ಸಾರ್ವಜನಿಕರಿಗೆ ಸಮಸ್ಯೆ ಉಂಟು ಮಾಡಿದ ಹಿನ್ನೆಲೆಯಲ್ಲಿ ನ್ಯಾಯಾಲಯ ಸಿದ್ದರಾಮಯ್ಯ, ಸುರ್ಜೆವಾಲಾ ಸೇರಿದಂತೆ ಕಾಂಗ್ರೆಸ್ ನಾಯಕರಿಗೆ ದಂಡ ವಿಧಿಸಿದೆ. ಸಿದ್ದರಾಮಯ್ಯನವರಿಗೆ ಮಾರ್ಚ್ 6 ರಂದು ಖುದ್ದು ನ್ಯಾಯಾಲಯಕ್ಕೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದೆ.
ಬೆಂಗಳೂರು ನಗರದಲ್ಲಿ ಎಲ್ಲೆಂದರಲ್ಲಿ ಪ್ರತಿಭಟನೆ ನಡೆಸುವಂತಿಲ್ಲ. ಪೊಲೀಸರಿಂದ ಅನುಮತಿ ಪಡೆದವರಿಗೆ ಮಾತ್ರ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟಿಸಲು ಅವಕಾಶ ನೀಡಲಾಗುತ್ತದೆ. ಬೇರೆ ಕಡೆ ಪ್ರತಿಭಟನೆ ನಡೆಸಿ ಸಾರ್ವಜನಿಕರಿಗೆ ಸಮಸ್ಯೆ ಉಂಟಾದಲ್ಲಿ ಕೇಸ್ ಹಾಕಲಾಗುತ್ತದೆ.
ನವದೆಹಲಿ: ಪ್ರತಿಭಟನೆ (Protest ), ಹೆದ್ದಾರಿ ತಡೆ, ಬಂದ್ ಇನ್ನಿತರ ಸಂದರ್ಭಗಳಲ್ಲಿ ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿ ಮಾಡಿದ್ರೆ, ಅಂಥವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಕಾನೂನು ತಿದ್ದುಪಡಿ ಮಾಡಬೇಕು. ಪ್ರತಿಭಟನೆ ವೇಳೆ ಹಾನಿಯಾದ ಆಸ್ತಿಯ ಮೌಲ್ಯವನ್ನು ಹಾನಿಕೋರರಿಂದಲೇ ಸಂಪೂರ್ಣವಾಗಿ ವಸೂಲಿ ಮಾಡಬೇಕು. ನಂತರ ಮಾತ್ರವೇ ಜಾಮೀನು ನೀಡಬೇಕು ಎಂದು ಕಾನೂನು ಆಯೋಗವು ಕೇಂದ್ರ ಸರ್ಕಾರಕ್ಕೆ (Law Commission) ಶಿಫಾರಸು ಮಾಡಿದೆ.
ಪ್ರತಿಭಟನೆಯಂತಹ ಸಂದರ್ಭಗಳಲ್ಲಿ ಸಾರ್ವಜನಿಕ ಆಸ್ತಿಪಾಸ್ತಿ ಹಾನಿಯಾದ (Public Property Damage) ಸಂದರ್ಭದಲ್ಲಿ, ಯಾರು ಪ್ರತಿಭಟನೆಯ ನೇತೃತ್ವ ವಹಿಸಿರುತ್ತಾರೋ ಅವರನ್ನು ಹೊಣೆಗಾರರನ್ನಾಗಿ ಮಾಡಬೇಕು. ಅವರಿಂದಲೇ ಹಾನಿಗೊಳಗಾದ ಆಸ್ತಿ ಮೌಲ್ಯವನ್ನು ವಸೂಲಿ ಮಾಡಬೇಕು. ನಂತರ ಅವರನ್ನು ಕಠಿಣ ಶಿಕ್ಷೆಗೆ ಒಳಪಡಿಸಬೇಕು. ಇಂತಹ ಪ್ರಕರಣಗಳಲ್ಲಿ ಜಾಮೀನು ನೀಡುವುದಕ್ಕೂ ಮುನ್ನ ಆಸ್ತಿಯ ಮೌಲ್ಯವನ್ನು ವಸೂಲಿ ಮಾಡಬೇಕು ಎಂದು ಸಲಹೆ ನೀಡಿದೆ. ಇದನ್ನೂ ಓದಿ: ಮಂಡ್ಯ ಕ್ಷೇತ್ರವನ್ನು JDSಗೆ ಬಿಟ್ಕೊಡಬಾರದು – BJP ಹೈಕಮಾಂಡ್ ಮೇಲೆ ನಾರಾಯಣಗೌಡ, ಪ್ರೀತಂ ಒತ್ತಡ
ಸಾಮಾನ್ಯವಾಗಿ ಯಾವುದೇ ಪ್ರಕರಣದಲ್ಲಿ ದೋಷಿ ಎಂದು ಸಾಬೀತಾದಾಗ ಪ್ರತಿಭಟನಾಕಾರರಿಗೆ ಅಲ್ಪ ಪ್ರಮಾಣದ ದಂಡ ವಿಧಿಸಲಾಗುತ್ತದೆ. ಆದರೆ, ಕಾನೂನು ಆಯೋಗವು ಜಾಮೀನು ನೀಡುವಾಗಲೇ ದಂಡದ ಮೊತ್ತ ವಸೂಲಿ ಮಾಡಬೇಕು ಎಂದು ಹೇಳಿದೆ. ಅದೂ ಕೂಡಾ ಸಾರ್ವಜನಿಕ ಆಸ್ತಿ ಪಾಸ್ತಿಯ ಮಾರುಕಟ್ಟೆ ಮೌಲ್ಯದಷ್ಟೇ ಹಣವನ್ನು ದಂಡದ ರೂಪದಲ್ಲಿ ಭರಿಸಬೇಕಾಗುತ್ತದೆ. ಕೆಲವು ಸ್ವತ್ತುಗಳ ಮಾರುಕಟ್ಟೆ ಮೌಲ್ಯವನ್ನು ನಿರ್ಧರಿಸಲು ಸಾಧ್ಯ ಆಗೋದಿಲ್ಲ. ಆಗ ನ್ಯಾಯಾಲಯವೇ ಸೂಕ್ತ ಮೊತ್ತ ನಿರ್ಧರಿಸಬೇಕಾಗುತ್ತದೆ ಎಂದು ಕಾನೂನು ಆಯೋಗ ಹೇಳಿದೆ.
