Tag: ಪ್ರವೀಣ್‌ ಕುಮಾರ್‌ ನೆಟ್ಟಾರು

  • ಊರಿನ ಯಾರ ಮನೆಯಲ್ಲಿ ಸಮಸ್ಯೆ ಇದ್ರೂ ಸ್ಪಂದಿಸ್ತಿದ್ದ: ಪ್ರವೀಣ್ ಮಾವ ಕಣ್ಣೀರು

    ಊರಿನ ಯಾರ ಮನೆಯಲ್ಲಿ ಸಮಸ್ಯೆ ಇದ್ರೂ ಸ್ಪಂದಿಸ್ತಿದ್ದ: ಪ್ರವೀಣ್ ಮಾವ ಕಣ್ಣೀರು

    ಮಂಗಳೂರು: ಪ್ರವೀಣ್ ಇಡೀ ಊರಿಗೆ ಬೇಕಾದ ಹುಡುಗ. ಊರಿನಲ್ಲಿ ಯಾರ ಮನೆಯಲ್ಲಿ ಸಮಸ್ಯೆ ಇದ್ದರೂ ಅದಕ್ಕೆ ಸ್ಪಂದಿಸುತ್ತಿದ್ದ ಎಂದು ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ಕುಮಾರ್ ನೆಟ್ಟಾರು ಮಾವ ರಂಗ ಪೂಜಾರಿ ಹೇಳಿದರು.

    ಪಬ್ಲಿಕ್ ಟಿವಿ ಜೊತೆ ಮಾತನಾಡಿ, ದುಡಿದ ದುಡ್ಡನ್ನೆಲ್ಲ ಕಷ್ಟದಲ್ಲಿರುವವರಿಗೆ ಖರ್ಚು ಮಾಡುತ್ತಿದ್ದ. ಸಾಲ ಮಾಡಿ ಕೋಳಿ ಅಂಗಡಿ ಮಾಡಿದ್ದ. ಕೊರೊನಾ ಸಂದರ್ಭದಲ್ಲಿ ಮನೆಮನೆಗೆ ದಿನಸಿ ವಸ್ತುಗಳನ್ನು ಪೂರೈಕೆ ಮಾಡಿದ್ದಾನೆ. ಪ್ರವೀಣ್ ಬಹಳ ಬಡ ಕುಟುಂಬದ ಹುಡುಗ. ರಾಜಕೀಯ ಅಂದ್ರೆ ಪ್ರವೀಣ್ ಗೆ ಬಹಳ ಇಷ್ಟ ಎಂದು ತಿಳಿಸಿದರು.

    ಏನಿದು ಪ್ರಕರಣ?: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ಪೆರುವಾಜೆ ಕ್ರಾಸ್ ಬಳಿ ಅಕ್ಷಯ್ ಹೆಸರಿನ ಕೋಳಿ ಮಾಂಸದ ಅಂಗಡಿ ಹೊಂದಿದ್ದ ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ಕುಮಾರ್ ನೆಟ್ಟಾರು(31), ಮಂಗಳವಾರ ರಾತ್ರಿ 8 ಗಂಟೆ ಸುಮಾರಿಗೆ ಅಂಗಡಿ ಮುಚ್ಚಿ ಮನೆ ಕಡೆ ಹೊರಟಿದ್ದರು. ಈ ವೇಳೆ ಬೈಕಿನಲ್ಲಿ ಬಂದಿದ್ದ ಮೂವರು ತಲ್ವಾರ್‍ನಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ತಕ್ಷಣವೇ ಪುತ್ತೂರು ಆಸ್ಪತ್ರೆಗೆ ದಾಖಲಿಸಿದರೂ ಕುತ್ತಿಗೆಯ ಭಾಗಕ್ಕೆ ತೀವ್ರ ಏಟು ಬಿದ್ದಿದ್ದ ಕಾರಣ ಪ್ರವೀಣ್ ಮೃತಪಟ್ಟಿದ್ದಾರೆ.

