Tag: ಪ್ರಮಾಣ

  • ಮನೆಯಿಂದ ಹೊರ ಬಂದವ್ರಿಗೆ ದೇವರ ಹೆಸರಲ್ಲಿ ಪ್ರಮಾಣ ಮಾಡಿಸಿದ ಪಿಎಸ್‍ಐ

    ಮನೆಯಿಂದ ಹೊರ ಬಂದವ್ರಿಗೆ ದೇವರ ಹೆಸರಲ್ಲಿ ಪ್ರಮಾಣ ಮಾಡಿಸಿದ ಪಿಎಸ್‍ಐ

    ಹಾವೇರಿ: ಭಾರತ ಲಾಕ್‍ಡೌನ್ ಇದ್ದರೂ ಅನಗತ್ಯವಾಗಿ ಮನೆಯಿಂದ ಹೊರಗೆ ಓಡಾಡುತ್ತಿದ್ದವರನ್ನು ತಡೆದು ಪಿಎಸ್‍ಐ ಒಬ್ಬರು ದೇವರ ಹೆಸರಲ್ಲಿ ಪ್ರಮಾಣ ಮಾಡಿಸಿದ ಘಟನೆ ಹಾವೇರಿ ಜಿಲ್ಲೆ ರಾಣೆಬೆನ್ನೂರು ನಗರದಲ್ಲಿ ನಡೆದಿದೆ.

    ರಾಣೆಬೆನ್ನೂರು ನಗರ ಠಾಣೆ ಪಿಎಸ್‍ಐ ಪ್ರಭು ಕೆಳಗನಿಮನಿ ಅನಗತ್ಯವಾಗಿ ಹೊರಗೆ ಓಡಾಡೋರಿಗೆ ಈ ರೀತಿಯಾಗಿ ದೇವರ ಹೆಸರಲ್ಲಿ ಪ್ರಮಾಣ ಮಾಡಿಸಿದ್ದಾರೆ. ಕೊರೊನಾ ಸೋಂಕು ಹರಡುವುದನ್ನು ತಡೆಯುವ ಸಲುವಾಗಿ ಯಾರೂ ಮನೆ ಬಿಟ್ಟು ಹೊರಗೆ ಓಡಾಡಬೇಡಿ ಎಂದು ಪಿಎಸ್‍ಐ ನಗರದಲ್ಲಿ ಸಾಕಷ್ಟು ಬಾರಿ ತಿಳಿ ಹೇಳಿದ್ದರು. ಆದರೂ ಕೆಲವರು ಅನಗತ್ಯವಾಗಿ ಹೊರಗೆ ಓಡಾಡುತ್ತಿದ್ದರು.

    ಇದರಿಂದ ಬೇಸರಗೊಂಡ ಪಿಎಸ್‍ಐ ಪ್ರಭು, ಯಾರಿಗೂ ಹೊಡೆಯದೆ, ಬಡಿಯದೆ ಎಲ್ಲರನ್ನೂ ಸಾಮಾಜಿಕ ಅಂತರ ಕಾಯ್ದುಕೊಂಡು ನಿಲ್ಲಿಸಿ. ಕೈ ಮುಂದೆ ಮಾಡಿಸಿ ದೇವರ ಹೆಸರಿನಲ್ಲಿ ಮನೆಯಿಂದ ಹೊರಗೆ ಓಡಾಡೋದಿಲ್ಲ ಎಂದು ಪ್ರಮಾಣ ಮಾಡಿಸಿದ್ದಾರೆ. ಪಿಎಸ್‍ಐ ಸ್ವತಃ ತಾವೇ ಹೊರಗೆ ಓಡಾಡುತ್ತಿದ್ದವರನ್ನು ನಿಲ್ಲಿಸಿ ದೇವರ ಹೆಸರಲ್ಲಿ ಪ್ರಮಾಣ ಮಾಡಿಸಿ, ಬುದ್ಧಿ ಮಾತು ಹೇಳಿ ಕಳಿಸಿದ್ದಾರೆ.

