ಕೊಪ್ಪಳ: ರಾಮಾಯಣ ಕಾಲದ ಐತಿಹಾಸಿಕ ಹಿನ್ನೆಲೆ ಹೊಂದಿರುವ ಗಂಗಾವತಿ (Gangavtahi) ತಾಲೂಕಿನ ಚಿಕ್ಕರಾಂಪೂರ ಗ್ರಾಮದ ಅಂಜನಾದ್ರಿ ಬೆಟ್ಟಕ್ಕೆ (Anjanadri Hill) ರೋಪ್ ವೇ ನಿರ್ಮಿಸಲು ರಾಜ್ಯ ಸರ್ಕಾರ ಅನುಮೋದನೆ ನೀಡಿದ್ದು, ಪ್ರವಾಸೋದ್ಯಮ ಇಲಾಖೆಯ (Tourism Department) ಅಧಿಕಾರಿಗಳು ಭೇಟಿ ನೀಡಿ, ಸ್ಥಳ ಪರಿಶೀಲನೆ ನಡೆಸಿದರು.ಇದನ್ನೂ ಓದಿ:ಜಮ್ಮು-ಕಾಶ್ಮೀರದ ಕಥುವಾದಲ್ಲಿ ಎನ್‌ಕೌಂಟರ್ – ನಾಲ್ವರು ಪೊಲೀಸರು ಹುತಾತ್ಮ, ಇಬ್ಬರು ಉಗ್ರರ ಹತ್ಯೆ
ರೋಪ್ ವೇ ನಿರ್ಮಾಣಕ್ಕೆ ಅನುಮೋದನೆ ದೊರೆತಿರುವ ಕಾರಣ ಕೇಂದ್ರದ RITES ಸಂಸ್ಥೆಯ ಪ್ರತಿನಿಧಿಗಳು ಹಾಗೂ ರಾಜ್ಯ ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳು ಶಾಸಕ ಗಾಲಿ ಜನಾರ್ದನ ರೆಡ್ಡಿಯವರ (G.Janardhana Reddy) ನೇತೃತ್ವದಲ್ಲಿ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಬೆಟ್ಟದ ಹಿಂಬದಿಯಿಂದ ರೋಪ್ ವೇ ನಿರ್ಮಾಣಕ್ಕೆ ಸ್ಥಳ ಗುರುತು ಮಾಡಲಾಗಿದ್ದು, 450 ಮೀ. ಉದ್ದದ ರೋಪ್ ವೇ ನಿರ್ಮಾಣಕ್ಕೆ ನಿರ್ಧರಿಸಿದೆ. ಅದರಲ್ಲಿ ಒಂದು ಗಂಟೆಯಲ್ಲಿ 800 ಭಕ್ತಾಧಿಗಳನ್ನು ಅಂಜನಾದ್ರಿ ಬೆಟ್ಟದ ಮೇಲೆ ತಲುಪಿಸಬಹುದಾಗಿದೆ.
ಶಾಸಕ ಗಾಲಿ ಜನಾದ9ನ ರೆಡ್ಡಿ ಮಾತನಾಡಿ, ಅಂಜನಾದ್ರಿ ಬೆಟ್ಟಕ್ಕೆ ರೋಪ್ ವೇ ನಿರ್ಮಾಣ ವಿಚಾರಕ್ಕೆ ಸಂಬಂಧಪಟ್ಟಂತೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರ ಜೊತೆ ಮಾತುಕತೆ ನಡೆಸಿ, ರೋಪ್ ವೇ ನಿರ್ಮಾಣ ಕ್ಕೆ ಮನವಿ ಮಾಡಿಕೊಂಡಿದ್ದೆ. ಮನವಿಗೆ ಸ್ಪಂದಿಸಿ, ರೋಪ್ ವೇ ನಿರ್ಮಾಣ ಒಪ್ಪಿಗೆ ಸಿಕ್ಕಿದೆ. ರಾಜ್ಯ ಸರ್ಕಾರ ಕೂಡ ಅನುಮೋದನೆಯನ್ನು ನೀಡಿದೆ. ಸದ್ಯ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದ್ದಾರೆ. ಪರಿಶೀಲನಾ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದ ಬಳಿಕ ಕಾಮಗಾರಿ ಆರಂಭವಾದ 1 ವರ್ಷದ ಒಳಗಾಗಿಯೇ ಪೂಣ9ಗೊಳಿಸುವ ಸಾಧ್ಯತೆ ಇದೆ ಎಂದು ಹೇಳಿದರು.ಇದನ್ನೂ ಓದಿ:ಮಧುಗಿರಿ ಏಕಶಿಲಾ ಬೆಟ್ಟಕ್ಕೆ ರೋಪ್ ವೇ ನಿರ್ಮಾಣಕ್ಕೆ 50 ಕೋಟಿ ರೂ.ನಿಗದಿ: ಸಚಿವ ರಾಜಣ್ಣ
– ಕಳೆದ ಅಕ್ಟೋಬರ್ 28 ರಿಂದ ಈ ಫೆಬ್ರವರಿ 22 ರವರೆಗೆ ವರ್ಗಾವಣೆ – 3 ಖಾತೆಯಿಂದ ಒಟ್ಟು 54 ಬಾರಿ ವರ್ಗಾವಣೆ – ನಿರ್ಮಿತಿ ಕೇಂದ್ರ, ಸಮಾಜ ಕಲ್ಯಾಣ ಇಲಾಖೆಗೂ ದುಡ್ಡು
ಬಾಗಲಕೋಟೆ: ರಾಜ್ಯದಲ್ಲಿ ವಾಲ್ಮೀಕಿ ನಿಗಮದ ಹಗರಣ (Valmiki Scam) ಸರ್ಕಾರದ ಕೊರಳಿಗೆ ಕುಣಿಕೆಯಾಗುತ್ತಿದೆ. ಈಗಾಗಲೇ ಸಚಿವ ಬಿ. ನಾಗೇಂದ್ರ (Nagendra) ತಲೆದಂಡ ಕೂಡ ಆಗಿದ್ದು ಇಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಇದರ ಮಧ್ಯೆ ಅದೇ ಮಾದರಿಯಲ್ಲಿ ಮತ್ತೊಂದು ಇಲಾಖೆಗೆ ಸಂಬಂಧಿಸಿದ ಬ್ಯಾಂಕ್ ಖಾತೆಯಲ್ಲಿ ವಂಚನೆ ಆಗಿರುವುದು ಬೆಳಕಿಗೆ ಬಂದಿದೆ.