    ಪ್ರವೀಣ್ ಹತ್ಯೆ ಸಂಬಂಧ ಪುತ್ತೂರು, ಸುಳ್ಯ, ಕಡಬ ತಾಲೂಕಿನಲ್ಲಿ ಸ್ವಯಂಪ್ರೇರಿತ ಬಂದ್‍ಗೆ ವಿಎಚ್‍ಪಿ, ಭಜರಂಗದಳ, ಹಿಂದೂ ಜಾಗರಣ ವೇದಿಕೆ ಕರೆ ನೀಡಿದೆ. ಇದನ್ನೂ ಓದಿ: ಕೊಲೆಗಡುಕರ ದಸ್ತಗಿರಿ ಮಾಡಿ ಕ್ರಮ ತೆಗೆದುಕೊಳ್ಳುತ್ತೇವೆ: ಬೊಮ್ಮಾಯಿ

    Live Tv
    [brid partner=56869869 player=32851 video=960834 autoplay=true]

  • ಕೊಲೆಗಡುಕರ ದಸ್ತಗಿರಿ ಮಾಡಿ ಕ್ರಮ ತೆಗೆದುಕೊಳ್ಳುತ್ತೇವೆ: ಬೊಮ್ಮಾಯಿ

    ಕೊಲೆಗಡುಕರ ದಸ್ತಗಿರಿ ಮಾಡಿ ಕ್ರಮ ತೆಗೆದುಕೊಳ್ಳುತ್ತೇವೆ: ಬೊಮ್ಮಾಯಿ

    ಬೆಂಗಳೂರು: ರಾಜ್ಯದಲ್ಲಿ ಒಬ್ಬ ಅಮಾಯಕನ ಕೊಲೆಯಾದಾಗ ಆಕ್ರೋಶ ಇರುತ್ತೆ. ಕೇರಳ ಗಡಿ ದಾಟಿ ಕೊಲೆಗಾರರ ಹಿಡಿಯಲು ಹೋಂ ಮಿನಿಸ್ಟರ್, ಪೊಲೀಸರಿಗೆ ಸೂಚನೆ ನೀಡಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರೂ ಇಲ್ಲದಿರುವಾಗ ಕೊಲೆ ನಡೆದಿದೆ. ಹಿಂದಿನಿಂದ ಬಂದು ಕೊಲೆ ಮಾಡಿದ್ದಾರೆ. ಕೊಲೆಗಡುಕರ ದಸ್ತಗಿರಿ ಮಾಡಿ ಕ್ರಮ ತೆಗೆದುಕೊಳ್ಳುತ್ತೇವೆ. ಇದು ಒಂದು ವ್ಯವಸ್ಥಿತ ಸಂಚು. ಕ್ಷೋಬೆ ಉಂಟು ಮಾಡುವ ವರ್ಗದಿಂದ ಕೊಲೆ ಮಾಡಲಾಗಿದೆ. ಆ ವರ್ಗವನ್ನು ಸದೆ ಬಡಿಯುವ ಕೆಲಸ ಮಾಡ್ತೇವೆ ಎಂದು ಸಿಎಂ ಹೇಳಿದರು. ಇದನ್ನೂ ಓದಿ: ಬೆಳ್ಳಾರೆಯಲ್ಲಿ ಬಿಜೆಪಿ ಮುಖಂಡನ ಬರ್ಬರ ಹತ್ಯೆ – ಮೂರು ತಾಲೂಕು ಬಂದ್‌ಗೆ ಕರೆ

