Tag: ಪ್ರವೀಣ್ ನೆಟ್ಟಾರ್

  • ಪ್ರವೀಣ್ ನೆಟ್ಟಾರ್ ಹತ್ಯೆ ಆರೋಪಿಗಳು ಶರಣಾಗದಿದ್ದರೆ ಮನೆ ಜಪ್ತಿ

    ಪ್ರವೀಣ್ ನೆಟ್ಟಾರ್ ಹತ್ಯೆ ಆರೋಪಿಗಳು ಶರಣಾಗದಿದ್ದರೆ ಮನೆ ಜಪ್ತಿ

    ಮಂಗಳೂರು: ಪ್ರವೀಣ್ ನೆಟ್ಟಾರ್ (Praveen Nettar) ಹತ್ಯೆ ಆರೋಪಿಗಳಿಗೆ ಶರಣಾಗಲು ಎನ್‌ಐಎ (NIA) ಕೊನೆಯ ವಾರ್ನಿಂಗ್ ನೀಡಿದ್ದು, ಆರೋಪಿಗಳು ಜೂನ್ 30ರ ಒಳಗೆ ಎನ್‌ಐಎ ನ್ಯಾಯಾಲಯಕ್ಕೆ ಶರಣಾಗಬೇಕು. ಇಲ್ಲವಾದಲ್ಲಿ ಆರೋಪಿಗಳ ಮನೆಯನ್ನು ಜಪ್ತಿ ಮಾಡಲಾಗುವುದು ಎಂದು ಖಡಕ್ ಆದೇಶ ಹೊರಡಿಸಿದೆ.

    ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ (Bellare) ವಾಸವಿದ್ದ ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರ್ ಪೆರುವಾಜೆ ಕ್ರಾಸ್ ಬಳಿ ಕೋಳಿ ಮಾಂಸದ ಅಂಗಡಿ ನಡೆಸುತ್ತಿದ್ದರು. 2022ರ ಜುಲೈ 26ರಂದು ಅಂಗಡಿ ಮುಗಿಸಿ ಮನಗೆ ಹೊರಟ ವೇಳೆ ಬೈಕಿನಲ್ಲಿ ಬಂದ ಮೂವರು ದುಷ್ಕರ್ಮಿಗಳು ತಲ್ವಾರ್‌ನಿಂದ ಏಕಾಏಕಿ ಅವರ ಮೇಲೆ ದಾಳಿ ನಡೆಸಿದ್ದರು. ಇದನ್ನೂ ಓದಿ: ಅಕ್ಕಿ ಬದಲು ಹಣ ನೀಡುವ ಸರ್ಕಾರದ ನಿರ್ಧಾರಕ್ಕೆ ಕಟೀಲ್ ಖಂಡನೆ

    ಇದರಿಂದ ತೀವ್ರ ಗಾಯಗೊಂಡಿದ್ದ ಪ್ರವೀಣ್ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಸೇರಿಸಲಾಯಿತಾದರೂ ಕುತ್ತಿಗೆಯ ಭಾಗಕ್ಕೆ ಬಲವಾದ ಪೆಟ್ಟು ಬಿದ್ದಿದ್ದರಿಂದ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದರು. ಈ ಪ್ರಕರಣದ ತನಿಖೆಯನ್ನು ಅಂದಿನ ಬಿಜೆಪಿ ಸರ್ಕಾರ ಎನ್‌ಐಎಗೆ ಒಪ್ಪಿಸಿತ್ತು. ಈ ಹಿನ್ನೆಲೆ ತನಿಖೆ ಕೈಗೊಂಡಿರುವ ಎನ್‌ಐಎ ಹಲವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದೆ. ಇದನ್ನೂ ಓದಿ: ಜುಲೈ 1 ರಿಂದ ಎಕ್ಸ್‌ಪ್ರೆಸ್‌ ವೇ 2ನೇ ಟೋಲ್ ಆರಂಭ, ಯಾವ ವಾಹನಗಳಿಗೆ ಎಷ್ಟು ಶುಲ್ಕ ?

    ತನಿಖೆಯನ್ನು ಚುರುಕುಗೊಳಿಸಿರುವ ಎನ್‌ಐಎ ಸುಳ್ಯದಲ್ಲಿ ಮೈಕ್ ಘೋಷಣೆಯ ಮೂಲಕ ಆರೋಪಿಗಳಿಗೆ ಜೂನ್ 30ರ ಒಳಗೆ ಶರಣಾಗಲು ಡೆಡ್‌ಲೈನ್ ನೀಡಿದೆ. ಆರೋಪಿಗಳು ಶರಣಾಗದಿದ್ದರೆ ಅವರ ಮನೆಯನ್ನು ಜಪ್ತಿ (Seize) ಪಡಿಸುವುದಾಗಿ ಆದೇಶ ಹೊರಡಿಸಿದೆ. ಅಲ್ಲದೇ ಆರೋಪಿಗಳ ಸುಳಿವು ಕೊಟ್ಟಲ್ಲಿ ನಗದು ಬಹುಮಾನ ಕೊಡುವುದಾಗಿ ಘೋಷಿಸಿದೆ. ಇದನ್ನೂ ಓದಿ: 5 ಕೆ.ಜಿ ಅಕ್ಕಿ, ಉಳಿದ 5 ಕೆ.ಜಿ ಅಕ್ಕಿಯ ಹಣ ಕೊಡಲು ಸರ್ಕಾರ ನಿರ್ಧಾರ

    ಇನ್ನು ಸುಳ್ಯದ ಕಲ್ಲುಮುಟ್ಟುವಿನಲ್ಲಿ ವಾಸವಿದ್ದ ಆರೋಪಿಗಳಾದ ಉಮ್ಮರ್ ಫಾರೂಕ್ ಮತ್ತು ಮುಸ್ತಫಾ ಮನೆಗೆ ಭೇಟಿ ನೀಡಿದ ಎನ್‌ಐಎ ಅಧಿಕಾರಿಗಳು ಅವರ ಮನೆಗೆ ಎನ್‌ಐಎ ನ್ಯಾಯಾಲಯದ ಆದೇಶ ಪ್ರತಿಯನ್ನು ಅಂಟಿಸಿದ್ದಾರೆ. ಇನ್ನೆರಡು ದಿನಗಳಲ್ಲಿ ಆರೋಪಿಗಳು ಶರಣಾಗುವಂತೆ ಎನ್‌ಐಎ ಸೂಚಿಸಿದ್ದು, ಇಲ್ಲವಾದಲ್ಲಿ ಅವರಿಗೆ ಸೇರಿದ ಸಕಲ ಆಸ್ತಿಗಳನ್ನು ಜಪ್ತಿ ಮಾಡುವುದಾಗಿ ಎಚ್ಚರಿಕೆ ನೀಡಿದೆ. ಇದನ್ನೂ ಓದಿ: ಬಿಜೆಪಿ ಅವಧಿಯ ಅಕ್ರಮಗಳನ್ನು ವಿವಿಧ ತನಿಖಾ ಸಂಸ್ಥೆಗಳ ಮೂಲಕ ತನಿಖೆ: ಪ್ರಿಯಾಂಕ್ ಖರ್ಗೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಪ್ರವೀಣ್‌ ನೆಟ್ಟಾರು ಕನಸು ನನಸು – ನೂತನ ಮನೆಯ ಗೃಹ ಪ್ರವೇಶ,  ಸ್ಮಾರಕ ಲೋಕಾರ್ಪಣೆ

