Tag: ಪ್ರಮೋದ್‌ ಜಯ

  • ‘ದಿಲ್ ಖುಷ್’ ಚಿತ್ರದ ಸಾಂಗ್ ರಿಲೀಸ್ ಮಾಡಿದ ಖ್ಯಾತ ಯುವ ನಿರ್ದೇಶಕರು

    ‘ದಿಲ್ ಖುಷ್’ ಚಿತ್ರದ ಸಾಂಗ್ ರಿಲೀಸ್ ಮಾಡಿದ ಖ್ಯಾತ ಯುವ ನಿರ್ದೇಶಕರು

    ರೊಮ್ಯಾಂಟಿಕ್ ಕಾಮಿಡಿ ಕಥಾಹಂದರ ಹೊಂದಿರುವ “ದಿಲ್ ಖುಷ್” (Dil Khush) ಚಿತ್ರಕ್ಕಾಗಿ ಗೌಸ್ ಫಿರ್ ಅವರು ಬರದಿರುವ “ನೀನೇ ನೀನೇ” ಎಂಬ ಸುಮಧುರ ಹಾಡು (Song) ಇತ್ತೀಚಿಗೆ ಬಿಡುಗಡೆಯಾಗಿದೆ.  ಕನ್ನಡ ಚಿತ್ರರಂಗದ ಹೆಸರಾಂತ ನಿರ್ದೇಶಕರಾದ ಪವನ್ ಒಡೆಯರ್, ಸಿಂಪಲ್ ಸುನಿ ಹಾಗೂ ಬಹದ್ದೂರ್ ಚೇತನ್ ಕುಮಾರ್ ಈ ಹಾಡನ್ನು ಬಿಡುಗಡೆ ಮಾಡಿದರು. “ಸರಿಗಮಪ” ಖ್ಯಾತಿಯ ನಿಹಾಲ್ ತೌರೊ ಹಾಗೂ ಆರತಿ ಅಶ್ವಿನ್ ಈ ಹಾಡಿಗೆ ಧ್ವನಿಯಾಗಿದ್ದು ಪ್ರಸಾದ್ ಕೆ ಶೆಟ್ಟಿ ಸಂಗೀತ ನೀಡಿದ್ದಾರೆ.

    ಚಿತ್ರದ ಹಾಡುಗಳು ಹಾಗೂ ಟೀಸರ್ ತುಂಬಾ ಚೆನ್ನಾಗಿದೆ. ಪ್ರಮೋದ್ ಜಯ (Pramod Jaya) ಸಹ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಿ ಅನುಭವ ಹೊಂದಿದ್ದಾರೆ.  ಹಾಡುಗಳು ಹಾಗೂ ಟೀಸರ್ ಮೂಲಕ ಪ್ರಮೋದ್ ಜಯ ಭರವಸೆ ಮೂಡಿಸಿದ್ದಾರೆ. ಚಿತ್ರ ಕೂಡ ಚೆನ್ನಾಗಿ ಮೂಡಿಬಂದಿರುವ ವಿಶ್ವಾಸ ನಮಗಿದೆ. ಉತ್ತಮ ಕಥೆಗಳಿರುವ ಚಿತ್ರಗಳು ಕನ್ನಡದಲ್ಲಿ ಹೆಚ್ಚು ಬರುತ್ತಿದೆ. ದಯವಿಟ್ಟು ಜನ ಕುಟುಂಬ ಸಮೇತ ಚಿತ್ರಮಂದಿರಗಳಿಗೆ ಬನ್ನಿ. ಆಗ ಮಾತ್ರ ಚಿತ್ರಗಳು ಯಶಸ್ಸಿಯಾಗಲು ಸಾಧ್ಯ ಎಂದರು ಅತಿಥಿಗಳಾಗಿ ಆಗಮಿಸಿದ್ದ ಪವನ್ ಒಡೆಯರ್, ಸಿಂಪಲ್ ಸುನಿ ಹಾಗು ಬಹದ್ದೂರ್ ಚೇತನ್ ಕುಮಾರ್.

    ನಾನು ಸಿಂಪಲ್ ಸುನಿ ಅವರ ಹತ್ತಿರ ಅಸಿಸ್ಟೆಂಟ್ ಡೈರೆಕ್ಟರ್ ಆಗಿ ಸಾಕಷ್ಟು ಕೆಲಸ ಕಲಿತ್ತಿದ್ದೇನೆ. ನಿರ್ದೇಶಕನಾಗಿ ಇದು ಮೊದಲ ಚಿತ್ರ. ಹಾಡು ಬಿಡುಗಡೆ ಮಾಡಿಕೊಟ್ಟ ಮೂರು ಜನ ನಿರ್ದೇಶಕರಿಗೆ ಧನ್ಯವಾದ. ಚಿತ್ರ ತೆರೆಗೆ ಬರಲು ಅಣಿಯಾಗಿದೆ. ಸದ್ಯದಲ್ಲೇ ಬಿಡುಗಡೆ ದಿನಾಂಕ ಘೋಷಣೆ ಮಾಡುವುದಾಗಿ ನಿರ್ದೇಶಕ ಪ್ರಮೋದ್ ಜಯ ತಿಳಿಸಿದರು.

    ಈ ಚಿತ್ರದಲ್ಲಿ ಖುಷ್ ನನ್ನ ಹೆಸರು.  ಲವಲವಿಕೆ ಹುಡುಗನಾಗಿ ಕಾಣಿಸಿಕೊಂಡಿದ್ದೇನೆ ಎಂದರು ನಾಯಕ ರಂಜಿತ್. ದಿಲ್ಮಯ ನನ್ನ ಪಾತ್ರದ ಹೆಸರು. ನನ್ನ ಪಾತ್ರ ಕೂಡ ಚೆನ್ನಾಗಿದೆ ಎಂದರು ನಾಯಕಿ ಸ್ಪಂದನ ಸೋಮಣ್ಣ. ನಟರಾದ ಧರ್ಮಣ್ಣ, ರಘು ರಾಮನಕೊಪ್ಪ ಮಂತಾದ ಕಲಾವಿದರು ಹಾಗೂ ಚಿತ್ರತಂಡದ ಸದಸ್ಯರು “ದಿಲ್ ಖುಷ್” ಚಿತ್ರದ ಬಗ್ಗೆ ಮಾತನಾಡಿದರು. ಜಯಪ್ರಭ ಕಲರ್ ಫ್ರೇಮ್ಸ್ ಲಾಂಛನದಲ್ಲಿ ಜಯಲಕ್ಷ್ಮಿ ಪ್ರವೀಣ್ ಹಾಗೂ ಪ್ರಭ ಶೇಖರ್ “ದಿಲ್ ಖುಷ್” ಚಿತ್ರವನ್ನು ನಿರ್ಮಿಸಿದ್ದಾರೆ.

  • ಕೊಡಗಿನಲ್ಲಿ ನಡೆಯುತ್ತಿದೆ ದಿಲ್ ಖುಷ್ ಸಿನಿಮಾ ಶೂಟಿಂಗ್

    ಕೊಡಗಿನಲ್ಲಿ ನಡೆಯುತ್ತಿದೆ ದಿಲ್ ಖುಷ್ ಸಿನಿಮಾ ಶೂಟಿಂಗ್

    ರೊಮ್ಯಾಂಟಿಕ್ ಕಾಮಿಡಿ ಜೊತೆಗೆ ಕೌಟುಂಬಿಕ ಕಥಾಹಂದರ ಹೊಂದಿರುವ “ದಿಲ್ ಖುಷ್” (Dil Khush) ಚಿತ್ರದ ಮೂರನೇ ಹಂತದ ಚಿತ್ರೀಕರಣ ಸದ್ಯದಲ್ಲೇ ಆರಂಭವಾಗಲಿದೆ. ಇದು ಕೊನೆಯ ಹಂತದ ಚಿತ್ರೀಕರಣ ಸಹ. ದ್ವಿತೀಯ ಹಂತದ ಚಿತ್ರೀಕರಣ ಕೊಡಗಿನ (Kodagu) ಸೋಮವಾರಪೇಟೆ ಹಾಗೂ ಶನಿವಾರಸಂತೆಯಲ್ಲಿ ಒಂಭತ್ತು ದಿನಗಳ ಕಾಲ ನಡೆದಿದೆ,  ಈ ಹಂತದಲ್ಲಿ ಮಾತಿನ ಭಾಗ ಹಾಗೂ ಒಂದು ಸಾಹಸ ಸನ್ನಿವೇಶದ ಚಿತ್ರೀಕರಣವಾಗಿದೆ. ಅಶೋಕ್ ಅವರು ಸಂಯೋಜಿಸಿರುವ ಈ ಸಾಹಸ ಸನ್ನಿವೇಶ ಕೆಸರುಗದ್ದೆಯಲ್ಲಿ  ಚಿತ್ರೀಕರಣಗೊಂಡಿದ್ದು, ಸಾಹಸಪ್ರಿಯರಿಗೆ ಮೆಚ್ಚುಗೆಯಾಗಲಿದೆ.

    ಜಯಪ್ರಭ ಕಲರ್ ಫ್ರೇಮ್ಸ್ ಲಾಂಛನದಲ್ಲಿ ಜಯಲಕ್ಷ್ಮಿ ಪ್ರವೀಣ್ ಹಾಗೂ ಪ್ರಭ ಶೇಖರ್  ನಿರ್ಮಿಸುತ್ತಿರುವ “ದಿಲ್ ಖುಷ್” ಚಿತ್ರವನ್ನು ಪ್ರಮೋದ್ ಜಯ (Pramod Jaya) ನಿರ್ದೇಶಿಸುತ್ತಿದ್ದಾರೆ, ಕಥೆ, ಚಿತ್ರಕಥೆ ಹಾಗೂ ಸಂಭಾಷಣೆಯನ್ನು ನಿರ್ದೇಶಕರೆ ಬರೆದಿದ್ದಾರೆ. ಸಿಂಪಲ್ ಸುನಿ ಅವರ ಬಳಿ ಕಾರ್ಯ ನಿರ್ವಹಿಸಿರುವ ಪ್ರಮೋದ್ ಜಯ ಅವರಿಗೆ ಇದು ಚೊಚ್ಚಲ ನಿರ್ದೇಶನದ ಚಿತ್ರ. ಐದು ಸುಮಧುರ ಹಾಡುಗಳಿದ್ದು, ಪ್ರಸಾದ್ ಕೆ ಶೆಟ್ಟಿ ಅವರ ಸಂಗೀತ ನಿರ್ದೇಶನವಿದೆ. ನಿವಾಸ್ ನಾರಾಯಣ್ ಛಾಯಾಗ್ರಹಣ, ಜ್ಞಾನೇಶ್ ಬಿ ಮಠದ್ ಸಂಕಲನ ಹಾಗೂ ವಿಕ್ರಮ್, ಅಶೋಕ್ ಅವರ ಸಾಹಸ ನಿರ್ದೇಶನವಿದೆ. ಇದನ್ನೂ ಓದಿ:ಬಿಗ್ ಬಾಸ್ ಆಟಕ್ಕೆ ಫುಲ್ ಸ್ಟಾಪ್ ಇಡಲು ನಿರ್ಧರಿಸಿದ ಆರ್ಯವರ್ಧನ್ ಗುರೂಜಿ

    ರಂಜಿತ್ (Ranjith) ಮೊದಲ ಬಾರಿಗೆ ಈ ಚಿತ್ರದ ಮೂಲಕ ನಾಯಕನಾಗಿ ಚಿತ್ರರಂಗ ಪ್ರವೇಶಿಸುತ್ತಿದ್ದಾರೆ. ಸ್ಪಂದನ ಸೋಮಣ್ಣ “ದಿಲ್ ಖುಷ್ ” ಚಿತ್ರದ ನಾಯಕಿ. ರಂಗಾಯಣ ರಘು, ಧರ್ಮಣ್ಣ ಕಡೂರು, ರವಿ ಭಟ್, ಅರುಣ ಬಾಲರಾಜ್, ರಘು ರಾಮನಕೊಪ್ಪ, ಸೂರ್ಯ ಪ್ರವೀಣ್, ಮಧುಸೂದನ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಮ್ಯೂಸಿಕಲ್ ಲವ್‌ಸ್ಟೋರಿ ಹೇಳಲು ರೆಡಿಯಾದ `ದಿಲ್ ಖುಷ್’

    ಮ್ಯೂಸಿಕಲ್ ಲವ್‌ಸ್ಟೋರಿ ಹೇಳಲು ರೆಡಿಯಾದ `ದಿಲ್ ಖುಷ್’

    ಸ್ಯಾಂಡಲ್‌ವುಡ್‌ನಲ್ಲಿ ಸಿನಿಮಾ ರಿಲೀಸ್‌ಗೂ ಮುನ್ನವೇ ಟೈಟಲ್‌ನಿಂದಲೇ ಮೋಡಿ ಮಾಡುತ್ತಿರುವ `ದಿಲ್ ಖುಷ್’ ಸಿನಿಮಾದ ಮುಹೂರ್ತ ಇಂದು ವರಸಿದ್ದಿ ದೇವಸ್ಥಾನದಲ್ಲಿ ನೆರವೇರಿದೆ. `ದಿಲ್ ಖುಷ್’ ಚಿತ್ರಕ್ಕೆ ಚಾಲನೆ ನೀಡುವ ಮೂಲಕ ರೊಮ್ಯಾನ್ಸ್ ಜತೆ ಕಾಮಿಡಿ ಕಥೆಯನ್ನು ಹೇಳಲು ರೆಡಿಯಾಗಿದ್ದಾರೆ.

    ಈ ವರಸಿದ್ದಿ ವಿನಾಯಕ ದೇವಸ್ಥಾನದಲ್ಲಿ ಬ್ರಾಹ್ಮಿ ಮುಹೂರ್ತದಲ್ಲಿ ಸಿನಿಮಾದ ಪೂಜೆ ನೆರವೇರಿದೆ. ಈ ಚಿತ್ರಕ್ಕೆ `ದಿಲ್ ಖುಷ್’ ಅಂತಾ ಟೈಟಲ್ ಇಡಲಾಗಿದೆ. ಚಿತ್ರಕ್ಕೆ ಯುವ ನಿರ್ದೇಶಕ ಪ್ರಮೋದ್ ಜಯ ನಿರ್ದೇಶನವಿದೆ. ಯುವ ನಟ ರಂಜಿತ್ ಹಾಗೂ ಯುವ ನಟಿ ಸ್ಪಂದನ ಸೋಮಣ್ಣ ಪ್ರಮುಖ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಇದೀಗ ಚಿತ್ರದ ಫಸ್ಟ್ ಲುಕ್ ರಿಲೀಸ್ ಆಗಿದೆ.

    ನಿರ್ದೇಶಕ ಸಿಂಪಲ್ ಸುನಿ ಜತೆ ಕೆಲಸ ಮಾಡಿ ಅನುಭವವಿರುವ ಪ್ರಮೋದ್ ಜಯ ಇದೀಗ ನಿರ್ದೇಶನಕ್ಕೆ ಇಳಿದಿದ್ದಾರೆ. ಜಯಪ್ರಭಾ ಕಲರ್ಸ್ ಫ್ರೇಮ್ಸ್ ನಿರ್ಮಾಣದ `ದಿಲ್ ಖುಷ್’ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳ್ತಿದ್ದಾರೆ. ಇದೊಂದು ಮ್ಯೂಸಿಕಲ್ ರೊಮ್ಯಾನ್ಸ್ ಜತೆ ಕಾಮಿಡಿ ಕಥೆಯಾಗಿದ್ದು, ಭಿನ್ನ ಲವ್ ಸ್ಟೋರಿಯನ್ನು ತೆರೆಯ ಮೇಲೆ ತೋರಿಸಲು ನಿರ್ದೇಶಕ ಪ್ರಮೋದ್ ರೆಡಿಯಾಗಿದ್ದಾರೆ. ಸದ್ಯದಲ್ಲೇ ಶೂಟಿಂಗ್ ಶುರುವಾಗಲಿದೆ. ಪ್ರಸಾದ್ ಕೆ ಶೆಟ್ಟಿ ಸಂಗೀತವಿರುವ ಈ ಸಿನಿಮಾ ವರ್ಷದ ಅಂತ್ಯದಲ್ಲಿ ತೆರೆಗೆ ಅಪ್ಪಳಿಸಲಿದೆ. ಇದನ್ನೂ ಓದಿ: ಹಿಂದಿ ವೆಬ್ ಸಿರೀಸ್‌ನಲ್ಲಿ `ರಂಗಿತರಂಗ’ ನಟಿ ರಾಧಿಕಾ ನಾರಾಯಣ್

    ಈ ಚಿತ್ರದ ಮೂಲಕ ಮುದ್ದಾದ ಪ್ರೇಮ ಕಥೆಯ ಜತೆ ರಂಜಿತ್ ಮತ್ತು ಸ್ಪಂದನ ಸೋಮಣ್ಣ ಜೋಡಿಯಾಗಿ ಬರುತ್ತಿದ್ದಾರೆ. ರಿಲೀಸ್ ಬಳಿಕ ದಿಲ್ ಖುಷ್ ಸಿನಿಮಾ ಪ್ರೇಕ್ಷಕರ ದಿಲ್ ಗೆಲ್ಲುತ್ತಾ ಅಂತಾ ಕಾದು ನೋಡಬೇಕಿದೆ.