Tag: ಪ್ರಕಾಶ್ ಹುಕ್ಕೇರಿ

  • ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಫ್ಯಾಮಿಲಿ ವಾರ್

    ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಫ್ಯಾಮಿಲಿ ವಾರ್

    ಚಿಕ್ಕೋಡಿ/ಬೆಳಗಾವಿ: ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಸದ್ಯಕ್ಕೆ ಫ್ಯಾಮಿಲಿ ವಾರ್ ಪ್ರಾರಂಭವಾಗಿದೆ. ಒಂದು ಕಡೆ ಅಪ್ಪ ಗೆಲ್ಲಬೇಕು ಅಂತ ಕಾಂಗ್ರೆಸ್ ಗಣೇಶ್ ಮತಯಾಚನೆ ಮಾಡುತ್ತಿದ್ದರೆ, ಇನ್ನೊಂದು ಕಡೆ ಪತಿ ಗೆಲ್ಲಬೇಕು ಎಂದು ಶಶಿಕಲಾ ಜೊಲ್ಲೆ ಪ್ರಚಾರ ಮಾಡುತ್ತಿದ್ದಾರೆ.

    ಬಿಜೆಪಿ ಅಭ್ಯರ್ಥಿ ಅಣ್ಣಾಸಾಹೇಬ ಜೊಲ್ಲೆ ಮತ್ತು ಹಾಲಿ ಸಂಸದ ಪ್ರಕಾಶ್ ಹುಕ್ಕೇರಿ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದಾರೆ. ರಾಜ್ಯದಲ್ಲಿ ಚಿಕ್ಕೋಡಿ ಮತಕ್ಷೇತ್ರ ಗಮನ ಸೆಳೆಯುತ್ತಿದೆ. ಯಾಕೆಂದರೆ ಇಲ್ಲಿರುವ ಬಿಜೆಪಿ ಮತ್ತು ಕಾಂಗ್ರೆಸ್ ಅಭ್ಯರ್ಥಿಯ ಹಿಂದೆ ನಿಂತು ಮನೆಯಲ್ಲಿನ ಎಂಎಲ್‍ಎಗಳು ಪ್ರಚಾರ ಕಾರ್ಯ ಮಾಡುತ್ತಿದ್ದಾರೆ. ಸಂಸದ ಪ್ರಕಾಶ್ ಹುಕ್ಕೇರಿ ಪರವಾಗಿ ಮಗ ಗಣೇಶ್ ಹುಕ್ಕೇರಿ ಗ್ರಾಮ ಗ್ರಾಮಗಳನ್ನು ಸುತ್ತಿ ತಂದೆಯ ಪರವಾಗಿ ಪ್ರಚಾರ ಮಾಡುತ್ತಿದ್ದಾರೆ. ಇತ್ತ ಬಿಜೆಪಿಯ ಅಭ್ಯರ್ಥಿ ಅಣ್ಣಾಸಾಹೇಬ ಜೊಲ್ಲೆ ಪರ ಪತ್ನಿ ಶಶಿಕಲಾ ಜೊಲ್ಲೆಯವರು ಕೂಡ ಪ್ರಚಾರ ಕಾರ್ಯ ಪ್ರಾರಂಭಿಸಿದ್ದಾರೆ.

