Tag: ಪ್ರಹ್ಲಾದ್ ಜೋಶಿ

  • ರಾಜ್ಯ ಸರ್ಕಾರದ ದಿಕ್ಕು, ದಾರಿ ತಪ್ಪಿದೆ: ಜೋಶಿ ವಾಗ್ದಾಳಿ

    ರಾಜ್ಯ ಸರ್ಕಾರದ ದಿಕ್ಕು, ದಾರಿ ತಪ್ಪಿದೆ: ಜೋಶಿ ವಾಗ್ದಾಳಿ

    ಧಾರವಾಡ: ರಾಜ್ಯದಲ್ಲಿ ಅರಾಜಕತೆ ಸೃಷ್ಟಿಯಾಗಿದೆ. ಪ್ರಸ್ತುತ ರಾಜ್ಯ ಕಾಂಗ್ರೆಸ್ ಸರ್ಕಾರದ ದಿಕ್ಕು, ದಾರಿ ತಪ್ಪಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ (Pralhad Joshi) ವಾಗ್ದಾಳಿ ನಡೆಸಿದರು.

    ಧಾರವಾಡದಲ್ಲಿ (Dharwad) ಮಾತನಾಡಿದ ಅವರು, ಸಿಎಂ ಹಾಗೂ ಡಿಸಿಎಂ ಒಬ್ಬರ ವಿರುದ್ಧ ಒಬ್ಬರು ಹೇಳಿಕೆ ಕೊಡಿಸುತ್ತಿದ್ದಾರೆ. ಹೆಚ್ಚು ಡಿಸಿಎಂ ಸ್ಥಾನ ಸೃಷ್ಟಿ ಮಾಡಬೇಕು ಎಂಬ ಒತ್ತಾಯ ಎಬ್ಬಿಸುತ್ತಿದ್ದಾರೆ. ಇದನ್ನು ಸಿಎಂ ತಮ್ಮ ಬಾಲಂಗೋಚಿಗಳ ಕಡೆಯಿಂದ ಹೇಳಿಸುತ್ತಿದ್ದಾರೆ. ಇತ್ತ ಸಿಎಂ ಅವರನ್ನೇ ಬದಲಾವಣೆ ಮಾಡಿಸಬೇಕು ಎಂದು ಡಿಸಿಎಂ ತಮ್ಮ ಹಿಂಬಾಲಕರ ಕಡೆಯಿಂದ ಹೇಳಿಸುತ್ತಿದ್ದಾರೆ ಎಂದರು. ಇದನ್ನೂ ಓದಿ: ಕಾಂಗ್ರೆಸ್ ಹೈಕಮಾಂಡ್ ಮನಸ್ಸು ಮಾಡಿದ್ರೆ ಡಿಕೆಶಿ ಸಿಎಂ ಆಗ್ತಾರೆ: ಜಿಟಿ ದೇವೇಗೌಡ

    ಈ ಸರ್ಕಾರ ದಾರಿ ತಪ್ಪಿದ ಮಗನಂತಾಗಿದೆ. ಒಬ್ಬರಿಗೊಬ್ಬರು ತಮ್ಮ ಹಿಂಬಾಲಕರನ್ನು ಬಿಡುತ್ತಿದ್ದಾರೆ. ಪಕ್ಷದ ಹೈಕಮಾಂಡ್ ಕ್ರಮ ಕೈಗೊಳ್ಳತ್ತದೆ ಎನ್ನುತ್ತಾರೆ. ಏನು ಹೇಳಿದರೂ ಕ್ರಮ ಆಗಿಲ್ಲ. ಇಷ್ಟು ದಯನೀಯ ಸ್ಥಿತಿಗೆ ಕಾಂಗ್ರೆಸ್ ಬಂದು ತಲುಪಿದೆ. ಒಂದೇ ವರ್ಷದಲ್ಲಿ ಕಾಂಗ್ರೆಸ್ ಹೀಗಾಗಿದೆ. ಗ್ಯಾರಂಟಿ ಕೊಟ್ಟರೂ ಲೋಕಸಭೆಯಲ್ಲಿ ಬಹುಪಾಲು ಬಿಜೆಪಿ ಮುಂದೆ ಇದೆ. ಕಾಂಗ್ರೆಸ್ ಬಗ್ಗೆ ಜನ ಬೇಸತ್ತಿದ್ದಾರೆ. ರಾಜ್ಯದ ಆಡಳಿತ ನಿಷ್ಟ್ರಿಯಗೊಳ್ಳುತ್ತಿದೆ. ಅಧಿಕಾರಿಗಳಿಗೆ ಸರಿಯಾದ ನಿರ್ದೇಶನ ಕೊಡಲು ಜನಪ್ರತಿನಿಧಿಗಳು ವಿಫಲರಾಗಿದ್ದಾರೆ. ಇವರು ಕೂಡಲೇ ತಮ್ಮ ಆಂತರಿಕ ಸಮಸ್ಯೆ ಬಗೆಹರಿಸಿಕೊಂಡು ಜನರ ಕಡೆ ಗಮನಹರಿಸಬೇಕು ಎಂದು ಸಲಹೆ ನೀಡಿದರು.

