ನವದೆಹಲಿ: 2030 ರಲ್ಲೂ ನಾವು ಇಲ್ಲೇ ಇರುತ್ತೇವೆ. ನೀವು ಅಲ್ಲೇ ಇರುತ್ತೀರಿ ಎಂದು ಸಂಸತ್ ಅಧಿವೇಶನದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಪ್ರತಿಪಕ್ಷಗಳಿಗೆ ಟಾಂಗ್ ಕೊಟ್ಟರು.
ನೀವು ಕಳೆದ ಹತ್ತು ವರ್ಷದಿಂದ ಹತಾಶರಾಗಿದ್ದೀರಿ. ಆದರೆ ನಾವು ಆಶಯ ಹೊಂದಿದ್ದೇವೆ. ಈ ಐದು ವರ್ಷ ಮಾತ್ರವಲ್ಲ, 2030 ರಲ್ಲೂ ನಾವು ಅಧಿಕಾರಕ್ಕೆ ಬರುತ್ತೇವೆ. ನಾವು ಮಂತ್ರಿಯಾಗಿ ಸದನಕ್ಕೆ ಮಾಹಿತಿ ಕೊಡುತ್ತಲೇ ಇರುತ್ತೇವೆ. ನೀವು ಅಲ್ಲಿ ಕೇಳಿಸಿಕೊಳ್ಳುತ್ತಲೇ ಇರುತ್ತೀರಿ ಎಂದು ವಿಪಕ್ಷ ಸದಸ್ಯರನ್ನು ಕುಟುಕಿದರು.
ಯುಪಿಎ ಅವಧಿಯಲ್ಲಿ ಹಗರಣದ್ದೇ ಸಾಧನೆ: ನವೀಕರಿಸಬಹುದಾದ ಇಂಧನಕ್ಕೆ ಸಂಬಂಧಿಸಿದ ಯೋಜನೆಗಳ ಒಟ್ಟು ಮೊತ್ತ 1,60,000 ಕೋಟಿ ರೂ. ಆಗಿದೆ. ಆದರೆ, ಯುಪಿಎ ಆಡಳಿತದ ಅವಧಿಯಲ್ಲಿ ಇಷ್ಟು ಮೊತ್ತದ ಹಗರಣಗಳೇ ನಡೆದಿವೆ ಎಂದು ಜೋಶಿ ತಿರುಗೇಟು ಕೊಟ್ಟರು.
ಪ್ರಧಾನಮಂತ್ರಿ ನರೇಂದ್ರ ಮೋದಿ ನಾಯಕತ್ವದಲ್ಲಿ ಭಾರತೀಯರ ಕಲ್ಯಾಣಕ್ಕಾಗಿ ಪ್ರತಿ ಯೋಜನೆಯೂ ಹೀಗೆ ಬೃಹತ್ ಮೊತ್ತದ್ದಾಗಿದೆ ಎಂದರು. ಪ್ರಧಾನಿ ಮೋದಿಯವರ ನಾಯಕತ್ವದಲ್ಲಿ ಭಾರತದಲ್ಲಿ ಸ್ಥಾಪಿಸಲಾದ ನವೀಕರಿಸಬಹುದಾದ ಇಂಧನ ಉತ್ಪಾದನಾ ಸಾಮರ್ಥ್ಯ ಶೇ.165ರಷ್ಟು ಏರಿಕೆ ಕಂಡಿದೆ ಎಂದು ಸಮರ್ಥಿಸಿಕೊಂಡರು. ಇದನ್ನೂ ಓದಿ: ರಾಜ್ಯಪಾಲರು ಎರಡನೇ ಶೋಕಾಸ್ ನೋಟಿಸ್ ಕೊಟ್ಟಿಲ್ಲ: ಟಿಜೆ ಅಬ್ರಹಾಂ
2014ರಲ್ಲಿ ಕೇವಲ 76.38 GW ಉತ್ಪಾದನಾ ಸಾಮರ್ಥ್ಯ ಇತ್ತು. ಕಳೆದ 10 ವರ್ಷಗಳಲ್ಲಿ ಶೇ.165 ರಷ್ಟು ವೃದ್ಧಿಸಿದ್ದು, ಪ್ರಸ್ತುತ 2003.1 GW ತಲುಪಿದೆ ಎಂದು ಸಚಿವ ಪ್ರಹ್ಲಾದ್ ಜೋಶಿ ಮಾಹಿತಿ ನೀಡಿದರು.
ಟೆಂಡರ್‌ನಲ್ಲಿ ಸ್ಲ್ಯಾಬ್ ವಿಧಿಸಿದಂತೆ, ಅಧಿಕಾರಿಗಳ ವರ್ಗಾವಣೆಯಲ್ಲಿ ಸಹ ಕಾಂಗ್ರೆಸ್‌ನವರು ಆಯಾ ದರ್ಜೆ, ಶ್ರೇಣಿ, ಹುದ್ದೆ, ಪ್ರದೇಶವಾರು ರೇಟ್ ಸ್ಲ್ಯಾಬ್ ಹಾಕಿ ವರ್ಗಾವಣೆ ದಂಧೆಯಲ್ಲಿ ತೊಡಗಿದ್ದಾರೆ ಎಂದು ಹರಿಹಾಯ್ದರು.
ಹೀಗೆ ವರ್ಗಾವಣೆ ಪಡೆದ ಅಧಿಕಾರಿಗಳು ಅನಿವಾರ್ಯವಾಗಿ ಕಲೆಕ್ಷನ್‌ನಲ್ಲಿ ನಿರತರಾಗುತ್ತಾರೆ. ಇದು ಅಧಿಕಾರಿಗಳ ತಪ್ಪಲ್ಲ. ನಮ್ಮ ವ್ಯವಸ್ಥೆಯ ಲೋಪ. ಕಾಂಗ್ರೆಸ್ ಹಿಂದಿನಿಂದಲೂ ಈ ರೀತಿ ಭ್ರಷ್ಟಾಚಾರ ವ್ಯವಸ್ಥೆಯನ್ನು ಪೋಷಿಸಿಕೊಂಡು ಬಂದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ನೀವು ರೈತರ ಮಗ, ಈಗ ಪ್ಯಾಂಟ್ ಬಿಚ್ಚಿ ಪಂಚೆ ಹಾಕಿದ್ದೀರಿ: ಹೆಚ್‍ಡಿಕೆಗೆ ಡಿಕೆಶಿ ವ್ಯಂಗ್ಯ
ಕಾನೂನು ಸುವ್ಯವಸ್ಥೆ ಇಲ್ಲ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಕಾನೂನು ಸುವ್ಯವಸ್ಥೆಯೇ ಇಲ್ಲವಾಗಿದೆ. ಅಪರಾಧಿ ಕೃತ್ಯಗಳು ಹೆಚ್ಚುತ್ತಲೇ ಇವೆ. ಅಪರಾಧಿಗಳನ್ನು ಬೆಂಬಲಿಸುತ್ತ ಪೊಲೀಸ್ ಅಧಿಕಾರಿಗಳ ಕೈ ಕಟ್ಟಿ ಹಾಕಿದ್ದಾರೆ ಎಂದು ಕಿಡಿಕಾರಿದರು.
