Tag: ಪ್ರವೀಣ್‌ ಕುಮಾರ್‌ ನೆಟ್ಟಾರು

  • ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆ ಪ್ರಕರಣ – ಬೆಳ್ಳಾರೆ, ಸುಬ್ರಹ್ಮಣ್ಯ ಠಾಣಾ ಎಸ್‍ಐಗಳ ಎತ್ತಂಗಡಿ

    ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆ ಪ್ರಕರಣ – ಬೆಳ್ಳಾರೆ, ಸುಬ್ರಹ್ಮಣ್ಯ ಠಾಣಾ ಎಸ್‍ಐಗಳ ಎತ್ತಂಗಡಿ

    ಮಂಗಳೂರು: ಬಿಜೆಪಿ ಮುಖಂಡ ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆ ಪ್ರಕರಣದ ಬಳಿಕ ಪ್ರವೀಣ್‍ ಪಾರ್ಥಿವ ಶರೀರದ ಮೆರವಣಿಗೆ ವೇಳೆ ಅಂತಿಮ ನಮನ ಸಲ್ಲಿಸಲು ಆಗಮಿಸಿದ್ದ ಬಿಜೆಪಿ ಕಾರ್ಯಕರ್ತರಿಗೆ ಲಾಠಿ ಚಾರ್ಚ್ ಮಾಡಿದ ಪರಿಣಾಮ ಬೆಳ್ಳಾರೆ ಮತ್ತು ಸುಬ್ರಹ್ಮಣ್ಯ ಠಾಣಾ ಎಸ್‍ಐಗಳನ್ನು ವರ್ಗಾವಣೆಗೊಳಿಸಲಾಗಿದೆ.

    ಪ್ರವೀಣ್ ಪಾರ್ಥಿವ ಶರೀರದ ಮೆರವಣಿಗೆ ವೇಳೆ ಅಂತಿಮ ನಮನ ಸಲ್ಲಿಸಲು ಬಂದಿದ್ದ ಆರ್‌ಎಸ್‌ಎಸ್‌ನ ಹಿರಿಯ ಕಾರ್ಯಕರ್ತರೊಬ್ಬರ ಮೇಲೆ ಪೊಲೀಸರು ಲಾಠಿ ಬೀಸಿ ಹೆಲ್ಮೆಟ್‌ನಿಂದ ಹೊಡೆದಿದ್ದರು. ಆ ಬಳಿಕ ಬೆಳ್ಳಾರೆ, ಸುಬ್ರಹ್ಮಣ್ಯ ಠಾಣೆಯ ಎಸ್‍ಐ ಮತ್ತು ಇತರ ಪೊಲೀಸರನ್ನು ಅಮಾನತುಗೊಳಿಸಬೇಕೆಂದು ಕೂಗು ಕೇಳಿ ಬಂದಿತ್ತು. ಬಳಿಕ ಇದೀಗ ಇಬ್ಬರು ಎಸ್‍ಐ ಮತ್ತು ಸಿಬ್ಬಂದಿಯನ್ನು ವರ್ಗಾವಣೆಗೊಳಿಸಿ ಅವರ ಸ್ಥಾನಕ್ಕೆ ಇತರ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಇದನ್ನೂ ಓದಿ: ಸುರತ್ಕಲ್‌ನಲ್ಲಿ ಫಾಝಿಲ್‌ ಹತ್ಯೆ – 14 ಮಂದಿ ವಶಕ್ಕೆ

    ವಿಟ್ಲ ಠಾಣೆಯ ಪಿಎಸ್‍ಐ ಮಂಜುನಾಥ್ ಸುಬ್ರಹ್ಮಣ್ಯ ಠಾಣೆಗೆ, ಕುಂದಾಪುರ ಗ್ರಾಮಾಂತರ ಠಾಣೆಯ ಪಿಎಸ್‍ಐ ಸುಹಾನ್ ಆರ್. ಬೆಳ್ಳಾರೆ ಠಾಣೆಗೆ ವರ್ಗಾವಣೆಗೊಳಿಸಿ ಪೊಲೀಸ್ ಮಹಾ ನಿರೀಕ್ಷಕರಾದ ದೇವಜ್ಯೋತಿ ರೇ ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: ಕೊಲೆಗಳಾದಾಗ ಯಾವ ರೀತಿ ನಿಭಾಯಿಸಬೇಕು ಅಂತಾ ನಮಗೆ ಗೊತ್ತಿದೆ: ಬೊಮ್ಮಾಯಿ ಕಿಡಿ

    Live Tv
    [brid partner=56869869 player=32851 video=960834 autoplay=true]

  • ಬಿಜೆಪಿ ನಾಯಕರೇ ನಿಮ್ಮನ್ನು ಗೆಲ್ಲಿಸೋದು ಗೊತ್ತು, ಸೋಲಿಸೋದು ಗೊತ್ತು, ಬೆನ್ನಿಗೆ ಬಾರಿಸೋದು ಗೊತ್ತು: ಕಾರ್ಯಕರ್ತರ ಎಚ್ಚರಿಕೆ

    ಬಿಜೆಪಿ ನಾಯಕರೇ ನಿಮ್ಮನ್ನು ಗೆಲ್ಲಿಸೋದು ಗೊತ್ತು, ಸೋಲಿಸೋದು ಗೊತ್ತು, ಬೆನ್ನಿಗೆ ಬಾರಿಸೋದು ಗೊತ್ತು: ಕಾರ್ಯಕರ್ತರ ಎಚ್ಚರಿಕೆ

    ಚಿಕ್ಕಮಗಳೂರು: ಬಿಜೆಪಿ ನಾಯಕರೇ ನಿಮ್ಮನ್ನು ಗೆಲ್ಲಿಸೋದು ಗೊತ್ತು. ಸೋಲಿಸೋದು ಗೊತ್ತು. ನೀವು ಸರಿಯಾಗಿ ನಡೆದರೆ ಬೆನ್ನು ತಟ್ಟೋದು ಗೊತ್ತು. ದಾರಿ ತಪ್ಪಿದರೆ ಬೆನ್ನಿಗೆ ಬಾರಿಸೋದು ಗೊತ್ತು ಎನ್ನುವ ವಾಟ್ಸಾಪ್ ಸ್ಟೇಟಸ್ ಮಲೆನಾಡು ಭಾಗದಲ್ಲಿ ಭಾರೀ ಸದ್ದು ಮಾಡುತ್ತಿದೆ.

    ಸಾಮಾಜಿಕ ಜಾಲತಾಣದಲ್ಲಿ ಹೀಗೊಂದು ಸಂದೇಶ ಹಾಕುವ ಮೂಲಕ ಹಿಂದೂ ಕಾರ್ಯಕರ್ತರು ರಾಜಕೀಯ ನಾಯಕರಿಗೆ ಎಚ್ಚರಿಕೆ ನೀಡುತ್ತಿದ್ದಾರೆ. ವಾಟ್ಸಾಪ್ ಸ್ಟೇಟಸ್ ಹಾಕುತ್ತಿರುವ ಮಲೆನಾಡ ಹಿಂದೂ ಕಾರ್ಯಕರ್ತರು ಬಿಜೆಪಿ ರಾಜಕೀಯ ನಾಯಕರ ವಿರುದ್ಧ ಅಸಮಾಧಾನ ಹೊರ ಹಾಕುತ್ತಿದ್ದಾರೆ. ನಾವು ಹಿಂದೂ ಕಾರ್ಯಕರ್ತರು. ರಾಜಕೀಯವಾಗಿ ಬಿಜೆಪಿಗೆ ಮತ ನೀಡಿದ್ದೇವೆ. ಪಕ್ಷಕ್ಕಾಗಿ ಯಾವುದೇ ಲಾಭವಿಲ್ಲದೆ, ಪ್ರತಿಫಲಾಪೇಕ್ಷೆ ಇಲ್ಲದೆ ಪ್ರಚಾರ ಮಾಡುತ್ತಿದ್ದೇವೆ. ಹಾಗಾಂತ ನಾವು ಬಿಜೆಪಿ ನಾಯಕರ ಗುಲಾಮರಲ್ಲ. ನಮ್ಮ ನಿಷ್ಠೆ ಏನಿದ್ದರೂ ತತ್ವ-ಸಿದ್ಧಾಂತಕ್ಕೆ ಮಾತ್ರ ಎಂದು ಎಚ್ಚರಿಕೆ ರವಾನಿಸಿದ್ದಾರೆ. ಇದನ್ನೂ ಓದಿ: ನನ್ನ ಪತಿ ಏನು ತಪ್ಪು ಮಾಡಿದ್ದಾರೆಂದು ಪ್ರೂಫ್ ಕೊಡಿ: ಬಂಧಿತ ಝಾಕೀರ್ ಪತ್ನಿ ಅಲಳು

