Tag: ಪ್ರಜಾಪ್ರಭುತ್ವ

  • ಮೋದಿ ಸರ್ಕಾರ ಪ್ರಜಾಪ್ರಭುತ್ವದ ಕತ್ತು ಹಿಸುಕಿದೆ: 141 ಸಂಸದರ ಅಮಾನತಿಗೆ ಸೋನಿಯಾ ಗಾಂಧಿ ಕಿಡಿ

    ಮೋದಿ ಸರ್ಕಾರ ಪ್ರಜಾಪ್ರಭುತ್ವದ ಕತ್ತು ಹಿಸುಕಿದೆ: 141 ಸಂಸದರ ಅಮಾನತಿಗೆ ಸೋನಿಯಾ ಗಾಂಧಿ ಕಿಡಿ

    ನವದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ (Winter Parliament Session) ಅಶಿಸ್ತಿನ ನಡವಳಿಕೆ ಹಿನ್ನೆಲೆ 141 ಸಂಸದರನ್ನು (MP) ಅಮಾನತುಗೊಳಿಸಿದ ಕುರಿತು ಕಾಂಗ್ರೆಸ್ ಸಂಸದೀಯ ಪಕ್ಷದ (CPP) ಮುಖ್ಯಸ್ಥೆ ಸೋನಿಯಾ ಗಾಂಧಿ (Sonia Gandhi) ಪ್ರತಿಕ್ರಿಯಿಸಿದ್ದು, ನರೇಂದ್ರ ಮೋದಿ (Narendra Modi) ಸರ್ಕಾರ ಪ್ರಜಾಪ್ರಭುತ್ವದ ಕತ್ತು ಹಿಸುಕಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ವಿರೋಧ ಪಕ್ಷದ 141 ಸಂಸದರನ್ನು ಸರ್ಕಾರ ಅಮಾನತುಗೊಳಿಸಿರುವುದನ್ನು ಖಂಡಿಸಿದ ಅವರು, ಸಂಪೂರ್ಣವಾಗಿ ಸಮಂಜಸವಾದ ಮತ್ತು ನ್ಯಾಯಸಮ್ಮತವಾದ ಬೇಡಿಕೆಗೆ ಒತ್ತಾಯಿಸಿದ್ದಕ್ಕಾಗಿ ಹಿಂದೆಂದೂ ಇಷ್ಟು ವಿರೋಧ ಪಕ್ಷದ ಸಂಸದರನ್ನು ಸದನದಿಂದ ಅಮಾನತುಗೊಳಿಸಿಲ್ಲ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ:ಉಪರಾಷ್ಟ್ರಪತಿಗೆ ಅವಮಾನಿಸಿದ್ದನ್ನು ನೋಡಿ ದಿಗ್ಭ್ರಮೆಗೊಂಡಿದ್ದೇನೆ: ಮುರ್ಮು ಬೇಸರ

    ಡಿಸೆಂಬರ್ 13ರಂದು ಸಂಸತ್ ಭವನದಲ್ಲಿ ನಡೆದ ಭದ್ರತಾ ಉಲ್ಲಂಘನೆ (Security Breach) ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah)ಅವರಿಂದ ಹೇಳಿಕೆ ನೀಡುವಂತೆ ವಿಪಕ್ಷ ನಾಯಕರು ಒತ್ತಾಯಿಸಿದ್ದಾರೆ. ಭದ್ರತಾ ಲೋಪದ ಕುರಿತು ಅಮಿತ್ ಶಾ ಹೇಳಿಕೆ ಕೊಡಬೇಕಾಗಿತ್ತು ಎಂದು ಸಂಸದರನ್ನು ಬೆಂಬಲಿಸಿದರು. ಇದನ್ನೂ ಓದಿ: ಇವಿಎಂ ಬಗ್ಗೆ ಮತ್ತೆ ವಿಪಕ್ಷಗಳಿಗೆ ಅನುಮಾನ – ವಿವಿಪ್ಯಾಟ್‌ ಸ್ಲಿಪ್‌ ಮತದಾರರ ಕೈಗೆ ನೀಡಬೇಕು

  • ಮಹಾರಾಷ್ಟ್ರದ ಜನರು ಪ್ರಜಾಪ್ರಭುತ್ವ ವಿರೋಧಿ ಶಕ್ತಿಗಳಿಗೆ ಬಲಿಯಾಗುವುದಿಲ್ಲ: ಶರದ್ ಪವಾರ್

    ಮಹಾರಾಷ್ಟ್ರದ ಜನರು ಪ್ರಜಾಪ್ರಭುತ್ವ ವಿರೋಧಿ ಶಕ್ತಿಗಳಿಗೆ ಬಲಿಯಾಗುವುದಿಲ್ಲ: ಶರದ್ ಪವಾರ್

    ಮುಂಬೈ: ಜಾತಿ ಮತ್ತು ಧರ್ಮದ ಹೆಸರಿನಲ್ಲಿ ಕೆಲವು ಗುಂಪುಗಳು ರಾಜ್ಯ ಮತ್ತು ದೇಶದಲ್ಲಿ ಜನರ ನಡುವೆ ಬಿರುಕು ಮೂಡಿಸುವ ಪ್ರಯತ್ನ ಮಾಡುತ್ತಿವೆ. ಮಹಾರಾಷ್ಟ್ರದ (Maharashtra) ಜನರು ಪ್ರಜಾಪ್ರಭುತ್ವ ವಿರೋಧಿ ಶಕ್ತಿಗಳಿಗೆ ಬಲಿಯಾಗುವುದಿಲ್ಲ ಎಂದು ಎನ್‌ಸಿಪಿ (NCP) ನಾಯಕ ಶರದ್ ಪವಾರ್ (Sharad Pawar) ಹೇಳಿದ್ದಾರೆ.

    ಕರಡದಲ್ಲಿ (Karada) ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ನಾವು ಉದ್ಧವ್ ಠಾಕ್ರೆ (Uddhav Thackeray) ನೇತೃತ್ವದಲ್ಲಿ ಮಹಾರಾಷ್ಟ್ರಕ್ಕೆ ಸೇವೆ ಸಲ್ಲಿಸುತ್ತಿದ್ದೆವು. ಆದರೆ ನಮ್ಮ ಸರ್ಕಾರವನ್ನು ಕೆಲವರು ಪತನಗೊಳಿಸಿದರು. ಪಶ್ಚಿಮ ಬಂಗಾಳ ಸರ್ಕಾರದ ಮೇಲೆ ದಾಳಿ ನಡೆಸಲಾಗುತ್ತಿದೆ. ದೆಹಲಿ, ಪಂಜಾಬ್‌ನಲ್ಲೂ ಇದೇ ಆಗುತ್ತಿದೆ ಎಂದರು. ಇದನ್ನೂ ಓದಿ: ಅವಿವಾಹಿತರಿಗೆ ಶೀಘ್ರವೇ ಪಿಂಚಣಿ ಜಾರಿಗೆ- ಹರಿಯಾಣ ಸಿಎಂ ಘೋಷಣೆ

    ಇಂದು ಮಹಾರಾಷ್ಟ್ರಮತ್ತು ದೇಶದಲ್ಲಿ ಕೆಲವು ಗುಂಪುಗಳಿಂದ ಸಮಾಜದಲ್ಲಿ ಜಾತಿ ಮತ್ತು ಧರ್ಮದ ಹೆಸರಿನಲ್ಲಿ ಬಿರುಕು ಮೂಡಿಸಲಾಗುತ್ತಿದೆ. ನಾವು ಬಿಜೆಪಿ ವಿರುದ್ಧ ನಿಲ್ಲಲು ಪ್ರಯತ್ನಿಸಿದ್ದೇವೆ. ಆದರೆ ದುರಾದೃಷ್ಟವಶಾತ್ ನಮ್ಮಲ್ಲಿ ಕೆಲವರು ಅದಕ್ಕೆ ಬಲಿಯಾದರು ಎಂದು ತಮ್ಮ ಸಹೋದರ ಸಂಬಂಧಿ ಅಜಿತ್ ಪವಾರ್ ಹೆಸರು ಉಲ್ಲೇಖಿಸದೇ ವಾಗ್ದಾಳಿ ನಡೆಸಿದರು. ಇದನ್ನೂ ಓದಿ: Odisha Train Tragedy: ದುರಂತಕ್ಕೆ ಸಿಕ್ತು ಅಸಲಿ ಕಾರಣ – ಸುರಕ್ಷತೆಗೆ ಹೊಸ ಟೆಕ್ನಾಲಜಿ ಬಳಸುವ ಪ್ರಯತ್ನ