    ಈ ಬಗ್ಗೆ ಶಾಸಕಿ ಶಶಿಕಲಾ ಜೊಲ್ಲೆ ಅವರಿಗೆ ಕೇಳಿದರೆ, ನನಗೆ ಹೆಗಲಿಗೆ ಹೆಗಲು ಕೊಟ್ಟು ಬೆಳೆಸಿದ ಪತಿ ಅಣ್ಣಾಸಾಹೇಬ ಜೊಲ್ಲೆ ಅವರ ಪರವಾಗಿ ಪ್ರಚಾರ ನಡೆಸಿದ್ದೇನೆ. ನಾನು ಹೆಂಡತಿಯಾಗಿಯೂ ಮತ್ತು ಪಕ್ಷದ ಒಬ್ಬ ಶಾಸಕಿಯಾಗಿಯೂ ಕೆಲಸ ಮಾಡುತ್ತಿದ್ದೇನೆ. ಅವರಿಗೆ ಸದಾ ಬೆನ್ನೆಲುಬಾಗಿ ನಿಲ್ಲುತ್ತೇನೆ ಎಂದು ಹೆಮ್ಮೆಯಿಂದ ಹೇಳಿಕೊಳ್ಳುತ್ತಾರೆ. ಇತ್ತ ನಮ್ಮ ತಂದೆಯ ಹೆಗಲಿಗೆ ಹೆಗಲು ಕೊಟ್ಟು ದುಡಿದು ಅವರನ್ನ ಆರಿಸಿ ಮತ್ತೆ ಪಾರ್ಲಿಮೆಂಟ್‍ಗೆ ಕಳುಹಿಸುತ್ತೀನಿ ಎಂದು ಗಣೇಶ್ ಹುಕ್ಕೇರಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

    ಇನ್ನು ಕಳೆದ ಬಾರಿ ನಡೆದ ವಿಧಾನಸಭೆ ಚುಣಾವಣೆಯಲ್ಲಿಯೂ ಸಹ ಬೆಳಗಾವಿ ಜಿಲ್ಲೆಯ ಈ ಪ್ರತಿಷ್ಠಿತ ಎರಡು ಮನೆತನಗಳು ಎದುರಾಗಿದ್ದವು. ಆಗ ಶಾಸಕ ಪ್ರಕಾಶ್ ಹುಕ್ಕೇರಿ ವಿರುದ್ಧ ಅಣ್ಣಾಸಾಹೇಬ ಜೊಲ್ಲೆ ಎದುರಾಳಿಯಾಗಿ ಸ್ಪರ್ಧಿಸಿದ್ದರು. ಈಗ ಲೋಕಸಭೆ ಚುಣಾವಣೆಯಲ್ಲೂ ಸಹ ಅದೇ ರೀತಿಯ ವಾತಾವರಣ ಮುಂದುವರೆದಿದ್ದು, ಗಣೇಶ್ ಹುಕ್ಕೇರಿಯವರ ತಂದೆ ಸಂಸದ ಪ್ರಕಾಶ್ ಹುಕ್ಕೇರಿ ವಿರುದ್ಧ ಅಣ್ಣಾಸಾಹೇಬ ಜೊಲ್ಲೆ ಸೆಣಸಲು ರೆಡಿಯಾಗಿದ್ದಾರೆ.

  • ಹೊಸ ರಾಜಕೀಯ ದಾಳ ಉರುಳಿಸಲು ಮುಂದಾದ ಮಾಜಿ ಸಿಎಂ..!

    ಹೊಸ ರಾಜಕೀಯ ದಾಳ ಉರುಳಿಸಲು ಮುಂದಾದ ಮಾಜಿ ಸಿಎಂ..!

    ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಸಭಾ ಚುನಾವಣೆಯಲ್ಲಿ ಹೊಸ ರಾಜಕೀಯ ದಾಳ ಉರುಳಿಸಲು ಮುಂದಾಗಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ.

    ಸಿದ್ದರಾಮಯ್ಯ ಅವರು ತಮ್ಮ ಶಿಷ್ಯ ಸತೀಶ್ ಜಾರಕಿಹೊಳಿ ಮೂಲಕ ಹೊಸ ರಾಜಕೀಯ ದಾಳ ಉರುಳಿಸಲು ಮುಂದಾಗಿದ್ದು, ಉಮೇಶ್ ಕತ್ತಿ ಸಹೋದರ ರಮೇಶ್ ಕತ್ತಿ ಸೆಳೆಯಲು ಸತೀಶ್ ಜಾರಕಿಹೊಳಿಗೆ ಜವಾಬ್ದಾರಿಯನ್ನು ಕೊಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ.

