Tag: ಪ್ರವೀಣ್‌ ಕುಮಾರ್‌ ನೆಟ್ಟಾರು

  • ಜನರು ನಿಮ್ಮ ಮೇಲೆ ಇಟ್ಟಿರುವ ಗೌರವವನ್ನು ಉಳಿಸಿಕೊಳ್ಳಿ: ಸರ್ಕಾರಕ್ಕೆ ಪೇಜಾವರ ಶ್ರೀ ಎಚ್ಚರಿಕೆ

    ಜನರು ನಿಮ್ಮ ಮೇಲೆ ಇಟ್ಟಿರುವ ಗೌರವವನ್ನು ಉಳಿಸಿಕೊಳ್ಳಿ: ಸರ್ಕಾರಕ್ಕೆ ಪೇಜಾವರ ಶ್ರೀ ಎಚ್ಚರಿಕೆ

    ಉಡುಪಿ: ಜನರು ನಿಮ್ಮ ಮೇಲೆ ಇಟ್ಟಿರುವ ಗೌರವವನ್ನು ಉಳಿಸಿಕೊಳ್ಳಿ ಎಂದು ಹೇಳುವ ಮೂಲಕ ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನತೀರ್ಥರು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದಂತಹ ಪ್ರವೀಣ್‍ನನ್ನು ಕೊಲೆ ಮಾಡಿರುವುದು ಖಂಡನೀಯವಾಗಿದೆ. ಇದನ್ನು ಉಗ್ರವಾದ ಮಾತುಗಳಿಂದ ನಾವು ಖಂಡಿಸುತ್ತೇವೆ. ಈ ನೋವನ್ನು ಭರಿಸುವ ಶಕ್ತಿ ದೇವರು ಅವರ ಕುಟುಂಬಕ್ಕೆ ನೀಡಲಿ ಎಂದು ಕೃಷ್ಣನಲ್ಲಿ ಪ್ರಾರ್ಥಿಸುತ್ತೇವೆ ಎಂದರು.

    ಇತ್ತೀಚೆಗೆ ಈ ತರಹದ ಕೊಲೆಗಳು ಹೆಚ್ಚಾಗಿ ರಾಜ್ಯದಲ್ಲಿ ನಡೆಯುತ್ತಿವೆ. ಇದರಿಂದಾಗಿ ನಾಗರಿಕ ಸಮಾಜ ತಲೆತಗ್ಗಿಸುವಂತಾಗಿದೆ. ಜನರು ಧಂಗೆ ಏಳುವ ಮೊದಲೇ ಸರ್ಕಾರ ಎಚ್ಚೆತ್ತುಕೊಳ್ಳಬೇಕು. ಜೊತೆಗೆ ಸರ್ಕಾರದ ಮೇಲೆ ಜನ ವಿಶ್ವಾಸ ಕಳೆದುಕೊಳ್ಳುವ ಮುನ್ನ ಎಚ್ಚೆತ್ತುಕೊಳ್ಳಬೇಕು. ಸರ್ಕಾರವು ಘಟನೆಗೆ ಸಂಬಂಧಿಸಿದಂತೆ ತೀವ್ರವಾಗಿರುವ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: ಪತಿಯ ಕಾರ್ಯ ಮುಗಿಯುವುದರೊಳಗೆ ಆರೋಪಿಗಳಿಗೆ ಶಿಕ್ಷೆ ಆಗ್ಬೇಕು: ಪ್ರವೀಣ್ ಪತ್ನಿ ನೂತನಾ

    ಇತ್ತೀಚಿನ ದಿನಗಳಲ್ಲಿ ಸಾಲು ಸಾಲು ಹಿಂದೂ ಯುವಕರ ಕೊಲೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಯುವಕರ ಸಹನೆ ಕಟ್ಟೆ ಒಡೆಯುವುದು ಸಹಜವಾಗಿದ್ದು, ಕಾರ್ಯಕರ್ತರು ತಮ್ಮ ಸಂಯಮ ಕಳೆದುಕೊಳ್ಳಬಾರದು. ಕಾನೂನನ್ನು ಕೈಗೆತ್ತಿಕೊಳ್ಳದೇ ಒಗ್ಗಟ್ಟಿನಿಂದ ಕಾನೂನಿನ ರೀತಿಯಲ್ಲಿ ಹೋರಾಟ ಮಾಡಬೇಕು. ನಿಮ್ಮೆಲ್ಲರ ನೋವಿನ ಜೊತೆಯಲ್ಲಿ ನಾವು ಇದ್ದೇವೆ. ಸಂವಿಧಾನದ ಮೇಲಿರುವ ಗೌರವವನ್ನು ನಾವು ಉಳಿಸಿಕೊಳ್ಳೋಣ ಎಂದು ಮನವಿ ಮಾಡಿದರು. ಇದನ್ನೂ ಓದಿ: ಪ್ರವೀಣ್ ಹತ್ಯೆ ಪ್ರಕರಣ – ತನಿಖೆಗೆ 6 ತಂಡ ರಚನೆ, 15 ಜನ ವಶಕ್ಕೆ: ಎಡಿಜಿಪಿ

    Live Tv
    [brid partner=56869869 player=32851 video=960834 autoplay=true]

  • ಪ್ರವೀಣ್ ಹತ್ಯೆ ಪ್ರಕರಣ- NIA ತನಿಖೆಗೆ ವಹಿಸುವಂತೆ ಅಮಿತ್ ಶಾಗೆ ಪತ್ರ ಬರೆದ ಶೋಭಾ ಕರಂದ್ಲಾಜೆ

    ಪ್ರವೀಣ್ ಹತ್ಯೆ ಪ್ರಕರಣ- NIA ತನಿಖೆಗೆ ವಹಿಸುವಂತೆ ಅಮಿತ್ ಶಾಗೆ ಪತ್ರ ಬರೆದ ಶೋಭಾ ಕರಂದ್ಲಾಜೆ

    ನವದೆಹಲಿ: ಪ್ರವೀಣ್ ನೆಟ್ಟಾರು ಅವರ ಹತ್ಯೆಯ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸುವಂತೆ ಕೋರಿ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದಾರೆ.