    ಸಾರ್ವಜನಿಕರ ಬೆಂಬಲದಿಂದ ನಾವು ಮತ್ತೆ ಬಲಗೊಳ್ಳುತ್ತೇವೆ. ಅದೇನೇ ಇದ್ದರೂ ಮಹಾರಾಷ್ಟ್ರದ ಜನರು ಈ ಪ್ರಜಾಪ್ರಭುತ್ವ ವಿರೋಧಿ ಶಕ್ತಿಗಳಿಗೆ ಶರಣಾಗುವುದಿಲ್ಲ. ಮಹಾರಾಷ್ಟ್ರಮತ್ತೆ ಪ್ರಗತಿಯ ಹಾದಿಯಲ್ಲಿ ಸಾಗುತ್ತದೆ. ಆ ನಿಟ್ಟಿನಲ್ಲಿ ನಾವು ಪ್ರಯತ್ನ ಮುಂದುವರಿಸುತ್ತೇವೆ ಎಂದು ಭರವಸೆ ನೀಡಿದರು. ಇದನ್ನೂ ಓದಿ: Maharashtra Politics: ಅಜಿತ್ ಪವಾರ್, 9 ಶಾಸಕರ ವಿರುದ್ಧ ಅನರ್ಹತೆ ಅರ್ಜಿ ಸಲ್ಲಿಕೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಬಸವ ತತ್ವದಿಂದ ಭಾರತದ ಪ್ರಜಾಪ್ರಭುತ್ವ ಸದೃಢ- ರಾಹುಲ್ ಗಾಂಧಿ

    ಬಸವ ತತ್ವದಿಂದ ಭಾರತದ ಪ್ರಜಾಪ್ರಭುತ್ವ ಸದೃಢ- ರಾಹುಲ್ ಗಾಂಧಿ

    ಬಾಗಲಕೋಟೆ: ಭಾರತದಲ್ಲಿ ಪ್ರಜಾಪ್ರಭುತ್ವದ (Democracy) ತಳಹದಿಯನ್ನು ಬಸವಣ್ಣನವರ (Basavanna) ಚಿಂತನೆಗಳು ಸದೃಢಗೊಳಿಸಿವೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಅಭಿಪ್ರಾಯಪಟ್ಟಿದ್ದಾರೆ.

    ಕೂಡಲಸಂಗಮದಲ್ಲಿ (Kudala Sangama) ಭಾನುವಾರ ಬಸವಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಭಾರತದಲ್ಲಿ ಸಂಸದೀಯ ಪ್ರಜಾಪ್ರಭುತ್ವ ಬರಲು ಬಸವಣ್ಣನವರ ಅನುಭವ ಮಂಟಪ ಕಾರಣವಾಗಿದೆ. ಎಲ್ಲಿ ಕತ್ತಲಿದೆಯೋ ಅಲ್ಲೇ ಒಂದು ಕಡೆ ಬೆಳಕಿರುತ್ತದೆ. ಹಾಗೆಯೇ ಕತ್ತಲು ತುಂಬಿದ ಸಮಾಜಕ್ಕೆ ಬೆಳಕು ನೀಡಿದ ಬಸವಣ್ಣ ಎಲ್ಲಾ ಕಾಲಕ್ಕೂ ದಾರಿದೀಪವಾಗಿದ್ದಾರೆ. ಅವರ ಜಯಂತಿಯ ಕಾರ್ಯಕ್ರಮದಲ್ಲಿ ನಾನು ಪಾಲ್ಗೊಂಡಿರುವುದು ಸಂತಸ ತಂದಿದೆ ಎಂದಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯ ಮೇಲಿನ ಆರೋಪ ಇಡೀ ಕುರುಬ ಸಮಾಜಕ್ಕೆ ಮಾಡ್ತಿರೋ ಅವಮಾನವಲ್ಲವೇ – ಕಾಂಗ್ರೆಸ್‌ ಪ್ರಶ್ನೆ

    ಬಸವಣ್ಣನವರು ತಮ್ಮನ್ನ ತಾವು ಪ್ರಶ್ನೆ ಮಾಡಿಕೊಳ್ಳುತ್ತಿದ್ದರು. ಇದರಿಂದ ತಾವು ಶುದ್ಧರಾಗುತ್ತಿದ್ದರು. ಇದರಿಂದ ಬೇರೆಯವರ ಶುದ್ಧತೆ ಬಗ್ಗೆ ಮಾತನಾಡಲು ಸಾಧ್ಯವಾಗುತ್ತದೆ. ಬಸವಣ್ಣನವರು ಕೇವಲ ಎಂಟು ವರ್ಷಕ್ಕೆ ಜನಿವಾರ ನಿರಾಕರಣೆ ಮಾಡಿದರು. ಅಷ್ಟು ಚಿಕ್ಕ ವಯಸ್ಸಿಗೆ ಹೇಗೆ ಇಂತಹ ಯೋಚನೆ ಅವರಲ್ಲಿ ಬಂತು ಎಂದು ನಾನು ಸ್ವಾಮೀಜಿಯವರಲ್ಲಿ ಕೇಳಿದೆ. ಅದಕ್ಕೆ ಸ್ವಾಮೀಜಿ ಜಾತಿ ಪ್ರಭುತ್ವ ಹಾಗೂ ಸಮಾಜದ ಬಗ್ಗೆ ತಮ್ಮೊಳಗೆ ಪ್ರಶ್ನಿಸಿಕೊಂಡು ಆಲೋಚಿಸುತ್ತಿದ್ದರು. ಇದರಿಂದ ಸತ್ಯವನ್ನು ತಿಳಿದುಕೊಳ್ಳುತ್ತಿದ್ದರು ಎಂದರು. ಅಲ್ಲದೇ ನನಗೆ ಅರ್ಥ ಆಗುವಂತೆ ಹಿಂದಿಯಲ್ಲೇ ಮಾತನಾಡಿದ ಸ್ವಾಮೀಜಿಯವರಿಗೆ ಧನ್ಯವಾದಗಳು ಎಂದು ಹೇಳಿದ್ದಾರೆ.

    ಆದರೆ ಇಂದು ಬಹಳಷ್ಟು ಜನ ಸತ್ಯವನ್ನ ತಿಳಿದುಕೊಳ್ಳುತ್ತಾರೆ. ಸಮಾಜದ ಮುಂದೆ ಮಾತನಾಡಲು ಹೆದರಿಕೊಳ್ತಾರೆ. ಬಸವಣ್ಣನವರು ಇದ್ದಾಗ ಅವರನ್ನು ಹೆದರಿಸುವ ಹಾಗೂ ಸಮಸ್ಯೆ ನೀಡುವ ಕೆಲಸಗಳು ನಡೆದಿದ್ದವು. ಆದರೂ ಬಸವಣ್ಣನವರು ತಮ್ಮ ಜೀವನದುದ್ದಕ್ಕೂ ಹೋರಾಟ ನಡೆಸಿದ್ದಾರೆ. ನಾನು ಹಿಂದಿನಿಂದಲೂ ಬಸವಣ್ಣನವರ ಸಿದ್ಧಾಂತಗಳನ್ನು ಓದಿದ್ದೇನೆ. ಅವರು ಸತ್ಯದ ದಾರಿಯಲ್ಲಿ ನಡೆಯಿರಿ ಎಂದು ಸಮಾಜಕ್ಕೆ ಸಂದೇಶ ಕೊಟ್ಟವರು ಎಂದಿದ್ದಾರೆ. ಇದನ್ನೂ ಓದಿ: ಸುಡಾನ್ ಹಿಂಸಾಚಾರ – ವಿಮಾನ ನಿಲ್ದಾಣಗಳ ಸ್ಥಗಿತ; ಪ್ರಜೆಗಳನ್ನು ಕರೆತರಲು ಭೂಮಾರ್ಗ ಹುಡುಕಾಟದಲ್ಲಿ ಭಾರತ