    ಬೆಳಗಾವಿಯಲ್ಲಿ ಎರಡು ಲೋಕಸಭೆ ಕ್ಷೇತ್ರಗಳಿವೆ. ಆದರೆ ಈ ಬಾರಿ ಚಿಕ್ಕೋಡಿಯಿಂದ ಲೋಕಸಭಾ ಚುನಾವಣೆಗೆ ಬಿಜೆಪಿಯಿಂದ ಉಮೇಶ್ ಕತ್ತಿ ಸಹೋದರ ರಮೇಶ್ ಕತ್ತಿಗೆ ಟಿಕೆಟ್ ತಪ್ಪಿದೆ. ಹೀಗಾಗಿ ಕತ್ತಿ ಕುಟುಂಬವೂ ಕೂಡ ಬಿಜೆಪಿಯೊಂದಿಗೆ ಅಸಮಾಧಾನ ಹೊಂದಿದೆ. ಈ ಸಂದರ್ಭವನ್ನು ದಾಳವಾಗಿ ಉರುಳಿಸಿಕೊಂಡು ಅವರನ್ನು ಕಾಂಗ್ರೆಸ್ಸಿಗೆ ಏಕೆ ಕರೆತರಬಾರದು ಎಂಬ ಚರ್ಚೆ ಕಾಂಗ್ರೆಸ್ ವಲಯದಲ್ಲಿ ಶುರುವಾಗಿದೆ.

    ಈಗಾಗಲೇ ಬೆಳಗಾವಿಯಲ್ಲಿ ವಿರುಪಾಕ್ಷ ಸಾದನವರ್ ಹಾಗೂ ಚಿಕ್ಕೋಡಿಗೆ ಪ್ರಕಾಶ್ ಹುಕ್ಕೇರಿಗೆ ಬಿ- ಫಾರಂ ನೀಡಲಾಗಿದೆ. ಈಗ ಇಬ್ಬರು ಅಭ್ಯರ್ಥಿಗಳನ್ನು ಕೂರಿಸಿ ಮಾತುಕತೆ ನಡೆಸಿ ಟಿಕೆಟ್ ತ್ಯಾಗ ಮಾಡಲು ಒಪ್ಪಿಸಿದ್ದಾರೆ. ರಮೇಶ್ ಕಾಂಗ್ರೆಸ್ಸಿಗೆ ಬಂದರೆ ಚಿಕ್ಕೋಡಿಯಿಂದ ರಮೇಶ್ ಕತ್ತಿಗೆ ಟಿಕೆಟ್ ನೀಡಲು ನಿರ್ಧಾರ ಮಾಡಿದ್ದಾರೆ. ಆದ್ದರಿಂದ ಈ ಜವಾಬ್ದಾರಿಯಲ್ಲಿ ಸಿದ್ದರಾಮಯ್ಯ ಅವರು ತಮ್ಮ ಆಪ್ತ ಸತೀಶ್ ಜಾರಕಿಹೊಳಿಗೆ ನೀಡಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.

    ಪ್ರಕಾಶ್ ಹುಕ್ಕೇರಿ ಅವರು ಕೂಡ ಕಳೆದ ಬಾರಿ ಚಿಕ್ಕೋಡಿಯಿಂದ ಸ್ಪರ್ಧಿಸಲು ಇಷ್ಟಪಟ್ಟಿರಲಿಲ್ಲ. ಈ ಬಾರಿಯೂ ಅಲ್ಲಿಯೇ ಸ್ಪರ್ಧೆ ಮಾಡಲು ಇಷ್ಟವಿರಲಿಲ್ಲ. ಆದರೆ ಪಕ್ಷದ ಸೂಚನೆ ಮೇರೆಗೆ ಅಲ್ಲಿಯೇ ಅನಿವಾರ್ಯವಾಗಿ ನಿಂತಿದ್ದಾರೆ. ಚಿಕ್ಕೋಡಿಯ ಅಭ್ಯರ್ಥಿ ಪ್ರಕಾಶ್ ಹುಕ್ಕೇರಿ ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ತೀರ್ಮಾನ ಮಾಡಿದ್ದಾರೆ.

