Tag: ಪ್ರತಿಭಟನೆ

  • ನಿರ್ಮಾಪಕ ಕುಮಾರ್ ವಿರುದ್ಧ ರಾಜ್ಯಾದ್ಯಂತ ಸುದೀಪ್ ಅಭಿಮಾನಿಗಳ ಆಕ್ರೋಶ

    ನಿರ್ಮಾಪಕ ಕುಮಾರ್ ವಿರುದ್ಧ ರಾಜ್ಯಾದ್ಯಂತ ಸುದೀಪ್ ಅಭಿಮಾನಿಗಳ ಆಕ್ರೋಶ

    ಸುಖಾಸುಮ್ಮನೆ ತಮ್ಮ ನೆಚ್ಚಿನ ನಟ ಸುದೀಪ್ (Sudeep) ಅವರ ಘನತೆಯನ್ನು ಹಾಳು ಮಾಡುತ್ತಿದ್ದಾರೆ ಎಂದು ಸಿಡಿದೆದ್ದಿರುವ ಕಿಚ್ಚನ ಅಭಿಮಾನಿಗಳು ರಾಜ್ಯಾದ್ಯಂತ ಅಲ್ಲಲ್ಲಿ ಪ್ರತಿಭಟನೆ ಮಾಡಿದ್ದಾರೆ. ಬೆಂಗಳೂರಿನ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಮುಂದೆ ಕೆಲ ಅಭಿಮಾನಿಗಳು ಜಮಾಯಿಸಿ, ನಿರ್ಮಾಪಕರಾದ ಕುಮಾರ್ ಮತ್ತು ರೆಹಮಾನ್ ವಿರುದ್ಧ ಘೋಷಣೆ ಕೂಗಿದರು. ಕುಮಾರ್ ಅವರ ಭಾವಚಿತ್ರಕ್ಕೆ ಚೆಪ್ಪಲಿ ಸೇವೆ ಮಾಡಿದ್ದಾರೆ.

    ಪ್ರತಿಭಟನಾ ಸ್ಥಳಕ್ಕೆ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷ ಭಾ.ಮಾ ಹರೀಶ್ ಬರುವತನಕ ಪ್ರತಿಭಟನೆ ಮಾಡಿದ ಸುದೀಪ್ ಅಭಿಮಾನಿಗಳು, ಹರೀಶ್ ಬಂದ ನಂತರ ಅವರಿಗೆ ಮನವಿ ಸಲ್ಲಿಸಿದರು. ಸಾಕ್ಷಿ, ಆಧಾರಗಳು ಇಲ್ಲದೇ ಆರೋಪ ಮಾಡುವವರಿಗೆ ಫಿಲ್ಮ್ ಚೇಂಬರ್ ಅವಕಾಶ ನೀಡಬಾರದು ಎಂದು ಘೋಷಣೆ ಕೂಗಿದರು. ಅಲ್ಲದೇ, ಕುಮಾರ್ ಮತ್ತು ರೆಹಮಾನ್ ಎರಡು ದಿನಗಳ ಒಳಗೆ ಕ್ಷಮೆ ಕೇಳದೇ ಇದ್ದರೆ ಪ್ರತಿಭಟನೆಯನ್ನು ತೀವ್ರಗೊಳಿಸುವುದಾಗಿ ಅಭಿಮಾನಿಗಳು ಇದೇ ಸಂದರ್ಭದಲ್ಲಿ ತಿಳಿಸಿದರು. ಇದನ್ನೂ ಓದಿ:ತಮನ್ನಾ ಭಾರತೀಯ ಚಿತ್ರರಂಗದ ಶಕೀರಾ: ಸೆಕ್ಸಿ ಸ್ಟೆಪ್ ಹಾಕಿದ್ದಕ್ಕೆ ಬಿರುದು

    ಬೆಂಗಳೂರಿನಲ್ಲಿ ಮಾತ್ರವಲ್ಲ ಚಾಮರಾಜನಗರದಲ್ಲೂ ಪ್ರತಿಭಟನೆ ಕಾವು ಜೋರಾಗಿತ್ತು. ಚಾಮರಾಜನಗರದ ಕಿಚ್ಚನ ಅಭಿಮಾನಿಗಳು ಕೂಡ ನಿರ್ಮಾಪಕ ಎನ್.ಕುಮಾರ್ ಮತ್ತು ರೆಹಮಾನ್ ವಿರುದ್ಧ ಬೀದಿಗಿಳಿದಿದ್ದರು. ನಿರ್ಮಾಪಕರ ಫೋಟೋಗೆ ಚಪ್ಪಲಿ ಸೇವೆ ಮಾಡಿ ಆಕ್ರೋಶ ಹೊರಹಾಕಿದರು. ಚಾಮರಾಜನಗರದ ಭುವನೇಶ್ವರಿ ವೃತ್ತಿಯಲ್ಲಿ ಸೇರಿದ್ದ ಅಭಿಮಾನಿಗಳು ನಿರ್ಮಾಪಕರ ವಿರುದ್ಧ ‍ಘೋಷಣೆ ಕೂಗಿದರು.

    ನಿರ್ಮಾಪಕ ಕುಮಾರ್ ಅವರು ಕಿಚ್ಚ (Kiccha) ಸುದೀಪ್ ಅವರ ಹೆಸರಿಗೆ ಕಳಂಕ ತರುವ ಕೆಲಸಕ್ಕೆ ಮುಂದಾಗಿದ್ದಾರೆ. ಕುಮಾರ್ ಸಾರ್ವಜನಿಕವಾಗಿ ಕ್ಷಮೆ ಯಾಚಿಸಬೇಕು. ಕ್ಷಮೆ ಕೇಳದೇ ಇದ್ದರೆ, ಅವರ ಸಿನಿಮಾಗಳನ್ನು ಬ್ಯಾನ್ ಮಾಡುತ್ತೇವೆ. ಮತ್ತು ಸುದೀಪ್ ಅವರ ವಿರುದ್ಧ ಮಾತನಾಡಿದರೆ, ಅವರ ಬೆಂಗಳೂರಿನ ಮನೆಗೆ ಮುತ್ತಿಗೆ ಹಾಕುವುದಾಗಿ ಈ ಸಂದರ್ಭದಲ್ಲಿ ಎಚ್ಚರಿಕೆ ನೀಡಿದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಜೈನಮುನಿ ಕೊಲೆ ಖಂಡಿಸಿ ಇಂದು ರಾಜ್ಯದೆಲ್ಲೆಡೆ ಪ್ರತಿಭಟನೆ

    ಜೈನಮುನಿ ಕೊಲೆ ಖಂಡಿಸಿ ಇಂದು ರಾಜ್ಯದೆಲ್ಲೆಡೆ ಪ್ರತಿಭಟನೆ

    ಚಿಕ್ಕೋಡಿ/ಧಾರವಾಡ: ಜೈನಮುನಿ (Jain Muni) ಆಚಾರ್ಯ ಕಾಮಕುಮಾರ ನಂದಿ ಮಹಾರಾಜರ (Kamakumara Nandi Maharaja) ಕೊಲೆ ಖಂಡಿಸಿ ಸೋಮವಾರ ರಾಜ್ಯದೆಲ್ಲೆಡೆ ಪ್ರತಿಭಟನೆ ಮಾಡಲು ನಿರ್ಧಾರ ಮಾಡಲಾಗಿದೆ.

