Tag: ಪ್ರವೀಣ್

  • ಮನೆಗೆಲಸ ಮಾಡಿ ಪ್ರವೀಣ್‌ನನ್ನ ಎಂಜಿನಿಯರಿಂಗ್ ಓದಿಸ್ತಿದ್ದ ತಾಯಿ

    ಮನೆಗೆಲಸ ಮಾಡಿ ಪ್ರವೀಣ್‌ನನ್ನ ಎಂಜಿನಿಯರಿಂಗ್ ಓದಿಸ್ತಿದ್ದ ತಾಯಿ

    – ಇನ್ನೇನು ಕಷ್ಟಗಳೆಲ್ಲಾ ಕಳೆಯಿತು ಅನ್ನುವಾಗಲೇ ಜವರಾಯ ಹೊತ್ತೊಯ್ದ
    – ಮಗನ ಸಾವಿನ ಸುದ್ದಿ ಕೇಳಿ ಗೋಳಾಡಿದ ತಾಯಿ

    ಹಾಸನ\ಬಳ್ಳಾರಿ: ಹಾಸನದ (Hassan) ಮೊಸಳೆಹೊಸಳ್ಳಿ ಗ್ರಾಮದಲ್ಲಿ ಗಣೇಶ ಮೆರವಣಿಗೆ (Ganesh Procession) ವೇಳೆ ಟ್ರಕ್ ಹರಿದು ಬಳ್ಳಾರಿಯ ಪ್ರವೀಣ್ ಮೃತಪಟ್ಟಿದ್ದು, ಇದ್ದ ಒಬ್ಬ ಮಗನನ್ನು ಕಳೆದುಕೊಂಡ ತಾಯಿಯ ಆಕ್ರಂದನ ಮುಗಿಲು ಮುಟ್ಟಿದೆ.

    ಬಳ್ಳಾರಿಯ (Ballary) ನಾಗಲಕೆರೆ ಏರಿಯಾದ ಪ್ರವೀಣ್ ಮೃತ ದುರ್ದೈವಿ. ಇಂಜಿನಿಯರಿಂಗ್ ವಿದ್ಯಾಭ್ಯಾಸಕ್ಕಾಗಿ ಹಾಸನಕ್ಕೆ ಬಂದಿದ್ದ ಪ್ರವೀಣ್, ಶುಕ್ರವಾರ ಗಣೇಶ ವಿಸರ್ಜನೆ ವೇಳೆ ನಡೆದ ಘನಘೋರ ದುರಂತದಲ್ಲಿ ಉಸಿರುಚೆಲ್ಲಿದ್ದಾನೆ. ಚಿಕ್ಕ ವಯಸ್ಸಿನಲ್ಲೇ ತಂದೆಯನ್ನು ಕಳೆದುಕೊಂಡಿದ್ದ ಪ್ರವೀಣ್ ತಾಯಿ ಸುಶೀಲಾ ಆರೈಕೆಯಲ್ಲೇ ಬೆಳೆದಿದ್ದ. ಇದನ್ನೂ ಓದಿ: ಹಾಸನ ಗಣೇಶ ಮೆರವಣಿಗೆ ವೇಳೆ ದುರಂತ – ಹುಟ್ಟುಹಬ್ಬದ ಸಂಭ್ರಮದಲ್ಲಿದ್ದ ವಿದ್ಯಾರ್ಥಿ ದುರ್ಮರಣ

    ಕಿತ್ತು ತಿನ್ನುವ ಬಡತನವಿದ್ದರೂ ಮನೆಗೆಲಸ ಹಾಗೂ ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡಿ ಮಗನನ್ನು ತಾಯಿ ಇಂಜಿನಿಯರಿಂಗ್ ಓದಿಸುತ್ತಿದ್ದರು. ಬಳ್ಳಾರಿಯಲ್ಲಿ ಡಿಪ್ಲೊಮಾ ಮುಗಿಸಿ, ಹಾಸನದಲ್ಲಿ ಇಂಜಿನಿಯರಿಂಗ್ ಮಾಡಲು ತೆರಳಿದ್ದ ಪ್ರವೀಣ್, ಎಲೆಕ್ಟ್ರಾನಿಕ್ ವಿಭಾಗದ ಕೊನೆಯ ಸೆಮಿಸ್ಟರ್‌ನಲ್ಲಿ ವ್ಯಾಸಂಗ ಮಾಡ್ತಿದ್ದ. ಮಗ ಇನ್ನೇನು ಕೆಲಸಕ್ಕೆ ಸೇರಿ ತನ್ನ ಕಷ್ಟಗಳೆಲ್ಲ ಕಳೆಯುತ್ತದೆ ಅಂದುಕೊಂಡಿದ್ದ ತಾಯಿಗೆ ಪ್ರವೀಣ್ ಸಾವಿನ ಸುದ್ದಿ ಬರಸಿಡಿಲು ಬಡಿದಂತಾಗಿದೆ. ಇದನ್ನೂ ಓದಿ: ಹಾಸನದಲ್ಲಿ ಗಣೇಶ ಮೆರವಣಿಗೆ ವೇಳೆ ಘನಘೋರ ದುರಂತ – ಸಾವಿನ ಸಂಖ್ಯೆ 9ಕ್ಕೆ ಏರಿಕೆ

    ಇದೀಗ ಪ್ರವೀಣ್ ಮೃತದೇಹ ಬಳ್ಳಾರಿಯ ಮನೆಗೆ ತಲುಪುತ್ತಿದ್ದಂತೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಮಗನ ಮೃತದೇಹ ನೋಡಿ ತಾಯಿ ನನಗ್ಯಾರು ದಿಕ್ಕೆಂದು ಎದೆ ಬಡಿದುಕೊಂಡು ಗೋಳಾಡಿದ್ದಾರೆ. ತಾಯಿಯ ಸ್ಥಿತಿ ಕಂಡು ಗ್ರಾಮಸ್ಥರು ಕಣ್ಣೀರಿಟ್ಟಿದ್ದಾರೆ.

  • ಕಾರು ಅಪಘಾತ: ಖ್ಯಾತನಟ ಪ್ರವೀಣ್ ಗೆ ಐಸಿಯುವಿನಲ್ಲಿ ಚಿಕಿತ್ಸೆ

    ಕಾರು ಅಪಘಾತ: ಖ್ಯಾತನಟ ಪ್ರವೀಣ್ ಗೆ ಐಸಿಯುವಿನಲ್ಲಿ ಚಿಕಿತ್ಸೆ

    ಖ್ಯಾತ ನಟ ಪ್ರವೀಣ್ (Praveen) ಕಾರು ಅಪಘಾತದಲ್ಲಿ (Accident) ತೀವ್ರ ಗಾಯಗೊಂಡಿದ್ದಾರೆ. ಶನಿವಾರ ಬೆಳಗ್ಗೆ ಈ ಅಪಘಾತ ನಡೆದಿದ್ದು, ಕೂಡಲೇ ಪ್ರವೀಣ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ತೀವ್ರ ಗಾಯಗೊಂಡಿದ್ದರಿಂದ ಐಸಿಯುವಿಗೆ ಶಿಫ್ಟ್ ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎನ್ನಲಾಗ್ತಿದೆ.

    ಬಾಂದ್ರ ಹೋಲಿ ಫ್ಯಾಮಿಲಿ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಪತ್ನಿ ಸೇರಿದಂತೆ ಕುಟುಂಬಸ್ಥರು ಆಸ್ಪತ್ರೆಗೆ ಧಾವಿಸಿದ್ದಾರೆ. ಸದ್ಯಕ್ಕೆ ಆ ಕುರಿತು ಏನೂ ಹೇಳೋಕೆ ಆಗ್ತಿಲ್ಲ. ನಮ್ಮ ಕುಟುಂಬಕ್ಕೆ ತೀವ್ರ ಆಘಾತವಾಗಿದೆ ಎಂದು ಪತ್ನಿ ಹೇಳಿದ್ದಾರೆ.

     

    ಬಾಲಿವುಡ್ ನ ದಿಲ್ಲಿಗಿ ಸಿನಿಮಾದ ಮೂಲಕ ಸಿನಿಮಾ ರಂಗಕ್ಕೆ ಆಗಮಿಸಿದ್ದ ಪ್ರವೀಣ್. ಆ ನಂತರ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿದ್ದಾರೆ. ವೆಬ್ ಸಿರೀಸ್ ನಲ್ಲೂ ಕಾಣಿಸಿಕೊಂಡಿದ್ದಾರೆ. ರಾಗಿಣಿ ಎಂಎಂಎಸ್ ಸಿನಿಮಾ ಅವರಿಗೆ ಸಾಕಷ್ಟು ಹೆಸರು ತಂದುಕೊಟ್ಟಿತ್ತು. ಸದ್ಯ ತೀವ್ರನಿಗಾ ಘಟಕದಲ್ಲಿ ಅವರಿಗೆ ಚಿಕಿತ್ಸೆ ಮುಂದುವರೆದಿದೆ.