    ಪ್ರವೀಣ್‌ ನೆಟ್ಟಾರು ಕನಸು ನನಸು – ನೂತನ ಮನೆಯ ಗೃಹ ಪ್ರವೇಶ, ಸ್ಮಾರಕ ಲೋಕಾರ್ಪಣೆ

    ಮಂಗಳೂರು: ದುಷ್ಕರ್ಮಿಗಳ ದಾಳಿಗೆ ಬಲಿಯಾಗಿದ್ದ ಬಿಜೆಪಿ (BJP) ಕಾರ್ಯಕರ್ತ ಪ್ರವೀಣ್ ನೆಟ್ಟಾರ್ (Praveen Kumar Nettar) ಅವರ ನೂತನ ಮನೆಯ ಗೃಹ ಪ್ರವೇಶವು ಗುರುವಾರ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯ ನೆಟ್ಟಾರ್‌ನಲ್ಲಿ ನೆರವೆರಿದೆ.

    ಬೆಳ್ಳಾರೆಯ ನೆಟ್ಟಾರ್‌ನ ಹಳೆ ಮನೆಯ ಆವರಣದಲ್ಲೇ ಹೊಸ ಮನೆ ನಿರ್ಮಾಣವನ್ನು ಬಿಜೆಪಿ ವತಿಯಿಂದ ಮಾಡಿದ್ದಾರೆ. ಜೊತೆಗೆ ಮನೆ ಮುಂಭಾಗದಲ್ಲಿ ಪ್ರವೀಣ್ ಸ್ಮಾರಕ ನಿರ್ಮಿಸಲಾಗಿದೆ. ಪ್ರವೀಣ್ ಸ್ಮಾರಕವನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ (Nalinkumar Kateel) ಅವರು ಗುರುವಾರ ಲೋಕಾರ್ಪಣೆ ಮಾಡಲಾಯಿತು.

    ಕಾರ್ಯಕ್ರಮದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ನೆರೆದಿದ್ದರು. ಬಿಜೆಪಿ ವತಿಯಿಂದ ನಿರ್ಮಾಣಗೊಂಡ ಪ್ರವೀಣ್ ನೆಟ್ಟಾರ್‌ನ ಕನಸಿನ ಮನೆಯನ್ನು ಪ್ರವೀಣ್ ಕುಟುಂಬಸ್ಥರಿಗೆ ಹಸ್ತಾಂತರಿಸಲಾಯಿತು. ಇದನ್ನೂ ಓದಿ: ರೈತ ಯುವಕರನ್ನ ಮದುವೆ ಆಗೋರಿಗೆ 2 ಲಕ್ಷ ಪ್ರೋತ್ಸಾಹ ಧನ – JDS ಪ್ರಣಾಳಿಕೆ ಬಿಡುಗಡೆ

    ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ವತಿಯಿಂದ ಸುಳ್ಯ ತಾಲೂಕಿನ ನೆಟ್ಟಾರುವಿನಲ್ಲಿ ಐದೇ ತಿಂಗಳಲ್ಲಿ ವಿಶಾಲವಾದ ಸುಂದರ ಮನೆ ನಿರ್ಮಾಣವಾಗಿದೆ. 70 ಲಕ್ಷ ವೆಚ್ಚದಲ್ಲಿ, 2,800 ಚದರಡಿ ವಿಸ್ತೀರ್ಣದಲ್ಲಿ ಮನೆ‌‌ ನಿರ್ಮಾಣ ಮಾಡಲಾಗಿದೆ. ಮಾತ್ರವಲ್ಲದೆ, ನೀಡಿದ ಆಶ್ವಾಸನೆಯಂತೆ, ಪ್ರವೀಣ್ ಪತ್ನಿಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ‌ಕಚೇರಿಯಲ್ಲಿ ಉದ್ಯೋಗವನ್ನೂ ಕೊಡಿಸಲಾಗಿದೆ.

    ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ಪೆರುವಾಜೆ ಕ್ರಾಸ್ ಬಳಿ ಅಕ್ಷಯ್ ಹೆಸರಿನ ಕೋಳಿ ಮಾಂಸದ ಅಂಗಡಿ ಹೊಂದಿದ್ದ ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ಕುಮಾರ್ ನೆಟ್ಟಾರು (31), ಮಂಗಳವಾರ ರಾತ್ರಿ 8 ಗಂಟೆ ಸುಮಾರಿಗೆ ಅಂಗಡಿ ಮುಚ್ಚಿ ಮನೆ ಕಡೆ ಹೊರಟಿದ್ದರು. ಈ ವೇಳೆ ಬೈಕಿನಲ್ಲಿ ಬಂದಿದ್ದ ಮೂವರು ತಲ್ವಾರ್‌ನಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ತಕ್ಷಣವೇ ಪುತ್ತೂರು ಆಸ್ಪತ್ರೆಗೆ ದಾಖಲಿಸಿದರೂ ಕುತ್ತಿಗೆಯ ಭಾಗಕ್ಕೆ ತೀವ್ರ ಏಟು ಬಿದ್ದಿದ್ದ ಕಾರಣ ಪ್ರವೀಣ್ ಮೃತಪಟ್ಟಿದ್ದರು. ಇದನ್ನೂ ಓದಿ: ಕಾಂಗ್ರೆಸ್ ಮೋದಿಯವರನ್ನು ಸಾವಿನ ಕೂಪಕ್ಕೆ ತಳ್ಳೋ ಆಹ್ವಾನ ನೀಡಿತ್ತು: ಸ್ಮೃತಿ ಇರಾನಿ

  • ಅಂದು ಪ್ರಶಾಂತ್ ಮಿಸ್.. ಪ್ರವೀಣ್ ನೆಟ್ಟಾರು ಮರ್ಡರ್..!

    ಅಂದು ಪ್ರಶಾಂತ್ ಮಿಸ್.. ಪ್ರವೀಣ್ ನೆಟ್ಟಾರು ಮರ್ಡರ್..!

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಸರ್ಕಾರಕ್ಕೆ ಜನೋತ್ಸವದ ಬದಲು ಜನಾಕ್ರೋಶದ ದರ್ಶನವಾಗಿದೆ – ಕಾರ್ಯಕ್ರಮ ರದ್ದುಗೊಳಿಸಿದ್ದು ಮೃತನ ಮೇಲಿನ ಗೌರವದಿಂದಲ್ಲ: ಕಾಂಗ್ರೆಸ್

    ಸರ್ಕಾರಕ್ಕೆ ಜನೋತ್ಸವದ ಬದಲು ಜನಾಕ್ರೋಶದ ದರ್ಶನವಾಗಿದೆ – ಕಾರ್ಯಕ್ರಮ ರದ್ದುಗೊಳಿಸಿದ್ದು ಮೃತನ ಮೇಲಿನ ಗೌರವದಿಂದಲ್ಲ: ಕಾಂಗ್ರೆಸ್

    ಬೆಂಗಳೂರು: ಸರ್ಕಾರಕ್ಕೆ ಜನೋತ್ಸವದ ಬದಲಾಗಿ ಜನಾಕ್ರೋಶದ ದರ್ಶನವಾಗಿದೆ ಜನೋತ್ಸವವನ್ನು ರದ್ದುಗೊಳಿಸಿದ್ದು ಜನರ ಆಕ್ರೋಶದ ಕಾರಣಕ್ಕೆ ಹೊರತು ಮೃತನ ಮೇಲಿನ ಗೌರವದಿಂದಲ್ಲ ಎಂದು ಬಿಜೆಪಿ ಸರ್ಕಾರದ ವಿರುದ್ಧ ಸರಣಿ ಟ್ವೀಟ್ ಮೂಲಕ ಕಾಂಗ್ರೆಸ್ ಹರಿಹಾಯ್ದಿದೆ.

    Congress

    ಟ್ವೀಟ್‍ನಲ್ಲಿ ಏನಿದೆ?:
    ತಮ್ಮ ಸರ್ಕಾರದ ವೈಫಲ್ಯಗಳೇ ಮುಖ್ಯಮಂತ್ರಿಗಳ ನಿದ್ದೆಗೆಡುವಂತೆ ಮಾಡಿದೆ. ಜನರಿಗೆ ನಿದ್ದೆಗೆಡುವಂತ ಆಡಳಿತ ನೀಡಿದಾಗ ಜನರೂ ಸರ್ಕಾರದ ನಿದ್ದೆಗೆಡಿಸುತ್ತಾರೆ ಎನ್ನಲು ಮಧ್ಯರಾತ್ರಿಯ ಪತ್ರಿಕಾಗೋಷ್ಠಿಯೇ ಸಾಕ್ಷಿ. ಜನೋತ್ಸವವನ್ನು ರದ್ದುಗೊಳಿಸಿದ್ದು ಜನರ ಆಕ್ರೋಶದ ಕಾರಣಕ್ಕೆ ಹೊರತು ಮೃತನ ಮೇಲಿನ ಗೌರವದಿಂದಲ್ಲ. ಮಧ್ಯರಾತ್ರಿಯ ಯೂಟರ್ನ್‍ಗಳ ವೃತ್ತಾಂತಗಳು ಬಿಜೆಪಿ ಸರ್ಕಾರಕ್ಕೆ ಹೊಸದೇನೂ ಅಲ್ಲ. ಸರ್ಕಾರಿ ಕಚೇರಿಗಳಲ್ಲಿನ ಚಿತ್ರೀಕರಣ ವಿಷಯದಲ್ಲೂ ಸರ್ಕಾರ ಹೀಗೆಯೇ ಯೂಟರ್ನ್‍ನಾಗಿ ರಾತ್ರಿಯವರೆಗೂ ಕಾದಿತ್ತು. ಬಹುಶಃ ಈ ಸರ್ಕಾರಕ್ಕೆ ಜ್ಞಾನೋದಯವಾಗಲು ರಾತ್ರಿಯೇ ಆಗಬೇಕೇನೋ! ಜನೋತ್ಸವದ ಬದಲಾಗಿ ಜನಾಕ್ರೋಶದ ದರ್ಶನವಾಗಿದೆ ಈ ಸರ್ಕಾರಕ್ಕೆ. ಇದನ್ನೂ ಓದಿ: ಪ್ರವೀಣ್ ನೆಟ್ಟಾರ್ ತಂದೆ ಆರೋಗ್ಯದಲ್ಲಿ ಏರುಪೇರು- ಆಸ್ಪತ್ರೆಗೆ ದಾಖಲು

    ಸರ್ಕಾರದ ‘ಕಠಿಣ ಕ್ರಮ ಕೈಗೊಳ್ಳುತ್ತೇವೆ’ ಎಂಬ ಮಾತಿನ ಅಸಲಿ ಅರ್ಥ? ಜೈಲಿನಲ್ಲಿ ಗಾಂಜಾ ವ್ಯವಸ್ಥೆ ಮಾಡುತ್ತೇವೆ. ಮೊಬೈಲ್ ನೀಡುತ್ತೇವೆ. ಬಿರಿಯಾನಿ ನೀಡುತ್ತೇವೆ. ಮೋಜು ಮಸ್ತಿಗೆ ಸುವ್ಯವಸ್ಥೆ ಮಾಡಿಕೊಡುತ್ತೇವೆ! ಸರ್ಕಾರದ ಅಸಾಮರ್ಥ್ಯವನ್ನು ಸ್ವತಃ ಅವರ ಕಾರ್ಯಕರ್ತರೇ ಅರ್ಥ ಮಾಡಿಕೊಂಡಿದ್ದಾರೆ ಎಂದು ಸರಣಿ ಟ್ವೀಟ್ ಮೂಲಕ ಕಾಂಗ್ರೆಸ್ ಕಾಲೆಳೆದಿದೆ. ಇದನ್ನೂ ಓದಿ: ನಮ್ಮ ಕಾರ್ಯಕರ್ತರನ್ನು ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ನಳಿನ್ ಕುಮಾರ್ ಕಟೀಲ್

