Tag: ಪ್ರಲ್ಹಾದ ಜೋಶಿ

  • ಪ್ರಸಾದಕ್ಕೆ ಪರವಾನಗಿ; ರಾಜ್ಯ ಸರ್ಕಾರದ್ದು ಹುಚ್ಚು ಆದೇಶ – ಪ್ರಲ್ಹಾದ್ ಜೋಶಿ ಆಕ್ರೋಶ

    ಪ್ರಸಾದಕ್ಕೆ ಪರವಾನಗಿ; ರಾಜ್ಯ ಸರ್ಕಾರದ್ದು ಹುಚ್ಚು ಆದೇಶ – ಪ್ರಲ್ಹಾದ್ ಜೋಶಿ ಆಕ್ರೋಶ

    – ಹಿಂದೂ ಹಬ್ಬಕ್ಕೆ ಮಾತ್ರ ಈ ಕ್ರಮ, ಇಫ್ತಿಯರ್ ಕೂಟಕ್ಕೆ ಯಾಕಿಲ್ಲ?

    ಹುಬ್ಬಳ್ಳಿ: ಗಣೇಶ ಪೆಂಡಾಲ್‌ಗಳಲ್ಲಿ ಪ್ರಸಾದ ಸಿದ್ಧಪಡಿಸಲು ಆಹಾರ ಸುರಕ್ಷತಾ ಇಲಾಖೆ ಪರವಾನಿಗೆ ಪಡೆಯಬೇಕು ಎಂದಿರುವ ರಾಜ್ಯ ಸರ್ಕಾರದ ಆದೇಶಕ್ಕೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ (Prahlad Joshi) ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

    ಹುಬ್ಬಳ್ಳಿಯಲ್ಲಿ (Hubballi) ಮಾಧ್ಯಮದವರೊಂದಿಗೆ ಮಾತನಾಡಿ, ರಾಜ್ಯ ಆಹಾರ ಇಲಾಖೆ ಹುಚ್ಚರ ರೀತಿಯಲ್ಲಿ ಇಂಥ ಆದೇಶ ಹೊರಡಿಸಿದೆ ಅಷ್ಟೇ. ಎಂಪ್ಯಾನಲ್ ಆದವರಿಂದಲೇ ಪ್ರಸಾದ ತಯಾರಿಸಬೇಕು ಎಂದಿರುವ ರಾಜ್ಯ ಸರ್ಕಾರದ ಈ ಸೂಚನೆ ಸರಿಯಲ್ಲ ಎಂದು ಖಂಡಿಸಿದರು. ಇದನ್ನೂ ಓದಿ: ಪ್ರೀತಿಯಿಂದ ಸುಧಾಕರ್ ಸವಾಲನ್ನು ಸ್ವೀಕರಿಸುತ್ತೇನೆ: ಡಿಕೆಶಿ

    ಗಣೇಶ ಹಬ್ಬದ ವೇಳೆ ದೇಶಾದ್ಯಂತ, ರಾಜ್ಯಾದ್ಯಂತ ಬಹಳ ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತವೆ. ಆಹಾರ ಸುರಕ್ಷಾ ಕ್ರಮ ಕೈಗೊಳ್ಳುವುದು ಸರಿ. ಆದರೆ, ಹೀಗೆ ಹುಚ್ಚರ ರೀತಿ ಅಲ್ಲ ಎಂದು ರಾಜ್ಯ ಸರ್ಕಾರವನ್ನು ತಿವಿದರು.

