Tag: ಪ್ರಣವ್

  • ಅಜರ್ ಪಾತ್ರ ತುಂಬಾ ವಿಶೇಷವಾಗಿದೆ : ನಟ ಪ್ರಣವ್

    ಅಜರ್ ಪಾತ್ರ ತುಂಬಾ ವಿಶೇಷವಾಗಿದೆ : ನಟ ಪ್ರಣವ್

    ಚಂದನ್ ಶೆಟ್ಟಿ (Chandan Shetty) ನಾಯಕನಾಗಿ ನಟಿಸಿರುವ `ವಿದ್ಯಾರ್ಥಿ ವಿದ್ಯಾರ್ಥಿನಿಯರೇ’  (Vidyarthi Vidyarthiniyare) ಚಿತ್ರವೀಗ ನಿರ್ಣಾಯಕ ಘಟ್ಟ ತಲುಪಿಕೊಂಡಿದೆ. ಬಹುಶಃ ಯಾರೂ ನಿರೀಕ್ಷಿಸಿರದ ವೇಗದಲ್ಲಿ ಈ ಸಿನಿಮಾವೀಗ ಚಿತ್ರೀಕರಣ ಮುಗಿಸಿಕೊಂಡಿದೆ. ಕುಂಬಳಕಾಯಿ ಒಡೆದು, ಪೋಸ್ಟ್ ಪ್ರೊಡಕ್ಷನ್ ಕೆಲಸ ಕಾರ್ಯಗಳತ್ತ ಹೊರಳಿಕೊಂಡಿರುವ ಚಿತ್ರತಂಡ ಪತ್ರಿಕಾಗೋಷ್ಠಿ ನಡೆಸಿದೆ. ಈ ವೇದಿಕೆಯಲ್ಲಿ ಚಿತ್ರೀಕರಣ ನಡೆಸಿದ ರೀತಿ, ಅದರಿಂದ ದಕ್ಕಿದ ಅನುಭವ, ಪಾತ್ರಗಳ ಆಯ್ಕೆ, ಅವುಗಳ ಗುಣಲಕ್ಷಣ ಮುಂತಾದ ಒಂದಷ್ಟು ಮುಖ್ಯ ವಿಚಾರಗಳನ್ನು ಹಂಚಿಕೊಳ್ಳಲಾಗಿದೆ.

    ಇದು ಅರುಣ್ ಅಮುಕ್ತ (Arun Amukta) ನಿರ್ದೇಶನದಲ್ಲಿ ಮೂಡಿ ಬಂದಿರುವ ಚಿತ್ರ. ಅರುಣ್ ಅತ್ಯಂತ ಜಾಣ್ಮೆಯಿಂದ, ಅಂದುಕೊಂಡಿದ್ದಕ್ಕಿಂತಲೂ ತುಸು ಬೇಗನೆ ಚಿತ್ರೀಕರಣ ಮುಗಿಸಿಕೊಂಡಿದ್ದಾರೆ. ಈ ಪತ್ರಿಕಾ ಗೋಷ್ಠಿಯ ಮೂಲಕ ಪಾತ್ರಗಳನ್ನು ಆಯಾ ಕಲಾವಿದರ ದೃಷ್ಟಿಕೋನದ ಮೂಲಕ ಪ್ರೇಕ್ಷಕರತ್ತ ದಾಟಿಸುವ ಪ್ರಯತ್ನ ಮಾಡಿದ್ದಾರೆ. ಇರದಲ್ಲಿ ಚಂದನ್ ಶೆಟ್ಟಿ ನಾಯಕನಾಗಿ ನಟಿಸಿದ್ದರೆ, ಮೂರು ಜೋಡಿಗಳು ನಾಯಕ ನಾಯಕಿಯರಾಗಿ ನಟಿಸಿದ್ದಾರೆ. ಅದರಲ್ಲೊಂದು ಪಾತ್ರವಾಗಿರುವವರು ಪ್ರಣವ್ (Pranav). ಈ ಬಗೆಗಿನ ಒಂದಷ್ಟು ವಿವರಗಳನ್ನು ಈ ಪತ್ರಿಕಾ ಗೋಷ್ಠಿಯಲ್ಲಿ ಪ್ರಣವ್ ಹಂಚಿಕೊಂಡಿದ್ದಾರೆ.