    ಮಂಗಳೂರಿನ ಬಿಜೆಪಿ ಯುವ ಮುಖಂಡ ಪ್ರವೀಣ್ ಹತ್ಯೆ ಬಳಿಕ ಹಿಂದೂ ಕಾರ್ಯಕರ್ತರು ಸರ್ಕಾರ ಹಾಗೂ ಬಿಜೆಪಿ ನಾಯಕರ ವಿರುದ್ಧ ಬಹಿರಂಗವಾಗಿ ಆಕ್ರೋಶ ಹೊರಹಾಕಿದ್ದಾರೆ. ಮಲೆನಾಡಿನಾದ್ಯಂತ ನೂರಾರು ಕಾರ್ಯಕರ್ತರು ಪಕ್ಷದ ಪದಾಧಿಕಾರಿಗಳ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಪ್ರತಿ ಬಾರಿ ಹಿಂದೂ ಕಾರ್ಯಕರ್ತರು ಕೊಲೆಯಾದಾಗಲೂ ಸರ್ಕಾರ ಆರೋಪಿಗಳನ್ನು ಕೂಡಲೇ ಬಂಧಿಸುತ್ತೇವೆ. ಸರ್ಕಾರ ಕಠಿಣ ಕಾನೂನು ಕ್ರಮ ಕೈಗೊಳ್ಳುತ್ತದೆ ಎಂದು ಹೇಳುತ್ತಲೇ ಬಂದಿದೆ. ಆದರೆ, ಆರೋಪಿಗೆ ಕಠಿಣ ಶಿಕ್ಷೆ ಆಗಿಲ್ಲ. ಶಿವಮೊಗ್ಗದ ಹಿಂದೂ ಕಾರ್ಯಕರ್ತ ಹರ್ಷನನ್ನು ಕೊಂದವರಿಗೆ ಜೈಲಿನಲ್ಲಿ ರಾಜಾಥಿತ್ಯ ಸಿಗುತ್ತಿದೆ. ಸರ್ಕಾರದ ಕಠಿಣ ಕಾನೂನು ಕ್ರಮಕ್ಕೆ ಸಿದ್ಧ ಹೇಳಿಕೆಯಿಂದ ನೊಂದಿರುವ ಹಿಂದೂ ಪರ ಸಂಘಟನೆ ಕಾರ್ಯಕರ್ತರು ಈ ರೀತಿಯಾಗಿ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕುತ್ತಿದ್ದಾರೆ. ಕೆಲ ಕಾರ್ಯಕರ್ತರು ಪ್ರವೀಣ್ ಸಾವಿಗೆ ಸೂಕ್ತ ನ್ಯಾಯ ಸಿಗುವವರೆಗೂ ಪಕ್ಷದ ಯಾವುದೇ ಕಾರ್ಯಕ್ರಮದಲ್ಲೂ ಭಾಗಿಯಾಗಬಾರದೆಂದು ತೀರ್ಮಾನಿಸಿದ್ದಾರೆ. ಇದನ್ನೂ ಓದಿ: ಸಿಎಂ ನೋಡಲು ಡಿಸೆಂಟ್ ಆದರೆ, ನಿರ್ಣಯಗಳು ತುಂಬಾ ಸ್ಟ್ರಾಂಗ್: ಸುಧಾಕರ್

    Live Tv
    [brid partner=56869869 player=32851 video=960834 autoplay=true]

  • ನನ್ನ ಪತಿ ಏನು ತಪ್ಪು ಮಾಡಿದ್ದಾರೆಂದು ಪ್ರೂಫ್ ಕೊಡಿ: ಬಂಧಿತ ಝಾಕೀರ್ ಪತ್ನಿ ಕಣ್ಣೀರು

    ನನ್ನ ಪತಿ ಏನು ತಪ್ಪು ಮಾಡಿದ್ದಾರೆಂದು ಪ್ರೂಫ್ ಕೊಡಿ: ಬಂಧಿತ ಝಾಕೀರ್ ಪತ್ನಿ ಕಣ್ಣೀರು

    ಮಂಗಳೂರು: ನನ್ನ ಪತಿ ಏನು ತಪ್ಪು ಮಾಡಿದ್ದಾರೆಂದು ಪ್ರೂಫ್ ಕೊಡಿ, ನಂತರ ಅವರನ್ನು ಅರೆಸ್ಟ್ ಮಾಡಿ ಎಂದು ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆ ಸಂಬಂಧ ಬಂಧಿತನಾಗಿರುವ ಝಾಕೀರ್ ಪತ್ನಿ ತಸ್ರಿಫಾ ಕಣ್ಣೀರು ಹಾಕಿದ್ದಾರೆ.

    ಪಬ್ಲಿಕ್ ಟಿವಿ ಜೊತೆ ಮಾತನಾಡಿ ಪೊಲೀಸರ ವಿರುದ್ಧ ಆಕ್ರೋಶ ಹೊರಹಾಕಿದ ಅವರು, ನನ್ನ ಪತಿಯನ್ನು ಬಿಟ್ಟು ಬಿಡಿ. ನನ್ನ ಗಂಡ ಯಾವುದೇ ತಪ್ಪು ಮಾಡಿಲ್ಲ. ನನ್ನ ಗಂಡ ಝಾಕೀರ್ ನಿರಪರಾಧಿ ಎಂದು ಗೋಳಾಡಿದ್ದಾರೆ.

    ನನ್ನ ಗಂಡನನ್ನು ನನಗೆ ಬಿಟ್ಟುಕೊಡಿ. ನನ್ನ ಗಂಡನನ್ನು ಯಾಕೆ ಜೈಲಿನಲ್ಲಿ ಇಟ್ಟಿದ್ದೀರಿ. ನನ್ನ ಗಂಡ ಏನು ತಪ್ಪು ಮಾಡಿದ್ದಾರೆ ಎಂದು ಪ್ರೂಫ್ ಕೊಡಿ. ಪ್ರೂಫ್ ಕೊಟ್ಟು ನನ್ನ ಗಂಡನನ್ನು ಅರೆಸ್ಟ್ ಮಾಡಿ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಪ್ರವೀಣ್ ಹತ್ಯೆ ಕೇಸ್ – ತಪ್ಪು ಮಾಹಿತಿಯಿಂದ ನಡೀತಾ ಕೊಲೆ?

    ನಿನ್ನೆ ಇನ್ನೊಬ್ಬ ಬಂಧಿತ ಶಫೀಕ್ ಪತ್ನಿ ಮಾತನಾಡಿ, ಶಫೀಕ್ ಅಮಾಯಕ. ಆತನನ್ನ ಅರೆಸ್ಟ್ ಮಾಡಲಾಗಿದೆ. ಆತ ಪಿಎಫ್‍ಐ, ಎಸ್‍ಡಿಪಿಐನಲ್ಲಿ ಸಕ್ರಿಯನಾಗಿದ್ದ. ಹಾಗಂತ ಆತ ಆರೋಪಿಯಲ್ಲ. ನಿಜವಾದ ಆರೋಪಿಯನ್ನು ಬಂಧಿಸಿ ಶಫೀಕ್ ನನ್ನ ಬಿಟ್ಟು ಬಿಡಿ ಆತ ಅಪರಾಧಿಯಲ್ಲ ಎಂದು ಮನವಿ ಮಾಡಿಕೊಂಡಿದ್ದರು.

