Tag: ಪ್ರಗತಿ ಶೆಟ್ಟಿ

  • ಸ್ವೀಟ್‌ ಹಾರ್ಟ್‌ಗೆ ವಿಶ್‌ ಮಾಡಿದ ರಿಷಬ್ ಶೆಟ್ಟಿ

    ಸ್ವೀಟ್‌ ಹಾರ್ಟ್‌ಗೆ ವಿಶ್‌ ಮಾಡಿದ ರಿಷಬ್ ಶೆಟ್ಟಿ

    `ಕಾಂತಾರ’ (Kantara) ಚಿತ್ರದ ಮೂಲಕ ಡಿವೈನ್ ಸ್ಟಾರ್ ಆಗಿ ಮಿಂಚ್ತಿರುವ ರಿಷಬ್ ಶೆಟ್ಟಿ (Rishab Shetty) ಇದೀಗ ಪತ್ನಿ (Wife) ಪ್ರಗತಿ (Pragathi Shetty) ಹುಟ್ಟುಹಬ್ಬದಕ್ಕೆ ಶುಭಹಾರೈಸಿದ್ದಾರೆ. ಸ್ಪೆಷಲ್ ಫೋಟೋ ಹಂಚಿಕೊಂಡು ಪತ್ನಿಗೆ ರೊಮ್ಯಾಂಟಿಕ್ ಆಗಿ ರಿಷಬ್ ವಿಶ್ ಮಾಡಿದ್ದಾರೆ.

    `ರಿಕ್ಕಿ’, `ಕಿರಿಕ್ ಪಾರ್ಟಿ’ ಚಿತ್ರದಲ್ಲಿ ನಟನೆಯ ಜೊತೆ ನಿರ್ದೇಶನದ ಮೂಲಕ ಚಿತ್ರರಂಗಕ್ಕೆ ಪರಿಚಿತರಾದ ನಟ ರಿಷಬ್ ಶೆಟ್ಟಿ `ಕಾಂತಾರ’ ಚಿತ್ರದ ಮೂಲಕ ಸಕ್ಸಸ್‌ಫುಲ್ ನಟ ಕಮ್ ನಿರ್ದೇಶಕನಾಗಿ ಹೊರಹೊಮ್ಮಿದ್ದರು. ತನ್ನ ಕೆಲಸ ಮತ್ತು ಸಕ್ಸಸ್‌ಗೆ ಆಧಾರ ಸ್ತಂಭವಾಗಿರುವ ಪತ್ನಿ ಪ್ರಗತಿ ಶೆಟ್ಟಿ ಬರ್ತ್‌ಡೇಗೆ ಸ್ಪೆಷಲ್ ಆಗಿ ನಟ ವಿಶ್ ಮಾಡಿದ್ದಾರೆ.

    ಕಾಂತಾರ 2 RISHAB SHETTY

    ಕಷ್ಟದ ದಿನಗಳಲ್ಲಿ ಸಾಥ್ ನೀಡಿ, ಪ್ರೀತಿಸಿ ಮದುವೆಯಾದ ಮಲೆನಾಡಿನ ಹುಡುಗಿ ಪ್ರಗತಿ ಶೆಟ್ಟಿ ಅವರು ರಿಷಬ್ ಶೆಟ್ಟಿಗೆ ಪಾಲಿನ ಸಕ್ಸಸ್ ಹಿಂದಿನ ಶಕ್ತಿ ಎಂದರೆ ತಪ್ಪಾಗಲಾರದು. ರಿಷಬ್ ಅವರ ಟ್ಯಾಲೆಂಟ್ ಮತ್ತು ಶ್ರಮದ ಜೊತೆ ಪ್ರಗತಿ ಶೆಟ್ಟಿ ಸಹಕಾರ ಕೂಡ ಸಾಕಷ್ಟಿದೆ.

    ನನ್ನ ಸ್ವೀಟ್ ಹಾರ್ಟ್‌ಗೆ ಜನ್ಮದಿನದ ಶುಭಾಶಯಗಳು. ನಿನ್ನ ನಿರಂತರ ಬೆಂಬಲಕ್ಕಾಗಿ ಮತ್ತು ನನಗೆ ಮತ್ತು ನನ್ನ ಕೆಲಸಕ್ಕೆ ಶಕ್ತಿಯ ಸ್ತಂಭವಾಗಿದ್ದಕ್ಕಾಗಿ ನಿನಗೆ ಎಷ್ಟು ಧನ್ಯವಾದ ಹೇಳಿದರು ಸಾಲದು ಎಂದು ರಿಷಬ್ ಶೆಟ್ಟಿ ತಮ್ಮ ಪತ್ನಿಗೆ ಶುಭಹಾರೈಸಿದ್ದಾರೆ. `ಕಾಂತಾರ’ ಚಿತ್ರದ ಸಕ್ಸಸ್ ಮೀಟ್‌ನಲ್ಲಿ ಪತ್ನಿಗೆ ಶೇಕ್ ಹ್ಯಾಡ್ ಮಾಡ್ತಿರುವ ಚೆಂದದ ಫೋಟೋವನ್ನ ಶೇರ್ ಮಾಡಿ ವಿಶ್ ಮಾಡಿದ್ದಾರೆ. ಇದನ್ನೂ ಓದಿ:ಪಡ್ಡೆಹುಡುಗರ ನಿದ್ದೆಗೆಡಿಸಿದ ನಟಿ ನಿಧಿ ಸುಬ್ಬಯ್ಯ ಹಾಟ್‌ ಫೋಟೋಶೂಟ್

    `ಕಾಂತಾರ’ ಸಿನಿಮಾ ಸಕ್ಸಸ್ ನಂತರ ಕಾಂತಾರ ಪಾರ್ಟ್ 2ಗಾಗಿ ರಿಷಬ್ ತಯಾರಿ ಮಾಡ್ತಿದ್ದಾರೆ. ಸಿನಿಮಾಗಾಗಿ ಸಕಲ ತಯಾರಿ ಮಾಡ್ತಿದ್ದಾರೆ.

  • ದಾದಾ ಸಾಹೇಬ್ ಫಾಲ್ಕೆ ಚಿತ್ರೋದ್ಯಮ ಪ್ರಶಸ್ತಿ ಪಡೆದ `ಕಾಂತಾರ’ ನಟ ರಿಷಬ್ ಶೆಟ್ಟಿ

    ದಾದಾ ಸಾಹೇಬ್ ಫಾಲ್ಕೆ ಚಿತ್ರೋದ್ಯಮ ಪ್ರಶಸ್ತಿ ಪಡೆದ `ಕಾಂತಾರ’ ನಟ ರಿಷಬ್ ಶೆಟ್ಟಿ

    `ಕಾಂತಾರ’ ಸೂಪರ್ ಸಕ್ಸಸ್ ನಂತರ ಕನ್ನಡದ ನಟ ಕಮ್ ನಿರ್ದೇಶಕ ರಿಷಬ್ ಶೆಟ್ಟಿ ಅವರು `ದಾದಾ ಸಾಹೇಬ್ ಫಾಲ್ಕೆ ಇಂಟರ್‌ನ್ಯಾಷನಲ್ ಫೆಸ್ಟಿವಲ್ ಭರವಸೆಯ ನಟ’ ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ.