ನವದೆಹಲಿ: ವಯನಾಡ್ (Wayanad) ದುರಂತ ಅತ್ಯಂತ ದುರದೃಷ್ಟಕರ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Prhlad Joshi) ವಿಷಾದ ವ್ಯಕ್ತಪಡಿಸಿದ್ದಾರೆ.
ನವದೆಹಲಿಯಲ್ಲಿ ಇಂದು ಮಾಧ್ಯಮದೊಂದಿಗೆ ಮಾತನಾಡಿ, ವಯನಾಡ್ ಇಂದು ತೀವ್ರ ಸಂಕಷ್ಟ ಪರಿಸ್ಥಿತಿ ಎದುರಿಸುತ್ತಿದ್ದು, ಇಲ್ಲಿನವರ ರಕ್ಷಣೆಗೆ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳುತ್ತದೆ ಎಂದು ಹೇಳಿದರು.
ಈ ದುರಂತ ಪರಿಸ್ಥಿತಿ ನಿರ್ವಹಿಸಲು ಕೇಂದ್ರ ಸರ್ಕಾರ ಸಜ್ಜಾಗಿದೆ. ಅಲ್ಲಿಯ ನಿವಾಸಿಗಳ ರಕ್ಷಣಾ ಕಾರ್ಯಕ್ಕೆ ಕೇಂದ್ರ ಅಗತ್ಯ ನೆರವು ಕಲ್ಪಿಸಲಿದೆ ಎಂದರು.
ವಯನಾಡಿನಲ್ಲಿ ಜನಜೀವನವನ್ನು ಸಹಜ ಸ್ಥಿತಿಗೆ ತರುವಲ್ಲಿ ಕೇಂದ್ರ ಸಂಪೂರ್ಣ ಸಹಕಾರ, ಬೆಂಬಲ ನೀಡಲು ಬದ್ಧವಾಗಿದೆ ಎಂದು ಪ್ರಹ್ಲಾದ್ ಜೋಶಿ ತಿಳಿಸಿದರು.
– ಕಾಂಗ್ರೆಸ್ ಸರ್ಕಾರ ರಾಮನ ವಿರುದ್ಧವಾಗಿದೆ ಅಂತ ಸಾಬೀತಾಗಿದೆ: ಜೋಶಿ
ಬೆಂಗಳೂರು: ರಾಮ ಅಲ್ಲೇ ಇರ್ತಾನೆ, ರಾಮನಗರವೂ (Ramanagara) ಅಲ್ಲೇ ಇರುತ್ತೆ. ರಾಮನಗರ ಹೆಸರು ಬದಲಾವಣೆ ಮಾಡಿರುವ ವಿಚಾರದಲ್ಲಿ ರಾಜಕೀಯದ ಪ್ರಶ್ನೆ ಇಲ್ಲ ಎಂತ ಗೃಹ ಸಚಿವ ಜಿ. ಪರಮೇಶ್ವರ್ (G Parameshwara) ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಮನಗರ ಹೆಸರು ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ್ದಾರೆ. ರಾಮನಗರ ಅಲ್ಲೇ ಇರುತ್ತೆ ಎಲ್ಲಿಯೂ ಹೋಗಲ್ಲ. ರಾಮನೂ ರಾಮ ಅಲ್ಲೇ ಇರ್ತಾನೆ, ರಾಮನಗರವೂ ಅಲ್ಲೇ ಇರುತ್ತೆ. ಕುಮಾರಸ್ವಾಮಿಯವರು (HD Kumaraswamy) ಹೇಳಿಕೆ ಕೊಡ್ತಾರೆ. ಏನು ಮಾಡೋಕೆ ಆಗಲ್ಲ. ಇದನ್ನೆಲ್ಲಾ ಸರ್ಕಾರ ಎದುರಿಸಬೇಕು ಎದರಿಸುತ್ತೆ. ಬೆಂಗಳೂರು ದಕ್ಷಿಣ ಜಿಲ್ಲೆ ಅಂತ ಸರ್ಕಾರ ಮಾಡ್ತಿದೆ. ಇದರಲ್ಲಿ ರಾಜಕೀಯದ ಪ್ರಶ್ನೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಫ್ಯಾಂಟಸಿ ಪಾರ್ಕ್ ಮಾದರಿಯಲ್ಲಿ ಬೃಂದಾವನ ಗಾರ್ಡನ್ ಅಭಿವೃದ್ಧಿಪಡಿಸಲು ಸಂಪುಟ ಅಸ್ತು – 2,633 ಕೋಟಿ ರೂ. ಯೋಜನೆಗೆ ಒಪ್ಪಿಗೆ
ನಾವು ರಾಮಮಂದಿರವನ್ನು ನಿರ್ಮಿಸುವಾಗ ಅವರು ಇದನ್ನೇ ಮಾಡುತ್ತಿದ್ದರು. ರಾಮನಗರಕ್ಕೆ ಮರುನಾಮಕರಣ ಮಾಡುವ ನಿರ್ಧಾರ, ಕಾಂಗ್ರೆಸ್ ಮತ್ತು ಕಾಂಗ್ರೆಸ್ ಸರ್ಕಾರವು ರಾಮನ ವಿರುದ್ಧವಾಗಿದೆ ಎಂದು ಸಾಬೀತುಪಡಿಸಿದೆ. ವೋಟ್ ಬ್ಯಾಂಕ್ ರಾಜಕೀಯ ಮತ್ತು ದುರಾಸೆಗಾಗಿ ಯಾರೂ ಹೆಸರು ಬದಲಾಯಿಸಬಾರದು. ನಾವು ಇದನ್ನು ಖಂಡಿಸುತ್ತೇವೆ ಎಂದು ಗುಡುಗಿದ್ದಾರೆ. ಇದನ್ನೂ ಓದಿ: 2028ರೊಳಗೆ ಮತ್ತೆ ರಾಮನಗರ ಅಂತ ಬರುತ್ತೆ – ರಾಮನ ಹೆಸರು ತೆಗೆಯಲು ಸಾಧ್ಯವಿಲ್ಲ: ಹೆಚ್‌ಡಿಕೆ ತಿರುಗೇಟು
– ಬರೋಬ್ಬರಿ 2,000 ಕೋಟಿ ರೂ. ಹೂಡಿಕೆ
– ಮರುಬಳಕೆ ಇಂಧನ ಉತ್ಪಾದನೆಗೆ ಆದ್ಯತೆ: ಎಂ.ಬಿ ಪಾಟೀಲ್
ದೊಡ್ಡಬಳ್ಳಾಪುರ: ಅಮೆರಿಕ ಮೂಲದ ಓಮಿಯಂ ಕಂಪನಿ (Ohmium Company) ವತಿಯಿಂದ ಸುಮಾರು 2,000 ಕೋಟಿ ರೂ. ಹೂಡಿಕೆಯಲ್ಲಿ ಸ್ಥಾಪಿಸಿರುವ ದೇಶದ ಪ್ರಪ್ರಥಮ ʻಗ್ರೀನ್ ಹೈಡ್ರೋಜನ್ ಎಲೆಕ್ಟ್ರೋಲೈಜರ್ ಗಿಗಾ ಫ್ಯಾಕ್ಟರಿʼ (Green Hydrogen Electrolyzer Gigafactory) ಘಟಕವನ್ನು ದೊಡ್ಡಬಳ್ಳಾಪುರದ ಸಮೀಪ ಶುಕ್ರವಾರ ಉದ್ಘಾಟಿಸಲಾಯಿತು. ಕೇಂದ್ರದ ನವೀಕರಿಸಬಹುದಾದ ಇಂಧನ ಇಲಾಖೆ ಸಚಿವ ಪ್ರಹ್ಲಾದ್ ಜೋಶಿ ಘಟಕಕ್ಕೆ ಚಾಲನೆ ನೀಡಿದರು. ರಾಜ್ಯ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ಸಹ ಜೊತೆಗಿದ್ದರು.
