Tag: ಪ್ರಲ್ಹಾದ್ ಜೋಶಿ

  • ನನಗೂ ನನ್ನ ಸಹೋದರನಿಗೂ ಯಾವುದೇ ಕೌಂಟುಬಿಕ, ಹಣಕಾಸಿನ ಸಂಬಂಧವಿಲ್ಲ: ಪ್ರಲ್ಹಾದ್ ಜೋಶಿ

    ನನಗೂ ನನ್ನ ಸಹೋದರನಿಗೂ ಯಾವುದೇ ಕೌಂಟುಬಿಕ, ಹಣಕಾಸಿನ ಸಂಬಂಧವಿಲ್ಲ: ಪ್ರಲ್ಹಾದ್ ಜೋಶಿ

    – ಗೋಪಾಲ್ ಜೋಶಿ ವಿರುದ್ಧದ ವಂಚನೆ ಆರೋಪಕ್ಕೆ ಸಚಿವರ ಸ್ಪಷ್ಟನೆ 

    ನವದೆಹಲಿ: ಗೋಪಾಲ್ ಜೋಶಿ (Gopal Joshi ) ನನ್ನ ಸಹೋದರ ಅದರಲ್ಲಿ ಯಾವುದೇ ಅನುಮಾನವಿಲ್ಲ. ಈಗ ಅವರಿಗೂ ನನಗೂ ಯಾವುದೇ ಕೌಟುಂಬಿಕ ಹಾಗೂ ಹಣಕಾಸಿಕ ಸಂಬಂಧ ಇಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸ್ಪಷ್ಟಪಡಿಸಿದ್ದಾರೆ.

    ಗೋಪಾಲ್ ಜೋಶಿಯವರ ವಿರುದ್ಧ ಲೋಕಸಭಾ ಚುನಾವಣೆಗೆ ಟಿಕೆಟ್ ಕೊಡಿಸುವ ಆಮಿಷ ತೋರಿಸಿ 2 ಕೋಟಿ ರೂ. ವಂಚಿಸಿದ ಆರೋಪಕ್ಕೆ (Fraud Case) ಸಂಬಂಧಿಸಿದಂತೆ ದೆಹಲಿಯಲ್ಲಿ ಅವರು ಸುದ್ದಿಗೋಷ್ಠಿ ನಡೆಸಿದರು. ಈ ವೇಳೆ ಗುರುವಾರ ನನ್ನ ಸಹೋದರನ ಮೇಲೆ ಎಫ್‌ಐಆರ್ ದಾಖಲಾಗಿದೆ. ಇಂದು ಕಾಂಗ್ರೆಸ್ ನಾಯಕರು ಪ್ರತಿಭಟನೆ ಮಾಡಿದ್ದಾರೆ. ನನಗೆ ಯಾರೂ ಸಹೋದರಿ ಇಲ್ಲ. ನಾವು ನಾಲ್ಕು ಜನ ಸಹೋದರರು, 1984 ರಲ್ಲಿ ಒಬ್ಬ ಸಹೋದರ ತೀರಿ ಹೋದರು. ಈಗ ಮೂವರು ಸಹೋದರರು ಇದ್ದೇವೆ. ಗೋಪಾಲ್ ಜೋಶಿ ಅವರು ನನ್ನ ಹಿರಿಯ ಸಹೋದರ ಇದರ ಜೊತೆಗೆ ಸಹೋದರಿ ಅಂತಲೂ ಬರುತ್ತಿದೆ ಅವರು ಯಾರು ಗೊತ್ತಿಲ್ಲ ಎಂದಿದ್ದಾರೆ.

    ನನ್ನ ಹಿರಿಯ ಸಹೋದರ ಗೋಪಾಲ್ ಜೋಶಿ ಅವರು ನಾನು ಬೇರೆಯಾಗಿ 33 ವರ್ಷಗಳು ಕಳೆದಿವೆ. ಈ ಹಿಂದೆಯೂ ಅವರ ವಿರುದ್ಧ ಎರಡು ಸಲ ಆರೋಪ ಕೇಳಿ ಬಂದಿತ್ತು. ಅದಕ್ಕಾಗಿ ನಾನು ಹಿಂದೆಯೇ ಗೋಪಾಲ್ ಜೋಶಿ ಅವರೊಂದಿಗೆ ನನ್ನ ಹೆಸರು ಲಿಂಕ್ ಮಾಡಬಾರದು ಎಂದು ಕೋರ್ಟ್‌ನಿಂದ ಆದೇಶ ತಂದಿದ್ದೇನೆ. ಸಾಮಾಜಿಕವಾಗಿ ಆರ್ಥಿಕವಾಗಿ ಯಾವುದೇ ಸಂಬಂಧ ಇಲ್ಲ ಎಂದು ಕೋರ್ಟ್‌ಗೆ ಮಾಹಿತಿ ನೀಡಿದ್ದೇನೆ ಎಂದು ಅವರು ತಿಳಿಸಿದ್ದಾರೆ.

    ಐದು ಬಾರಿ ಸಂಸದ, ಬಿಜೆಪಿ ಜಿಲ್ಲಾ ಅಧ್ಯಕ್ಷನಾಗಿದ್ದೇನೆ. ಸಾರ್ವಜನಿಕ ಜೀವನದಲ್ಲಿದ್ದೇನೆ, ಯಾರಾದರೂ ಬಂದು ಫೋಟೋ ತೆಗೆಸಿಕೊಂಡಿದ್ದರೆ ಗೊತ್ತಿಲ್ಲ. ನನ್ನ ಮಕ್ಕಳ ಮದುವೆಗೆ ಸಹೋದರರನ್ನ ಅನಿವಾರ್ಯವಾಗಿ ಆಹ್ವಾನ ಮಾಡಿದ್ದು ಬಿಟ್ಟರೇ, ಅವರಿಗೂ ನನಗೂ ಯಾವುದೇ ಸಂಬಂಧ ಇಲ್ಲ ಎಂದಿದ್ದಾರೆ.

    ಅವರು ದುಡ್ಡು ಕಳೆದುಕೊಂಡಿದ್ದು ದುರ್ದೈವ, ನನ್ನನ್ನು ಬಂಧಿಸಬೇಕು ಎನ್ನುವುದು ಕಾಂಗ್ರೆಸ್ ಬೌದ್ಧಿಕ ದಿವಾಳಿತನ ತೋರಿಸುತ್ತದೆ. ಇದಕ್ಕೂ ನನಗೂ ಯಾವುದೇ ಸಂಬಂಧ ಇಲ್ಲ. ಕಾನೂನು ಕ್ರಮ ಆಗಲಿ, ನಾನು ಶುದ್ಧ ಹಸ್ತದಿಂದ ಕೆಲಸ ಮಾಡುತ್ತಿದ್ದೇನೆ. ನನ್ನ ಮೇಲೆ ಮಾಡಿರುವ ಆರೋಪಗಳಲ್ಲ ಬೋಗಸ್, ಕಾನೂನಿನ ಪ್ರಕಾರ ಏನು ಬೇಕಾದರೂ ಕ್ರಮವಾಗಲಿ ಎಂದು ಹೇಳಿದ್ದಾರೆ.

  • ಹಣಕಾಸು ನಿರ್ವಹಣೆ ಸರಿ ಮಾಡದೇ ಕೇಂದ್ರದ ಮೇಲೆ ಗೂಬೆ: ಜೋಶಿ ವಾಗ್ದಾಳಿ

    ಹಣಕಾಸು ನಿರ್ವಹಣೆ ಸರಿ ಮಾಡದೇ ಕೇಂದ್ರದ ಮೇಲೆ ಗೂಬೆ: ಜೋಶಿ ವಾಗ್ದಾಳಿ

    ಹುಬ್ಬಳ್ಳಿ: ರಾಜ್ಯ ಸರ್ಕಾರ ಸರಿಯಾಗಿ ಹಣಕಾಸು ನಿರ್ವಹಣೆ ಮಾಡಲಾಗದೇ ಕೇಂದ್ರದ ಮೇಲೆ ಗೂಬೆ ಕೂರಿಸುತ್ತಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಆರೋಪಿಸಿದರು.

    ಹುಬ್ಬಳ್ಳಿಯಲ್ಲಿ (Hubballi) ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯಕ್ಕೆ ಯುಪಿಎ ಅವಧಿಗಿಂತ ದುಪ್ಪಟ್ಟು ಅನುದಾನವನ್ನು ಎನ್‌ಡಿಎ (NDA) ಸರ್ಕಾರ ನೀಡಿದೆ. ರಾಜ್ಯಗಳಿಗೆ ಅನುದಾನ ಹಂಚಿಕೆ ನಿರ್ಧರಿಸುವುದು ಕೇಂದ್ರ ಸರ್ಕಾರ ಮಾಡಿಲ್ಲ.ಹಣಕಾಸು ಆಯೋಗ ನಿಗದಿಪಡಿಸಿದಷ್ಟು ಹಣವನ್ನು ಕೇಂದ್ರ ನೀಡಿದೆ ಎಂದು ಸಮಜಾಯಿಷಿ ನೀಡಿದರು. ಇದನ್ನೂ ಓದಿ: ಕೋಡಿ ಬಿದ್ದ ಕರೆಯಲ್ಲಿ ಸೆಲ್ಪಿ ತೆಗೆದುಕೊಳ್ಳಲು ಹೋಗಿ ಕಾಲು ಜಾರಿ ಬಿದ್ದು ಯುವಕ ಸಾವು

    2016-17ರಲ್ಲಿ ಸಿದ್ದರಾಮಯ್ಯ (Siddaramaiah) ಅವರು ಸಿಎಂ ಆಗಿದ್ದಾಗಲೇ ಇದ್ದ ಹಣಕಾಸು ಆಯೋಗ ಅನುದಾನ ಹಂಚಿಕೆ ನಿಗದಿಪಡಿಸಿದೆ. ರಾಜ್ಯಕ್ಕೆ ಅನ್ಯಾಯ ಆಗುತ್ತಿದೆ ಎನಿಸಿದ್ದರೆ ಆಯೋಗದ ಮುಂದೆ ಆಗಲೇ ಸಮರ್ಪಕ ವಾದ ಮಂಡಿಸಬೇಕಿತ್ತು. ಆಗ ಧ್ವನಿ ಎತ್ತದೆ ಈಗ ತಗಾದೆ ತೆಗೆಯುತ್ತಿದೆ ಎಂದು ತಿರುಗೇಟು ನೀಡಿದರು. ಇದನ್ನೂ ಓದಿ: ಪಂಜಾಬ್| ಹೆರಾಯಿನ್, ಪಿಸ್ತೂಲ್ ಸಾಗಿಸುತ್ತಿದ್ದ ಪಾಕ್ ಡ್ರೋನ್ ಹೊಡೆದುರುಳಿಸಿದ ಬಿಎಸ್‌ಎಫ್

    ತಮ್ಮ ಸರ್ಕಾರದಲ್ಲಿನ ಅಧಿಕಾರಿಗಳೇ ತಪ್ಪು ಮಾಡಿದ್ದಾರೆ ಎಂಬುದನ್ನು ಸಿಎಂ ಒಪ್ಪಿಕೊಂಡಿದ್ದಾರೆ ಎಂದ ಅವರು, ಈಗಲಾದರೂ ಹಣಕಾಸು ಆಯೋಗದ ಮುಂದೆ ಸರಿಯಾದ ವಾದ ಮಂಡಿಸಿ ಎಂದು ಸಲಹೆ ನೀಡಿದರು. ಇದನ್ನೂ ಓದಿ: ಮಲ್ಪೆಯಲ್ಲಿ ಅಕ್ರಮವಾಗಿ ನೆಲೆಸಿದ್ದ 7 ಬಾಂಗ್ಲಾ ಪ್ರಜೆಗಳು ಅರೆಸ್ಟ್‌

    ಮತ್ತೆ ಆಯೋಗ ರಚನೆ, ಬೇಡಿಕೆ ಮುಂದಿಡಿ: ಪ್ರತಿ ಐದು ವರ್ಷಕ್ಕೊಮ್ಮೆ ಹಣಕಾಸು ಆಯೋಗ ರಚಿಸುತ್ತಿದ್ದು, ಈಗ ಮತ್ತೊಮ್ಮೆ ರಚನೆ ನಡೆದಿದೆ. ಹೊಸ ಹಣಕಾಸು ಆಯೋಗದ ಮುಂದಾದರೂ ರಾಜ್ಯಕ್ಕೆ ಏನು ಬೇಕೆಂಬುದನ್ನು ಸರಿಯಾಗಿ ಮಂಡಿಸಿ ಎಂದು ಹೇಳಿದರು.

    ಹಾಗೆ ನೋಡಿದರೆ ರಾಜ್ಯಕ್ಕೆ ಯುಪಿಎಗಿಂತ ಎನ್‌ಡಿಎ ಸರ್ಕಾರವೇ ಹೆಚ್ಚು ಹಣಕಾಸು ಒದಗಿಸಿದೆ. ಯುಪಿಎ (UPA) ಅವಧಿಯಲ್ಲಿ ಕರ್ನಾಟಕಕ್ಕೆ 49 ಕೋಟಿ ರೂ. ಗ್ರ್ಯಾಂಟೆಡ್ ಅನುದಾನ ಬಂದಿದ್ದರೆ, ಎನ್‌ಡಿಎ ಸರ್ಕಾರ 3 ಕೋಟಿ ರೂ. ಕೊಟ್ಟಿದೆ. ಇನ್ನೂ ರಾಜ್ಯದ ಪಾಲಿನ ತೆರಿಗೆ ಬಾಬ್ತು ಯುಪಿಎ ಬರೀ 63 ಕೋಟಿ ರೂ. ಕೊಟ್ಟಿದ್ದರೆ, ತಮ್ಮ ಸರ್ಕಾರ 3.25 ಕೋಟಿ ರೂ. ತೆರಿಗೆ ಹಂಚಿಕೆ ಬಿಡುಗಡೆ ಮಾಡಿದೆ ಎಂದರು. ಇದನ್ನೂ ಓದಿ: ಬಾಲಸೋರ್ ಅಪಘಾತದ ಬಳಿಕವೂ ಸರ್ಕಾರ ಎಚ್ಚೆತ್ತುಕೊಂಡಿಲ್ಲ: ಕೇಂದ್ರದ ವಿರುದ್ಧ ರಾಹುಲ್‌ ಗಾಂಧಿ ಕಿಡಿ

    ಮಳೆ ಜಾಸ್ತಿ ಆದ್ರೂ ಬಿಜೆಪಿ (BJP) ಮಾಡಿಸಿದೆ ಅಂದಿಲ್ಲ ಅದೇ ಪುಣ್ಯ: ರಾಜ್ಯಕ್ಕೆ ಏನಾದರೂ ಒಳ್ಳೆಯದಾದರೆ ತಮ್ಮಿಂದ ಆಯಿತು, ಕೆಟ್ಟದ್ದಾದರೆ ಬಿಜೆಪಿ ಮಾಡಿತು ಎಂಬ ವಾಚಾಳಿತನ ಕಾಂಗ್ರೆಸ್‌ಗೆ ರೂಢಿಗತವಾಗಿದೆ. ಸದ್ಯ ಮಳೆ ಹೆಚ್ಚಾದರೂ ಬಿಜೆಪಿಯೇ ಮಾಡಿಸಿದೆ ಎಂದಿಲ್ಲ ಅದೇ ನಮ್ಮ ಪುಣ್ಯ ಎಂದು ವ್ಯಂಗ್ಯವಾಡಿದರು. ಇದನ್ನೂ ಓದಿ: ಗದಗ| ಭಾರೀ ಮಳೆಗೆ ಮಲಪ್ರಭಾ ನದಿ, ಬೆಣ್ಣೆಹಳ್ಳದಲ್ಲಿ ಪ್ರವಾಹ- ಅಪಾರ ಪ್ರಮಾಣದ ಬೆಳೆ ಜಲಾವೃತ

  • ಕೇಂದ್ರದ ಅಕ್ಕಿಗಿನ್ನು ಶೇ.1ರಷ್ಟು ಪೌಷ್ಟಿಕಾಂಶ ಸೇರ್ಪಡೆ, 18 ಕೋಟಿ ವೆಚ್ಚದಲ್ಲಿ 5 ವರ್ಷ ಸಾರವರ್ಧಿತ ಅಕ್ಕಿ ವಿತರಣೆಗೆ ಕ್ರಮ: ಜೋಶಿ

    ಕೇಂದ್ರದ ಅಕ್ಕಿಗಿನ್ನು ಶೇ.1ರಷ್ಟು ಪೌಷ್ಟಿಕಾಂಶ ಸೇರ್ಪಡೆ, 18 ಕೋಟಿ ವೆಚ್ಚದಲ್ಲಿ 5 ವರ್ಷ ಸಾರವರ್ಧಿತ ಅಕ್ಕಿ ವಿತರಣೆಗೆ ಕ್ರಮ: ಜೋಶಿ

    ಹುಬ್ಬಳ್ಳಿ: ಕೇಂದ್ರ ಸರ್ಕಾರ ವಿತರಿಸುವ ಪಡಿತರ ಅಕ್ಕಿಗೆ ಶೇ.1ರಷ್ಟು ಪೌಷ್ಟಿಕಾಂಶ ಸೇರಿಸಲಾಗುತ್ತದೆ ಎಂದು ಕೇಂದ್ರ ಸಚಿವ ಆಹಾರ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ತಿಳಿಸಿದ್ದಾರೆ.

    ಹುಬ್ಬಳ್ಳಿಯಲ್ಲಿ (Hubballi) ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಕ್ಕಿಗೆ ಪೌಷ್ಟಿಕಾಂಶ ಸೇರಿಸಿ ಸಾರವರ್ಧಿತ ಅಕ್ಕಿ ತಯಾರಿಸಿ ವಿತರಿಸಲು ಕೇಂದ್ರ ಕ್ರಮ ಕೈಗೊಂಡಿದೆ. ಗರೀಬ್ ಕಲ್ಯಾಣ ಮತ್ತು ಅಂತ್ಯೋದಯ ಅನ್ನ ಯೋಜನೆಯಡಿ (AAY) ವಿತರಿಸುವ ಅಕ್ಕಿಗೆ ಇನ್ನು ಮುಂದೆ ಶೇ.1ರಷ್ಟು ಪೌಷ್ಟಿಕಾಂಶವನ್ನು ಸೇರಿಸಲಾಗುತ್ತದೆ. ರಕ್ತಹೀನತೆಯನ್ನು ಹೋಗಲಾಡಿಸಲು ಪೌಷ್ಟಿಕಾಂಶಯುಕ್ತ, ಸಾರವರ್ಧಿತ ಅಕ್ಕಿ ವಿತರಣೆಗೆ ಕೇಂದ್ರ ಸರ್ಕಾರ ಮುಂದಾಗಿದ್ದು, 5 ವರ್ಷಗಳ ಕಾಲ ಬಲವರ್ಧಿತ ಅಕ್ಕಿ ವಿತರಣೆಗೆ ಅನುಮೋದನೆ ನೀಡಿದೆ ಎಂದರು. ಇದನ್ನೂ ಓದಿ: ಇಂಡಿಗೋ ಏರ್‌ಲೈನ್ಸ್ ವಿಮಾನದಲ್ಲಿ ಮಹಿಳೆಗೆ ಕಿರುಕುಳ – ಆರೋಪಿ ಅರೆಸ್ಟ್‌

    ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯಲ್ಲಿ (Garib Kalyan Anna Yojana) ಪ್ರತಿ ತಿಂಗಳು ಒಬ್ಬ ವ್ಯಕ್ತಿಗೆ 5 ಕೆಜಿ ಅಕ್ಕಿ ಮತ್ತು ಅಂತ್ಯೋದಯ ಅನ್ನ ಯೋಜನೆಯಲ್ಲಿ ಪ್ರತಿ ಕುಟುಂಬಕ್ಕೆ 35 ಕೆಜಿ ಆಹಾರ ಧಾನ್ಯ ವಿತರಿಸುತ್ತಿದ್ದು, ಇದಕ್ಕೆ ಶೇ.1 ರಷ್ಟು ಪೌಷ್ಟಿಕಾಂಶಗಳನ್ನು ಸೇರಿಸಿ, ಬಲವರ್ಧಿತ ಅಕ್ಕಿಯಾಗಿ ವಿತರಿಸಲಾಗುವುದು ಎಂದು ತಿಳಿಸಿದರು. ಇದನ್ನೂ ಓದಿ: ಮುಂದಿನ ಐದು ದಿನ ಉತ್ತರ ಒಳನಾಡು, ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ

    18 ಕೋಟಿ ರೂ. ವೆಚ್ಚ:
    ದೇಶಾದ್ಯಂತ ಈ ಪೌಷ್ಟಿಕಾಂಶಯುಕ್ತ ಅಕ್ಕಿ ವಿತರಣೆಗೆ 18 ಕೋಟಿ ರೂ. ವೆಚ್ಚದ ಯೋಜನೆ ಇದಾಗಿದ್ದು, ಕಡುಬಡವರನ್ನು ರಕ್ತಹೀನತೆಯಿಂದ ಕಾಪಾಡಲು ಪ್ರಯೋಜನವಾಗಲಿದೆ ಎಂದು ಹೇಳಿದರು. ಇದನ್ನೂ ಓದಿ: ದಸರಾ ಸಂಭ್ರಮದಲ್ಲಿದ್ದ ಮೈಸೂರು ರಾಜಪರಿವಾರಕ್ಕೆ ಹೊಸ ಅತಿಥಿಯ ಆಗಮನ – 2ನೇ ಮಗುವಿಗೆ ಜನ್ಮ ನೀಡಿದ ತ್ರಿಷಿಕಾ

    ರಾಜ್ಯ ಸರ್ಕಾರದ್ದು ಯಾವ ಭಾಗ್ಯವೂ ಇಲ್ಲ:
    ರಾಜ್ಯ ಸರ್ಕಾರ ಅನ್ನ ಭಾಗ್ಯ ಘೋಷಣೆ ಮಾಡಿದ್ದಷ್ಟೇ. ಯಾವ ಭಾಗ್ಯವೂ ಇಲ್ಲ. ಕೇಂದ್ರ ಸರ್ಕಾರ ಪೂರೈಸುವ 5 ಕೆಜಿ ಅಕ್ಕಿಯನ್ನಷ್ಟೇ ನೀಡುತ್ತಿದ್ದಾರೆ ಎಂದು ರಾಜ್ಯ ಸರ್ಕಾರವನ್ನು ಟೀಕಿಸಿದರು. ಇದನ್ನೂ ಓದಿ: ಬಾಂಗ್ಲಾದೇಶದ ಕಾಳಿ ದೇವಸ್ಥಾನಕ್ಕೆ ಮೋದಿ ಉಡುಗೊರೆಯಾಗಿ ನೀಡಿದ್ದ ಕಿರೀಟ ಕಳವು

  • ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದವನ್ನೂ ಪರೀಕ್ಷೆಗೊಳಪಡಿಸಿ: ರಾಜ್ಯ ಸರ್ಕಾರಕ್ಕೆ ಜೋಶಿ ಆಗ್ರಹ

    ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದವನ್ನೂ ಪರೀಕ್ಷೆಗೊಳಪಡಿಸಿ: ರಾಜ್ಯ ಸರ್ಕಾರಕ್ಕೆ ಜೋಶಿ ಆಗ್ರಹ

    ಹುಬ್ಬಳ್ಳಿ: ತಿರುಪತಿ ಪ್ರಕರಣದ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಪವಿತ್ರ ಕ್ಷೇತ್ರಗಳ ಪ್ರಸಾದವನ್ನೂ ಪರೀಕ್ಷೆಗೆ ಒಳಪಡಿಸಲು ರಾಜ್ಯ ಸರ್ಕಾರ ತ್ವರಿತ ಕ್ರಮ ಕೈಗೊಳ್ಳಬೇಕು ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಆಗ್ರಹಿಸಿದ್ದಾರೆ.

    ನವದೆಹಲಿಯಲ್ಲಿ (New Delhi) ಇಂದು (ಶುಕ್ರವಾರ) ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ತಿರುಪತಿ ಪ್ರಸಾದದ ವಿಚಾರವಾಗಿ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರನ್ನು ಶಿಕ್ಷೆಗೆ ಗುರಿಪಡಿಸಬೇಕು. ತಿರುಪತಿಯಲ್ಲಿ ಪ್ರಸಾದಕ್ಕೆ ಪ್ರಾಣಿಗಳ ಕೊಬ್ಬು ಮತ್ತು ಮೀನಿನ ಎಣ್ಣೆ ಬಳಸಿದ ಕಾರಣ ರಾಜ್ಯದಲ್ಲಿನ ಪವಿತ್ರ ಕ್ಷೇತ್ರಗಳ ಪ್ರಸಾದವನ್ನೂ ತಕ್ಷಣ ಪರೀಕ್ಷೆಗೆ ಒಳಪಡಿಸುವುದು ಒಳಿತು. ಹಿಂದೂಗಳ ಪವಿತ್ರ ಕ್ಷೇತ್ರವಾದ ತಿರುಮಲ ತಿರುಪತಿಯಲ್ಲಿ ಪ್ರಸಾದಕ್ಕೆ ಜಾನುವಾರುಗಳ ಕೊಬ್ಬು ಮತ್ತು ಮೀನಿನ ಎಣ್ಣೆ ಬಳಸುತ್ತಿದ್ದರು ಎಂಬ ಸಂಗತಿ ಹಿಂದೂ ಸಮಾಜವನ್ನು ಚಿಂತೆಗೀಡು ಮಾಡಿದೆ ಎಂದು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಬಟ್ಟೆ ಬಿಚ್ಚಿ ಹಲ್ಲೆ ಮಾಡಿದ್ರು; ಒಡಿಶಾ ಠಾಣೆಯಲ್ಲಿ ಅನುಭವಿಸಿದ ಯಾತನೆಯ ಕತೆ ಹೇಳಿದ ಸೇನಾಧಿಕಾರಿಯ ಭಾವಿ ಪತ್ನಿ

    ಆಂಧ್ರಪ್ರದೇಶದ (Andhra Pradesh) ಮಾಜಿ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ (Jagan Mohan Reddy) ಅವರ ಅಧಿಕಾರ ಅವಧಿಯಲ್ಲಿ ಈ ರೀತಿ ಹಲವು ಹಿಂದೂ ವಿರೋಧಿ ಕ್ರಮಗಳಿಗೆ ಬೆಂಬಲವಾಗಿ ನಿಂತಿರುವುದು ಅಕ್ಷಮ್ಯ ಎಂದು ಪ್ರತಿಕ್ರಿಯಿಸಿದ್ದಾರೆ. ಅಷ್ಟೇ ಅಲ್ಲ, ತಿರುಮಲ ತಿರುಪತಿಯ ಟ್ರಸ್ಟ್ನಲ್ಲಿ ಜಗನ್ ರೆಡ್ಡಿ ಅವರು ಹಿಂದೂಯೇತರರನ್ನೂ ಟ್ರಸ್ಟ್ ಸದಸ್ಯರನ್ನಾಗಿ ಮಾಡಿದ್ದರು ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ತಿರುಪತಿ ಲಡ್ಡು ವಿವಾದ – ವರದಿ ಕೇಳಿದ ಕೇಂದ್ರ ಸರ್ಕಾರ

    ಆಂಧ್ರಪ್ರದೇಶದಲ್ಲಿ ಮತ್ತೆ ಈ ರೀತಿಯ ವಿಚಾರಗಳು ಮರುಕಳಿಸಬಾರದು. ಆ ನಿಟ್ಟಿನಲ್ಲಿ ನೂತನ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ ಸದಾ ಎಚ್ಚರಿಕೆ ವಹಿಸಬೇಕು. ಆಂಧ್ರಪ್ರದೇಶ ಪ್ರಕರಣದಿಂದ ಕರ್ನಾಟಕ ಸಹ ಎಚ್ಚೆತ್ತುಕೊಳ್ಳಬೇಕು. ಹಾಗೆಯೇ ಹಿಂದೂ ಧಾರ್ಮಿಕ ಟ್ರಸ್ಟ್‌ಗಳಲ್ಲಿ ಹಿಂದೂಯೇತರರನ್ನು ನೇಮಕ ಮಾಡಬಾರದು ಎಂದು ಸರ್ಕಾರಕ್ಕೆ ಆಗ್ರಹಿಸಿದರು. ಇದನ್ನೂ ಓದಿ: ವಾಮಂಜೂರು ಶಾರದಾ ಮಹೋತ್ಸವದ ಕಾರ್ಯಾಲಯ ಉದ್ಘಾಟನೆ

  • ಸಿಎಂ ಜೊತೆ ಚರ್ಚಿಸಿ ಅಕ್ಕಿ ಪೂರೈಕೆಗೆ ಕೇಂದ್ರಕ್ಕೆ  ಹೊಸ ಪ್ರಸ್ತಾವನೆ ಸಲ್ಲಿಸಲಾಗುವುದು: ಕೆ.ಹೆಚ್ ಮುನಿಯಪ್ಪ

    ಸಿಎಂ ಜೊತೆ ಚರ್ಚಿಸಿ ಅಕ್ಕಿ ಪೂರೈಕೆಗೆ ಕೇಂದ್ರಕ್ಕೆ  ಹೊಸ ಪ್ರಸ್ತಾವನೆ ಸಲ್ಲಿಸಲಾಗುವುದು: ಕೆ.ಹೆಚ್ ಮುನಿಯಪ್ಪ

    ನವದೆಹಲಿ: ರಾಜ್ಯಗಳಿಗೆ ಅಕ್ಕಿ ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ರಾಜ್ಯಕ್ಕೆ ಅಕ್ಕಿ ನೀಡುವ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಜೊತೆಗೆ ಚರ್ಚಿಸಿ ಅವರು ಕರ್ನಾಟಕಕ್ಕೂ ಅಕ್ಕಿ ನೀಡಲು ಒಪ್ಪಿಕೊಂಡಿದ್ದಾರೆ. ಶೀಘ್ರದಲ್ಲಿ ಸರ್ಕಾರದಿಂದ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಸಚಿವ ಕೆ.ಹೆಚ್ ಮುನಿಯಪ್ಪ (KH Muniyappa) ತಿಳಿಸಿದ್ದಾರೆ.

    ದೆಹಲಿಯಲ್ಲಿ (New Delhi) ಈ ಕುರಿತು ಮಾತನಾಡಿದ ಅವರು, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರನ್ನು ಭೇಟಿಯಾಗಿದ್ದೆ. ರಾಜ್ಯಕ್ಕೆ ಬೇಕಿರುವ ಅಗತ್ಯ ಅಕ್ಕಿಯನ್ನು (Rice) ಕೊಡುವ ಭರವಸೆ ನೀಡಿದ್ದಾರೆ. ಪ್ರತಿ ತಿಂಗಳು 20 ಸಾವಿರ ಮೆಟ್ರಿಕ್ ಟನ್ ಅಕ್ಕಿ ಬೇಕಾಗಬಹುದು. ನಾನು ಸಿಎಂ ಮತ್ತು ಅಧಿಕಾರಿಗಳ ಜೊತೆಗೆ ಚರ್ಚೆ ಮಾಡಿ ಮುಂದಿನ ಹಂತದಲ್ಲಿ ಪ್ರಸ್ತಾವನೆ ಕಳುಹಿಸಲಾಗುವುದು ಎಂದರು. ಇದನ್ನೂ ಓದಿ: ಸಿಎಂ ತವರೂರಿನ ದೊಡ್ಡಾಸ್ಪತ್ರೆಯಲ್ಲಿ ವ್ಹೀಲ್ ಚೇರ್ ಅವ್ಯವಸ್ಥೆ – ಶಾಸಕ ಹರೀಶ್‌ಗೌಡ ತೀವ್ರ ತರಾಟೆ!

    ಎಷ್ಟು ಪ್ರಮಾಣ ಅಕ್ಕಿ ಕೇಳಬೇಕು ಎಂಬುದನ್ನು ಅಧಿಕಾರಿಗಳ ಜೊತೆಗೆ ಚರ್ಚೆ ನಡೆಸಲಿದ್ದೇನೆ. ಈ ಹಿಂದೆ ಕೇಂದ್ರ ಅಕ್ಕಿ ಕೊಡದಿದ್ದಾಗ ಹಣವನ್ನು ಸಂದಾಯ ಮಾಡಿದ್ದೆವು. ಈ ನಡುವೆ ನಡೆಸಿದ ಸಮೀಕ್ಷೆಯಲ್ಲಿ ಜನರು ಹಣದ ಬದಲು ಬೇಳೆ, ಸಕ್ಕರೆ ಮತ್ತು ಎಣ್ಣೆಗೆ ಮನವಿ ಮಾಡಿದ್ದಾರೆ. ಜನರ ಬಯಕೆಯನ್ನು ಗಮನದಲ್ಲಿಟ್ಟುಕೊಂಡು ಕೇಂದ್ರಕ್ಕೆ ಅಕ್ಕಿಯ ಪ್ರಮಾಣದ ಬಗ್ಗೆ ಮನವಿ ಮಾಡಲಿದ್ದೇವೆ ಎಂದು ಹೇಳಿದರು. ಇದನ್ನೂ ಓದಿ: ವರಮಹಾಲಕ್ಷ್ಮೀ ಹಬ್ಬದ ಚೀಟಿ ಹೆಸರಿನಲ್ಲಿ ಐದು ಕೋಟಿಗೂ ಹೆಚ್ಚು ವಂಚಿಸಿ ಪರಾರಿ

    ಎಸ್‌ಸಿ, ಎಸ್ಟಿ ಒಳ ಮೀಸಲಾತಿ ನೀಡುವ ಪ್ರತಿಕ್ರಿಯಿಸಿದ ಅವರು, ಸರ್ವೋಚ್ಚ ನ್ಯಾಯಾಲಯದ ಆದೇಶವನ್ನು ನಾನು ಸ್ವಾಗತ ಮಾಡುತ್ತೇನೆ. 30 ವರ್ಷಗಳ ಕಾಲ ಹಲವು ಸಂಘ ಸಂಸ್ಥೆಗಳು ಹೋರಾಟ ನಡೆಸುತ್ತಿದ್ದವು. ಯಾವ ಜಾತಿಗೂ ತೊಂದರೆಯಾಗದ ರೀತಿ ಎಲ್ಲಾ ರೀತಿಯಲ್ಲೂ ಅವಕಾಶ ಮಾಡಿಕೊಡಬೇಕು ಎಂಬ ನಿರ್ಧಾರವಾಗಿದೆ ಎಂದರು. ಇದನ್ನೂ ಓದಿ: ಮ್ಯಾನ್ ಪೋರ್ಟಬಲ್ ಆಂಟಿ ಟ್ಯಾಂಕ್ ಗೈಡೆಡ್ ಕ್ಷಿಪಣಿಯ ಯಶಸ್ವಿ ಪ್ರಯೋಗ ನಡೆಸಿದ ಡಿಆರ್‌ಡಿಒ

    ರಾಜ್ಯ ಸರ್ಕಾರಗಳು ನಿರ್ಧಾರ ಮಾಡಬೇಕು ಎಂದು ಕೋರ್ಟ್ ಹೇಳಿವೆ, ರಾಜ್ಯದಲ್ಲಿ ಸದಾಶಿವ ಆಯೋಗದ ವರದಿಯನ್ನು ಆಧಾರವಾಗಿಟ್ಟುಕೊಂಡು ಮೀಸಲಾತಿ ನೀಡಬೇಕು. ಈ ಸಂಬಂಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿಯವರನ್ನ ಭೇಟಿಯಾಗಿ ಮನವಿ ಮಾಡಿದ್ದೇನೆ. ಎಐಸಿಸಿ ಸಭೆ ಕೂಡಾ ನಡೆಯುತ್ತಿದ್ದು, ಸಭೆಯಲ್ಲಿ ಎಲ್ಲಾ ರಾಜ್ಯದ ಅಧ್ಯಕ್ಷರು ಕೂಡ ಭಾಗಿಯಾಗಿದ್ದಾರೆ. ಶೀಘ್ರದಲ್ಲಿ ಈ ಬಗ್ಗೆ ನಿರ್ಧರಿಸಲಾಗುವುದು ಎಂದು ತಿಳಿಸಿದರು. ಇದನ್ನೂ ಓದಿ: ಚನ್ನಪಟ್ಟಣ ಕ್ಷೇತ್ರದ ಅಭ್ಯರ್ಥಿ ಕುರಿತು ದೆಹಲಿ ಮಟ್ಟದಲ್ಲಿ ಚರ್ಚಿಸಿ ನಿರ್ಧಾರ: ವಿಜಯೇಂದ್ರ

  • 15 ತಿಂಗಳಲ್ಲಿ 1,200 ರೈತರ ಆತ್ಮಹತ್ಯೆ – ಕಾಂಗ್ರೆಸ್ ಸರ್ಕಾರದಲ್ಲಿ ರೈತರಿಗಿಲ್ಲ ಉಜ್ವಲ ಭವಿಷ್ಯ: ಜೋಶಿ

    15 ತಿಂಗಳಲ್ಲಿ 1,200 ರೈತರ ಆತ್ಮಹತ್ಯೆ – ಕಾಂಗ್ರೆಸ್ ಸರ್ಕಾರದಲ್ಲಿ ರೈತರಿಗಿಲ್ಲ ಉಜ್ವಲ ಭವಿಷ್ಯ: ಜೋಶಿ

    ಹುಬ್ಬಳ್ಳಿ: ಕಾಂಗ್ರೆಸ್ (Congress) ಸರ್ಕಾರದಲ್ಲಿ ರೈತರಿಗೆ ಉಜ್ವಲ ಭವಿಷ್ಯ ಇಲ್ಲದಂತಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಆತಂಕ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ಕಳೆದ 15 ತಿಂಗಳಲ್ಲಿ 1,200ಕ್ಕೂ ಹೆಚ್ಚು ರೈತರು (Farmers) ಆತ್ಮಹತ್ಯೆಗೆ ಶರಣಾಗಿರುವುದು ದುರಂತ ಎಂದು ವಿಷಾದಿಸಿದ್ದಾರೆ.

    ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದು, ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಅನ್ನದಾತರ ಜೀವನವನ್ನು ಸುಗಮವಾಗಿಸಲು ಕೇಂದ್ರ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದ್ದರೆ, ಇತ್ತ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರೈತರ ಸಂಕಷ್ಟ ಆಲಿಸದೇ ಸಾವಿಗೆ ಕಾರಣವಾಗುತ್ತಿದೆ ಎಂದು ಜೋಶಿ ಆರೋಪಿಸಿದ್ದಾರೆ. ಇದನ್ನೂ ಓದಿ: ಪ್ರಧಾನಿ ಮೋದಿಯಿಂದ ಕ್ಷುಲ್ಲಕ ರಾಜಕಾರಣ: ಖರ್ಗೆ ಕಿಡಿ

    ರೈತರ ಮನವಿ ಪತ್ರ ಕಸದ ಬುಟ್ಟಿಗೆ:
    ರಾಜ್ಯದ ರೈತರು ಸೂಕ್ತ ಬೆಳೆವಿಮೆ ಕಾಣಲಿಲ್ಲ. ಸಮರ್ಪಕ ಬೆಳೆ ಪರಿಹಾರವನ್ನೂ ಕಾಣಲಿಲ್ಲ. ರೈತರ ಜ್ವಲಂತ ಸಮಸ್ಯೆಗಳ ಕುರಿತು ಮುಖ್ಯಮಂತ್ರಿಗಳಿಗೆ ನೀಡಿದ್ದ ಮನವಿ ಪತ್ರವೇ ಕಸದ ಬುಟ್ಟಿಗೆ ಸೇರಿತು. ಇಂತಹ ರೈತ ವಿರೋಧಿ ಧೋರಣೆಯ ಕಾಂಗ್ರೆಸ್ ಆಡಳಿತದಲ್ಲಿ ರೈತರಿಗೆ ಉತ್ತಮ ಭವಿಷ್ಯವೇ ಇಲ್ಲವಾಗಿದೆ ಎಂದು ಪ್ರಲ್ಹಾದ್ ಜೋಶಿ ತಮ್ಮ `ಎಕ್ಸ್’ ಖಾತೆಯಲ್ಲಿ ಕಳವಳ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ಶಾಲಿನಿ ‌ರಜನೀಶ್ ನೇಮಕ

    ನುಡಿದಂತೆ ನಡೆಯದ ಕಾಂಗ್ರೆಸ್:
    ನಾವು ಬಡವರ ಪರ, ಪರಿಶಿಷ್ಟರ ಪರ, ರೈತರ ಪರ ಎಂದು ಪರಿಪರಿಯಾಗಿ ಕಂತೆಪುರಾಣ ಹೇಳುವ ಕಾಂಗ್ರೆಸ್ ನುಡಿದಂತೆ ನಡೆಯದು. ಮಾತು ಉಳಿಸಿಕೊಳ್ಳುವ ಯೋಗ್ಯತೆ ಕಾಂಗ್ರೆಸ್‌ಗೆ ಇಲ್ಲ ಎಂದು ಟೀಕಿಸಿದ್ದಾರೆ. ಇದನ್ನೂ ಓದಿ: ರಾಜ್ಯಸಭೆಯಲ್ಲೂ ವಾಲ್ಮೀಕಿ ನಿಗಮದ ಹಗರಣ, ಮುಡಾ ಪ್ರಕರಣದ ಸದ್ದು – ಕೋಟಿ ಕೋಟಿ ಲೂಟಿ ಆರೋಪ

    ರೈತರ ಮನವಿ ಪತ್ರವನ್ನು ಕಸದ ಬುಟ್ಟಿಗೆ ಎಸೆಯುವ ಇವರಿಗೆ ಅಧಿಕಾರದಲ್ಲಿ ಇರುವ ಅರ್ಹತೆಯೇ ಇಲ್ಲ. ಸಿದ್ಧರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರಿಯುವ ಅರ್ಹತೆಯನ್ನೇ ಕಳೆದುಕೊಂಡಿದ್ದಾರೆ. ಈ ಕೂಡಲೇ ಸಿಎಂ ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: ರಾಮನಗರ ಜಿಲ್ಲೆ ‌ಹೆಸರು ಬದಲಾವಣೆ- ಬೆಂಗಳೂರು ದಕ್ಷಿಣ ಜಿಲ್ಲೆ ಅಂತ ಮರು ನಾಮಕರಣ ಮಾಡಲು ಕ್ಯಾಬಿನೆಟ್ ಮಹತ್ವದ ನಿರ್ಧಾರ

  • ಅಧಿಕಾರ ಸ್ವೀಕರಿಸಿದ ರಾಜ್ಯದ ನಾಲ್ವರು ಕೇಂದ್ರ ಸಚಿವರು

    ಅಧಿಕಾರ ಸ್ವೀಕರಿಸಿದ ರಾಜ್ಯದ ನಾಲ್ವರು ಕೇಂದ್ರ ಸಚಿವರು

    ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (Narendra Modi) ಸಂಪುಟದಲ್ಲಿ (Modi Cabinet) ಕೇಂದ್ರ ಮಂತ್ರಿಗಳಾಗಿ ಪ್ರಮಾಣವಚನ ಸ್ವೀಕರಿಸಿದ್ದ ಸಂಪುಟ ದರ್ಜೆ ಸಚಿವರಾದ ಪ್ರಲ್ಹಾದ್ ಜೋಶಿ, ಹೆಚ್.ಡಿ ಕುಮಾರಸ್ವಾಮಿ, ರಾಜ್ಯಖಾತೆ ಸಚಿವರಾದ ಶೋಭಾ ಕರಂದ್ಲಾಜೆ ಮತ್ತು ವಿ.ಸೋಮಣ್ಣ ಖಾತೆ ಹಂಚಿಕೆ ಬಳಿಕ ತಮ್ಮ ಕಚೇರಿಗಳಲ್ಲಿ ಅಧಿಕಾರ ಸ್ವೀಕರಿಸಿದರು.

    ಹೆಚ್.ಡಿ ಕುಮಾರಸ್ವಾಮಿ (HD Kumaraswamy)ಅವರು ಉದ್ಯೋಗ ಭವನದಲ್ಲಿರುವ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವಾಲಯದಲ್ಲಿ ಅಧಿಕಾರ ಸ್ವೀಕರಿಸಿದರು. ಪೂಜೆ ಸಲ್ಲಿಸಿ ಬಳಿಕ ಕಡತಕ್ಕೆ ಸಹಿ ಹಾಕುವ ಮೂಲಕ ಹೆಚ್‌ಡಿಕೆ ಅಧಿಕಾರ ಸ್ವೀಕರಿಸಿದರು. ಆಹಾರ ಮತ್ತು ನಾಗರಿಕ ಸರಬರಾಜು ಖಾತೆ, ನವೀಕರಿಸಬಹುದಾದ ಇಂಧನ ಖಾತೆ ಸಚಿವರಾಗಿ ಕೃಷಿ ಮತ್ತು ಊರ್ಜಾ ಭವನದಲ್ಲಿ ಪ್ರಲ್ಹಾದ್ ಜೋಶಿ (Pralhad Joshi) ಅಧಿಕಾರ ಸ್ವೀಕರಿಸಿದರು. ಇದನ್ನೂ ಓದಿ: ರೇಣುಕಾಸ್ವಾಮಿ ಹತ್ಯೆ ಪ್ರಕರಣ – ನಟ ದರ್ಶನ್ ಸೇರಿ 13 ಆರೋಪಿಗಳು 6 ದಿನ ಪೊಲೀಸ್ ಕಸ್ಟಡಿಗೆ

    ವಿ. ಸೋಮಣ್ಣ (V Somanna) ರೈಲ್ವೆ ಹಾಗೂ ಜಲಶಕ್ತಿ ಭವನದಲ್ಲಿ ಜಲಶಕ್ತಿ ರಾಜ್ಯಖಾತೆಯನ್ನು ವಹಿಸಿಕೊಂಡರು. ಶೋಭಾ ಕರಂದ್ಲಾಜೆ (Shobha Karandlaje) ಅವರು ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆ ರಾಜ್ಯಖಾತೆ ಮತ್ತು ಕಾರ್ಮಿಕ ಇಲಾಖೆ ರಾಜ್ಯಖಾತೆ ಸಚಿವರಾಗಿ ಅಧಿಕಾರ ಸ್ವೀಕರಿಸಿದರು. ಇದನ್ನೂ ಓದಿ: ಬಿಜೆಪಿಯ ಮೋಹನ್ ಚರಣ್ ಮಾಝಿ ಒಡಿಶಾದ ನೂತನ ಸಿಎಂ

    ಅಧಿಕಾರ ಸ್ವೀಕಾರ ಬಳಿಕ ಮಾತನಾಡಿದ ಕೇಂದ್ರ ಸಚಿವ ವಿ. ಸೋಮಣ್ಣ, ಹೊಸ ಜವಾಬ್ದಾರಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹಾಗೂ ನನ್ನ ಪಕ್ಷಕ್ಕೆ ಧನ್ಯವಾದಗಳು. ಕಳೆದ ಹತ್ತು ವರ್ಷದಲ್ಲಿ ಮೋದಿ ಅವರ ನಾಯಕತ್ವ, ದೂರದೃಷ್ಟಿ ಚಿಂತನೆ ವಿಶ್ವ ಭಾರತದತ್ತ ನೋಡುವಂತೆ ಮಾಡಿದೆ. ಮೋದಿ ಅವರು ಸತತ ಮೂರನೇ ಬಾರಿಗೆ ಪ್ರಧಾನಿಯಾಗಿದ್ದಾರೆ. ಸರ್ಕಾರದ ಸೌಲಭ್ಯಗಳನ್ನು 140 ಕೋಟಿ ಜನರಿಗೆ ಮುಟ್ಟಿಸಬೇಕು. ಅಶ್ವಿನಿ ವೈಷ್ಣವ್ ಅವರ ನೇತೃತ್ವದಲ್ಲಿ ರೈಲ್ವೆ ಇಲಾಖೆ ಹತ್ತು ವರ್ಷದಲ್ಲಿ ಹಲವು ಕೊಡುಗೆ ನೀಡಿದೆ. ಅಶ್ವಿನಿ ವೈಷ್ಣವ್ ಜೊತೆಗೆ ಕೆಲಸ ಮಾಡಲು ಆನಂದವಾಗುತ್ತದೆ. ವಿಕಸಿತ್ ಭಾರತ್ ಯಶಸ್ಸಿನತ್ತ ಕೊಂಡೊಯ್ಯಲು ಪ್ರಯತ್ನಿಸುತ್ತೇವೆ ಎಂದರು. ಇದನ್ನೂ ಓದಿ: ಮಂಡ್ಯದಲ್ಲಿ ಕೇಂದ್ರ ಸಚಿವ ಹೆಚ್‌ಡಿಕೆ ರಾಜೀನಾಮೆ ನೀಡ್ತಾರೆ, ಚನ್ನಪಟ್ಟಣ ಕ್ಷೇತ್ರ ಉಳಿಸಿಕೊಳ್ತಾರೆ: ಡಿ.ಕೆ‌.ಸುರೇಶ್

    ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮಾತನಾಡಿ, ಮಾನ್ಯ ಪ್ರಧಾನಿಗಳು ನನಗೆ ಈ ಖಾತೆ ನೀಡಿದ್ದಾರೆ. ನನಗೆ ಈ ಜವಾಬ್ದಾರಿ ನೀಡಿದ್ದಕ್ಕಾಗಿ ಮೋದಿ ಅವರಿಗೆ ಧನ್ಯವಾದಗಳು. ನಾನು ನಮ್ಮ ಕ್ಷೇತ್ರ, ರಾಜ್ಯ, ದೇಶದ ಜನತೆಗೆ ಧನ್ಯವಾದ ಹೇಳುತ್ತೇನೆ. ಪ್ರಧಾನಿ, ಮುಂದಿನ 125 ದಿನಗಳ ಕಾರ್ಯ ಹೇಗಿರಬೇಕು ಎಂಬುದಕ್ಕೆ ಮೊದಲೇ ಹೇಳಿದ್ದಾರೆ. ಪೀಯುಶ್ ಗೋಯಲ್ ಕೂಡ ಈ ಇಲಾಖೆಯಲ್ಲಿ ಕೆಲಸ ಮಾಡಿದ್ದಾರೆ. 80 ಕೋಟಿ ಜನರಿಗೆ ದೊಡ್ಡ ಪ್ರಮಾಣದಲ್ಲಿ ಆಹಾರ ಭದ್ರತಾ ಕಾರ್ಯಕ್ರಮ ಮಾಡಿದ್ದಾರೆ. ಇಂತಹ ಸ್ಕೀಮ್ ನಡೆಸುವ ಇಲಾಖೆಯಲ್ಲಿ ಮೋದಿಯವರು ನನಗೆ ಸ್ಥಾನ ನೀಡಿದ್ದಾರೆ. ನಂಬಿಕೆ ಇಟ್ಟು ನನಗೆ ಈ ಖಾತೆ ನೀಡಿದ್ದಕ್ಕೆ ಧನ್ಯವಾದಗಳು. ನಿಜಕ್ಕೂ ಪ್ರಧಾನಿಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದರು. ಇದನ್ನೂ ಓದಿ: ಭಾರತದಿಂದ ಕಳ್ಳತನವಾಗಿದ್ದ 500 ವರ್ಷಗಳ ಪುರಾತನ ವಿಗ್ರಹ ಮರಳಿಸಲು ಮುಂದಾದ ಆಕ್ಸ್‌ಫರ್ಡ್ ವಿವಿ

  • ಕೇಂದ್ರದ ಅಕ್ಕಿ ಬೇಕಿದ್ದರೆ ನಮ್ಮನ್ನು ಕೇಳಿಯೇ ಘೋಷಣೆ ಮಾಡ್ಬೇಕು: ಪ್ರಲ್ಹಾದ್ ಜೋಶಿ

    ಕೇಂದ್ರದ ಅಕ್ಕಿ ಬೇಕಿದ್ದರೆ ನಮ್ಮನ್ನು ಕೇಳಿಯೇ ಘೋಷಣೆ ಮಾಡ್ಬೇಕು: ಪ್ರಲ್ಹಾದ್ ಜೋಶಿ

    ಹುಬ್ಬಳ್ಳಿ: ದಿನದಿಂದ ದಿನಕ್ಕೆ ರಾಜ್ಯದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ನಡುವಿನ ಅಕ್ಕಿ ಫೈಟ್ ಜೋರಾಗುತ್ತಿದೆ. ಕೇಂದ್ರದ ಅಕ್ಕಿ ಬೇಕಿದ್ರೆ ನಮ್ಮನ್ನು ಕೇಳಿಯೇ ಘೋಷಣೆ ಮಾಡಬೇಕು. ಕೇಂದ್ರದಿಂದ ನಮಗೆ ಸಾಧ್ಯವಿರುವ ಎಲ್ಲಾ ಸಹಕಾರ ಕೊಡುತ್ತೇವೆ. ಟೆಂಡರ್ ಕರೆದು ಕೇಂದ್ರ ಸರ್ಕಾರ (Central Government) ಅಕ್ಕಿ ಖರೀದಿ ಮಾಡುತ್ತದೆ. ನೀವೂ ಅಕ್ಕಿ ಖರೀದಿಸಿ ಜನರಿಗೆ ವಿತರಿಸಿ, ನಮ್ಮದೇನು ಅಭ್ಯಂತರವಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (Prlhad Joshi) ಹೇಳಿದರು.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಕೇಂದ್ರದಿಂದ ಈಗಾಗಲೇ ದೇಶಾದ್ಯಂತ 5 ಕೆ.ಜಿ ಅಕ್ಕಿ (Ration) ಕೊಡುತ್ತಿದ್ದೇವೆ. ನಮ್ಮದು ಬಿಟ್ಟು ಸಿಎಂ 10 ಕೆ.ಜಿ ಅಕ್ಕಿ ಕೊಡ್ತಾರಾ ಎಂಬುದನ್ನು ಮೊದಲು ಸ್ಪಷ್ಟಪಡಿಸಲಿ. ಬಿಜೆಪಿ (BJP) ಅಧಿಕಾರದಲ್ಲಿ ಇರುವ ರಾಜ್ಯಗಳನ್ನು ಸೇರಿಸಿ ಎಲ್ಲರಿಗೂ ಒಂದೇ ಕಾನೂನು ಇದೆ. ಬಫರ್ ಸ್ಟಾಕ್‍ನ್ನು ನಾವು ಇಟ್ಟುಕೊಳ್ಳಬೇಕಾಗುತ್ತೆ ಎಂದು ಹೇಳಿದರು.

    ರಾಜ್ಯ ಸರ್ಕಾರ ವಿದ್ಯುತ್ ದರ (Electricity Bill) ಏರಿಸಿ ಜನರಿಗೆ ತೊಂದರೆ ಕೊಡುತ್ತಿದೆ. ಇಂಡಸ್ಟ್ರಿಗಳನ್ನು ಓಡಿಸುತ್ತಿದ್ದೀರಿ, ವ್ಯವಹಾರ ಮಾಡಲು ಬಿಡುತ್ತಿಲ್ಲ. ಕೈಗಾರಿಕೆಗಳ ಮೇಲೆ ಯಾಕೆ ಭಾರ ಹಾಕಿದ್ದೀರಿ?. ಜನರಿಗೆ ಭಾಗ್ಯಗಳ ಹೆಸರಲ್ಲಿ ಮೋಸ ಮಾಡಿ ಕಂಡೀಷನ್ ಹಾಕುತ್ತಿದ್ದಾರೆ. ನಾವು ಕಾಂಗ್ರೆಸ್‍ (Congress) ಗೆ ಅಚ್ಛೆ ದಿನ್ ಬರುತ್ತೆ ಅಂತಾ ಹೇಳಿಲ್ಲ ಎಂದರು. ಇದನ್ನೂ ಓದಿ: ಜುಲೈನಲ್ಲಿ ಮಂಡಿಸೋ ಬಜೆಟ್ ಗಾತ್ರ 30-35 ಸಾವಿರ ಕೋಟಿ ಹೆಚ್ಚಳ ಆಗುತ್ತೆ: ಸಿದ್ದರಾಮಯ್ಯ

    ಇಡೀ ದೇಶಕ್ಕೆ ಅಚ್ಛೇ ದಿನ್ ಬರುತ್ತೆ ಅಂತಾ ಹೇಳಿದ್ವಿ. ದೇಶದಲ್ಲಿ ಆಹಾರ ಭದ್ರತೆ ಇದೆ, ಹಣದುಬ್ಬರ ಕಡಿಮೆಯಾಗಿದೆ. ಕೋವಿಡ್, ರಷ್ಯಾ- ಉಕ್ರೇನ್ ಯುದ್ಧದ ನಡುವೆಯೂ ದೇಶ ಆರ್ಥಿಕವಾಗಿ ಸುಸ್ಥಿರವಾಗಿದೆ. ಇಡೀ ದೇಶದಲ್ಲಿ ಮೋದಿಯವರ ಬಗ್ಗೆ ಗೌರವವಿದೆ. ಸಿದ್ದರಾಮಯ್ಯ ಸುಳ್ಳು ಭಾಷಣ ಮಾಡುವುದರಿಂದ ಏನೂ ಆಗಲ್ಲ ಎಂದು ತಿಳಿಸಿದರು.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_title” view=”carousel” /]

  • ಗಣಿಗಾರಿಕೆಯಿಂದ ಭಾರತದ GDPಗೆ ಶೇ.2.5 ರಷ್ಟು ಕೊಡುಗೆ: ಪ್ರಲ್ಹಾದ್ ಜೋಶಿ

    ಗಣಿಗಾರಿಕೆಯಿಂದ ಭಾರತದ GDPಗೆ ಶೇ.2.5 ರಷ್ಟು ಕೊಡುಗೆ: ಪ್ರಲ್ಹಾದ್ ಜೋಶಿ

    ಹೈದರಾಬಾದ್: 2030ರ ವೇಳೆಗೆ ಭಾರತದ ಜಿಡಿಪಿ (GDP)ಯಲ್ಲಿ ಗಣಿ ಮತ್ತು ಖನಿಜಗಳ ಪಾಲು ಶೇ. 2.5ಕ್ಕೆ ಹೆಚ್ಚಿಸುವ ನಿಟ್ಟಿನಲ್ಲಿ ಎಲ್ಲ ರಾಜ್ಯಗಳು ಸಹಕರಿಸುವಂತೆ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಕರೆ ನೀಡಿದ್ದಾರೆ.

    ಹೈದರಾಬಾದ್‍ನಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಗಣಿಗಾರಿಕೆ ಸಚಿವರ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ (Narendra Modi) ಯವರ ನಿರ್ದೇಶನದಂತೆ, ಆಯಾ ರಾಜ್ಯ ಗಣಿ ಇಲಾಖೆಯ ಸರ್ಕಾರಿ ಕಂಪನಿಗಳು ಮತ್ತು ಸ್ವಾಯತ್ತ ಸಂಸ್ಥೆಗಳ ಜೊತೆ ಚರ್ಚಿಸಿ ಸಮಾವೇಶ ಆಯೋಜಿಸಲಾಗಿದೆ. ಎಲ್ಲ ರಾಜ್ಯಗಳ ಪಾಲ್ಗೊಳ್ಳುವಿಕೆ ಮುಖ್ಯ. ಒಕ್ಕೂಟ ವ್ಯವಸ್ಥೆಯಲ್ಲಿ ನಾವು ಶ್ರದ್ದೆಯಿಂದ ಕೆಲಸ ಮಾಡಿದರೆ 2047 ರೊಳಗೆ ಭಾರತ ಅಭಿವೃದ್ದಿ ಹೊಂದಿದ ಭಾರತವಾಗುವುದರಲ್ಲಿ ಅನುಮಾನ ಬೇಡ ಎಂದು ಅಭಿಪ್ರಾಯಪಟ್ಟರು.

    ಕಲ್ಲಿದ್ದಲು ಉತ್ಪಾದನೆಯಲ್ಲಿ ಭಾರತ ಹೊಸ ಮೈಲುಗಲ್ಲು ಸಾಧಿಸುತ್ತಿದೆ. ಕಲ್ಲಿದ್ದಲು ಉತ್ಪಾದನೆಯಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ಶೇ.8 ರಷ್ಟು ಹೆಚ್ಚಳವಾಗಿದ್ದು, ಆಗಸ್ಟ್ 2022ರವರೆಗೆ 58 ಎಂಟಿಯಷ್ಟಾಗಿದೆ ಜೋಶಿ ತಿಳಿಸಿದರು. ಇದನ್ನೂ ಓದಿ: ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್ ಧರಿಸಿದ್ದ 41 ಸಾವಿರ ರೂ.ನ ಟೀಶರ್ಟ್ ಕುರಿತು ಬಿಜೆಪಿ ವ್ಯಂಗ್ಯ

    ಭಾರತದಲ್ಲಿ ಕಲ್ಲಿದ್ದಲು (Coal) ಗಣಿಗಾರಿಕೆ ಕ್ಷೇತ್ರದಲ್ಲಿ ಇನ್ನಷ್ಟು ಪ್ರಗತಿ ಸಾಧಿಸಲು ನಮ್ಮ ಪ್ರಯತ್ನ ನಿರಂತರವಾಗಿರುತ್ತದೆ. ಖನಿಜ ಕ್ಷೇತ್ರದಲ್ಲಾದ ಸುಧಾರಣೆ ಭಾರತದ ಆರ್ಥಿಕ ಬೆಳವಣಿಗೆಯಲ್ಲಿ ಕಲ್ಲಿದ್ದಲು ಗಣಿಗಾರಿಕೆಯ ಪಾತ್ರವು ಮುಖ್ಯವಾಗಿದೆ. ಕಳೆದ ವರ್ಷ ಹರಜಾದ ಗಣಿಗಳಿಂದ ಸರ್ಕಾರಕ್ಕೆ ಒಟ್ಟು 25,170 ಕೋಟಿ ಆದಾಯ ಬಂದಿದೆ ಎಂದು ಅವರು ಮಾಹಿತಿ ನಿಡಿದರು.

    Live Tv
    [brid partner=56869869 player=32851 video=960834 autoplay=true]

  • ಹೊಲಿಗೆಯನ್ನೇ ಸ್ವ-ಉದ್ಯೋಗ ಮಾಡಿಕೊಳ್ಳುವ ಮಹಿಳೆಯರಿಗೆ ಮುದ್ರಾ ಲೋನ್: ಜೋಶಿ

    ಹೊಲಿಗೆಯನ್ನೇ ಸ್ವ-ಉದ್ಯೋಗ ಮಾಡಿಕೊಳ್ಳುವ ಮಹಿಳೆಯರಿಗೆ ಮುದ್ರಾ ಲೋನ್: ಜೋಶಿ

    ಧಾರವಾಡ: ಹೊಲಿಗೆಯನ್ನೇ ಸ್ವ-ಉದ್ಯೋಗ ಮಾಡಿಕೊಳ್ಳಲು ಬಯಸುವ ಮಹಿಳೆಯರಿಗೆ ಮುದ್ರಾ ಯೋಜನೆಯಡಿ ಸಾಲ ನೀಡುವ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ.

    ಧಾರವಾಡದಲ್ಲಿಂದು ಹಮ್ಮಿಕೊಳ್ಳಲಾಗಿದ್ದ ಉಚಿತ ಕೌಶಲ್ಯಾಭಿವೃದ್ಧಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಮಹಿಳೆಯರಿಗೆ ಅನುಕೂಲವಾಗುವಂತೆ ಉಚಿತ ವೃತ್ತಿಪರ ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮವನ್ನು ಗ್ರಾಮ ವಿಕಾಸ ಸೊಸೈಟಿ ಅSಖ ಅನುದಾನದಡಿಯಲ್ಲಿ ಹಮ್ಮಿಕೊಂಡಿತ್ತು. ಇದೇ ವೇಳೆ ತರಬೇತಿ ಪಡೆದ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರವನ್ನು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಿತರಿಸಿದರು. ಇದನ್ನೂ ಓದಿ: ಬೆಂಗಳೂರಿಗೆ ಇನ್ಮುಂದೆ ಸಾಂಪ್ರದಾಯಿಕ ವೈದ್ಯ ಪದ್ಧತಿ ಹಬ್ ಆಗೋ ಅವಕಾಶ- ಯೋಗಿ ಆದಿತ್ಯನಾಥ್

    ಈ ವೇಳೆ ಮಾತಾಡಿದ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ, ಮಹಿಳೆಯರು ಬದುಕು ಕಟ್ಟಿಕೊಳ್ಳಲು ಧಾರವಾಡ ಜಿಲ್ಲೆಯಲ್ಲಿ ಉಚಿತ ಕೌಶಲ್ಯ ಅಭಿವೃದ್ಧಿ ಕಾರ್ಮಕ್ರಮಗಳನ್ನ ಹಮ್ಮಿಕೊಳ್ಳಲಾಗಿದೆ. ಪ್ರಧಾನಿ ಮೋದಿಯವರ ಆಶಯದಂತೆ ಗ್ರಾಮೀಣ ವಿಕಾಸಕ್ಕಾಗಿ ಹಲವು ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮಗಳನ್ನ ನಡೆಸಲಾಗ್ತಿದೆ. ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ 4 ಕೌಶಲ್ಯಾಭಿವೃದ್ದಿ ತರಬೇತಿ ಕೇಂದ್ರಗಳನ್ನ ಪ್ರಾರಂಭಿಸಲಾಗಿದ್ದು, 1200 ಮಹಿಳೆಯರಿಗೆ ತರಬೇತಿ ನೀಡಲಾಗುತ್ತಿದೆ ಎಂದರು.

    ಈ ತರಬೇತಿ ಪಡೆದ ಮಹಿಳೆಯರು, ಸ್ವ ಉದ್ಯೋಗ ಕೈಗೊಳ್ಳಲು ಮುಂದಾದರೆ, ಅವರೆಲ್ಲರಿಗೂ ಮುದ್ರಾ ಯೋಜನೆಯಡಿ ಸಾಲ ನೀಡಲು ಸಹ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು. ಇದೇ ವೇಳೆ ತರಬೇತಿ ಕೇಂದ್ರಗಳಲ್ಲಿರುವ ವ್ಯವಸ್ಥೆಗಳನ್ನ ಜೋಶಿ ಪರಿಶೀಲಿಸಿದರು.

    Live Tv
    [brid partner=56869869 player=32851 video=960834 autoplay=true]