    ನಿನ್ನೆ ಕೆಲ ದುಷ್ಕರ್ಮಿಗಳು ಬಿಜೆಪಿ ಮುಖಂಡ ಪ್ರವೀಣ್ ಅವರನ್ನು ರಾತ್ರಿ ವೇಳೆ ಹತ್ಯೆ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರೆಲ್ಲರೂ ರಾಜೀನಾಮೆ ನೀಡಿ ಆಕ್ರೋಶವನ್ನು ವ್ಯಕ್ತಪಡಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಪತ್ರ ಬರೆದ ಅವರು ಬಿಜೆಪಿ ನಾಯಕ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳಕ್ಕೆ (ಎನ್‍ಐಎ) ವಹಿಸುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಪತಿಯ ಕಾರ್ಯ ಮುಗಿಯುವುದರೊಳಗೆ ಆರೋಪಿಗಳಿಗೆ ಶಿಕ್ಷೆ ಆಗ್ಬೇಕು: ಪ್ರವೀಣ್ ಪತ್ನಿ ನೂತನಾ

    Amith

    ಘಟನೆ ಏನು?: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ಪೆರುವಾಜೆ ಕ್ರಾಸ್ ಬಳಿ ಅಕ್ಷಯ್ ಹೆಸರಿನ ಕೋಳಿ ಮಾಂಸದ ಅಂಗಡಿ ಹೊಂದಿದ್ದ ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ಕುಮಾರ್ ನೆಟ್ಟಾರು (31), ಮಂಗಳವಾರ ರಾತ್ರಿ 8 ಗಂಟೆ ಸುಮಾರಿಗೆ ಅಂಗಡಿ ಮುಚ್ಚಿ ಮನೆ ಕಡೆ ಹೊರಟಿದ್ದರು. ಈ ವೇಳೆ ಬೈಕಿನಲ್ಲಿ ಬಂದಿದ್ದ ಮೂವರು ತಲ್ವಾರ್‍ನಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ತಕ್ಷಣವೇ ಪುತ್ತೂರು ಆಸ್ಪತ್ರೆಗೆ ದಾಖಲಿಸಿದರೂ ಕುತ್ತಿಗೆಯ ಭಾಗಕ್ಕೆ ತೀವ್ರ ಏಟು ಬಿದ್ದಿದ್ದ ಕಾರಣ ಪ್ರವೀಣ್ ಮೃತಪಟ್ಟಿದ್ದರು. ಇದನ್ನೂ ಓದಿ: ಪ್ರವೀಣ್ ಹತ್ಯೆ ಪ್ರಕರಣ – ತನಿಖೆಗೆ 6 ತಂಡ ರಚನೆ, 15 ಜನ ವಶಕ್ಕೆ: ಎಡಿಜಿಪಿ

    Live Tv
    [brid partner=56869869 player=32851 video=960834 autoplay=true]

  • ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳದಿದ್ರೆ ರಾಜೀನಾಮೆ: ರೇಣುಕಾಚಾರ್ಯ

    ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳದಿದ್ರೆ ರಾಜೀನಾಮೆ: ರೇಣುಕಾಚಾರ್ಯ

    ಬೆಂಗಳೂರು: ಬಿಜೆಪಿ ಮುಖಂಡ ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆಗೈದವರ ವಿರುದ್ಧ ನಿರ್ದಾಕ್ಷಣ್ಯ ಕಠಿಣ ಕ್ರಮ ತೆಗೆದುಕೊಂಡರೆ ಮಾತ್ರ ನಾನು ಈ ಸರ್ಕಾರದಲ್ಲಿ ಮುಂದುವರಿಯುತ್ತೇನೆ, ಇಲ್ಲವಾದರೆ ರಾಜೀನಾಮೆ ನೀಡುತ್ತೇನೆ ಎಂದು ಸಾಸಕ ಎಂ.ಪಿ ರೇಣುಕಾಚಾರ್ಯ ಹೇಳಿದ್ದಾರೆ.

    ಆರ್.ಟಿ.ನಗರದ ನಿವಾಸದಲ್ಲಿ ಸಿಎಂ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಎಲ್ಲ ತ್ಯಾಗಕ್ಕೂ ಸಿದ್ಧ. ನಾನು ರಾಜೀನಾಮೆ ನೀಡಲು ಸಿದ್ಧ. ಕಾರ್ಯಕರ್ತರು ಏನ್ ಹೇಳ್ತಾರೆ ಅದನ್ನ ಕೇಳ್ತೀನಿ. ಕ್ಷೇತ್ರಕ್ಕೆ ನಾಳೆ ಹೋಗ್ತೀನಿ, ಕಾರ್ಯಕರ್ತರ ಹೇಳಿದನ್ನ ಕೇಳ್ತೀನಿ. ಅಧಿಕಾರಕ್ಕೆ ನಾನು ಅಂಟು ಕೂರಲ್ಲ ನಾನು ಎಂದರು.

    ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ಹಿಂದೂ ಕಾರ್ಯಕರ್ತರ ಹತ್ಯೆಗಳಿಗೆ ಕಾರಣರಾದ ದುಷ್ಕರ್ಮಿಗಳ ವಿರುದ್ಧ ನಮ್ಮ ಸರ್ಕಾರ ಕಠಿಣ ಕ್ರಮ ತೆಗೆದುಕೊಳ್ಳದಿದ್ದರೆ ನಾನು ರಾಜೀನಾಮೆ ನೀಡಲು ಸಿದ್ಧನಿದ್ದೇನೆ. ರಾಜ್ಯದಲ್ಲಿ ಪದೇ ಪದೇ ಹಿಂದೂ ಕಾರ್ಯಕರ್ತರ ಹತ್ಯೆಗಳು ನೆಡೆಯುತ್ತಿದ್ದು, ರಾಜ್ಯದ ಉದ್ದಗಲಕ್ಕೆ ಹಿಂದೂ ಕಾರ್ಯಕರ್ತರು ರೊಚ್ಚಿಗೆದ್ದಿದ್ದಾರೆ.

    ನಮ್ಮ ಸರ್ಕಾರ ಶ್ರೀ ಯೋಗಿ ಆದಿತ್ಯನಾಥ್ ಜಿ ಅವರ ಸರ್ಕಾರದ ಮಾದರಿಯಲ್ಲಿ ದುಷ್ಕರ್ಮಿಗಳ ವಿರುದ್ಧ ನಿರ್ದಾಕ್ಷಣ್ಯ ಕಠಿಣ ಕ್ರಮ ತೆಗೆದುಕೊಂಡರೆ ಮಾತ್ರ ನಮ್ಮ ಸರ್ಕಾರ ಹಾಗೂ ಸಂಘಟನೆಗೆ ವರ್ಚಸ್ಸು ಉಳಿಯಲು ಸಾಧ್ಯ. ನಮ್ಮ ಹಿಂದೂ ಕಾರ್ಯಕರ್ತರನ್ನು ರಕ್ಷಿಸಲು ನಮ್ಮಿಂದ ಸಾಧ್ಯವಾಗದಿದ್ದರೆ ನಾವು ಅಧಿಕಾರದಲ್ಲಿದ್ದೂ ಏನು ಪ್ರಯೋಜನ?. ಇದನ್ನೂ ಓದಿ: ಕೊಲೆಗೆ ಕೊಲೆ ಪ್ರತಿಕಾರವಲ್ಲ – ಸರ್ಕಾರ ಹೆಣದ ರಾಜಕೀಯ ಬಿಟ್ಟು ಕಾನೂನು ಸುವ್ಯವಸ್ಥೆ ಬಿಗಿಗೊಳಿಸಲಿ: ಕಾಂಗ್ರೆಸ್

