ಬೆಳಗಾವಿ: ಇಂದಿನಿಂದ ಬೆಳಗಾವಿ ಚಳಿಗಾಲದ ಅಧಿವೇಶನ (Belagavi Winter Session) ಆರಂಭ ಹಿನ್ನೆಲೆ ಮೊದಲ ದಿನವೇ ಹಲವು ಪ್ರತಿಭಟನೆಗಳು (Protest) ನಡೆಯಿತು. ಸುವರ್ಣಸೌಧದ ಬಳಿಯ ಸುವರ್ಣ ಗಾರ್ಡನ್‌ನಲ್ಲಿ ವಿವಿಧ ಸಂಘಟನೆಗಳ ಸದಸ್ಯರು ಪ್ರತಿಭಟನೆ ನಡೆಸಿದರು.
ಮಹದಾಯಿ ನೀರಿಗಾಗಿ ಬೆಳಗಾವಿ, ಧಾರವಾಡ, ಗದಗ ಜಿಲ್ಲೆಗಳ ರೈತರಿಂದ ಹೋರಾಟ ನಡೆಯಿತು. ಗದಗ- ಹರಪನಹಳ್ಳಿ ರೈಲ್ವೆ ಮಾರ್ಗಕ್ಕಾಗಿ ಮುಂಡರಗಿ ತಾಲೂಕು ಹೋರಾಟ ಸಮಿತಿಯಿಂದ ಧರಣಿ ನಡೆಸಲಾಯಿತು. ವಿಶೇಷ ಶಾಲೆಯ ಶಿಕ್ಷಕರ ಮತ್ತು ಶಿಕ್ಷಕೇತರರಿಗೆ ಸೇವಾ ಭದ್ರತೆ ಒದಗಿಸುವಂತೆ ಆಗ್ರಹಿಸಿ, ರಾಜ್ಯ ಘಟಕದಿಂದ ಪ್ರತಿಭಟನೆ ನಡೆಸಲಾಯಿತು. ಇದನ್ನೂ ಓದಿ: ಶುಚಿ ಯೋಜನೆಗೆ ಮರು ಚಾಲನೆ – ಜನವರಿಯಿಂದ ಶಾಲೆಗಳಿಗೆ ತೆರಳಿ ನ್ಯಾಪ್ಕಿನ್ ವಿತರಣೆ: ದಿನೇಶ್ ಗುಂಡೂರಾವ್
ಪ್ರತಿಭಟನೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳ ಶಿಕ್ಷಕರುಗಳು (Teacher) ಭಾಗಿಯಾಗಿದ್ದರು. ಶಿಶು ಕೇಂದ್ರೀಕೃತ ಯೋಜನೆಯಡಿ ಒಟ್ಟು 136 ಶಾಲೆಗಳಿವೆ ಇದರಲ್ಲಿ ಸಾವಿರಾರು ಜನ ಶಿಕ್ಷಕರರಿದ್ದಾರೆ. ಆದರೆ ಶಿಕ್ಷಕರಿಗೆ ಯಾವುದೇ ಸೇವಾ ಭದ್ರತೆ ಇಲ್ಲ, ಸರಿಯಾದ ಸಮಯಕ್ಕೆ ಸಂಬಳವಾಗುತ್ತಿಲ್ಲ, ಯಾವುದೇ ಸೌಲಭ್ಯಗಳನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರ ನೀಡುತ್ತಿಲ್ಲ ಎಂದು ಪ್ರತಿಭಟನಾಕಾರರು ತಮ್ಮ ಅಸಮಾಧಾನ ಹೊರಹಾಕಿದರು.
ಪ್ರತಿಭಟನಾ ಸ್ಥಳಕ್ಕೆ ಸಚಿವ ಎಚ್ ಸಿ ಮಹಾದೇವಪ್ಪ ಭೇಟಿ ನೀಡಿ ಅಹವಾಲು ಸ್ವೀಕಾರ ಮಾಡಿದರು. ಕೂಡಲೇ ಸಂಬಂಧಿಸಿದ ಇಲಾಖೆಯ ಮುಖ್ಯಾಧಿಕಾರಿಗಳನ್ನು ಸ್ಥಳಕ್ಕೆ ಕರೆಯಿಸಿ ಶಿಕ್ಷಕರಿಗೆ ಸೇವಾ ಭದ್ರತೆ ನೀಡಲು ಸೂಚನೆ ನೀಡುವ ಮೂಲಕ ಸ್ಥಳದಲ್ಲಿಯೇ ಪರಿಹಾರ ಸೂಚಿಸಿದರು.
ವಿಜಯಪುರ: ಕುಡಿಯುವ ನೀರು ಪೂರೈಕೆಗೆ ಆಗ್ರಹಿಸಿ ಯುವಕನೊಬ್ಬ ಅರೆಬೆತ್ತಲಾಗಿ ಪ್ರತಿಭಟನೆ (Half Naked Protest) ಮಾಡಿದ್ದಾನೆ. ಆದರೆ ಕುಡಿಯುವ ನೀರು ಕೇಳಿದ್ದಕ್ಕೆ ಗ್ರಾಮ ಪಂಚಾಯತ್ ಪಿಡಿಒ (PDO) ಯುವಕನಿಗೆ ಕಪಾಳಮೋಕ್ಷ ಮಾಡಿರುವ ಘಟನೆ ವಿಜಯಪುರ (Vijaypura) ಜಿಲ್ಲೆಯ ಇಂಡಿ ತಾಲೂಕಿನ ಹಿರೇಮಸಳಿ ಗ್ರಾಮದಲ್ಲಿ ನಡೆದಿದೆ.