    ನಟ, ನಿರ್ದೇಶಕನಾಗಿ ಚಿತ್ರರಂಗದಲ್ಲಿ ಸೈ ಎನಿಸಿಕೊಂಡಿರುವ ಪ್ಯಾನ್ ಇಂಡಿಯಾ ಸ್ಟಾರ್ ರಿಷಬ್ ಶೆಟ್ಟಿ ಅವರು `ಕಾಂತಾರ’ ಸಿನಿಮಾ ನಟಿಸಿ, ನಿರ್ದೇಶಿಸಿ ಇಡೀ ವಿಶ್ವ ಮಟ್ಟದಲ್ಲಿ ಗಮನ ಸೆಳೆದರು. ಅದರ ಪ್ರತಿಫಲ ಇದೀಗ ಡಿವೈನ್ ಸ್ಟಾರ್ ದಾದಾ ಸಾಹೇಬ್ ಫಾಲ್ಕೆ ಇಂಟರ್‌ನ್ಯಾಷನಲ್ ಫೆಸ್ಟಿವಲ್ ಭರವಸೆಯ ನಟ ಹಿಂದಿ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಫೆ.20ರಂದು ಮುಂಬೈನಲ್ಲಿ ನಡೆದ ಕಾರ್ಯಕ್ರಮ ರಿಷಬ್ ಕೂಡ ಭಾಗಿಯಾಗಿ ಪ್ರಶಸ್ತಿ ಸ್ವೀಕರಿಸಿದ್ದಾರೆ. ಇದನ್ನೂ ಓದಿ: 150 ಕೋಟಿ ಮೌಲ್ಯದ ಹೊಸ ಮನೆಯನ್ನು ಪೋಷಕರಿಗೆ ಗಿಫ್ಟ್ ನೀಡಿದ ಧನುಷ್

    ಈ ಪ್ರೀತಿ ಪುರಸ್ಕಾರಕ್ಕೆ ನಾನು ಸದಾ ಚಿರಋಣ. ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಸಿಕ್ಕಿರುವುದು ನನಗೆ ಇನ್ನಷ್ಟು ಸಿನಿಮಾ ಮಾಡುವ ಜವಾಬ್ದಾರಿಯನ್ನು ಹೆಚ್ಚಿಸಿದೆ ಎಂದು ಫೋಟೋಗಳನ್ನ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿ ರಿಷಬ್ ಸಂಭ್ರಮಿಸಿದ್ದಾರೆ. ನನ್ನನ್ನು ನಂಬಿ ಅವಕಾಶ ಕೊಟ್ಟಿದ ಹೊಂಬಾಳೆ ಸಂಸ್ಥೆ ಮತ್ತು ವಿಜಯ್ ಕಿರಗಂದೂರು ಸರ್ ಅವರಿಗೆ ಋಣಿಯಾಗಿರುವೆ. ನಿಮ್ಮ ಜೊತೆ ಕೈ ಜೋಡಿಸಿ ಹೆಚ್ಚು ಸಿನಿಮಾ ಮಾಡಲು ಕಾಯುತ್ತಿರುವೆ ಎಂದು ಹೇಳಿದ್ದಾರೆ.

     

    View this post on Instagram

     

    A post shared by Rishab Shetty (@rishabshettyofficial)

    ಕಾಂತಾರ ಇಡೀ ತಂಡದಿಂದ ಇದು ಸಾಧ್ಯವಾಗಿದ್ದು ಹೀಗಾಗಿ ಕಲಾವಿದರು, ತಂತ್ರಜ್ಞರಿಗೆ ಪ್ರತಿಯೊಬ್ಬರಿಗೂ ಇದನ್ನು ಅರ್ಪಿಸುವೆ. ನನ್ನ ಪಿಲ್ಲರ್ ಆಫ್ ಲೈಫ್ ಪ್ರಗತಿ ಶೆಟ್ಟಿ ಕೂಡ ಎಂದಿದ್ದಾರೆ. ಈ ಪ್ರಶಸ್ತಿಯನ್ನು ದೈವ ನರ್ತಕರು, ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಸರ್, ಭಗವಾನ್ ಸರ್‌ಗೆ ಅರ್ಪಿಸುವೆ ಎಂದು ಬರೆದಿದ್ದಾರೆ.

    LIVE TV
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ನಟನೆಯತ್ತ ʻಕಾಂತಾರʼ ಹೀರೋ ರಿಷಬ್ ಪತ್ನಿ ಪ್ರಗತಿ ಶೆಟ್ಟಿ

    ನಟನೆಯತ್ತ ʻಕಾಂತಾರʼ ಹೀರೋ ರಿಷಬ್ ಪತ್ನಿ ಪ್ರಗತಿ ಶೆಟ್ಟಿ

    `ಕಾಂತಾರ'(Kantara Film) ಸಿನಿಮಾ ಮೂಲಕ ಡಿವೈನ್ ಸ್ಟಾರ್ ಆಗಿ ಮಿಂಚ್ತಿರುವ ರಿಷಬ್ ಶೆಟ್ಟಿಗೆ ಸಖತ್ ಬೇಡಿಕೆ ಸೃಷ್ಟಿಯಾಗಿದೆ. ಇದೀಗ ರಿಷಬ್ ಶೆಟ್ಟಿ ಅವರ ಶಕ್ತಿಯಾಗಿರುವ ಅವರ ಪತ್ನಿ ಪ್ರಗತಿ(Pragathi Shetty) ಕೂಡ ಫುಲ್ ಟೈಮ್ ಬಣ್ಣ ಹಚ್ಚುತ್ತಾರಾ ಎಂಬುದನ್ನ ಸಂದರ್ಶನವೊಂದರಲ್ಲಿ ರಿವೀಲ್ ಮಾಡಿದ್ದಾರೆ.

    ಸ್ಯಾಂಡಲ್‌ವುಡ್‌ನಲ್ಲಿ(Sandalwood) ಈಗಾಗಲೇ ಫ್ಯಾಷನ್ ಡಿಸೈನರ್ ಆಗಿ ಸಾಕಷ್ಟು ಸಿನಿಮಾಗಳಿಗೆ ಕೆಲಸ ಮಾಡಿರುವ ಪ್ರಗತಿ ಶೆಟ್ಟಿ, ನೋಡಲು ಯಾವ ಹೀರೋಯಿನ್‌ಗೂ ಕಮ್ಮಿಯಿಲ್ಲ. ನೋಡಲು ಚೆಂದ, ಪ್ರತಿಭಾವಂತೆ ಕೂಡ. ಈಗಾಗಲೇ `ಕಾಂತಾರ’ ಚಿತ್ರದಲ್ಲಿ ರಾಣಿ ಪಾತ್ರಕ್ಕೆ ಜೀವ ತುಂಬಿದ್ದಾರೆ. ಜೊತೆಗೆ ಕಾಂತಾರ ಸಿನಿಮಾದಲ್ಲಿ ನಟಿಸಿರುವ ಪ್ರತಿಯೊಬ್ಬ ಕಲಾವಿದರಿಗೂ ಪ್ರಗತಿ ಕಾಸ್ಟೂಮ್ ಡಿಸೈನ್ ಮಾಡಿದ್ದಾರೆ. ಹೀಗಿರುವಾಗ ಸಾಮಾಜಿಕ ಜಾಲತಾಣದಲ್ಲಿ ನೀವ್ಯಾಕೆ ಹೀರೋಯಿನ್ ಆಗಬಾರದು ಅಂತಾ ಫ್ಯಾನ್ಸ್ ಕೂಡ ಪ್ರಗತಿಗೆ ಹೊಸ ಬೇಡಿಕೆ ಇಟ್ಟಿದ್ದಾರೆ. ನಟನೆಗೆ ಬಗ್ಗೆ ಆಸಕ್ತಿ ಇದ್ಯಾ ಎಂಬುದರ ಬಗ್ಗೆ ರಿಷಬ್ ಪತ್ನಿ ಪ್ರಗತಿ  ಕೂಡ ಮಾತನಾಡಿದ್ದಾರೆ. ಇದನ್ನೂ ಓದಿ:ಗಡಿನಾಡ ಕನ್ನಡಿಗ ಎಂದ ರೂಪೇಶ್‌ ಶೆಟ್ಟಿಗೆ ಬೆದರಿಕೆ, ದೂರು ದಾಖಲಿಸಿದ ಕುಟುಂಬದವರು

