ಢಾಕಾ: ಶೇಖ್ ಹಸೀನಾ (Sheikh Hasina) ರಾಜೀನಾಮೆಗೆ ಆಗ್ರಹಿಸಿದ್ದ ಪ್ರತಿಭಟನಾಕಾರರು ಈಗ ಬಾಂಗ್ಲಾದೇಶ (Bangladesh) ಸುಪ್ರೀಂ ಕೋರ್ಟ್ (Supreme Court) ಮುಖ್ಯ ನ್ಯಾಯಾಧೀಶ ಮತ್ತು ಮೇಲ್ಮನವಿ ವಿಭಾಗದ ಜಡ್ಜ್ ರಾಜೀನಾಮೆ ಆಗ್ರಹಿಸಿ ಪ್ರತಿಭಟನೆ (Protest) ಆರಂಭಿಸಿದ್ದಾರೆ.
ಶನಿವಾರದಂದು ನೂರಾರು ಬಾಂಗ್ಲಾದೇಶಿ ಪ್ರತಿಭಟನಾಕಾರರು ಸುಪ್ರೀಂ ಕೋರ್ಟ್ ಅನ್ನು ಸುತ್ತುವರೆದಿದ್ದಾರೆ. ಬಾಂಗ್ಲಾದೇಶ ಕಾಲಮಾನ ಮಧ್ಯಾಹ್ನ 1 ಗಂಟೆಯ ಒಳಗಡೆ ಮುಖ್ಯ ನ್ಯಾಯಮೂರ್ತಿ ಒಬೈದುಲ್ ಹಸನ್ ರಾಜೀನಾಮೆ ನೀಡುವಂತೆ ಪ್ರತಿಭಟನಾಕಾರರು ಡೆಡ್‌ಲೈನ್ ನೀಡಿದ್ದಾರೆ. ಇದನ್ನೂ ಓದಿ: Wayanad Landslides | ವಯನಾಡಿಗೆ ಮೋದಿ ಭೇಟಿ – ದುರಂತ ಭೂಮಿಯಲ್ಲಿ ವೈಮಾನಿಕ ಸಮೀಕ್ಷೆ
ಈ ಅವಧಿಯ ಒಳಗಡೆ ರಾಜೀನಾಮೆ ನೀಡದೇ ಇದ್ದರೆ ನ್ಯಾಯಾಧೀಶರ ನಿವಾಸಕ್ಕೆ ಮುತ್ತಿಗೆ ಹಾಕುತ್ತೇವೆ ಎಂದು ವಿದ್ಯಾರ್ಥಿಗಳು ಎಚ್ಚರಿಕೆ ನೀಡಿದ್ದಾರೆ.
ಇಂದು ಬೆಳಿಗ್ಗೆ 10:30ರ ವೇಳೆಗೆ ವಿದ್ಯಾರ್ಥಿಗಳು ಮತ್ತು ವಕೀಲರು ಸೇರಿದಂತೆ ನೂರಾರು ಪ್ರತಿಭಟನಾಕಾರರು ಸುಪ್ರೀಂ ಕೋರ್ಟ್ ಆವರಣದಲ್ಲಿ ಜಮಾಯಿಸಲು ಪ್ರಾರಂಭಿಸಿದ ನಂತರ ಪ್ರತಿಭಟನೆ ತೀವ್ರಗೊಂಡಿದೆ.
ಢಾಕಾ: ಬಾಂಗ್ಲಾದೇಶದ (Bangladesh) ಮಾಜಿ ಪ್ರಧಾನಿ ಶೇಖ್ ಹಸೀನಾ (Sheikh Hasina) ಅವರ ಕಟು ಟೀಕಕಾರರಾಗಿದ್ದ ಮೊಹಮ್ಮದ್ ಯೂನುಸ್ (Muhammad Yunus) ಅವರು ದೇಶದ ಚುಕ್ಕಾಣಿ ಹಿಡಿಯಲಿದ್ದಾರೆ.
ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಮೊಹಮ್ಮದ್ ಯೂನುಸ್ ಅವರನ್ನೇ ಪ್ರಧಾನಿಯನ್ನಾಗಿ ನೇಮಿಸಬೇಕು ಎಂದು ಆಗ್ರಹಿಸಿದ್ದರು. ಮಧ್ಯಂತರ ಸರ್ಕಾರದ ಸಾರಥ್ಯ ವಹಿಸುವ ಹೊಣೆ ನೀಡಿದರೆ ಜವಾಬ್ದಾರಿ ವಹಿಸಲು ನಾನು ಸಿದ್ಧ ಎಂದು ಯೂನುಸ್ ಹೇಳಿಕೆ ನೀಡಿದ್ದರು.
ಮೊಹಮ್ಮದ್ ಯೂನುಸ್ ಅವರಿಗೆ ಬಾಂಗ್ಲಾ ಸೇನೆಯ ಬೆಂಬಲ ನೀಡಿತ್ತು. ಪ್ರತಿಭಟನಾ ನಿರತರು ಮತ್ತು ಸೇನೆಯಿಂದ ಬೆಂಬಲ ವ್ಯಕ್ತವಾದ ಬೆನ್ನಲ್ಲೇ ಬಾಂಗ್ಲಾದೇಶದ ಅಧ್ಯಕ್ಷ ಶಹಾಬುದ್ದೀನ್ ಮೊಹಮ್ಮದ್ ಯೂನುಸ್ ಅವರನ್ನು ಮಧ್ಯಂತರ ಸರ್ಕಾರದ ಮುಖ್ಯಸ್ಥರನ್ನಾಗಿ ನೇಮಿಸಿದ್ದಾರೆ.
ಗ್ರಾಮೀಣ ಬ್ಯಾಂಕ್ ಸಾಧನೆಗೆ 2006ರಲ್ಲಿ ಇವರಿಗೆ ನೊಬೆಲ್ ಶಾಂತಿ ಪ್ರಶಸ್ತಿ ಲಭಿಸಿತ್ತು. ಈ ಬೆನ್ನಲ್ಲೇ 2007ರಲ್ಲಿ ಹೊಸ ರಾಜಕೀಯ ಪಕ್ಷ ರಚಿಸುವುದಾಗಿ ಯೂನುಸ್ ಘೋಷಣೆ ಮಾಡುತ್ತಾರೆ. ರಾಜ್ಕೀಯ ಪಕ್ಷ ಘೋಷಣೆ ಮಾಡಿದ ನಂತರ ಹಸೀನಾ ಸರ್ಕಾರದ ಜೊತೆ ತಿಕ್ಕಾಟ ಆರಂಭವಾಗುತ್ತದೆ. 2008ರಲ್ಲಿ ಯೂನುಸ್ ವಿರುದ್ಧ ಹಸೀನಾ ಸರ್ಕಾರ ತನಿಖೆಗೆ ಆದೇಶ ನೀಡುತ್ತದೆ.
ಯೂನುಸ್ ಅವರು ಬಲ ಪ್ರಯೋಗ ಮಾಡಿ ಬಡವರಿಂದ ಹಣವನ್ನು ವಸೂಲಿ ಮಾಡುತ್ತಾರೆ ಎಂಬ ಆರೋಪವನ್ನು ಶೇಖ್ ಹಸೀನಾ ಬೆಂಬಲಿಗರು ಮಾಡುತ್ತಾರೆ. ಸರ್ಕಾರದ ಅನುಮತಿ ಲ್ಲದೇ 2013 ರಲ್ಲಿ 2 ದಶಲಕ್ಷ ಡಾಲರ್ ವಂಚನೆ ಮಾಡಿದ್ದಾರೆ ಎಂಬ ಆರೋಪದ ಅಡಿಯಲ್ಲಿ ಯೂನುಸ್ ಅವರ ಬಂಧನವಾಗುತ್ತದೆ. ಈ ಪ್ರಕರಣದಲ್ಲಿ ಜೈಲಿನಿಂದ ಜಾಮೀನು ಪಡೆದು ಹೊರ ಬಂದ ಬಳಿಕ ಯೂನುಸ್ ಅವರು ಹಸೀನಾ ವಿರುದ್ಧ ಮತ್ತಷ್ಟು ಟೀಕೆ ಮಾಡುತ್ತಿದ್ದರು.
ನಾನು ಸರ್ಕಾರದ ಮುಖ್ಯಸ್ಥನಾಗಬೇಕು ಎಂದು ದೇಶದ ಜನರ ಇಚ್ಛೆ ಅದೇ ಆಗಿದ್ದರೆ ಈ ಜವಾಬ್ದಾರಿ ಹೊರಲು ನಾನು ಸಿದ್ಧನಿದ್ದೇನೆ. ಆದರೆ ಮಧ್ಯಂತರ ಸರ್ಕಾರ ಯಾವ ಸಮಸ್ಯೆಗೂ ಪರಿಹಾರ ಆಗಲಾರದು. ಶಾಂತಿಯುತ ಮುಕ್ತ ಚುನಾವಣೆ ನಡೆದರೆ ಮಾತ್ರ ಶಾಶ್ವತ ಶಾಂತಿ ನೀಡಬಲ್ಲದು ಎಂದು ಯೂನುಸ್ ಹೇಳಿದ್ದಾರೆ.
ಢಾಕಾ: ಬಾಂಗ್ಲಾದೇಶದ (Bangladesh) ಪ್ರಧಾನಿ ಶೇಖ್ ಹಸೀನಾ (Sheikh Hasina) ತನ್ನ ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿ ದೇಶ ತೊರೆದ ಬೆನ್ನಲ್ಲೇ ಬಾಂಗ್ಲಾದಲ್ಲಿ ಪುಂಡರ ಅಟ್ಟಹಾಸ ಮುಂದುವರೆದಿದೆ. ಪ್ರತಿಭಟನಾಕಾರರು ಬಾಂಗ್ಲಾದ ಮಾಜಿ ಕ್ರಿಕೆಟಿಗ, ಮತ್ತು ಸಂಸದ ಮಶ್ರಫೆ ಮೊರ್ತಾಜಾ (Mashrafe Mortaza) ಅವರ ಮನೆಗೆ ಬೆಂಕಿ ಹಚ್ಚಿದ್ದಾರೆ.
ಮಶ್ರಫ್-ಬಿನ್-ಮೊರ್ತಾಜಾ ಅವರು ಶೇಖ್ ಹಸಿನಾ ಅವರ ಪಕ್ಷವಾದ ಅವಾಮಿ ಲೀಗ್‌ನಿಂದ ಖುಲ್ನಾ ವಿಭಾಗದ ನರೈಲ್ ಕ್ಷೇತ್ರದ ಸಂಸದರಾಗಿ ಎರಡನೇ ಬಾರಿ ಆಯ್ಕೆಯಾಗಿದ್ದರು. ಪುಂಡರು ಮೊರ್ತಾಜಾ ಅವರ ಮನೆಗೆ ನುಗ್ಗಿ ಬೆಂಕಿ ಹಚ್ಚಿದ್ದಾರೆ ಎಂದು ತಿಳಿದು ಬಂದಿದೆ. ಇದನ್ನೂ ಓದಿ: ಬಾಂಗ್ಲಾದೇಶದಲ್ಲಿ ಕ್ಷಿಪ್ರಕ್ರಾಂತಿ – ಹಿಂದೂ ದೇವಸ್ಥಾನಗಳ ಮೇಲೆ ಪುಂಡರ ದಾಳಿ
ಢಾಕಾ: ಒಂದು ಕಡೆ ವಿದ್ಯಾರ್ಥಿಗಳ ಪ್ರತಿಭಟನೆ, ಇನ್ನೊಂದು ಕಡೆ ಸೇನೆಯೊಂದಿಗೆ ಕಿತ್ತಾಟದ ಬೆನ್ನಲ್ಲೇ ಬಾಂಗ್ಲಾದೇಶದ ಪ್ರಧಾನಿ (Bangladesh PM) ಹುದ್ದೆಗೆ ಶೇಖ್ ಹಸೀನಾ (Sheikh Hasina) ರಾಜೀನಾಮೆ ನೀಡಿದ್ದಾರೆ. ಶೇಖ್ ಹಸೀನಾ ರಾಜೀನಾಮೆ ಬೆನ್ನಲ್ಲೇ ಮಿಲಿಟರಿ ಆಡಳಿತ ಆರಂಭವಾಗಿದೆ.
ಪ್ರತಿಭಟನೆ ತೀವ್ರಗೊಂಡ ಬೆನ್ನಲ್ಲೇ ಶೇಖ್ ಹಸೀನಾ ಅವರ ಕಚೇರಿಗೆ ನುಗ್ಗಿ ಪ್ರತಿಭಟನಾಕಾರರು ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನಕಾರರು ಮನೆಗೆ ನುಗ್ಗುವ ಮೊದಲೇ ಶೇಖ್ ಹಸೀನಾ ರಾಜೀನಾಮೆ ನೀಡಿ ವಿದೇಶಕ್ಕೆ ತೆರಳಿದ್ದಾರೆ ಎಂದು ವರದಿಯಾಗಿದೆ. ಕೆಲ ಮಾಧ್ಯಮಗಳು ವಿಶೇಷ ವಿಮಾನದ ಮೂಲಕ ಭಾರತಕ್ಕೆ ಬಂದು ಆಶ್ರಯ ಪಡೆದಿದ್ದಾರೆ ಎಂದು ವರದಿಯಾಗಿದೆ.
ಬಾಂಗ್ಲಾದೇಶದ (Bangladesh Clash) ಪ್ರಧಾನಿ ರಾಜೀನಾಮೆಗೆ ಒತ್ತಾಯಿಸಿ ನಡೆಯುತ್ತಿರುವ ವಿದ್ಯಾರ್ಥಿಗಳ ಪ್ರತಿಭಟನೆ ತೀವ್ರಗೊಂಡು ಹಿಂಸಾಚಾರಕ್ಕೆ ತಿರುಗಿತ್ತು. ಇಂದು ಸುಮಾರು 10 ಲಕ್ಷ ವಿದ್ಯಾರ್ಥಿಗಳು ಢಾಕಾದಲ್ಲಿ ಪ್ರತಿಭಟನೆ ನಡೆಸುತ್ತಿದ್ದರು. ಇದನ್ನೂ ಓದಿ: ಬಾಂಗ್ಲಾದಲ್ಲಿ ಹಿಂಸಾಚಾರ- ಸಂಪರ್ಕದಲ್ಲಿರುವಂತೆ ಭಾರತೀಯರಿಗೆ ಕೇಂದ್ರ ಸೂಚನೆ
ಕೆಲವೇ ದಿನಗಳ ಹಿಂದೆ, 1971 ರಲ್ಲಿ ಬಾಂಗ್ಲಾದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಹೋರಾಡಿದ ಯೋಧರ ಸಂಬಂಧಿಕರಿಗೆ ಸರ್ಕಾರಿ ಉದ್ಯೋಗಗಳಲ್ಲಿ 30 ಪ್ರತಿಶತವನ್ನು ಮೀಸಲಿಡುವ ವಿವಾದಾತ್ಮಕ ಕೋಟಾ ವ್ಯವಸ್ಥೆಯನ್ನು ತೆಗೆದುಹಾಕಬೇಕು ಎಂದು ಒತ್ತಾಯಿಸಿ ಪ್ರತಿಭಟನೆ ಆರಂಭವಾಗಿತ್ತು.
ಲಂಡನ್: ಬ್ರಿಟನ್‌ನಲ್ಲಿ (Great Britain) ಸ್ಥಳೀಯರು, ಬಲಪಂಥೀಯರು ಮತ್ತು ವಲಸಿಗ ಮುಸ್ಲಿಮರ (Migrant Muslims) ನಡುವೆ ನಡೆಯುತ್ತಿರುವ ಸಂಘರ್ಷ ಮತ್ತು ಹಿಂಸಾಚಾರಕ್ಕೆ ತಾರಕಕ್ಕೆ ಏರಿದ್ದು ಇಲ್ಲಿಯವರೆಗೆ ಯುಕೆ ಪೊಲೀಸರು (UK Police) ಸುಮಾರು 148 ಮಂದಿಯನ್ನು ಬಂಧಿಸಿದ್ದಾರೆ.
4 ದಿನಗಳ ಹಿಂದೆ ಸಣ್ಣದಾಗಿ ಆರಂಭವಾಗಿದ್ದ ಪ್ರತಿಭಟನೆ, ಹಿಂಸಾಚಾರ ಇದೀಗ ದೇಶದ ಹಲವು ನಗರಗಳಿಗೆ ಹರಡಿದ್ದು ಹೋಟೆಲ್, ಅಂಗಡಿಗಳ ಮೇಲೆ ದಾಳಿಯಾಗುತ್ತಿದೆ.
???????? Fall of former colonial Empire: Unrest spreads across UK
Bloody race riots have been taking place in many cities of the UK for several days.
The unrest was triggered when Axel Rudakubana, a 17-year-old man of Rwandan origin, born in the UK, fatally stabbed three girls in… pic.twitter.com/LfZdtm7VP5
ಪ್ರತಿಭಟನೆ ಯಾಕೆ?
ನೃತ್ಯ ತರಗತಿ ವೇಳೆ ಮೂವರು ಬ್ರಿಟಿಷ್ ಬಾಲಕಿಯರನ್ನು ಇತ್ತೀಚೆಗೆ ಹತ್ಯೆ ಮಾಡಲಾಗಿತ್ತು. ಬಳಿಕ ಕೃತ್ಯ ಎಸಗಿದ ಆಕ್ಸೆಲ್ ರುಡಕುಬಾನಾ 17 ವರ್ಷದ ಯುವಕನನ್ನು ಬಂಧಿಸಲಾಗಿತ್ತು. ಹಂತಕ ಮುಸ್ಲಿಂ ವಲಸಿಗ ಎಂಬ ವದಂತಿ ಹರಡಿದ್ದರಿಂದ ಈಗ ಸ್ಥಳೀಯರು ಮತ್ತು ಬಲಪಂಥೀಯ ಸಂಘಟನೆಗಳು ಪ್ರತಿಭಟನೆಗಳು ಇಳಿದಿವೆ. ಆದರೆ ಹಂತಕ ಕ್ರಿಶ್ಚಿಯನ್ ಎಂದು ವರದಿಯಾಗಿದೆ. ಇದನ್ನೂ ಓದಿ: ನಿಗದಿಯಾಗಿದ್ದ ಕೊಪ್ಪಳ, ವಿಜಯನಗರ ಸಿಎಂ ಪ್ರವಾಸ ದಿಢೀರ್ ರದ್ದು
ಇತ್ತೀಚಿಗೆ ಮುಕ್ತಾಯಗೊಂಡ ಸಂಸತ್ ಚುನಾವಣೆ ವೇಳೆ ಮುಸ್ಲಿಮರಿಗೆ ಹಲವು ಭರವಸೆ ನೀಡಿ ಕೀರ್ ಸ್ಟಾರ್ಮರ್ (Keir Starmer) ಪ್ರಧಾನಿಯಾಗಿ ಆಯ್ಕೆಯಾಗಿದ್ದರು. ಮುಸ್ಲಿಮರಿಗೆ ನೀಡಿದ ಭರವಸೆಗಳಿಗೆ ಸ್ಥಳೀಯರು ಮತ್ತು ಬಲಪಂಥೀಯ ಸಂಘಟನೆಗಳು ಆಕ್ಷೇಪ ವ್ಯಕ್ತಪಡಿಸಿದ್ದವು. ಈಗ ಮೂವರು ಬಾಲಕಿಯರ ಮೇಲೆ ಹತ್ಯೆ ವಿಚಾರ ಸಾಮಾಜಿಕ ಜಾಲತಾಣದಲ್ಲಿ ಹರಡುತ್ತಿದ್ದಂತೆ ಪ್ರತಿಭಟನೆ ಈಗ ಸಂಘರ್ಷದ ಸ್ವರೂಪ ಪಡೆದುಕೊಂಡಿದೆ. ಪ್ರಧಾನಿ ಕೀರ್ ಸ್ಟಾರ್ಮರ್ ಅವರು ಈಗ ಪ್ರತಿಭಟನಾಕರರ ಮೇಲೆ ಕ್ರಮಕ್ಕೆ ಆಗ್ರಹಿಸಿದ್ದಾರೆ.
ಲಿವರ್‌ಪೂಲ್, ಹಲ್, ಬ್ರಿಸ್ಟಲ್, ಲೀಡ್ಸ್‌ನಲ್ಲಿ ನಡೆದ ಘರ್ಷಣೆಗಳಲ್ಲಿ ಪ್ರತಿಭಟನಾಕಾರರು ಸರ್ಕಾರಿ ಕಚೇರಿಗೆ ನುಗ್ಗಿ ಕಲ್ಲು ತೂರಾಟ ನಡೆಸಿ ಬೆಂಕಿ ಹಚ್ಚಿ ಪೀಠೋಪಕರಣಗಳನ್ನು ಧ್ವಂಸ ಮಾಡಿದ್ದಾರೆ. ಮ್ಯಾಂಚೆಸ್ಟರ್‌ನಲ್ಲಿ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ಘರ್ಷಣೆ ನಡೆದಿವೆ. ಇದನ್ನೂ ಓದಿ: ಬಿಹಾರದಲ್ಲಿ ಕನ್ವರ್ ಯಾತ್ರೆ ವೇಳೆ ಡಿಜೆ ವಾಹನಕ್ಕೆ ವಿದ್ಯುತ್ ಸ್ಪರ್ಶ – 9 ಮಂದಿ ದುರ್ಮರಣ
ಲೀಡ್ಸ್‌ನಲ್ಲಿ ಸರಿಸುಮಾರು 150 ಜನರು ಇಂಗ್ಲಿಷ್ ಧ್ವಜಗಳನ್ನು ಹಿಡಿದುಕೊಂಡು, ನೀವು ಇನ್ನು ಮುಂದೆ ಇಂಗ್ಲಿಷ್ ಪ್ರಜೆಗಳಲ್ಲ ಎಂದು ಎಂದು ವಲಸಿಗರ ವಿರುದ್ಧ ಘೋಷಣೆ ಕೂಗಿದ್ದಾರೆ. ಮುಸ್ಲಿಮರು ಅಲ್ಲಾ ಹು ಅಕ್ಬರ್ ಕೂಗುತ್ತಾ ಮಾರಕಾಸ್ತ್ರ ಹಿಡಿದು ಓಡಾಡುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಪ್ರತಿಭಟನೆ ಉಗ್ರ ಸ್ವರೂಪ ಪಡೆದುಕೊಂಡಿದ್ದರಿಂದ ಹೋಟೆಲ್, ಮಾಲ್‌ಗಳ ಮೇಲೂ ದಾಳಿ ನಡೆಯುತ್ತಿದೆ.
ಢಾಕಾ: ಬಾಂಗ್ಲಾದೇಶದಲ್ಲಿ ಸರ್ಕಾರಿ ನೇಮಕಾತಿಗಳಲ್ಲಿ ಮೀಸಲಾತಿ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆ ಮತ್ತಷ್ಟು ಹಿಂಸಾತ್ಮಕ ರೂಪಕ್ಕೆ ತಿರುಗಿದೆ. ಢಾಕಾ ಸೇರಿದಂತೆ ದೇಶದ ವಿವಿಧೆಡೆ ನಡೆದ ಗಲಭೆಯಲ್ಲಿ 105 ಮಂದಿ ಬಾಂಗ್ಲಾದೇಶಿಗರು ಕೊಲ್ಲಲ್ಪಟ್ಟಿದ್ದಾರೆ. ಇದರಿಂದ ಎಚ್ಚೆತ್ತ 300ಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳು ತವರಿಗೆ ಮರಳಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಮಾಹಿತಿ ಪ್ರಕಾರ, ಬಾಂಗ್ಲಾದೇಶದಲ್ಲಿ 15 ಸಾವಿರ ಮಂದಿ ಭಾರತೀಯರು ಇದ್ದಾರೆ ಎಂದು ಹೇಳಲಾಗಿದೆ. ಶುಕ್ರವಾರ 300ಕ್ಕೂ ಹೆಚ್ಚು ಮಂದಿ ತವರಿಗೆ ಮರಳಿದ್ದಾರೆ. ಬಂದವರಲ್ಲಿ ಬಹುತೇಕರು ಎಂಬಿಬಿಎಸ್ ವ್ಯಾಸಂಗಕ್ಕೆ ತೆರಳಿದ್ದರು. ಅಲ್ಲದೇ ಉತ್ತರ ಪ್ರದೇಶ, ಹರಿಯಾಣ, ಮೇಘಾಲಯ ಮತ್ತು ಜಮ್ಮು ಮತ್ತು ಕಾಶ್ಮೀರ ಮೂಲದವರೇ ಹೆಚ್ಚಿಮ ಸಂಖ್ಯೆಯಲ್ಲಿದ್ದರು ಎಂದು ವರದಿಯಾಗಿದೆ.
ಮೀಸಲಾತಿ ವಿರೋಧಿಸಿ ಹೋರಾಟ ನಡೆಸುತ್ತಿರುವವರು ಹಾಗೂ ಭದ್ರತಾ ಪಡೆಗಳ ನಡುವಿನ ಸಂಘರ್ಷದಲ್ಲಿ ಕನಿಷ್ಠ 105 ಮಂದಿ ಮೃತಪಟ್ಟಿದ್ದು, 2,500ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ಗುರುವಾರ ಹೋರಾಟ ತೀವ್ರಗೊಂಡ ನಂತರ ಗಲಭೆ ನಿಯಂತ್ರಿಸಲು ಬಾಂಗ್ಲಾದೇಶದ ಹಲವೆಡೆ ಮೊಬೈಲ್ ಇಂಟರ್‌ನೆಟ್ ಸೇವೆಗಳನ್ನು ಕಡಿತಗೊಳಿಸಲಾಗಿತ್ತು. ಇದರಿಂದ ಬೇಸರಗೊಂಡ ವಿದ್ಯಾರ್ಥಿಗಳು ಢಾಕಾದಲ್ಲಿ ಕೋಲು, ದೊಣ್ಣೆ ಮತ್ತು ಕಲ್ಲುಗಳೊಂದಿಗೆ ರಸ್ತೆಗಿಳಿದು ಹೆದ್ದಾರಿಗಳನ್ನು ತಡೆದಿದ್ದರು. ಸರ್ಕಾರಿ ಕಟ್ಟಡಗಳನ್ನು ಹಾನಿಗೊಳಿಸಿ, ಸಶಸ್ತ್ರ ಪೊಲೀಸರರೊಂದಿಗೆ ಘರ್ಷಣೆಗೆ ಇಳಿದಿದ್ದರಿಂದ ಪರಿಸ್ಥಿತಿ ಉದ್ವಿಗ್ನಗೊಂಡಿತು.
ಹಿಂಸಾಚಾರಕ್ಕೆ ಕಾರಣವೇನು?
ಬಾಂಗ್ಲಾದೇಶದಲ್ಲಿ ಪ್ರಸ್ತುತ ಕೋಟಾ ವ್ಯವಸ್ಥೆ ಪ್ರಕಾರ ಸರ್ಕಾರಿ ಉದ್ಯೋಗಗಳಲ್ಲಿ 56% ಕಾಯ್ದಿರಿಸಲಾಗಿದೆ. ಇದರಲ್ಲಿ 1971ರ ವಿಮೋಚನಾ ಸ್ವಾತಂತ್ರ್ಯ ಹೋರಾಟಗಾರರ ಕುಟುಂಬದವರಿಗೆ ಶೇ.30, ಹಿಂದುಳಿದ ಜಿಲ್ಲೆಗಳವರಿಗೆ ಶೇ.10, ಮಹಿಳೆಯರಿಗೆ ಶೇ.10, ಜನಾಂಗೀಯ ಅಲ್ಪಸಂಖ್ಯಾತರಿಗೆ ಶೇ.5 ಹಾಗೂ ಅಂಗವಿಕಲರಿಗೆ ಶೇ.1 ಮೀಸಲಾತಿ ಕಲ್ಪಿಸಲಾಗಿದೆ. ವಿಮೋಚನಾ ಹೋರಾಟದ ಕುಟುಂಬಸ್ಥರಿಗೆ ಕಲ್ಪಿಸಿರುವ ಶೇ.30 ಮೀಸಲಾತಿ ರದ್ದು ಪಡಿಸಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದರು. ಈ ಬೇಡಿಕೆಯನ್ನು ಪ್ರಧಾನಿಗಳು ತಿರಸ್ಕರಿಸಿದ್ದರಿಂದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ.
ಢಾಕಾ: ಬಾಂಗ್ಲಾದೇಶದಲ್ಲಿ (Bangladesh) ಸರ್ಕಾರಿ ನೇಮಕಾತಿಗಳಲ್ಲಿ ಮೀಸಲಾತಿ ವಿರೋಧಿಸಿ ಜು.1ರಿಂದ ನಡೆಯುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. ಢಾಕಾ ಸೇರಿದಂತೆ ದೇಶದ ವಿವಿಧೆಡೆ ನಡೆದ ಹಿಂಸಾಚಾರದಲ್ಲಿ 32 ಮಂದಿ ಮೃತಪಟ್ಟಿದ್ದು, 500ಕ್ಕೂ ಹೆಚ್ಚು ಮಂದಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ.
ಪರಿಸ್ಥಿತಿ ತಿಳಿಗೊಳಿಸುವಂತೆ ಪ್ರಧಾನಿ ಶೇಖ್ ಹಸೀನಾ (Sheikh Hasina) ಅವರು ಮಾಧ್ಯಮದಲ್ಲಿ ಕಾಣಿಸಿಕೊಂಡಿದ್ದರು, ಆದ್ರೆ ಪ್ರತಿಭಟನಾಕಾರರ ಬೇಡಿಕೆ ತಿರಸ್ಕರಿದ ಬಳಿಕ ಮತ್ತಷ್ಟು ಕ್ರೋಧಗೊಂಡು ವೀಡಿಯೋ ಪ್ರಸಾರ ಮಾಡಿದ ಸರ್ಕಾರಿ ಮಾಧ್ಯಮ ಕಚೇರಿಗೆ ಬೆಂಕಿ ಹಚ್ಚಿದ್ದಾರೆ. ಸದ್ಯ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಾಲು ರಾಜಧಾನಿ ಸೇರಿದಂತೆ ದೇಶದಾದ್ಯಂತ ಗಡಿ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ. ಜುಲೈ 1ರಿಂದ ನಡೆಯುತ್ತಿರುವ ಈ ಪ್ರತಿಭಟನೆಯಲ್ಲಿ ಮೃತಪಟ್ಟವರ ಸಂಖ್ಯೆ 32ಕ್ಕೆ ಏರಿಕೆಯಾಗಿದೆ. ಹಿಂಸಾಚಾರ ತೀವ್ರಗೊಂಡ ಬೆನ್ನಲ್ಲೇ ಪ್ರತಿಭಟನಾನಿರತ ವಿದ್ಯಾರ್ಥಿಗಳ ಜತೆಗೆ ಮಾತುಕತೆಗೆ ಸಿದ್ಧ ಎಂದು ಬಾಂಗ್ಲಾದೇಶದ ಸರ್ಕಾರ ತಿಳಿಸಿದೆ.
ಪ್ರತಿಭಟನೆಗಳನ್ನು ನಿಯಂತ್ರಿಸಲು ಬಾಂಗ್ಲಾದೇಶದ ಹಲವೆಡೆ ಮೊಬೈಲ್ ಇಂಟರ್‌ನೆಟ್ ಸೇವೆಗಳನ್ನು ಕಡಿತಗೊಳಿಸಲಾಗಿತ್ತು. ಇದರಿಂದ ಬೇಸರಗೊಂಡ ವಿದ್ಯಾರ್ಥಿಗಳು ಢಾಕಾದಲ್ಲಿ ಕೋಲು, ದೊಣ್ಣೆ ಮತ್ತು ಕಲ್ಲುಗಳೊಂದಿಗೆ ರಸ್ತೆಗಿಳಿದು ಹೆದ್ದಾರಿಗಳನ್ನು ತಡೆದರು. ಸರ್ಕಾರಿ ಕಟ್ಟಡಗಳನ್ನು ಹಾನಿಗೊಳಿಸಿ, ಸಶಸ್ತ್ರ ಪೊಲೀಸರರೊಂದಿಗೆ ಘರ್ಷಣೆಗೆ ಇಳಿದಿದ್ದರಿಂದ ಪರಿಸ್ಥಿತಿ ಉದ್ವಿಗ್ನಗೊಂಡಿತು.