  • ಪುನೀತ್ ರಾಜ್ ಕುಮಾರ್ ನಿರ್ಮಾಣದ ’02’ ಚಿತ್ರದ ಟ್ರೈಲರ್ ರಿಲೀಸ್

    ಪುನೀತ್ ರಾಜ್ ಕುಮಾರ್ ನಿರ್ಮಾಣದ ’02’ ಚಿತ್ರದ ಟ್ರೈಲರ್ ರಿಲೀಸ್

    ಹೆಸರಾಂತ ಚಿತ್ರ ನಿರ್ಮಾಣ ಸಂಸ್ಥೆಯಾದ ಪಿ.ಆರ್.ಕೆ ಪ್ರೊಡಕ್ಷನ್ಸ್ ಇದೀಗ ಮತ್ತೊಮ್ಮೆ ಸಿನಿ ಪ್ರೇಕ್ಷಕರನ್ನು ‘O2’ ಎಂಬ ಹೊಸ ಚಿತ್ರದ ಮೂಲಕ ರಂಜಿಸಲು ಸಜ್ಜಾಗಿದೆ. ಒಂದು ಕುತೂಹಲಕಾರಿ ಮೆಡಿಕಲ್ ಥ್ರಿಲ್ಲರ್ ಕಥೆಯನ್ನು ಇದು ಒಳಗೊಂಡಿದೆ. ಈ ಕಥೆಯು ಕೇವಲ‌ ಥ್ರಿಲ್ಲರ್ ಅಂಶಗಳನ್ನಷ್ಟೇ ಅಲ್ಲದೆ, ಪ್ರೀತಿ-ಪ್ರೇಮದ ಅಂಶಗಳನ್ನೂ ಒಳಗೊಂಡಿರುವುದು ವಿಶೇಷ ಸಂಗತಿ. ಹಾಗಾಗಿ ಈ ಚಿತ್ರವನ್ನು ಲವ್ ಥ್ರಿಲ್ಲರ್ ಎಂದು ಕೂಡ ಪರಿಗಣಿಸಬಹುದು.

    ಚಿತ್ರರಂಗದಲ್ಲಿ ತನ್ನದೇ ಆದಂತಹ ಛಾಪನ್ನು ಮೂಡಿಸಿರುವ‌ ಪಿ.ಆರ್.ಕೆ ಪ್ರೊಡಕ್ಷನ್ಸ್ ಹೊಸ ಪ್ರತಿಭೆಗಳಿಗೆ ಅವಕಾಶ ನೀಡುವುದರಲ್ಲಿ‌ ನಿಸ್ಸೀಮರು. ಇದು ಪಿ.ಆರ್.ಕೆ ಬ್ಯಾನರ್ ನಲ್ಲಿ ಅಶ್ವಿನಿ ಪುನೀತ್ ರಾಜ್‌ಕುಮಾರ್ (Ashwini Puneeth Rajkumar) ಅವರ ನಿರ್ಮಾಣದ ಹತ್ತನೇ ಚಿತ್ರ. ಚಿತ್ರದಲ್ಲಿ ಆಶಿಕಾ ರಂಗನಾಥ್ (Ashika Ranganath), ಪ್ರವೀಣ್ ತೇಜ್ (Praveen), ರಾಘವ್ ನಾಯಕ್, ಸಿರಿ ರವಿಕುಮಾರ್, ಪ್ರಕಾಶ್ ಬೆಳವಾಡಿ ಮುಖ್ಯ ಭೂಮಿಕೆಯಲ್ಲಿದ್ದಾರೆ. ಹಾಗೂ ಚಿತ್ರವನ್ನು ಪ್ರಶಾಂತ್ ರಾಜ್ ಮತ್ತು ಚಿತ್ರದ‌ ನಾಯಕ ರಾಘವ್ ನಾಯಕ್ ನಿರ್ದೇಶಿಸಿರುತ್ತಾರೆ‌.

    ಹಳ ವಿಭಿನ್ನವಾದ ಕಥಾಹಂದರವನ್ನು ಹೊಂದಿರುವಂತಹ ಚಿತ್ರ. ಸಾಯುತ್ತಿರುವವರನ್ನು ಬದುಕಿಸುವುದೇ ವೈದ್ಯರ ಆದ್ಯ ಕರ್ತವ್ಯ ಎಂದು ನಂಬುವ ಶ್ರದ್ಧಾ (ಆಶಿಕಾ ರಂಗನಾಥ್), ತನ್ನ  ಸಂಶೋಧನೆಯ ಫಲವಾದ O2 ಎಂಬ ಡ್ರಗ್ ಮೂಲಕ ಸಾವು-ಬದುಕಿನ ಮಧ್ಯೆ ಹೋರಾಡುತ್ತಿರುವವರನ್ನು ಬದುಕಿಸುವ ಪ್ರಯತ್ನಕ್ಕೆ ಮುಂದಾಗುತ್ತಾಳೆ. ಈ ಹಾದಿಯಲ್ಲಿ ಅನೇಕ ಸಮಸ್ಯೆಗಳನ್ನು ಎದುರಿಸುತ್ತಾಳೆ. ಈ ಎಲ್ಲಾ ಅಡೆತಡೆಗಳನ್ನು ಮೀರಿ ಗುರಿ ತಲುಪಲು ಶ್ರದ್ಧಾಳಿಗೆ ಸಾಧ್ಯವಾಗುವುದೋ ಇಲ್ಲವೋ ಎಂಬುದನ್ನು ಪ್ರೇಕ್ಷಕರು ಚಿತ್ರಮಂದಿರದಲ್ಲಿ ನೋಡಿ ತಿಳಿದುಕೊಳ್ಳಬೇಕಿದೆ. ಒಟ್ಟಾರೆ ಈ ಚಿತ್ರ ಮನರಂಜನೆ, ವಿಜ್ಞಾನ, ಪ್ರೀತಿ, ಅನಿರೀಕ್ಷಿತ ತಿರುವುಗಳ ಸಮಾಗಮ ಎಂದರೆ ಉತ್ಪ್ರೇಕ್ಷೆಯಲ್ಲ.

    ಚಿತ್ರದ ನಿರ್ಮಾಪಕಿ, ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರು ಮಾತನಾಡಿ, O2 ಎಂಬ ವಿಭಿನ್ನವಾದ ಚಿತ್ರವನ್ನು ನಿರ್ಮಿಸಿರುವುದು ನಮಗೆ ಹೆಮ್ಮೆ ತಂದಿದೆ. ಈ ಚಿತ್ರವನ್ನು ಪ್ರೇಕ್ಷಕರ ಮುಂದಿಡಲು ಕಾತುರದಿಂದ ಕಾಯುತ್ತಿದ್ದೇನೆ. ಹೊಸ ಪ್ರತಿಭೆಗಳಿಗೆ ಅವಕಾಶ ನೀಡುವ ಉದ್ದೇಶ ಹೊಂದಿರುವ ನಮ್ಮ ಸಂಸ್ಥೆಯಿಂದ ಮೂಡಿಬರುತ್ತಿರುವ ಈ‌ ಚಿತ್ರ ಪ್ರೇಕ್ಷಕರ ಮನಸ್ಸಿನಲ್ಲಿ ಉಳಿಯುತ್ತದೆ ಹಾಗೂ ಭಾರಿ‌ ಮಟ್ಟದಲ್ಲಿ ಪರಿಣಾಮ ಬೀರುತ್ತದೆ ಎಂದು ನಂಬಿದ್ದೇನೆ” ಎಂದಿದ್ದಾರೆ.

  • ‘ಜಿಗರ್’ ಚಿತ್ರದ ರೊಮ್ಯಾಂಟಿಕ್ ಹಾಡಿಗೆ ಧ್ವನಿಯಾದ ಸಂಚಿತ್ ಹೆಗ್ಡೆ

    ‘ಜಿಗರ್’ ಚಿತ್ರದ ರೊಮ್ಯಾಂಟಿಕ್ ಹಾಡಿಗೆ ಧ್ವನಿಯಾದ ಸಂಚಿತ್ ಹೆಗ್ಡೆ

    ಸ್ಯಾಂಡಲ್‌ವುಡ್ ನಟ ಪ್ರವೀಣ್ ತೇಜ್ ಮತ್ತೊಂದು ವಿಭಿನ್ನ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬರಲು ಸಜ್ಜಾಗಿದ್ದಾರೆ. ಈಗಾಗಲೇ ವಿವಿಧ ಪಾತ್ರಗಳ ಮೂಲಕ ಅಭಿಮಾನಿಗಳನ್ನು ರಂಜಿಸಿರುವ ಪ್ರವೀಣ್ ಈ ಬಾರಿ ಮಾಸ್ ಲುಕ್‌ನಲ್ಲಿ ಎಂಟ್ರಿ ಕೊಡುತ್ತಿದ್ದಾರೆ. ಅಂದಹಾಗೆ ಮೊದಲ ಬಾರಿಗೆ ಪ್ರವೀಣ್ ‘ಜಿಗರ್’ ಎನ್ನುವ ಸಾಹಸ ಪ್ರಧಾನ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬರುತ್ತಿದ್ದಾರೆ. ಈಗಾಗಲೇ ಶೂಟಿಂಗ್ ಮುಗಿಸಿ ರಿಲೀಸ್‌ಗೆ ರೆಡಿಯಾಗಿರುವ ಜಿಗರ್ ಸಿನಿಮಾ ಸದ್ಯ ಹಾಡಿನ ಮೂಲಕ ಆಮಂತ್ರಣ ನೀಡಿದೆ.