    ಪ್ರಣವ್ ಈ ಹಿಂದೆ ಒಂದಷ್ಟು ಸಿನಿಮಾಗಳಲ್ಲಿ ಪಾತ್ರಗಳನ್ನು ನಿರ್ವಹಿಸಿದ್ದರಂತೆ. ಆದರೆ, ಪೂರ್ಣ ಪ್ರಮಾಣದ ಪಾತ್ರವೊಂದು ಅವರ ಪಾಲಿಗೆ ಒಲಿದು ಬಂದಿರೋದು ಈ ಚಿತ್ರದ ಮೂಲಕವೇ. ಇಂಥಾದ್ದೊಂದು ಅವಕಾಶ ಕೊಟ್ಟ ನಿರ್ಮಾಪಕರುಗಳು ಮತ್ತು ನಿರ್ದೇಶಕರನ್ನು ಮೆಚ್ಚಿಕೊಳ್ಳುತ್ತಲೇ ಅವರ ತಮ್ಮ ಪಾತ್ರದ ಬಗ್ಗೆ ಒಂದಷ್ಟು ಮಾತಾಡಿದ್ದಾರೆ. ಅವರಿಲ್ಲಿ ಅಜರ್ ಎಂಬ ಕಾಲೇಜು ಹುಡುಗನ ಪಾತ್ರವನ್ನು ನಿರ್ವಹಿಸಿದ್ದಾರಂತೆ. ಆದರೆ ಗೌಪ್ಯತೆ ಕಾಪಾಡಿಕೊಳ್ಳುವ ದೃಷ್ಟಿಯಿಂದ ಅದರ ಗುಣಲಕ್ಷಣಗಳನ್ನು ಬಿಟ್ಟುಕೊಡದಂತೆ ಪ್ರಣವ್ ಜಾಣತನ ತೋರಿಸಿದ್ದಾರೆ. ಒಟ್ಟಾರೆಯಾಗಿ ನಾಯಕನಾಗುವ ಅವರ ಕನಸು ಈ ಮೂಲಕ ನನಸಾಗಿದೆ.

     

    ತಾರಾ ಬಳಗ, ತಾಂತ್ರಿಕತೆ ಸೇರಿದಂತೆ ಎಲ್ಲ ದಿಕ್ಕಿನಲ್ಲಿಯೂ ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಚಿತ್ರ ಭಿನ್ನವಾಗಿ ಮೂಡಿ ಬಂದಿವೆ ಎಂಬುದು ಚಿತ್ರತಂಡದ ಭರವಸೆ. ಸುಬ್ರಮಣ್ಯ ಕುಕ್ಕೆ ಮತ್ತು ಎ.ಸಿ ಶಿವಲಿಂಗೇಗೌಡ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಕುಮಾರ್ ಗೌಡ ಛಾಯಾಗ್ರಹಣ, ಭರ್ಜರಿ ಚೇತನ್ ಮತ್ತು ವಾಸುಕಿ ವೈಭವ್ ಸಾಹಿತ್ಯ, ಪವನ್ ಗೌಡ ಸಂಕಲನ, ಟೈಗರ್ ಶಿವು, ನರಸಿಂಹ ಸಾಹಸ ನಿರ್ದೇಶನ ಈ ಚಿತ್ರಕ್ಕಿರಲಿದೆ. ಅಮರ್, ಭಾವನಾ, ಮಾನಸಿ, ಮನೋಜ್ ವಿವಾನ್, ಭವ್ಯ, ಸುನೀಲ್ ಪುರಾಣಿಕ್, ಅರವಿಂದ ರಾವ್, ಸಿಂಚನಾ, ರಘು ರಾಮನಕೊಪ್ಪ, ಪ್ರಶಾಂತ್ ಸಂಬರ್ಗಿ, ಕಾಕ್ರೋಚ್ ಸುಧಿ ಮುಂತಾದವರು ನಟಿಸಿದ್ದಾರೆ. ಇನ್ನುಳಿದಂತೆ ವಿಜೇತ್ ಕೃಷ್ಣ, ವಾಸು ದೀಕ್ಷಿತ್ ಮತ್ತು ಶಶಾಂಕ್ ಶೇಷಗಿರಿ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ.

  • ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟಿ ನೇಹಾ ಪಾಟೀಲ್

    ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟಿ ನೇಹಾ ಪಾಟೀಲ್

    ಬೆಂಗಳೂರು: ಸ್ಯಾಂಡಲ್‍ವುಡ್ ನಲ್ಲಿ ಒಬ್ಬರ ನಂತರ ಒಬ್ಬರಂತೆ ವಿವಾಹವಾಗುತ್ತಿದ್ದು, ಇದೀಗ ನಟಿ ನೇಹಾ ಪಾಟೀಲ್ ಅವರು ಪ್ರಣವ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

    ಹುಬ್ಬಳ್ಳಿ ಮೂಲದ ನಟಿ ನೇಹಾ ಪಾಟೀಲ್ ಅವರು ಸಿನಿಮಾ ಬಗ್ಗೆ ಆಸಕ್ತಿ ಇರುವ ಬೆಂಗಳೂರಿನಲ್ಲಿ ಎಂಜಿನಿಯರಿಂಗ್ ಹುಡುಗ ಪ್ರಣವ್ ಅವರ ಜೊತೆ ಮದುವೆಯಾಗಿದ್ದಾರೆ. ಗುರುವಾರ ವಿಜಯನಗರದ ಕಲ್ಯಾಣ ಮಂಟಪದಲ್ಲಿ ಅದ್ಧೂರಿಯಾಗಿ ಆರತಕ್ಷತೆ ನೆರವೇರಿದ್ದು, ಇಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

    ಆರತಕ್ಷತೆಯಲ್ಲಿ ನಟಿ ದಿಪೀಕಾ ದಾಸ್, ಶರಣ್ಯ, ನಿರ್ದೇಶಕ ಮುರಳಿಕೃಷ್ಣ ಹಾಗೂ ನಿರೂಪಕ ರೆಹಮಾನ್ ಸೇರಿದಂತೆ ಅನೇಕ ಚಿತ್ರರಂಗದ ಗಣ್ಯರು ಪಾಲ್ಗೊಂಡಿದ್ದು, ನವಜೋಡಿಗೆ ಶುಭಾಶಯ ತಿಳಿಸಿದ್ದಾರೆ.

    ನೇಹಾ ಪಾಟೀಲ್ ಅವರು ಮನೆಯಲ್ಲಿ ನೋಡಿರುವ ಹುಡುಗನ ಜೊತೆ ವಿವಾಹವಾಗಿದ್ದು, ಹಿರಿಯರ ನಿಶ್ಚಯದ ಮೇರೆಗೆ ಕಳೆದ ಅಕ್ಟೋಬರ್ 19 ರಂದು ಕುಟುಂಬಸ್ಥರ ಸಮ್ಮುಖದಲ್ಲಿ ನೇಹಾ ಪಾಟೀಲ್-ಪ್ರಣವ್ ನಿಶ್ಚಿತಾರ್ಥ ನಡೆದಿತ್ತು.

    ನೇಹಾ, ಸಂಕ್ರಾಂತಿ, ಸಂಯುಕ್ತ, ಸಿತಾರಾ, ವರ್ಧನ, ಟೈಟ್ಲು ಬೇಕಾ, ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ. ಅಷ್ಟೇ ಅಲ್ಲದೇ ಕಿರುತೆಯಲ್ಲೂ ನಟನೆ ಮಾಡಿದ್ದಾರೆ. ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಡ್ಯಾನ್ಸ್ ರಿಯಾಲಿಟಿ ಶೋನಲ್ಲೂ ನೇಹಾ ಪಾಟೀಲ್ ಸ್ಪರ್ಧಿಯಾಗಿ ಭಾಗವಹಿಸಿದ್ದರು. ಸದ್ಯಕ್ಕೆ ನೇಹಾ ನಾಲ್ಕು ಚಿತ್ರಗಳಲ್ಲಿ ಅಭಿನಯಿಸುತ್ತಿದ್ದು, ಮದುವೆಯ ಬಳಿಕವೂ ಅಭಿನಯ ಮುಂದುವರಿಸಲು ನೇಹಾ ನಿರ್ಧರಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಎಂಜಿನಿಯರ್ ಜೊತೆ ನಟಿ ನೇಹಾ ಪಾಟೀಲ್ ಮದ್ವೆ