  • ಬಿಜೆಪಿ, ಆರ್‌ಎಸ್‌ಎಸ್‌ನಿಂದ ಪ್ರಜಾಪ್ರಭುತ್ವದ ಮೇಲೆ ದಾಳಿ : ರಾಹುಲ್ ಗಾಂಧಿ

    ಬಿಜೆಪಿ, ಆರ್‌ಎಸ್‌ಎಸ್‌ನಿಂದ ಪ್ರಜಾಪ್ರಭುತ್ವದ ಮೇಲೆ ದಾಳಿ : ರಾಹುಲ್ ಗಾಂಧಿ

    ಬೀದರ್: ಬಿಜೆಪಿ (BJP) ಮತ್ತು ಆರ್‌ಎಸ್‌ಎಸ್ (RSS) ಪ್ರಜಾಪ್ರಭುತ್ವದ (Democracy) ಮೇಲೆ ದಾಳಿ ನಡೆಸುತ್ತಿದ್ದು, ದೇಶದಲ್ಲಿ ದ್ವೇಷ ಮತ್ತು ಹಿಂಸಾಚಾರವನ್ನು ಹರಡುತ್ತಿವೆ ಎಂದು ಕಾಂಗ್ರೆಸ್ (Congress) ನಾಯಕ ರಾಹುಲ್ ಗಾಂಧಿ (Rahul Gandhi) ಕಿಡಿಕಾರಿದ್ದಾರೆ.

    ಸೋಮವಾರ ಬೀದರ್‌ನ (Bidar) ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಬೀದರ್ ಬಸವಣ್ಣನವರ (Basavanna) ಕರ್ಮಭೂಮಿ. ಮೊದಲು ಪ್ರಜಾಪ್ರಭುತ್ವದ ಹಾದಿ ತೋರಿಸಿದ್ದೇ ಬಸವಣ್ಣನವರು. ಇಂದು ದೇಶದಾದ್ಯಂತ ಆರ್‌ಎಸ್‌ಎಸ್ ಮತ್ತು ಬಿಜೆಪಿಯವರು ಪ್ರಜಾಪ್ರಭುತ್ವದ ಮೇಲೆ ದಾಳಿ (Attack) ನಡೆಸುತ್ತಿರುವುದು ಬೇಸರದ ಸಂಗತಿ. ದೇಶದಲ್ಲಿ ಪ್ರಜಾಪ್ರಭುತ್ವನ್ನು ಕಾಪಾಡಿಕೊಳ್ಳಬೇಕೆಂದರೆ ನಾವೆಲ್ಲರೂ ಒಗ್ಗಟ್ಟಾಗಿ ಮುನ್ನಡೆಯಬೇಕು ಎಂದರು. ಇದನ್ನೂ ಓದಿ: ಪತಿಯನ್ನು ತಬ್ಬಿ ಕಣ್ಣೀರಿಟ್ಟ ಶಿಲ್ಪಾ ಜಗದೀಶ್ 

    ಬಿಜೆಪಿ ಹಾಗೂ ಆರ್‌ಎಸ್‌ಎಸ್ ಹಿಂದೂಸ್ಥಾನದಲ್ಲಿ ದ್ವೇಷ ಮತ್ತು ಹಿಂಸಾಚಾರವನ್ನು ಹರಡುತ್ತಿದೆ. ಅಲ್ಲದೇ ಬಡ ಮತ್ತು ದುರ್ಬಲ ವರ್ಗದ ಜನರ ಹಣವನ್ನು ಕಿತ್ತುಕೊಂಡು ಶ್ರೀಮಂತರಿಗೆ ನೀಡುತ್ತಿದೆ. ಪ್ರತೀ ಬ್ಯಾಂಕ್ ಖಾತೆಗೆ 15 ಲಕ್ಷ ರೂ. ಹಣವನ್ನು ಠೇವಣಿ ಇಡುವುದು, ಕಪ್ಪು ಹಣದ ವಿರುದ್ಧ ಸಮರ ಸಾರುವುದು ಎಲ್ಲಾ ಪ್ರಧಾನಿ ನರೇಂದ್ರ ಮೋದಿಯವರ (Narendra Modi) ಭರವಸೆಗಳು ಸುಳ್ಳಾಗಿದೆ. ಕಾಂಗ್ರೆಸ್ ಈ ರೀತಿಯಾದ ಸುಳ್ಳು ಭರವಸೆಗಳನ್ನು ಜನರಿಗೆ ನೀಡುವುದಿಲ್ಲ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ತಕ್ಷಣ ಕೊಟ್ಟಿರುವ ಭರವಸೆಗಳನ್ನು ಈಡೇರಿಸಲಿದೆ ಎಂದರು. ಇದನ್ನೂ ಓದಿ: ಬಿಜೆಪಿ ಅಭ್ಯರ್ಥಿ ಮುನಿರತ್ನ ನಾಮಪತ್ರ ಸಲ್ಲಿಕೆ 

    ಕರ್ನಾಟಕದಲ್ಲಿ ಮೇ 10ರಂದು ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಕನಿಷ್ಠ 150 ಸ್ಥಾನಗಳನ್ನು ಗೆದ್ದು ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬರಬೇಕು. ಇದಕ್ಕೆ ಜನರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಬೇಕು ಎಂದು ಮನವಿ ಮಾಡಿದರು. ಇದನ್ನೂ ಓದಿ: ಈ ಬಾರಿ ಚನ್ನಪಟ್ಟಣದ ಬೊಂಬೆ ಆಡಿಸುವವರ‍್ಯಾರು? 

    ಕಾಂಗ್ರೆಸ್ ಪಕ್ಷ ಜನರಿಗೆ ಗೃಹಜ್ಯೋತಿ, ಗೃಹಲಕ್ಷ್ಮಿ, ಅನ್ನಭಾಗ್ಯ ಹಾಗೂ ಯುವನಿಧಿ ಎಂಬ ನಾಲ್ಕು ಗ್ಯಾರಂಟಿಗಳನ್ನು ಘೋಷಿಸಿದೆ. ಕಾಂಗ್ರೆಸ್ ಆಡಳಿತಕ್ಕೆ ಬಂದ ನಂತರ ಸರ್ಕಾರದ ಮೊದಲ ಕ್ಯಾಬಿನೆಟ್ ಸಭೆಯಲ್ಲಿ ಚುನಾವಣಾ (Election) ಸಮಯದಲ್ಲಿ ನೀಡಿದಂತಹ ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸುವ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ. ಕಾಂಗ್ರೆಸ್‌ನಿಂದ ಕರ್ನಾಟಕದ ಮುಖ್ಯಮಂತ್ರಿ ಯಾರೇ ಆಗಲಿ, ಅಧಿಕಾರಕ್ಕೆ ಬಂದ ಮೊದಲ ದಿನವೇ ಇದು ಜಾರಿಯಾಗಲಿದೆ ಎಂದು ಭರವಸೆ ನೀಡಿದರು. ಇದನ್ನೂ ಓದಿ: 3 ಪಕ್ಷದ ಘಟಾನುಘಟಿ ನಾಯಕರಿಂದ ನಾಮಪತ್ರ ಸಲ್ಲಿಕೆ

  • ಇಂದು ಪ್ರಜಾಪ್ರಭುತ್ವ ಅಪಾಯದಲ್ಲಿಲ್ಲ, ವಂಶಾಡಳಿತದ ರಾಜಕೀಯ ಅಪಾಯದಲ್ಲಿದೆ: ಅಮಿತ್‌ ಶಾ

    ಇಂದು ಪ್ರಜಾಪ್ರಭುತ್ವ ಅಪಾಯದಲ್ಲಿಲ್ಲ, ವಂಶಾಡಳಿತದ ರಾಜಕೀಯ ಅಪಾಯದಲ್ಲಿದೆ: ಅಮಿತ್‌ ಶಾ

    ಲಕ್ನೋ: ಇಂದು ಪ್ರಜಾಪ್ರಭುತ್ವ (Democracy) ಅಪಾಯದಲ್ಲಿಲ್ಲ. ಜಾತಿವಾದ ಮತ್ತು ವಂಶಾಡಳಿತದ ರಾಜಕೀಯ ಅಪಾಯದಲ್ಲಿದೆ ಎಂದು ಕೇಂದ್ರ ಗೃಹಸಚಿವ ಅಮಿತ್‌ ಶಾ (Amit Shah) ಕಾಂಗ್ರೆಸ್‌ಗೆ ಕುಟುಕಿದ್ದಾರೆ.