    ಬೆಲೆ ಏರಿಕೆ ಮಾಡಿ ಜನರಿಂದಲೇ ಹಣ ಪೀಕಿ ಅದೇ ದುಡ್ಡನ್ನು ಜನರಿಗೆ ಕೊಡುತ್ತಿದ್ದಾರೆ. ಒಂದು ಕೈಯಿಂದ ಕಸಿದುಕೊಂಡು ಇನ್ನೊಂದು ಕೈಯಿಂದ ಕೊಡುತ್ತಿದೆ. ಸಿದ್ದರಾಮಯ್ಯ ಒಬ್ಬ ವಿಫಲ ಮುಖ್ಯಮಂತ್ರಿ ಎಂದ ಜೋಶಿ, ಲೋಕಸಭೆ ಚುನಾವಣೆ ಬಳಿಕ ರಾಜ್ಯ ಸರ್ಕಾರ ಬೀಳುತ್ತದೆ ಎಂಬ ಗುಮಾನಿ ಬಗ್ಗೆ ನಾನು ಮೊದಲೂ ಪ್ರತಿಕ್ರಿಯೆ ನೀಡಿರಲಿಲ್ಲ. ಈಗಲೂ ಪ್ರತಿಕ್ರಿಯಿಸಲಾರೆ. ಜನ ಅವರಿಗೆ ಐದು ವರ್ಷ ಅಧಿಕಾರ ಕೊಟ್ಟಿದ್ದಾರೆ. ಜನತೆಯ ಆದೇಶ ಐದು ವರ್ಷ. ಈ ಅವಧಿಯಲ್ಲಿ ಅವರು ಚೆನ್ನಾಗಿಯೇ ಆಡಳಿತ ಮಾಡಲಿ ಎಂಬುದೇ ನಮ್ಮ ಉದ್ದೇಶ ಎಂದು ಟಾಂಗ್‌ ಕೊಟ್ಟರು. ಇದನ್ನೂ ಓದಿ: ಮುಂದಿನ 2 ಗಂಟೆಗಳಲ್ಲಿ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ

    ಅವರವರ ಆಂತರಿಕ ಕಚ್ಚಾಟದಿಂದ ಸರ್ಕಾರ ಬಿದ್ದರೆ ಅದಕ್ಕೆ ನಾವು ಜವಾಬ್ದಾರರಲ್ಲ. ಅದಕ್ಕೆ ಇವರು ಆಪರೇಶನ್ ಕಮಲ ಎನ್ನುತ್ತಾರೆ. ಆ ವಿಚಾರ ನಮ್ಮ ತಲೆಯಲ್ಲಿಲ್ಲ ಎಂದರಲ್ಲದೇ. ಸಮಾಜ ವಿಜ್ಞಾನ ಪಠ್ಯದಲ್ಲಿ ವೀರಶೈವ ಪದ ತೆಗೆದ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿ, ಸಿದ್ದರಾಮಯ್ಯ ಮತ್ತೆ ಸಮಾಜ ಒಡೆಯುವ ಕೆಲಸ ಮಾಡುತ್ತಿದ್ದಾರೆ. ವೀರಶೈವ ಲಿಂಗಾಯತ ಎಂದು ಮೊದಲು ಹೇಳಿತ್ತು. ಈಗ ವೀರಶೈವ ಪದ ತೆಗೆದಿದೆ. ಅನಗತ್ಯವಾಗಿ ಕಿಚ್ಚು ಹಚ್ಚುವ ಕೆಲಸವನ್ನು ಈ ಸರ್ಕಾರ ಮಾಡುತ್ತಿದೆ ಎಂದು ಆಕ್ರೋಶ ಹೊರಹಾಕಿದರು.

  • ಭೀಕರ ಅಪಘಾತ: ತ್ವರಿತ ಪರಿಹಾರ, ಸೂಕ್ತ ಚಿಕಿತ್ಸೆಗಾಗಿ ರಾಜ್ಯ ಸರ್ಕಾರಕ್ಕೆ ಪ್ರಹ್ಲಾದ್‌ ಜೋಶಿ ಒತ್ತಾಯ

    ಭೀಕರ ಅಪಘಾತ: ತ್ವರಿತ ಪರಿಹಾರ, ಸೂಕ್ತ ಚಿಕಿತ್ಸೆಗಾಗಿ ರಾಜ್ಯ ಸರ್ಕಾರಕ್ಕೆ ಪ್ರಹ್ಲಾದ್‌ ಜೋಶಿ ಒತ್ತಾಯ

    ಹುಬ್ಬಳ್ಳಿ: ಹಾವೇರಿ (Haveri) ಜಿಲ್ಲೆ ಗುಂಡೇನಹಳ್ಳಿ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಸರ್ಕಾರ ತ್ವರಿತವಾಗಿ ಪರಿಹಾರ ಕ್ರಮ ಕೈಗೊಳ್ಳಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ (Pralhad Joshi) ಒತ್ತಾಯಿಸಿದ್ದಾರೆ.