    ಪ್ರತಿ ಬಾರಿ ಹಿಂದೂ ಕಾರ್ಯಕರ್ತರ ಹತ್ಯೆಯಾದಾಗ ಭಾವಪೂರ್ಣ ಶ್ರದ್ಧಾಂಜಲಿ, ಕಠಿಣ ಕ್ರಮಕ್ಕೆ ಒತ್ತಾಯ, ದುಷ್ಕರ್ಮಿಗಳನ್ನು ಗಲ್ಲಿಗೇರಿಸಬೇಕು, ಓಂ ಶಾಂತಿ ಎನ್ನುವ ನಮ್ಮ ಸೋಶಿಯಲ್ ಮೀಡಿಯಾ ಪೋಸ್ಟ್ ನಿಂದ ಏನೂ ಪ್ರಯೋಜನವಿಲ್ಲ. ಹಿಂದೂ ಕಾರ್ಯಕರ್ತರ ನಂಬಿಕೆ ಉಳಿಸಿಕೊಳ್ಳ ಬೇಕಾದರೆ ದುಷ್ಕರ್ಮಿಗಳನ್ನು ನಡು ರಸ್ತೆಯಲ್ಲಿಯೇ ಎನ್ಕೌಂಟರ್ ಮಾಡಬೇಕು.

    ನನಗೆ ವೈಯಕ್ತಿಕವಾಗಿ ಅಧಿಕಾರಕ್ಕಿಂತ ನಮ್ಮ ಹಿಂದೂ ಕಾರ್ಯಕರ್ತರ ರಕ್ಷಣೆಯೇ ಮುಖ್ಯ, ಆದ್ದರಿಂದ ನಮ್ಮ ಸರ್ಕಾರ ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳದಿದ್ದರೆ ನಾನು ನನ್ನ ಮತ ಕ್ಷೇತ್ರದ ಮುಖಂಡರು ಹಾಗೂ ಕಾರ್ಯಕರ್ತರ ಜೊತೆ ಚರ್ಚಿಸಿ ಶಾಸಕ ಸ್ಥಾನಕ್ಕೆ “ರಾಜೀನಾಮೆ” ನೀಡಲು ಯೋಚಿಸುತ್ತಿದ್ದೇನೆ.

    ಕೆಲ ದಿನಗಳ ಹಿಂದೆ ನನಗೆ ಕೊಲೆ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನೂ ಸಹ ನಮ್ಮ ಪೊಲೀಸ್ ಇಲಾಖೆ ಇದುವರೆಗೂ ಪತ್ತೆ ಹಚ್ಚಿಲ್ಲ ಎಂದು ಹೇಳಿಕೊಳ್ಳುವುದಕ್ಕೆ ನನಗೆ ಮುಜುಗರವಾಗುತ್ತದೆ. ಜನರಿಗೆ ಬೇಕಾಗಿರುವುದು ನಮ್ಮ ಪೌರುಷದ ಭಾಷಣ ಅಥವಾ ಹೇಳಿಕೆಗಳಲ್ಲ, ನಾವು ತೆಗೆದುಕೊಳ್ಳುವ ನಿರ್ಧಾಕ್ಷಣ್ಯ ಕ್ರಮಗಳು.

    ಹಿಂದೂ ಸಮೂಹ ನಮ್ಮ ಮೇಲೆ ಇಟ್ಟಿರುವ ಭರವಸೆಯನ್ನ ಉಳಿಸಿಕೊಳ್ಳಲು, ದುಷ್ಕರ್ಮಿಗಳ ವಿರುದ್ಧ ನಿರ್ದಾಕ್ಷಣ್ಯ ಕಠಿಣ ಕ್ರಮ ತೆಗೆದುಕೊಂಡರೆ ಮಾತ್ರ ನಾನು ಈ ಸರ್ಕಾರದಲ್ಲಿ ಮುಂದುವರೆಯುತ್ತೇನೆ, ಇಲ್ಲವಾದರೆ ರಾಜೀನಾಮೆ ನೀಡುತ್ತೇನೆ ಎನ್ನುವುದನ್ನು ಮತ್ತೊಮ್ಮೆ ಹೇಳುತ್ತೇನೆ.

    Live Tv
    [brid partner=56869869 player=32851 video=960834 autoplay=true]

  • ಪ್ರವೀಣ್ ಹತ್ಯೆ ಖಂಡಿಸಿ ಬಾಗಲಕೋಟೆ ಯುವ ಮೋರ್ಚಾದ ಕಾರ್ಯಕರ್ತರು ರಾಜೀನಾಮೆ

    ಪ್ರವೀಣ್ ಹತ್ಯೆ ಖಂಡಿಸಿ ಬಾಗಲಕೋಟೆ ಯುವ ಮೋರ್ಚಾದ ಕಾರ್ಯಕರ್ತರು ರಾಜೀನಾಮೆ

    ಬಾಗಲಕೋಟೆ: ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಬೆಳ್ಳಾರಿಯ ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆ ಖಂಡಿಸಿ ಬಾಗಲಕೋಟೆ ಬಿಜೆಪಿ ಜಿಲ್ಲಾ ಯುವ ಮೋರ್ಚಾದ ಕಾರ್ಯಕರ್ತರೆಲ್ಲರು ಸಾಮಾಹಿಕವಾಗಿ ರಾಜೀನಾಮೆ ನೀಡಿದ್ದಾರೆ.

    ಯುವ ಮೋರ್ಚಾದಿಂದ ಸಭೆ ನಡೆಸಿದ ಬಳಿಕ ತೀರ್ಮಾನ ತೆಗೆದುಕೊಂಡಿದ್ದೇವೆ ಎಂದು ಬಿಜೆಪಿ ಜಿಲ್ಲಾ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಆನಂದ ಇಂಗಳಗಾಂವಿ ಹಾಗೂ ಪ್ರಧಾನ ಕಾರ್ಯದರ್ಶಿ ಭುವನೇಶ್ವರ ಪೂಜಾರ್ ಹೇಳಿದ್ದಾರೆ.

