Tag: ಪ್ರಶಾಂತ್ ಸಂಬರ್ಗಿ

  • ಮಹಾ ಕುಂಭಮೇಳ -‌ ಫೋಟೋ ಶೇರ್‌ ಮಾಡಿದ್ದ ಸಂಬರ್ಗಿ ವಿರುದ್ಧ ಪ್ರಕಾಶ್‌ ರಾಜ್‌ ದೂರು

    ಮಹಾ ಕುಂಭಮೇಳ -‌ ಫೋಟೋ ಶೇರ್‌ ಮಾಡಿದ್ದ ಸಂಬರ್ಗಿ ವಿರುದ್ಧ ಪ್ರಕಾಶ್‌ ರಾಜ್‌ ದೂರು

    – ಪುಣ್ಯ ಸ್ನಾನ ನಡೆವಾಗ ರಾಜಕೀಯ ನಡಿತಿದೆ

    ಮೈಸೂರು: ಮಹಾ ಕುಂಭಮೇಳದಲ್ಲಿ ನಟ ಪ್ರಕಾಶ್ ರಾಜ್ (Prakash Raj) ಸ್ನಾನ ಮಾಡುತ್ತಿರುವ ರೀತಿಯ ಫೇಕ್ ಫೋಟೊ ವೈರಲ್ ಮಾಡಿದ್ದ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರ್ಗಿ (Prashanth Sambargi) ವಿರುದ್ಧ ಮೈಸೂರಿನಲ್ಲಿ (Mysuru) ಎಫ್‌ಐಆರ್ ದಾಖಲಾಗಿದೆ.

    ಮೈಸೂರಿನ ಲಕ್ಷ್ಮೀಪುರಂ ಪೊಲೀಸ್ ಠಾಣೆಯಲ್ಲಿ ಪ್ರಕಾಶ್ ರಾಜ್ ನೀಡಿದ ದೂರಿನ ಅಡಿ ಎಫ್‌ಐಆರ್‌ ದಾಖಲಾಗಿದೆ. ಈ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕುಂಭಮೇಳದ ಪುಣ್ಯ ಸ್ನಾನ ದೇಶದಲ್ಲಿ ನಡೆಯುತ್ತಿದೆ. ಹಿಂದೂ ಧರ್ಮದವರಿಗೆ ಹಾಗೂ ದೇವರನ್ನ ನಂಬುವವರಿಗೆ‌ ಅದು ಪುಣ್ಯವಾದ ಸ್ಥಳ. ಈಗ ಎಐ ಆ್ಯಪ್ ಬಳಿಸಿ ಪ್ರಕಾಶ್ ರೈ ಕುಂಭಮೇಳದಲ್ಲಿ ಸ್ನಾನ ಮಾಡಿದ್ರಾ? ಎಂದು ಫೋಟೊ ವೈರಲ್ ಮಾಡುತ್ತಿದ್ದಾರೆ. ಅಂತಹ ಪುಣ್ಯದ ಸ್ನಾನ ನಡೆಯಬೇಕದಾರೆ ಅದರಲ್ಲಿ ರಾಜಕಾರಣ ನಡೆಯುತ್ತಿದೆ ಎಂದು ಕಿಡಿಕಾರಿದ್ದಾರೆ.

    ಮೊದಲಿನಿಂದಲೂ ಪ್ರಕಾಶ್ ರೈ ಹಿಂದು ವಿರೋಧಿ ಎಂದು ಸುಳ್ಳು ಸುದ್ದಿ ಹಬ್ಬಿಸಿಕೊಂಡು ಬಂದಿದ್ದಾರೆ. ಪ್ರಶಾಂತ್ ಸಂಬರ್ಗಿ ಪ್ರಖ್ಯಾತರೋ? ಕುಖ್ಯಾತರೊ?‌ ನನಗೆ ಗೊತ್ತಿಲ್ಲ. ದೇಶದಲ್ಲಿ ಸುಳ್ಳು ಸುದ್ದಿಗಳನ್ನ ಹಬ್ಬಿಸುವುದು ಅಭ್ಯಾಸವಾಗಿ ಬಿಟ್ಟಿದೆ. ಇದನ್ನ ಯಾರು ಪ್ರಶ್ನೆ ಮಾಡುತ್ತಿಲ್ಲ. ಧ್ವೇಷವನ್ನು ಹರಡುತ್ತಿದ್ದಾರೆ. ಇವರು ನಿಜವಾದ ಧರ್ಮದವರಲ್ಲ. ಜನರ ನಂಬಿಕೆಗೆ ಅಘಾತ ಮಾಡುತ್ತಿದ್ದಾರೆ. ನನ್ನ ವಿರುದ್ಧ ಸಾಕಷ್ಟು ವಿಚಾರದಲ್ಲಿ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ ಎಂದು ಅಸಮಾಧಾನ ಹೊರಹಾಕಿದ್ದಾರೆ.

    ಅವರ ಮೇಲೆ ಕೇಸ್ ಹಾಕಿ ಗೆದ್ದಿದ್ದೇನೆ. ಹೀಗಾಗಿ ನಾನು ಪ್ರಶಾಂತ್ ಸಂಬರ್ಗಿ ವಿರುದ್ಧ ದೂರು ನೀಡಿ ಎಫ್ಐಆರ್ ಮಾಡಿಸಿದ್ದೇನೆ. 15 ದಿನಗಳಲ್ಲಿ ಆ ವ್ಯಕ್ತಿ ಠಾಣೆಗೆ ಬಂದು ಉತ್ತರ ನೀಡಬೇಕು. ಸತ್ಯಾಸತ್ಯತೆ ಎಲ್ಲರಿಗೂ ತಿಳಿಯಬೇಕು ಎಂದಿದ್ದಾರೆ.

  • ಪೊಲೀಸ್ ಆಗಿ ಸಂಬರ್ಗಿ: ವಿದ್ಯಾರ್ಥಿ ವಿದ್ಯಾರ್ಥಿನಿಯರ ಗಮನಿಸಿ

    ಪೊಲೀಸ್ ಆಗಿ ಸಂಬರ್ಗಿ: ವಿದ್ಯಾರ್ಥಿ ವಿದ್ಯಾರ್ಥಿನಿಯರ ಗಮನಿಸಿ

    ಚಂದನ್ ಶೆಟ್ಟಿ (Chandan Shetty) ನಾಯಕನಾಗಿ ನಟಿಸಿರುವ `ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ (Vidyarthi Vidyarthiniyare) ಚಿತ್ರ ಅತ್ಯಂತ ವೇಗವಾಗಿ ಚಿತ್ರೀಕರಣ ಮುಗಿಸಿಕೊಂಡಿದೆ. ಐವತ್ತು ದಿನಗಳ ಕಾಲ ಬೆಂಗಳೂರು, ಮೈಸೂರು, ಮಂಗಳೂರು, ಚಿಕ್ಕಮಗಳೂರು ಮುಂತಾದೆಡೆಗಳಲ್ಲಿ ಚಿತ್ರೀಕರಣ ಸಂಪೂರ್ಣಗೊಳಿಸಿಕೊಂಡಿದೆ. ಹೀಗೆ ಕುಂಬಳಕಾಯಿ ಒಡೆದ ಬಳಿಕ ಪತ್ರಿಕಾಗೋಷ್ಠಿಯೊಂದನ್ನು ಚಿತ್ರತಂಡ ಆಯೋಜಿಸಿತ್ತು. ಅಚ್ಚುಕಟ್ಟಾಗಿ ನಡೆದ ಈ ಪತ್ರಿಕಾ ಗೋಷ್ಠಿಯಲ್ಲಿ ಒಂದಿಡೀ ಚಿತ್ರತಂಡ ಹುರುಪಿನಿಂದ ಭಾಗಿಯಾಗಿತ್ತು. ವಿಶೇಷವೆಂದರೆ, ಈ ಸಿನಿಮಾದ ಮುಖ್ಯ ಪಾತ್ರಗಳಲ್ಲಿ ನಟಿಸಿರುವ ಕಲಾವಿದರೇ ಆ ಬಗೆಗಿನ ಬೆರಗು ಮೂಡಿಸುವ ಒಂದಷ್ಟು ವಿಚಾರಗಳನ್ನು ಹಂಚಿಕೊಂಡಿದ್ದಾರೆ.

    ಅರುಣ್ ಅಮುಕ್ತ (Arun Amukta) ನಿರ್ದೇಶನದ ಈ ಸಿನಿಮಾ ಹೆಸರೇ ಸೂಚಿಸುವಂತೆ ಕಾಲೇಜು ವಿದ್ಯಾರ್ಥಿ ವಿದ್ಯಾರ್ಥಿನಿಯರ ಜಗತ್ತಿನಲ್ಲಿ ಕದಲುವ ಕಥಾನಕವನ್ನೊಳಗೊಂಡಿದೆ. ಪ್ರಸ್ತಿತ ಸನ್ನಿವೇಶದಲ್ಲಿನ ಯುವ ಸಮುದಾಯದ ಮನಃಸ್ಥಿತಿಗೆ ಕನ್ನಡಿ ಹಿಡಿಯುವಂಥಾ ಯೂಥ್ ಫುಲ್ ಕಥೆಯನ್ನು ಈ ಚಿತ್ರ ಒಳಗೊಂಡಿದೆ. ಇತ್ತೀಚಿನ ದಿನಗಳಲ್ಲಿ ನಟನೆಯಲ್ಲಿ ಬ್ಯುಸಿಯಾಗುತ್ತಿರುವ ಪ್ರಶಾಂತ್ ಸಂಬರ್ಗಿ ಇಲ್ಲಿ ರಗಡ್ ಲುಕ್ಕಿನ ಪಾತ್ರವೊಂದಕ್ಕೆ ಜೀವ ತುಂಬಿದ್ದಾರಂತೆ. ಸದರಿ ಪತ್ರಿಕಾ ಗೋಷ್ಠಿಯಲ್ಲಿ ಹಾಜರಿದ್ದ ಸಂಬರ್ಗಿ (Prasanth Sambaragi) ತಮ್ಮ ಪಾತ್ರದ ಬಗ್ಗೆ ಕೆಲ ಅಂಶಗಳನ್ನು ಬಿಚ್ಚಿಡುತ್ತಲೇ, ನಿರ್ದೇಶಕ ಅರುಣ್ ಅಮುಕ್ತ ಅವರ ಕಾರ್ಯವೈಖರಿ ಮತ್ತು ನಿರ್ಮಾಪಕರ ಸಿನಿಮಾ ಪ್ರೇಮವನ್ನು ಕೊಂಡಾಡಿದ್ದಾರೆ.

