Tag: ಪ್ರತಿಭಟನೆ

  • ಬರಪರಿಹಾರ ಬಿಡುಗಡೆ – ಇಂದು ಕೇಂದ್ರದ ವಿರುದ್ಧ ರಾಜ್ಯ ಸರ್ಕಾರ ಪ್ರತಿಭಟನೆ

    ಬರಪರಿಹಾರ ಬಿಡುಗಡೆ – ಇಂದು ಕೇಂದ್ರದ ವಿರುದ್ಧ ರಾಜ್ಯ ಸರ್ಕಾರ ಪ್ರತಿಭಟನೆ

    ಬೆಂಗಳೂರು: ಸೋಮವಾರದ ಒಳಗೆ ಬರ ಪರಿಹಾರ (Drought Relief) ಕೊಡುವ ಬಗ್ಗೆ ನಿರ್ಧಾರ ಮಾಡುತ್ತೇವೆ ಎಂದು ಕೇಂದ್ರ ಸರ್ಕಾರದ ನಿರ್ಧಾರ ಹಿನ್ನೆಲೆಯಲ್ಲಿ ಇಂದು ಕೇಂದ್ರದ ವಿರುದ್ಧ ರಾಜ್ಯ ಸರ್ಕಾರ ಪ್ರತಿಭಟನೆಗೆ (Protest) ನಿರ್ಧರಿಸಿದೆ.

    ಇಂದು (ಮಂಗಳವಾರ) ಬೆಳಗ್ಗೆ 10 ಗಂಟೆಗೆ ವಿಧಾನಸೌಧ ಆವರಣದ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಯಲಿದೆ. ಸಿಎಂ ಸಿದ್ದರಾಮಯ್ಯ (Siddaramaiah) ನೇತೃತ್ವದಲ್ಲಿ ಸಚಿವರು, ಶಾಸಕರು ಪ್ರತಿಭಟನೆ ನಡೆಸಲಿದ್ದಾರೆ. ಇದುವರೆಗೆ ಕೇಂದ್ರ ಮಾಡಿರುವ ಅನ್ಯಾಯ ಖಂಡಿಸಿ ಪ್ರತಿಭಟಿಸಲು ನಿರ್ಧರಿಸಲಾಗಿದೆ. ಇದನ್ನೂ ಓದಿ: ಬರ ಪರಿಹಾರ ಬಿಡುಗಡೆಗೆ ಈ ವಾರದಲ್ಲಿ ಕ್ರಮ – ಸುಪ್ರೀಂಗೆ ಕೇಂದ್ರ ಸರ್ಕಾರದ ಭರವಸೆ

    ಬರ ಪರಿಹಾರ ಬಿಡುಗಡೆ ವಿಚಾರಕ್ಕೆ ಸಂಬಂಧಿಸಿದಂತೆ ಈ ವಾರದಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಕೇಂದ್ರ ಸರ್ಕಾರದ ಪರ ವಕೀಲ ಅಟಾರ್ನಿ ಜನರಲ್ ಆರ್.ವೆಂಕಟರಮಣಿ ಸೋಮವಾರ ಸುಪ್ರೀಂಕೋರ್ಟ್‌ಗೆ ಹೇಳಿದ್ದಾರೆ. ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ನ್ಯಾ.ಬಿ.ಆರ್ ಗವಾಯಿ ನೇತೃತ್ವದ ದ್ವಿ ಸದಸ್ಯ ಪೀಠ ವಿಚಾರಣೆ ನಡೆಸಿತು. ಇದನ್ನೂ ಓದಿ: ರಾಜ್ಯ ಕ್ಯಾಂಪೇನ್‍ಗೆ ಪ್ರಿಯಾಂಕಾ ಗಾಂಧಿ- ಬೆಂಗಳೂರು, ಚಿತ್ರದುರ್ಗದಲ್ಲಿ ಪ್ರಚಾರ

  • ನೇಹಾ ಹತ್ಯೆ ಕೇಸ್ – ಎಬಿವಿಪಿಯಿಂದ ಗೃಹಸಚಿವರ ಮನೆ ಮುತ್ತಿಗೆಗೆ ಯತ್ನ

    ನೇಹಾ ಹತ್ಯೆ ಕೇಸ್ – ಎಬಿವಿಪಿಯಿಂದ ಗೃಹಸಚಿವರ ಮನೆ ಮುತ್ತಿಗೆಗೆ ಯತ್ನ

    ಬೆಂಗಳೂರು: ಹುಬ್ಬಳ್ಳಿಯ ನೇಹಾ ಹತ್ಯೆ ಪ್ರಕರಣ ಖಂಡಿಸಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ (ABVP) ಇಂದು ಪ್ರತಿಭಟನೆಗೆ ಮುಂದಾಗಿದ್ದು, ಬೆಂಗಳೂರಿನಲ್ಲಿರುವ ಗೃಹಸಚಿವ ಜಿ.ಪರಮೇಶ್ವರ್ (G Parameshwar) ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.

    ಶನಿವಾರ ಬೆಳಗ್ಗೆ ಗೃಹ ಸಚಿವರ ಮನೆಗೆ ಮುತ್ತಿಗೆ ಹಾಕಲು ಎಬಿವಿಪಿ ಮುಂದಾಗಿದೆ. ನಾಳೆ (ಭಾನುವಾರ) ರಾಜ್ಯಾದ್ಯಂತ ಪ್ರತಿಭಟನೆಗೆ ಎಬಿವಿಪಿ ಕರೆ ಕೊಟ್ಟಿದೆ. ಬೆಂಗಳೂರಿನಲ್ಲೂ ಹತ್ಯೆ ಖಂಡಿಸಿ ಎಬಿವಿಪಿ ಹೋರಾಟ ನಡೆಸಲಿದೆ. ಇದನ್ನೂ ಓದಿ: ಮಂಡ್ಯದಲ್ಲಿಂದು ಕಾಂಗ್ರೆಸ್, ಬಿಜೆಪಿ-ಜೆಡಿಎಸ್ ಸಮಾವೇಶ

    ಇನ್ನು ಈ ಪ್ರಕರಣವನ್ನು ಫಾಸ್ಟ್ ಟ್ರ್ಯಾಕ್ ಕೋರ್ಟ್‌ಗೆ ವರ್ಗಾವಣೆ ಮಾಡುವಂತೆ ಒತ್ತಾಯಿಸಿ ರಾಜ್ಯಾದ್ಯಂತ ಪ್ರತಿಭಟನೆ ನಡೆಯಲಿದೆ. ಸದ್ಯ ಗೃಹಸಚಿವ ಪರಮೇಶ್ವರ್ ಅವರ ಮನೆ ಮುಂದೆ ಪ್ರತಿಭಟನೆ ನಡೆಸಿ ಮುತ್ತಿಗೆ ಹಾಕಲು ಯತ್ನಿಸಿದವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: ‘ಲೋಕ’ ಚುನಾವಣೆ; ಬೆಂಗಳೂರಲ್ಲಿ 1 ಸಾವಿರ ಬಾರ್ & ರೆಸ್ಟೋರೆಂಟ್‌ಗಳಿಗೆ ನೋಟಿಸ್

  • ಸೋಮಶೇಖರ್ ಭಾವಚಿತ್ರಕ್ಕೆ ಮಸಿ ಬಳಿದು ಬಿಜೆಪಿ ಕಾರ್ಯಕರ್ತರ ಆಕ್ರೋಶ

    ಸೋಮಶೇಖರ್ ಭಾವಚಿತ್ರಕ್ಕೆ ಮಸಿ ಬಳಿದು ಬಿಜೆಪಿ ಕಾರ್ಯಕರ್ತರ ಆಕ್ರೋಶ

    – ನಡುರಸ್ತೆಯಲ್ಲೇ ಟೈರ್‌ಗೆ ಬೆಂಕಿ ಹಚ್ಚಿ ಪ್ರತಿಭಟನೆ

    ಬೆಂಗಳೂರು: ಶಾಸಕ ಎಸ್‌ಟಿ ಸೋಮಶೇಖರ್ (ST Somashekar) ಕಾಂಗ್ರೆಸ್‌ಗೆ (Congress)  ಅಡ್ಡಮತದಾನ (Cross Vote) ಮಾಡಿದ ಹಿನ್ನೆಲೆ ಆಕ್ರೋಶಗೊಂಡ ಬಿಜೆಪಿ (BJP) ಕಾರ್ಯಕರ್ತರು ಯಶವಂತಪುರದಲ್ಲಿರುವ (Yeswanthpur) ಸೋಮಶೇಖರ್ ಕಚೇರಿ ಮುಂದೆ ಪ್ರತಿಭಟನೆ (Protest) ನಡೆಸಿದ್ದಾರೆ.

