ಬೆಂಗಳೂರು: ಕಾವೇರಿ (Cauvery) ನೀರು ತಮಿಳುನಾಡಿಗೆ (Tamil Nadu) ಬಿಡುತ್ತಿರುವ ವಿಚಾರವಾಗಿ ಶುಕ್ರವಾರ ಕರ್ನಾಟಕ ಬಂದ್ (Karnataka Bandh) ಡೆಸಲಾಗುತ್ತಿದೆ. ಈ ಸಂದರ್ಭದಲ್ಲಿ ನಗರದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Kempegowda International Airport) ಪ್ರತಿಭಟನೆಗೆ ಯತ್ನಿಸಿದ ಐವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಪ್ರತಿಭಟನಾಕಾರರು 09:50ರ ವೇಳೆಗೆ ಶಿವಮೊಗ್ಗಕ್ಕೆ ಹೊರಡಲಿದ್ದ ಇಂಡಿಗೋ 7731 ವಿಮಾನದ ಟಿಕೆಟ್ ಬುಕ್ ಮಾಡಿದ್ದರು. ಏರ್‌ಪೋರ್ಟ್ ಒಳಗೆ ಪ್ರವೇಶಿಸುತ್ತಿದ್ದ ವೇಳೆ ಅವರನ್ನು ಪೊಲೀಸರು ವಶಕ್ಕೆ ಪಡೆದು ತನಿಖೆ ನಡೆಸಿದ್ದಾರೆ. ಇದನ್ನೂ ಓದಿ: Karnataka Bandh: ಫಿಲ್ಮ್ ಚೇಂಬರ್ ಮುಂದೆ ಕಲಾವಿದರ ಪ್ರತಿಭಟನೆಗೆ ಸಿದ್ಧತೆ
ಬೆಂಗಳೂರು: ಬೆಂಗಳೂರು ಬಂದ್‌ಗೆ (Bengaluru Bandh) ಕರೆ ನೀಡಿರುವ ರೈತ ಮುಖಂಡ ಕುರುಬೂರು ಶಾಂತಕುಮಾರ್ (Kuruburu Shanthakumar) ಅವರನ್ನು ಮೈಸೂರು ಬ್ಯಾಂಕ್ ಸರ್ಕಲ್ ಬಳಿ ಪೊಲೀಸರು ವಶಕ್ಕೆ (Custody) ಪಡೆದಿದ್ದಾರೆ.
ಕಾವೇರಿಗಾಗಿ ಇಂದು ಬೆಂಗಳೂರು ಬಂದ್‌ಗೆ ಕರೆ ನೀಡಲಾಗಿದ್ದು, ಬೆಂಗಳೂರು ಬಂದ್ ಹಿನ್ನೆಲೆ ಬೆಳ್ಳಂಬೆಳಗ್ಗೆ ವಿವಿಧ ಸಂಘಟನೆಗಳಿಂದ ಪ್ರತಿಭಟನೆಗಳು ಆರಂಭಗೊಂಡಿದೆ. ಈ ವೇಳೆ ಕುರುಬೂರು ಶಾಂತಕುಮಾರ್ ಹಾಗೂ ಇತರೆ ಕೆಲವರನ್ನು ಮೈಸೂರು ಬ್ಯಾಂಕ್ ಸರ್ಕಲ್ ಬಳಿ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಪ್ರತಿಭಟನಾ ಮೆರವಣಿಗೆಗೂ ಮುನ್ನವೇ ಶಾಂತಕುಮಾರ್ ಹಾಗೂ ಇತರರನ್ನು ಖಾಕಿ ಪಡೆ ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: ಬೆಂಗಳೂರು ಬಂದ್ – ವಿಮಾನ ನಿಲ್ದಾಣದಲ್ಲಿ ಮುಂಜಾನೆಯಿಂದಲೂ ಸಹಜ ಸ್ಥಿತಿ
ಈ ಸಂದರ್ಭ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಶಾಂತಕುಮಾರ್, ಪೊಲೀಸರು ಗೂಂಡಾಗಿರಿ ಮೂಲಕ ಚಳುವಳಿಯನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿದ್ದಾರೆ. ಬೆಂಗಳೂರಿನ ಜನತೆ ಇದನ್ನು ಅರ್ಥ ಮಾಡಿಕೊಂಡು ಪ್ರತಿಯೊಬ್ಬರೂ ಬೀದಿಗಿಳಿಯಬೇಕು. ಸರ್ಕಾರಕ್ಕೆ ಸರಿಯಾದ ಪಾಠವನ್ನು ಕಲಿಸಬೇಕು. ಕರ್ನಾಟಕದ ರೈತರು ನಮಗೆ ಬೆಂಬಲ ನೀಡಿ ರಸ್ತೆಗಿಳಿಯಬೇಕು ಎಂದು ಮನವಿ ಮಾಡಿಕೊಂಡರು. ಇದನ್ನೂ ಓದಿ: ಮಧ್ಯಪ್ರದೇಶದಲ್ಲಿ ಮೂವರು ಕೇಂದ್ರ ಸಚಿವರಿಗೆ ಬಿಜೆಪಿ ಟಿಕೆಟ್
ರಾಮನಗರ: ರೇಷ್ಮೆನಗರಿ ರಾಮನಗರದಲ್ಲೂ (Ramanagara) ಕಾವೇರಿ ಕಿಚ್ಚು ಹೆಚ್ಚಾಗಿದೆ. ಸೆ.26ರಂದು ಬೆಂಗಳೂರು ಬಂದ್‌ಗೆ (Bengaluru Bandh) ಕರೆ ನೀಡಿರುವ ಹಿನ್ನೆಲೆ ರಾಮನಗರ ಬಂದ್‌ಗೂ ಕರೆ ನೀಡಲಾಗಿದೆ.