ಅರೆಬೆತ್ತಲೆಯಾಗಿ ಗ್ರಾಮ ಪಂಚಾಯಿತಿಗೆ ಆಗಮಿಸಿದ ಯುವಕ ಸಂತೋಷ್ ಮಳೆಯಾಗಿಲ್ಲ, ಕುಡಿಯಲು ನೀರು ಬಿಡುತ್ತಿಲ್ಲ ಎಂದು ಆರೋಪಿಸಿ ಪ್ರತಿಭಟನೆ ನಡೆಸಿದ್ದಾನೆ. ಪಿಡಿಒ ಶೋಭಾ ಹೊರಪೇಟ ಅವರನ್ನು ತಮ್ಮ ಕಚೇರಿಯೊಳಗೆ ಹೋಗಲು ಬಿಡದೇ ತಡೆದು ಪ್ರತಿಭಟಿಸಿದ್ದಕ್ಕೆ ಪಿಡಿಒ ಯುವಕನಿಗೆ ಕಪಾಳಮೋಕ್ಷ ಮಾಡಿದ್ದಾರೆ. ಇದನ್ನೂ ಓದಿ: ಸಿಪಿ ಯೋಗೇಶ್ವರ್ ಬಾವ ಮಹದೇವಯ್ಯ ಪತ್ತೆಗೆ ನಾಲ್ಕು ತಂಡ ರಚನೆ: ಎಸ್ಪಿ
ಕನ್ನಡದ ಹೆಸರಾಂತ ನಟ ಡಾ.ವಿಷ್ಣುವರ್ಧನ್ (Vishnuvardhan) ಅವರ ಸಮಾಧಿ ವಿವಾದ ಮತ್ತಷ್ಟು ತಾರಕಕ್ಕೇರಿದೆ. ಮೈಸೂರಿಗೆ ಸ್ಮಾರಕವನ್ನು ಶಿಫ್ಟ್ ಮಾಡಿರುವ ಹಿನ್ನೆಲೆಯಲ್ಲಿ ಅವರ ಸಮಾಧಿ ಸ್ಥಳವನ್ನು ತೆರವು ಮಾಡಲು ನಿರ್ಧರಿಸಲಾಗಿತ್ತು. ಈ ವಿವಾದ ಕೋರ್ಟ್ ಮೆಟ್ಟಿಲು ಕೂಡ ಏರಿತ್ತು. ಈಗ ಮತ್ತೆ ಅಭಿಮಾನಿಗಳ ಮತ್ತು ಅಭಿಮಾನ ಸ್ಟುಡಿಯೋ ಮಾಲೀಕರ ನಡುವೆ ಮತ್ತೊಂದು ಸುತ್ತಿನ ಸಮರ ಶುರುವಾಗುತ್ತಿದೆ. ಈ ಕುರಿತಂತೆ ಅಭಿಮಾನಿಗಳು ಮೊನ್ನೆ ಸಭೆ ಸೇರಿ ಬೃಹತ್ ಪ್ರತಿಭಟನೆ (Protest) ಮಾಡಲು ನಿರ್ಧರಿಸಿದ್ದಾರೆ. ಈ ಕುರಿತಂತೆ ವಿಷ್ಣು ಸೇನಾ ಸಮಿತಿ ಅಧ್ಯಕ್ಷರಾದ ವೀರಕಪುತ್ರ ಶ್ರೀನಿವಾಸ್ (Veerakaputra Srinivas) ಅವರ ಬರೆದ ಪತ್ರ ಇಲ್ಲಿದೆ.
ಮೇರು ನಟ ಡಾ.ವಿಷ್ಣುವರ್ಧನ್ ಅವರು ಅಗಲಿ 14 ವರ್ಷಗಳಾದವು. ಆದರೆ ಇಂದಿಗೂ ಅವರ ಅಂತ್ಯಸಂಸ್ಕಾರಗೊಂಡ ಜಾಗವನ್ನು ಅಭಿವೃದ್ದಿಪಡಿಸುವ ಕೆಲಸವನ್ನು ಯಾವುದೇ ಸರ್ಕಾರ ಮಾಡಿಲ್ಲ. ವಾಸ್ತವದಲ್ಲಿ ಹಿರಿಯ ಕಲಾವಿದ ಬಾಲಕೃಷ್ಣ ಅವರಿಗೆ ಸರ್ಕಾರ ಅನುದಾನವಾಗಿ ನೀಡಿರುವ ಜಾಗವೇ ಅಭಿಮಾನ್ ಸ್ಟುಡಿಯೋ. ಕನ್ನಡಿಗರು ಚಿತ್ರರಂಗದ ಕೆಲಸಗಳಿಗೆ ಮದರಾಸಿಗೆ ಹೋಗುವುದನ್ನು ತಪ್ಪಿಸಬೇಕು ಎಂದು ಕನಸು ಹೊತ್ತು ಬಾಲಣ್ಣನವರು ಸರ್ಕಾರದ ಬಳಿ ಇಪ್ಪತ್ತು ಎಕರೆ ಜಾಗವನ್ನು 99 ವರುಷಕ್ಕೆ ಅನುದಾನವಾಗಿ ಪಡೆದು ಅಭಿಮಾನ್ ಸ್ಟುಡಿಯೋ ನಿರ್ಮಿಸಿದ್ದರು. ಆದರೆ ಅವರ ಅಗಲಿಕೆಯ ನಂತರ 2004 ರಲ್ಲಿ ಅವರ ಮಕ್ಕಳು ಅದರಲ್ಲಿ ಹತ್ತು ಎಕರೆ ಜಾಗವನ್ನು ಮಾರಾಟ ಮಾಡಿ, ಸರ್ಕಾರಿ ಜಮೀನನ್ನು ದುರುಪಯೋಗಪಡಿಸಿಕೊಂಡಿದ್ದರು. ಈ ಕಾರಣದಿಂದ ಹಿಂದಿನ ಜಿಲ್ಲಾಧಿಕಾರಿ ಶಂಕರ್ ಅವರು ಅಭಿಮಾನ್ ಸ್ಟುಡಿಯೋ ಮುಟ್ಟುಗೋಲಿಗೆ ಆದೇಶಿಸಿದ್ದರು. ಆಗ ಬಾಲಕೃಷ್ಣ ಅವರ ಕುಟುಂಬಸ್ಥರು ನ್ಯಾಯಾಲಯದಲ್ಲಿ ತಡೆಯಾಜ್ಞೆಯನ್ನು ತಂದಿದ್ದರು.
ಈ ನಡುವೆ, ಡಾ.ವಿಷ್ಣುವರ್ಧನ್ ಅವರ ಸ್ಮಾರಕವು ಮೈಸೂರಿಗೆ ಸ್ಥಳಾಂತರಗೊಂಡಿತು. ಆದರೆ ಅಭಿಮಾನಿಗಳು ಸ್ಮಾರಕ ಎಲ್ಲೇ ಆದರೂ ಅಂತ್ಯಸಂಸ್ಕಾರಗೊಂಡ ಜಾಗದಲ್ಲಿಯೇ ಪುಣ್ಯಭೂಮಿ ಇರಬೇಕು ಎಂದು ಹಠವಿಡಿದು, ಪ್ರತಿವರ್ಷದ ಹುಟ್ಟುಹಬ್ಬ ಮತ್ತು ಪುಣ್ಯಸ್ಮರಣೆಯನ್ನು ಅತ್ಯಂತ ಅದ್ದೂರಿಯಾಗಿ ಅಭಿಮಾನ್ ಸ್ಟುಡಿಯೋದ ಡಾ.ವಿಷ್ಣು ಪುಣ್ಯಭೂಮಿಯಲ್ಲಿ ಆಚರಿಸುತ್ತಾ ಬರುತ್ತಿದ್ದಾರೆ.
ಆದರೆ, ಈಗ ಅಭಿಮಾನ್ ಸ್ಟುಡಿಯೋದ ಮಾಲೀಕರು ಅಭಿಮಾನಿಗಳಿಗೆ ಒಳಪ್ರವೇಶಿಸಲು ನಿರ್ಬಂಧಗಳನ್ನು ವಿಧಿಸುವುದರ ಜೊತೆಗೆ, ಪ್ರತಿವರ್ಷದ ಹುಟ್ಟುಹಬ್ಬ ಮತ್ತು ಪುಣ್ಯಸ್ಮರಣೆಗೆ ಹಲವಾರು ತೊಂದರೆಗಳನ್ನು ನೀಡುತ್ತಿದ್ದಾರೆ. ಈ ಕುರಿತಾಗಿ ಮಾನ್ಯ ಉಪಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶಿವರಾಜ್ ತಂಗಡಗಿ ಅವರನ್ನು ಭೇಟಿಮಾಡಿ ಅಹವಾಲನ್ನು ಸಲ್ಲಿಸಲಾಗಿದೆ. ಒಬ್ಬೇ ನಟನಿಗೆ ಎರಡೆರಡು ಕಡೆ ಸ್ಮಾರಕ, ಪುಣ್ಯಭೂಮಿ ಮಾಡುವುದು ಸರ್ಕಾರಕ್ಕೆ ಕಷ್ಟವಾದರೆ, ಆ ಜಮೀನಿಗೆ ತಗಲುವ ಮತ್ತು ಪುಣ್ಯಭೂಮಿ ಅಭಿವೃದ್ಧಿಗೆ ಬೇಕಾಗುವ ಹಣವನ್ನು ಅಭಿಮಾನಿಗಳೇ ನೀಡುವುದಾಗಿ ತಿಳಿಸಿರುತ್ತೇವೆ.