    ಭಾವಚಿತ್ರಕ್ಕೆ ಮಸಿ ಬಳಿದು ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೇ ನಡುರಸ್ತೆಯಲ್ಲೇ ಟೈರ್‌ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದ್ದು, ಜೆಡಿಎಸ್ ಕಾರ್ಯಕರ್ತರೂ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ. ಕೆಂಗೇರಿ ಹೊಯ್ಸಳ ಸರ್ಕಲ್‌ನಲ್ಲಿ ಟೈರ್‌ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಲಾಗಿದೆ. ಇದನ್ನೂ ಓದಿ: ಲೋಕಸಮರ ಹೊತ್ತಲ್ಲಿ ದೋಸ್ತಿಗಳಿಗೆ ಮತ್ತೆ ಶಾಕ್- ಕಾಂಗ್ರೆಸ್ಸಿನ ಮೂವರು, ಬಿಜೆಪಿಯ ಒಬ್ಬರಿಗೆ ಗೆಲುವು

    ಬಿಜೆಪಿ ಕಾರ್ಯಕರ್ತರ ಪ್ರತಿಭಟನೆಯಲ್ಲಿ ಜೆಡಿಎಸ್ ಮುಖಂಡ ಮತ್ತು ಯಶವಂತಪುರ ಕ್ಷೇತ್ರದಲ್ಲಿ ಸೋತ ಅಭ್ಯರ್ಥಿ ಜವರಾಯೀಗೌಡ ಭಾಗಿಯಾಗಿದ್ದರು. ಇದನ್ನೂ ಓದಿ: ಸೋಲು ನಮಗೆ, ನಮ್ಮ ಕುಟುಂಬಕ್ಕೆ ಹೊಸದೇನು ಅಲ್ಲ: ಹೆಚ್‌ಡಿಕೆ

    ಸೋಮಶೇಖರ್ ಮತ್ತು ಶಿವರಾಂ ಹೆಬ್ಬಾರ್ ವಿರುದ್ಧ ಬಿಜೆಪಿ ನಾಯಕರು ಬುಧವಾರ ಸ್ಪೀಕರ್‌ಗೆ ದೂರು ನೀಡಲಿದ್ದಾರೆ. ಇಬ್ಬರ ಶಾಸಕತ್ವ ಅನರ್ಹತೆ ಮಾಡುವಂತೆ ಬಿಜೆಪಿ ಸ್ಪೀಕರ್‌ಗೆ ದೂರು ಕೊಡಲಿದೆ. ಇದನ್ನೂ ಓದಿ: ಇವರು ಪಕ್ಷಕ್ಕೆ ರಾಜೀನಾಮೆ ಕೊಟ್ಟು ಮತ ಹಾಕಬಹುದಿತ್ತು: ಸೋಮಶೇಖರ್ ವಿರುದ್ಧ ಅಶೋಕ್ ಕಿಡಿ

  • ಸರ್ಕಾರದ ವಿರುದ್ಧ ಶುಕ್ರವಾರ ರಾಜ್ಯಾದ್ಯಂತ ಪ್ರತಿಭಟನೆಗೆ ಬಿಜೆಪಿ ಕರೆ!

    ಸರ್ಕಾರದ ವಿರುದ್ಧ ಶುಕ್ರವಾರ ರಾಜ್ಯಾದ್ಯಂತ ಪ್ರತಿಭಟನೆಗೆ ಬಿಜೆಪಿ ಕರೆ!

    – ಸ್ಪೀಕರ್ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಲು ದೋಸ್ತಿಗಳು ಸಜ್ಜು

    ಬೆಂಗಳೂರು: ಸದನದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ನಿರ್ಣಯ ಮಂಡಿಸಿದ ಹಿನ್ನೆಲೆ ಸಿಡಿದೆದ್ದ ಬಿಜೆಪಿಗರು (BJP) ರಾಜ್ಯ ಸರ್ಕಾರದ ವಿರುದ್ಧ ಶುಕ್ರವಾರ (ಫೆ.23) ರಾಜ್ಯವ್ಯಾಪಿ ಪ್ರತಿಭಟನೆಗೆ (Protest) ಕರೆ ನೀಡಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ (BY Vijayendra) ರಾಜ್ಯವ್ಯಾಪಿ ಪ್ರತಿಭಟನೆಗೆ ಕರೆ ನೀಡಿದ್ದಾರೆ.

    ಸದನದಲ್ಲಿ ಸ್ಪೀಕರ್ (UT Khader) ನಡೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಬಿಜೆಪಿ ಹಾಗೂ ಜೆಡಿಎಸ್ (JDS) ಪಕ್ಷದ ನಾಯಕರು ಶುಕ್ರವಾರ ರಾಜಭವನಕ್ಕೆ ತೆರಳಲು ನಿರ್ಧರಿಸಿದ್ದಾರೆ. ಅಲ್ಲದೇ ಸ್ಪೀಕರ್ ವಿರುದ್ಧ ದೋಸ್ತಿ ಪಕ್ಷಗಳು ರಾಜ್ಯಪಾಲರಿಗೆ ದೂರು ನೀಡಲಿದ್ದಾರೆ. ಈ ಕುರಿತು ಬಿಜೆಪಿ ನಾಯಕರು ಸುದ್ದಿಗೋಷ್ಠಿ ನಡೆಸಿದ್ದು, ಸರ್ಕಾರ ಮತ್ತು ಸ್ಪೀಕರ್ ವಿರುದ್ಧ ಆರ್.ಅಶೋಕ್ (R Ashok) ಹಾಗೂ ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಭಿನ್ನಾಭಿಪ್ರಾಯಗಳನ್ನು ಮರೆತು ಗೆಲ್ಲಲೇಬೇಕು ಎಂಬ ಛಲದಿಂದ ಕೆಲಸ ಮಾಡಬೇಕು: ಕಾರ್ಯಕರ್ತರಿಗೆ ಸಿದ್ದರಾಮಯ್ಯ ಕರೆ

    ಕೇಂದ್ರದ ವಿರುದ್ಧ ನಿರ್ಣಯ ಮಂಡಿಸಿದ ಕುರಿತು ಆರ್ ಅಶೋಕ್ ಪ್ರತಿಕ್ರಿಯಿಸಿದ್ದು, ಇಂದು ಕರಾಳ ದಿನ. ಬಿಎಸಿ ಸಭೆಯಲ್ಲಿ ಬಿಲ್ ಬಗ್ಗೆ ಮಾತ್ರ ಹೇಳಿದ್ದಾರೆ. ಇವತ್ತು ಏಕಾಏಕಿ ಕಳ್ಳನ ರೀತಿ ಕೇಂದ್ರ ಸರ್ಕಾರದ ವಿರುದ್ಧ ನಿರ್ಣಯ ಮಾಡಿದ್ದಾರೆ. ಮುನ್ಸೂಚನೆ ನೀಡದೇ ಈ ರೀತಿ ಮಾಡಿದ್ದಾರೆ. ಕಳ್ಳರ ರೀತಿ ಮಾಡಿದ್ದಾರೆ. ಕೇಂದ್ರ ಸರ್ಕಾರದ ವಿರುದ್ಧ ದೂರುವ ಹಳೇ ಚಾಳಿ ಮುಂದುವರಿಸಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ (Lok Sabha Election) ಸೋಲಿನ ಭೀತಿಯಿಂದ ಈ ರೀತಿ ಮಾಡಿದ್ದಾರೆ. ರಾಜಾರೋಷವಾಗಿ ತನ್ನಿ ಚರ್ಚೆ ಮಾಡುತ್ತೇವೆ. ಆದರೆ ಮೋಸದಿಂದ ಇವತ್ತು ನಿರ್ಣಯ ಮಂಡಿಸಿದ್ದಾರೆ ಎಂದು ಕಿಡಿಕಾರಿದರು. ಇದನ್ನೂ ಓದಿ: 6,200 ಕೋಟಿಗೂ ಅಧಿಕ ಮೊತ್ತದ ಕಾಮಗಾರಿಗೆ ನಿತಿನ್‌ ಗಡ್ಕರಿ ಶಂಕುಸ್ಥಾಪನೆ

