Tag: ಪ್ರಕಾಶ್ ಹುಕ್ಕೇರಿ

  • ದೆಹಲಿಯ ಕರ್ನಾಟಕ ಭವನದಲ್ಲಿ 68ನೇ ಕನ್ನಡ ರಾಜ್ಯೋತ್ಸವ

    ದೆಹಲಿಯ ಕರ್ನಾಟಕ ಭವನದಲ್ಲಿ 68ನೇ ಕನ್ನಡ ರಾಜ್ಯೋತ್ಸವ

    ನವದೆಹಲಿ: ದೆಹಲಿ ಕರ್ನಾಟಕ ಭವನದಲ್ಲಿ (Karnataka Bhavan) (ಶರಾವತಿ) ಅದ್ಧೂರಿಯಾಗಿ ಕನ್ನಡ ರಾಜ್ಯೋತ್ಸವ (Kannada Rajyotsava) ಆಚರಿಸಲಾಯಿತು. ಕರ್ನಾಟಕ ಸರ್ಕಾರದ ನವದೆಹಲಿಯ (New Delhi)  ವಿಶೇಷ ಪ್ರತಿನಿಧಿಗಳಾದ ಪ್ರಕಾಶ್ ಹುಕ್ಕೇರಿ (Prakash Hukkeri) ಕಾರ್ಯಕ್ರಮದಲ್ಲಿ ತಾಯಿ ಭುವನೇಶ್ವರಿ ದೇವಿಗೆ ಪುಷ್ಪಾರ್ಪಣೆ ಮಾಡಿ ಧ್ವಜಾರೋಹಣ ನೆರವೇರಿಸಿದರು.

    ಧ್ವಜಾರೋಹಣದ ಬಳಿಕ ಮಾತನಾಡಿದ ಅವರು, ದೆಹಲಿ ಕನ್ನಡಿಗರು ಸೇರಿದಂತೆ ರಾಜ್ಯದ ಜನರಿಗೆ ಶುಭ ಹಾರೈಸಿದರು. ಇನ್ನು ಕನ್ನಡ ರಾಜ್ಯೋತ್ಸವದ ಅಂಗವಾಗಿ ರಕ್ತದಾನ ಹಾಗೂ ಕಣ್ಣಿನ ತಪಾಸಣೆ ಶಿಬಿರ ಆಯೋಜಿಸಲಾಗಿತ್ತು. ಇದನ್ನೂ ಓದಿ: ಮಕ್ಕಳಿಗೆ ಕನ್ನಡ ಭಾಷೆಯಲ್ಲೇ ಪರೀಕ್ಷೆ ಮಾಡುವಂತೆ ಪ್ರಧಾನಿಗೆ ಪತ್ರ ಬರೀತಿನಿ: ಸಿಎಂ

    ಕಾರ್ಯಕ್ರಮದಲ್ಲಿ ಕರ್ನಾಟಕ ಭವನದ ಅಪರ ಮುಖ್ಯ ಕಾರ್ಯದರ್ಶಿ ವಂದನ ಗುರ್ನಾನಿ (ಸಮನ್ವಯ), ನಿವಾಸಿ ಆಯುಕ್ತ ಇಮ್ ಕೊಂಗ್ಲ ಜಮೀರ್, ಅಪರ ನಿವಾಸಿ ಆಯುಕ್ತ ಆಕೃತಿ ಬನ್ಸಲ್ ಅಧಿಕಾರಿಗಳು, ಸಿಬ್ಬಂದಿ ಹಾಗೂ ಸಿಬ್ಬಂದಿ ಪರಿವಾರದವರು ಉಪಸ್ಥಿತರಿದ್ದರು. ಇದನ್ನೂ ಓದಿ: ಸರ್ಕಾರಿ ಶಾಲೆಗಳಿಗೆ ಉಚಿತ ವಿದ್ಯುತ್‌, ಕುಡಿಯುವ ನೀರು: ಸಿಎಂ ಘೋಷಣೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • 7 ವರ್ಷ ಕಳೆದರೂ ಉದ್ಘಾಟನೆ ಭಾಗ್ಯ ಕಾಣದ ಚಿಕ್ಕೋಡಿ ಆಸ್ಪತ್ರೆ – ಜನರ ಗೋಳು ಕೇಳೋರಿಲ್ಲ

    7 ವರ್ಷ ಕಳೆದರೂ ಉದ್ಘಾಟನೆ ಭಾಗ್ಯ ಕಾಣದ ಚಿಕ್ಕೋಡಿ ಆಸ್ಪತ್ರೆ – ಜನರ ಗೋಳು ಕೇಳೋರಿಲ್ಲ

    ಚಿಕ್ಕೋಡಿ: ಬೆಳಗಾವಿ (Belagavi) ಜಿಲ್ಲೆಯ ಗಡಿಭಾಗದಲ್ಲಿ ಜನರಿಗೆ ಸೂಕ್ತ ವೈದ್ಯಕೀಯ ಸೌಲಭ್ಯ ಸಿಗದೇ ನೆರೆಯ ಮಹಾರಾಷ್ಟ್ರದ ಮೀರಜ್ ಸಾಂಗಲಿಗೆ ಹೋಗಬೇಕಾದ ಸ್ಥಿತಿ ಎದುರಾಗಿದೆ. ಇದನ್ನ ತಪ್ಪಿಸುವ ಸಲುವಾಗಿ ಕಳೆದ 7 ವರ್ಷಗಳ ಹಿಂದೆ ಆಸ್ಪತ್ರೆಯೊಂದರ (Hospital) ಕಟ್ಟಡ ಕಾಮಗಾರಿಗೆ ಚಾಲನೆ ನೀಡಲಾಗಿತ್ತು. ಮಂದಗತಿಯಿಂದ ಸಾಗಿದ್ದ ಕಾಮಗಾರಿ ಸದ್ಯ ಬಹುತೇಕ ಪೂರ್ಣಗೊಂಡಿದೆ. ಆದರೆ ಉದ್ಘಾಟನೆ ಭಾಗ್ಯ ಕಂಡಿಲ್ಲ.