    ಜಿಲ್ಲೆಯ ಯುವೋರ್ಚಾದ 12 ಮಂಡಳಗಳ ಪದಾಧಿಕಾರಿಗಳು, ಕಾರ್ಯಕರ್ತರು ರಾಜೀನಾಮೆ ನೀಡಿದ್ದು, ಬಾಗಲಕೋಟೆ ಬಿಜೆಪಿ ಜಿಲ್ಲಾಧ್ಯಕ್ಷ ಶಾಂತಗೌಡ ಪಾಟೀಲ್ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಅಲ್ಲದೆ ಬಿಜೆಪಿ ರಾಜ್ಯ ಪ್ರಮುಖರ ವಿರುದ್ಧ ಯುವ ಮೋರ್ಚಾ ಆಕ್ರೋಶ ಹೊರಹಾಕಿದೆ. ಇದನ್ನೂ ಓದಿ: ನಳಿನ್‌ ಕುಮಾರ್ ಕಾರನ್ನು ಎತ್ತಲು ಪ್ರಯತ್ನಿಸಿದ ಕಾರ್ಯಕರ್ತರು – ಬೆಳ್ಳಾರೆಯಲ್ಲಿ ಲಾಠಿಚಾರ್ಜ್

    ಗ್ರಹ ಸಚಿವರು, ಸಿಎಂ, ಸೇರಿದಂತೆ ಸಂಬಂಧ ಪಟ್ಟವರೆಲ್ಲರೂ ಸೂಕ್ತ ಕ್ರಮವನ್ನು ಕೈಗೊಳ್ಳಬೇಕು. ಸೂಕ್ತ ಕ್ರಮ ಕೈಗೊಳ್ಳುವ ವರೆಗೂ ರಾಜೀನಾಮೆ ಹಿಂಪಡೆಯುವುದಿಲ್ಲ ಎಂದು ತೀರ್ಮಾನ ಮಾಡಿದ್ದೇವೆ ಎಂದು ನಗರದ ವಿದ್ಯಾಗಿರಿಯಲ್ಲಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಆನಂದ ಇಂಗಳಗಾಂವಿ ಕಿಡಿಕಾರಿದ್ದಾರೆ.

    ಇತ್ತ ಚಿಕ್ಕಮಗಳೂರಿನಲ್ಲಿ ಕೂಡ ಜಿಲ್ಲಾ ಯುವ ಮೋರ್ಚಾದ ಸುಮಾರು 30ಕ್ಕೂ ಹೆಚ್ಚು ಕಾರ್ಯಕರ್ತರು ರಾಜೀನಾಮೆ ನೀಡಿದ್ದಾರೆ. ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಸಂದೀಪ್ ಅರವಿನಗಂಡಿ, ಪ್ರಧಾನ ಕಾರ್ಯದರ್ಶಿ ಸಂತೋಷ್, ಗಗನ್ ಕಡೂರು, ಉಪಾಧ್ಯಕ್ಷ ಸಚಿನ್, ಜಿಲ್ಲಾ ಕಾರ್ಯದರ್ಶಿ ಶಶಿ, ಮಂಡಲ ಅಧ್ಯಕ್ಷ ರಾಜೇಶ್, ಕಾಂಚನ್ ಗೌಡ ಸೇರಿದಂತೆ 30ಕ್ಕೂ ಹೆಚ್ಚು ಕಾರ್ಯಕರ್ತರು ರಾಜೀನಾಮೆ ನೀಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ನಮ್ಮದೇ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡ್ತಿದ್ದೇವೆ: ಬಿಜೆಪಿ ಕಾರ್ಯಕರ್ತ ಚಂದ್ರಹಾಸ್

    ನಮ್ಮದೇ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡ್ತಿದ್ದೇವೆ: ಬಿಜೆಪಿ ಕಾರ್ಯಕರ್ತ ಚಂದ್ರಹಾಸ್

    ಮಂಗಳೂರು: ನಮ್ಮದೇ ಸರ್ಕಾರದ ವಿರುದ್ಧ ನಾವು ಪ್ರತಿಭಟನೆ ಮಾಡುತ್ತಿದ್ದೇವೆ . ನಮ್ಮ ಮನಸ್ಸಿನಲ್ಲಿ ಎಷ್ಟು ನೋವಿದೆ ಎಂಬುದು ಸರ್ಕಾರಕ್ಕೆ ಗೊತ್ತಾಗಬೇಕು ಎಂದು ಬಿಜೆಪಿ ಕಾರ್ಯಕರ್ತ ಚಂದ್ರಹಾಸ್ ಆಕ್ರೋಶ ಹೊರಹಾಕಿದ್ದಾರೆ.

    ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ನಮ್ಮದೇ ರಾಜ್ಯಾಧ್ಯಕ್ಷರನ್ನು ನಮ್ಮ ಕಾರ್ಯಕರ್ತರು ತಡೆದು ನಿಲ್ಲಿಸಿದ್ದಾರೆ. ಕೊಲೆ ಮಾಡಿದವರನ್ನು ಇನ್ನೂ ಬಂಧಿಸಿಲ್ಲ ಯಾಕೆ?. ಕೊಲೆ ಮಾಡಿದ ಆರೋಪಿಗಳನ್ನು ಜೈಲಿನಲ್ಲಿ ಇಟ್ಟು ಬಿರಿಯಾನಿ ತಿನ್ನಿಸಬೇಡಿ. ಆರೋಪಿಗಳನ್ನು ಎನ್ಕೌಂಟರ್ ಮಾಡಿ ಮುಗಿಸಿ ಬಿಡಿ ಎಂದು ಆಗ್ರಹಿಸಿದ್ದಾರೆ.

    ಎನ್ಕೌಂಟರ್ ಮಾಡುವ ಗಂಡಸ್ತನ ಈ ಸರ್ಕಾರಕ್ಕೆ ಇದೆಯೇ? ಹಿಂದೂ ಸಮಾಜ ಎಚ್ಚೆತ್ತುಕೊಂಡಿದೆ. ಹಿಂದೂ ಸಮಾಜ ಎಚ್ಚೆತ್ತುಕೊಂಡಿದೆ. ಈಗ ನ್ಯಾಯ ಒದಗಿಸುತ್ತಿದ್ದರೆ ನಮಗೆ ಸಮಾಜ ಪಾಠ ಕಲಿಸುತ್ತದೆ ಎಂದು ತಿಳಿಸಿದರು. ಇದನ್ನೂ ಓದಿ: ನಮ್ಮ ಕಾರ್ಯಕರ್ತರ ರಕ್ಷಣೆ ನಮ್ಮ ಕೈಯಲ್ಲೇ ಆಗ್ತಿಲ್ಲ ಅಂತ ಒಪ್ಪಿಕೊಳ್ತೇನೆ: ಈಶ್ವರಪ್ಪ

     Live Tv 
    [brid partner=56869869 player=32851 video=960834 autoplay=true]

