Tag: ಪ್ರಭಾಸ್

  • ಯಶ್ ಜೊತೆಗಿನ ಸ್ನೇಹ, ಜೀವನ ಪೂರ್ತಿ ಮುಂದುವರೆಯಲಿದೆ: ಪ್ರಶಾಂತ್ ನೀಲ್

    ಯಶ್ ಜೊತೆಗಿನ ಸ್ನೇಹ, ಜೀವನ ಪೂರ್ತಿ ಮುಂದುವರೆಯಲಿದೆ: ಪ್ರಶಾಂತ್ ನೀಲ್

    ಪ್ರಭಾಸ್-ಪ್ರಶಾಂತ್ ನೀಲ್ (Prashanth Neel) ಕಾಂಬಿನೇಷನ್ ಸಿನಿಮಾ ‘ಸಲಾರ್’ (Salaar) ರಿಲೀಸ್‌ಗೆ ಕೌಂಟ್‌ಡೌನ್ ಶುರುವಾಗಿದೆ. ಸಲಾರ್ ಸಿನಿಮಾ ಪ್ರಚಾರ ಕೂಡ ಭರದಿಂದ ಸಾಗುತ್ತಿದೆ. ಹೀಗಿರುವಾಗ ಸಂದರ್ಶನವೊಂದರಲ್ಲಿ ಪ್ರಶಾಂತ್ ನೀಲ್, ಯಶ್ (Yash) ಜೊತೆಗಿನ ಒಡನಾಟದ ಬಗ್ಗೆ ಮಾತನಾಡಿದ್ದಾರೆ.

    ಇತ್ತೀಚೆಗೆ ಯಶ್‌ ಜೊತೆ ‘ಕೆಜಿಎಫ್ 3’ ಸಿನಿಮಾ ನಿರ್ದೇಶನ ಮಾಡುವ ಬಗ್ಗೆ ಪ್ರಶಾಂತ್ ನೀಲ್ ಅನುಮಾನ ವ್ಯಕ್ತಪಡಿಸಿದ್ದರು. ಆಗಲೇ ಯಶ್ ಜೊತೆ ಪ್ರಶಾಂತ್ ಬಾಂಧವ್ಯ ಸರಿಯಿಲ್ಲ ಎಂದು ಅಂತೆ ಕಂತೆ ಸುದ್ದಿಗಳು ಸೃಷ್ಟಿಯಾಗಿತ್ತು. ಇದೀಗ ಯಶ್ ಜೊತೆಗಿನ ಒಡನಾಟದ ಬಗ್ಗೆ ಪ್ರಶಾಂತ್ ನೀಲ್ ಮಾತನಾಡುವ ಮೂಲಕ ಗಾಸಿಪ್‌ಗೆ ತೆರೆ ಎಳೆದಿದ್ದಾರೆ. ಇದನ್ನೂ ಓದಿ:ದುಡುಕಿದ ‘ಚಾರ್ಲಿ’ ನಟಿ- ಮತ್ತೆ ಸ್ಪರ್ಧಿಗಳ ಕೆಂಗಣ್ಣಿಗೆ ಸಂಗೀತಾ ಗುರಿ

    ಯಶ್ ಕುರಿತು ‘ಸಲಾರ್’ (Salaar) ಡೈರೆಕ್ಟರ್ ಪ್ರತಿಕ್ರಿಯಿಸಿದ್ದಾರೆ. ಇಬ್ಬರ ನಡುವೆ ಒಳ್ಳೆಯ ಬಾಂಧವ್ಯ ಇಲ್ಲದಿದ್ದರೆ ತೆರೆಮೇಲೆ ಒಳ್ಳೆಯ ಸಿನಿಮಾ ನೋಡಲು ಸಾಧ್ಯವಿಲ್ಲ. ಇಬ್ಬರ ಕೆಮಿಸ್ಟ್ರಿ ತೆರೆಮೇಲೆ ಮಿಸ್ ಆಗುತ್ತದೆ. ನನ್ನ ಹಾಗೂ ಯಶ್ ಸ್ನೇಹ ಜೀವನ ಪೂರ್ತಿ ಮುಂದುವರೆಯಲಿದೆ ಎಂದು ತಿಳಿಸಿದ್ದಾರೆ.

    ಯಶ್ (Yash) ಜೊತೆ ಎರಡು ಸಿನಿಮಾ ಮಾಡಿದ್ದೀರಿ. ನಟ ಪ್ರಭಾಸ್ ಜೊತೆ ಈ ‘ಸಲಾರ್’ ಚಿತ್ರದಲ್ಲಿ ಕೆಲಸ ಮಾಡಿದ್ದೀರಿ. ಇಬ್ಬರ ನಡುವಿನ ವ್ಯತ್ಯಾಸ ಏನು ಎಂದು ಪ್ರಶಾಂತ್ ನೀಲ್‌ಗೆ ಸಂದರ್ಶನದಲ್ಲಿ ಕೇಳಲಾಗಿದೆ. ಇಬ್ಬರ ನಡುವೆ ಸಾಕಷ್ಟು ಸಾಮ್ಯತೆಯಿದೆ. ಇಬ್ಬರಿಗೂ ತಮ್ಮನ್ನ ಪ್ರೀತಿಸುವ ಫ್ಯಾನ್ಸ್ ವಿಚಾರದಲ್ಲಿ ಬಹಳ ಜವಾಬ್ದಾರಿಯಿದೆ. ಇಬ್ಬರಿಗೂ ಉತ್ತಮ ಸಿನಿಮಾ ಮಾಡಬೇಕು ಎನ್ನುವ ಹಸಿವಿದೆ. ನಿರ್ದೇಶಕರು ಯಾರು ಎನ್ನುವುದನ್ನು ನೋಡದೇ ಒಳ್ಳೆಯ ಸಿನಿಮಾವನ್ನು ಪ್ರೇಕ್ಷಕರಿಗೆ ನೀಡಲು ಬಯಸುತ್ತಾರೆ. ಅವರ ವೃತ್ತಿಪರತೆ ಹಾಗೂ ಬದ್ಧತೆ ಸಿನಿಮಾ ನಿರ್ಮಾಣದ ಪ್ರತಿ ಹಂತದಲ್ಲೂ ಗೊತ್ತಾಗುತ್ತದೆ ಎಂದಿದ್ದಾರೆ.

    ಅವರಿಬ್ಬರ ಸಿನಿಮಾಗಳು ಅವರ ಸ್ಟಾರ್‌ಡಮ್‌ನಿಂದಲೇ ಮಾರಾಟವಾಗುತ್ತವೆ. ಪ್ರೇಕ್ಷಕರು ನಮ್ಮ ಕೆಲಸವನ್ನು ಹೇಗೆ ಸ್ವೀಕರಿಸುತ್ತಾರೆ ಎನ್ನುವ ಬಗ್ಗೆ ಹೆಚ್ಚಿನ ಜವಾಬ್ದಾರಿ ವಹಿಸುತ್ತಾರೆ. ಕೆಲಸಕ್ಕೆ ಇಬ್ಬರೂ ಕೆಲಸಕ್ಕೆ ನೀಡುವ ಮೌಲ್ಯದಲ್ಲಿ ಯಾವುದೇ ವ್ಯತ್ಯಾಸವಿಲ್ಲ ಎಂದು ಪ್ರಶಾಂತ್ ನೀಲ್ ಹೇಳಿದ್ದಾರೆ.

    ‘ಸಲಾರ್’ ಬಳಿಕ ಪ್ರಶಾಂತ್ ನೀಲ್ ಮತ್ತೊಂದು ಪ್ಯಾನ್ ಇಂಡಿಯಾ ಚಿತ್ರಕ್ಕೆ ಕೈ ಹಾಕುತ್ತಿದ್ದಾರೆ. ಜ್ಯೂ.ಎನ್‌ಟಿಆರ್ ನಟನೆಯ 31ನೇ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಲಿದ್ದಾರೆ. ಮುಂದಿನ ವರ್ಷವೇ ಸಿನಿಮಾ ಶುರುವಾಗಲಿದೆ. ಬಳಿಕ ‘ಸಲಾರ್’ ಸೀಕ್ವೆಲ್ ಕೆಲಸ ಕೂಡ ಇದೆ. ರಾಮ್‌ಚರಣ್ ಜೊತೆಗೂ ಸಿನಿಮಾ ಮಾಡುವ ಬಗ್ಗೆ ಮಾತುಕತೆ ನಡೆದಿದೆ. ರೋರಿಂಗ್ ಸ್ಟಾರ್ ಶ್ರೀಮುರಳಿ ನಟನೆಯ 25ನೇ ಚಿತ್ರಕ್ಕೂ ಆ್ಯಕ್ಷನ್ ಕಟ್ ಹೇಳಬೇಕಿದೆ. ಇದೇ ಕಾರಣಕ್ಕೆ ಪ್ರಶಾಂತ್ ನೀಲ್ ‘ಕೆಜಿಎಫ್- 3’ (KGF 3) ಸಿನಿಮಾ ನಿರ್ದೇಶನದ ಬಗ್ಗೆ ಗೊಂದಲದಲ್ಲಿದ್ದಾರೆ. ಆದರೆ ಚಿತ್ರದ ಕಥೆ ಸಿದ್ಧವಾಗಿದೆ ಎಂದು ಪ್ರಶಾಂತ್ ನೀಲ್ ಮಾಹಿತಿ ನೀಡಿದ್ದಾರೆ.

  • ಹತ್ತು ಸಾವಿರ ಕೊಟ್ಟು ‘ಸಲಾರ್’ ಟಿಕೆಟ್ ಖರೀದಿಸಿದ ರಾಜಮೌಳಿ

    ಹತ್ತು ಸಾವಿರ ಕೊಟ್ಟು ‘ಸಲಾರ್’ ಟಿಕೆಟ್ ಖರೀದಿಸಿದ ರಾಜಮೌಳಿ

    ಮ್ಮ ನೆಚ್ಚಿನ ನಟನ ಸಿನಿಮಾಗೆ ಭಾರೀ ಮೊತ್ತ ಕೊಟ್ಟು ಟಿಕೆಟ್ ಖರೀದಿಸಿದ್ದಾರೆ ಖ್ಯಾತ ನಿರ್ದೇಶಕ ಎಸ್.ಎಸ್.ರಾಜಮೌಳಿ (Rajamouli). ಬಾಹುಬಲಿ ಸಿನಿಮಾದಲ್ಲಿ ನಟಿಸಿದ್ದ ಪ್ರಭಾಸ್ ನಟನೆಯ ಸಲಾರ್ ಸಿನಿಮಾ ಇನ್ನಷ್ಟೇ ರಿಲೀಸ್ ಆಗಬೇಕಿದ್ದು, ಈ ಚಿತ್ರದ ಟಕೆಟ್ ಅನ್ನು ಬರೋಬ್ಬರಿ ಹತ್ತು ಸಾವಿರ ರೂಪಾಯಿ ಕೊಟ್ಟು ಖರೀದಿಸಿದ್ದಾರಂತೆ ರಾಜಮೌಳಿ. ಬಿಡುಗಡೆ ದಿನ ಹೈದರಾಬಾದ್ ನ ಸಂಧ್ಯಾ ಚಿತ್ರಮಂದಿರದಲ್ಲಿ ಸಲಾರ್ ಸಿನಿಮಾ ವೀಕ್ಷಿಸಲಿದ್ದಾರಂತೆ.

    ಕೆಜಿಎಫ್ ಗಿಂತ ದೊಡ್ಡದು ಸಲಾರ್

    ಡೀ ವಿಶ್ವವೇ ಇದರತ್ತ ನೋಡುತ್ತಿದೆ. ಮೂರು ವರ್ಷದಿಂದ ಕಾಯುತ್ತಿದ್ದ ಗಳಿಗೆ ಹತ್ತಿರವಾಗಿದೆ. ಕಾರಣ ಸಲಾರ್ (Salaar) ಅಬ್ಬರಿಸಲು ಸಜ್ಜಾಗಿದೆ. ಈ ಹೊತ್ತಲ್ಲಿ ಹಲವು ರಹಸ್ಯ ಬಿಚ್ಚಿಟ್ಟಿದ್ದಾರೆ ಕ್ಯಾಮೆರಾಮನ್ ಭುವನ್ ಗೌಡ. ಯಾರ್ ಯಾರೋ ಏನೇನೊ ಅಂದುಕೊಂಡಿದ್ದು ಸುಳ್ಳು. ಇದು ಸತ್ಯ ಎಂದು ಗುಡುಗಿದ್ದಾರೆ. ಏನಿದು ಸಲಾರ್ ಅಪರೂಪದ ಸಮಾಚಾರ ಇಲ್ಲಿದೆ ನೋಡಿ.

    ಬರೀ ಪ್ರಭಾಸ್ (Prabhas) ಫ್ಯಾನ್ಸ್ ಮಾತ್ರ ಅಲ್ಲ, ಇಡೀ ವಿಶ್ವವೇ ಸಲಾರ್‌ಗಾಗಿ ಕಾಯುತ್ತಿದೆ. ಒಂದು ಕಡೆ ಪ್ರಶಾಂತ್ ನೀಲ್ ಏನು ಮಾಡಲಿದ್ದಾರೆ ಎನ್ನುವ ಕುತೂಹಲ ಇನ್ನೊಂದು ಕಡೆ ಪ್ರಭಾಸ್ ಕಾಂಬಿನೇಶನ್ ಹೆಂಗೆ ಕಿಕ್ ಏರಿಸುತ್ತದೆ ಎನ್ನುವ ಹಂಬಲ. ಎರಡೂ ಸೇರಿ ಸಲಾರ್‌ಗೆ ಭೂಮಿ ತೂಕದ ಬಲ ತಂದುಕೊಟ್ಟಿದೆ. ಈ ಹೊತ್ತಲ್ಲಿ ಕ್ಯಾಮೆರಾಮನ್ ಭುವನ್ ಗೌಡ (Bhuvan Gowda) ಹಲವು ರಹಸ್ಯ ಹರವಿಟ್ಟಿದ್ದಾರೆ. ಅದನ್ನು ಕೇಳಿ ಪ್ರಭಾಸ್ ಭಕ್ತಗಣ ರಣಕೇಕೆ ಹಾಕಿದೆ.

    ಕೆಜಿಎಫ್ (KGF) ಚಿತ್ರಕ್ಕಿಂತ ಐದು ಪಟ್ಟು ದೊಡ್ಡದು ಸಲಾರ್. ರಾಮೋಜಿ ಫಿಲ್ಮ್ ಸಿಟಿಯಲ್ಲಿ ಇನ್ನೊಂದು ಫಿಲ್ಮ್ ಸಿಟಿ ನಿರ್ಮಿಸಿದಂತಾಗಿತ್ತು ನಾವು ಹಾಕಿದ ಸೆಟ್ಟುಗಳು. ನೂರು ಎಕರೆ ಪ್ರದೇಶದಲ್ಲಿ ಸೆಟ್ ನಿರ್ಮಿಸಲಾಗಿತ್ತು. ಇಂಡಿಯಾದ ಇತಿಹಾಸದಲ್ಲಿ ಇಷ್ಟು ದೊಡ್ಡ ಸೆಟ್ ನಿರ್ಮಿಸಿದ್ದು ಇಲ್ಲವೇ ಇಲ್ಲ. ಕೆಜಿಎಫ್ ಶೂಟ್ ಮಾಡಿದ್ದ ಸ್ಥಳದಲ್ಲಿ ಸಲಾರ್ ಶೂಟಿಂಗ್ ಮಾಡಿಲ್ಲ. ಅದು ಸುಳ್ಳು. ಶಿವಕುಮಾರ್ ಕಲಾ ನಿರ್ದೇಶನದಲ್ಲಿ ಹಿಂದೆಂದೂ ನೋಡದ ಕಾಣದ ಲೋಕ ತೋರಿಸಿದ್ದೇವೆ. ಕೋಟಿ ಕೋಟಿ ಸುರಿಯಲಾಗಿದೆ. ಒಂದೇ ಮಾತಿನಲ್ಲಿ ಹೇಳಬೇಕೆಂದರೆ ಸಲಾರ್ ಅದ್ಭುತ ಅಪರೂಪದ ಜಗತ್ತು ತೋರಿಸಲಿದೆ.

    ಇಲ್ಲಿವರೆಗೆ ಇದನ್ನು ಯಾರೂ ಹೇಳಿರಲಿಲ್ಲ. ಈಗ ‘ಸಲಾರ್’ (Salaar) ಅಸಲಿ ಸತ್ಯ ಹೊರಬಿದ್ದಿದೆ. ಸುಮಾರು 200 ಕೋಟಿ ವೆಚ್ಚದಲ್ಲಿ ಹೊಂಬಾಳೆ ಸಂಸ್ಥೆ (Hombale Films) ಇದನ್ನು ನಿರ್ಮಿಸಿದೆ. ವಿಜಯ್ ಕಿರಗಂದೂರ್ ಮತ್ತೊಮ್ಮೆ ಕನ್ನಡ ಬಾವುಟವನ್ನು ದೇಶ ವಿದೇಶದಲ್ಲಿ ಹಾರಾಡಿಸಲು ಸಜ್ಜಾಗಿದ್ದಾರೆ. ಪ್ರಶಾಂತ್ ನೀಲ್ (Prashanth Neel) ಕೂಡ ಜನರ ಉತ್ತರಕ್ಕೆ ಕಾಯುತ್ತಿದ್ದಾರೆ. ಮೂರು ಸೋಲಿನಿಂದ ಕಂಗೆಟ್ಟಿರುವ ಪ್ರಭಾಸ್ ಕೈ ಜೋಡಿಸಿ ಕುಳಿತಿದ್ದಾರೆ.

  • ನಿರ್ದೇಶಕ ಪ್ರಶಾಂತ್ ನೀಲ್ ಹೊಗಳಿದ ಪ್ರಭಾಸ್

    ನಿರ್ದೇಶಕ ಪ್ರಶಾಂತ್ ನೀಲ್ ಹೊಗಳಿದ ಪ್ರಭಾಸ್

    ಲಾರ್ ಸಿನಿಮಾ ರಿಲೀಸ್ ಬೆನ್ನಲ್ಲೇ ನಿರ್ದೇಶಕ ಪ್ರಶಾಂತ್ ನೀಲ್ ಅವರನ್ನು ಹಾಡಿಹೊಗಳಿದ್ದಾರೆ ನಟ ಪ್ರಭಾಸ್. ನಿರ್ದೇಶಕರ ಕಾರ್ಯ ವೈಖರಿಗೆ ಪ್ರಭಾಸ್ ಫಿದಾ ಆಗಿದ್ದಾರೆ. ಪ್ರಶಾಂತ್ ಜೊತೆ ಕೆಲಸ ಮಾಡಲು ಯಾವಾಗಲೂ ನಾನು ಉತ್ಸುಕನಾಗಿದ್ದೇನೆ ಎಂದು ಹೇಳಿದ್ದಾರೆ.

    ಇಡೀ ವಿಶ್ವವೇ ಇದರತ್ತ ನೋಡುತ್ತಿದೆ. ಮೂರು ವರ್ಷದಿಂದ ಕಾಯುತ್ತಿದ್ದ ಗಳಿಗೆ ಹತ್ತಿರವಾಗಿದೆ. ಕಾರಣ ಸಲಾರ್ (Salaar) ಅಬ್ಬರಿಸಲು ಸಜ್ಜಾಗಿದೆ. ಈ ಹೊತ್ತಲ್ಲಿ ಹಲವು ರಹಸ್ಯ ಬಿಚ್ಚಿಟ್ಟಿದ್ದಾರೆ ಕ್ಯಾಮೆರಾಮನ್ ಭುವನ್ ಗೌಡ. ಯರ‍್ಯಾರೊ ಏನೇನೊ ಅಂದುಕೊಂಡಿದ್ದು ಸುಳ್ಳು. ಇದು ಸತ್ಯ ಎಂದು ಗುಡುಗಿದ್ದಾರೆ. ಏನಿದು ಸಲಾರ್ ಅಪರೂಪದ ಸಮಾಚಾರ ಇಲ್ಲಿದೆ ನೋಡಿ.

    ಬರೀ ಪ್ರಭಾಸ್ (Prabhas) ಫ್ಯಾನ್ಸ್ ಮಾತ್ರ ಅಲ್ಲ, ಇಡೀ ವಿಶ್ವವೇ ಸಲಾರ್‌ಗಾಗಿ ಕಾಯುತ್ತಿದೆ. ಒಂದು ಕಡೆ ಪ್ರಶಾಂತ್ ನೀಲ್ ಏನು ಮಾಡಲಿದ್ದಾರೆ ಎನ್ನುವ ಕುತೂಹಲ ಇನ್ನೊಂದು ಕಡೆ ಪ್ರಭಾಸ್ ಕಾಂಬಿನೇಶನ್ ಹೆಂಗೆ ಕಿಕ್ ಏರಿಸುತ್ತದೆ ಎನ್ನುವ ಹಂಬಲ. ಎರಡೂ ಸೇರಿ ಸಲಾರ್‌ಗೆ ಭೂಮಿ ತೂಕದ ಬಲ ತಂದುಕೊಟ್ಟಿದೆ. ಈ ಹೊತ್ತಲ್ಲಿ ಕ್ಯಾಮೆರಾಮನ್ ಭುವನ್ ಗೌಡ (Bhuvan Gowda) ಹಲವು ರಹಸ್ಯ ಹರವಿಟ್ಟಿದ್ದಾರೆ. ಅದನ್ನು ಕೇಳಿ ಪ್ರಭಾಸ್ ಭಕ್ತಗಣ ರಣಕೇಕೆ ಹಾಕಿದೆ.

    ಕೆಜಿಎಫ್ (KGF) ಚಿತ್ರಕ್ಕಿಂತ ಐದು ಪಟ್ಟು ದೊಡ್ಡದು ಸಲಾರ್. ರಾಮೋಜಿ ಫಿಲ್ಮ್ ಸಿಟಿಯಲ್ಲಿ ಇನ್ನೊಂದು ಫಿಲ್ಮ್ ಸಿಟಿ ನಿರ್ಮಿಸಿದಂತಾಗಿತ್ತು ನಾವು ಹಾಕಿದ ಸೆಟ್ಟುಗಳು. ನೂರು ಎಕರೆ ಪ್ರದೇಶದಲ್ಲಿ ಸೆಟ್ ನಿರ್ಮಿಸಲಾಗಿತ್ತು. ಇಂಡಿಯಾದ ಇತಿಹಾಸದಲ್ಲಿ ಇಷ್ಟು ದೊಡ್ಡ ಸೆಟ್ ನಿರ್ಮಿಸಿದ್ದು ಇಲ್ಲವೇ ಇಲ್ಲ. ಕೆಜಿಎಫ್ ಶೂಟ್ ಮಾಡಿದ್ದ ಸ್ಥಳದಲ್ಲಿ ಸಲಾರ್ ಶೂಟಿಂಗ್ ಮಾಡಿಲ್ಲ. ಅದು ಸುಳ್ಳು. ಶಿವಕುಮಾರ್ ಕಲಾ ನಿರ್ದೇಶನದಲ್ಲಿ ಹಿಂದೆಂದೂ ನೋಡದ ಕಾಣದ ಲೋಕ ತೋರಿಸಿದ್ದೇವೆ. ಕೋಟಿ ಕೋಟಿ ಸುರಿಯಲಾಗಿದೆ. ಒಂದೇ ಮಾತಿನಲ್ಲಿ ಹೇಳಬೇಕೆಂದರೆ ಸಲಾರ್ ಅದ್ಭುತ ಅಪರೂಪದ ಜಗತ್ತು ತೋರಿಸಲಿದೆ.

    ಇಲ್ಲಿವರೆಗೆ ಇದನ್ನು ಯಾರೂ ಹೇಳಿರಲಿಲ್ಲ. ಈಗ ‘ಸಲಾರ್’ (Salaar) ಅಸಲಿ ಸತ್ಯ ಹೊರಬಿದ್ದಿದೆ. ಸುಮಾರು 200 ಕೋಟಿ ವೆಚ್ಚದಲ್ಲಿ ಹೊಂಬಾಳೆ ಸಂಸ್ಥೆ (Hombale Films) ಇದನ್ನು ನಿರ್ಮಿಸಿದೆ. ವಿಜಯ್ ಕಿರಗಂದೂರ್ ಮತ್ತೊಮ್ಮೆ ಕನ್ನಡ ಬಾವುಟವನ್ನು ದೇಶ ವಿದೇಶದಲ್ಲಿ ಹಾರಾಡಿಸಲು ಸಜ್ಜಾಗಿದ್ದಾರೆ. ಪ್ರಶಾಂತ್ ನೀಲ್ (Prashanth Neel) ಕೂಡ ಜನರ ಉತ್ತರಕ್ಕೆ ಕಾಯುತ್ತಿದ್ದಾರೆ. ಮೂರು ಸೋಲಿನಿಂದ ಕಂಗೆಟ್ಟಿರುವ ಪ್ರಭಾಸ್ ಕೈ ಜೋಡಿಸಿ ಕುಳಿತಿದ್ದಾರೆ.

  • ‘ಕೆಜಿಎಫ್’ಗಿಂತ ಐದು ಪಟ್ಟು ದೊಡ್ಡದು ಈ ಸಲಾರ್‌ ಚಿತ್ರ- ಇಲ್ಲಿದೆ ಬಿಗ್‌ ಅಪ್‌ಡೇಟ್

    ‘ಕೆಜಿಎಫ್’ಗಿಂತ ಐದು ಪಟ್ಟು ದೊಡ್ಡದು ಈ ಸಲಾರ್‌ ಚಿತ್ರ- ಇಲ್ಲಿದೆ ಬಿಗ್‌ ಅಪ್‌ಡೇಟ್

    ಡೀ ವಿಶ್ವವೇ ಇದರತ್ತ ನೋಡುತ್ತಿದೆ. ಮೂರು ವರ್ಷದಿಂದ ಕಾಯುತ್ತಿದ್ದ ಗಳಿಗೆ ಹತ್ತಿರವಾಗಿದೆ. ಕಾರಣ ಸಲಾರ್ (Salaar) ಅಬ್ಬರಿಸಲು ಸಜ್ಜಾಗಿದೆ. ಈ ಹೊತ್ತಲ್ಲಿ ಹಲವು ರಹಸ್ಯ ಬಿಚ್ಚಿಟ್ಟಿದ್ದಾರೆ ಕ್ಯಾಮೆರಾಮನ್ ಭುವನ್ ಗೌಡ. ಯರ‍್ಯಾರೊ ಏನೇನೊ ಅಂದುಕೊಂಡಿದ್ದು ಸುಳ್ಳು. ಇದು ಸತ್ಯ ಎಂದು ಗುಡುಗಿದ್ದಾರೆ. ಏನಿದು ಸಲಾರ್ ಅಪರೂಪದ ಸಮಾಚಾರ ಇಲ್ಲಿದೆ ನೋಡಿ.

    ಬರೀ ಪ್ರಭಾಸ್ (Prabhas) ಫ್ಯಾನ್ಸ್ ಮಾತ್ರ ಅಲ್ಲ, ಇಡೀ ವಿಶ್ವವೇ ಸಲಾರ್‌ಗಾಗಿ ಕಾಯುತ್ತಿದೆ. ಒಂದು ಕಡೆ ಪ್ರಶಾಂತ್ ನೀಲ್ ಏನು ಮಾಡಲಿದ್ದಾರೆ ಎನ್ನುವ ಕುತೂಹಲ ಇನ್ನೊಂದು ಕಡೆ ಪ್ರಭಾಸ್ ಕಾಂಬಿನೇಶನ್ ಹೆಂಗೆ ಕಿಕ್ ಏರಿಸುತ್ತದೆ ಎನ್ನುವ ಹಂಬಲ. ಎರಡೂ ಸೇರಿ ಸಲಾರ್‌ಗೆ ಭೂಮಿ ತೂಕದ ಬಲ ತಂದುಕೊಟ್ಟಿದೆ. ಈ ಹೊತ್ತಲ್ಲಿ ಕ್ಯಾಮೆರಾಮನ್ ಭುವನ್ ಗೌಡ (Bhuvan Gowda) ಹಲವು ರಹಸ್ಯ ಹರವಿಟ್ಟಿದ್ದಾರೆ. ಅದನ್ನು ಕೇಳಿ ಪ್ರಭಾಸ್ ಭಕ್ತಗಣ ರಣಕೇಕೆ ಹಾಕಿದೆ. ಇದನ್ನೂ ಓದಿ:ಬಿಗ್ ಬಾಸ್‌ನಿಂದ ಔಟ್ ಆದ್ಮೇಲೆ ಹೆಚ್ಚಾಯ್ತು ಸ್ನೇಹಿತ್‌ಗೆ ಫಾಲೋವರ್ಸ್

    ಕೆಜಿಎಫ್ (KGF) ಚಿತ್ರಕ್ಕಿಂತ ಐದು ಪಟ್ಟು ದೊಡ್ಡದು ಸಲಾರ್. ರಾಮೋಜಿ ಫಿಲ್ಮ್ ಸಿಟಿಯಲ್ಲಿ ಇನ್ನೊಂದು ಫಿಲ್ಮ್ ಸಿಟಿ ನಿರ್ಮಿಸಿದಂತಾಗಿತ್ತು ನಾವು ಹಾಕಿದ ಸೆಟ್ಟುಗಳು. ನೂರು ಎಕರೆ ಪ್ರದೇಶದಲ್ಲಿ ಸೆಟ್ ನಿರ್ಮಿಸಲಾಗಿತ್ತು. ಇಂಡಿಯಾದ ಇತಿಹಾಸದಲ್ಲಿ ಇಷ್ಟು ದೊಡ್ಡ ಸೆಟ್ ನಿರ್ಮಿಸಿದ್ದು ಇಲ್ಲವೇ ಇಲ್ಲ. ಕೆಜಿಎಫ್ ಶೂಟ್ ಮಾಡಿದ್ದ ಸ್ಥಳದಲ್ಲಿ ಸಲಾರ್ ಶೂಟಿಂಗ್ ಮಾಡಿಲ್ಲ. ಅದು ಸುಳ್ಳು. ಶಿವಕುಮಾರ್ ಕಲಾ ನಿರ್ದೇಶನದಲ್ಲಿ ಹಿಂದೆಂದೂ ನೋಡದ ಕಾಣದ ಲೋಕ ತೋರಿಸಿದ್ದೇವೆ. ಕೋಟಿ ಕೋಟಿ ಸುರಿಯಲಾಗಿದೆ. ಒಂದೇ ಮಾತಿನಲ್ಲಿ ಹೇಳಬೇಕೆಂದರೆ ಸಲಾರ್ ಅದ್ಭುತ ಅಪರೂಪದ ಜಗತ್ತು ತೋರಿಸಲಿದೆ.

    ಇಲ್ಲಿವರೆಗೆ ಇದನ್ನು ಯಾರೂ ಹೇಳಿರಲಿಲ್ಲ. ಈಗ ‘ಸಲಾರ್’ (Salaar) ಅಸಲಿ ಸತ್ಯ ಹೊರಬಿದ್ದಿದೆ. ಸುಮಾರು 200 ಕೋಟಿ ವೆಚ್ಚದಲ್ಲಿ ಹೊಂಬಾಳೆ ಸಂಸ್ಥೆ (Hombale Films) ಇದನ್ನು ನಿರ್ಮಿಸಿದೆ. ವಿಜಯ್ ಕಿರಗಂದೂರ್ ಮತ್ತೊಮ್ಮೆ ಕನ್ನಡ ಬಾವುಟವನ್ನು ದೇಶ ವಿದೇಶದಲ್ಲಿ ಹಾರಾಡಿಸಲು ಸಜ್ಜಾಗಿದ್ದಾರೆ. ಪ್ರಶಾಂತ್ ನೀಲ್ (Prashanth Neel) ಕೂಡ ಜನರ ಉತ್ತರಕ್ಕೆ ಕಾಯುತ್ತಿದ್ದಾರೆ. ಮೂರು ಸೋಲಿನಿಂದ ಕಂಗೆಟ್ಟಿರುವ ಪ್ರಭಾಸ್ ಕೈ ಜೋಡಿಸಿ ಕುಳಿತಿದ್ದಾರೆ.

  • ಇಂದಿನಿಂದ ‘ಸಲಾರ್’ ಸಿನಿಮಾದ ಅಡ್ವಾನ್ಸ್ ಟಿಕೆಟ್ ಬುಕ್ಕಿಂಗ್

    ಇಂದಿನಿಂದ ‘ಸಲಾರ್’ ಸಿನಿಮಾದ ಅಡ್ವಾನ್ಸ್ ಟಿಕೆಟ್ ಬುಕ್ಕಿಂಗ್

    ತೀ ನಿರೀಕ್ಷಿತ ಸಲಾರ್ ಸಿನಿಮಾದ ಟಿಕೆಟ್ ಅನ್ನು ಇಂದಿನಿಂದ ಖರೀದಿಸಬಹುದು ಎಂದು ಹೊಂಬಾಳೆ ಸಂಸ್ಥೆ ತಿಳಿಸಿದೆ. ಕರ್ನಾಟಕದಲ್ಲಿ ಇಂದಿನಿಂದಲೇ ಅಡ್ವಾನ್ಸ್ ಟಿಕೆಟ್ ಬುಕ್ (Booking) ಮಾಡಬಹುದು ಎಂದು ಅದು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದೆ. ಇದನ್ನು ಕಂಡು ಸಹಜವಾಗಿಯೇ ಪ್ರಭಾಸ್ ಫ್ಯಾನ್ಸ್ ಗೆ ಖುಷಿಯಾಗಿದೆ.

    ‘ಸಲಾರ್ ಪಾರ್ಟ್‍ 1: ಸೀಸ್‍ಫೈರ್’. ಪ್ರಶಾಂತ್‍ ನೀಲ್‍ (Prashant Neel) ನಿರ್ದೇಶನದ, ಪ್ರಭಾಸ್‍ ಅಭಿನಯದ ಈ ಚಿತ್ರವು ಅಭಿಮಾನಿಗಳಲ್ಲಿ ಬೆಟ್ಟದಷ್ಟು ನಿರೀಕ್ಷೆಗಳನ್ನು ಹುಟ್ಟುಹಾಕಿವೆ. ಈ ಚಿತ್ರವು ಡಿ.22ರಂದು ಹಿಂದಿ, ತಮಿಳು, ತೆಲುಗು, ಕನ್ನಡ ಮತ್ತು ಮಲಯಾಳಂ ಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿದ್ದು, ಈ ಚಿತ್ರದ ಬಿಡುಗಡೆಗೆ ಪ್ರೇಕ್ಷಕರು ಕುತೂಹಲದಿಂದ ಕಾಯುತ್ತಿದ್ದಾರೆ.

    ಭಾರತದ ಬೃಹತ್‍ ಆ್ಯಕ್ಷನ್‍ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಈ ಚಿತ್ರದ ‘ಆಕಾಶ ಗಾಡಿಯ’ ಎಂಬ ಮೊದಲ ಲಿರಿಕಲ್‍ ಹಾಡು (Song), ಹೊಂಬಾಳೆ ಫಿಲಂಸ್‍ ಯೂಟ್ಯೂಬ್‍ ಚಾನಲ್‍ನಲ್ಲಿ ಬಿಡುಗಡೆ ಆಗಿದೆ. ಈ ಹಾಡಿಗೆ ಮೊದಲ ದಿನವೇ ಸಖತ್ ರೆಸ್ಪಾನ್ಸ್ ಕೂಡ ಸಿಕ್ಕಿದೆ.

    ಇದೊಂದು ಭಾವನಾತ್ಮಕ ಹಾಡಾಗಿದ್ದು, ಇಬ್ಬರು ಗೆಳೆಯರ ನಡುವಿನ ಬಾಂಧವ್ಯವನ್ನು ಸಾರುತ್ತದೆ. ಅವರಿಬ್ಬರ ಸಾಮರ್ಥ್ಯ ಮತ್ತು ದೌರ್ಬಲ್ಯಗಳನ್ನು ವಿಶ್ಲೇಷಿಸುತ್ತದೆ.  ಈ ಹಾಡನ್ನು ಕಿನ್ನಾಲ್ ರಾಜ್‍ ಬರೆದಿದ್ದು, ವಿಜಯಲಕ್ಷ್ಮೀ ಮೆತ್ತಿನಹೊಳೆ ಹಾಡಿದ್ದಾರೆ. ರವಿ ಬಸ್ರೂರು ಸಂಗೀತ ಈ ಚಿತ್ರಕ್ಕಿದೆ.

    ಇತ್ತೀಚೆಗಷ್ಟೇ ಸೆನ್ಸಾರ್ ಮಂಡಳಿಯಿಂದ ‘ಎ’ ಪ್ರಮಾಣ ಪತ್ರ ಪಡೆದಿರುವ ‘ಸಲಾರ್ ಪಾರ್ಟ್ 1: ಸೀಸ್‍ಫೈರ್’  (Salaar Part 1) ಚಿತ್ರವು ಎರಡು ಗಂಟೆ 55 ನಿಮಿಷಗಳ ಅವಧಿಯಾಗಿದ್ದು, ಈ ಚಿತ್ರದಲ್ಲಿ ಬೃಹತ್‍ ಪ್ರಮಾಣ ಆ್ಯಕ್ಷನ್‍ ದೃಶ್ಯಗಳಿದೆ.

    ‘ಸಲಾರ್ ಪಾರ್ಟ್ 1: ಸೀಸ್‍ಫೈರ್’ ಚಿತ್ರದಲ್ಲಿ ಪ್ರಭಾಸ್‍ ಜೊತೆಗೆ ಪೃಥ್ವಿರಾಜ್‍ ಸುಕುಮಾರನ್‍, ಶ್ರುತಿ ಹಾಸನ್‍, ಜಗಪತಿ ಬಾಬು ಮುಂತಾದವರು ನಟಿಸಿದ್ದು, ಪ್ರಶಾಂತ್ ನೀಲ್‍ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಹೊಂಬಾಳೆ ಫಿಲಂಸ್‍ನಡಿ ವಿಜಯ್‍ ಕಿರಗಂದೂರು ಈ ಚಿತ್ರವನ್ನು ನಿರ್ಮಿಸಿದ್ದಾರೆ.

  • ಸಲಾರ್: ‘ಆಕಾಶ ಗಾಡಿಯ’ ಹಾಡಿಗೆ ಭರ್ಜರಿ ರೆಸ್ಪಾನ್ಸ್

    ಸಲಾರ್: ‘ಆಕಾಶ ಗಾಡಿಯ’ ಹಾಡಿಗೆ ಭರ್ಜರಿ ರೆಸ್ಪಾನ್ಸ್

    ಭಾರತೀಯ ಚಿತ್ರರಂಗದ ಬಹುನಿರೀಕ್ಷಿತ ಚಿತ್ರವೆಂದರೆ ಅದು ಹೊಂಬಾಳೆ ಫಿಲಂಸ್‍ನ ‘ಸಲಾರ್ ಪಾರ್ಟ್‍ 1: ಸೀಸ್‍ಫೈರ್’. ಪ್ರಶಾಂತ್‍ ನೀಲ್‍ (Prashant Neel) ನಿರ್ದೇಶನದ, ಪ್ರಭಾಸ್‍ ಅಭಿನಯದ ಈ ಚಿತ್ರವು ಅಭಿಮಾನಿಗಳಲ್ಲಿ ಬೆಟ್ಟದಷ್ಟು ನಿರೀಕ್ಷೆಗಳನ್ನು ಹುಟ್ಟುಹಾಕಿವೆ. ಈ ಚಿತ್ರವು ಡಿ.22ರಂದು ಹಿಂದಿ, ತಮಿಳು, ತೆಲುಗು, ಕನ್ನಡ ಮತ್ತು ಮಲಯಾಳಂ ಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿದ್ದು, ಈ ಚಿತ್ರದ ಬಿಡುಗಡೆಗೆ ಪ್ರೇಕ್ಷಕರು ಕುತೂಹಲದಿಂದ ಕಾಯುತ್ತಿದ್ದಾರೆ.

    ಭಾರತದ ಬೃಹತ್‍ ಆ್ಯಕ್ಷನ್‍ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಈ ಚಿತ್ರದ ‘ಆಕಾಶ ಗಾಡಿಯ’ ಎಂಬ ಮೊದಲ ಲಿರಿಕಲ್‍ ಹಾಡು (Song), ಹೊಂಬಾಳೆ ಫಿಲಂಸ್‍ ಯೂಟ್ಯೂಬ್‍ ಚಾನಲ್‍ನಲ್ಲಿ ಬಿಡುಗಡೆ ಆಗಿದೆ. ಈ ಹಾಡಿಗೆ ಮೊದಲ ದಿನವೇ ಸಖತ್ ರೆಸ್ಪಾನ್ಸ್ ಕೂಡ ಸಿಕ್ಕಿದೆ.

    ಇದೊಂದು ಭಾವನಾತ್ಮಕ ಹಾಡಾಗಿದ್ದು, ಇಬ್ಬರು ಗೆಳೆಯರ ನಡುವಿನ ಬಾಂಧವ್ಯವನ್ನು ಸಾರುತ್ತದೆ. ಅವರಿಬ್ಬರ ಸಾಮರ್ಥ್ಯ ಮತ್ತು ದೌರ್ಬಲ್ಯಗಳನ್ನು ವಿಶ್ಲೇಷಿಸುತ್ತದೆ.  ಈ ಹಾಡನ್ನು ಕಿನ್ನಾಲ್ ರಾಜ್‍ ಬರೆದಿದ್ದು, ವಿಜಯಲಕ್ಷ್ಮೀ ಮೆತ್ತಿನಹೊಳೆ ಹಾಡಿದ್ದಾರೆ. ರವಿ ಬಸ್ರೂರು ಸಂಗೀತ ಈ ಚಿತ್ರಕ್ಕಿದೆ.

    ಇತ್ತೀಚೆಗಷ್ಟೇ ಸೆನ್ಸಾರ್ ಮಂಡಳಿಯಿಂದ ‘ಎ’ ಪ್ರಮಾಣ ಪತ್ರ ಪಡೆದಿರುವ ‘ಸಲಾರ್ ಪಾರ್ಟ್ 1: ಸೀಸ್‍ಫೈರ್’  (Salaar Part 1) ಚಿತ್ರವು ಎರಡು ಗಂಟೆ 55 ನಿಮಿಷಗಳ ಅವಧಿಯಾಗಿದ್ದು, ಈ ಚಿತ್ರದಲ್ಲಿ ಬೃಹತ್‍ ಪ್ರಮಾಣ ಆ್ಯಕ್ಷನ್‍ ದೃಶ್ಯಗಳಿದೆ.

    ‘ಸಲಾರ್ ಪಾರ್ಟ್ 1: ಸೀಸ್‍ಫೈರ್’ ಚಿತ್ರದಲ್ಲಿ ಪ್ರಭಾಸ್‍ ಜೊತೆಗೆ ಪೃಥ್ವಿರಾಜ್‍ ಸುಕುಮಾರನ್‍, ಶ್ರುತಿ ಹಾಸನ್‍, ಜಗಪತಿ ಬಾಬು ಮುಂತಾದವರು ನಟಿಸಿದ್ದು, ಪ್ರಶಾಂತ್ ನೀಲ್‍ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಹೊಂಬಾಳೆ ಫಿಲಂಸ್‍ನಡಿ ವಿಜಯ್‍ ಕಿರಗಂದೂರು ಈ ಚಿತ್ರವನ್ನು ನಿರ್ಮಿಸಿದ್ದಾರೆ.

  • ‘ಸಲಾರ್‌’ ಫಸ್ಟ್‌ ಸಾಂಗ್‌ ಔಟ್-‌ ಮತ್ತೆ ಮ್ಯಾಜಿಕ್‌ ಮಾಡ್ತು ಬಸ್ರೂರ್‌ ಮ್ಯೂಸಿಕ್‌

    ‘ಸಲಾರ್‌’ ಫಸ್ಟ್‌ ಸಾಂಗ್‌ ಔಟ್-‌ ಮತ್ತೆ ಮ್ಯಾಜಿಕ್‌ ಮಾಡ್ತು ಬಸ್ರೂರ್‌ ಮ್ಯೂಸಿಕ್‌

    ಮಾಸ್ಟರ್ ಮೈಂಡ್ ಪ್ರಶಾಂತ್ ನೀಲ್- ಪ್ರಭಾಸ್ ಕಾಂಬಿನೇಷನ್‌ನ ‘ಸಲಾರ್’ (Salaar) ಸಿನಿಮಾದ ಮೊದಲ ಹಾಡು ಇಂದು ಬಿಡುಗಡೆ ಆಗಿದೆ. ಒಟ್ಟು ಐದು ಭಾಷೆಗಳಲ್ಲಿ ಹಾಡು ಬಿಡುಗಡೆಯಾಗಿದೆ. ಮೊದಲ ಹಾಡಿಗೆ ಅಭಿಮಾನಿಗಳಿಂದ ಉತ್ತಮ ರೆಸ್ಪಾನ್ಸ್ ಸಿಕ್ಕಿದೆ. ಪೃಥ್ವಿರಾಜ್-ಪ್ರಭಾಸ್ (Prabhas) ಹಾಡು ಫ್ಯಾನ್ಸ್‌ಗೆ ಮೋಡಿ ಮಾಡಿದೆ.

    ‘ಆಕಾಶ ಗಡಿಯದಾಟಿ ತಂದಾನೋ ಬೆಳಕ ಕೋಟಿ’ ಎಂಬ ಹಾಡು ಕೆಜಿಎಫ್ ಸಾಂಗ್ ನೆನಪಿಸಿದೆ. ಸಲಾರ್‌ನಲ್ಲೂ ತಾಯಿ- ಮಗನ ಬಾಂಧವ್ಯ ತೋರಿಸಲಾಗಿದೆ. ಇಲ್ಲೂ ಕೆಜಿಎಫ್ ರವಿ ಬಸ್ರೂರು ಮ್ಯೂಸಿಕ್ ಮ್ಯಾಜಿಕ್ ಮಾಡಿದೆ. ಒಟ್ನಲ್ಲಿ ಸಲಾರ್ ಫಸ್ಟ್ ಸಾಂಗ್ ಅಭಿಮಾನಿಗಳಿಗೆ ಕಿಕ್ ಕೊಟ್ಟಿರೋದಂತೂ ನಿಜ.

    ಪ್ರಭಾಸ್ ಅಲ್ಲದೇ, ‘ಸಲಾರ್’ (Salaar) ಸಿನಿಮಾದಲ್ಲಿ ಮಲಯಾಳಂನ ಹೆಸರಾಂತ ನಟ ಪೃಥ್ವಿರಾಜ್ ಸುಕುಮಾರನ್ ಹೊಸಬಗೆಯ ಪಾತ್ರ ಮಾಡಿದ್ದಾರೆ. ಐದು ಭಾಷೆಗಳಲ್ಲಿ ಈ ಸಿನಿಮಾ ಮೂಡಿ ಬಂದಿದ್ದು ವಿಶೇಷವೆಂದರೆ ತಮ್ಮ ಪಾತ್ರಕ್ಕೆ ಐದೂ ಭಾಷೆಗಳಲ್ಲಿ ತಾವೇ ಡಬ್ ಮಾಡಿದ್ದಾರಂತೆ ಪೃಥ್ವಿರಾಜ್. ಇದನ್ನೂ ಓದಿ:Yash: ‘ಟಾಕ್ಸಿಕ್’ಗೆ ಶೃತಿ ಹಾಸನ್, ಜೆರೆಮಿಸ್ಟಾಕ್ ಸಾಥ್

    ಈಗಾಗಲೇ ಸಿನಿಮಾ ರಿಲೀಸ್‌ಗೆ ಸರ್ವಸಿದ್ಧತೆ ನಡೆದಿದೆ. ಈ ನಡುವೆ ಸಲಾರ್ ಸಿನಿಮಾಗೆ ಪ್ರಾದೇಶಿಕ ಸೆನ್ಸಾರ್ ಮಂಡಳಿಯ ಪ್ರಮಾಣ ಪತ್ರವನ್ನು ನೀಡಿದೆ. ತೀವ್ರಗತಿಯ ಸಾಹಸ ಸನ್ನಿವೇಶಗಳು ಇರುವ ಕಾರಣದಿಂದಾಗಿ ಚಿತ್ರಕ್ಕೆ ‘ಎ’ ಪ್ರಮಾಣ ಪತ್ರವನ್ನು ಸೆನ್ಸಾರ್ ಮಂಡಳಿ ನೀಡಿದೆ. ಭಾರತದಲ್ಲಿನ ಪ್ರದರ್ಶನಕ್ಕಾಗಿ ‘ಎ’ ಮತ್ತು ಹೊರ ದೇಶದಲ್ಲಿನ ಪ್ರದರ್ಶನಕ್ಕಾಗಿ ಯು/ಎ ಪ್ರಮಾಣ ಪತ್ರ ಸಿಕ್ಕಿದೆ ಎನ್ನಲಾಗುತ್ತಿದೆ. ಸಿನಿಮಾದ ಒಟ್ಟು ಅವಧಿ 2 ಗಂಟೆ 55 ನಿಮಿಷ ಎಂದು ಹೇಳಲಾಗುತ್ತಿದೆ.

    ನಾನಾ ಕಾರಣಗಳಿಂದಾಗಿ ಸಿನಿಮಾ ಕುತೂಹಲ ಮೂಡಿಸಿದೆ. ಡಾರ್ಲಿಂಗ್ ಪ್ರಭಾಸ್ ನಾಯಕತ್ವದಲ್ಲಿ ಈ ಸಿನಿಮಾ ಮೂಡಿ ಬಂದಿದ್ದು, ಮೊನ್ನೆಯಷ್ಟೇ ‘ಸಲಾರ್’ ಚಿತ್ರದ ಟ್ರೈಲರ್ ರಿಲೀಸ್ ಆಗಿದೆ. ಫ್ರೆಂಡ್‌ಶಿಪ್ ಜೊತೆ ಸೇಡಿನ ಕಥೆ ಹೊಂದಿರುವ ಈ ಸಿನಿಮಾದಲ್ಲಿ ರಕ್ತ ಸಿಕ್ತವಾಗಿ ಪ್ರಭಾಸ್ ಖಡಕ್ ಆಗಿ ಕಾಣಿಸಿಕೊಂಡಿದ್ದಾರೆ. ಪ್ರಭಾಸ್‌ಗೆ ನಾಯಕಿಯಾಗಿ ಶ್ರುತಿ ಹಾಸನ್ (Shruti Haasan) ನಟಿಸಿದ್ದಾರೆ. 3 ನಿಮಿಷ 47 ಸೆಕೆಂಡ್ ಇರುವ ಈ ಟ್ರೈಲರ್‌ಗೆ ಉತ್ತಮ ರೆಸ್ಪಾನ್ಸ್ ಸಿಕ್ಕಿತ್ತು. ಆ ಟ್ರೈಲರ್ ನೋಡಿದಾಗಲೇ ಚಿತ್ರಕ್ಕೆ ಯಾವ ಪ್ರಮಾಣ ಪತ್ರ ಸಿಗಬಹುದು ಎಂದು ಅಂದಾಜಿಸಲಾಗಿತ್ತು.

  • ಇಂದು ‘ಸಲಾರ್’ ಸಿನಿಮಾದ ಮೊದಲ ಹಾಡು ರಿಲೀಸ್

    ಇಂದು ‘ಸಲಾರ್’ ಸಿನಿಮಾದ ಮೊದಲ ಹಾಡು ರಿಲೀಸ್

    ಪ್ರಶಾಂತ್ ನೀಲ್ (Prashant Neel) ಹಾಗೂ ಪ್ರಭಾಸ್ ಕಾಂಬಿನೇಷನ್ ನ ಸಲಾರ್  ಸಿನಿಮಾದ ಮೊದಲ ಹಾಡು (Song) ಇಂದು ಬಿಡುಗಡೆ ಆಗಲಿದೆ. ಒಟ್ಟು ಐದು ಭಾಷೆಗಳಲ್ಲಿ ಹಾಡು ಬಿಡುಗಡೆಯಾಗಲಿದ್ದು, ಮೊದಲ ಹಾಡಿಗಾಗಿ ಅಭಿಮಾನಿಗಳು ತುದಿಗಾಲಿಲ್ಲ ಕಾಯುತ್ತಿದ್ದಾರೆ. ಬಿಡುಗಡೆಯ ಸಮಯವನ್ನು ಹೊಂಬಾಳೆ ಸಂಸ್ಥೆ ತಿಳಿಸದೇ ಇದ್ದರೂ, ಇಂದು ಪಕ್ಕಾ ಹಾಡು ಬಿಡುಗಡೆ ಮಾಡುವುದಾಗಿ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದೆ.

    ಪ್ರಭಾಸ್ ಅಲ್ಲದೇ, ಸಲಾರ್ ಸಿನಿಮಾದಲ್ಲಿ ಮಲಯಾಳಂನ ಹೆಸರಾಂತ ನಟ ಪೃಥ್ವಿರಾಜ್ ಸುಕುಮಾರನ್ (Pruthviraj Sukumaran) ಹೊಸಬಗೆಯ ಪಾತ್ರ ಮಾಡಿದ್ದಾರೆ. ಐದು ಭಾಷೆಗಳಲ್ಲಿ ಈ ಸಿನಿಮಾ ಮೂಡಿ ಬಂದಿದ್ದು ವಿಶೇಷವೆಂದರೆ ತಮ್ಮ ಪಾತ್ರಕ್ಕೆ ಐದೂ ಭಾಷೆಗಳಲ್ಲಿ ತಾವೇ ಡಬ್ (Dubbing) ಮಾಡಿದ್ದಾರಂತೆ ಪೃಥ್ವಿರಾಜ್.

    ಈಗಾಗಲೇ ಸಿನಿಮಾ ರಿಲೀಸ್ ಗೆ ಸರ್ವಸಿದ್ಧತೆ ನಡೆದಿದೆ. ಈ ನಡುವೆ ಸಲಾರ್ ಸಿನಿಮಾಗೆ ಪ್ರಾದೇಶಿಕ ಸೆನ್ಸಾರ್ (Censor) ಮಂಡಳಿಯ ಪ್ರಮಾಣ ಪತ್ರವನ್ನು ನೀಡಿದೆ. ತೀವ್ರಗತಿಯ ಸಾಹಸ ಸನ್ನಿವೇಶಗಳು ಇರುವ ಕಾರಣದಿಂದಾಗಿ ಚಿತ್ರಕ್ಕೆ ‘ಎ’ ಪ್ರಮಾಣ ಪತ್ರವನ್ನು ಸೆನ್ಸಾರ್ ಮಂಡಳಿ ನೀಡಿದೆ. ಭಾರತದಲ್ಲಿನ ಪ್ರದರ್ಶನಕ್ಕಾಗಿ ‘ಎ’ ಮತ್ತು ಹೊರ ದೇಶದಲ್ಲಿನ ಪ್ರದರ್ಶನಕ್ಕಾಗಿ ಯು/ಎ ಪ್ರಮಾಣ ಪತ್ರ ಸಿಕ್ಕಿದೆ ಎನ್ನಲಾಗುತ್ತಿದೆ. ಸಿನಿಮಾದ ಒಟ್ಟು ಅವಧಿ 2 ಗಂಟೆ 55 ನಿಮಿಷ ಎಂದು ಹೇಳಲಾಗುತ್ತಿದೆ.

    ನಾನಾ ಕಾರಣಗಳಿಂದಾಗಿ ಸಿನಿಮಾ ಕುತೂಹಲ ಮೂಡಿಸಿದೆ. ಡಾರ್ಲಿಂಗ್ ಪ್ರಭಾಸ್ (Prabhas) ನಾಯಕತ್ವದಲ್ಲಿ ಈ ಸಿನಿಮಾ ಮೂಡಿ ಬಂದಿದ್ದು, ಮೊನ್ನೆಯಷ್ಟೇ ‘ಸಲಾರ್’ (Salaar) ಚಿತ್ರದ ಟ್ರೈಲರ್ ರಿಲೀಸ್ ಆಗಿದೆ. ಫ್ರೆಂಡ್‌ಶಿಪ್ ಜೊತೆ ಸೇಡಿನ ಕಥೆ ಹೊಂದಿರುವ ಈ ಸಿನಿಮಾದಲ್ಲಿ ರಕ್ತ ಸಿಕ್ತವಾಗಿ ಪ್ರಭಾಸ್ ಖಡಕ್ ಆಗಿ ಕಾಣಿಸಿಕೊಂಡಿದ್ದಾರೆ. 3 ನಿಮಿಷ 47 ಸೆಕೆಂಡ್ ಇರುವ ಈ ಟ್ರೈಲರ್‌ಗೆ ಉತ್ತಮ ರೆಸ್ಪಾನ್ಸ್ ಸಿಕ್ಕಿತ್ತು. ಆ ಟ್ರೈಲರ್ ನೋಡಿದಾಗಲೇ ಚಿತ್ರಕ್ಕೆ ಯಾವ ಪ್ರಮಾಣ ಪತ್ರ ಸಿಗಬಹುದು ಎಂದು ಅಂದಾಜಿಸಲಾಗಿತ್ತು.

  • ‘ಸಲಾರ್’ ಸಿನಿಮಾಗೆ ಸೆನ್ಸಾರ್: ಯಾವ ಸರ್ಟಿಫಿಕೇಟ್? ಎಷ್ಟು ನಿಮಿಷ?

    ‘ಸಲಾರ್’ ಸಿನಿಮಾಗೆ ಸೆನ್ಸಾರ್: ಯಾವ ಸರ್ಟಿಫಿಕೇಟ್? ಎಷ್ಟು ನಿಮಿಷ?

    ಹುನಿರೀಕ್ಷಿತ ಸಲಾರ್ ಸಿನಿಮಾಗೆ ಪ್ರಾದೇಶಿಕ ಸೆನ್ಸಾರ್ (Censor) ಮಂಡಳಿಯ ಪ್ರಮಾಣ ಪತ್ರವನ್ನು ನೀಡಿದೆ. ತೀವ್ರಗತಿಯ ಸಾಹಸ ಸನ್ನಿವೇಶಗಳು ಇರುವ ಕಾರಣದಿಂದಾಗಿ ಚಿತ್ರಕ್ಕೆ ‘ಎ’ ಪ್ರಮಾಣ ಪತ್ರವನ್ನು ಸೆನ್ಸಾರ್ ಮಂಡಳಿ ನೀಡಿದೆ. ಭಾರತದಲ್ಲಿನ ಪ್ರದರ್ಶನಕ್ಕಾಗಿ ‘ಎ’ ಮತ್ತು ಹೊರ ದೇಶದಲ್ಲಿನ ಪ್ರದರ್ಶನಕ್ಕಾಗಿ ಯು/ಎ ಪ್ರಮಾಣ ಪತ್ರ ಸಿಕ್ಕಿದೆ ಎನ್ನಲಾಗುತ್ತಿದೆ. ಸಿನಿಮಾದ ಒಟ್ಟು ಅವಧಿ 2 ಗಂಟೆ 55 ನಿಮಿಷ ಎಂದು ಹೇಳಲಾಗುತ್ತಿದೆ.

    ನಾನಾ ಕಾರಣಗಳಿಂದಾಗಿ ಸಿನಿಮಾ ಕುತೂಹಲ ಮೂಡಿಸಿದೆ. ಡಾರ್ಲಿಂಗ್ ಪ್ರಭಾಸ್ (Prabhas) ನಾಯಕತ್ವದಲ್ಲಿ ಈ ಸಿನಿಮಾ ಮೂಡಿ ಬಂದಿದ್ದು, ಮೊನ್ನೆಯಷ್ಟೇ ‘ಸಲಾರ್’ (Salaar) ಚಿತ್ರದ ಟ್ರೈಲರ್ ರಿಲೀಸ್ ಆಗಿದೆ. ಫ್ರೆಂಡ್‌ಶಿಪ್ ಜೊತೆ ಸೇಡಿನ ಕಥೆ ಹೊಂದಿರುವ ಈ ಸಿನಿಮಾದಲ್ಲಿ ರಕ್ತ ಸಿಕ್ತವಾಗಿ ಪ್ರಭಾಸ್ ಖಡಕ್ ಆಗಿ ಕಾಣಿಸಿಕೊಂಡಿದ್ದಾರೆ. 3 ನಿಮಿಷ 47 ಸೆಕೆಂಡ್ ಇರುವ ಈ ಟ್ರೈಲರ್‌ಗೆ ಉತ್ತಮ ರೆಸ್ಪಾನ್ಸ್ ಸಿಕ್ಕಿತ್ತು. ಆ ಟ್ರೈಲರ್ ನೋಡಿದಾಗಲೇ ಚಿತ್ರಕ್ಕೆ ಯಾವ ಪ್ರಮಾಣ ಪತ್ರ ಸಿಗಬಹುದು ಎಂದು ಅಂದಾಜಿಸಲಾಗಿತ್ತು.

    ಹೊಂಬಾಳೆ ಸಂಸ್ಥೆ ನಿರ್ಮಾಣದ ಸಲಾರ್ ಚಿತ್ರದಲ್ಲಿ ಪ್ರಭಾಸ್ ಮತ್ತು ಪೃಥ್ವಿರಾಜ್ ಜುಗಲ್‌ಬಂದಿಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಅದರಲ್ಲೂ ಪ್ರಭಾಸ್ ಖಡಕ್ ಲುಕ್, ಪೃಥ್ವಿರಾಜ್ ರಗಡ್ ಡೈಲಾಗ್ ಎಲ್ಲವೂ ಟ್ರೈಲರ್‌ನ ಹೈಲೈಟ್ ಆಗಿದೆ. ಚಿತ್ರದಲ್ಲಿ ಕನ್ನಡದ ಗುಳ್ಟು ನವೀನ್ ಶಂಕರ್, ಪ್ರಮೋದ್, ಜಗಪತಿ ಬಾಬು, ಶ್ರುತಿ ಹಾಸನ್ ಸೇರಿದಂತೆ ಅನೇಕರು ನಟಿಸುವ ಮೂಲಕ ಗಮನ ಸೆಳೆದಿದ್ದಾರೆ. ಇದೇ ಡಿಸೆಂಬರ್‌ 22ಕ್ಕೆ ಬಹುಭಾಷೆಗಳಲ್ಲಿ ‘ಸಲಾರ್‌’ ರಿಲೀಸ್‌ ಆಗುತ್ತಿದೆ.

    ಸಲಾರ್ ಸಿನಿಮಾದ ಕಥೆಯ ಬಗ್ಗೆ ಸಾಕಷ್ಟು ಚರ್ಚೆ ನಡೆದಿತ್ತು. ಪ್ರಶಾಂತ್ ನೀಲ್ ಈ ಹಿಂದೆ ಕನ್ನಡದಲ್ಲಿ ಮಾಡಿದ್ದ ಉಗ್ರಂ ಸಿನಿಮಾವನ್ನೇ ಕೊಂಚ ಬದಲಿಸಿಕೊಂಡು ಚಿತ್ರ ಮಾಡಿದ್ದಾರೆ ಎಂದು ಹೇಳಲಾಗಿತ್ತು. ಈ ಕುರಿತಂತೆ ಪ್ರಶಾಂತ್ ನೀಲ್ (Prashant Neel)ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ. ಇದೇ ಮೊದಲ ಬಾರಿಗೆ ಕಥೆಯ ಬಗ್ಗೆ ಪ್ರಶಾಂತ್ ಮಾತನಾಡಿದ್ದಾರೆ.

    ಇದು ರಿಮೇಕ್ ಸಿನಿಮಾವಲ್ಲ ಎಂದು ಸ್ಪಷ್ಟ ಪಡಿಸಿದರುವ ಅವರು, ಸ್ನೇಹಿತರಿಬ್ಬರು ದೊಡ್ಡ ಶತ್ರುಗಳಾಗಿ ಬದಲಾಗುವ ಕಥೆಯನ್ನು ಸಿನಿಮಾದಲ್ಲಿ ತೋರಿಸಲಾಗುತ್ತಿದೆ ಎಂದಿದ್ದಾರೆ. ಈ ಇಬ್ಬರ ಜರ್ನಿಯನ್ನು ಎರಡು ಭಾಗವಾಗಿ ತೋರಿಸಲಾಗುವುದು ಎಂದು ಇದೇ ಮೊದಲ ಬಾರಿಗೆ ಕಥೆಯ ಬಗ್ಗೆ ಬಾಯ್ಬಿಟ್ಟಿದ್ದಾರೆ.

  • ಪ್ರಭಾಸ್ ಗೆ ಮದುವೆ ಯೋಗವಿಲ್ಲ : ವೇಣು ಸ್ವಾಮಿ ಭವಿಷ್ಯ

    ಪ್ರಭಾಸ್ ಗೆ ಮದುವೆ ಯೋಗವಿಲ್ಲ : ವೇಣು ಸ್ವಾಮಿ ಭವಿಷ್ಯ

    ಸೆಲೆಬ್ರಿಟಿಗಳಿಗೆ ಭವಿಷ್ಯ ನುಡಿಯುವ ಜ್ಯೋತಿಷಿ ವೇಣು ಸ್ವಾಮಿ (Venu Swamy) ಅವರು ಪ್ರಭಾಸ್ (Prabhas) ಅಭಿಮಾನಿಗಳಿಗೆ ಶಾಕಿಂಗ್ ನ್ಯೂಸ್ ನೀಡಿದ್ದಾರೆ. ಪ್ಯಾನ್ ಇಂಡಿಯಾ ಸ್ಟಾರ್ ಪ್ರಭಾಸ್ ಅವರಿಗೆ ಮದುವೆ (Marriage) ಆಗುವ ಯೋಗವಿಲ್ಲ ಎಂದು ಹೇಳಿದ್ದಾರೆ. ವೇಣು ಸ್ವಾಮಿ ಅವರ ಈ ಹೇಳಿಕೆ ಪ್ರಭಾಸ್ ಅಭಿಮಾನಿಗಳ ಕಣ್ಣು ಕೆಂಪಾಗಿಸಿದೆ.  ವೇಣು ಗೋಪಾಲ್ ಅವರ ಮಾತನ್ನು ಅನೇಕ ಸೆಲೆಬ್ರಿಟಿಗಳು ನಂಬುತ್ತಾರೆ. ಹಾಗಾಗಿ ಪ್ರಭಾಸ್ ಮದುವೆ ಆಗತ್ತಾ ಅಥವಾ ಇಲ್ಲವಾ ಎನ್ನುವ ಪ್ರಶ್ನೆ ಮೂಡಿದೆ.

    ಆದರೆ, ಈ ಹಿಂದೆ ಪ್ರಭಾಸ್ ಕುಟುಂಬ ಮದುವೆ ವಿಚಾರದಲ್ಲಿ ಬೇರೆಯದ್ದೇ ಮಾಹಿತಿ ನೀಡಿತ್ತು. ಪ್ರಭಾಸ್ ಕುಟುಂಬದ ವ್ಯಕ್ತಿಯೊಬ್ಬರು ಪ್ರಭಾಸ್ ಮದುವೆ ಸಿದ್ಧತೆ ನಡೆಯುತ್ತಿದೆ ಎಂಬ ವಿಚಾರವನ್ನು ಹೊರಹಾಕಿದ್ದಾರೆ ಎಂದು ಮಾಧ್ಯಮವೊಂದು ವರದಿ ಮಾಡಿತ್ತು.

    ಮಾಧ್ಯಮ ವರದಿ ಅನ್ವಯ ಪ್ರಭಾಸ್ ಯುಎಸ್ ನಲ್ಲಿ ವಾಸಿಸುತ್ತಿರುವ ಯುವತಿಯ ಕೈ ಹಿಡಿಯಲಿದ್ದಾರೆ. ಯುವತಿಯ ಕುಟುಂಬಸ್ಥರು ಪ್ರಭಾಸ್ ಕುಟುಂಬಕ್ಕೆ ಆತ್ಮೀಯರು ಎನ್ನಲಾಗಿದೆ. ಅಮೆರಿಕದಲ್ಲಿ ಉದ್ಯಮ ನಡೆಸುತ್ತಿರುವ ವ್ಯಕ್ತಿಯೊಬ್ಬರ ಪುತ್ರಿಯಾಗಿರುವ ಯುವತಿಯನ್ನು ಮದುವೆಯಾಗಲು ಸಿದ್ಧತೆ ನಡೆಸಿದ್ದಾರೆ. ಪ್ರಭಾಸ್ ಕುಟುಂಬಸ್ಥರು ಈಗಾಗಲೇ ಮಾತುಕತೆ ಕೂಡ ನಡೆಸಿದ್ದಾರೆ ಎನ್ನಲಾಗಿದೆ. ಆದರೆ ಈ ಕುರಿತು ಪ್ರಭಾಸ್ ಕುಟುಂಬಸ್ಥರು ಯಾವುದೇ ಅಧಿಕೃತ ಹೇಳಿಕೆಯನ್ನ ನೀಡಿಲ್ಲ.

    ಬಾಹುಬಲಿ ಬಳಿಕ ನಟ ಪ್ರಭಾಸ್ ಹಾಗೂ ಅನುಷ್ಕಾ ಶೆಟ್ಟಿ ಮದುವೆಯಾಗುತ್ತಾರೆ ಎಂಬ ಸುದ್ದಿ ಭಾರೀ ಸದ್ದು ಮಾಡಿತ್ತು. ಆದರೆ ಈ ವರದಿಗಳನ್ನು ಇಬ್ಬರು ನಿರಾಕರಿಸಿ ನಾವು ಕೇವಲ ಸ್ನೇಹಿತರಷ್ಟೇ ಎಂದಿದ್ದರು. ಕಳೆದ ವರ್ಷ ಪ್ರಭಾಸ್ ಮದುವೆ ಕುರಿತು ಪ್ರತಿಕ್ರಿಯೆ ನೀಡಿದ್ದ ಅವರ ದೊಡ್ಡಪ್ಪ ಕೃಷ್ಣಂ ರಾಜು, ಇದು ನಮ್ಮ ಕುಟುಂಬದ ವಿಚಾರವಾಗಿದ್ದು, ಇದನ್ನು ಬಹಿರಂಗವಾಗಿ ಚರ್ಚೆ ಮಾಡಲು ಇಷ್ಟಪಡುವುದಿಲ್ಲ. ಆದರೆ ಈ ವರ್ಷ ಪ್ರಭಾಸ್ ಮದುವೆ ನಡೆಯಲಿದೆ ಎಂದಿದ್ದರು.