    ಆಕ್ಟಿಂಗ್ ಕಡೆ ಖಂಡಿತಾ ಆಸಕ್ತಿ ಅಂತಾ ಎನುಯಿಲ್ಲ. ನಾನು ಈ ಬಗ್ಗೆ ಪ್ಲ್ಯಾನ್ ಮಾಡಿಕೊಂಡಿಲ್ಲ. `ಸರ್ಕಾರಿ ಹಿ.ಪ್ರಾ.ಶಾಲೆ ಕಾಸರಗೋಡು’ ನನಗೇನು ಹೇಳದೇ ರಿಷಬ್(Rishab Shetty) ಪುಟ್ಟ ಪಾತ್ರ ಮಾಡಿಸಿದ್ದರು ಅದು ಕೂಡ ಕಡೆಯ ಕ್ಷಣದಲ್ಲಿ, ಕಾಂತಾರ ಎರಡು ದಿನ ಮುಂಚಿತವಾಗಿ ಹೇಳಿದ್ದರು. ಆದರೆ ನಟಿಸಲೇಬೇಕು ಯಾವುದೇ ಆಸಕ್ತಿಯಿಲ್ಲ. ಸಮಯ ಮತ್ತು ಸಂದರ್ಭಕ್ಕೆ ಅನಿವಾರ್ಯವಾಗಿದ್ದಾಗ ನಟಿಸುತ್ತೇನೆ. ಆದರೆ ಫ್ಯಾಷನ್ ಡಿಸೈನಿಂಗ್ ಕಡೆ ನನ್ನ ಗಮನವಿರುತ್ತದೆ ಎಂದು ಮಾತನಾಡಿದ್ದಾರೆ.

    ರಿಷಬ್ ಅವರ ಸಕ್ಸಸ್‌ನಲ್ಲಿ ಪ್ರಗತಿ ಶೆಟ್ಟಿ ಅವರ ಶ್ರಮ ಸಾಕಷ್ಟಿದೆ. ರಿಷಬ್ ಸಿನಿಮಾ ಜರ್ನಿ ಜೊತೆ ಪ್ರಗತಿ ಅವರ ನಡೆಗೂ ಅಭಿಮಾನಿಗಳಿಂದ ಅಪಾರ ಮೆಚ್ಚುಗೆಯಾಗುತ್ತಿದೆ. ನಟನೆ ಮತ್ತು ಫ್ಯಾಷನ್ ಲೋಕದಲ್ಲಿ ಪ್ರಗತಿ ಶೆಟ್ಟಿ ಮಿಂಚಲಿ ಎಂಬುದೇ ಅಭಿಮಾನಿಗಳ ಆಶಯ.

    Live Tv
    [brid partner=56869869 player=32851 video=960834 autoplay=true]

  • ಧರ್ಮಸ್ಥಳದ ಧರ್ಮಾಧಿಕಾರಿಗಳ ಭೇಟಿ ಮಾಡಿ ಆಶೀರ್ವಾದ ಪಡೆದ ರಿಷಬ್ ಶೆಟ್ಟಿ ದಂಪತಿ

    ಧರ್ಮಸ್ಥಳದ ಧರ್ಮಾಧಿಕಾರಿಗಳ ಭೇಟಿ ಮಾಡಿ ಆಶೀರ್ವಾದ ಪಡೆದ ರಿಷಬ್ ಶೆಟ್ಟಿ ದಂಪತಿ

    ಕಾಂತಾರ ಸಿನಿಮಾದ ಯಶಸ್ಸಿನ ಬೆನ್ನಲ್ಲೇ ನಿರ್ದೇಶಕ, ನಟ ರಿಷಬ್ ಶೆಟ್ಟಿ (Rishabh Shetty) ಧರ್ಮಸ್ಥಳಕ್ಕೆ (Dharmasthala,) ಭೇಟಿ ನೀಡಿ ಮಂಜುನಾಥ ದರ್ಶನ ಪಡೆದಿದ್ದಾರೆ. ನಂತರ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿದ ರಿಷಬ್ ದಂಪತಿ, ಕೆಲ ಕಾಲ ಸಿನಿಮಾ ಬಗ್ಗೆ ಅವರೊಂದಿಗೆ ಚರ್ಚೆ ಮಾಡಿದ್ದಾರೆ. ಈ ಸಿನಿಮಾ ಮಾಡುವ ಮುನ್ನವೂ ರಿಷಬ್ ಇಲ್ಲಿಗೆ ಭೇಟಿ ನೀಡಿ ವೀರೇಂದ್ರ ಹೆಗ್ಗಡೆಯವರನ್ನು ಸಿನಿಮಾ ಕುರಿತು ಸಲಹೆ ಪಡೆದಿದ್ದರು. ಇದೀಗ ಮತ್ತೆ ಅವರನ್ನು ಭೇಟಿ ಮಾಡಿ, ಸಿನಿಮಾದ ಯಶಸ್ಸಿನ ಕುರಿತು ಖುಷಿಯನ್ನು ಹಂಚಿಕೊಂಡಿದ್ದಾರೆ.