    ಮಂಗಳವಾರ ರಾತ್ರಿ ಪ್ರವೀಣ್ ಕುಮಾರ್ ನೆಟ್ಟಾರು ದುಷ್ಕರ್ಮಿಗಳ ಕೈಯಲ್ಲಿ ಭೀಕರವಾಗಿ ಹತ್ಯೆಯಾಗಿದ್ದರು. ಬಳಿಕ ಕರಾವಳಿಯಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿತ್ತು. ಈ ಹಿನ್ನೆಲೆ ಪೊಲೀಸರು ಎಲ್ಲಾ ಆಯಾಮಗಳಿಂದ ತನಿಖೆ ನಡೆಸಿ ಇಬ್ಬರು ಪ್ರಮುಖ ಆರೋಪಿಗಳಾದ ಸವಣೂರು ಮೂಲದ ಝಾಕೀರ್ ಮತ್ತು ಶಫೀಕ್ ಬೆಳ್ಳಾರೆಯನ್ನು ಬಂಧಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಬಿಜೆಪಿ ಕಾರ್ಯಕರ್ತರ ಆಕ್ರೋಶ – ಕರಾವಳಿ ಬಿಜೆಪಿಗರ ಟ್ರ್ಯಾಕ್ ರೆಕಾರ್ಡ್ ತರಿಸಿದ ಹೈಕಮಾಂಡ್

    ಬಿಜೆಪಿ ಕಾರ್ಯಕರ್ತರ ಆಕ್ರೋಶ – ಕರಾವಳಿ ಬಿಜೆಪಿಗರ ಟ್ರ್ಯಾಕ್ ರೆಕಾರ್ಡ್ ತರಿಸಿದ ಹೈಕಮಾಂಡ್

    ಬೆಂಗಳೂರು: ಬಿಜೆಪಿ ಮುಖಂಡ ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆಯ ಬಳಿಕ ದೇಶದಲ್ಲಿ ಅಪರೂಪ ಎಂಬಂತೆ ಕರಾವಳಿಯ ಬಿಜೆಪಿ ಕಾರ್ಯಕರ್ತರು ರೊಚ್ಚಿಗೆದ್ದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಘಟನೆಯಿಂದ ಹೈಕಮಾಂಡ್ ವಿಚಲಿತಗೊಂಡಿದೆ.

    ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆಯ ಬಳಿಕ ಬೆಳ್ಳಾರೆಗೆ ಅಂತಿಮ ದರ್ಶನಕ್ಕೆ ತೆರಳಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಚಿವರಾದ ಸುನಿಲ್ ಕುಮಾರ್, ಎಸ್. ಅಂಗಾರ ಸೇರಿದಂತೆ ಇತರ ಸಚಿವರಿಗೆ ಘೇರಾವ್, ಕಾರನ್ನೇ ಪಲ್ಟಿ ಹಾಕುವಷ್ಟರ ಮಟ್ಟಿಗೆ ಕಾರ್ಯಕರ್ತರ ಆಕ್ರೋಶದ ಬಗ್ಗೆ ರಾಜ್ಯ ಬಿಜೆಪಿ ಘಟಕದಿಂದ ವೀಡಿಯೋ ಸಮೇತ ಹೈಕಮಾಂಡ್ ವರದಿ ತರಿಸಿಕೊಂಡಿದೆ. ಇದೇ ವೇಳೆ ಕರಾವಳಿ ಭಾಗದ ಹಾಲಿ ಬಿಜೆಪಿ ಶಾಸಕರು, ಸಚಿವರು, ಬಿಜೆಪಿ ನಾಯಕರ ಟ್ರ್ಯಾಕ್ ರೆಕಾರ್ಡ್ ಕೂಡ ಬಿಜೆಪಿ ಹೈಕಮಾಂಡ್ ತರಿಸಿಕೊಂಡಿದೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಆರಗ ಜ್ಞಾನೇಂದ್ರರನ್ನು ಕಿತ್ತುಹಾಕದೆ ಇದ್ದರೆ ರಾಜ್ಯದಲ್ಲಿ ಜನ ಮನೆಯಿಂದ ಹೊರಗೆ ಬರುವುದೂ ಕಷ್ಟ: ಸಿದ್ದರಾಮಯ್ಯ

    ಇನ್ನೊಂದೆಡೆ ದಕ್ಷಿಣ ಕನ್ನಡ ಸೇರಿದಂತೆ ರಾಜ್ಯಾದ್ಯಂತ ಪ್ರವೀಣ್ ಹತ್ಯೆ ಖಂಡಿಸಿ ರಾಜೀನಾಮೆ ಪರ್ವ ಮುಂದುವರಿದಿದೆ. ಇದುವರೆಗೆ 300ಕ್ಕೂ ಹೆಚ್ಚು ಕಾರ್ಯಕರ್ತರು ರಾಜೀನಾಮೆ ನೀಡಿದ್ದಾರೆ. ಪಕ್ಷದ ನಾಯಕರ ವಿರುದ್ಧ ಕಾರ್ಯಕರ್ತರ ಅಸಮಾಧಾನ ಮುಂದುವರಿದಿದೆ. ಅಂದು ಬಿಜೆಪಿ ಪಕ್ಷಕ್ಕೆ ಜೈಕಾರ ಹಾಕುತ್ತಿದ್ದ ಬಿಜೆಪಿ ಕಾರ್ಯಕರ್ತರು ಇಂದು ಪಕ್ಷದ ವಿರುದ್ಧವೇ ಧಿಕ್ಕಾರ ಕೂಗುವಂತಾ ಪರಿಸ್ಥಿತಿ ಕರ್ನಾಟಕದಲ್ಲಿ ನಿರ್ಮಾಣವಾಗಿದೆ. ಇದನ್ನೂ ಓದಿ: ಪ್ರವೀಣ್ ಹತ್ಯೆ ಕೇಸ್ – ತಪ್ಪು ಮಾಹಿತಿಯಿಂದ ನಡೀತಾ ಕೊಲೆ?

    ಬಿಜೆಪಿಯಲ್ಲಿ ಪಕ್ಷದ ನಾಯಕರ ಧೋರಣೆಗೆ ಬೇಸತ್ತು ಹೋದ ಕಾರ್ಯಕರ್ತರು ಸಾಕು ಈ ಬಾರಿ ತಳಮಟ್ಟದ ಕಾರ್ಯಕರ್ತರಿಗೆ ಟಿಕೆಟ್ ಕೊಡಿ. ನಾವು ಬಿಜೆಪಿ ಇಮೇಜ್ ಬದಲಾಯಿಸುತ್ತೇವೆ. ನಿಮ್ಮ ಮೇಲೆ ಈಗ ನಂಬಿಕೆ ನಿಧಾನವಾಗಿ ಕರಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಜೆಪಿಯ ಭದ್ರ ಕೋಟೆಯಾಗಿ ಗುರುತಿಸಿಕೊಂಡಿದ್ದ ಕರಾವಳಿಯಲ್ಲಿ ಕಾರ್ಯಕರ್ತರೇ ಬಿಜೆಪಿ ನಾಯಕರ ವಿರುದ್ಧ ಕೆಂಡಕಾರಿದ್ದಾರೆ. ಕರಾವಳಿಯ ಕೇಸರಿ ಯುವ ಪಡೆಯ ಆಕ್ರೋಶದ ಕಿಚ್ಚು ಸದ್ದು ಮಾಡುತ್ತಿದೆ. ಇದರಿಂದ ಮುಂದಿನ ದಿನಗಳಲ್ಲಿ ಬಿಜೆಪಿಗೆ ಇದು ಹೊಡೆತ ಬೀಳುವ ಸಾಧ್ಯತೆ ಇದೆ. ಜೊತೆಗೆ ಚುನಾವಣೆ ಹತ್ತಿರದಲ್ಲಿರುವುದರಿಂದ ಈ ಬಗ್ಗೆ ಹೈಕಮಾಂಡ್ ಗಂಭೀರವಾಗಿ ಚಿಂತನೆ ನಡೆಸಿದೆ.