    ಜಿಗರ್ ಸಿನಿಮಾದ ಮೊದಲ ಹಾಡು ರಿಲೀಸ್ ಆಗಿದೆ. ಮಾಸ್ ಸಿನಿಮಾ ಆಗಿದ್ದರೂ ಸದ್ಯ ರೊಮ್ಯಾಂಕ್ ಹಾಡಿನ ಮೂಲಕ ಮೋಡಿ ಮಾಡುತ್ತಿದ್ದಾರೆ ಪ್ರವೀಣ್. ಅಂದಹಾಗೆ ಸದ್ಯ ಬಿಡುಗಡೆಯಾಗಿರುವ ಈ ಹಾಡು ಗಾನಪ್ರಿಯರ ಹಾಟ್ ಫೇವರೆಟ್ ಸಿಂಗರ್ ಸಂಚಿತ್ ಹೆಗ್ಡೆ ಕಂಠದಲ್ಲಿ ಮೂಡಿಬಂದಿದೆ. ಸಂಚಿತ್ ಹಾಡಿರುವ ಬಹುತೇಕ ಹಾಡುಗಳು ಸೂಪರ್ ಹಿಟ್. ಜಿಗರ್ ಸಿನಿಮಾದ ಈ ರೊಮ್ಯಾಂಟಿಕ್ ಹಾಡು ಕೂಡ  ಸಂಚಿತ್ ಧ್ವನಿಯಲ್ಲಿ ಅಷ್ಟೇ ಅದ್ಭುತವಾಗಿ ಮೂಡಿ ಬಂದಿದೆ.

    ‘ಸುಮ್ಮನೆ…..’ ಎನ್ನುವ ಸಾಲುಗಳಿಂದ ಪ್ರಾರಂಭವಾಗುವ ಈ ಹಾಡಿಗೆ ರಿತ್ವಿಕ್ ಮುರಳಿಧರ ಸಂಗೀತ  ಸಂಯೋಜನೆ ಮಾಡಿದ್ದಾರೆ. ಈ ಸುಂದರ ಹಾಡಿಗೆ ಅರ್ಜುನ್ ಲೂಯಿಸ್ ಸಾಹಿತ್ಯವಿದೆ. ಈಗಾಗಲೇ ಚಮಕ್, ವೆನಿಲ್ಲ, ಸಖತ್ ಸೇರಿದಂತೆ ಅನೇಕ ಸಿನಿಮಾಗಳಿಗೆ ಹಾಡು ಬರೆದಿರುವ ಅರ್ಜುನ್ ಇದೀಗ ಜಿಗರ್ ಸಿನಿಮಾದ ಹಾಡನ್ನೂ ಬರೆದಿದ್ದಾರೆ. ಈ ಸುಂದರ ಹಾಡನ್ನು ಕರಾವಳಿ ಸುತ್ತಮುತ್ತ ಚಿತ್ರೀಕರಿಸಲಾಗಿದೆ. ಮಲ್ಫೆ, ಮರುವಂತೆ, ಮಂಗಳೂರು ಸುತ್ತಮುತ್ತ ಸೆರೆಹಿಡಿಯಲಾಗಿದೆ. ಸಿನಿಮಾ ಕೂಡ ಇದೇ ಬ್ಯಾಕ್‌ಡ್ರಾಪ್‌ನಲ್ಲಿ ಇರಲಿದೆ.

    ಅಂದಹಾಗೆ ಪ್ರವೀಣ್ ತೇಜ್ ಅವರನ್ನು ಆಕ್ಷನ್ ಅವತಾರದಲ್ಲಿ ಅಭಿಮಾನಿಗಳ ಮುಂದೆ ಕರೆತರುತ್ತಿದ್ದಾರೆ ನಿರ್ದೇಶಕ ಸೂರಿ ಕುಂದರ್. ಈಗಾಗಲೇ ಸ್ಯಾಂಡಲ್‌ವುಡ್‌ನಲ್ಲಿ ಅನೇಕ ಸಿನಿಮಾಗಳಿಗೆ ಸಹಾಯಕ  ನಿರ್ದೇಶಕರಾಗಿ ಕೆಲಸ ಮಾಡಿದ್ದ ಸೂರಿ ಜಿಗರ್ ಮೂಲಕ ಪೂರ್ಣ ಪ್ರಮಾಣದ ನಿರ್ದೇಶಕರಾಗಿ ಗುರುತಿಸಿಕೊಂಡಿದ್ದಾರೆ. ತನ್ನ ಮೊದಲ ಸಿನಿಮಾದ ಮೇಲೆ ನಿರ್ದೇಶಕ ಸೂರಿ ಭಾರಿ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಯು ಕೆ ಪ್ರೊಡಕ್ಷನ್ ಅಡಿಯಲ್ಲಿ ಸಿನಿಮಾ ನಿರ್ಮಾಣವಾಗಿದ್ದು ಪೂಜಾ ವಸಂತ್ ಚಿತ್ರಕ್ಕೆ  ಬಂಡವಾಳ ಹಾಕಿದ್ದಾರೆ , ಶಿವಸೇನಾ ಕ್ಯಾಮೆರಾ ವರ್ಕ್ ಚಿತ್ರಕ್ಕಿದೆ  ಇನ್ನೂ ಈ ಸಿನಿಮಾದಲ್ಲಿ ಪ್ರವೀಣ್‌ಗೆ ನಾಯಕಿಯಾಗಿ ವಿಜಯ್ ಶ್ರೀ ಕಾಣಿಸಿಕೊಂಡಿದ್ದಾರೆ. ವಿಜಯ್ ಶ್ರೀ ಅವರಿಗೂ ಇದು ಮೊದಲ ಸಿನಿಮಾವಾಗಿದೆ.

    ನಟ ಪ್ರವೀಣ್ ಮೊದಲ ಬಾರಿಗೆ ಮಾಸ್ ಅವತಾರದಲ್ಲಿ ಕಾಣಿಸಿಕೊಂಡಿದ್ದು ಅಭಿಮಾನಿಗಳು ಹೇಗೆ ಸ್ವೀಕರಿಸುತ್ತಾರೆ ಎಂದು ಎದುರು ನೋಡುತ್ತಿದ್ದಾರೆ. ಕೊನೆಯದಾಗಿ ಪ್ರವೀಣ್ ಹೊಂದಿಸಿ ಬರೆಯಿರಿ ಸಿನಿಮಾ ಮೂಲಕ ಸಿನಿಮಾ ಪ್ರೇಕ್ಷಕರ ಮುಂದೆ ಬಂದಿದ್ದರು. ಇದೀಗ ಜಿಗರ್ ಮೂಲಕ ಎಂಟ್ರಿ ಕೊಡುತ್ತಿದ್ದಾರೆ. ಸದ್ಯ ಹಾಡಿನ ಮೂಲಕ ಅಭಿಮಾನಿಗಳನ್ನು ಸೆಳೆಯುತ್ತಿರುವ ಜಿಗರ್ ಸಿನಿಮಾ ಹೇಗಿರಲಿದೆ ಎನ್ನುವ ಕುತೂಹಲ ಹೆಚ್ಚಿಸಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಪತ್ನಿ ವಿರುದ್ಧ ಸುಳ್ಳು ಕೇಸ್‌ – ಸ್ಯಾಂಟ್ರೋ ರವಿಯ ಷಡ್ಯಂತ್ರಕ್ಕೆ ಇನ್‌ಸ್ಪೆಕ್ಟರ್‌ ಸಾಥ್‌

    ಪತ್ನಿ ವಿರುದ್ಧ ಸುಳ್ಳು ಕೇಸ್‌ – ಸ್ಯಾಂಟ್ರೋ ರವಿಯ ಷಡ್ಯಂತ್ರಕ್ಕೆ ಇನ್‌ಸ್ಪೆಕ್ಟರ್‌ ಸಾಥ್‌

    ಬೆಂಗಳೂರು: ಸ್ಯಾಂಟ್ರೋ ರವಿಯ (Santro Ravi) ವಿರುದ್ಧ ಆತನ ಪತ್ನಿ ಮಾಡಿರುವ ಆರೋಪ ಈಗ ಪೊಲೀಸ್ ಇನ್‌ಸ್ಪೆಕ್ಟರ್‌ ಪ್ರವೀಣ್‌ಗೆ (Police inspector Praveen) ಉರುಳಾಗುವ ಸಾಧ್ಯತೆ ದಟ್ಟವಾಗಿದೆ.

    ಸ್ಯಾಂಟ್ರೋ ರವಿಯ ಷಡ್ಯಂತ್ರದಿಂದ ಕಾಟನ್ ಪೇಟೆ ಠಾಣೆಯಲ್ಲಿ ತನ್ನ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಲಾಗಿದೆ ಎಂದು‌ ಮೈಸೂರಿನ ವಿಜಯ ನಗರ ಠಾಣೆಯಲ್ಲಿ ಪತ್ನಿ ರಶ್ಮಿ (Rashmi) ದೂರು ನೀಡದ್ದರು. ದೂರಿನನ್ವಯ ಅಂದಿನ ಕಾಟನ್ ಪೇಟೆ ಇನ್‌ಸ್ಪೆಕ್ಟರ್‌ ಪ್ರವೀಣ್ ವಿರುದ್ಧ ಇಲಾಖಾ ತನಿಖೆ ನಡೆಸಿ ವರದಿ ನೀಡುವಂತೆ ಪಶ್ಚಿಮ ವಿಭಾಗದ ಡಿಸಿಪಿ ಲಕ್ಷ್ಮಣ್ ನಿಂಬರಗಿಗೆ ಆದೇಶಿಸಲಾಗಿತ್ತು. ಸದ್ಯ ತನಿಖೆ ಪೂರ್ಣಗೊಂಡಿದ್ದು ವರದಿ ಡಿಜಿಪಿ ಪ್ರವೀಣ್ ಸೂದ್ (Praveen Sood) ಕೈ ಸೇರಿದೆ ಎಂದು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ತಿಳಿಸಿದ್ದಾರೆ. ಇದನ್ನೂ ಓದಿ: ರಾಜಕೀಯದಲ್ಲಿ ರಾಡಿ ಎಬ್ಬಿಸಿದ ಸ್ಯಾಂಟ್ರೋ ರವಿ ಯಾರು? ಮಂಡ್ಯ ಟು ಬೆಂಗಳೂರು ಜರ್ನಿಯ ರೋಚಕ ಕಹಾನಿ

    ದೂರಿನಲ್ಲಿ ಏನಿತ್ತು?
    ಪ್ರಕಾಶ್ ಎಂಬುವವರು ನೀಡಿದ್ದ ದೂರಿನನ್ವಯ ಕಾಟನ್ ಪೇಟೆ ಠಾಣೆಯಲ್ಲಿ ನವೆಂಬರ್ 24ರಂದು ರಶ್ಮಿ, ನಯನ ಹಾಗೂ ಶೇಕ್ ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿತ್ತು. ಮೂರು ತಿಂಗಳ ಅವಧಿಗೆ ಐದು ಲಕ್ಷ ರೂ ಪಡೆದಿದ್ದ ರಶ್ಮಿ, ನವೆಂಬರ್ 23ರಂದು ಸಂಜೆ 6ಗಂಟೆಗೆ ಹಣ ಕೊಡುವುದಾಗಿ ಕಾಟನ್ ಪೇಟೆಯ ಖೋಡೆ ಸರ್ಕಲ್ ಬಳಿ ಕರೆಸಿಕೊಂಡಿದ್ದರು. ಈ ವೇಳೆ ರಶ್ಮಿಯವರ ಜೊತೆಗಿದ್ದ ಶೇಕ್ ಎಂಬುವವನು ತಮ್ಮ ಎರಡೂ ಕೈಗಳನ್ನು ಹಿಂದಿನಿಂದ ಗಟ್ಟಿಯಾಗಿ ಹಿಡಿದುಕೊಂಡಿದ್ದು, ರಶ್ಮಿ ತಮ್ಮ ಬಳಿಯಿದ್ದ ಚಾಕುವನ್ನ ಕುತ್ತಿಗೆಯ ಮೇಲಿಟ್ಟು ಬೆದರಿಸಿದ್ದಾರೆ. ಹಾಗೂ ಜೊತೆಗಿದ್ದ ನಯನ ಎಂಬಾಕೆ ತನ್ನ ಕತ್ತಿನಲ್ಲಿದ್ದ ಸುಮಾರು 13ಗ್ರಾಂ ತೂಕದ ಚಿನ್ನದ ಚೈನನ್ನು ಕಿತ್ತುಕೊಂಡು, ಪ್ಯಾಂಟ್ ಜೇಬಿನಲಿದ್ದ 9 ಸಾವಿರ ರೂಗಳನ್ನ ಕಿತ್ತುಕೊಂಡು ಹಲ್ಲೆ ಮಾಡಿ ಪರಾರಿಯಾಗಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿತ್ತು. ಇದನ್ನೂ ಓದಿ: ಐಷಾರಾಮಿ ಕಾರುಗಳ ಹೆಸರಲ್ಲಿ ಸ್ಯಾಂಟ್ರೋ ರವಿಯಿಂದ ನಡೀತಿತ್ತು ಸುಂದರಿಯರ ಸೆಲೆಕ್ಷನ್

    ಅಂದು ನಿಜವಾಗಿ ನಡೆದಿದ್ದು ಏನು?
    ಸದ್ಯ ಇಲಾಖಾ ತನಿಖೆ ನಡೆಸಿರುವ ಪಶ್ಚಿಮ ವಿಭಾಗದ ಡಿಸಿಪಿ ಲಕ್ಷ್ಮಣ್ ನಿಂಬರ್ಗಿ ಕೃತ್ಯ ನಡೆದ ಸ್ಥಳದಲ್ಲಿ ರಶ್ಮಿ ಹಾಗೂ ನಯನ ಇರಲಿಲ್ಲ. ಘಟನೆ ನಡೆದ ಸ್ಥಳದಲ್ಲಿ ರಶ್ಮಿ ಹಾಗೂ ನಯನ ಇರುವಂತೆ ಸಾಬೀತು ಮಾಡಲು ಸ್ಯಾಂಟ್ರೋ ರವಿಯೇ ತನ್ನ ಕೆಲಸಗಾರ ಶೇಕ್ ಜೊತೆಯಲ್ಲಿ ರಶ್ಮಿ ಮೊಬೈಲ್ ಕೊಟ್ಟು ಕಳುಹಿಸಿದ್ದ. ನಯನ ಕೃತ್ಯ ನಡೆದ ದಿನ ಮೈಸೂರಿನಲ್ಲಿದ್ದರು. ಇಬ್ಬರೂ ಸ್ಥಳದಲ್ಲೇ ಇರಲೇ ಇಲ್ಲ. ಸೂಕ್ತ ತನಿಖೆ ನಡೆಸದೇ ಕಾಟನ್ ಪೇಟೆ ಇನ್‌ಸ್ಪೆಕ್ಟರ್‌ ಪ್ರವೀಣ್ ಸುಳ್ಳು ಎಫ್ಐಆರ್ ದಾಖಲಿಸಿದ್ದಾರೆ. ಪ್ರಕರಣದಲ್ಲಿ ಸ್ಯಾಂಟ್ರೋ ರವಿಯ ಷಡ್ಯಂತ್ರದ ಜೊತೆಗೆ ಕಾಟನ್ ಪೇಟೆ ಠಾಣೆಯ ಅಂದಿನ ಇನ್‌ಸ್ಪೆಕ್ಟರ್‌ ಪ್ರವೀಣ್‌ ಅವರ ಕರ್ತವ್ಯ ಲೋಪ ಎದ್ದು ಕಾಣುತ್ತಿದ್ದು ಸೂಕ್ತ ಕ್ರಮ ಕೈಗೊಳ್ಳುವಂತೆ ವರದಿ ನೀಡಲಾಗಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ‘ಠಾಣೆ’ ಸಿನಿಮಾದ ಪೋಸ್ಟರ್ ರಿಲೀಸ್ ಮಾಡಿದ ಧ್ರುವ ಸರ್ಜಾ

    ‘ಠಾಣೆ’ ಸಿನಿಮಾದ ಪೋಸ್ಟರ್ ರಿಲೀಸ್ ಮಾಡಿದ ಧ್ರುವ ಸರ್ಜಾ

    ಗಾಯತ್ರಿ ಎಂ ನಿರ್ಮಿಸಿರುವ “ಠಾಣೆ” (Thane) ಚಿತ್ರದ ಪೋಸ್ಟರ್ ಧ್ರುವ ಸರ್ಜಾ (Dhruva Sarja) ಅವರಿಂದ ಬಿಡುಗಡೆಯಾಗಿದೆ. ಈ ಪೋಸ್ಟರ್ ನೋಡಿದರೆ ಇಡೀ ಚಿತ್ರ ನೋಡಿದ ಹಾಗೆ ಆಗುತ್ತಿದೆ. ಪೋಸ್ಟರ್ (Poster) ತುಂಬಾ ಚೆನ್ನಾಗಿದೆ. ಚಿತ್ರ ಕೂಡ ಅಷ್ಟೇ ಚೆನ್ನಾಗಿರುತ್ತದೆ ಎಂದು ಅನಿಸುತ್ತದೆ. ಚಿತ್ರ ಯಶಸ್ವಿಯಾಗಲಿ ಎಂದು ಧ್ರುವ ಸರ್ಜಾ ಹಾರೈಸಿದರು.

    ಕಳೆದ ಹದಿನೈದು ವರ್ಷಗಳಿಂದ ರಂಗಭೂಮಿ ಕಲಾವಿದನಾಗಿ ಗುರುತಿಸಿಕೊಂಡಿರುವ, ಕೌರವ ವೆಂಕಟೇಶ್ ಸೇರಿದಂತೆ ಅನೇಕ ಸಾಹಸ ನಿರ್ದೇಶಕರ ಬಳಿ ಕೆಲಸ ಮಾಡಿರುವ ಪ್ರಕಸಂ ತಂಡದ ಪ್ರವೀಣ್ “ಠಾಣೆ” ಚಿತ್ರದ ನಾಯಕ. ಭರತ ನಾಟ್ಯ ಸೇರಿದಂತೆ ಅನೇಕ ಕಲೆಗಳಲ್ಲಿ ನೈಪುಣ್ಯತೆ ಪಡೆದಿರುವ ಮೈಸೂರಿನ ಹರಿಣಾಕ್ಷಿ ಈ ಚಿತ್ರದ ನಾಯಕಿ. ಪಿ.ಡಿ.ಸತೀಶ್, ರಾಜ್ ಬೆಳವಾಡಿ ಸೇರಿದಂತೆ ಅನೇಕ ರಂಗಭೂಮಿ ಕಲಾವಿದರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ. ನಟ, ನಿರ್ದೇಶಕ ಕಾಶಿನಾಥ್, ರಾಮನಾಥ್ ಋಗ್ವೇದಿ, ಗುರುಪ್ರಸಾದ್ ಮುಂತಾದವರ ಬಳಿ ಕಾರ್ಯ ನಿರ್ವಹಿಸಿರುವ ಎಸ್ ಭಗತ್ ರಾಜ್ (Bhagat Raj) ಈ ಚಿತ್ರದ ನಿರ್ದೇಶಕರು. ನಾವು ಧರಿಸುವ ಸೂಟ್ ಮೇಲೆ ಒಂದು ಕಥೆ ರಚಿಸಿ, ನಿರ್ದೇಶಿಸಿರುವ “ದಿ ಸೂಟ್” ಭಗತ್ ರಾಜ್ ನಿರ್ದೇಶನದ ಮೊದಲ ಚಿತ್ರ. “ಠಾಣೆ” ಎರಡನೇ ಚಿತ್ರ. ಇದನ್ನೂ ಓದಿ:ಬಿಗ್ ಬಾಸ್ ವಿರುದ್ಧ ಮ್ಯಾಚ್ ಫಿಕ್ಸಿಂಗ್ ಆರೋಪ: ಗುರೂಜಿ ಮೇಲೆ ಕಿಚ್ಚ ಕೆಂಡಾಮಂಡಲ

    “ಠಾಣೆ” 1962 ರ ಕಾಲಘಟ್ಟದಲ್ಲಿ ನಡೆಯುವ ಕಥೆ. ನಗರಗಳು ಬೆಳೆದರು, ಸ್ಲಂಗಳು ಬೆಳೆಯುವುದಿಲ್ಲ. ಅದು ಬೆಳೆಯಲು ಕೆಲವರು ಬಿಡುವುದು ಇಲ್ಲ. ಸ್ಲಂ ನಲ್ಲೇ ಹುಟ್ಟಿಬೆಳೆದ ಯುವಕ‌ನೊಬ್ಬ ಅಲ್ಲಿನ ಜನರಿಗೆ ನ್ಯಾಯ ಕೊಡಿಸಲು ಹೋರಾಡುವ ಕಥೆಯಿದು. ಆ ಕಾಲಘಟ್ಟದ ಕಥೆಯಾಗಿರುವುದರಿಂದ ಬೆಂಗಳೂರಿನ ಹಳೆ ಬಡಾವಣೆಗಳಾದ ಶ್ರೀರಾಮಪುರ, ಶಿವಾಜಿ ನಗರ ಮುಂತಾದ ಕಡೆ ಹಳೆಯ ಜಾಗಗಳನ್ನು ಹುಡುಕಿ ಚಿತ್ರೀಕರಣ ಮಾಡಿರುವುದಾಗಿ ನಿರ್ದೇಶಕರು ತಿಳಿಸಿದ್ದಾರೆ.

    ಎರಡು ಸುಮಧುರ ಹಾಡುಗಳಿಗೆ ಮಾನಸ ಹೊಳ್ಳ ಸಂಗೀತ ನೀಡಿದ್ದಾರೆ. ಸಾಗರದ ಪ್ರಶಾಂತ್ ಸಾಗರ್ ಛಾಯಾಗ್ರಹಣ, ಹಿರಿಯ ಸಂಕಲನಕಾರ ಸುರೇಶ್ ಅರಸ್ ಸಂಕಲನ, ಪ್ರವೀಣ್ ಜಾನ್ ಅವರ ಕಲಾ ನಿರ್ದೇಶನ ಈ ಚಿತ್ರಕ್ಕಿದೆ. ಕೌರವ ವೆಂಕಟೇಶ್ ಹಾಗೂ ಟೈಗರ್ ಶಿವ ಸಾಹಸ ಸಂಯೋಜನೆಯಲ್ಲಿ ಐದು ಸಾಹಸ ಸನ್ನಿವೇಶಗಳು ಮೂಡಿಬಂದಿದೆ. ನಾಯಕ ಪ್ರವೀಣ್ ಅವರಿಗೂ ಸಾಹಸ ಸಂಯೋಜನೆ ಮಾಡಿ ಅನುಭವವಿರುವುದರಿಂದ ಅವರ ಅಭಿನಯದಲ್ಲಿ ಸಾಹಸ ಸನ್ನಿವೇಶಗಳು ಅದ್ಭುತವಾಗಿ ಮೂಡಿಬಂದಿದೆ. “ಠಾಣೆ” ಚಿತ್ರದಲ್ಲಿ ಪ್ರವೀಣ್, (Praveen) ಕಾಳಿ  ಎಂಬ ಪಾತ್ರದ ಮೂಲಕ ಚಿತ್ರರಂಗಕ್ಕೆ ನಾಯಕನಾಗಿ ಪಾದಾರ್ಪಣೆ ಮಾಡುತ್ತಿದ್ದಾರೆ. C/O ಶ್ರೀರಾಮಪುರ ಎಂಬ ಅಡಿಬರಹ ಈ ಚಿತ್ರಕ್ಕಿದೆ.

    Live Tv
    [brid partner=56869869 player=32851 video=960834 autoplay=true]

  • ಗಣೇಶ ಹಬ್ಬಕ್ಕಾಗಿ ರಾಜವರ್ಧನ್ ನಟನೆಯ ‘ಹಿರಣ್ಯ’ ಸಿನಿಮಾದ ಮಾಸ್ ಲುಕ್ ರಿಲೀಸ್

    ಗಣೇಶ ಹಬ್ಬಕ್ಕಾಗಿ ರಾಜವರ್ಧನ್ ನಟನೆಯ ‘ಹಿರಣ್ಯ’ ಸಿನಿಮಾದ ಮಾಸ್ ಲುಕ್ ರಿಲೀಸ್

    ವೇದಾಸ್ ಇನ್ಫಿನೈಟ್ ಪಿಕ್ಚರ್ಸ್ ಬ್ಯಾನರ್ ನಡಿ ನಿರ್ಮಾಪಕರಾದ ವಿಘ್ನೇಶ್ವರ್ ಯು ಮತ್ತು ವಿಜಯ್ ಗೌಡ ಬಿದರಹಳ್ಳಿ ಅತೀವ ಸಿನಿಮೋತ್ಸಾಹದಿಂದ ಚೊಚ್ಚಲ ಬಾರಿಗೆ ನಿರ್ಮಾಣ ಮಾಡುತ್ತಿರುವ ಹಿರಣ್ಯ ಸಿನಿಮಾದ ಹೊಸ ಪೋಸ್ಟರ್  ಗಣೇಶ್ ಚತುರ್ಥಿಗೆ ಬಿಡುಗಡೆಯಾಗಿದೆ. ಮ್ಯಾಸೀವ್ ಸ್ಟಾರ್ ರಾಜವರ್ಧನ್ ನಾಯಕನಾಗಿ ಮಾಸ್ ಅವತಾರದಲ್ಲಿ ಧಗಧಗಿಸಿದ್ದು, ಬಾಯಲ್ಲಿ ಸಿಗರೇಟ್ ಹಿಡಿದು, ಪಕ್ಕ ರಾ ಲುಕ್ ನಲ್ಲಿ ಮಿಂಚಿದ್ದಾರೆ.

    ಬಿಚ್ಚುಗತ್ತಿ ಸಿನಿಮಾ ಮೂಲಕ ಚಿತ್ರರಂಗ ಪ್ರವೇಶಿಸಿದ್ದ ರಾಜವರ್ಧನ್ ಮೊದಲ ಹೆಜ್ಜೆಯಲ್ಲಿಯೇ ಗೆಲುವು ತಮ್ಮದಾಗಿಸಿಕೊಂಡಿದ್ದರು. ಸದ್ಯ ಹಿರಣ್ಯ ಸಿನಿಮಾದಲ್ಲಿ ರಾಜವರ್ಧನ್ ಬ್ಯುಸಿಯಾಗಿದ್ದು, ಈ ಚಿತ್ರಕ್ಕೆ ಪ್ರವೀಣ್ ಅವ್ಯುಕ್ತ್ ಆಕ್ಷನ್ ಕಟ್ ಹೇಳಿದ್ದಾರೆ. ರಾಜವರ್ಧನ್ ಗೆ ಜೋಡಿಯಾಗಿ ಮಾಡೆಲ್ ರಿಹಾನಾ ನಟಿಸಿದ್ದು, ಈ ಚಿತ್ರದ ಮೂಲಕ ರಿಹಾನಾ ಚಂದನವನ ಪ್ರವೇಶಿಸಿದ್ದಾರೆ. ಇದನ್ನೂ ಓದಿ: ನೂಡಲ್ಸ್ ಬಿಡಿಸು ಅಂದ್ರೆ ಮೂಲಂಗಿ ಬಿಡಿಸ್ತಾಳೆ – ಸೋನು ಪೇಂಟಿಂಗ್‌ಗೆ ರಾಕೇಶ್ ಫುಲ್ ಶಾಕ್..!

    ಸದ್ಯ ಹಿರಣ್ಯ ಸಿನಿಮಾದ ಶೂಟಿಂಗ್ ಭರದಿಂದ ಸಾಗ್ತಿದ್ದು, ಚಿತ್ರಕ್ಕೆ ಯೋಗೇಶ್ವರನ್‌ ಆರ್‌ ಛಾಯಾಗ್ರಹಣವಿದೆ. ಚಿತ್ರದ ಹಾಡುಗಳಿಗೆ ಜ್ಯೂಡಾ ಸ್ಯಾಂಡಿ ಸಂಗೀತ ಸಂಯೋಜನೆಯಿದೆ.  ಇನ್ನೂ ಸ್ಪೆಷಲ್ ರೋಲ್ ಬಿಗ್ ಬಾಸ್ ಖ್ಯಾತಿಯ ದಿವ್ಯಾ ಸುರೇಶ್ ನಟಿಸುತ್ತಿದ್ದಾರೆ. ಅಂದ ಹಾಗೇ ಹಿರಣ್ಯ ಸಿನಿಮಾದ ಟೈಟಲ್ ಡಾಲಿ ಧನಂಜಯ್ ಬಳಿ ಇತ್ತು. ಪ್ರೀತಿಯಿಂದ ಡಾಲಿ ಗೆಳೆಯ ರಾಜವರ್ಧನ್ ಗೆ ಬಿಟ್ಟು ಕೊಟ್ಟಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ತಮಿಳು ಮತ್ತು ತೆಲುಗಿಗೆ ರಿಮೇಕ್ ಆಗಲಿದೆ ಶಶಾಂಕ್ ನಿರ್ದೇಶನದ ‘ಲವ್ 360’ ಸಿನಿಮಾ

    ತಮಿಳು ಮತ್ತು ತೆಲುಗಿಗೆ ರಿಮೇಕ್ ಆಗಲಿದೆ ಶಶಾಂಕ್ ನಿರ್ದೇಶನದ ‘ಲವ್ 360’ ಸಿನಿಮಾ

    ನ್ನಡ ಸಿನಿಮಾ ರಂಗದ ಪ್ರತಿಭಾವಂತ ನಿರ್ದೇಶಕ ಶಶಾಂಕ್ ಮತ್ತೆ ಹೊಸಬರನ್ನು ಹಾಕಿಕೊಂಡು ಮಾಡಿರುವ ‘ಲವ್ 360’ ಸಿನಿಮಾಗೆ ಸಖತ್ ಡಿಮಾಂಡ್ ಕ್ರಿಯೇಟ್ ಆಗಿದೆ. ರಿಮೇಕ್ ರೈಟ್ಸ್ ಗಾಗಿ ತಮಿಳು ಮತ್ತು ತೆಲುಗು ಸಿನಿಮಾ ರಂಗದಿಂದ ಆಫರ್ ಬಂದಿದ್ದು, ದೊಡ್ಡ ನಿರ್ಮಾಣ ಸಂಸ್ಥೆಯೇ ಹಕ್ಕುಗಳನ್ನು ಕೇಳಿದೆಯಂತೆ. ಈ ಕುರಿತು ಸ್ವತಃ ಶಶಾಂಕ್ ಅವರೇ ಬರೆದುಕೊಂಡಿದ್ದಾರೆ.

    ಲವ್ 360 ಡಿಗ್ರಿ ಸಿನಿಮಾ ರಿಲೀಸ್ ಆದಾಗ ಮೊದಲೆರಡು ದಿನ ಹೇಳಿಕೊಳ್ಳುವಂತಹ ರೆಸ್ಪಾನ್ಸ್ ಸಿಗಲಿಲ್ಲ. ಆದರೆ, ನೋಡಿದವರೆಲ್ಲ ಶಶಾಂಕ್ ಅದ್ಭುತವಾಗಿ ಸಿನಿಮಾ ಮಾಡಿದ್ದಾರೆ ಎಂದು ಪ್ರತಿಕ್ರಿಯಿಸಿದರು. ಇಂತಹ ಸಿನಿಮಾಗಳು ಗೆಲ್ಲಬೇಕು ಎಂದು ಹಲವು ಕಲಾವಿದರು ಮತ್ತು ನಿರ್ದೇಶಕರು ಮಾತನಾಡಿದರು. ಆನಂತರ ಚಿತ್ರಕ್ಕೆ ಒಳ್ಳೆಯ ರೆಸ್ಪಾನ್ಸ್ ಸಿಕ್ಕಿತು. ಇದೀಗ ರಿಮೇಕ್ ರೈಟ್ಸ್ ಗೂ ಕೂಡ ಭಾರೀ ಬೇಡಿಕೆ ಕ್ರಿಯೆಟ್ ಆಗಿದೆ. ಇದನ್ನೂ ಓದಿ:ತಮ್ಮ ಸಂಭಾವನೆಯಲ್ಲಿ ʼಜವಾನ್‌ʼ ಚಿತ್ರಕ್ಕಾಗಿ 5 ಕೋಟಿ ಹೆಚ್ಚಿಸಿಕೊಂಡ ವಿಜಯ್ ಸೇತುಪತಿ!

    ಈ ಸಿನಿಮಾದ ಮೂಲಕ ಪ್ರವೀಣ್ ಎನ್ನುವ ಹೊಸ ಹುಡುಗ ಸಿನಿಮಾ ರಂಗಕ್ಕೆ ಪ್ರವೇಶವಾಗಿದ್ದು, ರಚನಾ ನಾಯಕಿಯಾಗಿ ನಟಿಸಿದ್ದಾರೆ. ಒಂದೊಳ್ಳೆ ಪ್ರೇಮಕಥೆಗೆ ಸಸ್ಪೆನ್ಸ್ ಅಂಶಗಳನ್ನು ಬಳಸಿಕೊಂಡು ಮಾಡಿರುವ ಲವ್ 360 ಸಿನಿಮಾ ಮುಂದಿನ ದಿನಗಳಲ್ಲಿ ತಮಿಳು ಮತ್ತು ತೆಲುಗಿನಲ್ಲಿ ಈ ಸಿನಿಮಾ ರಿಮೇಕ್ ಆಗಲಿದ್ದು, ಯಾರೆಲ್ಲ ಈ ಚಿತ್ರದಲ್ಲಿ ನಟಿಸಲಿದ್ದಾರೆ ಎನ್ನುವ ಕುತೂಹಲ ಮೂಡಿದೆ.

    Live Tv
    [brid partner=56869869 player=32851 video=960834 autoplay=true]

  • ರೊಮ್ಯಾಂಟಿಕ್ ಥ್ರಿಲ್ಲರ್ ಮೂಲಕ ಮತ್ತೋರ್ವ ನಾಯಕನನ್ನು ಪರಿಚಯಿಸುತ್ತಿದ್ದಾರೆ ಡೈರೆಕ್ಟರ್ ಶಶಾಂಕ್

    ರೊಮ್ಯಾಂಟಿಕ್ ಥ್ರಿಲ್ಲರ್ ಮೂಲಕ ಮತ್ತೋರ್ವ ನಾಯಕನನ್ನು ಪರಿಚಯಿಸುತ್ತಿದ್ದಾರೆ ಡೈರೆಕ್ಟರ್ ಶಶಾಂಕ್

    ಸಿಕ್ಸರ್ ಸಿನಿಮಾದ ಮೂಲಕ ಪ್ರಜ್ವಲ್ ದೇವರಾಜ್ ಗೆ ಸ್ಟಾರ್ ಡಮ್ ತಂದುಕೊಟ್ಟವರು ನಿರ್ದೇಶಕ ಶಶಾಂಕ್. ಮೊಗ್ಗಿನ ಮನಸು ಸಿನಿಮಾದಲ್ಲಿದ್ದ ಅಷ್ಟೂ ನಟ ನಟಿಯರೂ ಇಂದು ಟಾಪ್ ನಲ್ಲಿದ್ದಾರೆ. ಅಜಯ್ ರಾವ್ ಮತ್ತು ಶಶಾಂಕ್ ಕಾಂಬಿನೇಷನ್ ನ ಬಹುತೇಕ ಸಿನಿಮಾಗಳು ಹಿಟ್. ಹೀಗಾಗಿ ಶಶಾಂಕ್  ನಿರ್ದೇಶನದ ‘ಲವ್ 360’ ಸಿನಿಮಾದ ಮೂಲಕ ಸ್ಯಾಂಡಲ್ ವುಡ್ ಗೆ ಪರಿಚಯ ಆಗುತ್ತಿರುವ ಪ್ರವೀಣ್ ಮೇಲೆಯೂ ಅಷ್ಟೇ ನಿರೀಕ್ಷೆ ಹೊಂದಲಾಗಿದೆ.

    ಲವ್ ಸ್ಟೋರಿಯನ್ನು ಸೊಗಸಾಗಿ ಹೇಳುವುದರಲ್ಲಿ ಶಶಾಂಕ್ ಸಿದ್ಧಹಸ್ತರು. ಅದರಲ್ಲೂ ಯುವಕರನ್ನೇ ಗುರಿಯಾಗಿಟ್ಟುಕೊಂಡು ಮಾಡಿರುವ ಅವರ ಸಿನಿಮಾಗಳು ಬಾಕ್ಸ್ ಆಫೀಸಿನಲ್ಲಿ ಸಖತ್ ಸದ್ದು ಮಾಡಿವೆ. ಹಾಗಾಗಿ ಲವ್ 360 ಸಿನಿಮಾ ಕೂಡ ಕುತೂಹಲ ಮೂಡಿಸಿದೆ. ಪ್ರೀತಿಯ ಹಲವು ಆಯಾಮಗಳನ್ನು ಈ ಸಿನಿಮಾದಲ್ಲಿ ಕಟ್ಟಿಕೊಟ್ಟಿದ್ದರಿಂದ, ಸ್ಯಾಂಡಲ್ ವುಡ್ ಪ್ರೇಕ್ಷರು ಈ ಸಿನಿಮಾವನ್ನು ಎದುರು ನೋಡುತ್ತಿದ್ದಾರೆ. ಇದನ್ನೂ ಓದಿ:ತಂದೆಯ ಹುಟ್ಟು ಹಬ್ಬದ ನೆನಪಿಗೆ ಹುಟ್ಟೂರಿನ ಆಸ್ಪತ್ರೆಗೆ 50 ಲಕ್ಷ ರೂ. ನೀಡಿದ ಪ್ರಶಾಂತ್ ನೀಲ್

    ಈಗಾಗಲೇ ರಿಲೀಸ್ ಆಗಿರುವ ಟ್ರೈಲರ್ ಗಮನ ಸೆಳೆದಿದೆ. ಹಾಡುಗಳನ್ನು ಕೇಳುಗರು ಮೆಚ್ಚಿಕೊಂಡಿದ್ದಾರೆ. ಫ್ರೆಶ್ ಆಗಿರುವಂತಹ ಲವ್ ಸ್ಟೋರಿಯನ್ನು ಈ ಸಿನಿಮಾದ ಮೂಲಕ ನಿರ್ದೇಶಕರು ಹೇಳಲು ಹೊರಟಿರುವುದರಿಂದ, ಇದೊಂದು ವಿಭಿನ್ನ ಕಥಾ ಹಂದರ ಹೊಂದಿರುವ ಸಿನಿಮಾಗಳ ಸಾಲಿನಲ್ಲಿ ಇರಲಿದೆ ಎನ್ನುವುದು ಸ್ಯಾಂಡಲ್ ವುಡ್ ಲೆಕ್ಕಾಚಾರ. ಇದೊಂದು ಪಕ್ಕಾ ಕಾಲ್ಪನಿಕ ಕಥೆಯಾಗಿದ್ದು, ಎಂತಹ ಕಠಿಣ ಸಂದರ್ಭ ಬಂದರೂ, ಪರಸ್ಪರರು ಬೆಂಬಲಕ್ಕೆ ಹೇಗೆ ಬರುತ್ತಾರೆ ಎನ್ನುವುದು ಸಿನಿಮಾದ ಆಶಯ.

    ಈ ಸಿನಿಮಾದ ಮೂಲಕ ಮತ್ತೋರ್ವ ನಟ ಸಿನಿಮಾ ರಂಗಕ್ಕೆ ನಾಯಕನಾಗಿ ಪ್ರವೇಶ ಮಾಡುತ್ತಿದ್ದರೆ, ಇವರ ಜೊತೆಯಾಗಿ ಲವ್ ಮಾಕ್ಟೇಲ್ ಖ್ಯಾತಿಯ ರಚನಾ ಇಂದರ್ ನಾಯಕಿಯಾಗಿ ನಟಿಸಿದ್ದಾರೆ. ಅರ್ಜುನ್ ಜನ್ಯ ಸಂಗೀತ ಸಂಯೋಜನೆಯಲ್ಲಿ ಹಾಡುಗಳು ಮೂಡಿ ಬಂದಿದ್ದು, ಯೋಗರಾಜ್ ಭಟ್ ಕೂಡ ಈ ಸಿನಿಮಾಗಾಗಿ ಸಾಹಿತ್ಯ ಬರೆದಿದ್ದಾರೆ. ಶಶಾಂಕ್, ಯೋಗರಾಜ್ ಭಟ್ ಮತ್ತು ಅರ್ಜುನ್ ಜನ್ಯ ಕಾಂಬಿನೇಷನ್ ನ ಹಾಡು ಕೂಡ ಮೊನ್ನೆಯಷ್ಟೇ ರಿಲೀಸ್ ಆಗಿ, ಗಮನ ಸೆಳೆದಿದೆ.

    Live Tv
    [brid partner=56869869 player=32851 video=960834 autoplay=true]

  • ಹಣದಾಸೆಗಾಗಿ ಉಂಡ ಮನೆಗೇ ದ್ರೋಹ ಬಗೆದ ಅಪರಾಧಿಗೆ ಬಿಡುಗಡೆ ಭಾಗ್ಯ – ಜೈಲಿನಿಂದ ಹೊರಬಿಡದಂತೆ ಗೋಗರೆದ ಕುಟುಂಬಸ್ಥರು

    ಹಣದಾಸೆಗಾಗಿ ಉಂಡ ಮನೆಗೇ ದ್ರೋಹ ಬಗೆದ ಅಪರಾಧಿಗೆ ಬಿಡುಗಡೆ ಭಾಗ್ಯ – ಜೈಲಿನಿಂದ ಹೊರಬಿಡದಂತೆ ಗೋಗರೆದ ಕುಟುಂಬಸ್ಥರು

    ಮಂಗಳೂರು: 90ರ ದಶಕದಲ್ಲಿ ಕರಾವಳಿಯನ್ನು ಬೆಚ್ಚಿಬೀಳಿಸಿದ್ದ ಕೊಲೆ ಪ್ರಕರಣವದು. ಒಂದೇ ರಾತ್ರಿಯಲ್ಲಿ ಮನೆಯಲ್ಲಿ ಮಲಗಿದ್ದ ತನ್ನ ಸಂಬಂಧಿಕ ನಾಲ್ವರನ್ನು ಭಯಾನಕವಾಗಿ ಕೊಂದು ಹಾಕಿದ್ದ ಘಟನೆ. ಪ್ರಕರಣದಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿದ್ದ ಅಪರಾಧಿ ಸುದೀರ್ಘ 28 ವರ್ಷಗಳ ಜೈಲು ವಾಸದ ಬಳಿಕ ಬಿಡುಗಡೆಯಾಗುತ್ತಿದ್ದಾನೆ. ಆದರೆ ಆತನ ಕುಟುಂಬಸ್ಥರೇ ಅಪರಾಧಿಯನ್ನು ಬಿಡುಗಡೆ ಮಾಡದಂತೆ ಸರ್ಕಾರಕ್ಕೆ ಗೋಗರೆದಿದ್ದಾರೆ.

    ಚಿನ್ನ ಮತ್ತು ಹಣದಾಸೆಗಾಗಿ ಉಂಡ ಮನೆಗೇ ದ್ರೋಹ ಬಗೆದವನ ಕತೆಯಿದು. ವೃತ್ತಿಯಲ್ಲಿ ಟೈಲರ್ ಆಗಿದ್ದ ವ್ಯಕ್ತಿ ಜೂಜಾಟಕ್ಕೆ ಬಿದ್ದು ತನ್ನ ಅತ್ತೆ ಮತ್ತು ಅವರ ಕುಟುಂಬಸ್ಥರನ್ನೇ ಕೊಂದು ಹಾಕಿದ್ದ ಘಟನೆಯದು. ಸುದೀರ್ಘ 28 ವರ್ಷಗಳ ಹಿಂದೆ ಅಂದರೆ, 1993ರ ಫೆಬ್ರವರಿ 23ರಂದು ಮಂಗಳೂರು ಹೊರವಲಯದ ವಾಮಂಜೂರಿನಲ್ಲಿ ಘಟನೆ ನಡೆದಿತ್ತು. ವಾಮಂಜೂರಿನಲ್ಲಿ ನೆಲೆಸಿದ್ದ ಪ್ರವೀಣ್ ತನ್ನ ಸೋದರತ್ತೆ 75 ವರ್ಷದ ಅಪ್ಪಿ ಶೇರಿಗಾರ್ತಿ, ಆಕೆಯ ಮಗಳು 36 ವರ್ಷದ ಶಕುಂತಳಾ, 9 ವರ್ಷದ ಮೊಮ್ಮಗಳು ದೀಪಿಕಾ ಮತ್ತು ಇನ್ನೊಬ್ಬ ಮಗ 30 ವರ್ಷದ ಗೋವಿಂದನನ್ನು ಭೀಭತ್ಸವಾಗಿ ಕೊಲ್ಲಲಾಗಿತ್ತು. ಅದೇ ಮನೆಯಲ್ಲಿ ಉಂಡು ಮಲಗಿದ್ದ ಪ್ರವೀಣ್ ಕೊಲೆ ಆರೋಪಿಯಾಗಿದ್ದ. ನಂತರ ಕಂಬಿ ಏನಿಸುತ್ತಿದ್ದ. ಇದೀಗ ಸುದೀರ್ಘ 23 ವರ್ಷಗಳ ಕಾಲ ಬೆಳಗಾವಿ ಜೈಲಿನಲ್ಲಿದ್ದ ಪ್ರವೀಣನನ್ನು ಈ ಬಾರಿಯ 75ನೇ ಸ್ವಾತಂತ್ರ್ಯೋತ್ಸವ ಸಂದರ್ಭದಲ್ಲಿ ಸನ್ನಡತೆಯ ಆಧಾರದಲ್ಲಿ ಜೈಲಿನಿಂದ ಬಿಡುಗಡೆ ಮಾಡಲಾಗುತ್ತಿದೆ ಎನ್ನುವ ಸುದ್ದಿ ಇದೆ. ಆದರೆ ನಾಲ್ವರನ್ನು ಭೀಕರವಾಗಿ ಕೊಂದಿದ್ದ ಪ್ರವೀಣ್‌ನನ್ನು ಜೈಲಿನಿಂದ ಬಿಡುಗಡೆ ಮಾಡಲೇಬಾರದು. ಆತ ಜೈಲಿನಿಂದ ಹೊರಬಂದಲ್ಲಿ ನಮ್ಮನ್ನೂ ಸಾಯಿಸುತ್ತಾನೆ ಎಂಬ ಭೀತಿಯಿದೆ ಎಂದು ಆತನ ಕುಟುಂಬಸ್ಥರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಅಕ್ರಮ ಸಂಬಂಧ ಪ್ರಶ್ನಿಸಿದ್ದ ಪತಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪತ್ನಿ

    ಕೃತ್ಯ ನಡೆದು ಒಂದೇ ವಾರದಲ್ಲಿ ಆಗಿನ ಎಸ್‍ಐ ಜಯಂತ್ ಶೆಟ್ಟಿ ನೇತೃತ್ವದ ಪೊಲೀಸರು ಆರೋಪಿಯನ್ನು ಬಂಧಿಸಿದ್ದರು. ಹತ್ತಿರದ ಸಂಬಂಧಿಕರನ್ನೇ ಚಿನ್ನಕ್ಕಾಗಿ ಕೊಂದಿದ್ದ ಕ್ರೌರ್ಯಕ್ಕಾಗಿ ಆರೋಪಿಗೆ ಮಂಗಳೂರಿನ ಕೋರ್ಟ್ ಗಲ್ಲು ಶಿಕ್ಷೆ ವಿಧಿಸಿತ್ತು. ಗಲ್ಲು ಶಿಕ್ಷೆಯನ್ನು ಬಳಿಕ ಸುಪ್ರೀಂ ಕೋರ್ಟ್ ಜೀವಾವಧಿಗೆ ಇಳಿಸಿತ್ತು. ಇದೀಗ ಸನ್ನಡತೆ ಆಧಾರದಲ್ಲಿ ಪ್ರವೀಣ್‍ನನ್ನು ಬಿಡುಗಡೆಗೊಳಿಸಲಾಗುತ್ತಿದೆ ಎಂದು ಹೇಳಲಾಗಿದೆ. ಹೀಗಾಗಿ ಪ್ರವೀಣ್‍ನ ಹೆಂಡತಿ ಸೇರಿದಂತೆ ಕುಟುಂಬಸ್ಥರು ಮಂಗಳೂರಿನ ಪೊಲೀಸ್ ಕಮಿಷನರ್‌ ಶಶಿ ಕುಮಾರ್‌ರನ್ನು  ಭೇಟಿಯಾಗಿ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಜೈಲಿನಿಂದ ಆತ ಹೊರಬಂದಲ್ಲಿ ನಮ್ಮ ಜೀವಕ್ಕೂ ಅಪಾಯವಿದೆ. ಹಣ, ಆಸ್ತಿಗಾಗಿ ಆತ ಏನು ಮಾಡುವುದಕ್ಕೂ ಹೇಸದ ವ್ಯಕ್ತಿ ಎಂದು ಹೇಳಿದ್ದಾರೆ. ಹೀಗಾಗಿ ಪೊಲೀಸ್ ಕಮೀಷನರ್ ಸಂತ್ರಸ್ತರ ಹೇಳಿಕೆಗಳನ್ನು ಪಡೆದು ಪ್ರವೀಣ್‍ನ ಬಿಡುಗಡೆಗೆ ವಿರೋಧವಿದೆ ಎಂದು ವರದಿ ತಯಾರಿಸಿ ಸರ್ಕಾರಕ್ಕೆ ರವಾನಿಸಿದ್ದಾರೆ. ಇದನ್ನೂ ಓದಿ: ದೇವಸ್ಥಾನದ ಹಣ ಕದಿಯುವುದಕ್ಕೂ ಮುನ್ನ ದೇವಿ ವಿಗ್ರಹಕ್ಕೆ ನಮಸ್ಕರಿಸಿದ ಅರೆನಗ್ನ ಕಳ್ಳ

    ಆದರೆ ಬೆಳಗಾವಿ ಜೈಲಿನ ಅಧಿಕಾರಿಗಳು ಈಗಾಗಲೇ ಪ್ರವೀಣ್‍ನ ಬಿಡುಗಡೆ ಪ್ರಕ್ರಿಯೆ ಪೂರ್ಣಗೊಳಿಸಿದ್ದು, ಮತ್ತೆ ತಡೆ ಹೇರುತ್ತಾರೆಯೇ ಎನ್ನುವ ಬಗ್ಗೆ ಕುಟುಂಬಸ್ಥರಲ್ಲೂ ಆತಂಕ ಇದೆ.

    Live Tv
    [brid partner=56869869 player=32851 video=960834 autoplay=true]