  • ಚಾಮುಂಡಿ ಬೆಟ್ಟದಲ್ಲಿ ವೈಶಂಪಾಯನ ಡ್ರಾಮಾ – ದುರ್ಯೋಧನನಿಗೆ ಹೋಲಿಸಿ ವಿಶ್ವನಾಥ್ ವಾಗ್ದಾಳಿ

    ಚಾಮುಂಡಿ ಬೆಟ್ಟದಲ್ಲಿ ವೈಶಂಪಾಯನ ಡ್ರಾಮಾ – ದುರ್ಯೋಧನನಿಗೆ ಹೋಲಿಸಿ ವಿಶ್ವನಾಥ್ ವಾಗ್ದಾಳಿ

    – ಜೆಡಿಎಸ್ ಅಂದ್ರೆ ಕಣ್ಣೀರು, ಕಣ್ಣೀರು ಅಂದ್ರೆ ಜೆಡಿಎಸ್
    – ಹೇಡಿ, ಪಲಾಯನವಾದಿ, ನೀನೊಬ್ಬ ಸುಳ್ಳುಗಾರ

    ಮೈಸೂರು: ಚಾಮುಂಡೇಶ್ವರಿ ಬೆಟ್ಟದಲ್ಲಿ ಮಹಾಭಾರತದ ಕ್ಲೈಮ್ಯಾಕ್ಸ್ ಸೀನ್ ನಡೆದಿದ್ದು, ಮಾಜಿ ಸಚಿವ ಸಾರಾ ಮಹೇಶ್ ಅವರನ್ನು ದುರ್ಯೋಧನನಿಗೆ ಹೋಲಿಸಿ ಅನರ್ಹ ಶಾಸಕ ಎಚ್.ವಿಶ್ವನಾಥ್ ವಾಗ್ದಾಳಿ ನಡೆಸಿದ್ದಾರೆ.

    ನಿರೀಕ್ಷೆಯಂತೆಯೇ ಇಂದು ಬೆಳಗ್ಗೆ ಚಾಮುಂಡೇಶ್ವರಿ ಬೆಟ್ಟದಲ್ಲಿ ಹೈ ಡ್ರಾಮಾ ನಡೆದಿದೆ. ಇಬ್ಬರೂ ನಾಯಕರೂ ಬೆಟ್ಟಕ್ಕೆ ಆಗಮಿಸಿ ಒಬ್ಬರಿಗೊಬ್ಬರು ಮಾತನಾಡದೇ ತೆರಳಿದರು.

    ದೇವಾಲಯದ ಹೊರ ಆವಣರದಲ್ಲಿ ಮಹೇಶ್ ಅವರಿಗೆ ಒಂದು ಗಂಟೆ ಕಾದು ಬೆಟ್ಟದಿಂದ ಕೆಳಗಿಳಿದ ನಂತರ ಅನರ್ಹ ಶಾಸಕ ಹೆಚ್.ವಿಶ್ವನಾಥ್ ಪಬ್ಲಿಕ್ ಟಿವಿ ಜೊತೆ ಮಾತನಾಡಿ, ಮುಖಾಮುಖಿಯಾಗಲು ನಾನು ತಯಾರಾಗಿಯೇ ಬಂದಿದ್ದೆ ಮಾಜಿ ಸಚಿವ ಸಾರಾ ಮಹೇಶ್ ಒಳಗೆ ಹೋದವರು ಬರಲಿಲ್ಲ ಎಂದು ವಾಗ್ದಾಳಿ ನಡೆಸಿದರು.

    ನಾನು 8:50ಕ್ಕೆ ಬಂದು ದೇವಿಯ ದರ್ಶನ ಮಾಡಿ 9:05ಕ್ಕೆ ಬಂದು ಹೊರಗೆ ನಿಂತೆ. ಅವರು ಒಳಗೆ ಹೋದವರು ವಾಪಸ್ ಬರಲೇ ಇಲ್ಲ. ನಾನು 10 ಗಂಟೆಯವರೆಗೂ ಕಾದೆ. ನಂತರ ಅವರು ನಿಮ್ಮ ಮುಖ ನೋಡುವುದಿಲ್ಲವಂತೆ ಎಂದು ಮಾಧ್ಯಮದವರು ಹೇಳಿದರು. ನೀವೇ ಪ್ರಮಾಣ ಮಾಡಬೇಕು ಎಂದು ಹೇಳಿದ್ದು, ನನಗೇನು ಹುಚ್ಚು ಹಿಡಿದಿದೆಯಾ ಪ್ರಮಾಣ ಮಾಡೋಕೆ? ಆಣೆ ಪ್ರಮಾಣದ ವಿಚಾರ ಇಲ್ಲಿ ಬರುವುದೇ ಇಲ್ಲ ಎಂದರು.