    ಇನ್ನೂ ರಾಜ್ಯ ಸರ್ಕಾರದ ನಿರ್ಣಯ ಕುರಿತು ಮಾತನಾಡಿದ ವಿಜಯೇಂದ್ರ, ಕೇಂದ್ರದ ಮೇಲೆ ಗೂಬೆ ಕೂರಿಸಿ ತಮ್ಮ ಬೇಳೆ ಬೇಯಿಸಿಕೊಳ್ಳುತ್ತಿದ್ದಾರೆ. ಇದನ್ನು ಬಿಜೆಪಿ ಗಂಭೀರವಾಗಿ ಪರಿಗಣಿಸಲಿದೆ. ಸರ್ಕಾರದ ನಡೆಯನ್ನು ಬಲವಾಗಿ ಖಂಡಿಸುತ್ತೇವೆ. ಶುಕ್ರವಾರ ರಾಜ್ಯಪಾಲರಿಗೂ ದೂರು ಕೊಡುತ್ತೇವೆ. ನಾವು ಇದನ್ನು ನೋಡಿಕೊಂಡು ಕಣ್ಮುಚ್ಚಿ ಕೂರಲ್ಲ. ಚುನಾವಣಾ ಸೋಲಿನ ಭಯದಿಂದ ಸದನದ ನೀತಿ, ಕಾನೂನು ಮೀರಿ ನಡೆದುಕೊಂಡಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ನಿಮ್ಮ ಹಣೆಬರಹ ಗೊತ್ತಾಗಲಿದೆ ಎಂದು ಹರಿಹಾಯ್ದರು. ಇದನ್ನೂ ಓದಿ: ಕರ್ನಾಟಕದಲ್ಲಿ ಕನ್ನಡ ಕಡ್ಡಾಯಕ್ಕೂ ಕ್ಯಾತೆ – ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ಮಹಾರಾಷ್ಟ್ರ ಸರ್ಕಾರ ತೀರ್ಮಾನ

    ಲೋಕಸಭೆ ಚುನಾವಣೆ ಸನಿಹದಲ್ಲಿರುವಾಗ ರಾಜ್ಯದಲ್ಲಿ ಧರ್ಮ ದಂಗಲ್ ತೀವ್ರಗೊಂಡಿದೆ. ಹಿಂದೂ ಧಾರ್ಮಿಕ ಸಂಸ್ಥೆಗಳ ಮತ್ತು ಧರ್ಮಾದಾಯ ದತ್ತಿಗಳ ವಿಧೇಯಕಕ್ಕೆ ನಿನ್ನೆಯಷ್ಟೇ ವಿಧಾನಸಭೆ ಅನುಮೋದನೆ ನೀಡಿತ್ತು. ಈ ಸಂದರ್ಭದಲ್ಲಿ ಸುಮ್ಮನೆ ಇದ್ದ ಬಿಜೆಪಿಗರು ಇವತ್ತು ಸರ್ಕಾರವನ್ನು ಟಾರ್ಗೆಟ್ ಮಾಡಿದ್ದಾರೆ. ಅಂದು ಘಜ್ನಿ ದೇವಸ್ಥಾನಗಳನ್ನು ನಿರಂತರವಾಗಿ ಲೂಟಿ ಮಾಡಿದ್ದ. ಇಂದು ಸಿದ್ದರಾಮಯ್ಯ ಸರ್ಕಾರ ದೇವಾಲಯಗಳ ಲೂಟಿಗಿಳಿದು ತಮ್ಮ ಕುರ್ಚಿಯನ್ನು ಭದ್ರ ಮಾಡಿಕೊಳ್ಳಲು ನೋಡುತ್ತಿದೆ. ಭಕ್ತರ ಕಾಣಿಕೆ ಹುಂಡಿಗೆ ಕನ್ನ ಹಾಕಿದ ಕಾಂಗ್ರೆಸ್ ಸರ್ಕಾರ ಶಾಪಗ್ರಸ್ಥವಾಗುವುದು ನಿಶ್ಚಿತ. ಹಿಂದೂಗಳಿಗೆ ದ್ರೋಹ ಬಗೆಯಲು ಸದಾ ಸಿದ್ದ ಸರ್ಕಾರ. ಉಂಡು ಹೋದ- ಹುಂಡಿ ಕೊಂಡು ಹೋದ ಎಂದು ಬಿಜೆಪಿ ಸರಣಿ ಟ್ವೀಟ್ ಮಾಡಿದ್ದು, #ಅವರ್‌ಟೆಂಪಲ್‌ಅವರ್‌ರೈಟ್ #ಹಿಂದುವಿರೋಧಿಕಾಂಗ್ರೆಸ್ ಎಂಬ ಹ್ಯಾಷ್ ಟ್ಯಾಗ್ ಹಾಕಿದೆ. ಇದನ್ನೂ ಓದಿ: ಕೇಂದ್ರದ ವಿರುದ್ಧ ನಿರ್ಣಯ ಅಂಗೀಕಾರ; ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಕೆಂಡಾಮಂಡಲ – ಸದನ ಅಲ್ಲೋಲ ಕಲ್ಲೋಲ!

    ಇನ್ನು, ರಾಜ್ಯ ಸರ್ಕಾರ ಆರ್ಥಿಕವಾಗಿ ಸಂಕಷ್ಟದಲ್ಲಿದ್ದು, ಶ್ರೀಮಂತ ದೇವಾಲಯಗಳಿಗೆ ಕನ್ನ ಹಾಕುವ ಕೆಲಸ ಮಾಡುತ್ತಿದೆ ಎಂದು ವಿಜಯೇಂದ್ರ ಕಿಡಿಕಾರಿದ್ದಾರೆ. ಹೀಗೆ ಕನ್ನ ಹಾಕುವ ಬದಲು ವಿಧಾನಸೌಧಧ ಮುಂದೆ ಒಂದು ಹುಂಡಿ ಇಟ್ಟುಬಿಡಲಿ. ದಾನಿಗಳು ಅಲ್ಲಿಗೆ ಬಂದು ದಾನ ಮಾಡುತ್ತಾರೆ ಎಂದು ಲೇವಡಿ ಮಾಡಿದ್ದಾರೆ. ಇನ್ನು, #ನೋಹುಂಡಿಕಾಣಿಕೆ ಎಂಬ ಹ್ಯಾಷ್‌ಟ್ಯಾಗ್ ಕೂಡ ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡ್ ಆಗಿದೆ. ಮುಜರಾಯಿ ವ್ಯಾಪ್ತಿಯ ದೇಗುಲಗಳಿಗೆ ಹುಂಡಿ ದುಡ್ಡನ್ನು ಹಾಕಬೇಡಿ. ಇದರ ಬದಲು ಬಡವರಿಗೆ, ಗೋಶಾಲೆಗಳಿಗೆ ಹಣವನ್ನು ನೀಡಿ. ಹುಂಡಿಗೆ ದುಡ್ಡು ನೀಡಿದರೆ ಅದನ್ನು ಸರ್ಕಾರ ಬಳಸಿಕೊಳ್ಳುತ್ತದೆ ಎಂದು ಹಿಂದೂಪರ ಸಂಘಟನೆಗಳು ಆಕ್ರೋಶ ಹೊರಹಾಕಿವೆ. ಇದನ್ನೂ ಓದಿ: ಚುನಾವಣೆ ಸ್ಪರ್ಧೆ ಕಾರಣಕ್ಕೆ ಪಕ್ಷಾಂತರ ಮಾಡಿರೋದು ಬೇಸರವಾಗಿದೆ: ಮುದ್ದಹನುಮೇಗೌಡ

  • ಸರ್ಕಾರದ ವಿರುದ್ದ ಸಮರ – ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರ ಉಪವಾಸ ಸತ್ಯಾಗ್ರಹ

    ಸರ್ಕಾರದ ವಿರುದ್ದ ಸಮರ – ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರ ಉಪವಾಸ ಸತ್ಯಾಗ್ರಹ

    ಬೆಂಗಳೂರು: ವೇತನ ಹೆಚ್ಚಳ (Salary Hike) ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇಂದು ಸಾರಿಗೆ ನೌಕರರು (Transport Staff) ಫ್ರೀಡಂಪಾರ್ಕ್‌ನಲ್ಲಿ ಉಪವಾಸ ಸತ್ಯಾಗ್ರಹ (Hunger Strike) ನಡೆಸಲು ಮುಂದಾಗಿದ್ದಾರೆ.

    ಸರ್ಕಾರದ ವಿರುದ್ದ ಸಾರಿಗೆ ಮುಖಂಡ ಅನಂತ ಸುಬ್ಬರಾವ್ ನೇತೃತ್ವದಲ್ಲಿ ಬೆಳಗ್ಗೆ 10:30 ರಿಂದ 5 ಗಂಟೆಯವರೆಗೆ ನೌಕರರ ಉಪವಾಸ ಸತ್ಯಾಗ್ರಹ ನಡೆಯಲಿದೆ.