    ರಾಜ್ಯದಲ್ಲಿ ಹಿಂದೂ ಹಬ್ಬಕ್ಕೆ ತೊಂದರೆ ಕೊಡಲೆಂದೇ ರಾಜ್ಯ ಸರ್ಕಾರದಿಂದ ಇಂಥ ಆದೇಶ ಹೊರ ಬಿದ್ದಿದೆ. ಗಣೇಶ ಪ್ರತಿಷ್ಠಾಪನೆ ಮಾಡುವ ಸಂಘಟಕರು ಇದಕ್ಕೆ ಕಿವಿಗೊಡಬೇಕಿಲ್ಲ ಎಂದು ಹೇಳಿದರು. ಇದನ್ನೂ ಓದಿ: ರಷ್ಯಾ ವಿರುದ್ಧ ಉಕ್ರೇನ್‌ ಪ್ರತೀಕಾರದ ದಾಳಿ – ಬೆಂಕಿ ಉಂಡೆ ಉಗುಳುವ ʻಡ್ರ್ಯಾಗನ್‌ ಡ್ರೋನ್‌ʼ ಅಸ್ತ್ರ ಪ್ರಯೋಗ

    ಎಲ್ಲಾದರೂ ದುರುದ್ದೇಶದಿಂದ ಪ್ರಸಾದದಲ್ಲಿ ವಿಷ ಬೆರೆಸುವಂತ ಪ್ರಕರಣ ನಡೆದರೆ ಕ್ರಿಮಿನಲ್ ಕೇಸ್ ದಾಖಲಿಸಲಿ. ಆದರೆ ಸರ್ಕಾರವೇ ಹೀಗೆ ದುರುದ್ದೇಶ ಇಟ್ಟುಕೊಂಡು ಆದೇಶ ಹೊರಡಿಸಿದರೆ ಹೇಗೆ? ಎಂದು ಪ್ರಶ್ನಿಸಿದರು.

    ಹಿಂದೂ ಹಬ್ಬದಲ್ಲಷ್ಟೇ ಆಹಾರ ಸುರಕ್ಷೆ ನೆನಪಾಗುತ್ತೆದೆಯೇ? ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರಿಗೆ ಹಿಂದೂಗಳ ಹಬ್ಬ ಬಂದಾಗ ಮಾತ್ರ ಆಹಾರ ಸುರಕ್ಷತಾ ನಿಯಮ ಇರೋದು ನೆನಪಾಗುತ್ತದೆಯೇ? ಎಂದ ಸಚಿವ ಜೋಶಿ, ಇಫ್ತಿಯಾರ್ ಕೂಟ ಇದ್ದಾಗ ಇಂಥ ಆದೇಶ ಹೊರಡಿಸಿ ನೋಡೋಣ ಎಂದು ಸವಾಲು ಹಾಕಿದರು. ಇದನ್ನೂ ಓದಿ: `ಡಿ’ಗ್ಯಾಂಗ್ ವಿರುದ್ಧ ಪ್ರಮುಖ ಸಾಕ್ಷ್ಯವಾದ ಮಣ್ಣು – ದೇಶದಲ್ಲೇ ಮೊದಲ ಪ್ರಕರಣ!

    ಸ್ವಚ್ಛತೆ, ಶುಚಿತ್ವ ಕಾಪಾಡಿಕೊಳ್ಳಿ: ಗಣೇಶ ಪೆಂಡಾಲ್‌ಗಳಲ್ಲಿ ಪ್ರಸಾದ ತಯಾರಿಕೆ ವೇಳೆ ಸ್ವಚ್ಛತೆ, ಶುಚಿತ್ವ ಕಾಪಾಡಿಕೊಳ್ಳಬೇಕು ಎಂದು ಮನವಿ ಮಾಡಿದ ಸಚಿವರು, ಅಗತ್ಯ ಬಿದ್ದರೆ ರಾಜ್ಯ ಸರ್ಕಾರದ ಈ ಆದೇಶ ಧಿಕ್ಕರಿಸಿ ಎಂದು ಕರೆ ಕೊಟ್ಟರು. ಇದನ್ನೂ ಓದಿ: IAS ಸೇವೆಯಿಂದಲೇ ಪೂಜಾ ಖೇಡ್ಕರ್‌ ವಜಾ – ಕೇಂದ್ರ ಸರ್ಕಾರ ಆದೇಶ

