Tag: ಪ್ರತ್ಯೇಕ ಕರ್ನಾಟಕ

  • ನಾನು ಮುಖ್ಯಮಂತ್ರಿ ಆಗಿದ್ದರೆ ಉಮೇಶ್ ಕತ್ತಿಯನ್ನ ನಿಮ್ಹಾನ್ಸ್ ಸೇರಿಸ್ತಿದ್ದೆ: ವಾಟಾಳ್ ನಾಗರಾಜ್

    ನಾನು ಮುಖ್ಯಮಂತ್ರಿ ಆಗಿದ್ದರೆ ಉಮೇಶ್ ಕತ್ತಿಯನ್ನ ನಿಮ್ಹಾನ್ಸ್ ಸೇರಿಸ್ತಿದ್ದೆ: ವಾಟಾಳ್ ನಾಗರಾಜ್

    ಬೆಂಗಳೂರು: ಪ್ರತ್ಯೇಕ ರಾಜ್ಯದ ಬಗ್ಗೆ ಮಾತನಾಡುತ್ತಿರುವ ಸಚಿವ ಉಮೇಶ್ ಕತ್ತಿ ವಿರುದ್ಧ ಕನ್ನಡ ಚಳವಳಿ ಹೋರಾಟಗಾರ ವಾಟಾಳ್ ನಾಗರಾಜ್ ವಾಗ್ದಾಳಿ ನಡೆಸಿದ್ದಾರೆ. ನಾನು ಸಿಎಂ ಆಗಿದ್ದರೆ ಉಮೇಶ್ ಕತ್ತಿಯನ್ನ ನಿಮ್ಹಾನ್ಸ್‌ಗೆ ಸೇರಿಸುತ್ತಿದ್ದೆ ಅಂತ ಕಿಡಿಕಾರಿದ್ದಾರೆ.

    ವಿಧಾನಸೌಧದಲ್ಲಿ ಮಾತನಾಡಿದ ಅವರು, ನಾನೇ ಮುಖ್ಯಮಂತ್ರಿ ಆಗಿದ್ರೆ ಉಮೇಶ್ ಕತ್ತಿಯನ್ನ ನಿಮ್ಹಾನ್ಸ್ ಸೇರಿಸುತ್ತಿದ್ದೆ. ಉಮೇಶ್ ಕತ್ತಿಗೆ ಬುದ್ಧಿ ಇಲ್ಲ. ಕರ್ನಾಟಕದಲ್ಲಿ ಇರೋದ್ರಿಂದ ಅವರು ರಾಜಕಾರಣಿ ಆಗಿ ಉಳಿದಿದ್ದಾರೆ. ಇಲ್ಲದೇ ಹೋಗಿದ್ರೆ ಮರಾಠಿಗರು ಅವರನ್ನು ತಿಂದು ತೇಗುತ್ತಿದ್ದರು ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಹುಬ್ಬಳ್ಳಿ ಫ್ಯಾಕ್ಟರಿ ಸ್ಫೋಟ – 4 ದಿನ ಕಳೆದರೂ ಪತ್ತೆಯಾಗದ ಮಾಲೀಕ

    ಕರ್ನಾಟಕ ಯಾವುದೇ ಕಾರಣಕ್ಕೂ ಇಬ್ಭಾಗ ಆಗಬಾರದು. ಎಲ್ಲಾ ಭಾಗಗಳನ್ನ ಸರ್ಕಾರ ಅಭಿವೃದ್ಧಿ ಮಾಡಬೇಕು. ಉತ್ತರ ಕರ್ನಾಟಕ, ಹೈದರಾಬಾದ್ ಕಲ್ಯಾಣ ಅಭಿವೃದ್ಧಿ ಆಗಬೇಕು. ಅದನ್ನ ಹೇಳಲಿ, ಅದು ಬಿಟ್ಟು ಬೇಜವಾಬ್ದಾರಿಯಾಗಿ ಯಾರು ಮಾತಾಡಬಾರದು ಅಂತಾ ಆಕ್ರೋಶ ಹೊರ ಹಾಕಿದ್ದಾರೆ. ಇದನ್ನೂ ಓದಿ: 55ರ ಮಹಿಳೆಯೊಂದಿಗೆ 29ರ ಯುವಕ ರೊಮ್ಯಾನ್ಸ್ – ಮದುವೆ ಎಂದೊಡನೇ ಯುವಕ ಎಸ್ಕೇಪ್