  • ಪ್ರವೀಣ್ ಹತ್ಯೆಯನ್ನು ಸಿಎಂ ಬಹಳ ಗಂಭೀರವಾಗಿ ಪರಿಗಣಿಸಿದ್ದಾರೆ: ರೇಣುಕಾಚಾರ್ಯ

    ಪ್ರವೀಣ್ ಹತ್ಯೆಯನ್ನು ಸಿಎಂ ಬಹಳ ಗಂಭೀರವಾಗಿ ಪರಿಗಣಿಸಿದ್ದಾರೆ: ರೇಣುಕಾಚಾರ್ಯ

    ಬೆಂಗಳೂರು: ಬಿಜೆಪಿ ಮುಖಂಡ ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆ ಪ್ರಕರಣವನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರು ಗಂಭೀರವಾಗಿ ಪರಿಗಣಿಸಿದ್ದಾರೆ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ ರೇಣುಕಾಚಾರ್ಯ ಹೇಳಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರವೀಣ್ ಕುಟುಂಬಕ್ಕೆ ನಾನು ವೈಯಕ್ತಿಕವಾಗಿ 1 ಲಕ್ಷ ಪರಿಹಾರ ನೀಡುತ್ತೇನೆ. ಬಗ್ಗು ಬಡಿದರೆ ಮಾತ್ರ ಇದು ನಿಲ್ಲುತ್ತದೆ. ಎಲ್ಲೋ ಒಂದು ಕಡೆ ನಮಗೂ ನೋವಾಗುತ್ತೆ. ಹರ್ಷ ಆಯ್ತು, ಚಂದ್ರು ಆಯ್ತು. ಈಗ ಪ್ರವೀಣ್.. ನಮ್ಮ ಕಾರ್ಯಕರ್ತ ಮುಖಂಡರನ್ನೇ ಟಾರ್ಗೆಟ್ ಮಾಡುತ್ತಿದ್ದಾರೆ. ನಮ್ಮ ಸಂಘಟನೆ ಪ್ರಮುಖರಿಗೂ ನೋವಿದೆ ಎಂದರು.

    ಯೋಗಿ ಆದಿತ್ಯನಾಥ್ ಮಾದರಿಯಲ್ಲೇ ಹದ್ದುಬಸ್ತಿನಲ್ಲಿ ಇಡಬೇಕು. ಸಾಫ್ಟ್ ಕಾರ್ನರ್ ತೋರಿಸಿದರೆ ಆಗೋದಿಲ್ಲ. ಸಿಎಂ ಬಹಳ ಗಂಭೀರವಾಗಿ ಪರಿಗಣಿಸಿದ್ದಾರೆ. ಕಾಂಗ್ರೆಸ್ ಕಾಲದಲ್ಲಿ 25-30 ಹಿಂದೂ ಯುವಕರ ಹತ್ಯೆ ಆಯ್ತು. ನಮ್ಮ ಸರ್ಕಾರ ಬಂದಾಗ ಕಂಟ್ರೋಲ್ ಆಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಸಾಮೂಹಿಕ ರಾಜೀನಾಮೆಗೆ ಮುಂದಾದ ಬಿಜೆಪಿ ಯುವ ಮೋರ್ಚಾ ಘಟಕ ಸದಸ್ಯರು

    ಯುಪಿ ಮಾದರಿಯಲ್ಲೇ ಕ್ರಮ ಮಾಡಿದರೆ ಮಾತ್ರ ಸಾಧ್ಯ. ಸಿಎಂ ಭೇಟಿ ಮಾಡಿ ಒತ್ತಡ ಹಾಕ್ತೀನಿ, ಕಠಿಣ ಕ್ರಮ ಜರುಗಿಸಬೇಕು. ನನಗೇ ಎರಡು ಬಾರಿ ಬೆದರಿಕೆ ಕರೆ ಬಂದರೂ ಅವರನ್ನು ಪತ್ತೆ ಹಚ್ಚೋದಕ್ಕಾಗಿಲ್ಲ. ನನ್ನಂಥವನ ಪರಿಸ್ಥಿತಿ ಇದಾದರೆ ಸಾಮಾನ್ಯ ಜನರ ಸ್ಥಿತಿ ಏನು..? ಸರ್ಕಾರದ ವೈಫಲ್ಯ ಅಂತ ಹೇಳಲ್ಲ. ಆದರೆ ನನಗೇ ಈ ಬಗ್ಗೆ ಮಾತನಾಡಿದರೆ ಮಾಧ್ಯಮದ ಮುಂದೆ ಮುಜುಗರ ಆಗುತ್ತೆ ಎಂದು ಹೇಳಿದರು.

    Live Tv
    [brid partner=56869869 player=32851 video=960834 autoplay=true]

  • ಸಾಮೂಹಿಕ ರಾಜೀನಾಮೆಗೆ ಮುಂದಾದ ಬಿಜೆಪಿ ಯುವ ಮೋರ್ಚಾ ಘಟಕ ಸದಸ್ಯರು

    ಸಾಮೂಹಿಕ ರಾಜೀನಾಮೆಗೆ ಮುಂದಾದ ಬಿಜೆಪಿ ಯುವ ಮೋರ್ಚಾ ಘಟಕ ಸದಸ್ಯರು

    ಚಿಕ್ಕಮಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ಕುಮಾರ್ ಹತ್ಯೆಯಾಗಿದ್ದ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಬಿಜೆಪಿ ಯುವ ಮೋರ್ಚಾ ಪಕ್ಷದ ವಿರುದ್ಧವೇ ಅಕ್ರೋಶ ಹೊರಹಾಕಿದೆ.

    ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ಹತ್ಯೆಗೆ ಆಕ್ರೋಶ ಹೊರಹಾಕಿ ಬಿಜೆಪಿ ಯುವ ಮೋರ್ಚಾ ಸದಸ್ಯರು ಸಾಮೂಹಿಕ ರಾಜೀನಾಮೆ ಮುಂದಾಗಿದ್ದಾರೆ. ಬಿಜೆಪಿ ಕಾರ್ಯಕರ್ತರ ರಕ್ಷಣೆ ನೀಡದ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

    ಜಿಲ್ಲಾಧ್ಯಕ್ಷ ಸಂದೀಪ್ ಅರವಿನಗಂಡಿ, ಪ್ರಧಾನ ಕಾರ್ಯದರ್ಶಿ ಸಂತೋಷ್, ಗಗನ್ ಕಡೂರು, ಉಪಾಧ್ಯಕ್ಷ ಸಚಿನ್, ಶಶಿ ಜಿಲ್ಲಾ ಕಾರ್ಯದರ್ಶಿ, ಮಂಡಲ ಅಧ್ಯಕ್ಷ ರು ರಾಜೇಶ್, ಕಾಂಚನ್ ಗೌಡ ಸೇರಿದಂತೆ 30ಕ್ಕೂ ಹೆಚ್ಚು ಕಾರ್ಯಕರ್ತರು ರಾಜೀನಾಮೆ ನೀಡಿಲು ಮುಂದಾಗಿದ್ದಾರೆ. ಇದನ್ನೂ ಓದಿ: ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆ ಪ್ರಕರಣ- 8 ಮಂದಿ ಶಂಕಿತರು ವಶಕ್ಕೆ