    ಚಿಕ್ಕೋಡಿ (Chikkodi) ಪಟ್ಟಣದ ಆರ್‌ಡಿ ಹೈಸ್ಕೂಲ್ ಹತ್ತಿರವಿರುವ ಮೈದಾನದಲ್ಲಿ ಸೇರುವ ಜೈನಸಮುದಾಯದ ಜನರು ಹಾಗೂ ಸ್ವಾಮೀಜಿಗಳು ಮೌನ ಪ್ರತಿಭಟನೆ ಮಾಡಿ, ಬಳಿಕ ಮೆರವಣಿಗೆ ಮಾಡಿ ತಹಶೀಲ್ದಾರ್ ಮೂಲಕ ಸರ್ಕಾರಕ್ಕೆ ಪ್ರಕರಣದ ತನಿಖೆ ಮಾಡಿ ಹಂತಕರಿಗೆ ಶಿಕ್ಷೆ ನೀಡುವಂತೆ ಮನವಿ ಮಾಡಲಿದ್ದಾರೆ.

    ಹುಬ್ಬಳ್ಳಿಯಲ್ಲಿ ಕಾಮಕುಮಾರ ನಂದಿ ಮಹಾರಾಜರ ಕೊಲೆ ಖಂಡಿಸಿ ಸಿಎಂ ಸಿದ್ದರಾಮಯ್ಯ ಸ್ಪಂದಿಸಲಿಲ್ಲವೆಂದು ಹಾಗೂ ಜೈನ ಮುನಿಗಳಿಗೆ ರಕ್ಷಣೆ ನೀಡುವಂತೆ ಆಗ್ರಹಿಸಿ ವರೂರಿನ ಜೈನಮುನಿ ಗುಣಧರನಂದಿ ಮಹಾರಾಜ್ ಸ್ವಾಮೀಜಿ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದರು. ಗೃಹ ಸಚಿವರ ದೂರವಾಣಿ ಕರೆಮಾಡಿ ಬೇಡಿಕೆ ಈಡೇರಿಕೆ ಭರವಸೆ ನೀಡಿದ ಬಳಿಕ ಗುಣಧರನಂದಿ ಸ್ವಾಮೀಜಿ ಉಪವಾಸ ಕೈಬಿಟ್ಟಿದ್ದಾರೆ. ಇದನ್ನೂ ಓದಿ: ಉತ್ತರ ಭಾರತದಲ್ಲಿ ಮಳೆಯಿಂದ ಜಲಪ್ರಳಯ – ಈವರೆಗೆ 19 ಬಲಿ, ಇಂದೂ ಭಾರೀ ಮಳೆ ಸಾಧ್ಯತೆ

    ಹತ್ಯೆ ಖಂಡಿಸಿ ಸಮುದಾಯದಿಂದ ಮೌನ ಪ್ರತಿಭಟನೆ ಮಾಡಲು ಮುಂದಾಗಿದೆ. ಧಾರವಾಡದಲ್ಲಿ ಶ್ರೀ ಅಮಿತಂಜನ ಕೀರ್ತಿ ಮುನಿ ಮಹಾರಾಜರ ಸಾನ್ನಿಧ್ಯದಲ್ಲಿ ಜೈನ ಸಮುದಾಯದ ವಿವಿಧ ಸಂಘಟನೆಗಳು ಜಿಲ್ಲಾಧಿಕಾರಿ ಕಚೇರಿವರೆಗೂ ಮೆರವಣಿಗೆ ಮೂಲಕ ತೆರಳಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ ತನಿಖೆಗೆ ಆಗ್ರಹಿಸಲಿದ್ದಾರೆ. ಅಲ್ಲದೆ ಜೈನಮುನಿ ಆಚಾರ್ಯ ಕಾಮಕುಮಾರ ನಂದಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇವಲ ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಒಂದು ಸಮುದಾಯದ ಆರೋಪಿಯನ್ನು ಸಂರಕ್ಷಣೆ ಮಾಡುತ್ತಿದ್ದಾರೆ. ಹೀಗಾಗಿ ಪ್ರಕರಣವನ್ನು ಸಿಬಿಐಗೆ ವಹಿಸಿದರೆ ಸತ್ಯ ಬಹಿರಂಗವಾಗಲಿದೆ ಎಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಅನ್ನಭಾಗ್ಯಕ್ಕೆ ಇಂದು ಚಾಲನೆ- ಬಿಪಿಎಲ್ ಕಾರ್ಡ್‍ದಾರರ ಅಕೌಂಟ್‍ಗೆ ರೇಷನ್ ದುಡ್ಡು

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕೋರ್ಟ್ ಆದೇಶ ಬಂದ ಬಳಿಕ ನೇಮಕಾತಿ – ಶಿಕ್ಷಕರ ಮನವೊಲಿಕೆಗೆ ಮುಂದಾದ ಮಧು ಬಂಗಾರಪ್ಪ

    ಕೋರ್ಟ್ ಆದೇಶ ಬಂದ ಬಳಿಕ ನೇಮಕಾತಿ – ಶಿಕ್ಷಕರ ಮನವೊಲಿಕೆಗೆ ಮುಂದಾದ ಮಧು ಬಂಗಾರಪ್ಪ

    ಬೆಂಗಳೂರು: ಶಿಕ್ಷಕರ ನೇಮಕಾತಿ (Teachers Recruitment) ವಿಳಂಬ ಹಿನ್ನೆಲೆಯಲ್ಲಿ ಫ್ರೀಡಂ ಪಾರ್ಕ್‌ನಲ್ಲಿ ಕಳೆದ 4 ದಿನಗಳಿಂದ ಅಭ್ಯರ್ಥಿಗಳು ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಹಿನ್ನೆಲೆ ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu Bangarappa) ಸ್ಥಳಕ್ಕಾಗಮಿಸಿ ಭಾವಿ ಶಿಕ್ಷಕರನ್ನು ಭೇಟಿ ಮಾಡಿ ಪ್ರತಿಭಟನೆ ಕೈಬಿಡುವಂತೆ ಮನವಿ ಮಾಡಿಕೊಂಡಿದ್ದಾರೆ.

    ಪ್ರತಿಭಟನಾ ನಿರತ ಅಭ್ಯರ್ಥಿಗಳೊಂದಿಗೆ ಮಾತನಾಡಿದ ಮಧು ಬಂಗಾರಪ್ಪ, ಮೊದಲನೆಯದಾಗಿ ನಿಮ್ಮಲ್ಲಿ ನಾನು ಕ್ಷಮೆ ಕೇಳುತ್ತೇನೆ ನೀವೆಲ್ಲಾ ಮಕ್ಕಳನ್ನು ಕರೆದುಕೊಂಡು ಬರೋದು ಮನಸ್ಸಿಗೆ ನೋವಾಗುತ್ತದೆ. ಸರ್ಕಾರದ ಮೇಲೆ ಇಟ್ಟಿರೋ ನಂಬಿಕೆಯನ್ನು ನೀವು ದಯವಿಟ್ಟು ಕಳೆದುಕೊಳ್ಳಬೇಡಿ ಎಂದು ಕೇಳಿಕೊಂಡರು.

    ನಮ್ಮ ತಂದೆಯವರು ಮುಖ್ಯಮಂತ್ರಿಯಾಗಿದ್ದಾಗ ಸಾಕಷ್ಟು ಕೆಲಸ ಮಾಡಿದ್ರು. ನಾನು ಕೋರ್ಟ್ಗೆ ಪ್ರಶ್ನೆ ಮಾಡಲು ಹೋಗಲ್ಲ. ನಿಮ್ಮ ಬಳಿ ಕೈ ಮುಗಿದು ಕೇಳಿಕೊಳ್ಳುತ್ತೇನೆ. ನೀವೆಲ್ಲರೂ ಇಲ್ಲಿಂದ ದಯಮಾಡಿ ಹೊರಡಿ. ಕೋರ್ಟ್ ಆದೇಶ ಬಂದ ತಕ್ಷಣ ನಾನು ನಿಮಗೆ ನೇಮಕಾತಿ ಮಾಡಿ ಕೊಡುತ್ತೇನೆ ಎಂದು ಭರವಸೆ ನೀಡಿದರು. ಇದನ್ನೂ ಓದಿ: Karnataka Budget: 1 ರೂಪಾಯಿ ಬಂದಿದ್ಹೇಗೆ? ಹೋಗಿದ್ದು ಹೇಗೆ?