    ಸಾರಿಗೆ ನೌಕರರಿಗೆ ಜನವರಿ 1ರಿಂದ ಹೊಸ ಒಪ್ಪಂದದ ಪ್ರಕಾರ ವೇತನ ಪರಿಷ್ಕರಣೆ ಆಗಬೇಕು. ಆದರೆ ಇಲ್ಲಿಯವರೆಗೆ ವೇತನ ಪರಿಷ್ಕರಣೆ ವಿಚಾರವನ್ನು ಸಾರಿಗೆ ನಿಗಮಗಳು ಪ್ರಸ್ತಾಪಿಸಿಲ್ಲ. ಹೀಗಾಗಿ ವೇತನ ಪರಿಷ್ಕರಣೆ ಸೇರಿದಂತೆ ಹಲವು ಬೇಡಿಕೆಗಳನ್ನಿಟ್ಟು ನೌಕರರು ಪ್ರತಿಭಟನೆಗೆ ಸಜ್ಜಾಗಿದ್ದಾರೆ.  ಇದನ್ನೂ ಓದಿ: ಲೋಕಸಭೆಗೆ ಮತ್ತೆ ಒಕ್ಕಲಿಗ ಕಾರ್ಡ್, ಎರಡೂವರೆ ವರ್ಷ ನಂತರ ಡಿಕೆ ಸಿಎಂ ಸಾಧ್ಯತೆ – ಒಕ್ಕಲಿಗ ನಾಯಕರ ಸಭೆಯ ಇನ್‌ಸೈಡ್‌ ಸುದ್ದಿ

    ಸಾರಿಗೆ ನೌಕರರ ಬೇಡಿಕೆಗಳು?
    – ಮೂಲ ವೇತನದ 25% ವೇತನ ಹೆಚ್ಚಿಸಬೇಕು.
    – ಎಲೆಕ್ಟ್ರಿಕ್ ಬಸ್‌ಗಳಲ್ಲಿ ಸಾರಿಗೆ ನಿಗಮದ ನೌಕರರನ್ನೇ  ಚಾಲಕರಾಗಿ ನೇಮಿಸಿಕೊಳ್ಳುವುದು.
    – ನಿವೃತ್ತಿ ನೌಕರರಿಗೆ ಅಂತಿಮವಾಗಿ ಬರಬೇಕಾದ ಹಣ ಕೊಡಬೇಕು ಮತ್ತು 38 ತಿಂಗಳ ವೇತನ ಹೆಚ್ಚಳದ ಬಾಕಿ ನೌಕರರಿಗೆ ನೀಡಬೇಕು.
    – ಎಲ್ಲಾ ನಿಗಮಗಳ ನೌಕರರ ಮುಂಬಡ್ತಿಗೆ ಕ್ರಮವಹಿಸುವುದು. ವಿವಿಧ ಭತ್ಯೆಗಳನ್ನ ಐದು ಪಟ್ಟು ಹೆಚ್ಚಿಸುವುದು.
    – ಉಚಿತ ಔಷಧಿ ಸೇರಿದಂತೆ ವೈದ್ಯಕೀಯ ಸೌಲಭ್ಯ ನೀಡಬೇಕು.

  • ರಾಮನಗರ ವಕೀಲರ ಹೋರಾಟಕ್ಕೆ ಕೊನೆಗೂ ಮಣಿದ ಸರ್ಕಾರ – ಐಜೂರು ಠಾಣೆಯ ಪಿಎಸ್ಐ ಅಮಾನತು

    ರಾಮನಗರ ವಕೀಲರ ಹೋರಾಟಕ್ಕೆ ಕೊನೆಗೂ ಮಣಿದ ಸರ್ಕಾರ – ಐಜೂರು ಠಾಣೆಯ ಪಿಎಸ್ಐ ಅಮಾನತು

    ರಾಮನಗರ: ವಕೀಲರ ಹೋರಾಟಕ್ಕೆ (Lawyers Protest) ಕೊನೆಗೂ ಸರ್ಕಾರ (Karnataka Government) ಮಣಿದಿದ್ದು ಐಜೂರು ಠಾಣೆ ಪಿಎಸ್ಐ ಸೈಯದ್ ತನ್ವೀರ್ ಹುಸೇನ್ ಅವರನ್ನು ಅಮಾನತು ಮಾಡಲಾಗಿದೆ.

    ರಾಮನಗರ (Ramangara) ಜಿಲ್ಲಾಡಳಿತ ಕಚೇರಿಯಲ್ಲಿ ಅಹೋರಾತ್ರಿ ಪ್ರತಿಭಟನೆ ನಡೆಸಿದ ಬಳಿಕ ಗುರುವಾರ ವಿಧಾನಸೌಧ ಚಲೋಗೆ ವಕೀಲರು ಕರೆ ನೀಡಿದ್ದರು. ವಕೀಲರ ಪ್ರತಿಭಟನೆಗೆ ರಾಜ್ಯಾದ್ಯಂತ ಬೆಂಬಲ ವ್ಯಕ್ತವಾಗುತ್ತಿದ್ದಂತೆ ಎಚ್ಚೆತ್ತ ಸರ್ಕಾರ ಮುಜುಗರ ತಪ್ಪಿಸಿಕೊಳ್ಳಲು ಪಿಎಸ್ಐ ಸೈಯದ್ ತನ್ವೀರ್ ಹುಸೇನ್ ಅವರನ್ನು ಅಮಾನತು ಮಾಡಿದೆ.

    ಅಮಾನತು ಆದೇಶದ ಬಗ್ಗೆ ಇಂದು ಸದನದಲ್ಲಿ ಗೃಹ ಸಚಿವ ಪರಮೇಶ್ವರ್‌ ಅವರು ಅಧಿಕೃತವಾಗಿ ಪ್ರಕಟಿಸಲಿದ್ದಾರೆ ಎಂಬ ವಿಚಾರ ತಿಳಿದು ಬಂದಿದೆ.  ಇದನ್ನೂ ಓದಿ: ವರ್ತೂರು ಸಂತೋಷ್ ಟೀಮ್ ವಿರುದ್ಧ ಜಗ್ಗೇಶ್ ದೂರು

    40 ವಕೀಲರ ವಿರುದ್ಧ ಸುಳ್ಳು ಎಫ್‌ಐಆರ್‌ ದಾಖಲಿಸಿದ ಸೈಯದ್ ತನ್ವೀರ್ ಹುಸೇನ್ ಅವರನ್ನು ಅಮಾನತು ಮಾಡಬೇಕೆಂದು ಆಗ್ರಹಿಸಿ ರಾಮನಗರ ವಕೀಲರು ವಾರದಿಂದ ಪ್ರತಿಭಟನೆ ನಡೆಸುತ್ತಿದ್ದರು. ಈ ಪ್ರತಿಭಟನೆಗೆ ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಮತ್ತು ವಿಧಾನಸಭೆಯ ವಿಪಕ್ಷ ನಾಯಕ ಅಶೋಕ್‌ ಬೆಂಬಲ ನೀಡಿ ದೊಡ್ಡ ಮಟ್ಟದಲ್ಲಿ ಪ್ರತಿಭಟನೆ ನಡೆಸುವಂತೆ ಕರೆ ನೀಡಿದ್ದರು.

    ಪಿಎಸ್ಐ ಅಮಾನತು ಯಾಕೆ?
    ಉತ್ತರ ಪ್ರದೇಶದ ಜ್ಞಾನವಾಪಿ ಮಸೀದಿ (Gyanvapi Mosque) ನೆಲಮಹಡಿಯಲ್ಲಿ ಪೂಜೆ ಸಲ್ಲಿಸಲು ತೀರ್ಪು ನೀಡಿದ ವಾರಾಣಸಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಎಸ್​ಡಿಪಿಐ ಕಾರ್ಯಕರ್ತ, ವಕೀಲ ಚಾಂದ್ ಪಾಷಾ ಅವಹೇಳನಕಾರಿಯಾಗಿ ಪೋಸ್ಟ್‌ ಹಾಕಿದ್ದ. ಇದನ್ನೂ ಓದಿ: ಸುಪ್ರೀಂ ಕೋರ್ಟ್‌ ಖ್ಯಾತ ವಕೀಲ ಫಾಲಿ ನಾರಿಮನ್ ನಿಧನ

    ನ್ಯಾಯಾಧೀಶರ ವಿರುದ್ಧವೇ ಪೋಸ್ಟ್‌ ಹಾಕಿದ್ದಕ್ಕೆ ಹಿಂದೂಪರ ಕಾರ್ಯಕರ್ತರು ಎಸ್‌ಪಿ ಹಾಗೂ ವಕೀಲರ ಸಂಘಕ್ಕೆ ದೂರು ನೀಡಿದ್ದರು. ಈ ಸಂಬಂಧ ವಕೀಲ ಚಾನ್ ಪಾಷಾ ಮೇಲೆ ಎಫ್‌ಐಆರ್‌ ದಾಖಲಾಗಿ ಬಂಧಿಸಲಾಗಿತ್ತು. ನ್ಯಾಯಾಂಗ ನಿಂದನೆ ಮಾಡಿದ ಹಿನ್ನೆಲೆಯಲ್ಲಿ ಚಾನ್ ಪಾಷಾ ಮೇಲೆ ವಕೀಲರ ಸಂಘ ಕ್ರಮ ಕೈಗೊಳ್ಳಲು ಮುಂದಾಗಿತ್ತು. ಈ ವೇಳೆ ಚಾನ್ ಪಾಷಾ ಬೆಂಬಲಿಗರು ವಕೀಲರ ಸಂಘಕ್ಕೆ ಭೇಟಿ ನೀಡಿ ಕ್ರಮ ಕೈಗೊಳ್ಳದಂತೆ ಮನವಿ ಮಾಡಿದ್ದರು.

