Tag: ಪ್ರಥಮ್

  • ನಟ ಪ್ರಥಮ್ ಮೇಲೆ ಹಲ್ಲೆ ಆರೋಪ ಪ್ರಕರಣ – ಹೈಕೋರ್ಟ್‌ನಲ್ಲಿ ಇತ್ಯರ್ಥ

    ನಟ ಪ್ರಥಮ್ ಮೇಲೆ ಹಲ್ಲೆ ಆರೋಪ ಪ್ರಕರಣ – ಹೈಕೋರ್ಟ್‌ನಲ್ಲಿ ಇತ್ಯರ್ಥ

    ಬೆಂಗಳೂರು: ಒಳ್ಳೆ ಹುಡ್ಗ ಪ್ರಥಮ್‌ (Actor Pratham) ಮೇಲೆ ರೌಡಿ ಶೀಟರ್‌ ಬೇಕರಿ ರಘು ಹಲ್ಲೆ ಆರೋಪ ಪ್ರಕರಣ ಹೈಕೋರ್ಟ್‌ನಲ್ಲಿಂದು ಇತ್ಯರ್ಥವಾಗಿದೆ.

    ಪ್ರಕರಣದ ರಾಜಿ ಸಂಧಾನಕ್ಕೆ ಆರೋಪಿ ಬೇಕರಿ ರಘು ಪರ ವಕೀಲರು ಅರ್ಜಿ ಹಾಕಿದ್ದರು. ಇಂದು ಹೈಕೋರ್ಟ್ ಹಾಲ್ 11 ರಲ್ಲಿ ಅರ್ಜಿ ವಿಚಾರಣೆ ನಡೆಯಿತು. ವಿಚಾರಣೆಗೆ ಹಾಜರಾಗಿದ್ದ ನಟ ಪ್ರಥಮ್‌ ರಾಜಿ ಸಂಧಾನಕ್ಕೆ ಕೋರ್ಟ್‌ ಮುಂದೆ ಒಪ್ಪಿಗೆ ಸೂಚಿಸಿದ್ದಾರೆ.

    ಏನಿದು ಕೇಸ್‌?
    ತನ್ನ ಮೇಲೆ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ್ದಾರೆಂದು ಪ್ರಥಮ್‌ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ (Doddaballapura Rural Police) ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರಿನ ಅನ್ವಯ ಪ್ರಕರಣ ದಾಖಲಾಗಿತ್ತು.

    ದೊಡ್ಡಬಳ್ಳಾಪುರ ದೇವಸ್ಥಾನದ ಬಳಿ ಆಗಿದ್ದೇನು?
    ಜುಲೈ 22ರಂದು ದೊಡ್ಡಬಳ್ಳಾಪುರ ತಾಲ್ಲೂಕಿನ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ ಪ್ರಥಮ್ ಬಂದಿದ್ದರು. ಈ ವೇಳೆ ಪ್ರಥಮ್ ರನ್ನ ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಬೆದರಿಸಿ ಜೀವ ಬೆದರಿಕೆ ಹಾಕಿದ್ದರು ಎಂಬ ಆರೋಪ ಕೇಳಿಬಂದಿತ್ತು. ಈ ಘಟನೆ ನಡೆದು ಹಲವು ದಿನಗಳ ನಂತರ ಖುದ್ದು, ಪ್ರಥಮ್ ನೇರವಾಗಿ ಬೆಂಗಳೂರು ಗ್ರಾಮಾಂತರ ಎಸ್ಪಿ ಸಿ.ಕೆ ಬಾಬಾ ಅವರನ್ನು ಭೇಟಿಯಾಗಿ ದೂರು ನೀಡಿದ್ದರು.

    ಪ್ರಥಮ್ ನೀಡಿದ ದೂರಿನಲ್ಲೇನಿತ್ತು?
    ಜುಲೈ 22 ರಂದು ಮಹೇಶ್ ಎಂಬ ಸಿನಿಮಾ ಪ್ರೊಮೋಟರ್ ಅವರು ನನಗೆ ದೊಡ್ಡ ಬಳ್ಳಾಪುರದ ಯಲ್ಲಮ್ಮ ದೇವಸ್ಥಾನದ ಪೂಜೆಗೆ ಕರೆದಿದ್ದರು. ಪೂಜೆ ಮುಗಿಸಿ ಮಧ್ಯಾಹ್ನ ಸುಮಾರು 3:50 ಗಂಟೆಗೆ ನಾನು ವಾಪಸ್‌ ಬರುವ ವೇಳೆ ಯಶಸ್ವಿನಿ ಮತ್ತು ಬೇಕರಿ ರಘು ಹಾಗೂ ಒಂದಷ್ಟು ಅಪರಿಚಿತರು ನನ್ನ ಕಾರನ್ನು ಸುತ್ತುವರೆದು ಅಜ್ಞಾತ ಸ್ಥಳಕ್ಕೆ (ಗ್ರಾಮದ ಹೆಸರು ತಿಳಿದಿರುವುದಿಲ್ಲ. ಸ್ಥಳವನ್ನು ಗುರ್ತಿಸುತ್ತೇನೆ) ಕರೆದೊಯ್ದಿದ್ದರು. ದರ್ಶನ್ ಅವರನ್ನ ಕುರಿತು ನನ್ನ ಬಾಸ್ ಬಗ್ಗೆ, ಮಾತನಾಡಿದ್ದೀಯ ಅಂತ ಅವಾಚ್ಯ ಶಬ್ದಗಳಿಂದ ಬೈಯ್ದು, ಅವರ ಬಳಿ ಇದ್ದ ಡ್ರ್ಯಾಗರ್‌ ಮತ್ತು ಚಾಕು ತೋರಿಸಿ ಚುಚ್ಚಲು ಮುಂದಾಗಿ ಭಯಪಡಿಸಿರುತ್ತಾರೆ. ಇವರು ನನ್ನ ಬಳಿ ಗಲಾಟೆ ಮಾಡುವಾಗ, ಜೈಲಿನಲಿ.. ದರ್ಶನ್ ಜೊತೆ ಇದ್ದ ಬ್ಯಾರಕ್ ಪೋಟೋವನ್ನ ತೋರಿಸಿರುತ್ತಾರೆ. ಆ ನಂತರ ಅಲ್ಲಿಂದ ಬಹಳ ಉಪಾಯದಿಂದ ಪ್ರಾಣ ಉಳಿಸಿಕೊಂಡು ಬಂದಿದ್ದೆ ದೊಡ್ಡ ವಿಚಾರ. ಈ ವಿಚಾರವನ್ನ ನನ್ನ ಜೊತೆ ಇದ್ದ ನನ್ನ ಸ್ನೇಹಿತರಾದ ಮಹೇಶ್, ಪ್ರಮೋದ್ ಮತ್ತು ಚಾಲಕ ಪ್ರಕಾಶ್ ಇವರು ಖುದ್ದು ಮೇಲ್ಕಂಡ ವಿಚಾರಕ್ಕೆ ಸಾಕ್ಷಿಯಾಗಿರುತ್ತಾರೆ. ನನಗೆ ಜೀವ ಭಯವಿರುವುದರಿಂದ ರಕ್ಷಣೆ ನೀಡಿ ಅವರ ವಿರುದ್ಧ ಕ್ರಮ ಜರುಗಿಸಬೇಕು ಎಂದು ದೂರಿನಲ್ಲಿ ತಿಳಿಸಿದ್ದರು.

  • ನಟ ಪ್ರಥಮ್‌ಗೆ ಡ್ರ್ಯಾಗರ್‌ ತೋರಿಸಿ ಧಮ್ಕಿ ಹಾಕಿ ಹಲ್ಲೆಗೆ ಯತ್ನಿಸಿದ್ದ ರೌಡಿಶೀಟರ್‌ ಅರೆಸ್ಟ್‌

    ನಟ ಪ್ರಥಮ್‌ಗೆ ಡ್ರ್ಯಾಗರ್‌ ತೋರಿಸಿ ಧಮ್ಕಿ ಹಾಕಿ ಹಲ್ಲೆಗೆ ಯತ್ನಿಸಿದ್ದ ರೌಡಿಶೀಟರ್‌ ಅರೆಸ್ಟ್‌

    ಟ ಪ್ರಥಮ್‌ಗೆ (Actor Pratham) ಡ್ರ್ಯಾಗರ್‌ ತೋರಿಸಿ ಧಮ್ಕಿ ಹಾಕಿ ಹಲ್ಲೆಗೆ ಯತ್ನಿಸಿದ್ದ ರೌಡಿಶೀಟರ್‌ನನ್ನು ಪೊಲೀಸರು ಬಂಧಿಸಿದ್ದಾರೆ.

    ಪ್ರಥಮ್‌ಗೆ ಬೆದರಿಕೆ ಹಾಕಿದ್ದ ರೌಡಿಶೀಟರ್ ಬೇಕರಿ ರಘು ಎಂಬಾತನನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಪೋಲಿಸರು ಅರೆಸ್ಟ್‌ ಮಾಡಿದ್ದಾರೆ. ಇದನ್ನೂ ಓದಿ: ನಟ ಪ್ರಥಮ್‌ಗೆ ಜೀವ ಬೆದರಿಕೆ ಕೇಸ್ – ಆರೋಪಿಗಳಾದ ಬೇಕರಿ ರಘು, ಯಶಸ್ವಿನಿಗೆ ಜಾಮೀನು ಮಂಜೂರು

    ಕಳೆದ ತಿಂಗಳು ದೊಡ್ಡಬಳ್ಳಾಪುರ ಸಿವಿಲ್ ಕೋರ್ಟ್‌ಗೆ ಹಾಜರಾಗಿ ಬೇಕರಿ ರಘು ಜಾಮೀನು ಪಡೆದಿದ್ದ. ಬಂಧನಕ್ಕೂ ಮುನ್ನವೇ ಜಾಮೀನು ಪಡೆದುಕೊಂಡಿದ್ದ. ಸದ್ಯ ಪ್ರಕರಣ ಸಂಬಂಧ ರಘುನನ್ನು ಪೊಲೀಸರು ಬಂಧಿಸಿದ್ದಾರೆ.

    ನ್ಯಾಯಾಲಯ ವಿಧಿಸಿದ ಷರತ್ತುಗಳ ಉಲ್ಲಂಘನೆ ಮಾಡಿದ ಕಾರಣ ನೀಡಿ ಬಂಧಿಸಲಾಗಿದೆ. ದೊಡ್ಡಬಳ್ಳಾಪುರ ಸಿವಿಲ್ ಕೋರ್ಟ್‌ನಿಂದ ಕಳೆದ ತಿಂಗಳು ಷರತ್ತುಬದ್ಧ ಜಾಮೀನು ನೀಡಲಾಗಿತ್ತು. ಪ್ರತಿ ಭಾನುವಾರ ಠಾಣೆಗೆ ಬಂದು ಸಹಿ ಹಾಕಲು ಸೂಚನೆ ನೀಡಲಾಗಿತ್ತು. ಇದನ್ನೂ ಓದಿ: ನಟ ಪ್ರಥಮ್‌ಗೆ ಜೀವಬೆದರಿಕೆ ಕೇಸ್‌ – ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಯಲ್ಲಿ ಇಬ್ಬರ ವಿರುದ್ಧ FIR

    ಈ ಸಂಬಂಧ ರಘು, ನ್ಯಾಯಾಲಯದ ಜಾಮೀನು ಷರತ್ತು ಉಲ್ಲಂಘಿಸಿದ್ದಾನೆ. ರಘು ಹಾಗೂ ಪ್ರಕರಣದ ಮತ್ತೋರ್ವ ಆರೋಪಿ ಯಶಸ್ವಿನಿಯನ್ನು ಪೊಲೀಸರು ಬಂಧಿಸಿದ್ದಾರೆ.

  • I Stand With Darshan Sir – ದರ್ಶನ್, ಧ್ರುವ ನಡುವಿನ ಬಿರುಕು ಶಮನ?

    I Stand With Darshan Sir – ದರ್ಶನ್, ಧ್ರುವ ನಡುವಿನ ಬಿರುಕು ಶಮನ?

    ಸ್ಯಾಂಡಲ್ ವುಡ್ ಹೊಸ ಬದಲಾವಣೆಗೆ ಸಾಕ್ಷಿಯಾಗಿದೆ. ಇಬ್ಬರು ಸ್ಟಾರ್ ನಟರ ನಡುವಿನ ವೈಮನಸ್ಸು ಶಮನ ಆಗಿರುವ ಸೂಚನೆ ಕಂಡುಬಂದಿದೆ. I stand with Darshan sir ಎಂದು ಹೇಳುವ ಮೂಲಕ ದರ್ಶನ್ ಬೆಂಬಲಕ್ಕೆ ಧ್ರುವ ಸರ್ಜಾ (Dhruva Sarja) ನಿಂತಿರುವುದು ಸ್ಪಷ್ಟವಾಗಿ ಗೋಚರಿಸುತ್ತಿದೆ. ಈ ಮೂಲಕ ಕನ್ನಡ ಚಿತ್ರರಂಗದಲ್ಲಿ ಮತ್ತೆ ದರ್ಶನ್, ಧ್ರುವ ಒಂದಾಗುವ ಘಾಟು ಬಂದಿದೆ.

    ತಮ್ಮದೇ ಬಣದಲ್ಲಿ ಗುರುತಿಸಿಕೊಂಡಿದ್ದ ಪ್ರಥಮ್ ವಿರುದ್ಧವೇ ಧ್ರುವ ಮಾತನಾಡಿದ್ದಾರೆ. ಈ ಮೂಲಕ‌ ದರ್ಶನ್ ಪರ ಧ್ರುವ ಸರ್ಜಾ ಬ್ಯಾಟಿಂಗ್ ಮಾಡಿದ್ದಾರೆ. ದರ್ಶನ್ ಫ್ಯಾನ್ಸ್ ಎನ್ನಲಾದ ವ್ಯಕ್ತಿಗಳಿಂದ ಜೀವಬೆದರಿಕೆ ಇದೆ ಎಂದು ದೂರು ದಾಖಲಿಸಿರುವ ಪ್ರಥಮ್ ದರ್ಶನ್ ವಿರುದ್ಧ ಹರಿಹಾಯ್ದಿದ್ದರು. ಇದೀಗ ಪ್ರಥಮ್ ಹೇಳಿಕೆ ತಪ್ಪೆಂದು ಖಡಕ್ಕಾಗಿ ಹೇಳಿದ್ದಾರೆ ಧ್ರುವ ಸರ್ಜಾ. ಇದನ್ನೂ ಓದಿ: ಅಂಬೇಡ್ಕರ್‌ಗೆ ಅವಮಾನ ಆರೋಪ – ಪ್ರಥಮ್‌ಗೆ ಮಸಿ ಬಳಿದ ದಲಿತ ಸಂಘಟನೆ ಮುಖಂಡರು

    ಈ ಮೊದಲು ಆಪ್ತರಾಗಿದ್ದ ದರ್ಶನ್, ಧ್ರುವ ನಡುವೆ ವೈಯಕ್ತಿಕ ವಿಚಾರಕ್ಕೆ ಮುನಿಸು ಉಂಟಾಗಿತ್ತು. ಈ ವಿಚಾರ ಅಧಿಕೃತವಾಗಿ ಗೋಚರಿಸಿತ್ತು. ಇದೇ ದರ್ಶನ್ ಕೊಲೆ ಆರೋಪದ ಮೇಲೆ ಜೈಲು ಸೇರಿದ್ದಾಗ ಧ್ರುವ ಕಟುವಾಗಿ ಮಾತನಾಡಿದ್ದರು. ಅದಕ್ಕೂ‌ ಮುನ್ನವೇ ದರ್ಶನ್ ವಿಚಾರವಾಗಿ ತಮ್ಮದೇ ಹುಟ್ಟುಹಬ್ಬದ ದಿನ‌ ನೇರವಾಗೇ ಆಕ್ರೋಶ ಹೊರಹಾಕಿದ್ದರು ಧ್ರುವ. ಇದೀಗ ದಿಢೀರ್ ಬದಲಾವಣೆ ಎನ್ನುವಂತೆ ಧ್ರುವ I stand with Darshan sir ಎಂದಿರುವುದು ಭಾರೀ ಕುತೂಹಲಕ್ಕೆ ಕಾರಣವಾಗಿದೆ.  ಇದನ್ನೂ ಓದಿ: ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಪ್ರಕರಣ – 6ನೇ ಪಾಯಿಂಟಲ್ಲಿ 12 ಮೂಳೆಗಳು ಪತ್ತೆ, ಇಂದು 7ನೇ ಸಮಾಧಿ ಅಗೆತ

    ಅಸಲಿಗೆ ಹಿಂದೆ ಈ ಇಬ್ಬರು ಸ್ಟಾರ್ ನಟರ ನಡುವಿನ ಮುನಿಸು ಕಾವೇರಿ ನೀರಿಗಾಗಿ ಹೋರಾಟದ ವೇದಿಕೆಯಲ್ಲಿ ಜಗಜ್ಜಾಹೀರಾಗಿತ್ತು, ಬಳಿಕ ಅದೇ ನಿಜವಾಗಿತ್ತು. ಇದೀಗ ದರ್ಶನ್ ಫ್ಯಾನ್ಸ್ ವಿರುದ್ಧದ ಹೋರಾಟದಲ್ಲಿ ಧ್ರುವ ಸರ್ಜಾ ಮಾತು ಸಾಫ್ಟ್ ಕಾರ್ನರ್ ಆಗಿದ್ದು ಇದು ಬೇರೆಯದ್ದೇ ಅರ್ಥ ಕಲ್ಪಿಸುತ್ತಿದೆ. ಇದನ್ನೂ ಓದಿ: ತಮಿಳುನಾಡು ಬಿಜೆಪಿ ಉಪಾಧ್ಯಕ್ಷೆಯಾಗಿ ಖುಷ್ಬೂ ಸುಂದರ್‌ ನೇಮಕ

  • ಅಂಬೇಡ್ಕರ್‌ಗೆ ಅವಮಾನ ಆರೋಪ – ಪ್ರಥಮ್‌ಗೆ ಮಸಿ ಬಳಿದ ದಲಿತ ಸಂಘಟನೆ ಮುಖಂಡರು

    ಅಂಬೇಡ್ಕರ್‌ಗೆ ಅವಮಾನ ಆರೋಪ – ಪ್ರಥಮ್‌ಗೆ ಮಸಿ ಬಳಿದ ದಲಿತ ಸಂಘಟನೆ ಮುಖಂಡರು

    ಚಿಕ್ಕಬಳ್ಳಾಪುರ: ಅಂಬೇಡ್ಕರ್‌ಗೆ ಅಪಮಾನ ಮಾಡಿದ ಆರೋಪದ ಮೇಲೆ ನಟ ಪ್ರಥಮ್‌ಗೆ (Pratham) ದಲಿತ ಸಂಘಟನೆಗಳ ಮುಖಂಡರು ಮಸಿ ಬಳಿದಿರುವ ಘಟನೆ ದೊಡ್ಡಬಳ್ಳಾಪುರ (Doddaballapura) ಗ್ರಾಮಾಂತರ ಪೊಲೀಸ್ ಠಾಣೆ ಎದುರು ನಡೆದಿದೆ.

    ಜೀವ ಬೆದರಿಕೆ ಆರೋಪದ ಪ್ರಕರಣ ಸಂಬಂಧ ಪ್ರಥಮ್ ವಿಚಾರಣೆಗೆ ಆಗಮಿಸಿ ಪೊಲೀಸ್ ಠಾಣೆಗೆ ಆಗಮಿಸಿದ್ದರು. ಠಾಣೆಯಿಂದ ಹೊರಬಂದ ಕೂಡಲೇ ಪ್ರಥಮ್‌ನನ್ನ ದಲಿತ ಸಂಘಟನೆಗಳ ಮುಖಂಡರು ಅಡ್ಡಗಟ್ಟಿ, ಕ್ಷಮೆ ಕೇಳುವಂತೆ ಒತ್ತಾಯಿಸಿದ್ದರು. ಇದನ್ನೂ ಓದಿ: ಆನೇಕಲ್ | ಟ್ಯೂಷನ್‌ಗೆ ಹೋಗ್ತಿದ್ದ ಬಾಲಕನ ಕಿಡ್ನ್ಯಾಪ್ ಮಾಡಿ ಬರ್ಬರ ಹತ್ಯೆ

    ಕೂಡಲೇ ಸ್ಪಷ್ಟನೆ ನೀಡಲು ಮುಂದಾದ ಪ್ರಥಮ್‌ಗೆ ದಲಿತ ಮುಖಂಡರು ಏಕಾಏಕಿ ಮಸಿ ಬಳಿಯಲು ಮುಗಿಬಿದ್ದರು. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರ ಎದುರೇ ಘಟನೆ ನಡೆದಿದ್ದು, ಸಿಪಿಐ ಸಾಧಿಕ್ ಪಾಷಾ ಅವರು ಮುಖಂಡರಿಗೆ ಈ ರೀತಿ ಮಾಡದಂತೆ ತಿಳಿಸಿದ್ದರು. ಆದರೂ ಪಟ್ಟು ಬಿಡದ ದಲಿತ ಮುಖಂಡರು ಪ್ರಥಮ್ ಕಾರು ಅಡ್ಡಗಟ್ಟಿ ಆಕ್ರೋಶ ಹೊರಹಾಕಿದ್ದಾರೆ.

  • ಪ್ರಥಮ್ ವಿಚಾರದಲ್ಲಿ ನಾನು ದರ್ಶನ್ ಸರ್ ಪರ ನಿಲ್ತೀನಿ: ಧ್ರುವ ಸರ್ಜಾ

    ಪ್ರಥಮ್ ವಿಚಾರದಲ್ಲಿ ನಾನು ದರ್ಶನ್ ಸರ್ ಪರ ನಿಲ್ತೀನಿ: ಧ್ರುವ ಸರ್ಜಾ

    – ವಿಗ್ ಬಗ್ಗೆ ಪ್ರಥಮ್ ಮಾತಾಡೋದು ಸರಿಯಲ್ಲ
    – ರಮ್ಯಾ ಮೇಡಂ ಬಗ್ಗೆ ವಲ್ಗರಿ ಆಗಿ ಟ್ರೋಲ್ ಖಂಡಿಸ್ತೀನಿ ಎಂದ ಸರ್ಜಾ

    ರ್ಶನ್ (Darshan) ಫ್ಯಾನ್ಸ್ ಮತ್ತು ಬಿಗ್ ಬಾಸ್ ಖ್ಯಾತಿಯ ಪ್ರಥಮ್ ನಡುವಿನ ಜಗಳ ವಿಚಾರವಾಗಿ ನಟ ಧ್ರುವ ಸರ್ಜಾ (Dhruva Sarja) ಮಾತನಾಡಿದ್ದಾರೆ. ಪ್ರಥಮ್ (Pratham) ವಿಚಾರದಲ್ಲಿ ನಾನು ದರ್ಶನ್ ಪರ ನಿಲ್ಲುತ್ತೇನೆ ಎಂದು ಸರ್ಜಾ ಸ್ಪಷ್ಟಪಡಿಸಿದ್ದಾರೆ.

    ಪ್ರಥಮ್ ವಿರುದ್ಧ ಕಿಡಿಕಾರಿದ ಧ್ರುವ ಸರ್ಜಾ, ಪ್ರಥಮ್ ವಿಚಾರದಲ್ಲಿ ನಾನು ದರ್ಶನ್ ಸರ್ ಪರ ನಿಲ್ತೀನಿ. ಐ ಸ್ಟ್ಯಾಂಡ್ ವಿತ್ ದರ್ಶನ್ ಸರ್ ಎಂದಿದ್ದಾರೆ. ಇದನ್ನೂ ಓದಿ: ನಟ ಪ್ರಥಮ್‌ಗೆ ಜೀವ ಬೆದರಿಕೆ ಕೇಸ್ – ಆರೋಪಿಗಳಾದ ಬೇಕರಿ ರಘು, ಯಶಸ್ವಿನಿಗೆ ಜಾಮೀನು ಮಂಜೂರು

    ಚಿಟುಕೆ ಹೊಡೆದು ವಿಗ್ ಬಗ್ಗೆ ಮಾತಾಡೋದು ಸರಿ ಇಲ್ಲ. ಪ್ರಥಮ್ ಮಾತಾಡೋದು ಸರಿ ಇಲ್ಲ. ಅವರಿಗೆ ಯಾರಾದ್ರೂ ಚಾಕು ತೋರಿಸಿದ್ರೆ ದೂರು ಕೊಡಬೇಕು. ಅವರನ್ನ ಬಿಟ್ಟು ದರ್ಶನ್ ಸರ್ ಬಗ್ಗೆ ಮಾತಾಡೋದು ಸರಿಯಲ್ಲ. ಏನು ಪ್ರೂವ್ ಮಾಡೋಕೆ ಹೋಗ್ತಿದ್ದಾರೆ ಗೊತ್ತಾಗ್ತಿಲ್ಲ ಎಂದು ಬೇಸರ ಹೊರಹಾಕಿದ್ದಾರೆ.

    ದರ್ಶನ್ ಫ್ಯಾನ್ಸ್, ನಟಿ ರಮ್ಯಾಗೆ ಅಶ್ಲೀಲ ಸಂದೇಶ ಪ್ರಕರಣವನ್ನ ನಟ ಧ್ರುವ ಸರ್ಜಾ ಖಂಡಿಸಿದ್ದಾರೆ. ರಮ್ಯಾ ಮೇಡಂ ಬಗ್ಗೆ ವಲ್ಗರ್ ಆಗಿ ಟ್ರೋಲ್ ಖಂಡಿಸ್ತೀನಿ ಎಂದು ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ.‌ ಇದನ್ನೂ ಓದಿ: ಇತ್ತ `ಡಿ’ ಫ್ಯಾನ್ಸ್ ಜಟಾಪಟಿ – ಅತ್ತ ಕಾಮಾಕ್ಯದಲ್ಲಿ ದರ್ಶನ್

  • ನಟ ಪ್ರಥಮ್‌ಗೆ ಜೀವಬೆದರಿಕೆ ಕೇಸ್‌ – ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಯಲ್ಲಿ ಇಬ್ಬರ ವಿರುದ್ಧ FIR

    ನಟ ಪ್ರಥಮ್‌ಗೆ ಜೀವಬೆದರಿಕೆ ಕೇಸ್‌ – ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಯಲ್ಲಿ ಇಬ್ಬರ ವಿರುದ್ಧ FIR

    ದೊಡ್ಡಬಳ್ಳಾಪುರ: ನಟ ಪ್ರಥಮ್‌ಗೆ (Actor Pratham) ಜೀವ ಬೆದರಿಕೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ (Doddaballapura Rural Police) ಠಾಣೆಯಲ್ಲಿ ದೂರು ದಾಖಲಾಗಿದೆ. ಎ1 ಆರೋಪಿಯಾಗಿ ಬೇಕರಿ ರಘು ಹಾಗೂ ಎ2 ಆರೋಪಿಯಾಗಿ ಯಶಸ್ವಿನಿ ಹಾಗೂ ಇತರರ ವಿರುದ್ದ ಎಫ್‌ಐಆರ್‌ ದಾಖಲಾಗಿದೆ.

    ದೊಡ್ಡಬಳ್ಳಾಪುರ ದೇವಸ್ಥಾನದ ಬಳಿ ಆಗಿದ್ದೇನು?
    ಜುಲೈ 22ರ ಮಂಗಳವಾರ ದೊಡ್ಡಬಳ್ಳಾಪುರ ತಾಲ್ಲೂಕಿನ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ ಪ್ರಥಮ್ ಬಂದಿದ್ದರು. ಈ ವೇಳೆ ಪ್ರಥಮ್ ರನ್ನ ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಬೆದರಿಸಿ ಜೀವ ಬೆದರಿಕೆ ಹಾಕಿದ್ದರು ಎಂಬ ಆರೋಪ ಕೇಳಿಬಂದಿತ್ತು. ಈ ಘಟನೆ ನಡೆದು ಹಲವು ದಿನಗಳ ನಂತರ ಖುದ್ದು, ಪ್ರಥಮ್ ನೇರವಾಗಿ ಬೆಂಗಳೂರು ಗ್ರಾಮಾಂತರ ಎಸ್ಪಿ ಸಿ.ಕೆ ಬಾಬಾ ಅವರನ್ನು ಭೇಟಿಯಾಗಿ ದೂರು ನೀಡಿದ್ದರು. ಇದನ್ನೂ ಓದಿ: ದಾವಣಗೆರೆ | ಕಡಿಮೆ ಬೆಲೆಗೆ 250 ಗ್ರಾಂ ಚಿನ್ನದ ನಾಣ್ಯ ನೀಡುವುದಾಗಿ 5 ಲಕ್ಷ ವಂಚಿಸಿ ಪರಾರಿ

    ಪ್ರಥಮ್ ದೂರಿನ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಪ್ರಕರಣ ಕೈಗೆತ್ತಿಕೊಂಡ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಜೀವ ಬೆದರಿಕೆ ಹಾಕಲಾಗಿದ್ದ ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಇದನ್ನೂ ಓದಿ: ಪಹಲ್ಗಾಮ್ ದಾಳಿ ಹೊಣೆಯನ್ನ ಟಿಆರ್‌ಎಫ್ 2 ಬಾರಿ ಹೊತ್ತುಕೊಂಡಿದೆ: ವಿಶ್ವಸಂಸ್ಥೆ

    ಪ್ರಥಮ್ ನೀಡಿದ ದೂರಿನಲ್ಲೇನಿದೆ.?
    ಜುಲೈ 22 ರಂದು ಮಹೇಶ್ ಎಂಬ ಸಿನಿಮಾ ಪ್ರೊಮೋಟರ್ ಅವರು ನನಗೆ ದೊಡ್ಡ ಬಳ್ಳಾಪುರದ ಯಲ್ಲಮ್ಮ ದೇವಸ್ಥಾನದ ಪೂಜೆಗೆ ಕರೆದಿದ್ದರು. ಪೂಜೆ ಮುಗಿಸಿ ಮಧ್ಯಾಹ್ನ ಸುಮಾರು 3:50 ಗಂಟೆಗೆ ನಾನು ವಾಪಸ್‌ ಬರುವ ವೇಳೆ ಯಶಸ್ವಿನಿ ಮತ್ತು ಬೇಕರಿ ರಘು ಹಾಗೂ ಒಂದಷ್ಟು ಅಪರಿಚಿತರು ನನ್ನ ಕಾರನ್ನು ಸುತ್ತುವರೆದು ಅಜ್ಞಾತ ಸ್ಥಳಕ್ಕೆ (ಗ್ರಾಮದ ಹೆಸರು ತಿಳಿದಿರುವುದಿಲ್ಲ. ಸ್ಥಳವನ್ನು ಗುರ್ತಿಸುತ್ತೇನೆ) ಕರೆದೊಯ್ದಿದ್ದರು. ದರ್ಶನ್ ಅವರನ್ನ ಕುರಿತು ನನ್ನ ಬಾಸ್ ಬಗ್ಗೆ, ಮಾತನಾಡಿದ್ದೀಯ ಅಂತ ಅವಾಚ್ಯ ಶಬ್ದಗಳಿಂದ ಬೈಯ್ದು, ಅವರ ಬಳಿ ಇದ್ದ ಡ್ರ್ಯಾಗರ್‌ ಮತ್ತು ಚಾಕು ತೋರಿಸಿ ಚುಚ್ಚಲು ಮುಂದಾಗಿ ಭಯಪಡಿಸಿರುತ್ತಾರೆ. ಇವರು ನನ್ನ ಬಳಿ ಗಲಾಟೆ ಮಾಡುವಾಗ, ಜೈಲಿನಲಿ.. ದರ್ಶನ್ ಜೊತೆ ಇದ್ದ ಬ್ಯಾರಕ್ ಪೋಟೋವನ್ನ ತೋರಿಸಿರುತ್ತಾರೆ. ಆ ನಂತರ ಅಲ್ಲಿಂದ ಬಹಳ ಉಪಾಯದಿಂದ ಪ್ರಾಣ ಉಳಿಸಿಕೊಂಡು ಬಂದಿದ್ದೆ ದೊಡ್ಡ ವಿಚಾರ. ಈ ವಿಚಾರವನ್ನ ನನ್ನ ಜೊತೆ ಇದ್ದ ನನ್ನ ಸ್ನೇಹಿತರಾದ ಮಹೇಶ್, ಪ್ರಮೋದ್ ಮತ್ತು ಚಾಲಕ ಪ್ರಕಾಶ್ ಇವರು ಖುದ್ದು ಮೇಲ್ಕಂಡ ವಿಚಾರಕ್ಕೆ ಸಾಕ್ಷಿಯಾಗಿರುತ್ತಾರೆ. ನನಗೆ ಜೀವ ಭಯವಿರುವುದರಿಂದ ರಕ್ಷಣೆ ನೀಡಿ ಅವರ ವಿರುದ್ಧ ಕ್ರಮ ಜರುಗಿಸಬೇಕು ಎಂದು ದೂರಿನಲ್ಲಿ ತಿಳಿಸಿದ್ದಾರೆ.

    ದರ್ಶನ್ ಫ್ಯಾನ್ ಪೇಜ್‌ಗಳ ವಿರುದ್ಧ ಕ್ರಮಕ್ಕೆ ಆಗ್ರಹ.
    ಜುಲೈ 28 ರಿಂದ ಇಲ್ಲಿಯವರೆಗೂ ದರ್ಶನ್ ಅವರ ಅಧಿಕೃತ ಫ್ಯಾನ್ ಪೇಜ್‌ಗಳಾದ ಡಿ ಡೈನಾಸ್ಟಿ, ಡಿ ಕಿಂಗ್ ಡಮ್, ಡಿ ಯೂನಿವರ್ಸ್ ಮತ್ತು ಡೆವಿಲ್ ಕಿಂಗ್ ಡಮ್ ಜೊತೆಗೆ 500ಕ್ಕೂ ಹೆಚ್ಚು ಪೇಜ್‌ಗಳಿಂದ ನನ್ನ ವೈಯಕ್ತಿಕ ತೇಜೋವಧೆಗೆ ಇಳಿದಿರುತ್ತಾರೆ, ಆದ್ದರಿಂದ ಇವರ ವಿರುದ್ಧ ಕಾನೂನು ರೀತಿ ಕ್ರಮ ಜರುಗಿಸಬೇಕೆಂದು ದೂರು ನೀಡಿದ್ದಾರೆ‌. ಇದನ್ನೂ ಓದಿ: ಅನುಭವ ಮಂಟಪ ಕಾಮಗಾರಿ ಒಂದು ವರ್ಷದಲ್ಲಿ ಮುಗಿಸಲು ಸಿಎಂ ಸೂಚನೆ – ಈಶ್ವರ್ ಖಂಡ್ರೆ

    ಯಾವ ಯಾವ ಸೆಕ್ಷನ್ ನಡಿ ದೂರು‌?
    ಭಾರತೀಯ ನ್ಯಾಯ ಸಂಹಿತೆ ಸೆಕ್ಷನ್‌ (U/s-126(2) (ತಪ್ಪಾದ ಸಂಯಮ), 3(5), 351 (3), 352 (ಶಾಂತಿಭಂಗ ಅಪರಾಧಕ್ಕೆ ಪ್ರಚೋದನೆ) ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಥಮ್ ದೂರಿನನ್ವಯ ಪ್ರಕರಣ ದಾಖಲಿಸಿಕೊಂಡ ಪೊಲೀಸರಿಂದ ಇಂದಿನಿಂದ ತನಿಖೆ ಆರಂಭಿಸಿದ್ದಾರೆ.

  • ಜೀವ ಬೆದರಿಕೆ; ಎಸ್‌ಪಿ ಕಚೇರಿಗೆ ದೂರು ನೀಡಿದ ಪ್ರಥಮ್

    ಜೀವ ಬೆದರಿಕೆ; ಎಸ್‌ಪಿ ಕಚೇರಿಗೆ ದೂರು ನೀಡಿದ ಪ್ರಥಮ್

    ಬೆಂಗಳೂರು: ಒಂದು ಕಡೆ ನಟಿ ರಮ್ಯಾ ಕುರಿತು ಅಶ್ಲೀಲ ಪೋಸ್ಟ್ ಎಫ್ಐಆರ್ ಆಗಿ ತನಿಖೆ ಆರಂಭವಾದ ಬೆನ್ನಲ್ಲೇ ಇತ್ತ ನಟ ಪ್ರಥಮ್ (Pratham) ಕೂಡ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.

    ಜು.22 ರಂದು ದೊಡ್ಡಬಳ್ಳಾಪುರ ದೇವಸ್ಥಾನಕ್ಕೆ ಹೋಗಿದ್ದ ವೇಳೆ ವ್ಯಕ್ತಿಯೊಬ್ಬ ಡ್ಯಾಗರ್ ತೋರಿಸಿ ಬೆದರಿಕೆ ಹಾಕಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಎಸ್‌ಪಿ ಕಚೇರಿಗೆ ಭೇಟಿ ನೀಡಿ ದೂರು ನೀಡಿದ್ದಾರೆ. ಕಳೆದ ಶನಿವಾರ ಎಸ್‌ಪಿ, ಸಿ.ಕೆ ಬಾಬಾ ಭೇಟಿಯಾಗಿದ್ದ ಪ್ರಥಮ್ ಘಟನೆ ಬಗ್ಗೆ ಮಾಹಿತಿ ನೀಡಿದ್ದರು. ಇಂದು ಪುನಃ ಎಸ್‌ಪಿ ಭೇಟಿಯಾಗಿ ಲಿಖಿತ ದೂರು ನೀಡಿದ್ದಾರೆ. ಪ್ರಥಮ್ ದೂರಿನಲ್ಲಿ ರೌಡಿಶೀಟರ್ ಬೇಕರಿ ರಘು ಹಾಗೂ ಯಶಸ್ವಿನಿ ಮೇಲೆ ದೂರು ನೀಡಿದ್ದಾರೆ. ಇದನ್ನೂ ಓದಿ: ಇತ್ತ `ಡಿ’ ಫ್ಯಾನ್ಸ್ ಜಟಾಪಟಿ – ಅತ್ತ ಕಾಮಾಕ್ಯದಲ್ಲಿ ದರ್ಶನ್

    ದೇವಸ್ಥಾನಕ್ಕೆ ಹೋಗಿದ್ದ ವೇಳೆ ಕೆಲವು ವ್ಯಕ್ತಿಗಳು ಬಲವಂತವಾಗಿ ಕಾಡಿನ ಒಳಗೆ ಕರೆದೊಯ್ದರು. ನಂತರ ಅಲ್ಲಿ ಹೋದಾಗ ದರ್ಶನ್ ಜೊತೆ ಜೈಲಿನಲ್ಲಿದ್ದ ವ್ಯಕ್ತಿಯೊಬ್ಬ ಇದ್ದು, ಡ್ಯಾಗರ್ ತೋರಿಸಿ ಬಾಸ್ ಬಗ್ಗೆ ಏನೇನೋ ಮಾತಾಡ್ತಿಯಾ ಅಂತಾ ಬೆದರಿಕೆ ಹಾಕಿದರು. ಈ ವೇಳೆ ಅಲ್ಲಿ ರಕ್ಷಕ್ ಬುಲೆಟ್ ಕೂಡ ಇದ್ದ ಅಂದಿದ್ದಾರೆ. ಅಲ್ಲದೇ‌, ನಿನ್ನೆ ಸಂಜೆಯಿಂದ ದರ್ಶನ್ ಅಭಿಮಾನಿಗಳು ಟ್ರೋಲ್ ಮಾಡಲು ಶುರು ಮಾಡಿದ್ದು, ಇದರಿಂದ ವೈಯಕ್ತಿಕವಾಗಿ ತೋಜೋವಧೆ ಆಗ್ತಿದೆ. ಫ್ಯಾಮಿಲಿ ಡ್ಯಾಮೇಜ್ ಆಗ್ತಿದೆ. ಕೂಡಲೇ ದರ್ಶನ್ ಅವರು ಬಂದು ಸ್ಟೇಟ್ಮೆಂಟ್ ಕೊಡಬೇಕು. ಅವರ ಆಭಿಮಾನಿಗಳಿಗೆ ವಿಡಿಯೋ ಮೂಲಕ ಬುದ್ದಿವಾದ ಹೇಳಬೇಕು ಎಂದು ಪ್ರಥಮ್‌ ಒತ್ತಾಯಿಸಿದ್ದಾರೆ.

    ಟ್ರೋಲ್‌ಗಳಿಂದ ಬೇಸತ್ತ ಪ್ರಥಮ್, ಎಸ್‌ಪಿ ಕಚೇರಿ ಮುಂದೆಯೇ ಉಪವಾಸ ಕುಳಿತಿದ್ದರು. ಜಿಟಿಜಿಟಿ ಮಳೆಯಲ್ಲಿ‌ ಉಪವಾಸ ಕೂತಿದ್ದು, ನ್ಯಾಯಕ್ಕಾಗಿ ಒತ್ತಾಯಿಸಿದರು. ಬಳಿಕ ಎಎಸ್‌ಪಿಗಳಾದ ನಾಗರಾಜ್ ಮತ್ತು ವೆಂಕಟೇಶ್ ಪ್ರಸನ್ನ ಸ್ಥಳಕ್ಕೆ ಆಗಮಿಸಿ ಪ್ರಥಮ್ ಮನವೊಲಿಸಿ ಕಳಿಸಿದರು. ಅಲ್ಲದೇ, ಟ್ರೋಲ್‌ಗಳಿಂದ ಬೇಸತ್ತ ನಟ ಪ್ರಥಮ್ ಸಿನಿಮಾ ಮತ್ತು ಬೆಂಗಳೂರು ಬಿಡಲು ನಿರ್ಧಾರಿಸಿದ್ದಾರಂತೆ. ಕೊಕೇನ್ ಸಿನಿಮಾ ಮುಗಿಸಿ ಚಾಮರಾಜನಗರಕ್ಕೆ ಹೋಗ್ತೀನಿ. ವೈಯಕ್ತಿಕ ತೋಜೋವಧೆಯಿಂದ ಕುಟುಂಬಕ್ಕೂ ಸಮಸ್ಯೆಯಾಗಿದೆ ಅಂತಾ ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ಡಿ-ಕಂಪನಿಗೆ ಡುಬಾಕ್ ಅಂತ ಕ್ಲಾಸ್ – ದರ್ಶನ್ ಫ್ಯಾನ್ಸ್‌ಗೆ ಬೆಂಡೆತ್ತಿದ ಒಳ್ಳೆ ಹುಡ್ಗ ಪ್ರಥಮ್

    ಸದ್ಯ ನಟರೊಬ್ಬರ ಫ್ಯಾನ್ಸ್ ಚಾಟಿಂಗ್ ಮತ್ತು ಅಶ್ಲೀಲ ಪೋಸ್ಟ್‌ಗಳು ಸ್ಯಾಂಡಲ್‌ವುಡ್‌ನಲ್ಲಿ ತೀವ್ರ ಸಂಚಲನ ಉಂಟು ಮಾಡಿದ್ದು, ಈಗ ಪೊಲೀಸ್ ಠಾಣೆಯ ಮೆಟ್ಟಿಲೇರುವಂತೆ ಮಾಡಿದೆ.

  • ಕುಡಿದು ಗಲಾಟೆ ಮಾಡಿ ಖಾರ ಬನ್ ತಿಂದ ಕೇಸ್‌ ಇದು – ಪ್ರಥಮ್‌ಗೆ ಡಿ ಕಂಪನಿ ತಿರುಗೇಟು

    ಕುಡಿದು ಗಲಾಟೆ ಮಾಡಿ ಖಾರ ಬನ್ ತಿಂದ ಕೇಸ್‌ ಇದು – ಪ್ರಥಮ್‌ಗೆ ಡಿ ಕಂಪನಿ ತಿರುಗೇಟು

    – ಪೊಲೀಸ್‌ ದೂರು ನೀಡಿಲ್ಲ ಯಾಕೆ?

    ಬೆಂಗಳೂರು: ದರ್ಶನ್‌ ಅಭಿಮಾನಿಗಳಿಂದ ಹಲ್ಲೆ ನಡೆದಿದೆ ಎಂದು ಆರೋಪ ಮಾಡಿದ ನಟ ಪ್ರಥಮ್‌ (Pratham) ಅವರು ಪೊಲೀಸ್‌ ಠಾಣೆಗೆ (Police Station) ಹೋಗಿ ಯಾಕೆ ದೂರು ನೀಡಿಲ್ಲ ಎಂದು ದರ್ಶನ್‌ (Darashan) ಅವರ ಫ್ಯಾನ್‌ ಪೇಜ್‌ D Company Fans Association ಪ್ರಶ್ನೆ ಮಾಡಿದೆ.

    ದೊಡ್ಡಬಳ್ಳಾಪುರ (Doddaballapura) ದೇವಸ್ಥಾನಕ್ಕೆ ಹೋಗಿದ್ದ ವೇಳೆ ದುಷ್ಕರ್ಮಿಗಳ ಗುಂಪೊಂದು ಡ್ರ್ಯಾಗರ್‌ ತೋರಿಸಿ ನನಗೆ ಜೀವ ಬೆದರಿಕೆ ಒಡ್ಡಿತ್ತು. ದರ್ಶನ್‌ ಅಭಿಮಾನಿಗಳು ಅಂತ ಹೇಳಿಕೊಂಡು ಕೆಲವರು ಬೆದರಿಕೆ ಹಾಕಿದ್ದರು ಎಂಬುದಾಗಿ ನಟ ಆರೋಪ ಮಾಡಿದ್ದರು. ಈ ಆರೋಪಕ್ಕೆ D Company Fans Association ಹಲವು ಪ್ರಶ್ನೆಗಳನ್ನು ಕೇಳಿ ತಿರುಗೇಟು ನೀಡಿದೆ.

    ಪೋಸ್ಟ್‌ನಲ್ಲಿ ಏನಿದೆ?
    ಪ್ರಥಮ್ ಮೇಲೆ ಹಲ್ಲೆ ಪ್ರಕರಣ ಸತ್ಯ ಹೊರ ಬಂದಿದೆ. ರೌಡಿಗಳ ಜೊತೆ ಹೋಗಿ ಅವರ ಕಾರ್ಯಕ್ರಮದಲ್ಲಿ ಅವರ ಹತ್ತಿರನೇ ತಿಂದು ಅವರಿಗೆ ರೇಗಿಸಿ ಬ್ರೆಡ್ ಚಿಪ್ಸ್ ಕೇಳಿ ಖಾರ ಬನ್ ತಿಂದ ಪ್ರಕರಣವಿದು. ಇದನ್ನೂ ಓದಿ: ನಂಬರ್ ಇಲ್ಲ, ಸಂಪರ್ಕದಲ್ಲೂ ಇಲ್ಲ, ದರ್ಶನ್‌ಗೆ 100% ಜವಾಬ್ದಾರಿ ಇದೆ: ರಮ್ಯಾ

    ನಮ್ಮ ಪ್ರಶ್ನೆ ದರ್ಶನ್‌ ಅವರು ಜೈಲಲ್ಲಿ ಇದ್ದಾಗ ಅಭಿಮಾನಿಗಳಿಗೆ ಪ್ರಚೋದನೆ ಹೇಳಿಕೆ ನೀಡಿ ಕಾಮೆಂಟ್ ಮಾಡಿದವರ ವಿರುದ್ಧ ಸಾಲು ಸಾಲು ದೂರು ದಾಖಲಿಸಿದ ಕುತಂತ್ರಿಗೆ ಹಲ್ಲೆ ನಡೆದರೂ ದೂರು ನೀಡಿದಷ್ಟು ಒಳ್ಳೆ ಮನಸ್ಸು ಇದೆಯಾ?

    ಕಾರಣ ಇಷ್ಟೇ ಅಂದು ಪೊಲೀಸ್ ದೂರು ನೀಡಲು ವೈದ್ಯರ ವರದಿ ಬೇಕು. ಸರ್ಕಾರಿ ಆಸ್ಪತ್ರೆಗೆ ಹೋದರೆ ವೈದ್ಯರ ಪರೀಕ್ಷೆಯಲ್ಲಿ ಕುಡಿದಿರುವುದು ಬೆಳಕಿಗೆ ಬರುತ್ತದೆ. ಕುಡುಕರ ಗಲಾಟೆ ಎಂದು ವರದಿ ನೀಡುತ್ತಾರೆ. ಎರಡು ಮೂರು ದಿನ ಕಳೆದರೆ ಸತ್ಯ ಯಾರಿಗೂ ತಿಳಿಯುವುದಿಲ್ಲ. ಇದು ನಿಮ್ಮ ಗೇಮ್ ಹಾಗೂ ನಿಮಗೆ ಪ್ರೋತ್ಸಾಹ ಧನ ಸಹಾಯ ಮಾಡುವವರ ಹುನ್ನಾರ. ಹೇಗಿದ್ದರೂ ನೀವು ನಿರ್ದೇಶಕರು ಅಲ್ಲವೇ? ಸ್ವಾಮಿ ಕಥೆ ಚಿತ್ರಕಥೆ ಸಂಭಾಷಣೆ ಚೆನ್ನಾಗಿ ರಚನೆ ಮಾಡಿದ್ದೀರಿ.

     

    ರೌಡಿಗಳ ಕಾರ್ಯಕ್ರಮದಲ್ಲಿ ನಿಮಗೆ ಏನು ಕೆಲಸ? ನೀವು ಸಭ್ಯರು ತಾನೆ ರೌಡಿಗಳು ಅಂತ ತಿಳಿದ ಕೂಡಲೇ ಕಾರು ಹತ್ತಿ ಹೋಗಬೇಕಿತ್ತು. ಅವರ ಜೊತೆ ಸಮಯ ಕಳೆದು ಮತ್ತಿನಲ್ಲಿ ಮಾಡಿಕೊಂಡ ಎಡ್ಡವಟಿಗೆ ಬಾಸ್ ಹೆಸರು ತಳುಕು ಯಾಕೆ ?

    ದರ್ಶನ್ ಅವರ ಅಧಿಕೃತ ಸಂಘಟನೆಗಳು ನೂರಾರಿವೆ? ರಿಜಿಸ್ಟರ್ ಪಟ್ಟಿ ನಮ್ಮತ್ರ ಇದೆ ನಮ್ಮ ಸಂಘದ ಸದಸ್ಯರು, ಪದಾಧಿಕಾರಿಗಳು ಯಾರಾದ್ರೂ ಬೆದರಿಕೆ ಹಾಕಿದರೆ ಹೇಳಿ ಸ್ವಾಮಿ. ಪ್ರೈವೇಟ್ ತೋಟದಲ್ಲಿ ಅಮಲಿನ ನಡೆದ ಜಗಳಕ್ಕೆ ನಮ್ಮ ನಟ ಆಗಲಿ ನಮ್ಮ ಅಭಿಮಾನಿಗಳು ಆಗಲಿ ಹೊಣೆ ಯಾಕೆ ಸ್ವಾಮಿ?

    ಗೂಂಡಾಗಳನ್ನು ಸಾಕಬೇಡಿ ಮನೆಯಲ್ಲಿ ನಾಯಿ ಸಾಕಿ ಅಂದ ನಟನಿಗೆ ಸಿನಿಮಾ ಪ್ರಚಾರಕ್ಕೆ ದುಡಿಲ್ಲ ಅಂದರೆ ಹೇಳಿ ದರ್ಶನ್ ಅಣ್ಣ ಪ್ಲೀಸ್ ನಿಮ್ಮ ಮನೆ ನಾಯಿಗೆ ಹಾಕುವ ಊಟದಲ್ಲಿ ಚೂರು ಹಾಕಿ.

  • ಸತ್ಯ ಒಪ್ಪಿಕೊಂಡ ರಕ್ಷಕ್: ಆಡಿಯೋ ವೈರಲ್ ಬಗ್ಗೆ ಹೇಳಿದ್ದೇನು?

    ಸತ್ಯ ಒಪ್ಪಿಕೊಂಡ ರಕ್ಷಕ್: ಆಡಿಯೋ ವೈರಲ್ ಬಗ್ಗೆ ಹೇಳಿದ್ದೇನು?

    ಟ ಪ್ರಥಮ್ (Pratham) ಇತ್ತೀಚೆಗೆ ದೇವಸ್ಥಾನದ ಪೂಜೆಗೆಂದು ಬೆಂಗಳೂರು ಗ್ರಾಮಾಂತರ ದೊಡ್ಡಬಳ್ಳಾಪುರದ ಶಕ್ತಿ ದೇವತೆ ರೇಣುಕಾ ಯಲ್ಲಮ್ಮ ದೇವಸ್ಥಾನಕ್ಕೆ ಭೇಟಿ ನೀಡಿರುತ್ತಾರೆ. ಈ ವೇಳೆ ಕೆಲ ಕಿಡಿಗೇಡಿಗಳು ದರ್ಶನ್ ಅಭಿಮಾನಿಗಳು(Darshan Fans) ಅಂತಾ ಅವರ ಹೆಸರು ಹೇಳಿಕೊಂಡು ಪ್ರಥಮ್‌ರನ್ನ ಸುತ್ತುವರೆದಿದ್ದಾರೆ. ಬಳಿಕ ಪಾರ್ಟಿ ನಡೆಯುತ್ತಿದ್ದ ಜಾಗಕ್ಕೆ ಕರೆದುಕೊಂಡು ಹೋಗಿ ಮಾರಾಕಾಸ್ತ್ರಗಳನ್ನು ತೋರಿಸಿ ಬೆದರಿಸಿದ್ದಾರೆ. ಜೀವ ಬೆದರಿಕೆ ಹಾಕಿದ್ದಾರೆ ಅಂತಾ ನಟ ಪ್ರಥಮ್ ಪಬ್ಲಿಕ್ ಟಿವಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಜೊತೆಗೆ ಈ ಘಟನೆ ನಡೆದಾಗ ಆ ಜಾಗದಲ್ಲಿ ನಟ ಬುಲೆಟ್ ಪ್ರಕಾಶ್ ಪುತ್ರ ರಕ್ಷಕ್ ಬುಲೆಟ್ (Rakshak Bullet) ಇದ್ದರು ಎಂದಿದ್ದಾರೆ. ಇದನ್ನೂ ಓದಿ: ನಿಮ್ಮಿಂದಲೇ ಹೆಣ್ಮಕ್ಕಳಿಗೆ ದೌರ್ಜನ್ಯ – ದರ್ಶನ್‌ ಫ್ಯಾನ್ಸ್‌ ವಿರುದ್ಧ ರಮ್ಯಾ ಕೆಂಡಾಮಂಡಲ

     

    ನಟ ಪ್ರಥಮ್ ಹೇಳಿಕೆ ಬಳಿಕ ನಟ ಹಾಗೂ ಬಿಗ್‌ಬಾಸ್ ಖ್ಯಾತಿಯ ರಕ್ಷಕ್ ಬುಲೆಟ್ ತಾನು ಆ ಜಾಗದಲ್ಲಿ ಇರೋ ಬಗ್ಗೆ ಪಬ್ಲಿಕ್ ಟಿವಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಘಟನೆ ನಡೆದ ಸ್ಥಳದಲ್ಲಿ ನಾನಿದ್ದಿದ್ದು ನಿಜ, ಆದರೆ ಈ ಘಟನೆಗೂ ನನಗೂ ಯಾವುದೇ ರೀತಿ ಸಂಬಂಧವಿಲ್ಲ. ದಯವಿಟ್ಟು ಈ ರೀತಿ ಜಾಲತಾಣದಲ್ಲಿ ವೈರಲ್ ಆಗ್ತಿರುವ ತಹರೇವಾರಿ ಸುದ್ದಿಗೆ ನಮ್ಮ ಕುಟುಂಬದ ಸದಸ್ಯರು ಆತಂಕಕ್ಕೀಡಾಗಿದ್ದಾರೆ ಎಂದು ಪ್ರತಿಕ್ರಿಯಿಸಿದ್ದಾರೆ. ಇದನ್ನೂ ಓದಿ: ರಶ್ಮಿಕಾ ಮಂದಣ್ಣ ನಟನೆಯ ಮೈಸಾ ಚಿತ್ರಕ್ಕೆ ಮುಹೂರ್ತ: ಗೋಂಡ್ ಹಾಡಿಗೆ ಡಾನ್ಸ್

    ಮಹೇಶ್ ಎನ್ನುವವರು ದೇವಸ್ಥಾನಕ್ಕೆ ನನ್ನ ಕರೆದಿದ್ದರು, ನಾನು ಹೋದೆ ಪೂಜೆ ಮುಗಿಸಿಕೊಂಡೆ ಊಟ ಮಾಡಿ ಬಂದೆ ಅಷ್ಟೇ ಹೊರತು ಆ ಘಟನೆಗೂ ನನಗೂ ಯಾವ ಸಂಬಂಧವಿಲ್ಲ ಅಂತಾ ಖಡಾಖಂಡಿತವಾಗಿ ಖಂಡಿಸಿದ್ದಾರೆ. ಪ್ರಥಮ್ ಅಣ್ಣ ನಾನು ಫ್ಯಾಮಿಲಿ ಫ್ರೆಂಡ್ಸ್, ಬೇರೆಯವರಿಗೆ ತೊಂದ್ರೆ ಮಾಡ್ಬೇಕು ಅಂತಾ ಬಂದಿಲ್ಲ. ಕಲಾವಿದರ ಫ್ಯಾಮಿಲಿಯಿಂದ ಬಂದವನು ನಾನು’ ಎಂದು ಮಾತನಾಡಿದ್ದಾರೆ.

  • ಹೋಟೆಲ್‌ನಲ್ಲಿ ಕಿರಿಕ್‌ – ದರ್ಶನ್‌ ಫ್ಯಾನ್ಸ್‌ ವಿರುದ್ಧ ದೂರು ದಾಖಲಿಸಿದ ಪ್ರಥಮ್

    ಹೋಟೆಲ್‌ನಲ್ಲಿ ಕಿರಿಕ್‌ – ದರ್ಶನ್‌ ಫ್ಯಾನ್ಸ್‌ ವಿರುದ್ಧ ದೂರು ದಾಖಲಿಸಿದ ಪ್ರಥಮ್

    ‘ಬಿಗ್ ಬಾಸ್’ ಪ್ರಥಮ್ (Pratham)  ಹಾಗೂ ದರ್ಶನ್ ಫ್ಯಾನ್ಸ್ ನಡುವಿನ ಕಿರಿಕ್ ಠಾಣೆ ಮೆಟ್ಟಿಲೇರಿದೆ. ದರ್ಶನ್ ಫ್ಯಾನ್ಸ್ (Darshan Fans) ನಿಂದಿಸಿದ ಆರೋಪದ ಮೇಲೆ ಬಸವೇಶ್ವರನಗರ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಥಮ್ ಇಂದು (ನ.16) ದೂರು ದಾಖಲಿಸಿದ್ದಾರೆ. ಇದನ್ನೂ ಓದಿ:ತಮಿಳು ನಿರ್ದೇಶಕ ಸುರೇಶ್ ಸಂಗಯ್ಯ ನಿಧನ

    ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಪ್ರತಿಷ್ಠಿತ ಹೊಟೇಲ್‌ನಲ್ಲಿ ಊಟಕ್ಕೆ ಕುಳಿತಿದ್ದೇವು. ಅವರೇ ಬಂದು ಕಿರುಚಾಡಿ ಏನೆಲ್ಲಾ ಮಾಡಿದರು ಅನ್ನೋದು ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿದೆ. ನನ್ನ ಮೇಲೆ 2ನೇ ಸಲ ಹಲ್ಲೆಗೆ ಪ್ರಯತ್ನ ನಡೆದಿದೆ. ಮೊದಲ ಸಲ ಹಲ್ಲೆ ಆದಾಗಿನ ವಿಡಿಯೋ ಪೊಲೀಸರಿಗೆ ಕೊಟ್ಟಿದ್ದೇನೆ. ಕಳೆದ ಒಂದೂವರೆ ತಿಂಗಳ ಹಿಂದೆ ಕೂಡ ಹಲ್ಲೆ ಆಗಿತ್ತು. ಅದನ್ನೇ ಪೊಲೀಸ್ ಕೇಳಿದರು.

    ನಾನು ಪ್ರಾಮಾಣಿಕವಾಗಿ ಹೇಳ್ತೀನಿ ದರ್ಶನ್ ಸರ್ ಮೇಲೆ ಯಾವುದೇ ವೈಯಕ್ತಿಕ ದ್ವೇಷ ಇಲ್ಲ. ಆ ರೀತಿ ಆಗಿದ್ರೆ, ಮೊದಲ ಸಲನೇ ದೂರು ಕೊಡ್ತಿದ್ದೆ. ಮತ್ತೆ ಬೇಡ ಅಂತ ಸುಮ್ಮನಾಗಿದ್ದೆ, ಅವತ್ತೆ ದೂರು ಕೊಟ್ಟಿದ್ದರೆ ದೊಡ್ಡ ವಿಚಾರ ಆಗಿರೋದು. ಅವರ ಹೆಸರು ಹೇಳಬಹುದು ಆದರೆ ಹೇಳಿದರೆ ಅವರೆಲ್ಲಾ ಅಲರ್ಟ್ ಆಗುತ್ತಾರೆ. ಹಾಗಾಗಿ ಸೈಬರ್ ಠಾಣೆಯಲ್ಲಿ ದೂರು ದಾಖಲಿಸಿದ್ದೇನೆ.

    ಈ ವಿಚಾರದಲ್ಲಿ ನನ್ನ ಪ್ರಕಾರ 50ರಿಂದ 60 ಜನ ಒಳಗೆ ಹೋಗುತ್ತಾರೆ. ದರ್ಶನ್ ಸರ್ ಮೊದಲಿನ ರೀತಿಯಲ್ಲೇ ಸಿನಿಮಾ ಮಾಡಿಕೊಂಡು ಆರಾಮಾಗಿ ಇರೋದು ನನ್ನ ಆಸೆ. ಆದರೆ ಈ ಅಂಧಾಭಿಮಾನಿಗಳಿಗೆ ಅವರಿಗೆ ಮತ್ತಷ್ಟು ತೊಂದರೆಯಾಗುವಂತೆ ನಡೆದುಕೊಳ್ಳುತ್ತಿದ್ದಾರೆ ಎಂದು ಪ್ರಥಮ್ ತಿಳಿಸಿದ್ದಾರೆ.