    ಕಾಂತಾರ (Kantara) ಸಿನಿಮಾ ಆಗಲು ಪರೋಕ್ಷವಾಗಿ ವೀರೇಂದ್ರ ಹೆಗ್ಗಡೆಯವರೂ (Virendra Heggade) ಕಾರಣ ಎಂದು ಈ ಹಿಂದೆಯೇ ರಿಷಬ್ ಹೇಳಿದ್ದರು. ಈ ಚಿತ್ರಕ್ಕಾಗಿ ಹೆಗ್ಗಡೆ ಅವರು ಕೆಲವು ಸಲಹೆಗಳನ್ನೂ ನೀಡಿದ್ದರು ಎಂದೂ ತಿಳಿಸಿದ್ದರು. ಸಿನಿಮಾದ ಟ್ರೇಲರ್ ಬಿಡುಗಡೆ ಸೇರಿದಂತೆ ಹಲವು ಬಾರಿ ಈ ಕ್ಷೇತ್ರಕ್ಕೆ ರಿಷಬ್ ಭೇಟಿ ಮಾಡಿದ್ದಾರೆ. ಮೊನ್ನೆಯಷ್ಟೇ ವೀರೇಂದ್ರ ಹೆಗ್ಗಡೆ ಅವರು ಕೂಡ ಕುಟುಂಬ ಸಮೇತ ಕಾಂತಾರ ಸಿನಿಮಾವನ್ನು ವೀಕ್ಷಿಸಿದ್ದರು. ಮತ್ತು ಚಿತ್ರದ ಕುರಿತು ಮೆಚ್ಚುಗೆಯನ್ನೂ ಸೂಚಿಸಿದ್ದರು. ಹಾಗಾಗಿ ರಿಷಬ್ ಮತ್ತೆ ಭೇಟಿ ಮಾಡಿ ಆಶೀರ್ವಾದ ಪಡೆದುಕೊಂಡಿದ್ದಾರೆ. ಇದನ್ನೂ ಓದಿ:ಅನುಪಮಾ ಗೌಡ ವಿರುದ್ಧ ಸಿಡಿದೆದ್ದ ರೂಪೇಶ್‌ ರಾಜಣ್ಣ

    ಕಾಂತಾರ ಸಿನಿಮಾ ರಿಲೀಸ್ ಆದ ಬಹುತೇಕ ಕಡೆ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಅನೇಕ ಗಣ್ಯರು ಈ ಸಿನಿಮಾವನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಮಠಾಧೀಶರು ಮತ್ತು ರಾಜಕೀಯ ಮುಖಂಡರು ಚಿತ್ರವನ್ನು ನೋಡಿ ಪ್ರಶಂಸಿಸುತ್ತಿದ್ದಾರೆ. ಮೊನ್ನೆಯಷ್ಟೇ ಸದ್ಗುರು ಜಗ್ಗಿವಾಸುದೇವ್, ಶ್ರೀ ರವಿಶಂಕರ್ ಗುರೂಜಿ ತಮ್ಮ ಆಶ್ರಮದಲ್ಲೇ ಭಕ್ತರೊಟ್ಟಿಗೆ ಸಿನಿಮಾ ನೋಡಿದ್ದರು. ಈ ಸಿನಿಮಾದ ವಿಶೇಷತೆ ಬಗ್ಗೆ ಮಾತನಾಡಿದ್ದರು. ನಿನ್ನೆಯಷ್ಟೇ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಿನಿಮಾ ನೋಡಿದ್ದಾರೆ.

    ಬೆಂಗಳೂರಿನಲ್ಲಿ ತಮ್ಮ ಆಪ್ತರು ಮತ್ತು ಸ್ವಯಂ ಸೇವಕರ ಜೊತೆ ಸಿನಿಮಾ ನೋಡಿರುವ ನಿರ್ಮಲಾ ಸೀತಾರಾಮನ್ ಈ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ನಮ್ಮ ಶ್ರೀಮಂತ ಸಂಸ್ಕೃತಿಯನ್ನು ಬಿಂಬಿಸುವಂತಹ ಚಿತ್ರ ಇದಾಗಿದೆ ಎಂದು ಬಣ್ಣಿಸಿದ್ದಾರೆ. ಇಂತಹ ಚಿತ್ರಗಳು ಹೆಚ್ಚೆಚ್ಚು ತೆರೆಯ ಮೇಲೆ ಬರಬೇಕು ಎನ್ನುವ ಆಶಯವನ್ನೂ ಅವರು ವ್ಯಕ್ತಪಡಿಸಿದ್ದಾರೆ. ಪ್ರತಿಯೊಬ್ಬರೂ ನೋಡಲೇಬೇಕಾದ ಸಿನಿಮಾವಿದು ಎಂದೂ ಅವರು ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ‘ಸಾಧನೆಯ ಬೆನ್ನೆಲುಬು’ ಎಂದು ಹೆಂಡತಿ ಜೊತೆಗಿನ ಫೋಟೋ ಹಂಚಿಕೊಂಡ ರಿಷಬ್ ಶೆಟ್ಟಿ

    ‘ಸಾಧನೆಯ ಬೆನ್ನೆಲುಬು’ ಎಂದು ಹೆಂಡತಿ ಜೊತೆಗಿನ ಫೋಟೋ ಹಂಚಿಕೊಂಡ ರಿಷಬ್ ಶೆಟ್ಟಿ

    ಕಾಂತಾರ (Kantara) ಸಿನಿಮಾ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಈ ಸಿನಿಮಾಗೆ ರಿಷಬ್ ಶೆಟ್ಟಿ ನಿರ್ದೇಶನ ಮಾಡಿ, ನಟಿಸಿದ್ದರೆ ಅವರ ಪತ್ನಿ ಪ್ರಗತಿ ಶೆಟ್ಟಿ ಕಾಸ್ಟ್ಯೂಮ್ ಡಿಸೈನ್ ಮಾಡಿದ್ದಾರೆ. ಹಾಗಾಗಿ ಈ ಗೆಲುವನ್ನು ಮತ್ತು ತಮ್ಮ ಸಾಧನೆಯನ್ನು ಪತ್ನಿಗೆ ಅರ್ಪಿಸಿದ್ದಾರೆ ರಿಷಬ್. ತಮ್ಮ ಸಾಧನೆಯ ಬೆನ್ನೆಲುಬಾಗಿ ನಿಂತಿರುವ ಪತ್ನಿಯ ಜೊತೆಗಿನ ಫೋಟೋ ಕೂಡ ಅವರು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

    ಪ್ರಗತಿ ಶೆಟ್ಟಿ (Pragati Shetty) ಅವರನ್ನು ಮೊದಲ ಬಾರಿಗೆ ಭೇಟಿಯಾದ ಫೋಟೋ ಮತ್ತು ಇಂದು ಕಾಂತಾರ ಸಕ್ಸಸ್ ವೇಳೆಯಲ್ಲಿ ವಿಮಾನದಲ್ಲಿ ಹಾರಾಟ ಮಾಡುತ್ತಿರುವ ಫೋಟೋ ಎರಡನ್ನೂ ಹಂಚಿಕೊಂಡಿರುವ ರಿಷಬ್, ತಮ್ಮ ಗೆಲುವಿಗೆ ಪ್ರಗತಿ ಕೂಡ ಕಾರಣವೆಂದು ಹೆಂಡತಿಯನ್ನು ಹಾಡಿ ಹೊಗಳಿದ್ದಾರೆ. ಪತ್ನಿಯ ಸಹಾಯವನ್ನು ಕೊಂಡಾಡಿದ್ದಾರೆ. ಇದನ್ನೂ ಓದಿ:ದಆಮೀರ್‌ ಖಾನ್‌ ತಾಯಿಗೆ ಹೃದಯಾಘಾತ

    ಬಾಲಿವುಡ್ ನಲ್ಲಿ ಕಾಂತಾರ ಹವಾ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಬಾಕ್ಸ್ ಆಫೀಸಿನಲ್ಲೂ (Box Office) ಕೂಡ ಅದು ಹಿಂದೆ ಬಿದ್ದಿಲ್ಲ. ಈವರೆಗೂ ಚಿತ್ರದಿಂದ ಅಂದಾಜು 50 ಕೋಟಿ ಬಂದಿದೆ ಎಂದು ಹೇಳಲಾಗುತ್ತಿದೆ. ಸಿನಿ ಪಂಡಿತರ ಲೆಕ್ಕಾಚಾರದಲ್ಲೂ 45 ರಿಂದ 50 ಕೋಟಿ ಬಂದಿರಬಹುದು ಎನ್ನಲಾಗುತ್ತಿದೆ. ಆದರೆ, ನಿರ್ಮಾಪಕರಾಗಲಿ ಅಥವಾ ವಿತರಕರಾಗಲಿ ಈ ಕುರಿತು ಅಧಿಕೃತ ಹೇಳಿಕೆ ನೀಡಿಲ್ಲ.