    ಬೆಳಗಾವಿ ಜಿಲ್ಲೆ ಚಿಕ್ಕೋಡಿಯ (Chikkodi) ಬಾಣಂತಿ ಕೋಡಿ ರಸ್ತೆಯಲ್ಲಿ ನಿರ್ಮಾಣವಾಗಿರುವ ಈ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಕಾಮಗಾರಿ ಆರಂಭವಾಗಿ 7 ವರ್ಷ ಕಳೆದಿದ್ದು, ಇತ್ತೀಚೆಗೆ ಬಹುತೇಕ ಪೂರ್ಣಗೊಂಡಿದೆ. ಆದ್ರೆ ಜನರು ಉದ್ಘಾಟನೆಗೆ ಇನ್ನೆಷ್ಟು ದಿನ ಕಾಯಬೇಕು ಅಂತ ಪ್ರಶ್ನೆ ಮಾಡುತ್ತಿದ್ದಾರೆ. ಇದನ್ನೂ ಓದಿ: ಸಿಎಂ ಭೇಟಿಯಾದ ಗುತ್ತಿಗೆದಾರ ಸಂತೋಷ್ ಪಾಟೀಲ್ ಕುಟುಂಬಸ್ಥರು – ಸಿಐಡಿ ತನಿಖೆಗೆ ಮನವಿ

    ಚಿಕ್ಕೋಡಿ ಉಪವಿಭಾಗದಲ್ಲಿ ಸೂಕ್ತ ಸರ್ಕಾರಿ ಆಸ್ಪತ್ರೆಗಳಿಲ್ಲದ (Hospitals) ಕಾರಣ ಜನರು ಮಹಾರಾಷ್ಟ್ರದ ಮೀರಜ್ ಸಾಂಗಲಿಯ ಖಾಸಗಿ ಆಸ್ಪತ್ರೆಗಳ ಮೊರೆ ಹೋಗುತ್ತಾರೆ. ಇದನ್ನ ತಪ್ಪಿಸುವ ನಿಟ್ಟಿನಲ್ಲಿ ಚಿಕ್ಕೋಡಿಯಲ್ಲಿ ಸುಸಜ್ಜಿತ ತಾಯಿ ಮತ್ತು ಮಕ್ಕಳ ಆಸ್ಪತ್ರೆ ನಿರ್ಮಾಣ ಮಾಡುವಂತೆ ಸಾಕಷ್ಟು ಆಗ್ರಹ ಕೇಳಿ ಬಂದಿತ್ತು. ಹಾಗಾಗಿ ವಿಧಾನಪರಿಷತ್ ಸದಸ್ಯ ಪ್ರಕಾಶ್ ಹುಕ್ಕೇರಿ ಅವರ ಸತತ ಪ್ರಯತ್ನದಿಂದ 100 ಹಾಸಿಗೆಗಳನ್ನೊಳಗೊಂಡ ಆಸ್ಪತ್ರೆ ನಿರ್ಮಾಣ ಮಾಡಲು ಅನುಮೋದನೆ ಸಿಕ್ಕಿತು. ಇದೀಗ 7 ವರ್ಷಗಳ ನಂತರ ಆಸ್ಪತ್ರೆ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದರೂ ಉದ್ಘಾಟನೆ ಭಾಗ್ಯ ಮಾತ್ರ ಕಂಡಿಲ್ಲ. ಇದರಿಂದ ಜನರು ಕಂಗಾಲಾಗಿದ್ದಾರೆ. ಕೆಲವರಂತೂ ಖಾಸಗಿ ಆಸ್ಪತ್ರೆಗಳಿಗೆ ಹಣ ಸುರಿದು ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದು, ಕುಟುಂಬ ನಿರ್ವಹಣೆಗೂ ಹೆಣಗಾಡುತ್ತಿದ್ದಾರೆ. ಹಾಗಾಗಿ ಶೀಘ್ರದಲ್ಲೇ ಆಸ್ಪತ್ರೆ ಉದ್ಘಾಟನೆ ಮಾಡುವಂತೆ ಒತ್ತಾಯಿಸಿದ್ದಾರೆ. ಇದನ್ನೂ ಓದಿ: ನಾಳೆ ಸಿಎಂ ಅಥಣಿ ಕ್ಷೇತ್ರ ಪ್ರವಾಸ – ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

    ಈ ಕುರಿತು ಮಾತನಾಡಿರುವ ಚಿಕ್ಕೋಡಿ ಸಾರ್ವಜನಿಕ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ.ಸಂತೋಷ್ ಕೊಣ್ಣೂರಿ, ಸಾರ್ವಜನಿಕ ಆಸ್ಪತ್ರೆ ಚಿಕ್ಕೋಡಿಯಿಂದ ಹೊಸದಾಗಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಕಟ್ಟಡ ಕಾಮಗಾರಿ 2015ರಿಂದ ಆರಂಭವಾಗಿದ್ದು ಈವರೆಗೂ ಪೂರ್ಣಗೊಂಡಿಲ್ಲ. ಕೋವಿಡ್ ಹಿನ್ನೆಲೆಯಲ್ಲಿ ವಿಳಂಬವಾಗಿತ್ತು. ಬಳಿಕ ಮತ್ತೆ ಕಟ್ಟಡ ಕಾಮಗಾರಿ ಶುರುವಾಯಿತು. ಇನ್ನೊಂದು ತಿಂಗಳಲ್ಲಿ ಆಸ್ಪತ್ರೆ ಉದ್ಘಾಟನೆ ಮಾಡುವ ಚಿಂತನೆ ಇದೆ. ಕಟ್ಟಡ ಕಾಮಗಾರಿ ಮುಗಿದಿದೆ. ಇಂಟಿರಿಯರ್ ವರ್ಕ್ ನಡೆದಿದೆ. ಈಗಾಗಲೇ 80% ವೈದ್ಯಕೀಯ ಉಪಕರಣಗಳು ಸಹ ಬಂದಿವೆ. ಆಸ್ಪತ್ರೆಗೆ ಬೇಕಾದಂತಹ ವೈದ್ಯಕೀಯ ಸಿಬ್ಬಂದಿ ಸಹ ನೇಮಕ ಮಾಡಿಕೊಳ್ಳಲಾಗಿದೆ. ಹೈಟೆಕ್ ಶಸ್ತ್ರಚಿಕಿತ್ಸಾ ಘಟಕ, ಲಿಫ್ಟ್ ಈ ಎರಡು ಕೆಲಸ ಆದರೆ, ಸಾರ್ವಜನಿಕ ಸೇವೆಗೆ ಆಸ್ಪತ್ರೆ ಮುಕ್ತಗೊಳ್ಳಲಿದೆ ಎಂದು ತಿಳಿಸಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಪ್ರಕಾಶ್ ಹುಕ್ಕೇರಿ ಭರ್ಜರಿ ಗೆಲುವು- ಕಾಂಗ್ರೆಸ್ ಕಾರ್ಯಕರ್ತರಿಂದ ಸಂಭ್ರಮಾಚರಣೆ