    ಈ ಭೀಕರ ಅಪಘಾತದಲ್ಲಿ 13 ಜನರು ಸಾವಿಗೀಡಾದ ಸುದ್ದಿ ತಿಳಿದು ಸಚಿವ ಜೋಶಿ ಅವರು ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಹಾವೇರಿ ಬಳಿ ಭೀಕರ ಅಪಘಾತ- 13 ಮಂದಿ ದುರ್ಮರಣ

    ದೇವರು ಮೃತರ ಆತ್ಮಕ್ಕೆ ಶಾಂತಿ ನೀಡಲಿ ಮತ್ತು ಅವರ ಕುಟುಂಬಸ್ಥರಿಗೆ ನೋವು ಸಹಿಸಿಕೊಳ್ಳುವ ಶಕ್ತಿ ನೀಡಲೆಂದು ಸಚಿವರು ಪ್ರಾರ್ಥಿಸಿದ್ದಾರೆ. ಇದನ್ನೂ ಓದಿ: ದೆಹಲಿ ಏರ್‌ಪೋರ್ಟ್‌ನ ಟರ್ಮಿನಲ್ 1 ರಲ್ಲಿ ಛಾವಣಿ ಕುಸಿದು 6 ಮಂದಿಗೆ ಗಾಯ

    ತ್ವರಿತ ಪರಿಹಾರ, ಸೂಕ್ತ ಚಿಕಿತ್ಸೆಗೆ ಮನವಿ: ರಾಜ್ಯ ಸರ್ಕಾರ ಈ ಕೂಡಲೇ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ಒದಗಿಸಲು ಆದ್ಯತೆ ನೀಡಬೇಕು. ಮೃತರ ಕುಟುಂಬಕ್ಕೆ ತ್ವರಿತ ಪರಿಹಾರ ನೀಡಲು ಮುಂದಾಗಬೇಕೆಂದು ಒತ್ತಾಯಿಸಿ ಸಚಿವರು ಟ್ವೀಟ್ ಮಾಡಿದ್ದಾರೆ.

  • ಚುನಾವಣೆ ಸೋಲು ಅರಗಿಸಿಕೊಳ್ಳಲಾಗದೇ ಬಿಎಸ್‌ವೈ ಮೇಲೆ ರಾಜಕೀಯ ವೈಷಮ್ಯ: ಜೋಶಿ ಆಕ್ರೋಶ

    ಚುನಾವಣೆ ಸೋಲು ಅರಗಿಸಿಕೊಳ್ಳಲಾಗದೇ ಬಿಎಸ್‌ವೈ ಮೇಲೆ ರಾಜಕೀಯ ವೈಷಮ್ಯ: ಜೋಶಿ ಆಕ್ರೋಶ

    ಹುಬ್ಬಳ್ಳಿ: ರಾಜ್ಯದಲ್ಲಿ ಕಾಂಗ್ರೆಸ್‌ಗೆ ಲೋಕಸಭೆ ಚುನಾವಣೆ (Lok Sabha Election) ಸೋಲನ್ನು ಅರಗಿಸಿಕೊಳ್ಳಲಾಗಿಲ್ಲ. ಹೀಗಾಗಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ (Yediyurappa) ಅವರ ಮೇಲೆ ರಾಜಕೀಯ ವೈಷಮ್ಯ ತೋರುತ್ತಿದೆ ಎಂದು ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರ ಸಚಿವ ಪ್ರಹ್ಲಾದ್‌ ಜೋಶಿ (Pralhad Joshi) ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ರಾಜ್ಯ ಕಾಂಗ್ರೆಸ್ ಸರ್ಕಾರ ತನ್ನ ದುರಾಡಳಿತ ಮರೆಮಾಚಲು ಮಾಜಿ ಸಿಎಂ 81 ವರ್ಷದ ಯಡಿಯೂರಪ್ಪ (Yediyurappa) ಅವರ ಮೇಲೆ ಇಲ್ಲಸಲ್ಲದ ಪ್ರಕರಣ ದಾಖಲಿಸಿ ಷಡ್ಯಂತ್ರ ನಡೆಸುತ್ತಿದೆ ಎಂದು ಸಚಿವ ಜೋಶಿ ಹರಿ ಹಾಯ್ದಿದ್ದಾರೆ. ಇದನ್ನೂ ಓದಿ: ರಾಹುಲ್‌ ಗೆದ್ದ ವಯನಾಡು ಕ್ಷೇತ್ರದಿಂದ ಪ್ರಿಯಾಂಕಾ ಕಣಕ್ಕೆ?

     

    ಪ್ರಸಕ್ತ ಲೋಕಸಭೆ ಚುನಾವಣೆಯಲ್ಲಿ ಸೋಲುಂಡ ಕಾಂಗ್ರೆಸ್ ಅದನ್ನು ಜೀರ್ಣಿಸಿಕೊಳ್ಳಲಾಗದೇ ಆಡಳಿತವನ್ನು ಮನಬಂದಂತೆ ದುರುಪಯೋಗ ಮಾಡಿಕೊಳ್ಳುತ್ತಿದೆ ಎಂದು ಪ್ರಹ್ಲಾದ್‌ ಜೋಶಿ ಆರೋಪಿಸಿದ್ದಾರೆ.