ಇದಕ್ಕಾಗಿ ಸರ್ಕಾರ ಪ್ರತ್ಯೇಕ ಕಾನೂನು ಜಾರಿಗೆ ತರಬೇಕು ಎಂದು ಕಾನೂನು ಆಯೋಗ ಹೇಳಿದೆ. ಕೇರಳ ರಾಜ್ಯದಲ್ಲಿ ಸದ್ಯ ಜಾರಿಯಲ್ಲಿ ಇರುವ ಕಾನೂನನ್ನೂ ಉಲ್ಲೇಖಿಸಿದೆ. ಕೇರಳ ರಾಜ್ಯದಲ್ಲಿ ಖಾಸಗಿ ಸ್ವತ್ತುಗಳ ಹಾನಿ ತಡೆ ಕಾಯ್ದೆ ಜಾರಿಯಲ್ಲಿದೆ. ಜೊತೆಯಲ್ಲೇ ಪರಿಹಾರ ಕಾಯ್ದೆ ಕೂಡಾ ಇದೆ. ಇಂಥದ್ದೇ ಕಾನೂನನ್ನು ಭಾರತೀಯ ನ್ಯಾಯ ಸಂಹಿತೆ ಅಡಿಯಲ್ಲಿ ತರಬೇಕು ಎಂದು ಕಾನೂನು ಆಯೋಗ ಹೇಳಿದೆ. ಇದನ್ನೂ ಓದಿ: ಮುಸ್ಲಿಮರ ತುಷ್ಟೀಕರಣಕ್ಕೆ ಶುಕ್ರವಾರ ಮಧ್ಯಾಹ್ನ ಎಸ್‍ಎಸ್‍ಎಲ್‍ಸಿ ಪರೀಕ್ಷೆ ನಿಗದಿ: ಮುತಾಲಿಕ್ ಆರೋಪ
ಕೇಂದ್ರ ಸರ್ಕಾರ ಕೆಲ ವರ್ಷಗಳ ಹಿಂದೆಯೇ ಇಂತಹ ಕಾಯ್ದೆಯನ್ನು ಜಾರಿಗೆ ತರುವ ಬಗ್ಗೆ ಒಲವು ತೋರಿತ್ತು. ಆದ್ರೆ ಸಾಧ್ಯವಾಗಿರಲಿಲ್ಲ. ನಂತರ ಕೆಲ ಪ್ರಕರಣಗಳಲ್ಲಿ ಸುಪ್ರೀಂ ಕೋರ್ಟ್ ಮತ್ತು ಕೆಲ ಹೈಕೋರ್ಟ್‌ಗಳು ಇಂತಹ ಘಟನೆ ತಡೆಯಲು ಇಂತಹ ನಿದರ್ಶನಗಳನ್ನು ನೀಡಿದ್ದವು. ಇದೀಗ ಕಾನೂನು ಆಯೋಗವೇ ಕಾಯ್ದೆ ಬಗ್ಗೆ ಶಿಫಾರಸು ಮಾಡಿದೆ.
– ನೋಟಿಸ್ ನೀಡಿದರೂ ಪ್ರತಿಭಟನೆಗೆ ಮುಂದಾದ ಬಿಜೆಪಿಗರು – ಪ್ರತಿಪಕ್ಷ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ ಪ್ರತಿಭಟನೆ
ಬೆಂಗಳೂರು: ಮಂಡ್ಯದ (Mandya) ಕೆರಗೋಡಿನಲ್ಲಿ (Keragodu) ಹನುಮ ಧ್ವಜ ತೆರವುಗೊಳಿಸಿದ ಪ್ರಕರಣ ಖಂಡಿಸಿ ಇಂದು (ಸೋಮವಾರ) ರಾಜ್ಯಾದ್ಯಂತ ಬಿಜೆಪಿಯಿಂದ (BJP) ಪ್ರತಿಭಟನೆ ನಡೆಯುತ್ತಿದೆ. ಈ ಹಿನ್ನೆಲೆ ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದಲ್ಲೂ (Mysuru Bank Circle) ಪ್ರತಿಪಕ್ಷ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಪ್ರತಿಭಟನೆ ವೇಳೆ ಭಾರೀ ಹೈಡ್ರಾಮಾ ಕಂಡುಬಂದಿತು. ಇದನ್ನೂ ಓದಿ: ಇನ್ನೊಂದೇ ವಾರದಲ್ಲಿ ದೇಶದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ - ಬಿಜೆಪಿ ಸಚಿವರ ಗ್ಯಾರಂಟಿ
ರಾಷ್ಟ್ರಧ್ವಜಕ್ಕೆ ಸರ್ಕಾರದಿಂದ ಅಪಮಾನ ಹಾಗೂ ಹನುಮ ಧ್ವಜ ತೆರವುಗೊಳಿಸಿರುವುದನ್ನು ಖಂಡಿಸಿ ಪ್ರತಿಭಟನೆ ನಡೆಸಲಾಗಿದೆ. ಪ್ರತಿಭಟನೆ ಹಿನ್ನೆಲೆಯಲ್ಲಿ ಭಾರೀ ಪೊಲೀಸ್ ಬಂದೋಬಸ್ತ್ ಏರ್ಪಡಿಸಿದ್ದು, ಐವರು ಇನ್ಸ್ಪೆಕ್ಟರ್‌ಗಳ ನೇತೃತ್ವದಲ್ಲಿ ಬಿಗಿ ಭದ್ರತೆ ಆಯೋಜಿಸಲಾಗಿದೆ. ಪ್ರತಿಭಟನೆಗೆ ಅವಕಾಶ ನಿರಾಕರಿಸಿ ನೊಟೀಸ್ ಜಾರಿ ಮಾಡಲಾಗಿದೆ. ಆದರೂ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು, ಶಾಸಕರು ಪ್ರತಿಭಟನೆಗೆ ಧುಮುಕಿದ್ದಾರೆ. ಇದನ್ನೂ ಓದಿ: ಶೋಷಿತರ ಸಮಾವೇಶದಲ್ಲಿ ಕ್ಷಿಂಟಾಲ್‌ಗಟ್ಟಲೇ ಚಿಕನ್ ಬಿರಿಯಾನಿ ನೆಲದ ಪಾಲು