    ಏನಿದು ಪ್ರಕರಣ?: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ಪೆರುವಾಜೆ ಕ್ರಾಸ್ ಬಳಿ ಅಕ್ಷಯ್ ಹೆಸರಿನ ಕೋಳಿ ಮಾಂಸದ ಅಂಗಡಿ ಹೊಂದಿದ್ದ ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ಕುಮಾರ್ ನೆಟ್ಟಾರು(31), ಮಂಗಳವಾರ ರಾತ್ರಿ 8 ಗಂಟೆ ಸುಮಾರಿಗೆ ಅಂಗಡಿ ಮುಚ್ಚಿ ಮನೆ ಕಡೆ ಹೊರಟಿದ್ದರು. ಈ ವೇಳೆ ಬೈಕಿನಲ್ಲಿ ಬಂದಿದ್ದ ಮೂವರು ತಲ್ವಾರ್‍ನಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ತಕ್ಷಣವೇ ಪುತ್ತೂರು ಆಸ್ಪತ್ರೆಗೆ ದಾಖಲಿಸಿದರೂ ಕುತ್ತಿಗೆಯ ಭಾಗಕ್ಕೆ ತೀವ್ರ ಏಟು ಬಿದ್ದಿದ್ದ ಕಾರಣ ಪ್ರವೀಣ್ ಮೃತಪಟ್ಟಿದ್ದಾರೆ.

    ಈಗಾಗಲೇ ಪ್ರವೀಣ್ ಮೃತದೇಹವನ್ನು ಪುತ್ತೂರಿನಿಂದ ಮೆರವಣಿಗೆ ಮೂಲಕ ಅವರ ಸ್ವಗ್ರಹ ಕರೆದೊಯ್ಯಲಾಗಿದ್ದು, ಸಾರ್ವಜನಿಕರ ಅಂತಿಮ ದರ್ಶನದ ಬಳಿಕ ಬಿಲ್ಲವ ಸಂಪ್ರದಾಯದಂತೆ ಅಂತ್ಯಸಂಸ್ಕಾರ ನೆರವೇರಿಸಲಾಗುತ್ತದೆ. ಇತ್ತ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.

    Live Tv
    [brid partner=56869869 player=32851 video=960834 autoplay=true]

  • ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆ ಪ್ರಕರಣ- 8 ಮಂದಿ ಶಂಕಿತರು ವಶಕ್ಕೆ

    ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆ ಪ್ರಕರಣ- 8 ಮಂದಿ ಶಂಕಿತರು ವಶಕ್ಕೆ

    ಮಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 8 ಮಂದಿ ಶಂಕಿತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಉನ್ನತ ಪೊಲೀಸ್ ಅಧಿಕಾರಿಗಳು ಪಬ್ಲಿಕ್ ಟಿವಿಗೆ ತಿಳಿಸಿದ್ದಾರೆ.

    ಸ್ಥಳೀಯನೊಬ್ಬ ಪ್ರವೀಣ್ ಚಲನವಲನದ ಬಗ್ಗೆ ಮಾಹಿತಿ ನೀಡಿದ್ದಾನೆ. ಒಟ್ಟಿನಲ್ಲಿ ಸ್ಥಳೀಯರೊಬ್ಬರ ಸಹಾಯದಿಂದ ಹತ್ಯೆಯಾಗಿದೆ ಎಂಬ ಮಾಹಿತಿ ಲಭಿಸಿದೆ. ಹೀಗಾಗಿ ಸ್ಥಳೀಯ ಪೊಲೀಸರು 8 ಜನರನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ. ಶಂಕಿತರ ಮಾಹಿತಿಯ ಬಳಿಕ ಹತ್ಯೆ ಮಾಡಿದವರು ಸ್ಥಳೀಯರು ಎಂದು ತಿಳಿದುಬಂದಿದ್ದು, ಬೇರೆ ರಾಜ್ಯದಿಂದ ಬಂದವರಾ ಅನ್ನೋದನ್ನು ತಿಳಿಯಬೇಕಿದೆ. ಒಬ್ಬ ಮಾತ್ರ ಸ್ಥಳೀಯವಾಗಿ ಸಹಾಯ ಮಾಡಿದ್ದು ದೃಢವಾಗಿದೆ.

    ಪ್ರವೀಣ್ ಗೆ ಬೆದರಿಕೆ ಕರೆಯೂ ಬಂದಿರೋ ಬಗ್ಗೆ ಮಾಹಿತಿ ಇದೆ. ಹತ್ಯೆಗೂ ಮೂರು ದಿನದಿಂದ ಬೆದರಿಕೆ ಕರೆ ಬಂದಿದೆ ಎಂದಿದ್ದಾರೆ. ಆದರೆ ಬೆದರಿಕೆ ಕರೆಯ ಬಗ್ಗೆ ಪ್ರವೀಣ್ ಪೊಲೀಸರಿಗೆ ದೂರು ಕೊಟ್ಟಿಲ್ಲ. ಸ್ನೇಹಿತರ ಮಾಹಿತಿಯ ಮೇರೆಗೆ ಶಂಕಿತರ ವಶಕ್ಕೆ ಪಡೆಯಲಾಗಿದೆ ಎಂದು ಉನ್ನತ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: 5 ಕ್ಕಿಂತ ಹೆಚ್ಚು ಜನ ನಿಲ್ಲದಂತೆ ಆದೇಶ- ನಾಳೆ ಮಧ್ಯರಾತ್ರಿವರೆಗೆ ನಿಷೇಧಾಜ್ಞೆ ಜಾರಿ

    Live Tv
    [brid partner=56869869 player=32851 video=960834 autoplay=true]

  • 5 ಕ್ಕಿಂತ ಹೆಚ್ಚು ಜನ ನಿಲ್ಲದಂತೆ ಆದೇಶ- ನಾಳೆ ಮಧ್ಯರಾತ್ರಿವರೆಗೆ ನಿಷೇಧಾಜ್ಞೆ ಜಾರಿ

    5 ಕ್ಕಿಂತ ಹೆಚ್ಚು ಜನ ನಿಲ್ಲದಂತೆ ಆದೇಶ- ನಾಳೆ ಮಧ್ಯರಾತ್ರಿವರೆಗೆ ನಿಷೇಧಾಜ್ಞೆ ಜಾರಿ

    ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯತಾಲೂಕಿನ ಬೆಳ್ಳಾರೆಯಲ್ಲಿ ಬಿ.ಜೆ.ಪಿ ಯುವ ಮುಖಂಡ ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆ ಹಿನ್ನೆಲೆಯಲ್ಲಿ ಈಗಾಗಲೇ ಮೂರು ತಾಲೂಕುಗಳನ್ನು ಬಂದ್ ಮಾಡಲಾಗಿದೆ. ಅಲ್ಲದೆ 5 ಮಂದಿಗಿಂತ ಹೆಚ್ಚು ಜನ ಒಂದೇ ಕಡೆ ಸೇರಬಾರದಂತೆ ಆದೇಶ ಹೊರಡಿಸಲಾಗಿದೆ. ಜೊತೆಗೆ ನಾಳೆ ಮಧ್ಯರಾತ್ರಿವರೆಗೆ ನಿಷೇಧಾಜ್ಷೆ ಜಾರಿಗೊಳಿಸಲಾಗಿದೆ.