    ಮೂರ್ನಾಲ್ಕು ತಿಂಗಳ ಹಿಂದೆ ಮಾಜಿ ಸಿಎಂ ಬಿಎಸ್‌ವೈ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಿದ ಮಹಿಳೆ ಮಾನಸಿಕ ಅಸ್ವಸ್ಥಳು, ದುರುದ್ದೇಶದಿಂದ ದೂರು ನೀಡಿದ್ದಾಳೆ ಎಂದು ಆಗಲೇ ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ. ಆದರೆ ಈಗ ಚುನಾವಣೆ ಮುಗಿದ ಮೇಲೆ ರಾಜ್ಯ ಕಾಂಗ್ರೆಸ್ ನಾಯಕರು ಹೊಸ ಡ್ರಾಮಾ ಶುರು ಮಾಡಿದ್ದಾರೆ ಎಂದು ಜೋಶಿ ಖಂಡಿಸಿದ್ದಾರೆ.  ಇದನ್ನೂ ಓದಿ: ದರ್ಶನ್ ಇರೋ ಠಾಣೆಗೆ ಶಾಮಿಯಾನ ಹಾಕಿದ್ದರ ಹಿಂದಿನ ಸೀಕ್ರೆಟ್ ರಿವೀಲ್

    ಆ ಮಹಿಳೆ ಈಗಾಗಲೇ ಐಎಎಸ್, ಐಪಿಎಸ್ ಅಧಿಕಾರಿಗಳು ಸೇರಿದಂತೆ ರಾಜಕಾರಣಿಗಳ ಮೇಲೆ 60ಕ್ಕೂ ಹೆಚ್ಚು ಪ್ರಕರಣಗಳನ್ನು ದಾಖಲಿಸಿದ್ದಾಳೆ ಎಂದೂ ಗೃಹ ಮಂತ್ರಿಗಳೇ ಖುದ್ದಾಗಿ ಈ ಹಿಂದೆ ಹೇಳಿದ್ದರು. ಈಗ ತಮ್ಮ ದುರಾಡಳಿತವನ್ನು ಮರೆಮಾಚಲು ಬಿಜೆಪಿ ವರಿಷ್ಠ ಬಿಎಸ್‌ವೈ ಅವರನ್ನು ಟಾರ್ಗೆಟ್ ಮಾಡುತ್ತಿದ್ದಾರೆ ಎಂದು ಸಚಿವ ಜೋಶಿ ಟ್ವೀಟ್ ಮೂಲಕ ತೀವ್ರ ಆಕ್ರೋಶ ಹೊರ ಹಾಕಿದ್ದಾರೆ. ಇದನ್ನೂ ಓದಿ: ಏನಿದು ಬಿಎಸ್‌ವೈ ವಿರುದ್ಧದ ಪೋಕ್ಸೊ ಕೇಸ್‌? – ಇಲ್ಲಿದೆ ನೋಡಿ ಟೈಮ್‌ಲೈನ್‌.

    ಇಲ್ಲ ಸಲ್ಲದ ಪ್ರಕರಣದಲ್ಲಿ ಯಡಿಯೂರಪ್ಪ ಅವರನ್ನು ಎಳೆಯುತ್ತಿರುವುದು ರಾಜಕೀಯ ವೈಷಮ್ಯ ಸರಿ. ಅವರ ಈ ದುರ್ಬುದ್ಧಿಗೆ ತಕ್ಕ ಪಾಠ ಕಲಿಯಲಿದ್ದಾರೆ ಎಂದು ಪ್ರಹ್ಲಾದ್‌ ಜೋಶಿ ಎಚ್ಚರಿಸಿದ್ದಾರೆ.

  • Modi cabinet: ಕರ್ನಾಟಕದ ನಾಲ್ವರು ಸಚಿವರಿಗೆ ಬಂಪರ್‌ – ಯಾರಿಗೆ ಯಾವ ಖಾತೆ?

    Modi cabinet: ಕರ್ನಾಟಕದ ನಾಲ್ವರು ಸಚಿವರಿಗೆ ಬಂಪರ್‌ – ಯಾರಿಗೆ ಯಾವ ಖಾತೆ?

    – ಎನ್‌ಡಿಎ ಸರ್ಕಾರದ ಮೊದಲ ಕ್ಯಾಬಿನೆಟ್‌ ಸಭೆ

    ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಸಂಪುಟಕ್ಕೆ ಆಯ್ಕೆಯಾಗಿರುವ ಕರ್ನಾಟಕದ ನಾಲ್ವರು ಕೇಂದ್ರ ಸಚಿವರಿಗೆ ಖಾತೆ ಹಂಚಿಕೆಯಾಗಿದೆ.

    3ನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ನರೇಂದ್ರ ಮೋದಿ ಅವರಿಂದು ತಮ್ಮ ನಿವಾಸದಲ್ಲಿ ಮೊದಲ ಸಂಪುಟ ಸಭೆ ನಡೆಸಿದರು. 30 ಸಂಪುಟ ದರ್ಜೆ ಸಚಿವರು, ಐವರು ಸ್ವತಂತ್ರ ಖಾತೆ ನಿರ್ವಹಣೆ ಹಾಗೂ 31 ರಾಜ್ಯ ಖಾತೆ ಸಚಿವರು ಪಾಲ್ಗೊಂಡಿದ್ದರು. ಸಂಪುಟ ಸಭೆಯ ಬಳಿಕ ಖಾತೆ ಹಂಚಿಕೆ ಮಾಡಲಾಗಿದ್ದು, ಪ್ರಮುಖ ಖಾತೆಗಳನ್ನು ಬಿಜೆಪಿ ತನ್ನಲ್ಲೇ ಉಳಿಸಿಕೊಂಡಿದೆ. ಯಾರಿಗೆ ಯಾವ ಖಾತೆ ಹಂಚಿಕೆಯಾಗಿದೆ ಎಂಬುದನ್ನಿಲ್ಲಿ ನೋಡೋಣ…

