Tag: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ

  • PM ಕಿಸಾನ್ ಯೋಜನೆ 10ನೇ ಕಂತಿನಡಿ ಕರ್ನಾಟಕಕ್ಕೆ 685 ಕೋಟಿ ರೂ.ಗೂ ಹೆಚ್ಚಿನ ಹಣ ಬಿಡುಗಡೆ

    PM ಕಿಸಾನ್ ಯೋಜನೆ 10ನೇ ಕಂತಿನಡಿ ಕರ್ನಾಟಕಕ್ಕೆ 685 ಕೋಟಿ ರೂ.ಗೂ ಹೆಚ್ಚಿನ ಹಣ ಬಿಡುಗಡೆ

    ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ದೇಶದ ರೈತರಿಗೆ 10ನೇ ಕಂತಿನ ಹಣ ಬಿಡುಗಡೆಗೊಂಡಿದ್ದು, 10ನೇ ಕಂತಿನಡಿ ಕರ್ನಾಟಕ ರಾಜ್ಯದ ಒಟ್ಟು 34,264,01 ರೈತರಿಗೆ 685.28 ಕೋಟಿ ರೂ.ಗಳನ್ನು ರೈತರಿಗೆ ತಲಾ 2 ಸಾವಿರ ರೂ.ಗಳಂತೆ ಬಿಡುಗಡೆಯಾಗಿದೆ.

    2018-19 ರಿಂದ ಜ.1, 2022 ರವರೆಗೆ 10ನೇ ಕಂತಿನವರೆಗೆ ರಾಜ್ಯದ ಒಟ್ಟು 54 ಲಕ್ಷದ 52 ಸಾವಿರ ರೈತ ಕುಟುಂಬಗಳಿಗೆ ಒಟ್ಟು 8,707 ಕೋಟಿ, 97ಲಕ್ಷ ರೂ. ಬಿಡುಗಡೆಯಾದಂತಾಗಿದೆ. ಇದನ್ನೂ ಓದಿ: ಮಹಾರಾಷ್ಟ್ರದ 10ಕ್ಕೂ ಹೆಚ್ಚು ಸಚಿವರು, 20ಕ್ಕೂ ಹೆಚ್ಚು ಶಾಸಕರಿಗೆ ಕೊರೊನಾ ದೃಢ

    ಕರ್ನಾಟಕ ರಾಜ್ಯದಲ್ಲಿ ಭಾರತ ಸರ್ಕಾರದ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯನ್ನು ಕಳೆದ 2019 ಫೆ.1ರಿಂದ ಅನುಷ್ಠಾನಗೊಳಿಸಿದ್ದು, ಯೋಜನೆಯಡಿ ವಾರ್ಷಿಕ ರೂ 6,000 ರೂ.ಗಳ ಆರ್ಥಿಕ ನೆರವನ್ನು ಅರ್ಹ ರೈತರ ಬ್ಯಾಂಕ್ ಖಾತೆಗಳಿಗೆ ನೇರ ನಗದು ವರ್ಗಾವಣೆ ಮೂಲಕ ನೀಡಲಾಗುತ್ತಿದೆ. ಈ ಅನುದಾನವನ್ನು 2,000 ರೂ.ಗಳಂತೆ ಮೂರು ಕಂತುಗಳಲ್ಲಿ ನಾಲ್ಕು ತಿಂಗಳಿಗೊಮ್ಮೆ ಇದನ್ನು ನೀಡಲಾಗುತ್ತಿದೆ. 2,850 ಕೋಟಿ 54 ಲಕ್ಷ ರೂ.ಗಳಷ್ಟು ಕರ್ನಾಟಕ ಸರ್ಕಾರದಿಂದ ಹೆಚ್ಚುವರಿಯಾಗಿ ರೈತರಿಗೆ ಹಣ ಪಾವತಿಯಾಗಿದೆ. ಇದನ್ನೂ ಓದಿ: ಜ್ವರ, ಕೆಮ್ಮು, ತಲೆನೋವು ಇದ್ದರೂ ಕೋವಿಡ್ ಟೆಸ್ಟ್ ಮಾಡಿಸಿ: ಕೇಂದ್ರ ಸೂಚನೆ