ರಾಮನಗರದ ರೈತ ಹಾಗೂ ಕನ್ನಡಪರ ಸಂಘಟನೆಗಳಿಂದ (Pro Kannada Organizations) ಬಂದ್‌ಗೆ ಕರೆ ನೀಡಲಾಗಿದ್ದು, ಇಂದು ರಾಮನಗರದ ರೈತ ಭವನದಲ್ಲಿ ಪೂರ್ವಭಾವಿ ಸಭೆ ನಡೆಸಲಾಗಿದೆ. ರಾಮನಗರ, ಚನ್ನಪಟ್ಟಣ, ಬಿಡದಿ ಪಟ್ಟಣವನ್ನು ಸಂಪೂರ್ಣ ಸ್ತಬ್ಧ ಮಾಡಲು ವರ್ತಕರ ಸಂಘ, ಹೋಟೆಲ್ ಮಾಲೀಕರ ಸಂಘ, ವಕೀಲರ ಸಂಘ, ಆಟೋ ಚಾಲಕರ ಸಂಘ ಸೇರಿ ಹಲವು ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ. ಇದನ್ನೂ ಓದಿ: ಬೆಂಗಳೂರು ಬಂದ್‌ನಿಂದ ಸಮಸ್ಯೆ ಪರಿಹಾರ ಆಗಲ್ಲ, ಬಂದ್ ಕೈಬಿಡಿ: ಪರಮೇಶ್ವರ್ ಮನವಿ
ಸೆ.26 ಬೆಳಗ್ಗೆ 6ರಿಂದ ಸಂಜೆ 6ರವರೆಗೆ ಮೆಡಿಕಲ್, ಆಸ್ಪತ್ರೆ, ಹಾಲಿನ ಅಂಗಡಿ, ರೇಷ್ಮೆ ಮಾರುಕಟ್ಟೆ ಹೊರತುಪಡಿಸಿ ಉಳಿದೆಲ್ಲಾ ಸೇವೆ ಸ್ಥಗಿತ ಮಾಡಲು ನಿರ್ಧರಿಸಲಾಗಿದೆ. ಅಂದು ಬೆಳಗ್ಗೆ 10ಕ್ಕೆ ಎಪಿಎಂಸಿ ವೃತ್ತದಲ್ಲಿ ಮೌನ ಪ್ರತಿಭಟನೆ ನಡೆಸಿ ಹಳೇ ಬೆಂ-ಮೈ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲು ವಿವಿಧ ಸಂಘಟನೆಗಳು ಸಿದ್ಧತೆ ನಡೆಸಿವೆ. ಇದನ್ನೂ ಓದಿ: ಬಿಎಸ್‌ವೈ ಭೇಟಿ ಮಾಡಿದ ನಿಖಿಲ್ ಕುಮಾರಸ್ವಾಮಿ
ಬೆಂಗಳೂರು: ಕಾವೇರಿ (Kaveri) ವಿಚಾರದಲ್ಲಿ ರಾಜ್ಯ ಸರ್ಕಾರ ಉಡಾಫೆಯಾಗಿ ನಡೆದುಕೊಳ್ಳುತ್ತಿದೆ. ಇವರು ಹೀಗೆ ನಿರ್ಲಕ್ಷ್ಯ ಮಾಡಿದರೆ ಸ್ವಾಮೀಜಿಗಳು, ರೈತರು, ಬೆಂಗಳೂರಿನ ನಾಗರಿಕರು ದಂಗೆ ಏಳುತ್ತಾರೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿದ್ದಾರೆ.
ಕಾವೇರಿ ವಿಚಾರದಲ್ಲಿ ಬಿಜೆಪಿಯ (BJP) ಮುಂದಿನ ಹೋರಾಟದ ಕುರಿತು ಪಕ್ಷದ ಕಚೇರಿಯಲ್ಲಿ ತಮ್ಮ ನೇತೃತ್ವದಲ್ಲಿ ಕಾವೇರಿ ಜಲಾನಯನ ಪ್ರದೇಶದ ಜಿಲ್ಲೆಗಳ ಪಕ್ಷದ ಪದಾಧಿಕಾರಿಗಳ ಸಭೆ ನಡೆಸಿ ನಂತರ ಮಾಧ್ಯಮಗಳೊಂದಿಗೆ ಅವರು ಮಾತನಾಡಿದರು. ಕಾವೇರಿ ವಿಚಾರದಲ್ಲಿ ಈ ಸರ್ಕಾರ ತೀವ್ರವಾದ ಗಂಡಾಂತರ ತಂದಿದೆ. ಮೊದಲಿನಿಂದಲೂ ಎಡವಟ್ಟು ಮಾಡಿಕೊಂಡು ಬಂದಿದೆ. ಸುಪ್ರೀಂ ಕೋರ್ಟ್‌ನಲ್ಲಿ (Supreme Court) ಸರಿಯಾಗಿ ವಾದ ಮಾಡದೇ ಮತ್ತೆ 7.5 ಟಿಎಂಸಿ ನೀರು ಬಿಡುವ ಪರಿಸ್ಥಿತಿಗೆ ತಂದಿದೆ. ಇಷ್ಟೆಲ್ಲಾ ಆದರೂ ರಾಜ್ಯದ ಜನರಿಗೆ ಸರ್ಕಾರ ಮುಂದೇನು ಮಾಡುತ್ತದೆ ಎಂದು ಹೇಳಿಲ್ಲ. ಬಿಜೆಪಿ ಇದನ್ನು ಗಂಭೀರವಾಗಿ ಪರಿಗಣಿಸಿದೆ. ಕಾವೇರಿ ಜಲಾನಯನ ಪ್ರದೇಶದ ಜಿಲ್ಲೆಗಳಲ್ಲಿ ಪ್ರತಿಭಟನೆ ಮಾಡುತ್ತೇವೆ ಎಂದರು. ಇದನ್ನೂ ಓದಿ: ಕಾವೇರಿ ವಿಷಯ ಉಲ್ಬಣವಾಗಲು ಡಿಕೆಶಿ ಕಾರಣ, ತಕ್ಷಣ ರಾಜೀನಾಮೆ ನೀಡಲಿ: ಈಶ್ವರಪ್ಪ ಆಗ್ರಹ