    ಒಂದು ವೇಳೆ ಕತ್ತಿ ಸಹೋದರರು ಕಾಂಗ್ರೆಸ್ಸಿಗೆ ಬಂದರೆ ಸುಲಭವಾಗಿ ಚಿಕ್ಕೋಡಿ ಗೆಲ್ಲಬಹುದು. ಇತ್ತ ಕತ್ತಿ ಸಹೋದರರ ನೆರವಿನೊಂದಿಗೆ ಬೆಳಗಾವಿಯಲ್ಲೂ ಗೆಲುವಿನ ಬಾವುಟ ಹಾರಿಸಬಹುದು ಅನ್ನೋದು ಕೈ ಪಾಳಯದ ಲೆಕ್ಕಾಚಾರವಾಗಿದೆ. ರಮೇಶ್ ಕತ್ತಿಗೆ ಚಿಕ್ಕೋಡಿ ಬಿಟ್ಟುಕೊಟ್ಟು ಬೆಳಗಾವಿಯಿಂದ ಸ್ಪರ್ಧಿಸಲು ಪ್ರಕಾಶ್ ಹುಕ್ಕೇರಿ ಸಮ್ಮತಿ ನೀಡಿದ್ದಾರೆ ಎನ್ನಲಾಗುತ್ತಿದೆ.

  • ಕಾರ್ಯಕ್ರಮದಲ್ಲಿ ನಗೆಪಾಟಲಿಗೀಡಾದ ಕಾಂಗ್ರೆಸ್ ಸಂಸದ ಪ್ರಕಾಶ್ ಹುಕ್ಕೇರಿ

    ಕಾರ್ಯಕ್ರಮದಲ್ಲಿ ನಗೆಪಾಟಲಿಗೀಡಾದ ಕಾಂಗ್ರೆಸ್ ಸಂಸದ ಪ್ರಕಾಶ್ ಹುಕ್ಕೇರಿ

    ಚಿಕ್ಕೋಡಿ(ಬೆಳಗಾವಿ): ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ಕಾಂಗ್ರೆಸ್ ಸಂಸದ ಪ್ರಕಾಶ್ ಹುಕ್ಕೇರಿ ಅವರು ನಗೆಪಾಟಲಿಗೆ ಈಡಾದ ಪ್ರಸಂಗ ಇಂದು ನಡೆದಿದೆ.

    ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಭಾಗದ ಸಾರ್ವಜನಿಕರಿಗೆ ಅನುಕೂಲವಾಗುವ ದೃಷ್ಟಿಯಿಂದ ಇಂದು ಚಿಕ್ಕೋಡಿಯ ಪೋಸ್ಟ್ ಆಫೀಸ್ ನಲ್ಲಿ ಪಾಸ್ ಪೋರ್ಟ್ ಸೇವಾ ಕೇಂದ್ರವನ್ನು ಉದ್ಘಾಟಿಸಲಾಯಿತು. ಬಳಿಕ ಮಾತನಾಡುವ ವೇಳೆ ಅವರು ಎಡವಟ್ಟು ಮಾಡಿಕೊಂಡಿದ್ದು ಸಭಿಕರು ಒಂದು ಬಾರಿ ಅವಕ್ಕಾಗಿದ್ದಾರೆ.

    ಭಾಷಣದ ವೇಳೆ ಹೊರದೇಶಕ್ಕೆ ಹೋಗಬೇಕಾದರೆ ಅವಶ್ಯವಿರುವ ವೀಸಾ ಪಡೆದುಕೊಳ್ಳಲು ಮುಂಬೈ ಹಾಗೂ ಚೆನ್ನೈಗೆ ಹೋಗಬೇಕು ಎನ್ನುವ ಬದಲು ‘ವಿಷ’ ತೆಗೆದುಕೊಳ್ಳಲು ಚೆನ್ನೈ ಅಥವಾ ಮುಂಬೈ ಗೆ ಹೋಗಬೇಕಾಗಿದೆ ಎಂದರು. ಭಾಷಣದಲ್ಲಿ ಎರಡೂ ಮೂರು ಬಾರಿ ‘ವಿಷ’ ಪಡೆಯಲು ಅಲ್ಲೇಕೆ ಹೋಗಬೇಕು ಎಂದು ಸಂಸದರು ಹೇಳಿದಾಗ ಸಭಿಕರು ತಬ್ಬಿಬ್ಬಾದರು.