    ಬಿಜೆಪಿಯಿಂದ (BJP) ಪ್ರಜಾಪ್ರಭುತ್ವಕ್ಕೆ ಅಪಾಯ ಎಂಬ ರಾಹುಲ್‌ ಗಾಂಧಿ ಟೀಕೆಗೆ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನೇತೃತ್ವದ ಯುಪಿಎ (UPA) ಸರ್ಕಾರ ತಂದ ಶಾಸನದ ಆಧಾರದ ಮೇಲೆ ಲೋಕಸಭೆಯಿಂದ ರಾಹುಲ್ ಗಾಂಧಿ (Rahul Gandhi) ಅವರನ್ನು ಅನರ್ಹಗೊಳಿಸಲಾಗಿದೆ ಎಂದು ಹೇಳಿದರು.

    ಉತ್ತರ ಪ್ರದೇಶದ ಕೌಶಂಬಿ ಮಹೋತ್ಸವವನ್ನು ಉದ್ಘಾಟಿಸಿದ ನಂತರ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಸ್ವತಂತ್ರ ಭಾರತದ ಇತಿಹಾಸದಲ್ಲಿ ಯಾವತ್ತೂ ಸಭೆ, ಚರ್ಚೆ ಇಲ್ಲದೆ ಬಜೆಟ್ ಅಧಿವೇಶನ (Budgest Session) ಮುಗಿದಿರಲಿಲ್ಲ. ಆದರೆ ಈ ಬಾರಿ ಕಲಾಪ ನಡೆಸಲು ವಿಪಕ್ಷಗಳು ಬಿಡಲಿಲ್ಲ. ರಾಹುಲ್‌ ಗಾಂಧಿ ಅನರ್ಹತೆಯನ್ನು ಪ್ರಶ್ನಿಸಿ ಸಂಸತ್ತಿನ ಕಲಾಪಕ್ಕೆ ಅಡ್ಡಿಪಡಿಸಿದ ವಿರೋಧ ಪಕ್ಷಗಳನ್ನು ದೇಶ ಯಾವತ್ತೂ ಕ್ಷಮಿಸುವುದಿಲ್ಲ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ರಾಹುಲ್‌ ಗಾಂಧಿ ನಾಯಕತ್ವದಲ್ಲಿ ಕಾಂಗ್ರೆಸ್ ಎಂದಿಗೂ ಉದ್ಧಾರವಾಗದು: ಗುಲಾಂ ನಬಿ ಆಜಾದ್

    ಎಲ್ಲಾ ವರ್ಗಗಳ ಸರ್ವತೋಮುಖ ಅಭಿವೃದ್ಧಿಗೆ 2024 ರಲ್ಲಿ ಮತ್ತೊಮ್ಮೆ ನರೇಂದ್ರ ಮೋದಿಯವರನ್ನು (Narendra Modi) ಪ್ರಧಾನಿಯನ್ನಾಗಿ ಆಯ್ಕೆ ಮಾಡುವಂತೆ ಜನರಲ್ಲಿ ಅವರು ಮನವಿ ಮಾಡಿದರು.

    ಭಾರತದ ಪ್ರಜಾಪ್ರಭುತ್ವದಲ್ಲಿ ಕಾಂಗ್ರೆಸ್‌ ಜಾತೀಯತೆ, ರಾಜವಂಶದ ರಾಜಕೀಯ ಮತ್ತು ತುಷ್ಟೀಕರಣ ಮಾಡುತ್ತಿತ್ತು. ಆದರೆ ಪ್ರಧಾನಿ ನರೇಂದ್ರ ಮೋದಿ ಅವರು ಈ ಮೂರನ್ನು ಸೋಲಿಸಿದ್ದಕ್ಕೆ ಕಾಂಗ್ರೆಸ್‌ಗೆ  ಭಯ ಎಂದು ಹೇಳಿದರು.

    ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಕೇಶವ್ ಪ್ರಸಾದ್ ಮೌರ್ಯ ಮತ್ತು ಬ್ರಜೇಶ್ ಪಾಠಕ್ ಮತ್ತು ರಾಜ್ಯ ಬಿಜೆಪಿ ಅಧ್ಯಕ್ಷ ಭೂಪೇಂದ್ರ ಚೌಧರಿ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

    ಮಾನನಷ್ಟ ಪ್ರಕರಣದಲ್ಲಿ ರಾಹುಲ್ ಗಾಂಧಿ ಅವರನ್ನು ಇತ್ತೀಚಿಗೆ ಸೂರತ್ ನ್ಯಾಯಾಲಯವು ದೋಷಿ ಎಂದು ತೀರ್ಪು ನೀಡಿತ್ತು. ಕೋರ್ಟ್‌ ತೀರ್ಪು ನೀಡಿದ 24 ಗಂಟೆಯಲ್ಲಿ ವಯನಾಡ್‌ ಕ್ಷೇತ್ರದ ಸಂಸದರಾಗಿದ್ದ ರಾಹುಲ್‌ ಗಾಂಧಿ ಅವರನ್ನು ಲೋಕಸಭೆಯಿಂದ ಅನರ್ಹಗೊಳಿಸಲಾಗಿತ್ತು. ಅದಾನಿ ಅಕ್ರಮಗಳನ್ನು ರಾಹುಲ್‌ ಗಾಂಧಿ ಪ್ರಶ್ನೆ ಮಾಡಿದ್ದಕ್ಕೆ ಬಿಜೆಪಿ ಸೇಡಿನ ಕ್ರಮವಾಗಿ ಅನರ್ಹ ಮಾಡಲಾಗಿದೆ ಎಂದು ಕಾಂಗ್ರೆಸ್‌ ಆರೋಪಿಸಿ ಸಂಸತ್‌ ಕಲಾಪದಲ್ಲಿ ಪ್ರತಿಭಟನೆ ನಡೆಸಿತ್ತು. ಅದಾನಿ ಪ್ರಕರಣವನ್ನು ಜಂಟಿ ಸಂಸದೀಯ ಸಮಿತಿಯಿಂದ ತನಿಖೆ ನಡೆಸುವಂತೆ ಕಾಂಗ್ರೆಸ್‌ ಪಟ್ಟು ಹಿಡಿದ ಪರಿಣಾಮ ಬಜೆಟ್‌ ಅಧಿವೇಶನದ ಕಲಾಪದಲ್ಲಿ ಯಾವುದೇ ಚರ್ಚೆ ನಡೆದಿರಲಿಲ್ಲ.

  • ರಾಹುಲ್ ಗಾಂಧಿ ಅನರ್ಹತೆ ಸಂವಿಧಾನಬಾಹಿರ: ಶರದ್ ಪವಾರ್

    ರಾಹುಲ್ ಗಾಂಧಿ ಅನರ್ಹತೆ ಸಂವಿಧಾನಬಾಹಿರ: ಶರದ್ ಪವಾರ್

    ಮುಂಬೈ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಅವರ ಲೋಕಸಭಾ ಸದಸ್ಯತ್ವವನ್ನು ಅನರ್ಹಗೊಳಿಸಿರುವುದು ಸಂವಿಧಾನಬಾಹಿರ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (Nationalist Congress Party) ಮುಖ್ಯಸ್ಥ ಶರದ್ ಪವಾರ್ ಹೇಳಿದ್ದಾರೆ.