    ಪ್ರಕಾಶ್ ಹುಕ್ಕೇರಿ ಭರ್ಜರಿ ಗೆಲುವು- ಕಾಂಗ್ರೆಸ್ ಕಾರ್ಯಕರ್ತರಿಂದ ಸಂಭ್ರಮಾಚರಣೆ

    ಬೆಳಗಾವಿ: ವಾಯುವ್ಯ ಶಿಕ್ಷಕರ ಮತಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಕಾಶ್ ಹುಕ್ಕೇರಿ ಭರ್ಜರಿ ಗೆಲುವು ಸಾಧಿಸಿದ ಹಿನ್ನೆಲೆ ಅವರ ಅಭಿಮಾನಿಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು.

    ಬೆಳಗಾವಿ ನಗರದ ಜ್ಯೋತಿ ಕಾಲೇಜಿನ ಮುಂಭಾಗದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ, ಗುಲಾಬಿ ಬಣ್ಣ ಎರಚಿ ಸಂಭ್ರಮಿಸಿದರು. ಇದನ್ನೂ ಓದಿ: ರಾಷ್ಟ್ರಪತಿ ಚುನಾವಣೆಗೆ ಸ್ಪರ್ಧಿಸಲ್ಲ ಎಂದ ಶರದ್ ಪವಾರ್

    ತೀವ್ರ ಕುತೂಹಲ ಮೂಡಿಸಿದ್ದ ವಾಯುವ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಕೈ ಅಭ್ಯರ್ಥಿ ಮಾಜಿ ಸಚಿವ ಪ್ರಕಾಶ್ ಹುಕ್ಕೇರಿ ಗೆಲುವಿನ ನಗೆ ಬೀರಿದ್ದಾರೆ. ತಮ್ಮ ನೆಚ್ಚಿನ ನಾಯಕನ ಗೆಲುವು ಖಚಿತ ಆಗುತ್ತಿದ್ದಂತೆ ಬೆಳಗಾವಿಯ ಜ್ಯೋತಿ ಕಾಲೇಜಿನ ಹೊರಗಡೆ ಅಭಿಮಾನಿಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಪ್ರಕಾಶ್ ಹುಕ್ಕೇರಿ ಪರ ಘೋಷಣೆ ಕೂಗಿ ಸಂಭ್ರಮಿಸಿದರು. ಇದನ್ನೂ ಓದಿ: ಗೂಂಡಾಗಿರಿ ಕಾಂಗ್ರೆಸ್ ನಾಯಕರಿಗೆ ವಂಶಪಾರಂಪರ್ಯವಾಗಿ ಬಂದ ಉಡುಗೊರೆ- ಬಿಜೆಪಿ

    ಎರಡನೇ ಸುತ್ತಿನ ಮತಎಣಿಕೆಯಲ್ಲಿ ಗೆಲುವಿನ ಕೋಟಾ ತಲುಪಿರುವ ಪ್ರಕಾಶ್ ಹುಕ್ಕೇರಿ 20,000 ಮತಗಳ ಪೈಕಿ 10,520 ಮತ ಪಡೆದಿದ್ದಾರೆ. ಅದರಲ್ಲಿ ಬಿಜೆಪಿ ಅಭ್ಯರ್ಥಿ ಅರುಣ್ ಶಾಹಾಪುರ 6,008 ಮತಗಳನ್ನು ಪಡೆದಿದ್ದು, ಪ್ರಕಾಶ್ ಹುಕ್ಕೇರಿ 4,512 ಮತಗಳನ್ನು ಪಡೆಯುವ ಮೂಲಕ ಭರ್ಜರಿ ಜಯ ದಾಖಲಿಸಿದ್ದಾರೆ.

    Live Tv

  • ಸುನೀಲ್ ಸಂಕ್, ಪ್ರಕಾಶ್ ಹುಕ್ಕೇರಿ ಗೆಲ್ಲುವ ವಿಶ್ವಾಸವಿದೆ: ಲಕ್ಷ್ಮೀ ಹೆಬ್ಬಾಳ್ಕರ್ ಭರವಸೆ

    ಸುನೀಲ್ ಸಂಕ್, ಪ್ರಕಾಶ್ ಹುಕ್ಕೇರಿ ಗೆಲ್ಲುವ ವಿಶ್ವಾಸವಿದೆ: ಲಕ್ಷ್ಮೀ ಹೆಬ್ಬಾಳ್ಕರ್ ಭರವಸೆ

    ಬೆಳಗಾವಿ: ವಾಯುವ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಸುನೀಲ್ ಸಂಕ್ ಮತ್ತು ಶಿಕ್ಷಕರು ಪ್ರತಿನಿಧಿಯಾಗಿರುವ ಪ್ರಕಾಶ್ ಹುಕ್ಕೇರಿ ಗೆಲ್ಲುವ ವಿಶ್ವಾಸವಿದೆ ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಭರವಸೆ ವ್ಯಕ್ತಪಡಿಸಿದರು.