ರಾಜ್ಯ ಸರ್ಕಾರ ಆರಂಭದಿಂದಲೂ ಗ್ಯಾರಂಟಿ ಹೆಸರು ಹೇಳಿ ಈಗ ಕಂಡೀಷನ್ ಹಾಕಿ ಅರ್ಧಂಬರ್ಧ ಜಾರಿ ಮಾಡುತ್ತದೆ. ಬೆಂಗಳೂರು (Bengaluru) ಅಂತರಾಷ್ಟ್ರೀಯ ನಗರ. ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಮಾತೆತ್ತಿದರೆ ಬ್ರ್ಯಾಂಡ್ ಬೆಂಗಳೂರು ಎಂದು ಹೇಳುತ್ತಾರೆ. ಆದರೆ, ಬೆಂಗಳೂರಿನ ಕುಡಿಯುವ ನೀರಿನ ಬಗ್ಗೆ ಮಾತನಾಡುವುದಿಲ್ಲ. ನಮಗೆ ಬೇಕಿರುವುದು ನೀರಿನ ಗ್ಯಾರಂಟಿ. ಬೆಂಗಳೂರಿಗೆ ಪ್ರತ್ಯೇಕವಾಗಿ 4.5 ಟಿಎಂಸಿ ನೀರು ಕೊಡಲು ಟ್ರಿಬ್ಯುನಲ್ ಹೇಳಿದೆ. ಈ ಬಗ್ಗೆ ರಾಜ್ಯ ಸರ್ಕಾರ ಎಲ್ಲಿಯೂ ಪ್ರಸ್ತಾಪ ಮಾಡುತ್ತಿಲ್ಲ ಎಂದು ಕಿಡಿಕಾರಿದರು. ಇದನ್ನೂ ಓದಿ: ಕಾವೇರಿ ಸಮಸ್ಯೆ ಪರಿಹಾರಕ್ಕೆ ಕೂಡಲೇ ಸರ್ಕಾರ ವಿಶೇಷ ಅಧಿವೇಶನ ಕರೆಯಬೇಕು: ಹೆಚ್‌ಡಿ ರೇವಣ್ಣ
ತಮಿಳುನಾಡು (Tamil Nadu) ಹೆಚ್ಚುವರಿ ನೀರು ಬಳಕೆ ಮಾಡಿ ಅಕ್ರಮವಾಗಿ ಬೆಳೆ ಬೆಳೆದಿದ್ದು, ಅದರ ಬಗ್ಗೆ ರಾಜ್ಯ ಸರ್ಕಾರ ಮಾತನಾಡಿಲ್ಲ. ನಮಗೆ ಮುಂಗಾರು ಮುಕ್ತಾಯವಾಗಿದೆ. ತಮಿಳುನಾಡಿಗೆ ಮುಂದಿನ ದಿನಗಳಲ್ಲಿ ಮಳೆ ಬರಲಿದೆ. ಈ ಬಗ್ಗೆ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಗಮನಕ್ಕೆ ತರಬೇಕು. ಈ ವಿಷಯ ಹೇಳಿದರೆ ನಾವು ರಾಜಕಾರಣ ಮಾಡುತ್ತೇವೆ ಎನ್ನುತ್ತಾರೆ. ಇದರ ಮೇಲೆ ತಮ್ಮ ವೈಫಲ್ಯ ಮುಚ್ಚಿಕೊಳ್ಳಲು ರಾಜಕಾರಣ ಮಾಡುತ್ತಾರೆ. ತಮಿಳುನಾಡು ಸಿಎಂ ಜೊತೆ ಮಾತನಾಡಿ ಅಂದರೆ ಮಾತನಾಡುವುದಿಲ್ಲ. ಅದರ ಬದಲು ಕೇಂದ್ರದ ಕಡೆ ಬೊಟ್ಟು ಮಾಡುತ್ತಾರೆ. ಅದರಲ್ಲಿ ಸಿದ್ದರಾಮಯ್ಯ ಪರಿಣಿತರು ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಮುಲ್ಲಾ, ಭಯೋತ್ಪಾದಕ – ಲೋಕಸಭೆಯಲ್ಲಿ ಡ್ಯಾನಿಶ್ ಅಲಿಗೆ ಬಿಜೆಪಿ ಸಂಸದನಿಂದ ನಿಂದನೆ
ಸರ್ಕಾರದ ವಿರುದ್ಧ ಪ್ರತಿಭಟನೆ:
ಬರ ಬಂದರೆ ಕೇಂದ್ರದ ಕಡೆ ತೋರಿಸುತ್ತಾರೆ. ರಾಜ್ಯ ಸರ್ಕಾರ ಪರಿಹಾರ ಕೊಡಬಾರದು ಎಂದು ಏನೂ ನಿಯಮ ಇಲ್ಲ. ನಾವು ಪ್ರವಾಹ ಬಂದಾಗ ಕೇಂದ್ರದ ಎರಡು ಪಟ್ಟು ಪರಿಹಾರ ಕೊಟ್ಟಿದ್ದೇವೆ. ಜನ ನಿಮಗೆ ಅಧಿಕಾರ ಕೊಟ್ಟಿದ್ದಾರೆ. ಆದರೆ ನೀವು ಜನರಿಗೆ ದ್ರೋಹ ಮಾಡಿದ್ದೀರಿ. ಸರ್ಕಾರದ ವೈಫಲ್ಯಗಳನ್ನು ಖಂಡಿಸಿ ಬೆಂಗಳೂರಿನ ಮೈಸೂರು ಬ್ಯಾಂಕ್ ಸರ್ಕಲ್ ಬಳಿ ಶನಿವಾರ ಪ್ರತಿಭಟನೆ (Protest) ಮಾಡಲಾಗುವುದು. ಮುಂದಿನ ದಿನಗಳಲ್ಲಿ 28 ಲೋಕಸಭೆ ಕ್ಷೇತ್ರಗಳಲ್ಲಿ ಪ್ರತಿಭಟನೆ ಮಾಡಲಾಗುವುದು ಎಂದು ಹೇಳಿದರು. ಇದನ್ನೂ ಓದಿ: ಬಂಗಾರಪ್ಪ ಸಿಎಂ ಆಗಿದ್ದಾಗ ಚಿಟಿಕೆ ಹೊಡೆಯುವುದರಲ್ಲಿ ಕಾವೇರಿ ಸಮಸ್ಯೆಗೆ ಉತ್ತರ ಕೊಟ್ಟಿದ್ದರು: ಮಧು ಬಂಗಾರಪ್ಪ
ಕಾವೇರಿ ನೆಲ-ಜಲ ವಿಚಾರ ಬಂದಾಗ ನಾವು ಒಗ್ಗಟ್ಟು ಪ್ರದರ್ಶನ ಮಾಡಬೇಕು. ಆ ದೃಷ್ಟಿಯಿಂದ ನಾವು ಸಹಕಾರ ಕೊಡುತ್ತೇವೆ. ಸರ್ವಪಕ್ಷದ ಸಭೆಯಲ್ಲಿ ನೀರು ಬಿಡುವುದಿಲ್ಲ ಎಂದು ತೆಗೆದುಕೊಂಡ ತೀರ್ಮಾನ ಪಾಲನೆ ಮಾಡದಿದ್ದರೆ ನಾವು ಮಾತನಾಡುತ್ತೇವೆ. ಸುಪ್ರೀಂ ಕೋರ್ಟ್‌ನಲ್ಲಿ ಇವರು ಮಧ್ಯಂತರ ಅರ್ಜಿ ಹಾಕಲಿಲ್ಲ ಎಂದರು.