  • ಭ್ರಷ್ಟಾಚಾರ ನಿರ್ಮೂಲನೆಗೆ ಆದ್ಯತೆ ಕೊಟ್ಟ ಪ್ರಧಾನಿ: ಪ್ರಹ್ಲಾದ್ ಜೋಶಿ

    ಭ್ರಷ್ಟಾಚಾರ ನಿರ್ಮೂಲನೆಗೆ ಆದ್ಯತೆ ಕೊಟ್ಟ ಪ್ರಧಾನಿ: ಪ್ರಹ್ಲಾದ್ ಜೋಶಿ

    ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ಭ್ರಷ್ಟಾಚಾರ ನಿರ್ಮೂಲನೆಗೆ ಆದ್ಯತೆ ಕೊಟ್ಟಿದ್ದಾರೆ ಎಂದು ಕೇಂದ್ರ ಕಲ್ಲಿದ್ದಲು, ಗಣಿ ಮತ್ತು ಸಂಸದೀಯ ವ್ಯವಹಾರ ಖಾತೆ ಸಚಿವರಾದ ಶ್ರೀ ಪ್ರಹ್ಲಾದ್ ಜೋಶಿ ಜೋಶಿ ಹೇಳಿದ್ದಾರೆ.

    ಬಿಜೆಪಿ ರಾಜ್ಯಾಧ್ಯಕ್ಷರು ಮತ್ತು ಸಂಸದರೂ ಆದ ಶ್ರೀ ನಳಿನ್‍ಕುಮಾರ್ ಕಟೀಲ್ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಬಿಜೆಪಿ ರಾಜ್ಯ ಮಟ್ಟದ ಇ ಪ್ರಶಿಕ್ಷಣ ಚಿಂತನ ವರ್ಗದಲ್ಲಿ ವೆಬೆಕ್ಸ್ ಮೂಲಕ ಮಾತನಾಡಿದ ಅವರು, ಒಂದು ದೇಶದಲ್ಲಿ ಎರಡು ಕಾಯ್ದೆ ಇರಬಾರದು ಎಂಬ ಚಿಂತನೆ ಡಾ. ಶ್ಯಾಮಪ್ರಸಾದ ಮುಖರ್ಜಿ ಅವರದಾಗಿತ್ತು. ಅದನ್ನು ವಿಶ್ವದಾದ್ಯಂತ ಪ್ರಧಾನಿಗಳಾದ ಶ್ರೀ ನರೇಂದ್ರ ಮೋದಿ ಅವರು, ಜಮ್ಮು ಮತ್ತು ಕಾಶ್ಮೀರಕ್ಕೆ 370ನೇ ವಿಧಿಯಡಿ ನೀಡಿದ್ದ ವಿಶೇಷ ಸ್ಥಾನಮಾನವನ್ನು ರದ್ದು ಪಡಿಸುವ ಮೂಲಕ ಈಡೇರಿಸಿದ್ದಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಇಲ್ಲದ ಅಪ್ಪನಿಗೆ ನಿತ್ಯವೂ ಕರೆ ಮಾಡ್ತಾಳೆ ಮಗಳು