ಆದರೂ ಯಾವುದೇ ಸೂಕ್ತಪ್ರತಿಕ್ರಿಯೆಗಳು ಅವರಿಂದ ಬರದೇ ಇರುವುದರಿಂದ ಇದೇ ಡಿಸೆಂಬರ್ 17 ರಂದು ಡಾ.ವಿಷ್ಣುವರ್ಧನ್ ಅಭಿಮಾನಿ ಸಂಘಗಳ ಒಕ್ಕೂಟದ ವತಿಯಿಂದ ಬೃಹತ್ ಪ್ರತಿಭಟನೆಯನ್ನು ನಗರದ ಸ್ವಾತಂತ್ರ್ಯ ಉದ್ಯಾನವನದಲ್ಲಿ ಬೆಳಿಗ್ಗೆ ಹತ್ತರಿಂದ ಸಂಜೆ ಆರು ಗಂಟೆ ತನಕ ಹಮ್ಮಿಕೊಳ್ಳಲಾಗಿದೆ. ಈ ಸಂದರ್ಭದಲ್ಲಿ ನಾಡಿನ ಎಲ್ಲಾ ಕನ್ನಡಪರ ಸಂಘಟನೆಗಳು, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ, ಕಲಾವಿದರ ಸಂಘ ಆದಿಯಾಗಿ ಡಾ.ವಿಷ್ಣುವರ್ಧನ್ ಅವರ ಒಡನಾಡಿಗಳೆಲ್ಲರೂ ಈ ಪ್ರತಿಭಟನೆಯಲ್ಲಿ ಭಾಗವಹಿಸುತ್ತಿದ್ದಾರೆ. ಅಂದು ಸುಮಾರು ಐವತ್ತು ಸಾವಿರ ಜನ ಸೇರುವ ನಿರೀಕ್ಷೆ ಇದೆ.
ಒಂದು ವೇಳೆ ಈ ಪ್ರತಿಭಟನೆಗೂ ಸರ್ಕಾರ ಸ್ಪಂದಿಸದೇ ಹೋದಲ್ಲಿ, ದೆಹಲಿಯಲ್ಲಿ ನಾವು ಹೋರಾಟವನ್ನು ಮುಂದುವರಿಸಲಿದ್ದೇವೆ ಜೊತೆಗೆ ಸರ್ಕಾರದ ಮಂತ್ರಿಗಳು ಭಾಗವಹಿಸುವ ಎಲ್ಲಾ ಕಾರ್ಯಕ್ರಮಗಳಲ್ಲಿ ಕಪ್ಪುಬಾವುಟ ಪ್ರದರ್ಶನಕ್ಕೆ ಮುಂದಾಗಲಿದ್ದೇವೆ ಎಂದು ವಿಷ್ಣು ಸೇನಾ ಸಮಿತಿ ಮಾಧ್ಯಮ ಪ್ರಕಟಣೆ ನೀಡಿದೆ. ಪ್ರತಿಭಟನೆ ಸಲುವಾಗಿ ಸಮಾಲೋಚನೆ ಸಭೆಯನ್ನು ಇದೇ ಭಾನುವಾರ ವೀರಕಪುತ್ರ ಶ್ರೀನಿವಾಸ ನೇತೃತ್ವದಲ್ಲಿ ಕರೆಯಲಾಗಿತ್ತು. ಈ ಸಭೆಗೆ ಐನೂರಕ್ಕೂ ಹೆಚ್ಚು ಸೇನಾನಿಗಳು ಹಾಜರಿದ್ದರು.
ಬೆಂಗಳೂರು: ಮೊದಲೆಲ್ಲಾ ಸಿಕ್ಕ ಸಿಕ್ಕ ಕಡೆ ಪ್ರತಿಭಟನೆ (Protest) ಮಾಡುತ್ತಿದ್ದರು. ಆದರೆ ಈಗ ಬೆಂಗಳೂರಿನಲ್ಲಿ (Bengaluru) ಸಿಕ್ಕಸಿಕ್ಕ ಕಡೆ ಪ್ರತಿಭಟನೆ ಮಾಡುವಂತಿಲ್ಲ. ಕೋರ್ಟ್ ಆದೇಶದಂತೆ ಫ್ರೀಡಂಪಾರ್ಕ್ (Freedom Park) ಹೊರತುಪಡಿಸಿ ಬೇರಡೆ ಪ್ರತಿಭಟನೆಗೆ ಅವಕಾಶ ಇಲ್ಲ. ಆದರೆ ಸರ್ಕಾರ ಈಗ ಈ ನಿರ್ಧಾರವನ್ನು ಬದಲಾಯಿಸಲು ಕಾನೂನಾತ್ಮಕ ಹೆಜ್ಜೆ ಇಡಲು ಸಜ್ಜಾಗಿದೆ.