    ಮಂತ್ರಿಯಾಗಿ ಉಮೇಶ್ ಕತ್ತಿ ಏನ್ ಕೆಲಸ ಮಾಡಿದ್ದಾರೆ? ಎಷ್ಟು ಕಾಡು ಉಳಿಸಿದ್ದಾರೆ? ಗೊತ್ತಿಲ್ಲ. ಪದೇ ಪದೇ ಪ್ರತ್ಯೇಕ ರಾಜ್ಯದ ಬಗ್ಗೆ ಮಾತಾಡುತ್ತಾರೆ. ಉತ್ತರ ಕರ್ನಾಟಕದ ರಾಜಕಾರಣಿಗಳಿಗೆ ಬುದ್ದಿ ಇಲ್ಲ. ಯಾವುದೇ ಕಾರಣಕ್ಕೂ ಪ್ರತ್ಯೇಕ ರಾಜ್ಯದ ಬಗ್ಗೆ ಮಾತಾಡಬಾರದು ಅಂತ ಅಗ್ರಹ ಮಾಡಿದರು.

    Live Tv
    [brid partner=56869869 player=32851 video=960834 autoplay=true]

  • ಉತ್ತರ ಕರ್ನಾಟಕಕ್ಕೆ ಅನುದಾನ ಸಿಗದಿರುವುದರಿಂದ ಪ್ರತ್ಯೇಕ ಕರ್ನಾಟಕದ ಕೂಗು ಕೇಳ್ತಿದೆ: ಜಯಮೃತ್ಯುಂಜಯ ಶ್ರೀ

    ಉತ್ತರ ಕರ್ನಾಟಕಕ್ಕೆ ಅನುದಾನ ಸಿಗದಿರುವುದರಿಂದ ಪ್ರತ್ಯೇಕ ಕರ್ನಾಟಕದ ಕೂಗು ಕೇಳ್ತಿದೆ: ಜಯಮೃತ್ಯುಂಜಯ ಶ್ರೀ

    ದಾವಣಗೆರೆ: ಕಾಂಗ್ರೆಸ್ ಹಾಗೂ ಜೆಡಿಎಸ್ ನೇತೃತ್ವದ ಸಮ್ಮಿಶ್ರ ಸರ್ಕಾರದಿಂದ ಉತ್ತರ ಕರ್ನಾಟಕಕ್ಕೆ ಸರಿಯಾಗಿ ಅನುದಾನ ಸಿಗುತ್ತಿಲ್ಲ. ಹೀಗಾಗಿ ಪ್ರತ್ಯೇಕ ರಾಜ್ಯದ ಕೂಗು ಕೇಳಿ ಬರುತ್ತಿದೆ ಎಂದು ಕೂಡಲ ಸಂಗಮದ ಜಯಮೃತ್ಯುಂಜಯ ಶ್ರೀಗಳು ಹೇಳಿದ್ದಾರೆ.

    ನಗರದಲ್ಲಿ ಹಮ್ಮಿಕೊಂಡಿದ್ದ ನಾಯಕ ಜನಾಂಗದ ವಿದ್ಯಾರ್ಥಿನಿಲಯ ಕಟ್ಟಡಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಉತ್ತರ ಕರ್ನಾಟಕ್ಕೆ ನೀಡುವ ಅನುದಾನದಲ್ಲಿ ತಾರತಮ್ಯ ಮಾಡುತ್ತಿದೆ. ಅಲ್ಲದೇ ಶಾಸಕರಾದ ಬಸವರಾಜ್ ಹೊರಟ್ಟಿಯವರಿಗೆ ಸಭಾಪತಿ ಸ್ಥಾನ ಕೊಡದೇ, ಅದನ್ನು ಕಿತ್ತುಕೊಂಡಿದೆ. ಇದರಿಂದಾಗಿ ಉತ್ತರ ಕರ್ನಾಟಕದ ಜನರಿಗೆ ಬೇಸರವಾಗಿದೆ ಎಂದು ಹೇಳಿದ್ದಾರೆ.

