Tag: ಪ್ರಭಾಸ್

  • ಗರ್ಭಿಣಿ ದೀಪಿಕಾ ಸ್ಟೇಜ್‌ನಿಂದ ಕೆಳಗಿಳಿಯಲು ಸಹಾಯ ಮಾಡಿದ ಪ್ರಭಾಸ್‌ಗೆ ಕಾಲೆಳೆದ ಬಿಗ್ ಬಿ

    ಗರ್ಭಿಣಿ ದೀಪಿಕಾ ಸ್ಟೇಜ್‌ನಿಂದ ಕೆಳಗಿಳಿಯಲು ಸಹಾಯ ಮಾಡಿದ ಪ್ರಭಾಸ್‌ಗೆ ಕಾಲೆಳೆದ ಬಿಗ್ ಬಿ

    ಹುನಿರೀಕ್ಷಿತ ‘ಕಲ್ಕಿ 2898 ಎಡಿ’ (Kalki 2898 AD) ಸಿನಿಮಾ ರಿಲೀಸ್‌ಗೆ ರೆಡಿ ಈ ಸಿನಿಮಾ ಪ್ರಚಾರ ಕಾರ್ಯದಲ್ಲಿ ದೀಪಿಕಾ ಪಡುಕೋಣೆ (Deepika Padukone) ಭಾಗಿಯಾಗಿ ಚಿತ್ರತಂಡಕ್ಕೆ ಸಾಥ್ ನೀಡುತ್ತಿದ್ದಾರೆ. ಚಿತ್ರದ ಪ್ರಿ ರಿಲೀಸ್ ಕಾರ್ಯಕ್ರಮದಲ್ಲಿ ಗರ್ಭಿಣಿ ದೀಪಿಕಾ ವೇದಿಕೆಯಿಂದ ಇಳಿಯಲು ಪ್ರಭಾಸ್ ಸಹಾಯ ಮಾಡಿದ್ದಾರೆ. ಅದಕ್ಕೆ, ಅಮಿತಾಭ್ ಬಚ್ಚನ್ ಕಾಲೆಳೆದಿದ್ದಾರೆ.

     

    View this post on Instagram

     

    A post shared by Viral Bhayani (@viralbhayani)

    ತುಂಬು ಗರ್ಭಿಣಿಯಾಗಿರುವ ದೀಪಿಕಾ ಪಡುಕೋಣೆ ಮುಂಬೈನಲ್ಲಿ ನಡೆದ ‘ಕಲ್ಕಿ’ ಸಿನಿಮಾ ಪ್ರಚಾರದಲ್ಲಿ ಭಾಗಿಯಾಗಿದ್ದಾರೆ. ಸಿನಿಮಾ ಕುರಿತು ಈವೆಂಟ್‌ನಲ್ಲಿ ಮಾತಾಡಿ, ಬರುತ್ತಿದ್ದಂತೆ ದೀಪಿಕಾ ವೇದಿಕೆಯಿಂದ ಇಳಿಯಲು ಮುಂದಾದಾಗ, ಪ್ರಭಾಸ್ ಮತ್ತು ಅಮಿತಾಭ್ ಇಬ್ಬರೂ ನಟಿಯ ಸಹಾಯಕ್ಕೆ ಧಾವಿಸಿದರು. ಪ್ರಭಾಸ್ (Prabhas) ಅವರು ದೀಪಿಕಾ ಅವರ ಕೈ ಹಿಡಿದು ಆರಾಮವಾಗಿ ವೇದಿಕೆಯಿಂದ ಕೆಳಗೆ ಇಳಿಯಲು ಸಹಾಯ ಮಾಡಿದರು. ಬಿಗ್ ಬಿ ಅವರು ಪ್ರಭಾಸ್ ಹಿಂದೆ ನಿಂತು ತಮಾಷೆ ಕೂಡ ಮಾಡಿದ್ದಾರೆ. ಇದನ್ನೂ ಓದಿ:ತೆಲುಗು ನಟ ಚಿರಂಜೀವಿ ಮಾಜಿ ಅಳಿಯ ಶಿರೀಶ್ ನಿಧನ

    ಈ ಕಾರ್ಯಕ್ರಮದಲ್ಲಿ ಡಾರ್ಲಿಂಗ್ ಪ್ರಭಾಸ್, ಅಮಿತಾಭ್ ಬಚ್ಚನ್, ಕಮಲ್ ಹಾಸನ್ ಮತ್ತು ದೀಪಿಕಾ ಪಡುಕೋಣೆ, ರಾಣಾ ದಗ್ಗುಬಾಟಿ ಸೇರಿದಂತೆ ಹಲವರು ಭಾಗಿಯಾಗಿದ್ದರು. ‘ಕಲ್ಕಿ’ ಪ್ರೀ ರಿಲೀಸ್ ಈವೆಂಟ್‌ಗಾಗಿ 10 ಕೋಟಿ ರೂ. ಖರ್ಚಾಗಿದೆ ಎನ್ನಲಾಗಿದೆ. ದೀಪಿಕಾ ಅವರು ವೇದಿಕೆಯಲ್ಲಿ ಸಿನಿಮಾ ಕುರಿತಾಗಿ ಕೂಡ ಮಾತನಾಡಿದ್ದಾರೆ.

    ಅಂದಹಾಗೆ, ‘ಕಲ್ಕಿ 2898 ಎಡಿ’ ಸಿನಿಮಾ ಇದೇ ಜೂನ್ 27ಕ್ಕೆ ರಿಲೀಸ್ ಆಗಲಿದೆ. ಬಹುಭಾಷೆಗಳಲ್ಲಿ ಸಿನಿಮಾ ತೆರೆ ಕಾಣಲಿದೆ. ಮೊದಲ ಬಾರಿಗೆ ದೀಪಿಕಾ, ಈ ಚಿತ್ರಕ್ಕಾಗಿ ತಮ್ಮ ಮಾತೃಭಾಷೆ ಕನ್ನಡದಲ್ಲಿ ಡಬ್ ಮಾಡಿರೋದು ವಿಶೇಷ.

  • ‘ಕಲ್ಕಿ’  ಸಿನಿಮಾದ ಭೈರವ ಆಂಥಮ್ ರಿಲೀಸ್: ಕುಣಿದ ಪ್ರಭಾಸ್ ಫ್ಯಾನ್ಸ್

    ‘ಕಲ್ಕಿ’ ಸಿನಿಮಾದ ಭೈರವ ಆಂಥಮ್ ರಿಲೀಸ್: ಕುಣಿದ ಪ್ರಭಾಸ್ ಫ್ಯಾನ್ಸ್

    ಪ್ರಭಾಸ್‌ (Prabhas), ಅಮಿತಾಭ್ ಬಚ್ಚನ್, ಕಮಲ್ ಹಾಸನ್, ದೀಪಿಕಾ ಪಡುಕೋಣೆ ಮತ್ತು ದಿಶಾ ಪಟಾನಿ ನಟಿಸಿರುವ ‘ಕಲ್ಕಿ 2898 AD’ (Kalki) ಚಿತ್ರದ ಟ್ರೈಲರ್ ಬಿಡುಗಡೆಯ ಬಳಿಕ ಇದೀಗ ಇದೇ ಚಿತ್ರದ ಭೈರವ ಆಂಥಮ್‌ ಬಿಡುಗಡೆಯಾಗಿದೆ. ವೈಜಯಂತಿ ಮೂವೀಸ್‌ ಯೂಟ್ಯೂಬ್‌ ಚಾನಲ್‌ನಲ್ಲಿ ಹಾಡು ರಿಲೀಸ್‌ ಆಗಿದೆ. ನಟ ಪ್ರಭಾಸ್‌ ಅವರು ನಟಿಸಿರುವ ಈ ಚಿತ್ರದ ಹಾಡಿಗೆ ಮೊದಲ ಸಲ ಪಂಜಾಬಿ ಗಾಯಕ ದಿಲ್ಜಿತ್‌ ದೋಸಾಂಜ್‌ ಧ್ವನಿ ನೀಡಿದ್ದಾರೆ. ಸಂತೋಷ್‌ ನಾರಾಯಣನ್‌ ಈ ಹಾಡಿಗೆ ಸಂಗೀತ ನೀಡಿದ್ದಾರೆ.

    ಪಕ್ಕಾ ಮಾಸ್‌ ಅವತಾರದಲ್ಲಿ ನಟ ಪ್ರಭಾಸ್‌ ಈ ಹಾಡಿನಲ್ಲಿ ಎದುರಾಗಿದ್ದಾರೆ. ತಲೆಗೆ ಟರ್ಬನ್‌ ಧರಿಸಿ ಮತ್ತು ಪಂಚೆಯಲ್ಲಿ ಮಿಂಚಿದ್ದಾರೆ. ಈಗಾಗಲೇ ಟ್ರೇಲರ್‌ ಮೂಲಕ ಎಲ್ಲರ ಗಮನ ಸೆಳೆದ ಈ ಸಿನಿಮಾ, ಇದೀಗ ಭೈರವ ಆಂಥಮ್‌ ಮೂಲಕ ಕಿಕ್‌ ಹೆಚ್ಚಿಸುತ್ತಿದೆ. ತೆಲುಗು ಮಾತ್ರವಲ್ಲದೆ ಹಿಂದಿ, ತಮಿಳು, ಮಲಯಾಳಂ, ಕನ್ನಡ ಮತ್ತು ಇಂಗ್ಲಿಷ್ ಸೇರಿದಂತೆ ಬಹು ಭಾಷೆಗಳಲ್ಲಿ ಈ ಸಿನಿಮಾ ಬಿಡುಗಡೆಯಾಗಲಿದೆ.

     

    ಈ ವರ್ಷದ ಅತೀ ನಿರೀಕ್ಷಿತ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ‘ಕಲ್ಕಿ 2898 AD’ ಚಿತ್ರದಲ್ಲಿ ಅಮಿತಾಭ್‍ ಬಚ್ಚನ್, ಕಮಲ್ ಹಾಸನ್, ಪ್ರಭಾಸ್,‍ ದೀಪಿಕಾ ಪಡುಕೋಣೆ, ದಿಶಾ ಪಠಾಣಿ ಮುಂತಾದವರು ನಟಿಸಿದ್ದಾರೆ. ವೈಜಯಂತಿ ಮೂವೀಸ್ ಬ್ಯಾನರ್‌ನಡಿ ಅಶ್ವಿನಿ ದತ್‍ ನಿರ್ಮಿಸಿರುವ ಈ ಚಿತ್ರವನ್ನು ನಾಗ್‍ ಅಶ್ವಿನ್‍ ನಿರ್ದೇಶನ ಮಾಡಿದ್ದಾರೆ. ‘ಕಲ್ಕಿ 2898 AD’ ಚಿತ್ರವು ಜಗತ್ತಿನಾದ್ಯಂತ ಜೂನ್‍ 27ರಂದು ಬಿಡುಗಡೆ ಆಗಲಿದೆ.

  • ‘ಕಲ್ಕಿ’ಯಲ್ಲಿ ಬೋಲ್ಡ್‌ ಆಗಿ ಕಾಣಿಸಿಕೊಂಡ ದಿಶಾ ಪಟಾನಿ

    ‘ಕಲ್ಕಿ’ಯಲ್ಲಿ ಬೋಲ್ಡ್‌ ಆಗಿ ಕಾಣಿಸಿಕೊಂಡ ದಿಶಾ ಪಟಾನಿ

    ಡಾರ್ಲಿಂಗ್‌ ಪ್ರಭಾಸ್, ದೀಪಿಕಾ ಪಡುಕೋಣೆ (Deepika Padukone) ನಟನೆಯ ‘ಕಲ್ಕಿ 2898 ಎಡಿ’ ಸಿನಿಮಾದಿಂದ ಹೊಸ ಅಪ್‌ಡೇಟ್‌ವೊಂದು ಹೊರಬಿದ್ದಿದೆ. ಬಾಲಿವುಡ್ ಹಾಟ್ ಬೆಡಗಿ ದಿಶಾ ಪಟಾನಿ ಲುಕ್ ಅನ್ನು ಚಿತ್ರತಂಡ ರಿವೀಲ್ ಮಾಡಿ ನಟಿಯ ಹುಟ್ಟುಹಬ್ಬಕ್ಕೆ ಶುಭಹಾರೈಸಿದ್ದಾರೆ. ಇದನ್ನೂ ಓದಿ:ಇತಿಹಾಸದಲ್ಲೇ ಮೊದಲು- ದರ್ಶನ್‌ ಇರುವ ಪೊಲೀಸ್‌ ಠಾಣೆಗೆ ಶಾಮಿಯಾನ!

    ‘ಕಲ್ಕಿ’ ಸಿನಿಮಾದಲ್ಲಿ ಘಟಾನುಘಟಿ ಸ್ಟಾರ್‌ಗಳ ದಂಡೇ ಇದೆ. ಹೀಗಿರುವಾಗ ಪ್ರಭಾಸ್ ಜೊತೆ ದಿಶಾ ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ತಿದ್ದಾರೆ. ನಟಿ ಬೋಲ್ಡ್ ಆಗಿ ಕಾಣಿಸಿಕೊಂಡಿರುವ ಚೆಂದದ ಲುಕ್ ಅನ್ನು ಚಿತ್ರತಂಡ ಬಿಡುಗಡೆ ಮಾಡಿದೆ. ಈ ಪೋಸ್ಟರ್‌ಗೆ ಅಭಿಮಾನಿಗಳಿಂದ ಬಗೆ ಬಗೆಯ ಕಾಮೆಂಟ್‌ಗಳು ಹರಿದು ಬರುತ್ತಿವೆ. ಇದನ್ನೂ ಓದಿ:ಮಾಜಿ ಐಪಿಎಸ್ ಅಧಿಕಾರಿ ಕಿರಣ್ ಬೇಡಿ ಬಯೋಪಿಕ್ ಅನೌನ್ಸ್

    ಅಂದಹಾಗೆ, ಇತ್ತೀಚೆಗೆ ಕಲ್ಕಿ ಟ್ರೈಲರ್ ಬಿಡುಗಡೆಯಾಗಿತ್ತು. ಜಗತ್ತಿನ ಮೊದಲ ಪ್ರದೇಶ ಮತ್ತು ಕೊನೆಯ ಪ್ರದೇಶ ಕಾಶಿ ಎನ್ನುಮ ಮೂಲಕ ಕಲ್ಕಿ ಟ್ರೈಲರ್ ಶುರುವಾಗುತ್ತೆ. ಜಗತ್ತಿನಿಂದ ಎಲ್ಲವನ್ನೂ ಕಿತ್ತುಕೊಂಡರೆ ಎಲ್ಲವೂ ಇರುತ್ತದೆ ಎನ್ನುವ ಕುತೂಹಲಕರ ಸಂಭಾಷೆಯಣೆಯಿದೆ. 6000 ಹಿಂದಿನ ಶಕ್ತಿ ಮತ್ತೆ ಬಂದಿದೆ. ಅಳಿವು- ಉಳಿವಿಗಾಗಿ ಹೋರಾಡುವವರ ದೃಶ್ಯ ತೋರಿಸಲಾಗಿದೆ. ಭೈರವನಾಗಿ ಯುದ್ಧಕ್ಕೆ ಪ್ರಭಾಸ್ (Prabhas) ಸಜ್ಜಾಗಿದ್ದಾರೆ. 2 ಜಗತ್ತಿನ ಹೋರಾಟವನ್ನು ಸೈನ್ಸ್ ಫಿಕ್ಷನ್ ಮೂಲಕ ಅದ್ಭುತವಾಗಿ ತೋರಿಸಿದ್ದಾರೆ.

    ಯುದ್ಧದಲ್ಲಿ ಇದುವರೆಗೂ ನಾನು ಸೋತಿಲ್ಲ, ಇದನ್ನೂ ಸಹ ನಾನು ಸೋಲಲ್ಲ ಎಂದು ಖಡಕ್ ಆಗಿ ಪ್ರಭಾಸ್ ಡೈಲಾಗ್ ಹೊಡೆದಿದ್ದಾರೆ. ಪ್ರಭಾಸ್ ಜೊತೆ ದೀಪಿಕಾ, ದಿಶಾ ಪಟಾನಿ ಮಿಂಚಿದ್ದಾರೆ. ಅಮಿತಾಭ್, ಕಮಲ್ ಹಾಸನ್ ಕೂಡ ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಟ್ರೈಲರ್‌ನ ವಿಎಫ್‌ಎಕ್ಸ್ ದೃಶ್ಯಕ್ಕೆ ಫ್ಯಾನ್ಸ್ ಮನಸೋತಿದ್ದಾರೆ.

    ಇನ್ನೂ ನಾಗ ಅಶ್ವೀನ್ ನಿರ್ದೇಶನದ ‘ಕಲ್ಕಿ 2898 ಎಡಿ’ ಸಿನಿಮಾ ಬಹುಭಾಷೆಗಳಲ್ಲಿ ಇದೇ ಜೂನ್ 27ಕ್ಕೆ ರಿಲೀಸ್ ಆಗಲಿದೆ. ಮೊದಲ ಬಾರಿಗೆ ದೀಪಿಕಾ ಪಡುಕೋಣೆ ಮಾತೃಭಾಷೆ ಕನ್ನಡದಲ್ಲಿ ಡಬ್ ಮಾಡಿರೋದು ವಿಶೇಷವಾಗಿದೆ.

  • ಕಲ್ಕಿ ಪ್ರಭಾಸ್‌ಗೆ ಜೊತೆಯಾದ ವಿಜಯ್ ದೇವರಕೊಂಡ

    ಕಲ್ಕಿ ಪ್ರಭಾಸ್‌ಗೆ ಜೊತೆಯಾದ ವಿಜಯ್ ದೇವರಕೊಂಡ

    ಸೌತ್ ಚಿತ್ರರಂಗದ ಬಹುನಿರೀಕ್ಷಿತ ಸಿನಿಮಾ ‘ಕಲ್ಕಿ 2898 ಎಡಿ’ (Kalki 2898 AD) ರಿಲೀಸ್‌ಗಾಗಿ ಫ್ಯಾನ್ಸ್ ಎದುರು ನೋಡ್ತಿದ್ದಾರೆ. ಪ್ರಭಾಸ್, ದೀಪಿಕಾ ಪಡುಕೋಣೆ (Deepika Padukone), ಬಿಗ್ ಬಿ ಅಂತಹ ಘಟಾನುಘಟಿ ಸ್ಟಾರ್‌ಗಳು ಇರುವ ಸಿನಿಮಾಗೆ ಮತ್ತೊಬ್ಬ ಸ್ಟಾರ್ ನಟನ ಎಂಟ್ರಿಯಾಗಿದೆ. ತೆಲುಗಿನ ರೌಡಿ ಬಾಯ್ ಕೂಡ ಸಾಥ್ ನೀಡುತ್ತಿದ್ದಾರೆ.‌ ಇದನ್ನೂ ಓದಿ:ಇನ್‍ಸ್ಟಾದಲ್ಲಿ ದರ್ಶನ್ ಅನ್‍ಫಾಲೋ‌, ಡಿಪಿ ಡಿಲೀಟ್ ಮಾಡಿದ ಪತ್ನಿ ವಿಜಯಲಕ್ಷ್ಮಿ!

    ಕಲ್ಕಿ ಪ್ರಭಾಸ್‌ಗೆ (Prabhas) ವಿಜಯ್ ದೇವರಕೊಂಡ ಈ ಚಿತ್ರದಲ್ಲಿ ಸಾಥ್ ನೀಡಲಿದ್ದಾರೆ. ವಿಶೇಷ ಪಾತ್ರದಲ್ಲಿ ವಿಜಯ್ (Vijay Devarakonda) ಕೂಡ ಕಾಣಿಸಿಕೊಳ್ಳಲಿದ್ದಾರೆ. ಅರ್ಜುನ ಎಂಬ ಪಾತ್ರದ ಮೂಲಕ ಬರುತ್ತಿದ್ದಾರೆ. ಪವರ್‌ಫುಲ್ ಪಾತ್ರಕ್ಕೆ ‘ಫ್ಯಾಮಿಲಿ ಸ್ಟಾರ್’ ನಟ ಜೀವತುಂಬಲಿದ್ದಾರೆ.

    ಅಂದಹಾಗೆ, ಜಗತ್ತಿನ ಮೊದಲ ಪ್ರದೇಶ ಮತ್ತು ಕೊನೆಯ ಪ್ರದೇಶ ಕಾಶಿ ಎನ್ನುಮ ಮೂಲಕ ಕಲ್ಕಿ ಟ್ರೈಲರ್ ಶುರುವಾಗುತ್ತೆ. ಜಗತ್ತಿನಿಂದ ಎಲ್ಲವನ್ನೂ ಕಿತ್ತುಕೊಂಡರೆ ಎಲ್ಲವೂ ಇರುತ್ತದೆ ಎನ್ನುವ ಕುತೂಹಲಕರ ಸಂಭಾಷೆಯಣೆಯಿದೆ. 6000 ಹಿಂದಿನ ಶಕ್ತಿ ಮತ್ತೆ ಬಂದಿದೆ. ಅಳಿವು- ಉಳಿವಿಗಾಗಿ ಹೋರಾಡುವವರ ದೃಶ್ಯ ತೋರಿಸಲಾಗಿದೆ. ಭೈರವನಾಗಿ ಯುದ್ಧಕ್ಕೆ ಪ್ರಭಾಸ್ ಸಜ್ಜಾಗಿದ್ದಾರೆ. 2 ಜಗತ್ತಿನ ಹೋರಾಟವನ್ನು ಸೈನ್ಸ್ ಫಿಕ್ಷನ್ ಮೂಲಕ ಅದ್ಭುತವಾಗಿ ತೋರಿಸಿದ್ದಾರೆ.

    ಯುದ್ಧದಲ್ಲಿ ಇದುವರೆಗೂ ನಾನು ಸೋತಿಲ್ಲ, ಇದನ್ನೂ ಸಹ ನಾನು ಸೋಲಲ್ಲ ಎಂದು ಖಡಕ್ ಆಗಿ ಪ್ರಭಾಸ್ ಡೈಲಾಗ್ ಹೊಡೆದಿದ್ದಾರೆ. ಪ್ರಭಾಸ್ ಜೊತೆ ದೀಪಿಕಾ, ದಿಶಾ ಪಟಾನಿ ಮಿಂಚಿದ್ದಾರೆ. ಅಮಿತಾಭ್, ಕಮಲ್ ಹಾಸನ್ ಕೂಡ ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಟ್ರೈಲರ್‌ನ ವಿಎಫ್‌ಎಕ್ಸ್ ದೃಶ್ಯಕ್ಕೆ ಫ್ಯಾನ್ಸ್ ಮನಸೋತಿದ್ದಾರೆ.

    ಇನ್ನೂ ನಾಗ ಅಶ್ವೀನ್ ನಿರ್ದೇಶನದ ‘ಕಲ್ಕಿ 2898’ ಎಡಿ ಸಿನಿಮಾ ಬಹುಭಾಷೆಗಳಲ್ಲಿ ಇದೇ ಜೂನ್ 27ಕ್ಕೆ ರಿಲೀಸ್ ಆಗಲಿದೆ. ಮೊದಲ ಬಾರಿಗೆ ದೀಪಿಕಾ ಪಡುಕೋಣೆ ಮಾತೃಭಾಷೆ ಕನ್ನಡದಲ್ಲಿ ಡಬ್ ಮಾಡಿರೋದು ವಿಶೇಷವಾಗಿದೆ.

  • ಯುದ್ಧದಲ್ಲಿ ಇದುವರೆಗೂ ನಾನು ಸೋತಿಲ್ಲ, ಸೋಲಲ್ಲ- ‘ಕಲ್ಕಿ’ ಪ್ರಭಾಸ್ ಮಾಸ್ ಡೈಲಾಗ್

    ಯುದ್ಧದಲ್ಲಿ ಇದುವರೆಗೂ ನಾನು ಸೋತಿಲ್ಲ, ಸೋಲಲ್ಲ- ‘ಕಲ್ಕಿ’ ಪ್ರಭಾಸ್ ಮಾಸ್ ಡೈಲಾಗ್

    ಸೌತ್‌ನ ಬಹುನಿರೀಕ್ಷಿತ ಸಿನಿಮಾ ‘ಕಲ್ಕಿ 2898 ಎಡಿ’ (Kalki 2898 AD) ಟ್ರೈಲರ್ ರಿಲೀಸ್ ಆಗಿದೆ. ಪ್ರಭಾಸ್ (Prabhas), ದೀಪಿಕಾ ಪಡುಕೋಣೆ ಮಾಸ್ ಆಗಿ ಎಂಟ್ರಿ ಕೊಟ್ಟಿದ್ದಾರೆ. ನವಯುಗ ಆರಂಭಕ್ಕೆ ಯುದ್ಧದ ಮೂಲಕ ಭೈರವನಾಗಿ ಪ್ರಭಾಸ್ ರಗಡ್ ಆಗಿ ಕಾಣಿಸಿಕೊಂಡಿದ್ದಾರೆ. ರೋಚಕವಾಗಿರುವ ಟ್ರೈಲರ್‌ಗೆ ಫ್ಯಾನ್ಸ್ ಫಿದಾ ಆಗಿದ್ದಾರೆ.

    ಜಗತ್ತಿನ ಮೊದಲ ಪ್ರದೇಶ ಮತ್ತು ಕೊನೆಯ ಪ್ರದೇಶ ಕಾಶಿ ಎನ್ನುಮ ಮೂಲಕ ಕಲ್ಕಿ ಟ್ರೈಲರ್ ಶುರುವಾಗುತ್ತೆ. ಜಗತ್ತಿನಿಂದ ಎಲ್ಲವನ್ನೂ ಕಿತ್ತುಕೊಂಡರೆ ಎಲ್ಲವೂ ಇರುತ್ತದೆ ಎನ್ನುವ ಕುತೂಹಲಕರ ಸಂಭಾಷೆಯಣೆಯಿದೆ. 6000 ಹಿಂದಿನ ಶಕ್ತಿ ಮತ್ತೆ ಬಂದಿದೆ. ಅಳಿವು- ಉಳಿವಿಗಾಗಿ ಹೋರಾಡುವವರ ದೃಶ್ಯ ತೋರಿಸಲಾಗಿದೆ. ಭೈರವನಾಗಿ ಯುದ್ಧಕ್ಕೆ ಪ್ರಭಾಸ್ ಸಜ್ಜಾಗಿದ್ದಾರೆ. 2 ಜಗತ್ತಿನ ಹೋರಾಟವನ್ನು ಸೈನ್ಸ್ ಫಿಕ್ಷನ್ ಮೂಲಕ ಅದ್ಭುತವಾಗಿ ತೋರಿಸಿದ್ದಾರೆ.

    ಯುದ್ಧದಲ್ಲಿ ಇದುವರೆಗೂ ನಾನು ಸೋತಿಲ್ಲ, ಇದನ್ನೂ ಸಹ ನಾನು ಸೋಲಲ್ಲ ಎಂದು ಖಡಕ್ ಆಗಿ ಡೈಲಾಗ್ ಹೊಡೆದಿದ್ದಾರೆ. ಪ್ರಭಾಸ್ ಜೊತೆ ದೀಪಿಕಾ, ದಿಶಾ ಪಟಾನಿ ಮಿಂಚಿದ್ದಾರೆ. ಅಮಿತಾಭ್, ಕಮಲ್ ಹಾಸನ್ ಕೂಡ ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಟ್ರೈಲರ್ ವಿಎಫ್‌ಎಕ್ಸ್ ದೃಶ್ಯಕ್ಕೆ ಫ್ಯಾನ್ಸ್ ಮನಸೋತಿದ್ದಾರೆ.

    ಇನ್ನೂ ನಾಗ ಅಶ್ವೀನ್ ನಿರ್ದೇಶನದ ‘ಕಲ್ಕಿ 2898 ಎಡಿ’ (Kalki 2898 AD) ಸಿನಿಮಾ ಬಹುಭಾಷೆಗಳಲ್ಲಿ ಇದೇ ಜೂನ್ 27ಕ್ಕೆ ರಿಲೀಸ್ ಆಗಲಿದೆ. ಮೊದಲ ಬಾರಿಗೆ ದೀಪಿಕಾ ಪಡುಕೋಣೆ (Deepika Padukone) ಮಾತೃಭಾಷೆ ಕನ್ನಡದಲ್ಲಿ ಡಬ್ ಮಾಡಿರೋದು ವಿಶೇಷವಾಗಿದೆ.

  • Kalki 2898 AD: ಹೊಸ ಪೋಸ್ಟರ್‌ ಹಂಚಿಕೊಂಡ ದೀಪಿಕಾ ಪಡುಕೋಣೆ

    Kalki 2898 AD: ಹೊಸ ಪೋಸ್ಟರ್‌ ಹಂಚಿಕೊಂಡ ದೀಪಿಕಾ ಪಡುಕೋಣೆ

    ‘ಪಠಾಣ್’ ಬೆಡಗಿ ದೀಪಿಕಾ ಪಡುಕೋಣೆ (Deepika Padukone) ಮೊದಲ ಮಗು ಆಗಮನವಾಗುತ್ತಿರುವ ಖುಷಿಯಲ್ಲಿದ್ದಾರೆ. ಸದ್ಯ ದೀಪಿಕಾ ಮತ್ತು ಪ್ರಭಾಸ್ ನಟಿಸಿರುವ ‘ಕಲ್ಕಿ 2898 ಎಡಿ’ (Kalki 2898 AD) ಸಿನಿಮಾ ಕೂಡ ರಿಲೀಸ್‌ಗೆ ಸಿದ್ಧವಾಗಿದೆ. ಚಿತ್ರದ ಹೊಸ ಪೋಸ್ಟರ್‌ವೊಂದನ್ನು ನಟಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ:3ನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿರುವ ಮೋದಿಗೆ ರಿಷಬ್ ವಿಶ್

    ‘ಕಲ್ಕಿ 2898 ಎಡಿ’ ಸಿನಿಮಾದಲ್ಲಿ ಮಲ್ಟಿ ಸ್ಟಾರ್‌ಗಳು ನಟಿಸಿದ್ದಾರೆ. ದೀಪಿಕಾ ಪಡುಕೋಣೆ ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಚಿತ್ರದಲ್ಲಿನ ತಾವು ನಟಿಸಿರುವ ಪಾತ್ರದ ಲುಕ್ ಅನ್ನು ನಟಿ ಹಂಚಿಕೊಂಡಿದ್ದಾರೆ. ಪತ್ನಿಯ ಪೋಸ್ಟ್‌ಗೆ ಸ್ಟನರ್ ಎಂದು ರಣ್‌ವೀರ್ ಸಿಂಗ್ ಕಾಮೆಂಟ್ ಮಾಡಿದ್ದಾರೆ.

    ಜೂನ್ 10ರಂದು ಕಲ್ಕಿ ಸಿನಿಮಾದ ಟ್ರೈಲರ್ ಬಿಡುಗಡೆಯಾಗಲಿದೆ. ಈಗಾಗಲೇ ಚಿತ್ರದ ಪೋಸ್ಟರ್‌ಗೆ ಉತ್ತಮ ರೆಸ್ಪಾನ್ಸ್ ಸಿಕ್ಕಿದ್ದು, ಟ್ರೈಲರ್‌ಗಾಗಿ ಫ್ಯಾನ್ಸ್ ಎದುರು ನೋಡ್ತಿದ್ದಾರೆ. ಇದನ್ನೂ ಓದಿ:ಚಂದನ್ ಶೆಟ್ಟಿ, ನಿವೇದಿತಾ ಡಿವೋರ್ಸ್ ಬಗ್ಗೆ ರಾಗಿಣಿ ರಿಯಾಕ್ಷನ್


    ಇನ್ನೂ ಈ ವರ್ಷದ ಬಹು ನಿರೀಕ್ಷಿತ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಕಲ್ಕಿ 2898 ಎಡಿ ಚಿತ್ರದಲ್ಲಿ ಅಮಿತಾಬ್ ಬಚ್ಚನ್, ಕಮಲ್ ಹಾಸನ್, ಪ್ರಭಾಸ್ (Prabhas), ದೀಪಿಕಾ ಪಡುಕೋಣೆ, ದಿಶಾ ಪಠಾಣಿ ಮುಂತಾದವರು ನಟಿಸಿದ್ದಾರೆ. ‘ಕಲ್ಕಿ 2898 ಎಡಿ’ ಚಿತ್ರವು ಜಗತ್ತಿನಾದ್ಯಂತ ಜೂನ್ 27ರಂದು ಬಿಡುಗಡೆ ಆಗಲಿದೆ.

  • ಪ್ರಭಾಸ್ ನಟನೆಯ ಕಲ್ಕಿ: ಜೂನ್ 10ಕ್ಕೆ ಟ್ರೈಲರ್ ರಿಲೀಸ್

    ಪ್ರಭಾಸ್ ನಟನೆಯ ಕಲ್ಕಿ: ಜೂನ್ 10ಕ್ಕೆ ಟ್ರೈಲರ್ ರಿಲೀಸ್

    ಬುಜ್ಜಿ ಅಂಡ್ ಭೈರವ ಸಿರೀಸ್ ಮೂಲಕ ಗಮನ ಸೆಳೆದ ಕಲ್ಕಿ 2898 AD (Kalki)  ಸಿನಿಮಾ ಇದೀಗ ಟ್ರೇಲರ್ ಆಗಮನದ ಸುದ್ದಿ ನೀಡಿದೆ. ಈಗಾಗಲೇ ಸಿನಿಮಾಪ್ರೇಮಿಗಳ ಗಮನ ಸೆಳೆದ ಈ ಸಿನಿಮಾ, ಒಂದಾದ ಮೇಲೊಂದು ಅಪ್‌ಡೇಟ್‌ ನೀಡುತ್ತ ನೋಡುಗನನ್ನು ಸೆಳೆಯುತ್ತಿದೆ. ಇದೀಗ ಟ್ರೈಲರ್ (Trailer) ಕಣ್ತುಂಬಿಕೊಳ್ಳಲು ದಿನಾಂಕ ನಿಗದಿ ಮಾಡಿದೆ ಚಿತ್ರತಂಡ.

    ಕೇವಲ ತೆಲುಗು ಪ್ರೇಕ್ಷಕರು ಮಾತ್ರವಲ್ಲದೆ, ಇಡೀ ದೇಶ, ಪ್ರಭಾಸ್‌ ನಟನೆಯ ಕಲ್ಕಿ 2898 AD ಸಿನಿಮಾಕ್ಕಾಗಿ ಕಾಯುತ್ತಿದೆ. ಒಂದಾದ ನಂತರ ಬಂದು ವಿಶೇಷತೆಗಳನ್ನು ಈ ಸಿನಿಮಾ ಪ್ರೇಕ್ಷಕರ ಮಡಿಲಿಗೆ ಕಾಯುತ್ತಲೇ ಬಂದಿರುವ ಕಲ್ಕಿ ಸಿನಿಮಾ ತಾರಾಗಣದ ವಿಚಾರದಲ್ಲೂ ಕುತೂಹಲ ಮೂಡಿಸಿದೆ. ಅದರಂತೆ  ಟ್ರೈಲರ್ ಮೂಲಕ ಮತ್ತಷ್ಟು ರೋಚಕತೆ ಉಕ್ಕಿಸಲು ಚಿತ್ರತಂಡ ಸಜ್ಜಾಗಿದೆ. ಜೂನ್‌ 10ರಂದು ಬಹುಭಾಷೆಗಳಲ್ಲಿ ಕಲ್ಕಿ ಚಿತ್ರದ ಟ್ರೈಲರ್ ಬಿಡುಗಡೆ ಆಗಲಿದೆ.

    ಅಮಿತಾಭ್ ಬಚ್ಚನ್, ಕಮಲ್ ಹಾಸನ್, ಪ್ರಭಾಸ್ (Prabhas), ದೀಪಿಕಾ ಪಡುಕೋಣೆ ಮತ್ತು ದಿಶಾ ಪಟಾನಿ ನಟಿಸಿರುವ ಕಲ್ಕಿ 2898 AD ಸಿನಿಮಾದ ಟ್ರೇಲರ್‌ ಜೂನ್ 10ರಂದು ನೋಡುಗರ ಎದುರು ತರಲು ನಿರ್ಮಾಣ ಸಂಸ್ಥೆ ಸಿದ್ಧವಾಗಿದೆ. ಈಗಾಗಲೇ ಅಮೆಜಾನ್ ಪ್ರೈಮ್‌ನಲ್ಲಿ ಬಿಡುಗಡೆ ಆಗಿರುವ ಬಿ&ಬಿ ಬುಜ್ಜಿ ಮತ್ತು ಭೈರವ ಸಿರೀಸ್‌ ಮೂಲಕ ಇನ್ನಷ್ಟು ಕ್ಯೂರಿಯಾಸಿಟಿ ಮೂಡಿಸಿದ ನಿರ್ದೇಶಕ ನಾಗ್ ಅಶ್ವಿನ್‌, ಇದೀಗ ಟ್ರೇಲರ್‌ನಲ್ಲೇನಿರಲಿದೆ ಎಂಬುದನ್ನು ತೋರಿಸಲು ಆಗಮಿಸುತ್ತಿದ್ದಾರೆ.

    ಟ್ರೈಲರ್ ಬಿಡುಗಡೆಯ ದಿನಾಂಕವನ್ನು ಹೊಸ ಪೋಸ್ಟರ್‌ನೊಂದಿಗೆ ಚಿತ್ರನಿರ್ಮಾಣ ಸಂಸ್ಥೆ ಘೋಷಿಸಿದೆ. ಪರ್ವತದ ಶಿಖರದ ಮೇಲೆ ನಿಂತ ಭಂಗಿಯಲ್ಲಿ ಭೈರವ ಸೂಪರ್‌ ಹೀರೋ ರೀತಿಯಲ್ಲಿ ಕಂಡಿದ್ದಾನ್.‌ ಅಂದಹಾಗೆ ವೈಜಯಂತಿ ಮೂವೀಸ್ ಬ್ಯಾನರ್‌ನಡಿ ಅಶ್ವಿನಿ ದತ್‍ ನಿರ್ಮಿಸಿರುವ ಈ ಚಿತ್ರವನ್ನು ನಾಗ್‍ ಅಶ್ವಿನ್‍ ನಿರ್ದೇಶನ ಮಾಡಿದ್ದಾರೆ. ‘ಕಲ್ಕಿ 2898 AD’ ಚಿತ್ರವು ಜಗತ್ತಿನಾದ್ಯಂತ ಜೂನ್‍ 27ರಂದು ತೆಲುಗು, ತಮಿಳು, ಕನ್ನಡ, ಮಲಯಾಳಂ, ಹಿಂದಿ ಸೇರಿ ಇನ್ನೂ ಹಲವು ಭಾಷೆಗಳಲಿ ಈ ಸಿನಿಮಾ ಬಿಡುಗಡೆ ಆಗಲಿದೆ.

  • ಪ್ರಶಾಂತ್‌ ನೀಲ್‌ ಬರ್ತ್‌ಡೇಗೆ ಪ್ರಭಾಸ್‌ ಲವ್ಲಿ ವಿಶ್

    ಪ್ರಶಾಂತ್‌ ನೀಲ್‌ ಬರ್ತ್‌ಡೇಗೆ ಪ್ರಭಾಸ್‌ ಲವ್ಲಿ ವಿಶ್

    ‘ಕೆಜಿಎಫ್’, ‘ಸಲಾರ್’ ನಿರ್ದೇಶಕ ಪ್ರಶಾಂತ್ ನೀಲ್‌ಗೆ (Prashanth Neel) ಇಂದು (ಜೂನ್.4) ಹುಟ್ಟುಹಬ್ಬದ ಸಂಭ್ರಮವಾಗಿದ್ದು, ಡಾರ್ಲಿಂಗ್ ಪ್ರಭಾಸ್ (Prabhas) ವಿಶೇಷವಾಗಿ ಶುಭಕೋರಿದ್ದಾರೆ. ಪ್ರಭಾಸ್‌ ಬಳಿಕ ಅನೇಕ ಸ್ಟಾರ್‌ ನಟ- ನಟಿಯರು ಪ್ರಶಾಂತ್‌ ನೀಲ್‌ ಹುಟ್ಟುಹಬ್ಬಕ್ಕೆ ಶುಭಕೋರಿದ್ದಾರೆ. ಇದನ್ನೂ ಓದಿ:ಹೆಣ್ಣು ಮಗುವಿಗೆ ಜನ್ಮ ನೀಡಿದ ವರುಣ್ ಧವನ್ ಪತ್ನಿ ನತಾಶಾ

    43ನೇ ವರ್ಷಕ್ಕೆ ಕಾಲಿಟ್ಟಿರುವ ಪ್ರಶಾಂತ್ ನೀಲ್ ‘ಲವ್ ಯೂ ಸರ್’ ಎಂದು ಸ್ವೀಟ್ ಆಗಿ ಪ್ರಭಾಸ್ ವಿಶ್ ಮಡಿದ್ದಾರೆ. ಸುಂದರವಾದ ಜನ್ಮದಿನದ ಶುಭಾಶಯಗಳು ಎಂದಿದ್ದಾರೆ. ಪ್ರಶಾಂತ್ ನೀಲ್‌ಗೆ ಮಲಯಾಳಂ ನಟ ಪೃಥ್ವಿರಾಜ್ ಸುಕುಮಾರನ್, ಹೊಂಬಾಳೆ ಸಂಸ್ಥೆ ಸೇರಿದಂತೆ ಅನೇಕರು ಬರ್ತ್‌ಡೇಗೆ ವಿಶ್ ಮಾಡಿದ್ದಾರೆ.

    ಅಂದಹಾಗೆ, ಸಲಾರ್ (Salaar) ಸಿನಿಮಾದ ನಂತರ ಇತ್ತೀಚೆಗೆ  ‘ಸಲಾರ್ 2’ ಸಿನಿಮಾ ನಿಂತು ಹೋಗಿದೆ. ಇಬ್ಬರ ನಡುವೆ ಉತ್ತಮ ಬಾಂಧವ್ಯವಿಲ್ಲ ಎಂದು ಎಂದೆಲ್ಲಾ ಸುದ್ದಿ ಹಬ್ಬಿತ್ತು. ಇದೀಗ ಪ್ರಭಾಸ್ ವಿಶ್ ಮಾಡಿರುವ ರೀತಿ ನೋಡಿ ಹಬ್ಬಿರುವ ವದಂತಿಗಳಿಗೆ ತೆರೆ ಬಿದ್ದಿದೆ.

    ಪ್ರಶಾಂತ್ ನೀಲ್ ಸದ್ಯ ‘ದೇವರ’ (Devara Film) ಸಿನಿಮಾವನ್ನು ಕೈಗೆತ್ತಿಕೊಂಡಿದ್ದಾರೆ. ಜ್ಯೂ.ಎನ್‌ಟಿಆರ್‌ಗೆ ನಿರ್ದೇಶನ ಮಾಡಿದ್ದಾರೆ. ಈ ಚಿತ್ರದ ಬಳಿಕ ‘ಸಲಾರ್ 2’ ಸಿನಿಮಾದತ್ತ ಗಮನ ಕೊಡಲಿದ್ದಾರೆ.

  • ‘ಕಲ್ಕಿ’ ಚಿತ್ರ ತಂಡ ಬುಜ್ಜಿಗೆ ಖರ್ಚು ಮಾಡಿದ್ದು ಎಷ್ಟು ಕೋಟಿ?.. ಸಿಕ್ತು ಉತ್ತರ

    ‘ಕಲ್ಕಿ’ ಚಿತ್ರ ತಂಡ ಬುಜ್ಜಿಗೆ ಖರ್ಚು ಮಾಡಿದ್ದು ಎಷ್ಟು ಕೋಟಿ?.. ಸಿಕ್ತು ಉತ್ತರ

    ಪ್ರಭಾಸ್ ನಟನೆಯ ಕಲ್ಕಿ (Kalki) ಸಿನಿಮಾದಲ್ಲಿ ಕಥಾನಾಯಕನ ಜೊತೆ ರೋಬೊ ರೀತಿಯ ಕಲ್ಕಿ ವಾಹನವಿದೆ. ಇದೊಂದು ರೀತಿಯಲ್ಲಿ ವಿಚಿತ್ರ ವಾಹನ. ಕಾರಿನ ರೀತಿಯಲ್ಲಿ ಅದು ಕಂಡರೆ, ಅದಕ್ಕೆ ಮೂರೇ ಮೂರು ಚಕ್ರ. ಆ ಚಕ್ರ ಕೂಡ ಸಾಮಾನ್ಯವಾಗಿಲ್ಲ. ಒಬ್ಬರೇ ಒಬ್ಬರು ಕುಳಿತುಕೊಳ್ಳಬಹುದಾದ ಬುಜ್ಜಿ ವಾಹನವು ವಿಶೇಷ ರೀತಿಯಲ್ಲಿ ವಿನ್ಯಾಸ ಮಾಡಲಾಗಿದೆ. ಈ ವಾಹನಕ್ಕೆ ಬರೋಬ್ಬರಿ ಏಳು ಕೋಟಿ ರೂಪಾಯಿ ಖರ್ಚು ಮಾಡಲಾಗಿದೆ.

    ಇದೊಂದು ಮ್ಯಾನ್‍್ಮೇಡ್ ವಿಶೇಷ ಕಾರು ಆಗಿದ್ದು, ಮಹೇಂದ್ರ ಕಂಪೆನಿಯು ಈ ವಿಶೇಷ ವಾಹನದ ವಿನ್ಯಾಸ ಮಾಡಲಾಗಿದೆ. ಈ ವಾಹನವನ್ನು ಓಡಿಸೋದು ಅಷ್ಟು ಸುಲಭವಲ್ಲ ಎನ್ನಲಾಗುತ್ತಿದೆ. ಆದರೂ, ಪ್ರಭಾಸ್, ನಾಗಚೈತನ್ಯ ಸೇರಿದಂತೆ ಹಲವು ಕಲಾವಿದರು ಈ ಬುಜ್ಜಿ ಸವಾರಿ ಮಾಡಿದ್ದಾರೆ. ಅಲ್ಲದೇ, ಈ ಕಾರನ್ನು ಸಿನಿಮಾದ ಬಳಕೆಗೂ ತೆಗೆದುಕೊಂಡು ಹೋಗಲಾಗುತ್ತಿದೆ.

    ಬುಜ್ಜಿ ಚಿಕ್ಕ ಸ್ವರೂಪದ ಕಾರುಗಳನ್ನು ರೆಡಿ ಮಾಡಿಸಿ, ಕಲಾವಿದರ ಮಕ್ಕಳಿಗೆ ಉಡುಗೊರೆಯಾಗಿ ನೀಡುತ್ತಿದ್ದಾರೆ ಪ್ರಭಾಸ್. ರಾಮ್ ಚರಣ್ ಅವರ ಪುತ್ರಿಗೆ ಚಿಕ್ಕದೊಂದು ಕಾರು ಮತ್ತು ಸಂದೇಶದ ಕಾರ್ಡ್ ನೀಡಿದ್ದಾರೆ. ಈ ವಿವರವನ್ನು ರಾಮ್ ಚರಣ್ ಪತ್ನಿ ಉಪಾಸನಾ ಸೋಷಿಯಲ್ ಮೀಡಿಯಾದಲ್ಲಿ ಫೋಟೋ ಹಾಕಿ ಪೋಸ್ಟ್ ಮಾಡಿದ್ದಾರೆ.

     

    ‘ಕಲ್ಕಿ’ ಸಿನಿಮಾದಲ್ಲಿ ಬುಜ್ಜಿಗೆ ಸಾಕಷ್ಟು ಮಹತ್ವವನ್ನು ನೀಡಲಾಗಿದೆಯಂತೆ. ಬುಜ್ಜಿಗಾಗಿಯೇ ಸಿನಿಮಾ ತಂಡ ಮೊನ್ನೆಯಷ್ಟೇ ವಿಶೇಷ ಕಾರ್ಯಕ್ರವನ್ನೂ ಆಯೋಜನೆ ಮಾಡಿತ್ತು. ಆ ಬುಜ್ಜಿಗೆ ಧ್ವನಿದಾನ ಮಾಡಿದ್ದಾರಂತೆ ನಟಿ ಕೀರ್ತಿ ಸುರೇಶ್ (Keerthi Suresh). ಬುಜ್ಜಿ ಕೂಡ ಪಾತ್ರದಂತೆ ಚಿತ್ರದುದ್ದಕ್ಕೂ ಇರಲಿದೆಯಂತೆ.

  • ಒಟಿಟಿಯಲ್ಲಿ ‘ಕಲ್ಕಿ 2898 AD’ ಚಿತ್ರದ B & B ಅನಿಮೇಷನ್ ಸಿರೀಸ್

    ಒಟಿಟಿಯಲ್ಲಿ ‘ಕಲ್ಕಿ 2898 AD’ ಚಿತ್ರದ B & B ಅನಿಮೇಷನ್ ಸಿರೀಸ್

    2024 ರ ಭಾರತೀಯ ಮಹಾಕಾವ್ಯ ವೈಜ್ಞಾನಿಕ ಕಾಲ್ಪನಿಕ ಸಾಹಸ ಚಲನಚಿತ್ರ ಹಾಗೂ ‘ಪ್ಯಾನ್‍ ಇಂಡಿಯಾ ಸೂಪರ್ ಸ್ಟಾರ್’ ಪ್ರಭಾಸ್‍ ಅಭಿನಯದ ‘ಕಲ್ಕಿ 2898 AD’ (Kalki) ಬಿಡುಗಡೆಗೂ ಪೂರ್ವದಲ್ಲೇ ಸಾಕಷ್ಟು ಕುತೂಹಲ ಮೂಡಿಸಿರುವ ಚಿತ್ರ. ಈವರೆಗೂ ಯಾರು ಮಾಡಿರದ ವಿನೂತನ ಪ್ರಯೋಗಕ್ಕೆ ಈ ಚಿತ್ರತಂಡ ಮುಂದಾಗಿದೆ‌.  ಪ್ರಭಾಸ್ (Prabhas) ಈ ಚಿತ್ರದಲ್ಲಿ ಭೈರವನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದು, ಭೈರವನ ನಂಬಿಕಸ್ಥ ಗೆಳೆಯನಾಗಿ ಬುಜ್ಜಿ(ವಿಶೇಷ ಕಾರ್)ಪಾತ್ರವಿದೆ‌. ಈ ಎರಡು ಪಾತ್ರಗಳನಿಟ್ಟುಕೊಂಡು ಚಿತ್ರತಂಡ “B&B” ಎಂಬ ಹದಿನೈದು ಹದಿನೈದು ನಿಮಿಷಗಳ ಎರಡು ಅನಿಮೇಷನ್‌ ಸಿರೀಸ್ ಬಿಡುಗಡೆ ಮಾಡಿದೆ.

    ದೇಶದ ಪ್ರಮುಖ ನಗರಗಳ ಚಿತ್ರಮಂದಿರಗಳಲ್ಲಿ ಈ ಅನಿಮೇಷನ್‌ ಸಿರೀಸ್ ಏಕಕಾಲಕ್ಕೆ ಬಿಡುಗಡೆಯಾಗಿದೆ‌. ಈ ಎರಡು ಭಾಗಗಳು ಮೇ 31 ರಿಂದ ಅಮೇಜಾನ್ ಪ್ರೈಮ್ ನಲ್ಲಿ ನೋಡಲು ಲಭ್ಯವಿದೆ. ಈ ಅನಿಮೇಷನ್‌ ಸೀರಿಸ್ ನಲ್ಲಿರುವ ಭೈರವ ಹಾಗೂ ಬುಜ್ಜಿಯ ಜುಗಲ್ ಬಂದಿಗೆ ಪ್ರೇಕ್ಷಕರು ಫಿದಾ ಆಗಿದ್ದಾರೆ. ಇದು ಚಿತ್ರದ ಪ್ರಚಾರಕಷ್ಟೇ ಮಾಡಿರುವ ಅನಿಮೇಷನ್‌ ಸಿರೀಸ್. ಚಿತ್ರದ ಕಥೆಯೆ ಬೇರೆ. ಇದೇ ಬೇರೆ  ಎಂದು ನಿರ್ದೇಶಕ ನಾಗ್ ಅಶ್ವಿನ್ ತಿಳಿಸಿದ್ದಾರೆ.

    ಕಳೆದ ಅರ್ಧ ಶತಕದಿಂದ ಸಾಕಷ್ಟು ಸೂಪರ್ ಹಿಟ್ ಚಿತ್ರಗಳನ್ನು ನಿರ್ಮಿಸಿರುವ ವೈಜಯಂತಿ ಮೂವೀಸ್ ಸಂಸ್ಥೆ ಈ ಚಿತ್ರವನ್ನು ನಿರ್ಮಿಸಿದ್ದು, ಹೆಸರಾಂತ ಕೆ.ವಿ.ಎನ್ ಪ್ರೊಡಕ್ಷನ್ಸ್ ಈ ಚಿತ್ರದ ವಿತರಣೆ ಮಾಡುತ್ತಿದೆ. ಬೆಂಗಳೂರಿನಲ್ಲೂ “ಕಲ್ಕಿ 2898 AD” ಚಿತ್ರದ ಅನಿಮೇಷನ್‌ ಸಿರೀಸ್ ಬಿಡುಗಡೆ ಮಾಡಲಾಯಿತು. ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಕೆ.ವಿ.ಎನ್ ಪ್ರೊಡಕ್ಷನ್ ನ ಸುಪ್ರೀತ್ ಅವರು ಈ ಅನಿಮೇಷನ್‌ ಸಿರೀಸ್ ಬೆಂಗಳೂರು, ಮುಂಬೈ, ದೆಹಲಿ ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಏಕಕಾಲಕ್ಕೆ ಬಿಡುಗಡೆ ಮಾಡಲಾಗಿದೆ‌‌. ಎರಡು ಭಾಗಗಳಲ್ಲಿ ಇಂಗ್ಲೀಷ್ ಹಾಗೂ ತೆಲುಗು ಭಾಷೆಗಳಲ್ಲಿ ಮೂಡಿಬಂದಿರುವ ಈ ಅನಿಮೇಷನ್‌ ಸಿರೀಸ್ ಅನ್ನು ಅಮೇಜಾನ್ ಪ್ರೈಮ್ ನಲ್ಲಿ ವೀಕ್ಷಿಸಬಹುದು ಎಂದರು.

    ಈ ವರ್ಷದ ಬಹು ನಿರೀಕ್ಷಿತ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ‘ಕಲ್ಕಿ 2898 AD’ ಚಿತ್ರದಲ್ಲಿ ಅಮಿತಾಭ್‍ ಬಚ್ಚನ್, ಕಮಲ್ ಹಾಸನ್, ಪ್ರಭಾಸ್,‍ ದೀಪಿಕಾ ಪಡುಕೋಣೆ, ದಿಶಾ ಪಠಾಣಿ ಮುಂತಾದವರು ನಟಿಸಿದ್ದಾರೆ.  ‘ಕಲ್ಕಿ 2898 AD’ ಚಿತ್ರವು ಜಗತ್ತಿನಾದ್ಯಂತ ಜೂನ್‍ 27ರಂದು ಬಿಡುಗಡೆ ಆಗಲಿದೆ.