    ಮನವಿ ನೀಡುವ ವೇಳೆ ವಕೀಲರ ಸಂಘದ ಆವರಣದಲ್ಲಿ ಚಾನ್ ಪಾಷಾ ಬೆಂಬಲಿಗರು ಹಾಗೂ ವಕೀಲರ ನಡುವೆ ಗಲಾಟೆ ನಡೆದಿದೆ. ಗಲಾಟೆ ಬಳಿಕ ಚಾನ್ ಪಾಷಾ ಬೆಂಬಲಿಗರ ವಿರುದ್ಧ ವಕೀಲರು ದೂರು ನೀಡಿದ್ದರು. ಈ ಸಂಬಂಧ ಎಫ್ಐಆರ್ ದಾಖಲಾಗಿತ್ತು. ನಂತರ ಚಾನ್ ಪಾಷಾ ಬೆಂಬಲಿಗರಿಂದ ಪ್ರತಿ ದೂರು ದಾಖಲಾಯಿತು.

    ವಕೀಲರ ಸಂಘಕ್ಕೆ ನಾವು ಮನವಿ ಮಾಡಿಕೊಡಲು ಹೋದ ವೇಳೆ ನಮ್ಮ‌ ಮೇಲೆ ಹಲ್ಲೆ, ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ರಫೀಕ್‌ ಖಾನ್‌ ಎಂಬವರು ದೂರು ನೀಡಿದ್ದರು. ದೂರು ಸ್ವೀಕರಿಸಿ 40 ವಕೀಲರ ಮೇಲೆ ಐಜೂರು ಪಿಎಸ್ ಐ ತನ್ವೀರ್ ಎಫ್ಐಆರ್ ದಾಖಲಿಸಿದ್ದರು.

    ಗಲಾಟೆ ವೇಳೆ ಸ್ಥಳದಲ್ಲಿ ಇಲ್ಲದ ವಕೀಲರ ಮೇಲೂ ಸುಳ್ಳು ಎಫ್‌ಐಆರ್‌ ದಾಖಲು ಮಾಡಲಾಗಿದೆ ಎನ್ನುವುದು ವಕೀಲರ ವಾದ. ನಂತರ ಸುಳ್ಳು ಎಫ್‌ಐಆರ್‌ ದಾಖಲಿಸಲಾಗಿದೆ ಎಂದು ಆರೋಪಿಸಿ ಪಿಎಸ್‌ಐ ಅಮಾನತಿಗೆ ಆಗ್ರಹಿಸಿ ಪ್ರತಿಭಟಿಸಿದ್ದರು. ಈ ಪ್ರತಿಭಟನೆಗೆ ಸರ್ಕಾರದಿಂದ ಯಾವುದೇ ಸ್ಪಂದನೆ ದೊರೆಯದೇ ಇದ್ದಾಗ ಈಗ ಅಹೋರಾತ್ರಿ ಡಿಸಿ ಕಚೇರಿ ಮುಂದೆ ವಕೀಲರು ಪ್ರತಿಭಟನೆ ನಡೆಸಿದ್ದರು.

     

  • ವಕೀಲರು Vs ಪೊಲೀಸರು – ಫೇಸ್‌ಬುಕ್‌ ಪೋಸ್ಟ್‌ನಿಂದ ಅಹೋರಾತ್ರಿ ಧರಣಿಯವರೆಗೆ: ರಾಮನಗರದಲ್ಲಿ ಪ್ರತಿಭಟನೆ ಯಾಕೆ?

    ವಕೀಲರು Vs ಪೊಲೀಸರು – ಫೇಸ್‌ಬುಕ್‌ ಪೋಸ್ಟ್‌ನಿಂದ ಅಹೋರಾತ್ರಿ ಧರಣಿಯವರೆಗೆ: ರಾಮನಗರದಲ್ಲಿ ಪ್ರತಿಭಟನೆ ಯಾಕೆ?

    ರಾಮನಗರ: ವಕೀಲರು (Lawyers) ಮತ್ತು ಪೊಲೀಸರ (Police) ಮಧ್ಯೆ ವಾರದಿಂದ ನಡೆಯುತ್ತಿರುವ ಪ್ರತಿಭಟನೆ (Protest) ಈಗ ತೀವ್ರ ಸ್ವರೂಪ ಪಡೆದುಕೊಂಡಿದೆ. ಈ ಪ್ರತಿಭಟನೆಗೆ ಮೂಲ ಕಾರಣವಾಗಿದ್ದು ಒಂದು ಫೇಸ್‌ಬುಕ್‌ ಪೋಸ್ಟ್‌

    ಉತ್ತರ ಪ್ರದೇಶದ ಜ್ಞಾನವಾಪಿ ಮಸೀದಿ (Gyanvapi Mosque) ನೆಲಮಹಡಿಯಲ್ಲಿ ಪೂಜೆ ಸಲ್ಲಿಸಲು ತೀರ್ಪು ನೀಡಿದ ವಾರಾಣಸಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಎಸ್​ಡಿಪಿಐ ಕಾರ್ಯಕರ್ತ, ವಕೀಲ ಚಾಂದ್ ಪಾಷಾ ಅವಹೇಳನಕಾರಿಯಾಗಿ ಪೋಸ್ಟ್‌ ಹಾಕಿದ್ದ.

    ನ್ಯಾಯಾಧೀಶರ ವಿರುದ್ಧವೇ ಪೋಸ್ಟ್‌ ಹಾಕಿದ್ದಕ್ಕೆ ಹಿಂದೂಪರ ಕಾರ್ಯಕರ್ತರು ಎಸ್‌ಪಿ ಹಾಗೂ ವಕೀಲರ ಸಂಘಕ್ಕೆ ದೂರು ನೀಡಿದ್ದರು. ಈ ಸಂಬಂಧ ವಕೀಲ ಚಾನ್ ಪಾಷಾ ಮೇಲೆ ಎಫ್‌ಐಆರ್‌ ದಾಖಲಾಗಿ ಬಂಧಿಸಲಾಗಿತ್ತು.  ಇದನ್ನೂ ಓದಿ: ಕರ್ನಾಟಕ, ಜಮ್ಮು- ಕಾಶ್ಮೀರ ಸೇರಿ ದೇಶದ ವಿವಿಗಳ ಅಭಿವೃದ್ಧಿಗೆ 3600 ಕೋಟಿ ರೂ. ಬಿಡುಗಡೆ

    ನ್ಯಾಯಾಂಗ ನಿಂದನೆ ಮಾಡಿದ ಹಿನ್ನೆಲೆಯಲ್ಲಿ ಚಾನ್ ಪಾಷಾ ಮೇಲೆ ವಕೀಲರ ಸಂಘ ಕ್ರಮ ಕೈಗೊಳ್ಳಲು ಮುಂದಾಗಿತ್ತು. ಈ ವೇಳೆ ಚಾನ್ ಪಾಷಾ ಬೆಂಬಲಿಗರು ವಕೀಲರ ಸಂಘಕ್ಕೆ ಭೇಟಿ ನೀಡಿ ಕ್ರಮ ಕೈಗೊಳ್ಳದಂತೆ ಮನವಿ ಮಾಡಿದ್ದರು.

     

    ಮನವಿ ನೀಡುವ ವೇಳೆ ವಕೀಲರ ಸಂಘದ ಆವರಣದಲ್ಲಿ ಚಾನ್ ಪಾಷಾ ಬೆಂಬಲಿಗರು ಹಾಗೂ ವಕೀಲರ ನಡುವೆ ಗಲಾಟೆ ನಡೆದಿದೆ. ಗಲಾಟೆ ಬಳಿಕ ಚಾನ್ ಪಾಷಾ ಬೆಂಬಲಿಗರ ವಿರುದ್ಧ ವಕೀಲರು ದೂರು ನೀಡಿದ್ದರು. ಈ ಸಂಬಂಧ ಎಫ್ಐಆರ್ ದಾಖಾಲಾಗಿತ್ತು. ನಂತರ ಚಾನ್ ಪಾಷಾ ಬೆಂಬಲಿಗರಿಂದ ಪ್ರತಿ ದೂರು ದಾಖಲಾಯಿತು.