ಬೆಂಗಳೂರಿನಲ್ಲಿ ಪ್ರತಿಭಟನೆಗೆ ಫ್ರೀಡಂಪಾರ್ಕ್ ಫಿಕ್ಸ್ ಆಗಿರುವ ಸ್ಥಳ. ಅದನ್ನು ಹೊರತುಪಡಿಸಿ ಬೇರೆ ಕಡೆ ಪ್ರತಿಭಟನೆ ಮಾಡುವಂತಿಲ್ಲ. ಇದು ಹೈಕೋರ್ಟ್ ಆದೇಶ. ಈ ಹಿಂದೆ ಬೆಂಗಳೂರಿನ ಟೌನ್ ಹಾಲ್ ಸೇರಿದಂತೆ ಅನೇಕ ಸ್ಥಳ ಪ್ರತಿಭಟನಾ ಹಾಟ್‌ಸ್ಪಾಟ್ ಆಗಿತ್ತು. ಆದರೆ ಈಗ ಫ್ರೀಡಂಪಾರ್ಕ್‌ನಲ್ಲಿ ಮಾತ್ರ ಪ್ರತಿಭಟನೆಯ ಬಗ್ಗೆ ಕಟ್ಟುನಿಟ್ಟಿನ ಆದೇಶವಿದೆ. ಹೀಗಾಗಿ ಬೇರೆ ಕಡೆಯೂ ಪ್ರತಿಭಟನೆಗೆ ಅವಕಾಶ ಕೊಡಬೇಕು ಅನ್ನೋದು ಸರ್ಕಾರದ ಮೇಲೆ ಒತ್ತಡ ಇತ್ತು. ಹೋರಾಟಗಾರರ ನಿರಂತರ ಒತ್ತಡದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಗುಡ್‌ನ್ಯೂಸ್ ಕೊಟ್ಟಿದ್ದಾರೆ. ಇದನ್ನೂ ಓದಿ: ಶಾಲಾ ಮಕ್ಕಳಿಗೆ ರಾಗಿ ಮಾಲ್ಟ್ ಭಾಗ್ಯ: ಮಧು ಬಂಗಾರಪ್ಪ
ಇನ್ನುಮುಂದೆ ಫ್ರೀಡಂಪಾರ್ಕ್‌ನಲ್ಲಿ ಹೊರತುಪಡಿಸಿ, ಟೌನ್‌ಹಾಲ್‌ನಲ್ಲಿಯೂ ಪ್ರತಿಭಟನೆಗೆ ಅವಕಾಶ ಕೊಡಲು ಸರ್ಕಾರ ಹೆಜ್ಜೆ ಇಟ್ಟಿದೆ. ಈ ಬಗ್ಗೆ ಖುದ್ದು ಸಿಎಂ ಹೋರಾಟಗಾರರಿಗೆ ಭರವಸೆ ನೀಡಿದ್ದಾರೆ. ಅಡ್ವೋಕೇಟ್ ಜನರಲ್ ಜೊತೆ ಮಾತನಾಡಿ ಟೌನ್‌ಹಾಲ್ ಮುಂಭಾಗ ಚಳುವಳಿಗೆ ಅವಕಾಶ ಮಾಡಿಕೊಡುವುದಾಗಿ ಹೇಳಿದ್ದಾರೆ. ಇದನ್ನೂ ಓದಿ: ಈ ಸಂದರ್ಭದಲ್ಲಿ ನಾವು ಮೌನವಾಗಿರುತ್ತೇವೆ; ಭಕ್ತರಿಗೆ ಮೌನವೇ ದೊಡ್ಡ ಸಂದೇಶ: ಜೈಲಿಂದ ಬಂದ ಮುರುಘಾ ಶ್ರೀ
ಜೈಪುರ: 4 ವರ್ಷದ ಮಗುವಿನ ಮೇಲೆ ಸಬ್ ಇನ್ಸ್‌ಪೆಕ್ಟರ್ (Sub Inspector) ಒಬ್ಬ ಅತ್ಯಾಚಾರವೆಸಗಿದ ಘಟನೆ ರಾಜಸ್ಥಾನದ (Rajasthan) ದೌಸಾ ಜಿಲ್ಲೆಯಲ್ಲಿ ನಡೆದಿದೆ.
लालसोट में 7 साल की दलित बच्ची के साथ पुलिसकर्मी द्वारा दुष्कर्म की घटना से लोगों में भारी आक्रोश है। मासूम को न्याय दिलाने के लिए मौके पर पहुंच गया हूं। अशोक गहलोत सरकार के नाकारापन से निरंकुश हुई पुलिस चुनाव जैसे संवेदनशील मौके पर भी ज्यादती करने से बाज नहीं आ रही। pic.twitter.com/xnIB13eyWi
ಘಟನೆ ತಿಳಿಯುತ್ತಿದ್ದಂತೆ ರೊಚ್ಚಿಗೆದ್ದ ಗ್ರಾಮಸ್ಥರು ಠಾಣೆಗೆ ನುಗ್ಗಿ ಪೊಲೀಸ್ ಅಧಿಕಾರಿಯನ್ನ ಹಿಗ್ಗಾಮುಗ್ಗ ಥಳಿಸಿ, ಮೇಲಾಧಿಕಾರಿಗಳಿಗೆ ಒಪ್ಪಿಸಿದ್ದಾರೆ. ಸದ್ಯ ಠಾಣೆಯ ಮುಂದೆ ಸಾವಿರಾರು ಸಂಖ್ಯೆಯಲ್ಲಿ ಜಮಾಯಿಸಿರುವ ಗ್ರಾಮಸ್ಥರು ಆರೋಪಿ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಆಗ್ರಹಿಸಿದ್ದಾರೆ. ಇದನ್ನೂ ಓದಿ: ತಿಹಾರ್ ಜೈಲಿನಿಂದ ಬಂದು ಅನಾರೋಗ್ಯ ಪೀಡಿತ ಪತ್ನಿ ಭೇಟಿಯಾದ ಮನೀಶ್ ಸಿಸೋಡಿಯಾ
ಚುನಾವಣಾ ಕರ್ತವ್ಯದಲ್ಲಿದ್ದ ಸಬ್ ಇನ್ಸ್‌ಪೆಕ್ಟರ್ ಭೂಪೇಂದ್ರ ಸಿಂಗ್ ಶುಕ್ರವಾರ ಮಧ್ಯಾಹ್ನ ಮಗುವನ್ನ ತನ್ನ ಕೋಣೆಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ. ಆರೋಪಿ ಅತ್ಯಾಚಾರ ಎಸಗಿದ ನಂತರ ಸಮೀಪದಲ್ಲಿ ವಾಸಿಸುವ ಕುಟುಂಬಸ್ಥರು ದೂರು ನೀಡಿದ್ದು, ಎಸ್‌ಐ ಭೂಪೇಂದ್ರ ರಾಹುವಾಸ್ ಪೊಲೀಸ್ ಠಾಣೆಯಲ್ಲಿ (Rahuwas Police Station) ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಚೆನ್ನೈ-ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ – ಐವರು ಸಾವು, 60 ಮಂದಿಗೆ ಗಾಯ
ಪ್ರತಿಭಟನಾ ಸ್ಥಳಕ್ಕಾಗಮಿಸಿದ ಬಿಜೆಪಿ ಸಂಸದ (BJP MP) ಕಿರೋಡಿ ಲಾಲ್ ಮೀನಾ ಮಾತನಾಡಿ, ಪುಟ್ಟ ದಲಿತ ಹೆಣ್ಣುಮಗುವಿನ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಬೆಳಕಿಗೆ ಬಂದ ನಂತರ ಜನ ರೊಚ್ಚಿಗೆದ್ದಿದ್ದಾರೆ. ಇದು ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ. ಸಂತ್ರಸ್ತ ಮಗುವಿನ ಕುಟುಂಬಕ್ಕೆ ನ್ಯಾಯ ಒದಗಿಸುವುದು ನನ್ನ ಮೊದಲ ಆದ್ಯತೆಯಾಗಿದೆ. ಆರೋಪಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆದೇಶಿಸಿದ್ದೇನೆ ಎಂದು ಭರವಸೆ ನೀಡಿದ್ದಾರೆ. ಅಲ್ಲದೇ ಸಂತ್ರಸ್ತ ಮಗುವಿನ ಕುಟುಂಬಕ್ಕೆ 50 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ.
ಬೆಂಗಳೂರು: ಕಳೆದ ಒಂದು ವಾರದಿಂದ ಬಿಬಿಎಂಪಿ (BBMP) ವ್ಯಾಪ್ತಿಯಲ್ಲಿನ ಬೀದಿಬದಿ ವ್ಯಾಪಾರ ತೆರವು ಕಾರ್ಯಾಚರಣೆ ಮುಂದುವರೆದಿದೆ. ಈ ಬಿಸಿ ಈಗ ಮಲ್ಲೇಶ್ವರಂ ಮಾರ್ಕೆಟ್‌ಗೂ (Malleshwaram Market) ತಟ್ಟಿದ್ದು, ಬೀದಿಬದಿ ವ್ಯಾಪಾರಿಗಳ (Street Vendors) ಗೋಳು ಹೇಳತೀರದಂತಿದೆ.