    ಭಾರತದಲ್ಲಿ ಬ್ಯಾಂಕ್‍ಗಳ ರಾಷ್ಟ್ರೀಕರಣ ಮಾಡಿದರೂ ದೇಶದ ಜನರಿಗೆ ಅದರ ಪ್ರಯೋಜನ ಸಿಗುತ್ತಿರಲಿಲ್ಲ. ಪ್ರಧಾನಿಗಳಾದ ಶ್ರೀ ನರೇಂದ್ರ ಮೋದಿ ಅವರು, 46 ಕೋಟಿ ಜನರ ಬ್ಯಾಂಕ್ ಖಾತೆಗಳನ್ನು ಜನಧನ್ ಯೋಜನೆಯಡಿ ತೆರೆಸಿ ನೇರ ನಗದು ವರ್ಗಾವಣೆಯನ್ನು (ಡಿಬಿಟಿ) ಅನುಷ್ಠಾನಕ್ಕೆ ತಂದರು. ಒಂದೇ ಒಂದು ರೂಪಾಯಿ ಭ್ರಷ್ಟಾಚಾರ ಇಲ್ಲದ ಯೋಜನೆ ಇದಾಗಿದೆ. ಭ್ರಷ್ಟಾಚಾರದಲ್ಲೇ ಮುಳುಗಿದ್ದ ಕಾಂಗ್ರೆಸ್ ಮುಖಂಡರು ಮತ್ತು ನಾಯಕರು ಇದರಿಂದ ವಿಲವಿಲ ಒದ್ದಾಡುವಂತಾಗಿದೆ ಎಂದಿದ್ದಾರೆ. ಇದನ್ನೂ ಓದಿ: 1.55 ಲಕ್ಷ ಉನ್ನತ ಶಿಕ್ಷಣ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ಲೆಟ್ ಪಿಸಿ ವಿತರಣೆಗೆ ಚಾಲನೆ

    ದೇಶದ ಸಾರ್ವಭೌಮತೆ ಮತ್ತು ಏಕತೆಗೆ ವಿಶಿಷ್ಟ ಕೊಡುಗೆ ನೀಡಿದ ಡಾ. ಶ್ಯಾಮಪ್ರಸಾದ ಮುಖರ್ಜಿ ಅವರ ಕನಸನ್ನು ನನಸಾಗಿಸುವತ್ತ ನಮ್ಮ ನೆಚ್ಚಿನ ಪ್ರಧಾನಿಗಳಾದ ಶ್ರೀ ನರೇಂದ್ರ ಮೋದಿ ಮತ್ತು ಕೇಂದ್ರದ ಗೃಹ ಸಚಿವರಾದ ಶ್ರೀ ಅಮಿತ್ ಶಾ ಅವರ ನೇತೃತ್ವದ ಕೇಂದ್ರದ ಬಿಜೆಪಿ ಸರ್ಕಾರ ಮಹತ್ವದ ಕ್ರಮಗಳನ್ನು ಕೈಗೊಂಡಿದೆ. ಈ ಕುರಿತು ನಮ್ಮ ಕಾರ್ಯಕರ್ತರು ಮತ್ತು ಜನರಿಗೆ ಮಾಹಿತಿ ಕೊಡಬೇಕಾಗಿದೆ ಎಂದು ಅವರು ಕರೆ ನೀಡಿದರು.

    ಕಿಸಾನ್ ಸಮ್ಮಾನ್ ಯೋಜನೆಯಡಿ ಕೇಂದ್ರ ಸರಕಾರವು ರೈತರಿಗೆ ನೆರವಾಗುತ್ತಿದೆ. ರೈತರು ಸ್ವಾವಲಂಬಿ ಆಗುವ ನಿಟ್ಟಿನಲ್ಲಿ ಇದೊಂದು ಮಹತ್ವದ ಹೆಜ್ಜೆಯಾಗಿದೆ. ಹಿಂದೆ ರಾಜ್ಯದ ಬೆಂಗಳೂರು ಮತ್ತು ಮಂಗಳೂರಿನಲ್ಲಿ ಮಾತ್ರ ವಿಮಾನನಿಲ್ದಾಣಗಳಿದ್ದವು. ಈಗ ಉಡಾಣ್ ಯೋಜನೆಯಡಿ ಹುಬ್ಬಳ್ಳಿ, ಬೆಳಗಾವಿ, ತೋರಣಗಲ್, ಬೀದರ್ ಮತ್ತು ಕಲಬುರ್ಗಿಯಲ್ಲಿ ವಿಮಾನನಿಲ್ದಾಣಗಳನ್ನು ಅಭಿವೃದ್ಧಿ ಪಡಿಸಲಾಗಿದೆ. ಇದು ಕೇಂದ್ರ ಸರಕಾರದ ಮಹತ್ವದ ಕೊಡುಗೆ ಎಂದು ವಿವರಿಸಿದರು.