    Live Tv
    [brid partner=56869869 player=32851 video=960834 autoplay=true]

  • ಪ್ರವೀಣ್ ಹತ್ಯೆ ಕೇಸ್ – ತಪ್ಪು ಮಾಹಿತಿಯಿಂದ ನಡೀತಾ ಕೊಲೆ?

    ಪ್ರವೀಣ್ ಹತ್ಯೆ ಕೇಸ್ – ತಪ್ಪು ಮಾಹಿತಿಯಿಂದ ನಡೀತಾ ಕೊಲೆ?

    ಮಂಗಳೂರು: ಕರಾವಳಿಯನ್ನೇ ಬೆಚ್ಚಿಬೀಳಿಸಿದ್ದ ಬಿಜೆಪಿ ಮುಖಂಡ ಪ್ರವೀಣ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸರ ವಿಚಾರಣೆ ವೇಳೆ ಬಂಧಿತ ಆರೋಪಿಗಳು ಹತ್ಯೆಗೆ ನಡೆದಿದ್ದ ಪ್ಲಾನ್ ಬಗ್ಗೆ ಮಾಹಿತಿ ನೀಡಿದ್ದಾರೆ ಎಂದು ವರದಿಯಾಗಿದೆ.

    ಶಫೀಕ್ ಮತ್ತು ಝಾಕೀರ್ ಇಬ್ಬರು ಬಂಧಿತರು. ಹತ್ಯೆಗೆ ನಿಜವಾದ ಕಾರಣರಾದ ಹಂತಕರ ಬಂಧನವಾಗಿಲ್ಲ. ಹಂತಕರಿಗಾಗಿ ಪೊಲೀಸರ ತಂಡ ರಚಿಸಿದ್ದು. ಐಪಿಎಸ್ ಅಧಿಕಾರಿ ನೇತೃತ್ವದ ತಂಡ ಕೇರಳದಲ್ಲಿ ಬೀಡುಬಿಟ್ಟಿದೆ. ಮಾಹಿತಿಯ ಪ್ರಕಾರ ಇಬ್ಬರು ಶಂಕಿತರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎನ್ನಲಾಗಿದೆ. ಶಫೀಕ್ ಮಾಹಿತಿ ಆಧರಿಸಿ ಕೇರಳದ ಗ್ರಾಮವೊಂದರಲ್ಲಿ ಇಬ್ಬರು ಶಂಕಿತರ ವಶಕ್ಕೆ ಪಡೆಯಲಾಗಿದೆ. ಇವರೇ ಆ ಹಂತಕರು ಎನ್ನುವುದು ಸ್ಪಷ್ಟವಾಗಬೇಕಿದೆ. ಸದ್ಯ ಬಂಧಿತ ಶಫೀಕ್ ಮತ್ತು ಝಾಕೀರ್ ಹತ್ಯೆಗೆ ಸಹಾಯ ಮಾಡಿದವರಾಗಿದ್ದು, ಹಂತಕರು ತಪ್ಪಿಸಿಕೊಳ್ಳಲು ದಾರಿ ತೋರಿಸಿದವರಾಗಿದ್ದಾರೆ. ವಿಚಾರಣೆ ವೇಳೆ ಇದನ್ನು ಒಪ್ಪಿಕೊಂಡಿದ್ದಾರೆ. ಇದನ್ನೂ ಓದಿ: ಪ್ರವೀಣ್ ಹತ್ಯೆಗೆ ರಾಜಸ್ಥಾನ ಸಿಎಂ ಖಂಡನೆ

    ಇಬ್ಬರಿಗೂ ಆಗಸ್ಟ್ 11ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಅಗತ್ಯವಿದ್ದರೆ ಅವರನ್ನು ಪೊಲೀಸ್ ಕಸ್ಟಡಿಗೆ ಪಡೆದು ವಿಚಾರಣೆ ನಡೆಸುವುದಾಗಿ ಪೊಲೀಸರು ಹೇಳಿದ್ದಾರೆ. ಈ ನಡುವೆ ಸಿಸಿಟಿವಿ ದೃಶ್ಯವೊಂದು ಸಿಕ್ಕಿದ್ದು ಅದರಿಂದ ಭಯಾನಕ ಸತ್ಯ ಹೊರಬಿದ್ದಿದೆ. ಆರೋಪಿಗಳಲ್ಲಿ ಒಬ್ಬನಾದ ಶಫೀಕ್ ವ್ಯಕ್ತಿಯೊಬ್ಬನನ್ನು ದ್ವಿಚಕ್ರ ವಾಹನದಲ್ಲಿ ಕರೆದುಕೊಂಡು ಬಂದು ಬೆಳ್ಳಾರೆಯ ಕೋಳಿ ವ್ಯಾಪಾರಿ ಪೃಥ್ವಿರಾಜ್‍ನನ್ನು ದೂರದಿಂದಲೇ ತೋರಿಸಿ ಹೋಗಿದ್ದಾನೆ. ಆದರೆ, ಪೃಥ್ವಿರಾಜ್ ಬದಲಿಗೆ ಪ್ರವೀಣ್ ಹತ್ಯೆ ಆಗಿದ್ದು, ಪ್ರವೀಣ್ ಹತ್ಯೆ ಹಿಂದೆ ಯಾರ ಕೈವಾಡವಿದೆ? ಪೃಥ್ವಿರಾಜ್‍ನನ್ನು ಕೊಲೆ ಮಾಡಲು ಬಂದು ಪ್ರವೀಣ್‍ನ ಕಥೆ ಮುಗಿಸಿದ್ರಾ? ತಪ್ಪು ಮಾಹಿತಿಯಿಂದ ಈ ಕೊಲೆ ನಡೀತಾ? ಹೀಗೆ ಸಾಲು, ಸಾಲು ಪ್ರಶ್ನೆಗಳು ಎದುರಾಗಿದೆ. ಈ ಎಲ್ಲ ಆಯಾಮಗಳಲ್ಲೂ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಇದನ್ನೂ ಓದಿ: ಪ್ರವೀಣ್ ಕುಟುಂಬಕ್ಕೆ 50 ಲಕ್ಷ ಪರಿಹಾರ ವಿತರಣೆ

    Live Tv
    [brid partner=56869869 player=32851 video=960834 autoplay=true]

  • ಪ್ರವೀಣ್ ಕುಟುಂಬಕ್ಕೆ 50 ಲಕ್ಷ ಪರಿಹಾರ ವಿತರಣೆ

    ಪ್ರವೀಣ್ ಕುಟುಂಬಕ್ಕೆ 50 ಲಕ್ಷ ಪರಿಹಾರ ವಿತರಣೆ

    ಮಂಗಳೂರು: ಹತ್ಯೆಯಾದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ 25 ಲಕ್ಷ ಹಾಗೂ ಬಿಜೆಪಿ ಪಕ್ಷದಿಂದ 25 ಲಕ್ಷ ಸೇರಿ ಒಟ್ಟು 50 ಲಕ್ಷ ರೂ. ಪರಿಹಾರ ಘೋಷಿಸಿದಂತೆ, ಕುಟುಂಬಸ್ಥರಿಗೆ ಪರಿಹಾರ ಚೆಕ್ ವಿತರಣೆ ಮಾಡಲಾಗಿದೆ.