    • ಹೆಚ್‌.ಡಿ ಕುಮಾರಸ್ವಾಮಿ – ಉಕ್ಕು ಮತ್ತು ಬೃಹತ್‌ ಕೈಗಾರಿಕೆ
    • ಪ್ರಹ್ಲಾದ್‌ ಜೋಶಿ – ಆಹಾರ ಮತ್ತು ನಾಗರೀಕ ಸರಬರಾಜು ಖಾತೆ, ನವೀಕರಿಸಬಹುದಾದ ಇಂಧನ
    • ಶೋಭಾ ಕರಂದ್ಲಾಜೆ – ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆ ರಾಜ್ಯ ಖಾತೆ ಮತ್ತು ಕಾರ್ಮಿಕ ಇಲಾಖೆ ರಾಜ್ಯಖಾತೆ
    • ವಿ. ಸೋಮಣ್ಣ – ಜಲಶಕ್ತಿ ರಾಜ್ಯಖಾತೆ, ರೈಲ್ವೇ ಸಚಿವ ರಾಜ್ಯಖಾತೆ

    ಜೂನ್‌ 9ರಂದು ನರೇಂದ್ರ ಮೋದಿ ಸಂಪುಟದ ನೂತನ ಸಚಿವರಾಗಿ ಹೆಚ್‌.ಡಿ ಕುಮಾರಸ್ವಾಮಿ, ಪ್ರಹ್ಲಾದ್ ಜೋಶಿ, ವಿ.ಸೋಮಣ್ಣ ಹಾಗೂ ಶೋಭಾ ಕರಂದ್ಲಾಜೆ ಪ್ರಮಾಣವಚನ ಸ್ವೀಕರಿಸಿದ್ದರು. ಜೋಶಿ ಹಾಗೂ ಶೋಭಾ ಕರಂದ್ಲಾಜೆ ಅವರು 2ನೇ ಬಾರಿಗೆ ಮೋದಿ ಸಂಪುಟ ಸಚಿವರಾಗಿದ್ದಾರೆ. ಜೊತೆಗೆ ಮೊದಲಬಾರಿಗೆ ಸಂಸದರಾಗಿ ಆಯ್ಕೆಯಾದ ವಿ.ಸೋಮಣ್ಣ ಅವರು ಕೂಡ ಕೇಂದ್ರ ಸಚಿವರಾಗಿದ್ದಾರೆ.

    ಇದರೊಂದಿಗೆ ಮೊದಲ ಸಂಪುಟ ಸಭೆಯಲ್ಲಿಯೇ ಬಡವರಿಗೆ ಅನುಕೂಲವಾಗುವ ದಿಸೆಯಲ್ಲಿ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ಇದಕ್ಕೆ ಎಲ್ಲ ಸಚಿವರು ಸಹಮತ ಸೂಚಿಸಿದರು. ದೇಶದ ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಬಡವರಿಗೆ 3 ಕೋಟಿ ಮನೆಗಳನ್ನು ನಿರ್ಮಿಸಿಕೊಡುವ ಮಹತ್ವದ ತೀರ್ಮಾನವನ್ನು ಮೊದಲ ಸಂಪುಟ ಸಭೆಯಲ್ಲಿ ಕೈಗೊಳ್ಳಲಾಗಿದೆ. ಪ್ರಧಾನಮಂತ್ರಿ ಆವಾಸ್‌ ಯೋಜನೆ ಅಡಿಯಲ್ಲಿ 3 ಕೋಟಿ ಮನೆಗಳ ನಿರ್ಮಾಣಕ್ಕೆ ತೀರ್ಮಾನಿಸಲಾಯಿತು.

  • ಹೆಚ್‌ಡಿಕೆ,  ಜೋಶಿ, ಶೋಭಾ, ಸೋಮಣ್ಣಗೆ ಮಂತ್ರಿ ಸ್ಥಾನ ಫಿಕ್ಸ್‌

    ಹೆಚ್‌ಡಿಕೆ, ಜೋಶಿ, ಶೋಭಾ, ಸೋಮಣ್ಣಗೆ ಮಂತ್ರಿ ಸ್ಥಾನ ಫಿಕ್ಸ್‌

    ನವದೆಹಲಿ: ಕರ್ನಾಟಕದ  ಹೆಚ್‌ಡಿ ಕುಮಾರಸ್ವಾಮಿ (HD Kumaraswamy), ಪ್ರಹ್ಲಾದ್‌ ಜೋಶಿ (Prahlad Joshi), ಶೋಭಾ ಕರಂದ್ಲಾಜೆ (Shobha Karandlaje), ವಿ ಸೋಮಣ್ಣ (ವಿ ಸೋಮಣ್ಣ)  ಅವರಿಗೆ ಸಚಿವ ಸ್ಥಾನ ಸಿಕ್ಕಿದೆ.

    ಇಂದು ಸಂಜೆ 7:15ಕ್ಕೆ ರಾಷ್ಟ್ರಪತಿ ಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಲಿರುವ ಮೋದಿ (Narendra Modi) ಅವರು ತಮ್ಮ ನಿವಾಸದಲ್ಲಿ ಬೆಳಗ್ಗೆ 11:30ಕ್ಕೆ ನೂತನ ಕ್ಯಾಬಿನೆಟ್‌ ಸಚಿವರಿಗೆ ಚಹಾ ಕೂಟವನ್ನು ಆಯೋಜಿಸಿದ್ದರು.

