Tag: ಪ್ರಮೋದ್ ಸಾವಂತ್

  • ಮಹಾದಾಯಿಗೆ ಕೇಂದ್ರ ಅನುಮತಿ ಕೊಡಲ್ಲ – ಗೋವಾ ಸಿಎಂ ಹೇಳಿಕೆಗೆ ಡಿಕೆಶಿ ಕೆಂಡಾಮಂಡಲ

    ಮಹಾದಾಯಿಗೆ ಕೇಂದ್ರ ಅನುಮತಿ ಕೊಡಲ್ಲ – ಗೋವಾ ಸಿಎಂ ಹೇಳಿಕೆಗೆ ಡಿಕೆಶಿ ಕೆಂಡಾಮಂಡಲ

    – ಗೋವಾ ಮುಖ್ಯಮಂತ್ರಿ ಮೆಂಟಲ್ ಬ್ಯಾಲೆನ್ಸ್ ಕಳೆದುಕೊಂಡಿದ್ದಾರೆ
    – ಪ್ರಧಾನಿ ಮೋದಿ, ಜಲಮಂತ್ರಿಗಳೊಂದಿಗೆ ಚರ್ಚೆ ಮಾಡ್ತೀನಿ ಎಂದ ಡಿಸಿಎಂ

    ಬೆಂಗಳೂರು: ಗೋವಾ ಸಿಎಂ ಮೆಂಟಲ್ ಬ್ಯಾಲೆನ್ಸ್ ಕಳೆದುಕೊಂಡು ಮಹದಾಯಿ (Mahadayi) ವಿಚಾರದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ ಅಂತ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಗೋವಾ ಸಿಎಂ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

    ಮಹದಾಯಿಗೆ ಕೇಂದ್ರ ಸರ್ಕಾರ ಅನುಮತಿ ಕೊಡಲ್ಲ ಎಂಬ ಗೋವಾ ಸಿಎಂ ಪ್ರಮೋದ್‌ ಸಾವಂತ್‌ (Pramod Sawant) ಹೇಳಿಕೆಗೆ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಗೋವಾ ಸಿಎಂ ಹೇಳಿಕೆಯನ್ನ ನಾನು ಖಂಡಿಸುತ್ತೇನೆ. ಗೋವಾ ಸಿಎಂ ಮೆಂಟಲ್ ಬ್ಯಾಲೆನ್ಸ್ ಕಳೆದುಕೊಂಡಿದ್ದಾರೆ. ಗೋವಾ ಸಿಎಂಗೆ ಫೆಡರಲ್‌ ವ್ಯವಸ್ಥೆ ಬಗ್ಗೆ ಗೊತ್ತಿಲ್ಲ. ಈಗಾಗಲೇ ಮಹದಾಯಿ ಯೋಜನೆ ಬಗ್ಗೆ ಅವಾರ್ಡ್ ತೀರ್ಮಾ ಆಗಿದೆ. ಟೆಂಡರ್ ಕೂಡ ಕರೆಯಲಾಗಿದೆ. ಕೆಲಸ ಶುರು ಮಾಡಬೇಕು. ಇದರ ಮಧ್ಯೆ ಅರಣ್ಯ ಇಲಾಖೆ ಏನೋ ನೊಟೀಸ್‌ ಕೊಟ್ಟಿದೆ. ನಾವು ಅದಕ್ಕೆ ಎಲ್ಲಾ ಉತ್ತರ ಕೊಡ್ತೀವಿ. ಮಹದಾಯಿ ವಿಷಯದಲ್ಲಿ ನಮ್ ಕೆಲಸ ನಾವು ಪ್ರಾರಂಭ ಮಾಡ್ತೀವಿ ಅಂತ ಸ್ಪಷ್ಟನೆ ನೀಡಿದರು.

    ಇದು ನಮ್ಮ ರಾಜ್ಯದ ಸಂಸದರ ಸ್ವಾಭಿಮಾನದ‌‌ ಪ್ರಶ್ನೆ. ಈವರೆಗೂ ಸಂಸದರು ಬಾಯಿ ಮುಚ್ಚಿಕೊಂಡಿರೋದೇ ತಪ್ಪು. ಒಂದು ಎಂಪಿ ಸೀಟಿಗೋಸ್ಕರ ನಾವು ನಮ್ಮನ್ನ ಮಾರಿಕೊಳ್ಳೋಕೆ ಸಾಧ್ಯವಿಲ್ಲ. 28 ಸಂಸದರು, 12 ಜನ ರಾಜ್ಯಸಭೆ ಸದಸ್ಯರು ಈ ಬಗ್ಗೆ ಮಾತಾಡಬೇಕು. ನಾನು ದೆಹಲಿಗೆ ಹೋಗಿ ಸಂಸದರ ಜೊತೆ ಮಾತಾಡ್ತೀನಿ. ಪ್ರಧಾನಿ, ಜಲಶಕ್ತಿ ಮಂತ್ರಿಗಳಿಗೂ ಸಮಯ ‌ಕೇಳ್ತೀನಿ. ಇದರ ಬಗ್ಗೆ ಚರ್ಚೆ ಮಾಡ್ತೀನಿ ಅಂತ‌ ತಿಳಿಸಿದರು.

    ಮಹದಾಯಿ ವಿಚಾರದಲ್ಲಿ ಕೇಂದ್ರ ಜಲಶಕ್ತಿ ಮತ್ತು ಅರಣ್ಯ ಸಚಿವರು ರಾಜಕೀಯ ಮಾಡ್ತಿಲ್ಲ. ಅವರು ಸಹ ಅಭಿವೃದ್ಧಿ ಆಗಬೇಕು ಅಂತ ಹೇಳಿದ್ದಾರೆ. ಗೋವಾ ಇದರಲ್ಲಿ ರಾಜಕೀಯ ಮಾಡ್ತಿದೆ. ನಾವು ಮಹದಾಯಿ ಕೆಲಸ ಪ್ರಾರಂಭ ಮಾಡೋಕೆ ಏನು ಬೇಕೋ ಅದನ್ನ ಮಾಡ್ತೀವಿ ಅಂತ ಗೋವಾ ಸಿಎಂ ವಿರುದ್ಧ ಡಿಕೆಶಿವಕುಮಾರ್ ವಾಗ್ದಾಳಿ ನಡೆಸಿದರು.

  • ಮಹದಾಯಿ ವಿಚಾರದಲ್ಲಿ ಗೋವಾ ಸಿಎಂಗೆ ಮುಖಭಂಗ

    ಮಹದಾಯಿ ವಿಚಾರದಲ್ಲಿ ಗೋವಾ ಸಿಎಂಗೆ ಮುಖಭಂಗ

    ಬೆಳಗಾವಿ: ಮಹದಾಯಿ ವಿಚಾರದಲ್ಲಿ ಕರ್ನಾಟಕದ (Karnataka) ಸರ್ಕಾರದ ವಿರುದ್ಧ ಸುಳ್ಳು ಆರೋಪ‌ ಮಾಡಿದ್ದ ಗೋವಾ ಸಿಎಂ (Goa CM) ಪ್ರಮೋದ್ ಸಾವಂತ್‌ಗೆ (Pramod Sawant) ತೀವ್ರ ಮುಖಭಂಗವಾಗಿದೆ.

    ಬೆಳಗಾವಿ ಜಿಲ್ಲೆಯ ಖಾನಾಪೂರ ತಾಲೂಕಿನ ಕಣಕುಂಬಿ ಬಳಿಯ ಮಹದಾಯಿ ಜಲಾನಯನ ಪ್ರದೇಶದಲ್ಲಿ ಯಾವುದೇ ರೀತಿಯ ಅನುಮತಿ ಇಲ್ಲದೇ ಕರ್ನಾಟಕ ಮಹಾದಾಯಿ ಯೋಜನೆ (Mahadayi Project) ಕಾಮಗಾರಿ ಆರಂಭಿಸಿದೆ ಎಂದು ಪ್ರಮೋದ್ ಸಾವಂತ್ ತಮ್ಮ ಎಕ್ಸ್‌ ಖಾತೆಯಲ್ಲಿ ಆರೋಪಿಸಿದ್ದರು. ಇದನ್ನೂ ಓದಿ: ರಷ್ಯಾಗೆ ತೆರಳಿದ ಪ್ರಧಾನಿ ಮೋದಿ

    ಪ್ರಮೋದ್ ಸಾವಂತ್ ‌ಆರೋಪದ‌ ಬೆನ್ನಲ್ಲೇ ‌ಮಹದಾಯಿ ಜಲಾನಯನ ಪ್ರದೇಶಕ್ಕೆ ಕೇಂದ್ರದ ಪ್ರವಾಹ ಸಮಿತಿ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿತ್ತು. ಕೇಂದ್ರದ ತಂಡ‌ ಭೇಟಿ ವೇಳೆ ಕರ್ನಾಟಕವನ್ನು ಕೃತ್ಯ ಬಯಲಾಗಲಿದೆ ಎಂದು ಪ್ರಮೋದ್ ಸಾವಂತ್ ಹೇಳಿದ್ದರು.

    ಖಾನಾಪುರ ತಾಲೂಕಿನ ಕಣಕುಂಬಿ ಬಳಿಯ ಮಹಾದಾಯಿ ಜಲಾನಯನ ಪ್ರದೇಶಕ್ಕೆ ಕೇಂದ್ರ ‌ತಂಡ ಭೇಟಿ ನೀಡಿದೆ. ಈ ವೇಳೆ ಕಾಮಗಾರಿ ನಡೆಯದೇ ಇರುವುದು ದೃಢವಾಗಿದೆ.

    ಮೊದಲಿನಿಂದಲೂ ಮಹಾದಾಯಿ ಯೋಜನೆ ಜಾರಿಗೆ ಗೋವಾ ಪದೇ ಪದೇ ಅಡ್ಡಗಾಲು ಹಾಕುತ್ತಾ ಬಂದಿದೆ. ಮಹದಾಯಿ ನ್ಯಾಯಧೀಕರಣ, ಸುಪ್ರೀಂ ಕೋರ್ಟ್ ತೀರ್ಪು ನೀಡಿದರೂ ಜಾರಿಯಾಗುತ್ತಿಲ್ಲ.

    ಕೇಂದ್ರ ಅರಣ್ಯ, ವನ್ಯಜೀವಿ ಹಾಗೂ ಪರಿಸರ ಇಲಾಖೆ ಅನುಮತಿಗೂ ಗೋವಾ ಸರ್ಕಾರ ಅಡ್ಡಗಾಲು ಹಾಕುತ್ತಿದ್ದು ಮಹದಾಯಿ ಜಾರಿ ವಿರುದ್ಧ ಗೋವಾ ಕುತಂತ್ರಕ್ಕೆ ಕರ್ನಾಟಕದ ಜನಪ್ರತಿನಿಧಿಗಳು ತಿರುಗೇಟು ನೀಡುವ ಪ್ರಯತ್ನ ಮಾಡಬೇಕಿದೆ. ಐದು ದಶಕಗಳ ಕಾಲ ಹೋರಾಟ ಮಾಡಿದರೂ ಮಲಪ್ರಭಾ ನದಿ ಪಾತ್ರದ ಜನರಿಗೆ ಹನಿ ನೀರು ಸಿಗುತ್ತಿಲ್ಲ.

  • ರಿಷಬ್‌ ನಟನೆಯ ʻಕಾಂತಾರʼ ಚಿತ್ರಕ್ಕೆ ಗೋವಾ ಸಿಎಂ ಮೆಚ್ಚುಗೆ

    ರಿಷಬ್‌ ನಟನೆಯ ʻಕಾಂತಾರʼ ಚಿತ್ರಕ್ಕೆ ಗೋವಾ ಸಿಎಂ ಮೆಚ್ಚುಗೆ

    ನ್ನಡದ `ಕಾಂತಾರ’ (Kantara Film) ಚಿತ್ರದ ಹವಾ ಇನ್ನೂ ಕಮ್ಮಿಯಾಗಿಲ್ಲ. ಗಡಿ ದಾಟಿ ಸದ್ದು ಮಾಡ್ತಿರುವ ರಿಷಬ್ ಚಿತ್ರಕ್ಕೆ ಗೋವಾ ಸಿಎಂ ಪ್ರಮೋದ್ ಸಾವಂತ್(Pramod Sawant) ಮೆಚ್ಚುಗೆ ಸೂಚಿಸಿದ್ದಾರೆ. ರಿಷಬ್ ಶೆಟ್ಟಿ ಅವರನ್ನು ಭೇಟಿಯಾಗಿ, ಚಿತ್ರದ ಬಗ್ಗೆ ಹಾಡಿ ಹೊಗಳಿದ್ದಾರೆ.

    ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿರುವ `ಕಾಂತಾರ’ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. 400 ಕೋಟಿಗೂ ಮೀರಿ ಕಲೆಕ್ಷನ್ ಮಾಡಿರುವ ಕಾಂತಾರ ಒಟಿಟಿಯಲ್ಲೂ ಮೋಡಿ ಮಾಡ್ತಿದೆ. ಹೀಗಿರುವಾಗ `ಕಾಂತಾರ’ ಸಿನಿಮಾ ನೋಡಿ, ರಿಷಬ್ ಅವರನ್ನ ಗೋವಾ ಸಿಎಂ ಭೇಟಿಯಾಗಿದ್ದಾರೆ.

    ಗೋವಾದ ಪಣಜಿಯಲ್ಲಿ ನಟ, ಬರಹಗಾರ, ರಿಷಬ್ ಶೆಟ್ಟಿ ಆಗಿರುವುದಾಗಿ ಟ್ವಿಟ್ಟರ್ ಮೂಲಕ ತಿಳಿಸಿದ್ದಾರೆ. ಕಾಂತಾರ ಸಿನಿಮಾ ಜನಮನ್ನಣೆ ಗಳಿಸಿದೆ. ವಿವಿಧ ವಿಷಯಗಳ ಕುರಿತು ನಾವು ಚರ್ಚಿಸಿದ್ದೇವೆ. ರಿಷಬ್ ಶೆಟ್ಟಿ ಮುಂದಿನ ಕೆಲಸಗಳಿಗೆ ಗೋವಾ ಸರ್ಕಾರದ ಬೆಂಬಲ ಸದಾ ಇದ್ದೇ ಇದೆ ಎಂದು ಪ್ರಮೋದ್ ಸಾವಂತ್ ಬೆಂಬಲ ಸೂಚಿಸಿದ್ದಾರೆ. ಜೊತೆಗೆ ರಿಷಬ್ ಸಿನಿಮಾವನ್ನ ಮೆಚ್ಚಿ, ಬೆನ್ನು ತಟ್ಟಿದ್ದಾರೆ.

    ಇನ್ನೂ ಐವತ್ತು ದಿನಗಳನ್ನು ಪೂರೈಸಿ, ಯಶಸ್ವಿಯಾಗಿ ಮುನ್ನುಗ್ಗುತ್ತಿರುವ ಕಾಂತಾರ ಸಿನಿಮಾ ಈವರೆಗೂ 400 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಕರ್ನಾಟಕವೊಂದರಲ್ಲೇ 170 ಕೋಟಿಗೂ ಅಧಿಕ ಹಣ ಬಾಕ್ಸ್ ಆಫೀಸಿಗೆ ಹರಿದು ಬಂದಿದೆ ಎಂದು ಹೇಳಲಾಗುತ್ತಿದೆ. ಹಿಂದಿ, ತಮಿಳು, ತೆಲುಗು, ಮಲಯಾಳಂ ಹಾಗೂ ವಿದೇಶದಿಂದ ಬಂದ ಹಣವನ್ನು ಒಟ್ಟಾಗಿಸಿದರೆ ಸಿನಿಮಾದ ಒಟ್ಟು ಗಳಿಕೆ 400 ಕೋಟಿ ರೂ. ಕಲೆಕ್ಷನ್ ಮಾಡಿದೆ.

    Live Tv
    [brid partner=56869869 player=32851 video=960834 autoplay=true]

  • ಗೋವಾ ಸಿಎಂ ಭೇಟಿಯಾದ ಯಶ್, ರಾಧಿಕಾ ಪಂಡಿತ್

    ಗೋವಾ ಸಿಎಂ ಭೇಟಿಯಾದ ಯಶ್, ರಾಧಿಕಾ ಪಂಡಿತ್

    ತ್ತೀಚಿನ ದಿನಗಳಲ್ಲಿ ನಟ ಯಶ್ ಅವರು ರಾಜಕೀಯಕ್ಕೆ ಬರುತ್ತಾರೆ ಎನ್ನುವ ಕುರಿತು ಭಾರೀ ಚರ್ಚೆ ಆಗುತ್ತಿದೆ. ಅವರು ಈ ಕುರಿತು ಎಲ್ಲಿಯೂ ಹೇಳಿಕೆ ನೀಡದೇ ಇದ್ದರೂ, ಅವರ ನಡೆಗಳು ಇಂಥದ್ದೊಂದು ಪ್ರಶ್ನೆಯನ್ನು ಹುಟ್ಟು ಹಾಕುತ್ತಿವೆ. ಕಳೆದ ಐದಾರು ವರ್ಷಗಳಿಂದ ರಾಕಿಭಾಯ್ ಹತ್ತು ಹಲವು ಜನಪರ ಕೆಲಸಗಳನ್ನು ಮಾಡುತ್ತಾ ಬರುತ್ತಿದ್ದಾರೆ. ಅದರಲ್ಲೂ ಉತ್ತರ ಕರ್ನಾಟಕದ ಅನೇಕ ಹಳ್ಳಿಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಿದ್ದಾರೆ. ಕೆರೆಗಳನ್ನು ಸಂರಕ್ಷಿಸಿದ್ದಾರೆ. ಹೀಗಾಗಿ ಅವರಿಗೆ ಜನಪರ ಕೆಲಸ ಮಾಡುವ ಒಲವು ಇದೆ. ಇದನ್ನೂ ಓದಿ : ‘ಟಕ್ಕರ್’ ಮೂಲಕ ಪ್ರೇಕ್ಷಕರ ಮನಗೆಲ್ಲೋಕೆ ರೆಡಿಯಾದ ಮನೋಜ್ ಕುಮಾರ್

    ಅನೇಕ ಸಂದರ್ಶನಗಳಲ್ಲಿ ಯಶ್, ‘ನನ್ನ ಗುರಿ ಬೇರೆ. ನಾನು ತಲುಪಬೇಕಿರುವ ಕೇಂದ್ರಸ್ಥಾನ ಬೇರೆ’ ಎನ್ನುವ ಅರ್ಥದಲ್ಲಿ ಅನೇಕ ಬಾರಿ ಮಾತಾಡಿದ್ದೂ ಇದೆ. ಹಾಗಾಗಿ ಯಶ್ ರಾಜಕೀಯಕ್ಕೆ ಬರುತ್ತಾರೆ ಎನ್ನುವ ಮಾತು ಮುನ್ನೆಲೆಗೆ ಬಂದಿದೆ. ಅದಕ್ಕೆ ಪೂರಕ ಎನ್ನುವಂತೆ ಯಶ್ ನಿನ್ನೆಷ್ಟೇ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರನ್ನು ಭೇಟಿ ಮಾಡಿದ್ದಾರೆ. ಸದ್ಯ ಯಶ್ ಮತ್ತು ರಾಧಿಕಾ ಪಂಡಿತ್ ಗೋವಾದಲ್ಲೇ ಇದ್ದು, ಪಣಜಿಯಲ್ಲಿ ಅವರು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ್ದಾರೆ.

    ಈ ಹಿಂದೆ ಯಶ್ ಹಲವಾರು ರಾಜಕೀಯ ಮುಖಂಡರ ಜತೆ ಗುರುತಿಸಿಕೊಂಡಿದ್ದೂ ಇದೆ. ಸುಮಲತಾ ಅಂಬರೀಶ್ ಅವರು ಮಂಡ್ಯ ಕ್ಷೇತ್ರದಲ್ಲಿ ಚುನಾವಣೆಗೆ ನಿಂತಾಗ, ಅವರ ಪರ ಪ್ರಚಾರ ಮಾಡಿದ್ದಾರೆ. ಕಾಂಗ್ರೆಸ್ ಮುಖಂಡ ಎಂ.ಬಿ. ಪಾಟೀಲ್ ಅವರ ಜೊತೆ ಹಲವಾರು ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದಾರೆ. ಹತ್ತಾರು ಯೋಜನೆಗಳಿಗೆ ಕೈ ಜೋಡಿಸಿದ್ದಾರೆ. ಹೀಗಾಗಿ ಇವತ್ತಲ್ಲ, ನಾಳೆ ಯಶ್ ರಾಜಕೀಯಕ್ಕೆ ಬರುತ್ತಾರೆ ಎನ್ನುತ್ತದೆ ಯಶ್ ವಲಯ. ಇದನ್ನೂ ಓದಿ : ಸಿನಿಮಿಯ ರೀತಿಯಲ್ಲಿ ಅಪಹರಣ – ಸ್ಯಾಂಡಲ್‍ವುಡ್ ಖಳನಟ ಅರೆಸ್ಟ್

    ದಿಢೀರ್ ಅಂತ ಅವರು ರಾಜಕೀಯ ಪ್ರವೇಶ ಮಾಡದೇ ಇದ್ದರೂ, ಅದಕ್ಕೆ ಸೂಕ್ತ ವೇದಿಕೆಯನ್ನಂತೂ ಈಗಿನಿಂದಲೇ ತಯಾರು ಮಾಡಿಕೊಳ್ಳುತ್ತಿದ್ದಾರೆ ಎನ್ನುವ ಮಾತು ಕೂಡ ಗಾಂಧಿನಗರದಲ್ಲಿ ಹರಿದಾಡುತ್ತಿದೆ. ಯಶ್ ಮುಂದೊಂದು ದಿನ ದೊಡ್ಡ ರಾಜಕಾರಣಿಯಾಗಿ ಉನ್ನತ ಹುದ್ದೆಯನ್ನೂ ಏರಲಿ ಎನ್ನುವುದು ಅವರ ಅಭಿಮಾನಿಗಳ ಆಸೆಯೂ ಆಗಿದೆ.

  • ಬೆಳಗಾವಿ ಆರ್‌ಎಸ್‌ಎಸ್ ಕಚೇರಿಗೆ ಗೋವಾ ಸಿಎಂ ಭೇಟಿ – ಇನ್ನೊಮ್ಮೆ ಮೋದಿ ಪ್ರಧಾನಿ ಆಗ್ತಾರೆ ಎಂದ ಸಾವಂತ್

    ಬೆಳಗಾವಿ ಆರ್‌ಎಸ್‌ಎಸ್ ಕಚೇರಿಗೆ ಗೋವಾ ಸಿಎಂ ಭೇಟಿ – ಇನ್ನೊಮ್ಮೆ ಮೋದಿ ಪ್ರಧಾನಿ ಆಗ್ತಾರೆ ಎಂದ ಸಾವಂತ್

    ಬೆಳಗಾವಿ: ಖಾಸಗಿ ಕಾರ್ಯಕ್ರಮಗಳ ನಿಮಿತ್ತ ಕುಂದಾನಗರಿ ಬೆಳಗಾವಿಗೆ ಆಗಮಿಸಿದ ಗೋವಾ ಸಿಎಂ ಪ್ರಮೋದ್ ಸಾವಂತ್ ನಗರದ ಆರ್‌ಎಸ್‌ಎಸ್ ಕಚೇರಿಗೆ ಭೇಟಿ ನೀಡಿ ಮುಖಂಡರೊಂದಿಗೆ ಕುಶಲೋಪರಿ ಹಂಚಿಕೊಂಡರು.

    ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸಾವಂತ್, 2024ರ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಮುನ್ನಡೆಯುತ್ತಿರುವ ಬಿಜೆಪಿ ಸರ್ಕಾರ ಮತ್ತೊಮ್ಮೆ ಅಧಿಕಾರಕ್ಕೆ ಬರುತ್ತದೆ. ಯಾರು ಏನೇ ಮಾತನಾಡಿದರೂ ಕೇಂದ್ರ ಸರ್ಕಾರ ಉತ್ತಮವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ನರೇಂದ್ರ ಮೋದಿ ಸರ್ಕಾರ ಮತ್ತೊಮ್ಮೆ ಅಧಿಕಾರಿಕ್ಕೆ ಬರಲಿದೆ ಎಂದು ಭವಿಷ್ಯ ನುಡಿದರು.

    ಆರ್‌ಎಸ್‌ಎಸ್ ಕಚೇರಿಗೆ ಭೇಟಿ ನೀಡಿದ ವಿಚಾರವಾಗಿ ಮಾತನಾಡಿದ ಸಾವಂತ್ ನಾನು ಎಲ್ಲೇ ಹೋದರೂ ಆರ್‌ಎಸ್‌ಎಸ್ ಕಚೇರಿಗೆ ಭೇಟಿ ಕೊಡುತ್ತೇನೆ. ಅದೇ ರೀತಿ ಇಲ್ಲಿಯೂ ಭೇಟಿ ಕೊಟ್ಟಿದ್ದೇನೆ. ಬೆಳಗಾವಿ ಕಾರ್ಯಕ್ರಮ ಮುಗಿಸಿ ಕೊಲ್ಲಾಪುರ ಮಹಾಲಕ್ಷ್ಮಿದೇವಿ ದರ್ಶನಕ್ಕೆ ತೆರಳುತ್ತೇನೆ. ಕೊಲ್ಲಾಪುರದಲ್ಲಿ ನನ್ನ ಸ್ನೇಹಿತರು ನನಗೆ ಸನ್ಮಾನ ಕಾರ್ಯಕ್ರಮ ಇಟ್ಟುಕೊಂಡಿದ್ದಾರೆ ಅಲ್ಲಿಗೆ ಹೋಗುತ್ತಿದ್ದೇನೆ ಎಂದರು. ಇದನ್ನೂ ಓದಿ: XE ರೂಪಾಂತರಿ ಮುಂಬೈನಲ್ಲಿ ಪತ್ತೆಯಾಗಿಲ್ಲ: ಮಹಾರಾಷ್ಟ್ರ ಸ್ಪಷ್ಟನೆ

    ಗೋವಾದಲ್ಲಿ ಮತ್ತೊಮ್ಮೆ ಸಿಎಂ ಆಗಿರುವ ವಿಚಾರಕ್ಕೆ, ನಾನು ಎರಡನೇ ಬಾರಿಗೆ ಗೋವಾ ಸಿಎಂ ಆಗಿದ್ದಕ್ಕೆ ಬಿಜೆಪಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ಮುಂಬರುವ ನನ್ನ ಆಡಳಿತದ ಅವಧಿಯಲ್ಲಿ ಗೋವಾದಲ್ಲಿ ಪ್ರವಾಸೋದ್ಯಮ, ಉದ್ಯೋಗ ಸೃಷ್ಟಿಗೆ ಹೆಚ್ಚಿನ ಮಹತ್ವ ಕೊಡುತ್ತೇನೆ. ಇದರ ಜೊತೆಗೆ ಪ್ರಧಾನಿ ನರೇಂದ್ರ ಮೋದಿ ಕನಸಾಗಿರುವ ಆತ್ಮ ನಿರ್ಬರ್ ಮಾಡಲು ಪಣತೊಡುತ್ತೇನೆ ಎಂದರು. ಇದನ್ನೂ ಓದಿ: ‘ಬಿಗ್ ಬ್ರದರ್’ ಎಂದು ಭಾರತ, ಮೋದಿಗೆ ಧನ್ಯವಾದ ಹೇಳಿದ ಲಂಕಾ ಕ್ರಿಕೆಟಿಗ ಜಯಸೂರ್ಯ

    ಇದೇ ವೇಳೆ ಅಲ್ ಖೈದಾ ಮುಖ್ಯಸ್ಥನ ಪ್ರತಿಕ್ರಿಯೆ ವಿಚಾರಕ್ಕೆ ಕೇಳಲಾದ ಪ್ರಶ್ನೆಗೆ ಗೋವಾ ಸಿಎಂ ಪ್ರಮೋದ್ ಸಾವಂತ್ ಪ್ರತಿಕ್ರಿಯೆ ನೀಡದೇ ತೆರಳಿದರು.

  • ಉಚಿತ ಎಲ್‍ಪಿಜಿ ಸಿಲಿಂಡರ್ ನೀಡಲು ಹಣ ಮಂಜೂರು: ಪ್ರಮೋದ್ ಸಾವಂತ್

    ಉಚಿತ ಎಲ್‍ಪಿಜಿ ಸಿಲಿಂಡರ್ ನೀಡಲು ಹಣ ಮಂಜೂರು: ಪ್ರಮೋದ್ ಸಾವಂತ್

    ಪಣಜಿ: ರಾಜ್ಯದ ಜನರಿಗೆ ಮೂರು ಎಲ್‍ಪಿಜಿ ಸಿಲಿಂಡರ್‌ಗಳನ್ನು ಉಚಿತವಾಗಿ ನೀಡಲು 40ಕೋಟಿ ರೂ. ಮೊತ್ತವನ್ನು ನೀಡುವುದಾಗಿ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಘೋಷಿಸಿದರು.

    ವಿಧಾನಸಭೆಯಲ್ಲಿ ಈ ಬಾರಿಯ ರಾಜ್ಯ ಬಜೆಟ್‍ನ್ನು ಮಂಡಿಸಿದ ಅವರು ರಾಜ್ಯದ ಮತ್ತು ಜನರ ಅಭಿವೃದ್ಧಿ ಹಾಗೂ ಸಮೃದ್ಧಿಗಾಗಿ ಈ ಬಜೆಟ್ ಆಗಿದೆ ಎಂದು ಹೇಳಿದರು.

    ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಇಂದು ಗೋವಾ ವಿಧಾನಸಭೆಯಲ್ಲಿ 2022-23ನೇ ಸಾಲಿನ ರಾಜ್ಯ ಬಜೆಟ್‍ನ್ನು ಮಂಡಿಸಿದ್ದಾರೆ. ಗೋವಾ ಜನತೆಗೆ, ರಾಜ್ಯದ ಅಭಿವೃದ್ಧಿಗೆ ಹಾಗೂ ರಾಜ್ಯದ ಏಳಿಗೆಗಾಗಿ ಇರುವ ಬಜೆಟ್ ಇದಾಗಿದೆ ಎಂದು ತಿಳಿಸಿದರು.

    ಪಣಜಿ ಬಳಿಯ ಡಾ. ಶ್ಯಾಮ ಪ್ರಸಾದ್ ಮುಖರ್ಜಿ ಕ್ರೀಡಾಂಗಣದಲ್ಲಿ ಎರಡನೇ ಬಾರಿಗೆ ಗೋವಾದಲ್ಲಿ ಮುಖ್ಯಮಂತ್ರಿಯಾಗಿ ಪ್ರಮೋದ್ ಸಾವಂತ್ ಅವರು ಸೋಮವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಗೋವಾ ರಾಜ್ಯಪಾಲ ಪಿಎಸ್ ಶ್ರೀಧರನ್ ಪಿಳ್ಳೈ ಅವರು ಪ್ರಮೋದ್ ಸಾವಂತ್ ಅವರಿಗೆ ಪ್ರಮಾಣ ವಚನ ಬೋಧಿಸಿದರು. ಪ್ರಮೋದ್ ಸಾವಂತ್ ಕೊಂಕಣಿ ಭಾಷೆಯಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಇದನ್ನೂ ಓದಿ: ಎರಡನೇ ಬಾರಿ ಗೋವಾ ಮುಖ್ಯಮಂತ್ರಿಯಾಗಿ ಪ್ರಮೋದ್ ಸಾವಂತ್ ಪ್ರಮಾಣವಚನ

    ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವ ನಿತಿನ್ ಗಡ್ಕರಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಹಿಮಾಚಲ ಪ್ರದೇಶದ ರಾಜ್ಯಪಾಲ ರಾಜೇಂದ್ರ ಅರ್ಲೇಕರ್, ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡನಾವಿಸ್ ಸೇರಿದಂತೆ ಹಲವಾರು ಗಣ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಇದನ್ನೂ ಓದಿ: ಈ ಬಾರಿ ಮಾವಿನ ಹಣ್ಣು ಸವಿಯೋಕೆ ತುಸು ಕಾಯ್ಬೇಕು- ಅಕಾಲಿಕ ಮಳೆಗೆ ಬಾರದ ಫಸಲು, ಬೆಲೆ ಗಗನಕ್ಕೆ

  • ಎರಡನೇ ಬಾರಿ ಗೋವಾ ಮುಖ್ಯಮಂತ್ರಿಯಾಗಿ  ಪ್ರಮೋದ್ ಸಾವಂತ್ ಪ್ರಮಾಣವಚನ

    ಎರಡನೇ ಬಾರಿ ಗೋವಾ ಮುಖ್ಯಮಂತ್ರಿಯಾಗಿ ಪ್ರಮೋದ್ ಸಾವಂತ್ ಪ್ರಮಾಣವಚನ

    ಪಣಜಿ: ಎರಡನೇ ಬಾರಿಗೆ ಗೋವಾದಲ್ಲಿ ಮುಖ್ಯಮಂತ್ರಿಯಾಗಿ ಪ್ರಮೋದ್ ಸಾವಂತ್ ಅವರು ಸೋಮವಾರ ಪ್ರಮಾಣ ವಚನ ಸ್ವೀಕರಿಸಿದರು.

    ಪಣಜಿ ಬಳಿಯ ಡಾ. ಶ್ಯಾಮ ಪ್ರಸಾದ್ ಮುಖರ್ಜಿ ಕ್ರೀಡಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಗೋವಾ ರಾಜ್ಯಪಾಲ ಪಿಎಸ್ ಶ್ರೀಧರನ್ ಪಿಳ್ಳೈ ಅವರು ಪ್ರಮೋದ್ ಸಾವಂತ್ ಅವರಿಗೆ ಪ್ರಮಾಣ ವಚನ ಬೋಧಿಸಿದರು. ಪ್ರಮೋದ್ ಸಾವಂತ್ ಕೊಂಕಣಿ ಭಾಷೆಯಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

    ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವ ನಿತಿನ್ ಗಡ್ಕರಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಹಿಮಾಚಲ ಪ್ರದೇಶದ ರಾಜ್ಯಪಾಲ ರಾಜೇಂದ್ರ ಅರ್ಲೇಕರ್, ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡನಾವಿಸ್ ಸೇರಿದಂತೆ ಹಲವಾರು ಗಣ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಇದನ್ನೂ ಓದಿ: ಬಂಟ ಸಮಾಜವನ್ನು ಕೇಂದ್ರ ಹಿಂದುಳಿದ ವರ್ಗಕ್ಕೆ ಸೇರಿಬೇಕು: ರಮಾನಾಥ್ ರೈ ಮನವಿ

    ಈ ತಿಂಗಳ ಪ್ರಾರಂಭದಲ್ಲಿ ನಡೆದ 40 ಕ್ಷೇತ್ರಗಳ ಗೋವಾ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 20 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು. ಈ ಮೂಲಕ ಸ್ಕಾಂಪಷ್ಗ್ರೆಟ ಬಹುಮತದಿಂದ ಬಿಜೆಪಿ ಗೋವಾದಲ್ಲಿ ಸಕಾರ ರಚಿಸಿದೆ. ಇದನ್ನೂ ಓದಿ: ಹಿಂದೂಗಳಿಗೆ ಅಲ್ಪಸಂಖ್ಯಾತ ಸ್ಥಾನಮಾನ ನೀಡಲು ರಾಜ್ಯಗಳಿಗೆ ಅಧಿಕಾರ: ಕೇಂದ್ರ ಸರ್ಕಾರ

  • 2ನೇ ಬಾರಿಗೆ ಗೋವಾ ಸಿಎಂ ಆಗಿ ಪ್ರಮೋದ್ ಸಾವಂತ್ ಆಯ್ಕೆ

    2ನೇ ಬಾರಿಗೆ ಗೋವಾ ಸಿಎಂ ಆಗಿ ಪ್ರಮೋದ್ ಸಾವಂತ್ ಆಯ್ಕೆ

    ಪಣಜಿ: ಕರಾವಳಿ ರಾಜ್ಯದಲ್ಲಿ ಯಾರಿಗೆ ಮುಖ್ಯಮಂತ್ರಿ ಹುದ್ದೆ ಸಿಗುತ್ತದೆ ಎಂಬ ಕುತೂಹಲಕ್ಕೆ ಬಿಜೆಪಿ ಕೊನೆಗೂ ಅಂತ್ಯ ಹಾಡಿದೆ. ರಾಜ್ಯದಲ್ಲಿ ಸತತ ಮೂರು ಬಾರಿ ಬಿಜೆಪಿ ಗೆದ್ದಿದ್ದು, ಗೋವಾದ ಮುಖ್ಯಮಂತ್ರಿಯಾಗಿ ಪ್ರಮೋದ್ ಸಾವಂತ್ ಅವರು ಸತತ ಎರಡನೇ ಬಾರಿಗೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

    ಗೋವಾ ವಿಧಾನಸಭೆ ಚುನಾವಣೆ ವೇಳೆ ಪಕ್ಷದ ಹೈಕಮಾಂಡ್ ಕೇಂದ್ರ ವೀಕ್ಷಕರಾಗಿ ರಾಜ್ಯಕ್ಕೆ ನಿಯೋಜಿಸಲ್ಪಟ್ಟ ನರೇಂದ್ರ ಸಿಂಗ್ ತೋಮರ್ ಸೇರಿದಂತೆ ಹಲವು ಬಿಜೆಪಿ ಹಿರಿಯ ನಾಯಕರು ನಡೆಸಿದ ಸಭೆಯಲ್ಲಿ ಸಾವಂತ್ ಅವರನ್ನು ಸೋಮವಾರ ಬಿಜೆಪಿ ಶಾಸಕಾಂಗ ಪಕ್ಷದ ನಾಯಕ ಎಂದು ಘೋಷಿಸಲಾಯಿತು. ಮುಂದಿನ ಐದು ವರ್ಷಗಳ ಕಾಲ ಪ್ರಮೋದ್ ಸಾವಂತ್ ಅವರು ಗೋವಾದ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿರಲಿದ್ದಾರೆ. ಇದನ್ನೂ ಓದಿ: ರಷ್ಯಾ ಯುದ್ಧವನ್ನು 2ನೇ ಮಹಾಯುದ್ಧಕ್ಕೆ ಹೋಲಿಸಿದ ಝೆಲೆನ್ಸ್ಕಿ

    ಸಭೆಯ ನಂತರ ಈ ವಿಚಾರವಾಗಿ ಮಾಧ್ಯಮವೊಂದಕ್ಕೆ ಪ್ರತಿಕ್ರಿಯಿಸಿದ ಅವರು, ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ನನ್ನ ಹೆಸರನ್ನು ಪ್ರಸ್ತಾಪಿಸಿದ ಪಕ್ಷಕ್ಕೆ, ಪ್ರಧಾನಿ ನರೇಂದ್ರ ಮೋದಿ, ಪಕ್ಷದ ಕೇಂದ್ರ ನಾಯಕತ್ವಕ್ಕೆ ಮತ್ತು ನನ್ನನ್ನು ನಂಬಿದ ಶಾಸಕರಿಗೆ ನಾನು ಕೃತಜ್ಞನಾಗಿದ್ದೇನೆ. ರಾಜ್ಯದಲ್ಲಿ ಪ್ರಧಾನಿ ಮೋದಿಯವರ ಅಭಿವೃದ್ದಿಯ ಕಲ್ಪನೆಯನ್ನು ಅನುಷ್ಠಾನಗೊಳಿಸುತ್ತೇನೆ. ನಾವು ನಮ್ಮ ಎಲ್ಲಾ ಚುನಾವಣಾ ಭರವಸೆಗಳನ್ನು ಈಡೇರಿಸುತ್ತೇವೆ ಮತ್ತು ನಮ್ಮ ಪ್ರಣಾಳಿಕೆಯನ್ನು ಜಾರಿಗೆ ತರಲು ಪ್ರಯತ್ನಿಸುತ್ತೇವೆ ಎಂದು ಹೇಳಿದ್ದಾರೆ.

    ನರೇಂದ್ರ ಸಿಂಗ್ ತೋಮರ್ ಅವರ ಪ್ರಕಾರ ಸಭೆಯಲ್ಲಿ ಸಾವಂತ್ ನಾಯಕರ ಅವಿರೋಧ ಆಯ್ಕೆಯಾಗಿದ್ದಾರೆ. ಸಭೆ ನಂತರ ಮಾತನಾಡಿದ ಶಾಸಕಾಂಗ ಪಕ್ಷದ ನಾಯಕನನ್ನು ಆಯ್ಕೆ ಮಾಡಲು ಕೇಂದ್ರ ವೀಕ್ಷಕರಾಗಿ ಇಲ್ಲಿಗೆ ಬಂದಿದ್ದೇವೆ. ಗೋವಾದ ಚುನಾವಣಾ ಉಸ್ತುವಾರಿಯಾಗಿದ್ದ ದೇವೇಂದ್ರ ಫಡ್ನವೀಸ್, ಸಿ.ಟಿ.ರವಿ, ಸದಾನಂದ್ ತಾನವ್ಡೆ, ಶ್ರೀಪಾದ್ ನಾಯಕ್ ಮತ್ತು ಇತರರೊಂದಿಗೆ ಉಪಸ್ಥಿತರಿದ್ದರು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕಚ್ಚಾತೈಲ ಬೆಲೆ ಮತ್ತೆ ಶೇ.3 ಏರಿಕೆ; ಮಾರುಕಟ್ಟೆಯಿಂದ ಹೊರಬೀಳಲಿದೆಯಾ ರಷ್ಯಾ ತೈಲ

  • ಗೋವಾ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರಾ ಪ್ರಮೋದ್ ಸಾವಂತ್?

    ಗೋವಾ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರಾ ಪ್ರಮೋದ್ ಸಾವಂತ್?

    ಪಣಜಿ: ಗೋವಾ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದ್ದು, ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮೋದ್ ಸಾವಂತ್ ಮುಂದುವರಿಯುತ್ತಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

    2019ರಲ್ಲಿ ಬಿಜೆಪಿ ನಾಯಕ ಮನೋಹರ್ ಪರಿಕ್ಕರ್ ಅವರ ನಿಧನದ ಬಳಿಕ ಗೋವಾ ಮುಖ್ಯಮಂತ್ರಿಯಾಗಿ ಪ್ರಮೋದ್ ಸಾವಂತ್ ಅಧಿಕಾರ ಸ್ವೀಕರಿಸಿದ್ದರು. ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 40ರಲ್ಲಿ 20 ಸ್ಥಾನಗಳನ್ನು ಗೆದ್ದಿದೆ. ಗುರುವಾರ ಚುನಾವಣಾ ಫಲಿತಾಂಶಗಳು ಪ್ರಕಟವಾಗುತ್ತಿದ್ದಂತೆ, ಬಿಜೆಪಿ ನಾಯಕ ಪ್ರಮೋದ್ ಸಾವಂತ್ ಅವರು ಮೂರು ವಿಜೇತ ಪಕ್ಷೇತರ ಅಭ್ಯರ್ಥಿಗಳ ಖಚಿತ ಬೆಂಬಲವನ್ನು ಹೊಂದಿದ್ದು, ಗೋವಾದಲ್ಲಿ ಸರ್ಕಾರ ರಚಿಸಲು ಅವಕಾಶ ಮಾಡಿಕೊಟ್ಟಿದ್ದಾರೆ ಎಂದು ಹೇಳಿದ್ದಾರೆ.

    ಮುಖ್ಯಮಂತ್ರಿ ಸ್ಥಾನಕ್ಕೆ ಪ್ರಮೋದ್ ಸಾವಂತ್ ಅವರ ಹೆಸರನ್ನು ಗೋವಾದಲ್ಲಿ ಬಿಜೆಪಿಯ ಚುನಾವಣಾ ಉಸ್ತುವಾರಿ ದೇವೇಂದ್ರ ಫಡ್ನವೀಸ್ ಅನುಮೋದಿಸಿದ್ದಾರೆ. ಇದಲ್ಲದೆ, ರಾಜ್ಯ ಬಿಜೆಪಿಗೆ ಈ ಕುರಿತಂತೆ ತಿಳಿಸಲಾಗಿದೆ ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ: ರಷ್ಯಾ-ಉಕ್ರೇನ್ ಯುದ್ಧ – ಇನ್‍ಸ್ಟಾಗ್ರಾಮ್ ನಿರ್ಬಂಧಿಸಲು ಮುಂದಾದ ರಷ್ಯಾ

    ಗೋವಾದಲ್ಲಿ ಸರ್ಕಾರ ರಚನೆಗೆ ಹಕ್ಕು ಮಂಡಿಸಲು ಪ್ರಮೋದ್ ಸಾವಂತ್ ರಾಜ್ಯಪಾಲರನ್ನು ಭೇಟಿ ಮಾಡುವ ಸಾಧ್ಯತೆ ಇದೆ. ಈ ವೇಳೆ ಬಿಜೆಪಿಯ ಸಾಮಾನ್ಯ ವೀಕ್ಷಕರು ಶನಿವಾರ ರಾತ್ರಿ ಅಥವಾ ಭಾನುವಾರ ಬೆಳಗ್ಗೆ ಗೋವಾಕ್ಕೆ ಬರಬಹುದು ಎನ್ನಲಾಗುತ್ತಿದೆ.

    2022 ರ ಗೋವಾ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 40 ರಲ್ಲಿ 20 ಸ್ಥಾನಗಳನ್ನು ಗೆದ್ದರೆ, ಕಾಂಗ್ರೆಸ್ 11 ಸ್ಥಾನಗಳನ್ನು ಗಳಿಸಿದೆ. ಆಮ್ ಆದ್ಮಿ ಪಕ್ಷ ಮತ್ತು ಮಹಾರಾಷ್ಟ್ರವಾದಿ ಗೋಮಾಂತಕ್ ಪಕ್ಷವು ತಲಾ ಎರಡು ಸ್ಥಾನಗಳನ್ನು ಪಡೆದಿದೆ. ಇದನ್ನೂ ಓದಿ: ಉಕ್ರೇನ್‌ ಮೇಯರ್‌ ಕಿಡ್ನಾಪ್ ಮಾಡಿದ ರಷ್ಯಾ ಸೇನೆ

  • ಗೋವಾದಲ್ಲಿ ಮತ್ತೆ ಬಿಜೆಪಿ ಗೆಲ್ಲಲಿದೆ: ಪ್ರಮೋದ್ ಸಾವಂತ್

    ಗೋವಾದಲ್ಲಿ ಮತ್ತೆ ಬಿಜೆಪಿ ಗೆಲ್ಲಲಿದೆ: ಪ್ರಮೋದ್ ಸಾವಂತ್

    ಪಣಜಿ: ಗೋವಾದಲ್ಲಿ ಬಿಜೆಪಿ ಪೂರ್ಣ ಬಹುಮತದೊಂದಿಗೆ ಮತ್ತೆ ಗೆಲ್ಲಲಿದೆ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

    ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗೋವಾದಲ್ಲಿ 18-22 ಸ್ಥಾನಗಳನ್ನು ಪಡೆದು ಬಿಜೆಪಿ ಸರ್ಕಾರ ರಚಿಸಲಿದೆ. ಜನರು ಡಬಲ್ ಎಂಜಿನ್ ಸರ್ಕಾರವನ್ನು ಮತ್ತೊಮ್ಮೆ ಆಯ್ಕೆ ಮಾಡುತ್ತಾರೆ ಎಂದು ನಾನು ನಂಬಿದ್ದೇನೆ. ಡಬಲ್ ಎಂಜಿನ್ ಸರ್ಕಾರದ ಮೂಲಸೌಕರ್ಯ ಯೋಜನೆಗಳನ್ನು ಪೂರ್ಣಗೊಳಿಸುವುದಕ್ಕೆ ಬಿಜೆಪಿ ಸರ್ಕಾರಕ್ಕೆ ಜನ ಮೊದಲ ಆದ್ಯತೆಯನ್ನು ನೀಡುತ್ತಾರೆ. ಈ ಅಡಿಯಲ್ಲಿ ನಾವು ಆತ್ಮನಿರ್ಭರ ಭಾರತ ಸ್ವಯಂಪೂರ್ಣ ಗೋವಾವನ್ನಾಗಿ ಮಾಡುತ್ತೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಬಿಹಾರ ವರನ ಕೈ ಹಿಡಿದ ಜರ್ಮನಿ ಮಹಿಳೆ

    ಚುನಾವಣಾ ಸಮೀಕ್ಷೆ ಪ್ರಕಾರ, ಬಿಜೆಪಿ ಪಕ್ಷ ಉತ್ತರ ಪ್ರದೇಶ, ಉತ್ತರಾಖಂಡ, ಗೋವಾ ಮತ್ತು ಮಣಿಪುರದಲ್ಲಿ ಮತ್ತೆ ಅಧಿಕಾರಕ್ಕೆ ಬರಲಿದೆ ಮತ್ತು ಪಂಜಾಬ್‍ನಲ್ಲಿ ಉತ್ತಮ ಪ್ರದರ್ಶನ ನೀಡಲಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಗೋವಾ ವಿಧಾನಸಭೆಗೆ ಫೆಬ್ರವರಿ 14 ರಂದು ಚುನಾವಣೆ ನಡೆದಿದ್ದು, ಮಾರ್ಚ್ 10 ರಂದು ಮತ ಎಣಿಕೆ ನಡೆಯಲಿದೆ. ಇದನ್ನೂ ಓದಿ: ರೇಣುಕಾಚಾರ್ಯ, ಪ್ರತಾಪಸಿಂಹ ವಿರುದ್ಧದ 4 ಕೇಸ್‌ ವಾಪಸ್‌ ಪಡೆದ ಸರ್ಕಾರ- ಹೈಕೋರ್ಟ್‌ ಗರಂ