    ಕೊಲೆ ಪ್ರಕರಣ ಸಂಬಂಧ ಉದ್ವಿಗ್ನ ಸ್ಥಿತಿ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ಪುತ್ತೂರು ಉಪವಿಭಾಗಾಧಿಕಾರಿ ಗಿರೀಶ್ ನಂದನ್ ಹೊರಡಿಸಿದ್ದಾರೆ. ಪುತ್ತೂರು, ಸುಳ್ಯ, ಕಡಬ, ಬೆಳ್ತಂಗಡಿ ತಾಲೂಕು ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿಗೊಳಿಸಿ ಆದೇಶಿಸಿದ್ದಾರೆ. ಘರ್ಷಣೆ ನಡೆಯುವ ಸಾಧ್ಯತೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಗುರುವಾರ ಮಧ್ಯರಾತ್ರಿ 12 ಗಂಟೆವರೆಗೆ ನಿಷೇಧಾಜ್ಞೆ ಇರಲಿದೆ. 5ಕ್ಕಿಂತ ಹೆಚ್ಚು ಜನ ಗುಂಪು ಸೇರದಂತೆ ಆದೇಶದಲ್ಲಿ ತಿಳಿಸಲಾಗಿದೆ. ಇದನ್ನೂ ಓದಿ: ಮೋದಿ, ಯೋಗಿ ಮಾದರಿಯಲ್ಲಿ ಇವರಿಗೆ ಗಟ್ಸ್ ಇಲ್ಲ: ಪ್ರವೀಣ್ ಹತ್ಯೆಗೆ ಮುತಾಲಿಕ್ ಕಿಡಿ

    ಏನಿದು ಪ್ರಕರಣ?
    ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ಪೆರುವಾಜೆ ಕ್ರಾಸ್ ಬಳಿ ಅಕ್ಷಯ್ ಹೆಸರಿನ ಕೋಳಿ ಮಾಂಸದ ಅಂಗಡಿ ಹೊಂದಿದ್ದ ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ಕುಮಾರ್ ನೆಟ್ಟಾರು(31), ಮಂಗಳವಾರ ರಾತ್ರಿ 8 ಗಂಟೆ ಸುಮಾರಿಗೆ ಅಂಗಡಿ ಮುಚ್ಚಿ ಮನೆ ಕಡೆ ಹೊರಟಿದ್ದರು. ಈ ವೇಳೆ ಬೈಕಿನಲ್ಲಿ ಬಂದಿದ್ದ ಮೂವರು ತಲ್ವಾರ್‍ನಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ತಕ್ಷಣವೇ ಪುತ್ತೂರು ಆಸ್ಪತ್ರೆಗೆ ದಾಖಲಿಸಿದರೂ ಕುತ್ತಿಗೆಯ ಭಾಗಕ್ಕೆ ತೀವ್ರ ಏಟು ಬಿದ್ದಿದ್ದ ಕಾರಣ ಪ್ರವೀಣ್ ಮೃತಪಟ್ಟಿದ್ದಾರೆ.

    ಈಗಾಗಲೇ ಪ್ರವೀಣ್ ಮೃತದೇಹವನ್ನು ಪುತ್ತೂರಿನಿಂದ ಮೆರವಣಿಗೆ ಮೂಲಕ ಅವರ ಸ್ವಗ್ರಹ ಕರೆದೊಯ್ಯಲಾಗಿದ್ದು, ಸಾರ್ವಜನಿಕರ ಅಂತಿಮ ದರ್ಶನದ ಬಳಿಕ ಬಿಲ್ಲವ ಸಂಪ್ರದಾಯದಂತೆ ಅಂತ್ಯಸಂಸ್ಕಾರ ನೆರವೇರಿಸಲಾಗುತ್ತದೆ. ಇತ್ತ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.

    Live Tv
    [brid partner=56869869 player=32851 video=960834 autoplay=true]

  • ಮೋದಿ, ಯೋಗಿ ಮಾದರಿಯಲ್ಲಿ ಇವರಿಗೆ ಗಟ್ಸ್ ಇಲ್ಲ: ಪ್ರವೀಣ್ ಹತ್ಯೆಗೆ ಮುತಾಲಿಕ್ ಕಿಡಿ

    ಮೋದಿ, ಯೋಗಿ ಮಾದರಿಯಲ್ಲಿ ಇವರಿಗೆ ಗಟ್ಸ್ ಇಲ್ಲ: ಪ್ರವೀಣ್ ಹತ್ಯೆಗೆ ಮುತಾಲಿಕ್ ಕಿಡಿ

    ಧಾರವಾಡ: ಸರ್ಕಾರದ ಹದ್ದಿನ ಕಣ್ಣು ಎಲ್ಲಿದೆ?. ಸರ್ಕಾರದ ಬಿಗಿಯಾದ ಕ್ರಮ ಇಲ್ಲ. ಇದೇ ಕಾರಣಕ್ಕೆ ಇದೆಲ್ಲ ಆಗುತ್ತಿದೆ. ಮೋದಿ ಮತ್ತು ಯೋಗಿ ಮಾದರಿಯಲ್ಲಿ ಗಟ್ಸ್ ಇಲ್ಲ. ಆ ಧೈರ್ಯ, ಮಾನಸಿಕತೆ ಇವರಿಗೆ ಇಲ್ಲ. ಆ ನೈತಿಕತೆಯೂ ಇವರಿಗೆ ಇಲ್ಲ ಎಂದು ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕಿಡಿಕಾರಿದ್ದಾರೆ.

    ಬಿಜೆಪಿ ಯುವ ಮುಖಂಡ ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಈ ಕ್ರೌರ್ಯ ಹದ್ದುಬಸ್ತಿನಲ್ಲಿಡೋ ಕಾರ್ಯ ಸರ್ಕಾರ ಕೂಡಲೇ ಮಾಡಬೇಕು. ಇಲ್ಲದೇ ಹೋದಲ್ಲಿ ಇನ್ನೂ ಸಾಕಷ್ಟು ಹಿಂದೂಗಳ ಬಲಿಯಾಗತ್ತೇ ಅನಿಸುತ್ತಿದೆ. ಸರ್ಕಾರ ಈ ವಿಷಯದಲ್ಲಿ ವಿಫಲ ಆಗುತ್ತಿದೆ. ಕೊಲೆ, ಹಲ್ಲೆ, ಗಲಾಟೆಯಾದಾಗ ಉಗ್ರವಾದ ಹೇಳಿಕೆಗಳು ಬರುತ್ತವೆ. ಆದರೆ ಮುಂದೆ ಏನು ಎಂದು ಪ್ರಶ್ನಿಸಿದರು.