    ಈ ಸಂದರ್ಭದಲ್ಲಿ ಮೋದಿ ಅವರು ತನ್ನ ಎಲ್ಲಾ ಕ್ಯಾಬಿನೆಟ್‌ ಸಚಿವರಿಗೆ ಸಲಹೆ, ಸೂಚನೆ ನೀಡಿದ್ದಾರೆ. ಕರ್ನಾಟಕ ಹೆಚ್‌ಡಿ ಕುಮಾರಸ್ವಾಮಿ ಮತ್ತು ಪ್ರಹ್ಲಾದ್‌ ಜೋಶಿ ಅವರಿಗೆ ಕ್ಯಾಬಿನೆಟ್‌ ಖಾತೆ,  ಶೋಭಾ ಕರಂದ್ಲಾಜೆ ಮತ್ತು ವಿ.ಸೋಮಣ್ಣ ಅವರಿಗೆ ರಾಜ್ಯ ಖಾತೆ ಸಿಗುವ ಸಾಧ್ಯತೆಯಿದೆ.

  • ಧಾರವಾಡದಲ್ಲಿ ಮತ್ತೆ ಕಮಲ ಕಿಲಕಿಲ – ಜೋಶಿಗೆ ʻಪಂಚʼ ಜಯ!

    ಧಾರವಾಡದಲ್ಲಿ ಮತ್ತೆ ಕಮಲ ಕಿಲಕಿಲ – ಜೋಶಿಗೆ ʻಪಂಚʼ ಜಯ!

    ಧಾರವಾಡ: ಪ್ರಸ್ತುತ ಲೋಕಸಭಾ ಕ್ಷೇತ್ರದಲ್ಲಿ ಸತತ 5 ಬಾರಿ ಗೆಲುವು ಸಾಧಿಸುವ ಮೂಲಕ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ (Pralhad Joshi) ಹೊಸ ಇತಿಹಾಸ ನಿರ್ಮಿಸಿದ್ದಾರೆ.

    2004, 2009, 2014, 2019ರಲ್ಲಿ ಗೆಲುವು ಸಾಧಿಸಿದ್ದ ಜೋಶಿ 2024ರಲ್ಲಿ ಸತತ 5ನೇ ಬಾರಿಗೆ ಗೆಲುವು ಸಾಧಿಸಿದ್ದಾರೆ. ಇದೇ ಧಾರವಾಡ ಕ್ಷೇತ್ರದಿಂದ (Dharwad Constituency) ಈ ಹಿಂದೆ ಸರೋಜಿನಿ ಮಹಿಶಿ ಹಾಗೂ ಡಿ.ಕೆ ನಾಯ್ಕರ್‌ ಕಾಂಗ್ರೆಸ್‌ನಿಂದ ನಾಲ್ಕು ಬಾರಿ ಗೆದ್ದಿದ್ದರು. ಡಿ.ಪಿ ಕರ್ಮಾಕರ್ ಒಮ್ಮೆ ಹಾಗೂ ವಿಜಯ ಸಂಕೇಶ್ವರ್‌ ಮೂರು ಬಾರು ಗೆದ್ದಿದ್ದರು. ಆದ್ರೆ ಪ್ರಹ್ಲಾದ್‌ ಜೋಶಿ 5ನೇ ಬಾರಿಗೆ ಗೆಲುವು ಸಾಧಿಸಿದ ವಿಶೇಷ ಸಾಧನೆ ಮಾಡಿದ್ದಾರೆ. ಇದನ್ನೂ ಓದಿ: ಡಿಕೆ ಬ್ರದರ್ಸ್‌ಗೆ ಠಕ್ಕರ್‌; ಜನರ ಹೃದಯ ಗೆದ್ದ ಡಾಕ್ಟರ್‌ – ಮಂಜುನಾಥ್‌ಗೆ ಯಾವ ಕ್ಷೇತ್ರದಲ್ಲಿ ಎಷ್ಟು ವೋಟ್‌?

    2009ರಲ್ಲಿ 4,46,786 ಮತಗಳು, 2014ರಲ್ಲಿ 5,45,395 ಮತಗಳು ಹಾಗೂ 2019ರಲ್ಲಿ 6,84,837 ಮತಗಳನ್ನು ಪಡೆದಿದ್ದ ಜೋಶಿ 2024ರಲ್ಲಿ 7,16,231 ಮತಗಳನ್ನು ಪಡೆಯುವ ಮೂಲಕ 97,324 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಪ್ರತಿಸ್ಪರ್ಧಿ ಕಾಂಗ್ರೆಸ್‌ನ ವಿನೋದ್ ಅಸೂತಿ 6,18,907 ಮತಗಳನ್ನು ಪಡೆದು ಸೋಲು ಕಂಡಿದ್ದಾರೆ.