    ಇತ್ತ ಈವರೆಗೆ ಶಾಂತವಾಗಿದ್ದ ಕರಾವಳಿ ಪ್ರವೀಣ್ ಹತ್ಯೆಯ ಬಳಿಕ ಆಕ್ರೋಶ ಭುಗಿಲೆದ್ದಿದೆ. ಹಿಂದೂ ಕಾರ್ಯಕರ್ತರು ಜಿಲ್ಲೆಯ ಜನಪ್ರತಿನಿಧಿಗಳ ವಿರುದ್ಧ ಸಿಡಿದೆದ್ದಿದ್ದಾರೆ. ರಾಜ್ಯಾದ್ಯಂತ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ಕೇಳಿಬರುತ್ತಿದೆ. ಪರಿಸ್ಥಿತಿ ತಿಳಿಗೊಳಿಸಲು ಸರ್ಕಾರ ಪ್ರಯತ್ನಿಸುತ್ತಿದೆ.

    Live Tv
    [brid partner=56869869 player=32851 video=960834 autoplay=true]

  • PFI ಬ್ಯಾನ್ ಕುರಿತು ಕೇಂದ್ರ ಗೃಹ ಇಲಾಖೆ ಜೊತೆ ಚರ್ಚೆ: ಪ್ರಹ್ಲಾದ್ ಜೋಶಿ

    PFI ಬ್ಯಾನ್ ಕುರಿತು ಕೇಂದ್ರ ಗೃಹ ಇಲಾಖೆ ಜೊತೆ ಚರ್ಚೆ: ಪ್ರಹ್ಲಾದ್ ಜೋಶಿ

    ನವದೆಹಲಿ: ಪಿಎಫ್‍ಐ ಸಂಘಟನೆ ಬ್ಯಾನ್ ಮಾಡುವ ಕುರಿತಂತೆ ಕೇಂದ್ರ ಗೃಹ ಇಲಾಖೆ ಜೊತೆ ಸಿಎಂ ಬೊಮ್ಮಾಯಿ ಚರ್ಚಿಸಲಿದ್ದಾರೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.

    ಈ ಕುರಿತಂತೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಸಿಎಂ ಬಸವರಾಜ್ ಬೊಮ್ಮಾಯಿ ನನ್ನೊಂದಿಗೆ ಚರ್ಚೆ ನಡೆಸಿದ್ದಾರೆ. ಪ್ರವೀಣ್ ನೆಟ್ಟಾರು ಅವರ ಹತ್ಯೆ ಹಿಂದೆ ಪಿಎಫ್‍ಐ ಸಂಘಟನೆಗಳ ಕೈವಾಡ ಇರುವ ಬಗ್ಗೆ ಬೊಮ್ಮಾಯಿ ಅವರು ಶಂಕೆ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ನೀವು ಊರಿಗೆ ಹಿರಿಯರು, ಕೋಳಿ ಅಂಗಡಿ ಉದ್ಘಾಟನೆಗೆ ತಂದೆಯನ್ನು ಆಹ್ವಾನಿಸಿದ್ದರು: ಪ್ರವೀಣ್ ಬಗ್ಗೆ ಆರೀಫ್ ಮಾತು

    ಪಿಎಫ್‍ಐ ಚಟುವಟಿಕೆಗಳ ಮೇಲೆ ರಾಷ್ಟ್ರಮಟ್ಟದಲ್ಲಿ ನಿಗಾ ಇಡಬೇಕಾಗಿದೆ. ಇಂಥಹ ಸಂಘಟನೆಗಳನ್ನು ರಾಷ್ಟ್ರಮಟ್ಟದಲ್ಲಿಯೇ ಬ್ಯಾನ್ ಮಾಡಬೇಕು ಎಂಬ ಅಭಿಪ್ರಾಯ ಬಸವರಾಜ್ ಬೊಮ್ಮಾಯಿ ಅವರದ್ದಾಗಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ಗೃಹ ಇಲಾಖೆಯ ಜೊತೆ ಚರ್ಚೆ ನಡೆಸುವುದಾಗಿ ನನ್ನ ಜೊತೆ ಮಾತನಾಡುವಾಗ ತಿಳಿಸಿದ್ದಾರೆ ಎಂದರು.

    ಪ್ರವೀಣ್ ನೆಟ್ಟಾರು ಹತ್ಯೆ ಹಿನ್ನೆಲೆ ಪ್ರಹ್ಲಾದ್ ಜೋಶಿ ಅವರು ಪಿಎಫ್‍ಐ, ಎಸ್‍ಡಿಪಿಐ ಸಂಘಟನೆಯವರು ಇಂಥಹ ಕೃತ್ಯದ ಹಿಂದಿದ್ದಾರೆ ಎಂಬ ಶಂಕೆ ವ್ಯಕ್ತಪಡಿಸಿದರು. ಈ ಸಂಘಟನೆಗಳ ಕೈವಾಡ ಇರುವ ಬಗ್ಗೆ ಹಲವು ಪ್ರಾಥಮಿಕ ಮತ್ತು ಮಾಧ್ಯಮ ವರದಿಗಳಿವೆ. ಇಂಥಹ ಕೃತ್ಯ ನಡೆಸುವವರಿಗೆ ಕೇರಳದಲ್ಲಿ ರಕ್ಷಣೆ ನೀಡಲಾಗುತ್ತಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಇದನ್ನೂ ಓದಿ: ನಮ್ಮ ಕಾರ್ಯಕರ್ತರನ್ನು ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ನಳಿನ್ ಕುಮಾರ್ ಕಟೀಲ್

    ಪ್ರವೀಣ್ ಹತ್ಯೆಯಿಂದಾಗಿ ರಾಜ್ಯದಲ್ಲಿ ಜನಾಕ್ರೋಶ ವ್ಯಕ್ತವಾಗುತ್ತಿರುವ ಬೆನ್ನಲ್ಲೇ ಬಸವರಾಜ್ ಬೊಮ್ಮಾಯಿ ಅವರು, ಪ್ರಹ್ಲಾದ್ ಜೋಶಿ ಅವರೊಂದಿಗೆ ಚರ್ಚೆ ನಡೆಸಿದ್ದಾರೆ. ಪಿಎಫ್‍ಐ ಬ್ಯಾನ್ ಮಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ನಿರ್ಧಾರ ಕೈಗೊಳ್ಳಬೇಕು. ಈ ನಿಟ್ಟಿನಲ್ಲಿ ಗೃಹ ಇಲಾಖೆ ಜೊತೆ ಚರ್ಚೆ ನಡೆಸುವ ಬಗ್ಗೆ ಜೋಶಿ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರ್ ಪಂಚಭೂತಗಳಲ್ಲಿ ಲೀನ

    ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರ್ ಪಂಚಭೂತಗಳಲ್ಲಿ ಲೀನ

    ಮಂಗಳೂರು: ನಿನ್ನೆ ದುಷ್ಕರ್ಮಿಗಳ ಅಟ್ಟಹಾಸಕ್ಕೆ ಬಲಿಯಾಗಿದ್ದ ಬಿಜೆಪಿ ಯುವ ಮುಖಂಡ ಪ್ರವೀಣ್ ಕುಮಾರ್ ನೆಟ್ಟಾರು ಪಂಚಾಭೂತಗಳಲ್ಲಿ ಲೀನರಾದರು.

    ಪ್ರವೀಣ್ ಮೃತದೇಹವನ್ನು ಪುತ್ತೂರಿನಿಂದ ಮೆರವಣಿಗೆ ಮೂಲಕ ಅವರ ಸ್ವಗೃಹಕ್ಕೆ ತರಲಾಗಿತ್ತು. ಸಾರ್ವಜನಿಕರ ಅಂತಿಮ ದರ್ಶನದ ಬಳಿಕ ಬಿಲ್ಲವ ಸಂಪ್ರದಾಯದಂತೆ ಅಂತ್ಯಸಂಸ್ಕಾರ ನೆರವೇರಿಸಲಾಯಿತು. ಮಂತ್ರ ಪಠಣದ ಬಳಿಕ ಮನೆ ಸಮೀಪದಲ್ಲೇ ಪ್ರವೀಣ್ ಚಿತೆಗೆ ಮೂವರು ಮಾವಂದಿರಾದ ಶೀನಪ್ಪ ಪೂಜಾರಿ, ಲಿಂಗಪ್ಪ ಪೂಜಾರಿ, ಲೋಕೇಶ್ ಪೂಜಾರಿ ಅಗ್ನಿ ಸ್ಪರ್ಶ ಮಾಡಿದ್ದಾರೆ.

    ಹಿಂದೂ ಸಂಪ್ರದಾಯದಂತೆ ಪ್ರವೀಣ್ ನೆಟ್ಟಾರ್ ಅವರ ಅಂತ್ಯ ಸಂಸ್ಕಾರವನ್ನು ನೆರವೇರಿಸಿದರು. ಸಂಘಪರಿವಾರದ ಕಾರ್ಯಕರ್ತರು ಅಪಾರ ಸಂಖ್ಯೆಯಲ್ಲಿ ನೆರೆದಿದ್ದರು. ಇತ್ತ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಇದನ್ನೂ ಓದಿ: ಪ್ರವೀಣ್ ಹತ್ಯೆ ಖಂಡಿಸಿ ಬಾಗಲಕೋಟೆ ಯುವ ಮೋರ್ಚಾದ ಕಾರ್ಯಕರ್ತರು ರಾಜೀನಾಮೆ

    ಘಟನೆ ಏನು?: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ಪೆರುವಾಜೆ ಕ್ರಾಸ್ ಬಳಿ ಅಕ್ಷಯ್ ಹೆಸರಿನ ಕೋಳಿ ಮಾಂಸದ ಅಂಗಡಿ ಹೊಂದಿದ್ದ ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ಕುಮಾರ್ ನೆಟ್ಟಾರು(31), ಮಂಗಳವಾರ ರಾತ್ರಿ 8 ಗಂಟೆ ಸುಮಾರಿಗೆ ಅಂಗಡಿ ಮುಚ್ಚಿ ಮನೆ ಕಡೆ ಹೊರಟಿದ್ದರು. ಈ ವೇಳೆ ಬೈಕಿನಲ್ಲಿ ಬಂದಿದ್ದ ಮೂವರು ತಲ್ವಾರ್‌ನಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ತಕ್ಷಣವೇ ಪುತ್ತೂರು ಆಸ್ಪತ್ರೆಗೆ ದಾಖಲಿಸಿದರೂ ಕುತ್ತಿಗೆಯ ಭಾಗಕ್ಕೆ ತೀವ್ರ ಏಟು ಬಿದ್ದಿದ್ದ ಕಾರಣ ಪ್ರವೀಣ್ ಮೃತಪಟ್ಟಿದ್ದರು. ಇದನ್ನೂ ಓದಿ: ನಳಿನ್‌ ಕುಮಾರ್ ಕಾರನ್ನು ಎತ್ತಲು ಪ್ರಯತ್ನಿಸಿದ ಕಾರ್ಯಕರ್ತರು – ಬೆಳ್ಳಾರೆಯಲ್ಲಿ ಲಾಠಿಚಾರ್ಜ್

    Live Tv
    [brid partner=56869869 player=32851 video=960834 autoplay=true]