    ಕನ್ನಡದಲ್ಲೂ ಅಂದಾಜು ನೂರೈವತ್ತು ಕೋಟಿಗೂ ಅಧಿಕ ಹಣ ಮಾಡಿದರೆ, ಇತರ ಭಾಷೆಗಳಲ್ಲೂ ನೂರಾರು ಕೋಟಿ ಬಾಚಿದೆ. ಪ್ರತಿ ಭಾಷೆಯಲ್ಲೂ ಕನ್ನಡದ ಸಿನಿಮಾವನ್ನು ಕೊಂಡಾಡುತ್ತಿದ್ದಾರೆ. ಬಾಕ್ಸ್ ಆಫೀಸ್ ಕೂಡ ಧೂಳಿಪಟವಾಗಿದೆ. ಈ ಹೊತ್ತಿನಲ್ಲಿ ರಿಷಬ್ ಶೆಟ್ಟಿ ವಿಮಾನದಲ್ಲಿ ಓಡಾಡುತ್ತಿರುವ ಫೋಟೋವನ್ನು ಹೊಂಬಾಳೆ ಫಿಲ್ಮ್ಸ್ (Hombale Films) ಹಂಚಿಕೊಂಡಿದೆ.

    ಇತ್ತೀಚೆಗಷ್ಟೇ ರಿಷಬ್ (Rishabh Shetty) ಆಡಿ ಕಾರು ತಗೆದುಕೊಂಡಿದ್ದರು. ಆ ಫೋಟೋ ಕೂಡ ಸಖತ್ ವೈರಲ್ ಆಗಿತ್ತು. ಇದೀಗ ರಿಷಬ್ ಅವರು ವಿಮಾನದಲ್ಲಿ ಅದರಲ್ಲೂ ಖಾಸಗಿ ವಿಮಾನದಲ್ಲಿ ಪ್ರಯಾಣ ಮಾಡುತ್ತಿರುವ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡ್ ಕ್ರಿಯೇಟ್ ಮಾಡಿದೆ. ‘ಬಡವ್ರ ಮಕ್ಕಳು ಬೆಳಿಬೇಕು’ ಹೆಸರಿನಲ್ಲಿ ಟ್ರೋಲ್ ಕೂಡ ಮಾಡಲಾಗುತ್ತಿದೆ. ಸಾಕಷ್ಟು ಜನರು ಈ ಫೋಟೋವನ್ನು ಹಂಚಿಕೊಂಡಿದ್ದಾರೆ.

    ಬಡವರ ಮಕ್ಕಳು ಬೆಳಿಬೇಕು ಎನ್ನುವ ಮಾತು ಡಾಲಿ ಧನಂಜಯ್ ಅವರದ್ದು. ಆ ಮಾತನ್ನು ರಿಷಬ್ ಶೆಟ್ಟಿಗೆ ಬಳಸಿಕೊಂಡು ಡಾಲಿಗೆ ಟಾಂಗ್ ಕೊಡಲಾಗುತ್ತಿದೆ. ವಿಮಾನದಲ್ಲಿ ಪ್ರಯಾಣದ ಮಾಡುತ್ತಿರುವ ರಿಷಬ್ ಶೆಟ್ಟಿ ಫೋಟೋಗೆ ಡಾಲಿ ಹೊಡೆದ ಡೈಲಾಗ್ ಅನ್ನು ಸೇರಿಸಿ ಟ್ರೋಲ್ ಮಾಡಲಾಗುತ್ತಿದೆ.

    ಕಾಂತಾರ ಸಿನಿಮಾ ಮಾಡುತ್ತಿರುವ ಮೋಡಿ ಅಷ್ಟಿಷ್ಟಲ್ಲ. ರಿಷಬ್ ಶೆಟ್ಟಿ ಭಾರತದಾದ್ಯಂತ ಸುತ್ತುವಂತಾಗಿದೆ. ಎಲ್ಲ ಕಡೆ ಪ್ರಯಾಣ ಮಾಡಲು ಅವರಲ್ಲಿ ವೇಳೆಯಿಲ್ಲ. ಹಾಗಾಗಿ ಹೊಂಬಾಳೆ ಫಿಲ್ಮ್ಸ್ ನವರು ಬಾಡಿಗೆ ಖಾಸಗಿ ವಿಮಾನ ಬುಕ್ ಮಾಡಿ, ರಿಷಬ್ ಪ್ರಯಾಣಕ್ಕೆ ಅನುಕೂಲ ಕಲ್ಪಿಸಿದ್ದಾರೆ ಎನ್ನಲಾಗುತ್ತಿದೆ. ಈ ಹಿಂದೆ ಯಶ್ ಅವರಿಗೂ ಹಾಗೆಯೇ ಮಾಡಿತ್ತು ಹೊಂಬಾಳೆ ಫಿಲ್ಮ್ಸ್. ಹಾಗಾಗಿ ಇದು ರಿಷಬ್ ಖರೀದಿಸಿದ ವಿಮಾನವಲ್ಲ ಎನ್ನುವುದು ಸ್ಪಷ್ಟನೆ ವಿಚಾರ.

    Live Tv
    [brid partner=56869869 player=32851 video=960834 autoplay=true]

  • ಚೇತನ್ ಕಾಂಟ್ರವರ್ಸಿಗೆ ಪ್ರಗತಿ ರಿಷಬ್ ಶೆಟ್ಟಿ ಪ್ರತಿಕ್ರಿಯೆ

    ಚೇತನ್ ಕಾಂಟ್ರವರ್ಸಿಗೆ ಪ್ರಗತಿ ರಿಷಬ್ ಶೆಟ್ಟಿ ಪ್ರತಿಕ್ರಿಯೆ

    ಸ್ಯಾಂಡಲ್‌ವುಡ್ ನಟ ಚೇತನ್(Actor Chetan) ಇತ್ತೀಚೆಗೆ `ಕಾಂತಾರ’ (Kantara Film) ಸಿನಿಮಾ ನೋಡಿ, ವಿವಾದಾತ್ಮಕ ಹೇಳಿಕೆ ನೀಡಿದ್ದರು. ಭೂತಕೋಲ ಹಿಂದೂ ಸಂಸ್ಕೃತಿಯಲ್ಲ ಎಂಬ ಅವರ ಹೇಳಿಕೆಗೆ ರಿಷಬ್ ಪತ್ನಿ ಪ್ರಗತಿ ಶೆಟ್ಟಿ (Pragathi Shetty) ಪ್ರತಿಕ್ರಿಯೆ ನೀಡಿದ್ದಾರೆ. ಪಬ್ಲಿಕ್ ಟಿವಿ ಡಿಜಿಟಲ್‌ಗೆ ಈ ಕುರಿತು ಮಾತನಾಡಿದ್ದಾರೆ.