    ನಮಗೂ ಅಖಂಡ ಕರ್ನಾಟಕದಲ್ಲಿ ಇರಬೇಕು ಎನ್ನುವುದು ಇಷ್ಟ. ಆದರೆ ಈ ರೀತಿ ಧೋರಣೆ ಮಾಡಿದರೆ, ಉಗ್ರವಾದ ಹೋರಾಟದ ಹಾದಿಯನ್ನು ತುಳಿಯುವುದು ಸರ್ವೇಸಾಮಾನ್ಯ. ಅಧಿವೇಶನ ಮುಗಿಯುವುದರೊಳಗಾಗಿ ಕನಿಷ್ಠ ಐದಾರು ಇಲಾಖೆಗಳನ್ನಾದರೂ ಕನ್ನಡ ಸೌಧಕ್ಕೆ ಸ್ಥಳಾಂತರಿಸಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಉಗ್ರವಾದ ಹೋರಾಟ ಮಾಡುವುದಾಗಿ ಎಚ್ಚರಿಸಿದ್ದಾರೆ.

    ಇದೇ ವೇಳೆ ಪ್ರತ್ಯೇಕ ಲಿಂಗಾಯಿತ ಧರ್ಮದ ಹೋರಾಟವನ್ನು ಲೋಕಸಭಾ ಚುನಾವಣೆಯಾದ ಬಳಿಕ ಮುಂದುವರಿಸುತ್ತೇವೆಂಬ ಶಾಸಕ ಎಂ.ಬಿ.ಪಾಟೀಲ್ ಹೇಳಿಕೆಯನ್ನು ಸಮರ್ಥಿಸಿಕೊಂಡು ಮಾತನಾಡಿದ ಅವರು, ಎಂ.ಬಿ.ಪಾಟೀಲ್ ಹೇಳಿರುವುದಕ್ಕೂ ಅರ್ಥವಿದೆ. ಕೆಲ ತಾಂತ್ರಿಕ ಕಾರಣದಿಂದ ಲೋಕಸಭಾ ಚುನಾವಣೆವರೆಗೂ ಹೋರಾಟವನ್ನು ತಡೆಹಿಡಿದಿದ್ದಾರೆ. ಆದರೆ ಅದು ಯಾವ ಕಾರಣಕ್ಕೆ ಎನ್ನುವುದು ಗೊತ್ತಾಗುತ್ತಿಲ್ಲ. ನಮ್ಮ ಹೋರಾಟ ಮಾತ್ರ ನಿರಂತರವಾಗಿ ಸಾಗುತ್ತದೆ. ಕೇಂದ್ರ ಸರ್ಕಾರ ಪ್ರತ್ಯೇಕ ಧರ್ಮದ ಮನವಿಯನ್ನು ತಿರಸ್ಕರಿಸಿದೆ ಎಂದು ಬೇಸರ ವ್ಯಕ್ತಪಡಿಸಿದರು.

    ಪ್ರಧಾನಿ ನರೇಂದ್ರ ಮೋದಿಯವರು ಲಂಡನ್ ಗೆ ಹೋಗಿ ಬಸವಣ್ಣನವರ ಪ್ರತಿಮೆಯನ್ನು ಉದ್ಘಾಟನೆ ಮಾಡಿ ಬಂದಿದ್ದಾರೆ. ಅವರಿಗೆ ಬಸವಣ್ಣನವರ ಬಗ್ಗೆ ಅಪಾರವಾದ ಗೌರವ ಇದೆ. ಕೆಲವು ಕಾಣದ ಕೈಗಳು ಪ್ರತ್ಯೇಕ ಧರ್ಮದ ಬಗ್ಗೆ ಅವರಿಗೆ ತಪ್ಪು ಮಾಹಿತಿಯನ್ನು ನೀಡಿವೆ. ಈ ಬಗ್ಗೆ ನಾವೆಲ್ಲ ಒಮ್ಮೆ ಹೋಗಿ ಪ್ರಧಾನಿಗಳಿಗೆ ಮನವರಿಕೆ ಮಾಡಿಕೊಡುತ್ತೇವೆ. ಒಂದು ವೇಳೆ ಅದು ಸಾಧ್ಯವಾಗದಿದ್ದರೆ, ಅಂಬೇಡ್ಕರ್ ಸಂವಿಧಾನ ಇದೆ. ಅದರ ಮೂಲಕ ಪ್ರತ್ಯೇಕವಾಗುತ್ತೇವೆಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಕಲಬುರಗಿಯಲ್ಲಿ ಪ್ರತ್ಯೇಕ ಧ್ವಜಾರೋಹಣಕ್ಕೆ ಯತ್ನಿಸಿದವರ ಬಂಧನ