ರಾಜ್ಯ ಸರ್ಕಾರ ಸುಗ್ರೀವಾಜ್ಞೆ ತರಬೇಕಾ ಎಂದು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಈ ಹಿಂದೆ ರಾಜ್ಯ ಸರ್ಕಾರ ಸುಗ್ರೀವಾಜ್ಞೆ ತಂದಾಗ ಸುಪ್ರೀಂ ಕೋರ್ಟ್ ಅದನ್ನು ತಳ್ಳಿ ಹಾಕಿದೆ. ಅದರ ಬದಲು ಈಗಲಾದರೂ ಸರ್ಕಾರ ಮೇಲ್ಮನವಿ ಸಲ್ಲಿಸಿ ಇದುವರೆಗೂ ವಿಚಾರಣೆಯಲ್ಲಿ ಚರ್ಚೆಗೆ ಬಾರದ ಬೆಂಗಳೂರಿನ ಕುಡಿಯುವ ನೀರು, ತಮಿಳುನಾಡು ಹೆಚ್ಚಿಗೆ ನೀರು ಬಳಕೆ ಮಾಡಿಕೊಂಡಿದ್ದು, ನಮ್ಮಲ್ಲಿ ಮುಂಗಾರು ಮುಕ್ತಾಯವಾಗಿದ್ದು, ತಮಿಳುನಾಡಿಗೆ ಹಿಂಗಾರು ಮಳೆ ಬರುವ ವಿಚಾರಗಳನ್ನು ಸುಪ್ರೀಂ ಕೋರ್ಟ್ ಮುಂದೆ ಹಾಕಬೇಕು. ಅದನ್ನು ಸುಪ್ರೀಂ ಕೋರ್ಟ್ ಪರಿಗಣಿಸುವ ಸಾಧ್ಯತೆ ಇದೆ ಎಂದು ಹೇಳಿದರು. ಇದನ್ನೂ ಓದಿ: ಮಹಿಳಾ ಮೀಸಲಾತಿ ಅಂಗೀಕಾರ – ಇದು ಭಾರತದ ಇತಿಹಾಸದಲ್ಲಿ ಸುವರ್ಣಾಕ್ಷರದಲ್ಲಿ ಬರೆದಿಡೋ ದಿನ: ಪ್ರಹ್ಲಾದ್ ಜೋಶಿ
ಪರಿಹಾರ ನೀಡಲಿ:
ರಾಜ್ಯ ಸರ್ಕಾರ ಕ್ಯಾಬಿನೆಟ್‌ನಲ್ಲಿ ಈಗ ಬಿಟ್ಟಿರುವ ನೀರಿನ ಬಗ್ಗೆ ಸ್ಪಷ್ಟ ನಿರ್ಣಯ ಕೈಗೊಳ್ಳಬೇಕು. ಬರ ತಾಲೂಕಿನ ಕಾರ್ಯಕ್ರಮದ ಬಗ್ಗೆ ಘೋಷಣೆ ಮಾಡಬೇಕು. ಕಾವೇರಿ ಕೊಳ್ಳದ ತಾಲೂಕುಗಳ ರೈತರಿಗೆ ಪರಿಹಾರ (Relief) ನೀಡಬೇಕು. ನಗರಗಳ ನೀರಿಗೆ ಮುಂದಿನ ಯೋಜನೆ ಏನು ಎಂದು ಕ್ಯಾಬಿನೆಟ್ ನಲ್ಲಿ ತೀರ್ಮಾನ ಮಾಡಬೇಕು ಎಂದು ಆಗ್ರಹಿಸಿದರು.
ಯಾದಗಿರಿ: ರಾಜ್ಯ ರ್ಕಾರದ ರೈತ ವಿರೋಧಿ ನೀತಿ ಹಾಗೂ ಬಿಜೆಪಿ ಮುಖಂಡರ ಮೇಲೆ ಹಾಕಿರುವ ಸುಳ್ಳು ಕೇಸ್ ರದ್ದು ಪಡಿಸಬೇಕೆಂದು ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಹುಣಸಗಿ ಪಟ್ಟಣದಲ್ಲಿ ಮಾಜಿ ಸಚಿವ ರಾಜೂಗೌಡ (Raju Gowda) ಅವರ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ರು. ಯಾದಗಿರಿ ಜಿಲ್ಲೆಯ ಹುಣಸಗಿ ಪಟ್ಟಣದ ಬಸವೇಶ್ವರ ವೃತ್ತದಿಂದ ತಹಶೀಲ್ದಾರ್ ಕಚೇರಿವರಗೆ ಮಾಜಿ ಸಚಿವ ರಾಜೂ ಗೌಡ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಮೆರವಣಿಗೆ ನಡೆಸಲಾಯಿತು.
ಹುಣಸಗಿ ತಹಶೀಲ್ದಾರ್ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಪ್ರತಿಭಟನಾ ನಿರತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವೇಳೆ ಮಾಜಿ ಸಚಿವರು ಮಾತನಾಡಿ, ಆಲಮಟ್ಟಿ ಹಾಗೂ ನಾರಾಯಣಪುರ ಜಲಾಶಯದಲ್ಲಿ ನೀರು ಇದ್ದರೂ ಸರ್ಕಾರ ಅವೈಜ್ಞಾನಿಕ ವಾರಬಂದಿ ಜಾರಿಗೆ ತಂದಿದ್ದಾರೆ. ಅವೈಜ್ಞಾನಿಕ ವಾರಬಂದಿ ಪದ್ಧತಿ ರದ್ದು ಮಾಡಿ ರೈತರ ಹಿತ ಕಾಪಾಡಬೇಕೆಂದರು. ಸುರಪುರ ಭಾಗದ ಶಾಸಕ ಹಾಗೂ ಈ ಭಾಗದ ಜನಪ್ರತಿನಿಧಿಗಳು ಈ ಬಗ್ಗೆ ನೀರು ಹರಿಸುವ ಕೆಲಸ ಮಾಡುತ್ತಿಲ್ಲ. ಶಾಸಕರು ಟೇಬಲ್ ಗುದ್ದಿ ನೀರು ಬಿಡಿಸಬೇಕೆಂದರು.
ವಿದ್ಯುತ್ ಕೊರತೆಯಿಂದ ರೈತರ ಜಮೀನಿಗೆ ನೀರು ಹರಿಸಿಕೊಳ್ಳಲು ರೈತರಿಗೆ ಸಾಧ್ಯವಾಗುತ್ತಿಲ್ಲ ಐಪಿಸೆಟ್ ಗಳಿಗೆ ಸಮರ್ಪಕವಾಗಿ ವಿದ್ಯುತ್ ಪೂರೈಕೆ ಮಾಡಿ ರೈತರ ಬೆಳೆ ಬೆಳೆಯಲು ಅನುಕೂಲ ಮಾಡಬೇಕೆಂದರು. ಬಿಜೆಪಿ ಕಾರ್ಯಕರ್ತರ ಮೇಲೆ ಸುಳ್ಳು ಕೇಸ್ ಹಾಕಲಾಗಿದ್ದು .ಈ ನಿಟ್ಟಿನಲ್ಲಿ ಪೊಲೀಸ್ ಅಧಿಕಾರಿಗಳು ತಪ್ಪು ಮಾಡಿದ್ದಾರೆ. ರಾಜಕೀಯ ದ್ವೇಷಕ್ಕೆ ಸುಳ್ಳು ಕೇಸ್ ಹಾಕಲಾಗಿದೆ.ತಪ್ಪಿತಸ್ಥ ಪಿಎಸ್ ಐ ಅವರನ್ನು ಅಮಾನತು ಮಾಡಬೇಕೆಂದು ರಾಜುಗೌಡ ಒತ್ತಾಯ ಮಾಡಿದ್ದಾರೆ. ನ್ಯಾಯಕ್ಕಾಗಿ ನಾವು ರಾಜ್ಯಪಾಲರ ಹತ್ತಿರ ಹೋಗುತ್ತೆವೆ. ಇಂದಿನ ಪ್ರತಿಭಟನೆ ಟ್ರೈಲರ್ ಇದ್ದು ಇನ್ನೂ ಮುಂದೆ ಪಿಕ್ಚರ್ ಬಾಕಿ ಇದೆ.ವಾರ ಬಂದಿ ರದ್ದು ಮಾಡದಿದ್ದರೆ ಬೃಹತ್ ಹೋರಾಟ ಮಾಡಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ವಿಧಾನಸಭೆಯೊಳಗೆ ಮಾತ್ರ ಗಲಾಟೆ, ಹೊರಗಡೆ ಎಲ್ಲರೂ ಸ್ನೇಹಿತರೇ ಆಗಿರ್ತಾರೆ: ಯು.ಟಿ. ಖಾದರ್
ಈ ವೇಳೆ ಬಿಜೆಪಿ ಮುಖಂಡ ಬಬ್ಲುಗೌಡ ಅವರು ಮಾತನಾಡಿ, ಸರಕಾರ ರೈತರಿಗೆ ಮೋಸ ಮಾಡುವ ಕೆಲಸ ಮಾಡಿದೆ.ರಾಜಕೀಯ ಲಾಭಕ್ಕಾಗಿ ರೈತರ ಜತೆ ಚಲ್ಲಾಟವಾಡಬೇಡಿ ವಾರಬಂದಿ ರದ್ದು ಮಾಡಬೇಕು. ಬಿಜೆಪಿ ಕಾರ್ಯಕರ್ತರ ಮೇಲೆ ಪೊಲೀಸ್ ಅಧಿಕಾರಿಗಳು ಅಧಿಕಾರ ದುರುಪಯೋಗ ಪಡಿಸಿಕೊಂಡು ಸುಳ್ಳು ಕೇಸ್ ಹಾಕಿದ್ದ ರದ್ದು ಮಾಡಬೇಕೆಂದು ಆಗ್ರಹಿಸಿದ್ರು.