    ಜಲ ಮಿಷನ್ ಯೋಜನೆಯು ಪ್ರಧಾನಿಯವರ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು ಇದರಡಿ ಲಕ್ಷಾಂತರ ಹಳ್ಳಿಗಳಿಗೆ ಪ್ರಯೋಜನ ಲಭಿಸಲಿದೆ. ಉಜಾಲಾ ಯೋಜನೆಯಡಿ ಲಕ್ಷಾಂತರ ಹಳ್ಳಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ ಎಂದು ತಿಳಿಸಿದರು. ಮೂಲಸೌಕರ್ಯ ಹೆಚ್ಚಳಕ್ಕೆ ಭಾರತವು ಕಳೆದ ಏಳು ವರ್ಷಗಳಲ್ಲಿ ಗರಿಷ್ಠ ಆದ್ಯತೆ ನೀಡಿದೆ. ಅತ್ಯುತ್ತಮ ರಸ್ತೆಗಳ ನಿರ್ಮಾಣಕ್ಕೆ ಹೆಚ್ಚಿನ ಆದ್ಯತೆ ಕೊಡಲಾಗಿದೆ. ಮೈಸೂರು- ಬೆಂಗಳೂರು, ಬೆಂಗಳೂರು- ಚೆನ್ನೈ ಕಾರಿಡಾರ್ ರಸ್ತೆ ಇದಕ್ಕೆ ಸ್ಪಷ್ಟ ಉದಾಹರಣೆ ಎಂದು ಅವರು ತಿಳಿಸಿದರು. ಜೂನ್ 21ರಂದು ವಿಶ್ವ ಯೋಗ ದಿನಾಚರಣೆ ದಿನದಂದು ದೇಶದಲ್ಲಿ ಸುಮಾರು 86 ಲಕ್ಷ ಜನರಿಗೆ ಕೋವಿಡ್ ಲಸಿಕೆ ನೀಡಲಾಗಿದೆ. ಇದೊಂದು ದೊಡ್ಡ ಸಾಧನೆ. ಆಕ್ಸಿಜನ್ ಪೂರೈಕೆಯನ್ನು 900 ಮೆಟ್ರಿಕ್ ಟನ್‍ನಿಂದ 9 ಸಾವಿರ ಮೆಟ್ರಿಕ್ ಟನ್‍ಗೆ ಹೆಚ್ಚಿಸಿರುವುದು, ತಾಲ್ಲೂಕು ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸಿ ಸುಸಜ್ಜಿತಗೊಳಿಸಿದ್ದು ಕೂಡ ಕೋವಿಡ್ ಸಂದರ್ಭದ ಸಮರ್ಪಕ ನಿರ್ವಹಣೆಗೆ ಉದಾಹರಣೆ ಎಂದು ತಿಳಿಸಿದರು.

    ಕಾಂಗ್ರೆಸ್ ಪಕ್ಷವು ಗರೀಬಿ ಹಠಾವೋ ಘೋಷಣೆಯು ಕೇವಲ ಪ್ರಚಾರಕ್ಕೆ ಮಾತ್ರ ಸೀಮಿತವಾಗಿತ್ತು. ಕಾಂಗ್ರೆಸ್ ಪಕ್ಷ ಆಡಳಿತದಲ್ಲಿದ್ದ ಕಾಲದಲ್ಲಿ ಭ್ರಷ್ಟಾಚಾರ ಪ್ರಮಾಣ ಮಿತಿ ಮೀರಿತ್ತು. ಆದರೆ, ಶ್ರೀ ನರೇಂದ್ರ ಮೋದಿ ಅವರ ಆಡಳಿತದಲ್ಲಿ ಭ್ರಷ್ಟಾಚಾರರಹಿತವಾಗಿ ಯೋಜನೆಯ ಪ್ರಯೋಜನವು ಫಲಾನುಭವಿಗಳಿಗೆ ಲಭಿಸುತ್ತಿದೆ ಎಂದು ತಿಳಿಸಿದರು.

    ಶ್ರೀ ಜಗನ್ನಾಥ ರಾವ್ ಜೋಶಿ ಅವರ ಒಡನಾಟವು ನನ್ನ ಬೆಳವಣಿಗೆಗೆ ಅನನ್ಯ ಕೊಡುಗೆ ನೀಡಿದೆ ಎಂದು ಶ್ರೀ ಪ್ರಲ್ಹಾದ ಜೋಶಿ ಅವರು ವಿವರಿಸಿದರು. ಬೆಂಗಳೂರಿನಿಂದ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಸಿದ್ದರಾಜು, ರಾಜ್ಯ ಕಾರ್ಯದರ್ಶಿಗಳಾದ ಶ್ರೀ ಜಗದೀಶ ಹಿರೇಮನೆ ಅವರು ಪ್ರಶಿಕ್ಷಣ ವರ್ಗದಲ್ಲಿ ಭಾಗವಹಿಸಿದ್ದರು. ರಾಜ್ಯ ಪದಾಧಿಕಾರಿಗಳು, ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯರು, ಎಲ್ಲಾ ಮೋರ್ಚಾಗಳ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ವಿಭಾಗ ಪ್ರಭಾರಿ ಹಾಗೂ ಸಹ ಪ್ರಭಾರಿಗಳು, ವಿಭಾಗ ಸಂಘಟನಾ ಕಾರ್ಯದರ್ಶಿ ಹಾಗೂ ಸಹ ಸಂಘಟನಾ ಕಾರ್ಯದರ್ಶಿಗಳು, ರಾಜ್ಯ ಪ್ರಶಿಕ್ಷಣ ತಂಡ, ಜಿಲ್ಲಾ ಪ್ರಭಾರಿಗಳು, ಜಿಲ್ಲಾಧ್ಯಕ್ಷರು, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳು, ಸಂಸದರು, ಶಾಸಕರು, ಎಲ್ಲಾ ಪ್ರಕೋಷ್ಠಗಳ ರಾಜ್ಯ ಸಂಚಾಲಕರು ಮತ್ತು ಸಹ ಸಂಚಾಲಕರು ಈ ಪ್ರಶಿಕ್ಷಣ ವರ್ಗದಲ್ಲಿ ವೆಬೆಕ್ಸ್ ಮೂಲಕ ಭಾಗವಹಿಸಿದ್ದರು.

  • ಕೆರೆ ಹೂಳೆತ್ತುವ ಬಗ್ಗೆ ದೇಶಪಾಂಡೆ, ನಿಂಬಣ್ಣನವರ ಮಧ್ಯೆ ವಾಗ್ವಾದ – ಜೋಶಿಯಿಂದ ಸಮಾಧಾನ

    ಕೆರೆ ಹೂಳೆತ್ತುವ ಬಗ್ಗೆ ದೇಶಪಾಂಡೆ, ನಿಂಬಣ್ಣನವರ ಮಧ್ಯೆ ವಾಗ್ವಾದ – ಜೋಶಿಯಿಂದ ಸಮಾಧಾನ

    ಧಾರವಾಡ: ಜಿಲ್ಲೆಯ ನೀರಸಾಗರ ಕೆರೆ ಹೂಳೆತ್ತುವ ವಿಚಾರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ. ದೇಶಪಾಂಡೆ ಮತ್ತು ಬಿಜೆಪಿ ಶಾಸಕ ಸಿ.ಎಸ್ ನಿಂಬಣ್ಣವರ ಕಲಘಟಗಿ ಮಧ್ಯೆ ವಾಗ್ವಾದ ನಡೆದಿದೆ.