    ಇನ್ನುವರೆಗೆ ಯಾವುದೇ ರೀತಿಯ ಕಠಿಣ ಪ್ರಕ್ರಿಯೆ ನಡೆದಿಲ್ಲ. ಇದೇ ಕಾರಣಕ್ಕೆ ಪ್ರವೀಣ್ ಹತ್ಯೆ ಆಗಿದೆ. ಇದು ಕಾನೂನು, ಸರ್ಕಾರದ ವೈಫಲ್ಯ. ಬಿಜೆಪಿಗೆ ಹಿಂದೂಗಳ ಸುರಕ್ಷತೆ ಕಾಳಜಿಯಿದ್ದಲ್ಲಿ ಎಸ್‍ಡಿಪಿಐ, ಪಿಎಫ್‍ಐ ಬ್ಯಾನ್ ಮಾಡಬೇಕು. ಹತ್ಯೆ ಹಿಂದೆ ಕೇರಳದ ಮೂಲ ಅಂತಾ ಹೇಳುತ್ತಿದ್ದಾರೆ. ವಾರದ ಹಿಂದೆ ನಡೆದ ಹತ್ಯೆಗೆ ಸೇಡಿಗೆ ಮಾಡಿದ್ದಾರೆ ಅಂತಾನೂ ಹೇಳುತ್ತಿದ್ದಾರೆ. ಮುಸ್ಲಿಮರು ಮಾಡಿರೋ ಲಕ್ಷಾಂತರ ಕೊಲೆಗಳಿಗೆ ನಾವು ತಿರುಗಿ ಬಿದ್ರೆ ದೇಶದಲ್ಲಿ ಒಬ್ಬನೂ ಮುಸ್ಲಿಂ ಇರಬಾರದು. ಆದರೆ ಆ ಮಾನಸಿಕತೆ ಇರಬಾರದು ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಊರಿನ ಯಾರ ಮನೆಯಲ್ಲಿ ಸಮಸ್ಯೆ ಇದ್ರೂ ಸ್ಪಂದಿಸ್ತಿದ್ದ: ಪ್ರವೀಣ್ ಮಾವ ಕಣ್ಣೀರು

    ಕೊಲೆಗೆ ಕೊಲೆಯೇ ಉತ್ತರ ಅಲ್ಲ. ನ್ಯಾಯಕ್ಕೆ ನ್ಯಾಯಾಲಯ ಇದೆ. ಪೊಲೀಸ್ ಠಾಣೆ ಇದೆ. ಸಂವಿಧಾನಬದ್ಧವಾದ ಹೋರಾಟಕ್ಕೆ ಅವಕಾಶ ಇದೆ. ಮುಲ್ಲಾ ಮೌಲ್ವಿಗಳು ಎಸ್‍ಡಿಪಿಐ, ಪಿಎಫ್‍ಐ ಹದ್ದುಬಸ್ತಿನಲ್ಲಿಡಬೇಕು. ಶಾಂತಿ-ಸೌಹಾರ್ದತೆ ಬೇಕಾದರೆ ಹದ್ದುಬಸ್ತಿನಲ್ಲಿಡಿ. ಇಲ್ಲದೇ ಹೋದಲ್ಲಿ ಹಿಂದೂ ಸಮಾಜ ತಿರುಗಿ ಬೀಳುತ್ತೆ. ಸ್ವಯಂ ರಕ್ಷಣೆಗೆ ಹಿಂದೂ ಸಮಾಜ ಸಿದ್ಧವಾಗಬೇಕಿದೆ. ಇಲ್ಲದೇ ಹೋದಲ್ಲಿ ಸರ್ಕಾರ, ಬಿಜೆಪಿ, ಕಾನೂನು ಏನೂ ಮಾಡಲು ಆಗುವುದಿಲ್ಲ ಎಂದು ಮುತಾಲಿಕ್ ಗರಂ ಆದರು.

    ಮೋದಿ ಮತ್ತು ಯೋಗಿ ಮಾದರಿಯಲ್ಲಿ ಗಟ್ಸ್ ಇಲ್ಲ. ಆ ಧೈರ್ಯ, ಮಾನಸಿಕತೆ ಇವರಿಗೆ ಇಲ್ಲ. ಆ ನೈತಿಕತೆಯೂ ಇವರಿಗೆ ಇಲ್ಲ. ಎಲ್ಲೋ ಒಂದು ಕಡೆ ಆತಂಕ, ಭಯ ಇದೆ. ಮುಸ್ಲಿಂ ವೋಟ್‍ಗಾಗಿ ಸ್ವಲ್ಪ ಅಲ್ಲಾಡ್ತಾ ಇದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಬಿಜೆಪಿಯ ಭದ್ರಕೋಟೆ. ಶಿವಮೊಗ್ಗ ಬಿಜೆಪಿಯ ಭದ್ರ ಕೋಟೆ. ಅವರ ಭದ್ರಕೋಟೆಯಲ್ಲೇ ಹೊಕ್ಕು ಹೊಡಿತಾ ಇದ್ದಾರೆ. ಹಾಗಾದರೆ ಭದ್ರಕೋಟೆ ಛಿದ್ರವಾಗುತ್ತಿದೆಯಲ್ಲ?. ಹಿಂದೂಗಳ ಕೊಲೆಮಾಡಿದರೂ ಏನೂ ಮಾಡಲು ಆಗೋದಿಲ್ಲ ಎಂಬ ಸಂದೇಶ ಕೊಡುತ್ತಿದ್ದಾರೆ ಎಂದು ಹೇಳಿದರು.

    ಎಸ್‍ಡಿಪಿಐ, ಪಿಎಫ್‍ಐ ಬ್ಯಾನ್ ಮಾಡಬೇಕು. ಇಲ್ಲವೇ ಸಿಎಂ ರಾಜೀನಾಮೆ ಕೊಡಬೇಕು. ಇನ್ನೂ ಅದೆಷ್ಟು ಬಲಿ ಕೊಡಬೇಕು ಮಾಡಿದ್ದೀರಿ. ಇದಕ್ಕೆ ಬಿಜೆಪಿಯೇ ಕಾರಣ. ಬ್ಯಾನ್ ಮಾಡದೇ ಇದ್ದುದ್ದಕ್ಕೆ ಈ ಕೊಲೆ ಅಗಿದೆ ಎಂದು ಸಿಡಿಮಿಡಿಗೊಂಡರು.

    Live Tv
    [brid partner=56869869 player=32851 video=960834 autoplay=true]