    ಅಂದಹಾಗೆ, ಇಲ್ಲಿ ಪ್ರಶಾಂತ್ ಸಂಬರ್ಗಿ ಖಡಕ್ ಪೊಲೀಸ್ ಅಧಿಕಾರಿಯ ಪಾತ್ರಕ್ಕೆ ಜೀವ ತುಂಬಿದ್ದಾರೆ. ಒಟ್ಟಾರೆ ಚಿತ್ರೀಕರಣದ ಸಂದರ್ಭದಲ್ಲಿ ಚಿತ್ರತಂಡದ ಸಿನಿಮಾ ಪ್ರೇಮ ಕಂಡು ಅವರು ಖುಷಿಕೊಂಡಿದ್ದಾರೆ. ಅದರಲ್ಲಿಯೂ ನಿರ್ಮಾಪಕರುಗಳು ಯಾವುದಕ್ಕೂ ಕಡಿಮೆಯಾಗದಂತೆ ನೋಡಿಕೊಂಡು ಕಾರ್ಪೋರೇಟ್ ಶೈಲಿಯಲ್ಲಿ ಈ ಸಿನಿಮಾವನ್ನು ಪೊರೆದ ರೀತಿಗೆ ಸಂಬರ್ಗಿ ಮೆಚ್ಚುಗೆ ಸೂಚಿಸಿದ್ದಾರೆ. ಇಷ್ಟಲ್ಲದೇ ಈ ಸಿನಿಮಾದ ಪ್ರಧಾನ ಪಾತ್ರಗಳಲ್ಲಿ ನಟಿಸಿರುವ ಕಲಾವಿದರೆಲ್ಲರೂ ಮುಂದಿನ ದಿನಗಳಲ್ಲಿ ಚಿತ್ರರಂಗದಲ್ಲಿ ಗಟ್ಟಿಯಾಗಿ ನೆಲೆ ಕಂಡುಕೊಳ್ಳುತ್ತಾರೆಂಬ ಭರವಸೆಯನ್ನೂ ಕೂಡಾ ಪ್ರಶಾಂತ್ ಸಂಬರ್ಗಿ ವ್ಯಕ್ತಪಡಿಸಿದ್ದಾರೆ.

     

    ತಾರಾ ಬಳಗ, ತಾಂತ್ರಿಕತೆ ಸೇರಿದಂತೆ ಎಲ್ಲ ದಿಕ್ಕಿನಲ್ಲಿಯೂ ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಚಿತ್ರ ಭಿನ್ನವಾಗಿ ಮೂಡಿ ಬಂದಿವೆ ಎಂಬುದು ಚಿತ್ರತಂಡದ ಭರವಸೆ. ಸುಬ್ರಮಣ್ಯ ಕುಕ್ಕೆ ಮತ್ತು ಎ.ಸಿ ಶಿವಲಿಂಗೇಗೌಡ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಕುಮಾರ್ ಗೌಡ ಛಾಯಾಗ್ರಹಣ, ಭರ್ಜರಿ ಚೇತನ್ ಮತ್ತು ವಾಸುಕಿ ವೈಭವ್ ಸಾಹಿತ್ಯ, ಪವನ್ ಗೌಡ ಸಂಕಲನ, ಟೈಗರ್ ಶಿವು, ನರಸಿಂಹ ಸಾಹಸ ನಿರ್ದೇಶನ ಈ ಚಿತ್ರಕ್ಕಿರಲಿದೆ. ಅಮರ್, ಭಾವನಾ, ಮಾನಸಿ, ಮನೋಜ್ ವಿವಾನ್, ಭವ್ಯ, ಸುನೀಲ್ ಪುರಾಣಿಕ್, ಅರವಿಂದ ರಾವ್, ಸಿಂಚನಾ, ರಘು ರಾಮನಕೊಪ್ಪ, ಪ್ರಶಾಂತ್ ಸಂಬರ್ಗಿ, ಕಾಕ್ರೋಚ್ ಸುಧಿ ಮುಂತಾದವರು ನಟಿಸಿದ್ದಾರೆ. ಇನ್ನುಳಿದಂತೆ ವಿಜೇತ್ ಕೃಷ್ಣ, ವಾಸು ದೀಕ್ಷಿತ್ ಮತ್ತು ಶಶಾಂಕ್ ಶೇಷಗಿರಿ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ.

  • ಕನ್ನಡದಲ್ಲಿ ಮತ್ತೊಂದು ರಿಯಾಲಿಟಿ ಶೋ : ಇದು ಫಿಟ್ ಬಾಸ್

    ಕನ್ನಡದಲ್ಲಿ ಮತ್ತೊಂದು ರಿಯಾಲಿಟಿ ಶೋ : ಇದು ಫಿಟ್ ಬಾಸ್

    ಬಿಗ್ ಬಾಸ್, ಸರಿಗಮಪ ಸೇರಿದಂತೆ ಹಲವಾರು ರಿಯಾಲಿಟಿ ಶೋಗಳು (Reality Show) ಕನ್ನಡ ಕಿರುತೆರೆಯಲ್ಲಿ ಮನರಂಜಿಸುತ್ತಿದೆ. ಈ ಗ್ರೂಪ್ ‍ಗೆ ಮತ್ತೊಂದು ರಿಯಾಲಿಟಿ ಶೋ ಸೇರ್ಪಡೆಯಾಗಿದೆ. ಆಯುಷ್‌ ಟಿ.ವಿ ಕಳೆದ ಏಳು ವರ್ಷಗಳಿಂದ ಆರೋಗ್ಯಕರ ಜೀವನ ಶೈಲಿಗಾಗಿ ಎಂಬ ಧ್ಯೇಯದೊಂದಿಗೆ ವೈವಿಧ್ಯಮಯ ಕಾರ್ಯಕ್ರಮಗಳನ್ನು ಪ್ರಸ್ತುತಪಡಿಸುವ ಮೂಲಕ ಪ್ರೇಕ್ಷಕರ ಮನ್ನಣೆಗಳಿಸಿರುವ ಏಕೈಕ ಆರೋಗ್ಯದ ಕುರಿತಾದ ವಾಹಿನಿಯಾಗಿದ್ದು,  ಪ್ರಸ್ತುತ ಕರ್ನಾಟಕದ ಜನಪ್ರಿಯ ಮನೋರಂಜನಾ ವಾಹಿನಿ ಸಿರಿಕನ್ನಡ ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸೆ ಕೇಂದ್ರ (ಕ್ಷೇಮವನ) ಇವರ ಸಹಭಾಗಿತ್ವದಲ್ಲಿ ಆಯೋಜಿಸಿರುವ ವಿಶ್ವದ ಮೊಟ್ಟಮೊದಲ ಆರೋಗ್ಯದ ಕುರಿತಾದ ರಿಯಾಲಿಟಿ ಶೋ ‘ಫಿಟ್‌ ಬಾಸ್‌’ (Fit Boss) ನಿರ್ಮಾಣಗೊಂಡಿದೆ.

    ಫಿಟ್ ಬಾಸ್ ರಿಯಾಲಿಟಿ ಶೋ ಕುರಿತು ಹೆಚ್ಚಿನ ಮಾಹಿತಿ ನೀಡಲು ಪತ್ರಿಕಾಗೋಷ್ಠಿ ಆಯೋಜಿಸಲಾಗಿತ್ತು.  ಮನುಷ್ಯನಿಗೆ ಎಲ್ಲದಕ್ಕಿಂತ ಆರೋಗ್ಯವೇ ಹೆಚ್ಚು ಎಂಬ ಧ್ಯೇಯದಿಂದ ನಮ್ಮ ಆಯೂಷ್ ಟಿವಿ ಕಳೆದ ಏಳು ವರ್ಷಗಳಿಂದ ಆರೋಗ್ಯದ ವಿವಿಧ ಕಾರ್ಯಕ್ರಮಗಳನ್ನು ಪ್ರಸಾರ ಮಾಡುತ್ತಿದೆ. ಇದೇ ಮೊದಲ ಬಾರಿಗೆ ಸ್ಥೂಲಕಾಯದವರಿಗಾಗಿ (ಹೆಚ್ಚು ದಪ್ಪ) ಫಿಟ್ ಬಾಸ್ ಎಂಬ ರಿಯಾಲಿಟಿ ಶೋ ಆರಂಭಿಸಲಾಗಿದೆ. ನಮ್ಮೊಂದಿಗೆ ಸಿರಿಕನ್ನಡ ವಾಹಿನಿ‌ ಹಾಗೂ ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸಾ ಕೇಂದ್ರ(ಕ್ಷೇಮವನ) ಕೈ ಜೋಡಿಸಿದೆ ಎಂದು ಆಯೂಷ್ ಟಿವಿ‌ ವೈಸ್ ಚೇರ್ಮನ್ ಅರುಣಾಚಲಂ ತಿಳಿಸಿದರು

    ಕಳೆದ ಕೆಲವು ವರ್ಷಗಳಿಂದ ನಮ್ಮ ಸಿರಿಕನ್ನಡ ವಾಹಿನಿ ಹಲವು ಜನಪ್ರಿಯ ಕಾರ್ಯಕ್ರಮಗಳ ಮೂಲಕ ಜನರ ಮೆಚ್ಚುಗೆ ಪಡೆದಿದೆ. ಪ್ರಸ್ತುತ ಆಯೂಷ್ ಟಿವಿಯ “ಫಿಟ್ ಬಾಸ್” ರಿಯಾಲಿಟಿ ಶೋ ಜೊತೆಗೆ ಸಿರಿಕನ್ನಡ ವಾಹಿನಿ ಕೈ ಜೋಡಿಸಿದೆ. ಆರೋಗ್ಯದ ಕುರಿತು ಜಾಗೃತಿ ಮೂಡಿಸುವ ಈ ರಿಯಾಲಿಟಿ ಶೋ ಅಕ್ಟೋಬರ್ 16 ರಿಂದ ಸೋಮವಾರದಿಂದ ಶುಕ್ರವಾರದವರೆಗೂ ಆಯೂಷ್ ಟಿವಿ ಸಂಜೆ 7 ಕ್ಕೆ ಹಾಗೂ ಸಿರಿಕನ್ನಡ ವಾಹಿನಿಯಲ್ಲಿ ರಾತ್ರಿ 8 ಕ್ಕೆ ಪ್ರಸಾರವಾಗಲಿದೆ ಎಂದರು ಸಿರಿಕನ್ನಡ ವಾಹಿನಿ ಸಂಸ್ಥಾಪಕ ನಿರ್ದೇಶಕ ಸಂಜಯ್ ಶಿಂಧೆ.

    ಈ ರಿಯಾಲಿಟಿ ಶೋ‌ ನ ಆಡಿಷನ್ ನಲ್ಲಿ  ಸುಮಾರು 2000 ಜನ ಪಾಲ್ಗೊಂಡಿದ್ದರು.  ಅದರಲ್ಲಿ ಸುಮಾರು 100 ಕೆಜಿ ಗಿಂತ ಹೆಚ್ಚು ತೂಕವಿರುವ  21 ಜನರನ್ನು ಆಯ್ಕೆ ಮಾಡಿಕೊಳ್ಳಲಾಯಿತು. ಇಪ್ಪತ್ತೊಂದು ದಿನ, ತಮ್ಮ ದೇಹದ ಅತಿಯಾದ ತೂಕವನ್ನು ಕಡಿಮೆ ಮಾಡಲು ಇಲ್ಲಿ ಪಾಲ್ಗೊಂಡಿದ್ದು ವಿಶೇಷ,  ತಮ್ಮ ಆರೋಗ್ಯದ ಸಮಸ್ಯೆಗಳನ್ನು ವೈಜ್ಞಾನಿಕವಾಗಿ ಕ್ಯೂರ್‌ ಮಾಡಿಕೊಳ್ಳುವುದರ ಜೊತೆಗೆ ಆಟ, ಮೋಜು, ಮಸ್ತಿ, ಮತ್ತು ಸ್ನೇಹ ಸಂಬಂಧಗಳ ಮೌಲ್ಯಗಳನ್ನು ಈ ರಿಯಾಲಿಟಿ ಶೋ ನಲ್ಲಿ ಕಲಿತಿದ್ದಾರೆ. ಗೋಲ್ಡನ್ ಸ್ಟಾರ್ ಗಣೇಶ್, ಅಮೂಲ್ಯ, ರೂಪಿಕಾ, ನಿರೂಪಕ ಮುರಳಿ, ಆರ್ಯನ್ ಶಾಮ್ ಮುಂತಾದ ಗಣ್ಯರು ಗ್ರ್ಯಾಂಡ್ ಫಿನಾಲೆಗೆ ಆಗಮಿಸಿ ಸ್ಪರ್ಧಿಗಳಿಗೆ ಶುಭ ಕೋರಿದ್ದಾರೆ. ಗೆದ್ದ ಸ್ಪರ್ಧಿಗೆ 5 ಲಕ್ಷ ರೂಪಾಯಿ ಬಹುಮಾನ ನೀಡಲಾಗಿದೆ ಎಂದು ಫಿಟ್ ಬಾಸ್ ರಿಯಾಲಿಟಿ ಶೋ‌ ನಿರ್ದೇಶಕ ಬಾಲಕೃಷ್ಣ ತಿಳಿಸಿದರು.

    21 ದಿನಗಳಕಾಲ ಪ್ರತಿ ದಿನ ಮುಂಜಾನೆ 5 ರಿಂದ ಯೋಗದೊಂದಿಗೆ ಸಾಧಕರ ದಿನಚರಿ ಪ್ರಾರಂಭವಾದರೆ ಕ್ರಮೇಣ ವಿವಿಧ ನ್ಯಾಚುರೋಪತಿ ಚಿಕಿತ್ಸೆಗಳು ಹಾಗೂ ಹಲವು ಮನೋರಂಜನಾ ಕಾರ್ಯಕ್ರಮಗಳು ಸ್ಪರ್ಧಿಗಳನ್ನು ಕ್ರಿಯಾಶೀಲರನ್ನಾಗಿಸಿರುವಂತೆ ಮಾಡಿದ್ದವು ಎಂಬ ಮಾಹಿತಿಯನ್ನು “ಕ್ಷೇಮವನ”ದ ಮುಖ್ಯ ಕ್ಷೇಮಾಧಿಕಾರಿ ನರೇಂದ್ರ ಶೆಟ್ಟಿ ನೀಡಿದರು. ಫಿಟ್ ಬಾಸ್ ರಿಯಾಲಿಟಿ ಶೋ ನ ಆರಂಭದ ದಿನ ಹಾಗೂ ಫಿನಾಲೆ ದಿನ ನಿರೂಪಕನಾಗಿ ಕೆಲಸ ಮಾಡಿದ್ದು ಖುಷಿಯಾಗಿದೆ.‌ ಇಂತಹ ಕಾರ್ಯಕ್ರಮಗಳನ್ನು ಎಲ್ಲರೂ ನೋಡಬೇಕೆಂದರು ಪ್ರಶಾಂತ್ ಸಂಬರ್ಗಿ (Prashant Sambargi). ಫಿಟ್ ಬಾಸ್ ಕಾರ್ಯಕ್ರಮದ ಬಗ್ಗೆ  ಆಯೂಷ್ ಟಿವಿಯ ದಿವ್ಯ ಅವರು ಮಾತನಾಡಿದರು ಹರಿಕೃಷ್ಣ, ವ್ಯವಸ್ಥಾಪಕ ನಿರ್ದೇಶಕರು ಆಯುಷ್‌ ಟಿ ವಿ, ಸಂಜಯ್‌ ಶಿಂಧೆ, ಸಂಸ್ಥಾಪಕ ನಿರ್ದೇಶಕರು ಸಿರಿ ಕನ್ನಡ ವಾಹಿನಿ, ಪ್ರಶಾಂತ್‌ ಸಂಬರ್ಗಿ, ಕಲಾವಿದರು ಹಾಗೂ ಫಿಟ್‌ ಬಾಸ್‌ ಗ್ರ್ಯಾಂಡ್‌ ಫಿನಾಲೆ ನಿರೂಪಕರು,  ಬಾಲಕೃಷ್ಣ, ಫಿಟ್‌ ಬಾಸ್‌ ರಿಯಾಲಿಟಿ ಷೋ ನಿರ್ದೇಶಕರು ಅರುಣಾಚಲಂ , ವೈಸ್‌ ಚೇರ್ಮನ್‌ ಆಯುಷ್‌ ಟಿವಿ ಅರವಿಂದ್‌ ಎನ್.ಜೆ , ಪವನ್ ಕುಮಾರ್‌ , ವಿನಾಯಕ್‌ ಪೈ ,  ದಿವ್ಯ(ಆಯೂಷ್ ಟಿವಿ), ರಾಜೇಶ್‌ ರಾಜಘಟ್ಟ  ಮುಖ್ಯಸ್ಥರು , ಸಿರಿ ಕನ್ನಡ ವಾಹಿನಿ ಮುಂತಾದವರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಶಿವಣ್ಣ ಅಭಿಮಾನಿಗಳ ಆಕ್ರೋಶಕ್ಕೆ ಮಣಿದು, ಹೇಳಿದ ಮಾತು ಹಿಂಪಡೆದ ಸಂಬರ್ಗಿ

    ಶಿವಣ್ಣ ಅಭಿಮಾನಿಗಳ ಆಕ್ರೋಶಕ್ಕೆ ಮಣಿದು, ಹೇಳಿದ ಮಾತು ಹಿಂಪಡೆದ ಸಂಬರ್ಗಿ

    ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ (Shivarajkumar) ಕಾಂಗ್ರೆಸ್ (Congress) ಪರ ಪ್ರಚಾರ ಮಾಡಿದ್ದಕ್ಕೆ ಬಿಗ್ ಬಾಸ್ (Bigg Boss) ಪ್ರಶಾಂತ್ ಸಂಬರ್ಗಿ (Prashanth Sambargi) ಶಿವಣ್ಣಗೆ ಟೀಕೆ ಮಾಡಿದ್ದರು. ಸಂಬರ್ಗಿ ಅವರ ಈ ನಡೆಯನ್ನ ಶಿವಣ್ಣ ಫ್ಯಾನ್ಸ್ ಖಂಡಿಸಿದ್ದರು. ಈಗ ಶಿವಣ್ಣ ಅಭಿಮಾನಿಗಳ ಕಡೆಯಿಂದ ವಿರೋಧ ವ್ಯಕ್ತವಾದ ಬೆನ್ನಲ್ಲೇ ಸಂಬರ್ಗಿ, ತಾವು ಆಡಿದ ಮಾತನ್ನ ಹಿಂಪಡೆದಿದ್ದಾರೆ. ಈ ಕುರಿತು ಪೋಸ್ಟ್ ಕೂಡ ಮಾಡಿದ್ದಾರೆ. ಇದನ್ನೂ ಓದಿ:ಹೆಣ್ಣು ಹೆತ್ತ ಪೋಷಕರಿಗೆ The Kerala Story ಚಿತ್ರ ನೋಡುವಂತೆ ಕಲ್ಲಡ್ಕ ಪ್ರಭಾಕರ್ ಸಲಹೆ

    ಶಿವಣ್ಣ ಕಥೆ ಕೇಳಲ್ಲ, ಅವರಿಗೆ ಹಣ ಮುಖ್ಯ, ಹಾಗೆಯೇ ಅಭ್ಯರ್ಥಿ ಗೆಲ್ಲಲಿ ಬಿಡಲಿ ಅವರಿಗೆ ದುಡ್ಡು ಬಂದರೆ ಆಯ್ತು ಎಂದು ಸಂಬರ್ಗಿ ಶಿವಣ್ಣ ವಿರುದ್ಧ ಕಿಡಿಕಾರಿದ್ದರು. ಬಳಿಕ ಶಿವಣ್ಣ ಕೂಡ ರಿಯಾಕ್ಟ್ ಮಾಡಿದ್ದರು. ನಾನು ಇಲ್ಲಿ ಮನಸ್ಸಿನ ಮಾತು ಕೇಳಿ ಬಂದಿದ್ದೇನೆ. ಅವರು ಆ ರೀತಿ ಮಾತನಾಡೋದು ಸರಿಯಲ್ಲ ಎಂದಿದ್ದರು. ಅವರ ಮಾತು ಹಿಂಪಡೆಯಲಿ ಎಂದಿದ್ದರು.

    ಅಷ್ಟಕ್ಕೆ ಸುಮ್ಮನಾಗದ ಸಂಬರ್ಗಿ, ಭಜರಂಗಿ ಹೆಸರಿನಲ್ಲಿ ನಟಿಸಿ, ಬಜರಂಗದಳದ ನಿಷೇಧದ ಬಗ್ಗೆ ನಿಮ್ಮ ನಡೆಯೇನು ಎಂದು ಇದರ ಜೊತೆ ಹಲವು ಪ್ರಶ್ನೆಗಳನ್ನ ಶಿವಣ್ಣ ಮುಂದೆ ಇಟ್ಟಿದ್ದರು. ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದರು. ಸಂಬರ್ಗಿ ನಡೆಯನ್ನ ಖಂಡಿಸಿ, ಶಿವಣ್ಣಗೆ ಕ್ಷಮೆ ಕೇಳಲೇಬೇಕು ಎಂದು ಪಟ್ಟು ಹಿಡಿದಿದ್ದರು. ಹಾಗಾಗಿ ಸಂಬರ್ಗಿ ತಾವು ಆಡಿದ ಮಾತನ್ನ ಹಿಂಪಡೆದಿದ್ದಾರೆ.

    ಶಿವಣ್ಣ ಮತ್ತೆ ಇನೊಬ್ಬ ನಮ್ಮ ಆಪ್ತ ಮಿತ್ರ ನೊಂದಿಗೆ ಇದೀಗ ತಾನೇ ಮಾತನಾಡಿದೆ. ಶಿವಣ್ಣ ಅವರಿಗೆ ಎಲ್ಲಾ ರಾಜಕೀಯ ಪಕ್ಷಗಳಲ್ಲಿ ಸ್ನೇಹಿತರನ್ನು ಹೊಂದಿದ್ದಾರೆ. ಶಿವಣ್ಣ ಅವರ ತಂದೆಯ ಬಯಕೆಯಂತೆ ಅವರು ರಾಜಕೀಯದಿಂದ ದೂರವಾಗಿದ್ದರೆ. ನಾನು ಅವರ ಬಗ್ಗೆ ಬರೆದಿರುವ ನನ್ನ ಪೋಸ್ಟ್ ಅನ್ನು ಹಿಂದಕ್ಕೆ ತೆಗೆದುಕೊಳ್ಳುತ್ತೇನೆ ಮತ್ತು ಶಿವಣ್ಣ ಮತ್ತು ಅವರ ಅಭಿಮಾನಿಗಳಿಗೆ ಕರ್ನಾಟಕದಾದ್ಯಂತ ನೋಯಿಸಬಾರದು ಎಂದು ನಾನು ಬಯಸುತ್ತೇನೆ ಎಂದು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಆದರೆ ಎಲ್ಲಿಯೂ ಶಿವಣ್ಣಗೆ ಕ್ಷಮೆ ಕೇಳಿಲ್ಲ. ಈ ಬಗ್ಗೆ ಫ್ಯಾನ್ಸ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

  • ‘ಭಜರಂಗಿ’ ಹೆಸರಿನಲ್ಲಿ ನಟಿಸಿ, ಬಜರಂಗದಳದ ನಿಷೇಧದ ಬಗ್ಗೆ ನಿಮ್ಮ ನಡೆಯೇನು? ಶಿವಣ್ಣಗೆ ಸಂಬರ್ಗಿ ಕೌಂಟರ್

    ‘ಭಜರಂಗಿ’ ಹೆಸರಿನಲ್ಲಿ ನಟಿಸಿ, ಬಜರಂಗದಳದ ನಿಷೇಧದ ಬಗ್ಗೆ ನಿಮ್ಮ ನಡೆಯೇನು? ಶಿವಣ್ಣಗೆ ಸಂಬರ್ಗಿ ಕೌಂಟರ್

    ಚುನಾವಣೆ ರಂಗು ಇದೀಗ ಜೋರಾಗಿದೆ. ರಾಜಕೀಯ (Politics) ಅಖಾಡದಲ್ಲಿ ಸ್ಟಾರ್ ನಟ- ನಟಿಯರು ಕೂಡ ಪಕ್ಷಗಳ ಪರ ಭರ್ಜರಿ ಪ್ರಚಾರ ಮಾಡ್ತಿದ್ದಾರೆ. ಹೀಗಿರುವಾಗ ಕಾಂಗ್ರೆಸ್ ಪರ ಪ್ರಚಾರ ಮಾಡ್ತಿರೋ ನಟ ಶಿವಣ್ಣ ವಿರುದ್ಧ ಬಿಗ್ ಬಾಸ್ ಸ್ಪರ್ಧಿ ಪ್ರಶಾಂತ್ ಸಂಬರ್ಗಿ (Prashanth Sambargi) ಸಿಡಿದೆದ್ದಿದ್ದಾರೆ. ಶಿವಣ್ಣನ (Shivarajkumar) ಮುಂದೆ 10 ಪ್ರಶ್ನೆಗಳನ್ನ ಅವರ ಮುಂದಿಟ್ಟು ಟಾಂಗ್ ಕೊಟ್ಟಿದ್ದಾರೆ. ಇದನ್ನೂ ಓದಿ:ರಾ ರಾ ರಕ್ಕಮ್ಮ ಹುಟ್ಟುಹಬ್ಬಕ್ಕೆ ಸರ್ಪ್ರೈಸ್ ಗಿಫ್ಟ್ ಕೊಡಲಿದ್ದಾನಂತೆ ವಂಚಕ ಸುಕೇಶ್

    ನಟ ಶಿವರಾಜ್ ಕುಮಾರ್ ದುಡ್ಡಿಗಾಗಿ ಕಾಂಗ್ರೆಸ್ (Congress) ಪಕ್ಷದ ಪರ ಪ್ರಚಾರಕ್ಕೆ ಹೋಗಿದ್ದಾರೆ ಎನ್ನುವ ಅರ್ಥದಲ್ಲಿ ಪ್ರಶಾಂತ್ ಸಂಬರ್ಗಿ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದರು. ಇದಕ್ಕೆ ಸಂಬಂಧಿಸಿದಂತೆ ಶಿವಣ್ಣ ಪ್ರತಿಕ್ರಿಯೆ ನೀಡಿದ್ದು, ಇಂತಹ ಮಾತುಗಳನ್ನು ಸಹಿಸಿಕೊಳ್ಳಲು ಆಗುವುದಿಲ್ಲ. ಕೂಡಲೇ ಆ ಮಾತುಗಳನ್ನು ಅವರು ವಾಪಸ್ಸು ಪಡೆಯಬೇಕು. ನನ್ನ ಹತ್ತಿರ ದುಡ್ಡಿಲ್ಲವಾ? ನಾನು ಯಾವತ್ತೂ ದುಡ್ಡಿಗಾಗಿ ಕೆಲಸ ಮಾಡಿದವನು ಅಲ್ಲ. ಇಂತಹ ಮಾತುಗಳು ಶೋಭೆ ತರುವುದಿಲ್ಲ ಎಂದಿದ್ದರು. ಈ ಹೇಳಿಕೆ ಬೆನ್ನಲ್ಲೇ ಮತ್ತೆ ಸೋಷಿಯಲ್ ಮೀಡಿಯಾದಲ್ಲಿ ತಮ್ಮ ಪ್ರಶ್ನೆಗಳ ಮೂಲಕ ಶಿವಣ್ಣನಿಕೆಗೆ ಟೀಕೆ ಮಾಡಿದ್ದಾರೆ.