    ಕಲಬುರಗಿಯಲ್ಲಿ ಪ್ರತ್ಯೇಕ ಧ್ವಜಾರೋಹಣಕ್ಕೆ ಯತ್ನಿಸಿದವರ ಬಂಧನ

    ಕಲಬುರಗಿ: ರಾಜ್ಯಾದ್ಯಂತ 63ನೇ ಕರ್ನಾಟಕ ರಾಜ್ಯೋತ್ಸವ ಸಂಭ್ರಮಾಚರಣೆ ನಡೆಯುತ್ತಿದೆ. ಆದರೆ ಕಲಬುರಗಿಯಲ್ಲಿ ಪ್ರತ್ಯೇಕ ಧ್ವಜಾರೋಹಣಕ್ಕೆ ಯತ್ನಿಸಿ ಪ್ರತ್ಯೇಕ ದಿನಾಚರಣೆ ಮಾಡಲು ಕೆಲವರು ಮುಂದಾಗಿದ್ದು, ಇದಕ್ಕೆ ಪೊಲೀಸರು ಅಡ್ಡಪಡಿಸಿ ವಶಕ್ಕೆ ಪಡೆದಿದ್ದಾರೆ.

    ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕೆ ಆಗ್ರಹಿಸಿ ಪ್ರತ್ಯೇಕ ಧ್ವಜಾರೋಹಣಕ್ಕೆ ಯತ್ನ ಮಾಡಿದ ಕೆಲ ಮಠಾಧೀಶರು ಮತ್ತು 50 ಕ್ಕೂ ಅಧಿಕ ಹೋರಾಟಗಾರರ ಬಂಧನವಾಗಿದೆ. ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ ಅಧ್ಯಕ್ಷ ಎಂ.ಎಸ್ ಪಾಟೀಲ್ ನೇತೃತ್ವದಲ್ಲಿ ನಗರದ ಸರ್ದಾರ್ ವಲ್ಲಭಭಾಯ್ ಪಟೇಲ್ ವೃತ್ತದಲ್ಲಿ ಪ್ರತ್ಯೇಕ ಧ್ವಜಾರೋಹಣಕ್ಕೆ ಮುಂದಾಗಿದ್ದರು. ಆದರೆ ಮಾರ್ಗ ಮಧ್ಯೆ ಹೋರಾಟಗಾರರನ್ನ ತಡೆದ ಸ್ಟೇಷನ್ ಬಜಾರ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

    ಪ್ರತ್ಯೇಕ ಧ್ವಜರೋಹರಣಕ್ಕೆ ಯತ್ನಿಸಿದ ಹಿನ್ನೆಲೆಯಲ್ಲಿ ಅಹಿತಕರ ಘಟನೆ ನಡೆಯದಂತೆ ಮುನ್ನೇಚ್ಚರಿಕೆ ಕೈಗೊಂಡಿರುವ ಪೊಲೀಸರು ಪಟೇಲ್ ವೃತ್ತದಲ್ಲಿ ಬಿಗಿ ಪೊಲೀಸ್ ವ್ಯವಸ್ಥೆ ಮಾಡಿದ್ದಾರೆ. ಹೋರಾಟಗಾರರು ಪ್ರತ್ಯೇಕ ಧ್ವಜರೋಹರಣಕ್ಕೆ ಯತ್ನಿಸಿದ ವೇಳೆ ತಡೆದ ಸಂದರ್ಭದಲ್ಲಿ ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಪರ ಘೋಷಣೆ ಕೂಗಿದ್ದಾರೆ. ಅಲ್ಲದೇ ಹೈದರಾಬಾದ್ ಕರ್ನಾಟಕಕ್ಕೆ ನೀಡಿರುವ ಸಂವಿಧಾನದ 371 ಜೆ ಅಡಿ ಸರಿಯಾದ ಮೀಸಲಾತಿ ಸಿಗುತ್ತಿಲ್ಲ ಎಂದು ಹೋರಾಟಗಾರರು ಆಗ್ರಹಿಸಿದ್ದರು. ಆದರೆ ಈ ಹೋರಾಟಕ್ಕೆ ಸ್ಥಳೀಯ ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದು, ವರ್ಷಕ್ಕೆ ಒಂದು ದಿನ ಮಾಧ್ಯಮದಲ್ಲಿ ಪ್ರಚಾರ ಪಡೆಯಲು ಇಂತಹ ಹೋರಾಟ ಮಾಡುತ್ತಾರೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv