ಬೆಳಗಾವಿ: ಬಸ್ಸಿಗಾಗಿ ಆಗ್ರಹಿಸಿ ಬೆಂಗಳೂರು – ಪುಣೆ (Bengaluru-Pune) ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ವಿದ್ಯಾರ್ಥಿಗಳ ಪ್ರತಿಭಟನೆ (Students Protest) ನಡೆಸಿದ ಘಟನೆ ಬುಧವಾರ ಬೆಳಗಾವಿಯ ಸುವರ್ಣ ಸೌಧದ ಮುಂಭಾಗದಲ್ಲಿ ನಡೆದಿದೆ.
ಬೆಳಗಾವಿ (Belagavi) ತಾಲೂಕಿನ ಕೊಂಡಸಕಪ್ಪ ಗ್ರಾಮದ ವಿದ್ಯಾರ್ಥಿಗಳು ದಿಢೀರ್ ಪ್ರತಿಭಟನೆ ನಡೆಸಿ ಬಿಸಿ ಮುಟ್ಟಿಸಿದ್ದಾರೆ. ಬಸ್ಸು ಬಿಡುವಂತೆ ಹಲವಾರು ಬಾರಿ ಮನವಿ ಮಾಡಿದರೂ ಸ್ಪಂದಿಸದ ಕೆಎಸ್‌ಆರ್‌ಟಿಸಿ ಅಧಿಕಾರಿಗಳ ವಿರುದ್ಧ ಏಕಾಏಕಿ ಇಂದು ರಸ್ತೆ ತಡೆ ಮಾಡಿ ತಮ್ಮೂರಿಗೆ ಬಸ್ ಬಿಡುವಂತೆ ಒತ್ತಾಯಿಸಿದರು. ಇದನ್ನೂ ಓದಿ: ಸರಿಯಾದ ಸಮಯಕ್ಕೆ ಬಾರದ ಬಸ್; ನಿತ್ಯ ಕುದುರೆ ಏರಿ ಶಾಲೆಗೆ ಹೋಗ್ತಿದ್ದಾನೆ ಬಾಲಕ
ಹೆದ್ದಾರಿಯಲ್ಲಿ ಒಂದು ಕಿ.ಮೀ ಗೂ ಅಧಿಕ ಟ್ರಾಫಿಕ್ ಜಾಮ್ ಆಗಿತ್ತು. ಸ್ಥಳಕ್ಕೆ ಹಿರೇಬಾಗೇವಾಡಿ ಪೊಲೀಸರ ಭೇಟಿ ನೀಡಿ ಬಸ್ಸು ವ್ಯವಸ್ಥೆ ಕಲ್ಪಿಸುವ ಭರವಸೆ ನೀಡಿದ ಬಳಿಕ ವಿದ್ಯಾರ್ಥಿಗಳು ಪ್ರತಿಭಟನೆಯನ್ನು ಕೈಬಿಟ್ಟರು.
ಬೆಂಗಳೂರು: ಪರಿಷತ್ ಸದಸ್ಯ ಎನ್ ರವಿಕುಮಾರ್ (Ravikumar) ಮತ್ತೊಂದು ವಿವಾದ ಮೈಮೇಲೆ ಎಳೆದುಕೊಂಡಿದ್ದಾರೆ. ಜೂನ್ 30 ರಂದು ನಡೆದ ಬಿಜೆಪಿ ಪ್ರತಿಭಟನೆ ವೇಳೆ ಸಿಎಸ್ ಶಾಲಿನಿ ರಜನೀಶ್ (Shalini Rajneesh) ಬಗ್ಗೆ ರವಿಕುಮಾರ್ ಅವಹೇಳನಕಾರಿಯಾಗಿ ಮಾತಾಡಿದ್ದಾರೆನ್ನಲಾದ ವಿಡಿಯೋ ವೈರಲ್ ಆಗಿದೆ. ರವಿಕುಮಾರ್ ಅವರದ್ದೆನ್ನಲಾದ ಈ ಹೇಳಿಕೆ ಬಿಜೆಪಿಗೆ ಭಾರೀ ಮುಜುಗರ ತಂದಿದೆ.
ಈಗ ಸಿಎಸ್ ವಿರುದ್ಧ ಆಡಿದ್ದಾರೆನ್ನಲಾದ ಮಾತು ಬಿಜೆಪಿ ಹಿರಿಯರ ಅಸಮಧಾನಕ್ಕೂ ಕಾರಣವಾಗಿದೆ. ನಾಳೆ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿಯವರನ್ನು (Pralhad Joshi) ಬಿಜೆಪಿ ಕಚೇರಿಯಲ್ಲಿ ಭೇಟಿ ಮಾಡಿ ರವಿಕುಮಾರ್ ಸ್ಪಷ್ಟೀಕರಣ ಕೊಡಲಿದ್ದಾರೆ. ಇದನ್ನೂಓದಿ: ಚಾಮುಂಡಿ ಬೆಟ್ಟದಲ್ಲಿ ವಸ್ತ್ರ ಸಂಹಿತೆ ಜಾರಿ ಆಗಲಿ: ಸಂಸದ ಯದುವೀರ್
ಕಲಬುರಗಿ ಜಿಲ್ಲಾಧಿಕಾರಿ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ ಬಳಿಕ ರವಿಕುಮಾರ್ ಕ್ಷಮೆ ಕೇಳಿದ್ದರೂ ಕೇಸ್ ದಾಖಲಾಗಿತ್ತು. ಈಗ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿ ರವಿಕುಮಾರ್ ಎಡವಟ್ಟು ಮಾಡಿಕೊಂಡಿದ್ದಾರೆ. ಸಿಎಸ್ ವಿರುದ್ಧ ಆಡಿದ ಮಾತು ಬಿಜೆಪಿ ಹಿರಿಯರಿಗೆ ಅಸಮಾಧಾನ ತಂದಿದೆ.
ಪದೇ ಪದೇ ಇಂತ ಹೇಳಿಕೆ ನೀಡಿ ಪಕ್ಷಕ್ಕೆ ಮುಜುಗರ ತಂದಿದ್ದೀರಿ ಎಂದು ಪಕ್ಷದಲ್ಲೂ ಕೆಲವರು ಬೇಸರ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಸದ್ಯ ಹೈದರಾಬಾದ್‌ನಲ್ಲಿ ಇರುವ ಪರಿಷತ್ ಸದಸ್ಯ ಎನ್ ರವಿಕುಮಾರ್ ಇಂದು ರಾತ್ರಿ ವಾಪಸ್ ಆಗಲಿದ್ದಾರೆ. ನಾಳೆ ಜೋಷಿ ಅವರನ್ನು ಭೇಟಿ ಮಾಡಲಿದ್ದಾರೆ.
ಬುಧವಾರವೇ ಈ ಸಂಬಂಧ ಯೂತ್ ಕಾಂಗ್ರೆಸ್‌ನಿಂದ ವಿಧಾನಸೌಧ ಪೊಲೀಸ್ ಠಾಣೆಗೆ ದೂರು ಕೊಡಲಾಗಿದೆ. ಮಹಿಳಾ ಆಯೋಗ ಹಾಗೂ ಸಭಾಪತಿ ಹೊರಟ್ಟಿಗೂ ದೂರು ಕೊಡಲಾಗಿದೆ.
ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಜೂನ್ 30 ರಂದು ವಿಧಾನಸೌಧದ ಗಾಂಧಿ ಪ್ರತಿಮೆಯ ಬಳಿ ಪ್ರತಿಭಟಿಸುತ್ತಿರುವ ವೇಳೆ ಉಪ ಪೊಲೀಸ್ ಆಯುಕ್ತ (ವಿಧಾನಸೌಧ ಭದ್ರತೆ) ಎಂ ಎನ್ ಕರಿಬಸವನಗೌಡ ಅವರೊಂದಿಗೆ ಮಾತನಾಡುತ್ತಿರುವಾಗ ರವಿಕುಮಾರ್ ಶಾಲಿನಿ ರಜನೀಶ್ ʼರಾತ್ರಿಯಿಡೀ ಸರ್ಕಾರಕ್ಕೆ, ಇಡೀ ದಿನ ಸಿಎಂಗಾಗಿ ಕೆಲಸ ಮಾಡುತ್ತಾರೆʼಎಂದು ಹೇಳಿಕೆ ನೀಡಿದ್ದರು.ಈ ಹೇಳಿಕೆಯ ವಿಡಿಯೋ ಹರಿದಾಡಲು ಆರಂಭವಾಗುತ್ತಿದ್ದಂತೆ ಇದೀಗ ಕೆಪಿಸಿಸಿ (KPCC) ಪ್ರಧಾನ ಕಾರ್ಯದರ್ಶಿ ಎಸ್.ಮನೋಹರ್ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.
ಚಿಕ್ಕಬಳ್ಳಾಪುರ: ವಿವಾದಿತ ಅಂಬೇಡ್ಕರ್ ಪ್ರತಿಮೆ ತೆರವು ಖಂಡಿಸಿ ದಲಿತ ಸಂಘಟನೆಗಳು ಕರೆ ನೀಡಿದ್ದ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಅಂದಹಾಗೆ ಚಿಂತಾಮಣಿ ನಗರದ ಸರ್ಕಾರಿ ಪ್ರೌಢಶಾಲೆಯ ಆವರಣದಲ್ಲಿ ಕಳೆದ 8 ತಿಂಗಳ ಹಿಂದೆ ಅಂಬೇಡ್ಕರ್ ಪ್ರತಿಮೆಯನ್ನ ರಾತ್ರೋರಾತ್ರಿ ಸ್ಥಾಪನೆ ಮಾಡಲಾಗಿತ್ತು. ಇದು ಚಿಂತಾಮಣಿಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವೆ ರಾಜಕೀಯ ಪ್ರತಿಷ್ಠೆಯಾಗಿ ವಿವಾದದ ರೂಪ ಪಡೆದುಕೊಂಡಿತ್ತು. ಇದನ್ನೂ ಓದಿ: ಸೂರ್ಯ ನಟನೆಯ ಸಿನಿಮಾದಲ್ಲಿ ವಿಜಯ್ ದೇವರಕೊಂಡ?
ಈ ಪ್ರತಿಮೆಯನ್ನ ತಾಲೂಕು ಆಡಳಿತ ನ್ಯಾಯಾಲಯದ ನಿದೇರ್ಶನದ ಮೇರೆಗೆ ತೆರವು ಮಾಡಿದ್ದು ಇದನ್ನ ಖಂಡಿಸಿ ದಲಿತ ಸಂಘಟನೆಗಳು ಚಿಂತಾಮಣಿ ಬಂದ್‌ಗೆ ಕರೆ ನೀಡಿದ್ದವು. ಬಂದ್ ಹಿನ್ನೆಲೆಯಲ್ಲಿ ದಲಿತ ಸಂಘಟನೆಗಳು ಮುಖಂಡರನ್ನ ಮುಂಜಾಗ್ರತಾ ಕ್ರಮವಾಗಿ ವಶಕ್ಕೆ ಪಡೆಯಲಾಗಿತ್ತು. ಇದನ್ನ ಖಂಡಿಸಿ ದಲಿತ ಕಾಲೋನಿ ನಿವಾಸಿಗಳು ಪ್ರತಿಭಟನೆ ನಡೆಸಿ ಪೊಲೀಸರ ವಿರುದ್ಧ ಭಾರೀ ಆಕ್ರೋಶ ಹೊರ ಹಾಕಿದರು. ಇದನ್ನೂ ಓದಿ: ರೆಸಾರ್ಟ್‌ನಲ್ಲಿ ಅಪ್ರಾಪ್ತೆಯ ಮೇಲೆ ಗ್ಯಾಂಗ್ ರೇಪ್ – ಸಿಪಿಐ ಪುತ್ರ ಸೇರಿ ಮೂವರು ಅರೆಸ್ಟ್
ಚಿಕ್ಕಬಳ್ಳಾಪುರ: ಗ್ರಾಮದ ಅಂಬೇಡ್ಕರ್ ಭವನದ (Ambedkar Bhavan) ಮುಂಭಾಗ ಖಾಲಿ ಜಾಗದಲ್ಲಿ ರಾತ್ರೋ ರಾತ್ರಿ ಅಂಬೇಡ್ಕರ್ ಪ್ರತಿಮೆ ಸ್ಥಾಪನೆ ಮಾಡಲಾಗಿದೆ. ಇದರಿಂದ ಮತ್ತೊಂದು ಸಮುದಾಯ ಅಂಬೇಡ್ಕರ್ ಪ್ರತಿಮೆಗೆ ಅಡ್ಡಲಾಗಿ ವಾಲ್ಮೀಕಿ ಭಾವಚಿತ್ರದ ನಾಮಫಲಕ ಅನಾವರಣ ಮಾಡಲಾಗಿದೆ. ಇದರಿಂದ ಎರಡು ಸಮುದಾಯಗಳ ನಡುವೆ ಜಟಾಪಟಿ ನಡೆದು ಗ್ರಾಮದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣ ಆಗಿರುವ ಘಟನೆ ಚಿಕ್ಕಬಳ್ಳಾಪುರ (Chikkaballapur) ಜಿಲ್ಲೆಯ ಗೌರಿಬಿದನೂರು ತಾಲ್ಲೂಕಿನ ಹಂಪಸಂದ್ರ ಗ್ರಾಮದಲ್ಲಿ ನಡೆದಿದೆ.