    ಬೆಳಗಾವಿ ನಗರದ ಮರಾಠಾ ಸಭಾಂಗಣದಲ್ಲಿ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಇದೊಂದು ಅತ್ಯಂತ ಸೂಕ್ಷ್ಮ, ಬುದ್ಧಿವಂತರ ಚುನಾವಣೆಯಾಗಿದೆ. ಸ್ವತಂತ್ರ ಸಿಕ್ಕ ನಂತರ ಶಿಕ್ಷಣ ಕ್ಷೇತ್ರದಲ್ಲಿ ಮುಂದುವರೆಯಲು, ಅಭಿವೃದ್ಧಿ ಕಾಣಲು ಕಾಂಗ್ರೆಸ್ ಸರ್ಕಾರ ರೂಪಿಸಿದ ಶಿಕ್ಷಣ ನೀತಿಗೆ ಕಾರಣವಾಗಿದೆ. ಶಿಕ್ಷಣ ಕ್ಷೇತ್ರದಲ್ಲಿ ಸಾಕಷ್ಟು ಕೊಡುಗೆ ನೀಡುವುದರ ಜೊತೆಗೆ ಕ್ರಾಂತಿಯನ್ನು ಮಾಡಿದೆ. ಸದ್ಯ ದೇಶ ಶಿಕ್ಷಣ ಕ್ಷೇತ್ರದಲ್ಲಿ ಇಷ್ಟೊಂದು ಮುಂದುವರೆಯಲು ಕಾಂಗ್ರೆಸ್ ಪಕ್ಷದ ನೀತಿ ಕಾರಣ ಎಂದರು. ಇದನ್ನೂ ಓದಿ: ಕ್ರಿಕೆಟ್ ಬ್ಯಾಟ್‍ನಿಂದ ಹೊಡೆದ ಪತ್ನಿ – ಕೋರ್ಟ್ ಮೊರೆ ಹೋದ ಪತಿ

    ಎಲ್ಲ ಕ್ಷೇತ್ರದಲ್ಲೂ ಅಪರಾ ಅನುಭವ ಹೊಂದಿರುವ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ. ಶಿಕ್ಷಕರು ಕ್ಷೇತ್ರದ ಅಭ್ಯರ್ಥಿ ಆಗಿರುವ ಪ್ರಕಾಶ್ ಹುಕ್ಕೇರಿ ಆಯ್ಕೆ ಮಾಡಲಾಗಿದ್ದು, ಅವರ ಅನುಭವದ ಉಪಯೋಗ ಮಾಡಿಕೊಳ್ಳಬೇಕಿದೆ. ಬೆಳಗಾವಿಯಲ್ಲಿ ಭೀಮ್ಸ್ ಕಾಲೇಜು ಸ್ಥಾಪನೆ ಸೇರಿದಂತೆ ಪ್ರಕಾಶ್ ಹುಕ್ಕೇರಿ ಜಿಲ್ಲೆಗೆ ಕೊಡುಗೆ ನೀಡಿದ್ದಾರೆ. ಅವರು ಮಾಡಿದ ಕೆಲಸಗಳು ನಮಗೆ ಆದರ್ಶವಾಗಿವೆ ಎಂದು ತಿಳಿಸಿದರು.

    ಇಳಿವಯಸ್ಸಿನಲ್ಲೂ ಕ್ಷೇತ್ರದಲ್ಲಿ ಓಡಾಟ ಮಾಡುವ ಮೂಲಕ ಅಭಿವೃದ್ಧಿ ಕಾರ್ಯವನ್ನು ಮಾಡ್ತಿದ್ದಾರೆ. ಹೀಗಾಗಿ ಪದವೀಧರರ ಕ್ಷೇತ್ರದ ಅಭ್ಯರ್ಥಿ ಸುನೀಲ್ ಸಂಕ್ ಮತ್ತು ಶಿಕ್ಷಕರು ಪ್ರತಿನಿಧಿ ಪ್ರಕಾಶ್ ಹುಕ್ಕೇರಿ ಗೆಲ್ಲಲಿದ್ದಾರೆ ಎಂದು ಭರವಸೆ ವ್ಯಕ್ತಪಡಿಸಿದರು. ಇದನ್ನೂ ಓದಿ: ರಶ್ಮಿಕಾ ಮಂದಣ್ಣ ಬೆಂಗಳೂರಿನಲ್ಲಿದ್ದರೆ, ಈ ದೇವಸ್ಥಾನಕ್ಕೆ ಭೇಟಿ ಪಕ್ಕಾ 

  • ವಿಧಾನಪರಿಷತ್ ಚುನಾವಣೆ- ವಾಯವ್ಯ ಶಿಕ್ಷಕರ ಕ್ಷೇತ್ರದಿಂದ ಪ್ರಕಾಶ್ ಹುಕ್ಕೇರಿ ಕಣಕ್ಕೆ

    ವಿಧಾನಪರಿಷತ್ ಚುನಾವಣೆ- ವಾಯವ್ಯ ಶಿಕ್ಷಕರ ಕ್ಷೇತ್ರದಿಂದ ಪ್ರಕಾಶ್ ಹುಕ್ಕೇರಿ ಕಣಕ್ಕೆ

    ಬೆಳಗಾವಿ: ಜೂನ್‍ನಲ್ಲಿ ನಡೆಯುವ ಶಿಕ್ಷಕರ ಕ್ಷೇತ್ರದ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಪಕ್ಷ ತನ್ನ ಅಭ್ಯರ್ಥಿಯನ್ನು ಪ್ರಕಟಿಸಿದೆ.

    ವಾಯವ್ಯ ಶಿಕ್ಷಕರ ಮತ ಕ್ಷೇತ್ರದ ಅಭ್ಯರ್ಥಿಯನ್ನಾಗಿ ಪ್ರಕಾಶ್ ಹುಕ್ಕೇರಿಯವರನ್ನು ಕಾಂಗ್ರೆಸ್ ಆಯ್ಕೆ ಮಾಡಿದೆ. ಹುಕ್ಕೇರಿಯವರು ಮಾಜಿ ಸಚಿವ ಹಾಗೂ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಮಾಜಿ ಸಂಸದರಾಗಿದ್ದಾರೆ. ಇದನ್ನೂ ಓದಿ: ಧ್ವಂಸಗೊಂಡ ಅಪ್ಪನ ಅಂಗಡಿಯಲ್ಲಿ ಕಾಯಿನ್ ಸಂಗ್ರಹಿಸುತ್ತಿದ್ದ ಬಾಲಕ – ಫೋಟೋ ವೈರಲ್

    ಬೆಳಗಾವಿ, ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲೆಗಳನ್ನು ಒಳಗೊಂಡ ವಾಯವ್ಯ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿಯು ಈಗಾಗಲೇ ಕ್ಷೇತ್ರದ ಹಾಲಿ ಸದಸ್ಯ ಅರುಣ್ ಶಹಾಪುರ ಅವರಿಗೆ ಟಿಕೆಟ್ ನೀಡಿದೆ.