    ವಕೀಲರ ಸಂಘಕ್ಕೆ ನಾವು ಮನವಿ ಮಾಡಿಕೊಡಲು ಹೋದ ವೇಳೆ ನಮ್ಮ‌ ಮೇಲೆ ಹಲ್ಲೆ, ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ರಫೀಕ್‌ ಖಾನ್‌ ಎಂಬವರು ದೂರು ನೀಡಿದ್ದರು. ದೂರು ಸ್ವೀಕರಿಸಿ 40 ವಕೀಲರ ಮೇಲೆ ಐಜೂರು ಪಿಎಸ್ ಐ ತನ್ವೀರ್ ಎಫ್ಐಆರ್ ದಾಖಲಿಸಿದ್ದಾರೆ. ಇದನ್ನೂ ಓದಿ: ಪಿಎಸ್‌ಐ ಅಮಾನತಿಗೆ ಆಗ್ರಹಿಸಿ ರಾಮನಗರದಲ್ಲಿ ಅಹೋರಾತ್ರಿ ಡಿಸಿ ಕಚೇರಿ ಮುಂದೆ ವಕೀಲರ ಪ್ರತಿಭಟನೆ

    ಗಲಾಟೆ ವೇಳೆ ಸ್ಥಳದಲ್ಲಿ ಇಲ್ಲದ ವಕೀಲರ ಮೇಲೂ ಸುಳ್ಳು ಎಫ್‌ಐಆರ್‌ ದಾಖಲು ಮಾಡಲಾಗಿದೆ ಎನ್ನುವುದು ವಕೀಲರ ವಾದ. ನಂತರ ಸುಳ್ಳು ಎಫ್‌ಐಆರ್‌ ದಾಖಲಿಸಲಾಗಿದೆ ಎಂದು ಆರೋಪಿಸಿ ಪಿಎಸ್‌ಐ ಅಮಾನತಿಗೆ ಆಗ್ರಹಿಸಿ ಪ್ರತಿಭಟಿಸಿದ್ದರು. ಈ ಪ್ರತಿಭಟನೆಗೆ ಸರ್ಕಾರದಿಂದ ಯಾವುದೇ ಸ್ಪಂದನೆ ದೊರೆಯದೇ ಇದ್ದಾಗ ಈಗ ಅಹೋರಾತ್ರಿ ಡಿಸಿ ಕಚೇರಿ ಮುಂದೆ ವಕೀಲರು ಪ್ರತಿಭಟನೆ ನಡೆಸುತ್ತಿದ್ದಾರೆ.

     

  • ಪಿಎಸ್‌ಐ ಅಮಾನತಿಗೆ ಆಗ್ರಹಿಸಿ ರಾಮನಗರದಲ್ಲಿ ಅಹೋರಾತ್ರಿ ಡಿಸಿ ಕಚೇರಿ ಮುಂದೆ ವಕೀಲರ ಪ್ರತಿಭಟನೆ

    ಪಿಎಸ್‌ಐ ಅಮಾನತಿಗೆ ಆಗ್ರಹಿಸಿ ರಾಮನಗರದಲ್ಲಿ ಅಹೋರಾತ್ರಿ ಡಿಸಿ ಕಚೇರಿ ಮುಂದೆ ವಕೀಲರ ಪ್ರತಿಭಟನೆ

    – ಡಿಸಿ ಕಚೇರಿಗೆ ಗೇಟ್‌ಗೆ ಬೀಗ ಜಡಿದು ಪ್ರತಿಭಟನೆ
    –  ಡಿಸಿ, ಎಸ್‌ಪಿ ಸೇರಿ ಅಧಿಕಾರಿಗಳಿಗೆ ರಾಜಕೀಯ ಒತ್ತಡ ಇದೆ

    ರಾಮನಗರ: ಪೋಲಿಸರು (Police) ಮತ್ತು ವಕೀಲರ (Lawyers) ನಡುವಿನ ಸಂಘರ್ಷ ಮುಗಿಲುಮುಟ್ಟಿದೆ. 40 ವಕೀಲರ ಮೇಲೆ ಎಫ್‌ಐಆರ್ (FIR) ಖಂಡಿಸಿ ಕಳೆದೊಂದು ವಾರದಿಂದ ವಕೀಲರ ಸಂಘ ಮಾಡುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದಿದೆ.

    ಐಜೂರು ಠಾಣೆ ಪಿಎಸ್‌ಐ ತನ್ವೀರ್ ಹುಸೇನ್ ಅಮಾನತಿಗೆ ಪಟ್ಟು ಹಿಡಿದು ರಾಮನಗರದಲ್ಲಿ (Ramanagara) ಪ್ರತಿಭಟನಾ ಮೆರವಣಿಗೆ ಮಾಡಿದ ಸಾವಿರಾರು ವಕೀಲರು ಸೋಮವಾರ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದರು. ಇದನ್ನೂ ಓದಿ: ಮಾರ್ಚ್‌ ತಿಂಗಳಲ್ಲಿ ತಮಿಳುನಾಡು ಸರ್ಕಾರಕ್ಕೆ ಜಯಲಲಿತಾ ಒಡವೆ ಹಸ್ತಾಂತರ: ಕೋರ್ಟ್‌ನಿಂದ ದಿನಾಂಕ ನಿಗದಿ

    ಪ್ರತಿಭಟನೆಗೆ ಜಿಲ್ಲಾಧಿಕಾರಿ ಅವಿನಾಶ್ ಮೆನನ್ ಮತ್ತು ಪೊಲೀಸ್‌ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿ ಬಗ್ಗದ ಹಿನ್ನೆಲೆಯಲ್ಲಿ ಅಹೋರಾತ್ರಿ ಡಿಸಿ ಕಚೇರಿಯ ಎರಡೂ ಗೇಟ್‌ಗೆ ಬೀಗ ಜಡಿದು ಹಾಸಿಗೆ ಹಾಸಿ ವಕೀಲರು ಮಲಗಿ ಪ್ರತಿಭಟಿಸಿದ್ದಾರೆ.  ಇದನ್ನೂ ಓದಿ: ರಾಮನಗರ ಎಸ್ಪಿಯನ್ನ ಸಸ್ಪೆಂಡ್ ಮಾಡಿ – ವಕೀಲರ ಬೆಂಬಲಕ್ಕೆ ನಿಂತ ಹೆಚ್‌ಡಿಕೆ

    ತನಿಖೆ ಮಾಡಿ ಕ್ರಮ ಕೈಗೊಳ್ತೇವೆ ಎಂದ ಡಿಸಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ವಕೀಲರು, ಡಿಸಿ, ಎಸ್‌ಪಿ ಸೇರಿ ಅಧಿಕಾರಿಗಳಿಗೆ ರಾಜಕೀಯ ಒತ್ತಡ ಇದೆ. ಡಿಸಿಎಂ ಡಿಕೆ ಶಿವಕುಮಾರ್‌, ಡಿ.ಕೆ.ಸುರೇಶ್, ಶಾಸಕ ಇಕ್ಬಾಲ್ ಹುಸೇನ್ ಒತ್ತಡಕ್ಕೆ ಮಣಿದಿದ್ದಾರೆ. ಈ ಕಾರಣಕ್ಕೆ ವಿಧಾನಸೌಧ ಚಲೋಗೆ ಕರೆ ನೀಡುತ್ತಿದ್ದೇವೆ. ಈ ವೇಳೆ ಏನೇ ತೊಂದರೆ ಆದರೂ ರಾಮನಗರ ಜಿಲ್ಲಾಡಳಿತ ಹೊಣೆ ಎಂದು ವಕೀಲರ ಪರಿಷತ್ ಅಧ್ಯಕ್ಷ ವಿಶಾಲ್ ರಘು ಎಚ್ಚರಿಕೆ ನೀಡಿದ್ದಾರೆ.

     

    ಮೈತ್ರಿ ನಾಯಕರು ಸಾಥ್‌
    ರಾಮನಗರದಲ್ಲಿ ವಕೀಲರ ಪ್ರತಿಭಟನೆಗೆ ಮೈತ್ರಿ ನಾಯಕರಾದ ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ಮತ್ತು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ (R Ashok) ಸಾಥ್‌ ನೀಡಿದ್ದಾರೆ. ಡಿಕೆ ಬ್ರದರ್ಸ್ (DK Brothers) ವಿರುದ್ಧ ಪರೋಕ್ಷವಾಗಿ ಎಚ್‌ಡಿಕೆ ವಾಗ್ದಾಳಿ ನಡೆಸಿ ಸದನದಲ್ಲಿ ಮಂಗಳವಾರ ಈ ವಿಷಯದ ಬಗ್ಗೆ ಚರ್ಚೆ ನಡೆಸುವುದಾಗಿ ಹೇಳಿದ್ದಾರೆ. ಇನ್ನು ದೊಡ್ಡ ಮಟ್ಟದಲ್ಲಿ ಪ್ರತಿಭಟನೆ ಮಾಡುವಂತೆ ಅಶೋಕ್ ಕರೆ ನೀಡಿದ್ದಾರೆ.