    ಶಿವಣ್ಣನಿಗೆ ಹತ್ತು ಪ್ರಶ್ನೆಗಳು.?
    1.ನೀವೇ ಹಿಂದುವಾಗಿ ಭಜರಂಗಿ ಹೆಸರಿನಲ್ಲಿ ನಟಿಸಿ ಕಾಂಗ್ರೆಸ್ ನವರ ಬಜರಂಗದಳದ ನಿಷೇಧದ ಬಗ್ಗೆ ತಮ್ಮ ನಿಲುವು ಏನು?

    2.ಒಂದು ಉತ್ತಮ ಮತ್ತು ಸತ್ಯ ವಾದ ಚಿತ್ರವಾದ ‘ದಿ ಕೇರಳ ಸ್ಟೋರಿ’ ಚಿತ್ರವನ್ನು ನಿಮ್ಮ ಕಾಂಗ್ರೆಸ್ ನಿಷೇಧಿಸುವುದಕ್ಕೆ ಮುಂದಾಗಿದೆ ನೀವು ಕನ್ನಡದ ಮೇರು ನಟನಾಗಿ ಮತ್ತು ನಿರ್ಮಾಪನಾಗಿ ನಿಮ್ಮ ನಿಲುವೇನು?

    3.ನೀವು ಚಿತ್ರರಂಗದಿಂದ ಬಂದವರು, ಬೆಂಗಳೂರಿನಲ್ಲಿ ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರ ಪ್ರದರ್ಶಿಸಿದಾಗ ಕಾಂಗ್ರೆಸ್ ಅದಕ್ಕೆ ವಿರೋಧ ಪಡಿಸಿತ್ತು ಆಗ ಏಕೆ ನಿಮ್ಮ ದಿವ್ಯ ಮೌನ?

    4.ಕನ್ನಡಿಗರ ಪರವಾಗಿದ್ದ ಕನ್ನಡ ಡಬ್ಬಿಂಗ್ ವಿರೋಧಿಸಿ ಈಗ ಅನ್ಯ ಭಾಷೆಯ ಚಿತ್ರದಲ್ಲಿ ನಟಿಸುತಿದ್ದೀರಾ.. ಇದು ಸರಿನಾ?

    5.ಡಾ ರಾಜಕುಮಾರ್ ನಮ್ಮ ಆರಾಧ್ಯ ದೈವ ಮತ್ತು ರಾಜಕೀಯದಿಂದ ದೂರವಾಗಿದ್ದರು ಗೋಕಾಕ್ ಚಳುವಳಿ ಮತ್ತು ಅವರ ಕನ್ನಡ ಪರ ಹೋರಾಟ ಎಲ್ಲರಿಗೂ ಗೊತ್ತಿರುವ ವಿಚಾರ,ಅವರ ಮಗನಾಗಿ ಕರ್ನಾಟಕಕ್ಕೆ ನಿಮ್ಮ ಕೊಡುಗೆ ಏನು?

    6.2020ರಲ್ಲಿ ಸ್ಯಾಂಡಲ್‌ವುಡ್ ಡ್ರಗ್ ವಿಷಯದಲ್ಲಿ ನೀವು ಏಕೆ ಮೌನವಾಗಿದ್ದಿರಿ? ಕರ್ನಾಟಕವನ್ನು ಮಾದಕ ಮುಕ್ತ ಮಾಡಲು ನಮ್ಮ ಯುವ ಜನರಿಗೆ ತಮ್ಮ ಸಂದೇಶವೇನು?

    7.ಪಿಎಫ್‌ಐ ಮತ್ತು ಜಿಹಾದಿ ಜನರಿಂದ ಆರ್‌ಎಸ್‌ಎಸ್ ಹಿಂದೂ ಕಾರ್ಯಕರ್ತರ ಹತ್ಯೆಗಳ ಬಗ್ಗೆ ನಿಮ್ಮ ನಿಲುವು ಏನು .?

    8.ನಿಮ್ಮ ಎಲ್ಲಾ ಚಿತ್ರದಲ್ಲಿ ಹೆಣ್ಣು ಮಕ್ಕಳನ್ನು ಗೌರವಿಸುವ ಪಾತ್ರ ಮಾಡುವ ತಾವು ಲವ್ ಜಿಹಾದ್ ಮೇಲೆ ನಿಮ್ಮ ನಿಲುವೇನು?

    9.ಡಿಕೆ ಶಿವಕುಮಾರ್ ಅವರ ಭ್ರಷ್ಟಾಚಾರ ಮತ್ತು ಆದಾಯ ತೆರಿಗೆ ಪ್ರಕರಣದ ಬಗ್ಗೆ ನಿಮ್ಮ ಅಭಿಪ್ರಾಯವೇನು?

    10.ಮುಸ್ಲಿಂ ಒಲಿಕರಣ ಕಾಂಗ್ರೆಸ್ ಮಂತ್ರವಾಗಿದೆ ಇದರ ಬಗ್ಗೆ ತಮ್ಮ ಅಭಿಪ್ರಾಯ? ಹಿಂದೂಗಳು ನಿಮ್ಮ ಚಿತ್ರವನ್ನು ನೋಡಬಾರದ.?

    ಈ ರೀತಿಯ ಪ್ರಶ್ನೆಗಳನ್ನ ಕೇಳುವ ಮೂಲಕ ಕೈ ಪರ ಪ್ರಚಾರ ಮಾಡ್ತಿರೋ ಶಿವಣ್ಣರನ್ನ ಪ್ರಶಾಂತ್ ಸಂಬರ್ಗಿ ಕೆಣಕಿದ್ದಾರೆ. ಸಂಬರ್ಗಿ ಪೋಸ್ಟ್‌ಗೆ ಪರ ವಿರೋಧ ಚರ್ಚೆಗಳು ನಡೆಯುತ್ತಿದೆ. ಸಂಬರ್ಗಿ ಈ ಹಿಂದಿನ ಪೋಸ್ಟ್‌ಗೆ ಶಿವಣ್ಣ ಪ್ರತಿಕ್ರಿಯೆ ನೀಡಿದ್ದರು. ನಾನು ಯಾರನ್ನು ಟೀಕೆ ಮಾಡಲು ಬಂದಿಲ್ಲ ಎಂದು ಸಂಬರ್ಗಿ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿದ್ದರು.

  • ದುಡ್ಡಿಗಾಗಿ ನಾನು ಪ್ರಚಾರಕ್ಕೆ ಬಂದಿಲ್ಲ: ಸಂಬರಗಿಗೆ ಶಿವಣ್ಣ ತಿರುಗೇಟು

    ದುಡ್ಡಿಗಾಗಿ ನಾನು ಪ್ರಚಾರಕ್ಕೆ ಬಂದಿಲ್ಲ: ಸಂಬರಗಿಗೆ ಶಿವಣ್ಣ ತಿರುಗೇಟು

    ಟ ಶಿವರಾಜ್ ಕುಮಾರ್ (Shivaraj Kumar) ದುಡ್ಡಿಗಾಗಿ ಕಾಂಗ್ರೆಸ್ (Congress) ಪಕ್ಷದ ಪ್ರಚಾರಕ್ಕೆ ಹೋಗಿದ್ದಾರೆ ಎನ್ನುವ ಅರ್ಥದಲ್ಲಿ ಬಿಗ್ ಬಾಸ್ ಸ್ಪರ್ಧಿ ಪ್ರಶಾಂತ್ ಸಂಬರ್ಗಿ (Prashant Sambargi) ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದರು. ಇದಕ್ಕೆ ಸಂಬಂಧಿಸಿದಂತೆ ಶಿವಣ್ಣ ಪ್ರತಿಕ್ರಿಯೆ ನೀಡಿದ್ದು, ‘ಇಂತಹ ಮಾತುಗಳನ್ನು ಸಹಿಸಿಕೊಳ್ಳಲು ಆಗುವುದಿಲ್ಲ. ಕೂಡಲೇ ಆ ಮಾತುಗಳನ್ನು ಅವರು ವಾಪಸ್ಸು ಪಡೆಯಬೇಕು. ನನ್ನ ಹತ್ತಿರ ದುಡ್ಡಿಲ್ಲವಾ? ನಾನು ಯಾವತ್ತೂ ದುಡ್ಡಿಗಾಗಿ ಕೆಲಸ ಮಾಡಿದವನು ಅಲ್ಲ. ಇಂತಹ ಮಾತುಗಳು ಶೋಭೆ ತರುವುದಿಲ್ಲ’ ಎಂದಿದ್ದಾರೆ.

    ಶಿವರಾಜ್ ಕುಮಾರ್ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡುತ್ತಿರುವುದಕ್ಕೆ ಮೊನ್ನೆಯಷ್ಟೇ ಸಂಸದ ಪ್ರತಾಪ್ ಸಿಂಹ ತಮ್ಮದೇ ಆದ ರೀತಿಯಲ್ಲಿ ಟಾಂಗ್ ಕೊಟ್ಟಿದ್ದರು. ನಂತರ ‘ನಾನು ಡಾ.ರಾಜ್ ಕುಟುಂಬ ಅಭಿಮಾನಿ’ ಎಂದು ಹೇಳುವ ಮೂಲಕ ಡ್ಯಾಮೇಜ್ ಕಂಟ್ರೋಲ್ ಗೆ ಮುಂದಾದರು. ಇದೀಗ ಬಿಜೆಪಿ ಪಕ್ಷದೊಂದಿಗೆ ಗುರುತಿಸಿಕೊಂಡಿರುವ ಪ್ರಶಾಂತ್ ಸಂಬರಗಿ ಕೂಡ ಆಕ್ಷೇಪಾರ್ಹ ಕಾಮೆಂಟ್ ಮಾಡಿದ್ದಾರೆ.

    ಫೇಸ್ ಬುಕ್ ನಲ್ಲಿ ಶಿವರಾಜ್ ಕುಮಾರ್ ಬಗ್ಗೆ ವಿವಾದಾತ್ಮಕ ಕಾಮೆಂಟ್ ಮಾಡಿರುವ ಪ್ರಶಾಂತ್ ಸಂಬರ್ಗಿ. ‘ಶಿವಣ್ಣ ಯಾವತ್ತೂ ಸ್ಕ್ರಿಪ್ಟ್ ಕೇಳೋದೇ ಇಲ್ಲ. ಆದರೆ, ಪೇಮೆಂಟ್ ತುಂಬಾನೇ ಮುಖ್ಯ. ಒಪ್ಪಿಕೊಂಡಿದ್ದ ಸಿನಿಮಾ ಮಾಡ್ತಾರೆ. ತುಂಬಾ ಎಮೋಷನಲ್ ಜೀವಿ ನಮ್ಮ ಶಿವಣ್ಣ. ಸಿನಿಮಾ ಫ್ಲಾಪ್ ಆದರೂ, ಅವರು ಕೇರ್ ಮಾಡಲ್ಲ. ಮತ್ತೆ ಪೇಮೆಂಟ್ ತಗೊಂಡು ಇನ್ನೊಂದು ಫಿಲ್ಮ್ ಗೆ ಸೈನ್ ಮಾಡ್ಬಿಡ್ತಾರೆ. ಅದೇ ಫಾರ್ಮುಲಾ ರಾಜಕೀಯದಲ್ಲೂ ಅನುಸರಿಸಿದ್ದಾರೆ. ಕ್ಯಾಂಡಿಡೇಟ್ ಗೆದ್ರೆ ಏನು ಸೋತ್ರೆ ಏನು ಎಲ್ಲಾ ಒಂದೇ. ಏನೋ ಹೇಳ್ತಾರಲ್ಲ ಗೆದ್ದರೆ ಬೆಟ್ಟ. ಇಲ್ಲ ಅಂದ್ರೆ.. ಬಂತಾ ಪ್ಯಾಕೆಟ್.. ಸರಿ ಆಲ್ ರೈಟ್ ಮುಂದೆ ಹೋಗೋಣ’ ಎಂದು ಬರೆದುಕೊಂಡಿದ್ದಾರೆ.

    ಪ್ರಶಾಂತ್ ಸಂಬರ್ಗಿಯ ಪೋಸ್ಟ್ ಗೆ ಅನೇಕರು ಕಾಮೆಂಟ್ ಮಾಡಿದ್ದಾರೆ. ಶಿವರಾಜ್ ಕುಮಾರ್ ಬಗ್ಗೆ ಅವಹೇಳನಕಾರಿ ಆಕ್ಷೇಪ ವ್ಯಕ್ತ ಪಡಿಸಿದ್ದಾರೆ. ಅಲ್ಲದೇ, ಅನೇಕರು ಪ್ರಶಾಂತ್ ಸಂಬರ್ಗಿ ವಿರುದ್ಧವೇ ಗರಂ ಆಗಿದ್ದಾರೆ. ತಮ್ಮ ವಿರುದ್ಧ ಕಾಮೆಂಟ್ ಮಾಡಿದವರನ್ನು ಡಿಲಿಟ್ ಮಾಡಿ, ಡಸ್ಟ್ ಬಿನ್ ಗೆ ಹಾಕಲಾಗುವುದು ಎಂದು ಕಾಮೆಂಟ್ ಬೇರೆ ಮಾಡಿದ್ದಾರೆ ಪ್ರಶಾಂತ್. ಇದನ್ನೂ ಓದಿ:ಆರ್.ಎಲ್ ಜಾಲಪ್ಪ ವಿರುದ್ಧ ಸ್ಪರ್ಧಿಸಿ ಸೋತಿದ್ದರು ಹಿರಿಯ ನಟ ಶ್ರೀನಿವಾಸ್ ಮೂರ್ತಿ

    ಸಿನಿಮಾ ರಂಗದ ಮೇಲೆ ಅನೇಕ ಬಾರಿ ಮುಗಿಬಿದ್ದಿದ್ದಾರೆ ಪ್ರಶಾಂತ್ ಸಂಬರ್ಗಿ. ಡಬ್ಬಿಂಗ್ ವಿಚಾರದಿಂದ ಹಿಡಿದು ಡ್ರಗ್ಸ್ ತನಕವೂ ಸಂಬರ್ಗಿ ಧ್ವನಿ ಎತ್ತಿದ್ದಾರೆ. ಮೀಟೂ ಕೇಸ್ ನಲ್ಲೂ ಅವರು ನಟಿಯ ವಿರುದ್ಧ ಮಾತನಾಡಿದ್ದರು. ಇದೀಗ ಡಾ.ರಾಜ್ ಕುಟುಂಬ ಎಂಬ ಜೇನುಗೂಡಿಗೆ ಗುರಿಯಿಟ್ಟಿದ್ದಾರೆ.

  • ರಾಜಕೀಯ ಅಖಾಡಕ್ಕಿಳಿದ ಪ್ರಶಾಂತ್ ಸಂಬರ್ಗಿ

    ರಾಜಕೀಯ ಅಖಾಡಕ್ಕಿಳಿದ ಪ್ರಶಾಂತ್ ಸಂಬರ್ಗಿ

    ಬಿಗ್ ಬಾಸ್ (Bigg Boss Kannada) ಶೋ ಮೂಲಕ ಮನೆ ಮಾತಾದ ಪ್ರಶಾಂತ್ ಸಂಬರ್ಗಿ (Prashanth Sambargi) ಇದೀಗ ರಾಜಕೀಯ (Politics) ಅಖಾಡಕ್ಕೆ ಕಾಲಿಟ್ಟಿದ್ದಾರೆ. ಕಿರುತೆರೆಯಲ್ಲಿ ರಾಜಕಾರಣಿಯಾಗಿ ಮಿಂಚಲು ರೆಡಿಯಾಗಿದ್ದಾರೆ. ಇದನ್ನೂ ಓದಿ: ಅಭಿಷೇಕ್ ಅಂಬರೀಶ್ ಮದುವೆ ಬಗ್ಗೆ ಮಾತಾಡಿದ ಸುಮಲತಾ

    ದೊಡ್ಮನೆಯಲ್ಲಿ ತಮ್ಮ ಖಡಕ್ ಮಾತುಗಳಿಂದ ಗಮನ ಸೆಳೆದ ಸ್ಪರ್ಧಿ ಪ್ರಶಾಂತ್ ಸಂಬರ್ಗಿ ಕಿರುತೆರೆಯತ್ತ ಮುಖ ಮಾಡಿದ್ದಾರೆ. `ಕೆಂಡಸಂಪಿಗೆ’ (Kendasampige Serial) ಧಾರಾವಾಹಿಯಲ್ಲಿ ನಾಯಕ ತೀರ್ಥಂಕರ್ ಪ್ರಸಾದ್ ಮುಂದೆ ಸೆಡ್ಡು ಹೊಡೆಯಲು ಸಂಬರ್ಗಿ ಎಂಟ್ರಿ ಕೊಟ್ಟಿದ್ದಾರೆ.

    ಮೊದಲ ಬಾರಿಗೆ ರಾಜಕಾರಣಿ ಪಾತ್ರದ ಮೂಲಕ ಸಂಬರ್ಗಿ ನಟಿಸಿದ್ದಾರೆ. ಭೈರತಿ ಕುಣಿಗಲ್ ಎಂಬ ಪಾತ್ರಕ್ಕೆ ಜೀವ ತುಂಬಿದ್ದಾರೆ. ಈ ಪಾತ್ರದ ಅವಕಾಶ ಮೊದಲು ಹೆಸರಾಂತ ನಟ ಅವಿನಾಶ್‌ಗೆ ಸಿಕ್ಕಿತ್ತು. ಡೇಟ್ ಕ್ಲಾಶ್ ಆದ ಕಾರಣ, ಪ್ರಶಾಂತ್ ಸಂಬರ್ಗಿ ಅವರಿಗೆ ಅವಕಾಶ ಒಲಿದು ಬಂತು.

    ಅತಿಥಿ ಪಾತ್ರದ ಮೂಲಕ ಕಿರುತೆರೆ ಸಿನಿ ಪ್ರೇಕ್ಷಕರಿಗೆ ರಂಜಿಸಲು ಸಂಬರ್ಗಿ ರೆಡಿಯಾಗಿದ್ದಾರೆ. ದೊಡ್ಮನೆಯಲ್ಲಿ ಗಮನ ಸೆಳೆದ ಸಂಬರ್ಗಿ ಈಗ ರಾಜಕಾರಣಿಯಾಗಿ ಟಿವಿ ಪರದೆಯಲ್ಲಿ ಪ್ರೇಕ್ಷಕರ ಮನ ಗೆಲ್ಲುತ್ತಾರಾ ಕಾದುನೋಡಬೇಕಿದೆ.