ಬಾಗಲಕೋಟೆ (Bagalkot) ಜಿಲ್ಲಾ ಪ್ರವಾಸೋದ್ಯಮ (Tourism Department) ಇಲಾಖೆಯಲ್ಲಿ 2,47,73,999 ರೂ. ವಂಚನೆಯಾಗಿದ್ದು, ಬಾಗಲಕೋಟೆ ಐಡಿಬಿಐ ಬ್ಯಾಂಕ್ ಖಾತೆಗಳ ಮೂಲಕ ಹಣ ವಿವಿಧ ಖಾತೆಗೆ ಅಕ್ರಮವಾಗಿ ವರ್ಗಾವಣೆಯಾಗಿದೆ. ಅಕ್ರಮ ಬೆಳಕಿಗೆ ಬರುತ್ತಿದಂತೆ ಜುಲೈ 11 ರಂದು ಪ್ರವಾಸೋದ್ಯಮ ಇಲಾಖೆ ಅಧಿಕಾರಿ ಗೋಪಾಲ ಹಿತ್ತಲಮನಿ ಬ್ಯಾಂಕ್ ಮ್ಯಾನೇಜರ್ ಹಾಗೂ ಸಿಬ್ಬಂದಿ ವಿರುದ್ಧ ಬಾಗಲಕೋಟೆ ಸಿಇಎನ್ ಠಾಣೆಯಲ್ಲಿ ದೂರು ನೀಡಿದ್ದು ಪೊಲೀಸರು ಅಕ್ರಮ ವ್ಯವಹಾರಗಳ ಬಗ್ಗೆ ತನಿಖೆ ಆರಂಭಿಸಿದ್ದಾರೆ.
ವಂಚನೆ ಹೇಗೆ?
ಜಿಲ್ಲಾ ಪ್ರವಾಸೋದ್ಯಮ ಇಲಾಖೆಗೆ ಸಂಬಂಧಿಸಿದಂತೆ ಒಟ್ಟು ಮೂರು ಖಾತೆಗಳನ್ನು ಬಾಗಲಕೋಟೆ ಐಡಿಬಿಐ ಬ್ಯಾಂಕ್‌ನಲ್ಲಿ (IDBI) ನಿರ್ವಹಣೆ ಮಾಡಲಾಗುತ್ತಿದ್ದು, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಅಧ್ಯಕ್ಷರ (ಹೆಡ್) ಹೆಸರಲ್ಲಿ ಐಡಿಬಿಐ ಬ್ಯಾಂಕ್ ನಲ್ಲಿ ಖಾತೆ ತೆರೆಯಲಾಗಿದೆ. ಮೂರು ಬ್ಯಾಂಕ್ ಖಾತೆಯಿಂದ ಕಳೆದ ಅಕ್ಟೋಬರ್ 28 ರಿಂದ ಈ ಫೆಬ್ರವರಿ 22 ರವರೆಗೆ ವಿವಿಧ ಖಾತೆಗಳಿಗೆ ಹಣ ವರ್ಗಾವಣೆಯಾಗಿದೆ. ಇದನ್ನೂ ಓದಿ: ಅನಂತ್ ಅಂಬಾನಿ ವಿವಾಹ ಮಹೋತ್ಸವದಲ್ಲಿ ಮೋದಿ ಭಾಗಿ – ನವ ಜೋಡಿಗೆ ಆಶೀರ್ವದಿಸಿದ ಪ್ರಧಾನಿ!
ಯಾವ ಖಾತೆಯಿಂದ ಎಷ್ಟು?
1071104000160063 ಖಾತೆ ಮೂಲಕ 1,35,96,500 ರೂ., 1071104000165228 ಮೂಲಕ 1,01,33,750 ರೂ., ಮೂರನೇ ಖಾತೆ 1071104000165501 ಯಿಂದ 10,43,749 ರೂ. ಹಣ ವರ್ಗಾವಣೆಯಾಗಿದೆ. ಒಂದು ಖಾತೆಯಿಂದ 28 ಬಾರಿ, ಮತ್ತೊಂದು ಖಾತೆಯಿಂದ 25 ಬಾರಿ, ಮೂರನೇ ಖಾತೆಯಿಂದ ಒಂದು ಬಾರಿ ಸೇರಿ ಒಟ್ಟು 54 ಬಾರಿ ಹಣ ವರ್ಗಾವಣೆಯಾಗಿದೆ.
ಪ್ರವಾಸೋದ್ಯಮ ಇಲಾಖೆ ಅನುಮತಿಯಿಲ್ಲದೆ, ಅಧಿಕಾರಿಗಳಿಗೆ ಗೊತ್ತಿಲ್ಲದಂತೆ ಇಲಾಖೆಗೆ ಸಂಬಂಧಿಸಿದ ಹಣವನ್ನು ಆರೋಪಿಗಳು ತಮಗೆ ಬೇಕಾದ ರೀತಿಯಲ್ಲಿ ವರ್ಗಾವಣೆ ಮಾಡಿದ್ದಾರೆ. ಇಲಾಖೆಯ ಹಣ ತೆಗೆದುಕೊಂಡು ಸರಕಾರಕ್ಕೆ ಮೋಸ ಮಾಡಿದ್ದಾರೆ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಇದನ್ನೂ ಓದಿ: ಇನ್ನು ಮುಂದೆ ಕ್ರೆಡಿಟ್ ಕಾರ್ಡ್‌ನಂತೆ ಯುಪಿಐ ಬಳಸಿ- ಇದು ಹೇಗೆ ಕೆಲಸ ಮಾಡುತ್ತೆ?
ಬಾಗಲಕೋಟೆ ಎಸ್‌ಪಿ ಅಮರನಾಥ ರೆಡ್ಡಿ
ಎಸ್‌ಪಿ ಹೇಳಿದ್ದೇನು?
ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಬಾಗಲಕೋಟೆ ಎಸ್‌ಪಿ ಅಮರನಾಥ ರೆಡ್ಡಿ, ಪ್ರವಾಸೋದ್ಯಮ ಇಲಾಖೆಯ ಖಾತೆಯಿಂದ ನಿರ್ಮಿತಿ ಕೇಂದ್ರ, ಸಮಾಜ ಕಲ್ಯಾಣ ಇಲಾಖೆಗೂ ದುಡ್ಡು ಹೋಗಿದೆ. ಹಣ ವರ್ಗಾವಣೆ ಬಗ್ಗೆ ಐಡಿಬಿಐ ಬ್ಯಾಂಕ್ ಬಳಿಯೂ ದಾಖಲೆ ಇಲ್ಲ. ಯಾರು ದುರುಪಯೋಗ ಪಡಿಸಿಕೊಂಡಿದ್ದಾರೆ ಎನ್ನುವುದು ತನಿಖೆ ನಂತರ ಗೊತ್ತಾಗಲಿದೆ. ಒಂದು ತಂಡ ರಚಿಸಿ ತನಿಖೆ ನಡೆಸಿದ್ದೇವೆ. ದಾಖಲೆ ಸಂಗ್ರಹಣೆ ಬಳಿಕ ಸತ್ಯಾಸತ್ಯತೆ ಗೊತ್ತಾಗಲಿದೆ.
ಬ್ಯಾಂಕ್‌ನವರಿಗೆ ನೋಟಿಸ್ ನೀಡಲಾಗಿದ್ದು, ಎಷ್ಟು ಖಾತೆಗಳಿಗೆ ಹೋಗಿದೆ ಎನ್ನುವುದನ್ನು ಮಾಹಿತಿ ಕೇಳಿದ್ದೇವೆ. ಬೇರೆ ಬೇರೆ ಇಲಾಖೆಗಳ ಖಾತೆಗಳ ಬಗ್ಗೆಯೂ ಪರಿಶೀಲನೆ ಮಾಡಲಾಗುವುದು. ಯಾರಾದರೂ ದೂರು ನೀಡಿದರೆ ಖಂಡಿತ ತನಿಖೆ ನಡೆಸುತ್ತೇವೆ. ಪ್ರವಾಸೋದ್ಯಮ ಇಲಾಖೆಯಲ್ಲಿ 2021ರಿಂದ ಇಲ್ಲಿಯವರೆಗೂ ಬಂದ ಡಿಡಿಗಳ ಬಳಿಯೂ ಮಾಹಿತಿ ಪಡೆಯಲಿದ್ದೇವೆ. ಬ್ಯಾಂಕ್‌ನಿಂದ ವಿವರಣೆ ಬಂದ ಬಂದ ಮೇಲೆ ವೈಯಕ್ತಿಕವಾಗಿ ನೋಟಿಸ್ ನೀಡಲಿದ್ದೇವೆ. ಬೇರೆ ಖಾತೆಗಳಿಗೆ ಹೋಗಿದೆಯೋ, ಬೇರೆ ಇಲಾಖೆ ಖಾತೆಗಳಿಗೆ ಹೋಗಿದೆಯೋ ಎಂಬುದನ್ನು ಪರಿಶೀಲನೆ ಮಾಡುತ್ತೇವೆ ಎಂದಿದ್ದಾರೆ.
ಹಾಸನ: ಪಾಕಿರ್ಂಗ್ ವಿಚಾರಕ್ಕೆ ಪ್ರವಾಸಕ್ಕೆ ಬಂದಿದ್ದ ಮಹಿಳೆಯೊಬ್ಬಳ ಮೇಲೆ ಹಲ್ಲೆ ನಡೆಸಿರುವ ಘಟನೆ ಬೇಲೂರಿನ (Belur) ಚೆನ್ನಕೇಶವ ದೇವಾಲಯದ (Chennakeshava Temple) ಆವರಣದಲ್ಲಿ ನಡೆದಿದೆ. ಪಾರ್ಕಿಂಗ್ (Parking) ಶುಲ್ಕ ವಸೂಲಿಗಾರ ಹಲ್ಲೆ ನಡೆಸಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ.
ಮಹಿಳೆ ಮೇಲೆ ಹಲ್ಲೆ ನಡೆಸಿರುವುದರಿಂದ ಆಕೆಯ ಮುಖದ ಮೇಲೆ ಗಾಯವಾಗಿದ್ದು ರಕ್ತ ಸಹ ಬಂದಿದೆ. ಅಲ್ಲದೇ ಈ ವೇಳೆ ಮಧ್ಯ ಪ್ರವೇಶಿಸಿದ ಆಕೆಯ ಮಗನ ಮೇಲೂ ಹಲ್ಲೆ ಮಾಡಲಾಗಿದೆ. ದಾವಣಗೆರೆ ಮೂಲದ ವೀಣಾ ಬಸವರಾಜು ಮೇಲೆ ಹಲ್ಲೆ ನಡೆಸಿರುವ ಫೋಟೋ ವೈರಲ್ ಕೂಡ ಆಗಿದೆ. ಇದನ್ನೂ ಓದಿ: ಅಜ್ಜ ಮೊಬೈಲ್ ಕೊಡಿಸಿಲ್ಲವೆಂದು ಯುವಕ ಆತ್ಮಹತ್ಯೆ
ವೀಣಾ ಕುಟುಂಬದ ಸದಸ್ಯರೊಂದಿಗೆ ಪ್ರವಾಸಕ್ಕೆ ಬಂದಿದ್ದರು. ಈ ವೇಳೆ ಅವರ ಪುತ್ರ ಕಾರನ್ನು ಪಾರ್ಕ್ ಮಾಡುತ್ತಿದ್ದ. ಈ ವೇಳೆ ಶುಲ್ಕ ವಸೂಲಿ ಮಾಡುವ ವ್ಯಕ್ತಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಬಳಿಕ ವೀಣಾ ಹಾಗೂ ಅವರ ಮಗನ ಮೇಲೆ ಹಲ್ಲೆ ಮಾಡಿದ್ದಾನೆ. ಈ ವೇಳೆ ನೆಲಕ್ಕೆ ಬಿದ್ದ ಮಹಿಳೆಗೆ ಮುಖಕ್ಕೆ ಗಾಯವಾಗಿದೆ. ಆಕೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದು, ಹೊಲಿಗೆ ಹಾಕಿಸಿಕೊಂಡಿದ್ದಾರೆ.
ಈ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಕಿಕೊಂಡು, ದೇವಾಲಯದ ಬಳಿ ಪ್ರವಾಸಿಗರಿಗೆ ರಕ್ಷಣೆ ಇಲ್ಲ ಎಂದು ಬರೆದುಕೊಂಡಿದ್ದಾರೆ. ಪ್ರವಾಸಿಗರಿಗೆ ರಕ್ಷಣೆ ಕೊಡಬೇಕು ಎಂದು ಆಗ್ರಹಿಸಿದ್ದಾರೆ.
ಪ್ರವಾಸೋದ್ಯಮ ಇಲಾಖೆ (Tourism Department) ಖಾಸಗಿ ವ್ಯಕ್ತಿಗೆ ಪಾರ್ಕಿಂಗ್ ವ್ಯಸ್ಥೆಗೆ ಜಾಗವನ್ನು ಗುತ್ತಿಗೆ ನೀಡಿದೆ. ಪ್ರವಾಸಿಗರ ಮೇಲೆ ಹಲ್ಲೆಯಾದರೂ ಇಲಾಖೆ ಹಾಗೂ ದೇವಸ್ಥಾನದ ಆಡಳಿತ ಮಂಡಳಿ ಯಾವುದೇ ಕ್ರಮಕೈಗೊಂಡಿಲ್ಲ ಎಂದು ಆರೋಪಿಸಿದ್ದಾರೆ. ಅಲ್ಲದೇ ಈ ವಿಚಾರವಾಗಿ ದೂರು ನೀಡಿದರೆ ಬೇರೆ ಜಿಲ್ಲೆಯ ಪ್ರವಾಸಿಗರು ಇಲ್ಲಿಗೆ ಪುನಃ ಓಡಾಡಬೇಕು ಇದು ಕಷ್ಟವಾಗಿದೆ. ತಾಲೂಕು ಆಡಳಿತ ಹಾಗೂ ಪೊಲೀಸ್ ಇಲಾಖೆ ಈ ಬಗ್ಗೆ ಕ್ರಮಗೊಳ್ಳಬೇಕು ಎಂದು ಮಹಿಳೆ ಆಗ್ರಹಿಸಿದ್ದಾರೆ. ಇದನ್ನೂ ಓದಿ: ಸಾಲ ತೀರಿಸಲಿಕ್ಕಾಗದೇ ಆತ್ಮಹತ್ಯೆ- ಬಿಜೆಪಿ ಕಾರ್ಯಕರ್ತನ ಪ್ರಕರಣಕ್ಕೆ ಸ್ಫೋಟಕ ತಿರುವು
ಕೊಪ್ಪಳ: ಟ್ವೀಟ್ ಮಾಡಿದವರಿಗೆ ಉತ್ತರ ಕೊಡಲು ಆಗುವುದಿಲ್ಲ ಎಂದು ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಹೇಳಿದ್ದಾರೆ.
ಪಂಪ ಸರೋವರ ಗುಜರಾತ್‌ನಲ್ಲಿದೆ ಎಂಬ ಗುಜರಾತ್ ಪ್ರವಾಸೋದ್ಯಮ ಇಲಾಖೆಯ ಟ್ವೀಟ್‌ಗೆ ಪ್ರತಿಕ್ರಿಯಿಸಿದ ಅವರು, ಪ್ರವಾಸೋದ್ಯಮ ಇಲಾಖೆ ಟ್ವೀಟ್ ಮಾಡಿದರೆ ಅದಕ್ಕೆ ನಾವು ಟ್ವೀಟ್‌ನಲ್ಲೇ ಉತ್ತರ ಕೊಡುತ್ತೇವೆ ಎಂದು ತಿಳಿಸಿದರು.
ಅಂಜನಾದ್ರಿ ಯಲ್ಲಿ ಆದಷ್ಟು ಬೇಗ ಅಭಿವೃದ್ಧಿ ಕೆಲಸ ನಡೆಯಲಿದೆ. ಬೊಮ್ಮಾಯಿ ಅವರಿಗೆ ಬೆಟ್ಟ ಹತ್ತಲು ಕಷ್ಟವಾಗುವ ಕಾರಣ ಅಂಜನಾದ್ರಿಯನ್ನು ವೈಮಾನಿಕವಾಗಿ ವೀಕ್ಷಣೆ ಮಾಡಲಿದ್ದಾರೆ. ಪ್ರವಾಸೋದ್ಯಮ ಇಲಾಖೆಯಿಂದ ಅಭಿವೃದ್ಧಿಗಾಗಿ ಏಜೆನ್ಸಿಗಳನ್ನು ಕರೆಯಲಾಗುತ್ತಿದೆ. ನಾವು ಆದಷ್ಟು ಬೇಗ ನೀಲ ನಕ್ಷೆ ತಯಾರಿಸುತ್ತೇವೆ ಎಂದು ಆನಂದ್ ಸಿಂಗ್ ತಿಳಿಸಿದರು. ಇದನ್ನೂ ಓದಿ: ತಾಯಿಯಾದವಳು ಮಗು ಮತ್ತು ತನ್ನ ವೃತ್ತಿಜೀವನದ ಮಧ್ಯೆ ಆಯ್ಕೆಯನ್ನು ಕೇಳಬಾರದು: ಹೈಕೋರ್ಟ್
Situated by the swift Poorna river in the Dang district, is Pampa Sarovar. A lake that is enveloped with the tales of Shri Rama's meeting with Mata Shabari during his exile. A divine history awaits you at the Pampa Sarovar surrounded by a peaceful natural aesthetic. pic.twitter.com/S1j4lZhIAs
ಟ್ವೀಟ್‌ನಲ್ಲಿ ಏನಿತ್ತು?
ಶ್ರೀರಾಮನು ತನ್ನ ವನವಾಸದ ಸಮಯದಲ್ಲಿ ಮಾತೆ ಶಬರಿಯನ್ನು ಭೇಟಿಯಾದ ಕಥೆಗಳಿಂದ ಆವೃತವಾಗಿರುವ ಕೆರೆ. ಶಾಂತಿಯುತ ನೈಸರ್ಗಿಕ ಸೌಂದರ್ಯದಿಂದ ಕೂಡಿರುವ ಪಂಪಾ ಸರೋವರ ನಿಮಗಾಗಿ ಕಾಯುತ್ತಿದೆ ಎಂದು ಬರೆದು ಡ್ಯಾಂಗ್ ಜಿಲ್ಲೆಯಲ್ಲಿರುವ ಸರೋವರದ ಫೋಟೋವನ್ನು ಜುಲೈ 11 ರಂದು ಟ್ವೀಟ್ ಮಾಡಿತ್ತು.
Live Tv
[brid partner=56869869 player=32851 video=960834 autoplay=true]
ಕಾರವಾರ: ಜಿಲ್ಲಾ ಪ್ರವಾಸೋದ್ಯಮ ಇಲಾಖೆ ವತಿಯಿಂದ ನಡೆಯುತ್ತಿದ್ದ, ವಿಶ್ವ ಪ್ರವಾಸೋದ್ಯಮ ದಿನಾಚರಣೆ ಕಾರ್ಯಕ್ರಮಕ್ಕೆ ಆಹ್ವಾನ ನೀಡಿಲ್ಲ ಎಂದು ಬಹಿರಂಗ ವೇದಿಕೆಯಲ್ಲೇ ಕಾರ್ಮಿಕ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಂ ಹೆಬ್ಬಾರ್ ಎದುರು ಶಾಸಕಿ ರೂಪಾಲಿ ನಾಯ್ಕ್ ಅಸಮಧಾನ ವ್ಯಕ್ತಪಡಿಸಿದ್ದಾರೆ.
2018ರಿಂದ ಕಾರವಾರ ಕ್ಷೇತ್ರಕ್ಕೆ ಶಾಸಕಿಯಾಗಿ ಆಯ್ಕೆಯಾಗಿದ್ದೇನೆ. ಪ್ರವಾಸೋದ್ಯಮ ಇಲಾಖೆಯವರು ನನ್ನ ಕ್ಷೇತ್ರದಲ್ಲಿ ಏನೇ ಅಭಿವೃದ್ಧಿ ಕಾರ್ಯ ನಡೆಸಿದರೂ ಅದರ ಯಾವುದೇ ಮಾಹಿತಿ ನೀಡುವುದಿಲ್ಲ. ನಾನೊಬ್ಬಳು ಕ್ಷೇತ್ರದ ಶಾಸಕಿ ಎಂಬುದನ್ನು ಮರೆತು ಆಧಿಕಾರಿಗಳು ತಮ್ಮ ಇಚ್ಛೆಗೆ ತಾವು ನಡೆದುಕೊಳ್ಳುತ್ತಿದ್ದಾರೆ ಎಂದು ಗರಂ ಆದರು. ಇದನ್ನೂ ಓದಿ: ನಾನು 35 ಅಂಕದ ಕೆಟಗೆರಿಯವರು ಅದಕ್ಕೆ ಕೈಗಾರಿಕಾ ಸಚಿವನಾದೆ: ಮುರುಗೇಶ್ ನಿರಾಣಿ
ನನ್ನ ಕ್ಷೇತ್ರದಲ್ಲಿ ಕೋಟಿಗಟ್ಟಲೇ ಹಣ ಹಾಕಿ ನಿರ್ಮಿಸಿದ ಗಾರ್ಡನ್‍ಗಳು ಸೇರಿದಂತೆ ಇತರೆ ಕಾಮಗಾರಿಗಳ ಕಾರ್ಯ ನಿಂತುಹೋಗಿದೆ. ಇದಕ್ಕೆಲ್ಲಾ ಅಧಿಕಾರಿಗಳು ಕಾರಣ ಎಂದು ಕಿಡಿಕಾರಿದರು.
ಚಿಕ್ಕಬಳ್ಳಾಪುರ: ವಿಶ್ವವಿಖ್ಯಾತ ನಂದಿಗಿರಿಧಾಮಕ್ಕೆ ಪ್ರವಾಸಿಗರನ್ನು ಕರೆದೊಯ್ಯಲು ಪ್ರವಾಸೋದ್ಯಮ ಇಲಾಖೆಯಿಂದ ಎರಡು ನೂತನ ಟಿಟಿ ವಾಹನಗಳನ್ನ ನಿಯೋಜಿಸಲಾಗಿದೆ.
ನಂದಿಬೆಟ್ಟದ ಮೇಲ್ಭಾಗದಲ್ಲಿ ವಾಹನದಟ್ಟಣೆ ತಪ್ಪಿಸುವ ಸಲುವಾಗಿ ಜಿಲ್ಲಾಡಳಿತ ಮೇಲ್ಭಾಗದಲ್ಲಿ ನಿಲುಗಡೆ ಸಾಮಥ್ರ್ಯಕ್ಕನುಗುಣವಾಗಿ 300 ಕಾರು ಹಾಗೂ 500 ಬೈಕ್‍ಗಳ ಪಾಕಿರ್ಂಗ್‍ಗೆ ಅಷ್ಟೇ ಅವಕಾಶ ನೀಡಲಿದೆ. ಹೀಗಾಗಿ ಮೊದಲು ಕಾರು ಬೈಕ್‍ಗಳಲ್ಲಿ ಬಂದವರಿಗೆ ಮಾತ್ರ ಮೇಲ್ಭಾಗಕ್ಕೆ ಕಾರು ಹಾಗೂ ಬೈಕ್ ಗಳಲ್ಲಿ ಬರಲು ಅವಕಾಶವಿರುತ್ತೆ. ತದನಂತರ ಬರುವ ಪ್ರವಾಸಿಗರು ನಂದಿಬೆಟ್ಟದ ತಳಭಾಗದ ಚೆಕ್ ಪೋಸ್ಟ್ ನಲ್ಲಿ ತಮ್ಮ ವಾಹನಗಳನ್ನ ಪಾರ್ಕ್ ಮಾಡಬೇಕಿದೆ. ಇದನ್ನೂ ಓದಿ: ದಿವ್ಯಾ ಸುರೇಶ್‍ಗೆ ಗೊಂದಲ – ಕಾರಣವೇನು?
ಈ ನೂತನ ಎರಡು ಟಿಟಿ ವಾಹನಗಳ ಮೂಲಕ ಪ್ರವಾಸಿಗರು ನಂದಿಬೆಟ್ಟಕ್ಕೆ ಬರಬಹುದಾಗಿದೆ. ನಂದಿಬೆಟ್ಟದ ತಪ್ಪಲಿನಪೊಲೀಸ್ ಚೆಕ್ಪೋಸ್ಟ್ ನಿಂದ ನಂದಿಬೆಟ್ಟದ ಮೇಲ್ಭಾಗದ ಮಯೂರ ಹೋಟೆಲ್ ಸರ್ಕಲ್‍ವರೆಗೂ ಪ್ರಯಾಣ ಮಾಡಬಹುದಾಗಿದೆ. ಪ್ರತಿ ಪ್ರಯಾಣಿಕರಿಗೆ 25 ರೂಪಾಯಿ ದರ ನಿಗದಿಪಡಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವಾಹನ ದಟ್ಟಣೆಯನ್ನು ಕಡಿಮೆ ಮಾಡುವ ಉದ್ದೇಶದಿಂದ ಈ ಯೋಜನೆಯನ್ನು ಪ್ರವಾಸೋದ್ಯಮ ಇಲಾಖೆ ಜಾರಿಗೆ ತಂದಿದೆ.
ಬೆಂಗಳೂರು: ವಿಶ್ವವಿಖ್ಯಾತ ನಂದಿಬೆಟ್ಟ ಗಿರಿಧಾಮಕ್ಕೆ ರೋಪ್ ವೇ ನಿರ್ಮಾಣ ಮಾಡಲು ಇದೇ ಜುಲೈ 23ಕ್ಕೆ ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೇಶ್ವರ್ ರವರು ಸ್ಥಳ ಪರಿಶೀಲನೆ ಮಾಡಲಿದ್ದಾರೆ.
ಪ್ರವಾಸೋದ್ಯಮ, ಪರಿಸರ ಹಾಗೂ ಜೀವಿಶಾಸ್ತ್ರ ಸಚಿವರಾದ ಸಿ.ಪಿ.ಯೋಗೇಶ್ವರ್ ಅವರ ನೇತೃತ್ವದಲ್ಲಿ ಬೆಂಗಳೂರಿನ ಕುಮಾರಕೃಪ ಅತಿಥಿ ಗೃಹದಲ್ಲಿ ಪ್ರವಾಸೋದ್ಯಮ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಸಭೆಯಲ್ಲಿ ಮಾತನಾಡಿದ ಯೋಗೇಶ್ವರ್ ಅವರು, ಹಲವು ದಶಕಗಳಿಂದ ನೆನೆಗುದಿಗೆ ಬಿದ್ದಿರುವ ನಂದಿ ಗಿರಿಧಾಮ ರೋಪ್ ವೇ ಯೋಜನೆಗೆ ತ್ವರಿತವಾಗಿ ಚಾಲನೆ ನೀಡಬೇಕು. ಜುಲೈ 23ರಂದು ಸ್ಥಳ ಪರಿಶೀಲನೆ ಮಾಡಿ ಅತೀ ಶೀಘ್ರದಲ್ಲಿ ಟೆಂಡರ್ ಕರೆದು ಕಾಮಗಾರಿಗೆ ಚಾಲನೆ ನೀಡಬೇಕು ಎಂದು ಸಚಿವರು ಅಧಿಕಾರಿಗಳಿಗೆ ಹೇಳಿದರು. ಇದನ್ನೂ ಓದಿ: ಪ್ರವಾಸಿಗರೇ ಶನಿವಾರ, ಭಾನುವಾರ ನಂದಿಬೆಟ್ಟಕ್ಕೆ ಬರಬೇಡಿ
AARCON INFRA ಸಂಸ್ಥೆಯಿಂದ ಪ್ರಾತ್ಯಕ್ಷಿಕೆ ಪ್ರದರ್ಶನ:
ರೋಪ್ ವೇ ನಿರ್ಮಾಣದಲ್ಲಿ ಈ ಸಂಸ್ಥೆಗೆ 51 ವರ್ಷಗಳ ಅನುಭವವಿದ್ದು, ದೇಶ ವಿದೇಶ ಹಾಗೂ ನಮ್ಮ ರಾಷ್ಟ್ರದ ವಿವಿಧ ರಾಜ್ಯಗಳಲ್ಲಿ 64 ರೋಪ್ ವೇ ಗಳನ್ನು ನಿರ್ಮಾಣ ಮಾಡಿದ್ದಾರೆ. ರಾಜ್ಯದ ಪ್ರಪ್ರಥಮ ರೋಪ್ ವೇ ಯನ್ನು ಪ್ರವಾಸಿಗರಿಗೆ ಒದಗಿಸಲು ಅಗತ್ಯ ಎಲ್ಲಾ ಕ್ರಮಗಳನ್ನು ಕೈಗೊಳ್ಳುವಂತೆ ಸಚಿವರು ಸಭೆಯಲ್ಲಿ ಸೂಚಿಸಿದ್ದಾರೆ.
ಪ್ರವಾಸೋದ್ಯಮ ಇಲಾಖೆ ಕಾರ್ಯದರ್ಶಿ, ಪಂಕಜ್ ಕುಮಾರ್ ಪಾಂಡೆ, ನಿರ್ದೇಶಕಿ ಸಿಂಧೂ ರೂಪೇಶ್, ಅರಣ್ಯ ಮತ್ತು ವಸತಿ ವಿಹಾರಧಾಮ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕುಮಾರ್ ಪುಷ್ಕರ್, ಕೆ.ಎಸ್.ಟಿ.ಡಿ.ಸಿ. ವ್ಯವಸ್ಥಾಪಕ ನಿರ್ದೇಶಕ ವಿಜಯ್ ಶರ್ಮ ಹಾಗೂ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.
ಉಡುಪಿ: ವಿಶ್ವಮಾನ್ಯತೆ ಪಡೆದ ಉಡುಪಿ ಜಿಲ್ಲೆಯ ಪಡುಬಿದ್ರೆ ಬ್ಲ್ಯೂ ಫ್ಯಾಗ್ ಬೀಚ್ ಅಭಿವೃದ್ಧಿಗೆ ತೊಡಗಿಸಿಕೊಂಡಿದ್ದ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಸೋಮಶೇಖರ ಬನವಾಸಿ ಕೋವಿಡ್ ನಿಂದ ಮೃತಪಟ್ಟಿದ್ದಾರೆ.
ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಮೂಲತಃ ಉತ್ತರ ಕನ್ನಡ ಜಿಲ್ಲೆಯ ಬನವಾಸಿಯವರಾದ ಸೋಮಶೇಖರ ಅವರು ದಕ್ಷಿಣ ಕನ್ನಡ ಜಿಲ್ಲೆ, ಉಡುಪಿ ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿ ವಿಚಾರದಲ್ಲಿ ಬಹಳ ಶ್ರಮವಹಿಸಿ ಕೆಲಸ ಮಾಡಿದ್ದರು. ಮೃತರು ಪತ್ನಿ, ಇಬ್ಬರು ಪುತ್ರಿಯರು ಹಾಗೂ ಓರ್ವ ಪುತ್ರರನ್ನು ಅಗಲಿದ್ದಾರೆ. ಇದನ್ನೂ ಓದಿ: ಡಿ ಬಾಸ್ ಮನವಿಗೆ ಭರ್ಜರಿ ಪ್ರತಿಕ್ರಿಯೆ-2 ದಿನದಲ್ಲಿ 25 ಲಕ್ಷ ಸಂಗ್ರಹ
ನ. 24 ರಂದು ಉಡುಪಿ ಸಹಾಯಕ ನಿರ್ದೇಶಕರಾಗಿ ಅಧಿಕಾರ ಸ್ವೀಕರಿಸಿದ್ದ ಇವರು, ಪಡುಬಿದ್ರೆ ಬೀಚ್‍ಗೆ ಬ್ಲೂ ಫ್ಲ್ಯಾಗ್ ಅಂತಾರಾಷ್ಟ್ರೀಯ ಮಾನ್ಯತೆ ಸಿಗುವಲ್ಲಿ ಶ್ರಮಿಸಿದ್ದರು. ಮಾನ್ಯತೆ ಕುರಿತಾದ ನಿಯಮಗಳ ಪಾಲನೆ ಕುರಿತಂತೆ ಕೆಲಸ ನಿರ್ವಹಿಸಿದ್ದರು. ದಕ್ಷಿಣ ಕನ್ನಡ ಜಿಲ್ಲೆಯ ಪ್ರವಾಸೋದ್ಯಮ ಇಲಾಖೆಯ ಪ್ರಥಮ ದರ್ಜೆ ಸಹಾಯಕರಾಗಿ ಕರ್ತವ್ಯ ನಿರ್ವಹಿಸಿದ್ದ ಇವರು ಸೇವಾ ಮುಂಬಡ್ತಿ ಹೊಂದಿದ್ದರು. ಇವರು ಈ ಮೊದಲು ಪತ್ರಕರ್ತರಾಗಿಯೂ ಕಾರ್ಯನಿರ್ವಹಿಸಿದ್ದರು. ಸೋಮಶೇಖರ್ ಬಹಳ ನಿಷ್ಟೆಯಿಂದ ಕೆಲಸ ಮಾಡುತ್ತಿದ್ದರು ಎಂದು ಉಡುಪಿ ಜಿಲ್ಲಾಡಳಿತ ಸಂತಾಪ ಸೂಚಿಸಿದೆ. ಇದನ್ನೂ ಓದಿ: ಗೂಗಲ್‍ಗೆ 1,948 ಕೋಟಿ ರೂ. ದಂಡ ಹಾಕಿದ ಫ್ರಾನ್ಸ್
ಕಾರವಾರ: ಕರಾವಳಿಯಲ್ಲಿ ಕಳೆದ ಎರಡು ವರ್ಷದಿಂದ ಸುರಿದ ಬಾರಿ ಮಳೆ ಸಾಕಷ್ಟು ಅನಾಹುತವನ್ನೇನೋ ತಂದಿತ್ತು. ಈಗ ಇತಿಹಾಸದ ಗತ ವೈಭವ ಸಾರುವ 11ನೇ ಶತಮಾನದ ಕಲ್ಯಾಣಿ ಚಾಲುಕ್ಯರ ಕಾಲದ ಪುರಾತನ ಶಿವನ ಶಿಲಾ ದೇವಸ್ಥಾನಗಳು ಭೂಮಿಯಲ್ಲಿ ಹುದುಗಿ ಹೋಗಿದ್ದು, ಸ್ಥಳೀಯ ಜನರ ಆಕ್ರೋಶಕ್ಕೆ ಕಾರಣವಾಗಿದೆ.
ಧಾರ್ಮಿಕ ಶ್ರದ್ಧಾ ಕೇಂದ್ರವಾಗಿದ್ದ ಉತ್ತರ ಕನ್ನಡ ಜಿಲ್ಲೆಯ ಅಂಕೋಲದ ಮಾರುಗದ್ದೆ ಗ್ರಾಮದಲ್ಲಿ 11ನೇ ಶತಮಾನದ ಕಲ್ಯಾಣಿ ಚಾಲುಕ್ಯರು ತಮ್ಮ ಆಡಳಿತಾವಧಿಯಲ್ಲಿ ನಾಲ್ಕು ಶಿವಾಲಯವನ್ನು ನಿರ್ಮಿಸಿದ್ದು, ಇದರಲ್ಲಿ ಒಂದು ಬಾದಾಮಿಯಲ್ಲಿರುವ ದೇವಸ್ಥಾನದಂತೆ ಶಿಲಾಮಯವಾಗಿದೆ. ಇಲ್ಲಿನ ಕೆತ್ತನೆಗಳು ಮನೋಜ್ಞವಾಗಿದ್ದು, ಪ್ರತಿ ಕಲ್ಲುಗಳಲ್ಲಿ ಮೂಡಿರುವ ಶಿವ, ವೀರಭದ್ರ, ದುರ್ಗೆ ಸೇರಿದಂತೆ ಹಲವು ಶಿಲಾ ಕಲಾಕೃತಿಗಳಿವೆ.
ಕಂಬಗಳು ಶಿಲಾಮಯವಾಗಿದ್ದು, ಕಲ್ಯಾಣಿ ಚಾಲಿಕ್ಯರ ಶೈಲಿಯ ಈ ದೇವಸ್ಥಾನ ಎಂತಹವರನ್ನೂ ಮನಸೂರೆಗೊಳ್ಳುತ್ತದೆ. ಆದರೆ ಕಳೆದ ಎರಡು ವರ್ಷದಿಂದ ಸುರಿದ ಭಾರೀ ಮಳೆ ಶಿಲಾಮಯ ದೇವಸ್ಥಾನದ ಜೊತೆ ಪುರಾತನ ನಾಲ್ಕು ದೇವಸ್ಥಾನದವನ್ನು ಸಂಪೂರ್ಣ ನುಂಗಿದೆ. ಹಿಂದೆ ಸುರಿದ ಅಬ್ಬರದ ಮಳೆ ನೀರಿಗೆ ಇಡೀ ದೇವಸ್ಥಾನದ ಅರ್ಧ ಭಾಗ ಮಣ್ಣಿನಿಂದ ಮುಚ್ಚಿಹೋಗಿದೆ.
ಇತಿಹಾಸಕಾರ ಲಕ್ಷ್ಮೀಶ್ ಸೋಂದಾ ಅವರ ಪ್ರಕಾರ ಈ ದೇವಸ್ಥಾನ 11ನೇ ಶತಮಾನದ್ದಾಗಿದ್ದು, ಇವುಗಳ ಉತ್ಕಲನ ನಡೆಸಿದರೆ ಹಲವು ವಿಶೇಷ ಮಾಹಿತಿಗಳು ಲಭಿಸುತ್ತವೆ. ಈ ದೇವಸ್ಥಾನದ ಸುತ್ತ ಅಗ್ರಹಾರ ಹಾಗೂ ಹಿಂದೆ ಜನವಸತಿ ಇದ್ದ ಕುರುಹುಗಳಿದ್ದು, ಕಲ್ಯಾಣಿ ಚಾಲುಕ್ಯರ ಕಾಲದ ಗತವೈಭವವನ್ನು ಸಾರುತ್ತವೆ. ಆದರೆ ಇಷ್ಟೊಂದು ಮಹತ್ವ ಇರುವ ಈ ದೇವಸ್ಥಾನ ಈಗ ಹಾಳು ಬಿದ್ದಿದೆ.
ಪ್ರವಾಹ ಇಲ್ಲಿನ ಹಲವು ವಿಗ್ರಹಗಳನ್ನು ಕೊಚ್ಚಿಕೊಂಡು ತನ್ನೊಂದಿಗೆ ತೆಗೆದುಕೊಂಡು ಹೋದ್ರೆ, ಹಲವು ಮಣ್ಣಿನಲ್ಲಿ ಮುಚ್ಚಿಹೋಗಿವೆ. ಶಿವರಾತ್ರಿ ಸೇರಿದಂತೆ ವಿಶೇಷ ದಿನಗಳಲ್ಲಿ ಈ ದೇವಸ್ಥಾನದಲ್ಲಿ ಪೂಜೆ ನೆರವೇರಿಸಲಾಗುತಿತ್ತು. ಆದರೆ ಕಳೆದ ಎರಡು ವರ್ಷದಿಂದ ಸುರಿದ ಅಬ್ಬರದ ಮಳೆಯಿಂದಾಗಿ ಮಾರು ದೂರದಲ್ಲಿ ಇರುವ ಹೊಳೆಯ ನೀರು ಹಾಗೂ ಗುಡ್ಡದಿಂದ ಕೊಚ್ಚಿ ಬಂದ ಮಣ್ಣಿನ ಮಡ್ಡಿಯಿಂದಾಗಿ ಎಲ್ಲವೂ ಮುಚ್ಚಿಹೋಗಿದೆ. ಜೊತೆಗೆ ಹಲವು ವಿಗ್ರಹಗಳು ನೀರಿನಲ್ಲಿ ತೇಲಿಹೋಗಿದ್ದು ಶಿಲೆಗಳು ಹಲವು ಭಾಗದಲ್ಲಿ ಕುಸಿದು ಬಿದ್ದಿವೆ.
ಗ್ರಾಮಾದ ಜನ ಪುರಾತತ್ವ ಇಲಾಖೆ ಹಾಗೂ ಮುಜರಾಯಿ ಇಲಾಖೆಗೆ ಮನವಿ ಮಾಡಿ ಇವುಗಳನ್ನು ರಕ್ಷಿಸಿ, ಈ ಪ್ರದೇಶವನ್ನು ಪ್ರವಾಸಿಗರ ವೀಕ್ಷಣೆಗೆ ಅವಕಾಶ ಮಾಡಿಕೊಡಬೇಕು. ಸಾಮಾಜಿಕವಾಗಿ ಹಿಂದುಳಿದ ಗ್ರಾಮದ ಅಭಿವೃದ್ಧಿ ಮಾಡಬೇಕು ಎಂದು ಕಳೆದ ಒಂದು ವರ್ಷದಿಂದ ಪತ್ರ ಹೋರಾಟ ಮಾಡುತಿದ್ದಾರೆ.
ಇವುಗಳ ಬಗ್ಗೆ ತಲೆ ಕೆಡಿಸಿಕೊಳ್ಳದ ಪುರಾತತ್ವ ಇಲಾಖೆ ಹಾಗೂ ಮುಜರಾಯಿ ಇಲಾಖೆ ಜಾಣ ಕಿವುಡುತನ ತೋರಿಸಿದೆ. ಇದರಿಂದಾಗಿ ಪುರಾಣ ಪ್ರಸಿದ್ಧ ಗೋಕರ್ಣದಂತೆ ಪ್ರಸಿದ್ದಿಯಾಗಬೇಕಿದ್ದ ಈ ಶಿವನ ದೇವಾಲಯ ಭೂಮಿ ಪಾಲಾಗಿ ಹೋಗುತ್ತಿದೆ. ಸದ್ಯ ಸಂಪೂರ್ಣ ಜೀರ್ಣಾವಸ್ಥೆ ತಲುಪಿರುವ ಈ ದೇವಸ್ಥಾನ ಮೊದಲಿನಂತಾಗಬೇಕು ಎನ್ನುವುದು ಗ್ರಾಮದ ಜನರ ಆಶಯವಾಗಿದೆ.