    ಈ ಕುರಿತು ಟ್ವೀಟ್ ಮಾಡಿರುವ ಅವರು, ರಾಹುಲ್ ಗಾಂಧಿ ಅವರ ಲೋಕಸಭಾ ಸದಸ್ಯತ್ವವನ್ನು ಅನರ್ಹಗೊಳಿಸಿರುವುದು ಸಂವಿಧಾನಬಾಹಿರ. ಪ್ರಜಾಪ್ರಭುತ್ವ (Democracy) ಮೌಲ್ಯಗಳ ಮೇಲಿನ ದಾಳಿಯಾಗಿದೆ ಎಂದು ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ. ಇದನ್ನೂ ಓದಿ: ಉರಿಗೌಡ, ನಂಜೇಗೌಡ ಹೆಸರುಗಳನ್ನು ನಾನು ಸೃಷ್ಟಿ ಮಾಡಿಲ್ಲ : ಅಡ್ಡಂಡ ಕಾರ್ಯಪ್ಪ

    ಕೇರಳದ ವಯನಾಡ್ (Wayanad) ಸಂಸದೀಯ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ರಾಹುಲ್ ಗಾಂಧಿ ಅವರನ್ನು ಗುಜರಾತ್‍ನ ಸೂರತ್ (Surat) ನ್ಯಾಯಾಲಯವು `ಮೋದಿ’ ಉಪನಾಮದ (Modi surname) ಹೇಳಿಕೆಗಾಗಿ ಕ್ರಿಮಿನಲ್ ಮಾನನಷ್ಟ (Defamation) ಮೊಕದ್ದಮೆಯಲ್ಲಿ ಗುರುವಾರ ಎರಡು ವರ್ಷ ಜೈಲು ಶಿಕ್ಷೆ ಪ್ರಕಟಿಸಿತ್ತು. ನಂತರ ಅವರ ಸದಸ್ಯತ್ವವನ್ನು ಶುಕ್ರವಾರ ಅನರ್ಹಗೊಳಿಸಲಾಗಿತ್ತು.

    ನ್ಯಾಯಾಲಯವು ಅವರಿಗೆ ಜಾಮೀನು ನೀಡಿ, ಮೇಲಿನ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಲು ಅವಕಾಶ ನೀಡಿತ್ತು. 30 ದಿನಗಳವರೆಗೆ ಶಿಕ್ಷೆಯನ್ನು ಅಮಾನತುಗೊಳಿಸಿತ್ತು.

    ಇದೇ ರೀತಿ, ಎನ್‍ಸಿಪಿ ಸಂಸದ ಲಕ್ಷದ್ವೀಪ್ ಮಹಮ್ಮದ್ ಫೈಜಲ್ ( Lakshadweep Mohammed Faizal) ಅವರನ್ನು ಕೊಲೆ ಪ್ರಯತ್ನ ಪ್ರಕರಣದಲ್ಲಿ ಅನರ್ಹಗೊಳಿಸಲಾಗಿತ್ತು. ಆದರೆ ಕೇರಳ ಹೈಕೋರ್ಟ್ ಶಿಕ್ಷೆಯನ್ನು ಅಮಾನತುಗೊಳಿಸಿತ್ತು. ಈಗ ರಾಹುಲ್ ಗಾಂಧಿಯವರನ್ನು ಅನರ್ಹಗೊಳಿಸಿರುವುದು ಪ್ರಜಾಪ್ರಭುತ್ವಕ್ಕೆ ವಿರುದ್ಧವಾಗಿದೆ ಎಂದು ಖಂಡಿಸಿ ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: Congress Candidate List- ಯಾವ್ಯಾವ ಸಮುದಾಯಕ್ಕೆ ಎಷ್ಟು ಟಿಕೆಟ್?

  • ಕಾಂಗ್ರೆಸ್, ಜೆಡಿಎಸ್‌ನಲ್ಲಿ ಲೀಡರ್‌ಶಿಪ್ ಡಿಎನ್‌ಎ ಮೂಲಕ ಬರುತ್ತದೆ: ಸಿ.ಟಿ ರವಿ

    ಕಾಂಗ್ರೆಸ್, ಜೆಡಿಎಸ್‌ನಲ್ಲಿ ಲೀಡರ್‌ಶಿಪ್ ಡಿಎನ್‌ಎ ಮೂಲಕ ಬರುತ್ತದೆ: ಸಿ.ಟಿ ರವಿ

    ವಿಜಯಪುರ: ಕಾಂಗ್ರೆಸ್ (Congress)  ಮತ್ತು ಜೆಡಿಎಸ್‌ನಲ್ಲಿ (JDS) ಲೀಡರ್‌ಶಿಪ್ ಡಿಎನ್‌ಎ ಮೂಲಕ ಬರುತ್ತದೆ. ಈ ಎರಡೂ ಪಕ್ಷದಲ್ಲೂ ಅನುವಂಶೀಯ ನಾಯಕತ್ವವಿದೆ. ಈ ಎರಡೂ ಪಕ್ಷಗಳಿಗೂ ಪ್ರಜಾಪ್ರಭುತ್ವದ (Democracy) ಮೇಲೆ ನಂಬಿಕೆ ಇಲ್ಲ. ಆದರೆ ಬಿಜೆಪಿಗೆ (BJP) ಪ್ರಜಾಪ್ರಭುತ್ವದ ಮೇಲೆ ನಂಬಿಕೆಯಿದೆ ಎಂದು ಶಾಸಕ ಹಾಗೂ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ (C.T.Ravi) ಹೇಳಿದರು.

    ವಿಜಯಪುರ (Vijayapura) ಜಿಲ್ಲೆಯ ನಿಡಗುಂದಿಯಲ್ಲಿ ಸೋಮವಾರ ಬಿಜೆಪಿ ವಿಜಯಸಂಕಲ್ಪ ಯಾತ್ರೆ (Vijaya Sankalpa Yatra) ಕೈಗೊಂಡಿದ್ದು, ಯಾತ್ರೆಗೂ ಮುನ್ನ ಬಿಜೆಪಿ ನಾಯಕರ ಸುದ್ದಿಗೋಷ್ಠಿ ಏರ್ಪಡಿಸಲಾಗಿತ್ತು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಸಿ.ಟಿ.ರವಿ, ಬಿಜೆಪಿ ಪಕ್ಷವು ಜನ ಸಾಮಾನ್ಯರ ನೇತೃತ್ವದಿಂದ ಬೆಳೆದು ಬಂದಿದ್ದು, ನೀತಿಗೆ ಅಂಟಿಕೊಂಡಿದೆ. ರಾಜೀವ್ ಗಾಂಧಿ (Rajiv Gandhi) ಇದ್ದ ಸಂದರ್ಭದಲ್ಲಿ ಕಳ್ಳರೆಲ್ಲಾ ಕಾಂಗ್ರೆಸ್ ಪಕ್ಷದಲ್ಲೇ ಇದ್ದರು. ಇದು ರಾಜೀವ್ ಗಾಂಧಿಯವರಿಗೂ ಗೊತ್ತಿತ್ತು. ನಮಗೆ ನಿಯತ್ತಿದೆ. ನಾವು ಅಭಿವೃದ್ಧಿಯ ರಿಪೋರ್ಟ್ ಕಾರ್ಡ್ ಇಟ್ಟುಕೊಂಡು ಮತಗಳನ್ನು ಕೇಳುತ್ತೇವೆ. ಪ್ರಣಾಳಿಕೆಯಲ್ಲಿ ಹೇಳದೇ ಇರುವಂತಹ ಯೋಜನೆಗಳನ್ನು ನಾವು ಕೊಟ್ಟಿದ್ದೇವೆ. ಅಲ್ಲದೇ ಅದರ ಕೆಲಸಗಳನ್ನು ಯಾರಿಗೂ ಹೇಳದೆ ಮಾಡಿ ತೋರಿಸಿದ್ದೇವೆ ಎಂದರು. ಇದನ್ನೂ ಓದಿ: ಚಾರ್ಜ್ ಹಾಕಿದ್ದ ಎಲೆಕ್ಟ್ರಿಕ್ ಬೈಕ್ ಸ್ಫೋಟ 