ಇದರಿಂದ ಕಚೇರಿಯೊಳಗೆ ಹಲವರು ಸಿಕ್ಕಿಬಿದ್ದು, ತೊಂದರೆ ಅನುಭವಿಸಿದರು. ಏಕಾಏಕಿ ನೂರಾರು ಪ್ರತಿಭಟನಕಾರರು ಕಚೇರಿಯ ಆವರಣದೊಳಗೆ ನುಗ್ಗಿ ಕನಿಷ್ಠ 60ಕ್ಕೂ ಹೆಚ್ಚು ವಾಹನಗಳು ಮತ್ತು ಕಚೇರಿಯ ಕಟ್ಟಡಕ್ಕೆ ಬೆಂಕಿ ಹಚ್ಚಿದರು. ಈ ವೇಳೆ ಪ್ರತಿಭಟನಾ ನಿರತರನ್ನು ಚದುರಿಸಲು ಪೊಲೀಸರು ಹರಸಾಹಸ ಪಟ್ಟರು. ರಬ್ಬರ್ ಬುಲೆಟ್ ಹಾಗೂ ಅಶ್ರುವಾಯು ಸಿಡಿಸಿ ಪ್ರತಿಭಟನಾ ನಿರತರನ್ನು ಹಿಮ್ಮೆಟ್ಟಿಸಿದರು.
ಹಿಂಸಾಚಾರಕ್ಕೆ ಕಾರಣವೇನು?
ಬಾಂಗ್ಲಾದೇಶದಲ್ಲಿ ಪ್ರಸ್ತುತ ಕೋಟಾ ವ್ಯವಸ್ಥೆ ಪ್ರಕಾರ ಸರ್ಕಾರಿ ಉದ್ಯೋಗಗಳಲ್ಲಿ 56% ಕಾಯ್ದಿರಿಸಲಾಗಿದೆ. ಇದರಲ್ಲಿ 1971ರ ವಿಮೋಚನಾ ಸ್ವಾತಂತ್ರ್ಯ ಹೋರಾಟಗಾರರ ಕುಟುಂಬದವರಿಗೆ ಶೇ.30, ಹಿಂದುಳಿದ ಜಿಲ್ಲೆಗಳವರಿಗೆ ಶೇ.10, ಮಹಿಳೆಯರಿಗೆ ಶೇ.10, ಜನಾಂಗೀಯ ಅಲ್ಪಸಂಖ್ಯಾತರಿಗೆ ಶೇ.5 ಹಾಗೂ ಅಂಗವಿಕಲರಿಗೆ ಶೇ.1 ಮೀಸಲಾತಿ ಕಲ್ಪಿಸಲಾಗಿದೆ. ವಿಮೋಚನಾ ಹೋರಾಟದ ಕುಟುಂಬಸ್ಥರಿಗೆ ಕಲ್ಪಿಸಿರುವ ಶೇ.30 ಮೀಸಲಾತಿ ರದ್ದು ಪಡಿಸಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದರು. ಈ ಬೇಡಿಕೆಯನ್ನು ಪ್ರಧಾನಿಗಳು ತಿರಸ್ಕರಿಸಿದ್ದರಿಂದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ.
ಬೆಂಗಳೂರು: ಇದೇ ಗುರುವಾರ (ಜು.18ರಂದು) ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸುವ ಮೂಲಕ ವಿಧಾನಸೌಧಕ್ಕೆ ಮುತ್ತಿಗೆ ಹಾಕುವುದು, ಗುರುವಾರ ಸದನದ ಒಳಗೆ ಮತ್ತು ಹೊರಗೆ ತೀವ್ರ ಹೋರಾಟ ನಡೆಸುವುದು, SCSP-TSP ಹಣ ದುರ್ಬಳಕೆ ಹಾಗೂ ಮುಡಾ ಪ್ರಕರಣದಲ್ಲಿ ಹೋರಾಟ ತೀವ್ರಗೊಳಿಸುವುದು ಸೇರಿದಂತೆ ಹಲವು ಮಹತ್ವದ ನಿರ್ಣಯಗಳನ್ನು ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಕೈಗೊಳ್ಳಲಾಯಿತು. 1 ಲಕ್ಷದಷ್ಟು ಜನರನ್ನು ಸೇರಿಸಿ ಪ್ರತಿಭಟನೆ ನಡೆಸುವ ಮೂಲಕ ವಿಧಾನಸೌಧ ಮುತ್ತಿಗೆಗೆ ತೀರ್ಮಾನಿಸಲಾಯಿತು ಎಂದು ಪಕ್ಷದ ಮೂಲಗಳು ತಿಳಿಸಿವೆ.
ಬೆಂಗಳೂರಿನ ಖಾಸಗಿ ಹೊಟೇಲ್‌ನಲ್ಲಿಂದು ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಿತು. ಸಭೆಯಲ್ಲಿ ವಿರೋಧ ಪಕ್ಷದ ನಾಯಕ ಆರ್ ಅಶೋಕ್, ಅರವಿಂದ ಬೆಲ್ಲದ್, ಸಿ.ಸಿ ಪಾಟೀಲ್, ಭೈರತಿ ಬಸವರಾಜ್, ಅಶ್ವಥ್ ನಾರಾಯಣ್, ಆರಗ ಜ್ಞಾನೇಂದ್ರ, ಅಶ್ವಥ್ ನಾರಾಯಣ, ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಸೇರಿದಂತೆ ಹಲವು ಘಟಾನುಘಟಿ ನಾಯಕರು ಪಾಲ್ಗೊಂಡಿದ್ದರು.
ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ವಾಲ್ಮೀಕಿ ನಿಗಮದ ಬಹುಕೋಟಿ ಹಗರಣ ವಿಚಾರ ಪ್ರಸ್ತಾಪಿಸಲಾಯಿತು. SCSP-TSP ಹಣ ದುರ್ಬಳಕೆ ಹಾಗೂ ಮುಡಾ ಪ್ರಕರಣದಲ್ಲಿ ಹೋರಾಟ ತೀವ್ರಗೊಳಿಸುವುದು ಸೇರಿದಂತೆ ಹಲವು ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಯಿತು.
ಸಭೆಯ ನಿರ್ಣಯಗಳೇನು?