    ಕಾರ್ಯಕ್ರಮದ ಬಳಿಕ ಬಿಜೆಪಿಗೆ ನೀವು ಸೇರ್ಪಡೆಯಾಗುತ್ತೀರಾ ಎಂಬ ಪತ್ರಕರ್ತರ ಪ್ರಶ್ನೆಗೆ ಗರಂ ಆದ ಪ್ರಕಾಶ್ ಹುಕ್ಕೇರಿ ಸಿಟ್ಟಿನಿಂದ ಏನೂ ಮಾತನಾಡದೇ ತೆರಳಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಬೆಳಗಾವಿ: ಧ್ವಜಾರೋಹಣ ವೇಳೆ ಸಂಸದ ಪ್ರಕಾಶ್ ಹುಕ್ಕೇರಿ, ಎಂಎಲ್‍ಸಿ ಮಧ್ಯೆ ಮಾತಿನ ಚಕಮಕಿ

    ಬೆಳಗಾವಿ: ಧ್ವಜಾರೋಹಣ ವೇಳೆ ಸಂಸದ ಪ್ರಕಾಶ್ ಹುಕ್ಕೇರಿ, ಎಂಎಲ್‍ಸಿ ಮಧ್ಯೆ ಮಾತಿನ ಚಕಮಕಿ

    ಬೆಳಗಾವಿ: ಇಂದು ದೇಶದ್ಯಾಂತ 71ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು, ಜಿಲ್ಲೆಯ ಚಿಕ್ಕೋಡಿಯಲ್ಲಿ ಸಾರ್ವಜನಿಕ ಧ್ವಜಾರೋಹಣದ ವೇಳೆ ಸಂಸದ ಪ್ರಕಾಶ್ ಹುಕ್ಕೇರಿ ಮತ್ತು ಎಂಎಲ್‍ಸಿ ಮಧ್ಯೆ ಮಾತಿನ ಚಕಮಕಿ ನಡೆದಿದೆ.

    ಚಿಕ್ಕೋಡಿ ಪಟ್ಟಣದ ಆರ್‍ಡಿ ಕಾಲೆಜು ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಈ ಘಟನೆ ನಡೆದಿದೆ. ಕಾರ್ಯಕ್ರಮಕ್ಕೆ ಸಂಸದ ಪ್ರಕಾಶ್ ಹುಕ್ಕೇರಿ ತಡವಾಗಿ ಆಗಮಿಸಿದ್ದರು. ಇದರಿಂದ ಕೆಂಡಾಮಂಡಲರಾದ ಎಂಎಲ್‍ಸಿ ಮಹಾಂತೇಶ ಕವಟಗಿಮಠ ಅವರು ತಹಶಿಲ್ದಾರ್ ಚಿದಂಬರ್ ಕುಲಕರ್ಣಿ ಮತ್ತು ಉಪವಿಭಾಗಾಧಿಕಾರಿ ಗೀತಾ ಕೌಲಗಿ ಅವರನ್ನು ತರಾಟೆಗೆ ತೆಗೆದುಕೊಂಡರು.

    ಅಲ್ಲದೇ ಇದೇ ಸಂದರ್ಭದಲ್ಲಿ ಆಗಮಿಸಿದ ಸಂಸದ ಪ್ರಕಾಶ ಹುಕ್ಕೆರಿ ಜೊತೆಯೂ ಮಹಾಂತೇಶ ಕವಟಗಿಮಠ ಮಾತಿನ ಚಕಮಕಿ ತಾರಕಕ್ಕೇರಿತು. ಸರ್ಕಾರಿ ಕಾರ್ಯಕ್ರಮವನ್ನ ಖಾಸಗಿಯಾಗಿ ಸಂಸದರು ಬಳಕೆ ಮಾಡಿಕೊಳ್ಳಲು ಪ್ರಯತ್ನ ಮಾಡುತ್ತಿದ್ದಾರೆಂದು ಮಹಾಂತೇಶ ಕವಟಗಿಮಠ ಆರೋಪಿಸಿದ್ರು.