    ಸದಾ ವಿವಾದಾತ್ಮಕ ಹೇಳಿಕೆಯ ಮೂಲಕ ಸದ್ದು ಮಾಡುವ ನಟ ಚೇತನ್ ಇದೀಗ ಭೂತಾರಾಧನೆ ಕುರಿತಾಗಿ ನೀಡಿರುವ ಹೇಳಿಕೆಯಿಂದ ಸಾಕಷ್ಟು ಜನರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಇನ್ನೂ `ಕಾಂತಾರ’ (Kantara Film) ಚಿತ್ರದಲ್ಲಿ ಫ್ಯಾಷನ್ ಡಿಸೈನರ್ ಆಗಿ ಪ್ರಗತಿ ಶೆಟ್ಟಿ ಕೆಲಸ ಮಾಡಿದ್ದಾರೆ. ಚೇತನ್ ವಿವಾದದ ಕುರಿತು ರಿಯಾಕ್ಷನ್ ಕೊಟ್ಟಿದ್ದಾರೆ. ಇದನ್ನೂ ಓದಿ:ದೇವರು ಮೆಚ್ಚೋದಿಲ್ಲ ಎಂದು ಸಾನ್ಯ ವಿರುದ್ಧ ರಾಂಗ್ ಆದ ಸಂಬರ್ಗಿ

    ಈ ವಿಚಾರವಾಗಿ ನಾನು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಜನಗಳೇ ಇದಕ್ಕೆ ಉತ್ತರ ಕೊಡ್ತಿದ್ದಾರೆ. ಆ ಉತ್ತರ ಕೊಡಬೇಕೋ ಅವರೇ ಕೊಡುತ್ತಾರೆ ಎಂದು ರಿಷಬ್ ಪತ್ನಿ ಪ್ರಗತಿ ಶೆಟ್ಟಿ ಚೇತನ್ ವಿವಾದದ ಕುರಿತು ಮಾತನಾಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಮಗಳ ಫೋಟೋ ಜೊತೆ ಹೆಸರು ರಿವೀಲ್ ಮಾಡಿದ `ಕಾಂತಾರಾ’ ಹೀರೋ ರಿಷಬ್ ಶೆಟ್ಟಿ

    ಮಗಳ ಫೋಟೋ ಜೊತೆ ಹೆಸರು ರಿವೀಲ್ ಮಾಡಿದ `ಕಾಂತಾರಾ’ ಹೀರೋ ರಿಷಬ್ ಶೆಟ್ಟಿ

    ಸ್ಯಾಂಡಲ್‌ವುಡ್ ನಟ ಕಮ್ ನಿರ್ದೇಶಕ ರಿಷಬ್ ಶೆಟ್ಟಿ (Rishab Shetty) ಇದೀಗ `ಕಾಂತಾರಾ'(Kantara Film) ಚಿತ್ರದ ಯಶಸ್ಸಿನ ಉತ್ತುಂಗದಲ್ಲಿ ತೇಲುತ್ತಿದ್ದಾರೆ. ಇದೇ ಖುಷಿಯಲ್ಲಿ ಮುದ್ದು ಮಗಳ ಫೋಟೋ ಮತ್ತು ಚೆಂದದ ಹೆಸರನ್ನು ಸಾಮಾಜಿಕ ಜಾಲತಾಣದ ಮೂಲಕ ರಿವೀಲ್ ಮಾಡಿದ್ದಾರೆ.

    ಬೆಲ್‌ಬಾಟಂ, ಹೀರೋ, ಹರಿಕಥೆಯಲ್ಲ ಗಿರಿಕಥೆ, ಚಿತ್ರದ ಮೂಲಕ ಮೋಡಿ ಮಾಡಿದ್ದ ನಟ ರಿಷಬ್ ಶೆಟ್ಟಿ ಈಗ `ಕಾಂತಾರ’ ಚಿತ್ರದ ಮೂಲಕ ಸೂಪರ್ ಸಕ್ಸಸ್‌ನ ಕಂಡಿದ್ದಾರೆ. ರಿಷಬ್ ವೃತ್ತಿ ಜೀವನದಲ್ಲಿ `ಕಾಂತಾರಾ’ ಸಿನಿಮಾ ದೊಡ್ಡ ಮೈಲಿಗಲ್ಲನೇ ಸೃಷ್ಟಿಸಿದೆ ಎಂದು ಹೇಳಿದರೆ ತಪ್ಪಾಗಲಾರದು. ಕರಾವಳಿ ಸೊಗಡಿನ ದೈವದ ಕಥೆಯ ಮೂಲಕ ಹಿಸ್ಟರಿ ಕ್ರಿಯೇಟ್ ಮಾಡಿರುವ ರಿಷಬ್ ಶೆಟ್ಟಿ ಇದೀಗ ನವರಾತ್ರಿ ಹಬ್ಬದಂದು ಮುದ್ದು ಮಗಳ ಫೋಟೋ ಮತ್ತು ಹೆಸರನ್ನ ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದಾರೆ. ಇದನ್ನೂ ಓದಿ:ಪತಿ ಧ್ರುವ ಸರ್ಜಾ ಹುಟ್ಟುಹಬ್ಬಕ್ಕೆ ರೊಮ್ಯಾಂಟಿಕ್ ಫೋಟೋ ಜೊತೆ ಪ್ರೇರಣಾ ಲವ್ಲಿ ವಿಶ್ಸ್

    ಎಲ್ಲರಿಗೂ ನವರಾತ್ರಿಯ ಶುಭಾಶಯಗಳು. ನಾಡಹಬ್ಬಕ್ಕೆ ಕಾಂತಾರದ ಯಶಸ್ಸು, ನಾಡಿನ ಜನರ ಪ್ರೀತಿ ಮತ್ತಷ್ಟು ಸಂಭ್ರಮವನ್ನು ತಂದಿವೆ. ಇದಕ್ಕೆ ಕಲಶಪ್ರಾಯವಾಗಿ, ಮಗಳು ರಾಧ್ಯಾಳ ಮುಗ್ಧ ನಗುವೂ ಜೊತೆಯಾಗಿದೆ.. ನಿಮ್ಮೆಲ್ಲರ ಹಾರೈಕೆಗಳಿರಲಿ ಎಂದು ಸಾಮಾಜಿಕ ಜಾಲತಾಣದಲ್ಲಿ ರಿಷಬ್ ಪೋಸ್ಟ್ ಮಾಡಿದ್ದಾರೆ. ಕಳೆದ ಮಾರ್ಚ್ 4ರಂದು ಮಗಳ ಆಗಮನವಾಗಿತ್ತು. ಇದೀಗ 7 ತಿಂಗಳ ನಂತರ ಮಗಳು ರಾಧ್ಯಾಳನ್ನ(Raadhya) ಅಭಿಮಾನಿಗಳಿಗೆ ರಿಷಬ್ ಪರಿಚಯಿಸಿದ್ದಾರೆ.