    ಜನರಲ್ಲಿ ಆಕ್ರೋಶ ಇದೆ. ಜನರಿಗೆ ಶಾಂತಿ ಕಾಪಾಡಲು ಮನವಿ ಮಾಡಿಕೊಳ್ಳುತ್ತೇವೆ. ಸಾಮಾಜಿಕ ಜಾಲತಾಣದಲ್ಲಿ ಸರ್ಕಾರದ ವಿರುದ್ಧ ಆಕ್ರೋಶ ಕಾರುತ್ತಿಲ್ಲ. ಆ ಘಟನೆ ನಡೆಯಬಾರದಿತ್ತು ಅಂತ ಆಕ್ರೋಶ ಅವರದ್ದು ಎಂದು ಹೇಳುವ ಮೂಲಕ ಸಾಮಾಜಿಕ ಜಾಲತಾಣದಲ್ಲಿ ವ್ಯಕ್ತವಾಗ್ತಿರುವ ಆಕ್ರೋಶಕ್ಕೆ ಸಿಎಂ ಸ್ಪಷ್ಟನೆ ನಿಡಿದರು.

    ಏನಿದು ಪ್ರಕರಣ?: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ಪೆರುವಾಜೆ ಕ್ರಾಸ್ ಬಳಿ ಅಕ್ಷಯ್ ಹೆಸರಿನ ಕೋಳಿ ಮಾಂಸದ ಅಂಗಡಿ ಹೊಂದಿದ್ದ ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ಕುಮಾರ್ ನೆಟ್ಟಾರು(31), ಮಂಗಳವಾರ ರಾತ್ರಿ 8 ಗಂಟೆ ಸುಮಾರಿಗೆ ಅಂಗಡಿ ಮುಚ್ಚಿ ಮನೆ ಕಡೆ ಹೊರಟಿದ್ದರು. ಈ ವೇಳೆ ಬೈಕಿನಲ್ಲಿ ಬಂದಿದ್ದ ಮೂವರು ತಲ್ವಾರ್‍ನಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ತಕ್ಷಣವೇ ಪುತ್ತೂರು ಆಸ್ಪತ್ರೆಗೆ ದಾಖಲಿಸಿದರೂ ಕುತ್ತಿಗೆಯ ಭಾಗಕ್ಕೆ ತೀವ್ರ ಏಟು ಬಿದ್ದಿದ್ದ ಕಾರಣ ಪ್ರವೀಣ್ ಮೃತಪಟ್ಟಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಬೆಳ್ಳಾರೆಯಲ್ಲಿ ಬಿಜೆಪಿ ಮುಖಂಡನ ಬರ್ಬರ ಹತ್ಯೆ – ಮೂರು ತಾಲೂಕು ಬಂದ್‌ಗೆ ಕರೆ

    ಬೆಳ್ಳಾರೆಯಲ್ಲಿ ಬಿಜೆಪಿ ಮುಖಂಡನ ಬರ್ಬರ ಹತ್ಯೆ – ಮೂರು ತಾಲೂಕು ಬಂದ್‌ಗೆ ಕರೆ

    ಮಂಗಳೂರು: ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ಕುಮಾರ್ ನೆಟ್ಟಾರು(31) ಅವರನ್ನು ಹತ್ಯೆಗೈದ ಹಿನ್ನೆಲೆಯಲ್ಲಿ ಇಂದು ಮೂರು ತಾಲೂಕು ಬಂದ್‌ಗೆ ಕರೆ ನೀಡಲಾಗಿದೆ.

    ಪುತ್ತೂರು, ಸುಳ್ಯ, ಕಡಬ ತಾಲೂಕಿನಲ್ಲಿ ಸ್ವಯಂಪ್ರೇರಿತ ಬಂದ್‌ಗೆ ವಿಎಚ್‌ಪಿ, ಭಜರಂಗದಳ, ಹಿಂದೂ ಜಾಗರಣ ವೇದಿಕೆ ಕರೆ ನೀಡಿದೆ.

    ಅಂಗಡಿ ಮುಂಗಟ್ಟು ತೆರೆಯದಂತೆ ಸಂಘಟನೆಗಳು ವಿನಂತಿ ಮಾಡಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಪುತ್ತೂರು, ಸುಳ್ಯ ತಾಲೂಕಿನ ಸೂಕ್ಷ್ಮ ಸ್ಥಳಗಳಲ್ಲಿ ಹೆಚ್ಚುವರಿ ಪೊಲೀಸರ ನಿಯೋಜನೆ ಮಾಡಲಾಗಿದೆ.

    ಕರಾವಳಿಯಲ್ಲಿ ಹೆಚ್ಚಿನ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ನಾಕಾಬಂಧಿ ರಚಿಸಲಾಗಿದೆ. ಕೊಲೆಗಾರರ ಪತ್ತೆಗೆ 4 ತಂಡ ರಚನೆ ಮಾಡಲಾಗಿದ್ದು, ಇದೊಂದು ಹೇಯಕೃತ್ಯ, ತಪ್ಪಿತಸ್ಥರಿಗೆ ಶಿಕ್ಷೆ ಆಗಲಿದೆ ಎಂದು ಸಿಎಂ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಸಿದ್ದರಾಮೋತ್ಸವಕ್ಕೆ ಟಕ್ಕರ್ – ಬಿಜೆಪಿಯಿಂದ ಜನೋತ್ಸವ

    ಏನಿದು ಪ್ರಕರಣ?
    ಬೆಳ್ಳಾರೆ ಸಮೀಪದ ಪೆರುವಾಜೆ ಕ್ರಾಸ್ ಬಳಿ ಅಕ್ಷಯ್ ಹೆಸರಿನ ಕೋಳಿ ಮಾಂಸದ ಅಂಗಡಿ ಹೊಂದಿದ್ದ ಪ್ರವೀಣ್, ಮಂಗಳವಾರ ರಾತ್ರಿ 8 ಗಂಟೆ ಸುಮಾರಿಗೆ ಅಂಗಡಿ ಮುಚ್ಚಿ ಮನೆ ಕಡೆ ಹೊರಟಿದ್ದರು. ಈ ವೇಳೆ, ಬೈಕಿನಲ್ಲಿ ಬಂದಿದ್ದ ಮೂವರು ತಲ್ವಾರ್‌ನಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ತಕ್ಷಣವೇ ಪುತ್ತೂರು ಆಸ್ಪತ್ರೆಗೆ ದಾಖಲಿಸಿದರೂ ಕುತ್ತಿಗೆಯ ಭಾಗಕ್ಕೆ ತೀವ್ರ ಏಟು ಬಿದ್ದಿದ್ದ ಕಾರಣ ಪ್ರವೀಣ್ ಮೃತಪಟ್ಟಿದ್ದಾರೆ.

    ಪ್ರವೀಣ್ ಪತ್ನಿ ಆಕ್ರಂದನ ಮುಗಿಲು ಮುಟ್ಟಿದೆ. ಈ ಹತ್ಯೆ ಕಳೆದ 4 ದಿನಗಳ ಹಿಂದೆ ನಡೆದಿದ್ದ ಅನ್ಯಕೋಮಿನ ಯುವಕನೋರ್ವನ ಕೊಲೆಗೆ ಪ್ರತೀಕಾರ ಎನ್ನಲಾಗುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲೂ ಪ್ರತೀಕಾರ ತೀರಿಸಿಕೊಳ್ಳುವುದಾಗಿ ಹಲವು ಪೋಸ್ಟ್‌ಗಳು ಹರಿದಾಡಿದ್ದವು. ಹೀಗಾಗಿ, ಇದು ಸೇಡಿನ ಹತ್ಯೆ ಇರಬಹುದು ಎಂದು ಶಂಕಿಸಲಾಗಿದೆ.

    ಪ್ರವೀಣ್ ಹತ್ಯೆ ಖಂಡಿಸಿ, ಯುವ ಮೋರ್ಚಾ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಪುತ್ತೂರಿನ ಖಾಸಗಿ ಆಸ್ಪತ್ರೆ ಮುಂಭಾಗ ಧರಣಿ ಕೂತು ಡಿಸಿ ಸ್ಥಳಕ್ಕೆ ಬರುವಂತೆ ಆಗ್ರಹಿಸಿದರು.

    Live Tv
    [brid partner=56869869 player=32851 video=960834 autoplay=true]