    ಇದೇ ವೇಳೆ ಮಾಜಿ ಸಚಿವ ಎಂ.ಬಿ ಪಾಟೀಲ್ (M.B.Patil) ವಿರುದ್ಧ ವಾಗ್ದಾಳಿ ನಡೆಸಿದ ಅವರು, ಈ ಹಿಂದೆ ಕೆರೆ ತುಂಬುವ ಯೋಜನೆಯನ್ನು ನಿಮ್ಮದೇ ಸರ್ಕಾರ ತಿರಸ್ಕಾರ ಮಾಡಿತ್ತು. ಮಲ್ಲಿಕಾರ್ಜುನ ಖರ್ಗೆ (Mallikarjun Kharge) ನೀರಾವರಿ ಸಚಿವರಾಗಿದ್ದಾಗ ಕೆರೆ ತುಂಬುವ ಯೋಜನೆಗೆ ಅನುಮತಿ ನೀಡಿರಲಿಲ್ಲ. ಬಿಜೆಪಿ ಸರ್ಕಾರ ಕೆರೆ ತುಂಬುವ ಯೋಜನೆಯನ್ನು ಜಾರಿಗೆ ತಂದಿದೆ. ಇದೀಗ ನೀವೂ ಅದೇ ಯೋಜನೆಯ ಹೆಸರಿನಲ್ಲಿ ಫೋಟೋ ಹಾಕಿಕೊಳ್ಳುತ್ತೀರಿ ಎಂದು ಹೇಳಿದರು. ಇದನ್ನೂ ಓದಿ: Special- ‘ಆಸ್ಕರ್’ ಪ್ರಶಸ್ತಿ ಪಡೆದ ‘ದಿ ಎಲಿಫೆಂಟ್ ವಿಸ್ಪರರ್ಸ್’ ಕಿರುಚಿತ್ರದ ವಿಶೇಷತೆ ಏನು?

    ರಾಜ್ಯದಲ್ಲಿ ಕಾಂಗ್ರೆಸ್ ನಾಯಕರು ಗ್ಯಾರೆಂಟಿ ಕಾರ್ಡ್ ವಿತರಣೆ ಮಾಡುತ್ತಿದ್ದಾರೆ. ಆದರೆ ಕಾಂಗ್ರೆಸ್ ಪಕ್ಷಕ್ಕೆ ದೇಶದಲ್ಲಿ ವಾರೆಂಟ್ ಅವಧಿ ಮುಗಿದಿದೆ. ಇನ್ನು ವಾರೆಂಟಿ ಕಾರ್ಡ್ ನೀಡಿ ಏನು ಪ್ರಯೋಜನ? ಎಲ್ಲಾ ಕಡೆಯೂ ಕಾಂಗ್ರೆಸ್ ಪಕ್ಷ ತಿರಸ್ಕಾರಕ್ಕೆ ಒಳಗಾಗುತ್ತಿದೆ. ಇಷ್ಟಕ್ಕೂ ನೀವು ಕೊಡುತ್ತಿರುವುದು ಫಾಲ್ಸ್ ಕಾರ್ಡ್ ಎಂಬುವುದು ಜನರಿಗೆ ಗೊತ್ತಿದೆ. ನೀವು ಅಧಿಕಾರದಲ್ಲಿ ಇದ್ದ ಸಂದರ್ಭ ಇದನ್ನು ಅನುಷ್ಠಾನಕ್ಕೆ ತಂದಿದ್ದರೆ ಅದೊಂದು ಮಾದರಿಯಾಗುತ್ತಿತ್ತು. ನೀವು ಈ ಗ್ಯಾರೆಂಟಿ ಕಾರ್ಡ್ ಕೊಟ್ಟಿದ್ದರೆ ಅದು ಸತ್ಯದ ಮಾತಾಗುತ್ತಿತ್ತು. ಈ ಫಾಲ್ಸ್ ಕಾರ್ಡ್‌ಗೆ ಮೂರು ಕಾಸಿನ ಕಿಮ್ಮತ್ತು ಕೂಡಾ ಇಲ್ಲ. ಹಾಗಾಗಿ ಫಾಲ್ಸ್ ಕಾರ್ಡ್ ವಿರುದ್ಧ ನಾವು ರಿಪೋರ್ಟ್ ಕಾರ್ಡ್ ಕೊಡುತ್ತೇವೆ. ಕೆಲಸ ಮಾಡಿರುವುದನ್ನು ಜನರ ಮುಂದೆ ಇಟ್ಟು ಮತ ಕೇಳುತ್ತೇವೆ ಎಂದು ಕಿಡಿಕಾರಿದರು. ಇದನ್ನೂ ಓದಿ: `ಕಾಂತಾರ 2’ಗೆ ಚಾಲನೆ ಸಿಗುವ ಮುನ್ನವೇ ಹೊಸ ಸಿನಿಮಾ ನಿರ್ಮಾಣದತ್ತ ರಿಷಬ್ ಶೆಟ್ಟಿ 

    ಸಿದ್ದರಾಮಯ್ಯ (Siddaramaiah) ಏನು ಹೇಳುತ್ತಾರೋ ಅದು ಉಲ್ಟಾ ಆಗುತ್ತದೆ. ಈ ಹಿಂದೆ ಮೋದಿ ಪ್ರಧಾನಿ ಆಗುವುದಿಲ್ಲ ಎಂದಿದ್ದರು, ಆದರೆ ಮೋದಿ (Narendra Modi) ಪ್ರಧಾನಿಯಾದರು. ಯಡಿಯೂರಪ್ಪ (Yediyurappa) ಸಿಎಂ ಆಗುವುದಿಲ್ಲ ಎಂದರು, ಆದರೆ ಯಡಿಯೂರಪ್ಪ ಸಿಎಂ ಆದರು. ಹೀಗಾಗಿ ಇನ್ನುಮುಂದೆ ಸಿದ್ದರಾಮಯ್ಯನವರು ಬಿಜೆಪಿ ಅಧಿಕಾರಕ್ಕೆ ಬರುತ್ತದೆ ಎಂದು ಪ್ರಚಾರ ಮಾಡಬೇಕು ಎಂದು ವ್ಯಂಗ್ಯವಾಡಿದರು. ಇದನ್ನೂ ಓದಿ: ರಾಜಕೀಯದಿಂದ ದೂರವಿರಲು ಕಾರಣರಾದ ಆ ವ್ಯಕ್ತಿ ಬಗ್ಗೆ ಬಹಿರಂಗಪಡಿಸಿದ ರಜನಿಕಾಂತ್

    ಮಂಡ್ಯದಲ್ಲಿ ಉರಿಗೌಡ ನಂಜೇಗೌಡ ಮಹಾದ್ವಾರ ತೆರವು ಮಾಡಿದ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಮಹಾದ್ವಾರ ತೆರವು ಮಾಡಿದ್ದು ಅಕ್ಷಮ್ಯ ಅಪರಾಧ. ದೊಡ್ಡ ನಂಜೇಗೌಡ ಹಾಗೂ ಉರಿಗೌಡ ಅವರು ಟಿಪ್ಪುವನ್ನು ಹತ್ಯೆ ಮಾಡಿದರು. ಯಾಕೆ ಹತ್ಯೆ ಮಾಡಿದರು ಎಂಬ ಸತ್ಯ ಹೊರಬರಬೇಕಾಗಿದೆ. ಅವರಿಗೆ ಇತಿಹಾಸದಲ್ಲಿ ಯಾವ ಗೌರವ ಸಿಗಬೇಕಾಗಿತ್ತೋ ಆ ಗೌರವ ಸಿಕ್ಕಿರಲಿಲ್ಲ. ಅವರಿಗೆ ಮತ್ತೆ ಆ ಗೌರವ ಸಿಗಬೇಕು. ಅದಕ್ಕಾಗಿ ಆ ದ್ವಾರ ಹಾಕಿದ್ದು ಸರಿಯಾಗಿದೆ. ಆ ದ್ವಾರವನ್ನು ತೆರವು ಮಾಡಿದ್ದು ತಪ್ಪು. ಜನರ ಮೂಲಕ ಶಾಶ್ವತವಾಗಿ ಆ ದ್ವಾರವನ್ನು ನಿರ್ಮಾಣ ಮಾಡಲು ಬೇಕಾದ ಶಕ್ತಿಯನ್ನು ನಾವು ಮಂಡ್ಯ(Mandya) ಜನರಿಗೆ ನೀಡುತ್ತೇವೆ ಎಂದು ಭರವಸೆ ನೀಡಿದರು. ಇದನ್ನೂ ಓದಿ: ದೆಹಲಿ ಶಾಸಕರ ಸಂಬಳ ಭರ್ಜರಿ ಹೆಚ್ಚಳ