    ಎಂಜಿನಿಯರ್ ಜೊತೆ ನಟಿ ನೇಹಾ ಪಾಟೀಲ್ ಮದ್ವೆ

    ಬೆಂಗಳೂರು: ಸ್ಯಾಂಡಲ್‍ವುಡ್ ನಲ್ಲಿ ಒಬ್ಬರ ನಂತರ ಒಬ್ಬರಂತೆ ವಿವಾಹವಾಗುತ್ತಿದ್ದು, ಇದೀಗ ನಟಿ ನೇಹಾ ಪಾಟೀಲ್ ಅವರು ಪ್ರಣವ್ ಜೊತೆ ಇದೇ ತಿಂಗಳು ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ.

    ನಟಿ ನೇಹಾ ಪಾಟೀಲ್ ಅವರು ಸಿನಿಮಾ ಬಗ್ಗೆ ಆಶಕ್ತಿ ಇರುವ ಎಂಜಿನಿಯರಿಂಗ್ ಹುಡುಗ ಪ್ರಣವ್ ಅವರನ್ನು ವರಿಸಲಿದ್ದಾರೆ. ಫೆಬ್ರವರಿ 21 ಮತ್ತು 22 ರಂದು ನೇಹಾ ಪಾಟೀಲ್ ಕಲ್ಯಾಣ ನಡೆಯಲಿದ್ದು, ಹುಬ್ಬಳ್ಳಿ ಮೂಲದ ನೇಹಾ ಪಾಟೀಲ್ ಬೆಂಗಳೂರಿನಲ್ಲಿ ಎಂಜಿನಿಯರ್ ಪ್ರಣವ್ ಅವರನ್ನು ಮದುವೆಯಾಗುತ್ತಿದ್ದಾರೆ. ಇದೇ ತಿಂಗಳ 21 ರಂದು ಆರತಕ್ಷತೆ ನಡೆಯಲಿದ್ದು, ಮರುದಿನ ಅಂದರೆ 22 ರಂದು ವಿವಾಹ ನಡೆಯಲಿದೆ.

    ನೇಹಾ ಪಾಟೀಲ್ ಅವರು ಮನೆಯಲ್ಲಿ ನೋಡಿರುವ ಹುಡುಗನ ಜೊತೆ ವಿವಾಹವಾಗುತ್ತಿದ್ದಾರೆ. ಹಿರಿಯರ ನಿಶ್ಚಯದ ಮೇರೆಗೆ ಕಳೆದ ಅಕ್ಟೋಬರ್ 19 ರಂದು ಕುಟುಂಬಸ್ಥರ ಸಮ್ಮುಖದಲ್ಲಿ ನೇಹಾ ಪಾಟೀಲ್-ಪ್ರಣವ್ ನಿಶ್ಚಿತಾರ್ಥ ನಡೆದಿತ್ತು. ಈ ವರ್ಷ ದಾಪಂತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ.

    ನೇಹಾ ಸಂಕ್ರಾಂತಿ, ಸಂಯುಕ್ತ, ಸಿತಾರಾ, ವರ್ಧನ, ಟೈಟ್ಲು ಬೇಕಾ, ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ. ಅಷ್ಟೇ ಅಲ್ಲದೇ ಕಿರುತೆಯಲ್ಲೂ ನಟನೆ ಮಾಡಿದ್ದಾರೆ. ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಡ್ಯಾನ್ಸ್ ರಿಯಾಲಿಟಿ ಶೋನಲ್ಲೂ ನೇಹಾ ಪಾಟೀಲ್ ಸ್ಪರ್ಧಿಯಾಗಿ ಭಾಗವಹಿಸಿದ್ದರು. ಸದ್ಯಕ್ಕೆ ನೇಹಾ ನಾಲ್ಕು ಚಿತ್ರಗಳಲ್ಲಿ ಅಭಿನಯಿಸುತ್ತಿದ್ದು, ಮದುವೆಯ ಬಳಿಕವೂ ಅಭಿನಯ ಮುಂದುವರಿಸಲು ನೇಹಾ ನಿರ್ಧರಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv