ಭಾರತೀಯ ಸಿನಿಮಾ ರಂಗದಲ್ಲಿ ಅಚ್ಚರಿಯ ಬೆಳವಣಿಗೆಯೊಂದು ನಡೆದಿದೆ. ಇದೇ ಮೊದಲ ಬಾರಿಗೆ ಶಾರುಖ್ (Shah Rukh Khan) ಚಿತ್ರದ ಎದುರು ವಿಶ್ವಮಟ್ಟದಲ್ಲಿ ಪ್ರಭಾಸ್ ಸಿನಿಮಾ ಎದುರಾಗಲಿದೆ. ಇಂಥದ್ದೊಂದು ಮಾಹಿತಿಯನ್ನು ಅಧಿಕೃತವಾಗಿ ಚಿತ್ರತಂಡಗಳು ಹೇಳಿಕೊಳ್ಳದೇ ಇದ್ದರೂ, ಸೋಷಿಯಲ್ ಮೀಡಿಯಾದಲ್ಲಿ ಸುದ್ದಿ ಅಧಿಕೃತ ಎನ್ನುವಂತೆ ಹರಿದಾಡುತ್ತಿದೆ.

ಈಗಾಗಲೇ ಶಾರುಖ್ ಖಾನ್ ನಟನೆಯ ಡಂಕಿ (Dunki) ಸಿನಿಮಾವನ್ನು ಕ್ರಿಸ್ ಮಸ್ ಹಬ್ಬಕ್ಕಾಗಿ ಬಿಡುಗಡೆ ಮಾಡಲು ಚಿತ್ರತಂಡ ಸಿದ್ಧ ಮಾಡಿಕೊಂಡಿದೆ. 22 ಡಿಸೆಂಬರ್ 2023ರಂದು ಡಂಕಿ ಸಿನಿಮಾವನ್ನು ರಿಲೀಸ್ ಮಾಡುವುದಾಗಿ ಚಿತ್ರತಂಡವೇ ಅಧಿಕೃತವಾಗಿ ಘೋಷಣೆ ಮಾಡಿದೆ. ಅಂದೇ ಪ್ರಭಾಸ್ (Prabhas) ಮತ್ತು ಪ್ರಶಾಂತ್ ನೀಲ್ ಕಾಂಬಿನೇಷನ್ ನ ‘ಸಲಾರ್’ ಚಿತ್ರವನ್ನೂ ಬಿಡುಗಡೆ ಮಾಡಲು ಸಿದ್ಧತೆ ಮಾಡಿಕೊಂಡಿದೆಯಂತೆ. ಇದನ್ನೂ ಓದಿ:ಸಾವಿರ ಕೋಟಿ ಕ್ಲಬ್ ಸೇರಿದ ಶಾರುಖ್ ನಟನೆಯ ‘ಜವಾನ್’ ಸಿನಿಮಾ

ಅಂದುಕೊಂಡಂತೆ ಆಗಿದ್ದರೆ, ಸೆಪ್ಟೆಂಬರ್ 28ರಂದು ಸಲಾರ್ (Salaar) ಸಿನಿಮಾ ರಿಲೀಸ್ ಆಗಬೇಕಿತ್ತು. ಈ ದಿನಾಂಕವನ್ನು ಘೋಷಿಸಿಯೂ ಆಗಿತ್ತು. ಆದರೆ, ಕೆಲ ತಾಂತ್ರಿಕ ಕಾರಣಗಳಿಂದಾಗಿ ರಿಲೀಸ್ ಆಗಲಿಲ್ಲ. ಮುಂದಿನ ದಿನಾಂಕವನ್ನೂ ಹೊಂಬಾಳೆ ಫಿಲ್ಮ್ಸ್ ಘೋಷಿಸಿಲ್ಲ. ಇದೇ ತಿಂಗಳು 29ರಂದು ಹೊಸ ದಿನಾಂಕವನ್ನು ಘೋಷಿಸುವ ಸಾಧ್ಯತೆ ಇದೆ. ಡಿಸೆಂಬರ್ 22 ತಾರೀಖನ್ನೇ ಸಂಸ್ಥೆ ಕೂಡ ಆಯ್ಕೆ ಮಾಡಿಕೊಳ್ಳಲಾಗಿದೆಯಂತೆ.
ಈಗಾಗಲೇ ಒಂದರ ಹಿಂದೆ ಒಂದು ಸಿನಿಮಾವನ್ನು ಗೆಲ್ಲಿಸಿಕೊಂಡಿದ್ದಾರೆ ಶಾರುಖ್ ಖಾನ್, ಪಠಾಣ್ ಮತ್ತು ಜವಾನ್ ಸಾವಿರಾರು ಕೋಟಿ ಕಲೆಕ್ಷನ್ ಮಾಡಿ ದಾಖಲೆ ಬರೆದಿವೆ. ಈ ಗೆಲುವಿನ ನಂತರ ಡಂಕಿ ಕೂಡ ಸಾಕಷ್ಟು ನಿರೀಕ್ಷೆ ಮೂಡಿಸಿದೆ. ಈ ಹೊತ್ತಲ್ಲಿ ಸಲಾರ್ ಸಿನಿಮಾ ಕೂಡ ರಿಲೀಸ್ ( Release) ಆಗಲಿದೆಯಾ ಎನ್ನುವ ಚರ್ಚೆ ಕೂಡ ಶುರುವಾಗಿದೆ.
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]









ಅಕ್ಟೋಬರ್ ಕೊನೇ ವಾರದಲ್ಲಿ ಪ್ರಭಾಸ್ ಹುಟ್ಟುಹಬ್ಬ. ಅದರ ಆಚೀಚೆ ಸಲಾರ್ ಬರಬಹುದು ಎನ್ನುವ ಗುಣಾಕಾರ ಹಾಕಲಾಯಿತು. ಇನ್ನು ಕೆಲವರು ಡಿಸೆಂಬರ್ ಕೊನೆಗೆ ಬರುತ್ತದೆ ಎಂದರು. ಆದರೆ ಈಗಾಗಲೇ ಈ ವರ್ಷದ ಕೊನೆಯಲ್ಲಿ ಅಖಾಡ ಫುಲ್ ಬಿಜಿಯೋ ಬಿಜಿ. ಹಾಗಿದ್ದರೆ ಮುಂದಿನ ವರ್ಷ ಸಂಕ್ರಾಂತಿ ಹಬ್ಬಕ್ಕೆ ಕಿಚ್ಚು ಹಚ್ಚಬಹುದಾ? ಇಲ್ಲ ಸಂಕ್ರಾಂತಿಯಂದು ತೆಲುಗು-ತಮಿಳಿನ ದೊಡ್ಡ ಸ್ಟಾರ್ ಸಿನಿಮಾ ಎಂಟ್ರಿ ಕೊಡಲಿವೆ. ಕ್ಲ್ಯಾಶ್ ಆಗೋದು ಪಕ್ಕಾ. ಮತ್ಯಾವಾಗ ದೀಪ ಹಚ್ಚಬಹುದು? ಉತ್ತರ ಸಿಗಲಿಲ್ಲ.




‘ಆದಿಪುರುಷ್’ (Adipurush) ಬಿಡುಗಡೆಗೂ ಮುನ್ನ ಪ್ರಭಾಸ್ ಅಮೆರಿಕಾಕ್ಕೆ ಹೋಗಿದ್ದರು. ಹೆಚ್ಚು ಕಮ್ಮಿ ಎರಡು ತಿಂಗಳು ಅಲ್ಲಿದ್ದರು. ಮೊಣಕಾಲು ಶಸ್ತ್ರ ಚಿಕಿತ್ಸೆ ಮಾಡಿಸಿಕೊಳ್ಳಲಿದ್ದಾರೆ ಎನ್ನಲಾಗಿತ್ತು. ಆಯಿತಾ ಇಲ್ಲವಾ? ಗೊತ್ತಾಗಲಿಲ್ಲ. ಇದೀಗ ಮತ್ತೆ ಅದೇ ಆಪರೇಶನ್‌ಗೆ ಹೋಗಿದ್ದಾರೆ ಎನ್ನುತ್ತಿದ್ದಾರೆ. ಹಾಗಲ್ಲ. ಬ್ಯಾಕ್ ಟು ಬ್ಯಾಕ್ ಶೂಟಿಂಗ್‌ನಿಂದ ಹೈರಾಣಾಗಿದ್ದಾರೆ. ಹೀಗಾಗಿ ರೆಸ್ಟ್ ಮಾಡಲು ಈ ಪ್ರವಾಸ. ಯಾವುದಕ್ಕೂ ಸ್ಪಷ್ಟ ಉತ್ತರ ಇಲ್ಲ. ಪ್ರಭಾಸ್ ಫ್ಯಾನ್ಸ್ ಮಾತ್ರ ಸಲಾರ್ ಯಾವಾಗ ಬರುತ್ತೋ ಎಂದು ಕಾಯ್ತಿದ್ದಾರೆ.


1952ರಲ್ಲಿ ಡಾ.ರಾಜ್‌ಕುಮಾರ್ ‘ಬೇಡರ ಕಣ್ಣಪ್ಪ’ ಸಿನಿಮಾದಲ್ಲಿ ನಟಿಸಿದ್ದರು. ಅಣ್ಣಾವ್ರು ಮಾಡಿದ್ದ ಪಾತ್ರವನ್ನೇ ಕೃಷ್ಣಂ ರಾಜು ಅವರು ನಟಿಸಿ ಸೈ ಎನಿಸಿಕೊಂಡಿದ್ದರು. ಈ ಸಿನಿಮಾ ಕೃಷ್ಣಂ ರಾಜು (Krishnam Raju) ಅವರ ವೃತ್ತಿರಂಗದಲ್ಲಿ ಬಿಗ್ ಬ್ರೇಕ್ ಕೊಟ್ಟಿತ್ತು. ಚಿತ್ರ ಸಕ್ಸಸ್‌ಫುಲ್ ಪ್ರದರ್ಶನ ಕಂಡಿತ್ತು. ಇದೇ ಸಿನಿಮಾವನ್ನು ಹೊಸ ವರ್ಷನ್‌ನಲ್ಲಿ ಪ್ರಭಾಸ್ ನಿರ್ಮಿಸುವ ಕನಸು ಅವರಿಗಿತ್ತು. ಆದರೆ ಕಳೆದ ವರ್ಷ ಅವರು ನಿಧನರಾದರು.




