಹೇಳಿದೆ.

  • ಗುಂಡಿನ ದಾಳಿ ನಡೆಸಿ 10 ಪ್ಯಾಲೆಸ್ಟೀನಿಯನ್ನರ ಹತ್ಯೆಗೈದ ಇಸ್ರೇಲ್‌ ಪಡೆ

    ಗುಂಡಿನ ದಾಳಿ ನಡೆಸಿ 10 ಪ್ಯಾಲೆಸ್ಟೀನಿಯನ್ನರ ಹತ್ಯೆಗೈದ ಇಸ್ರೇಲ್‌ ಪಡೆ

    ಟೆಲ್‌ ಅವೀವ್: ಇಸ್ರೇಲ್‌ ಪಡೆಗಳು (Israel Forces) ಪಶ್ಚಿಮ ದಂಡೆಯಲ್ಲಿ ಕಾರ್ಯಾಚರಣೆ ನಡೆಸಿ 10 ಮಂದಿ ಪ್ಯಾಲೆಸ್ಟೀನಿಯನ್ನರನ್ನು (Palestinians) ಹತ್ಯೆ ಮಾಡಿದ್ದಾರೆ. ಇದು ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆ ಎಂದು ಇಸ್ರೇಲ್‌ ಮಿಲಿಟರಿ ಪಡೆ ಹೇಳಿಕೊಂಡಿದೆ.

    ಉತ್ತರದ ನಗರವಾದ ಜೆನಿನ್‌ನಲ್ಲಿ ಜನನಿಬಿಡ ನಿರಾಶ್ರಿತರ ಶಿಬಿರದ ಮೇಲೆ ದಾಳಿ ನಡೆಸಲಾಯಿತು. ದಾಳಿಯಲ್ಲಿ 10 ಮಂದಿ ಮೃತಪಟ್ಟಿದ್ದಾರೆ. ಅಲ್ಲದೇ 20 ಜನರು ಗಾಯಗೊಂಡಿದ್ದಾರೆ ಎಂದು ಪ್ಯಾಲೇಸ್ಟಿನಿಯನ್ ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ದಿವಾಳಿ ಪಾಕಿಸ್ತಾನ ರೂಪಾಯಿ ಮೌಲ್ಯ ಪಾತಾಳಕ್ಕೆ- ಆಹಾರ ಪದಾರ್ಥಗಳ ಬೆಲೆ ಮತ್ತಷ್ಟೂ ದುಬಾರಿ.!

    “ಇಸ್ಲಾಮಿಕ್ ಜಿಹಾದ್ ಭಯೋತ್ಪಾದಕ ತಂಡವನ್ನು ಬಂಧಿಸಲು, ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆ ಸಮಯದಲ್ಲಿ ಇಸ್ರೇಲಿ ಪಡೆಗಳು ಗುಂಡಿನ ದಾಳಿ ನಡೆಸಿತು. ಹಲವಾರು ಶತ್ರು ಹೋರಾಟಗಾರರನ್ನು ಹೊಡೆದುರುಳಿಸಿತು ಎಂದು ಮಿಲಿಟರಿ ತಿಳಿಸಿದೆ.

    ಮಿಲಿಟರಿ ದಾಳಿಯ ಸಮಯದಲ್ಲಿ ಮನೆಗಳಿಗೆ ಹಾನಿಯಾಗಿದೆ. ಕಿಟಕಿ, ಬಾಗಿಲು, ಗೋಡೆಗಳು ಹಾನಿಗೊಳಗಾಗಿವೆ ಎಂದು ಜೆನಿನ್ ನಿವಾಸಿ ಉಮ್ ಯೂಸೆಫ್ ಅಲ್-ಸಾವಾಲ್ಮಿ ಅಳಲು ತೋಡಿಕೊಂಡಿದ್ದಾರೆ. ಇದನ್ನೂ ಓದಿ: ಮೋದಿ ಸಾಕ್ಷ್ಯಚಿತ್ರ – ಬಿಬಿಸಿಯನ್ನು ಸಮರ್ಥಿಸಿಕೊಂಡ ಅಮೆರಿಕ

    ಇಸ್ರೇಲ್‌ ಸೇನಾಪಡೆಯು ಪ್ಯಾಲೆಸ್ಟೀನ್‌ ನಾಗರಿಕರು ಮತ್ತು ಹೋರಾಟಗಾರರು ಗುರಿಯಾಗಿ ದಾಳಿಗಳನ್ನು ನಡೆಸುತ್ತಿದೆ. ಹಲವು ವರ್ಷಗಳಿಂದ ಈ ರೀತಿಯ ದಾಳಿಗಳು ನಡೆಯುತ್ತಿವೆ. ಪ್ಯಾಲೆಸ್ಟೀನ್‌ ನಾಗರಿಕರ ಮೇಲೆ ನಿರಂತರ ದೌರ್ಜನ್ಯ ನಡೆಯುತ್ತಿದೆ ಎಂದು ಇಸ್ರೇಲ್‌ ಸೇನಾಪಡೆ ಮೇಲೆ ಗಂಭೀರ ಆರೋಪ ಮಾಡಲಾಗಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k