ಬ್ಯಾರಿಕೇಡ್ ಮತ್ತು ಪೊಲೀಸ್ ದಿಗ್ಬಂಧನದ ನಡುವೆ ಪ್ರತಿಭಟನೆ ಮಾಡಲಾಗಿದೆ. ಈ ವೇಳೆ ಪ್ರತಿಭಟನಾಕಾರರು ಸರ್ಕಾರದ ವಿರುದ್ಧ ಘೋಷಣೆ ಕೂಗಿದ್ದಲ್ಲದೇ ಜೈ ಶ್ರೀರಾಮ್ ಘೋಷಣೆ ಮೊಳಗಿಸುತ್ತಾ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಪೊಲೀಸರು ಹಾಗೂ ಕಾರ್ಯಕರ್ತರ ನಡುವೆ ತಳ್ಳಾಟ, ನೂಕಾಟವೂ ನಡೆದಿದ್ದು, ನಂತರ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: ಡ್ರೋನ್ ದಾಳಿಗೆ ಅಮೆರಿಕದ ಮೂವರು ಸೈನಿಕರು ಬಲಿ – ತಕ್ಕ ಉತ್ತರ ಕೊಡುತ್ತೇವೆ: ಬೈಡನ್ ಎಚ್ಚರಿಕೆ
ಇನ್ನು ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಶಾಸಕ ಸಿ.ಕೆ ರಾಮಮೂರ್ತಿ, ಕೆರಗೋಡಿನಲ್ಲಿ ಹನುಮ ಧ್ವಜಕ್ಕೆ ಅಪಮಾನ ಆಗಿದೆ. ಅದಕ್ಕಾಗಿ ನಾವು ಹೋರಾಟ ಮಾಡುತ್ತಿದ್ದೇವೆ. ಶಾಸಕ ರವಿ ಗಣಿಗರು ಪೊಲೀಸರನ್ನು ಬಿಟ್ಟು ಲಾಠಿ ಚಾರ್ಜ್ ಮಾಡಿಸಿದ್ದಾರೆ. ಕರ್ನಾಟಕದ ಎಲ್ಲಾ ಜಿಲ್ಲೆಗಳಲ್ಲೂ ಪ್ರತಿಭಟನೆ ಮಾಡುತ್ತಿದ್ದೇವೆ. ಕಾಂಗ್ರೆಸ್ ಸರ್ಕಾರದಿಂದ ಹಿಂದೂಗಳಿಗೆ ರಕ್ಷಣೆ ಇಲ್ಲ. ಹೋರಾಟ ಮಾಡುವವರ ಮೇಲೆ ಎಫ್‌ಐಆರ್ ಹಾಕುವ ಕೆಲಸ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಬಾಂಗ್ಲಾದೇಶದ ಮುಖ್ಯಮಂತ್ರಿನಾ? ಪಾಕಿಸ್ತಾನದ ಮುಖ್ಯಮಂತ್ರಿನಾ? ಡಿಸಿ ಕಚೇರಿಗೆ ಮನವಿ ಕೊಡಲು ಪೊಲೀಸರು ಬಿಡುತ್ತಿಲ್ಲ. ನಮ್ಮ ಹೋರಾಟವನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದ್ದಾರೆ. ಮಂಡ್ಯ ಶಾಸಕ ರವಿ ಗಣಿಗರನ್ನು ಜೈಲಿಗೆ ಹಾಕಿ, ನಮ್ಮನ್ನಲ್ಲ. ನಾವೇ ರವಿ ಗಣಿಗ ವಿರುದ್ಧ ದೂರು ಕೊಡುತ್ತೇವೆ. ಎಫ್‌ಐಆರ್ ಹಾಕಲಿ ಎಂದು ಹರಿಹಾಯ್ದಿದ್ದಾರೆ. ಇದನ್ನೂ ಓದಿ: ಹನುಮಧ್ವಜ ಸಂಘರ್ಷ; ರಾಜ್ಯಾದ್ಯಂತ ಹೋರಾಟದ ಕಿಚ್ಚು – ಮಂಡ್ಯದಲ್ಲಿಂದು ಹೆಚ್‌ಡಿಕೆ, ರೆಡ್ಡಿ ಪಾದಯಾತ್ರೆ
ಪ್ರತಿಭಟನೆ ಯಾಕೆ?
ಈ ಮೊದಲು ಹಿಟ್ ಆಂಡ್ ರನ್ ಪ್ರಕರಣದ (Hit and Run) ಆರೋಪ ಸಾಬೀತಾದರೆ ಐಪಿಸಿ ಅಡಿ ಚಾಲಕನಿಗೆ 2 ವರ್ಷ ಜೈಲು ಶಿಕ್ಷೆ ವಿಧಿಸಲಾಗುತ್ತಿತ್ತು.
ಈಗ ಹೊಸದಾಗಿ ಬಂದಿರುವ ಭಾರತೀಯ ನ್ಯಾಯ ಸಂಹಿತೆಯ (Bharatiya Nyaya Sanhita) ಅಡಿಯಲ್ಲಿ ಹಿಟ್ ಆಂಡ್ ರನ್ ಪ್ರಕರಣದಲ್ಲಿ ದಂಡದ ಜೊತೆ 10 ವರ್ಷ ಜೈಲು ಶಿಕ್ಷೆಯನ್ನು ವಿಧಿಸಲಾಗಿದೆ.
ಈ ಶಿಕ್ಷೆಯ ಪ್ರಮಾಣ ಬಹಳ ಹೆಚ್ಚಾಯಿತು. ಇದರಿಂದಾಗಿ ಮುಂದೆ ಚಾಲಕ ವೃತ್ತಿ ಜನ ಬರುವುದು ಕಡಿಮೆಯಾಗಬಹುದು. ಹೀಗಾಗಿ ಶಿಕ್ಷೆಯ ಪ್ರಮಾಣವನ್ನು ಕಡಿಮೆ ಮಾಡಬೇಕೆಂದು ಚಾಲಕರು ಆಗ್ರಹಿಸಿದ್ದಾರೆ.