    ಈ ವಿಚಾರ ಕೋರ್ಟ್‌ನಲ್ಲಿ ಇರುವುದರಿಂದ ಯಾವಾಗ ಈಡೇರುತ್ತದೆ ಎಂದು ನಾನು ನಿಮಗೆ ಹೇಳಲು ಸಾಧ್ಯವಿಲ್ಲ. ಒಳ್ಳೆಯ ವಕೀಲರನ್ನು ಕೊಟ್ಟಿದ್ದಾರೆ. ಕೋರ್ಟ್‌ನಿಂದ ಸ್ಟೇ ಇರುವುದರಿಂದ ಇದು ಅನ್ವಯವಾಗಲ್ಲ. ಕೋರ್ಟ್ ಪರಿಶೀಲನೆ ಮಾಡಿ ಎಂದು ಹೇಳಿದ್ದಾರೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು.

    ಪ್ರತಿಭಟನೆ ಏಕೆ?
    ಪರೀಕ್ಷೆ ನಡೆದು ಒಂದು ವರ್ಷ ಕಳೆದರೂ ಆಯ್ಕೆಯಾದ ಅಭ್ಯರ್ಥಿಗಳಿಗೆ ಇನ್ನೂ ನೇಮಕಾತಿ ಆದೇಶ ಮತ್ತು ಸ್ಥಳ ನಿಯೋಜನೆ ಆಗಿಲ್ಲ. ಪರೀಕ್ಷೆ ಬರೆದಿದ್ದ 70 ಸಾವಿರ ಅಭ್ಯರ್ಥಿಗಳಲ್ಲಿ 13,352 ಜನ ಅಭ್ಯರ್ಥಿಗಳು ಆಯ್ಕೆಯಾಗಿದ್ದರು. ಆ ಪೈಕಿ ನೇಮಕಾತಿಯಲ್ಲಿ ಕಾನೂನು ಗೊಂದಲವಿದೆ ಎಂದು ಕೆಲವರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಇದೇ ಕಾರಣದಿಂದಾಗಿ ಯಾವುದೇ ಕಾನೂನು ತೊಡಕಿಲ್ಲದೇ ಆಯ್ಕೆಯಾದ ಅಭ್ಯರ್ಥಿಗಳಿಗೂ ಸಮಸ್ಯೆಯಾಗುತ್ತಿದೆ. ಸರ್ಕಾರ ಕೂಡಲೇ ಸಮಸ್ಯೆಯನ್ನು ಪರಿಹರಿಸಿಕೊಡಬೇಕೆಂದು ಉತ್ತೀರ್ಣರಾದ ಅಭ್ಯರ್ಥಿಗಳು ಆಗ್ರಹಿಸಿದ್ದಾರೆ. ಇದನ್ನೂ ಓದಿ: Karnataka Budget 2023: ಸಿಎಂ ತವರು ಜಿಲ್ಲೆಗೆ ಸಿಕ್ಕಿದ್ದೇನು?

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಇಂದು ಮಧ್ಯಾಹ್ನ 3.30ಕ್ಕೆ ಕಾಂಗ್ರೆಸ್‍ನಿಂದ ಪ್ರತಿಭಟನೆ: ಡಿಕೆಶಿ

    ಇಂದು ಮಧ್ಯಾಹ್ನ 3.30ಕ್ಕೆ ಕಾಂಗ್ರೆಸ್‍ನಿಂದ ಪ್ರತಿಭಟನೆ: ಡಿಕೆಶಿ

    ‌ಬೆಂಗಳೂರು: ಇಂದು ಮಧ್ಯಾಹ್ನ 3.30ಕ್ಕೆ ಕಾಂಗ್ರೆಸ್‍ನಿಂದ ಪ್ರತಿಭಟನೆ (Congress Protest) ನಡೆಸುತ್ತಿದ್ದೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ (D.K Shivakumar) ಹೇಳಿದರು.

    ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಇಂದು ಪ್ರಜಾಪ್ರಭುತ್ವಕ್ಕೆ ಕಪ್ಪು ದಿನ ನಮ್ಮ ನಾಯಕ ರಾಹುಲ್ ಗಾಂಧಿ (Rahul Gandhi) ಮೇಲೆ ಕೋಲಾರದಲ್ಲಿ ಕೇಸು ಹಾಕಿ ಅವರ ಸಂಸದ ಸ್ಥಾನ ವಜಾ ಆಗಿತ್ತು. ಅದನ್ನ ಪ್ರಶ್ನಿಸಿ ಮೇಲ್ಮನವಿ ಹೋಗಿದ್ದು, ಇಂದು ಡಿಸ್‍ಮಿಸ್ ಮಾಡಲಾಗಿದೆ ಎಂದು ಹೇಳಿದರು.

    ಬಿಜೆಪಿಯ (BJP) ಕುತಂತ್ರವನ್ನು ನಾವು ತೀವ್ರವಾಗಿ ಕಂಡಿಸುತ್ತಿದ್ದೇವೆ. ಅನ್ಯಾಯದ ವಿರುದ್ಧ ಧ್ವನಿ ಎತ್ತುವುದನ್ನ ಕಾರ್ಯಕರ್ತರ ಮೂಲಕ ಮೊಟಕುಗೊಳಿಸುವ ಕೆಲಸ ಮಾಡುತ್ತಿದ್ದಾರೆ. ಈ ದೇಶದ ಐಕ್ಯತೆಗೆ, ಈ ದೇಶದ ಸಮಗ್ರತೆಗೆ ಭಾರತ್ ಜೋಡೋ ಯಾತ್ರೆ ಮಾಡಿದರು. ಇಂದು ಮಧ್ಯಾಹ್ನ 3.30ಕ್ಕೆ ಎಲ್ಲಾ ಕಾಂಗ್ರೆಸ್ ಶಾಸಕರು ಮಹಾತ್ಮ ಗಾಂಧಿ ಪ್ರತಿಮೆ ಮುಂದೆ ನಾವು ಪ್ರತಿಭಟನೆ ನಡೆಸುತ್ತಿದ್ದೇವೆ ಎಂದರು. ಇದನ್ನೂ ಓದಿ: 8 ತಿಂಗಳು ಎಲ್ಲಾ ಶಾಸಕರು ಸಹಕರಿಸಿ- ಸಿದ್ದರಾಮಯ್ಯ ಮನವಿ

    ಮಧ್ಯಾಹ್ನ 3.30ಕ್ಕೆ ಎಲ್ಲಾ ಜಿಲ್ಲಾ ಹೆಡ್ ಕ್ವಾರ್ಟಸ್ ಗಳಲ್ಲೂ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ಮಾಡಬೇಕು. ಸಿಎಲ್‍ಪಿ ಸಭೆಯಲ್ಲಿ ನುಡಿದಂತೆ ನಡೆದಿದ್ದೇವೆ 5 ಗ್ಯಾರಂಟಿಗಳು ಜಾರಿ ಬಗ್ಗೆ ಮಾತನಾಡಿದ್ದೇವೆ ಎಲ್ಲಾ ವಿಚಾರ ಚರ್ಚೆ ಮಾಡಿದ್ದೇವೆ. ಈ ವರ್ಷದೊಳಗೆ ಎಲ್ಲಾ 5 ಗ್ಯಾರಂಟಿ ಯೋಜನೆಗಳನ್ನ ಜಾರಿಗೆ ತರುತ್ತೇವೆ ಎಂದು ಭರವಸೆ ನೀಡಿದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ದಯವಿಟ್ಟು ನೇಮಕಾತಿ ಆದೇಶ ನೀಡಿ – ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ಪ್ರತಿಭಟನೆ

    ದಯವಿಟ್ಟು ನೇಮಕಾತಿ ಆದೇಶ ನೀಡಿ – ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ಪ್ರತಿಭಟನೆ

    ಬೆಂಗಳೂರು: ಪ್ರಾಥಮಿಕ ಶಾಲಾ ಶಿಕ್ಷಕರ (Primary Teachers ) ನೇಮಕಾತಿ ಪರೀಕ್ಷೆಯಲ್ಲಿ ಉತ್ತೀರ್ಣರಾದರೂ ಆದೇಶ ಪ್ರತಿ ನೀಡದ ಸರ್ಕಾರದ ವಿರುದ್ಧ ಫ್ರೀಡಂ ಪಾರ್ಕ್‌ನಲ್ಲಿ (Freedom Park) ಅಭ್ಯರ್ಥಿಗಳು ನಡೆಸುತ್ತಿರುವ ಅನಿರ್ದಿಷ್ಟಾವಧಿ ಪ್ರತಿಭಟನೆ ಮೂರನೇ ದಿನಕ್ಕೆ ಕಾಲಿಟ್ಟಿದೆ.