ಪ್ರತಿಭಟನೆಯಲ್ಲಿ ಬಿಜೆಪಿ ಮುಖಂಡರಾದ ಸುರೇಶ್ ಸಜ್ಜನ್, ಎಚ್.ಸಿ.ಪಾಟೀಲ್ ಸ್ಥಾವರಮಠ, ಕೃಷ್ಣಾ ಮುದನೂರು, ರಂಗಣ್ಣಗೌಡ ದೇವಿಕೇರಿ, ವೆಂಕಟೇಶ ಸಾಹುಕಾರ, ರಾಜಾ ಹಣಮಪ್ಪ ನಾಯಕ ತಾತಾ, ವಿರೇಶ್ ಚಿಂಚೋಳಿ, ಗದ್ದೆಪ್ಪ ಪೂಜಾರಿ ಸೇರಿದಂತೆ ಅನೇಕರು ಇದ್ದರು.
ಬೆಂಗಳೂರು: ಖಾಸಗಿ ವಾಹನದವರು (Private Transport Strike) ಬಂದ್ ಮಾಡುವ ಅವಶ್ಯಕತೆ ಇರಲಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಹೇಳಿದ್ದಾರೆ.
ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಶಕ್ತಿ ಯೋಜನೆಯಿಂದ ಖಾಸಗಿ ಬಸ್ಸಿನವರಿಗೆ ಸ್ವಲ್ಪ ತೊಂದರೆಯಾಗಿದೆ. ಅದು ಎಲ್ಲರಿಗೂ ಗೊತ್ತಿರುವ ವಿಚಾರ. ಊಬರ್ ಆಟೋ (Uber Auto) ಪ್ರತಿಭಟನೆ ಬಹುಶಃ ಅದು ರಾಜಕೀಯ ಪ್ರೇರಣೆ ಎಂದು ಹೇಳಿದರು.
ನಾವು ಅವರ ಬಗ್ಗೆ ಬಹಳ ಕರುಣೆಯಿಂದ ಇದ್ದೇವೆ. ಹೆದರಿಸುವುದು, ಪ್ರಯಾಣಿಕರಿಗೆ ತೊಂದರೆ ಮಾಡುವುದರಿಂದ ಅವರಿಗೆ ಒಳ್ಳೆಯದಾಗುವುದಿಲ್ಲ. ಸರ್ಕಾರ ಅವರ ಬೇಡಿಕೆಗೆ ಸ್ಪಂದಿಸುತ್ತದೆ. ಯಾವ ರೀತಿ ಅವರಿಗೆ ಸಹಕಾರ ಮಾಡಬಹುದು ನೋಡುತ್ತದೆ ಎಂದರು. ಇದನ್ನೂ ಓದಿ: ಮುಂಜಾನೆಯೇ ಕೊಲೊಂಬೊದಲ್ಲಿ ಮಳೆ – ಏನಾಗಲಿದೆ ರಿಸರ್ವ್ ಡೇ ಭವಿಷ್ಯ?
ಶಿವಮೊಗ್ಗ: ಭದ್ರಾ ಜಲಾಶಯದಿಂದ (Bhadra Dam) ನಾಲೆಗಳಿಗೆ ನಿರಂತರವಾಗಿ ನೀರು ಹರಿಸದಂತೆ ಆಗ್ರಹಿಸಿ ರೈತರು (Farmers) ಶಿವಮೊಗ್ಗದ (Shivamogga) ಭದ್ರಾ ನೀರಾವರಿ – ಕಾಡಾ (CADA) ಕಚೇರಿ ಮುಂಭಾಗ ಭದ್ರಾವತಿ ಜಲಾಶಯದ ಅಚ್ಚುಕಟ್ಟು ಪ್ರದೇಶದ ರೈತರ ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ (Protest) ನಡೆಸಿದರು.