ಉದ್ಯೋಗಾವಕಾಶ ಹೆಚ್ಚಳ:
ಓಮಿಯಂ ಕಂಪನಿಯು 2,000 ಕೋಟಿ ರೂ. ಹೂಡಿಕೆ ಮಾಡಿ, ಈ ಕಂಪನಿಯನ್ನು ಪ್ರಾರಂಭಿಸಿರುವುದು ಸ್ವಾಗತಾರ್ಹವಾಗಿದೆ. ಸದ್ಯ ವರ್ಷಕ್ಕೆ ಇಲ್ಲಿ 500 ಮೆಗಾವ್ಯಾಟ್ ಗ್ರೀನ್ ಹೈಡ್ರೋಜನ್ (Green Hydrogen) ಉತ್ಪಾದನೆ ಆಗಲಿದ್ದು, ಹಂತ-ಹಂತವಾಗಿ 2,000 ಮೆಗಾವ್ಯಾಟ್ ಮಟ್ಟಕ್ಕೆ ಏರಿಸಲಾಗುವುದು. ಕಂಪನಿಯ ಉತ್ಪಾದನಾ ಚಟುವಟಿಕೆಯಿಂದ ಉದ್ಯೋಗಾವಕಾಶಗಳೂ ಸೃಷ್ಟಿಯಾಗಲಿವೆ ಎಂದರು.
ನೀರಿನಿಂದ ತಯಾರಾಗುವ ಗ್ರೀನ್-ಹೈಡ್ರೋಜನ್ ಅನ್ನು ಕಿಲೋಗ್ರಾಂ ಲೆಕ್ಕದಲ್ಲಿ ಅಳತೆ ಮಾಡಲಾಗುವುದು. ಇದರ ಸಂಗ್ರಹಣೆ ಮತ್ತು ಸಾಗಣೆ ಕೂಡ ಸುಲಭವಾಗಿದೆ. ಇದನ್ನು ರಸಗೊಬ್ಬರ ಮತ್ತು ಉಕ್ಕು ಉತ್ಪಾದನೆ, ವಾಹನಗಳಲ್ಲಿ ಎಥನಾಲ್ ಜೊತೆ ಮಿಶ್ರಣ ಮಾಡಿ, ಸಂಸ್ಕರಣೆ ಪ್ರಕ್ರಿಯೆಗಳಲ್ಲಿ ಧಾರಾಳವಾಗಿ ಉಪಯೋಗಿಸಬಹುದು ಎಂದು ಅವರು ವಿವರಿಸಿದರು. ಇದನ್ನೂ ಓದಿ: 1.6 ಕೋಟಿ ಮೌಲ್ಯದ 3 ಮನೆ, 3 ಕೋಟಿಯ 2 ಶೆಡ್ – ಮುದ್ದುಕುಮಾರ್ ಆಸ್ತಿ ಕಂಡು ಅಧಿಕಾರಿಗಳೇ ಸುಸ್ತು!
ರಾಜ್ಯವು ಕೈಗಾರಿಕಾ ಸ್ನೇಹಿಯಾಗಿದ್ದು, ಜಗತ್ತಿನ ಅತ್ಯುತ್ತಮ ಸಂಶೋಧನಾ ಸಂಸ್ಥೆಗಳು ಇಲ್ಲಿ ನೆಲೆಯೂರಿವೆ. ದೇಶದ ಆರ್ಥಿಕತೆಯನ್ನು 2030ರ ಹೊತ್ತಿಗೆ 5 ಟ್ರಿಲಿಯನ್ ಡಾಲರ್ ಮಟ್ಟಕ್ಕೆ ಕೊಂಡೊಯ್ಯುವ ಗುರಿಯಲ್ಲಿ ರಾಜ್ಯವು ನಿರ್ಣಾಯಕ ಪಾತ್ರ ವಹಿಸುತ್ತಿದೆ. ರಾಜ್ಯದಲ್ಲಿ ವಿದ್ಯುತ್ ಚಾಲಿತ ವಾಹನಗಳು ಮತ್ತು ಪರಿಸರ ಸ್ನೇಹಿ ಹಾಗೂ ಮರುಬಳಕೆ ಮಾಡಬಹುದಾದ ಇಂಧನಗಳ ಉತ್ಪಾದನೆ ಭರದಿಂದ ನಡೆಯುತ್ತಿದೆ. ಇದನ್ನು ನಾವು ಪ್ರಮುಖ ವಲಯವಾಗಿ ಗುರುತಿಸಿದ್ದೇವೆ. ಅಲ್ಲದೇ ರಚನಾತ್ಮಕ ಉಪಕ್ರಮಗಳ ಫಲವಾಗಿ ರಾಜ್ಯವು 2016 ರಿಂದಲೂ ಹೂಡಿಕೆ ಆಕರ್ಷಣೆಯಲ್ಲಿ ಪ್ರಥಮ ಸ್ಥಾನದಲ್ಲಿದೆ ಎಂದು ನುಡಿದರು.
ದೇಶದ ಪ್ರಮುಖ ಮಾರುಕಟ್ಟೆಗಳಲ್ಲಿ ತೊಗರಿ, ಕಡಲೆ (Chana Dal), ಉದ್ದು (Urad Dal) ಮತ್ತಿತರ ಬೇಳೆಗಳ ಬೆಲೆಯಲ್ಲಿ ಶೇ.4ರಷ್ಟು ಕುಸಿತ ಕಂಡಿದೆ. ಹಾಗಿದ್ದರೂ ವ್ಯಾಪಾರಿಗಳು ದರ ಇಳಿಸದಿರುವುದು ಗಮನಕ್ಕೆ ಬಂದಿದೆ. ಎಲ್ಲ ವರ್ತಕರು ಬೇಳೆ – ಕಾಳು ಬೆಲೆ ಕಡಿಮೆ ಮಾಡುವಂತೆ ಕ್ರಮ ಕೈಗೊಳ್ಳಿ ಎಂದು ಸಚಿವರು ಸೂಚಿಸಿದರು.
ಸಣ್ಣ-ಸಣ್ಣ ವ್ಯಾಪಾರದ ಮಳಿಗೆಗಳಲ್ಲಿ ಮಾತ್ರ ತೊಗರಿ, ಉದ್ದು, ಕಡಲೆ ಬೇಳೆ ಬೆಲೆ ಇಳಿಸಲಾಗಿದೆ. ಆದರೆ, ದೊಡ್ಡ ದೊಡ್ಡ ವ್ಯಾಪಾರಿ ಮಳಿಗೆಗಳಲ್ಲಿ ಬೆಲೆ ಇಳಿಸದಿರುವುದು ಗಮನಕ್ಕೆ ಬಂದಿದೆ. ಕೂಡಲೇ ಇದರ ವಿರುದ್ಧ ಕ್ರಮಕ್ಕೆ ಮುಂದಾಗಿದೆ ಎಂದು ಅಧಿಕಾರಿಗಳಿಗೆ ಸೂಚಿಸಿದರು.
2025ಕ್ಕೆ GDP ಶೇ.7 ಬೆಳವಣಿಗೆ:
ಐಎಂಎಫ್ ವರದಿ ಪರಿಷ್ಕರಿಸಿದ್ದು, 2025 ರಲ್ಲಿ ಭಾರತದ GDP ಬೆಳವಣಿಗೆ ಶೇ.7 ರಷ್ಟು ಆಗಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ಜಾಗತಿಕ ಆರ್ಥಿಕತೆಯ ಸಾಲಿನಲ್ಲಿ ಭಾರತ ಅಗ್ರಸ್ಥಾನದಲ್ಲಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಭಾರತವನ್ನು ಉನ್ನತ ಸ್ಥರಕ್ಕೆ ಕೊಂಡೊಯ್ಯುತ್ತಿದ್ದಾರೆ ಎಂಬುದಕ್ಕೆ ಐಎಂಎಫ್‌ನ ವರದಿಯೇ ನಿದರ್ಶನ ಎಂದು ಜೋಶಿ ಪ್ರತಿಪಾದಿಸಿದ್ದಾರೆ.
ಭಾರತದ ಬೆಳವಣಿಗೆಯು ಆರ್ಥಿಕ ವರ್ಷ 2025 ರಲ್ಲಿ ಶೇ.7ರಷ್ಟು GDP ಬೆಳವಣಿಗೆಯ ಮುನ್ಸೂಚನೆ ನೀಡಿದ್ದು, ಪ್ರಧಾನಿ ಮೋದಿಯವರ ಸಮರ್ಥ ನಾಯಕತ್ವ ಅಸಾಧ್ಯವಾದುದನ್ನು ಸಾಧ್ಯವಾಗಿಸಿದೆ ಎಂದು ಜೋಶಿ ಬಣ್ಣಿಸಿದ್ದಾರೆ.
ಧಾರವಾಡದಲ್ಲಿ (Dharwad) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಪ್ರಕರಣವನ್ನು ಮುಚ್ಚಿ ಹಾಕುವ ಪ್ರಯತ್ನ ನಡೆದಿದೆ, 40 ದಿನವಾದರೂ ಎಸ್‌ಐಟಿ ನಾಗೇಂದ್ರ (BN Nagendra) ಮತ್ತು ದದ್ದಲ್‌ಗೆ ನೋಟೀಸ್ ಕೊಟ್ಟಿಲ್ಲ, ಅವರನ್ನು ವಿಚಾರಣೆಗೂ ಕರೆದಿಲ್ಲ. ಈಗ ದದ್ದಲ್‌ನನ್ನ ಬಂಧಿಸಿ ಅಂತ ಹೇಳಿದ್ದಾರೆ. ಬಂಧನಕ್ಕೊಳಗಾಗಿ ಸಿಎಂ ಸಂಪೂರ್ಣ ಆಶ್ರಯದಲ್ಲಿ ರಾಜಾತಿಥ್ಯ ಪಡೆಯಬೇಕೆಂಬ ದುರಾಲೋಚನೆಯೂ ಇದರಲ್ಲಿದೆ. ಸರ್ಕಾರಿ ಖಜಾನೆಯಿಂದ ಹಣ ಹೋಗಿದೆ. ಅತ್ಯಂತ ಹತಾಶಾ ಭಾವನೆಯಿಂದ ಸಿದ್ದರಾಮಯ್ಯ ಶಿಷ್ಯಂದಿರು ಮಾತನಾಡುತ್ತಿದ್ದಾರೆ. ಇವರ ತಲೆಯಲ್ಲಿನ ಬುದ್ಧಿ ತೀರಾ ಖಾಲಿಯಾಗಿದೆ ಅನಿಸುತ್ತಿದೆ ಎಂದ ಅವರು, ಸಿದ್ದರಾಮಯ್ಯ (Siddaramaiah) ಹಿಂದೆಲ್ಲ ನಾಲಿಗೆ ಮೆದುಳಿಗೆ ಸಂಬಂಧವಿಲ್ಲದ ಮಾತು ಅಂತೆಲ್ಲ ಹೇಳುತ್ತಿದ್ದರು, ನಿರ್ಮಲಾ ಸೀತಾರಾಮನ್ ರಾಜೀನಾಮೆ ಸಹ ಕೇಳಿದ್ದಾರೆ, ಈಗ ಅವರ ಮಂತ್ರಿಗಳೇ ನಾಲಿಗೆ-ಮೆದುಳಿಗೆ ಸಂಬಂಧ ಇಲ್ಲದಂತೆ ಮಾತನಾಡ್ತಿದ್ದಾರೆ ಅಂತ ವಾಗ್ದಾಳಿ ನಡೆಸಿದರು.