    ಸರ್ಕಾರದ ವತಿಯಿಂದ 25 ಲಕ್ಷ, ಬಿಜೆಪಿ ವತಿಯಿಂದ 25 ಲಕ್ಷ ರೂ.ಗಳ ಚೆಕ್ ಅನ್ನು ಪ್ರವೀಣ್ ಪತ್ನಿಗೆ ನೀಡಲಾಗಿದೆ. ಸಿಎಂ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಲಾ 25 ಲಕ್ಷ ರೂ.ಗಳ ಪರಿಹಾರ ಚೆಕ್ ವಿತರಣೆ ಮಾಡಿದ್ದಾರೆ. ಇದನ್ನೂ ಓದಿ: ಪ್ರವೀಣ್ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದ ಬೊಮ್ಮಾಯಿ

    ಬೆಳ್ಳಾರೆಯ ಮೃತ ಪ್ರವೀಣ್ ಮನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ ನೀಡಿದ್ದು, ಪ್ರವೀಣ್ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದ್ದಾರೆ. ಬಳಿಕ ಮಾತನಾಡಿದ ಸಿಎಂ, ಪ್ರವೀಣ್ ತಮ್ಮ ಕುಟುಂಬಕ್ಕೆ ಆಧಾರವಾಗಿದ್ದು, ಚಿಕ್ಕ ಅಂಗಡಿಯೇ ಆದಾಯದ ಮೂಲವಾಗಿತ್ತು. ಸರ್ಕಾರದ ವತಿಯಿಂದ ಪರಿಹಾರ ನಿಧಿಯಿಂದ 25 ಲಕ್ಷ ಪರಿಹಾರ ಹಾಗೂ ಬಿಜೆಪಿ ವತಿಯಿಂದ 25 ಲಕ್ಷ ರೂ.ಗಳನ್ನ ಪರಿಹಾರವಾಗಿ ನೀಡಲಾಗಿದೆ. ಪ್ರವೀಣ್ ಕುಟುಂಬದವರಿಗೆ ಪಕ್ಷ ಮತ್ತು ಸರ್ಕಾರದ ವತಿಯಿಂದ ಎಲ್ಲ ರೀತಿಯ ಸಹಕಾರ ನೀಡಲಾಗುತ್ತದೆ. ಕೊಲೆಪ್ರಕರಣ ಬೇಧಿಸುವವರೆಗೆ ಅಕ್ಷರಶಃ ದಣಿವಿಲ್ಲದೇ ಕ್ರಮ ವಹಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.

    ಪ್ರವೀಣ್ ಕೊಲೆಗೈದವರಿಗೆ ಶಿಕ್ಷೆಯಾದಾಗ ಮಾತ್ರ ಆತ್ಮಕ್ಕೆ ಶಾಂತಿ ದೊರಕಲಿದೆ. ಪ್ರವೀಣ್ ಕುಟುಂಬದವರೂ ಇದೇ ಮಾತು ಹೇಳಿದ್ದಾರೆ. ಇನ್ನೆಂದೂ ಈ ರೀತಿ ಯಾರಿಗೂ ಆಗಬಾರದು. ಇದರ ಹಿಂದಿರುವ ಸಂಘಟನೆಗಳ ವಿರುದ್ಧವೂ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಮನವಿ ಮಾಡಿದ್ದಾರೆ. ಕಟುಕರಿಗೆ ಶಿಕ್ಷೆ ಆಗುವ ಕೆಲಸವನ್ನು ಕಟ್ಟುನಿಟ್ಟಾಗಿ ಮಾಡುತ್ತೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ತಮಿಳಿನ ನಟ ಜಿ.ಎಂ ಕುಮಾರ್ ಆಸ್ಪತ್ರೆಗೆ ದಾಖಲು

    ಇದು ಯೋಜನಾಬದ್ಧವಾದ ಭಯೋತ್ಪಾದಕ ಕೃತ್ಯ: ಇದೊಂದು ಪೂರ್ವಯೋಜಿತ ಕೃತ್ಯ ಎಂದು ಮೇಲ್ನೋಟಕ್ಕೆ ತಿಳಿಯುತ್ತದೆ. ಮೊನ್ನೆ ನಡೆದ ಪ್ರವೀಣ್ ಹತ್ಯೆ ಪ್ರಕರಣ ಖಂಡನೀಯ. ಕಳೆದ 10 ವರ್ಷಗಳಲ್ಲಿ ಈ ಭಾಗದಲ್ಲಿ ಇಂತಹ ಚಟುವಟಿಕೆಗಳು ನಡೆಯುತ್ತಿವೆ. ಸಮಾಜಘಾತುಕ ಶಕ್ತಿಗಳು ಬೆಂಬಲ ನೀಡಿರುವುದರಿಂದ ನಿರ್ಭೀತಿಯಿಂದ ಈ ಘಟನೆ ನಡೆಸಲಾಗಿದೆ. ಇದನ್ನು ನಾವು ಕೊಲೆ ಪ್ರಕರಣವಾಗಿ ನೋಡುತ್ತಿಲ್ಲ. ದೇಶವನ್ನು ಛಿದ್ರ ಮಾಡುವ ಯೋಜನಾಬದ್ಧವಾದ ಭಯೋತ್ಪಾದಕ ಕೃತ್ಯ ಎಂದು ಪರಿಗಣಿಸಲಾಗಿದೆ. ತನಿಖೆ ಪ್ರಾರಂಭವಾಗಿದೆ. ಆರೋಪಿಗಳು ರಾಜ್ಯದ ಗಡಿ ದಾಟಿರಬಹುದು. ಈ ಎಲ್ಲ ಆಯಾಮದಲ್ಲಿ ತನಿಖೆ ಮಾಡಲಾಗುತ್ತಿದೆ. ಕೆಲವರನ್ನು ವಶಕ್ಕೆ ತೆಗೆದುಕೊಂಡು, ಅವರಿಂದ ಪಡೆದ ಮಾಹಿತಿಯಿಂದ ತನಿಖೆ ಮುಂದುವರಿಯಲಿದೆ. ಅತಿ ಶೀಘ್ರದಲ್ಲಿ ಆರೋಪಿಗಳನ್ನು ಬಂಧಿಸಲಾಗುವುದು ಎಂಬ ವಿಶ್ವಾಸವಿದೆ. ಎಡಿಜಿಪಿ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ. ಕಳೆದ ಹಲವಾರು ವರ್ಷಗಳಿಂದ ದುಷ್ಕೃತ್ಯಗಳಲ್ಲಿ ತೊಡಗಿಕೊಂಡಿರುವ ಸಮಾಜಘಾತುಕ ಶಕ್ತಿಗಳ ಜಾಡು ಹಿಡಿದು, ಈ ದಿಸೆಯಲ್ಲಿಯೂ ತನಿಖೆ ಕೈಗೊಂಡು ಹಿಂದಿರುವ ಸಂಘಟನೆಗಳನ್ನು ಗಮನಿಸುತ್ತಿದ್ದೇವೆ ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಪ್ರವೀಣ್ ಹತ್ಯೆ ಬಳಿಕ ನಮ್ಮ ನಾಯಕರು ತಲೆಯೆತ್ತಿ ಓಡಾಡೋಕೆ ಆಗ್ತಿಲ್ಲ – ವಿಜಯೇಂದ್ರ

    ಕರ್ನಾಟಕಕ್ಕೆ ಎನ್‌ಐಎ ಅಗತ್ಯವಿದೆ: ಕರ್ನಾಟಕ ರಾಜ್ಯಕ್ಕೆ ರಾಷ್ಟ್ರೀಯ ತನಿಖಾ ದಳವನ್ನು ಕಳುಹಿಸಲು ಕೋರಲಾಗಿದೆ. ವಿಶೇಷವಾಗಿ ಮಂಗಳೂರು ಭಾಗಕ್ಕೆ ಎನ್‌ಐಎ ಅವಶ್ಯಕತೆಯಿದೆ ಎಂದು ಕೇಂದ್ರ ಸರ್ಕಾರಕ್ಕೆ ಆಗ್ರಹಿಸಲಾಗಿದೆ. ಪ್ರಾಥಮಿಕ ತನಿಖಾ ವರದಿಯ ಆಧಾರವಾಗಿ ಹೆಚ್ಚುವರಿ ತನಿಖೆಯ ಅವಶ್ಯಕತೆ ಇದ್ದಲ್ಲಿ ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಲಾಗುವುದು. ಈ ಘಟನೆಗೆ ಬೆಂಬಲ ನೀಡಿರುವ ಬಗ್ಗೆಯೂ ತನಿಖೆ ನಡೆಸಿ, ಈ ಕುಕೃತ್ಯದಲ್ಲಿ ಭಾಗಿಯಾಗಿರುವ ಎಲ್ಲ ಜಾಲವನ್ನು ಭೇದಿಸಲಾಗುವುದು. ಪಿಎಫ್‌ಐ ಬ್ಯಾನ್ ಮಾಡಲು ಕ್ರಮಗಳು ಪ್ರಾರಂಭವಾಗಿದೆ. ಈ ರೀತಿಯ ದುಷ್ಕೃತ್ಯಗಳು ಭಾರತದ ವಿವಿಧ ರಾಜ್ಯಗಳಲ್ಲಿ ನಡೆದಿದ್ದು, ದೇಶದ ಮಟ್ಟದಲ್ಲಿ ಸರಿಯಾದ ಕ್ರಮವನ್ನು ಕೇಂದ್ರ ಸರ್ಕಾರ ತೆಗೆದುಕೊಳ್ಳಲಿದೆ ಎಂಬ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ.