  • ಜೊಲ್ಲೆ ದಂಪತಿ ವಿರುದ್ಧ ಹರಿಹಾಯ್ದ ಪ್ರಕಾಶ್ ಹುಕ್ಕೇರಿ

    ಜೊಲ್ಲೆ ದಂಪತಿ ವಿರುದ್ಧ ಹರಿಹಾಯ್ದ ಪ್ರಕಾಶ್ ಹುಕ್ಕೇರಿ

    ಬೆಳಗಾವಿ: ಚಿಕ್ಕೋಡಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಹಾಗೂ ಕರ್ನಾಟಕದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಶಶಿಕಲಾ ಜೊಲ್ಲೆ ವಿರುದ್ಧ ಮಾಜಿ ಸಂಸದ ಪ್ರಕಾಶ್ ಹುಕ್ಕೇರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಯಕ್ಸಂಬಾ ಪಟ್ಟಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಂಸದ ಅಣ್ಣಾಸಾಹೇಬ ಜೊಲ್ಲೆ ಚುನಾವಣೆಯಲ್ಲಿ ಎಲ್ಲಿಯೂ ಸಹ ಪ್ರಚಾರದಲ್ಲಿ ಭಾಗಿಯಾಗಿಲ್ಲ. ಕೇವಲ ಯಕ್ಸಂಬಾ ಹಾಗೂ ಬೋರಗಾಂವ ಪಟ್ಟಣ ಪಂಚಾಯ್ತಿಗೆ ಮಾತ್ರ ಒತ್ತು ನೀಡಿದ್ದಾರೆ. ಆದರೂ ಎರಡು ಕ್ಷೇತ್ರಗಳಲ್ಲಿ ಬಿಜೆಪಿ ಸೋತಿರುವುದು ದುರ್ದೈವ. ಬೋರಗಾಂವ ಪಟ್ಟಣ ಪಂಚಾಯ್ತಿಯಲ್ಲಿ ಒಂದು ಸ್ಥಾನ ಆಯ್ಕೆಯಾಗಿಲ್ಲ. ಯಕ್ಸಂಬಾ ಪಟ್ಟಣ ಪಂಚಾಯ್ತಿಯಲ್ಲಿ ಕೇವಲ ಒಬ್ಬರು ಬಿಜೆಪಿಯಿಂದ ಆಯ್ಕೆಯಾಗಿದ್ದಾರೆ ಎಂದು ಸಿಡಿದರು. ಇದನ್ನೂ ಓದಿ: ನಾಳೆಯ ಕರ್ನಾಟಕ ಬಂದ್ ವಾಪಸ್

    ಸಂಸದ ಹಾಗೂ ಸಚಿವೆ ತಮ್ಮ ಕಾರ್ಯ ವೈಖರಿ ಬಗ್ಗೆ ಚಿಂತನೆ ಮಾಡಬೇಕು. ಅವರ ಹೆಸರು ತೆಗೆದುಕೊಳ್ಳಲು ನನಗೆ ಮರ್ಯಾದೆ ಅನಿಸುವುದಿಲ್ಲ. ಜೊಲ್ಲೆ ದಂಪತಿ ಕ್ಷೇತ್ರದ ಜನರಿಂದ ವಿಶ್ವಾಸ ಕಳೆದುಕೊಂಡಿದ್ದಾರೆ ಎಂದು ಪರೋಕ್ಷವಾಗಿ ಟಾಂಗ್ ಕೊಟ್ಟಿದ್ದಾರೆ. ಇದನ್ನೂ ಓದಿ: ಜನವರಿ 1 ರಿಂದ ಜಿಎಸ್‍ಟಿ ನಿಯಮಗಳ ಬದಲಾವಣೆ – ಹೀಗಿದೆ ಮುಖ್ಯ ಬೆಲೆ ಏರಿಕೆಗಳ ಪಟ್ಟಿ

  • ಸುರೇಶ್ ಅಂಗಡಿ ಪತ್ನಿ ಸ್ಪರ್ಧೆಗೆ ಬೆಂಬಲ ನೀಡೋ ಬದಲು, ಅವಿರೋಧ ಆಯ್ಕೆಗೆ ಶ್ರಮಿಸಲಿ: ಕತ್ತಿ

    ಸುರೇಶ್ ಅಂಗಡಿ ಪತ್ನಿ ಸ್ಪರ್ಧೆಗೆ ಬೆಂಬಲ ನೀಡೋ ಬದಲು, ಅವಿರೋಧ ಆಯ್ಕೆಗೆ ಶ್ರಮಿಸಲಿ: ಕತ್ತಿ

    – ಪ್ರಕಾಶ್ ಹುಕ್ಕೇರಿ ಹೇಳಿಕೆಗೆ ಉಮೇಶ್ ಕತ್ತಿ ಟಾಂಗ್

    ಚಿಕ್ಕೋಡಿ: ಬೆಳಗಾವಿ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಪಕ್ಷಕ್ಕೆ ಬೆಂಬಲ ನೀಡುವುದಾಗಿ ಹೇಳಿದ್ದ ಕಾಂಗ್ರೆಸ್ ಮುಖಂಡ ಪ್ರಕಾಶ್ ಹುಕ್ಕೇರಿ ಅವರಿಗೆ ಹುಕ್ಕೇರಿ ಮತಕ್ಷೇತ್ರದ ಬಿಜೆಪಿ ಶಾಸಕ ಉಮೇಶ್ ಕತ್ತಿ ಟಾಂಗ್ ನೀಡಿದ್ದಾರೆ.

    ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿ ಗ್ರಾಮದಲ್ಲಿ ಮಾತನಾಡಿದ ಶಾಸಕ ಕತ್ತಿ, ಪ್ರಕಾಶ್ ಹುಕ್ಕೇರಿ ಬಿಜೆಪಿ ಪಕ್ಷಕ್ಕೆ ಬೆಂಬಲ ನೀಡುವ ಬದಲು ಬೆಳಗಾವಿ ಲೋಕಸಭೆಗೆ ದಿವಂಗತ ಸುರೇಶ ಅಂಗಡಿ ಅವರ ಪತ್ನಿಯ ಅವಿರೋಧ ಆಯ್ಕೆಗೆ ಶ್ರಮಿಸಬೇಕಿದೆ. ಕೂಡಲೇ ಕಾಂಗ್ರೆಸ್ ಹೈ ಕಮಾಂಡ್ ಜೊತೆಗೆ ಪ್ರಕಾಶ್ ಹುಕ್ಕೇರಿ ಚರ್ಚಿಸಿ ಬೆಳಗಾವಿ ಲೋಕಸಭೆಗೆ ಅಭ್ಯರ್ಥಿಯನ್ನ ಹಾಕದಂತೆ ಮನವಿ ಮಾಡಲಿ ಎಂದು ಹೇಳಿದರು.

    ಮಾಜಿ ಕಾಂಗ್ರೆಸ್ ಸಂಸದ ಪ್ರಕಾಶ್ ಹುಕ್ಕೇರಿ ಹೇಳಿಕೆಯಿಂದ ನನಗೆ ಸಂತೋಷವಾಗಿದೆ. ದಿವಂಗತ ಕೇಂದ್ರ ಸಚಿವ ಸುರೇಶ ಅಂಗಡಿ ಅವರ ಪತ್ನಿಯನ್ನ ಆಯ್ಕೆ ಮಾಡಿ ಎಲ್ಲರೂ ಸೇರಿ ಹೊಸ ಇತಿಹಾಸ ಸೃಷ್ಟಿಸೋಣ. ನಾವು ಕೂಡ ಸುರೇಶ ಅಂಗಡಿ ಪತ್ನಿ ಅವರಿಗೆ ಟಿಕೆಟ್ ನೀಡುವಂತೆ ಮನವಿ ಮಾಡುತ್ತೇವೆ. ಬೆಳಗಾವಿ ಲೋಕಸಭೆಯಲ್ಲಿ ಕಾಂಗ್ರೆಸ್ ಟಿಕೆಟ್ ನೀಡದಂತೆ ಪ್ರಕಾಶ ಹುಕ್ಕೇರಿ ನೋಡಿಕೊಳ್ಳಲಿ. ಬೆಂಗಳೂರು ಹಾಗೂ ದೆಹಲಿಯ ಹೈ ಕಮಾಂಡ್ ಜೊತೆ ಚರ್ಚಿಸಿ ಆದಷ್ಟು ಬೇಗ ನಿರ್ಣಯ ಕೈಗೊಳ್ಳಲು ಉಮೇಶ್ ಕತ್ತಿ ಒತ್ತಾಯಿಸಿದರು.

    ಪ್ರಕಾಶ ಹುಕ್ಕೇರಿ ಬಿಜೆಪಿ ಪಕ್ಷಕ್ಕೆ ಬಂದರೆ ಸ್ವಾಗತ ಮಾಡುತ್ತೇನೆ ಎಂದು ಇದೇ ಸಂದರ್ಭದಲ್ಲಿ ಉಮೇಶ್ ಕತ್ತಿ ಹೇಳಿದರು. ಸುರೇಶ್ ಅಂಗಡಿ ಪತ್ನಿಗೆ ಟಿಕೆಟ್ ನೀಡಿದರೆ ಬೆಳಗಾವಿ ಲೋಕಸಭೆ ಕ್ಷೇತ್ರಕ್ಕೆ ನಾನೇ ಹೋಗಿ ಪ್ರಚಾರ ಮಾಡುತ್ತೇನೆ ಎಂದು ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಹಾಗೂ ಮಾಜಿ ಸಂಸದ ಪ್ರಕಾಶ್ ಹುಕ್ಕೇರಿ ಇತ್ತಿಚೇಗೆ ಹೇಳಿಕೆ ನೀಡಿದ್ದರು.

  • ರಾಜು ಕಾಗೆ ಕಾಂಗ್ರೆಸ್ ಸೇರ್ಪಡೆ – ಚಿಕ್ಕೋಡಿಯಲ್ಲಿ ಕೈ ಅಸಮಾಧಾನ ಸ್ಫೋಟ

    ರಾಜು ಕಾಗೆ ಕಾಂಗ್ರೆಸ್ ಸೇರ್ಪಡೆ – ಚಿಕ್ಕೋಡಿಯಲ್ಲಿ ಕೈ ಅಸಮಾಧಾನ ಸ್ಫೋಟ

    ಚಿಕ್ಕೋಡಿ: ಬಿಜೆಪಿ ನಾಯಕ ರಾಜು ಕಾಗೆ ಕಾಂಗ್ರೆಸ್ ಸೇರ್ಪಡೆ ವಿಚಾರ ತಿಳಿಯುತ್ತಿದ್ದಂತೆ ಚಿಕ್ಕೋಡಿಯ ಕಾಂಗ್ರೆಸ್‍ನಲ್ಲಿ ಅಸಮಾಧಾನ ಸ್ಫೋಟಗೊಂಡಿದೆ.

    ಇಂದು ಪಬ್ಲಿಕ್ ಟಿವಿ ಜೊತೆ ಮಾತನಾಡಿದ್ದ ರಾಜು ಕಾಗೆ, ನನಗೆ ಬಿಜೆಪಿಯಲ್ಲಿ ಸಾಕಷ್ಟು ಅವಮಾನಗಳಾಗಿವೆ. ನನಗೆ ಹೇಳದೆ ನನ್ನ ಕ್ಷೇತ್ರದಲ್ಲಿ ಅನರ್ಹ ಶಾಸಕರಿಗೆ ಟಿಕೆಟ್ ನೀಡುತ್ತಿರುವುದು ನೋವಾಗಿದೆ. ಆದ್ದರಿಂದ ನಾನು ಬುಧವಾರ ಕಾಂಗ್ರೆಸ್ ಸೇರ್ಪಡೆ ಆಗುತ್ತಿದ್ದೇನೆ ಮತ್ತು 18 ರಂದು ಕಾಗವಾಡ ಕ್ಷೇತ್ರದಿಂದ ಕೈ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುತ್ತೇನೆ ಎಂದು ಹೇಳಿದ್ದರು.