    ಬಿಜೆಪಿ ಕಾರ್ಯಕರ್ತರಲ್ಲಿ ಸಂಭ್ರಮ:
    ಸದ್ಯ ಧಾರವಾಡದಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮ ಮುಗಿಲು ಮುಟ್ಟಿದೆ. ಪ್ರಹ್ಲಾದ್‌ ಜೋಶಿ ಗೆಲುವಿನ ಫಲಿತಾಂಶ ಹೊರಬೀಳುತ್ತಿದ್ದಂತೆ ನಗರದ ಕೃಷಿ ವಿವಿ ಮುಖ್ಯ ದ್ವಾರದ ಎದುರು ಪಟಾಕಿ ಸಿಡಿಸಿದ್ದಾರೆ, ಸಿಹಿ ಹಂಚಿ ಸಂಭ್ರಮಿಸಿದ್ದಾರೆ. ಇದನ್ನೂ ಓದಿ: ಕೋಟೆನಾಡಿನಲ್ಲಿ ಗೋವಿಂದ ಕಾರಜೋಳಗೆ ಜೈಕಾರ ಹಾಕಿದ ಮತದಾರ

  • ಸಮೀಕ್ಷೆಗಳನ್ನು ಮೀರಿ ಐತಿಹಾಸಿಕ ಗೆಲುವು ಸಾಧಿಸಲಿದೆ ಬಿಜೆಪಿ – NDAಗೆ 400ಕ್ಕೂ ಹೆಚ್ಚು ಸ್ಥಾನ ಖಚಿತ: ಜೋಶಿ

    ಸಮೀಕ್ಷೆಗಳನ್ನು ಮೀರಿ ಐತಿಹಾಸಿಕ ಗೆಲುವು ಸಾಧಿಸಲಿದೆ ಬಿಜೆಪಿ – NDAಗೆ 400ಕ್ಕೂ ಹೆಚ್ಚು ಸ್ಥಾನ ಖಚಿತ: ಜೋಶಿ

    ಬೆಂಗಳೂರು: ಚುನಾವಣೋತ್ತರ ಸಮೀಕ್ಷೆಗಳನ್ನು (Exit Poll) ಮೀರಿ ಬಿಜೆಪಿ (BJP) ಐತಿಹಾಸಿಕ ಗೆಲುವು ಸಾಧಿಸಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ (Pralhad Joshi) ವಿಶ್ವಾಸ ವ್ಯಕ್ತಪಡಿಸಿದರು.

    ಹುಬ್ಬಳ್ಳಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 400ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವುದು ಖಚಿತ. ಬಿಜೆಪಿ ಯಾವತ್ತಿಗೂ ಇದನ್ನ ಹೇಳುತ್ತಲೇ ಬಂದಿದೆ. ಆದರೆ, ಕೆಲವರು ಸಂಶಯ ವ್ಯಕ್ತಪಡಿಸುತ್ತಿದ್ದರು. ಈಗ ಚುನಾವಣಾ ಸಮೀಕ್ಷೆಗಳೇ NDA ಐತಿಹಾಸಿಕ ಗೆಲುವನ್ನು ಖಚಿತಪಡಿಸಿವೆ ಎಂದು ಜೋಶಿ ಸ್ಪಷ್ಟಪಡಿಸಿದರು.

    ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ನೇತೃತ್ವದಲ್ಲಿ NDA ಪ್ರಚಂಡ ಬಹುಮತದಿಂದ ಗೆಲ್ಲಲಿದೆ. ಕರ್ನಾಟಕದಲ್ಲೂ 25ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದ ಅವರು, ಜನರ ದಿಕ್ಕು ತಪ್ಪಿಸುವಲ್ಲಿ, ಸುಳ್ಳು ಹೇಳುವುದರಲ್ಲಿ ಕಾಂಗ್ರೆಸ್ಸಿಗರು ನಿಸ್ಸೀಮರು. ವಾಸ್ತವವನ್ನೇ ಮರೆ ಮಾಚುತ್ತಾರೆ ಎಂದು ಆರೋಪಿಸಿದರು.

    ಸಚಿವ ನಾಗೇಂದ್ರ ಬಂಧನವಾದ್ರೆ ಎಲ್ಲಾ ಬಯಲಿಗೆ:
    ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಸಚಿವ ನಾಗೇಂದ್ರ ಬಂಧನವಾದರೆ ಎಲ್ಲವೂ ಬಯಲಾಗಲಿದೆ. ಸಚಿವರನ್ನ ಬಂಧಿಸಿದಲ್ಲಿ ಈ ಭ್ರಷ್ಟಾಚಾರ ಹಗರಣದಲ್ಲಿ ಸಿಎಂ ಸೇರಿದಂತೆ ಮತ್ಯಾರು, ಭಾಗಿಯಾಗಿದ್ದಾರೆ? ಅವರ ಪಾತ್ರ ಏನಿದೆ? ಎಂಬುದು ಗೊತ್ತಾಗಲಿದೆ. ಹಾಗಾಗಿ ರಾಜ್ಯ ಸರ್ಕಾರ ಮೊದಲು ಸಚಿವ ನಾಗೇಂದ್ರರನ್ನ ಬಂಧಿಸಲಿ ಎಂದು ಒತ್ತಾಯಿಸಿದರು.

  • ಪ್ರಜ್ವಲ್‌ ಪ್ರಕರಣ ಹೇಸಿಗೆ ಹುಟ್ಟಿಸಿದೆ, ಕ್ಷಮೆಗೆ ಅರ್ಹರಲ್ಲ – ಪ್ರಜ್ವಲ್‌ಗೆ ಶಿಕ್ಷೆ ಆಗಲೇಬೇಕು ಎಂದ ಜೋಶಿ

    ಪ್ರಜ್ವಲ್‌ ಪ್ರಕರಣ ಹೇಸಿಗೆ ಹುಟ್ಟಿಸಿದೆ, ಕ್ಷಮೆಗೆ ಅರ್ಹರಲ್ಲ – ಪ್ರಜ್ವಲ್‌ಗೆ ಶಿಕ್ಷೆ ಆಗಲೇಬೇಕು ಎಂದ ಜೋಶಿ