ಬೆಂಗಳೂರಿನಲ್ಲಿ (Bengaluru) ಕಳೆದ ಒಂದು ವಾರದಿಂದ ಬಿಬಿಎಂಪಿ ಅಧಿಕಾರಿಗಳಿಂದ ನಡೆಯುತ್ತಿರುವ ಬೀದಿಬದಿ ವ್ಯಾಪಾರ ತೆರವು ಕಾರ್ಯಾಚರಣೆ ಮಲ್ಲೇಶ್ವರಂ ಮಾರ್ಕೆಟ್‌ಗೂ ಕಾಲಿಟ್ಟಿದೆ. ಮಲ್ಲೇಶ್ವರಂ 8ನೇ ಕ್ರಾಸ್‌ನಲ್ಲಿ ನೂರಾರು ಸಂಖ್ಯೆಯ ಬೀದಿಬದಿ ವ್ಯಾಪಾರಿಗಳನ್ನು ವ್ಯಾಪಾರ ಮಾಡದಂತೆ ಅಂಗಡಿಗಳನ್ನು ಎತ್ತಿಸಲಾಗಿದ್ದು, ವ್ಯಾಪಾರಿಗಳು ಸರ್ಕಾರ ಮತ್ತು ಬಿಬಿಎಂಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಬೆಸ್ಕಾಂ ಬಿಲ್ ಹೆಸರಲ್ಲಿ ಸೈಬರ್ ಹ್ಯಾಕ್ – ಬಿಲ್ ಕಟ್ಟೋಕೆ ಹೋದ್ರೆ ಅಕೌಂಟ್‌ನಲ್ಲಿದ್ದ ಹಣ ಮಾಯ
ನಗರದ ಬೇರೆ ಬೇರೆ ಕಡೆ ಫುಟ್‌ಪಾತ್ ಮೇಲೆ ವ್ಯಾಪಾರ ಮಾಡುತ್ತಿದ್ದ ವ್ಯಾಪಾರಿಗಳ ತೆರವು ಆರಂಭಿಸಿರುವ ಬಿಬಿಎಂಪಿ ಬುಧವಾರ ಸಂಜೆ ದಿಢೀರ್ ಅಂತಾ ಮಲ್ಲೇಶ್ವರಂ 8ನೇ ಕ್ರಾಸ್‌ನ ಮಾರ್ಕೆಟ್‌ನಲ್ಲೂ ಕಾರ್ಯಚರಣೆ ಆರಂಭಿಸಿತ್ತು. ನೂರಾರು ಸಂಖ್ಯೆಯ ಬೀದಿಬದಿ ವ್ಯಾಪಾರಿಗಳನ್ನು ಪೊಲೀಸರು ಮತ್ತು ಮಾರ್ಷಲ್‌ಗಳ ಸಹಾಯದಿಂದ ತೆರವು ಮಾಡಲಾಯಿತು. ಆರಂಭದಲ್ಲಿ ವ್ಯಾಪಾರಿಗಳು ವಿರೋಧ ವ್ಯಕ್ತಪಡಿಸಿದರು. ಆದರೆ ಪೊಲೀಸರು ದೊಡ್ಡ ಮಟ್ಟದ ವಿರೋಧಕ್ಕೆ ಆಸ್ಪದ ನೀಡದೆ ಸಂಪೂರ್ಣ ವ್ಯಾಪಾರವನ್ನು ಸ್ಥಗಿತಗೊಳಿಸಿದರು. ಇದೇ ಸಂದರ್ಭದಲ್ಲಿ ಮಹಿಳಾ ವ್ಯಾಪಾರಿಗಳು ಕೂಡ ಅಧಿಕಾರಿಗಳಿಗೆ ಹಿಡಿ ಶಾಪ ಹಾಕಿದರು. ಇದನ್ನೂ ಓದಿ: ಚೆಕ್‍ನಲ್ಲಿ 3.5 ಲಕ್ಷ ರೂ. ಲಂಚ ಪಡೆಯುವಾಗ ಲೋಕಾಯುಕ್ತ ದಾಳಿ – ಅಧಿಕಾರಿ ಅರೆಸ್ಟ್
ಈ ಮಧ್ಯೆ ವ್ಯಾಪಾರಿಗಳ ತೆರವು ವಿಚಾರ ಸಂಬಂಧ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಪ್ರತಿಕ್ರಿಯಿಸಿ, ಜಿಎಸ್‌ಟಿ ವ್ಯಾಪ್ತಿಗೆ ಬರುವ ವಸ್ತುಗಳನ್ನು ಫುಟ್‌ಪಾತ್‌ನಲ್ಲಿ ಮಾರುತ್ತಿದ್ದಾರೆ. ತಾವು ಬೀದಿಬದಿ ವ್ಯಾಪಾರಿ ಅಂತಾ ಗುರುತಿನ ಚೀಟಿ ಇದ್ದರೆ ವ್ಯಾಪಾರ ಮಾಡಬಹುದು. ರಸ್ತೆಯಿಂದ 10 ಮೀಟರ್ ದೂರದಲ್ಲಿ ಪಾದಚಾರಿಗಳಿಗೆ ತೊಂದರೆ ಆಗದಂತೆ ಮಾಡಬಹುದು ಎಂದಿದ್ದಾರೆ. ಆದರೆ, ಈ ಮಧ್ಯೆ ಕಾರ್ಡ್ ಇರುವ ಭಾಗಗಳಲ್ಲೂ ತೆರವು ಕಾರ್ಯ ನಡೆಯುತ್ತಿದ್ದು, ಬಿಬಿಎಂಪಿ ಕಮಿಷನರ್ ಹುಸಿ ಭರವಸೆ ನೀಡುತ್ತಿದ್ದಾರಾ ಎಂಬ ಅನುಮಾನ ಕೂಡ ವ್ಯಕ್ತವಾಗ್ತಿದೆ. ಇದನ್ನೂ ಓದಿ: ತಮಿಳುನಾಡಿನಲ್ಲಿ ಭಾರೀ ಮಳೆ – 5 ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ
ಮಲ್ಲೇಶ್ವರಂ, ಜಯನಗರ (Jayanagar), ಸೇರಿ ಹಲವೆಡೆ ಬೀದಿಬದಿ ವ್ಯಾಪಾರಿಗಳನ್ನು ತೆರವು ಮಾಡಿಸುತ್ತಿರುವುದನ್ನು ಖಂಡಿಸಿ ಇಂದು ಬೀದಿಬದಿ ವ್ಯಾಪಾರಿಗಳ ಸಂಘ ಪ್ರತಿಭಟನೆ ನಡೆಸುತ್ತಿದೆ. ಬೆಳಗ್ಗೆ 11 ಘಂಟೆಗೆ ಜಯನಗರ 4 ಬ್ಲಾಕ್‌ನಲ್ಲಿ ಬಿಡಿಎ ಮಾರ್ಕೆಟ್ ಕಾಂಪ್ಲೆಕ್ಸ್ ಹತ್ತಿರ ಬಿಬಿಎಂಪಿಯ ವಿರುದ್ಧ ಹೋರಾಟ ನಡೆಸುತ್ತಿದ್ದಾರೆ. ಒಟ್ಟಾರೆ ಬಿಬಿಎಂಪಿ ನಿರ್ಧಾರ ಬೀದಿಬದಿಯಲ್ಲಿ ಜೀವನ ಮಾಡುತ್ತಿದ್ದ ಬಡ ವ್ಯಾಪಾರಿಗಳ ಹೊಟ್ಟೆ ಮೇಲೆ ಹೊಡೆದಿರುವುದಂತು ಸತ್ಯ. ಇದನ್ನೂ ಓದಿ: ಎಫ್‍ಡಿಎ ಪರೀಕ್ಷೆ ಅಕ್ರಮ ತನಿಖೆ ಚುರುಕು – ಕಿಂಗ್‍ಪಿನ್‍ನಿಂದ ಜಾಮೀನಿನ ಮೊರೆ
ಗದಗ: ಸಮರ್ಪಕ ಬಿಸಿ ಊಟ, ಪೌಷ್ಟಿಕ ಆಹಾರ ನೀಡದ್ದಕ್ಕೆ ಮಕ್ಕಳು ಶಾಲೆಗೆ (School) ಬೀಗ ಜಡಿದು ಪ್ರತಿಭಟನೆ ಮಾಡಿದ ಘಟನೆ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಲಕ್ಕಲಕಟ್ಟಿ (Lakkalakatti) ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಸ್ವತಃ ಮಕ್ಕಳೇ ಬೀಗ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮುಖ್ಯ ಶಿಕ್ಷಕಿ ಎಎಸ್ ರಾಠೋಡ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಳೆದ 15 ದಿನಗಳಿಂದ ಮಕ್ಕಳಿಗೆ ಮೊಟ್ಟೆ, ಶೇಂಗಾ ಚಿಕ್ಕಿ, ಬಾಳೆ ಹಣ್ಣು, ಪೌಷ್ಟಿಕ ಆಹಾರ ನೀಡುತ್ತಿಲ್ಲ. ಇನ್ನು ಮಧ್ಯಾಹ್ನ ಬಿಸಿ ಊಟ ಎಲ್ಲಾ ಮಕ್ಕಳಿಗೂ ಸಮರ್ಪಕವಾಗಿ ಕೊಡುತ್ತಿಲ್ಲ ಎಂಬ ಆರೋಪ ಮಕ್ಕಳದ್ದಾಗಿದೆ.