    ಈಗ ಬಿತ್ತನೆ ಆರಂಭವಾಗಿದೆ, ಈಗ ಯಾಕೆ ಹೂಳು ತೆಗೆಯುತ್ತಿರಾ, ಎರಡು ತಿಂಗಳ ಮುಂಚೆಯೇ ಯಾಕೆ ಇದೇ ಕೆಸವನ್ನು ಮಾಡಲಿಲ್ಲ. ಮಳೆ ಆರಂಭವಾಗುವ ಹೊತ್ತಿಗೆ ಹೂಳೆತ್ತೋಕೆ ಯಾಕೆ ಬಂದಿದ್ದೀರಿ ಎಂದು ಶಾಸಕ ನಿಂಬಣ್ಣವರ ಆರ್.ವಿ ದೇಶಪಾಂಡೆ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

    ಇದಕ್ಕೆ ತೀರುಗೇಟು ನೀಡಿದ ದೇಶಪಾಂಡೆ ಅವರು, ಎಂಎಲ್‍ಎ ಅವರೇ ನೀವು ಹೇಳೋದು ಸರಿ ಇದೇ ಆದರೆ ಇದು ಸಿಎಸ್‍ಆರ್ ಕಾಮಗಾರಿ ಸರ್ಕಾರದಿಂದ ಮಾಡುತ್ತಿಲ್ಲ. ನೀವು ಕೇಳದೇ ನಾವು ಹೂಳು ತೆಗೆಯೋಕೆ ಬಂದಿದ್ದೇವೆ ನೀವು ಅದನ್ನು ತಿಳಿದುಕೊಂಡು, ಹೂಳು ತೆಗೆಯೋಕೆ ಬಂದಿದ್ದಕ್ಕೆ ನಮಗೆ ಅಭಿನಂದನೆ ಹೇಳಬೇಕು ಎಂದು ತೀರುಗೇಟು ನೀಡಿದರು. ವಾಗ್ವಾದ ತಾರಕಕ್ಕೆ ಏರಿದ ಪರಿಣಾಮ ಸ್ಥಳದಲ್ಲೇ ಇದ್ದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಇಬ್ಬರನ್ನೂ ಸಮಾಧಾನಪಡಿಸಿ ಕಾಮಗಾರಿ ಪೂಜೆಗೆ ಕರೆದುಕೊಂಡು ಹೋದರು.

    ಇದೇ ವೇಳೆ ಮಾತನಾಡಿದ ದೇಶಪಾಂಡೆ ಅವರು, ಈಗಾಗಲೇ ಮೋಡ ಬಿತ್ತನೆಯ ವಿಚಾರವಾಗಿ ಸಚಿವ ಸಂಪುಟದಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಈ ವಿಚಾರದ ಬಗ್ಗೆ ಗ್ರಾಮೀಣಾಭಿವೃದ್ಧಿ ಸಚಿವರು ನನ್ನ ಜೊತೆ ಮಾತನಾಡಿದ್ದಾರೆ. ಮೋಡ ಬಿತ್ತನೆಗೆ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಬೆಂಗಳೂರು ಹಾಗೂ ಹುಬ್ಬಳ್ಳಿಯಲ್ಲಿ ಒಂದು ಕೇಂದ್ರ ಮಾಡಿದ್ದೇವೆ. ಇಷ್ಟೊತ್ತಿಗೆ ರಾಜ್ಯದಲ್ಲಿ ಮಳೆಯಾಬೇಕಿತ್ತು, ಆದರೆ ಗುಜರಾತ್‍ನಲ್ಲಿ ಉಂಟಾದ ಚಂಡಮಾರುತದಿಂದ ಸಮಸ್ಯೆ ಆಗಿದೆ. ಆದಷ್ಟು ಬೇಗ ಮೋಡ ಬಿತ್ತನೆ ಮಾಡುತ್ತೇವೆ ಎಂದು ಭರವಸೆ ನೀಡಿದರು.

    [wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.in/wp-content/plugins/wonderplugin-video-embed/engine/playvideo-64-64-0.png”]