Tag: ಪ್ರಹ್ಲಾದ್ ಜೋಶಿ

  • ಹಳೆ ಹುಬ್ಬಳ್ಳಿ ಗಲಾಟೆ ಪ್ರಕರಣ ತೆಗೆದಿದ್ದು ‘ಕೈ’ ಸರ್ಕಾರದ ತುಷ್ಟೀಕರಣದ ಪರಾಕಾಷ್ಠೆ: ಜೋಶಿ ಕಿಡಿ

    ಹಳೆ ಹುಬ್ಬಳ್ಳಿ ಗಲಾಟೆ ಪ್ರಕರಣ ತೆಗೆದಿದ್ದು ‘ಕೈ’ ಸರ್ಕಾರದ ತುಷ್ಟೀಕರಣದ ಪರಾಕಾಷ್ಠೆ: ಜೋಶಿ ಕಿಡಿ

    – ಇದು ಬಹಳ ಗಂಭೀರ ಕೇಸ್, ಹಿಂದೂ ಮುಸ್ಲಿಂ ಪ್ರಶ್ನೆ ಅಲ್ಲ ಎಂದ ಕೇಂದ್ರ ಸಚಿವ

    ಹುಬ್ಬಳ್ಳಿ: ಹಳೆ ಹುಬ್ಬಳ್ಳಿ (Hubballi) ಗಲಾಟೆ ಪ್ರಕರಣ ತೆಗೆದು ಹಾಕಿದ್ದು ಕಾಂಗ್ರೆಸ್ ಸರ್ಕಾರದ ತುಷ್ಟೀಕರಣದ ಪರಾಕಾಷ್ಠೆ. ಇದು ಬಹಳ ಗಂಭೀರ ಕೇಸ್. ಇದು ಹಿಂದೂ ಮುಸ್ಲಿಂ ಪ್ರಶ್ನೆ ಅಲ್ಲ. ದೇಶದ್ರೋಹಿ, ಸಮಾಜದ್ರೋಹಿಗಳ ಮಧ್ಯೆ ಇರೋ ಹೋರಾಟ. ಭಾರತದ ಸಂವಿಧಾನ, ಕಾನೂನು ಮಧ್ಯೆ ಆಗಿರೋ ಹೋರಾಟ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಕಿಡಿಕಾರಿದ್ದಾರೆ.

    ಈ ಬಗ್ಗೆ ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, 16 ಸಿ, 18, 20ರ ಅಡಿ ಎನ್‌ಐಎ ಚಾರ್ಜ್ ಶೀಟ್ ಫೈಲ್ ಆಗಿತ್ತು. ಸಂಘಟಿತ ಭಯೋತ್ಪಾದಕ ಕೃತ್ಯ ಎಂದು ಚಾರ್ಜ್ಶೀಟ್ ಹಾಕಲಾಗಿತ್ತು. ಸರ್ಕಾರಕ್ಕೆ ಸಮಾಜದ ಹಿತ ಇದ್ರೆ ಕೇಸ್ ವಾಪಸ್ ಪಡೆಯೋಕೆ ಸಾಧ್ಯ ಇಲ್ಲ. ಕಾಂಗ್ರೆಸ್ ಭಯೋತ್ಪಾದಕ ಬೆಂಬಲಿತ ಪಾರ್ಟಿ. ಕೇಸ್ ವಾಪಸ್ ಪಡೆದು ಬಹುದೊಡ್ಡ ಕಂಟಕ ತಂದಿದ್ದಾರೆ ಎಂದು ಬೇಸರ ಹೊರಹಾಕಿದ್ದಾರೆ. ಇದನ್ನೂ ಓದಿ: ಹರಿಯಾಣದಲ್ಲಿ ಕಾಂಗ್ರೆಸ್‌ಗೆ ಕೈಕೊಟ್ಟು ಕಾಶ್ಮೀರದಲ್ಲಿ ಎನ್‌ಸಿ ಕೈ ಹಿಡಿದ ಆಪ್‌!

    ಕೇಸ್ ವಾಪಸ್ ಪಡೆಯುತ್ತಾರೆ ಅಂದರೆ ಇವರ ಉದ್ದೇಶ ಏನು? ದೇಶದಲ್ಲಿ ಶೇ.95 ನಕ್ಸಲ್ ಚಟುವಟಿಕೆ ಕಡಿಮೆ ಆಗಿದೆ. ಕೇಂದ್ರ ಸರ್ಕಾರದ ಬಿಗಿಯಾದ ಕ್ರಮದಿಂದ ಕಡಿಮೆ ಆಗಿದೆ. ಕಾಂಗ್ರೆಸ್ ಸರ್ಕಾರ ಭಯೋತ್ಪಾದಕ ಕೃತ್ಯವನ್ನು ಮಾಡಲು ಪ್ರಯತ್ನ ಪಟ್ಟವರ ಕೇಸ್ ವಾಪಸ್ ಪಡೆಯುತ್ತಿರುವುದನ್ನು ನಾನು ಖಂಡಿಸುತ್ತೇನೆ. ಭಯೋತ್ಪಾದಕ ಇಸ್ಲಾಂ ಪರ ಕಾಂಗ್ರೆಸ್ ಇದೆ. ಇದು ಜನತೆಯ ಸುರಕ್ಷೆಯ ಪ್ರಶ್ನೆ. ಸರ್ಕಾರ ಇದನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಈ ದೇಶಕ್ಕೆ ಕಾಡುತ್ತಿರುವ ದುಷ್ಟಶಕ್ತಿಯೆಂದರೆ ಅದು ಕಾಂಗ್ರೆಸ್ ಪಕ್ಷ – ಜನಾರ್ದನ ರೆಡ್ಡಿ

    ಇದು ಕಾಂಗ್ರೆಸ್ (Congress) ಬಿಜೆಪಿ (BJP) ಪ್ರಶ್ನೆ ಅಲ್ಲ. ಇದನ್ನು ನೋಡಿದ್ರೆ ಯಾವ ಪ್ರಮಾಣದಲ್ಲಿ ಮತಾಂಧತೆಯ ಪಿತ್ತ ನೆತ್ತಗೇರಿದೆ ಅನ್ನೋದು ಗೊತ್ತಾಗುತ್ತೆ. ಇದು ಅಕಸ್ಮಾತ್ ನಿಜ ಆದರೆ ನಾವು ಕಾನೂನು ಹೋರಾಟ ಮಾಡುತ್ತೇವೆ. ನಾಳೆ ಇಸ್ಲಾಂ ಮತಾಂಧ ಶಕ್ತಿಗಳು ಪೊಲೀಸ್ ಠಾಣೆ ಸುಟ್ಟು ಹಾಕಬಹುದು. ನಾವು ಹೋರಾಟ ಮಾಡುತ್ತೇವೆ. ನಾವು ಕೋರ್ಟ್ನಲ್ಲಿ ಪ್ರಶ್ನೆ ಮಾಡುತ್ತೇವೆ. ನಾಳೆ ಇದಕ್ಕೆ ಸರ್ಕಾರ ಮಾಹಿತಿ ನೀಡದೆ ಹೋದರೆ ಹೋರಾಟ ಮಾಡುತ್ತೇವೆ. ಮೊದಲ ಹಂತದಲ್ಲಿ ಸೋಮವಾರ ಹೋರಾಟ. ನನಗಿರೋ ಮಾಹಿತಿ ಪ್ರಕಾರ ಎನ್‌ಐಎ (NIA) ಕೇಸ್ ಯಾವ ರಾಜ್ಯದವರೂ ವಾಪಸ್ ಪಡೆದಿಲ್ಲ. ರಾಜ್ಯ ಸರ್ಕಾರ ವೋಟ್ ಬ್ಯಾಂಕ್ ರಾಜಕಾರಣಕ್ಕೆ ಏನಾದರೂ ಮಾಡಿರಬಹುದು ಎಂದು ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: 2013 ರಲ್ಲಿ ವಾಣಿಜ್ಯ ನಗರಿ ಹುಬ್ಬಳ್ಳಿಗೆ ಬಂದಿದ್ದ ರತನ್ ಟಾಟಾ

  • ರಾಜ್ಯದ 47.12 ಲಕ್ಷ ರೈತರ ಖಾತೆಗೆ 942 ಕೋಟಿ ಜಮೆ; ಪಿಎಂ ಕಿಸಾನ್ ಯೋಜನೆ ರೈತರ ಸಂಜೀವಿನಿ ಎಂದ ಜೋಶಿ

    ರಾಜ್ಯದ 47.12 ಲಕ್ಷ ರೈತರ ಖಾತೆಗೆ 942 ಕೋಟಿ ಜಮೆ; ಪಿಎಂ ಕಿಸಾನ್ ಯೋಜನೆ ರೈತರ ಸಂಜೀವಿನಿ ಎಂದ ಜೋಶಿ

    – ಧಾರವಾಡದ 1.15 ಲಕ್ಷ ರೈತರ ಖಾತೆಗೆ 23.09 ಕೋಟಿ ರೂ. ಜಮೆ

    ಹುಬ್ಬಳ್ಳಿ: ಪ್ರಧಾನಿ ನರೇಂದ್ರ ಮೋದಿ ಅವರು ಜಾರಿಗೊಳಿಸಿದ ಪಿಎಂ ಕಿಸಾನ್ ಸಮ್ಮಾನ್ ಯೋಜನೆ (PM Kisan Yojana) ರೈತರ ಸಂಜೀವಿನಿ ಆಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ (Pralhad Joshi) ಹೇಳಿದ್ದಾರೆ.