ಇಲ್ಲಿ 1 ರಿಂದ 7ನೇ ತರಗತಿಯವರೆಗೆ 441 ಮಕ್ಕಳು ವ್ಯಾಸಂಗ ಮಾಡುತ್ತಿದ್ದಾರೆ. ಅವರಿಗೆ ಮಧ್ಯಾಹ್ನ 2:30 ರಿಂದ 3 ಗಂಟೆಗೆ ತಡವಾಗಿ ಬಿಸಿ ಊಟ ನೀಡುತ್ತಾರೆ. ಜೊತೆಗೆ ಕೇವಲ 1-2 ಕೆಜಿ ತರಕಾರಿಯಲ್ಲಿ 441 ಮಕ್ಕಳಿಗೆ ಬಿಸಿ ಊಟ ಹಂಚಿಕೆ ಮಾಡುತ್ತಾರೆ. ಧಾನ್ಯಗಳಿಲ್ಲದ ಮಸಾಲೆ ಮಿಶ್ರಿತ ತಿಳಿ ಸಾರು, ಹುಳು ಹತ್ತಿದ, ಬಲಿತ, ಕೊಳೆತ ತರಕಾರಿ ತಂದು ಊಟ ತಯಾರಿಸುತ್ತಾರೆ. ಇದರಿಂದ ಮಕ್ಕಳು ಅನಾರೋಗ್ಯಕ್ಕೆ ಒಳಗಾಗುತ್ತಿದ್ದಾರೆ ಎಂಬ ಆರೋಪ ಮಕ್ಕಳದ್ದಾಗಿದೆ.
ಆದರೆ ಲೆಕ್ಕ ಪುಸ್ತಕದಲ್ಲಿ ಎಲ್ಲವನ್ನೂ ದಾಖಲು ಮಾಡಿರುತ್ತಾರೆ ಎಂಬ ಆರೋಪ ಪಾಲಕರದ್ದಾಗಿದೆ. ಮುಖ್ಯ ಶಿಕ್ಷಕಿ ಎಎಸ್ ರಾಠೋಡ್ ಬೇಡವೇ ಬೇಡ, ಮಕ್ಕಳ ಹಿತ ಕಾಪಾಡದ ಶಿಕ್ಷಕಿ ನಮ್ಮೂರ ಶಾಲೆಗೆ ಬೇರೆ ಕಡೆಗೆ ಎಂದು ಮಕ್ಕಳು, ಪಾಲಕರು ಘೋಷಣೆ ಕೂಗಿದ್ದಾರೆ. ಸ್ಥಳಕ್ಕೆ ಜಿಲ್ಲಾಧಿಕಾರಿ, ಶಿಕ್ಷಣಾಧಿಕಾರಿಗಳು ಬರುವಂತೆ ಮಕ್ಕಳು ಆಗ್ರಹಿಸಿದ್ದಾರೆ. ಶಿಕ್ಷಕಿ ವರ್ಗಾವಣೆ ಆಗುವವರೆಗೆ ಶಾಲೆಗೆ ಬರುವುದಿಲ್ಲ ಎಂದು ಮಕ್ಕಳು ಪಟ್ಟು ಹಿಡಿದಿದ್ದಾರೆ. ಇದನ್ನೂ ಓದಿ: ಪಂಪ್‌ಸೆಟ್‌ಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸುವ ಭರವಸೆ – ಉಪವಾಸ ಸತ್ಯಾಗ್ರಹ ಕೈಬಿಟ್ಟ ಬಿಜೆಪಿ ಸಂಸದ
ನಂತರ ಸ್ಥಳಕ್ಕೆ ಗಜೇಂದ್ರಗಡ ಕ್ಷೇತ್ರ ಶಿಕ್ಷಣಾಧಿಕಾರಿ ಆರ್‌ಎನ್ ಹುರಳಿ ಭೇಟಿ ನೀಡಿ, ಮಕ್ಕಳು ಹಾಗೂ ಪಾಲಕರ ಮನವೊಲಿಸಲು ಮುಂದಾಗಿದ್ದಾರೆ. ಇಂದು ಮುಖ್ಯ ಶಿಕ್ಷಕಿ ರಜೆ ಇದ್ದು, ಆದಷ್ಟು ಬೇಗ ಪರಿಶೀಲನೆ ಮಾಡುತ್ತೇವೆ. ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸುವುದಾಗಿ ಭರವಸೆ ನೀಡಿದ್ದಾರೆ. ಇದನ್ನೂ ಓದಿ: ಹೆಬ್ಬಾಳ್ಕರ್‌ಗೆ ಠಕ್ಕರ್ ನೀಡಲು ಸತೀಶ್ ಜಾರಕಿಹೊಳಿ ಪ್ಲ್ಯಾನ್
ಬೆಂಗಳೂರು: ಇಸ್ರೇಲ್ ಹಮಾಸ್ (Israel Hamas) ಯುದ್ಧದಲ್ಲಿ ಪ್ಯಾಲೆಸ್ತೀನ್ (Palestine) ಪರವಾಗಿ ಪ್ರತಿಭಟನೆ ನಡೆಸಿದ ಬಹುತ್ವ ಕರ್ನಾಟಕ (Bahutva Karnataka) ಸದಸ್ಯರ ಮೇಲೆ ಬೆಂಗಳೂರು ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.