ಸರ್ಕಾರ ಭದ್ರಾ ಜಲಾಶಯದಿಂದ 100 ದಿನಗಳ ಕಾಲ ನೀರು ಹರಿಸುವುದಾಗಿ ತೀರ್ಮಾನ ಮಾಡಿದೆ. ಆದರೆ ಜಲಾಶಯದಲ್ಲಿ ಈಗ ಕೇವಲ 165 ಅಡಿ ನೀರು ಮಾತ್ರ ಇದೆ. ಸತತವಾಗಿ ನೀರು ಹರಿಸಿದರೆ ಪ್ರತಿದಿನ ನಾಲ್ಕು ಇಂಚು ಪ್ರಮಾಣದ ನೀರು ಖಾಲಿ ಆಗುತ್ತದೆ. 80 ದಿನ ಹರಿಸಿದರೆ 30 ಅಡಿ ನೀರು ಖಾಲಿ ಆಗಿ ಜಲಾಶಯದಲ್ಲಿ ನೀರೇ ಇಲ್ಲವಾಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ರಾಯಚೂರಿನಲ್ಲಿ ಟ್ರಕ್ ಟರ್ಮಿನಲ್ ನಿರ್ಮಾಣಕ್ಕೆ ಜಾಗ ಗುರುತಿಸಿ: ಬೋಸರಾಜು
ಬೇಸಿಗೆಗಳಲ್ಲಿ ತೋಟಗಳನ್ನು ಉಳಿಸಿಕೊಳ್ಳುವುದು ಕಷ್ಟವಾಗಲಿದ್ದು, ಭದ್ರಾ ಅಚ್ಚುಕಟ್ಟು ಆಶ್ರಯದ ಎಲ್ಲಾ ರೈತರ ಬೆಳೆಗಳ ಹಿತವನ್ನು ಕಾಪಾಡಿಕೊಳ್ಳಬೇಕಾಗಿದೆ. ಆದರೆ ಭತ್ತದ ಬೆಳೆಗೆ ನೀರು ಹರಿಸುತ್ತೇವೆ ಎಂದು ಜಲಾಶಯದ ನೀರನ್ನು ಪೋಲು ಮಾಡುತ್ತಿರುವುದು ಸರಿಯಲ್ಲ. ಭತ್ತ ಬೆಳೆಗಾರರು ಮತ್ತು ಅಡಿಕೆ ಬೆಳೆಗಾರರ ಮಧ್ಯೆ ವಿಷದ ಬೀಜ ಬಿತ್ತಿ ಹೊಡೆದಾಡುವಂತೆ ಮಾಡುವುದನ್ನು ಬಿಟ್ಟು ರೈತರ ಹಿತ ಕಾಪಾಡುವಂತೆ ಆಗ್ರಹಿಸಿದ್ದಾರೆ. ಇದನ್ನೂ ಓದಿ: ದೇಶದ ಹೆಸರು ಬದಲಾವಣೆಗಿಂತ ಜನರ ಬದುಕು ಬದಲಾವಣೆ ಮುಖ್ಯ: ಡಿಕೆಶಿ
ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಸಭೆ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ (Madhu Bangarappa) ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯ ಹೊರಭಾಗದಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದರಿಂದ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಬಳಿಕ ಕಾಡಾ ನೀರಾವರಿ ಸಲಹಾ ಸಮಿತಿ ಸಭೆ ನಡೆದು, ಹಲವು ಚರ್ಚೆಗಳ ಬಳಿಕ ಮೂರು ದಿನ ಕಾದು ನಿರ್ಣಯ ಕೈಗೊಳ್ಳಲು ನಿರ್ಧರಿಸಲಾಯಿತು. ಇದನ್ನೂ ಓದಿ: ಸೂರ್ಯ, ಚಂದ್ರ, ಭೂಮಿ ಯಾವಾಗ ಹುಟ್ಟಿದೆ ಅಂತ ಕೇಳೋಕೆ ಆಗುತ್ತಾ? – ಪರಂ ವಿರುದ್ಧ ಮುತಾಲಿಕ್ ಕಿಡಿ
ಮಳೆಯಾಗುವ ನಿರೀಕ್ಷೆಯಲ್ಲಿ ಸಮಿತಿ ಸದಸ್ಯರಿದ್ದು, ಎಡದಂಡೆಗೆ ಹರಿಸುತ್ತಿರುವ ನೀರು ನಿಲ್ಲಿಸಲು ನಿರ್ಣಯ ತೆಗೆದುಕೊಳ್ಳಲಾಯಿತು. ಬಲದಂಡೆಯ ಕೊನೆಯವರೆಗೂ ನೀರು ತಲುಪುವಂತೆ ಹರಿಸಲು ನಿರ್ಧರಿಸಲಾಯಿತಾದರೂ ನೀರಿನ ಪ್ರಮಾಣ ಕಡಿಮೆ ಮಾಡಲು ನಿರ್ಣಯಿಸಲಾಯಿತು. ಮುಂದಿನ ಮೂರು ದಿನಗಳು ಕಾದು ಮುಂದಿನ ನಿರ್ಧಾರ ಕೈಗೊಳ್ಳುವ ಜವಾಬ್ದಾರಿ ಸಚಿವ ಮಧು ಹೆಗಲಿಗೆ ಹೊರಿಸಲಾಗಿದ್ದು, ಈ ಬಗ್ಗೆ ನೀರಾವರಿ ಸಚಿವ ಡಿಕೆ ಶಿವಕುಮಾರ್ (DK Shivakumar) ಜೊತೆ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳುವುದಾಗಿ ಮಧು ಬಂಗಾರಪ್ಪ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು. ಇದನ್ನೂ ಓದಿ: ಸೆ.18-22 ವಿಶೇಷ ಸಂಸತ್ ಅಧಿವೇಶನ- ಪ್ರಮುಖ 9 ವಿಷಯಗಳ ಚರ್ಚೆಗೆ ಸೋನಿಯಾ ಗಾಂಧಿ ಆಗ್ರಹ
– ಅಮ್ಮ ನನ್ನನ್ನು ಬದುಕಿಸು ಎಂಬ ಕೂಗು ಈಗಲೂ ಕೇಳಿಸುತ್ತೆ ಎಂದ ಕುಸುಮಾವತಿ
ಮಂಗಳೂರು: ಧರ್ಮಸ್ಥಳ (Dharmasthala) ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ (Sowjanya Case) ಸಂಬಂಧಪಟ್ಟಂತೆ ನೈಜ ಆರೋಪಿಗಳ ಪತ್ತೆಗೆ ಒತ್ತಾಯಿಸಿ ಭಾನುವಾರ ಬೆಳ್ತಂಗಡಿಯಲ್ಲಿ (Beltangady) ಬೃಹತ್ ಸಮಾವೇಶ ನಡೆಸಲಾಯಿತು. ಈ ವೇಳೆ ಸೌಜನ್ಯ ತಾಯಿ ಕುಸುಮಾವತಿ ವೇದಿಕೆಯಿಂದ ಕೆಳಗಿಳಿದು ಸೆರಗೊಡ್ಡಿ ನೆರೆದವರಲ್ಲಿ ನ್ಯಾಯ ಬೇಡಿದ್ದಾರೆ.
ಈ ವೇಳೆ ಮಾತನಾಡಿದ ಅವರು, ನನ್ನ ಮಗಳಿಗೆ ನ್ಯಾಯ ಕೊಡಿಸಲು ಇಡೀ ದೇಶವೇ ಕೂಡಿ ಬಂದಿದೆ. ನನ್ನ ಮಗಳಿಗೋಸ್ಕರ ಇಷ್ಟೊಂದು ಜನ ಸೇರಿದ್ದೀರಿ. ನಮ್ಮ ಮಗುವಿಗೋಸ್ಕರ ನ್ಯಾಯ ಕೇಳಲು ಇಂದು ನಮಗೆ ಪರ್ಮಿಷನ್ ಕೊಟ್ಟಿಲ್ಲ. ಬಜರಂಗದಳದವರೊಂದಿಗೆ ಅಣ್ಣಪ್ಪನಲ್ಲಿ ನ್ಯಾಯ ಕೇಳಲು ಹೋಗಿದ್ದೆ. ನನ್ನನ್ನು ಒಳಗೆ ಹೋಗಲು ಬಿಟ್ಟಿಲ್ಲ. ನನ್ನನ್ನು ಒಂದು ಗಂಟೆ ಹೊರಗಡೆ ಕಾಯಿಸಿದ್ದಾರೆ ಎಂದು ನೋವು ತೋಡಿಕೊಂಡರು.