ಅಂದಹಾಗೆ ಗ್ರಾಮದಲ್ಲಿಂದು ಅಂಬೇಡ್ಕರ್ ಜಯಂತಿ ಇದ್ದು ರಾತ್ರೋ ರಾತ್ರಿ ಗ್ರಾಮದಲ್ಲಿ ಇರುವ ಅಂಬೇಡ್ಕರ್ ಭವನದ ಮುಂದೇ ಇರುವ ಸರ್ಕಾರಿ ಖಾಲಿ ಜಾಗದ ಸ್ಥಳದಲ್ಲಿ ಅಂಬೇಡ್ಕರ್ ಪುತ್ಥಳಿ ಸ್ಥಾಪಿಸಿದ್ದಾರೆ. ಈಗ ಅದೇ ಜಾಗದಲ್ಲಿ ಹಂಪಸಂದ್ರದ ಶ್ರೀ ಮಹರ್ಷಿ ವಾಲ್ಮೀಕಿ ಯುವಕರ ಸಂಘದಿಂದ ವಾಲ್ಮೀಕಿ ನಾಮಫಲಕ ಇಟ್ಟಿದ್ದಾರೆ. ಇದ್ರಿಂದ ಎರಡು ಸಮುದಾಯಗಳ ನಡುವೆ ವಿವಾದ ಸೃಷ್ಟಿಯಾಗಿ ಪರ-ವಿರೋಧದ ಪ್ರತಿಭಟನೆಗಳು ನಡೆಯುತ್ತಿವೆ. ಎರಡು ಗುಂಪನ್ನು ಚದುರಿಸಲು ಪೊಲೀಸರು ಹರಸಾಹಸಪಡುತ್ತಿದ್ದು ಲಘು ಲಾಠಿ ಪ್ರಹಾರ ಸಹ ನಡೆಸಿದ್ದಾರೆ.
ಒಂದು ಕಡೆ ಅಂಬೇಡ್ಕರ್ ಫೋಟೋ ಇಟ್ಟುಕೊಂಡು ರಸ್ತೆಯಲ್ಲಿ ಪ್ರತಿಭಟನೆಗೆ ಕುಳಿತಿದ್ದು ಮತ್ತೊಂದು ಕಡೆ ಮಹರ್ಷಿ ವಾಲ್ಮೀಕಿಗೆ ಫೋಟೋ ಇಟ್ಟುಕೊಂಡು ರಸ್ತೆಯಲ್ಲಿ ಧರಣಿ ಕುಳಿತಿದ್ದಾರೆ. ಗ್ರಾಮದಲ್ಲಿ ಉದ್ವಿಗ್ನ ಸ್ಥಿತಿ ಉಂಟಾಗಿದ್ದು ಪೋಲಿಸರು ಸರ್ಪಗಾವಲು ಹಾಕಿದ್ದಾರೆ. ಎರಡು ಸಮುದಾಯದ ನಡುವೆ ಶಾಂತಿ ಸಭೆ ಮಾಡಲು ತಹಸೀಲ್ದಾರ್ ಮಹೇಶ್ ಪತ್ರಿ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಡಿವೈಎಸ್ಪಿ ಶಿವಕುಮಾರ್ ನೇತೃತ್ವದಲ್ಲಿ ಪೊಲೀಸರ ಸರ್ಪಗಾವಲು ಹಾಕಲಾಗಿದ್ದು ಗ್ರಾಮದಲ್ಲಿ ಉದ್ವಿಗ್ನ ವಾತಾವರಣ ಮುಂದುವರೆದಿದೆ.
ಬೆಂಗಳೂರು: ಪಾಕಿಸ್ತಾನಕ್ಕಿಂತ ಮೊದಲು ದೇಶದ ಒಳಗಿರುವ ಸ್ಲೀಪರ್ ಸೆಲ್‌ಗಳನ್ನು ಮಟ್ಟ ಹಾಕಬೇಕಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ (R Ashok) ಹೇಳಿದ್ದಾರೆ.
ಮಲ್ಲೇಶ್ವರಂನ (Malleshwaram) ಬಿಜೆಪಿ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅವರಿಗೆ ನೆರವು ಕೊಡುವುದು, ಬೇಲ್ ಕೊಡಿಸುವುದು, ಕಾನೂನು ಸಹಾಯ ಮಾಡುವುದು ನಡೆಯುತ್ತಿದೆ. ಇಂತಹವರನ್ನು ಕೂಡ ಬಿಡಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಸ್ಪಷ್ಟವಾಗಿ ಹೇಳಿದ್ದಾರೆ ಎಂದರು. ಇದನ್ನೂ ಓದಿ: ಮೂರೇ ದಿನದ ಅಂತರದಲ್ಲಿ ಕಾಡಾನೆ ದಾಳಿಗೆ 2 ಜೀವ ಬಲಿ – ಗ್ರಾಮಸ್ಥರಲ್ಲಿ ಆತಂಕ
ಎಲ್ಲಾ ವಲಯ ಆಯುಕ್ತರ ಕಚೇರಿಯ ಮುಂದೆ ಏ. 28ರಿಂದ 3 ದಿನಗಳ ಕಾಲ ಕಾಂಗ್ರೆಸ್ (Congress) ಸರ್ಕಾರ ಮಾಡಿದ ಬೆಲೆ ಏರಿಕೆಯ ವಿರುದ್ಧ ಹೋರಾಟ ಮಾಡಲಾಗುತ್ತದೆ. ಹಾಲು, ವಿದ್ಯುತ್ ಹಾಗೂ ಆಸ್ತಿ ತೆರಿಗೆ ಹಾಗೂ ಪಾರ್ಕಿಂಗ್ ಶುಲ್ಕದ ಬಗ್ಗೆ ಹೋರಾಟ ಮಾಡಲಾಗುವುದು. ಬೆಂಗಳೂರಿನ (Bengaluru) ಜನರ ಮೇಲೆ ಕಾಂಗ್ರೆಸ್ ಭರಪೂರ ತೆರಿಗೆಗಳನ್ನು ಹೇರಿದೆ. ಪ್ರತಿ ಮನೆಗಳಿಗೆ ಹೋಗಿ ಕರಪತ್ರ ಹಂಚಲಾಗುವುದು. ಬಿಬಿಎಂಪಿ ಚುನಾವಣೆಯನ್ನು ಸರ್ಕಾರ ಮುಂದೂಡುತ್ತಿದೆ. ಈ ಬಗ್ಗೆ ಕೂಡ ಹೋರಾಟ ಮಾಡಲಾಗುವುದು ಎಂದು ತಿಳಿಸಿದರು. ಇದನ್ನೂ ಓದಿ: ಕಸ್ತೂರಿ ರಂಗನ್ ನಿಧನಕ್ಕೆ ಬಸವರಾಜ ಬೊಮ್ಮಾಯಿ ಸಂತಾಪ
ಶಾಸಕರ ಅಮಾನತಿಗೆ ಸಂಬಂಧಿಸಿದಂತೆ ಸ್ಪೀಕರ್ ಜೊತೆ ಚರ್ಚಿಸಲಾಗಿದೆ. ಈ ಅಮಾನತು ಆ ಒಂದು ಅಧಿವೇಶನಕ್ಕೆ ಮಾತ್ರ ಸೀಮಿತವಾಗಬೇಕು. ಅದನ್ನು ಬಿಟ್ಟು ಹೊರಗೆ ಭತ್ಯೆ ಕೊಡುವುದಿಲ್ಲ ಎನ್ನುವುದು ಸರಿಯಲ್ಲ. ಇದು ಅಸಂವಿಧಾನಿಕವಾದ ಕ್ರಮ ಎಂದರು.
ಕೆಎಎಸ್ ಪರೀಕ್ಷೆಗೆ ಸಂಬಂಧಿಸಿದಂತೆ ಹೈಕೋರ್ಟ್ ತೀರ್ಪು ನೀಡಿದೆ. ಅಧಿವೇಶನದಲ್ಲಿ ನಾನು ಈ ವಿಷಯ ಪ್ರಸ್ತಾಪಿಸಿದಾಗ ತೀರ್ಪು ಬಂದ ಮೇಲೆ ಮರುಪರೀಕ್ಷೆ ಬಗ್ಗೆ ಮುಕ್ತ ಮನಸ್ಸಿನಿಂದ ಪರಿಶೀಲನೆ ನಡೆಸುವುದಾಗಿ ಸಿಎಂ ಭರವಸೆ ನೀಡಿದ್ದರು. ಈಗ ಯಾವ ನಿರ್ಧಾರ ಕೈಗೊಳ್ಳುತ್ತಾರೆ ಎಂಬುದನ್ನು ಗಮನಿಸಿ ಮುಂದೆ ಅಗತ್ಯ ಬಿದ್ದರೆ ಮುಂದೆಯೂ ಹೋರಾಟ ಮಾಡಲಾಗುವುದು ಎಂದು ಹೇಳಿದರು. ಇದನ್ನೂ ಓದಿ: ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ಅನುಷ್ಕಾ ಶೆಟ್ಟಿ ಬ್ಯುಸಿ
ಕಾಂಗ್ರೆಸ್ ನಾಯಕರು ದೇಶದ ಯೋಧರ ಬಗ್ಗೆ ಅನುಮಾನ ವ್ಯಕ್ತಪಡಿಸಿದರೆ, ಮತ್ತೆ ಇವರಿಗೆ ಯಾರ ಮೇಲೆ ನಂಬಿಕೆ ಇದೆ? ಇಡೀ ದೇಶ ಒಂದಾಗಿ ಭಯೋತ್ಪಾದಕ ದಾಳಿಯನ್ನು ಖಂಡಿಸಬೇಕು. ಉಗ್ರರು ಹಿಂದೂ ಎಂದು ಹೇಳಿಯೇ ಹುಡುಕಿ ಕೊಂದಿದ್ದಾರೆ. ಬೇಹುಗಾರಿಕೆ ಸರಿಯಲ್ಲ, ಯೋಧರು ಸರಿಯಲ್ಲ ಎಂದು ಟೀಕೆ ಮಾಡುವುದು ಸರಿಯಿಲ್ಲ. ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟವಾದಾಗ ಯಾರು ವಿಫಲರಾಗಿದ್ದರು. ಕುಕ್ಕರ್ ಬಾಂಬ್ ಸ್ಫೋಟಗೊಂಡಾಗ ಯಾರು ವಿಫಲರಾಗಿದ್ದರು. ಸಚಿವರ ವಿರುದ್ಧ ಹನಿಟ್ರ‍್ಯಾಪ್ ನಡೆಯುತ್ತಿರುವಾಗ ಯಾರು ವಿಫಲರಾಗಿದ್ದಾರೆ. ಇಂತಹ ಕಾಂಗ್ರೆಸ್ ಪಕ್ಷ ದೇಶದ ಯೋಧರ ಬಗ್ಗೆ ಮಾತಾಡುವುದು ಬೇಡ ಎಂದರು.
ಮಂಗಳೂರು: ವಕ್ಫ್ ತಿದ್ದುಪಡಿ ಕಾಯ್ದೆ (Waqf Amendment Act) ಜಾರಿಗೊಳಿಸಿರುವ ಕೇಂದ್ರ ಸರ್ಕಾರದ ವಿರುದ್ಧ ಮಂಗಳೂರಿನ ಅಡ್ಯಾರ್‌ನಲ್ಲಿ ಶುಕ್ರವಾರ ಬೃಹತ್ ಪ್ರತಿಭಟನೆ ನಡೆಯಿತು. ಈ ಸಂದರ್ಭದಲ್ಲಿ ಪ್ರತಿಭಟನಾಕಾರರಿಗೆ (Protester) ಪೊಲೀಸ್ ಅಧಿಕಾರಿಯ ಕಾರಿನಲ್ಲೇ ಡ್ರಾಪ್ ಕೊಡಲಾಗಿದೆ ಎಂಬ ಆರೋಪ ಕೇಳಿಬಂದಿದೆ.
ಹೌದು. ವಕ್ಫ್ ಕಾಯ್ದೆ ವಿರೋಧಿಸಿ ರಾಷ್ಟ್ರೀಯ ಹೆದ್ದಾರಿ 73ರ ಸಮೀಪದ ಅಡ್ಯಾರ್ ಶಾ ಮೈದಾನದಲ್ಲಿ ಬೃಹತ್ ಪ್ರತಿಭಟನಾ ಸಭೆ ನಡೆದಿತ್ತು. ಈ ಸಂದರ್ಭದಲ್ಲಿ ರಾಷ್ಟ್ರೀಯ ಹೆದ್ದಾರಿ ಕಿಲೋಮೀಟರ್‌ಗಟ್ಟಲೇ ಸ್ತಬ್ಧವಾಗಿತ್ತು. ಹೆದ್ದಾರಿ ಬಂದ್ ಮಾಡಬಾರದು ಎಂಬ ಹೈಕೋರ್ಟ್ ಸೂಚನೆ ಇದ್ದರೂ, ಪ್ರತಿಭಟನಾಕಾರರ ಗುಂಪು ಉದ್ದೇಶಪೂರ್ವಕವಾಗಿ ಹೆದ್ದಾರಿಯನ್ನು ಅಲ್ಲಲ್ಲಿ ಬಂದ್ ಮಾಡಿತ್ತು. ಇದನ್ನೂ ಓದಿ: ಮಂಗಳೂರಿನಲ್ಲಿ ವಕ್ಫ್ ಕಾಯ್ದೆ ವಿರುದ್ಧ ಹೋರಾಟ
ಮತ್ತೊಂದೆಡೆ ವಾಹನಗಳು ಕಿಲೋಮೀಟರ್ ಗಟ್ಟಲೆ ರಸ್ತೆಯಲ್ಲಿ ನಿಂತಿದ್ದವು, ಪೊಲೀಸರು ಹರಸಾಹಸ ಪಟ್ಟು ವಾಹನಗಳನ್ನು ಮುಂದಕ್ಕೆ ಕಳುಹಿಸುತ್ತಿದ್ದರು. ಈ ಸಂದರ್ಭದಲ್ಲಿ ಪ್ರತಿಭಟನೆ ಮುಗಿದ ಬಳಿಕ ಕೆಲ ಪ್ರತಿಭಟನಾಕಾರರಿಗೆ ಮಂಗಳೂರು ಟ್ರಾಫಿಕ್ ಎಸಿಪಿ ನಜ್ಮಾ ಫಾರೂಕಿ ಅವರು ಬಳಸುವ ಕಾರಿನಲ್ಲಿ ಸೈರನ್, ಎಮರ್ಜೆನ್ಸಿ ಲೈಟ್ ಹಾಕಿಕೊಂಡು ಡ್ರಾಪ್ ನೀಡಲಾಗಿದೆ.
ಮಡಿಕೇರಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಕ್ಫ್ ತಿದ್ದುಪಡಿ ಕಾಯ್ದೆಯನ್ನು (Waqf Amendment Act) ವಿರೋಧಿಸಿ ಇಂದು ಮಡಿಕೇರಿ (Madikeri) ನಗರದಲ್ಲಿ ಕೊಡಗು ಜಿಲ್ಲಾ ಸುನ್ನಿ ಸಮನ್ವಯ ಸಮಿತಿ ವತಿಯಿಂದ ಪ್ರತಿಭಟನಾ ಮೆರವಣಿಗೆ ನಡೆಯಿತು.
ಮಡಿಕೇರಿ ನಗರದ ಕಾರ್ಯಪ್ಪ ಸರ್ಕಲ್ ಬಳಿಯಿಂದ ಗಾಂಧಿಮೈದಾನದವರೆಗೆ ಸಾವಿರಾರು ಸಂಖ್ಯೆಯಲ್ಲಿ ಮುಸ್ಲಿಮರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗುವ ಮೂಲಕ ತಮ್ಮ ಆಕ್ರೋಶವನ್ನು ಹೋರ ಹಾಕಿದರು. ಇನ್ನೂ ಇದೇ ಸಂದರ್ಭದಲ್ಲಿ ಮಾತಾನಾಡಿದ ಸಮಿತಿಯ ಉಪಾಧ್ಯಕ್ಷ ಕೆ.ಎ.ಯಾಕೂಬ್, ಮುಸ್ಲಿಮರ ಬೇಡಿಕೆಗಳನ್ನು ಸರ್ಕಾರದ ಮುಂದಿಡಲು ಒಗ್ಗಟ್ಟಿನ ಹೋರಾಟ ನಡೆಸುವುದಕ್ಕಾಗಿ ಇಬ್ಬರು ಖಾಝಿಗಳ ನೇತೃತ್ವದಲ್ಲಿ ಜಿಲ್ಲಾ ಸುನ್ನಿ ಸಮನ್ವಯ ಸಮಿತಿಯನ್ನು ರಚಿಸಲಾಗಿದೆ. ವಕ್ಫ್ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಲಾಗಿದೆ. ನಮಗೆ ಕೇಂದ್ರ ಸರ್ಕಾರದಿಂದ ಮುಂದಿನ ದಿನಗಳಲ್ಲಿ ಸಾಕಷ್ಟು ತೊಂದರೆ ಆಗಲಿದೆ ಎಂದು ತಿಳಿಸಿದರು. ಇದನ್ನೂ ಓದಿ: ಮುರ್ಷಿದಾಬಾದ್ ಹಿಂಸಾಚಾರ| ಬಿಜೆಪಿ, ಬಿಎಸ್‌ಎಫ್ ಕೈವಾಡವಿದೆ: ಮಮತಾ ಬ್ಯಾನರ್ಜಿ
ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್ ಮಾತಾನಾಡಿ, ಬಿಜೆಪಿ ಅವರು ಅಧಿಕಾರದ ದಾಹಕ್ಕಾಗಿ ವಕ್ಫ್ ಬಿಲ್ ಕಾಯ್ದೆ ತಂದಿದ್ದಾರೆ. ವಕ್ಫ್ ಪ್ರಾಪರ್ಟಿಗಳು ಸಂಪೂರ್ಣವಾಗಿ ಸರ್ಕಾರದ ಸುಭದ್ರೆತೆಗೆ ಬರಬೇಕು ಎಂದು ಮಾಡಿದ್ದಾರೆ. ಇಡೀ ದೇಶದಲ್ಲಿ 37 ಲಕ್ಷ ಎಕ್ರೆ ಜಾಗ ವಕ್ಫ್ ಜಾಗ ವಕ್ಫ್ ಆಸ್ತಿಗೆ ಸೇರಿದೆ. ಅದನ್ನು ಕಂಟ್ರೋಲ್ ಮಾಡಲು ಮುಂದಾಗಿದೆ. ಬಿಜೆಪಿಯವರು ಈ ಕಾಯ್ದೆ ತಂದಿರುವುದೇ ಒಡೆದು ಅಳುವ ನೀತಿಯನ್ನು ಸಾರುವುದಕ್ಕೆ ಎಂದು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಕ್ಯಾಬಿನೆಟ್ ಸಭೆಯಲ್ಲಿ ಲಿಂಗಾಯತ ಸಮುದಾಯಕ್ಕೆ ಆಗೋ ಸಮಸ್ಯೆ ಬಗ್ಗೆ ಚರ್ಚೆ: ಎಂ.ಬಿ ಪಾಟೀಲ್
– ಟೈರ್‌ಗೆ ಬೆಂಕಿ ಹಚ್ಚಿ ಪ್ರತಿಭಟನಾಕಾರರ ಆಕ್ರೋಶ – ಆರೋಪಿ ಗಲ್ಲಿಗೇರಿಸುವಂತೆ ಒತ್ತಾಯಿಸಿ ಠಾಣೆ ಮುಂದೆ ಪ್ರತಿಭಟನೆ
ಹುಬ್ಬಳ್ಳಿ: ಸೈಕೋಪಾತ್ ಒಬ್ಬ 5 ವರ್ಷದ ಬಾಲಕಿಯ ಅತ್ಯಾಚಾರಕ್ಕೆ ಯತ್ನಿಸಿ ಕೊಲೆ ಮಾಡಿರುವ ಘಟನೆ ಅಶೋಕ್ ನಗರ ಪೊಲೀಸ್ ಠಾಣೆ (Ashok nagara Police Station) ವ್ಯಾಪ್ತಿಯಲ್ಲಿ ನಡೆದಿದೆ. ಹತ್ಯೆ ಖಂಡಿಸಿ ಪೋಷಕರು ಹಾಗೂ ಸಾರ್ವಜನಿಕರು ಪೊಲೀಸ್ ಠಾಣೆ ಎದುರು ತೀವ್ರ ಪ್ರತಿಭಟನೆ ನಡೆಸಿದರು.
ಬಿಹಾರ (Bihara) ಮೂಲದ ಸೈಕೋಪಾತ್, ಬಾಲಕಿಯನ್ನ ಶೆಡ್‌ಗೆ ಕರೆದೊಯ್ದು ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಬಾಲಕಿ ಚೀರಾಟ ಕೇಳಿ ಅಲ್ಲೇ ಇದ್ದ ಸ್ಥಳೀಯರು ಶೆಡ್‌ನತ್ತ ಬಂದಿದ್ದಾರೆ. ಜನ ಬರುತ್ತಿರುವುದನ್ನು ಕಂಡ ಸೈಕೋಪಾತ್ ಭಯದಿಂದ ಬಾಲಕಿಯ ಕತ್ತು ಹಿಸುಕಿ ಕೊಲೆ ಮಾಡಿ, ಎಸ್ಕೇಪ್ ಆಗಿದ್ದಾನೆ. ಇದನ್ನೂ ಓದಿ: ಹುಬ್ಬಳ್ಳಿ | ಸೈಕೋಪಾತ್‌ನಿಂದ 5 ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಕೊಲೆ
ಬಾಲಕಿ ಅತ್ಯಾಚಾರಕ್ಕೆ ಯತ್ನಿಸಿ ಕೊಲೆ ಹಿನ್ನಲೆ ಭುಗಿಲೆದ್ದ ಜನರು ಮತ್ತು ಪೋಷಕರು ಆಕ್ರೋಶ ಹೊರಹಾಕಿದ್ದಾರೆ. ಅಶೋಕ ನಗರ ಪೊಲೀಸ್ ಠಾಣೆ ಎದುರು ಪ್ರತಿಭಟಿಸಿದ್ದು, ಆರೋಪಿಗೆ ತಕ್ಕ ಶಿಕ್ಷೆ ನೀಡುವಂತೆ ಒತ್ತಾಯಿಸಿದರು. ಸ್ಥಳಕ್ಕಾಗಮಿಸಿದ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಪ್ರತಿಭಟನಾಕಾರರ ಮನವೊಲಿಸಲು ಪ್ರಯತ್ನಿಸಿದರು. ಕಮಿಷನರ್ ಮಾತಿಗೆ ಒಪ್ಪದ ಪ್ರತಿಭಟನಾಕಾರರು ಠಾಣೆಯ ಮುಂದೆಯೇ ಕುಳಿತು ಆರೋಪಿಯ ಪತ್ತೆಗೆ ಆಗ್ರಹಿಸಿದರು. ಇದನ್ನೂ ಓದಿ: ಹುಬ್ಬಳ್ಳಿಯಲ್ಲಿ 5 ವರ್ಷದ ಬಾಲಕಿ ಕೊಲೆ ಕೇಸ್ – ಆರೋಪಿ ಕಾಲಿಗೆ ಪೊಲೀಸರಿಂದ ಗುಂಡೇಟು
ಹತ್ಯೆ ಖಂಡಿಸಿ ಹುಬ್ಬಳ್ಳಿ ಕಿಮ್ಸ್ ಗೇಟ್ ಎದುರು ಕನ್ನಡಪರ ಸಂಘಟನೆಗಳು ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ಆರೋಪಿಯನ್ನು ಗಲ್ಲಿಗೆ ಏರಿಸಿ ಎಂದು ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು. ಅಲ್ಲದೇ ಎಲ್ಲಿದ್ದಿರಪ್ಪಾ ಸಂಸದರೇ, ಶಾಸಕರೇ, ನೇಹಾ ಹತ್ಯೆ ವೇಳೆ ಮಾತಾಡುತ್ತಿದ್ದವರು ಈಗ ಎಲ್ಲಿ ಎಂದು ಪ್ರತಿಭಟನಾಕಾರರು ಜನಪ್ರತಿನಿಧಿಗಳ ಮೇಲೆ ಆಕ್ರೋಶ ವ್ಯಕ್ತಪಡಿಸಿದರು. ರಸ್ತೆಯಲ್ಲಿ ಟೈರ್‌ಗೆ ಬೆಂಕಿ ಹಚ್ಚಿ, ರಸ್ತೆ ತಡೆದು ಪ್ರತಿಭಟನಾಕಾರರು ಆಕ್ರೋಶ ಹೊರಹಾಕಿದರು. ಈ ವೇಳೆ ಪ್ರತಿಭಟನಾಕಾರರ ಬಳಿ ವಾಹನ ಓಡಾಟಕ್ಕೆ ಅನುವು ಮಾಡಿಕೊಡುವಂತೆ ಪೊಲೀಸರು ಮನವಿ ಮಾಡಿದರು.
– ಶಿರಸಿಯಲ್ಲಿ ತನಿಖೆ ನೆಪದಲ್ಲಿ ಹಲ್ಲೆ ನಡೆಸಿದ್ರಾ ಎಸ್‌ಪಿ?
ಕಾರವಾರ: ವಿಚಾರಣೆ ನೆಪದಲ್ಲಿ ಹಿಂದೂ ಸಂಘಟನೆ ಕಾರ್ಯಕರ್ತನನ್ನು ಠಾಣೆಗೆ ಕರೆಸಿ ಎಸ್.ಪಿ ಎಂ.ನಾರಾಯಣ್ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿ ಭಟ್ಕಳದಲ್ಲಿ (Bhatkal) ಬಿಜೆಪಿ ಮುಖಂಡರು ಹಾಗೂ ಹಿಂದೂಪರ ಸಂಘಟನೆ ಕಾರ್ಯಕರ್ತರು ಹೆದ್ದಾರಿ ತಡೆದು ಠಾಣೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ಮಾಡಿದ್ದಾರೆ.
ಮಂಗಳವಾರ ಶಿರಸಿಯಲ್ಲಿ ರೌಡಿಶೀಟರ್ ಪೆರೇಡ್ ಮಾಡಿದ್ದ ಎಸ್.ಪಿ ಎಂ.ನಾರಾಯಣ್‌ರವರು 6 ಪ್ರಕರಣದಲ್ಲಿ ಆರೋಪಿಯಾಗಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಗಡಿಪಾರಾಗಿದ್ದ ಆಟೋ ಚಾಲಕ ಶ್ರೀನಿವಾಸ ನಾಯ್ಕರನ್ನು ಮಂಗಳವಾರ ಬೆಳಗ್ಗೆ ಭಟ್ಕಳ ಪೊಲೀಸರು ಶಿರಸಿಗೆ ಕರೆದೊಯ್ದಿದ್ದರು. ಶಿರಸಿ ನಗರ ಠಾಣೆಯಲ್ಲಿ ಇದ್ದ ಎಸ್.ಪಿ ಎಂ.ನಾರಾಯಣ್‌ರವರು ತನಿಖೆ ನೆಪದಲ್ಲಿ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ಇದನ್ನೂ ಓದಿ: ಡೀಸೆಲ್ ಬೆಲೆ ಏರಿಕೆ – ಖಾಸಗಿ ಬಸ್ ಪ್ರಯಾಣ ದರ ದುಬಾರಿ!
ಈ ಆರೋಪದ ಬೆನ್ನಲ್ಲೇ ಬಿಜೆಪಿ, ವಿಶ್ವ ಹಿಂದೂ ಪರಿಷತ್ ಸೇರಿದಂತೆ ವಿವಿಧ ಸಂಘಟನೆಗಳು ಭಟ್ಕಳ ಶಹರಾ ಠಾಣೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ಮಾಡಿದರು. ಪ್ರತಿಭಟನೆಯಲ್ಲಿ ಮಾಜಿ ಬಿಜೆಪಿ ಶಾಸಕ ಸುನೀಲ್ ನಾಯ್ಕ ಸೇರಿದಂತೆ ಹಲವು ಮುಖಂಡರು ಭಾಗಿಯಾಗಿದ್ದರು. ಪ್ರತಿಭಟನಾ ಸ್ಥಳಕ್ಕೆ ಎಸ್.ಪಿ ಆಗಮಿಸಿ ಕ್ಷಮೆ ಕೋರುವಂತೆ ಪ್ರತಿಭಟನಾಕಾರರು ಆಗ್ರಹಿಸಿದರು. ಈ ವೇಳೆ ಭಟ್ಕಳದ ಡಿವೈಎಸ್‌ಪಿ ಮಹೇಶ್ ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದರು.
ಚಾಮರಾಜನಗರ: ಬಂಡೀಪುರದಲ್ಲಿ(Bandipura) ರಾತ್ರಿ ವಾಹನ ಸಂಚಾರ ನಿಷೇಧ ತೆರವುಗೊಳಿಸುವ ಪ್ರಯತ್ನಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ. ಬಂಡೀಪುರ ಉಳಿಸಿ ಅಭಿಯಾನಕ್ಕೆ ಭಾರೀ ಬೆಂಬಲ ವ್ಯಕ್ತವಾಗಿದ್ದು, ಭಾನುವಾರ ನಡೆದ ನಮ್ಮ ನಡಿಗೆ ಬಂಡೀಪುರದ ಕಡೆಗೆ ಪಾದಯಾತ್ರೆ ಸಾಕ್ಷಿಯಾಯಿತು.
ಬಂಡೀಪುರ ಅಭಯಾರಣ್ಯದ ಮೂಲಕ ತಮಿಳುನಾಡು(TamilNadu, ಕೇರಳ(Kerala) ರಾಜ್ಯಗಳಿಗೆ 2 ರಾಷ್ಟ್ರೀಯ ಹೆದ್ದಾರಿಗಳು ಹಾದು ಹೋಗಿವೆ. ಇಲ್ಲಿ ವಾಹನಗಳಿಗೆ ಸಿಲುಕಿ ವನ್ಯಜೀವಿಗಳು ಸಾವನ್ನಪ್ಪುತ್ತಿದ್ದ ಹಿನ್ನೆಲೆಯಲ್ಲಿ 2009ರಲ್ಲಿ ರಾತ್ರಿ ವಾಹನ ಸಂಚಾರ ನಿಷೇಧಿಸಲಾಗಿದೆ. ಕೆಲವು ಮಾಫಿಯಾಗಳಿಗೆ ಇದರಿಂದ ಭಾರೀ ಹೊಡೆತ ಬಿದ್ದಿದೆ. ಕೇರಳ ಸರ್ಕಾರವಂತೂ ಇಲ್ಲಿ ವಾಹನ ಸಂಚಾರ ನಿಷೇಧ ತೆರವುಗೊಳಿಸಲು ರಾಜ್ಯ ಸರ್ಕಾರದ ಮೇಲೆ ನಿರಂತರ ಒತ್ತಡ ಹೇರುತ್ತಲೇ ಬಂದಿದೆ. ಇದನ್ನೂ ಓದಿ: ಹುಬ್ಬಳ್ಳಿ | ಭೀಕರ ರಸ್ತೆ ಅಪಘಾತ – ಮೂವರು ಮಹಿಳೆಯರು ಸ್ಥಳದಲ್ಲೇ ಸಾವು
ಇದೀಗ ವಯನಾಡು ಸಂಸದೆ ಪ್ರಿಯಾಂಕಾ ವಾದ್ರಾ ರಾತ್ರಿ ವಾಹನ ಸಂಚಾರ ನಿಷೇಧ ತೆರವಿಗೆ ರಾಜ್ಯ ಕಾಂಗ್ರೆಸ್ ಸರ್ಕಾರದ ಮೇಲೆ ಒತ್ತಡ ಹೇರುತ್ತಿದ್ದಾರೆಂಬ ಮಾತುಗಳು ಕೇಳಿಬರುತ್ತಿವೆ. ಇದರ ಜೊತೆಗೆ ವಯನಾಡ್‌ನಲ್ಲಿ ನಡೆದ ಕಾಂಗ್ರೆಸ್ ಕೃತಜ್ಞತಾ ಸಮಾವೇಶವೊಂದರಲ್ಲಿ ಪಾಲ್ಗೊಂಡಿದ್ದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೂ ಸಹ ರಾತ್ರಿ ಸಂಚಾರ ನಿಷೇಧ ತೆರವು ಮಾಡುವ ಬಗ್ಗೆ ಭರವಸೆ ನೀಡಿದ್ದರು.
ಇತ್ತೀಚಿಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳೊಡನೆ ಸಭೆಯನ್ನು ನಡೆಸಿದ್ದರು. ಈ ಎಲ್ಲಾ ಬೆಳವಣಿಗೆಗಳನ್ನು ಗಮನಿಸಿದರೆ ರಾಜಕೀಯ ಹಿತಾಸಕ್ತಿಗೋಸ್ಕರ ನಿಷೇಧ ತೆರವುಗೊಳಿಸುವ ಆತಂಕ ಎದುರಾಗಿರುವುದರಿಂದ ಬೀದಿಗಿಳಿದು ಬಂಡೀಪುರ ಉಳಿಸಿ ಅಭಿಯಾನ ನಡೆಸುತ್ತಿದ್ದಾರೆ. ಇದನ್ನೂ ಓದಿ: Bhovi Corporation Scam – ಜನರಲ್ ಮ್ಯಾನೇಜರ್ ನಾಗರಾಜಪ್ಪ 14 ದಿನ ಇಡಿ ಕಸ್ಟಡಿಗೆ
ಇಂದು ನಮ್ಮ ನಡಿಗೆ ಬಂಡೀಪುರದ ಕಡೆಗೆ ಎಂಬ ಘೋಷಣೆಯೊಂದಿಗೆ ಪಾದಯಾತ್ರೆ ನಡೆಯಿತು. ಗುಂಡ್ಲುಪೇಟೆ ತಾಲೂಕು ಕಗ್ಗಳದ ಹುಂಡಿಯಿಂದ ಮದ್ದೂರು ಚೆಕ್‌ಪೋಸ್ಟ್‌ವರೆಗೆ ನಡೆದ ಪಾದಯಾತ್ರೆಯಲ್ಲಿ ಪರಿಸರವಾದಿಗಳು, ವನ್ಯಜೀವಿ ಪ್ರೇಮಿಗಳು, ರೈತರು, ಐಟಿ-ಬಿಟಿ ನೌಕರರು, ನಿವೃತ್ತ ಅರಣ್ಯಾಧಿಕಾರಿಗಳು ಹೀಗೆ ಎಲ್ಲಾ ವರ್ಗದ ನೂರಾರು ಮಂದಿ ಭಾಗವಹಿಸಿದ್ದರು. ಕೇರಳದ ಪರಿಸರವಾದಿಗಳು ಸಹ ಈ ಅಭಿಯಾನದಲ್ಲಿ ಪಾಲ್ಗೊಂಡು ಬೆಂಬಲ ವ್ಯಕ್ತಪಡಿಸಿದರು. ಇದನ್ನೂ ಓದಿ: ಬ್ಯಾಕ್ ಟು ಬ್ಯಾಕ್ ಹಿಟ್ ಸಿನಿಮಾ ಕೊಟ್ಟಿದ್ದ ರಶ್ಮಿಕಾಗೆ ಶುರುವಾಯ್ತಾ ಬ್ಯಾಡ್ ಟೈಮ್?
ಪಾದಯಾತ್ರೆ ಬಳಿಕ ಮದ್ದೂರು ಚೆಕ್‌ಪೋಸ್ಟ್ ಬಳಿ ನಡೆದ ಸಮಾವೇಶದ ಸ್ಥಳಕ್ಕೆ ಗುಂಡ್ಲುಪೇಟೆ ಕಾಂಗ್ರೆಸ್ ಶಾಸಕ ಗಣೇಶ್ ಪ್ರಸಾದ್ ಭೇಟಿ ನೀಡಿದ್ದರು. ರಾತ್ರಿ ವಾಹನ ಸಂಚಾರ ನಿಷೇಧ ತೆರವು ಮಾಡುವ ಯಾವುದೇ ಪ್ರಸ್ತಾಪ ಸರ್ಕಾರದ ಮುಂದೆ ಇಲ್ಲ. ಯಾರು ಸಹ ಆತಂಕಪಡುವ ಅಗತ್ಯ ಇಲ್ಲ ಎಂಬ ಭರವಸೆಯ ಮಾತುಗಳನ್ನಾಡಿದರು.
ಕೇರಳದವರು ರಾತ್ರಿ ವೇಳೆ ಹೆಚ್ಚುವರಿ ಬಸ್‌ಗಳ ಸಂಚಾರಕ್ಕೆ ಅವಕಾಶ ಕೇಳಿದ್ದಾರೆ ಅಷ್ಟೇ. ವಯನಾಡು ಸಂಸದೆ ಪ್ರಿಯಾಂಕಾ ಗಾಂಧಿ ಅವರಿಂದ ಯಾವುದೇ ಒತ್ತಡ ಇಲ್ಲ. ಅವರು ಯಾವುದೇ ಪತ್ರವನ್ನು ಬರೆದಿಲ್ಲ. ಯಥಾಸ್ಥಿತಿ ಮುಂದುವರಿಯಲಿ ಎಂಬುದೇ ನನ್ನ ಅಭಿಪ್ರಾಯ ಎನ್ನುವ ಮೂಲಕ ರಾತ್ರಿ ವಾಹನ ಸಂಚಾರ ನಿಷೇಧ ಮುಂದುವರಿಕೆಗೆ ಸಹಮತ ವ್ಯಕ್ತಪಡಿಸಿದರು. ಇದನ್ನೂ ಓದಿ: ಭ್ರಷ್ಟ ಕುಟುಂಬದ ಮಾತು ಕೇಳಿ ನನ್ನನ್ನ ಉಚ್ಚಾಟನೆ ಮಾಡಲಾಗಿದೆ: ಯತ್ನಾಳ್ ನಿಗಿನಿಗಿ ಕೆಂಡ
ಪರಿಸರವಾದಿಗಳ ಹೋರಾಟ ತೀವ್ರ
ಸ್ವಯಂಪ್ರೇರಿತರಾಗಿ ನೂರಾರು ಜನರು ಪಾಲ್ಗೊಳ್ಳುವ ಮೂಲಕ ಬಂಡೀಪುರ ಉಳಿಸಿ ಅಭಿಯಾನ ಸಾರ್ವಜನಿಕ ಚಳವಳಿಯಾಗಿ ರೂಪುಗೊಂಡಿದೆ. ರಾತ್ರಿ ವಾಹನ ಸಂಚಾರ ನಿಷೇಧದ ತೆರವೊಗೊಳಿಸುವುದಿಲ್ಲ ಎಂಬ ಸ್ಪಷ್ಟ ಭರವಸೆ ನೀಡುವವರೆಗೂ ಹಂತ ಹಂತವಾಗಿ ಹೋರಾಟ ತೀವ್ರಗೊಳಿಸಲು ಪರಿಸರವಾದಿಗಳು ನಿರ್ಧರಿಸಿದ್ದಾರೆ. ಇದನ್ನೂ ಓದಿ: ಅಯ್ಯೋ ವಿಧಿಯೇ… ಕಾಲೇಜಿನಲ್ಲಿ ವಿದಾಯ ಭಾಷಣ ಮಾಡುತ್ತಲೇ ಕುಸಿದು ಬಿದ್ದು ವಿದ್ಯಾರ್ಥಿನಿ ಸಾವು
ಗುಂಡ್ಲುಪೇಟೆ ತಾಲೂಕಿನ ಹಂಗಳ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ. ಯಾವುದೇ ಕಾರಣಕ್ಕೂ ಕೂಡ ರಾತ್ರಿ ಸಂಚಾರಕ್ಕೆ ಅವಕಾಶ ಕೊಡದಂತೆ ಮನವಿ ಮಾಡಿದರು. ರಸ್ತೆ ತಡೆದು, ಟೈರ್ ಸುಟ್ಟು ಹಾಕಿ ಪ್ರತಿಭಟನೆ ಮಾಡಿದರು. ಕೇರಳ ಸರ್ಕಾರ ಹಾಗೂ ವಯನಾಡ್ ಸಂಸದೆ ಪ್ರಿಯಾಂಕಾ ಗಾಂಧಿ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿ, ಒಂದು ವೇಳೆ ಒತ್ತಡಕ್ಕೆ ರಾಜ್ಯ ಸರ್ಕಾರ ಮಣಿದರೆ ಬೃಹತ್ ಹೋರಾಟದ ಎಚ್ಚರಿಕೆ ನೀಡಿದರು.