    ಕೇಂದ್ರ ಸರ್ಕಾರ (Union Government) ಪಿಎಂ ಕಿಸಾನ್ ಸಮ್ಮಾನ್ 18ನೇ ಕಂತಿನ ನಿಧಿ ರೈತರ ಖಾತೆಗೆ ನೇರ ವರ್ಗಾವಣೆಯಾದ ಬಳಿಕ ಪ್ರತಿಕ್ರಿಯಿಸಿರುವ ಸಚಿವರು, ಈ ಯೋಜನೆ ರೈತರಿಗೆ ಉತ್ತೇಜನ ನೀಡಿದೆ ಎಂದಿದ್ದಾರೆ. ಕಿಸಾನ್ ಸಮ್ಮಾನ್ ಯೋಜನೆಯಡಿ ವರ್ಷಕ್ಕೆ 6,000 ರೂ. ಧನಸಹಾಯ ನೀಡುವ ಮೂಲಕ ದೇಶದ 11 ಕೋಟಿ ರೈತರಿಗೆ ಸಂಜೀವಿನಿಯಾಗಿದೆ ಎಂದಿದ್ದಾರೆ. ಇದನ್ನೂ ಓದಿ: ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ತಗುಲಿ 3 ಮಕ್ಕಳು ಸೇರಿ 7 ಜನ ಸಜೀವ ದಹನ

    ಈ ಯೋಜನೆಯಿಂದಾಗಿ ದೇಶದಲ್ಲಿ ಕೃಷಿಗೆ (Agriculture) ಅಪೂರ್ವ ಉತ್ತೇಜನ ದೊರಕಿದೆ. ರೈತರ ಸಾಲವನ್ನು ಕಡಿಮೆ ಮಾಡಿದೆ. ಅಲ್ಲದೇ, ಗ್ರಾಮೀಣ ಪ್ರದೇಶದ ಸಮುದಾಯಗಳನ್ನು ಸಶಕ್ತರನ್ನಾಗಿಸಿದೆ. ಅಲ್ಲದೇ ಪಿಎಂ ಕಿಸಾನ್‌ ಸಮ್ಮಾನ್ ಯೋಜನೆಯು ಭಾರತದ ಕೃಷಿಕರನ್ನು ಮಾತ್ರವಲ್ಲ ದೇಶವನ್ನೇ ಸ್ವಾವಲಂಬಿ ಮಾಡುವತ್ತ ಒಂದು ಮಹತ್ತರ ಹೆಜ್ಜೆಯಾಗಿದೆ ಎಂದು ಪ್ರತಿಪಾದಿಸಿದ್ದಾರೆ.

    ಕಿಸಾನ್ ಸಮ್ಮಾನ್ ಯೋಜನೆಯಡಿ 18ನೇ ಕಂತಿನಲ್ಲಿ ಒಟ್ಟು 9.4 ಕೋಟಿ ರೈತರಿಗೆ 20,000 ಕೋಟಿ ರೂ. ನೇರ ವರ್ಗಾವಣೆ ಮಾಡಲಾಗಿದೆ. ಕರ್ನಾಟಕದ 47.12 ಲಕ್ಷ ರೈತರು 942 ಕೋಟಿ ರೂ. ಪಡೆದಿದ್ದಾರೆ ಎಂದು ಸಚಿವ ಜೋಶಿ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಅವರೇನು ಮಾಡಿದ್ದಾರೆ, ನಾನೇನು ಮಾಡಿದ್ದೀನಿ ಅಂತಾ ಚರ್ಚೆ ಆಗಲಿ: ಸಿಎಂಗೆ ಹೆಚ್‌ಡಿಕೆ ಓಪನ್ ಚಾಲೆಂಜ್

    ಧಾರವಾಡದ 1.15 ಲಕ್ಷ ರೈತರಿಗೆ ಸಮ್ಮಾನ್ ನಿಧಿ:
    ಧಾರವಾಡ ಲೋಕಸಭಾ ಕ್ಷೇತ್ರದ 1.15 ಲಕ್ಷ ರೈತರು ಇದರ ಪ್ರಯೋಜನ ಪಡೆದಿದ್ದಾರೆ. 23.09 ಕೋಟಿ ರೂ. ಧಾರವಾಡ ರೈತರ ಖಾತೆಗೆ ಜಮೆಯಾಗಿದ್ದು, ದಸರಾ ಹಬ್ಬದ ವೇಳೆ ರೈತರಲ್ಲಿ ಖುಷಿ ತಂದಿದೆ ಎಂದು ಸಚಿವ ಜೋಶಿ ಹೇಳಿದ್ದಾರೆ. ಇದನ್ನೂ ಓದಿ: ಜಾತಿ ಗಣತಿ ಜಾರಿಯಿಂದ ಸರ್ಕಾರ ಹೋಗುತ್ತೆ ಅನ್ನೋದಾದ್ರೆ ಹೋಗಲಿ: ಹರಿಪ್ರಸಾದ್‌ ಸ್ಫೋಟಕ ಹೇಳಿಕೆ

  • ಯಾರ ಸರ್ಕಾರ ಇದ್ರೇನು, ದೇಶ ಸುಭದ್ರವಾಗಿರಬೇಕು: ಜಿ.ಪರಮೇಶ್ವರ್

    ಯಾರ ಸರ್ಕಾರ ಇದ್ರೇನು, ದೇಶ ಸುಭದ್ರವಾಗಿರಬೇಕು: ಜಿ.ಪರಮೇಶ್ವರ್

    ಧಾರವಾಡ: ಯಾರ ಸರ್ಕಾರ ಇದ್ರೇನು, ದೇಶ ಸುಭದ್ರವಾಗಿರಬೇಕು ಎಂದು ಗೃಹ ಸಚಿವ ಜಿ. ಪರಮೇಶ್ವರ್ (G Parameshwar) ಹೇಳಿದ್ದಾರೆ.

    ರಾಹುಲ್ ಗಾಂಧಿಯಂತೆ (Rahul Gandhi) ಮಾತನಾಡಬೇಡಿ ಎಂದು ಪರಮೇಶ್ವರ್‌ರವರಿಗೆ ಪ್ರಹ್ಲಾದ್ ಜೋಶಿ ಹೇಳಿಕೆ ನೀಡಿದ್ದರು. ಇದಕ್ಕೆ ತಿರುಗೇಟು ನೀಡಿದ ಅವರು, ಅದು ಚೀಪ್ ಟಾಕ್ ಆಗಿದೆ. ನಾನೇನು ಅವರ ಮೇಲೆ ದೂಷಣೆ ಮಾಡಿಲ್ಲ ಎಂದರು. ನಾವು ಮಾಡಿದ್ದು,ಅವರು ಮಾಡಿದ್ರು ಅಂತಾ ಹೇಳಿಕೊಂಡು ತಿರುಗೋಣ. ಯಾರ ಸರ್ಕಾರ ಇದ್ರೇನು, ದೇಶದ ಭದ್ರತೆ ಮುಖ್ಯ. ಯಾವ ಸರ್ಕಾರ ಇದ್ದರೂ ದೇಶ ಭದ್ರವಾಗಿರಬೇಕು ಎಂದರು.  ಇದನ್ನೂ ಓದಿ: ರಾಜ್ಯದಲ್ಲಿ ಏನೇನಾಗುತ್ತಿದೆ ಎಂಬ ಬಗ್ಗೆ ಹೈಕಮಾಂಡ್ ವರದಿ ತರಿಸಿಕೊಳ್ಳುತ್ತೆ: ಡಿಕೆಶಿ

    545 ಪಿಎಸ್‌ಐ ನೇಮಕಾತಿ ವಿಚಾರವಾಗಿ ಮಾತನಾಡಿ, ಕೆಲವರು ಕೋರ್ಟ್‌ಗೆ ಹೋಗಿದ್ದಾರೆ. ಪ್ರಿಯಾಂಕ್ ಖರ್ಗೆ, ಈಶ್ವರ ಖಂಡ್ರೆ, ಶರಣಪ್ರಕಾಶ್ ಅವರ ಬೇಡಿಕೆಯೂ ಒಂದಿದೆ. 371ಜೆ ಗೆ ಶೇ. 8ರಷ್ಟು ಮೀಸಲಾತಿ ಕೇಳಿದ್ದಾರೆ. 2023ರಲ್ಲಿ ಈ ಸಂಬಂಧ ಆದೇಶವಾಗಿದ್ದು, ಈ ಆದೇಶ ಪಾಲಿಸಿ ಎಂದು ಒತ್ತಾಯಿಸುತ್ತಿದ್ದಾರೆ. 545 ಪಿಎಸ್‌ಐ ನೇಮಕ ಪ್ರಾರಂಭವಾಗಿದ್ದು 2020ರಲ್ಲಿ. ನೋಟಿಫಿಕೇಷನ್‌ನಲ್ಲೂ ಅದೇ ಆಗಬೇಕು ಅನ್ನೋದು ಇನ್ನೊಂದು ವಾದ. ಇದನ್ನೇ ಈಗ ಕೋರ್ಟ್ ತೀರ್ಮಾನಿಸಬೇಕಿದೆ. ಕೋರ್ಟ್ ತೀರ್ಪು ಆಧರಿಸಿ ಮುಂದಿನ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು. ಇದನ್ನೂ ಓದಿ: ಉಪ್ಪು ತಿಂದವರು ನೀರು ಕುಡಿಯಲೇಬೇಕು: ಸಿಎಂಗೆ ಸಿ.ಟಿ.ರವಿ ಟಾಂಗ್‌

    ಸಿದ್ದರಾಮಯ್ಯ (CM Siddaramaiah) ಪರ ಜಿ.ಟಿ. ದೇವೇಗೌಡರು ಹೇಳಿಕೆ ನೀಡಿದ ಬಗ್ಗೆ ಮಾತನಾಡಿ, ಜಿ.ಟಿ. ದೇವೇಗೌಡರು ವಾಸ್ತವಾಂಶ ಮಾತನಾಡಿದ್ದಾರೆ, ಅವರು ಕಾಂಗ್ರೆಸ್‌ಗೆ ಬಂದ್ರೆ ಶಕ್ತಿ ಬರುತ್ತೆ ಅನೋದಿದ್ರೆ ತಗೋತೀವಿ. ಯಾರೇ ಬಂದ್ರು ಕಾಂಗ್ರೆಸ್‌ಗೆ ತಗೋತೆವಿ ಎಂದರು. ಸಿಎಂ ಸ್ಥಾನಕ್ಕೆ ಪರಮೇಶ್ವರ್ ಹೆಸರು ಕೇಳಿ ಬಂದಿರುವ ವಿಚಾರವಾಗಿ ಮಾತನಾಡಿ, ಅದು ನನಗೆ ಕೇಳಿಸಿಲ್ಲ. ಅದು ಮಾಧ್ಯಮಗಳಿಗೆ ಹೇಗೆ ಕೇಳಿಸುತ್ತೆ? ನನಗೆ ಕೇಳಿಸಿದಾಗ ನೋಡೋಣ ಬಿಡಿ ಎಂದರು. ಇದನ್ನೂ ಓದಿ: ಉತ್ತರ ಲೆಬನಾನ್‌ ಮೇಲೆ ಇಸ್ರೇಲ್‌ ವಾಯುದಾಳಿ – ಹಮಾಸ್‌ ಟಾಪ್‌ ಕಮಾಂಡರ್‌ ಹತ್ಯೆ

  • ಅಹಿಂದ ಹೆಸರಿನಲ್ಲಿ ಸಮಾಜವಾದಿಯೆಂದು ಆಡಳಿತಕ್ಕೆ ಬಂದವರು ಸಿಎಂ: ಪ್ರಹ್ಲಾದ್ ಜೋಶಿ ಕಿಡಿ

    ಅಹಿಂದ ಹೆಸರಿನಲ್ಲಿ ಸಮಾಜವಾದಿಯೆಂದು ಆಡಳಿತಕ್ಕೆ ಬಂದವರು ಸಿಎಂ: ಪ್ರಹ್ಲಾದ್ ಜೋಶಿ ಕಿಡಿ

    ಹುಬ್ಬಳ್ಳಿ: ಅಹಿಂದ ಹೆಸರಿನಲ್ಲಿ, ಸಮಾಜವಾದಿ ಎಂದು ಆಡಳಿತಕ್ಕೆ ಬಂದವರು ಸಿಎಂ. ಇಂದು ರೆಡ್‌ಹ್ಯಾಂಡ್ ಆಗಿ ಸಿಕ್ಕಿದ್ದಾರೆ. ರಾಜ್ಯಪಾಲರ ಮೇಲೆ ಇಲ್ಲಸಲ್ಲದ ಆರೋಪ ಮಾಡುತ್ತಾರೆ. ಇದು ರಾಜ್ಯದ ದುರಂತ ಎಂದು ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Prahlad Joshi) ಸಿಎಂ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದರು.

    ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ, ಸಂಸ್ಥೆಗಳು ಕೂಡ ರಾಜ್ಯಪಾಲರ ವಿರುದ್ಧ ಹೋರಾಟ ಮಾಡುತ್ತವೆ. ಕಾಂಗ್ರೆಸ್ (Congress) ನಾಯಕರು ಮತ್ತು ಸಿಎಂ ಏನೇನೋ ಮಾತನಾಡುತ್ತಿದ್ದಾರೆ. ಇದು ಷಡ್ಯಂತ್ರ ಅಂತಾರೆ. ಇದು ಸಿಎಂ ಅಧಿಕಾರದಲ್ಲಿದ್ದವರಿಗೆ ಸಾಧ್ಯ. ಇದು ಬೇರೆ ಯಾರಿಗೂ ಸಾಧ್ಯವಿಲ್ಲ ಎಂದು ಸ್ವತಃ ಹೈಕೋರ್ಟ್ ಹೇಳಿದೆ. ಈ ಬಗ್ಗೆ ಸುದೀರ್ಘ ವಿಚಾರಣೆ ನಡೆಸಿ ತೀರ್ಪು ನೀಡಿದೆ. ನಾನು ಸಹ ಕೋರ್ಟ್ ಆದೇಶ ಎಲ್ಲಾ ಅಧ್ಯಾಯ ಮಾಡಿದ್ದೇನೆ ಎಂದು ಹೇಳಿದರು. ಇದನ್ನೂ ಓದಿ: Tamil Nadu | ಹೊಸೂರಲ್ಲಿ ಭಾರೀ ಅಗ್ನಿ ಅವಘಡ – ಹೊತ್ತಿ ಉರಿದ ಟಾಟಾ ಕಂಪನಿ

    ಸಿಎಂ ತಪ್ಪು ಮಾಡಿಲ್ಲ ಅಂದರೆ ಸಿಬಿಐಗೆ ಪ್ರಕರಣ ನೀಡಿ. ಕಾಂಗ್ರೆಸ್‌ನವರಿಗೆ ಸಿಬಿಐ ಭಯ ಕಾಡುತ್ತಿದೆ. ಕಾಂಗ್ರೆಸ್ ಪಾರ್ಟಿಯಲ್ಲಿ ಕುಟುಂಬ ಪ್ರಜಾಪ್ರಭುತ್ವ ಇದೆ. ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಸಿದ್ದರಾಮಯ್ಯ (Siddramaiah) ಮಾತ್ರ ಕಾಂಗ್ರೆಸ್‌ಗೆ ಪ್ರಜಾಪ್ರಭುತ್ವ. ಎಲ್ಲಾ ಇಲಾಖೆಯ ಅಧಿಕಾರಿಗಳನ್ನು ಸ್ವತಃ ಸಿಎಂ ಅವರೇ ವರ್ಗಾವಣೆ ಮಾಡಿದ್ದಾರೆ. ನೈತಿಕವಾಗಿ ಕಾಂಗ್ರೆಸ್ ದಿವಾಳಿಯಾಗಿದೆ. ಈ ಕೂಡಲೇ ಸಿಎಂ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: ಜಮೀರ್‌ ವಿರುದ್ಧ ನ್ಯಾಯಾಂಗ ನಿಂದನೆ ಕೇಸ್‌ ದಾಖಲಿಸಿ: ಎಜಿಗೆ ಟಿ ಜೆ ಅಬ್ರಹಾಂ ದೂರು

    ಗೋದ್ರಾ ಹತ್ಯಾಕಾಂಡದಲ್ಲಿ ಮೋದಿ (Narendra Modi) ಮತ್ತು ಅಮಿತ್ ಶಾರನ್ನ ಸಿಲುಕಿಸುವ ಪ್ರಯತ್ನ ಮಾಡಲಾಯಿತು. ಅದರಲ್ಲಿ ಮೋದಿ ಅವರ ಪಾತ್ರ ಇಲ್ಲ. ಆದರೆ ಮೋದಿ ಮೇಲೆ ಆರೋಪ ಕೇಳಿ ಬಂದಿವೆ ಅಷ್ಟೇ. 2012 ರಲ್ಲಿ ಯಾಕೆ ಮಾತನಾಡಿಲ್ಲ ಸಿಎಂ ಸಿದ್ದರಾಮಯ್ಯ ಅವರೇ ಎಂದು ಪ್ರಶ್ನಿಸಿದರು. ಇಂಡಿಯಾ ಒಕ್ಕೂಟದಲ್ಲಿ ಇರುವ ಎಲ್ಲಾ ಪಾರ್ಟಿಗಳನ್ನು ಕಾಂಗ್ರೆಸ್ ವಜಾ ಮಾಡಿತ್ತು. ನೈತಿಕತೆ ಸಂಪೂರ್ಣವಾಗಿ ಬಿಟ್ಟಿದ್ದಾರೆ. ಸಿಎಂ ಮೇಲೆ ಕೇಸು ದಾಖಲಾಗುತ್ತಿದ್ದಂತೆ ಲೋಕಾಯುಕ್ತ ಎಸ್‌ಪಿ ಓಡಿ ಹೋಗುತ್ತಾರೆ ಎಂದರು. ಇದನ್ನೂ ಓದಿ: ಕಾಶ್ಮೀರವನ್ನ ಪ್ಯಾಲೆಸ್ತೀನ್‌ಗೆ ಹೋಲಿಸಿದ ಪಾಕ್ ಪ್ರಧಾನಿಗೆ ವಿಶ್ವಸಂಸ್ಥೆಯಲ್ಲಿ ಭಾರತ ತಿರುಗೇಟು

    ಚುನಾವಣಾ ಬಾಂಡ್ ಪ್ರಕರಣದಲ್ಲಿ ಎಲ್ಲಾ ಪಕ್ಷಗಳು ಭಾಗಿಯಾಗಿವೆ. ಎಲ್ಲಾ ಪಕ್ಷಗಳ ಸಮ್ಮತಿಯಿಂದಲೇ ಎಲೆಕ್ಟ್ರಿಕಲ್ ಬಾಂಡ್ ಜಾರಿ ಮಾಡಲಾಗಿತ್ತು. ಹೀಗೆ ಎಫ್‌ಐಆರ್ ದಾಖಲು ಮಾಡಿದರೆ ಮೊದಲು ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಮೇಲು ಸಹ ಮಾಡಬೇಕು. ಅವರು ಸಹ ಎಲೆಕ್ಟ್ರಿಕಲ್ ಬಾಂಡ್ ಮೂಲಕ ಹಣ ಪಡೆದಿದ್ದಾರೆ. ಕೇಂದ್ರ, ಕಾಂಗ್ರೆಸ್ ಮಾತ್ರವಲ್ಲದೆ ರಾಜ್ಯದಲ್ಲಿ ಕಳೆದ ಬಾರಿ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗಲೂ ಚುನಾವಣಾ ಬಾಂಡ್ ಮೂಲಕ ಹಣ ಪಡೆಯಲಾಗಿದೆ. ಈ ಬಗ್ಗೆ ಸಮಗ್ರ ದಾಖಲೆ ಬಿಡುಗಡೆ ಮಾಡಲಾಗುತ್ತದೆ. ಜೆಪಿ ನಡ್ಡಾ, ನಿರ್ಮಲಾ ಸೀತಾರಾಮನ್, ವಿಜಯೇಂದ್ರ ಮೇಲೆ ಎಫ್‌ಐಆರ್ ದಾಖಲೆ ಆದೇಶದ ಬಗ್ಗೆ ಚರ್ಚೆ ಮಾಡಲಾಗುತ್ತದೆ ಎಂದು ಹೇಳಿದರು. ಇದನ್ನೂ ಓದಿ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ವಿರುದ್ಧ ಎಫ್‌ಐಆರ್‌ಗೆ ಕೋರ್ಟ್‌ ಆದೇಶ

    ನಮ್ಮಲ್ಲಿ ಹೈಕಮಾಂಡ್ ಇಲ್ಲ. ರಾಷ್ಟ್ರೀಯ ನೇತೃತ್ವವಿದೆ. ಸದ್ಯದಲ್ಲಿಯೇ ಬಿಜೆಪಿ (BJP) ಪಕ್ಷದಲ್ಲಿನ ಎಲ್ಲಾ ಸಮಸ್ಯೆ ಬಗೆಹರಿಯುತ್ತವೆ ಎಂದರು. ರಾಹುಲ್, ಸೋನಿಯಾ ಗಾಂಧಿ ಬೇಲ್ ಮೇಲೆ ಹೊರಗಿದ್ದಾರೆ. ಕಾಂಗ್ರೆಸ್ ಇಡೀ ಹೈಕಮಾಂಡ್ ಭ್ರಷ್ಟಾಚಾರದಿಂದ ಕೂಡಿದೆ. ಹೈಕಮಾಂಡ್‌ಗೆ ಕಮಾಂಡರ್ ಇಲ್ಲ. ಇದು ನಿರ್ಲಜ್ಜ ಕಾಂಗ್ರೆಸ್ ಸಂಸ್ಕೃತಿ. ಕುರ್ಚಿಗೆ ಅಂಟಿ ಕೂರುವುದು ಕಾಂಗ್ರೆಸ್ ಹೈಕಮಾಂಡ್ ದೌರ್ಬಲ್ಯ. ರಾಹುಲ್ ಗಾಂಧಿಗೆ ಸಿದ್ದರಾಮಯ್ಯ ಬೆದರಿಸುತ್ತಿದ್ದಾರೆ ಎಂದು ಟೀಕಿಸಿದರು. ಇದನ್ನೂ ಓದಿ: ನನ್ನ ಬಳಿ ಇರುವ ದಾಖಲೆ ಬಿಟ್ಟರೆ 5-6 ಸಚಿವರು ರಾಜೀನಾಮೆ ನೀಡಬೇಕಾಗುತ್ತೆ: ಹೆಚ್‌ಡಿಕೆ ಬಾಂಬ್‌

    ಇಡೀ ವಿಶ್ವದಲ್ಲೇ ಭಾರತದ ನ್ಯಾಯಾಂಗ ವ್ಯವಸ್ಥೆ ಅತ್ಯಂತ ಶ್ರೇಷ್ಠ ಮತ್ತು ಸುಭದ್ರವಾಗಿದೆ. ನ್ಯಾಯಾಂಗ ವ್ಯವಸ್ಥೆ ನಮ್ಮ ಕೈಯಲ್ಲಿ ಇದ್ದರೆ ಹಲವಾರು ತೀರ್ಪುಗಳು ನಮ್ಮ ಪರವಾಗಿ ಬರುತ್ತಿದ್ದವು. ಆದರೆ ನ್ಯಾಯಾಲಯದಲ್ಲಿ ನಮ್ಮ ವಿರುದ್ಧವೂ ತೀರ್ಪು ಬರುತ್ತವೆ. ಆದರೆ ನ್ಯಾಯಾಲಯದ ಬಗ್ಗೆ ನಾವು ಯಾವತ್ತೂ ತಪ್ಪು ಮಾತನಾಡುವುದಿಲ್ಲ. ಆದರೆ ಸಚಿವ ಜಮೀರ್ ನ್ಯಾಯಾಲಯದ ಬಗ್ಗೆ ಮಾತನಾಡುತ್ತಾರೆ. ಈ ಬಗ್ಗೆ ಏನು ಮಾಡಬೇಕೆಂದು ಚರ್ಚೆ ಮಾಡಲಾಗುತ್ತದೆ ಎಂದು ಹೇಳಿದರು. ಇದನ್ನೂ ಓದಿ: ಪಬ್ಲಿಕ್‌ ಮ್ಯೂಸಿಕ್‌ ದಶೋತ್ಸವಕ್ಕೆ ವಿದ್ಯುಕ್ತ ಚಾಲನೆ

  • ಕಾಂಗ್ರೆಸ್ ಪಕ್ಷ, ಸಿದ್ದರಾಮಯ್ಯ ಭಯಭೀತರಾಗಿದ್ದಾರೆ – ಪ್ರಹ್ಲಾದ್ ಜೋಶಿ

    ಕಾಂಗ್ರೆಸ್ ಪಕ್ಷ, ಸಿದ್ದರಾಮಯ್ಯ ಭಯಭೀತರಾಗಿದ್ದಾರೆ – ಪ್ರಹ್ಲಾದ್ ಜೋಶಿ

    – ಸಿದ್ದರಾಮಯ್ಯನವರೇ ನಿಮ್ಮ 70 ಲಕ್ಷದ ವಾಚ್ ಏನಾಯ್ತು ಎಂದ ಸಚಿವ

    ನವದೆಹಲಿ: ಕಾಂಗ್ರೆಸ್ (Congress) ಪಕ್ಷ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಭಯಭೀತರಾಗಿದ್ದಾರೆ. ಕಾನೂನಿನ ಭಯದಿಂದ ಸಿಬಿಐ (CBI) ತನಿಖೆಗೆ ನೀಡಿದ ಮುಕ್ತ ಸಮ್ಮತಿಯನ್ನು ವಾಪಸ್ ಪಡೆಯುವ ಮೂಲಕ ಕ್ಷುಲಕ ರಾಜಕಾರಣ ಮಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Prahlad Joshi) ಆರೋಪಿಸಿದರು.

    ದೆಹಲಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ನಿಮ್ಮ ಪಕ್ಷದಲ್ಲಿ ಭ್ರಷ್ಟಾಚಾರ ಆರೋಪ ಇಲ್ಲದವರಿಗೆ ಸನ್ಮಾನ ಮಾಡುತ್ತೇನೆ ಎಂದಿದ್ದಾರೆ. ಅವರೇ ದೊಡ್ಡ ಭ್ರಷ್ಟಾಚಾರಿ, ಅವರು ಏನು ಸನ್ಮಾನ ಮಾಡುತ್ತಾರೆ? ಸಿದ್ದರಾಮಯ್ಯ ಅವರೇ ನಿಮ್ಮ 70 ಲಕ್ಷ ರೂ. ವಾಚ್ ಏನಾಯಿತು? ನಿಮ್ಮ ವಾಲ್ಮೀಕಿ ಹಗರಣ ಏನಾಯಿತು? ನೀವೇ ಮಾಡಿದ ರಿಡೂ ವಿಷಯದಲ್ಲಿ ಕೆಂಪಣ್ಣ ವರದಿ ಏನಾಯಿತು ಎಂದು ಪ್ರಶ್ನಿಸಿದರು.ಇದನ್ನೂ ಓದಿ: ಯಶ್ `ಟಾಕ್ಸಿಕ್’ಗೆ ಹೊಸ ವಿಲನ್ ಸೇರ್ಪಡೆ

    ಈಗ ಸಿಬಿಐ ತನಿಖೆ ಮಾಡಲು ಬಾರದಂತೆ ಸಿಬಿಐ ತನಿಖೆಗೆ ನೀಡಿದ ಮುಕ್ತ ಸಮ್ಮತಿಯನ್ನು ವಾಪಸ್ ಪಡೆದಿದ್ದಾರೆ. ಲೋಕಾಯುಕ್ತ ತನಿಖೆ ಮಾಡಬೇಕು ಎಂದರೆ ಮಾಡಲಿ. ಆದರೆ ಅದಕ್ಕೂ ಮುನ್ನ ಸಿಎಂ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿಲಿ, ಇತ್ತಿಚೇಗೆ ಎಡಿಜಿಯನ್ನು ತಮಗೆ ಬೇಕಾದವರನ್ನು ನೇಮಕ ಮಾಡಿದ್ದಾರೆ. ಭ್ರಷ್ಟಾಚಾರದಿಂದ ತಮ್ಮನ್ನು ತಾವು ರಕ್ಷಿಸಿಕೊಳ್ಳಲು ಬೇಕಾದ ಎಲ್ಲ ತಯಾರಿ ಮಾಡಿಕೊಂಡಿದ್ದಾರೆ ಎಂದರು.

    ಕ್ಯಾಬಿನೆಟ್ ಮೂಲಕ ರಾಜ್ಯಪಾಲರಿಗೆ ಉತ್ತರ ಕೊಡುವ ವಿಚಾರದ ಬಗ್ಗೆ ರಾಹುಲ್ ಗಾಂಧಿ (Rahul Gandhi) ಉತ್ತರ ಕೊಡಬೇಕು. ಸಂವಿಧಾನದ ಕುತ್ತಿಗೆ ಹಿಸುಕಿದವರು ಇಂದು ಕೈಯಲ್ಲಿ ಹಿಡಿದು ಓಡಾಡ್ತಿದ್ದಾರೆ. ರಾಜ್ಯಪಾಲರು ಸಂವಿಧಾನದ ಒಬ್ಬ ಮುಖ್ಯಸ್ಥರು ಅವರಿಗೆ ಮಾಹಿತಿ ಕೊಡಲ್ಲ ಅಂದರೆ ಅದು ಸಂವಿಧಾನದ ವಿರೋಧಿ. ಇದನ್ನು ನಾನು ಖಂಡಿಸುತ್ತೇನೆ. ರಾಜ್ಯಪಾಲರಿಗೆ ಮಾಹಿತಿ ಹೋದರೆ ಹುಳುಕು ಹೊರ ಬರುತ್ತದೆ ಎಂದು ಭಯ ರಾಹುಲ್, ಸೋನಿಯಾ ಗಾಂಧಿ ಬೇಲ್ ಮೇಲೆ ಹೊರಗಿದ್ದಾರೆ. ಅವರೇ ಭ್ರಷ್ಟಾಚಾರದ ಪಿತಾಮಹಾರು ಎಂದು ಕಿಡಿಕಾರಿದರು.ಇದನ್ನೂ ಓದಿ: 5,800 ಎಕರೆ ಪ್ರದೇಶದಲ್ಲಿ ನಿರ್ಮಾಣವಾಗಲಿದೆ `KWIN City’ – ಏನಿದು ವಿಶಿಷ್ಟ ಯೋಜನೆ?

  • ಮೇಲ್ನೋಟಕ್ಕೆ ಸಿಎಂ ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಹೈಕೋರ್ಟ್ ಹೇಳಿದೆ – ಪ್ರಹ್ಲಾದ್ ಜೋಶಿ

    ಮೇಲ್ನೋಟಕ್ಕೆ ಸಿಎಂ ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಹೈಕೋರ್ಟ್ ಹೇಳಿದೆ – ಪ್ರಹ್ಲಾದ್ ಜೋಶಿ

    ನವದೆಹಲಿ: ಮುಡಾ ಪ್ರಕರಣ (MUDA Scam) ದೇಶದ್ಯಾಂತ ಚರ್ಚೆಯಾಗುತ್ತಿದೆ. ಕಾಂಗ್ರೆಸ್ (Congress) ಡಿಎನ್‌ಎಯಲ್ಲಿ ಭ್ರಷ್ಟಾಚಾರ ಇದೆ ಎಂದು ಹಿಂದೆಯೇ ಹೇಳಿದ್ದೆ. ಅದಕ್ಕೆ ಪೂರಕವಾದ ಆದೇಶವನ್ನು ಹೈಕೋರ್ಟ್ (High Court) ನೀಡಿದೆ. ಮೇಲ್ನೋಟಕ್ಕೆ ಮುಖ್ಯಮಂತ್ರಿಗಳು ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಹೈಕೋರ್ಟ್ ಹೇಳಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Prahlad Joshi) ಹೇಳಿದ್ದಾರೆ.

    ಹೈಕೋರ್ಟ್ ಆದೇಶಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಹೈಕೋರ್ಟ್ ಆದೇಶದಲ್ಲಿ ಸಿಎಂ ನಿಯಮಗಳನ್ನು ಗಾಳಿಗೆ ತೂರಿ, ಅಕ್ರಮ ಮಾಡಿದ್ದಾರೆ ಎಂದು ಸ್ಪಷ್ಟವಾಗಿ ಹೈಕೋರ್ಟ್ ಹೇಳಿದೆ. ಸಾಮಾನ್ಯ ವ್ಯಕ್ತಿಗೆ ಈ ಪ್ರಮಾಣದಲ್ಲಿ ಪರಿಣಾಮ ನೀಡಲು ಸಾಧ್ಯವಿಲ್ಲ. ಹೈಕೋರ್ಟ್ ಆದೇಶದ ಹಿನ್ನಲೆ ಮುಖ್ಯಮಂತ್ರಿ ಸ್ಥಾನಕ್ಕೆ ತಡ ಮಾಡದೇ ಸಿದ್ದರಾಮಯ್ಯ (CM Siddaramaiah) ಅವರು ರಾಜೀನಾಮೆ ನೀಡಬೇಕು ಎಂದರು.ಇದನ್ನೂ ಓದಿ: ಮುಡಾ ಕೇಸ್‌: ಕಾನೂನಾತ್ಮಕವಾಗಿ ಮುಂದೇನು? ಕಾಂಗ್ರೆಸ್‌ ಹೈಕಮಾಂಡ್‌ ಮುಂದಿರುವ ಆಯ್ಕೆಗಳೇನು?

    ದಲಿತರ ಕೋಟಿ ಬೆಲೆ ಬಾಳುವ ಭೂಮಿಯನ್ನು ಲಕ್ಷಗಳಲ್ಲಿ ಖರೀದಿಸಿ, ಸಿಎಂ ಹೆಂಡ್ತಿಗೆ ಗಿಫ್ಟ್ ನೀಡುವುದು ಹಾಸ್ಯಾಸ್ಪದ, ಇಲ್ಲಿ ದೊಡ್ಡ ಭ್ರಷ್ಟಾಚಾರ ನಡೆದಿದೆ. ರಾಜ್ಯಪಾಲರು, ದಲಿತ ನಾಯಕರಿಗೆ ಚಪ್ಪಲಿಯಿಂದ ಹೊಡೆಸುವ ಯತ್ನ ಮಾಡಿದೆ. ಈಗಲಾದರೂ ಸಿಎಂ ಬಹಿರಂಗ ಕ್ಷಮೆ ಕೇಳುವ ಮೂಲಕ ರಾಜೀನಾಮೆ ನೀಡಬೇಕು ಎಂದು ಕಿಡಿಕಾರಿದ್ದಾರೆ.

    ರಾಹುಲ್ ಗಾಂಧಿ (Rahul Gandhi) ಡೋಂಗಿ ನೈತಿಕತೆ ಬಗ್ಗೆ ಮಾತನಾಡುತ್ತಾರೆ. ನಿಜವಾದ ನೈತಿಕತೆ ಇದ್ದರೆ ಅವರು ಸಿದ್ದರಾಮಯನವರ ರಾಜೀನಾಮೆ ಕೇಳಬೇಕು. ಲೋಕಾಯುಕ್ತದಲ್ಲಿ ನಿವೃತ್ತ ನ್ಯಾಯಾಧೀಶರು ಇರುತ್ತಾರೆ. ಬಾಕಿ ಅಧಿಕಾರಿಗಳು ರಾಜ್ಯ ಸರ್ಕಾರದವರೇ ಇರುತ್ತಾರೆ. ನಿಷ್ಪಕ್ಷಪಾತವಾಗಿ ತನಿಖೆಯಾಗಬೇಕು ಎಂದರೆ ಸಿಬಿಐಗೆ ನೀಡಬೇಕು. ಆದ್ದರಿಂದ ಪ್ರಕರಣವನ್ನು ಸಿಬಿಐಗೆ ನೀಡಲಿ ಎಂದು ತಿಳಿಸಿದ್ದಾರೆ.ಇದನ್ನೂ ಓದಿ: ಪುಲ್ವಾಮಾ ದಾಳಿಯ ಪ್ರಮುಖ ಆರೋಪಿ ಹೃದಯಾಘಾತದಿಂದ ಸಾವು

  • ನವೀಕರಿಸಬಹುದಾದ ಇಂಧನ ವಲಯದಲ್ಲಿ ಆಸಕ್ತಿ ಒಂದು ಆಯ್ಕೆಯಲ್ಲ, ಅನಿವಾರ್ಯ – ಜಗದೀಪ್ ಧನಕರ್

    ನವೀಕರಿಸಬಹುದಾದ ಇಂಧನ ವಲಯದಲ್ಲಿ ಆಸಕ್ತಿ ಒಂದು ಆಯ್ಕೆಯಲ್ಲ, ಅನಿವಾರ್ಯ – ಜಗದೀಪ್ ಧನಕರ್

    ಗಾಂಧಿನಗರ: ಹವಾಮಾನ ವೈಪರೀತ್ಯದ ಸಮಸ್ಯೆ ಭೂಮಿಯ ಅಸ್ತಿತ್ವಕ್ಕೆ ಧಕ್ಕೆ ತಂದಿದ್ದು, ಇದನ್ನು ಗಂಭೀರವಾಗಿ ಪರಿಗಣಿಸದಿದ್ದಲ್ಲಿ ಅದರ ಪರಿಣಾಮ ಎದುರಿಸಬೇಕಾಗುತ್ತದೆ ಹೀಗಾಗೀ ನವೀಕರಿಸಬಹುದಾದ ಇಂಧನದಲ್ಲಿ (Renewable Energy) ಆಸಕ್ತಿ ತೋರಿಸುವುದು ಒಂದು ಆಯ್ಕೆಯಲ್ಲ ಅದು ಪ್ರಪಂಚದ ಅನಿವಾರ್ಯವಾಗಿದೆ ಎಂದು ಉಪರಾಷ್ಟ್ರಪತಿ ಜಗದೀಪ್ ಧನಕರ್ (Jagadeep Dhankar) ಹೇಳಿದರು.

    ನಾಲ್ಕನೇ ಜಾಗತಿಕ ನವೀಕರಿಸಬಹುದಾದ ಇಂಧನ ಹೂಡಿಕೆದಾರರ ಸಭೆಯ ಸಮಾರೋಪ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಅವರು, ಭೂಮಿಯನ್ನು ಉಳಿಸಲು, ನವೀಕರಿಸಬಹುದಾದ ಇಂಧನದಲ್ಲಿ ಹೂಡಿಕೆ ಮಾಡದೆ ನಮಗೆ ಬೇರೆ ದಾರಿಯಿಲ್ಲ ಮತ್ತು ಹವಾಮಾನ ಬದಲಾವಣೆಯ ಬೆದರಿಕೆಯನ್ನು ಎದುರಿಸಲು ನಾವು ಹಗಲಿರುಳು ಶ್ರಮಿಸಬೇಕಾಗಿದೆ ಎಂದರು. ಇದನ್ನೂ ಓದಿ: ಉದಯನಿಧಿ ಸ್ಟಾಲಿನ್‌ಗೆ ಡಿಸಿಎಂ ಪಟ್ಟ – ಶೀಘ್ರವೇ ಘೋಷಣೆ ಸಾಧ್ಯತೆ

    ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಭಾರತ ವಿಶ್ವಕ್ಕೆ ಮುಂಚೂಣಿಯಲ್ಲಿದೆ, ಹವಾಮಾನ ಬದಲಾವಣೆಯ ಸಮಸ್ಯೆಯನ್ನು ಎದುರಿಸಲು, ಪ್ರತಿಯೊಬ್ಬರೂ ತಮ್ಮ ಪಾತ್ರವನ್ನು ನಿರ್ವಹಿಸಬೇಕು. ಭಾರತದ ಉಪಕ್ರಮದ ಮೇಲೆ ಸೌರ ಒಕ್ಕೂಟವನ್ನು ರಚಿಸಲಾಯಿತು. ಜಗತ್ತನ್ನು ಉಳಿಸಲು ನಾವು ಬದ್ಧರಾಗಿದ್ದೇವೆ. ಇದಕ್ಕಾಗಿ ಜಗತ್ತಿನ ಎಲ್ಲಾ ಏಜೆನ್ಸಿಗಳು ಒಟ್ಟಾಗಿ ಕೆಲಸ ಮಾಡಬೇಕಾಗಿದೆ. ಪ್ರತಿಯೊಬ್ಬರೂ ತಮ್ಮ ಪಾತ್ರವನ್ನು ನಿರ್ವಹಿಸಬೇಕು. ನಾವು ಶಕ್ತಿಯನ್ನು ಬಳಸುವಾಗ ನಮ್ಮ ಅಗತ್ಯಕ್ಕೆ ಮಾತ್ರ ಬಳಸಬೇಕು. ಭಾರತದಲ್ಲಿ ಆಗುತ್ತಿರುವ ಅಭಿವೃದ್ಧಿಯು ಇಡೀ ಜಗತ್ತಿಗೆ ಪ್ರಯೋಜನವನ್ನು ನೀಡುತ್ತದೆ ಎಂದು ತಿಳಿಸಿದರು. ಇದನ್ನೂ ಓದಿ: ಒಂದು ದೇಶ ಒಂದು ಚುನಾವಣೆ ಮಸೂದೆಗೆ ಕ್ಯಾಬಿನೆಟ್‌ ಒಪ್ಪಿಗೆ

    ಈ ಸಂದರ್ಭದಲ್ಲಿ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಮಾತನಾಡಿ, ಇಂದು ಇಡೀ ವಿಶ್ವವೇ ನವೀಕರಿಸಬಹುದಾದ ಇಂಧನಕ್ಕಾಗಿ ಭಾರತದತ್ತ ನೋಡುತ್ತಿದೆ. ಇದಕ್ಕೆ ಕಾರಣ ಪ್ರಧಾನಿ ನರೇಂದ್ರ ಮೋದಿ ಅವರು ಜಗತ್ತಿನ ಮುಂದಿಟ್ಟಿರುವ ದೂರದೃಷ್ಟಿ. ಗುಜರಾತಿನ ಮುಖ್ಯಮಂತ್ರಿಯಾಗಿ ಮತ್ತು ದೇಶದ ಪ್ರಧಾನಿಯಾಗಿ ಅವರು ಇದರಲ್ಲಿ ಸಾಕಷ್ಟು ಕೆಲಸ ಮಾಡಿದ್ದಾರೆ. ರಾಜ್ಯಗಳು 2030 ರ ವೇಳೆಗೆ 540 ಜಿಡಬ್ಲ್ಯೂ ನವೀಕರಿಸಬಹುದಾದ ಶಕ್ತಿಯ ಗುರಿಯನ್ನು ಹೊಂದಿವೆ. 2030 ರ ವೇಳೆಗೆ ಹಸಿರು ಶಕ್ತಿ ಪರಿವರ್ತನೆಗಾಗಿ ಹಣಕಾಸು ಸಂಸ್ಥೆಗಳು 386 ಶತಕೋಟಿ ಡಾಲರ್ ವಾಗ್ದಾನ ಮಾಡಿವೆ. ಇದರಿಂದ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ 82 ಲಕ್ಷ ಉದ್ಯೋಗಗಳು ಸೃಷ್ಟಿಯಾಗಲಿವೆ ಎಂದು ಹೇಳಿದರು. ಇದನ್ನೂ ಓದಿ: ಸಂಗೊಳ್ಳಿ ರಾಯಣ್ಣನ ಮೂರ್ತಿ ಭಗ್ನ – ಯುವಕ ಪೊಲೀಸ್ ವಶಕ್ಕೆ

  • ಮಮತಾ ಬ್ಯಾನರ್ಜಿ ಡ್ರಾಮಾ ಬಿಟ್ಟು ರಾಜೀನಾಮೆ ನೀಡೋದೆ ಒಳ್ಳೇದು – ಜೋಶಿ ಟೀಕೆ

    ಮಮತಾ ಬ್ಯಾನರ್ಜಿ ಡ್ರಾಮಾ ಬಿಟ್ಟು ರಾಜೀನಾಮೆ ನೀಡೋದೆ ಒಳ್ಳೇದು – ಜೋಶಿ ಟೀಕೆ

    – ಪಶ್ಚಿಮ ಬಂಗಾಳ ಸಿಎಂ ರಾಜೀನಾಮೆ ನಾಟಕವಾಡುತ್ತಿದ್ದಾರೆ

    ಹುಬ್ಬಳ್ಳಿ: ಮಮತಾ ಬ್ಯಾನರ್ಜಿ (Mamata Banerjee) ಅವರ ರಾಜೀನಾಮೆ ಹೇಳಿಕೆ ಕೇವಲ ಡ್ರಾಮಾ. ಜನರೆದುರು ಈ ರೀತಿ ಕಣ್ಣಾ ಮುಚ್ಚಾಲೆ ಆಡುವುದು ಬೇಡ. ಬದಲಿಗೆ ರಾಜೀನಾಮೆ ನೀಡಲಿ ಎಂದು ಕೇಂದ್ರ ಆಹಾರ ಸಚಿವ ಪ್ರಹ್ಲಾದ್ ಜೋಶಿ (Prahlad Joshi) ಟೀಕಿಸಿದರು.

    ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿ, ಮಮತಾ ಅವರು ರಾಜೀನಾಮೆಯ ನಾಟಕವಾಡುತ್ತಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಮುಖ್ಯಮಂತ್ರಿ ಆಗಿ ಸರ್ಕಾರ ಮುನ್ನಡೆಸಲು ಅವರು ಸಮರ್ಥರಿಲ್ಲ. ಸಮರ್ಪಕ ಆಡಳಿತ ನೀಡುವಲ್ಲಿ ಅವರು ಅಸಮರ್ಥರಾಗಿದ್ದಾರೆ ಎಂದು ಪ್ರತಿಕ್ರಿಯಿಸಿದರು. ಇದನ್ನೂ ಓದಿ: ಆಗ್ರಾ ನಗರಕ್ಕೆ ವಿಶ್ವ ಪರಂಪರೆಯ ತಾಣ ನೀಡುವಂತೆ ಸಲ್ಲಿಸಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂಕೋರ್ಟ್

    ಅಧಿಕಾರ ನೀಡಿದ ಜನರಿಗೆ ನ್ಯಾಯ ಒದಗಿಸುವಲ್ಲಿ ಸಹ ವೈಫಲ್ಯ ಕಂಡಿದ್ದಾರೆ. ಸಮುದಾಯಕ್ಕೆ ಅವಮಾನ ಮಾಡುತ್ತಲೇ ಬಂದಿದ್ದಾರೆ. ಇದೇ ಪ್ರವೃತ್ತಿ ಮುಂದುವರಿಸುವ ಬದಲು ರಾಜೀನಾಮೆ ನೀಡುವುದೇ ಸೂಕ್ತ ಎಂದು ಜೋಶಿ ತಿಳಿಸಿದರು. ಇದನ್ನೂ ಓದಿ: ಭೂಮಿಯ ಸುತ್ತ ಹೊಮ್ಮಿತು ನಿಗೂಢ ಸಿಗ್ನಲ್‌ – ವಿಜ್ಞಾನಿಗಳಲ್ಲಿ ಅಚ್ಚರಿ

    ದೆಹಲಿ ಸಿಎಂ ಆಗಿದ್ದ ಅರವಿಂದ ಕೇಜ್ರಿವಾಲ್ (Arvind Kejriwal) ಅವರಿಗೆ ಷರತ್ತು ಬದ್ಧ ಜಾಮೀನು ಸಿಕ್ಕಿದೆ. ಆದರೆ, ಅವರಿನ್ನೂ ದೋಷಮುಕ್ತರಾಗಿ ಹೊರ ಬಂದಿಲ್ಲ ಎಂದರು. ಇದನ್ನೂ ಓದಿ: ಮತ್ತೆ ನಂದಿನಿ ಹಾಲಿನ ದರ ಹೆಚ್ಚಳ – ಬಹಿರಂಗವಾಗಿಯೇ ಸಿದ್ದರಾಮಯ್ಯ ಘೋಷಣೆ

  • ಕಾಂಗ್ರೆಸ್ ಸರ್ಕಾರ ಕರ್ನಾಟಕವನ್ನು ಅಕ್ಷರಶಃ ಪಾಕಿಸ್ತಾನ ಮಾಡುತ್ತಿದೆ – ನಾಗಮಂಗಲ ಗಲಭೆಗೆ ಪ್ರಹ್ಲಾದ್ ಜೋಶಿ ಆಕ್ರೋಶ

    ಕಾಂಗ್ರೆಸ್ ಸರ್ಕಾರ ಕರ್ನಾಟಕವನ್ನು ಅಕ್ಷರಶಃ ಪಾಕಿಸ್ತಾನ ಮಾಡುತ್ತಿದೆ – ನಾಗಮಂಗಲ ಗಲಭೆಗೆ ಪ್ರಹ್ಲಾದ್ ಜೋಶಿ ಆಕ್ರೋಶ

    ನವದೆಹಲಿ: ರಾಜ್ಯ ಕಾಂಗ್ರೆಸ್ ಸರ್ಕಾರ ಕರ್ನಾಟಕವನ್ನು ಅಕ್ಷರಶಃ ಪಾಕಿಸ್ತಾನ (Pakistan)ಮಾಡಲು ಹೊರಟಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಮಂಡ್ಯದ ನಾಗಮಂಗಲ (Nagamangala Violence) ಘಟನೆ ಕುರಿತು ಪ್ರತಿಕ್ರಿಯಿಸಿದ ಅವರು, ಗಣಪತಿ ವಿಸರ್ಜನೆ ವೇಳೆ ನಡೆದ ಈ ದುಷ್ಕೃತ್ಯವನ್ನು ತೀವ್ರವಾಗಿ ಖಂಡಿಸಿದ್ದಾರೆ.ಸರ್ವ ಜನಾಂಗದ ಶಾಂತಿಯ ತೋಟ ಎಂಬಂತಿರುವ ಕರ್ನಾಟಕವನ್ನು ಕಾಂಗ್ರೆಸ್ (Congress) ಸರ್ಕಾರ ರಾಜಕೀಯ ತುಷ್ಟೀಕರಣಕ್ಕಾಗಿ ಮತ್ತೊಂದು ಪಾಕಿಸ್ತಾನ ಮಾಡಲು ಹೊರಟಿದೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಸಿದ್ದರಾಮಯ್ಯ ಮುಸ್ಲಿಮರಿಗೆ ಫ್ರೀ ಪಾಸ್ ಕೊಟ್ಟಿದ್ದಾರೆ- ಸಿಎಂ ವಿರುದ್ಧ ಸೂಲಿಬೆಲೆ ಗರಂ

    ಕಾಂಗ್ರೆಸ್‌ನ ಓಲೈಕೆ ಆಡಳಿತದಿಂದಾಗಿ ನಮ್ಮ ಕರ್ನಾಟಕದ ಪರಿಸ್ಥಿತಿ ಎಲ್ಲಿಗೆ ಬಂದು ನಿಂತಿದೆ ಎಂದು ಪ್ರಶ್ನಿಸಿದ ಅವರು ನಾಗಮಂಗಲ ಗಲಭೆ ಸೇರಿದಂತೆ ಇತ್ತೀಚಿನ ಘಟನೆಗಳ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದರು. ಇದನ್ನೂ ಓದಿ: ವ್ಯವಸ್ಥಿತವಾಗಿ ಪ್ಲಾನ್ ಮಾಡಿ ಕಲ್ಲು, ಪೆಟ್ರೋಲ್ ಬಾಂಬ್ ಎಸೆದಿದ್ದಾರೆ: ಪ್ರತಾಪ್ ಸಿಂಹ

    ಮಸೀದಿ ಮುಂದೆ ಗಣೇಶ ಮೆರವಣಿಗೆ ಹೋಗಬಾರದೆ?
    ಮಸೀದಿ ಮುಂದೆ ಗಣಪತಿ ಮೆರವಣಿಗೆ ಹೋಗಬಾರದು ಎಂಬ ಕಾನೂನು, ನಿಯಮ ಎಲ್ಲಿದೆ? ಗಣೇಶ ಮೂರ್ತಿ ಇದ್ದರೂ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿ ಬೆಂಕಿ ಹಚ್ಚಿದ್ದಾರೆ. ಇದೆಂಥ ನಾಗರೀಕತೆ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ನಮ್ಮ ಮಕ್ಳನ್ನು ಬಿಟ್ಬಿಡಿ – ನಾಗಮಂಗಲ ಪೊಲೀಸ್ ಠಾಣೆಯ ಮುಂದೆ ಮಹಿಳೆಯರ ಹೈಡ್ರಾಮಾ

    ಮತಾಂಧ ಶಕ್ತಿ ಹತ್ತಿಕ್ಕಲು ಸರ್ಕಾರಕ್ಕೆ ಆಗ್ರಹ:
    ಹಿಂದೂ ಹಬ್ಬಗಳು ಎಂದರೆ ಕಾಂಗ್ರೆಸ್ ಪಕ್ಷಕ್ಕೆ ಯಾಕಿಷ್ಟು ತಾತ್ಸಾರ? ಕಾಂಗ್ರೆಸ್ ಸರ್ಕಾರ ವೋಟ್ ಬ್ಯಾಂಕ್ ನೀತಿ ಅನುಸರಿಸದೆ ಮತಾಂಧ ಶಕ್ತಿಯನ್ನು ಹತ್ತಿಕ್ಕಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: ನಾಗಮಂಗಲ ಘಟನೆಗೆ ಒಂದು ಸಮುದಾಯದ ಅತಿಯಾದ ಓಲೈಕೆ ಕಾರಣ- ಸರ್ಕಾರದ ವಿರುದ್ಧ ಹೆಚ್‌ಡಿಕೆ ವಾಗ್ದಾಳಿ

    ಕಾಂಗ್ರೆಸ್‌ನ ಹಿಂದೂ ವಿರೋಧಿ ನೀತಿಯಿಂದ ಈ ರೀತಿ ಗಲಭೆ, ಘಟನೆಗಳು ಸಂಭವಿಸುತ್ತಿವೆ. ನಾಗಮಂಗಲದ ಈ ಘಟನೆಗೆ ರಾಜ್ಯ ಕಾಂಗ್ರೆಸ್ ಸರ್ಕಾರವೇ ಹೊಣೆ ಎಂದು ಹರಿಹಾಯ್ದರು. ಇದನ್ನೂ ಓದಿ: Nagamangala Violence | ಆಕಸ್ಮಿಕವಾಗಿ ಕಲ್ಲು ತೂರಾಟ ನಡೆದಿದೆ: ಪರಮೇಶ್ವರ್‌ ಲಘು ಹೇಳಿಕೆ

  • ರಾಜ್ಯಕ್ಕೆ ಕೇಂದ್ರದಿಂದ ಮತ್ತೊಂದು ಗಿಫ್ಟ್; ಹುಬ್ಬಳ್ಳಿ-ಪುಣೆ ವಂದೇ ಭಾರತ್ ರೈಲು ಸಂಚಾರಕ್ಕೆ ಅಸ್ತು

    ರಾಜ್ಯಕ್ಕೆ ಕೇಂದ್ರದಿಂದ ಮತ್ತೊಂದು ಗಿಫ್ಟ್; ಹುಬ್ಬಳ್ಳಿ-ಪುಣೆ ವಂದೇ ಭಾರತ್ ರೈಲು ಸಂಚಾರಕ್ಕೆ ಅಸ್ತು

    – ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಪ್ರಸ್ತಾವನೆಗೆ ಕೇಂದ್ರ ಸ್ಪಂದನೆ

    ಹುಬ್ಬಳ್ಳಿ: ಗಣೇಶ ಹಬ್ಬದ ವೇಳೆ ಕೇಂದ್ರ ಸರ್ಕಾರ ರಾಜ್ಯಕ್ಕೆ ಮಗದೊಂದು ಕೊಡುಗೆ ನೀಡಿದೆ. ಅದೇ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲು (Vande Bharat Express Train).

    ಹಬ್ಬಕ್ಕೂ ಮುನ್ನ ರೈತರಿಗೆ ಹೆಸರು, ಉದ್ದು, ಸೋಯಾಬಿನ್, ಸೂರ್ಯಕಾಂತಿ ಬೆಳೆಗಳಿಗೆ ಬೆಂಬಲ ಬೆಲೆ ಕೊಡುಗೆ ನೀಡಿದ್ದ ಕೇಂದ್ರ ಸರ್ಕಾರ, ಇದೀಗ ಹುಬ್ಬಳ್ಳಿ-ಪುಣೆ ಮಧ್ಯೆ ವಂದೇ ಭಾರತ್ ರೈಲು ಸಂಚಾರದ ಮತ್ತೊಂದು ಗಿಫ್ಟ್ ನೀಡಿದೆ. ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ (Pralhad Joshi) ಅವರ ಪ್ರಸ್ತಾವನೆಗೆ ಸ್ಪಂದಿಸಿ ಪ್ರಧಾನಿ ನರೇಂದ್ರ ಮೋದಿ (PM Modi) ಮತ್ತು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಹುಬ್ಬಳ್ಳಿ – ಪುಣೆ ಮಧ್ಯೆ 2ನೇ ವಂದೇ ಭಾರತ್ ರೈಲು ಆರಂಭಿಸುವ ಶುಭ ಸಂದೇಶ ನೀಡಿದ್ದಾರೆ.

    ಶೀಘ್ರದಲ್ಲೇ ಹುಬ್ಬಳ್ಳಿ-ಪುಣೆ ನಡುವೆ ವಂದೇ ಭಾರತ್ ರೈಲು ಸಂಚಾರ ಆರಂಭಿಸುವುದಾಗಿ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ (Ashwini Vaishnaw) ಅವರು ಧಾರವಾಡ ಸಂಸದರೂ ಆಗಿರುವ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಅವರಿಗೆ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಚಾರ್ಜ್‌ಶೀಟ್‌ ಸಲ್ಲಿಕೆ – ಗನ್ನಿಕಡ ತೋಟದ ಮನೆ ರಹಸ್ಯದ ಬಗ್ಗೆಯೂ ಉಲ್ಲೇಖ!

    ಮನವಿ ಸಲ್ಲಿಸಿದ್ದ ಜೋಶಿ:
    ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಅವರು ಹುಬ್ಬಳ್ಳಿ-ಪುಣೆ ಮಧ್ಯೆ ವಂದೇ ಭಾರತ್ ರೈಲು ಸಂಚಾರಕ್ಕೆ ಕ್ರಮ ಕೈಗೊಳ್ಳುವಂತೆ ಅಶ್ವಿನಿ ವೈಷ್ಣವ್ ಅವರಿಗೆ ಜುಲೈ ಮೊದಲ ವಾರದಲ್ಲಷ್ಟೇ ಪತ್ರ ಬರೆದು ಮನವಿ ಮಾಡಿದ್ದರು. ರಾಜ್ಯದಲ್ಲಿ ಬೆಂಗಳೂರು ನಂತರ ಪ್ರಮುಖ ವಾಣಿಜ್ಯ ನಗರಿ ಎಂಬ ಹೆಗ್ಗಳಿಕೆ ಹುಬ್ಬಳ್ಳಿ-ಧಾರವಾಡ ಅವಳಿ ನಗರಕ್ಕಿದೆ. ಅಲ್ಲದೇ, ವಂದೇ ಭಾರತ್ ರೈಲು ಸಂಚಾರದಿಂದ ಈ ಭಾಗದ ವಾಣಿಜ್ಯೋದ್ಯಮ, ಕೈಗಾರಿಕಾ ವಸಾಹತು ಬೆಳವಣಿಗೆಗೆ ಅನುಕೂಲ ಆಗುತ್ತದೆ ಎಂದು ಸಚಿವ ಜೋಶಿ ಕೇಂದ್ರದ ಗಮನ ಸೆಳೆದಿದ್ದರು.

    ಹುಬ್ಬಳ್ಳಿಯಿಂದ ಮುಂಬೈ ಸಂಪರ್ಕಕ್ಕೂ ಈ ಮಾರ್ಗ ಅತ್ಯಂತ ಪ್ರಮುಖವಾಗಲಿದೆ ಎಂಬುದನ್ನು ಜೋಶಿ ಅವರು ರೈಲ್ವೆ ಸಚಿವರಿಗೆ ಮನವರಿಕೆ ಮಾಡಿಕೊಟ್ಟು ವಂದೇ ಭಾರತ್ ರೈಲು ಸಂಚಾರ ಆರಂಭಕ್ಕೆ ಒತ್ತಾಯಿಸಿದ್ದರು. ಹುಬ್ಬಳ್ಳಿ-ಧಾರವಾಡದ ಜನರಿಗೆ ಹಬ್ಬದ ಈ ಶುಭ ಸಂದರ್ಭದಲ್ಲಿ ವಂದೇ ಭಾರತ್ ರೈಲು ಸಂಚಾರ ಸಿಹಿ ಸುದ್ದಿಯಾಗಿದ್ದು, ಶೀಘ್ರದಲ್ಲಿಯೇ ಹುಬ್ಬಳ್ಳಿ – ಪುಣೆ ನಡುವೆ ಹುಬ್ಬಳ್ಳಿಯ 2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲು ಸಂಚರಿಸಲಿದೆ ಎಂದು ಸಚಿವ ಜೋಶಿ ಟ್ವೀಟ್ ಮೂಲಕ ಸಂತಸ ಹಂಚಿಕೊಂಡಿದ್ದಾರೆ.

    ಉದ್ಘಾಟನೆ ದಿನ, ವೇಳಾಪಟ್ಟಿ ಶೀಘ್ರ ಪ್ರಕಟ:
    ವಂದೇ ಭಾರತ್ ರೈಲು ಸಂಚಾರದ ಉದ್ಘಾಟನೆ ದಿನ ಮತ್ತು ವೇಳಾ ಪಟ್ಟಿಯನ್ನು ರೈಲ್ವೆ ಇಲಾಖೆ ಆದಷ್ಟು ಬೇಗ ಪ್ರಕಟಿಸಲಿದೆ ಎಂದು ಸಚಿವ ಜೋಶಿ ತಿಳಿಸಿದ್ದಾರೆ. ಇದನ್ನೂ ಓದಿ: ಸಿಎಂಗೆ ಬಾಂಬ್, ಆಟಂ ಬಾಂಬ್, ರಾಕೆಟ್ ಬಾಂಬ್ ಯಾರ‍್ಯಾರಿಟ್ಟಿದ್ದಾರೋ ಗೊತ್ತಿಲ್ಲ: ಆರ್.ಅಶೋಕ್

    ಪ್ರಧಾನಿಗೆ, ರೈಲ್ವೆ ಸಚಿವರಿಗೆ ಧನ್ಯವಾದ:
    ನಮ್ಮ ವಿಭಾಗದ ರೇಲ್ವೆ ಅಭಿವೃದ್ಧಿಗೆ, ವಿಕಾಸಕ್ಕೆ ಪ್ರಧಾನಿ ಮೋದಿ ಮತ್ತು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಈ ಮೂಲಕ ಮಹತ್ವದ ಕೊಡುಗೆ ನೀಡಿದ್ದು, ಉತ್ತರ ಕರ್ನಾಟಕ ಜನರ ಪರವಾಗಿ ಧನ್ಯವಾದ ಅರ್ಪಿಸುವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಮುಡಾ ಕೇಸ್‌ನ್ನು ಬಿತ್ತರಿಸದಿರಲಿ ಅಂತಾ ದರ್ಶನ್ ಕೇಸ್ ಫೋಟೋ ವೈರಲ್ ಮಾಡ್ತಾ ಇದ್ದೀರಾ? – ಛಲವಾದಿ ಆಕ್ಷೇಪ