    ವಕೀಲರ ಪ್ರತಿಭಟನೆ ಯಾಕೆ?
    ಉತ್ತರ ಪ್ರದೇಶದ ಜ್ಞಾನವಾಪಿ ಮಸೀದಿ ನೆಲಮಹಡಿಯಲ್ಲಿ ಪೂಜೆ ಸಲ್ಲಿಸಲು ತೀರ್ಪು ನೀಡಿದ ವಾರಾಣಸಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿಯಾಗಿ ಪೋಸ್ಟ್​ ಹಾಕಿದ್ದ ಎಸ್​ಡಿಪಿಐ ಕಾರ್ಯಕರ್ತ, ವಕೀಲ ಚಾಂದ್ ಪಾಷಾ ಎಂಬಾತನನ್ನು ಪೊಲೀಸರು ಬಂಧಿಸಿದ್ದರು.

    ವಕೀಲ ಚಾಂದ್‌ ಪಾಷಾ ಪ್ರಕರಣವು ಕೋಮು ಸ್ವರೂಪ ಪಡೆದು ವಕೀಲರ ಎರಡು ಬಣಗಳ ನಡುವೆ ಘರ್ಷಣೆಗೆ ಕಾರಣವಾಗಿತ್ತು. ನಂತರ ಚಾಂದ್ ಪಾಷಾರ ಕಡೆಯೊಬ್ಬರು ನೀಡಿದ್ದದೂರಿನ ಆಧಾರದ ಮೇಲೆ ಐಜೂರು ಪೊಲೀಸರು ವಕೀಲರ ಸಂಘದ 40 ವಕೀಲರ ವಿರುದ್ಧ ಎಫ್​ಐಆರ್​ ದಾಖಲಿಸಿದ್ದರು. ಈ ಎಫ್‌ಐಆರ್‌ ರದ್ದುಗೊಳಿಸಬೇಕು ಮತ್ತು ಪಿಎಸ್‌ಐ ತನ್ವೀರ್ ಹುಸೇನ್ ಅವರನ್ನು ಅಮಾನತು ಮಾಡಬೇಕು ಎಂದು ಆಗ್ರಹಿಸಿ ವಕೀಲರು ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿದ್ದಾರೆ.

     

  • ರಾಮನಗರ ಎಸ್ಪಿಯನ್ನ ಸಸ್ಪೆಂಡ್ ಮಾಡಿ – ವಕೀಲರ ಬೆಂಬಲಕ್ಕೆ ನಿಂತ ಹೆಚ್‌ಡಿಕೆ

    ರಾಮನಗರ ಎಸ್ಪಿಯನ್ನ ಸಸ್ಪೆಂಡ್ ಮಾಡಿ – ವಕೀಲರ ಬೆಂಬಲಕ್ಕೆ ನಿಂತ ಹೆಚ್‌ಡಿಕೆ

    – ವಕೀಲರ ಆಹೋರಾತ್ರಿ ಧರಣಿಗೆ ಅಶೋಕ್‌, ಹೆಚ್‌ಡಿಕೆ ಸಾಥ್‌
    – ರಾಮನಗರದಲ್ಲಿ ಮುಂದುವರಿದ ಪೊಲೀಸರು-ವಕೀಲರ ಜಟಾಪಟಿ

    ರಾಮನಗರ: ರಾಮನಗರದಲ್ಲಿ ಪೋಲಿಸರು-ವಕೀಲರ ನಡುವಿನ ಸಂಘರ್ಷ ಮುಂದುವರಿದಿದೆ. 40 ವಕೀಲರ ಮೇಲೆ ಎಫ್‌ಐಆರ್ ಖಂಡಿಸಿ ಕಳೆದೊಂದು ವಾರದಿಂದ ವಕೀಲ ಸಂಘ ಮಾಡ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದಿದೆ.

    ಸೋಮವಾರ ರಾಮನಗರದಲ್ಲಿ ನಡೆಯುತ್ತಿರುವ ವಕೀಲರ ಪ್ರತಿಭಟನಾ ಸ್ಥಳಕ್ಕೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಪ್ರತಿಪಕ್ಷ ನಾಯಕ ಆರ್‌.ಅಶೋಕ್‌ ಸೇರಿದಂತೆ ಪ್ರಮುಖ ನಾಯಕರು ಭೇಟಿ ನೀಡಿದ್ದಾರೆ. ಈ ವೇಳೆ ವಕೀಲರ ಸಮಸ್ಯೆ ಆಲಿಸಿದ ಹೆಚ್‌ಡಿಕೆ ಈ ವಿಚಾರದಲ್ಲಿ ಕೇವಲ ಪಿಎಸ್‌ಐ ಮಾತ್ರವಲ್ಲ, ಎಸ್ಪಿಯನ್ನೇ ಸಸ್ಪೆಂಡ್ ಮಾಡಬೇಕು ಅಂತ ಒತ್ತಾಯಿಸಿದ್ದಾರೆ.

    ಯಾರೋ ರಫೀಕ್ ಎಂಬಾತ ವಕೀಲರ ಮೇಲೆ ದೂರು ನೀಡಿದ್ದಾನೆ. ಯಾರೋ ಪ್ರಗತಿಪರರು ವಕೀಲರ ಸಂಘದಲ್ಲಿ ಹೋಗಿ ಗಲಾಟೆ ಆಗಿದೆ ಅಂದರು. ಎಷ್ಟು ಜನ ಪ್ರಗತಿಪರರಿಗೆ ಗಾಯ ಆಗಿದೆ? ಎಷ್ಟು ಜನ ಆಸ್ಪತ್ರೆಗೆ ಸೇರಿದ್ದಾರೆ? ಇಲ್ಲಿ ಸ್ಥಳೀಯ ಶಾಸಕ, ಜಿಲ್ಲಾ ಮಂತ್ರಿ ಆಡಳಿತ ಮಾಡ್ತಿದ್ದೀರಾ ಅಥವಾ ಪ್ರಗತಿಪರರು ಆಡಳಿತ ಮಾಡ್ತಿದ್ದೀರಾ.? ನ್ಯಾಯಾಲಯದ ಬಗ್ಗೆ ಫೇಸ್ ಬುಕ್ ನಲ್ಲಿ ಬರೆದಿದ್ದಿದ್ದು ಒಬ್ಬ ಮುಸ್ಲಿಂ, ದೂರು ಕೊಟ್ಟಿದ್ದು ಮುಸ್ಲಿಂ, ಸ್ಥಳೀಯ ಶಾಸಕ ಮುಸ್ಲಿಂ, ಇಲ್ಲಿನ ಪಿಎಸ್‌ಐ ಸಹ ಮುಸ್ಲಿಂ, ಅಲ್ಲಿ ಏನು ನಡೆಯುತ್ತಿದೆ ಅಂತ ಗೊತ್ತಾಗ್ತಿದೆ. ವಕೀಲರ ಆವರಣಕ್ಕೆ ಹೋಗಲು ಇವರಿಗೆ ಅನುಮತಿ ಕೊಟ್ಟಿದ್ದು ಯಾರು? ವಕೀಲ ಸಂಘಕ್ಕೆ ಮನವಿ ಕೊಡಲು ಡಿಸ್ಟ್ರಿಕ್ಟ್ ಜಡ್ಜ್ ಅನುಮತಿ ಕೊಡಬೇಕು, ಕೊಟ್ಟಿದ್ದಾರಾ? ಎಂದು ಪ್ರಶ್ನೆಗಳ ಸುರಿಮಳೆ ಸುರಿಸಿದ್ದಾರೆ.

    ಚಾನ್ ಪಾಷಾ ಎಂಬ ವ್ಯಕ್ತಿ ನ್ಯಾಯಾಂಗ ನಿಂದನೆ ಪೋಸ್ಟ್ ಹಾಕಿದ್ದ. ಆತನ ಮೇಲೆ ಯಾವ ಸೆಕ್ಷನ್ ಹಾಕಿದ್ರಿ? ಆತನ ಪರವಾಗಿ ವಕೀಲರ ಸಂಘಕ್ಕೆ ರಫೀಕ್ ಹಾಗೂ ಪ್ರಗತಿಪರರು ಹೋಗಿದ್ದಾರೆ. ಇದರಲ್ಲಿ ಸ್ಥಳೀಯ ಶಾಸಕನ ಕೈವಾಡ ಏನು ಎಂಬುದು ನನಗೆ ಗೊತ್ತು? ಬೆಂಗಳೂರಿನಿಂದ ಯಾವನು ಡೈರೆಕ್ಷನ್ ಕೊಟ್ಟ ಅಂತ ಗೊತ್ತು. ಈ ಘಟನೆಯನ್ನ ಮುಚ್ಚಿಹಾಕಿಸುವ ಹುನ್ನಾರ ನಡೆಯುತ್ತಿದೆ ಎಂದು ಕಿಡಿಕಾರಿದ್ದಾರೆ.