  • ಈ ಚುನಾವಣೆ ಪ್ರಜಾಪ್ರಭುತ್ವದ ಉಳಿವಿನ ಬಗ್ಗೆ ನಿರ್ಧರಿಸುತ್ತೆ: ಯಶವಂತ್ ಸಿನ್ಹಾ

    ಈ ಚುನಾವಣೆ ಪ್ರಜಾಪ್ರಭುತ್ವದ ಉಳಿವಿನ ಬಗ್ಗೆ ನಿರ್ಧರಿಸುತ್ತೆ: ಯಶವಂತ್ ಸಿನ್ಹಾ

    ನವದೆಹಲಿ: ಈ ಚುನಾವಣೆ ಪ್ರಜಾಪ್ರಭುತ್ವದ ಉಳಿವಿನ ಬಗ್ಗೆ ನಿರ್ಧರಿಸುತ್ತೆ ಎಂದು ವಿರೋಧ ಪಕ್ಷದ ಅಭ್ಯರ್ಥಿ ಯಶವಂತ್ ಸಿನ್ಹಾ ಹೇಳಿದರು.

    ಭಾರತದ 15ನೇ ರಾಷ್ಟ್ರಪತಿಯಾಗಲು ಚುನಾವಣೆ ರೇಸ್‍ನಲ್ಲಿ ದ್ರೌಪದಿ ಮುರ್ಮು ಮತ್ತು ಯಶವಂತ್ ಸಿನ್ಹಾ ಅವರು ಇದ್ದಾರೆ. ಇಂದು ರಾಷ್ಟ್ರಪತಿ ಚುನಾವಣೆ ನಡೆಯುತ್ತಿದ್ದು, ಜುಲೈ 21 ರಂದು ಮತ ಎಣಿಕೆ ನಡೆಯಲಿದೆ. ಜುಲೈ 25 ರಂದು ನೂತನ ರಾಷ್ಟ್ರಪತಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

    ಚುನಾವಣೆ ವೇಳೆ ಯಶವಂತ್ ಸಿನ್ಹಾ ಅವರು ಮಾಧ್ಯಮಗಳೊಂದಿಗೆ ಮಾತನಾಡಿದ್ದು, ಈ ಚುನಾವಣೆಯು ಅತ್ಯಂತ ಮಹತ್ವದ್ದಾಗಿದೆ. ದೇಶದ ಪ್ರಜಾಪ್ರಭುತ್ವಕ್ಕೆ ಈ ಚುನಾವಣೆ ಮಾರ್ಗವಾಗಿದೆ. ಪ್ರಜಾಪ್ರಭುತ್ವವನ್ನು ಉಳಿಸಲು ಮತ್ತು ಸಂವಿಧಾನವನ್ನು ರಕ್ಷಿಸಲು ಎಲ್ಲ ರಾಜಕೀಯ ಪಕ್ಷಗಳು ನನ್ನ ಪರವಾಗಿ ಮತ ಚಲಾಯಿಸುತ್ತವೆ ಎಂದು ನಾನು ಭಾವಿಸುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದನ್ನೂ ಓದಿ: ವರದಾ, ತುಂಗಭದ್ರಾ ನದಿಯಲ್ಲಿ ಹೆಚ್ಚಿದ ನೀರು – ಮೆಕ್ಕೆಜೋಳ ಸೇರಿ ವಿವಿಧ ಬೆಳೆ ಜಲಾವೃತ 

    ನಾನು ಕೇವಲ ರಾಜಕೀಯ ಯುದ್ಧದಲ್ಲಿ ಹೋರಾಡುತ್ತಿಲ್ಲ. ಆದರೆ ಸರ್ಕಾರಿ ಸಂಸ್ಥೆಗಳ ವಿರುದ್ಧವೂ ಹೋರಾಟ ಮಾಡುತ್ತಿದ್ದೇನೆ. ಅವರು ತುಂಬಾ ಶಕ್ತಿಶಾಲಿಯಾಗಿದ್ದಾರೆ, ಹಣದಿಂದ ಎಲ್ಲರನ್ನು ಆಟವಾಡಿಸುತ್ತಿದ್ದಾರೆ ಎಂದು ಕಿಡಿಕಾರಿದರು.

    ನಮ್ಮ ಸಂವಿಧಾನದ ಪೂರ್ವ ಸ್ತಂಭವಾದ ಜಾತ್ಯತೀತತೆಯನ್ನು ರಕ್ಷಿಸಲು ನಾನು ನಿಂತಿದ್ದೇನೆ. ನನ್ನ ಪ್ರತಿಸ್ಪರ್ಧಿ ಅಭ್ಯರ್ಥಿಯು ಈ ಸ್ತಂಭವನ್ನು ನಾಶಪಡಿಸುವ ಮತ್ತು ಬಹುಮತದ ಪ್ರಾಬಲ್ಯವನ್ನು ಸಾಧಿಸಲು ನಿಂತಿದ್ದಾರೆ ಎಂದು ಟೀಕಿಸಿದರು.

    Live Tv
    [brid partner=56869869 player=32851 video=960834 autoplay=true]

  • ಮತದಾನದ ಹಕ್ಕು, ಪ್ರಜಾಪ್ರಭುತ್ವ ಈ ದೇಶದ ಬಹುದೊಡ್ಡ ಪ್ರಮಾದ ಎಂದ ಅಧಿಕಾರಿ – ಕ್ರಮಕ್ಕೆ MP ಸರ್ಕಾರ ಆದೇಶ

    ಮತದಾನದ ಹಕ್ಕು, ಪ್ರಜಾಪ್ರಭುತ್ವ ಈ ದೇಶದ ಬಹುದೊಡ್ಡ ಪ್ರಮಾದ ಎಂದ ಅಧಿಕಾರಿ – ಕ್ರಮಕ್ಕೆ MP ಸರ್ಕಾರ ಆದೇಶ

    ಭೋಪಾಲ್: ಮತದಾನದ ಹಕ್ಕು ಹಾಗೂ ಪ್ರಜಾಪ್ರಭುತ್ವವೇ ಈ ದೇಶದ ಬಹುದೊಡ್ಡ ಪ್ರಮಾದ ಎಂದು ಹೇಳಿಕೆ ನೀಡಿದ್ದ ಸರ್ಕಾರಿ ಅಧಿಕಾರಿ ವಿರುದ್ಧ ಮಧ್ಯಪ್ರದೇಶ ಸರ್ಕಾರ ಶಿಸ್ತು ಕ್ರಮಕ್ಕೆ ಆದೇಶಿಸಿದೆ.