    ಮಸೂದ್ ಹತ್ಯೆ ಹಾಗೂ ಪ್ರವೀಣ್ ಹತ್ಯೆಗೂ ಸಂಬಂಧವಿದೆಯೇ ಅನ್ನೋ ಬಗ್ಗೆ ತನಿಖೆಯಿಂದ ತಿಳಿಯಲಿದೆ. ಪೊಲೀಸ್ ಅಧಿಕಾರಿಗಳ ಕರ್ತವ್ಯ ವೈಫಲ್ಯವಾಗಿದ್ದರೆ ಅದನ್ನೂ ತನಿಖೆಗೆ ಒಳಪಡಿಸಲಾಗುವುದು ಎಂದು ಎಚ್ಚರಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಪ್ರವೀಣ್ ಹತ್ಯೆ ಪ್ರಕರಣ- ಬಂಧಿತ ಕೆಲಸ ಮಾಡುತ್ತಿದ್ದ ಅಂಗಡಿಗೆ ಮುತ್ತಿಗೆ

    ಪ್ರವೀಣ್ ಹತ್ಯೆ ಪ್ರಕರಣ- ಬಂಧಿತ ಕೆಲಸ ಮಾಡುತ್ತಿದ್ದ ಅಂಗಡಿಗೆ ಮುತ್ತಿಗೆ

    ಮಂಗಳೂರು: ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಬಂಧಿತ ಕೆಲಸ ಮಾಡುತ್ತಿದ್ದ ಅಂಗಡಿಗೆ ಮುತ್ತಿಗೆ ಹಾಕಿದ ಪ್ರಸಂಗ ನಡೆದಿದೆ.

    ದಕ್ಷಿಣಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಗುತ್ತಿಗಾರು ಎಂಬಲ್ಲಿ ಆರೋಪಿ ಶಫೀಕ್ ಬೆಳ್ಳಾರೆ ಕೆಲಸ ಮಾಡುತ್ತಿದ್ದ. ಇದೀಗ ಈತನ ಬಂಧನವಾಗುತ್ತಿದ್ದಂತೆಯೇ ಸಾರ್ವಜನಿಕರು ಅಡಿಕೆ ಅಂಗಡಿಗೆ ಮುತ್ತಿಗೆ ಹಾಕಿ ಆಕ್ರೋಶ ಹೊರಹಾಕಿದ್ದಾರೆ. ಸಾರ್ವಜನಿಕರು ಅಂಗಡಿಗೆ ಮುತ್ತಿಗೆ ಹಾಕುತ್ತಿದ್ದಂತೆಯೇ ಪೊಲೀಸರು ಮಧ್ಯಪ್ರವೇಶ ಮಾಡಿದ್ದಾರೆ. ಈ ವೇಳೆ ಮಾಲೀಕ ಅಂಗಡಿಗೆ ಬೀಗ ಹಾಕಿ ತೆರಳಿದರು. ಇದನ್ನೂ ಓದಿ: ನಿಜವಾದ ಆರೋಪಿಯನ್ನು ಬಂಧಿಸಿ ನನ್ನ ಪತಿಯನ್ನು ಬಿಟ್ಟುಬಿಡಿ: ಶಫೀಕ್ ಪತ್ನಿ ಅನ್ಶಿಫಾ

    ಪ್ರವೀಣ್ ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ. ಸವಣೂರು ಮೂಲದ ಝಾಕೀರ್ (29) ಮತ್ತು ಶಫೀಕ್ ಬೆಳ್ಳಾರೆ(27) ಬಂಧಿತ ಆರೋಪಿಗಳು. ಝಾಕೀರ್ ಸವಣೂರು ಎಸ್‍ಡಿಪಿಐ ಗ್ರಾಮ ಸಮಿತಿ ಮುಖಂಡನಾಗಿದ್ದು, ಶಫೀಕ್ ಎಸ್‍ಡಿಪಿಐ ಪಕ್ಷದ ಸಕ್ರೀಯ ಕಾರ್ಯಕರ್ತ. ಬೆಳ್ಳಾರೆ, ಸುಳ್ಯದಲ್ಲಿ ಪಕ್ಷ ಸಂಘಟನೆ ಮಾಡುತ್ತಿದ್ದ. ಇದನ್ನೂ ಓದಿ: ಪ್ರವೀಣ್‌ ಹಂತಕರನ್ನು ಕೇರಳ ಗಡಿಯವರೆಗೆ ಕಳುಹಿಸಿ ಕೊಟ್ಟಿದ್ದೇವೆ: ಬಂಧಿತ ಆರೋಪಿಗಳು

    ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ಪೆರುವಾಜೆ ಕ್ರಾಸ್ ಬಳಿ ಅಕ್ಷಯ್ ಹೆಸರಿನ ಕೋಳಿ ಮಾಂಸದ ಅಂಗಡಿ ಹೊಂದಿದ್ದ ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ಕುಮಾರ್ ನೆಟ್ಟಾರು (31), ಮಂಗಳವಾರ ರಾತ್ರಿ 8 ಗಂಟೆ ಸುಮಾರಿಗೆ ಅಂಗಡಿ ಮುಚ್ಚಿ ಮನೆ ಕಡೆ ಹೊರಟಿದ್ದರು. ಈ ವೇಳೆ ಬೈಕಿನಲ್ಲಿ ಬಂದಿದ್ದ ಮೂವರು ತಲ್ವಾರ್‍ನಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ತಕ್ಷಣವೇ ಪುತ್ತೂರು ಆಸ್ಪತ್ರೆಗೆ ದಾಖಲಿಸಿದರೂ ಕುತ್ತಿಗೆಯ ಭಾಗಕ್ಕೆ ತೀವ್ರ ಏಟು ಬಿದ್ದಿದ್ದ ಕಾರಣ ಪ್ರವೀಣ್ ಮೃತಪಟ್ಟಿದ್ದರು.

    Live Tv
    [brid partner=56869869 player=32851 video=960834 autoplay=true]

  • ಪ್ರವೀಣ್ ಕೊಲೆಯಾದ ದಿನ ಶಫೀಕ್ ಮನೆಯಲ್ಲಿದ್ದ: ತಂದೆ ಇಬ್ರಾಹಿಂ

    ಪ್ರವೀಣ್ ಕೊಲೆಯಾದ ದಿನ ಶಫೀಕ್ ಮನೆಯಲ್ಲಿದ್ದ: ತಂದೆ ಇಬ್ರಾಹಿಂ

    ಮಂಗಳೂರು: ಜಿಲ್ಲಾ ಯುವ ಮೋರ್ಚಾ ಸದಸ್ಯ ಪ್ರವೀಣ್ ಕುಮಾರ್ ನೆಟ್ಟಾರು ಕೊಲೆಯಾದ ದಿನ ಶಫೀಕ್ ಮನೆಯಲ್ಲಿದ್ದ. ಒಂದು ಕಾರ್ಯಕ್ರಮದಲ್ಲಿ ಆತ ಪಾಲ್ಗೊಂಡಿದ್ದ ಎಂದು ತಂದೆ ಇಬ್ರಾಹಿಂ ಹೇಳಿದ್ದಾರೆ.

    ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ನನ್ನ ಮಗ ಕೊಲೆ ಮಾಡಿಲ್ಲ ಆತ ಅಪರಾಧಿಯಲ್ಲ. ವಿಚಾರಣೆ ಅಂತ ಪೊಲೀಸರು ಮನೆಯಿಂದ ಕರೆದುಕೊಂಡು ಬಂದಿದ್ದಾರೆ. ನಾನು ಪ್ರವೀಣ್ ಕೋಳಿ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದೆ. ಮೂರು ತಿಂಗಳ ಹಿಂದೆ ನಾನು ಕೆಲಸವನ್ನು ಬಿಟ್ಟಿದ್ದೇನೆ ಎಂದರು. ಇದನ್ನೂ ಓದಿ: ನಿಜವಾದ ಆರೋಪಿಯನ್ನು ಬಂಧಿಸಿ ನನ್ನ ಪತಿಯನ್ನು ಬಿಟ್ಟುಬಿಡಿ: ಶಫೀಕ್ ಪತ್ನಿ ಅನ್ಶಿಫಾ

    ನಿಜವಾದ ಆರೋಪಿ ಯಾರೆಂದು ಪೊಲೀಸರು ಹುಡುಕಲಿ. ವಿಚಾರಣೆಗೆ ಕರೆದುಕೊಂಡು ಬಂದು ಕೊಲೆ ಮಾಡಿದ್ದಾನೆ ಎಂದು ಹೇಳುತ್ತಿದ್ದಾರೆ ಎಂದು ಹೇಳಿದ್ದಾರೆ. ಪ್ರವೀಣ್ ಹತ್ಯೆ ಸಂಬಂಧ ಇದೀಗ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಶಫೀಕ್ ಬಂಧನ ಹಿನ್ನೆಲೆಯಲ್ಲಿ ಕುಟುಂಬಸ್ಥರು ಬೆಳ್ಳಾರೆ ಪೊಲೀಸ್ ಠಾಣೆಗೆ ಬಂದಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ನಿಜವಾದ ಆರೋಪಿಯನ್ನು ಬಂಧಿಸಿ ನನ್ನ ಪತಿಯನ್ನು ಬಿಟ್ಟುಬಿಡಿ: ಶಫೀಕ್ ಪತ್ನಿ ಅನ್ಶಿಫಾ

    ನಿಜವಾದ ಆರೋಪಿಯನ್ನು ಬಂಧಿಸಿ ನನ್ನ ಪತಿಯನ್ನು ಬಿಟ್ಟುಬಿಡಿ: ಶಫೀಕ್ ಪತ್ನಿ ಅನ್ಶಿಫಾ

    ಮಂಗಳೂರು: ಬಿಜೆಪಿ ಜಲ್ಲಾ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ಈಗಾಗಲೇ ಇಬ್ಬರು ಆರೋಪಿಗಳನ್ನು ಬಂಧಿಸಿಲಾಗಿದೆ. ಇದೀಗ ಓರ್ವ ಆರೋಪಿ ಶಫೀಕ್ ಪತ್ನಿ ಅನ್ಶಿಫಾ ಪಬ್ಲಿಕ್ ಟಿವಿ ಜೊತೆ ಮಾತನಾಡಿದ್ದಾರೆ.

    ಶಫೀಕ್ ಅಮಾಯಕ. ಆತನನ್ನ ಅರೆಸ್ಟ್ ಮಾಡಲಾಗಿದೆ. ಆತ PFI, SDPIನಲ್ಲಿ ಸಕ್ರಿಯನಾಗಿದ್ದ ಹಾಗಂತ ಆತ ಆರೋಪಿಯಲ್ಲ. ನಿಜವಾದ ಆರೋಪಿಯನ್ನು ಬಂಧಿಸಿ ಶಫೀಕ್ ನನ್ನ ಬಿಟ್ಟು ಬಿಡಿ ಆತ ಅಪರಾಧಿಯಲ್ಲ ಎಂದು ಮನವಿ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಸರ್ಕಾರಕ್ಕೆ ಜನೋತ್ಸವದ ಬದಲು ಜನಾಕ್ರೋಶದ ದರ್ಶನವಾಗಿದೆ – ಕಾರ್ಯಕ್ರಮ ರದ್ದುಗೊಳಿಸಿದ್ದು ಮೃತನ ಮೇಲಿನ ಗೌರವದಿಂದಲ್ಲ: ಕಾಂಗ್ರೆಸ್

    ಮಂಗಳವಾರ ರಾತ್ರಿ ಪ್ರವೀಣ್ ಕುಮಾರ್ ನೆಟ್ಟಾರು ದುಷ್ಕರ್ಮಿಗಳ ಕೈಯಲ್ಲಿ ಭೀಕರವಾಗಿ ಹತ್ಯೆಯಾಗಿದ್ದರು. ಬಳಿಕ ಕರಾವಳಿಯಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿತ್ತು. ಈ ಹಿನ್ನೆಲೆ ಪೊಲೀಸರು ಎಲ್ಲಾ ಆಯಾಮಗಳಿಂದ ತನಿಖೆ ನಡೆಸಿ ಇಬ್ಬರು ಪ್ರಮುಖ ಆರೋಪಿಗಳಾದ ಸವಣೂರು ಮೂಲದ ಝಕೀರ್ ಮತ್ತು ಶಫೀಕ್ ಬೆಳ್ಳಾರೆಯನ್ನು ಬಂಧಿಸಿದ್ದಾರೆ. ಇದನ್ನೂ ಓದಿ: ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆ ಪ್ರಕರಣ – ಇಬ್ಬರು ಆರೋಪಿಗಳ ಬಂಧನ

    ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆಗೆ ಸಂಬಂಧಿಸಿದಂತೆ ಸವಣೂರು ಮೂಲದ ಝಕೀರ್ ಮತ್ತು ಶಫೀಕ್ ಬೆಳ್ಳಾರೆಯನ್ನು ಬಂಧಿಸಲಾಗಿದೆ. ಪ್ರಕರಣದ ಬಗ್ಗೆ ಇನ್ನಷ್ಟು ತನಿಖೆ ನಡೆಸಬೇಕಾಗಿದೆ. ಆರೋಪಿಗಳನ್ನು ಹಿಂದೆ ನ್ಯಾಯಾಲಕ್ಕೆ ಹಾಜರು ಮಾಡುತ್ತೇವೆ ಎಂದು ದಕ್ಷಿಣಕನ್ನಡ ಎಸ್‍ಪಿ ಹೃಷಿಕೇಶ್ ಸೋನಾವಣೆ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.

    ಏನಿದು ಘಟನೆ:
    ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ಪೆರುವಾಜೆ ಕ್ರಾಸ್ ಬಳಿ ಅಕ್ಷಯ್ ಹೆಸರಿನ ಕೋಳಿ ಮಾಂಸದ ಅಂಗಡಿ ಹೊಂದಿದ್ದ ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ಕುಮಾರ್ ನೆಟ್ಟಾರು (31), ಮಂಗಳವಾರ ರಾತ್ರಿ 8 ಗಂಟೆ ಸುಮಾರಿಗೆ ಅಂಗಡಿ ಮುಚ್ಚಿ ಮನೆ ಕಡೆ ಹೊರಟಿದ್ದರು. ಈ ವೇಳೆ ಬೈಕಿನಲ್ಲಿ ಬಂದಿದ್ದ ಮೂವರು ತಲ್ವಾರ್‍ನಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ತಕ್ಷಣವೇ ಪುತ್ತೂರು ಆಸ್ಪತ್ರೆಗೆ ದಾಖಲಿಸಿದರೂ ಕುತ್ತಿಗೆಯ ಭಾಗಕ್ಕೆ ತೀವ್ರ ಏಟು ಬಿದ್ದಿದ್ದ ಕಾರಣ ಪ್ರವೀಣ್ ಮೃತಪಟ್ಟಿದ್ದರು.

    Live Tv
    [brid partner=56869869 player=32851 video=960834 autoplay=true]

  • ಪ್ರತಿ ಜಿಲ್ಲೆಯ ಯುವ ಮೋರ್ಚಾ ಕಾರ್ಯಕರ್ತರಿಂದ ಪ್ರವೀಣ್ ಕುಟುಂಬಕ್ಕೆ ಸಹಾಯ: ತೇಜಸ್ವಿ ಸೂರ್ಯ

    ಪ್ರತಿ ಜಿಲ್ಲೆಯ ಯುವ ಮೋರ್ಚಾ ಕಾರ್ಯಕರ್ತರಿಂದ ಪ್ರವೀಣ್ ಕುಟುಂಬಕ್ಕೆ ಸಹಾಯ: ತೇಜಸ್ವಿ ಸೂರ್ಯ

    ನವದೆಹಲಿ: ಪ್ರತಿ ಜಿಲ್ಲೆಯಿಂದ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಪ್ರವೀಣ್ ಕುಟುಂಬಕ್ಕೆ ಸಹಾಯ ಮಾಡಲಿದೆ ಎಂದು ಸಂಸದ ತೇಜಸ್ವಿ ಸೂರ್ಯ ಭರವಸೆ ನೀಡಿದರು.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿನ್ನೆ ಬಿಜೆಪಿ ಯುವ ಮೋರ್ಚಾದ ಸದಸ್ಯ ಪ್ರವೀಣ್ ಹತ್ಯೆಯಾಗಿದೆ. ಇಡೀ ರಾಜ್ಯದಲ್ಲಿ ಬೇಸರ, ದುಃಖ, ಅಸಹಾಯಕತೆ, ಆಕ್ರೋಶದ ಭಾವನೆ ಮೂಡಿಸಿದೆ. ಪ್ರವೀಣ್ ಒಂಬತ್ತು ತಿಂಗಳ ಮಗುವಿನ ತಂದೆಯಾಗಿದ್ದರು. ಯಾವುದೇ ತಪ್ಪಿಲ್ಲದಿದ್ದರೂ ದುಷ್ಕರ್ಮಿಗಳು ಹತ್ಯೆಯನ್ನು ಮಾಡಿದ್ದಾರೆ. ಬಿಜೆಪಿ ಕಾರ್ಯಕರ್ತ ಎನ್ನುವ ಕಾರಣಕ್ಕೆ ಹತ್ಯೆ ಮಾಡಲಾಗಿದೆ. ಈ ಆಘಾತ ಸಹಿಸಲು ಕುಟುಂಬಕ್ಕೆ ಶಕ್ತಿ ಕೊಡಲಿ. ನಮ್ಮ ಪ್ರತಿಯೊಬ್ಬ ಕಾರ್ಯಕರ್ತ ಅವರ ಜೊತೆಗಿದ್ದಾರೆ ಎಂದರು.

    ಪ್ರತಿ ಜಿಲ್ಲೆಯಿಂದ ಯುವ ಮೋರ್ಚಾ ಕಾರ್ಯಕರ್ತರು ಪ್ರವೀಣ್ ಕುಟುಂಬಕ್ಕೆ ಸಹಾಯ ಮಾಡಲಿದೆ. ಮಂಗಳೂರಿಗೆ ತೆರಳಿ ಆರ್ಥಿಕ ಸಹಾಯ ಮಾಡಲಿದ್ದೇವೆ. ಜೊತೆಗೆ ಹಿರಿಯ ನಾಯಕರ ಜೊತೆಗೆ ಮಾತನಾಡಿದ್ದೇವೆ. ಈ ಸರಣಿ ಹತ್ಯೆ ಹಿಂದಿರುವ ಗುಂಪು ಪತ್ತೆ ಹಚ್ಚಲು ಸರ್ಕಾರದ ಮೇಲೆ ಒತ್ತಡ ಹಾಕುತ್ತಿದ್ದೇವೆ ಎಂದು ತಿಳಿಸಿದರು. ಇದನ್ನೂ ಓದಿ: ಪ್ರವೀಣ್ ಹತ್ಯೆ ಪ್ರಕರಣ- NIA ತನಿಖೆಗೆ ವಹಿಸುವಂತೆ ಅಮಿತ್ ಶಾಗೆ ಪತ್ರ ಬರೆದ ಶೋಭಾ ಕರಂದ್ಲಾಜೆ

    ಘಟನೆ ಸಂಬಂಧಿಸಿ ಬಿಜೆಪಿ ಕಾರ್ಯಕರ್ತರು ರಾಜೀನಾಮೆ ನೀಡುತ್ತಿರುವುದಕ್ಕೆ ಪ್ರತಿಕ್ರಿಯಿಸಿ, ಸಿದ್ದರಾಮಯ್ಯ, ಜಮೀರ್‌ರಂತಹ ರಾಜಕಾರಣಿಗಳು ಯಾವ ರೀತಿ ಕುಮ್ಮಕ್ಕು ನೀಡಲಾಗುತ್ತಿದೆ ಹಿಂದೂಗಳು ಗಮನಿಸಬೇಕು. ಯಾರ ಮೇಲೆ ಹಿಂದೆ ಹತ್ಯೆಯ ಕೇಸಿತ್ತೋ ಅವರ ಮೇಲಿನ ಎಫ್‍ಐಆರ್ ರದ್ದು ಮಾಡಲಾಗಿತ್ತು. ರಾಜಸ್ಥಾನದಲ್ಲೂ ಕನ್ಹಯ್ಯ ಲಾಲ್ ಹತ್ಯೆ ಮಾಡಲಾಯಿತು. ಈ ರೀತಿ ಆಗುತ್ತಾ ಹೋದರೆ ಸಾಮಾನ್ಯ ಜನರಿಗೂ ಭದ್ರತೆ ನೀಡಲು ಸಾಧ್ಯವಾ. ಇದು ಮತಾಂಧತೆ ಮತ್ತು ಸಿದ್ಧಾಂತದ ಸಮಸ್ಯೆ ಎಂದು ಕಿಡಿಕಾರಿದರು.

    ಹಿಂದೂಗಳ ಹತ್ಯೆಯನ್ನು ಕಾಂಗ್ರೆಸ್ ರಾಜಕೀಯ ಪ್ರಯೋಗ ಮಾಡುತ್ತಿದೆ. ವ್ಯಕ್ತಿಯ ಹತ್ಯೆ ಎನ್ನುವುದು ರಾಜಕೀಯ ಪ್ರಯೋಗನಾ ಎಂದು ಪ್ರಶ್ನಿಸಿದ ಅವರು, ಬಿಜೆಪಿ ಈ ರೀತಿಯ ಪ್ರಯೋಗ ಮಾಡಲ್ಲ. ಕಾರ್ಯಕರ್ತರ ಆಕ್ರೋಶ ಪಕ್ಷದ ಮೇಲೆ ಅಲ್ಲ. ಹಿಂದೂ ಸಮಾಜ ಹೋಗುತ್ತಿರುವ ದಿಕ್ಕು ನೋಡಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ನಾನು ಎಲ್ಲರಿಗೂ ಮನವಿ ಮಾಡುತ್ತೇನೆ, ಯಾರು ರಾಜೀನಾಮೆ ನೀಡಬಾರದು ಎಂದರು. ಇದನ್ನೂ ಓದಿ: ಪ್ರವೀಣ್ ಹತ್ಯೆ ಪ್ರಕರಣ – ತನಿಖೆಗೆ 6 ತಂಡ ರಚನೆ, 15 ಜನ ವಶಕ್ಕೆ: ಎಡಿಜಿಪಿ

    Live Tv
    [brid partner=56869869 player=32851 video=960834 autoplay=true]