* SCSP-TSP ಹಣ ದುರ್ಬಳಕೆ ಹಾಗೂ ಮುಡಾ ಪ್ರಕರಣದಲ್ಲಿ ಹೋರಾಟ ತೀವ್ರಗೊಳಿಸಲು ನಿರ್ಧಾರ
* ಈ ವಾರ ವಾಲ್ಮೀಕಿ ನಿಗಮದ ಅಕ್ರಮ ಹಾಗೂ SCSP-TSP ಹಣ ದುರ್ಬಳಕೆ ಪ್ರಕರಣಗಳಲ್ಲಿ ಚರ್ಚೆಗೆ ನಿರ್ಣಯ
* ಸದನ ಬಹಿಷ್ಕಾರ, ಬಾವಿಗಿಳಿದು ಹೋರಾಟ ಬದಲು ಪರಿಣಾಮಕಾರಿ ಚರ್ಚೆಗೆ ಆದ್ಯತೆ ಕೊಡಲು ನಿರ್ಣಯ
* ಮುಡಾ ಪ್ರಕರಣದಲ್ಲಿ ಸಿಎಂ ರಾಜೀನಾಮೆ ಹಾಗೂ ಪ್ರಕರಣ ಸಿಬಿಐಗೆ ಕೊಡುವಂತೆ ತೀವ್ರ ಒತ್ತಾಯ ಹಾಕಲು ನಿರ್ಧಾರ
* ಗುರುವಾರ (ಜು.18) ಬೃಹತ್ ಪ್ರತಿಭಟನೆ, ವಿಧಾನಸೌಧ ಮುತ್ತಿಗೆಗೆ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ನಿರ್ಣಯ
* ಜು.18ರಂದು ಸದನದ ಒಳಗೆ ಮತ್ತು ಹೊರಗೆ ಹೋರಾಟಕ್ಕೆ ನಿರ್ಧಾರ
* ದೊಡ್ಡ ಸಂಖ್ಯೆಯ ಕಾರ್ಯಕರ್ತರೊಂದಿಗೆ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ತೀರ್ಮಾನ
ಹಾವೇರಿ: ಅನಧಿಕೃತ ಗರ್ಭಕೋಶ ಶಸ್ತ್ರಚಿಕಿತ್ಸೆಗೆ ಒಳಗಾದ ನೂರಾರು ಮಹಿಳೆಯರು ವಿಶೇಷ ಪ್ಯಾಕೇಜ್‌ಗೆ ಆಗ್ರಹಿಸಿ ಹಾವೇರಿ ಡಿಸಿ ಕಚೇರಿ ಮುಂದೆ ಅರೆಬೆತ್ತಲಾಗಿ ಪ್ರತಿಭಟನೆ ನಡೆಸಿದ್ದಾರೆ. ವಿಶೇಷ ಪ್ಯಾಕೇಜ್ ನೀಡುವಂತೆ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಗರ್ಭಕೋಶ ಶಸ್ತ್ರಚಿಕಿತ್ಸೆಗೆ ಒಳಗಾದ ಮಹಿಳೆಯರನ್ನ ಪೊಲೀಸರು ತಡೆಹಿಡಿದ್ದಾರೆ. ಪೊಲೀಸರು ಮುತ್ತಿಗೆ ಹಾಕಲು ಬಂದ ಮಹಿಳೆಯರನ್ನು ಗೇಟ್ ಬಳಿ ತಡೆದ ನಂತರ ಮಾತಿನ ಚಕಮಕಿ ಏರ್ಪಟ್ಟಿದೆ. ಅರೆಬೆತ್ತಲೆ ಪ್ರತಿಭಟನೆಯಲ್ಲಿ ನೊಂದ ಮಹಿಳೆಯರು ಕಣ್ಣೀರು ಹಾಕಿ, ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: 6,187 ಡೆಂಗ್ಯೂ ಪ್ರಕರಣ ಪತ್ತೆ – ಬೆಂಗ್ಳೂರಲ್ಲಿ ಮನೆ ಮನೆ ಸಮೀಕ್ಷೆ ನಡೆಸುವಂತೆ ಪಾಲಿಕೆಗೆ ಸೂಚನೆ!
ಅಲ್ಲದೇ ಪ್ರತಿಭಟನಾ ನಿರತರ ಮಹಿಳೆಯರು ಕೆಲಕಾಲ ಕೈಯಲ್ಲಿ ಕಲ್ಲು ಹಿಡಿದು ಸಾರ್ವಜನಿಕರನ್ನು ಡಿಸಿ ಕಚೇರಿ ಒಳಗೆ ಬಿಡದಂತೆ ತಡೆದಿದ್ದಾರೆ. ನಮ್ಮನ್ನೂ ಬಂಧಿಸಿ, ಇಲ್ಲವೇ ಉಸ್ತುವಾರಿ ಸಚಿವರ ಭೇಟಿಗೆ ಅನುಮತಿ ನೀಡಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಬೇಬಿ ಬೆಟ್ಟದಲ್ಲಿ ಟ್ರಯಲ್ ಬ್ಲಾಸ್ಟ್‌ಗೆ ಸಿದ್ಧತೆ – ರೈತರಿಂದ ಭಾರೀ ಆಕ್ರೋಶ!
800ಕ್ಕೂ ಹೆಚ್ಚು ಮಹಿಳೆಯರು ಅಧಿಕೃತ ಶಸ್ತ್ರಚಿಕಿತ್ಸೆಗೆ ಒಳಗಾಗಿ ಗರ್ಭಕೋಶ ಕಳೆದುಕೊಂಡಿದ್ದಾರೆ. ಅವರಿಗೆಲ್ಲಾ ದುಡಿದು ತಿನ್ನಲು ಆಗುತ್ತಿಲ್ಲ. ಸರ್ಕಾರ ಪರಿಹಾರ ನೀಡಬೇಕು, 9 ವರ್ಷದಿಂದ ಹೋರಾಟ ಮಾಡಿದರೂ ಸರ್ಕಾರದಿಂದ ಪರಿಹಾರ ಸಿಕ್ಕಿಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ. ಬಳಿಕ ಸಚಿವ ಶಿವಾನಂದ ಪಾಟೀಲ ಅವರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ. ಇದನ್ನೂ ಓದಿ: IPL 2025: ಮೆಗಾ ಹರಾಜು ಪ್ರಕ್ರಿಯೆ ಶುರು; ರಿಟೇನ್ ಆಟಗಾರರ ವಿಚಾರದಲ್ಲಿ ಫ್ರಾಂಚೈಸಿಗಳ ನಡುವೆ ಭಿನ್ನಾಭಿಪ್ರಾಯ!
ತುಮಕೂರು: ಹೇಮಾವತಿ ಎಕ್ಸ್‌ಪ್ರೆಸ್ ಕೆನಲ್ (Hemavathi Express canal )ಮೂಲಕ ರಾಮನಗರ ಜಿಲ್ಲೆಯ ಮಾಗಡಿ ಶ್ರೀರಂಗ ಏತನೀರಾವರಿಗೆ ಹೇಮಾವತಿ ನೀರು ತೆಗೆದುಕೊಂಡು ಹೋಗಲು ತುಮಕೂರಲ್ಲಿ (Tumakuru) ವ್ಯಕ್ತವಾಗಿರುವ ವಿರೋಧ ತೀವ್ರಗೊಂಡಿದೆ. ಹೀಗಾಗಿ ನೀರಾವರಿ ಹೋರಾಟ ಸಮಿತಿ ಇಂದು (ಜೂನ್ 25ರಂದು) ಜಿಲ್ಲಾ ಬಂದ್ ಕರೆ ನೀಡಿದ್ದು, ಹತ್ತಾರು ಸಂಘಟನೆಗಳು ಬಂದ್‌ಗೆ ಬೆಂಬಲ ಸೂಚಿಸಿವೆ.
ಮಠಾಧೀಶರು, ವರ್ತಕರು, ವಕೀಲರ ಸಂಘ, ಹೋಟೆಲ್ ಅಸೋಸಿಯೇಷನ್, ವಿವಿಧ ರೈತ, ಕನ್ನಡಪರ ಸಂಘಟನೆಗಳು ಸೇರಿ ಅನೇಕ ಸಂಘಟನೆಗಳು ತುಮಕೂರು ಬಂದ್‌ಗೆ (Tumakuru Bandh) ಬೆಂಬಲ ಸೂಚಿಸಿವೆ. ಬೆಳಗ್ಗೆ 10 ಗಂಟೆಗೆ ನಗರದ ಟೌನ್‌ಹಾಲ್‌ನಿಂದ ಪ್ರತಿಭಟನಾ ಮೆರವಣಿಗೆ ಶುರುವಾಗಲಿದ್ದು, ಜಿಲ್ಲಾಧಿಕಾರಿ ಕಚೇರಿ ವರೆಗೆ ಮೆರವಣಿಗೆ ನಡೆಸಲಾಗುತ್ತದೆ. ಬಳಿಕ ಡಿಸಿಗೆ ಮನವಿ ಪತ್ರ ಸಲ್ಲಿಸಲಾಗುತ್ತದೆ. ಇದನ್ನೂ ಓದಿ: ಜೈಲಿನಲ್ಲಿರುವ ನಟ ದರ್ಶನ್ ಭೇಟಿಗೆ ಯಾರಿಗೂ ಅವಕಾಶವಿಲ್ಲ!
ಇನ್ನೂ ಸರ್ಕಾರಿ ಸಾರಿಗೆ, ಶಾಲಾ-ಕಾಲೇಜು ಸೇರಿದಂತೆ ಇತರೇ ಸರ್ಕಾರಿ ಸೇವೆಗಳು ಎಂದಿನಂತೆ ಇರಲಿವೆ ಎಂದು ಆಡಳಿತ ಸ್ಪಷ್ಟಪಡಿಸಿದೆ. ಸಂಘಟನೆಗಳ ಬಲದಿಂದಾಗಿ ಸ್ವಯಂ ಪ್ರೇರಿತ ಬಂದ್ ಇರಲಿದೆ. ಆಟೋಗಳು ರಸ್ತೆಗಿಳಿಯುವುದು ಅನುಮಾನವಾಗಿದ್ದು, ಬಹುತೇಕ ಅಂಗಡಿ-ಮುಂಗಟ್ಟುಗಳು, ಹೋಟೆಲ್‌ಗಳು ಬಾಗಿಲು ತೆರೆಯುವುದಿಲ್ಲ.
ತುಮಕೂರು ನಗರ ಸೇರಿದಂತೆ 10 ತಾಲ್ಲೂಕುಗಳಲ್ಲೂ ಬಂದ್‌ಗೆ ಸಿದ್ಧತೆ ನಡೆದಿದೆ. ಆಯಾ ತಾಲ್ಲೂಕು ಕೇಂದ್ರಗಳಲ್ಲಿ ಹೋರಾಟಗಾರರು ಪ್ರತಿಭಟನೆ ಮಾಡಲಿದ್ದಾರೆ. ಜಿಲ್ಲಾದ್ಯಂತ ಬಂದ್ ಹಿನ್ನೆಲೆ, ಪೊಲೀಸ್ ಇಲಾಖೆಯಿಂದಲೂ ಬಿಗಿಭದ್ರತೆ ನಿಯೋಜಿಸಲಾಗಿದೆ. ಹೇಮಾವತಿ ನಾಲಾ ವಲಯದ ಗುಬ್ಬಿ, ತುರುವೇಕೆರೆ, ತುಮಕೂರಿನಲ್ಲಿ ಬಂದ್ ತೀವ್ರ ಸ್ವರೂಪ ಪಡೆಯೋ ಸಾಧ್ಯತೆಯಿದೆ. ಮೂರು ತಾಲ್ಲೂಕುಗಳಲ್ಲಿ ಯಾವುದೇ ಅಹಿತರಕರ ಘಟನೆ ನಡೆಯದಂತೆ ಕಟ್ಟೆಚ್ಚರ ವಹಿಸಲಾಗಿದೆ. ಇದನ್ನೂ ಓದಿ: ಬಹುಕೋಟಿ ಹಗರಣ ಕೇಸ್; ಇಡಿ ತನಿಖೆ ಬೆನ್ನಲ್ಲೇ ಎಸ್‌ಐಟಿಯಿಂದ ಮತ್ತೊಬ್ಬ ಆರೋಪಿ ಬಂಧನ!
ಮಿಶ್ರ ಪ್ರತಿಕ್ರಿಯೆ:
ಅಲ್ಲದೇ ಪ್ರತಿಭಟನಾ ನಿರತರು ಬಲವಂತವಾಗಿ ಯಾವುದೇ ಅಂಗಡಿ-ಮುಂಗಟ್ಟುಗಳನ್ನು ಮುಚ್ಚಿಸದಂತೆ ಪೊಲೀಸರು ಸೂಚನೆ ನೀಡಿದ್ದಾರೆ. ಹೀಗಿದ್ದೂ ಕೆಲವರು, ಬೈಕ್ ರ‍್ಯಾಲಿ ಮೂಲಕ ಅಂಗಡಿ-ಮುಂಗಟ್ಟುಗಳನ್ನು ಬಂದ್ ಮಾಡಿಸುವ ಪ್ರಯತ್ನ ನಡೆದಿದೆ. ಇನ್ನೂ ತುಮಕೂರು ನಗರದ ಸೇರಿದಂತೆ ಜಿಲ್ಲೆಯಾದ್ಯಂತ ವಾಹನ ಸಂಚಾರ ಎಂದಿನಂತೆ ಸಾಗಿದೆ, ಪ್ರತಿಭಟನೆ ಶುರುವಾದ ಬಳಿಕ ಬೆಂಬಲ ಹೇಗಿರಲಿದೆ ಎಂಬುದನ್ನು ಕಾದು ನೋಡಬೇಕಿದೆ. ಇದನ್ನೂ ಓದಿ: ಜಪಾನ್ ಅನ್ನು ಕಾಡುತ್ತಿದೆ ಮನುಷ್ಯನ ಮಾಂಸ ತಿನ್ನುವ ವೈರಸ್ – ಭಾರತಕ್ಕೂ ಇದೆಯಾ ಆತಂಕ?