    ಶಿವಪುರಿಯ ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್ (ಎಡಿಎಂ) ಉಮೇಶ್‌ ಶುಕ್ಲಾ ಅವರು ಪ್ರಜಾಪ್ರಭುತ್ವ ಕುರಿತು ವಿವಾದಿತ ಹೇಳಿಕೆ ನೀಡಿದ್ದರು. ಈ ಸಂಬಂಧದ ವೀಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗಿದೆ. ಹೀಗಾಗಿ ಶುಕ್ಲಾ ವಿರುದ್ಧ ಕ್ರಮಕ್ಕೆ ಸರ್ಕಾರ ಆದೇಶ ಹೊರಡಿಸಿದೆ. ಇದನ್ನೂ ಓದಿ: ಇಡಿ ಬಂಧನದಲ್ಲಿ ಎನ್‌ಎಸ್‌ಸಿ ಮಾಜಿ ಸಿಇಒ ಚಿತ್ರಾ

    ಶಿವಪುರಿ ಎಡಿಎಂ ಉಮೇಶ್ ಶುಕ್ಲಾ ಅವರು ರಾಜ್ಯದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಕೊನೆಯ ಹಂತದ ಮತದಾನಕ್ಕೆ ಮುನ್ನ ಕಾಮೆಂಟ್ ಮಾಡಿದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

    ಈ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿರುವ ಗೃಹ ಸಚಿವ ನರೋತ್ತಮ್ ಮಿಶ್ರಾ, ಇದು ಗಂಭೀರ ವಿಷಯವಾಗಿದೆ. ನಾವು ಎಡಿಎಂ ವಿರುದ್ಧ ಶಿಸ್ತು ಕ್ರಮಕ್ಕೆ ನೋಟಿಸ್ ನೀಡಿದ್ದೇವೆ. ಅಧಿಕಾರಿಯನ್ನು ವರ್ಗಾಯಿಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೂ ಪತ್ರ ಬರೆದಿದ್ದೆವು. ಆದರೆ ಅಧಿಕಾರಿಯ ಪದಚ್ಯುತಿಗೆ ಚುನಾವಣಾ ಆಯೋಗವು ಸಮ್ಮತಿ ನೀಡಿದ್ದು, ಅವರನ್ನು ಹುದ್ದೆಯಿಂದ ತೆಗೆದುಹಾಕಲಾಗುವುದು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: 16ರ ಬಾಲಕಿಯಿಂದ 8 ಬಾರಿ ಅಂಡಾಣು ಮಾರಾಟ – 4 ಆಸ್ಪತ್ರೆಗಳು ಶಾಶ್ವತ ಬಂದ್

    ಬ್ಯಾಲೆಟ್‌ ಪೇಪರ್‌ ಕೊರತೆಯಿಂದ ತಮಗೆ ಮತದಾನ ಮಾಡುವ ಅವಕಾಶ ಇಲ್ಲದಂತಾಗಿದೆ. ಇದಕ್ಕೆ ಸೂಕ್ತ ಕ್ರಮವಹಿಸಬೇಕು ಎಂದು ಗುಂಪೊಂದು ಶುಕ್ಲಾ ಅವರಿಗೆ ಮನವಿ ಮಾಡಿತ್ತು. ಅದಕ್ಕೆ ಪ್ರತಿಕ್ರಿಯಿಸಿದ್ದ ಶುಕ್ಲಾ, ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಸೇರಿಸದಿದ್ದರೆ, ಅದು ನಿಮಗೆ ಹೇಗೆ ಸಮಸ್ಯೆಯಾಗುತ್ತದೆ? ಇಲ್ಲಿಯವರೆಗೆ ಮತ ಚಲಾಯಿಸಿ ಏನು ಪಡೆದುಕೊಂಡಿದ್ದೀರಿ? ನಾವು ಎಷ್ಟು ಭ್ರಷ್ಟ ನಾಯಕರನ್ನು ಹುಟ್ಟು ಹಾಕಿದ್ದೇವೆ? ಮತದಾನದ ಹಕ್ಕು ಮತ್ತು ಪ್ರಜಾಪ್ರಭುತ್ವವು ದೇಶದ ಬಹುದೊಡ್ಡ ಪ್ರಮಾದ ಎಂದು ನಾನು ಭಾವಿಸುತ್ತೇನೆ. ಚುನಾವಣಾ ಕರ್ತವ್ಯ ನಿರ್ವಹಿಸುವ ನೌಕರರಿಗೆ ಅಂಚೆ ಮತಪತ್ರಗಳಿದ್ದರೂ ಮತ ಚಲಾಯಿಸುವ ಸೌಲಭ್ಯ ಕಲ್ಪಿಸಲಾಗಿದೆ ಎಂದು ಹೇಳಿದ್ದರು.

    Live Tv
    [brid partner=56869869 player=32851 video=960834 autoplay=true]

  • ಸರ್ಕಾರ ಬಂದ್‍ಗೆ ಯಾಕೆ ಬೆಂಬಲ ಕೊಡಬೇಕು?: ಆರಗ

    ಸರ್ಕಾರ ಬಂದ್‍ಗೆ ಯಾಕೆ ಬೆಂಬಲ ಕೊಡಬೇಕು?: ಆರಗ

    ಬೆಂಗಳೂರು: ಸರ್ಕಾರ ಬಂದ್‍ಗೆ ಬೆಂಬಲ ಕೊಟ್ಟಿಲ್ಲ, ಯಾಕೆ ಕೊಡಬೇಕು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರಶ್ನೆ ಮಾಡಿದರು.

    ಈದ್ಗಾ ಮೈದಾನ ವಿವಾದ ಜಟಾಪಟಿ ಈಗ ಬಂದ್‍ವರೆಗೆ ತಲುಪಿದೆ. ಈ ಹಿನ್ನೆಲೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಗೃಹ ಇಲಾಖೆ ವತಿಯಿಂದ ಪೊಲೀಸರು ಎಲ್ಲ ಬಂದೋಬಸ್ತ್ ಮಾಡಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಶಾಂತಿಯುತ ಪ್ರತಿಭಟನೆಗೆ ಅವಕಾಶವಿದೆ. ಆದ್ರೆ ಯಾರೂ ಕಾನೂನು ಕೈಗೆ ತೆಗೆದುಕೊಳ್ಳಬಾರದು. ಅಲ್ಲಿರೋರಲ್ಲಿಯೂ ವಿನಂತಿ ಮಾಡ್ತೀನಿ ಎಂದು ಕೇಳಿಕೊಂಡರು.

    ಸ್ಥಳಕ್ಕೆ ಭೇಟಿ ನೀಡ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಇಲ್ಲ. ಪೊಲೀಸರು ಇದ್ದಾರೆ, ಎಲ್ಲ ರೀತಿಯ ಬಂದೋಬಸ್ತ್ ಮಾಡಿದ್ದಾರೆ. ಸರ್ಕಾರ ಬಂದ್‍ಗೆ ಬೆಂಬಲ ಕೊಟ್ಟಿಲ್ಲ, ಯಾಕೆ ಬೆಂಬಲ ಕೊಡಬೇಕು. ಜಾಗದ ಬಗ್ಗೆ ಬಿಬಿಎಂಪಿ ನಿರ್ಣಯ ಮಾಡುತ್ತೆ ಎಂದರು. ಇದನ್ನೂ ಓದಿ: ಈದ್ಗಾ ಮೈದಾನ ವಿವಾದ- ಅನುಮತಿ ಇಲ್ಲದ ಬಂದ್‍ಗಾಗಿ 600ಕ್ಕೂ ಹೆಚ್ಚು ಪೊಲೀಸರ ನಿಯೋಜನೆ

    ಏನಿದು ಘಟನೆ?
    ಇಂದು ಚಾಮರಾಜಪೇಟೆ ನಾಗರಿಕ ಒಕ್ಕೂಟ, ಶ್ರೀರಾಮಸೇನೆ, ಹಿಂದೂ ಜನಜಾಗೃತಿ ಸೇರಿದಂತೆ ಅನೇಕ ಹಿಂದೂ ಸಂಘಟನೆ ಬಂದ್‍ಗೆ ಕರೆ ಕೊಟ್ಟಿದ್ದು, ಬೆಳಗ್ಗೆ 8 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಚಾಮರಾಜಪೇಟೆ ಬಂದ್ ಆಗಲಿದೆ. ಈದ್ಗಾ ಆಟದ ಮೈದಾನವನ್ನು ವಕ್ಫ್‍ಗೆ ನೀಡಬಾರದು ಅದು ಬಿಬಿಎಂಪಿ ಸುಪರ್ದಿಯಲ್ಲಿಯೇ ಇದ್ದು ಆಟದ ಮೈದಾನವಾಗಿರಬೇಕು. ಈದ್ಗಾ ಹೆಸರನ್ನು ಬದಲಾಗಿ ಒಡೆಯರ್ ಹೆಸರನ್ನು ಇಡಬೇಕು. ಇದು ಒಡೆಯರ್ ಕೊಡುಗೆ ಅನ್ನೋದು ಸಂಘಟನೆಯವರ ಆಗ್ರಹ ಮಾಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]