    ನಾನು ಕೇವಲ ಸಾ.ರಾ.ಮಹೇಶ್ ಮಾಡಿದ್ದ ಆರೋಪಕ್ಕೆ ಉತ್ತರಿಸಲು ಬಂದಿದ್ದೆ. 25 ಕೋಟಿ ರೂ.ಗೆ ನನ್ನನ್ನ ಕೊಂಡುಕೊಂಡವನನ್ನು ಕರೆದುಕೊಂಡು ಬಾ ಅವನನ್ನು ಮೀಟ್ ಮಾಡೋಣ ಎಂದಿದ್ದೆ. ಕೊನೆಗೂ ಅವರು ಬರಲೇ ಇಲ್ಲ. ಆತನನ್ನು ಕರೆದುಕೊಂಡು ಬರಲಿಲ್ಲ. ನಾವು ಪಾಂಡವರು ಅವರು ಕೌರವರು, ಮಹಾಭಾರತದ ವೈಶಂಪಾಯನ ಸರೋವರದಲ್ಲಿ ದುರ್ಯೋಧನ ಅಡಗಿ ಕುಳಿತ ಹಾಗೆ ಒಳಗೆ ಸಾರಾ ಮಹೇಶ್ ಕೂತಿದ್ದ ಎಂದು ದುರ್ಯೋಧನನಿಗೆ ಸಾರಾ ಮಹೇಶ್ ಅವರನ್ನು ಹೋಲಿಸಿದರು.

    ನಾವು ಪಾಂಡವರ ರೀತಿ ಹೊರಗೆ ಕಾಯುತ್ತಿದ್ದೆವು. ದುರ್ಯೋಧನ ಹೇಗೆ ಬರಲಿಲ್ಲವೋ ಹಾಗೆ ಸಾರಾ ಬರಲಿಲ್ಲ, ಮಹೇಶ್ ನೀನು ಬರಲೇ ಇಲ್ಲ ಹೇಡಿ. ನೀನು ಪಲಾಯನವಾದಿ, ನೀನೊಬ್ಬ ಸುಳ್ಳ, ಇನ್ನು ಮುಂದೆ ಸುಳ್ಳು ಹೇಳಬೇಡ. ಜೆಡಿಎಸ್ ಅಂದರೆ ಕಣ್ಣೀರು, ಕಣ್ಣೀರು ಅಂದರೆ ಜೆಡಿಎಸ್. ಸಾ.ರಾ.ಮಹೇಶ್ ಅಂತಹ ಕೊಚ್ಚೆಗುಂಡಿಗೆ ನಾನು ಕಲ್ಲು ಎಸೆಯುವುದಿಲ್ಲ ಎಂದರು.

    ನಾನು ನಿಲ್ಲಿಸೋಣ ಎಂದು ಹೇಳಿದ್ದೆ, ಈಗಲೂ ಹೇಳುತ್ತಿದ್ದೇನೆ ಇಲ್ಲಿಗೆ ನಿಲ್ಲಿಸೋಣ. ಅವರು ಸಾಬೀತು ಮಾಡಬೇಕಿತ್ತು ಮಾಡಿಲ್ಲ. ಇನ್ನು ಮುಂದೆ ಸಾರಾ ಮಹೇಶ್ ವಿಚಾರವನ್ನು ನಾನು ಮಾತನಾಡುವುದಿಲ್ಲ. ಅವರು ನನ್ನ ವಿಚಾರ ಮಾತನಾಡುವುದು ಬೇಡ, ಇದು ಇಲ್ಲಿಗೆ ನಿಲ್ಲಲಿ ಎಂದು ಹೇಳಿದರು.