ಇಲ್ಲೊಬ್ಬ ಮಂತ್ರಿ ಸಹ ಹಾಗೆಯೇ ಮಾತನಾಡಿದ್ದಾರೆ, ನೀವು ಸಹಿ ಮಾಡಿದೀರಿ, ಅಕೌಂಟ್ ನಿಮ್ಮ ಹೆಸರಿನಲ್ಲಿದೆ, ಬೇರೆ ಅಕೌಂಟ್‌ಗೆ ಹಣ ಹೋಗಿದೆ, ಅಲ್ಲಿಂದ ಪಡೆದು ನುಂಗಿ ನೀರು ಕುಡಿದಿದ್ದಾರೆ ಎಂದ ಅವರು, ಇದರಲ್ಲಿ ಸಿದ್ದರಾಮಯ್ಯ ಸಹ ಭಾಗಿಯಾಗಿದ್ದಾರೆ. ಈ ಹಿಂದೆಯೂ ತೆಲಂಗಾಣ ಚುನಾವಣೆಗೆ ಸಾವಿರಾರೂ ಕೋಟಿ ಹಣ ಕಳುಹಿಸಿದ್ದರು, ಇಬ್ಬರು ಗುತ್ತಿಗೆದಾರರ ಮನೆಯಲ್ಲಿ ಹಣ ಸಿಕ್ಕಿತ್ತು. ಅದನ್ನ ಆಗ ನಾನು ಹೇಳಿದ್ದೆ, ಹಣ ಕಳಿಸುತ್ತಿದ್ದಾರೆ ಅಂದಾಗ ಕಾಂಗ್ರೆಸ್ ನವರು ವಿರೋಧಿಸಿದ್ದರು ಎಂದರು. ಇದನ್ನೂ ಓದಿ: ಆಟೋ ಚಕ್ರದಿಂದ ಮೈಗೆ ಚಿಮ್ಮಿದ ಕೆಸರು – ಮರಳಿ ಬರುವವರೆಗೂ ಕಾದು ಚಾಲಕನಿಗೆ ಚಾಕು ಇರಿತ
ಮುಡಾ ಹಗರಣದಲ್ಲಿಯೂ ಇವರು ಸಿಕ್ಕಿಬಿದ್ದಿದ್ದಾರೆ, 2003-04 ರಲ್ಲಿ ಆ ಭೂಮಿ ಡಿನೋಟಿಫಿಕೇಶನ್ ಆಗಿತ್ತು ಎನ್ನಲಾಗಿದೆ. 2010ರ ವರೆಗೆ ಆ ಭೂಮಿ ಮುಡಾ ಹೆಸರಿನಲ್ಲಿಯೇ ಇದೆ. 2010ರ ನಂತರ ಅನೇಕರಿಗೆ ಫ್ಲಾಟ್ ನೀಡಲಾಗಿದೆ. ಸಿದ್ದರಾಮಯ್ಯ ಪತ್ನಿ ಪಾರ್ವತಮ್ಮ ಅವರಿಗೆ ದಾನ ಕೊಟ್ಟಿದ್ದಾರೆ ಅಂತಿದ್ದಾರೆ. ಮುಡಾ ಅಭಿವೃದ್ಧಿಪಡಿಸಿ ಫ್ಲಾಟ್ ನೀಡಿದೆ, 2013ರ ಚುನಾವಣೆಯಲ್ಲಿ ಅಫಿಡವಿಟ್‌ನಲ್ಲಿ ಏಕೆ ಹಾಕಿಲ್ಲ? 2018ರ ಚುನಾವಣೆಯಲ್ಲಿ ಅದನ್ನು 25 ಲಕ್ಷ ರೂ. ಅಂತ ತೋರಿಸಿದ್ದಾರೆ. 2023ರ ಚುನಾವಣೆಯಲ್ಲಿ ಅದನ್ನು 8.62 ಕೋಟಿ ರೂ. ಅಂತ ತೋರಿಸಿದ್ದಾರೆ, ಇದೀಗ 62 ಕೋಟಿ ರೂ. ಅಂತ ಏಕೆ ಪರಿಹಾರ ಕೇಳುತ್ತಿದ್ದಾರೆ ಎಂದು ಪ್ರಶ್ನಿಸಿದರು. ಅಲ್ಲದೇ ಇಲ್ಲಿ ಫ್ಲಾಟ್ ಇದ್ದರೂ ವಿಜಯನಗರದಲ್ಲೇಕೆ ಫ್ಲಾಟ್ ತೆಗೆದುಕೊಂಡಿರಿ? ಇವರೆಲ್ಲಾ ಕಳ್ಳರಿದ್ದಾರೆ, ಅಷ್ಟೇ ಎಂದು ಜೋಶಿ ಕಿಡಿ ಕಾರಿದರು. ಇದನ್ನೂ ಓದಿ: ಯಾತ್ರಾರ್ಥಿಗಳಿದ್ದ ಬಸ್ ಹಿಂದಿನಿಂದ ಟ್ರಕ್‌ಗೆ ಡಿಕ್ಕಿ – ಮೂವರು ಸಾವು, 14 ಮಂದಿ ಗಂಭೀರ
ಬೆಂಗಳೂರು: ಮೈಸೂರು ‘ಮುಡಾ’ ಹಗರಣವನ್ನು (MUDA Scam) ಖಂಡಿಸಿ ಪ್ರತಿಭಟಿಸುವ ಹಕ್ಕೂ ನಮಗಿಲ್ಲವೇ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಅವರು ಪ್ರಶ್ನಿಸಿದರು.
ಬಿಜೆಪಿ (BJP) ರಾಜ್ಯ ಕಾರ್ಯಾಲಯ ಜಗನ್ನಾಥ ಭವನಕ್ಕಿಂದು ಭೇಟಿ ನೀಡಿದ್ದ ಅವರು ಮಾಧ್ಯಮಗಳೊಂದಿಗೆ ಮಾತನಾಡಿದರು. 1975ರಲ್ಲಿ ಕಾಂಗ್ರೆಸ್ ಪಕ್ಷದ ಆಗಿನ ಪ್ರಧಾನಿ ಇಂದಿರಾ ಗಾಂಧಿ ಸರ್ವಾಧಿಕಾರಿಯಾಗಿದ್ದರು. ಇದೀಗ 2024-25ರಲ್ಲಿ ಸಿದ್ದರಾಮಯ್ಯ (Siddaramaiah) ಒಬ್ಬ ಭಯಂಕರವಾದ ಸರ್ವಾಧಿಕಾರಿ, ಅಹಂಕಾರಿ ಮತ್ತು ಭ್ರಷ್ಟನಾಗಿದ್ದಾರೆ. ಕಾಂಗ್ರೆಸ್ ಪಕ್ಷದ ಹೈಕಮಾಂಡ್‍ಗೆ ಏನಾದರೂ ಕಮಾಂಡ್ ಇದ್ದರೆ ಸಿದ್ದರಾಮಯ್ಯರನ್ನು ತಕ್ಷಣ ಹುದ್ದೆಯಿಂದ ಕೆಳಗಿಳಿಸಬೇಕು ಎಂದು ಒತ್ತಾಯಿಸಿದರು.
ಮುಡಾ ಹಗರಣದಲ್ಲಿ ಸಿದ್ದರಾಮಯ್ಯರ ನೇರ ತನಿಖೆ ಆಗಬೇಕಿದೆ. ಅವರ ಪಾಲ್ಗೊಳ್ಳುವಿಕೆ ಇಲ್ಲದೇ ಇಂಥ ದೊಡ್ಡ ಭ್ರಷ್ಟಾಚಾರ ಆಗಲು ಸಾಧ್ಯವಿಲ್ಲ ಎಂದು ನುಡಿದ ಅವರು, ಮೈಸೂರು (Mysuru) ಅವರ ತವರೂರು. ಈ ಹಗರಣಕ್ಕೆ ಅವರೇ ನೇರ ಹೊಣೆ ಎಂದು ತಿಳಿಸಿದರು. ಅವರಿಗೆ ಗೊತ್ತಿದ್ದೇ ಭ್ರಷ್ಟಾಚಾರಗಳು ನಡೆಯುತ್ತಿವೆ ಎಂದು ಆಕ್ಷೇಪಿಸಿದರು. ಇದನ್ನೂ ಓದಿ: ರಾಮನಗರ ಜಿಲ್ಲೆ ಮರುನಾಮಕರಣಕ್ಕೆ ಸಂಸದ ಡಾ.ಮಂಜುನಾಥ್ ವಿರೋಧ – ಸಿಎಂಗೆ ಪತ್ರ
ವಾಲ್ಮೀಕಿ ಹಗರಣದ ಕುರಿತು ಮಾತನಾಡಿದ ಅವರು, ಒಂದೆಡೆ ಇಡಿ, ಸಿಬಿಐ ಮಾಜಿ ಸಚಿವರ ತನಿಖೆ ಮಾಡಲು ಮುಂದಾದಾಗ ನಿಗಮದ ಅಧ್ಯಕ್ಷರು ಎಸ್‍ಐಟಿ ಮುಂದೆ ಶರಣಾಗಿದ್ದಾರೆ. ಸಿದ್ದರಾಮಯ್ಯನವರು ಒಬ್ಬ ಹಣಕಾಸಿನ ಸಚಿವರಾಗಿದ್ದು, ಆರೋಪಿಗಳನ್ನು ಅವರು ಅತ್ಯಂತ ಸಮರ್ಪಕವಾಗಿ ರಕ್ಷಿಸುತ್ತಿದ್ದಾರೆ. ವ್ಯವಸ್ಥಿತವಾಗಿ ಅವರನ್ನು ರಕ್ಷಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಟೀಕಿಸಿದರು.
ಮುಡಾದಲ್ಲಿ 50-50 ಅನುಪಾತದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ನಿವೇಶನ ಮಂಜೂರು ಮಾಡಿದ್ದಾರೆ. ಕೆಸರೇ ಬಡಾವಣೆಯಲ್ಲಿ ನಿವೇಶನ ಇದ್ದರೂ ಅತ್ಯಂತ ಪ್ರತಿಷ್ಠಿತ ಬಡಾವಣೆ ವಿಜಯನಗರದಲ್ಲಿ ನಿವೇಶನ ಕೊಡಲಾಗಿದೆ. 2023ರ ಚುನಾವಣಾ ಅಫಿಡವಿಟ್‍ನಲ್ಲಿ ಕಡಿಮೆ ಮೊತ್ತ ಘೋಷಿಸಿದ್ದ (8 ಕೋಟಿ) ಸಿದ್ದರಾಮಯ್ಯನವರು ಇವತ್ತು 62 ಕೋಟಿ ರೂ. ಎಂದು ಹೇಳುತ್ತಾರೆ. ಮುಂಬೈ ಸೇರಿ ದೇಶದ ಯಾವುದೇ ಮೂಲೆಯಲ್ಲೇ ಆದರೂ 2023ರಲ್ಲಿ 8 ಕೋಟಿ ಇದ್ದ ನಿವೇಶನಗಳ ಮೌಲ್ಯ ಈಗ 62 ಕೋಟಿ ರೂ. ಆಗಲು ಸಾಧ್ಯವೇ ಎಂದು ಮುಖ್ಯಮಂತ್ರಿಗಳು ಹೇಳಬೇಕೆಂದು ಪ್ರಲ್ಹಾದ್ ಜೋಶಿ ಅವರು ಸವಾಲೆಸೆದರು.
ಬಡ ಎಸ್‍ಟಿ ಜನಾಂಗದ ಅಭಿವೃದ್ಧಿ – ಉದ್ಧಾರಕ್ಕೆ ಇದ್ದ ವಾಲ್ಮೀಕಿ ನಿಗಮದ ದುಡ್ಡನ್ನು ಇವರು ದುರುಪಯೋಗ ಮಾಡಿದ್ದಾರೆ. 187 ಕೋಟಿ ರೂಪಾಯಿಯಲ್ಲಿ ಐಶಾರಾಮಿ ಕಾರು ಖರೀದಿ ಸೇರಿದಂತೆ ಇತರ ಉದ್ದೇಶಕ್ಕೆ ಬಳಸಿದ್ದಾರೆ. ಇದರ ವಿರುದ್ಧ ಪ್ರತಿಭಟಿಸುತ್ತಿದ್ದ ನಮ್ಮ ಪಕ್ಷದ ರಾಜ್ಯಾಧ್ಯಕ್ಷರು, ವಿಪಕ್ಷ ನಾಯಕರು, ಬಿಜೆಪಿ ಶಾಸಕರು ಮತ್ತು ಅನೇಕ ಕಾರ್ಯಕರ್ತರನ್ನು ಬೆಂಗಳೂರು, ಶ್ರೀರಂಗಪಟ್ಟಣ, ರಾಮನಗರ, ಮೈಸೂರಿನಲ್ಲಿ ಬಂಧಿಸಿದ್ದಾರೆ ಎಂದು ಟೀಕಿಸಿದರು. ಇದನ್ನೂ ಓದಿ: ಪ್ರತಿವರ್ಷ ಜೂನ್ 25ರಂದು ʻಸಂವಿಧಾನ ಹತ್ಯಾ ದಿವಸ್ʼ ಆಚರಣೆ – ಅಮಿತ್ ಶಾ ಘೋಷಣೆ
ಈ ಸರ್ಕಾರ ಅಧಿಕಾರಕ್ಕೆ ಬಂದ ಒಂದೆರಡು ತಿಂಗಳ ಆಡಳಿತ ಅವಧಿಯಲ್ಲೇ ಭ್ರಷ್ಟಾಚಾರ ಶುರುವಾಗಿದೆ. ವರ್ಗಾವಣೆಯಲ್ಲಿ ಭ್ರಷ್ಟಾಚಾರ ನಡೆಯುವುದನ್ನು ಅವರ ಪಕ್ಷದ ಶಾಸಕ, ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ ಅವರು ಒಪ್ಪಿಕೊಂಡಿದ್ದಾರೆ. ಅದರ ಬಗ್ಗೆ ಕ್ರಮ ಇಲ್ಲ. ಸಂವಿಧಾನದ ಪ್ರತಿಯನ್ನು ಹಿಡಿದು ಮಾತನಾಡುವ ರಾಹುಲ್ ಗಾಂಧಿಯವರು ಈ ಹಗರಣಗಳ ಕುರಿತು ಏನು ಹೇಳುತ್ತಾರೆ? ಎಂದು ಪ್ರಶ್ನಿಸಿದ ಅವರು, ಕಾಂಗ್ರೆಸ್ ಆಡಳಿತವು ಭ್ರಷ್ಟಾಚಾರ, ಹಗರಣಗಳನ್ನು ಮಾಡಿದೆ. ಇದರ ವಿರುದ್ಧ ನಮಗೆ ರಾಜ್ಯದಲ್ಲಿ ಪ್ರತಿಭಟಿಸುವ ಹಕ್ಕೂ ಇಲ್ಲವೇ? ಎಂದು ಪ್ರಶ್ನಿಸಿದರು.
\
ಹೋರಾಟ ತಾರ್ಕಿಕ ಅಂತ್ಯಕ್ಕೆ ಒಯ್ಯುತ್ತೇವೆ:
ಸಿದ್ದರಾಮಯ್ಯನವರಿಗೆ ನಾಚಿಕೆ, ಮಾನ ಮರ್ಯಾದೆ ಇದೆಯೇ? 2023ರಲ್ಲಿ ಅವರೇ 8 ಕೋಟಿ ರೂ. ಎಂದು ಘೋಷಿಸಿ ಈಗ 62 ಕೋಟಿ ಕೇಳುತ್ತಿದ್ದಾರಲ್ಲವೇ? ಎಂದು ಪ್ರಹ್ಲಾದ್ ಜೋಶಿ ಅವರು ಪ್ರಶ್ನೆ ಮುಂದಿಟ್ಟರು. ರಾಜ್ಯಾಧ್ಯಕ್ಷರು, ವಿಪಕ್ಷ ನಾಯಕರ ನೇತೃತ್ವದಲ್ಲಿ ಈ ಹೋರಾಟವನ್ನು ತಾರ್ಕಿಕ ಅಂತ್ಯಕ್ಕೆ ಒಯ್ಯುವವರೆಗೆ ಬಿಜೆಪಿ ವಿಶ್ರಮಿಸುವುದಿಲ್ಲ ಎಂದು ಪ್ರಕಟಿಸಿದರು. ಇದನ್ನೂ ಓದಿ: ತಮಿಳುನಾಡಿಗೆ ಕಾವೇರಿ ನೀರು ಬಿಡಲು ಸಾಧ್ಯವಿಲ್ಲ – ಸಿಎಂ ಖಡಕ್ ಮಾತು
1975ರಲ್ಲಿ ತುರ್ತು ಪರಿಸ್ಥಿತಿ ಹೇರಿದ್ದರ ಸಂಬಂಧ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ಸಿಗರು ಕ್ಷಮೆ ಕೇಳಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಕಾಂಗ್ರೆಸ್ ಪಕ್ಷದ ಬಂಧನ, ಹೆದರಿಸುವ ಮತ್ತು ಬೆದರಿಸುವ ಕಾರ್ಯಕ್ಕೆ ಬಿಜೆಪಿ ಬಗ್ಗುವುದಿಲ್ಲ ಎಂದು ಅವರು ಹೇಳಿದರು. ರಾಜಕೀಯವಾಗಿ ಮಾತ್ರವಲ್ಲದೆ, ಅಗತ್ಯವಿದ್ದರೆ ಕಾನೂನಾತ್ಮಕ ಹೋರಾಟ ನಡೆಸುತ್ತೇವೆ ಎಂದು ಅವರು ತಿಳಿಸಿದರು.
ಬೆಂಗಳೂರು: ಗ್ಯಾರಂಟಿಗಳಿಂದ (Congress Guarantee) ರಾಜ್ಯಕ್ಕೆ ಆರ್ಥಿಕ ಆಪತ್ತು ಎದುರಾಗಿದೆ ಎಂಬ ವಿಪಕ್ಷಗಳ ಆರೋಪಕ್ಕೆ ಕಾಂಗ್ರೆಸ್ (Congress) ಗರಂ ಆಗಿದೆ. ರಾಜ್ಯ ಸರ್ಕಾರ ಆರ್ಥಿಕ ಮುಗ್ಗಟ್ಟು ಎದುರಿಸುತ್ತಿದೆ ಎನ್ನುವುದು ಬಿಜೆಪಿ (BJP) ಆರೋಪ ಅಷ್ಟೇ ಎಂದು ಗೃಹ ಸಚಿವ ಜಿ ಪರಮೇಶ್ವರ್ (G Parameshwara) ಹೇಳಿದ್ದಾರೆ.
ಅಕ್ಕಿ ಖರೀದಿಗೆ ರಾಜ್ಯ ಸರ್ಕಾರದ ಬಳಿ ಹಣ ಇಲ್ಲ ಎಂಬ ಕೇಂದ್ರ ಮಂತ್ರಿ ಪ್ರಹ್ಲಾದ್ ಜೋಶಿ ಜೋಶಿ ಆರೋಪಕ್ಕೂ ಗೃಹಮಂತ್ರಿಗಳು ತಿರುಗೇಟು ನೀಡಿದ್ದಾರೆ. ಜೋಶಿಯವರು ಪತ್ರ ಬರೆಯಲಿ. ಅದಕ್ಕೆ ನಾವು ಯಾವ ರೀತಿ ಸ್ಪಂದಿಸುತ್ತೇವೆ ಎನ್ನುವುದು ಅವರಿಗೆ ಗೊತ್ತಾಗಲಿದೆ ಎಂದು ಪರಮೇಶ್ವರ್ ಹೇಳಿದರು. ಇದನ್ನೂ ಓದಿ: SCSP – TSP ಯೋಜನೆಯ 14 ಸಾವಿರ ಕೋಟಿ ಹಣ ಕಾಂಗ್ರೆಸ್ ಗ್ಯಾರಂಟಿಗೆ ಬಳಕೆ
ಹುಬ್ಬಳ್ಳಿ: ಕೇಂದ್ರ ಸರ್ಕಾರ ಕಡಿಮೆ ಬೆಲೆಗೆ ಅಕ್ಕಿ (Rice) ಕೊಡಲು ರೆಡಿಯಿದೆ. ಆದ್ರೆ ಅಕ್ಕಿ ಖರೀದಿಸೋಕೆ ರಾಜ್ಯ ಸರ್ಕಾರದ (Karnataka Government) ಬಳಿಯೇ ದುಡ್ಡಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ತಿರುಗೇಟು ನೀಡಿದ್ದಾರೆ.
ನಾವು ಕೇಳಿದಾಗ ಕೇಂದ್ರ ಅಕ್ಕಿ ಕೊಡಲಿಲ್ಲ. ಈಗ ಭಾರತ್ ಅಕ್ಕಿ (Bharat Rice) ಕೂಡ ನಿಲ್ಲಿಸಿದ್ದಾರೆ. ಶೀಘ್ರವೇ ಕೇಂದ್ರ ಮಂತ್ರಿ ಪ್ರಹ್ಲಾದ್ ಜೋಶಿ ಅಕ್ಕಿ ಮಾರಾಟ ಮಾಡುವಂತೆ ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಒತ್ತಾಯಿಸಿದ್ದರು. ಈ ಹೇಳಿಕೆ ಕುರಿತು ಹುಬ್ಬಳ್ಳಿಯಲ್ಲಿ ಮಾತನಾಡಿದ ಜೋಶಿ, ಕೇಂದ್ರ ಸರ್ಕಾರ ಕಡಿಮೆ ಬೆಲೆಗೆ ಅಕ್ಕಿ ಕೊಡಲು ರೆಡಿಯಿದೆ. ಆದ್ರೆ ಅಕ್ಕಿ ಖರೀದಿಸೋಕೆ ರಾಜ್ಯ ಸರ್ಕಾರದ ಬಳಿಯೇ ದುಡ್ಡಿಲ್ಲ. ಎಂದು ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: ಎಲ್ಲಾ ರಾಜಕೀಯ ಪಕ್ಷಗಳು ಹಾಳಾಗಿ ಹೋಗಿವೆ – ಹೆಚ್.ವಿಶ್ವನಾಥ್ ಬೇಸರ
ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ದರಿದ್ರ ಸರ್ಕಾರ ಆಗಿ ಪರಿವರ್ತನೆ ಆಗಿದೆ. ಒಂದು ರಸ್ತೆ ಮಾಡಿಸೋದಕ್ಕೂ ದುಡ್ಡಿಲ್ಲ. ಕಳೆದ ಬಾರಿ ನಮ್ಮ ಬಳಿ ಅಕ್ಕಿ ಬಫರ್ ಸ್ಟಾಕ್‌ಗೆ ಹತ್ತಿರ ಇತ್ತು. ದೇಶಾದ್ಯಂತ ಅಕ್ಕಿ ಸಂಗ್ರಹ ಕಡಿಮೆ ಆಗುತ್ತೆ ಅನ್ನುವ ಆತಂಕ ಇತ್ತು, ಆದ್ದರಿಂದ ಅಕ್ಕಿ ನಿಲ್ಲಿಸಿದ್ದೆವು. ಈಗ ನಮ್ಮ ಬಳಿ ಅಕ್ಕಿ ಸ್ಟಾಕ್ ಇದೆ. ಮುಕ್ತ ಮಾರುಕಟ್ಟೆ ಸಪೋರ್ಟ್ ಸಿಸ್ಟಮ್‌ನಲ್ಲಿ (Open Market Support System) ನಾವು ಅಕ್ಕಿ ಕೊಡ್ತಿದ್ದೇವೆ. 34 ರೂ. ಇದ್ದ ಅಕ್ಕಿ ಬೆಲೆ 28 ರೂ.ಗೆ ಇಳಿಕೆಯಾಗಿದೆ. ಹೀಗಾಗಿ ಸಿದ್ದರಾಮಯ್ಯ ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಬಿಡಬೇಕು ಎಂದು ಕುಟುಕಿದ್ದಾರೆ. ಇದನ್ನೂ ಓದಿ: ಮುಡಾ ಪ್ರಕರಣ ಸಿಬಿಐ ಅಥವಾ ನ್ಯಾಯಾಧೀಶರಿಂದ ತನಿಖೆಯಾಗಲಿ: ಬೊಮ್ಮಾಯಿ
ನೀವು 170 ರೂ. ಎಷ್ಟು ಜನರಿಗೆ ಅಕ್ಕಿ ಕೊಟ್ಟಿದ್ದೀರಿ? ಕಳೆದ 2 ತಿಂಗಳಿಂದ ಗೃಹಲಕ್ಷ್ಮಿ ಹಣವೇ ಬಂದಿಲ್ಲ. ವೃದ್ಯಾಪ್ಯ ವೇತನವೂ ಫಲಾನುಭವಿಗಳ ಖಾತೆಗೆ ಜಮೆ ಆಗಿಲ್ಲ. ಪೆಟ್ರೋಲ್, ಡೀಸೆಲ್ ಬೆಲೆ ಯಾಕೆ ಹೆಚ್ಚಿಸಿದ್ರಿ? ನಾಚಿಕೆ ಆಗಲ್ವಾ ನಿಮಗೆ? ಜನರಿಗೆ ದ್ರೋಹ ಮಾಡೋ ಸರ್ಕಾರ ಸಿದ್ಧರಾಮಯ್ಯ ಸರ್ಕಾರ. ಎಲ್ಲ ಬೆಲೆಯನ್ನು ಜಾಸ್ತಿ ಮಾಡಿದ್ದಾರೆ. ಜನರಿಗೆ ಹೊರೆ ಹಾಕೋ ಕೆಲಸ ಮಾಡಿದ್ದಾರೆ. ಯಾವುದೇ ಸಣ್ಣ ಕೆಲಸಕ್ಕೂ ದುಡ್ಡಿಲ್ಲ ಅಂತಿದ್ದಾರೆ. ಇವಾಗ ಅಕ್ಕಿ ತಗೊಳ್ಳಿ ಅಂದ್ರೆ ಅದಕ್ಕೂ ರಾಜ್ಯ ಸರ್ಕಾರದ ಬಳಿ ದುಡ್ಡಿಲ್ಲ. ಸಿದ್ದರಾಮಯ್ಯ ಏನಾಗ್ತಿದೆ ಎಂದು ಅಧಿಕಾರಿಗಳಿಂದ ತಿಳಿದುಕೊಂಡು ಮಾತಾಡಬೇಕು ಎಂದು ಹೇಳಿದ್ದಾರೆ. ಇದನ್ನೂ ಓದಿ: 2ನೇ ವಿಮಾನ ನಿಲ್ದಾಣದ ಬಗ್ಗೆ ವಿಸ್ತೃತ ಚರ್ಚೆ ಬಳಿಕ ಸೂಕ್ತ ತೀರ್ಮಾನ: ಎಂ.ಬಿ.ಪಾಟೀಲ್