  • ಅದೃಷ್ಟದಿಂದಲೇ ಇಷ್ಟು ದಿನ ಬಿಗ್ ಬಾಸ್‌ನಲ್ಲಿದ್ದರು: ದಿವ್ಯಾಗೆ ಸಂಬರ್ಗಿ ಟಾಂಗ್

    ಅದೃಷ್ಟದಿಂದಲೇ ಇಷ್ಟು ದಿನ ಬಿಗ್ ಬಾಸ್‌ನಲ್ಲಿದ್ದರು: ದಿವ್ಯಾಗೆ ಸಂಬರ್ಗಿ ಟಾಂಗ್

    ಬಿಗ್ ಬಾಸ್ ಮನೆಯಲ್ಲಿ (Bigg Boss House) ಸೀಸನ್ 9ರಲ್ಲಿ ದಿವ್ಯಾ ಫೈನಲಿಸ್ಟ್ ಆಗಿ ಗುರುತಿಸಿಕೊಂಡಿದ್ದರು. ಇದೀಗ ಬಿಗ್ ಬಾಸ್ ಗ್ರ್ಯಾಂಡ್ ಫಿನಾಲೆಯಲ್ಲಿ (Bigg Boss Grand Finale) ದಿವ್ಯಾ ಉರುಡುಗ ಮತ್ತು ಪ್ರಶಾಂತ್ ಸಂಬರ್ಗಿ ಜಗಳ ಮಾಡಿಕೊಂಡಿದ್ದಾರೆ. ಅದೃಷ್ಟದಿಂದ ಇಷ್ಟು ದಿನ ಬಿಗ್ ಬಾಸ್ ಮನೆಯಲ್ಲಿ ದಿವ್ಯಾ ಇದ್ರೂ ಎಂದು ಸಂಬರ್ಗಿ ಟಾಂಗ್ ಕೊಟ್ಟಿದ್ದಾರೆ.

    ದೊಡ್ಮನೆಯ ಆಟ ಮುಗಿಯಲು ಕ್ಷಣಗಣನೆ ಶುರುವಾಗಿದೆ. ಈ ವೇಳೆ ಮನೆಯಿಂದ ಯಾರು ಹೊರಬೇಕು ಎಂದು ಸುದೀಪ್ (Kiccha Sudeep)  ಈಗಾಗಲೇ ಹೊರಬಂದಿರುವ ಸ್ಪರ್ಧಿಗಳಿಗೆ ಕೇಳಿದ್ದಾರೆ. ಹಾಗೆಯೇ ಸಂಬರ್ಗಿ ಅವರಿಗೂ ಕೇಳಿದ್ದಾರೆ. ಈ ವೇಳೆ ದಿವ್ಯಾ ಬಗ್ಗೆ ಖಾರವಾಗಿ ಸಂಬರ್ಗಿ ಪ್ರಶ್ನೆ ಮಾಡಿದ್ದಾರೆ.

    “ದಿವ್ಯಾ ಉರುಡುಗ ಅವರು ಇಷ್ಟುದಿನ ಇದ್ದಿದ್ದೆ ಹೆಚ್ಚು. ಅವರು ಏನೂ ಮಾಡದೆ ಬಿಗ್ ಬಾಸ್ ಫಿನಾಲೆ ತಲುಪಿದ್ದಾರೆ. ದಿವ್ಯಾ ಬಿಗ್ ಬಾಸ್ ಮನೆಯಲ್ಲಿ ಏನು ಮಾಡಿದ್ದಾರೆ ಎಂದು ಅವರನ್ನು ಅವರೇ ಕೇಳಿಕೊಳ್ಳಲಿ. ಇಷ್ಟು ದಿನ ದಿವ್ಯಾ ಹೆಜ್ಜೆ ಹಾಕಿದ್ದು ಅದೃಷ್ಟದಿಂದ ಮಾತ್ರ. ದಿವ್ಯಾ ಉರುಡುಗ ಅವರೇ ಮನೆಯಿಂದ ಹೊರಗಡೆ ಬರಬೇಕು, ಹೊರಗಡೆ ಬರುತ್ತಾರೆ” ಎಂದು ಖಾರವಾಗಿ ಹೇಳಿದ್ದರು. ಇದನ್ನು ಮನೆಯ ಒಳಗಡೆ ಇದ್ದಾಗಲೇ ಕೇಳಿಸಿಕೊಂಡ ದಿವ್ಯಾ ಉರುಡುಗ ಅವರು ಹೊರಗಡೆ ಬಂದು, ಕಿಚ್ಚ ಸುದೀಪ್ ಮುಂದೆ ನಿಂತು ಪ್ರಶಾಂತ್ ಸಂಬರಗಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ.

    ನಾನು ಅದೃಷ್ಟದಿಂದ ಬಿಗ್ ಬಾಸ್‌ನಲ್ಲಿ ಇಷ್ಟುದಿನ ಇಲ್ಲ. ನನ್ನನ್ನು ಜನರು ಇಷ್ಟಪಟ್ಟಿರೋದಿಕ್ಕೆ ಇಲ್ಲಿ ಇರೋದು, ಇಲ್ಲ ಅಂದ್ರೆ ಇರುತ್ತಿರಲಿಲ್ಲ. ದಿವ್ಯಾ ಅಂತ ಹೆಸರು ಬಂದ ಕೂಡಲೇ ನನ್ನ ಬಗ್ಗೆ ಏನೇನೋ ಮಾತನಾಡುತ್ತೀರಿ. ಪ್ರಶಾಂತ್ ಸಂಬರಗಿಯವರನ್ನು ನಾನೊಬ್ಬಳೇ ಹ್ಯಾಂಡಲ್ ಮಾಡಬಹುದಿತ್ತು. ಆದರೆ ಸಂಬರಗಿಗೆ ಉಳಿದ ಸ್ಪರ್ಧಿಗಳನ್ನು ಹ್ಯಾಂಡಲ್ ಮಾಡೋದು ಕಷ್ಟ ಆಗಿತ್ತು. ಹಾಗಾಗಿ ನನಗೆ ಈ ಸಲ ಸ್ವಲ್ಪ ಹೊಂದಿಕೊಳ್ಳೋದು ಕಷ್ಟ ಆಗಿರಬಹುದು. ಯಾರು ಮನೆಯಿಂದ ಹೊರಗಡೆ ಹೋಗ್ತಾರೆ ಎಂದು ಕೇಳಿದಾಗ ಪ್ರಶಾಂತ್ ಸಂಬರಗಿ ಅವರು ಬೇರೆಯವರು ಕೂಡ ನನ್ನ ಹೆಸರು ಹೇಳಬೇಕು ಅನ್ನೋ ತರ ಮಾತನಾಡುತ್ತಾರೆ ಎಂದಿದ್ದಾರೆ. ಇದನ್ನೂ ಓದಿ: ರಕ್ಷಿತ್ ಶೆಟ್ಟಿ ಜೊತೆಗಿನ `ಕಿರಿಕ್ ಪಾರ್ಟಿ’ ಚಿತ್ರ ನೆನಪಿಸಿಕೊಂಡ ರಶ್ಮಿಕಾ ಮಂದಣ್ಣ

    ಇನ್ನೂ ದಿವ್ಯಾ ಉರುಡುಗ (Divya Uruduga) ಎಲಿಮಿನೇಷನ್ (Elimination) ನಂತರ ರೂಪೇಶ್ ಶೆಟ್ಟಿ, ರಾಜಣ್ಣ, ದೀಪಿಕಾ ದಾಸ್, ರಾಕೇಶ್ ಅಡಿಗ ನಡುವೆ ಪೈಪೋಟಿ ಮುಂದುವರೆದಿದೆ. ಯಾರಾಗಲಿದ್ದಾರೆ ಬಿಗ್ ಬಾಸ್ ಸೀಸನ್ 9ರ ವಿನ್ನರ್ ಎಂದು ಕಾದುನೋಡಬೇಕಿದೆ.

    Live Tv
    [brid partner=56869869 player=32851 video=960834 autoplay=true]

  • ಆಟ ಬೇರೆ, ಸ್ನೇಹ ಬೇರೆ: ಅರುಣ್ ಸಾಗರ್ ಮಾತಿಗೆ ಕಿಚ್ಚನ ಮುಂದೆ ಕಣ್ಣೀರಿಟ್ಟ ಸಂಬರ್ಗಿ

    ಆಟ ಬೇರೆ, ಸ್ನೇಹ ಬೇರೆ: ಅರುಣ್ ಸಾಗರ್ ಮಾತಿಗೆ ಕಿಚ್ಚನ ಮುಂದೆ ಕಣ್ಣೀರಿಟ್ಟ ಸಂಬರ್ಗಿ

    ಬಿಗ್ ಬಾಸ್ ಮನೆಯ (Bigg Boss House) ಆಟ ದಿನದಿಂದ ದಿನಕ್ಕೆ ರೋಚಕ ತಿರುವು ಪಡೆದು ಮುನ್ನುಗ್ಗುತ್ತಿದೆ. 70 ದಿನಕ್ಕಿಂತ ಅಧಿಕ ದಿನಗಳು ಆಟ ಆಡಿ ಸಂಬರ್ಗಿ ಸೈ ಎನಿಸಿಕೊಂಡಿದ್ದರು. ಈಗ 12ನೇ ವಾರಕ್ಕೆ ಪ್ರಶಾಂತ್ ಸಂಬರ್ಗಿ (Prasahnth Sambargi) ಆಟ ಅಂತ್ಯವಾಗಿದೆ. ಇದೀಗ ವೇದಿಕೆಯ ಮೇಲೆ ಕಿಚ್ಚನ ಜೊತೆ ತಾವು ಎಲಿಮಿನೇಟ್ ಆಗಿರುವುದರ ಬಗ್ಗೆ ಮತ್ತು ಅರುಣ್ ಸಾಗರ್ (Arun Sagar) ಆಟದ ಬಗ್ಗೆ ಸಂಬರ್ಗಿ ಕಣ್ಣೀರಿಟ್ಟಿದ್ದಾರೆ.

    ದೊಡ್ಮನೆಯಲ್ಲಿ ಮಾಸ್ಟರ್ ಮೈಂಡ್ ಎಂದು ಗುರುತಿಸಿಕೊಂಡಿರುವ ಪ್ರಶಾಂತ್ ಸಂಬರ್ಗಿ ಇದೀಗ ಎಲಿಮಿನೇಟ್ ಆಗಿ ಹೊರಬಂದಿದ್ದಾರೆ. ತಮ್ಮ ಎಲಿಮಿನೇಷನ್, ಅರುಣ್ ಸಾಗರ್ ಜೊತೆಗಿನ ನಂಟಿನ ಬಗ್ಗೆ ಪ್ರಶಾಂತ್ ಮಾತನಾಡಿದ್ದಾರೆ. ಎಲ್ಲರಿಗೂ ತಿಳಿದಿರುವಂತೆ ಪ್ರಶಾಂತ್ ಮತ್ತು ಅರುಣ್ ಸಾಗರ್ ಸಾಕಷ್ಟು ವರ್ಷಗಳಿಂದ ಸ್ನೇಹಿತರು, ಬಿಗ್ ಬಾಸ್ ಮನೆಗೆ ಬರುವ ಮುಂಚೆಗೆ ಒಬ್ಬರಿಗೊಬ್ಬರು ತಿಳಿದಿದ್ದರು. ಇದೀಗ ಆಟ ಬೇರೇ ಫ್ರೆಂಡ್‌ಶಿಪ್ ಎಂದು ಅರುಣ್ ಸಾಗರ್ ಆಡಿರುವ ಮಾತಿಗೆ ಸಂಬರ್ಗಿ ವೇದಿಕೆಯ ಮೇಲೆ ಭಾವುಕರಾಗಿದ್ದಾರೆ.

    ಆಟ ಬೇರೇ ಫ್ರೇಂಡ್‌ಶಿಪ್ ಬೇರೇ ನೀನು ನನ್ನ ಸ್ಪರ್ಧಿ ಎಂದು ಅರುಣ್ ಸಾಗರ್ ಬಿಗ್ ಬಾಸ್ ಮನೆಯಲ್ಲಿ ಹೇಳಿದ್ದರು. ಈ ಮಾತನ್ನ ನಾನು ಅರುಣ್ ಕಡೆಯಿಂದ ನಿರೀಕ್ಷೆ ಮಾಡಿರಲಿಲ್ಲ ಎಂದು ಕಿಚ್ಚನ ಮುಂದೆ ಅತ್ತಿದ್ದಾರೆ. ಅರುಣ್ ಸಾಗರ್ ಇದೀಗ ಇರುವ ರೀತಿಯೇ ಬೇರೇ ಎಂದು ಸಂಬರ್ಗಿ ಮಾತನಾಡಿದ್ದಾರೆ. ಇದನ್ನೂ ಓದಿ: `ಕಾಂತಾರ’ ನೋಡಿ ತುಂಬಾ ಕಲಿತೆ: ರಿಷಬ್ ಚಿತ್ರಕ್ಕೆ ಹೃತಿಕ್ ರೋಷನ್ ಮೆಚ್ಚುಗೆ

    ಎಲಿಮಿನೇಟ್ ಆಗಿ ಆಚೆ ಬರುವಾಗ ಸಂಬರ್ಗಿ ಭಾವುಕರಾದರು. ಅದರಲ್ಲೂ ಸುದೀಪ್ (Sudeep) ಅವರ ಜೊತೆಗೆ ವೇದಿಕೆ ಮೇಲೆ ಮುಖಾಮುಖಿಯಾದ ಬಿಕ್ಕಿ ಬಿಕ್ಕಿ ಅತ್ತರು. ಅದಕ್ಕೆ ಕಾರಣ, ಅರುಣ್ ಸಾಗರ್. ನಾನು ಆಚೆ ಬಂದಿರುವುದಕ್ಕೆ ಶಾಕ್ ಆಗಿದೆ. ನಾನು ಮನೆಯಲ್ಲಿ ಇದ್ದಾಗ ಅರುಣ್ ಸಾಗರ್ ಕಡೆಯಿಂದ ಬಹಳಷ್ಟು ನಿರೀಕ್ಷೆ ಇಟ್ಟುಕೊಂಡಿದ್ದೆ. ಯಾಕೆಂದರೆ, ಆತ ನನ್ನ 20 ವರ್ಷಗಳ ಸ್ನೇಹಿತ. ಆದರೆ ಬಿಗ್ ಬಾಸ್ ಶೋನಲ್ಲಿ ಎಲ್ಲರೂ ಸ್ಪರ್ಧಿಗಳೇ ಎಂಬಂತೆ ವರ್ತಿಸಿದ. ಅದು ನನಗೆ ನೋವು ತಂದಿತ್ತು. ಹೌದು, ನಾನೇ ಹೇಳಿದ್ದೆ, ಆಟದ ಮುಂದೆ ಯಾವ ಸಂಬಂಧಗಳು ಲೆಕ್ಕಕ್ಕೆ ಬರುವುದಿಲ್ಲ. ಯಾವ ಸ್ನೇಹ ಕೂಡ ಇರುವುದಿಲ್ಲ ಎಂದು. ಆದರೆ ಅದನ್ನು ನನ್ನಿಂದಲೇ ಪಾಲಿಸಲು ಆಗಲಿಲ್ಲ ಎಂದು ಸಂಬರ್ಗಿ ಮಾತನಾಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಬಿಗ್ ಬಾಸ್ ಮನೆಯಿಂದ ಪ್ರಶಾಂತ್ ಸಂಬರ್ಗಿಗೆ ಗೇಟ್‌ಪಾಸ್

    ಬಿಗ್ ಬಾಸ್ ಮನೆಯಿಂದ ಪ್ರಶಾಂತ್ ಸಂಬರ್ಗಿಗೆ ಗೇಟ್‌ಪಾಸ್

    ದೊಡ್ಮನೆಯಲ್ಲಿ ಸದಾ ಒಂದಲ್ಲಾ ಒಂದು ವಿಚಾರವಾಗಿ ಹೈಲೈಟ್ ಆಗುತ್ತಿದ್ದ ಸ್ಪರ್ಧಿ ಅಂದರೆ ಪ್ರಶಾಂತ್ ಸಂಬರ್ಗಿ (Prashanth Sambargi) ಇದೀಗ ಬಿಗ್ ಬಾಸ್ (Bigg Boss) ಮನೆಯಿಂದ ಹೊರಬಂದಿದ್ದಾರೆ. 12ನೇ ವಾರಕ್ಕೆ ಸಂಬರ್ಗಿ ಆಟಕ್ಕೆ ಬ್ರೇಕ್ ಬಿದ್ದಿದೆ‌.

    ಸಂಬರ್ಗಿ ಬಿಗ್ ಬಾಸ್ ಸೀಸನ್ 8ರಲ್ಲಿ ಸ್ಪರ್ಧಿಯಾಗಿ ಗುರುತಿಸಿಕೊಂಡಿದ್ದರು. ಈ ಬಾರಿ ಪ್ರವೀಣರ ಸಾಲಿನಲ್ಲಿ ಒಬ್ಬರಾಗಿ ಬಿಗ್ ಬಾಸ್ ಸೀಸನ್ 9ಕ್ಕೆ ಕಾಲಿಟ್ಟಿದ್ದರು. ಆಟದಲ್ಲಿ ಅದೆಷ್ಟರ ಮಟ್ಟಿಗೆ ಸೈ ಎನಿಸಿಕೊಂಡಿದ್ದರೋ ವಿವಾದದ ಮೂಲಕವೂ ಅಷ್ಟೇ ಹೈಲೈಟ್ ಆಗಿದ್ದರು. ಇದೀಗ ದೊಡ್ಮನೆಯಿಂದ ಸಂಬರ್ಗಿಗೆ ಗೇಟ್ ಪಾಸ್ ಸಿಕ್ಕಿದೆ‌. ಇದನ್ನೂ ಓದಿ: Breaking News: ಅನಿರುದ್ಧ ಬ್ಯಾನ್ ಪ್ರಕರಣ ಸುಖಾಂತ್ಯ – ಕೈ ಕುಲುಕಿ ಅನುಮತಿ

    ಬಿಗ್ ಬಾಸ್ ಮನೆಯ ಆಟ 12 ವಾರಗಳನ್ನ ಪೂರೈಸಿ ಮುನ್ನುಗ್ಗುತ್ತಿದೆ. 12ನೇ ವಾರಕ್ಕೆ ಪ್ರಶಾಂತ್ ಸಂಬರ್ಗಿ ಆಟಕ್ಕೆ ಬ್ರೇಕ್ ಬಿದ್ದಿದೆ. ತನಗೆ ಸಿಕ್ಕಿರುವ ಬಿಗ್ ಬಾಸ್ ಸೀಸನ್‌ನ 2 ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳುವಲ್ಲಿ ಸಂಬರ್ಗಿ ಸೋತಿದ್ದಾರೆ. ಕಾವ್ಯಶ್ರೀ ಗೌಡ ನಂತರ ಪ್ರಶಾಂತ್ ಸಂಬರ್ಗಿ ಮನೆಯಿಂದ ಹೊರನಡೆದಿದ್ದಾರೆ. ಇದನ್ನೂ ಓದಿ: ‘ಕಾಂತಾರ 2’ ಸಿನಿಮಾ ಮಾಡಲು ಪಂಜುರ್ಲಿ ದೈವದಿಂದ ಸಿಕ್ತು ಅನುಮತಿ

    Live Tv
    [brid partner=56869869 player=32851 video=960834 autoplay=true]