  • ನನ್ನ ಪತಿಯನ್ನ ಕೊಂದಿದ್ದು ಪುಟಿನ್‌ – ಮೃತ ಅಲೆಕ್ಸಿ ನವಲ್ನಿ ಪತ್ನಿ ಕಣ್ಣೀರು!

    ನನ್ನ ಪತಿಯನ್ನ ಕೊಂದಿದ್ದು ಪುಟಿನ್‌ – ಮೃತ ಅಲೆಕ್ಸಿ ನವಲ್ನಿ ಪತ್ನಿ ಕಣ್ಣೀರು!

    ಮಾಸ್ಕೋ: ಅಲೆಕ್ಸಿ ನವಲ್ನಿ (Alexei Navalny) ನಿಗೂಢ ಸಾವಿನ ಕುರಿತು ಅವರ ಪತ್ನಿ ಯೂಲಿಯಾ ನವಲ್ನಾಯಾ, ರಷ್ಯಾ ಅಧ್ಯಕ್ಷ ಪುಟಿನ್‌ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ವ್ಲಾಡಿಮಿರ್‌ ಪುಟಿನ್‌ (Vladimir Putin) ತನ್ನ ಪತಿಯನ್ನ ಕೊಂದಿದ್ದಾರೆ ಎಂದು ಆರೋಪಿಸಿದ್ದಾರೆ.

    ಸೋಮವಾರ (ಫೆ.19) ಬಿಡುಗಡೆಯಾದ ವೀಡಿಯೋವೊಂದರಲ್ಲಿ ನವಲ್ನಿ ಪತ್ನಿ ಕಣ್ಣೀರಿಡುತ್ತಲೇ ಮಾತನಾಡಿದ್ದಾರೆ. ಪುಟಿನ್‌ ತನ್ನ ಕೆಲಸವನ್ನು ಮುಂದುವರಿಸುತ್ತೇನೆ ಎಂದು ಪ್ರತಿಜ್ಞೆ ಮಾಡಿದ್ದರು. ಅದರಂತೆ ನನ್ನ ಪತಿಯನ್ನು ಕೊಂದಿದ್ದಾರೆ ಎಂದು ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ಆಕೆ ಧೈರ್ಯಶಾಲಿ – ನೂಪುರ್‌ ಶರ್ಮಾ ಬೆಂಬಲಿಸಿ ವೈಯಕ್ತಿಕ ಸಂದೇಶ ಕಳಿಸಿದ್ದೇನೆಂದ ಡಚ್‌ ನಾಯಕ

    ನವಲ್ನಿ ಮೃತಪಟ್ಟಿದ್ದು ಹೇಗೆ?
    ಪುಟಿನ್‌ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿದ್ದ ಅಲೆಕ್ಸಿ ನಾವಲ್ನಿ ಅವರನ್ನು ಉಗ್ರವಾದದ ಆರೋಪದ ಮೇಲೆ 2021ರಲ್ಲಿ ಜೈಲಿಗಟ್ಟಲಾಗಿತ್ತು. ಮಾಸ್ಕೋದ ಯಮಲೊ ನೆನೆಟ್ಸ್‌ ಪ್ರಾಂತ್ಯದ ಜೈಲಿನಲ್ಲಿದ್ದ ಅಲೆಕ್ಸಿ ಇದ್ದಕ್ಕಿದ್ದಂತೆ ಕುಸಿದು ಬಿದ್ದು ಅಸ್ವಸ್ಥಗೊಂಡರು. ಜೈಲಿನ ವೈದ್ಯಕೀಯ ಸಿಬ್ಬಂದಿ ತಕ್ಷಣವೇ ಅವರನ್ನು ಆಸ್ಪತ್ರೆಗೆ ಶಿಫ್ಟ್‌ ಮಾಡಿದ್ದರು. ಆದ್ರೆ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ ಎಂದು ಜೈಲಿನ ಅಧಿಕಾರಿಗಳು ತಿಳಿಸಿದ್ದರು. ಇದನ್ನೂ ಓದಿ: ಮಕ್ಕಳನ್ನು ಪಾಕ್‌ಗೆ ಕರೆದೊಯ್ಯಲು ಸೀಮಾ ಮೊದಲ ಪತಿ ನಿರ್ಧಾರ – ಕಾನೂನು ಹೋರಾಟಕ್ಕೆ ಭಾರತೀಯ ವಕೀಲರ ನೇಮಕ

    2021ರ ಜನವರಿಯಲ್ಲಿ ಅಲೆಕ್ಸಿ ನಾವಲ್ನಿ ಅವರಿಗೆ ಸೈಬೀರಿಯಾದಲ್ಲಿ ವಿಷ ಪ್ರಾಶನ ಮಾಡಲಾಗಿತ್ತು. ಕೋಮಾಗೆ ಜಾರಿದ್ದ ಅಲೆಕ್ಸಿ ಅವರಿಗೆ ಜರ್ಮನಿಯಲ್ಲಿ ಚಿಕಿತ್ಸೆ ಕೊಡಿಸಿದ ಬಳಿಕ ರಷ್ಯಾಗೆ ಕರೆ ತರಲಾಗಿತ್ತು. ನಂತರ ಪೆರೋಲ್‌ ಉಲ್ಲಂಘಿಸಿದ ಆರೋಪದ ಮೇಲೆ ಕಾರಾಗೃಹಕ್ಕೆ ಕಳುಹಿಸಲಾಗಿತ್ತು. ನವಲ್ನಿ ಮೃತಪಟ್ಟ ಆರ್ಕ್ಟಿಕ್‌ ಜೈಲು (Arctic Jail) ಮಾಸ್ಕೋದಿಂದ ಈಶಾನ್ಯಕ್ಕೆ 1,200 ಕಿಮೀ ದೂರದಲ್ಲಿದೆ ಎನ್ನಲಾಗಿದೆ. ಇದನ್ನೂ ಓದಿ: ಲೈಂಗಿಕ ತೃಪ್ತಿಗಾಗಿ ಶಿಶ್ನಕ್ಕೆ ಬಟನ್ ಬ್ಯಾಟರಿ ಸಿಕ್ಕಿಸಿಕೊಂಡು 73ರ ವೃದ್ಧ ಎಡವಟ್ಟು!

    400 ಮಂದಿ ಬಂಧನ:
    ಇತ್ತೀಚೆಗೆ ಅಧ್ಯಕ್ಷ ಪುಟಿನ್ ಕಟ್ಟಾ ವಿರೋಧಿ ಅಲೆಕ್ಸಿ ನವಲ್ನಿ ಅವರು ಜೈಲಿನಲ್ಲಿ ಮೃತಪಟ್ಟ ಬಳಿಕ ರಷ್ಯಾದಲ್ಲಿ ಭಾರೀ ಕೋಲಾಹಲ ಉಂಟಾಗಿದೆ. ನವಲ್ನಿಗೆ ಗೌರವ ಸಲ್ಲಿಸಲು ಬೀದಿಗಿಳಿದಿದ್ದ ಸುಮಾರು 400 ಮಂದಿಯನ್ನು ಬಂಧಿಸಲಾಗಿದೆ. ರಷ್ಯಾದ ವಿವಿಧ ನಗರಗಳಲ್ಲಿ ನವಲ್ನಿಗೆ ಶ್ರದ್ಧಾಂಜಲಿ ಸಲ್ಲಿಸಲು ಜನರು ಬೀದಿಗಿಳಿದಿದ್ದರು. ಜೊತೆಗೆ ಕೈಯಲ್ಲಿ ಮೇಣದ ಬತ್ತಿ, ಬ್ಯಾನರ್, ಕರಪತ್ರಗಳನ್ನು ಹಿಡಿದುಕೊಂಡು ನವಲ್ನಿಯವರನ್ನು ಕೊಲೆ ಮಾಡಲಾಗಿದೆ ಎಂದು ಗಂಭೀರ ಆರೋಪ ಮಾಡಿ ಪುಟಿನ್ ವಿರುದ್ಧ ಪ್ರತಿಭಟನೆ ಆರಂಭಿಸಿದ್ದರು.