ಇತಿಹಾಸ ಸ್ಮಾರಕವನ್ನು ರಕ್ಷಿಸುವ ಹೊಣೆ ಪುರಾತತ್ವ ಇಲಾಖೆಯದ್ದು. ಆದರೆ ಗ್ರಾಮಸ್ತರೇ ಈ ದೇವಸ್ಥಾನವನ್ನು ರಕ್ಷಿಸಿ ಜೀರ್ಣೋದ್ಧಾರ ಮಾಡುವಂತೆ ಮನವಿ ಮಾಡಿದರೂ, ಇಲಾಖೆಯ ಅಧಿಕಾರಿಗಳು ಮಾತ್ರ ಇತ್ತ ಸುಳಿದಿಲ್ಲ.
ಹೈದರಾಬಾದ್: ಮಾಸ್ಕ್ ಧರಿಸಿ ಎಂದು ಹೇಳಿದ ಕಾರಣಕ್ಕೆ ಮಹಿಳಾ ಸಿಬ್ಬಂದಿ ಮೇಲೆ ಸರ್ಕಾರಿ ಅಧಿಕಾರಿ ರಾಡ್‍ನಿಂದ ಹಲ್ಲೆ ನಡೆಸಿದ ಘಟನೆ ಆಂಧ್ರ ಪ್ರದೇಶದ ನೆಲ್ಲೂರು ಪಟ್ಟಣದಲ್ಲಿ ನಡೆದಿದೆ.
ಪ್ರವಾಸೋದ್ಯಮ ಇಲಾಖೆ ಹಿರಿಯ ಅಧಿಕಾರಿ, ಮಹಿಳಾ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾನೆ. ಸದ್ಯ ಪೊಲೀಸರು ಅಧಿಕಾರಿ ಮೇಲೆ ಪ್ರಕರಣ ದಾಖಲಿಸಿ, ಬಂಧಿಸಿ ನ್ಯಾಯಾಂಗ ಬಂಧನದಲ್ಲಿಟ್ಟಿದ್ದಾರೆ. ಆರೋಪಿಯನ್ನು ಸಿ ಭಾಸ್ಕರ್ ಎಂದು ಗುರುತಿಸಲಾಗಿದ್ದು, ಆಂಧ್ರ ಪ್ರದೇಶ ಪ್ರವಾಸೋದ್ಯಮ ಇಲಾಖೆ ಹೋಟೆಲ್‍ನಲ್ಲಿ ಉಪ ವ್ಯವಸ್ಥಾಪಕನಾಗಿ ಕಾರ್ಯನಿರ್ವಹಿಸುತ್ತಿದ್ದ. ಆರೋಪಿ ವಿರುದ್ಧ ಐಪಿಸಿ ಸೆಕ್ಷನ್ 354 (ಮಹಿಳೆಯ ಮಾನ ಹಾನಿ), 355, 324 (ಶಸ್ತ್ರಾಸ್ತ್ರ ಬಳಿಸಿ ಗಾಯಗೊಳಿಸುವುದು) ಅಡಿ ಪ್ರಕರಣ ದಾಖಲಿಸಲಾಗಿದೆ.
The police complaint in the matter states that the incident took place after the woman asked the man to wear a mask. It also mentions that the two had previous enmity. #AndhraPradeshhttps://t.co/TPz9vtrkrQ
ಮಂಗಳವಾರ ಘಟನೆ ನಡೆದಿದ್ದು, ಕೋವಿಡ್-19 ನಿಯಮಗಳ ಪಾಲನೆ ಮಾಡಲು ಅಧಿಕಾರಿಗೆ ಮಾಸ್ಕ್ ಧರಿಸುವಂತೆ ಮಹಿಳೆ ಹೇಳಿದ್ದರು. ಇಷ್ಟಕ್ಕೇ ಆಕ್ರೋಶಗೊಂಡ ಅಧಿಕಾರಿ ನೇರ ಹೋಟೆಲ್ ಒಳಗೆ ತೆರಳಿ ಮಹಿಳೆಯ ಮೇಲೆ ನಡೆಸಿ ನಿಂಧಿಸಿದ್ದಾನೆ. ಅಲ್ಲದೇ ಸ್ಥಳದಲ್ಲೇ ಇದ್ದ ರಾಡ್‍ನಿಂದ ಮಾರಣಾಂತಿಕ ದಾಳಿಯನ್ನು ನಡೆಸಿದ್ದಾನೆ. ಘಟನೆಯ ಪೂರ್ಣ ದೃಶ್ಯಗಳು ಸ್ಥಳದಲ್ಲಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿದೆ. ಸಾರ್ವಜನಿಕರು ಅಧಿಕಾರಿಯ ವರ್ತನೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಘಟನೆಯಲ್ಲಿ ಗಾಯಗೊಂಡಿರುವ 43 ವರ್ಷದ ಮಹಿಳೆ ಕೂರ ಪ್ರವಾಸೋದ್ಯಮ ಇಲಾಖೆಯ ಹೋಟೆಲ್‍ನಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಆರೋಪಿ ಭಾಸ್ಕರ್ ಮಾಸ್ಕ್ ಧರಿಸದೆ ಸಿಬ್ಬಂದಿಯೊಂದಿಗೆ ಮಾತನಾಡುತ್ತಿದ್ದ ವೇಳೆ ಮಹಿಳೆ ಮಾಸ್ಕ್ ಧರಿಸುವಂತೆ ಸಲಹೆ ನೀಡಿದ್ದರು ಎಂಬ ಮಾಹಿತಿ ಲಭಿಸಿದೆ.
ಘಟನೆ ಕುರಿತು ಆಂಧ್ರ ಪ್ರದೇಶ ಡಿಸಿಪಿ ಗೌತಮ್ ಸ್ವಾಂಗ್ ಅವರು ದಿಶಾ ಪೊಲೀಸ್ ಠಾಣಾ ಪೊಲೀಸರಿಗೆ ನಿರ್ದೇಶನ ನೀಡಿದ್ದು, ಪ್ರರಕಣ ತನಿಖೆ ನಡೆಸಿ ಒಂದು ವಾರದಲ್ಲಿ ಚಾರ್ಜ್ ಶೀಟ್ ಸಲ್ಲಿಸಲು ಸೂಚನೆ ನೀಡಿದ್ದಾರೆ. ಮಹಿಳೆಯ ಮೇಲಿನ ದೌರ್ಜನ್ಯವನ್ನು ಸಹಿಸಲು ಸಾಧ್ಯವಿಲ್ಲ. ನೆಲ್ಲೂರು ಘಟನೆಯನ್ನು ಖಂಡಿಸುತ್ತೇವೆ. ಮಹಿಳಾ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಕಾರಣಕ್ಕೆ ಆರೋಪಿ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.