    2017ರಲ್ಲಿ ಗುರುಹಿರಿಯರ ಸಮ್ಮುಖದಲ್ಲಿ ರಿಷಬ್ ಮತ್ತು ಪ್ರಗತಿ ಶೆಟ್ಟಿ(Pragathi Shetty) ಹಸೆಮಣೆ ಏರಿದ್ದರು. ಬಳಿಕ 2019ರಲ್ಲಿ ಮಗ ರಣ್ವೀತ್ ಶೆಟ್ಟಿಯ ಆಗಮನವಾಗಿತ್ತು. ಮಾರ್ಚ್ 4, 2022ರಂದು ಮಗಳು ರಾಧ್ಯಾಳ ಎಂಟ್ರಿಯಾಗಿದೆ. ದಸರಾ ಹಬ್ಬದ ಶುಭ ಸಂದರ್ಭದಲ್ಲಿ ಮಗಳನ್ನ ಅಭಿಮಾನಿಗಳಿಗೆ ರಿಷಬ್ ಪರಿಚಯಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ದುಬಾರಿ ಕಾರು ಖರೀದಿಸಿದ ನಟ ರಿಷಬ್ ಶೆಟ್ಟಿ

    ದುಬಾರಿ ಕಾರು ಖರೀದಿಸಿದ ನಟ ರಿಷಬ್ ಶೆಟ್ಟಿ

    ಸ್ಯಾಂಡಲ್‌ವುಡ್‌ನಲ್ಲಿ ನಗುವಿನ ಕಚಗುಳಿ ಇಡುವಲ್ಲಿ ಯಶಸ್ವಿಯಾಗಿರುವ ʻಹರಿಕಥೆ ಅಲ್ಲ ಗಿರಿಕಥೆʼ ಚಿತ್ರದ ನಂತರ ನಟ ಕಮ್ ನಿರ್ದೇಶಕ ರಿಷಬ್ ಶೆಟ್ಟಿ ಹೊಸ ಆಡಿ ಕಾರೊಂದನ್ನ ಖರೀದಿಸಿದ್ದಾರೆ. ನಿಮ್ಮ ಪರಿಶ್ರಮ ಮತ್ತು ಬದ್ಧತೆ ಯಾವಾಗಲೂ ಹೆಮ್ಮೆ ಆಗುತ್ತದೆ ಎಂದು ಪತಿಯನ್ನು ಪತ್ನಿ ಪ್ರಗತಿ ಶೆಟ್ಟಿ ಹೊಗಳಿದ್ದಾರೆ. ಸದ್ಯ ಈ ಪೋಸ್ಟ್ ಸಖತ್ ವೈರಲ್ ಆಗುತ್ತಿದೆ.

    ಚಂದನವನದಲ್ಲಿ ಸಾಕಷ್ಟು ಸಿನಿಮಾಗಳಲ್ಲಿ ನಟ, ನಿರ್ದೇಶಕ, ನಿರ್ಮಾಪಕನಾಗಿ ಗಮನ ಸೆಳೆದ ಪ್ರತಿಭೆ ರಿಷಬ್ ಶೆಟ್ಟಿ ಇತ್ತೀಚೆಗಷ್ಟೇ ಹರಿಕಥೆ ಅಲ್ಲ ಗಿರಿಕಥೆ ಚಿತ್ರದ ಮೂಲಕ ಗಲ್ಲಾಪಟ್ಟಿಗೆಯಲ್ಲಿ ಸೌಂಡ್ ಮಾಡಿದ್ದರು. ಈ ಬೆನ್ನಲ್ಲೇ ಈಗ ಹೊಸ ದುಬಾರಿ ಕಾರೊಂದನ್ನ ಕೊಂಡುಕೊಂಡಿದ್ದಾರೆ. `ಆಡಿ ಕ್ಯೂ7′ ಖರೀದಿಸಿರುವ ಫೋಟೋವನ್ನು ಶೇರ್ ಮಾಡಿ, ಪತ್ನಿ ಪ್ರಗತಿ ಸಂಭ್ರಮಿಸಿದ್ದಾರೆ. ಇದನ್ನೂ ಓದಿ:ಕೊಠಡಿ ಮುಂದೆ ಹೈಡ್ರಾಮಾ- ಪವಿತ್ರ ಲೋಕೇಶ್, ನರೇಶ್ ಮೇಲೆ ಚಪ್ಪಲಿಯಿಂದ ಹಲ್ಲೆಗೆ ಯತ್ನಿಸಿದ ರಮ್ಯಾ

    ರಿಷಬ್ ಶೆಟ್ಟಿ ಸಿನಿಮಾಗಳ ಮೂಲಕ ಸಂಚಲನ ಮೂಡಿಸಿದ್ರೆ, ಪತ್ನಿ ಪ್ರಗತಿ ಶೆಟ್ಟಿ ಚಿತ್ರರಂಗದಲ್ಲಿ ಕಾಸ್ಟ್ಯೂಮ್ ಡಿಸೈನರ್ ಆಗಿ ಗಮನ ಸೆಳೆದಿದ್ದಾರೆ. ಈಗ ಮನೆಗೆ ಬಂದಿರುವ ಹೊಸ ಆಡಿ ಕಾರಿನ ಮುಂದೆ ನಿಂತು ರಿಷಬ್ ದಂಪತಿ ಫೋಟೋ ಕ್ಲಿಕಿಸಿಕೊಂಡಿದ್ದಾರೆ. ಈ ಫೋಟೋಗಳು ಈಗ ವೈರಲ್ ಆಗುತ್ತಿದೆ. ಆಡಿ ಕ್ಯೂ7 ಹೊಸದಾಗಿ ಸೇರ್ಪಡೆ ಆಯ್ತು. ನಿಮ್ಮ ಪರಿಶ್ರಮ ಮತ್ತು ಬದ್ಧತೆ ಬಗ್ಗೆ ಯಾವಾಗಲೂ ಹೆಮ್ಮೆ ಆಗುತ್ತದೆ ಎಂದು ಖುಷಿಯಿಂದ ಪತ್ನಿ ಪ್ರಗತಿ ಶೆಟ್ಟಿ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. ಇದೀಗ ಅಭಿಮಾನಿಗಳು, ಮತ್ತು ಸ್ನೇಹಿತರು ದಂಪತಿಗೆ ಶುಭಹಾರೈಸುತ್ತಿದ್ದಾರೆ.