    ಚಾಮುಂಡಿಬೆಟ್ಟದಿಂದ ಇಳಿದು ಬಂದು ಹೆಚ್.ವಿಶ್ವನಾಥ್ ಸ್ನೇಹಿತರೊಂದಿಗೆ ಹೊಟೇಲ್‍ನಲ್ಲಿ ತಿಂಡಿ ಸೇವಿಸಿದರು. ಇನ್ನು ಸಾ.ರಾ.ಮಹೇಶ್ ಬಗ್ಗೆ ಮಾತನಾಡುವುದಿಲ್ಲ ಎನ್ನುತ್ತಲೇ ಸ್ನೇಹಿತರೊಂದಿಗೆ ತಿಂಡಿ ಸೇವಿಸಿದರು.

  • ಪೋಷಕರ ಒಪ್ಪಿಗೆಯಿಲ್ಲದೆ ಲವ್ ಮ್ಯಾರೇಜ್ ಆಗಲ್ಲ- ಪ್ರಮಾಣ ಮಾಡಲಿದ್ದಾರೆ 10 ಸಾವಿರ ವಿದ್ಯಾರ್ಥಿಗಳು

    ಪೋಷಕರ ಒಪ್ಪಿಗೆಯಿಲ್ಲದೆ ಲವ್ ಮ್ಯಾರೇಜ್ ಆಗಲ್ಲ- ಪ್ರಮಾಣ ಮಾಡಲಿದ್ದಾರೆ 10 ಸಾವಿರ ವಿದ್ಯಾರ್ಥಿಗಳು

    ಗಾಂಧಿನಗರ: ಪ್ರೇಮಿಗಳ ದಿನದಂದು ಸುಮಾರು 10 ಸಾವಿರ ವಿದ್ಯಾರ್ಥಿಗಳು ಪೋಷಕರ ಒಪ್ಪಿಗೆ ಪಡೆಯದೇ ಪ್ರೇಮ ವಿವಾಹವಾಗುವುದಿಲ್ಲ ಎಂದು ಪ್ರಮಾಣ ಮಾಡಲಿದ್ದಾರೆ.

    ಯುವಕ, ಯುವತಿಯರು ತಮ್ಮ ಪ್ರೀತಿ, ಪ್ರೇಮವನ್ನು ಕಳೆದುಕೊಂಡರೂ ಪರವಾಗಿಲ್ಲ, ಆದರೇ ಪೋಷಕರ ಒಪ್ಪಿಗೆಯಿಲ್ಲದೆ ಪ್ರೇಮ ವಿವಾಹವಾಗುವುದಿಲ್ಲವೆಂದು ನಿರ್ಧಾರ ಮಾಡಿದ್ದಾರೆ. ಲಾಫ್ಟರ್ ಥೆರಪಿಸ್ಟ್ ಕಮಲೇಶ್ ಮಸಾಲಾವಾಲಾ ನಡೆಸುತ್ತಿರುವ ಹಾಸ್ಯಮೇವ ಜಯತೆ ಎಂಬ ಸ್ವಯಂಪ್ರೇರಿತ ಸಂಘಟನೆ ಈ ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಇದರಲ್ಲಿ ಸೂರತ್‍ನ ಸುಮಾರು 15 ಶಾಲೆಯ ವಿದ್ಯಾರ್ಥಿ ವಿದ್ಯಾರ್ಥಿನಿಯರು ತಮ್ಮ ಪ್ರೀತಿಗೆ ಪೋಷಕರು ವಿರೋಧ ವ್ಯಕ್ತಪಡಿಸಿದ್ದಲ್ಲಿ ತಾವು ಪ್ರೇಮ ವಿವಾಹವಾಗಲ್ಲ ಎಂದು ಪ್ರಮಾಣ ಮಾಡಲು ಮುಂದಾಗಿದ್ದು, ಸಂಸ್ಕಾರ ಭಾರತಿ, ಪ್ರೆಸಿಡೆನ್ಸಿ ಹೈಸ್ಕೂಲ್ ಸೇರಿ 15 ಶಾಲೆಗಳಲ್ಲಿ ಏಕಕಾಲದಲ್ಲಿ ವಿದ್ಯಾರ್ಥಿ ವಿದ್ಯಾರ್ಥಿನಿಯರು ಪ್ರಮಾಣ ಮಾಡುವ ಮೂಲಕ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

    ಈ ಬಗ್ಗೆ ಮಾತನಾಡಿದ ಕಾರ್ಯಕ್ರಮ ಆಯೋಜಕರು, “ಇತ್ತೀಚೆಗೆ ಯುವಕ ಯುವತಿಯರು ಪ್ರೀತಿಯಲ್ಲಿ ಬೀಳುತ್ತಾರೆ ಅಲ್ಲದೆ ತಾವು ಪ್ರೀತಿಸಿದವರನ್ನೇ ಮದುವೆಯಾಗುವ ದೃಢ ನಿರ್ಧಾರ ಮಾಡುತ್ತಾರೆ. ಆದರಲ್ಲಿ ಮನೆಬಿಟ್ಟು ಓಡಿ ಹೋಗಿ ಮದುವೆಯಾಗುವವರ ಸಂಖ್ಯೆ ಹೆಚ್ಚಾಗಿದೆ. ಹೀಗೆ ಮದುವೆಯಾದವರ ಸಂಬಂಧ ಬೇಗನೇ ಮುರಿದುಬೀಳುತ್ತವೆ. ಇಂತಹ ನಿರ್ಧಾರ ಮಾಡುವಾಗ ಪೋಷಕರ ಸಲಹೆ ಅವಶ್ಯಕ ಎಂಬ ಸಂದೇಶ ನೀಡಲು ಈ ಹೊಸ ಕಾರ್ಯಕ್ರಮವನ್ನು ನಡೆಸಲು ಹೊರಟಿದ್ದೇವೆ” ಎಂದು ತಿಳಿಸಿದ್ದಾರೆ.

    ಅಷ್ಟೇ ಅಲ್ಲದೆ ಈ ಕಾರ್ಯಕ್ರಮದ ಸಹ ಆಯೋಜಕರಾಗಿರುವ ಕವಿ ಮುಕುಲ್ ಛೋಕ್ಸಿ ಮಾತನಾಡಿ, “ಹಲವು ಯುವಕರು ಪೋಷಕರ ವಿರೋಧ ಕಟ್ಟಿಕೊಂಡು ಪ್ರೇಮ ವಿವಾಹವಾಗುತ್ತಾರೆ. ಯಾಕೆ ಪೋಷಕರು ತಮ್ಮ ಮಕ್ಕಳ ಪ್ರೀತಿಯನ್ನು ವಿರೋಧಿಸುತ್ತಾರೆ ಎಂದು ಯುವಕರಿಗೆ ತಿಳಿದಿರೋದಿಲ್ಲ. ಹೀಗಾಗಿ ಈ ರೀತಿ ಪ್ರಮಾಣ ಮಾಡಿದಾಗ ತಮ್ಮ ಪೋಷಕರ ಭಾವನೆಗಳಿಗೆ ಗೌರವ ಕೊಡಲು ಯುವಕರು ನಿರ್ಧಾರ ಮಾಡುತ್ತಾರೆ” ಎಂದು ಅಭಿಪ್ರಾಯ ಪಟ್ಟಿದ್ದಾರೆ.

    ನಮ್ಮ ಪೋಷಕರಿಗೋಸ್ಕರ ನಾವು ಈ ರೀತಿ ಪ್ರಮಾಣ ಮಾಡಲು ಸಿದ್ಧರಿದ್ದೇವೆ. ತಂದೆ ತಾಯಿಯರು ತಮ್ಮ ಮಕ್ಕಳಿಗೆ ಮಾಡಿರುವಷ್ಟು ತ್ಯಾಗ ಈ ಜಗತ್ತಿನಲ್ಲಿ ಬೇರೆ ಯಾರೂ ಮಾಡಿಲ್ಲ. ಹೀಗಾಗಿ ಅವರ ನಿರ್ಧಾರಗಳಿಗೆ ನಾವು ಗೌರವ ನೀಡುತ್ತೇವೆ ಎಂದು ವಿದ್ಯಾರ್ಥಿಗಳು ಹೇಳಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಉಪಸಮರಕ್ಕೆ ಶಾಂತಿಯುತ ತೆರೆ – ಜಮಖಂಡಿಯಲ್ಲಿ ಅತೀ ಹೆಚ್ಚು, ಮಂಡ್ಯದಲ್ಲಿ ಕಡಿಮೆ ಮತದಾನ

    ಉಪಸಮರಕ್ಕೆ ಶಾಂತಿಯುತ ತೆರೆ – ಜಮಖಂಡಿಯಲ್ಲಿ ಅತೀ ಹೆಚ್ಚು, ಮಂಡ್ಯದಲ್ಲಿ ಕಡಿಮೆ ಮತದಾನ

    ಬೆಂಗಳೂರು: ರಾಜ್ಯದ ಐದು ಕ್ಷೇತ್ರಗಳ ಉಪಚುನಾವಣೆ ಮುಕ್ತಾಯವಾಗಿದ್ದು, ನವೆಂಬರ್ 6 ರಂದು ಪ್ರಕಟವಾಗುವ ಫಲಿತಾಂಶದತ್ತ ಎಲ್ಲರ ದೃಷ್ಟಿ ನೆಟ್ಟಿದೆ.

    ಇತ್ತ ಎಲ್ಲೆಲ್ಲಿ ಎಷ್ಟೆಷ್ಟು ಮತದಾನ ಆಗಿದೆ? ಎಲ್ಲಿ ವೋಟ್ ಹೆಚ್ಚಾಗಿದ್ದರೆ ಲಾಭ? ಕಡಿಮೆಯಾದರೆ ಏನಾಗಬಹುದು ಎನ್ನುವ ಲೆಕ್ಕಾಚಾರದಲ್ಲಿ ರಾಜಕೀಯ ನಾಯಕರು ಮುಳುಗಿದ್ದಾರೆ. ಈ ಕುರಿತು ಮಾಹಿತಿ ನೋಡುವುದಾದರೆ ಜಮಖಂಡಿ ವಿಧಾನಸಭಾ ಕ್ಷೇತ್ರದಲ್ಲಿ ಅತೀ ಹೆಚ್ಚಿನ ಮತದಾನ ಆಗಿದ್ದು, ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಕಡಿಮೆ ಮತದಾನ ಆಗಿದೆ.

    ಯಾವ ಕ್ಷೇತ್ರದಲ್ಲಿ ಎಷ್ಟು?
    ಕಳೆದ ಮೂರು ವಾರಗಳಿಂದ ರಾಜಕೀಯ ರಣರಂಗವಾಗಿದ್ದ ಬಳ್ಳಾರಿಯಲ್ಲಿ ಸುಗಮ ಮತದಾನ ನಡೆದಿದ್ದು, ಆದರೆ ಮತದಾನದ ಪ್ರಮಾಣ ಕಡಿಮೆ ಆಗಿದೆ. ಮತದಾರರು ಮತಗಟ್ಟೆಗೆ ಬರಲು ಹೆಚ್ಚು ಉತ್ಸಾಹ ತೋರದ ಕಾರಣ ಶೇ.63.85 ರಷ್ಟು ಮತದಾನ ನಡೆದಿದೆ. ಮೂವರು ಮಾಜಿ ಮುಖ್ಯಮಂತ್ರಿಗಳ ಪುತ್ರರು ಸ್ಪರ್ಧಿಸಿರುವ ಶಿವಮೊಗ್ಗ ಲೋಕಸಭೆ ಉಪ ಚುನಾವಣೆಯಲ್ಲಿಯೂ ಮತದಾನ ಪ್ರಮಾಣ ನಿರೀಕ್ಷೆಯಷ್ಟು ನಡೆಯದೇ ಶೇ. 61.05 ದಾಖಲಾಗಿದೆ. ಈ ನಡುವೆ ಮಂಡ್ಯ ಲೋಕಸಭೆ ಉಪ ಚುನಾವಣೆಯಲ್ಲಿ ಕೊನೆಯ ದಿನವೂ ಕಾಂಗ್ರೆಸ್-ಜೆಡಿಎಸ್ ಕಾರ್ಯಕರ್ತರಲ್ಲಿ ಒಮ್ಮತ ಮೂಡಲೇ ಇಲ್ಲ. ಈ ಗೊಂದಲದ ನಡುವೆ ಶೇ.53.93 ರಷ್ಟು ಮತದಾನ ನಡೆದಿದ್ದು, ಈ ಮೂಲಕ ಅತ್ಯಂತ ಕಡಿಮೆ ಮತದಾನವಾಗಿದೆ.

    ವಿಧಾನಸಭೆ ಉಪಚುನಾವಣೆ ನಡೆದ ಕ್ಷೇತ್ರಗಳತ್ತ ಗಮನ ಹರಿಸಿದರೆ ಸಿಎಂ ಕುಮಾರಸ್ವಾಮಿ ರಾಜೀನಾಮೆಯಿಂದ ತೆರವಾದ ರಾಮನಗರದಲ್ಲಿ ವಿಚಿತ್ರ ಸನ್ನಿವೇಶದಲ್ಲಿ ಮತದಾನ ನಡೆಯಿತು. ರಾಮನಗರ ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ 2 ದಿನಗಳಲ್ಲಿ ನಡೆದ ನಾಟಕೀಯ ಬೆಳವಣಿಗೆಗಳ ನಡುವೆ ಶೇ.71.88 ರಷ್ಟು ಆಗಿದೆ. ಸಿದ್ದು ನ್ಯಾಮಗೌಡ ಅವರ ಆಕಾಲಿಕ ಮರಣದಿಂದ ತೆರವಾಗಿದ್ದ ಜಮಖಂಡಿ ಕ್ಷೇತ್ರದಲ್ಲಿ ಅತ್ಯಧಿಕ 77.17ರಷ್ಟು ಮತದಾನ ನಡೆದಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಬೇಕಾದ್ರೆ ಹೀಗೆ ಮಾಡ್ಬೇಕಂತೆ

    ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಬೇಕಾದ್ರೆ ಹೀಗೆ ಮಾಡ್ಬೇಕಂತೆ

    ಬೆಂಗಳೂರು: `ಪ್ರಮಾಣ ಮಾಡಿ….ಟಿಕೆಟ್ ಪಡೆದುಕೊಳ್ಳಿ’ ಇಂಥದೊಂದು ಹೊಸ ಐಡಿಯಾ ಪರಿಚಯಿಸಲು ಜೆಡಿಎಸ್ ಮುಂದಾಗಿದೆ.

    ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಶತಾಯ ಗತಾಯ ಅಧಿಕಾರ ಪಡೆಯಲು ಪ್ಲಾನ್ ಮಾಡಿರೋ ಜೆಡಿಎಸ್, ತನ್ನ ಪಕ್ಷದ ಅಭ್ಯರ್ಥಿಗಳನ್ನು ಮತದಾರರ ಮುಂದೆ ನಿಲ್ಲಿಸಿ ಪ್ರಮಾಣ ಮಾಡಿಸಲು ಪ್ಲಾನ್ ಮಾಡಿಕೊಂಡಿದೆ. ಭ್ರಷ್ಟಾಚಾರ ಮಾಡಲ್ಲ, ಮತದಾರರ ಕೆಲಸ ಮಾಡ್ತಿವಿ ಅಂತ ಪ್ರಮಾಣ ಮಾಡಿಸಲಿದೆ.

    ಇಂಥದೊಂದು ಮಹತ್ವದ ತೀರ್ಮಾನ ಕೈಗೊಳ್ಳಲು ಬುಧವಾರ ಶಾಸಕರ ಸಭೆ ಕರೆದಿರುವ ಎಚ್‍ಡಿ ಕುಮಾರಸ್ವಾಮಿ, ಮೊದಲ ಪಟ್ಟಿ ಬಿಡುಗಡೆಯ ಮುನ್ನ ಇಂತ ತೀರ್ಮಾನಕ್ಕೆ ಮುಂದಾಗಿದ್ದಾರೆ. ಡಿ.25ರೊಳಗೆ 125 ಮಂದಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲು ಎಚ್‍ಡಿಕೆ ನಿರ್ಧಾರ ಮಾಡಿದ್ದಾರೆ.