ಆ ಅಣ್ಣಪ್ಪ ಸ್ವಾಮಿ ಮಂಜುನಾಥ ಸ್ವಾಮಿಯನ್ನು ನಾನು ಇಲ್ಲಿ ನೋಡುತ್ತಿದ್ದೇನೆ. ಖಂಡಿತಾ ನಾನು ಗಟ್ಟಿಯಾಗಿ ಇದ್ದೇನೆ. ಇಷ್ಟು ಜನರ ಶಕ್ತಿ ನನ್ನಲ್ಲಿ ತುಂಬಿದೆ. ಅದು ಎಷ್ಟು ಬಾರಿ ನನ್ನ ಮಗಳನ್ನು ಅತ್ಯಾಚಾರ ಮಾಡಿದ್ರೋ, ನನ್ನ ಮಗಳು ಎಷ್ಟು ನೋವು ತಿಂದಳೋ, 5-6 ಜನ ಅತ್ಯಾಚಾರ ಮಾಡಿದ್ದಾರೆ. ನ್ಯಾಯ ಸಿಗುತ್ತೆ, ಅತ್ಯಾಚಾರಿಗಳು ಸಿಗುತ್ತಾರೆ ಎಂಬ ನಂಬಿಕೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಅಮ್ಮ ನನ್ನನ್ನು ಬದುಕಿಸು ಎಂಬ ಕೂಗು ನನಗೆ ಈಗಲೂ ಕೇಳಿಸುತ್ತೆ. ಅತ್ಯಾಚಾರ ಮಾಡಿ ಕಾಡಲ್ಲಿ ಬಿಸಾಡಿದ್ದಾರೆ. ಅತ್ಯಾಚಾರ ಮಾಡಿ ಬಿಟ್ಟಿದ್ರೂ ತೊಂದರೆ ಇರುತ್ತಿರಲಿಲ್ಲ. ಆದರೆ ಕೊಂದೇ ಬಿಟ್ಟರು. ಇವತ್ತು ನಿಮ್ಮ ಕಾಲ ಬುಡಕ್ಕೆ ಬಂದು ನ್ಯಾಯ ಕೇಳುತ್ತಿದ್ದೇನೆ. ಯಾವುದೇ ಹಣದ ಆಮಿಷಕ್ಕೆ ನ್ಯಾಯವನ್ನು ಬಲಿ ಕೊಡಬೇಡಿ ತಾಯಂದಿರೆ ಎಂದು ಮನವಿ ಮಾಡಿಕೊಂಡರು. ಇದನ್ನೂ ಓದಿ: ಬಿಜೆಪಿಯಲ್ಲಿ ನಿಷ್ಠೆ ಬಿಟ್ಟು ಬಕೆಟ್ ಹಿಡಿದವರಿಗೆ ಮನ್ನಣೆ: ಪ್ರದೀಪ್ ಶೆಟ್ಟರ್
ಪ್ರಜಾಪ್ರಭುತ್ವ ವೇದಿಕೆ ಹಾಗೂ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ನೇತೃತ್ವದಲ್ಲಿ ಸೌಜನ್ಯ ಪರ ನ್ಯಾಯಕ್ಕಾಗಿ ಇಂದು ಬೆಳ್ತಂಗಡಿಯಲ್ಲಿ ಬೃಹತ್ ಸಮಾವೇಶ ನಡೆದಿದೆ. ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಸ್ಥಾಪಕಾಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿ ನೇತೃತ್ವದಲ್ಲಿ ಸಮಾವೇಶ ನಡೆದಿದೆ. ಪ್ರತಿಭಟನೆಗೆ ಸಾವಿರಾರು ಸಂಖ್ಯೆಯಲ್ಲಿ ಜನರು ಸೇರಿದ್ದಾರೆ. ನ್ಯಾಯಾಲಯದ ಸುಪರ್ದಿಯಲ್ಲಿ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಪ್ರತಿಭಟನೆ ನಡೆಯುತ್ತಿದೆ. ಇದನ್ನೂ ಓದಿ: ಈಶ್ವರಪ್ಪ ವಿರುದ್ಧ ಬಿ.ಸಿ.ಪಾಟೀಲ್ ಗರಂ
ಮಂಡ್ಯ: ದಿನೇ ದಿನೇ ಕಾವೇರಿ ಕಿಚ್ಚು ಹೆಚ್ಚಾಗುತ್ತಿದ್ದು, ಮಂಡ್ಯದಲ್ಲಿ (Mandya) ಅನ್ನದಾತರು ಹಾಗೂ ರೈತ ಸಂಘಟನೆಗಳಿಂದ ನಿರಂತರ ಹೋರಾಟ ನಡೆಯುತ್ತಿದೆ. ಇಂದು ಕಾವೇರಿ ಹೋರಾಟದ ಕಿಚ್ಚನ್ನು ಹೆಚ್ಚಿಸುವ ಸಲುವಾಗಿ ಜೆಡಿಎಸ್ (JDS) ದಳಪತಿಗಳು ಅಖಾಡಕ್ಕಿಳಿಯಲಿದ್ದಾರೆ.
ತಮಿಳುನಾಡಿಗೆ (Tamil Nadu) ನೀರು ಹರಿಸುತ್ತಿರುವುದನ್ನು ಖಂಡಿಸಿ ಶನಿವಾರ ಮಂಡ್ಯದಲ್ಲಿ ದಳ ಪಡೆಯಿಂದ ಬೃಹತ್ ಪ್ರತಿಭಟನೆ (Protest) ನಡೆಯಲಿದೆ. ಮಂಡ್ಯ ಜೆಡಿಎಸ್ ನಾಯಕರು ರಾಜ್ಯ ಸರ್ಕಾರಕ್ಕೆ ಎರಡು ದಿನಗಳ ಡೆಡ್‌ಲೈನ್ ನೀಡಿದ್ದು, ಕೆಆರ್‌ಎಸ್ (KRS) ಡ್ಯಾಂನಿಂದ ತಮಿಳುನಾಡಿಗೆ ಹರಿಸುತ್ತಿದ್ದ ನೀರು ನಿಲ್ಲಿಸುವಂತೆ ಆಗ್ರಹಿಸಿದ್ದರು. ಆದರೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಸೂಚನೆಯಂತೆ ನಾಲ್ಕು ದಿನಗಳಿಂದ ನಿರಂತರವಾಗಿ ನೀರು ಬಿಡುಗಡೆ ಮಾಡುತ್ತಿದೆ. ರಾಜ್ಯ ಸರ್ಕಾರದ ನಡೆ ಹಾಗೂ ಪ್ರಾಧಿಕಾರದ ಆದೇಶ ಖಂಡಿಸಿ ಜೆಡಿಎಸ್ ಪ್ರತಿಭಟನೆ ನಡೆಸಲಿದೆ. ಇದನ್ನೂ ಓದಿ: ಸೂರ್ಯ ಶಿಕಾರಿಗೆ ಕೌಂಟ್‍ಡೌನ್- ಬೆಳಗ್ಗೆ 11:50ಕ್ಕೆ ಆದಿತ್ಯ ಎಲ್1 ಉಡಾವಣೆ