    ಈ ಯೋಜನೆಯಡಿ ಎಲ್ಲಾ ಪಾವತಿಗಳನ್ನು ಆಧಾರ್ ಆಧಾರಿತ ಡಿಬಿಟಿ ಮುಖಾಂತರ ಮಾಡಬೇಕೆಂದು ಸೂಚಿಸಲಾಗಿದ್ದು, ಎಲ್ಲಾ ರಾಜ್ಯಗಳ ಪೈಕಿ, ಕರ್ನಾಟಕ ರಾಜ್ಯವು ಅತಿ ಹೆಚ್ಚು ಶೇಕಡಾವಾರು ಆಧಾರ್ ಆಧಾರಿತ ವಹಿವಾಟುಗಳನ್ನು ಅತ್ಯುತ್ತಮವಾಗಿ ನಿರ್ವಹಿಸಿದ ಹಿನ್ನೆಲೆಯಲ್ಲಿ 2021ರ ವರ್ಷದ ಫೆಬ್ರವರಿಯಲ್ಲಿ ಭಾರತ ಸರ್ಕಾರದಿಂದ ಕರ್ನಾಟಕ ರಾಜ್ಯಕ್ಕೆ ಪ್ರಶಸ್ತಿ ಸಹ ದೊರೆತಿದೆ. ನಿರಂತರ ಮೇಲ್ವಿಚಾರಣೆಯ ಭಾಗವಾಗಿ ಯೋಜನೆಯ ಫಲಾನುಭವಿಗಳಾಗಿರುವ ರೈತ ಕುಟುಂಬಗಳ ಅರ್ಹತೆಯನ್ನು ರಾಜ್ಯದಿಂದ ಸರಿಯಾಗಿ ಪರಿಶೀಲಿಸಲಾಗುತ್ತಿದೆ.

  • 50 ಲಕ್ಷ ರೈತರಿಗೆ 1 ಸಾವಿರ ಕೋಟಿ ಹಣ ಬಿಡುಗಡೆ: ಬಿ.ಸಿ.ಪಾಟೀಲ್

    50 ಲಕ್ಷ ರೈತರಿಗೆ 1 ಸಾವಿರ ಕೋಟಿ ಹಣ ಬಿಡುಗಡೆ: ಬಿ.ಸಿ.ಪಾಟೀಲ್

    – ಬೆಳೆ ವಿಮೆ ಹಣ ಆ.18 ರಿಂದ ರೈತರ ಖಾತೆಗೆ ಜಮೆ

    ಬೆಂಗಳೂರು: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ 1 ಸಾವಿರ ಕೋಟಿ ಹಣವನ್ನು 50 ಲಕ್ಷ ರೈತರಿಗೆ ಬಿಡುಗಡೆ ಮಾಡಿರುವುದಾಗಿ ಸಚಿವ ಬಿ.ಸಿ.ಪಾಟೀಲ್ ಪತ್ರಿಕಾ ಹೇಳಿಕೆ ಮೂಲಕ ತಿಳಿಸಿದ್ದಾರೆ.

    ಕಳೆದ ಶನಿವಾರ ಬೆಳಗ್ಗೆ 7 ಗಂಟೆಯಿಂದ ರೈತರ ಖಾತೆಗೆ ನೇರವಾಗಿ ಹಣ ಜಮೆಯಾಗುತ್ತಿದೆ. 2019-20ನೇ ಸಾಲಿನ ಬೆಳೆ ವಿಮೆ ಹಣ ಮಂಗಳವಾರದಿಂದ ರೈತರ ಖಾತೆಗೆ ನೇರವಾಗಿ ಜಮೆ ಮಾಡಲಾಗುತ್ತಿದೆ. ವಿಮೆಗಾಗಿ ರೈತರು ಯಾವುದೇ ಕಾರಣಕ್ಕೂ ಆತಂಕಕ್ಕೆ ಒಳಗಾಗುವುದಾಗಲಿ, ಚಿಂತಿಸುವ ಅವಶ್ಯಕತೆಯಿಲ್ಲ. ಸರ್ಕಾರ ಮತ್ತು ಇಲಾಖೆ ಎಂದಿಗೂ ರೈತರೊಂದಿಗೆ ಸದಾ ಬೆನ್ನೆಲುಬಾಗಿ ನಿಲ್ಲಲಿದೆ ಎಂದು ಸಚಿವರು ಹೇಳಿದ್ದಾರೆ.

    ಇಲಾಖೆಯ ವೃಂದ ಮತ್ತು ನೇಮಕಾತಿ ಪ್ರಕ್ರಿಯೆಗೆ ನಿಯಮಗಳ ಕರಡು ಪ್ರಕ್ರಿಯೆ ಅಂತಿಮ ಹಂತದಲ್ಲಿದೆ. ಶೀಘ್ರವೇ ‘ರೈತಮಿತ್ರ’ ರ ನೇಮಕಾತಿ ಮಾಡಿಕೊಳ್ಳಲಾಗುತ್ತೆ. ಅಲ್ಲದೇ ರಾಜ್ಯದಲ್ಲಿ ಯೂರಿಯಾ ಗೊಬ್ಬರಕ್ಕೆ ಯಾವುದೇ ಕೊರತೆಯಿಲ್ಲ. ಕಳೆದ ಸಾಲಿಗಿಂತ ಈ ವರ್ಷ ಶೇ.25 ರಷ್ಟು ಹೆಚ್ಚಿನದಾಗಿ ಬಿತ್ತನೆಯಾಗಿದೆ. ಆದ್ದರಿಂದ ಈ ವರ್ಷ 65 ಸಾವಿರ ಮೆಟ್ರಿಕ್ ಟನ್ ಯೂರಿಯಾ ಹೆಚ್ಚಿನದಾಗಿ ಪೂರೈಕೆಯಾಗುತ್ತಿದೆ. ಈ ವಾರ 37 ಸಾವಿರ ಟನ್ ಯೂರಿಯಾ ಸರಬರಾಜು ಆಗುತ್ತಿದೆ ಎಂದು ಬಿ.ಸಿ.ಪಾಟೀಲ್ ತಿಳಿಸಿದರು.

    ಯೂರಿಯಾವನ್ನು ರೈತರು ಭೂಮಿಗೆ ಎಷ್ಟು ಅಗತ್ಯವೋ ಅಷ್ಟು ಪ್ರಮಾಣದಲ್ಲಿ ಮಾತ್ರ ಬಳಸಬೇಕು. ಯಾವುದೇ ರಾಸಾಯನಿಕ ಔಷಧಿಯಾಗಲಿ, ರಸಗೊಬ್ಬರವನ್ನಾಗಲಿ ಅಗತ್ಯಕ್ಕೆ, ಅವಶ್ಯಕತೆಗೆ ಮೀರಿ ಬಳಸಬಾರದು. ಅಗತ್ಯಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಯೂರಿಯಾ ಬಳಸಿದ್ದಲ್ಲಿ ಭೂಮಿಯ ಫಲವತ್ತತೆ ಕ್ಷೀಣಿಸುವ ಸಾಧ್ಯತೆಯೂ ಇದೆ. ಹೀಗಾಗಿ ರೋಗಕ್ಕೆ ಎಷ್ಟು ಮದ್ದಿನ ಅಗತ್ಯತೆಯಿದೆಯೋ ಅಷ್ಟನ್ನು ಮಾತ್ರ ಬಳಸಬೇಕು. ಯಾವುದೇ ರೋಗಕ್ಕಾಗಲಿ ಅಗತ್ಯಕ್ಕಿಂತ ಹೆಚ್ಚಿನ ಔಷಧಿ ಸೇವಿಸಿದ್ದಲ್ಲಿ ಅದು ವಿಷವಾಗಿ ಪರಿಣಮಿಸುವ ಸಾಧ್ಯತೆ ಹೆಚ್ಚಾಗಿದೆ ಎಂದು ಕೃಷಿ ಸಚಿವ ಬಿಸಿ ಪಾಟೀಲ್ ಪತ್ರಿಕಾ ಹೇಳಿಕೆಯಲ್ಲಿ ಹೇಳಿದ್ದಾರೆ.