    ಪರೀಕ್ಷೆ ನಡೆದು ಒಂದು ವರ್ಷ ಕಳೆದರೂ ಆಯ್ಕೆಯಾದ ಅಭ್ಯರ್ಥಿಗಳಿಗೆ ಇನ್ನೂ ನೇಮಕಾತಿ ಆದೇಶ ಮತ್ತು ಸ್ಥಳ ನಿಯೋಜನೆ ಆಗಿಲ್ಲ. ಪರೀಕ್ಷೆ ಬರೆದಿದ್ದ 70 ಸಾವಿರ ಅಭ್ಯರ್ಥಿಗಳಲ್ಲಿ 13,352 ಜನ ಅಭ್ಯರ್ಥಿಗಳು ಆಯ್ಕೆಯಾಗಿದ್ದರು. ಆ ಪೈಕಿ ನೇಮಕಾತಿಯಲ್ಲಿ ಕಾನೂನು ಗೊಂದಲವಿದೆ ಎಂದು ಕೆಲವರು ಹೈಕೋರ್ಟ್‌ (High Court) ಮೆಟ್ಟಿಲೇರಿದ್ದಾರೆ. ಇದೇ ಕಾರಣದಿಂದಾಗಿ ಯಾವುದೇ ಕಾನೂನು ತೊಡಕಿಲ್ಲದೇ ಆಯ್ಕೆಯಾದ ಅಭ್ಯರ್ಥಿಗಳಿಗೂ ಸಮಸ್ಯೆಯಾಗುತ್ತಿದೆ. ಸರ್ಕಾರ ಕೂಡಲೇ ಸಮಸ್ಯೆಯನ್ನು ಪರಿಹರಿಸಿಕೊಡಬೇಕೆಂದು ಉತ್ತೀರ್ಣರಾದ ಅಭ್ಯರ್ಥಿಗಳು ಆಗ್ರಹಿಸಿದ್ದಾರೆ.

    8 ತಿಂಗಳ ಗರ್ಭಿಣಿ ಯಾದಂತಹ ಕಾವ್ಯಾ ಅವರು ಧರಣಿಯಲ್ಲಿ ಸತತ ಮೂರನೆಯ ದಿನವೂ ಭಾಗವಹಸಿ ದಯವಿಟ್ಟು ಆದೇಶ ಪ್ರತಿ ನೀಡುವಂತೆ ಮನವಿ ಮಾಡಿದ್ದಾರೆ. ಇದನ್ನೂ ಓದಿ: Teachers Recruitment: ಪದವೀಧರ ಪ್ರಾಥಮಿಕ ಶಿಕ್ಷಕರಾಗಿ 13,352 ಮಂದಿ ಆಯ್ಕೆ – ಅಂತಿಮ ಪಟ್ಟಿ ಪ್ರಕಟ

    ಅಭ್ಯರ್ಥಿಗಳ ಸಮಸ್ಯೆ/ ಬೇಡಿಕೆ ಏನು?
    ನಾವೆಲ್ಲರೂ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದು ನೇಮಕಾತಿ ಆಯ್ಕೆಪಟ್ಟಿಯಲ್ಲಿ ನಮ್ಮ ಹೆಸರುಗಳಿರುವ ಕಾರಣಕ್ಕಾಗಿ ಖಾಸಗಿ ಶಿಕ್ಷಣ ಸಂಸ್ಥೆಗಳು ನಮ್ಮನ್ನು ಕೆಲಸದಿಂದ ಕೈಬಿಟ್ಟಿವೆ.

    ದಾಖಲಾತಿ ನೈಜತೆ ಪರಿಶೀಲನೆಗಾಗಿ ಮೂಲ ದಾಖಲಾತಿಗಳನ್ನು ಇಲಾಖೆಯ ವಶಕ್ಕೆ ಕೊಟ್ಟಿರುವುದರಿಂದ ಬೇರೆ ಕಡೆಗಳಲ್ಲಿ ಕೆಲಸಕ್ಕೆ ಸೇರಲು ಸಮಸ್ಯೆಯಾಗುತ್ತಿದೆ. ಈ ಕಡೆ ನೇಮಕಾತಿ ಆದೇಶ ಸಿಗದೇ ಆ ಕಡೆ ಇರುವ ಉದ್ಯೋಗವನ್ನು ಕಳೆದುಕೊಂಡ ನಮಗೆ ಜೀವನ ನಿರ್ವಹಣೆ ಮಾಡುವುದು ಬಹಳ ಕಷ್ಟವಾಗುತ್ತಿದೆ.

     

    ಈಗಾಗಲೇ ಸರ್ಕಾರಿ ಶಾಲೆಗಳಲ್ಲಿ ಸರಿಯಾದ ಸಂಖ್ಯೆಗಳಲ್ಲಿ ಶಿಕ್ಷಕರು ಇಲ್ಲದೆ ಮಕ್ಕಳ ಶಿಕ್ಷಣ ಕುಂಠಿತವಾಗುತ್ತಿದ್ದು ಇಲಾಖೆ ಮತ್ತು ಸರ್ಕಾರದ ಉದ್ದೇಶ ಸಾಧನೆಯಾಗದಿರುವ ಕುಂಠಿತವಾಗುತ್ತಿದೆ.

    ಹೊಸದಾಗಿ ಆಯ್ಕೆಯಾದ ಶಿಕ್ಷಕರು ಯಾವಾಗ ನೇಮಕಾತಿ ಆದೇಶ ಸಿಗುತ್ತದೆ ಮತ್ತು ಅವರು ಬೇರೆ ಬೇರೆ ಜಿಲ್ಲೆಗಳಲ್ಲಿ ಆಯ್ಕೆಯಾದ್ದರಿಂದ ತಮ್ಮ ಮಕ್ಕಳನ್ನ ಯಾವ ಊರಿನ ಶಾಲೆಗೆ ದಾಖಲು ಮಾಡಿಸಬೇಕು? ಯಾವ ಸ್ಥಳದಲ್ಲಿ ವಾಸವಾಗಬೇಕು ಎಂಬುದರ ಬಗ್ಗೆ ಗೊಂದಲವಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • 5 ಭಾಗ್ಯಗಳನ್ನು ಘೋಷಣೆ ಮಾಡಿ ಕಾಂಗ್ರೆಸ್ ಸುಳ್ಳು ಹೇಳಿದೆ: ಕಟೀಲ್

    5 ಭಾಗ್ಯಗಳನ್ನು ಘೋಷಣೆ ಮಾಡಿ ಕಾಂಗ್ರೆಸ್ ಸುಳ್ಳು ಹೇಳಿದೆ: ಕಟೀಲ್

    ಬೆಂಗಳೂರು: ಕರ್ನಾಟಕದಲ್ಲಿ ಐದು ಭಾಗ್ಯಗಳನ್ನು ಘೋಷಣೆ ಮಾಡಿ ಕಾಂಗ್ರೆಸ್ ಸುಳ್ಳು ಹೇಳಿದೆ. ಚುನಾವಣೆಯಲ್ಲಿ ಗ್ಯಾರಂಟಿ ಕಾರ್ಡ್ ಹಂಚಿ ಅಧಿಕಾರಕ್ಕೆ ಬಂತು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ (nalin Kumar Kateel) ವಾಗ್ದಾಳಿ ನಡೆಸಿದರು.