ಚೆನ್ನೈ: ಅಸಮರ್ಪಕ ನೀರು ಪೂರೈಕೆಯಿಂದ ಬೆಳೆ ಹಾನಿಯನ್ನು ವಿರೋಧಿಸಿ ತಮಿಳುನಾಡಿನ (Tamil Nadu) ರೈತರು (Farmers) ಬುಧವಾರ ಎಂಟು ಜಿಲ್ಲೆಗಳಲ್ಲಿ ಬಂದ್‌ಗೆ (Bandh) ಕರೆ ಕೊಟ್ಟಿದ್ದಾರೆ.
ತಮ್ಮ ಪ್ರತಿಭಟನೆಯ (Protest) ಮೂಲಕ ತಮಿಳುನಾಡಿಗೆ ಸಾಕಷ್ಟು ಪ್ರಮಾಣದ ಕಾವೇರಿ ನೀರು (Cauvery Water) ಬಿಡುವಂತೆ ರೈತರು ಒತ್ತಾಯಿಸಿದ್ದಾರೆ. ಅಲ್ಲದೇ ರೈತರ ಪ್ರತಿಭಟನೆಗೆ ಪ್ರಚೋದನೆ ನೀಡಿದ್ದಾರೆ ಎಂದು ಆರೋಪಿಸಿ ಕರ್ನಾಟಕ ಬಿಜೆಪಿ ವಿರುದ್ಧವೂ ಪ್ರತಿಭಟನೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ನಾಂದೆಡ್ ಆಸ್ಪತ್ರೆಯಲ್ಲಿ 8 ದಿನಗಳಲ್ಲಿ 108 ಮಂದಿ ದುರ್ಮರಣ!
Cauvery water sharing row: After shutdown call across 8 TN districts, traders down shutters in Nagapattinam
ಕರ್ನಾಟಕ ಸರ್ಕಾರ ನೀರಾವರಿಗೆ ಸಮರ್ಪಕ ನೀರು ಬಿಡದಿರುವುದನ್ನು ವಿರೋಧಿಸಿ ಕಾವೇರಿ ಡೆಲ್ಟಾ ರಕ್ಷಣಾ ಆಂದೋಲನ ಬುಧವಾರ ತಮಿಳುನಾಡಿನ ತಿರುವಾರೂರು ಬಂದ್‌ಗೆ ಕರೆ ನೀಡಿದೆ. ಬಂದ್‌ಗೆ ರಾಜ್ಯದ ಹಲವು ರೈತ ಸಂಘಗಳು ಬೆಂಬಲ ವ್ಯಕ್ತಪಡಿಸಿವೆ. ನಾಗಪಟ್ಟಣಂನಲ್ಲಿಯೂ ರೈತ ಸಂಘಟನೆಗಳು ಪ್ರತಿಭಟನೆ ನಡೆಸಲಿವೆ. ಇದನ್ನೂ ಓದಿ: ಜಾತಿ, ಲೈಂಗಿಕ ಕಿರುಕುಳಕ್ಕೆ ಒಳಗಾಗಿದ್ದೇನೆ: ಮಂತ್ರಿ ಸ್ಥಾನಕ್ಕೆ ದಲಿತ ನಾಯಕಿ ರಾಜೀನಾಮೆ
ಕಾವೇರಿ ನೀರು ನಿರ್ವಹಣಾ ಸಮಿತಿ ಅ.15ರವರೆಗೆ ಪ್ರತಿನಿತ್ಯ 3,000 ಕ್ಯೂಸೆಕ್ ನೀರು ತಮಿಳುನಾಡಿಗೆ ಬಿಡುವಂತೆ ಆದೇಶ ನೀಡಿತ್ತು. ಇದಾಗಿಯೂ ಕರ್ನಾಟಕದಲ್ಲಿ ರೈತರು ಕಾವೇರಿ ನೀರು ಹರಿಸದಂತೆ ಪ್ರತಿಭಟನೆಗಳನ್ನು ನಡೆಸುತ್ತಲೇ ಇದ್ದಾರೆ. ಇದಕ್ಕೂ ಮುನ್ನ ಕಾವೇರಿ ರೈತ ಸಂರಕ್ಷಣಾ ಸಂಘದ ಕಾರ್ಯಕರ್ತರು ಅಕ್ಟೋಬರ್ 2 ರಂದು ನಾಗಪಟ್ಟಣದ ಕಿಲ್ವೇಲೂರು ರೈಲು ನಿಲ್ದಾಣದ ಬಳಿ ರೈಲು ರೋಕೋ ಪ್ರತಿಭಟನೆ ನಡೆಸಲು ಯತ್ನಿಸಿದ್ದರು ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ನಾಳೆ CWRC ಸಭೆ – ಈ ಬಾರಿ ತಮಿಳುನಾಡು ಬೇಡಿಕೆಯಿಟ್ಟ ನೀರಿನ ಪ್ರಮಾಣ ಎಷ್ಟು ಗೊತ್ತಾ?
ಬೆಂಗಳೂರು: ಶಾಸಕ ಮುನಿರತ್ನ (Muniratna) ಅವರ ಪ್ರತಿಭಟನೆಗೆ ಮಾಜಿ ಸಿಎಂ ಯಡಿಯೂರಪ್ಪ (BS Yediyurappa) ಬೆಂಬಲ ಸೂಚಿಸಿದ್ದಾರೆ. ಅಲ್ಲದೆ ಮುನಿರತ್ನ ಅವರ ಮನವೊಲಿಸಿ ಉಪವಾಸ ಸತ್ಯಾಗ್ರಹ ವಾಪಸ್ ಪಡೆಯುವಂತೆ ಮನವಿ ಮಾಡಿದ್ದಾರೆ. ಈ ಹಿನ್ನೆಲೆ ಸದ್ಯ ಶಾಸಕರು ತಮ್ಮ ಉಪವಾಸ ಧರಣಿಯನ್ನು ಹಿಂಪಡೆದಿದ್ದಾರೆ.