ಮಂಡ್ಯದ ಸಿಲ್ವರ್ ಜುಬಿಲಿ ಪಾರ್ಕ್‌ನಲ್ಲಿ ಪ್ರತಿಭಟನೆ ಆರಂಭವಾಗಲಿದ್ದು, ಬೆಳಗ್ಗೆ 11 ಗಂಟೆಗೆ ಜೆಡಿಎಸ್ ಕಾವೇರಿ ಹೋರಾಟ ನಡೆಸಲಿದೆ. ಸಿಲ್ವರ್ ಜುಬಿಲಿ ಪಾರ್ಕ್‌ನಿಂದ ಮಂಡ್ಯ ಡಿಸಿ ಕಚೇರಿವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಲಿದ್ದು, ಕಾವೇರಿ ಹೋರಾಟದಲ್ಲಿ ಹಾಲಿ, ಮಾಜಿ ಜೆಡಿಎಸ್ ಶಾಸಕರು, ನಾಯಕರು ಹಾಗೂ ಸಾವಿರಾರು ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ. ಮಂಡ್ಯ ನಾಯಕರು ಮಾಜಿ ಪ್ರಧಾನಿ ದೇವೇಗೌಡರನ್ನು ಕರೆತರಲು ಯತ್ನಿಸುತ್ತಿದ್ದು, ಪ್ರತಿಭಟನೆಯಲ್ಲಿ ದೇವೇಗೌಡರು (H.D.Deve Gowda) ಭಾಗವಹಿಸುವುದು ಅನುಮಾನ ಎನ್ನುವ ಮಾಹಿತಿ ಲಭಿಸಿದೆ. ಪ್ರತಿಭಟನೆಯಲ್ಲಿ ಜಿಲ್ಲೆಯ ಶಾಸಕರು, ಮಾಜಿ ಶಾಸಕರು ಹಾಗೂ ಕಾರ್ಯಕರ್ತರು ಭಾಗಿಯಾಗಲಿದ್ದಾರೆ. ಇದನ್ನೂ ಓದಿ: ಹೆಚ್‍ಡಿಕೆ ಆರೋಗ್ಯದಲ್ಲಿ ಮತ್ತಷ್ಟು ಚೇತರಿಕೆ- ಶೀಘ್ರವೇ ಡಿಸ್ಚಾರ್ಜ್
ಬಾಲಿವುಡ್ ಸ್ಟಾರ್ ನಟ ಶಾರುಖ್ ಖಾನ್ (Shah Rukh Khan) ಮನೆಗೆ ಭಾರೀ ಭದ್ರತೆ ನೀಡಲಾಗಿದೆ. ಮುಂಬೈನಲ್ಲಿರುವ (Mumbai) ಮನ್ನತ್ ನಿವಾಸಕ್ಕೆ ಮುಂಬೈ ಪೊಲೀಸರು ಹೆಚ್ಚಿನ ಭದ್ರತೆ ನೀಡಲಾಗಿದ್ದು, ಮನೆ ಮುಂದೆ ಜನರು ಜಮಾಯಿಸಬಾರದು ಎಂದು ಸೂಚನೆ ನೀಡಲಾಗಿದೆ. ಮನೆ ಮುಂದೆ ಭಾರೀ ಪ್ರತಿಭಟನೆ (Protest) ವ್ಯಕ್ತವಾಗಿದ್ದರೆ, ಶಾರುಖ್ ತಮ್ಮ ಸಿನಿಮಾದ ಪ್ರಮೋಷನ್ ಮಾಡುವಲ್ಲಿ ಬ್ಯುಸಿಯಾಗಿದ್ದಾರೆ.
ಶಾರುಖ್ ಖಾನ್ ಮನೆಗೆ ಭದ್ರತೆ ನೀಡಿದ್ದಕ್ಕೆ ಕಾರಣವೂ ಇದೆ. ಶಾರುಖ್ ಖಾನ್ ಹಲವಾರು ಜಾಹೀರಾತುಗಳಲ್ಲಿ ಕಾಣಿಸಿಕೊಂಡಿದ್ದಾರೆ. ಅದರಲ್ಲೂ ಆನ್ ಲೈನ್ ಆಟಗಳ ಜಾಹೀರಾತುಗಳನ್ನು ಒಪ್ಪಿಕೊಂಡಿದ್ದಾರೆ. ಆ ಆಟಗಳನ್ನು ಆಡಿದ ಹಲವರ ಜೀವನವೇ ನಾಶವಾಗಿದೆ. ಇಂತಹ ಜಾಹೀರಾತುಗಳನ್ನು ಒಪ್ಪಿಕೊಳ್ಳಬಾರದು ಎನ್ನುವುದು ಅನ್ ಟಚ್ ಯೂತ್ ಫೆಡರೇಷನ್ ಆಗ್ರಹ. ಇವರೇ ಶಾರುಖ್ ಖಾನ್ ಮನೆ ಮುಂದೆ ಪ್ರತಿಭಟನೆ ನಡೆಸುತ್ತಿದ್ದಾರೆ. ಇದನ್ನೂ ಓದಿ:ಟ್ರೆಂಡಿಂಗ್ ಬಗ್ಗೆಯೇ ಹಾಡು ಮಾಡಿದ ‘ಸೂತ್ರಧಾರಿ’ ಚಂದನ್ ಶೆಟ್ಟಿ
ಅನ್ ಟಚ್ ಯೂತ್ ಫೆಡರೇಷನ್ ನ ಅಧ್ಯಕ್ಷ ಕೃಷ್ಣ ಚಂದ್ರ ಅಡಾಲ್ (Krishna Chandra Adal) ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದ್ದು, ಸಾಕಷ್ಟು ಜನರು ಈ ಹೋರಾಟದಲ್ಲಿ ಭಾಗಿಯಾಗಿದ್ದಾರೆ. ಹೀಗಾಗಿಯೇ ಶಾರುಖ್ ಮನೆಗೆ ಭದ್ರತೆ ನೀಡಲಾಗಿದೆ. ಹೋರಾಟಗಾರರ ಮನವೊಲಿಸುವ ಪ್ರಯತ್ನವನ್ನೂ ಮಾಡಲಾಗುತ್ತಿದೆ.
ಶಾರುಖ್ ನಟಿಸಿ, ನಿರ್ಮಾಣ ಮಾಡುತ್ತಿರುವ ಜವಾನ ಸಿನಿಮಾದ ಪ್ರಮೋಷನ್ ಭರ್ಜರಿಯಾಗಿ ನಡೆಯುತ್ತಿದೆ. ಶಾರುಖ್ ಮತ್ತು ಟೀಮ್ ಪ್ರಚಾರ ಕಾರ್ಯದಲ್ಲಿ ತೊಡಗಿದೆ. ಅತ್ತ ಶಾರುಖ್ ನಾನಾ ರಾಜ್ಯಗಳಿಗೆ ಭೇಟಿ ನೀಡಿ ಸಿನಿಮಾ ಪ್ರಚಾರ ಮಾಡುತ್ತಿದ್ದರೆ, ಇತ್ತ ಮನೆಯ ಮುಂದೆ ಪ್ರತಿಭಟನೆ ನಡೆಯುತ್ತಿದೆ.