Tag: ಪ್ರಧಾನಿ

  • ಜಪಾನ್‌ನ ಮೊದಲ ಮಹಿಳಾ ಪ್ರಧಾನಿಯಾಗಿ ಬಲಪಂಥೀಯ ನಾಯಕಿ ಸನೆ ತಾಕೈಚಿ ಆಯ್ಕೆ

    ಜಪಾನ್‌ನ ಮೊದಲ ಮಹಿಳಾ ಪ್ರಧಾನಿಯಾಗಿ ಬಲಪಂಥೀಯ ನಾಯಕಿ ಸನೆ ತಾಕೈಚಿ ಆಯ್ಕೆ

    ಟೋಕಿಯೊ: ಜಪಾನ್ ಇತಿಹಾಸದಲ್ಲಿ ಮೊದಲ ಬಾರಿ ಮಹಿಳೆಯೊಬ್ಬರು ಪ್ರಧಾನಿ ಹುದ್ದೆ ಅಲಂಕರಿಸಲಿದ್ದಾರೆ. ಬಲಪಂಥೀಯ ನಾಯಕಿ ಸನೆ ತಾಕೈಚಿ (Sanae Takaichi) ಜಪಾನಿನ (Japan) ಪ್ರಧಾನಿಯಾಗಿ ಆಯ್ಕೆಯಾಗಿದ್ದಾರೆ.

    ಆಡಳಿತರೂಢ ಲಿಬರಲ್‌ ಡೆಮಾಕ್ರಟಿಕ್‌ ಪಕ್ಷದ (LDP) ಕಟ್ಟಾ ಸಂಪ್ರದಾಯವಾದಿಯಾಗಿರುವ 64 ವರ್ಷದ ಸನೆ ತಾಕೈಚಿ ಅವರನ್ನು ಪ್ರಧಾನಿಯನ್ನಾಗಿ ಸಂಸತ್ತು ಆಯ್ಕೆ ಮಾಡಿದೆ.

    ಶಿಂಜೊ ಅಬೆ ಅವರ ಶಿಷ್ಯೆಯಾಗಿದ್ದ ತಕೈಚಿ, ಅಬೆ ಅವರ ಪ್ರಧಾನಿ ಅವಧಿಯಲ್ಲಿ ವಿವಿಧ ಹುದ್ದೆಗಳನ್ನು ಅಲಂಕರಿಸಿದ್ದರು. ಅಕ್ಟೋಬರ್‌ 4ರಂದು ನಡೆದ ಪಕ್ಷದ ಆಂತರಿಕ ಚುನಾವಣೆಯಲ್ಲಿ ಸನೆ ತಾಕೈಚಿ ಅವರನ್ನು ನಾಯಕಿಯಾಗಿ ಆಯ್ಕೆ ಮಾಡಲಾಗಿತ್ತು. ದೇಶದ ಜನಪ್ರಿಯ ಮಾಜಿ ಪ್ರಧಾನಿ ಜುನಿಚಿರೊ ಕೊಯ್ಚುಮಿ ಅವರ ಪುತ್ರ ಹಾಗೂ ಕೃಷಿ ಸಚಿವ ಶಿಂಜಿರೊ ಕೊಯ್ಚುಮಿ ಅವರನ್ನು ಸನೆ ಸೋಲಿಸಿದ್ದರು.

    ಜಪಾನ್ ಮೊದಲು ವಿದೇಶಾಂಗ ನೀತಿಯನ್ನು ಪ್ರತಿಪಾದಿಸುತ್ತಿರುವ ಇವರು ಅಮೆರಿಕದ ವ್ಯಾಪಾರ ನಿಯಮಗಳನ್ನು ಟೀಕಿಸಿದ್ದರು. ತೈವಾನ್ ಪರ ಒಲವು ಹೊಂದಿರುವ ಇವರು ಚೀನಾದ ಗಿಡುಗ ಎಂದು ಪ್ರಖ್ಯಾತಿ ಪಡೆದಿದ್ದಾರೆ.

    ತಮ್ಮ ಪ್ರಚಾರ ಭಾಷಣದಲ್ಲಿ ಇಸ್ಲಾಮಿಸ್ಟ್‌ಗಳು ಅಥವಾ ಅಕ್ರಮ ವಲಸಿಗರನ್ನು ಜಪಾನ್‌ ಸ್ವೀಕರಿಸುವುದಿಲ್ಲ. ಜಪಾನ್‌ ದೇಶವಾಗಿ ಉಳಿಯಬೇಕಾದರೆ ನಕಲಿ ನಿರಾಶ್ರಿತರನ್ನು ಹೊರಗೆ ಕಳುಹಿಸಬೇಕು ಗುಡುಗಿದ್ದರು.

    ರಾಜಕೀಯಕ್ಕೆ ಪ್ರವೇಶಿಸುವ ಮೊದಲು ಸನೆ ತಾಕೈಚಿ ದೂರದರ್ಶನ ನಿರೂಪಕಿಯಾಗಿ ಕೆಲಸ ಮಾಡುತ್ತಿದ್ದರು. ಸಲಿಂಗ ವಿವಾಹ ಮತ್ತು ವಿವಾಹಿತ ದಂಪತಿಗಳಿಗೆ ಪ್ರತ್ಯೇಕ ಉಪನಾಮಗಳನ್ನು ನೀಡುವುದಕ್ಕೆ ದೀರ್ಘಕಾಲೀನ ವಿರೋಧಿಯಾಗಿದ್ದಾರೆ.

    ಸನೆ ತಾಕೈಚಿ ಅಯ್ಕೆಯಾದ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಸಾಮಾಜಿಕ ಜಾಲತಾಣದಲ್ಲಿ ಅಭಿನಂದನೆ ಸಲ್ಲಿಸಿದ್ದಾರೆ.

  • ಲೈಂಗಿಕ ಕಿರುಕುಳ ಕೇಸ್‌ | ನನ್ಗೆ ಪ್ರಧಾನಿ ಗೊತ್ತು – ಪೊಲೀಸರಿಗೇ ಬೆದರಿಕೆ ಹಾಕಿದ ಸ್ವಾಮಿ ಚೈತನ್ಯಾನಂದ ಸರಸ್ವತಿ

    ಲೈಂಗಿಕ ಕಿರುಕುಳ ಕೇಸ್‌ | ನನ್ಗೆ ಪ್ರಧಾನಿ ಗೊತ್ತು – ಪೊಲೀಸರಿಗೇ ಬೆದರಿಕೆ ಹಾಕಿದ ಸ್ವಾಮಿ ಚೈತನ್ಯಾನಂದ ಸರಸ್ವತಿ

    – 40 ದಿನಗಳಲ್ಲಿ 13 ಹೋಟೇಲ್‌ ಬಲಿಸಿದ್ದ ಕಾಮಿಸ್ವಾಮಿ

    ನವದೆಹಲಿ: 17 ವಿದ್ಯಾರ್ಥಿನಿಯರಿಗೆ (Students) ಲೈಗಿಂಕ ಕಿರುಕುಳ ಆರೋಪ ಹೊತ್ತಿರುವ ಸ್ವಯಂ ಘೋಷಿತ ದೇವಮಾನವ ಸ್ವಾಮಿ ಚೈತನ್ಯಾನಂದ ಸರಸ್ವತಿ (Chaitanyananda Saraswati) ಪೊಲೀಸರ ಬಂಧನದಿಂದ ತಪ್ಪಿಸಿಕೊಳ್ಳಲು ಕಳೆದ 40 ದಿನಗಳಲ್ಲಿ 13 ಹೋಟೇಲ್‌ಗಳನ್ನು ಬದಲಿಸಿದ್ದ ಎಂದು ಮೂಲಗಳು ಹೇಳಿವೆ. ಸಾಮಾನ್ಯ ಟ್ಯಾಕ್ಸಿಯಲ್ಲಿ ಪ್ರಯಾಣಿಸುತ್ತಿದ್ದ ಸ್ವಾಮೀಜಿ ಸಣ್ಣ ಸಣ್ಣ ಹೋಟೇಲ್‌ಗಳಲ್ಲಿ ಉಳಿದುಕೊಳ್ಳುತ್ತಿದ್ದ ಅನ್ನೋದು ಪೊಲೀಸರ ತನಿಖೆ ವೇಳೆ ತಿಳಿದುಬಂದಿದೆ.

    Swami Chaitanyananda Saraswati

    ಸದ್ಯ ಪೊಲೀಸ್ ಕಸ್ಟಡಿಯಲ್ಲಿರುವ ಸ್ವಾಮಿ ಚೈತನ್ಯಾನಂದ ಸರಸ್ವತಿ ತನಿಖೆಗೆ ಸಹಕರಿಸುತ್ತಿಲ್ಲ, ಯಾವುದೇ ಪ್ರಶ್ನೆ ಕೇಳಿದ್ರೂ ಗೊತ್ತಿಲ್ಲ, ಇಲ್ಲ ಎಂದು ಉತ್ತರ ಹೇಳುತ್ತಿದ್ದಾರೆ. ವಿಚಾರಣೆ ವೇಳೆ ನನಗೆ ಪ್ರಧಾನಿ ನರೇಂದ್ರ ಮೋದಿ ಗೊತ್ತು, ಪ್ರಧಾನಿ ಕಚೇರಿ ಜೊತೆಗೆ ನೇರ ಸಂಪರ್ಕ ಹೊಂದಿದ್ದೇನೆ ಎಂದು ಬೆದರಿಸುವ ಪ್ರಯತ್ನ ಮಾಡಿದ್ದಾರೆ. ಇದನ್ನೂ ಓದಿ: Vijay Rally Stampede | ದುರಂತದ ಬೆನ್ನಲ್ಲೇ ನಟ ವಿಜಯ್‌ ನಿವಾಸಕ್ಕೆ ಬಾಂಬ್‌ ಬೆದರಿಕೆ – ಬಿಗಿ ಭದ್ರತೆ

    ಮೋದಿ, ಟ್ರಂಪ್‌ ಜೊತೆಗಿನ AI ಫೋಟೋಗಳು ಪತ್ತೆ
    ತನಿಖೆಯ ವೇಳೆ ಆರೋಪಿಯ ಕೋಣೆಯಲ್ಲಿ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಪ್ರಧಾನ ಮಂತ್ರಿ ನರೇಂದ್ರ ಮೋದಿ ಜೊತೆಗೆ ಛಾಯಾಚಿತ್ರಗಳು ಕಂಡುಬಂದಿವೆ, ಪ್ರಾಥಮಿಕ ತನಿಖೆಯಲ್ಲಿ ಈ ಚಿತ್ರಗಳನ್ನು AI ಬಳಸಿ ರಚಿಸಲಾಗಿದೆ ಅನ್ನೋದು ಗೊತ್ತಾಗಿದೆ. ನಕಲಿ ವಿಸಿಟಿಂಗ್ ಕಾರ್ಡ್‌ಗಳನ್ನು ಸಹ ಪತ್ತೆಹಚ್ಚಿದ್ದು, ಅದು ವಿಶ್ವಸಂಸ್ಥೆ ಮತ್ತು ಬ್ರಿಕ್ಸ್ ಜೊತೆಗಿನ ಆತನ ಸಂಬಂಧ ತೋರಿಸುತ್ತದೆ. ಅವುಗಳನ್ನು ವಶಪಡಿಸಿಕೊಂಡು ಪೊಲೀಸರು ತನಿಖೆ ಆರಂಭಿಸಿದ್ದಾರೆ. ಇದನ್ನೂ ಓದಿ: ಕ್ರೀಡಾ ಮೈದಾನದಲ್ಲಿ `ಆಪರೇಷನ್‌ ಸಿಂಧೂರ’ – ಫಲಿತಾಂಶ ಒಂದೇ, ಭಾರತಕ್ಕೆ ಜಯ: ಮೋದಿ ಬಣ್ಣನೆ

    Chaitanyananda Saraswati Swamiji

    ಸ್ವಾಮೀಜಿ ಬಳಿಯಿದ್ದ ಒಂದು ಐಪ್ಯಾಡ್ ಮತ್ತು ಮೂರು ಮೊಬೈಲ್ ಫೋನ್‌ಗಳನ್ನ ವಶಪಡಿಸಿಕೊಳ್ಳಲಾಗಿದೆ. ಒಂದು ಫೋನ್‌ನಲ್ಲಿ ಹಾಸ್ಟೆಲ್‌ನ ಸಿಸಿಟಿವಿ ವಿಡಿಯೋಗಳು ಪತ್ತೆಯಾಗಿದೆ. ಮೂಬೈಲ್ ಮೂಲಕ ಹಾಸ್ಟೆಲ್ ಮೇಲೆ ನಿಗಾ ವಹಿಸುತ್ತಿದ್ದರು ಎನ್ನಲಾಗಿದೆ. ಸದ್ಯ ಸರಸ್ವತಿಗೆ ಸಂಬಂಧಿಸಿದ ಬಹು ಬ್ಯಾಂಕ್ ಖಾತೆಗಳು ಮತ್ತು ಸ್ಥಿರ ಠೇವಣಿಗಳಲ್ಲಿ ಇರಿಸಲಾಗಿದ್ದ 8 ಕೋಟಿ ರೂ.ಗಳನ್ನು ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದಾರೆ.  ಇದನ್ನೂ ಓದಿ: ವಿಜಯ್‌ ಅವರದ್ದು ಏನೂ ತಪ್ಪಿಲ್ಲ, ಪೊಲೀಸ್‌ ಇಂಟೆಲಿಜೆನ್ಸ್‌ ವಿಫಲವಾಗಿದೆ: ಅಣ್ಣಾಮಲೈ ಆರೋಪ

  • ಕೆನಡಾ ನೂತನ ಪ್ರಧಾನಿಯಾಗಿ ಕಾರ್ನಿ ಪ್ರಮಾಣ ವಚನ ಸ್ವೀಕಾರ

    ಕೆನಡಾ ನೂತನ ಪ್ರಧಾನಿಯಾಗಿ ಕಾರ್ನಿ ಪ್ರಮಾಣ ವಚನ ಸ್ವೀಕಾರ

    ಒಟ್ಟಾವಾ: ಕೆನಡಾದ ನೂತನ ಪ್ರಧಾನಿಯಾಗಿ ಮಾರ್ಕ್ ಕಾರ್ನಿ (Mark Carney) ಶುಕ್ರವಾರ ಪ್ರಮಾಣ ವಚನ ಸ್ವೀಕರಿಸಿದರು.

    ಈ ಮೊದಲು ಮಾರ್ಕ್ ಕಾರ್ನಿ ಬ್ಯಾಂಕ್ ಆಫ್ ಇಂಗ್ಲೆಂಡ್ ಮತ್ತು ಬ್ಯಾಂಕ್ ಆಫ್ ಕೆನಡಾದ ಅಧ್ಯಕ್ಷರಾಗಿದ್ದರು. ಜನವರಿಯಲ್ಲಿ ಜಸ್ಟಿನ್ ಟ್ರುಡೋ ರಾಜೀನಾಮೆ ನೀಡಿದ್ದ ಹಿನ್ನೆಲೆ ಇತ್ತೀಚಿಗಷ್ಟೆ ಕಾರ್ನಿ ಲಿಬರಲ್ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದರು. ಇದೀಗ ಕೆನಡಾದ 24ನೇ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.ಇದನ್ನೂ ಓದಿ: ರೈಲು ಹೈಜಾಕ್‌ನಲ್ಲಿ ಸೆರೆಯಾಗಿದ್ದ ಎಲ್ಲಾ 214 ಒತ್ತೆಯಾಳುಗಳ ಸಾಮೂಹಿಕ ಹತ್ಯೆ: ಬಿಎಲ್‌ಎ ಹೇಳಿಕೆ

    ಈ ಕುರಿತು ಮಾತನಾಡಿರುವ ಕಾರ್ನಿ, ತಮ್ಮ ಸರ್ಕಾರ ನಿರ್ಣಾಯಕವಾಗಿ ಕಾರ್ಯನಿರ್ವಹಿಸಲು ಸಿದ್ಧವಾಗಿದ್ದು, ಕೆನಡಿಯನ್ನರ ನಿರೀಕ್ಷೆ ಪೂರ್ಣಗೊಳಿಸಲಿದ್ದೇವೆ. ವೇಗವಾಗಿ ಚಲಿಸುವ, ನಮ್ಮ ಆರ್ಥಿಕತೆಯನ್ನು ಸುರಕ್ಷಿತಗೊಳಿಸುವ ಮತ್ತು ಕೆನಡಾದ ಭವಿಷ್ಯವನ್ನು ರಕ್ಷಿಸುವ ಅನುಭವಿ ಸಚಿವ ಸಂಪುಟ ನಮ್ಮದು ಎಂದಿದ್ದಾರೆ.