    ಹುಬ್ಬಳ್ಳಿ: ಪ್ರಜ್ವಲ್ ರೇವಣ್ಣ (Prajwal Revanna) ಕ್ಷಮಿಸಲಾರದಂತಹ ಅಪರಾಧ ಮಾಡಿದ್ದಾರೆ. ಅವರ ಪ್ರಕರಣ ಹೇಸಿಗೆ ಹುಟ್ಟಿಸಿದೆ. ಅವರು ಕ್ಷಮೆಗೆ ಅರ್ಹರಲ್ಲ, ಕ್ಷಮಿಸುವ ಪ್ರಶ್ನೆಯೇ ಇಲ್ಲ ಅಂತ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಹೇಳಿದ್ದಾರೆ.

    ಈ ಬಗ್ಗೆ ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಪ್ರಜ್ವಲ್ ರೇವಣ್ಣನನ್ನು ಎಸ್ಐಟಿ ಕಷ್ಟಡಿಗೆ ಕೊಟ್ಟಿದ್ದಾರೆ. ಸರಿಯಾದ ರೀತಿಯಲ್ಲಿ ತನಿಖೆ ಆಗಬೇಕು ಇದೊಂದು ಗಂಭೀರ ಪ್ರಕರಣ. ಭಾರತದಂತಹ ದೇಶದಲ್ಲಿ ಮಹಿಳೆಯರನ್ನು ನಾವು ಗೌರವದಿಂದ ಕಾಣುತ್ತೇವೆ. ಈ ರೀತಿಯ ಘಟನೆ ನಡೆದಿರುವುದು ಹೇಸಿಗೆ ಹುಟ್ಟಿಸುವಂತಾಗಿದೆ, ಮನಸ್ಸಿಗೆ ಕಿರಿಕಿರಿ ಆಗುತ್ತಿದೆ. ಇದನ್ನು ಅತ್ಯಂತ ಕಟ್ಟುನಿಟ್ಟಾದ ತನಿಖೆಗೆ ಒಳಪಡಿಸಬೇಕು ಎಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: ವಾಲ್ಮೀಕಿ ನಿಗಮದ ಬಹುಕೋಟಿ ಭ್ರಷ್ಟಾಚಾರ ಕೇಸ್‌ – ಆರೋಪಿಗಳು 6 ದಿನ ಪೊಲೀಸ್‌ ಕಸ್ಟಡಿಗೆ

    ಈ ನಿಟ್ಟಿನಲ್ಲಿ ನ್ಯಾಯಾಂಗ ವ್ಯವಸ್ಥೆ ಸೂಕ್ತ ಕ್ರಮ ಕೈಗೊಳ್ಳಲಿದೆ ಅನ್ನೋ ಭರವಸೆ ಇದೆ. ತ್ವರಿತ ಗತಿಯಲ್ಲಿ ತನಿಖೆ ಮುಗಿಸಿ ಗರಿಷ್ಠ ಶಿಕ್ಷೆ ಕೊಡುವಂತಾಗಬೇಕು ಎಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಖುದ್ದು ವಿಚಾರಣೆಗೆ ಹಾಜರಾಗಿ – ರಾಹುಲ್‌ ಗಾಂಧಿಗೆ ಬೆಂಗಳೂರು ಕೋರ್ಟ್‌ ಸಮನ್ಸ್‌

    ಪ್ರಜ್ವಲ್ ರೇವಣ್ಣ ರಾಜ್ಯದ ಕ್ಷಮೆ ಕೇಳಿದ ವಿಚಾರ ಆರೋಪಿ ಸ್ಥಾನದಲ್ಲಿದ್ದವರು ಕ್ಷಮೆ ಕೇಳಿದ ಕೂಡಲೇ ಬಿಟ್ಟುಬಿಡೋಕೆ ಆಗುತ್ತದೆಯೇ? ಯಾಕೆ ಕ್ಷಮೆ ಕೇಳಿದರು ಅಂತ ಪ್ರಜ್ವಲ್ ಉತ್ತರ ಕೊಡಲಿ, ಅವರು ಕ್ಷಮೆ ಕೇಳುವುದಿದ್ದರೆ ಸಂತ್ರಸ್ಥರ ಕ್ಷಮೆ ಕೇಳಲಿ ಪ್ರಜ್ವಲ್‌ಗೆ ಆಗುವ ಶಿಕ್ಷೆ ಆಗಲೇಬೇಕು. ಪೆನ್‌ಡ್ರೈವ್‌ ಹಂಚಿಕೆ ಇತ್ಯಾದಿಗಳನ್ನ ನೋಡಿದಾಗ ಪ್ರಜ್ವಲ್ ಕ್ಷಮೆಗೆ ಅರ್ಹರಲ್ಲ ಎಂದಿದ್ದಾರೆ. ಇದನ್ನೂ ಓದಿ: ಬೆಂಗಳೂರು: ಇಂದಿನಿಂದ ಜೂ.6 ವರೆಗೆ ಮೂರು ದಿನ ಮದ್ಯ ಮಾರಾಟಕ್ಕೆ ನಿಷೇಧ

  • ಅಲ್ಪಸಂಖ್ಯಾತರು ಗಲಭೆ ಮಾಡಿದ್ರೆ ಯಾಕೆ ಖಂಡನೆ ