Tag: ಪ್ರಮೋದಾದೇವಿ ಒಡೆಯರ್

  • ಚಾಮುಂಡಿ ಬೆಟ್ಟ ಹಿಂದೂಗಳದ್ದು, ರಾಜಕೀಯಕ್ಕೆ ಚಾಮುಂಡಿ ತಾಯಿ ಹೆಸರು ಎಳೆದು ತಂದಿದ್ದು ಬೇಸರ ತರಿಸಿದೆ: ಪ್ರಮೋದಾದೇವಿ ಒಡೆಯರ್

    ಚಾಮುಂಡಿ ಬೆಟ್ಟ ಹಿಂದೂಗಳದ್ದು, ರಾಜಕೀಯಕ್ಕೆ ಚಾಮುಂಡಿ ತಾಯಿ ಹೆಸರು ಎಳೆದು ತಂದಿದ್ದು ಬೇಸರ ತರಿಸಿದೆ: ಪ್ರಮೋದಾದೇವಿ ಒಡೆಯರ್

    – ಚಾಮುಂಡಿ ದೇವಿ ಯದುವಂಶದ ಕುಲದೇವತೆ
    – ರಾಜಕಾರಣಿಗಳು ಹೇಳಿದಂತೆ ಆಗಲ್ಲ ಎಂದ ರಾಜಮಾತೆ

    ಮೈಸೂರು: ಚಾಮುಂಡಿ ಬೆಟ್ಟ ಹಿಂದೂಗಳ ಸ್ವತ್ತಲ್ಲ ಎಂಬ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆ ಬಗ್ಗೆ ಮೈಸೂರಿನಲ್ಲಿ ರಾಜಮಾತೆ ಪ್ರಮೋದಾದೇವಿ ಒಡೆಯರ್ (Pramoda Devi Wadiyar) ಪ್ರತಿಕ್ರಿಯಿಸಿದ್ದಾರೆ.

    ಚಾಮುಂಡಿ ಬೆಟ್ಟ ಹಿಂದೂಗಳಿಗೆ ಸೇರಿದ್ದು. ಚಾಮುಂಡಿ ಹಿಂದು ದೇವರು. ಯದುವಂಶಕ್ಕೆ ಮನೆ ದೇವರು. ಚಾಮುಂಡಿ ದೇವಿ ಯದುವಂಶಕ್ಕೆ ಧಾರ್ಮಿಕ ತಾಯಿ ಇದ್ದಂತೆ ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ನಮ್ಮ ಧರ್ಮದಲ್ಲಿ ಮೂರ್ತಿ ಪೂಜೆ ಶ್ರೇಷ್ಠವಾದದ್ದು: ಬಾನು ಮುಷ್ತಾಕ್‌ರಿಂದ ಸ್ಪಷ್ಟೀಕರಣ ಕೇಳಿದ ಯದುವೀರ್‌

    ದೇವಸ್ಥಾನದಲ್ಲಿ ಹಿಂದೂ ಧಾರ್ಮಿಕ ವಿಧಿವಿಧಾನದಿಂದ ಪೂಜೆ ನಡೆಯುತ್ತದೆ. ರಾಜಕಾರಣಿಗಳ ಏನೂ ಬೇಕಾದರು ಹೇಳಲಿ. ಕರೆಯುವವರು ಏನಾದರೂ ಕರೆಯಲಿ. ಅವರು ಹೇಳಿದಂತೆ ಆಗಲ್ಲ ಎಂದು ಡಿ.ಕೆ.ಶಿವಕುಮಾರ್‌ಗೆ ತಿರುಗೇಟು ನೀಡಿದ್ದಾರೆ.

    ದೇವಸ್ಥಾನ ವಿಚಾರದಲ್ಲಿ ನಮ್ಮ ಮನೆತನ ನ್ಯಾಯಾಲಯದಲ್ಲಿ ಹೋರಾಟ ಮಾಡುತ್ತಿದೆ. ಚಾಮುಂಡಿ ಬೆಟ್ಟ ಪ್ರಾಧಿಕಾರ ರಚನೆ ಆದರೂ ಅದು ಅಧಿಕೃತ ಅಲ್ಲ. ನ್ಯಾಯಾಲಯದ ಆದೇಶ ಬಂದ ಮೇಲೆ ಅಷ್ಟೆ ಎಲ್ಲವೂ ಸ್ಪಷ್ಟ ಆಗೋದು. 70 ವರ್ಷಗಳಿಂದ ಈ ಹೋರಾಟ ನ್ಯಾಯಾಲಯದಲ್ಲಿ ಇದೆ ಎಂದಿದ್ದಾರೆ.

    ದೇವಸ್ಥಾನವನ್ನು ರಾಜಕೀಯಕ್ಕೆ ಬಳಸಿಕೊಂಡಿದ್ದಕ್ಕೆ ನನಗೆ ಬೇಸರವಿದೆ. ದಸರಾ ಉದ್ಘಾಟಕರ ವಿಚಾರದಲ್ಲಿ ನನ್ನ ಅಭಿಪ್ರಾಯ ಏನೂ ಇಲ್ಲ. ಕರೆದವರು, ಕರೆಸಿಕೊಂಡವರಿಗಷ್ಟೆ ಅದು ಗೊತ್ತು. ಸರ್ಕಾರದ ದಸರಾ ನಮ್ಮ ಪರಂಪರೆ ಭಾಗವಲ್ಲ. ನಮ್ಮ ದಸರಾ ಖಾಸಗಿಯಾಗಿಯೇ ನಡೆಯುತ್ತದೆ. ಸರ್ಕಾರವರು ತಮಗೆ ಬೇಕಾದ ರೀತಿ ದಸರಾ ಮಾಡುತ್ತಾರೆ. ಅದಕ್ಕೂ ನಮಗೂ ಸಂಬಂಧ ಇಲ್ಲ. ದಸರಾ ದಿನ‌ ನಾನು ಅಂಬಾರಿ ಕಡೆ ಗಮನ ಕೊಡುವ ಕಾರಣ, ಅಲ್ಲಿಗೆ ಹೋಗಲ್ಲ. ನಮ್ಮ ಮನೆಯವರು ಒಬ್ಬರು ಹೋಗುತ್ತಾರೆ ಅಷ್ಟೆ ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಚಾಮುಂಡೇಶ್ವರಿ ದೇವಸ್ಥಾನ ಹಿಂದೂ ದೇಗುಲವಲ್ಲದೇ ಇದ್ದಿದ್ರೆ ಮುಜರಾಯಿ ವ್ಯಾಪ್ತಿಗೆ ತರುತ್ತಿರಲಿಲ್ಲ – ಪ್ರಮೋದಾ ದೇವಿ ಒಡೆಯರ್‌

    ದಸರಾ ವಿಚಾರದಲ್ಲಿ ಇಲ್ಲಿವರೆಗೆ ಆಗಿರುವ ರಾಜಕೀಯವೇ ಸಾಕು. ಆ ವಿಚಾರ ಇನ್ನು ಮುಂದುವರಿಸುವುದು ಬೇಡ ಎಂದು ಪ್ರಮೋದಾದೇವಿ ಒಡೆಯರ್‌ ಸಲಹೆ ನೀಡಿದ್ದಾರೆ.

  • 4,500 ಎಕ್ರೆಗೆ ದಾಖಲೆ ಇದೆ, ಅರಮನೆ ಹೆಸರಿಗೆ ಜಮೀನು ಬಂದ್ರೂ ಗ್ರಾಮಸ್ಥರು ಆತಂಕ ಪಡಬೇಕಿಲ್ಲ: ಪ್ರಮೋದಾದೇವಿ ಒಡೆಯರ್

    4,500 ಎಕ್ರೆಗೆ ದಾಖಲೆ ಇದೆ, ಅರಮನೆ ಹೆಸರಿಗೆ ಜಮೀನು ಬಂದ್ರೂ ಗ್ರಾಮಸ್ಥರು ಆತಂಕ ಪಡಬೇಕಿಲ್ಲ: ಪ್ರಮೋದಾದೇವಿ ಒಡೆಯರ್

    – ಗ್ರಾಮಸ್ಥರು ತಮ್ಮ ಬಳಿ ಇರುವ ಗಿಫ್ಟ್ ದಾಖಲೆಯನ್ನ ಅರಮನೆ ಕಚೇರಿಗೆ ತಲುಪಿಸಲಿ

    ಮೈಸೂರು: ಚಾಮರಾಜನಗರದಲ್ಲಿ (Chamarajanagara) 4,500 ಎಕರೆ ಜಮೀನು ಅರಮನೆಗೆ ಸೇರಿದ್ದು ಎಂಬುದಕ್ಕೆ ದಾಖಲೆ ಇದೆ. ಆದ್ರೆ ಗ್ರಾಮಸ್ಥರು ಆತಂಕ ಪಡುವ ಅವಶ್ಯಕತೆ ಇಲ್ಲ. ಅರಮನೆ ಹೆಸರಿಗೇ ಜಮೀನು ಬಂದರೂ ನಾವು ಅದನ್ನು ಅವರಿಗೇ ಬಿಟ್ಟು ಕೊಡುವ ವ್ಯವಸ್ಥೆ ಮಾಡ್ತಿವಿ ಎಂದು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್‌ (Pramoda Devi Wadiyar) ಹೇಳಿದ್ದಾರೆ.

    CNG PRAMODA DEVI LETTER AV 1

    ರಾಜಮನೆತನಕ್ಕೆ (Royal family) ಸೇರಿದ 4,500 ಎಕರೆ ಜಾಗವನ್ನು ರಿಜಿಸ್ಟರ್‌ ಮಾಡಿಕೊಡಬೇಕು ಎಂದು ಜಿಲ್ಲಾಧಿಕಾರಿ ಶಿಲ್ಪಾ ನಾಗ್‌ ಅವರಿಗೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್‌ ಪತ್ರ ಬರೆದಿದ್ದರು. ಈ ವಿಚಾರವಾಗಿ ಸಿದ್ದಯ್ಯನಪುರ ಗ್ರಾಮಸ್ಥರು ಆತಂಕಕ್ಕೆ ಒಳಗಾಗಿದ್ದಾರೆ. ಪ್ರಮೋದಾದೇವಿ ಒಡೆಯರ್‌ಗೆ ನಮ್ಮ ಗ್ರಾಮ ರಿಜಿಸ್ಟರ್‌ ಮಾಡಿಕೊಡಬೇಡಿ ಎಂದು ಡಿಸಿಗೆ ಮನವಿ ಮಾಡಿದ್ದರು. ಈ ಕುರಿತು ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಪ್ರಮೋದಾದೇವಿ ಒಡೆಯರ್‌ ಗ್ರಾಮಸ್ಥರಿಗೆ ಅಭಯ ನೀಡಿದ್ದಾರೆ.

    ಗ್ರಾಮಸ್ಥರು ಆತಂಕ ಪಡುವ ಅವಶ್ಯಕತೆ ಇಲ್ಲ. ಜಿಲ್ಲಾಧಿಕಾರಿಗೆ 2014 ರಲ್ಲೇ ಎಲ್ಲಾ ದಾಖಲೆ ಕೊಟ್ಟಿದ್ದೇವೆ. ಡಿಸಿಗೆ ಮಾಹಿತಿ ಇಲ್ಲದೇ ಇರಬಹುದು. ಆದ್ರೆ 1951 ರಲ್ಲಿ ಸರ್ಕಾರದ ಕಾರ್ಯದರ್ಶಿ ಆಗಿದ್ದ ಶ್ರೀನಿವಾಸನ್ ಅವರ ಸಹಿ ಇರುವ ಪತ್ರದಲ್ಲಿ ನಮ್ಮ ಆಸ್ತಿ ಪಟ್ಟಿಯಲ್ಲಿ 4,500 ಎಕ್ರೆಯೂ ಇದೆ. ಅರಮನೆ ಹೆಸರಿಗೆ ಜಮೀನು ಬಂದರೂ ಗ್ರಾಮಸ್ಥರು ಆತಂಕ ಪಡುವ ಅವಶ್ಯಕತೆ ಇಲ್ಲ. ಗ್ರಾಮಸ್ಥರೊಂದಿಗೆ ಮಾತನಾಡಿ ನಾವು ಅದನ್ನು ಅವರಿಗೇ ಬಿಟ್ಟು ಕೊಡುವ ವ್ಯವಸ್ಥೆ ಮಾಡ್ತಿವಿ ಎಂದು ಹೇಳಿದ್ದಾರೆ.

    pramoda devi wadiyar

    ಆ ಕಾಲದಲ್ಲಿ ಮಹಾರಾಜರು ಜಮೀನು ಗಿಫ್ಟ್ ಕೊಟ್ಟಿದ್ದಾರೆ. ಖಂಡಿತವಾಗಿಯೂ ಅವರನ್ನು ಒಕ್ಕಲೆಬಿಸುವ ಕೆಲಸ ಮಾಡಲ್ಲ. ಗ್ರಾಮಸ್ಥರು ತಮ್ಮ ಬಳಿ ಇರುವ ಗಿಫ್ಟ್ ದಾಖಲೆಯನ್ನು ಅರಮನೆ ಕಚೇರಿಗೆ ತಲುಪಿಸಲಿ. ಈ ವಿಚಾರದಲ್ಲಿ ಚಾಮರಾಜನಗರ ಜಿಲ್ಲಾಧಿಕಾರಿ ಕಚೇರಿಗೆ ಮಾತನಾಡಲು ಪ್ರಯತ್ನ ಪಟ್ಟೆ. ದೂರವಾಣಿ ಕರೆ ಮಾಡಿದ್ದೆ ಸ್ವೀಕರಿಸಿಲ್ಲ. ಮೇಸೇಜ್‌ಗೂ ರೀಪ್ಲೆ ಮಾಡಿಲ್ಲ. ಗ್ರಾಮಸ್ಥರು ಯಾವುದೇ ಸಂದರ್ಭದಲ್ಲಾದರೂ ಅರಮನೆ ಕಚೇರಿಗೆ ಗಿಫ್ಟ್ ಕೊಟ್ಟಿರುವ ದಾಖಲೆ ಇದ್ದರೆ ಖಂಡಿತ ಕೊಡಿ. ಗ್ರಾಮಸ್ಥರ ಬಳಿ ಗಿಫ್ಟ್ ಕೊಟ್ಟ ದಾಖಲೆ ಇಲ್ಲದಿದ್ದರೂ ಅವರು ಆತಂಕ ಪಡುವ ಅವಶ್ಯಕತೆ ಇಲ್ಲ ಎಂದು ಅಭಯ ನೀಡಿದ್ದಾರೆ.

    ಇನ್ನೂ ಬಂಡೀಪುರದಲ್ಲಿ ರಾತ್ರಿ ಸಂಚಾರಕ್ಕೆ ಅನುಮತಿ ಕೊಡುವ ವಿಚಾರಕ್ಕೆ ಪ್ರತಿಕ್ರಿಯಿಸಿ, ಯಾವುದೇ ಕಾರಣಕ್ಕೂ ಅನುಮತಿ ಕೊಡಬಾರದು. ರಾತ್ರಿ ಸಂಚಾರದ ಅವಶ್ಯಕತೆ ಇಲ್ಲ. ಪ್ರಾಣಿಗಳ ದೃಷ್ಟಿಯಿಂದ ರಾತ್ರಿ ಸಂಚಾರ ಬೇಡ. ಸಂಚಾರಕ್ಕೆ- ಈಗ ಇರುವಷ್ಟು ಅವಧಿಯೇ ಸಾಕು ಎಂದು ಹೇಳಿದ್ದಾರೆ.

  • ಮೈಸೂರು ಮಹಾರಾಜರಿಗೆ ಸೇರಿರುವ 4,500 ಎಕ್ರೆ ಭೂಮಿ ವರ್ಗಕ್ಕೆ ಪ್ರಮೋದಾದೇವಿ ಪತ್ರ

    ಮೈಸೂರು ಮಹಾರಾಜರಿಗೆ ಸೇರಿರುವ 4,500 ಎಕ್ರೆ ಭೂಮಿ ವರ್ಗಕ್ಕೆ ಪ್ರಮೋದಾದೇವಿ ಪತ್ರ

    ಚಾಮರಾಜನಗರ: ಮೈಸೂರು ಮಹಾರಾಜರಿಗೆ ಸೇರಿರುವ ಖಾಸಗಿ ಆಸ್ತಿಯನ್ನು ತಮ್ಮ ಹೆಸರಿಗೆ ಖಾತೆ ಮಾಡಿಕೊಡುವಂತೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ (Pramoda Devi Wadiyar) ಪತ್ರ ಬರೆದಿದ್ದಾರೆ.

    ಚಾಮರಾಜನಗರ ಜಿಲ್ಲಾಧಿಕಾರಿಗೆ (Chamarajanagara DC) ಪತ್ರ ಬರೆದಿದ್ದಾರೆ. ಕಳೆದ ಮಾರ್ಚ್ 20 ರಂದೇ ಪತ್ರ ಬರೆದಿದ್ದು, ಇವರು ಚಾಮರಾಜನಗರ ತಾಲೂಕಿನ ವಿವಿಧೆಡೆ 4,500 ಎಕರೆಗೂ ಹೆಚ್ಚು ಭೂಮಿ ಮೈಸೂರು ಮಹಾರಾಜರ ಖಾಸಗಿ ಸ್ವತ್ತು ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: ಪೆಟ್ರೋಲ್‌, ಡೀಸೆಲ್‌ ಮೇಲಿನ ಅಬಕಾರಿ ಸುಂಕ 2 ರೂ. ಏರಿಕೆ – ಗ್ರಾಹಕರಿಗೆ ಯಾವುದೇ ಹೊರೆ ಇಲ್ಲ

    ಚಾಮರಾಜನಗರ ತಾಲೂಕಿನ ಅಟ್ಟುಗುಳಿಪುರ, ಹರದನಹಳ್ಳಿ, ಉಮ್ಮತ್ತೂರು ಬೂದಿತಿಟ್ಟು, ಕರಡಿ ಹಳ್ಳ, ಚಾಮರಾಜನಗರ, ಕನ್ನಿಕೆರೆ ಬಸವಾಪುರದ ಸರ್ವೆ ನಂಬರ್ ಗಳಲ್ಲಿರುವ 4,500 ಎಕರೆಗೂ ಹೆಚ್ಚು ಭೂಮಿ ಮೈಸೂರು ಮಹಾರಾಜರು ಹಾಗು ಭಾರತ ಸರ್ಕಾರದ ನಡುವೆ 1,950 ರಲ್ಲಿ ಆಗಿರುವ ಒಪ್ಪಂದದ ಪ್ರಕಾರ ಇದೆಲ್ಲಾ ಮೈಸೂರು ಮಹಾರಾಜರ ಖಾಸಗಿ ಸ್ವತ್ತಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: 10 ತಿಂಗಳ ಬಳಿಕ ಹಾಸನಕ್ಕೆ ಎಂಟ್ರಿ – ಭವಾನಿ ರೇವಣ್ಣಗೆ ಹೂಮಳೆ, ಆರತಿ ಬೆಳಗಿ ಸ್ವಾಗತ

    ಖಾತೆ ಆಗುವ ತನಕ ದುರಸ್ತಿ, ಬೇರೆಯವರಿಗೆ ಖಾತೆ ಹಾಗೂ ಯಾವುದೇ ರೀತಿಯ ವಹಿವಾಟು ನಡೆಸದಂತೆ ತಕರಾರು ಅರ್ಜಿ ಜೊತೆಗೆ ತಮ್ಮ ಹೆಸರಿಗೆ ಖಾತೆ ಮಾಡಿಕೊಡುವಂತೆ ಪ್ರಮೋದಾದೇವಿ ಮನವಿ ಮಾಡಿ ಪತ್ರ ಬರೆದಿದ್ದಾರೆ. ಇದನ್ನೂ ಓದಿ: Breaking | ಎಲ್‌ಪಿಜಿ ಸಿಲಿಂಡರ್‌ ಬೆಲೆ 50 ರೂ. ಹೆಚ್ಚಳ

  • ಚಾಮುಂಡೇಶ್ವರಿ ದೇವಸ್ಥಾನ ನಮ್ಮ ಆಸ್ತಿ: ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್

    ಚಾಮುಂಡೇಶ್ವರಿ ದೇವಸ್ಥಾನ ನಮ್ಮ ಆಸ್ತಿ: ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್

    – ಚಾಮುಂಡಿಬೆಟ್ಟ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ರಾಜವಂಶಸ್ಥೆ ವಿರೋಧ

    ಮೈಸೂರು: ಚಾಮುಂಡೇಶ್ವರಿ ದೇವಸ್ಥಾನ (Chamundeshwari Temple) ನಮ್ಮ ಆಸ್ತಿ. ಅದು ಸಂಸ್ಥಾನದ ಖಾಸಗಿ ಆಸ್ತಿಗಳ ಪಟ್ಟಿಯಲ್ಲಿ ಇದೆ ಎನ್ನುವ ಮೂಲಕ ಚಾಮುಂಡಿಬೆಟ್ಟ ಅಭಿವೃದ್ಧಿ ಪ್ರಾಧಿಕಾರ (Chamundi Hill Development Authority) ರಚನೆಗೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ (Pramoda Devi Wadiyar) ವಿರೋಧ ವ್ಯಕ್ತಪಡಿಸಿದರು.

    ಮೈಸೂರು (Mysuru) ಅರಮನೆಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಚಾಮುಂಡಿ ಬೆಟ್ಟದ ನಿರ್ವಹಣೆ ಸಂಬಂಧ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಸರ್ಕಾರಕ್ಕೆ ಪತ್ರ ಬರೆದಿದ್ದರು. ನಿರ್ವಹಣೆ ಮಾಡಲು ಆಗೋದಿಲ್ಲ ಅಂತಾ ಬರೆದಿದ್ದರು. ಈಗ ನಾವು ನಿರ್ವಹಣೆ ಮಾಡೋ ಬಗ್ಗೆ ನಾನು ಹೆಚ್ಚೇನು ಮಾತಾಡೋದಿಲ್ಲ. ನ್ಯಾಯಾಲಯ, ಸರ್ಕಾರ ಈಗಲೂ ಗ್ರೀನ್ ಸಿಗ್ನಲ್ ಕೊಟ್ಟರೆ ಚಾಮುಂಡಿ ಬೆಟ್ಟವನ್ನ ನಾವೇ ನಿರ್ವಹಣೆ ಮಾಡ್ತೇವೆ. ಬೆಟ್ಟವನ್ನು ಬೆಟ್ಟವಾಗಿಯೇ ಉಳಿಸಿಕೋಳ್ಳಬೇಕು ಅನ್ನೋದು ನಮ್ಮ ವಾದ. ಸರ್ಕಾರಿ ಖರಾಬು ಅಂತಾ ಚಾಮುಂಡಿ ಬೆಟ್ಟವನ್ನು ಮಾಡಲು ಆಗೋದಿಲ್ಲ. ಕೇವಲ ಖರಾಬು ಅಂತಾ ಮಾತ್ರವೇ ಇದೆ. ಆದ್ರೆ ಸರ್ಕಾರಿ ಖರಾಬು, ಖರಾಬು ಅಂತಾ ಇಲ್ಲ. ನಾವು ಸರ್ಕಾರಕ್ಕೆ ಕೊಟ್ಟ ಪ್ರಾಪರ್ಟಿ ಬಿಟ್ಟು ಸರ್ಕಾರಕ್ಕೆ ಕೊಟ್ಟಿರೋ ಬಗ್ಗೆ ನಾವು ಇವಾಗ ಕ್ಲೈಮ್ ಮಾಡೋದಿಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ಅ.3 ರಂದು ಮೈಸೂರು ದಸರಾ ಉದ್ಘಾಟನೆ; ಅ.12 ಕ್ಕೆ ಜಂಬೂಸವಾರಿ – ಸಿಎಂ ಸಿದ್ದರಾಮಯ್ಯ

    ಚಾಮುಂಡೇಶ್ವರಿ ದೇವಸ್ಥಾನ ನಮ್ಮ ಆಸ್ತಿ. ಅದು ಸಂಸ್ಥಾನದ ಖಾಸಗಿ ಆಸ್ತಿಗಳ ಪಟ್ಟಿಯಲ್ಲಿ ಇದೆ. ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರಕ್ಕೆ ನಮ್ಮ ವಿರೋಧ ಇದೆ. ಸಂಸ್ಥಾನದ ಖಾಸಗಿ ಆಸ್ತಿಗಳ ಪಟ್ಟಿಯಲ್ಲಿ ಬೆಟ್ಟದ ಅರಮನೆ, ನಂದಿ, ಚಾಮುಂಡೇಶ್ವರಿ ಹಾಗೂ ಮಹಾಬಲೇಶ್ವರ ದೇವಸ್ಥಾನ, ದೇವಿಕೆರೆ ಸುತ್ತಮುತ್ತಲ ಪ್ರದೇಶ ಸೇರಿದೆ. ದೇವಸ್ಥಾನ ಸಂಬಂಧ 2001ರಲ್ಲಿ ಮುಜರಾಯಿ ಇಲಾಖೆ ಹೈಕೋರ್ಟ್ ಮೆಟ್ಟಿಲೇರಿದೆ. ಪ್ರಕರಣ ಕೋರ್ಟ್ನಲ್ಲಿ ಇರುವಾಗ ಪ್ರಾಧಿಕಾರ ರಚನೆ ಮಾಡುವುದು ಸರಿಯಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು.

    ಹೀಗಾಗಿ ಕೋರ್ಟ್‌ನಲ್ಲಿ ಪ್ರಶ್ನೆ ಮಾಡಲಾಗಿದೆ. ಕೋರ್ಟ್ ಬರೀ ಸ್ಟೇಟಸ್ ಕೋ ಕೊಟ್ಟಿಲ್ಲ, ಪ್ರಾಧಿಕಾರವೇ ಜಾರಿಯಲ್ಲಿ ಇರೋದಿಲ್ಲ. 1950 ರಲ್ಲೇ ನಮ್ಮ ಸಂಸ್ಥಾನದಿಂದ ಖಾಸಗಿ ಆಸ್ತಿಗಳ ಪಟ್ಟಿ ಕೊಟ್ಟಿರೋದು. ಕೇಂದ್ರ ಸರ್ಕಾರ 1972 ರಲ್ಲಿ ಮಾಡಿರುವ ಆದೇಶದ ಪ್ರಕಾರ ಅವುಗಳನ್ನು ನಾವು ಅನುಭವಿಸಬಹುದು ಎಂದರು. ಇದನ್ನೂ ಓದಿ: ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣ – ಸಿಬಿಐ ವಿಚಾರಣೆ ಆದೇಶ ಕಾಯ್ದಿರಿಸಿದ ಹೈಕೋರ್ಟ್

  • ಮಳೆಗಾಲದಲ್ಲೂ ಬರಿದಾದ ಕೆಆರ್‌ಎಸ್ ಡ್ಯಾಂ ನೋಡಿ ರಾಜವಂಶಸ್ಥೆ ಬೇಸರ

    ಮಳೆಗಾಲದಲ್ಲೂ ಬರಿದಾದ ಕೆಆರ್‌ಎಸ್ ಡ್ಯಾಂ ನೋಡಿ ರಾಜವಂಶಸ್ಥೆ ಬೇಸರ

    – ಕೆಆರ್‌ಎಸ್ ಡ್ಯಾಂ ವೀಕ್ಷಿಸಿದ ಪ್ರಮೋದಾದೇವಿ ಒಡೆಯರ್

    ಮಂಡ್ಯ: ಕೆಆರ್‌ಎಸ್ ಜಲಾಶಯದಿಂದ (KRS Dam) ತಮಿಳುನಾಡಿಗೆ (Tamil Nadu) ನಿರಂತರ ನೀರು ಹರಿಸುತ್ತಿರುವ ಬೆನ್ನಲ್ಲೇ ಮೈಸೂರಿನ (Mysuru) ರಾಜವಂಶಸ್ಥೆ ಪ್ರಮೋದಾದೇವಿ (Pramoda Devi Wadiyar) ಕೆಆರ್‌ಎಸ್ ಡ್ಯಾಂಗೆ ಭೇಟಿ ನೀಡಿ ವೀಕ್ಷಣೆ ಮಾಡಿದ್ದಾರೆ.

    ಕೆಆರ್‌ಎಸ್ ಡ್ಯಾಂನಲ್ಲಿ ನೀರು ಕಡಿಮೆ ಇರುವ ಹಿನ್ನೆಲೆ ತಮಿಳುನಾಡಿಗೆ ನೀರು ಹರಿಸದಂತೆ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಇವರ ಈ ಪ್ರತಿಭಟನೆಯ ನಡುವೆಯೂ ಅ.15ರವರೆಗೆ ತಮಿಳುನಾಡಿಗೆ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಆದೇಶ ನೀಡಿದೆ. ಇದನ್ನೂ ಓದಿ: ಕಲಬುರಗಿ ಲೋಕಸಭಾ ಕ್ಷೇತ್ರದಲ್ಲಿ ಖರ್ಗೆ ಅಳಿಯ ಸ್ಪರ್ಧೆ ಸಾಧ್ಯತೆ: ಚಿಂಚನಸೂರು

    ಈ ಬೆನ್ನಲ್ಲೇ ಮೈಸೂರಿನ ರಾಜಮಾತೆ ಪ್ರಮೋದಾದೇವಿ ಒಡೆಯರ್ ಮಂಡ್ಯದ ಕೆಆರ್‌ಎಸ್ ಡ್ಯಾಂಗೆ ಭೇಟಿ ನೀಡಿದ್ದು, ಮಳೆಗಾಲದಲ್ಲೂ ಬರಿದಾದ ಡ್ಯಾಂ ನೋಡಿ ಬೇಸರಗೊಂಡಿದ್ದಾರೆ. ಇದನ್ನೂ ಓದಿ: ಮಹಾತ್ಮ ಗಾಂಧಿ ಪ್ರಭಾವ ಜಾಗತಿಕವಾಗಿದೆ: ಪ್ರಧಾನಿ ಮೋದಿ

    ರಾಜಮಾತೆ ಒಬ್ಬರೇ ಡ್ಯಾಂ ಬಳಿ ಭೇಟಿ ನೀಡಿ ವೀಕ್ಷಣೆ ನಡೆಸಿದ್ದಾರೆ. ಬರಿದಾಗಿರುವ ಡ್ಯಾಂ ನೋಡಿ ಬೇಸರಗೊಂಡ ಪ್ರಮೋದಾದೇವಿ ಮಳೆಗಾಗಿ ಪ್ರಾರ್ಥನೆ ಮಾಡಿದ್ದಾರೆ. ಇದನ್ನೂ ಓದಿ: ಕಮಲ-ದಳ ಮೈತ್ರಿಗೆ ಕೇರಳ ಜೆಡಿಎಸ್ ನಾಯಕರ ವಿರೋಧ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮೈಸೂರು ರಾಜವಂಶದ ಖಾಸಗಿ ದಸರಾಗೆ ಸಾರ್ವಜನಿಕರು, ಮಾಧ್ಯಮಕ್ಕೆ ನಿರ್ಬಂಧ

    ಮೈಸೂರು ರಾಜವಂಶದ ಖಾಸಗಿ ದಸರಾಗೆ ಸಾರ್ವಜನಿಕರು, ಮಾಧ್ಯಮಕ್ಕೆ ನಿರ್ಬಂಧ

    ಮೈಸೂರು: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾದ ಪರಿಣಾಮ ಮೈಸೂರು ಅರಮನೆಯಲ್ಲಿ 2020ರ ಸಾಲಿನ ಮೈಸೂರು ರಾಜವಂಶದ ಖಾಸಗಿ ದಸರಾಗೆ ಸಾರ್ವಜನಿಕರು ಹಾಗೂ ಮಾಧ್ಯಮಗಳಿಗೆ ನಿರ್ಬಂಧ ಹೇರಲಾಗಿದೆ.

    ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಈ ಬಗ್ಗೆ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ. ಕೊರೊನಾ ಹಿನ್ನೆಲೆಯಲ್ಲಿ ಅರಮನೆಯ ದರ್ಬಾರ್ ಹಾಲ್‍ನಲ್ಲಿ ನಡೆಯುವ ಕಾರ್ಯಕ್ರಮಗಳಿಗೆ ಸಾರ್ವಜನಿಕರಿಗೆ ನಿಷೇಧ ಹೇರಲಾಗಿದೆ. ಅಲ್ಲದೇ ಖಾಸಗಿ ದರ್ಬಾರ್ ವೀಕ್ಷಣೆ ಹಾಗೂ ನೇರ ಪ್ರಸಾರಕ್ಕೂ ಅವಕಾಶ ಇಲ್ಲದಂತಾಗಿದೆ.

    ಪ್ರತಿಕಾ ಪ್ರಕಟಣೆ:
    ಮೈಸೂರಿನಲ್ಲಿ ಹೆಚ್ಚಿನ ಕೋವಿಡ್ ಪ್ರಕರಣಗಳ ದೃಷ್ಟಿಯಿಂದ ಅರಮನೆಯಲ್ಲಿ 2020ರ ಸಾಲಿನ ಶರನ್ನವರಾತ್ರಿ ಸಂದರ್ಭದಲ್ಲಿ ಪೂಜಾ ವಿಧಿವಿಧಾನಗಳನ್ನ ಸಾಂಪ್ರದಾಯಿಕವಾಗಿ ನಡೆಸಲಾಗುವುದು. ಮುನ್ನೆಚ್ಚರಿಕೆ ಕ್ರಮ ಅವಶ್ಯಕವಾಗಿರುವುದರಿಂದ ಆಚರಣೆಯಲ್ಲಿ ಕುಟುಂಬ ಸದಸ್ಯರನ್ನು ಒಳಗೊಂಡಂತೆ ಸಾರ್ವಜನಿಕರು ಹಾಗೂ ಮಾಧ್ಯಮಗಳು ಭಾಗವಹಿಸುವಿಕೆ ಇರುವುದಿಲ್ಲ ಎಂದು ತಿಳಿಸಿದ್ದಾರೆ.

    ಕೊರೊನಾ ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಈ ಕ್ರಮ ಅನಿವಾರ್ಯವಾಗಿದೆ. ಸಾರ್ವಜನಿಕರು ಹಾಗೂ ಮಾಧ್ಯಮ ಪ್ರತಿನಿಧಿಗಳು ಸಹಕರಿಸಬೇಕು ಎಂದು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಪತ್ರಿಕಾ ಹೇಳಿಕೆ ಮೂಲಕ ತಿಳಿಸಿದ್ದಾರೆ.