    ಸರ್ಕಾರದ ಗ್ಯಾರಂಟಿಗಳಿಗೆ ವಿಧಿಸಿರುವ ಷರತ್ತುಗಳ ವಿರುದ್ಧ ಫ್ರೀಡಂ ಪಾರ್ಕ್‍ನಲ್ಲಿ (BJP Protest In Freedom Park) ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ. ಈ ವೇಳೆ ಮಾನಾಡಿದ ಅವರು, ಸರ್ಕಾರ ಅಧಿಕಾರಕ್ಕೆ ಬಂದು 24 ಗಂಟೆಯಲ್ಲಿ ಗ್ಯಾರಂಟಿ ಜಾರಿ ಮಾಡ್ತೀವಿ ಅಂದ್ರು. ಆದರೆ ಜಾರಿ ಮಾಡಿಲ್ಲ. ಹೀಗಾಗಿ ಸದನದ ಹೊರಗೆ ಒಳಗೆ ಹೋರಾಟ ಮಾಡ್ತೀವಿ. 10 ಕೆಜಿ ಕೊಡ್ತೀವಿ ಅಂದ್ರು ಈಗ 5 ಕೆಜಿ ಅಂತಿದ್ದಾರೆ ಎಂದರು.

    10 ಕೆಜಿ ಅಕ್ಕಿ ಕೊಡಬೇಕು. ವಿದ್ಯುತ್ ಉಚಿತ ಅಂದ್ರು ಈಗ ವಿದ್ಯುತ್ ಬಿಲ್ ಹೊರೆಯಾಗಿದೆ. ಸರ್ಕಾರ ಬಂದು ಒಂದು ತಿಂಗಳಿಗೆ ಜನಾಕ್ರೋಶ ವ್ಯಕ್ತವಾಗಿದೆ. ವ್ಯಾಪಾರ ಬಂದ್ ಮಾಡಿ ಪ್ರತಿಭಟನೆ ಮಾಡುತ್ತಿದ್ದಾರೆ. ಉದ್ಯಮಿ ವ್ಯಾಪಾರಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ. ಮತಾಂತರ ನಿಷೇಧ ಕಾಯ್ದೆ ತಂದಿದ್ದೇವೆ. ಆದರೆ ಇದನ್ನು ಕಾಂಗ್ರೆಸ್ ವಾಪಸ್ ತೆಗೆದುಕೊಂಡು ದ್ವೇಷದ ರಾಜಕಾರಣ ಮಾಡುತ್ತಿದೆ ಎಂದರು. ಇದನ್ನೂ ಓದಿ: ನೀರಿನ ಟ್ಯಾಂಕ್‌ನಲ್ಲಿ ಮುಳುಗಿ ಮಂಗಗಳ ಸಾವು – 3 ದಿನ ನೀರು ಕುಡಿದ ಗ್ರಾಮಸ್ಥರಲ್ಲಿ ಆತಂಕ

    ಗೋ ಹತ್ಯೆ ನಿಷೇಧ ಕಾಯ್ದೆ ರದ್ದು ಮಾಡುವ ಮೂಲಕ ಗೋಹತ್ಯೆ ಮಾಡುವವರ ಸರ್ಕಾರ ನಿಂತಿದೆ. ಪಠ್ಯದಲ್ಲಿ ರಾಜಕೀಯ ಮಾಡುತ್ತಿದೆ. ನಾವು ವಿರಮಿಸುವುದಿಲ್ಲ ಜನರಿಗೆ ಇವ್ರ ಮೋಸ ತಿಳಿಸುತ್ತೇವೆ. ಕರೆಂಟ್ ಬಿಲ್ ವಾಪಸ್ ತೆಗೆದುಕೊಳ್ಳದೆ ಇದ್ದರೆ ಬೀದಿ ಬೀದಿಯಲ್ಲಿ ಹೋರಾಟ ಮಾಡ್ತೇವೆ. ಜನರಿಗೆ ಬಿಲ್ ಕಟ್ಟೋಕೆ ಬಿಡಲ್ಲ. ಮಂಡಲ ಮಂಡಲದಲ್ಲಿ ಹೋರಾಟ ಮಾಡಲಿದ್ದೇವೆ ಎಂದು ಎಚ್ಚರಿಸಿದರು.

    ಮಾಜಿ ಸಿಎಂ ಬಿಎಸ್ ವೈ ನೇತೃತ್ವದಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಗ್ಯಾರಂಟಿ ಯೋಜನೆ ಪೂರ್ತಿ ಮಾಡಿ. ಇಲ್ಲವೇ ಕುರ್ಚಿ ಖಾಲಿ ಮಾಡಿ ಎಂದು ಬಿಜೆಪಿ ಘೋಷಣೆ ಹಾಕುತ್ತಿದೆ. ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಫ್ರೀಡಂ ಪಾರ್ಕ್‍ನಲ್ಲಿ 697 ಮಂದಿ ಪೆÇಲೀಸರನ್ನು ಭದ್ರತೆಗೆ ನಿಯೋಜನೆ ಮಾಡಲಾಗಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಬಿಜೆಪಿಯಿಂದ ‘ಮೋಸ ನಿಲ್ಲಿಸಿ, ಗ್ಯಾರಂಟಿ ಜಾರಿಗೊಳಿಸಿ’ ಹೋರಾಟ: ಅಶ್ವಥ್ ನಾರಾಯಣ್

    ಬಿಜೆಪಿಯಿಂದ ‘ಮೋಸ ನಿಲ್ಲಿಸಿ, ಗ್ಯಾರಂಟಿ ಜಾರಿಗೊಳಿಸಿ’ ಹೋರಾಟ: ಅಶ್ವಥ್ ನಾರಾಯಣ್

    ಬೆಂಗಳೂರು: ಗ್ಯಾರಂಟಿಗಳನ್ನು ನೀಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ (Congress) ಪಕ್ಷ ತಮ್ಮ ಆಶ್ವಾಸನೆ ಈಡೇರಿಸದೆ ಮಾತಿಗೆ ತಪ್ಪಿದೆ. ಇದರ ವಿರುದ್ಧ ‘ಮೋಸ ನಿಲ್ಲಿಸಿ, ಗ್ಯಾರಂಟಿ ಜಾರಿಗೊಳಿಸಿ’ ಹೋರಾಟಕ್ಕೆ ಬಿಜೆಪಿ (BJP) ಮುಂದಾಗಿದೆ ಎಂದು ರಾಜ್ಯದ ಮಾಜಿ ಡಿಸಿಎಂ ಡಾ.ಸಿ.ಎನ್. ಅಶ್ವಥ್ ನಾರಾಯಣ್ (Ashwath Narayan) ಅವರು ತಿಳಿಸಿದರು.

    ಮಲ್ಲೇಶ್ವರಂನ ಬಿಜೆಪಿ ರಾಜ್ಯ ಕಾರ್ಯಾಲಯ ‘ಜಗನ್ನಾಥ ಭವನ’ದಲ್ಲಿ ಭಾನುವಾರ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದ ಬಳಿಕ ಗ್ಯಾರಂಟಿ ಅನುಷ್ಠಾನದ ವಿಚಾರದಲ್ಲಿ ಭಂಡತನ ತೋರುತ್ತಿದೆ. ಕಂಡಿಷನ್ ಇಲ್ಲದೆ ಗ್ಯಾರಂಟಿಗಳನ್ನು ಜಾರಿ ಮಾಡಲು ಆಗ್ರಹಿಸಿ ಸದನದ ಒಳಗೆ ಮತ್ತು ಹೊರಗೆ ಹೋರಾಟ ನಡೆಸಲಿದ್ದೇವೆ ಎಂದು ಹೇಳಿದರು.