ಬಿಜೆಪಿ ಸರ್ಕಾರ ಇದ್ದಾಗ ಕೊಟ್ಟ ಅನುದಾನ ರದ್ದುಪಡಿಸಿ ಸೇಡಿನ ರಾಜಕೀಯ ಮಾಡಿದ್ದಾರೆ. ನಾನು ಸಿಎಂ ಜೊತೆ ಮಾತನಾಡುತ್ತೇನೆ. ಸಿಎಂ ಜೊತೆ ಮಾತನಾಡಿ ಇದನ್ನು ಸರಿ ಮಾಡುತ್ತೇನೆ. ಇದು ಮೇಲ್ನೋಟಕ್ಕೆ ದ್ವೇಷದ ರಾಜಕೀಯ ಮಾಡುತ್ತಿದ್ದಾರೆ. ಎಲ್ಲರಿಗೂ ಕೊಟ್ಟಂತೆ ಅನುದಾನ ಇವರಿಗೂ ಕೊಡಬೇಕು ನಾನು ಸಿಎಂ ಜೊತೆ ಮಾತನಾಡುತ್ತೇನೆ ಎಂದು ಬಿಎಸ್ ಯಡಿಯೂರಪ್ಪ ಭರವಸೆ ನೀಡಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್‍ಗೆ ಮತ ಹಾಕದಿದ್ರೆ ಅಭಿವೃದ್ಧಿ ಮಾಡಲ್ಲ- ಬಾಲಕೃಷ್ಣ ಪರೋಕ್ಷ ಹೇಳಿಕೆಗೆ ಭಾರೀ ಆಕ್ರೋಶ
ಬಿಎಸ್‌ವೈ ಭರವಸೆ ಹಿನ್ನೆಲೆ ಶಾಸಕರು ಧರಣಿ ಕೈಬಿಟ್ಟಿದ್ದಾರೆ. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಮುನಿರತ್ನ, ಫಲಿತಾಂಶ ಬಂದಾಗಿನಿಂದ ನನ್ನ ಕ್ಷೇತ್ರದಲ್ಲಿ ಒಬ್ಬ ಶಾಸಕನಾಗಿ ಕೆಲಸ ಮಾಡೋದು ಕಷ್ಟ ಆಗುತ್ತಿದೆ. ಪೊಲೀಸ್ ದೌರ್ಜನ್ಯ, ಅಧಿಕಾರಿಗಳ ಅಮಾನತು ಮಾಡುತ್ತಿದ್ದಾರೆ ಎಂದು ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ದೇವರಮನೆ ಪ್ರವಾಸ ಮುಗಿಸಿ ವಾಪಸ್ ಬರುತ್ತಿದ್ದಾಗ ಯುವಕ ಕಣ್ಮರೆ
126 ಕೋಟಿ ರೂ. ಅನುದಾನ (Grant) ವಾಪಸ್ ಖಂಡಿಸಿ ಶಾಸಕ ಮುನಿರತ್ನ ಹಾಗೂ ಅವರ ಬೆಂಬಲಿಗರು ಉಪವಾಸ ಧರಣಿ (Protest) ನಡೆಸಿದ್ದರು. ಈ ಹಿನ್ನೆಲೆ ಮುನಿರತ್ನ ಅವರ ಪ್ರತಿಭಟನೆಗೆ ಅಡ್ಡಿಪಡಿಸಲು ಪೊಲೀಸರು ಪ್ಲಾನ್ ಮಾಡಿದ್ದು, ಹೆಚ್ಚುವರಿ ಪ್ರತಿಭಟನಾಕಾರರಿಗೆ ನಿರ್ಬಂಧ ಹಾಕಿದ್ದಾರೆ. ಇದನ್ನೂ ಓದಿ: ಹೈಪರ್ ಟೆನ್ಷನ್, ಮೂಡ್ ಸ್ವಿಂಗ್ ಖಾಯಿಲೆಯಿಂದ ಬಳಲುತ್ತಿರೋ ಪತ್ನಿಯಿಂದ ಪತಿಗೆ ಕಿರುಕುಳ
ವಿಧಾನಸೌಧದ (Vidhana Soudha) ಗಾಂಧಿ ಪ್ರತಿಮೆಯ ಬಳಿ ಶಾಸಕ ಮುನಿರತ್ನ ಹಾಗೂ ಅವರ ಬೆಂಬಲಿಗರು ಡಿಕೆ ಶಿವಕುಮಾರ್ (DK Shivakumar) ಮತ್ತು ಡಿಕೆ ಸುರೇಶ್ (DK Suresh) ವಿರುದ್ಧ ಬಿತ್ತಿಪತ್ರ ಹಿಡಿದು ಪ್ರತಿಭಟನೆ ಮಾಡುತ್ತಿದ್ದ ಸಂದರ್ಭ ಹಿರಿಯ ಪೊಲೀಸ್ ಅಧಿಕಾರಿಗಳು ಪ್ರತಿಭಟನೆ ನಿಲ್ಲಿಸುವಂತೆ ಮುನಿರತ್ನ ಅವರ ಬಳಿ ಮನವಿ ಮಾಡಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಶಾಸಕ, ಇದು ಶಾಂತಿಯುತ ಹಾಗೂ ಯಾರಿಗೂ ತೊಂದರೆ ಮಾಡದ ಪ್ರತಿಭಟನೆ. ನನ್ನ ಕ್ಷೇತ್ರಕ್ಕೆ ಅನ್ಯಾಯ ಆಗಿದೆ ಎಂದಿದ್ದಾರೆ. ಇದನ್ನೂ ಓದಿ: ಆರ್.ಆರ್ ನಗರದ ಅನುದಾನಕ್ಕೆ ಕೊಕ್ಕೆ- ಮುನಿರತ್ನ ಉಪವಾಸ ಸತ್ಯಾಗ್ರಹ
ಈ ಸಂದರ್ಭ ಪೊಲೀಸರು ಕಾರ್ಯಕರ್ತರನ್ನು ಬಲವಂತವಾಗಿ ವಶಕ್ಕೆ ಪಡೆದಿದ್ದು, ಸ್ಥಳದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿದೆ. ಅನ್ಯಾಯ, ಧಿಕ್ಕಾರ ಎಂದು ಘೋಷಣೆ ಕೂಗುತ್ತಿದ್ದ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಶಾಸಕರಿಗೆ ಪ್ರತಿಭಟನೆಗೆ ಅವಕಾಶ ಇದೆ. ಬೇರೆಯವರಿಗೆ ಇಲ್ಲ ಎಂದ ಪೊಲೀಸರು ಶಾಸಕರನ್ನು ಬಿಟ್ಟು ಉಳಿದವರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಇದರಿಂದ ಶಾಸಕ ಮುನಿರತ್ನ ಏಕಾಂಗಿಯಾಗಿ ಪ್ರತಿಭಟನೆ ಮುಂದುವರೆಸಿದ್ದರು. ಇದನ್ನೂ ಓದಿ: ಚೈತ್ರಾ & ಗ್ಯಾಂಗ್‍ನಿಂದ ಟಿಕೆಟ್ ವಂಚನೆ ಪ್ರಕರಣ- ಗೋವಿಂದ ಬಾಬು ಪೂಜಾರಿ ಹೊಸ ಹೈಡ್ರಾಮಾ
ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಸುಮಾರು 25 ಕ್ಕೂ ಹೆಚ್ಚು ಪ್ರತಿಭಟನಾ ನಿರತ ಮುನಿರತ್ನ ಬೆಂಬಲಿಗರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮುನಿರತ್ನ ಬೆಂಬಲಿಗರಿಗೆ ಪ್ರತಿಭಟನೆಗೆ ಅನುಮತಿ ಇಲ್ಲದ ಕಾರಣ ವಶಕ್ಕೆ ತೆಗೆದುಕೊಂಡಿದ್ದು, ಶಾಸಕ ಮುನಿರತ್ನ ನೀರು ಸಹ ಕುಡಿಯದೇ ಏಕಾಂಗಿಯಾಗಿ ಉಪವಾಸ ಧರಣಿ ಮುಂದುವರಿಸಿದ್ದರು. ಇದೀಗ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಭರವಸೆಯ ಮೇರೆಗೆ ಪ್ರತಿಭಟನೆಯನ್ನು ಹಿಂಪಡೆಯಲಾಗಿದೆ. ಇದನ್ನೂ ಓದಿ: ಸರ್ಕಾರದ ವಿರುದ್ಧ ಸುಧಾಕರ್ ಪ್ರತಿಭಟನೆ- ಬೊಮ್ಮಾಯಿ ಸಾಥ್