    ರಾಜು ಕಾಗೆ ಕಾಂಗ್ರೆಸ್ ಸೇರ್ಪಡೆಯಾಗುವ ಮುಹೂರ್ತ ಫಿಕ್ಸ್ ಆದ ಬೆನ್ನಲ್ಲೇ ಚಿಕ್ಕೋಡಿ ಕಾಂಗ್ರೆಸ್ಸಿನಲ್ಲಿ ಅಸಮಾಧಾನ ಸ್ಫೋಟಗೊಂಡಿದೆ. ಕಾಗವಾಡ ಮತಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿರುವ ಪ್ರಕಾಶ ಹುಕ್ಕೇರಿ ಟಿಕೆಟ್ ಕೈ ತಪ್ಪಿತು ಎನ್ನುವ ಅಸಮಾಧಾನದಿಂದ ಅವರು ಹಾಗೂ ಅವರ ಪುತ್ರ ಶಾಸಕ ಗಣೇಶ ಹುಕ್ಕೇರಿ ಇಂದು ಚಿಕ್ಕೋಡಿಯಲ್ಲಿ ಕಾಂಗ್ರೆಸ್ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿರಲಿಲ್ಲ.

    ರಾಜು ಕಾಗೆ ಕಾಂಗ್ರೆಸ್ ಸೇರ್ಪಡೆ ವಿಚಾರ ನನಗೆ ಗೊತ್ತೇ ಇಲ್ಲ ಎಂದು ಚಿಕ್ಕೋಡಿ ಕಾಂಗ್ರೆಸ್ ಅಧ್ಯಕ್ಷರು ಹೇಳಿದರೆ ಮಾಜಿ ಸಚಿವ ವೀರಕುಮಾರ ಪಾಟೀಲ್ ಉಪಚುನಾವಣೆಯಲ್ಲಿ ಮೂಲ ಕಾಂಗ್ರೆಸ್ಸಿಗರಿಗೆ ಟಿಕೆಟ್ ನೀಡುವುದು ಒಳ್ಳೆಯದು ಎಂದು ಹೇಳಿದ್ದಾರೆ.

    ಕೇಂದ್ರ ಸರ್ಕಾರದ ಆರ್ಥಿಕ ಹಾಗೂ ಜನ ವಿರೋಧಿ ನೀತಿಗಳನ್ನು ಖಂಡಿಸಿ ಚಿಕ್ಕೋಡಿ ಪಟ್ಟಣದಲ್ಲಿ ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಘಟಕದ ವತಿಯಿಂದ ಪ್ರತಿಭಟನೆ ಮಾಡಲಾಯಿತು. ಸರ್ಕಾರಿ ಪ್ರವಾಸಿ ಮಂದಿರದಲ್ಲಿ ರಾಜಕೀಯ ಸಭೆ ನಿಷೇಧವಿದ್ದರೂ ಚಿಕ್ಕೋಡಿ ಪ್ರವಾಸಿ ಮಂದಿರದಲ್ಲೇ ಕೈ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಬಳಿಕ ತಹಶೀಲ್ದಾರ್ ಕಚೇರಿಗೆ ತೆರಳಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ತಹಶೀಲ್ದಾರ್ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.

  • ಪ್ರಕಾಶ್ ಹುಕ್ಕೇರಿ ಗೆಲುವಿಗೆ ತನ್ನ ಮೀಸೆ ಪಣಕ್ಕಿಟ್ಟ ಅಭಿಮಾನಿ!

    ಪ್ರಕಾಶ್ ಹುಕ್ಕೇರಿ ಗೆಲುವಿಗೆ ತನ್ನ ಮೀಸೆ ಪಣಕ್ಕಿಟ್ಟ ಅಭಿಮಾನಿ!

    ಬೆಳಗಾವಿ(ಚಿಕ್ಕೋಡಿ): ಲೋಕಸಭಾ ಚುನಾವಣೆಯ ಫಲಿತಾಂಶ ಗುರುವಾರ ಹೊರಬೀಳಲಿದೆ. ಈ ಹಿನ್ನೆಲೆ ಕಾಂಗ್ರೆಸ್ ಅಭ್ಯರ್ಥಿ ಪ್ರಕಾಶ್ ಹುಕ್ಕೇರಿ ಗೆಲುವಿಗೆ ಅಭಿಮಾನಿಯೊಬ್ಬರು ತಮ್ಮ ಮೀಸೆಯನ್ನೇ ಪಣಕ್ಕಿಟ್ಟಿದ್ದಾರೆ.

    ಹೌದು. ಚುನಾವಣೆ ವೇಳೆ ಹಣ, ಆಸ್ತಿ ಬೆಟ್ಟಿಂಗ್ ಕಟ್ಟೋದನ್ನ ನೋಡಿದ್ದೀವಿ ಇದೇನಪ್ಪ ಮೀಸೆ ಬೆಟ್ಟಿಂಗ್ ಎಂದು ಆಶ್ಚರ್ಯವಾಗಬಹುದು. ಆದರೆ ಇದು ನಿಜ. ಚಿಕ್ಕೋಡಿ ಮಾಜಿ ಪುರಸಭೆ ಸದಸ್ಯ ರವಿ ಮಾಳಿ ಕಳೆದ 20 ವರ್ಷಗಳಿಂದ ಪ್ರೀತಿಯಿಂದ ಬೆಳೆಸಿರುವ ಮೀಸೆ-ಗಡ್ಡ ಪಣಕ್ಕೆ ಇಟ್ಟಿದ್ದಾರೆ. ಪ್ರಕಾಶ್ ಹುಕ್ಕೇರಿ ಅವರು ಈ ಭಾರಿ ಲೋಕಸಮರದಲ್ಲಿ ಗೆಲ್ಲದಿದ್ದರೆ ಅರ್ಧ ಮೀಸೆ ಅರ್ಧ ಗಡ್ಡ ತೆಗೆಯುತ್ತೇನೆ. ಹಾಗೆಯೇ ಚಿಕ್ಕೋಡಿಯಲ್ಲಿ ಪಟ್ಟಣದಲ್ಲಿ ಓಡಾಡುತ್ತೇನೆ ಎಂದು ಚಾಲೆಂಜ್ ಕಟ್ಟಿದ್ದಾರೆ.

    ಈ ಬಗ್ಗೆ ರವಿ ಅವರನ್ನ ಕೇಳಿದರೆ, ಚಿಕ್ಕೋಡಿಯಲ್ಲಿ ಪ್ರಕಾಶ ಹುಕ್ಕೇರಿ ಗೆದ್ದೇ ಗೆಲ್ಲುತ್ತಾರೆ ಎಂಬ ವಿಶ್ವಾಸವಿದೆ. ಬಿಜೆಪಿ ಅಭ್ಯರ್ಥಿ ಅಣ್ಣಾಸಾಹೇಬ ಜೊಲ್ಲೆ ಯಾವುದೇ ಕಾರಣಕ್ಕೂ ಗೆಲ್ಲುವದಿಲ್ಲ ಎನ್ನುವುದು ಗೊತ್ತು. ಆದ್ದರಿಂದ ನಮ್ಮ ನಾಯಕರಿಗಾಗಿ ಈ ಮೀಸೆ ಬೆಟ್ಟಿಂಗ್ ಕಟ್ಟಿದ್ದೇನೆ ಎಂದು ಹೇಳಿದ್ದಾರೆ.

    ನಾಳೆ ಪ್ರಕಟವಾಗುವ ಲೋಕಸಭಾ ಚುನಾವಣೆಯ ಫಲಿತಾಂಶಕ್ಕೆ ಇಡೀ ದೇಶವೇ ಕಾತುರದಿಂದ ಕಾಯುತ್ತಿದೆ. ಈ ನಡುವೆ ಯಾವ ಕ್ಷೇತ್ರದಲ್ಲಿ ಯಾವ ಅಭ್ಯರ್ಥಿ ಗೆಲ್ಲುತ್ತಾರೆ ಎಂಬ ಬೆಟ್ಟಿಂಗ್ ಕೂಡ ಭರ್ಜರಿಯಾಗಿ ನಡೆಯುತ್ತಿದೆ. ಈ ಮಧ್ಯೆ ಈ ಮೀಸೆ ಬೆಟ್ಟಿಂಗ್ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಫಲಿತಾಂಶದ ಕುತೂಹಲವನ್ನು ಮತ್ತಷ್ಟು ಹೆಚ್ಚಿಸಿದೆ.

  • ಪ್ರಕಾಶ್ ಹುಕ್ಕೇರಿ ಗೆದ್ದ ಬಳಿಕ ಚಪ್ಪಲಿ ಹಾಕ್ತೀನಿ – ಅಭಿಮಾನಿಯಿಂದ ವಿಶಿಷ್ಟ ಹರಕೆ

    ಪ್ರಕಾಶ್ ಹುಕ್ಕೇರಿ ಗೆದ್ದ ಬಳಿಕ ಚಪ್ಪಲಿ ಹಾಕ್ತೀನಿ – ಅಭಿಮಾನಿಯಿಂದ ವಿಶಿಷ್ಟ ಹರಕೆ

    ಬೆಳಗಾವಿ/ಚಿಕ್ಕೋಡಿ: ಲೋಕಸಭಾ ಚುನಾವಣಾ ಫಲಿತಾಂಶಕ್ಕೆ ಇನ್ನೂ ಕೆಲವೇ ದಿನಗಳು ಬಾಕಿ ಉಳಿದಿವೆ. ಆದರೆ ಇಲ್ಲೊಬ್ಬ ಕಾಂಗ್ರೆಸ್ ಅಭಿಮಾನಿ ತಮ್ಮ ಅಭ್ಯರ್ಥಿ ಗೆದ್ದ ಮೇಲೆಯೇ ಚಪ್ಪಲಿ ಹಾಕುತ್ತೇನೆ ಎಂದು ಹರಕೆ ಹೊತ್ತಿದ್ದಾರೆ.

    ಹುಕ್ಕೇರಿ ತಾಲೂಕಿನ ಗುಡಸ ಗ್ರಾಮದ ನಿವಾಸಿ ಭೀಮಗೌಡ ಬಸಗೌಡ ಅಮ್ಮಣಗಿ ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಕಾಶ್ ಹುಕ್ಕೇರಿ ಗೆದ್ದ ಮೇಲೆಯೇ ಚಪ್ಪಲಿ ಹಾಕುತ್ತೇನೆ ಎಂದು ಹರಕೆ ಹೊತ್ತಿದ್ದಾರೆ.

    ಪ್ರಕಾಶ್ ಹುಕ್ಕೇರಿ ಗೆಲುವಿಗಾಗಿ ಅಕ್ಕಿವಾಟ ಮಲ್ಲಯ್ಯ (ಈಶ್ವರ) ಹರಕೆ ಹೊತ್ತಿದ್ದಾರೆ. ಚುನಾವಣಾ ಮುಗಿದ ದಿನದಿಂದಲೇ ಭೀಮಗೌಡ ಹರಕೆ ಹೊತ್ತಿದ್ದು, ಬಿರು ಬಿಸಿಲಿನಲ್ಲೂ ಚಪ್ಪಲಿ ಇಲ್ಲದೇ ನಡೆದಾಡುತ್ತಿದ್ದಾರೆ.

    2014ರ ಲೋಕಸಭಾ ಚುನಾವಣೆಯಲ್ಲೂ ಇವರು ಪ್ರಕಾಶ್ ಹುಕ್ಕೇರಿ ಅವರ ಗೆಲುವಿಗಾಗಿ ಇದೇ ರೀತಿಯ ಹರಕೆ ಹೊತ್ತಿದ್ದರು. ಈ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ವಿರುದ್ಧ ಪ್ರಕಾಶ್ ಹುಕ್ಕೇರಿ 3,003 ಮತಗಳ ಅಂತರದಿಂದ ಗೆದ್ದಿದ್ದರು. ಈಗ ಮತ್ತೆ ಹರಕೆ ಹೊತ್ತಿದ್ದು, ಅಕ್ಕಿವಾಟ ಮಲ್ಲಯ್ಯ ಮತ್ತೆ ಪ್ರಕಾಶ್ ಹುಕ್ಕೇರಿ ಅವರನ್ನ ಗೆಲ್ಲಿಸುತ್ತಾನೆ ಎನ್ನುವ ವಿಶ್ವಾಸವನ್ನು ಭೀಮಗೌಡ ವ್ಯಕ್ತಪಡಿಸಿದ್ದಾರೆ.