    Live Tv

  • ಹೆಣ್ಣು ಮಗುವಿನ ತಂದೆಯಾದ ರಿಷಬ್ ಶೆಟ್ಟಿ

    ಹೆಣ್ಣು ಮಗುವಿನ ತಂದೆಯಾದ ರಿಷಬ್ ಶೆಟ್ಟಿ

    ಬೆಂಗಳೂರು: ಸ್ಯಾಂಡಲ್‍ವುಡ್ ನಟ ಕಮ್ ನಿರ್ಮಾಪಕ ರಿಷಬ್ ಶೆಟ್ಟಿ ಅವರ ಪತ್ನಿ ಪ್ರಗತಿ ಅವರು 2ನೇ ಮಗುವಿಗೆ ಜನ್ಮ ನೀಡಿದ್ದಾರೆ. ಈ ವಿಚಾರವನ್ನು ರಿಷಬ್ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಸಮತೋಷವನ್ನು ವ್ಯಕ್ತಪಡಿಸಿದ್ದಾರೆ.

    ಇಷ್ಟೇ ಚಂದದ ಮಗಳು ಹುಟ್ಟಿದ್ದಾಳೆ. ತಾಯಿ ಮಗು ಇಬ್ಬರು ಆರೋಗ್ಯವಾಗಿದ್ದಾರೆ ಎಂದು ಬರೆದುಕೊಂಡು ದಂಪತಿ ಇಬ್ಬರು ಒಟ್ಟಿಗೆ ಇರುವ ಪೋಟೋವನ್ನು ಸೋಶಿಯಲ್ ಮೀಡಿಯಾದಲ್ಲಿ ರಿಷಬ್ ಶೆಟ್ಟಿ ಹಂಚಿಕೊಂಡಿದ್ದಾರೆ. ಈ ಫೋಟೋವನ್ನು ನೋಡಿದ ಅಭಿಮಾನಿಗಳು ಕಾಮೆಂಟ್ ಮಾಡುವ ಮೂಲಕವಾಗಿ ಶುಭಕೋರುತ್ತಿದ್ದಾರೆ. ಹೊಸ ವರ್ಷಕ್ಕೆ ಹೊಸ ಸಂತಸದ ಸುದ್ದಿ ಹಂಚಿಕೊಂಡ ರಿಷಬ್ ಶೆಟ್ಟಿ

    2019 ಏಪ್ರಿಲ್ 7 ರಂದು ರಿಷಬ್ ಶೆಟ್ಟಿ ಅವರ ಪತ್ನಿ ಪ್ರಗತಿ ಅವರು ಗಂಡು ಮಗುವಿಗೆ ಜನ್ಮ ನೀಡಿದ್ದರು. ರಣ್ವಿತ್ ಶೆಟ್ಟಿ ಎಂದು ನಾಮಕರಣವನ್ನು ಮಾಡಿದ್ದಾರೆ. ಇದೀಗ ಈ ಕುಟುಂಬ 2ನೇ ಸದಸ್ಯನ ಆಗಮ ಮಾಡಿಕೊಂಡಿರುವ ಸಂತೋಷದಲ್ಲಿದೆ. ಇದನ್ನೂ ಓದಿ: ಯುಗಾದಿ ಹಬ್ಬದಂದೇ ರಿಷಬ್ ಶೆಟ್ಟಿ ಮನೆಗೆ ಪುಟಾಣಿ ಹೀರೋ ಎಂಟ್ರಿ

    ರಿಷಬ್ ಶೆಟ್ಟಿ ಅವರು ಫ್ರೆಬವರಿ 9 ರಂದು 2017 ರಲ್ಲಿ ಮೂಲತಃ ಶಿವಮೊಗ್ಗದ ರಿಪ್ಪನ್ ಪೇಟೆಯ ಪ್ರಗತಿ ಅವರನ್ನು ಮದುವೆಯಾಗಿದ್ದರು. ರಿಷಬ್ ಶೆಟ್ಟಿ ಅವರು ಹಿಟ್ ಸಿನಿಮಾಗಳನ್ನು ನೀಡಿತ್ತಾ ಸ್ಯಾಂಡಲ್‍ವುಡ್‍ನಲ್ಲಿ ತಮ್ಮದೇ ಆಗಿರುವ ಚಾಪನ್ನು ಮೂಡಿಸಿದ್ದಾರೆ.

  • ಯುಗಾದಿ ಹಬ್ಬದಂದೇ ರಿಷಬ್ ಶೆಟ್ಟಿ ಮನೆಗೆ ಪುಟಾಣಿ ಹೀರೋ ಎಂಟ್ರಿ

    ಯುಗಾದಿ ಹಬ್ಬದಂದೇ ರಿಷಬ್ ಶೆಟ್ಟಿ ಮನೆಗೆ ಪುಟಾಣಿ ಹೀರೋ ಎಂಟ್ರಿ

    ಬೆಂಗಳೂರು: ನಟ ಮತ್ತು ನಿರ್ದೇಶಕ ರಿಷಬ್ ಶೆಟ್ಟಿ ಅವರು ‘ಬೆಲ್ ಬಾಟಂ’ ಸಿನಿಮಾದ ಯಶಸ್ವಿನ ಸಂತಸದಲ್ಲಿದ್ದರು. ಈಗ ಯುಗಾದಿ ಹಬ್ಬದಲ್ಲೇ ಅವರ ಪತ್ನಿ ಗಂಡು ಮಗುವಿಗೆ ಜನ್ಮ ಕೊಟ್ಟಿದ್ದಾರೆ. ಈ ಮೂಲಕ ತಂದೆಯಾದ ಖುಷಿಯಲ್ಲಿ ರಿಷಬ್ ಶೆಟ್ಟಿ ಇದ್ದಾರೆ.

    ನಟ ರಿಷಬ್ ಶೆಟ್ಟಿ ಅವರ ಪತ್ನಿ ಪ್ರಗತಿ ಶೆಟ್ಟಿ ಅವರಿಗ ಗಂಡು ಮಗು ಜನಿಸಿದೆ. ಈ ಬಗ್ಗೆ ಸ್ವತಃ ರಿಷಬ್ ಶೆಟ್ಟಿ ಅವರು ಟ್ವೀಟ್ ಮಾಡುವ ಮೂಲಕ ತಿಳಿಸಿದ್ದಾರೆ. ರಿಷಬ್ ಶೆಟ್ಟಿ ಅವರು, “Yes…… it’s a Hero” ಎಂದು ಬರೆದ ಹುಡುಗನ ಎಮೋಜಿ ಹಾಕಿದ್ದಾರೆ. ಜೊತೆಗೆ ಆಸ್ಪತ್ರೆಯ ಬೆಡ್ ಮೇಲಿರುವ ಪತ್ನಿಯ ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಂಡಿದ್ದಾರೆ.

    ರಿಷಬ್ ಶೆಟ್ಟಿ ಅವರು ಫ್ರೆಬವರಿ 9 ರಂದು 2017 ರಲ್ಲಿ ಮೂಲತಃ ಶಿವಮೊಗ್ಗದ ರಿಪ್ಪನ್ ಪೇಟೆಯ ಪ್ರಗತಿ ಅವರನ್ನು ಮದುವೆಯಾಗಿದ್ದರು. ಸದ್ಯಕ್ಕೆ ರಿಷಬ್ ಶೆಟ್ಟಿ ಅಭಿನಯದ ‘ಬೆಲ್ ಬಾಟಂ’ ಸಿನಿಮಾ 50 ದಿನಗಳನ್ನು ಪೂರೈಸಿ ಯಶಸ್ವಿ ಕಾಣುತ್ತಿದೆ.