ಬೆಂಗಳೂರು: ಅಂಗಡಿ, ಮಾಲ್‌ಗಳ ನಾಮಫಲಕಗಳು ಕನ್ನಡ ಭಾಷೆಯಲ್ಲೇ (Kannada Language) ಇರಲು ಸರ್ಕಾರ ಸುಗ್ರೀವಾಜ್ಞೆ (Ordinance) ಹೊರಡಿಸಲು ಮುಂದಾಗಿದೆ.
ಅಂಗಡಿ ಮುಗ್ಗಟ್ಟುಗಳ ಮುಂಭಾಗದಲ್ಲಿ ಕನ್ನಡ ನಾಮಫಲಕ ಅಳವಡಿಸುವ ಸಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಉನ್ನತ ಮಟ್ಟದ ಸಭೆ ನಡೆಸಿದರು. ಗೃಹ ಸಚಿವ ಪರಮೇಶ್ವರ್, ಬಿಬಿಎಂಪಿ, ಗೃಹ ಇಲಾಖೆ ಅಧಿಕಾರಿಗಳು, ಕನ್ನಡ ಮತ್ತು ಸಂಸ್ಕೃತ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಿದ್ದರು.
ಸಭೆಯ ಬಳಿಕ ಮಾತನಾಡಿದ ಸಿದ್ದರಾಮಯ್ಯ, ಅಧಿವೇಶನ ಇಲ್ಲದೆ ಇರುವುದರಿಂದ ಸುಗ್ರಿವಾಜ್ಞೆ ಹೊರಡಿಸುತ್ತಿದ್ದೇವೆ. ಫೆಬ್ರವರಿ 28ರ ಒಳಗೆ 60% ಕನ್ನಡ ಫಲಕ ಇರಬೇಕು. ಇದಲ್ಲದೆ ಸಾರ್ವಜನಿಕರಿಗೆ ನೀಡುವ ಮಾಹಿತಿ ಮತ್ತು ಜಾಹಿರಾತುಗಳನ್ನು ಕನ್ನಡದಲ್ಲಿ ಇರಬೇಕು. ಎಷ್ಟು ಪ್ರಮಾಣದಲ್ಲಿ ಇರಬೇಕು ಎಂಬುದನ್ನು ಸರ್ಕಾರ ನಿಗದಿ ಮಾಡಲಿದೆ. ಕನ್ನಡ ಆಡಳಿತ ಭಾಷೆ. ಇದರಲ್ಲಿ ನಾವು ಯಾವುದೇ ರಾಜಿ ಮಾಡುವುದಿಲ್ಲ ಎಂದರು. ಇದನ್ನೂ ಓದಿ: ಗೃಹಲಕ್ಷ್ಮಿ ಯೋಜನೆ ತಲುಪುವಂತೆ ಮಾಡಲು ಇಲಾಖೆ ವತಿಯಿಂದ ವಿಶೇಷ ಶಿಬಿರ: ಪ್ರಿಯಾಂಕ್ ಖರ್ಗೆ
ಬಿಜೆಪಿ ಅವಧಿಯಲ್ಲಿ 2022 ರಲ್ಲಿ ಪಾಸ್ ಆಗಿದ್ದ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ ಸೆಕ್ಷನ್ 17(6) ರಲ್ಲಿ ನಾಮಫಲಕಗಳು ಅರ್ಧದಷ್ಟು ಕನ್ನಡ ಭಾಷೆ ಕೆಳಭಾಗದ ಅರ್ಧ ಬೇರೆ ಭಾಷೆಯಲ್ಲಿ ಇರಬೇಕು ಅಂತ ಎರಡು ಸದನದಲ್ಲಿ ಕಾಯ್ದೆ ಪಾಸ್ ಆಗಿ ರಾಜ್ಯಪಾಲರ ಅಂಕಿತ ಕೂಡಾ ಆಗಿತ್ತು. ಆದರೆ ಅರ್ಧ ಭಾಗ ಮಾತ್ರ ಕನ್ನಡ ಇರಬೇಕು ಎಂಬ ನಿಯಮದ ಬದಲಾಗಿ,ಸಿದ್ದರಾಮಯ್ಯ ಸರ್ಕಾರ 2018 ರಲ್ಲಿ ಹೊರಡಿಸಿದ್ದ ಸುತ್ತೋಲೆ ಅನ್ವಯ 60%ಕನ್ನಡ ನಾಮ ಫಲಕ, 40% ಇತರೇ ಭಾಷೆ ಬಳಕೆ ನಿಯಮವನ್ನೇ ಜಾರಿ ಮಾಡಲು ಸರ್ಕಾರ ನಿರ್ಧಾರ ಮಾಡಿದೆ. ಈ ಸಂಬಂಧ ತಿದ್ದುಪಡಿ ನಿಯಮಕ್ಕೆ ಸುಗ್ರಿವಾಜ್ಞೆ ಹೊರಡಿಸಲು ಸಿಎಂ ಸೂಚನೆ ನೀಡಿದ್ದಾರೆ.
ಎರಡು ಸದನದಲ್ಲಿ ಮಸೂದೆ ಪಾಸ್ ಆಗಿ ರಾಜ್ಯಪಾಲರ ಸಹಿ ಹಾಕಿದ್ದಾರೆ. ಆದರೆ ಇನ್ನೂ ನಿಯಮ ಮಾಡಿಲ್ಲ. ಹೀಗಾಗಿ ಕೂಡಲೇ ರೂಲ್ಸ್ ಫ್ರೇಮ್ ಮಾಡಲು ಸೂಚನೆ ನೀಡಿದ್ದೇನೆ. ನಿಯಮ ಸೇರಿಸಿದ ನಂತರ ಒಂದೆರಡು ದಿನಗಳಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಮೂಲಕ ಸುಗ್ರಿವಾಜ್ಞೆ ಜಾರಿ ಆಗಲಿದ್ದು, 60% ಕಡ್ಡಾಯ ನಾಮ ಫಲಕ ನಿಯಮ ಅಧಿಕೃತವಾಗಿ ಜಾರಿ ಆಗಲಿದೆ. ಇದೇ ಅಲ್ಲದೆ ಸಾರ್ವಜನಿಕರ ಮಾಹಿತಿಗೆ ನೀಡುವ ಜಾಹಿರಾತು ಮತ್ತು ಸೂಚನಾ ಫಲಕಗಳು ಕೂಡಾ ಕನ್ನಡದಲ್ಲಿ ಇರಬೇಕು ಎಂಬ ನಿಯಮ 2022ರ ಕಾಯ್ದೆಯಲ್ಲಿ ಇದೆ. ಎಷ್ಟು ಪ್ರಮಾಣದಲ್ಲಿ ಕನ್ನಡದಲ್ಲಿ ಮಾಹಿತಿ ಇರಬೇಕು ಅಂತ ಸರ್ಕಾರ ನಿರ್ಧಾರ ಮಾಡಲಿದೆ ಅಂತ ಸಿದ್ದರಾಮಯ್ಯ ತಿಳಿಸಿದರು.