    50% ಕ್ಕಿಂತ ಹೆಚ್ಚು ವಿದ್ಯುತ್ ದರ ಏರಿಸಿದ್ದಾರೆ. ಇದರಿಂದ ಬೆಲೆ ಏರಿಕೆ ಆಗುತ್ತಿದೆ ಎಂದರಲ್ಲದೆ ಬೆಲೆ ಏರಿಕೆಯನ್ನು ಇಳಿಸಲು ಆಗ್ರಹಿಸಿದರು. ಈ ಸರ್ಕಾರ ಬೆಲೆ ಏರಿಕೆ, ಭ್ರಷ್ಟಾಚಾರಕ್ಕೆ ಸಾಕ್ಷಿಯಾಗುತ್ತಿದೆ. ಕೈಗಾರಿಕೆಗಳು, ಜನಸಾಮಾನ್ಯರು ವಿದ್ಯುತ್ ದರ ಏರಿಕೆಯಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಗ್ಯಾರಂಟಿಗಳನ್ನು ಘೋಷಿಸಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಪಕ್ಷವು ತಕ್ಷಣ ಅವುಗಳ ಅನುಷ್ಠಾನ ಮಾಡುವುದಾಗಿ ತಿಳಿಸಿತ್ತು. ಆದರೆ ಅದನ್ನು ಜಾರಿಗೊಳಿಸುವಲ್ಲಿ ವಿಫಲವಾಗಿದೆ. ಗ್ಯಾರಂಟಿಗಳ ಅನುಷ್ಠಾನಕ್ಕೆ ಆಗ್ರಹಿಸಿ ಇದೇ 4 ರಂದು ಹೋರಾಟ ರೂಪಿಸಲಾಗುತ್ತಿದೆ ಎಂದು ಅವರು ಹೇಳಿದರು.

    ಸದನದ ಹೊರಗೆ ಪಕ್ಷದ ಹಿರಿಯರಾದ ಬಿಎಸ್ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ. ಸದನದ ಒಳಗೆ ಶಾಸಕರ ಹೋರಾಟ ನಡೆಯಲಿದೆ ಎಂದರು.

    10 ಕೆಜಿ ಅಕ್ಕಿ ಈಗ 5 ಕೆಜಿಗೆ ಬಂದಿದೆ. ಈಗ 5 ಕೆಜಿ ಕೊಡಲು ಬಹಳ ಕಷ್ಟಪಡುತ್ತಿದ್ದಾರೆ. ಮಾತಿನಂತೆ 10 ಕೆಜಿ ಅಕ್ಕಿ ಕೊಡಿ. 200 ಯೂನಿಟ್ ಉಚಿತ ವಿದ್ಯುತ್ ಎಂದಿದ್ದರು. ಈಗ 200 ಯೂನಿಟ್ ಮಾಯವಾಗಿ 10 ತಿಂಗಳ ಸರಾಸರಿ ಮಾಡಿ ಹೆಚ್ಚುವರಿ 10% ಕರೆಂಟ್ ಕೊಡುವುದಾಗಿ ಮಾತನಾಡುತ್ತಿದ್ದಾರೆ. ಕಂಡಿಷನ್ ಇಲ್ಲದೆ 200 ಯೂನಿಟ್ ವಿದ್ಯುತ್ ಕೊಡಿ. ಎಲ್ಲರೂ ಎಲೆಕ್ಟ್ರಿಕ್ ಸ್ಟವ್ ಕೊಂಡುಕೊಂಡು ಕಾಯುತ್ತಿದ್ದಾರೆ ಎಂದು ಗಮನ ಸೆಳೆದರು.

    ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ಮಹಿಳೆಗೆ 2 ಸಾವಿರ ರೂ. ಕೊಡುವುದಾಗಿ ಪ್ರಿಯಾಂಕಾ ಗಾಂಧಿ ಅವರೇ ಘೋಷಿಸಿದ್ದರು. ಈಗ ಮನೆಯೊಡತಿಗೆ ಮಾತ್ರ ಎನ್ನುವ ಮೂಲಕ ಮನೆಯಲ್ಲಿ ಜಗಳ ತಂದಿಡುವ ಕೆಲಸ ಮಾಡುತ್ತಿದ್ದಾರೆ. ಪ್ರತಿ ಮಹಿಳೆಗೂ ಹಣ ಕೊಡಿ ಎಂದು ಒತ್ತಾಯಿಸಿದರು.

    ವಿಪಕ್ಷ ನಾಯಕನ ನೇಮಕಾತಿ ಶೀಘ್ರವೇ ಆಗಲಿದೆ ಎಂದ ಅವರು, ಈ ವಿಚಾರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬಿಜೆಪಿಗೆ ಹೇಳುವ ನೈತಿಕತೆ ಇಲ್ಲ ಎಂದು ಪ್ರಶ್ನೆಗೆ ಉತ್ತರಿಸಿದರು. ನಮ್ಮದು ಕುಟುಂಬದ ಪಕ್ಷವಲ್ಲ. ಇದು ಜನರ ಪಕ್ಷ. ಜನರ ಭಾವನೆ, ಮಿಡಿತಗಳನ್ನು ಗಮನಿಸಿ ನಮ್ಮ ಪಕ್ಷ ಕೆಲಸ ಮಾಡುತ್ತಿದೆ. ಅವರಲ್ಲಿ ನಿವೃತ್ತಿ ಆಗುತ್ತೇನೆ ಎಂದವರು ಮುಖ್ಯಮಂತ್ರಿ ಆಗಿದ್ದಾರೆ ಎಂದು ವ್ಯಂಗ್ಯವಾಗಿ ತಿಳಿಸಿದರು. ಇದನ್ನೂ ಓದಿ: ಕಾಂಗ್ರೆಸ್ ಸರ್ಕಾರದಲ್ಲಿ YST Tax ಜಾರಿಗೆ ಬಂದಿದೆ: ಹೆಚ್‍ಡಿಕೆ ಹೊಸ ಬಾಂಬ್

    ಅವರಲ್ಲಿ ಎಷ್ಟು ಗುಂಪಿದೆ ನೋಡಿ. ಕಾಂಗ್ರೆಸ್ ಪಕ್ಷದ ಆಡಳಿತದಲ್ಲಿ ಭ್ರಷ್ಟಾಚಾರ, ಟ್ರಾನ್ಸ್‌ಫರ್ ದಂಧೆ ಶುರುವಾಗಿದೆ ನೋಡಿ. ವಿಪಕ್ಷ ನಾಯಕನ ಸ್ಥಾನಕ್ಕೆ ಯಾರೂ ಅರ್ಜಿ ಹಾಕುತ್ತಿಲ್ಲ. ಏಕೆಂದರೆ ಇದು ಕಾಂಗ್ರೆಸ್ ಪಕ್ಷವಲ್ಲ. ಅಂತಹ ಸಂಸ್ಕೃತಿ ನಮ್ಮದಲ್ಲ ಎಂದರು.

    ಈ ವೇಳೆ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಸದಸ್ಯ ಎನ್. ರವಿಕುಮಾರ್, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಶಾಸಕ ಮಹೇಶ್ ಟೆಂಗಿನಕಾಯಿ, ಬೆಂಗಳೂರು ಕೇಂದ್ರ ಜಿಲ್ಲಾ ಅಧ್ಯಕ್ಷ ಮಂಜುನಾಥ್ ಇದ್ದರು. ಇದನ್ನೂ ಓದಿ: ಜೆಪಿ ನಡ್ಡಾ ಅವ್ರು ದೆಹಲಿಗೆ ಬನ್ನಿ ಎಂದಿದ್ದಕ್ಕೆ ಹೋಗುತ್ತಿದ್ದೇನೆ: ಬಿಎಸ್‍ವೈ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಫ್ರಾನ್ಸ್‌ ಧಗ ಧಗ – ಭದ್ರತೆಗೆ 45 ಸಾವಿರ ಪೊಲೀಸರ ನಿಯೋಜನೆ, 994 ಮಂದಿ ಅರೆಸ್ಟ್‌

    ಫ್ರಾನ್ಸ್‌ ಧಗ ಧಗ – ಭದ್ರತೆಗೆ 45 ಸಾವಿರ ಪೊಲೀಸರ ನಿಯೋಜನೆ, 994 ಮಂದಿ ಅರೆಸ್ಟ್‌

    ಪ್ಯಾರಿಸ್‌: 17 ವರ್ಷದ ಹುಡುಗನನ್ನು ಗುಂಡಿಟ್ಟು ಹತ್ಯೆ ಮಾಡಿದ ನಂತರ ಫ್ರಾನ್ಸ್‌ನಲ್ಲಿ (France) ಜನಾಕ್ರೋಶ ಭುಗಿಲೆದ್ದಿದೆ. ಟ್ರಾಫಿಕ್‌ ತಪಾಸಣೆ ವೇಳೆ ಹುಡುಗನ ಮೇಲೆ ಪೊಲೀಸರು ಗುಂಡು ಹಾರಿಸಿ ಹತ್ಯೆಗೈದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದಂತೆ ಮಂಗಳವಾರ ರಾತ್ರಿಯಿಂದಲೇ ಪ್ರತಿಭಟನೆ (France Protest) ಭುಗಿಲೆದ್ದಿದೆ.

    ಫ್ರಾನ್ಸ್‌ನ ಪ್ರತಿಭಟನೆ ಶನಿವಾರ 4ನೇ ದಿನಕ್ಕೆ ಕಾಲಿಟ್ಟಿದ್ದು, ಬೀದಿ ಬೀದಿಗಳಲ್ಲಿ ಪೊಲೀಸ್‌ (France Police) ಬ್ಯಾರಿಕೇಡ್‌ಗಳನ್ನು ಮುರಿದು ಹಾಕಿ, ಸಿಕ್ಕ ಸಿಕ್ಕ ವಾಹನಗಳಿಗೆ ಹಾಗೂ ಟೈರ್‌ಗಳಿಗೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: 3 ಟ್ರಿಲಿಯನ್‌ ಡಾಲರ್‌ ಮೌಲ್ಯದ ಕಂಪನಿಯಾಗಿ ಹೊರಹೊಮ್ಮಿದ ಆಪಲ್‌

    ಪ್ರತಿಭಟನಾಕಾರರ ಆಕ್ರೋಶಕ್ಕೆ 2,000ಕ್ಕೂ ಹೆಚ್ಚು ಕಾರುಗಳು ಬೆಂಕಿಗೆ ಆಹುತಿಯಾಗಿವೆ. 500 ಕಟ್ಟಡಗಳು ಧ್ವಂಸಗೊಂಡಿವೆ. ಹಾಗಾಗಿ ಪ್ರತಿಭಟನೆಯನ್ನು ಹತ್ತಿಕ್ಕಲು ಸುಮಾರು 45 ಸಾವಿರ ಪೊಲೀಸರನ್ನ ಭದ್ರತೆಗೆ ನಿಯೋಜಿಸಲಾಗಿದೆ. ಈವರೆಗೆ ಸುಮಾರು 994 ಮಂದಿಯನ್ನು ಬಂಧಿಸಲಾಗಿದೆ. ಪ್ಯಾರಿಸ್‌ ಸಹಿತ ಹಲವು ನಗರಗಳಲ್ಲಿ ಬಿಗಿ ಪೊಲೀಸ್‌ ಬಂದೋಬಸ್ತ್ ಕೈಗೊಳ್ಳಲಾಗಿದ್ದರೂ ಗಲಭೆಗಳು ನಿಯಂತ್ರಣಕ್ಕೆ ಬಂದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಎಚ್ಚೆತ್ತ ಸರ್ಕಾರ 17ರ ಹುಡುಗರನ್ನು ಹತ್ಯೆ ಮಾಡಿದ ಇಬ್ಬರು ಪೊಲೀಸ್‌ ಅಧಿಕಾರಿಗಳನ್ನೂ ಬಂಧಿಸಲಾಗಿದ್ದು, ಅವರ ವಿರುದ್ಧ ತನಿಖೆಗೆ ಸರ್ಕಾರ ಆದೇಶಿಸಿದೆ.

    ಫ್ರಾನ್ಸ್‌ನ ಪಶ್ಚಿಮ ಪ್ಯಾರಿಸ್‌ನ ನಾಂಟೇರ್‌ನಲ್ಲಿ ಟ್ರಾಫಿಕ್‌ ತಪಾಸಣೆ ವೇಳೆ ಪೊಲೀಸರು 17 ವರ್ಷದ ನಹೆಲ್ ಎಂಬ ಹುಡುಗನನ್ನ ಗುಂಡಿಟ್ಟು ಹತ್ಯೆ ಮಾಡಿದ್ದರು. ಈ ಹಿನ್ನೆಲೆಯಲ್ಲಿ ರಾಷ್ಟ್ರವ್ಯಾಪಿ ಪ್ರತಿಭಟನೆ ನಡೆಯುತ್ತಿರುವುದರಿಂದ ಶೀಘ್ರವೇ ಶಮನಗೊಳಿಸಲು ಹಲವು ಜಿಲ್ಲೆಗಳಲ್ಲಿ ಕರ್ಫ್ಯೂ ವಿಧಿಸಲಾಗಿದೆ. ಅಲ್ಲದೇ ಪರಿಸ್ಥಿತಿ ಇನ್ನಷ್ಟು ಭುಗಿಲೇಳುವ ಸಾಧ್ಯತೆಗಳಿರುವುದರಿಂದ ಸರ್ಕಾರ 45 ಸಾವಿರ ಪೊಲೀಸರನ್ನ ನಿಯೋಜನೆ ಮಾಡಿದೆ. ಮತ್ತೆ ರಾಷ್ಟ್ರದಲ್ಲಿ ಶಾಂತಿ ನೆಲೆಸಲು ಅಧ್ಯಕ್ಷ ಇಮಾನ್ಯುಯಲ್‌ ಮ್ಯಾಕ್ರನ್‌ (Emmanuel Macron) ಹರಸಾಹಸ ನಡೆಸುತ್ತಿದ್ದಾರೆ. ಈ ನಡುವೆ ರಾಷ್ಟ್ರದಲ್ಲಿ ತುರ್ತುಪರಿಸ್ಥಿತಿ ಘೋಷಣೆ ಮಾಡುವ ಸಾಧ್ಯತೆಯೂ ಇದೆ ಎಂದು ಹೇಳಲಾಗಿದೆ. ಇದನ್ನೂ ಓದಿ: ಖ್ಯಾತ ಪಾಕಿಸ್ತಾನಿ ಸ್ನೂಕರ್ ಆಟಗಾರ ಮರ ಕಡಿಯುವ ಯಂತ್ರ ಬಳಸಿ ಆತ್ಮಹತ್ಯೆ

    ಏಕೆ ಇಷ್ಟು ಆಕ್ರೋಶ?
    ಅಲ್ಜೇರಿಯನ್‌ ಮೂಲದ 17 ವರ್ಷದ ಹುಡುಗ ನಹೆಲ್‌ ಎಂಬಾತ ಟ್ರಾಫಿಕ್‌ ನಿಯಮಗಳನ್ನು ಉಲ್ಲಂಘಿಸಿದ್ದರಿಂದ ಪೊಲೀಸರು ಹತ್ಯೆ ಮಾಡಿದ್ದಾರೆ. ಮಂಗಳವಾರ ಬೆಳಿಗ್ಗೆ ಆತ ಕಾರ್ ಚಲಾಯಿಸುವ ವೇಳೆ ನಿಯಮ ಉಲ್ಲಂಘಿಸಿದ್ದಾಗ ಕಾರ್‌ನಿಂದ ಹೊರಕ್ಕೆ ಇಳಿಸಲು ಪ್ರಯತ್ನಿಸಿದ್ದರು. ಫ್ರಾನ್ಸ್‌ನಲ್ಲಿ ವಾಹನ ಚಲಾಯಿಸಲು ಪರವಾನಗಿ ಹೊಂದುವಷ್ಟು ಆತನಿಗೆ ವಯಸ್ಸಾಗಿರಲಿಲ್ಲ. ಸಂಚಾರ ದೀಪದ ಅಡಿ ಮರ್ಸಿಡಿಸ್ ಕಾರು ನಿಲ್ಲಿಸಬೇಕಿತ್ತು. ಕಾರು ನಿಲ್ಲಿಸುವಂತೆ ಪೊಲೀಸರು ಸೂಚಿಸಿದ್ದರು. ಆದರೆ ಬಂದೂಕು ತೋರಿಸಿದರೂ ಚಾಲಕ ಕಾರು ನಿಲ್ಲಿಸಿ ಇಳಿಯಲಿಲ್ಲ. ಇದರಿಂದ ಪೊಲೀಸರು ಗುಂಡು ಹಾರಿಸಿದ್ದಾರೆ. ಗುಂಡು ಚಾಲಕನ ಕೈ ಹಾಗೂ ಎದೆಗೆ ಹೊಕ್ಕಿದೆ. ಆತನಿಗೆ ಸ್ಥಳದಲ್ಲಿಯೇ ಪ್ರಾಥಮಿಕ ಚಿಕಿತ್ಸೆ ನೀಡಲಾಗಿತ್ತು. ಆದರೆ ಅದು ಸಫಲವಾಗಿರಲಿಲ್ಲ.

    ಫ್ರಾನ್ಸ್‌ನಲ್ಲಿ 2017ರಲ್ಲಿ ಇಲ್ಲಿನ ಪೊಲೀಸ್‌ ಕಾಯ್ದೆಗೆ ತಿದ್ದುಪಡಿ ತಂದು 5 ಗಂಭೀರ ಬಗೆಯ ಟ್ರಾಫಿಕ್‌ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಪೊಲೀಸರು ವಾಹನ ಸವಾರರ ಮೇಲೆ ಗುಂಡು ಹಾರಿಸುವ ಅವಕಾಶ ನೀಡಲಾಗಿದೆ. ಆದರೆ ಇದಕ್ಕೆ ಜನರ ವಿರೋಧವಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಜು. 4ರಂದು ಸದನದ ಒಳಗೆ, ಹೊರಗೆ ಕಾಂಗ್ರೆಸ್ ವಿರುದ್ಧ ಹೋರಾಟ: ಬಿಎಸ್‍ವೈ

    ಜು. 4ರಂದು ಸದನದ ಒಳಗೆ, ಹೊರಗೆ ಕಾಂಗ್ರೆಸ್ ವಿರುದ್ಧ ಹೋರಾಟ: ಬಿಎಸ್‍ವೈ

    ಬೆಂಗಳೂರು: ಕಾಂಗ್ರೆಸ್ (Congress) ಪಕ್ಷ ನೀಡಿದ್ದ ಗ್ಯಾರಂಟಿಗಳ ಸಮರ್ಪಕ ಅನುಷ್ಠಾನಕ್ಕೆ ಆಗ್ರಹಿಸಿ ವಿಧಾನಸೌಧದ ಮುಂದೆ ಗಾಂಧಿ ಪ್ರತಿಮೆ ಬಳಿಯಲ್ಲಿ ಜುಲೈ 4ರಂದು ನಮ್ಮ ನೂರಾರು ಕಾರ್ಯಕರ್ತರು ಬೆಳಗ್ಗಿನಿಂದ ಸಂಜೆವರೆಗೆ ಒಂದು ದಿನ ಧರಣಿ ಸತ್ಯಾಗ್ರಹ ಮಾಡಲಿದ್ದಾರೆ. ಬಿಜೆಪಿ ಚುನಾಯಿತ ಪ್ರತಿನಿಧಿಗಳು ಸದನದ ಒಳಗೂ ಹೋರಾಟ ಮಾಡಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್ ಯಡಿಯೂರಪ್ಪ (B.S Yediyurappa) ಅವರು ತಿಳಿಸಿದರು.

    ಮಲ್ಲೇಶ್ವರದ ಬಿಜೆಪಿ ರಾಜ್ಯ ಕಚೇರಿಯಲ್ಲಿ (Bengaluru BJP Office) ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವು ಮನೆಮನೆಗೆ ಹೋಗಿ ಸಿದ್ದರಾಮಯ್ಯ, ಶಿವಕುಮಾರ್ ಅವರು ಸಹಿ ಮಾಡಿ ಕೊಟ್ಟ ಗ್ಯಾರಂಟಿ ಕಾರ್ಡಿನ ಅಂಶಗಳನ್ನು ಚಾಚೂ ತಪ್ಪದೆ ಅನುಷ್ಠಾನಕ್ಕೆ ತರಲು ಅವರು ಆಗ್ರಹಿಸಿದರು. ಈ ಕುರಿತು ಪಕ್ಷದ ಮುಖಂಡರ ಸಭೆಯಲ್ಲಿ ಚರ್ಚಿಸಿದ್ದಾಗಿ ವಿವರಿಸಿದರು.

    ಅವರು ಭರವಸೆ ಕೊಟ್ಟಂತೆ 10 ಕೆಜಿ ಅಕ್ಕಿ ಕೊಡಬೇಕು, ಎಲ್ಲ ಪದವೀಧರ ನಿರುದ್ಯೋಗಿಗಳಿಗೆ 3 ಸಾವಿರ ಭತ್ಯೆ, ಡಿಪ್ಲೊಮಾ ಮಾಡಿ ನಿರುದ್ಯೋಗಿ ಆಗಿರುವವರಿಗೆ 1500 ರೂ. ಕೊಡಬೇಕು, 200 ಯೂನಿಟ್ ಕರೆಂಟ್ ಕೊಡಲೇಬೇಕು, 80 ಯೂನಿಟ್ ಎಂಬ ಕಂಡಿಷನ್ ರದ್ದು ಮಾಡಬೇಕೆಂದು ಆಗ್ರಹಿಸಿದರು. ಇದನ್ನೂ ಓದಿ: 3 ವಲಯ, 3 ಪ್ರತ್ಯೇಕ ಸಭೆ – ಲೋಕಸಭಾ ಚುನಾವಣೆಗೆ ತಯಾರಾದ ಬಿಜೆಪಿ

    ಅವರೇ ಭರವಸೆ ನೀಡಿದಂತೆ ಎಲ್ಲ ಮಹಿಳೆಯರಿಗೆ 2 ಸಾವಿರ ರೂ. ಕೊಡಬೇಕು. ಕರೆಂಟ್ ಬಿಲ್ (Electricity Bill) ತೀವ್ರವಾಗಿ ಹೆಚ್ಚಾಗಿದ್ದು, ದರ ಏರಿಕೆಯನ್ನು ವಾಪಸ್ ಪಡೆಯಬೇಕು ಎಂದು ಒತ್ತಾಯಿಸುವುದಾಗಿ ತಿಳಿಸಿದರು. ಜುಲೈ 4ರಂದು ಸದನದ ಒಳಗೆ ಮತ್ತು ಹೊರಗಡೆ ನಾನು ಮತ್ತು ಪಕ್ಷದ ಪ್ರಮುಖರು ಧರಣಿ ನಡೆಸಲಿದ್ದೇವೆ ಎಂದು ವಿವರಿಸಿದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]