    2013ರಲ್ಲಿ ಲಿಬರಲ್ ಪಕ್ಷದ ನಾಯಕರಾಗಿ ಅಧಿಕಾರ ವಹಿಸಿಕೊಂಡಿದ್ದ ಜಸ್ಟಿನ್ ಟ್ರುಡೋ, 2025ರ ಜನವರಿ 6 ರಂದು ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿದ್ದರು.ಇದನ್ನೂ ಓದಿ: ರೈತ ಮುಖಂಡ ರಾಕೇಶ್ ಟಿಕಾಯತ್ ಕಾರು ಅಪಘಾತ – ಸೀಟ್‌ ಬೆಲ್ಟ್‌ ಹಾಕಿದ್ದಕ್ಕೆ ಬಚಾವ್‌

     

  • ಕೆನಡಾ ಪ್ರಧಾನಿ ಹುದ್ದೆಗೆ ಕನ್ನಡಿಗನ ನಾಮಪತ್ರ – ಭಾಷಣದ ಕೊನೆಯಲ್ಲಿ ಕನ್ನಡವೇ ಸತ್ಯ ಕನ್ನಡವೇ ನಿತ್ಯ ಎಂದ ಚಂದ್ರ ಆರ್ಯ

    ಕೆನಡಾ ಪ್ರಧಾನಿ ಹುದ್ದೆಗೆ ಕನ್ನಡಿಗನ ನಾಮಪತ್ರ – ಭಾಷಣದ ಕೊನೆಯಲ್ಲಿ ಕನ್ನಡವೇ ಸತ್ಯ ಕನ್ನಡವೇ ನಿತ್ಯ ಎಂದ ಚಂದ್ರ ಆರ್ಯ

    ಒಟ್ಟಾವಾ: ಕೆನಡಾದ (Canadaa) ಪ್ರಧಾನಿ ಹುದ್ದೆಗೆ ಕರ್ನಾಟಕ ಮೂಲದ ಚಂದ್ರ ಆರ್ಯ ಅಧಿಕೃತವಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಲಿಬರಲ್ ಪಕ್ಷದಿಂದ ಪ್ರಧಾನಿ ಹುದ್ದೆಗೆ ಉಮೇದುವಾರಿಕೆ ಸಲ್ಲಿಸಿದ ಬಳಿಕ ಕನ್ನಡದಲ್ಲಿ (Kannada) ಮಾತನಾಡಿ ಚಂದ್ರ ಆರ್ಯ (Indian-origin MP Chandra Arya) ಗಮನ ಸೆಳೆದಿದ್ದಾರೆ.

    ಸದನವನ್ನು ಉದ್ದೇಶಿಸಿ ಆರ್ಯ ಅವರು ತಮ್ಮ ಪರಂಪರೆಯ ಬಗ್ಗೆ ಅಪಾರ ಹೆಮ್ಮೆಯಿಂದ ಮಾತನಾಡಿದರು. ಕರ್ನಾಟಕದ (Karnataka) ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ದ್ವಾರಲು ಗ್ರಾಮದ ವ್ಯಕ್ತಿಯೊಬ್ಬರು ಕೆನಡಾದಲ್ಲಿ ಸಂಸದರಾಗಿ ಆಯ್ಕೆಯಾಗಿದ್ದು, ಈಗ ಈ ಗೌರವಾನ್ವಿತ ಸಂಸ್ಥೆಯಲ್ಲಿ ಕನ್ನಡದಲ್ಲಿ ಮಾತನಾಡುತ್ತಿರುವುದು ಸುಮಾರು 5 ಕೋಟಿ ಕನ್ನಡಿಗರಿಗೆ ಹೆಮ್ಮೆಯ ಕ್ಷಣವಾಗಿದೆ ಎಂದು ತಿಳಿಸಿದರು.

    ಭಾಷಣದ ಕೊನೆಯಲ್ಲಿ ರಾಷ್ಟ್ರಕವಿ ಕುವೆಂಪು ಅವರ ಹಾಗೂ ನಟ ಡಾ.ರಾಜ್‌ಕುಮಾರ್ ಅವರು ಹಾಡಿದ್ದ ಪ್ರಸಿದ್ಧ ಹಾಡಿನ ಸಾಲನ್ನು ಹೇಳಿದರು. ಎಲ್ಲಾದರೂ ಇರು ಎಂಥಾದರು ಇರು ಎಂದೆಂದಿಗೂ ನೀ ಕನ್ನಡವಾಗಿರು, ಕನ್ನಡವೇ ಸತ್ಯ ಕನ್ನಡವೇ ನಿತ್ಯ ಎಂದು ಹೇಳಿ ತಮ್ಮ ಮಾತಿಗೆ ಪೂರ್ಣ ವಿರಾಮ ಹಾಕಿದರು. ಈ ಹಿಂದೆ ಸಂಸದರಾಗಿ ಆಯ್ಕೆಯಾದ ವೇಳೆಯೂ ಸಂಸತ್‌ನಲ್ಲಿ ಕನ್ನಡದಲ್ಲಿ ಮಾತನಾಡಿ ಗಮನ ಸೆಳೆದಿದ್ದರು.

    ರಾಷ್ಟ್ರವನ್ನು ಪುನರ್ನಿರ್ಮಿಸಲು ಮತ್ತು ಭವಿಷ್ಯದ ಪೀಳಿಗೆಗೆ ಉತ್ತಮ ವಾತಾವರಣ ನಿರ್ಮಿಸಲು ಹೆಚ್ಚು ಪರಿಣಾಮಕಾರಿ ಸರ್ಕಾರವನ್ನು ಮುನ್ನಡೆಸಲು ಕೆನಡಾದ ಮುಂದಿನ ಪ್ರಧಾನಿಯಾಗಲು ನಾನು ಸ್ಪರ್ಧಿಸುತ್ತಿದ್ದೇನೆ ಎಂದು ಅವರು ಎಕ್ಸ್‌ನಲ್ಲಿ ಹೇಳಿಕೊಂಡಿದ್ದಾರೆ.

    ನಮ್ಮ ಮಕ್ಕಳು ಮತ್ತು ಮೊಮ್ಮಕ್ಕಳ ಹಿತದೃಷ್ಟಿಯಿಂದ, ನಾವು ಸಂಪೂರ್ಣವಾಗಿ ಅಗತ್ಯವಾದ ದಿಟ್ಟ ನಿರ್ಧಾರಗಳನ್ನು ತೆಗೆದುಕೊಳ್ಳಬೇಕು. ಲಿಬರಲ್ ಪಕ್ಷದ ಮುಂದಿನ ನಾಯಕರಾಗಿ ಆಯ್ಕೆಯಾದರೆ, ನನ್ನ ಜ್ಞಾನ ಮತ್ತು ಪರಿಣತಿಯ ಮೇಲೆ ಉತ್ತಮ ಆಡಳಿತ ನೀಡುತ್ತೇನೆ ಎಂದು ಅವರು ಪೋಸ್ಟ್‌ನಲ್ಲಿ ಉಲ್ಲೇಖಿಸಿದ್ದಾರೆ.

    ಆರ್ಯ ಅವರು 2015 ರಲ್ಲಿ ಮೊದಲ ಬಾರಿಗೆ ಹೌಸ್ ಆಫ್ ಕಾಮನ್ಸ್‌ಗೆ ಆಯ್ಕೆಯಾದರು ಮತ್ತು 2019 ರಲ್ಲಿ ಮರು ಆಯ್ಕೆಯಾದರು. 2022 ರಲ್ಲಿ ಹೌಸ್ ಆಫ್ ಕಾಮನ್ಸ್‌ನಲ್ಲಿ ಮಾತೃಭಾಷೆ ಕನ್ನಡದಲ್ಲಿ ಮಾತನಾಡುವ ಮೂಲಕ ಗಮನ ಸೆಳೆದರು. ಹಿಂದೂ ಕೆನಡಿಯನ್ನರ ಪರವಾಗಿ ವಾದಿಸುವ ವಕೀಲರಾಗಿ, ಆರ್ಯ ಆಗಾಗ ದೃಢವಾದ ನಿಲುವುಗಳನ್ನು ತೆಗೆದುಕೊಂಡಿದ್ದಾರೆ.

     

    2024 ರಲ್ಲಿ ಸಂಸತ್ತಿನ ಹೊರಗೆ ‘ಓಂ’ ಚಿಹ್ನೆಯನ್ನು ಹೊಂದಿರುವ ಕೇಸರಿ ಧ್ವಜವನ್ನು ಹಾರಿಸಿದ್ದರು. ಇದು ಚರ್ಚೆಗೆ ಗ್ರಾಸವಾಗಿತ್ತು. ಹಿಂದೂ ಸಮುದಾಯ ರಾಜಕೀಯದಲ್ಲಿ ಪಾಲ್ಗೊಳ್ಳುವಂತೆ ಪ್ರೋತ್ಸಾಹಿಸಲು ಅವರು ಈ ಸಂದರ್ಭವನ್ನು ಬಳಸಿಕೊಂಡಿದ್ದರು.

    ತುಮಕೂರು ಮೂಲದ ಆರ್ಯ ಅವರು, ಧಾರವಾಡದಲ್ಲಿರುವ ಕೌಸಾಲಿ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಸ್ಟಡೀಸ್‌ನಿಂದ ಎಂಬಿಎ ಪದವಿ ಪಡೆದಿದ್ದಾರೆ. ಅವರು 20 ವರ್ಷಗಳ ಹಿಂದೆ ಒಟ್ಟಾವಾಕ್ಕೆ ತೆರಳಿದ್ದರು. ರಾಜಕೀಯ ಪ್ರವೇಶಿಸುವ ಮೊದಲು ಎಂಜಿನಿಯರ್, ಹೂಡಿಕೆ ಸಲಹೆಗಾರ ಮತ್ತು ಉದ್ಯಮಿಯಾಗಿ ಕೆಲಸ ಮಾಡಿದ್ದರು.

  • ರಷ್ಯಾಗೆ ತೆರಳಿದ ಪ್ರಧಾನಿ ಮೋದಿ

    ರಷ್ಯಾಗೆ ತೆರಳಿದ ಪ್ರಧಾನಿ ಮೋದಿ

    ಮಾಸ್ಕೋ: ಪ್ರಧಾನಿ ನರೇಂದ್ರ ಮೋದಿ (Narendra Modi) ಇಂದು ರಷ್ಯಾಕ್ಕೆ ತೆರಳಿದ್ದಾರೆ. ಮಾಸ್ಕೋದಲ್ಲಿ ಪ್ರಧಾನಿ ಮೋದಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ (Vladimir Putin) ಅವರನ್ನು ಭೇಟಿಯಾಗಲಿದ್ದಾರೆ.

    ಮೂರು ವರ್ಷಗಳ ನಂತರ ಪ್ರಧಾನಿ ಮೋದಿ ರಷ್ಯಾ ಅಧ್ಯಕ್ಷರನ್ನು ಭೇಟಿಯಾಗಲಿದ್ದಾರೆ. ಉಕ್ರೇನ್ (Ukraine) ಯುದ್ಧ ಆರಂಭವಾದ ನಂತರ ಇವರಿಬ್ಬರ ಮೊದಲ ಭೇಟಿ ಇದಾಗಿದೆ. ಪ್ರಧಾನಿ ಮೋದಿಯವರ ಈ ಭೇಟಿಯ ಮೇಲೆ ಪಾಶ್ಚಿಮಾತ್ಯ ದೇಶಗಳ ಜೊತೆಗೆ ಚೀನಾ (China) ಕೂಡ ಕಣ್ಣಿಟ್ಟಿದೆ.

    ಈ ಮಹತ್ವದ ಭೇಟಿಯಲ್ಲಿ ಪ್ರಧಾನಿ ಮೋದಿ ಅವರು ರಷ್ಯಾದ ಸೇನೆಯಲ್ಲಿ ಭಾರತೀಯರನ್ನು ಸೇರ್ಪಡೆಗೊಳಿಸುವ ಮತ್ತು S-400 ಕ್ಷಿಪಣಿ ವ್ಯವಸ್ಥೆಯ ಎರಡು ಘಟಕಗಳನ್ನು ವಿಳಂಬಗೊಳಿಸುವ ವಿಷಯವನ್ನು ಪ್ರಮುಖವಾಗಿ ಪ್ರಸ್ತಾಪಿಸುವ ಸಾಧ್ಯತೆಗಳಿವೆ. ಇತ್ತೀಚೆಗೆ ಅಸ್ತಾನಾದಲ್ಲಿ ನಡೆದ ಶಾಂಘೈ ಸಹಕಾರ ಸಮ್ಮೇಳನದಲ್ಲಿಯೂ ಭಾರತದ ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರು ಕೆಲವು ಮಹತ್ವದ ವಿಷಯವನ್ನು ಸ್ಪಷ್ಟವಾಗಿ ಮತ್ತು ಬಲವಾಗಿ ಪ್ರಸ್ತಾಪಿಸಿದ್ದರು. ಇದೀಗ ಪ್ರಧಾನಿ ಮೋದಿ ಅವರೇ ಈ ವಿಷಯವನ್ನು ಪುಟಿನ್ ಅವರ ಬಳಿ ಉನ್ನತ ಮಟ್ಟದಲ್ಲಿ ಪ್ರಸ್ತಾಪಿಸಬಹುದು ಎಂದು ಹೇಳಲಾಗುತ್ತಿದೆ.

    ಉದ್ಯೋಗದ ಆಮಿಷ ಒಡ್ಡಿ ಸುಮಾರು 20 ಭಾರತೀಯರನ್ನು ರಷ್ಯಾ ಸೇನೆಗೆ ಸೇರಿಸಿಕೊಳ್ಳಲಾಗಿದೆ. ಅಷ್ಟೇ ಅಲ್ಲ ಉಕ್ರೇನ್‌ನಲ್ಲಿ ನಡೆದ ಹೋರಾಟದಲ್ಲಿ ಇಬ್ಬರು ಭಾರತೀಯರೂ ಸಾವನ್ನಪ್ಪಿದ್ದಾರೆ. ಅನೇಕ ಭಾರತೀಯ ನಾಗರಿಕರು ರಷ್ಯಾದ ಸೇನೆಯಲ್ಲಿ ಸಹಾಯಕ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಭಾರತೀಯ ವಿದೇಶಾಂಗ ಸಚಿವಾಲಯ ಏಪ್ರಿಲ್‌ನಲ್ಲಿ ದೃಢಪಡಿಸಿತ್ತು. ಈ ಪೈಕಿ 10 ಮಂದಿ ಭಾರತಕ್ಕೆ ಮರಳಿದ್ದಾರೆ.

  • ನಾವು ಭಾರತದ ಜೊತೆಗಿದ್ದೇವೆ: ಪಾಕಿಸ್ತಾನ ಉಪ ಪ್ರಧಾನಿ

    ನಾವು ಭಾರತದ ಜೊತೆಗಿದ್ದೇವೆ: ಪಾಕಿಸ್ತಾನ ಉಪ ಪ್ರಧಾನಿ

    ಇಸ್ಲಾಮಾಬಾದ್:‌ ನಾವು ಭಾರತದ ಜೊತೆಗಿದ್ದೇವೆ. ಪಾಕಿಸ್ತಾನ ಯಾವಾಗಲೂ ಉತ್ತಮ ನೆರೆಹೊರೆ ಸಂಬಂಧಗಳನ್ನು ಬಯಸುತ್ತದೆ ಎಂದು ಪಾಕಿಸ್ತಾನದ ಉಪಪ್ರಧಾನಿ ಮತ್ತು ವಿದೇಶಾಂಗ ಸಚಿವ ಇಶಾಕ್ ದಾರ್ (Ishaq Dar) ಹೇಳಿದ್ದಾರೆ.

    ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಇಶಾಕ್ ದಾರ್, ಭಾರತದೊಂದಿಗಿನ ಸಂಬಂಧದ ಬಗ್ಗೆ ತಮ್ಮ ಹಿಂದಿನ ಹೇಳಿಕೆಗಳನ್ನು ಪುನರುಚ್ಚರಿಸಿದರು. ಪಾಕಿಸ್ತಾನವು ಯಾವಾಗಲೂ ಭಾರತದೊಂದಿಗೆ (India) ಉತ್ತಮ ಸಂಬಂಧವನ್ನು ಹೊಂದಲು ಉತ್ಸುಕವಾಗಿದೆ ಎಂದು ಹೇಳಿದರು.

    ಭಾರತದೊಂದಿಗಿನ ನಮ್ಮ ಸಂಬಂಧವು ಐತಿಹಾಸಿಕವಾಗಿ ಕಳಪೆಯಾಗಿದೆ. ಆದರೆ ಪಾಕಿಸ್ತಾನವು ಶಾಶ್ವತ ಹಗೆತನವನ್ನು ಬಯಸುವುದಿಲ್ಲ. ಪರಸ್ಪರ ಗೌರವ, ಸಾರ್ವಭೌಮ ಸಮಾನತೆ ಮತ್ತು ದೀರ್ಘಕಾಲದ ಜಮ್ಮು ಮತ್ತು ಕಾಶ್ಮೀರ ವಿವಾದದ ನ್ಯಾಯಯುತ ಮತ್ತು ಶಾಂತಿಯುತ ಪರಿಹಾರದ ಆಧಾರದ ಮೇಲೆ ನಾವು ಭಾರತದೊಂದಿಗೆ ಉತ್ತಮ ನೆರೆಯ ಸಂಬಂಧಗಳನ್ನು ಬಯಸುತ್ತೇವೆ ಎಂದಿದ್ದಾರೆ.

    ಇದೇ ವೇಳೆ ಎರಡು ಪರಮಾಣು ಸಶಸ್ತ್ರ ನೆರೆಹೊರೆಯವರ ನಡುವಿನ ದ್ವಿಪಕ್ಷೀಯ ಸಂಬಂಧಗಳ ಭವಿಷ್ಯವನ್ನು ಗಂಭೀರವಾಗಿ ಪರಿಗಣಿಸುವಂತೆ ಮೋದಿ ಸರ್ಕಾರಕ್ಕೆ ಕರೆ ನೀಡಿದ್ದಾರೆ. ಇದನ್ನೂ ಓದಿ: ಮದುವೆಯಾಗಿ ಹಣ, ಚಿನ್ನದೊಂದಿಗೆ ಎಸ್ಕೇಪ್‌ ಆಗ್ತಿದ್ದ ಮಹಿಳೆಗೆ ಹೆಚ್‌ಐವಿ – ಆಕೆ ದೈಹಿಕ ಸಂಪರ್ಕಕ್ಕೆ ಬಂದ ಪುರುಷರಿಗಾಗಿ ಹುಡುಕಾಟ

    ಇತ್ತೀಚೆಗಷ್ಟೇ ನಡೆದ ಲೋಕಸಭಾ ಚುನಾವಣೆಯಲ್ಲಿ ಎನ್‌ಡಿಎ ಸಂಪೂರ್ಣ ಬಹುಮತ ಪಡೆಯುವ ಮೂಲಕ ನರೇಂದ್ರ ಮೋದಿ ಅವರು ಸತತ ಮೂರನೇ ಬಾರಿಗೆ ಭಾರತದ ಪ್ರಧಾನಿಯಾಗಿದ್ದಾರೆ. ಈ ಹಿನ್ನೆಲೆ ಮೋದಿಯವರಿಗೆ ವಿಶ್ವಾದ್ಯಂತ ನಾಯಕರಿಂದ ಅಭಿನಂದನೆಯ ಮಹಾಪೂರವೇ ಹರಿದು ಬಂದಿತ್ತು. ಅಲ್ಲದೆ ಹಲವು ದೇಶಗಳು ಕೂಡ ಭಾರತದೊಂದಿಗೆ ಉತ್ತಮ ಬಾಂಧವ್ಯಕ್ಕೆ ಒತ್ತು ನೀಡುತ್ತಿವೆ. ಈ ನಡುವೆ ಉಭಯ ದೇಶಗಳ ನಡುವಿನ ಸಂಬಂಧಕ್ಕೆ ಸಂಬಂಧಿಸಿದಂತೆ ನೆರೆಯ ರಾಷ್ಟ್ರ ಪಾಕಿಸ್ತಾನ ಈ ಮಹತ್ವದ ಹೇಳಿಕೆಯೊಂದನ್ನು ನೀಡಿದೆ.

  • ತುರ್ತು ಪರಿಸ್ಥಿತಿ ನೆನಪಿಸಿದ ಪ್ರಧಾನಿ ಮೋದಿಗೆ ಖರ್ಗೆ ತಿರುಗೇಟು

    ತುರ್ತು ಪರಿಸ್ಥಿತಿ ನೆನಪಿಸಿದ ಪ್ರಧಾನಿ ಮೋದಿಗೆ ಖರ್ಗೆ ತಿರುಗೇಟು

    ನವದೆಹಲಿ: ಪಕ್ಷಗಳನ್ನು ಒಡೆಯುವುದು, ಚುನಾಯಿತ ಸರ್ಕಾರಗಳನ್ನು ಹಿಂಬಾಗಿಲಿನಿಂದ ಬೀಳಿಸುವುದು, ಇಡಿ, ಸಿಬಿಐ, ಐಟಿಯನ್ನು 95% ಪ್ರತಿಪಕ್ಷಗಳ ನಾಯಕರ ಮೇಲೆ ಪ್ರಯೋಗಿಸುವುದು, ಮುಖ್ಯಮಂತ್ರಿಗಳನ್ನೂ ಜೈಲಿಗೆ ಹಾಕುವುದು, ಚುನಾವಣೆಗೆ ಮುನ್ನ ಅಧಿಕಾರವನ್ನು ಬಳಸಿ ಗುಣಮಟ್ಟದ ಸ್ಪರ್ಧೆ ಹಾಳು ಮಾಡುವುದು ಅಘೋಷಿತ ತುರ್ತು ಪರಿಸ್ಥಿತಿಯಲ್ಲವೇ? ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ (Mallikarjun Kharge) ಪ್ರಶ್ನಿಸಿದ್ದಾರೆ.

    ತುರ್ತು ಪರಿಸ್ಥಿತಿಗೆ 50 ವರ್ಷ ಪೂರ್ಣವಾದ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ (Narendra Modi) ಕಾಂಗ್ರೆಸ್ (Congress) ವಿರುದ್ಧ ವಾಗ್ದಾಳಿ ನಡೆಸಿದ್ದು, ಇದಕ್ಕೆ ಎಕ್ಸ್ ಪೊಸ್ಟ್ ನಲ್ಲಿ ತಿರುಗೇಟು ನೀಡಿರುವ ಅವರು, ಕಳೆದ 10 ವರ್ಷಗಳಲ್ಲಿ140 ಕೋಟಿ ಭಾರತೀಯರನ್ನು ಅನುಭವಿಸುವಂತೆ ಮಾಡಿದ “ಅಘೋಷಿತ ತುರ್ತು ಪರಿಸ್ಥಿತಿ” ಪ್ರಜಾಪ್ರಭುತ್ವ ಮತ್ತು ಸಂವಿಧಾನಕ್ಕೆ ಆಳವಾದ ಹೊಡೆತವನ್ನು ನೀಡಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ತುರ್ತು ಪರಿಸ್ಥಿತಿಗೆ 50 ವರ್ಷ – ಕರಾಳ ದಿನಗಳನ್ನು ನೆನೆದ ಪ್ರಧಾನಿ

    ನರೇಂದ್ರ ಮೋದಿ ಅವರು ಒಮ್ಮತ ಮತ್ತು ಸಹಕಾರದ ಬಗ್ಗೆ ಮಾತನಾಡುತ್ತಾರೆ. ಆದರೆ ಅವರ ಕಾರ್ಯಗಳು ಇದಕ್ಕೆ ವಿರುದ್ಧವಾಗಿವೆ. 146 ವಿರೋಧ ಪಕ್ಷದ ಸಂಸದರನ್ನು ಸಂಸತ್ತಿನಿಂದ ಅಮಾನತುಗೊಳಿಸಿ, ಭಾರತೀಯ ನಾಗರಿಕ ಸಂರಕ್ಷಣಾ ಸಂಹಿತೆ, 2023, ಭಾರತೀಯ ನ್ಯಾಯ ಸಂಹಿತೆ, 2023 ಮತ್ತು ಭಾರತೀಯ ಸಾಕ್ಷ್ಯ ಕಾಯಿದೆ, 2023 ಅದನ್ನು ಅಂಗೀಕರಿಸಿದಾಗ ಒಮ್ಮತದ ಪದ ಎಲ್ಲಿತ್ತು? ಛತ್ರಪತಿ ಶಿವಾಜಿ ಮಹಾರಾಜ್, ಮಹಾತ್ಮ ಗಾಂಧೀಜಿ ಮತ್ತು ಬಾಬಾಸಾಹೇಬ್ ಡಾ. ಅಂಬೇಡ್ಕರ್ ಅವರಂತಹ ಮಹಾನ್ ವ್ಯಕ್ತಿಗಳ ಪ್ರತಿಮೆಗಳನ್ನು ಪ್ರತಿಪಕ್ಷಗಳು ಕೇಳದೆ ಸಂಸತ್ತಿನ ಅಂಗಳದಿಂದ ಮೂಲೆಗೆ ಸ್ಥಳಾಂತರಿಸಿದಾಗ ಒಮ್ಮತದ ಪದ ಎಲ್ಲಿತ್ತು ಎಂದು ಪ್ರಶ್ನಿಸಿದ್ದಾರೆ.

    ನಮ್ಮ 15 ಕೋಟಿ ರೈತ ಕುಟುಂಬಗಳ ಮೇಲೆ ಮೂರು ಕರಾಳ ಕಾನೂನನ್ನು ಹೇರಿ ತಿಂಗಳಾನುಗಟ್ಟಲೆ ಅವರದ್ದೇ ನಾಡಿನಲ್ಲಿ ಬೀದಿಗಿಳಿದು ಹಿಂಸಿಸಿದಾಗ ಒಮ್ಮತದ ಮಾತು ಎಲ್ಲಿತ್ತು? ನೋಟು ಅಮಾನ್ಯೀಕರಣವಾಗಲಿ, ತರಾತುರಿಯಲ್ಲಿ ಜಾರಿಯಾದ ಲಾಕ್‌ಡೌನ್ ಆಗಲಿ ಅಥವಾ ಎಲೆಕ್ಟೋರಲ್ ಬಾಂಡ್‌ಗಳ ಕಾನೂನು ಆಗಿರಲಿ, ಮೋದಿ ಸರ್ಕಾರವು ಒಮ್ಮತ/ಸಹಕಾರವನ್ನು ಬಳಸದ ನೂರಾರು ಉದಾಹರಣೆಗಳಿವೆ.

    17 ನೇ ಲೋಕಸಭೆಯಲ್ಲಿ ಇತಿಹಾಸದಲ್ಲಿ ಕೇವಲ 16% ಮಸೂದೆಗಳು ಮಾತ್ರ ಸಂಸದೀಯ ಸ್ಥಾಯಿ ಸಮಿತಿಯ ಮುಂದೆ ಹೋದವು. ಮತ್ತು ಲೋಕಸಭೆಯಲ್ಲಿ 35% ಮಸೂದೆಗಳು ಒಂದು ಗಂಟೆಯೊಳಗೆ ಅಂಗೀಕಾರಗೊಂಡವು. ರಾಜ್ಯಸಭೆಯಲ್ಲೂ ಈ ಪ್ರಮಾಣ 34% ರಷ್ಟಿದೆ. ಪ್ರಜಾಪ್ರಭುತ್ವ ಮತ್ತು ಸಂವಿಧಾನದ ದುಸ್ಥಿತಿಗೆ ಬಿಜೆಪಿ ಕಾರಣವಾಗಿದೆ. ಕಾಂಗ್ರೆಸ್ ಯಾವಾಗಲೂ ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ಬೆಂಬಲಿಸುತ್ತದೆ ಎಂದು ಸಮರ್ಥಿಸಿಕೊಂಡರು.

  • ಲೋಕಸಭಾ ಚುನಾವಣೆ: 80 ಸಂದರ್ಶನ, 200ಕ್ಕೂ ಹೆಚ್ಚು ರ್‍ಯಾಲಿಗಳಲ್ಲಿ ಮೋದಿ ಭಾಗಿ

    ಲೋಕಸಭಾ ಚುನಾವಣೆ: 80 ಸಂದರ್ಶನ, 200ಕ್ಕೂ ಹೆಚ್ಚು ರ್‍ಯಾಲಿಗಳಲ್ಲಿ ಮೋದಿ ಭಾಗಿ

    ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಇಂದು (ಗುರುವಾರ) ಪಂಜಾಬ್‌ನ ಹೋಶಿಯಾರ್‌ಪುರದಲ್ಲಿ ಚುನಾವಣಾ ಭಾಷಣದೊಂದಿಗೆ ಲೋಕಸಭಾ ಚುನಾವಣೆಯ ಪ್ರಚಾರವನ್ನು ಕೊನೆಗೊಳಿಸಿದರು.

    ಪ್ರಧಾನಿಯವರು ಈಗ ತಮಿಳುನಾಡಿನ ಕನ್ಯಾಕುಮಾರಿಯಲ್ಲಿರುವ ವಿವೇಕಾನಂದ ರಾಕ್ ಸ್ಮಾರಕದಲ್ಲಿ (Vivekananda Rock Memorial) ಇಂದಿನಿಂದ ಜೂನ್ 1 ರವರೆಗೆ ಅಂದರೆ ಎರಡು ದಿನಗಳ ಕಾಲ (45 ಗಂಟೆಗಳ) ಧ್ಯಾನ ಮಾಡಲಿದ್ದಾರೆ.

    ಮಾರ್ಚ್ 16 ರಂದು ಚುನಾವಣಾ ಆಯೋಗವು (EC) ಚುನಾವಣಾ ವೇಳಾಪಟ್ಟಿಯನ್ನು ಘೋಷಿಸಿದಾಗಿನಿಂದ ಇಂದಿನವರೆಗೆ ಪ್ರಧಾನಿಯವರು ಒಟ್ಟು 206 ಸಾರ್ವಜನಿಕ ಸಭೆಗಳು ಮತ್ತು ರೋಡ್ ಶೋಗಳನ್ನು ನಡೆಸಿದ್ದಾರೆ. ಅಲ್ಲದೇ ಒಟ್ಟು 80 ಸಂದರ್ಶನಗಳನ್ನು ನೀಡಿದ್ದಾರೆ. ಮತದಾನ ಆರಂಭವಾದಾಗಿನಿಂದ ಸರಾಸರಿ ದಿನಕ್ಕೆ ಒಂದಕ್ಕಿಂತ ಹೆಚ್ಚು ಸಂದರ್ಶನಗಳನ್ನು ನೀಡಿದ್ದಾರೆ. ಇದನ್ನೂ ಓದಿ: ಕನ್ಯಾಕುಮಾರಿಯಲ್ಲಿ ಪ್ರಧಾನಿ ಮೋದಿ ಧ್ಯಾನ; 33 ವರ್ಷಗಳ ಹಿಂದಿನ ಫೋಟೊ ವೈರಲ್‌

    2019 ರ ಚುನಾವಣೆಯ ಸಂದರ್ಭದಲ್ಲಿ ಪ್ರಧಾನಿಯವರು ಸುಮಾರು 145 ರ್‍ಯಾಲಿಗಳಲ್ಲಿ ಭಾಗವಹಿಸಿದ್ದರು. ಹೀಗಾಗಿ ಕಳೆದ ಬಾರಿಗಿಂತ ಈ ಬಾರಿ ಅವರು ಹೆಚ್ಚು ಚುನಾವಣಾ ಪ್ರಚಾರ ಹಾಗೂ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಐದು ವರ್ಷಗಳ ಹಿಂದೆ ನಡೆದ ಚುನಾವಣೆಯಲ್ಲಿ ಪ್ರಚಾರದ ಅವಧಿ 68 ದಿನಗಳಿದ್ದರೆ, ಈ ಬಾರಿ 76 ದಿನಗಳು ಇದ್ದವು.

    ಚುನಾವಣೆಯಲ್ಲಿ ತಮಿಳುನಾಡು, ಕೇರಳ ಮತ್ತು ಆಂಧ್ರಪ್ರದೇಶದಲ್ಲಿ ಬಿಜೆಪಿ ತನ್ನ ಸ್ಥಾನವನ್ನು ಬಲಪಡಿಸಲು ಪ್ರಯತ್ನಿಸುತ್ತಿದೆ. ಈ ಮೂರು ರಾಜ್ಯಗಳಲ್ಲಿ 2019 ರ ಚುನಾವಣೆಯಲ್ಲಿ ಬಿಜೆಪಿ ಒಂದೇ ಒಂದು ಸ್ಥಾನವನ್ನು ಗೆಲ್ಲಲು ಸಾಧ್ಯವಾಗಲಿಲ್ಲ. ಈ ಬಾರಿಯ ಚುನಾವಣೆಯಲ್ಲಿ ಕರ್ನಾಟಕದಲ್ಲಿ ತನ್ನ ಬಲವನ್ನು ಉಳಿಸಿಕೊಳ್ಳಲು ಮತ್ತು ತೆಲಂಗಾಣದಲ್ಲಿ ತನ್ನ ಬಲವನ್ನು ಹೆಚ್ಚಿಸಿಕೊಳ್ಳಲು ಪಕ್ಷವು ಪ್ರಯತ್ನಿಸುತ್ತಿದೆ. 2019 ರಲ್ಲಿ ಕರ್ನಾಟಕದಲ್ಲಿ 28 ಸ್ಥಾನಗಳಲ್ಲಿ 25 ಸ್ಥಾನಗಳನ್ನು ಬಿಜೆಪಿ ಗೆದ್ದುಕೊಂಡಿದ್ದರೆ, ತೆಲಂಗಾಣದಲ್ಲಿ ನಾಲ್ಕು ಸ್ಥಾನಗಳಲ್ಲಿ ಗೆಲುವು ಕಂಡಿತ್ತು.

  • ಮುಂದಿನ 25 ವರ್ಷಕ್ಕೆ ತಯಾರಿಯ ಬಗ್ಗೆ ಮೋದಿ ಹೇಳಿದ್ದೇನು?

    ಮುಂದಿನ 25 ವರ್ಷಕ್ಕೆ ತಯಾರಿಯ ಬಗ್ಗೆ ಮೋದಿ ಹೇಳಿದ್ದೇನು?

    ನವದೆಹಲಿ: 2047 ಗಮನದಲ್ಲಿಟ್ಟುಕೊಂಡು ಇನ್ನಷ್ಟು ಕೆಲಸ ಮಾಡುವುದು ಬಾಕಿ ಇದೆ. 2024 ಚುನಾವಣೆ ಬೇರೆ, 2047 ಬೇರೆ. 2047 ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕಿ 100 ವರ್ಷವಾಗಲಿದೆ. ಈ ಅವಧಿಗೆ ಮಾಡಬೇಕಾದ ಕೆಲಸಗಳ ಗುರಿ ಇರಬೇಕು ಎಂದು ಹೇಳುತ್ತಾ ಮುಂದಿನ 25 ವರ್ಷಕ್ಕೆ ತಯಾರಿಯ ಬಗ್ಗೆ ಪ್ರಧಾನಿ ಮೋದಿ (Narendra Modi) ಮಾತನಾಡಿದರು.

    ಖಾಸಗಿ ಸುದ್ದಿಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಹೆಚ್ಚಿನ ಸರ್ಕಾರಗಳು ಎಲ್ಲವನ್ನು ಮಾಡಿದೆ ಎಂದುಕೊಳ್ಳುತ್ತವೆ. ಆದರೆ ನಾನು ಹಾಗೇ ಅಂದುಕೊಳ್ಳುವುದಿಲ್ಲ. ನಾನು ಮಾಡುವುದು ಇನ್ನು ಬಾಕಿ ಇದೆ. ಬಹಳಷ್ಟು ಕುಟುಂಬಗಳ ಕನಸು ನನಸು ಮಾಡಬೇಕಿದೆ. ನಾನು ಸಿಎಂ ಆಗಿದ್ದಾಗ ಚುನಾವಣೆಯಿಂದ ಸಮಸ್ಯೆಯಾಗುತ್ತಿತ್ತು. ಹಿರಿಯ ಅಧಿಕಾರಿಗಳು ಬೇರೆ ರಾಜ್ಯಗಳಿಗೂ ಚುನಾವಣಾ ಕರ್ತವ್ಯಕ್ಕೆ ಹೋಗುತ್ತಿದ್ದರು. ಇದರಿಂದ ನನ್ನ ಕೆಲಸಕ್ಕೆ ತೊಂದರೆಯಾಗುತ್ತಿತ್ತು. ಹೀಗಾಗಿ ನಾನು ಚುನಾವಣೆಗೂ ಮುನ್ನ ನೂರು ದಿನಗಳ ತಯಾರಿ ಮಾಡುತ್ತಿದ್ದೆ ಎಂದು ಹೇಳಿದರು.

    ಈಗ ಮುಂದಿನ 25 ವರ್ಷಕ್ಕೆ ನಾನು ತಯಾರಿ ಮಾಡಿಕೊಂಡಿದ್ದೇನೆ. ವಲಯವಾರು ವಿಶೇಷ ತಂಡಗಳನ್ನು ರಚಿಸಿದ್ದೇನೆ. ಜನರಿಂದ ಸಲಹೆ ಪಡೆದುಕೊಂಡಿದ್ದೇನೆ. 15-20 ಲಕ್ಷ ಜನರು ಸಲಹೆ ನೀಡಿದ್ದಾರೆ, ಇದನ್ನು ಡಾಕ್ಯುಮೆಂಟ್ ಮಾಡಿದ್ದೇನೆ. ಚುನಾವಣೆ ಬಳಿಕ ಕೆಲಸ ಶುರು ಮಾಡಲಿದ್ದೇನೆ. ಎಲ್ಲ ರಾಜ್ಯಗಳಲ್ಲಿ ಆಗಬೇಕಿರುವ ಕೆಲಸ ಮಾಡಬೇಕು. ಬಿಜೆಪಿ ಪ್ರಣಾಳಿಕೆ (BJP Manifesto), 25 ವರ್ಷದ ಮಿಷನ್. ಮುಂದಿನ ಐದು ವರ್ಷದ ಕೆಲಸಗಳನ್ನು ವಿಭಾಗಿಸುತ್ತೇನೆ ಎಂದರು.

    ನಾನು ದೊಡ್ಡ ಯೋಜನೆಗಳನ್ನು ಹೊಂದಿದ್ದೇನೆ. ಯಾರಿಗೂ ಹೆದರುವ ಅಗತ್ಯ ಇಲ್ಲ. ಯಾರನ್ನೂ ಹೆದರಿಸಲು ಅಥವಾ ಯಾರನ್ನೂ ಕಡಿಮೆ ಮಾಡಲು ನಾನು ನಿರ್ಧಾರ ತೆಗೆದುಕೊಳ್ಳುವುದಿಲ್ಲ. ಆ ನಿರ್ಧಾರಗಳು ದೇಶದ ಸವಾರ್ಂಗೀಣ ಅಭಿವೃದ್ಧಿಗಾಗಿ ಮಾಡಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ರಾಮಲಲ್ಲಾನ ಪ್ರಾಣಪ್ರತಿಷ್ಠಾಪನೆಗೂ ಮುನ್ನ ಕೈಗೊಂಡಿದ್ದ 11 ದಿನಗಳ ವ್ರತದ ಟೀಕೆಗೆ ಮೋದಿ ಉತ್ತರ

    ಚುನಾವಣೆಯನ್ನು ಲಘುವಾಗಿ ಸ್ವೀಕರಿಸಬಾರದು. ಇದು ಪ್ರಜಾಪ್ರಭುತ್ವ ಉತ್ಸವ. ಚುನಾವಣೆಯಲ್ಲಿ ನಾನು ಮಾತ್ರ ಅಲ್ಲ ಪ್ರತಿಯೊಬ್ಬ ಮತದಾರ, ಬೂತ್ ಕಾರ್ಯಕರ್ತ, ಅಭ್ಯರ್ಥಿಯೂ ಮುಖ್ಯ. ಒಬ್ಬರು ಇಲ್ಲದಿದ್ದರೂ ಚುನಾವಣೆ ನಡೆಯಲ್ಲ ಎಂದು ಮೋದಿ ಹೇಳಿದರು.

    ಕಳೆದ ಬಾರಿ ಅಧಿಕಾರ ಬಂದ ನೂರು ದಿನದಲ್ಲಿ 370 ರದ್ದು ಮಾಡಿತು. ತ್ರಿವಳಿ ತಲಾಕ್ ರದ್ದು ಮಾಡಲಾಯಿತು. ಬ್ಯಾಂಕ್ ಗಳ ಮರ್ಜ್ ಮಾಡಲಾಯಿತು. ಒಂದು ರಾಷ್ಟ್ರ ಒಂದು ಚುನಾವಣೆ ನಮ್ಮ ಬದ್ಧತೆ. ದೇಶದಲ್ಲಿ ಇದರ ಪರವಾಗಿ ಅನೇಕ ಜನರು ಮುಂದೆ ಬಂದಿದ್ದಾರೆ. ಅನೇಕ ಜನರು ತಮ್ಮ ಸಲಹೆಗಳನ್ನು ಸಮಿತಿಗೆ ನೀಡಿದ್ದಾರೆ. ಈ ವರದಿಯನ್ನು ಕಾರ್ಯಗತಗೊಳಿಸಲು ಸಮರ್ಥರಾದರೆ ದೇಶಕ್ಕೆ ಸಾಕಷ್ಟು ಪ್ರಯೋಜನವಾಗಲಿದೆ ಎಂದರು.

  • ಪ್ರಧಾನಿಯಾಗಲು ದೀದಿ ಎಲ್ಲಾ ಅರ್ಹತೆ ಹೊಂದಿದ್ದಾರೆ: ಟಿಎಂಸಿ ಸಂಸದ

    ಪ್ರಧಾನಿಯಾಗಲು ದೀದಿ ಎಲ್ಲಾ ಅರ್ಹತೆ ಹೊಂದಿದ್ದಾರೆ: ಟಿಎಂಸಿ ಸಂಸದ

    ಕೋಲ್ಕತ್ತಾ: ಮಮತಾ ಬ್ಯಾನರ್ಜಿಯವರು (Mamta Banerjee) ಪ್ರಧಾನಿಯಾಗುವ ಎಲ್ಲಾ ಅರ್ಹತೆಯನ್ನು ಹೊಂದಿದ್ದಾರೆ ಎಂದು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಸೌಗತ ರಾಯ್ ಹೇಳಿದ್ದಾರೆ.

    ಜೂನ್ 4 ರಂದು ಜನಾದೇಶ ಸಿಗಲಿದೆ. ಮಮತಾ ಅವರು 30ಕ್ಕೂ ಹೆಚ್ಚು ಸಂಸದರನ್ನು ಹೊಂದಿರುತ್ತಾರೆ. ಅವರು ಪ್ರಧಾನಿಯಾಗುವ ಎಲ್ಲಾ ಅರ್ಹತೆ ಹೊಂದಿದ್ದಾರೆ. ಇದು 3 ಅವಧಿಗೆ ಮುಖ್ಯಮಂತ್ರಿಯಾಗಿ ಸಾಬೀತಾಗಿದೆ ಎಂದು ಸೌಗತ ರಾಯ್ (Saugata Roy) ಹೇಳಿದರು. ಇದನ್ನೂ ಓದಿ: ಯುದ್ಧಕ್ಕೆ ಸಿದ್ಧರಾಗುವ ಸಮಯ ಬಂದಿದೆ: ಕಿಮ್ ಜಾಂಗ್ ಉನ್

    76 ವರ್ಷದ ಸೌಗತ ರಾಯ್ ಅವರು ಟಿಎಂಸಿಯಿಂದ ಮಾತ್ರವಲ್ಲದೆ ಬಂಗಾಳದಿಂದಲೂ ಅತ್ಯಂತ ಹಳೆಯ ಅಭ್ಯರ್ಥಿ. ಮಾಜಿ ಕೇಂದ್ರ ಸಚಿವರಾಗಿರುವ ಅವರು ಲೋಕಸಭೆಗೆ 4ನೇ ಬಾರಿ ಸ್ಪರ್ಧೆ ಮಾಡಿದ್ದಾರೆ. ಇದು ನನ್ನ 4 ನೇ ಬಾರಿಯ ಸ್ಪರ್ಧೆಯಾಗಿದೆ. ನಾನು ಮೊದಲ ಬಾರಿಗೆ 1977 ರಲ್ಲಿ ಸಂಸದನಾದಾಗ, ಸ್ಟಾರ್ ಐಕಾನ್‌ಗಳಾದ ಚರಣ್ ಸಿಂಗ್, ಮೊರಾರ್ಜಿ ದೇಸಾಯಿಯಂತಹ ದಿಗ್ಗಜರು ಇದ್ದರು. ಈಗ ನನ್ನನ್ನು ಗೂಗಲ್ ಅಂಕಲ್ ಎಂದು ಕರೆಯುತ್ತಾರೆ. ಯುವ ಸಂಸದರು ಏನಾದರೂ ತಿಳಿದುಕೊಳ್ಳಬೇಕೆಂದರೆ ನನ್ನ ಬಳಿ ಬರುತ್ತಾರೆ ಎಂದು ಹೇಳಿದರು.

    ಬಂಗಾಳದಲ್ಲಿ ಬಿಜೆಪಿ ಗೆಲ್ಲುವ ಬಗ್ಗೆ ಅಮಿತ್ ಶಾ (Amitshah) ಅವರನ್ನು ಗುರಿಯಾಗಿಸಿ ಸೌಗತ ರಾಯ್, ಬಿಜೆಪಿಗೆ ಅಭ್ಯರ್ಥಿಗಳು ಸಿಗಲಿಲ್ಲ, ಹೀಗಾಗಿ ಅವರು ಎಸ್‌ಎಸ್ ಅಹ್ಲುವಾಲಿಯಾ ಅವರನ್ನು ಕಣಕ್ಕಿಳಿಸಿದ್ದಾರೆ ಎಂದು ವಾಗ್ದಾಳಿ ನಡೆಸಿದರು.