ಕರವೇ ಹೋರಾಟದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ, ಪ್ರತಿಭಟನೆ ಮಾಡಲು ಅವಕಾಶ ಇದೆ. ಆದರೆ ಯಾರು ಕಾನೂನು ಕೈಗೆ ಎತ್ತಿಕೊಳ್ಳಬಾರದು. ಯಾರೇ ಕಾನೂನು ಕೈಗೆ ಎತ್ತುಕೊಂಡರೆ ಸರ್ಕಾರ ಸಹಿಸುವುದಿಲ್ಲ. ನಮ್ಮ ಸರ್ಕಾರ ಕನ್ನಡದ ಪರ ಇದೆ. ಕರ್ನಾಟಕದಲ್ಲಿ ಕನ್ನಡವೇ ಆಡಳಿತ ಭಾಷೆ ಇದರಲ್ಲಿ ಯಾವುದೇ ರಾಜೀ ಇಲ್ಲ ಅಂತ ಸ್ಪಷ್ಟನೆ ನೀಡಿದರು.
ಬೆಂಗಳೂರಿನಲ್ಲಿ ಪ್ರತಿಭಟನೆ ಮಾಡುವುದರಿದ್ದರೆ ಫ್ರೀಡಂ ಪಾರ್ಕ್‌ನಲ್ಲಿ ಮಾತ್ರ ಮಾಡಬೇಕು ಎಂದು ಹೈಕೋರ್ಟ್ ಆದೇಶದಲ್ಲಿದೆ. ರಾಜ್ಯ ಸರ್ಕಾರ ಇದರ ಪಾಲನೆಗೆ ಕ್ರಮ ತೆಗೆದುಕೊಳ್ಳಬೇಕು ಅಂತ ಸೂಚನೆ ನೀಡಿದೆ. ಕೋರ್ಟ್ ಆದೇಶ ಇದ್ದರೂ ಸಾರ್ವಜನಿಕ ಹಿತ, ರಾಜ್ಯದ ಹಿತಕ್ಕೆ ಪ್ರತಿಭಟನೆ ಮಾಡಿದರೆ ವಿರೋಧ ಮಾಡುವುದಿಲ್ಲ. ಶಾಂತಿಯುತ ಪ್ರತಿಭಟನೆ ಮಾಡಬೇಕು. ಆದರೆ ಕಾನೂನು ಕೈಗೆ ಎತ್ತುಕೊಂಡರೆ ಸರ್ಕಾರ ಕ್ರಮ ತೆಗೆದುಕೊಳ್ಳಲಿದೆ ಎಂದರು.
ಮೈಸೂರು: ನಂಜುಂಡೇಶ್ವರನ (Nanjanagudu) ಮೂರ್ತಿಗೆ ಎಂಜಲು ನೀರು ಎರಚಿದ ಪ್ರಕಣ ಸಂಬಂಧ ಇಂದು ದೇವಾಲಯದ ಮುಂದೆ ಭಕ್ತರು ಪ್ರತಿಭಟನೆ ನಡೆಸಿದ್ದಾರೆ.
ಶ್ರೀ ಕಂಠೇಶ್ವರ ಭಕ್ತ ಮಂಡಳಿ ವತಿಯಿಂದ ಪ್ರತಿಭಟನೆ ನಡೆದಿದ್ದು, ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ನಡೆದಿದೆ. ಪೊಲೀಸರ ವಿರುದ್ಧ ಪ್ರತಿಭಟನಾಕಾರರು ದಿಕ್ಕಾರದ ಘೋಷಣೆಗಳನ್ನು ಕೂಗಿದ್ದಾರೆ.
ಉತ್ಸವ ಮೂರ್ತಿಗೆ ಎಂಜಲು ನೀರು ಎರಚಿ ಅಪಮಾನ ಮಾಡಿರುವುದನ್ನು ಖಂಡಿಸಿ ಪ್ರತಿಭಟನೆ (Protest) ನಡೆಸಿದ್ದಾರೆ. ಈ ವೇಳೆ ಪೊಲೀಸರು ದೌರ್ಜನ್ಯ ಮಾಡುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪ ಕೂಡ ಮಾಡಿದ್ದಾರೆ.
ಇತ್ತ ಪ್ರಕರಣ ಸಂಬಂಧ ಮಾತನಾಡುತ್ತಾ ದೇಗುಲದ ಹಿರಿಯ ಅರ್ಚಕ ಶ್ರೀಕಂಠ ದೀಕ್ಷಿತ್ ಮಾತನಾಡುತ್ತಾ ಕಣ್ಣೀರು ಹಾಕಿದರು. ನಾನು 50 ವರ್ಷದಿಂದ ಅರ್ಚಕನಾಗಿದ್ದೇನೆ. ಈಗ ಕಿಡಿಗೇಡಿಗಳು ನೀರನ್ನು ಎರಚಿದ್ದಾರೆ. ನಾಳೆ ಇನ್ನೇನಾದರೂ ಆಗಬಹುದು. ಮುಂದೆ ಜಾತ್ರೆ ಉತ್ಸವಗಳಿದೆ. ಹೀಗಾಗಿ ದೇವಾಲಯಕ್ಕೆ ರಕ್ಷಣೆ ಕೊಡಿ ಎಂದು ಕಣ್ಣೀರಿಡುತ್ತಲೇ ಮನವಿ ಮಾಡಿಕೊಂಡರು.
ಏನಿದು ಪ್ರಕರಣ..?: ಅಂಧಕಾಸುರ ಸಂಹಾರಕ್ಕೆ ದಲಿತ ಸಂಘರ್ಷ ಸಮಿತಿ ವಿರೋಧ ವ್ಯಕ್ತಪಡಿಸಿತ್ತು. ಮಹಿಷಾಸುರನನ್ನು ರಾಜನೆಂದು ಪೂಜಿಸುತ್ತೇವೆ. ಈ ಆಚರಣೆ ನಿಲ್ಲಿಸುವಂತೆ ಪಟ್ಟು ಹಿಡಿದಿದ್ದರು. ಈ ವೇಳೆ ಭಕ್ತರು, ತಲಾತಲಾಂತರಗಳಿಂದ ಆಚರಣೆ ಮಾಡಿಕೊಂಡು ಬಂದಿದ್ದೇವೆ ಎಂದು ವಿವರಿಸಿದರೂ, ಮೆರವಣಿಗೆ ಬಂದ ಸಂದರ್ಭದಲ್ಲಿ ಕೆಲ ಕಿಗೇಡಿಗಳು ನೀರನ್ನು ಉತ್ಸವ ಮೂರ್ತಿ ಮೇಲೆ ಎರಚಿದ್ದಾರೆ ಎಂದು ಆರೋಪಿಸಲಾಗಿದೆ.
ನಂಜನಗೂಡು ಅಂಧಕಾಸುರ ಆಚರಣೆಗೆ ಅಡ್ಡಿ ಪಡಿಸಿದ ವಿಚಾರದ ಕುರಿತು ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಜಗದೀಶ್ ಅವರು ಬಾಲರಾಜು, ನಾರಾಯಣ, ನಾಗಭೂಷಣ್, ನಟೇಶ್ ಹಾಗೂ ಅಭಿ ಈ ಐವರ ಮೇಲೆ ಇಓ ಅವರು ನಂಜನಗೂಡು ಪಟ್ಟಣ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ದೂರಿನಲ್ಲೇನಿತ್ತು..?: ನಮ್ಮ ಧಾರ್ಮಿಕ ಆಚರಣೆಗೆ ಅಡ್ಡಿಪಡಿಸಿದ್ದಾರೆ. ಕುಡಿಯುವ ನೀರಿನ ಬಾಟ್ಲಿಯಲ್ಲಿ ಉತ್ಸವ ಮೂರ್ತಿಗೆ ನೀರನ್ನ ಎರಚುವ ಮೂಲಕ ಅಪಮಾನ ಮಾಡಿದ್ದಾರೆ. ನಾವು ಯಾವುದೇ ವ್ಯಕ್ತಿಯನ್ನ ಅಪಮಾನ ಮಾಡುವಂತೆ ಕೆಲಸ ಮಾಡಿಲ್ಲ ಎಂದು ವಿವರಿಸಿದ್ದೇವೆ. ಆದರೂ ಕೆಲವು ವ್ಯಕ್ತಿಗಳು ಉತ್ಸವ ಮೂರ್ತಿಯ ಮೇಲೆ ಕುಡಿಯುವ ನೀರಿನ ಬಾಟ್ಲಿಯಿಂದ ನೀರು ಎರಚಿದ್ದಾರೆ. ಇದು ಭಕ್ತಾಧಿಗಳ ಧಾರ್ಮಿಕ ಭಾವನೆಗೆ ಧಕ್ಕೆಯಾಗಿದೆ ಎಂದು ಉಲ್ಲೇಖಿಸಿದ್ದರು.
ಬೆಂಗಳೂರು: ವಾಣಿಜ್ಯ ಮಳಿಗೆಗಳ ನಾಮಫಲಕಗಳಲ್ಲಿ 60% ಕನ್ನಡಕ್ಕೆ (Kannada Board) ಸರ್ಕಾರದ ಸೂಚನೆ ಇದ್ದರೂ ನಿರ್ಲಕ್ಷ್ಯ ಮಾಡುತ್ತಿರುವವರ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು (Karnataka Rakshana Vedike) ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಪ್ರಾಣವನ್ನೂ ಲೆಕ್ಕಿಸದೇ ಬೃಹತ್ ಜಾಹೀರಾತು ಫಲಕ ಏರಿ ಇಂಗ್ಲಿಷ್‍ನಲ್ಲಿದ್ದ ಬೋರ್ಡ್ ಅನ್ನು ಹರಿದು ಹಾಕಿದ್ದಾರೆ.
ಕರವೇ ನಾರಾಯಣಗೌಡ (Karave Narayana Gowda) ಬಣದ ಕಾರ್ಯಕರ್ತರು ನಾಮಫಲಕ ಮಹಾ ಅಭಿಯಾನ ಆರಂಭಿಸಿದ್ದು, ರಾಜ್ಯದ ವಿವಿಧ ಭಾಗಗಳ ಕಾರ್ಯಕರ್ತರು ಪಾಲ್ಗೊಂಡಿದ್ದಾರೆ. ಅಂಗಡಿ ಹಾಗೂ ಮಾಲ್‍ಗಳ ನಾಮಫಲಕಗಳಲ್ಲಿ 60% ಆದ್ಯತೆ ಕೊಡಬೇಕು. ಇಂಗ್ಲಿಷ್ ಹಾಗೂ ಹಿಂದಿ ನಾಮಫಲಕಗಳನ್ನು ತೆರವು ಮಾಡುತ್ತೇವೆ ಎಂದು ಎಚ್ಚರಿಕೆ ಕೊಟ್ಟಿದ್ದಾರೆ. ಇದನ್ನೂ ಓದಿ: ನಂಜುಂಡೇಶ್ವರ ಉತ್ಸವ ಮೂರ್ತಿಗೆ ಎಂಜಲು ನೀರು ಎರಚಿದ ಆರೋಪ- ಐವರ ವಿರುದ್ಧ ದೂರು
ಪ್ರತಿಭಟನೆ ವೇಳೆ ಕರವೇ ಕಾರ್ಯಕರ್ತರು ಮಾಲ್ ಒಂದರ ಮುಂಭಾಗದ ಫ್ಲೈಓವರ್ ಮೇಲೆ ನಿಂತು ಮಾಲ್ ಕಡೆಗೆ ಚಪ್ಪಲಿ ತೂರಿದ್ದಾರೆ. ಮಾಲ್‍ಗಳಿಗೆ ರಕ್ಷಣೆ ಒದಗಿಸಲಾಗಿದ್ದು, 100ಕ್ಕೂ ಹೆಚ್ಚು ಪೊಲೀಸರು ಮಾಲ್ ಬಳಿ ಸುತ್ತುವರಿದಿದ್ದಾರೆ. ಕೆಲವೆಡೆ ಪ್ರತಿಭಟನಾಕಾರರು ಕನ್ನಡ ಇಲ್ಲದ ನಾಮಫಲಕಗಳಿಗೆ ಮಸಿ ಬಳಿದಿದ್ದಾರೆ. ಅಲ್ಲದೇ ನಾಮಫಲಕಗಳನ್ನು ಒಡೆದು ಹಾಕಿದ್ದಾರೆ. ಈ ವೇಳೆ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ವಾಗ್ವಾದಕ್ಕೂ ಕಾರಣವಾಗಿದೆ. ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸರು ಲಾಠಿ ರುಚಿನೂ ತೋರಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಡಿಸಿಪಿ ಲಕ್ಷ್ಮಿಪ್ರಸಾದ್, ಪ್ರತಿಭಟನೆ ವೇಳೆ ಅಹಿತಕರ ಘಟನೆ ನಡೆಯದಂತೆ 500 ಪೊಲೀಸರನ್ನು ನಿಯೋಜಿಸಲಾಗಿದೆ. 10 ಬಿಎಂಟಿಸಿ ಬಸ್‍ಗಳನ್ನು ಸಿದ್ಧತೆ ಮಾಡಿಕೊಳ್ಳಲಾಗಿದೆ. ನ್ಯಾಯಾಲಯದ ಆದೇಶ ಇರುವುದರಿಂದ ರ‍್ಯಾಲಿಗೆ ಅವಕಾಶ ಕೊಡುವುದಿಲ್ಲ. ಇದನ್ನೂ ಮೀರಿ ರ್ಯಾಲಿಗೆ ಮುಂದಾದರೆ ಕಾನೂನು ಕ್ರಮಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಶಸ್ತ್ರಚಿಕಿತ್ಸೆ ವೇಳೆ ವೃದ್ಧೆಯ ತಲೆಗೆ 3 ಬಾರಿ ಪಂಚ್ ಕೊಟ್ಟ ವೈದ್ಯ- ಮುಂದೇನಾಯ್ತು?
ರಾಯಚೂರು: ಇತ್ತೀಚೆಗೆ ಟಾಟಾ ಏಸ್ ಪಲ್ಟಿಯಾಗಿ ಕಾಲೇಜಿನಿಂದ ಹಾಸ್ಟೆಲ್‍ಗೆ ತೆರಳುತ್ತಿದ್ದ ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡ ಹಿನ್ನೆಲೆಯಲ್ಲಿ ರಾಯಚೂರು (Raichur) ಸರ್ಕಾರಿ ಇಂಜಿನಿಯರಿಂಗ್ ಕಾಲೇಜು (Engineering College) ವಿದ್ಯಾರ್ಥಿಗಳು (Students) ಕಾಲೇಜು ಆವರಣದಲ್ಲೇ ಹಾಸ್ಟೆಲ್ ವ್ಯವಸ್ಥೆ ಮಾಡುವಂತೆ ಪ್ರತಿಭಟನೆ (Protest) ನಡೆಸಿದ್ದಾರೆ.
ಡಿ.16 ರಂದು ನಡೆದಿದ್ದ ಅಪಘಾತದಲ್ಲಿ 8 ಜನ ವಿದ್ಯಾರ್ಥಿಗಳು ಗಾಯಗೊಂಡಿದ್ದು, ನಾಲ್ವರ ಸ್ಥಿತಿ ಗಂಭೀರವಾಗಿತ್ತು. ವಿದ್ಯಾರ್ಥಿಗಳಾದ ಸುಮಿತ್, ವಿರೇಶ್, ಲಿಂಗರಾಜು, ನಾಗೇಶ್‍ಗೆ ಗಂಭೀರ ಗಾಯಗಳಾಗಿದ್ದು, ಬಳ್ಳಾರಿ ವಿಮ್ಸ್ ಹಾಗೂ ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರತಿಭಟನೆ ತೀವ್ರ ಕಾವು ಪಡೆದಿದ್ದು, ವಿದ್ಯಾರ್ಥಿಗಳು ತರಗತಿಗಳನ್ನು ಬಹಿಷ್ಕರಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಕೆಸಿ ಜನರಲ್ ಆಸ್ಪತ್ರೆ ಎಡವಟ್ಟಿನಿಂದ ಮಗು ಸಾವು- ಮಗು ಸತ್ತೋದ ಮೇಲೆ ಬಿಲ್ ಕೇಳಿದ ಆರೋಪ
ನಗರದ ಹೊರವಲಯದ ಯರಮರಸ್ ಕ್ಯಾಂಪ್‍ನಲ್ಲಿರುವ ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಗಳು ಸುಮಾರು 13 ಕಿಮೀ ದೂರದ ಬೋಳಮಾನದೊಡ್ಡಿ ರಸ್ತೆಯಲ್ಲಿ ಹಾಸ್ಟೆಲ್ ನೀಡಲಾಗಿದೆ. 300ಕ್ಕೂ ಹೆಚ್ಚು ವಿದ್ಯಾರ್ಥಿ, ವಿದ್ಯಾರ್ಥಿನಿಯರು ಕಾಲೇಜಿಗೆ ಬರಲು ಬಸ್ ವ್ಯವಸ್ಥೆ ಇಲ್ಲದೆ ಪ್ರತಿನಿತ್ಯ ಸಮಸ್ಯೆ ಎದುರಿಸಬೇಕಾಗಿದೆ. ಇದೇ ಕಾರಣಕ್ಕೆ ವಿದ್ಯಾರ್ಥಿಗಳು ಕಾಲೇಜು ಕ್ಯಾಂಪಸ್‍ನಲ್ಲೇ ಹಾಸ್ಟೆಲ್ ನೀಡುವಂತೆ ಆಗ್ರಹಿಸಿದ್ದಾರೆ. ಇದನ್ನೂ ಓದಿ: ರಾಮನಾಥಪುರದಲ್ಲಿ ಅದ್ಧೂರಿ ಷಷ್ಠಿ ರಥೋತ್ಸವ
ಬಂಧನಕ್ಕೆ ಆಗ್ರಹಿಸಿ ಕಾರ್ಯಕರ್ತರು ಪ್ರತಾಪ್ ಸಿಂಹ ಫೋಟೋಗೆ ಬೆಂಕಿ ಹಚ್ಚಿದ್ದು, ಅವರ ಪ್ಲೇ ಕಾರ್ಡ್‌ಗೆ ಚಪ್ಪಲಿಯಿಂದ ಹೊಡೆದು ಆಕ್ರೋಶ ಹೊರಹಾಕಿದ್ದಾರೆ. ಅಲ್ಲದೇ ಕೂಡಲೇ ಸಂಸದ ಪ್ರತಾಪ್ ಸಿಂಹರನ್ನು ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ. ಇನ್ನು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: ಯಾವಾಗ ಏನಾಗಬಹುದು ಊಹೆ ಮಾಡಲು ಸಾಧ್ಯವಿಲ್ಲ, ನಮಗೆ ಎಚ್ಚರಿಕೆ ಗಂಟೆ: ಯುಟಿ ಖಾದರ್
ಬೆಳಗಾವಿ: ಚಳಿಗಾಲದ ಅಧಿವೇಶನದ (Belagavi Session) 5ನೇ ದಿನವೂ ಪ್ರತಿಭಟನೆ ಕಾವು ಜೋರಾಗಿತ್ತು. ಇಂದು ಸಹ ಸುವರ್ಣ ವಿಧಾನಸೌಧ ಹೊರಗೆ 14 ವಿವಿಧ ಸಂಘಟನೆಗಳಿಂದ ಸಾಲು ಸಾಲು ಪ್ರತಿಭಟನೆ (Protest) ನಡೆದವು.
ಕರ್ನಾಟಕ ಪ್ರದೇಶ ಮಾದಿಗರ ಸಂಘದಿಂದ ಎಜೆ ಸದಾಶಿವ ಆಯೋಗದ ವರದಿ ಜಾರಿಗೆ ಪ್ರತಿಭಟನೆ ನಡೆಸಲಾಯಿತು. ಮಾರಣಹೊಳ ಗ್ರಾಮದ ರೈತರ 1,400 ಇನಾಮ ಜಮೀನು ರಕ್ಷಣೆಗಾಗಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ಪ್ರತಿಭಟನೆ ನಡೆಯಿತು. ಕಲಿಕಾ ಲೈಸೆನ್ಸ್ ಸೇರಿ ವಿವಿಧ ಬೇಡಿಕೆ ಒತ್ತಾಯಿಸಿ ಕರ್ನಾಟಕ ರಾಜ್ಯ ಮೋಟಾರ್ ವಾಹನ ಚಾಲನಾ ತರಬೇತಿ ಒಕ್ಕೂಟದಿಂದ ಪ್ರತಿಭಟನೆ ನಡೆಯಿತು. ಇದನ್ನೂ ಓದಿ: ಕುಮಾರಸ್ವಾಮಿ ಬಿಜೆಪಿಯವರಿಗೆ ಬಕೆಟ್ ಹಿಡಿಯಲು ಹೋಗಿದ್ದಾರೆ: ಸಿಎಂ ಇಬ್ರಾಹಿಂ
ಜಾತಿಗಣತಿಯನ್ನು ಬಹಿರಂಗಪಡಿಸಲು ಭೀಮ ಆರ್ಮಿ ಸಂಘಟನೆಯಿಂದ ಹೋರಾಟ, ಕಲಾವಿದರ ಮಾಶಾಸನ ಹೆಚ್ಚಳ, ಕಲಾವಿದರ ಅಕಾಡೆಮಿ ಸ್ಥಾಪಿಸಲು ಒತ್ತಾಯಿಸಿ ಕರ್ನಾಟಕ ರಾಜ್ಯ ಬೀದಿ ನಾಟಕಗಳ ಒಕ್ಕೂಟದಿಂದ ಹೋರಾಟ, ಮಹಿಳಾ ಅಭಿವೃದ್ಧಿ ಮತ್ತು ಮಕ್ಕಳ ಸಂರಕ್ಷಣಾ ಸಂಸ್ಥೆಯಿಂದ ದೇವದಾಸಿಯರಿಗೆ ಪ್ರತಿ ತಿಂಗಳು 5 ಸಾವಿರ ರೂ. ಗೌರವಧನ ನೀಡುವಂತೆ ಒತ್ತಾಯಿಸಿ ಪ್ರತಿಭಟನೆ, ಸೇವೆ ಖಾಯಂಗೊಳಿಸಲು ಒತ್ತಾಯಿಸಿ ಕರ್ನಾಟಕ ರಾಜ್ಯ ಸರ್ಕಾರಿ ಪ್ರಾಥಮಿಕ ಶಾಲಾ ಆಯಾಗಳ ಸಂಘದಿಂದ ಹೋರಾಟ, ಕಿತ್ತೂರು ಕೋಟೆ ಮರು ನಿರ್ಮಾಣಕ್ಕೆ ಒತ್ತಾಯಿಸಿ ರಾಣಿ ಚೆನ್ನಮ್ಮ ನವಭಾರತ ಸೇನೆಯಿಂದ ಮನವಿ ಸಲ್ಲಿಕೆ, ಕಡು ಬಡವರಿಗೆ ಆಶ್ರಯ ಮನೆ ಒದಿಸಲು ಒತ್ತಾಯಿಸಿ ಕರ್ನಾಟಕ ಬಡವರ ಹಿತರಕ್ಷಣಾ ವೇದಿಕೆಯಿಂದ ಮನವಿ ಸಲ್ಲಿಕೆ ಸೇರಿದಂತೆ ವಿವಿಧ ಬೇಡಿಕೆಗೆ ಒತ್ತಾಯಿಸಿ 14 ಸಂಘಟನೆಗಳಿಂದ ಪ್ರತಿಭಟನೆ ನಡೆಯಿತು. ಇದನ್ನೂ ಓದಿ: ಲೀಲಾವತಿ ನಿಧನ: ನೆಲಮಂಗಲದ ಅಂಬೇಡ್ಕರ್ ಮೈದಾನದಲ್ಲಿ ದರ್ಶನಕ್ಕೆ ವ್ಯವಸ್ಥೆ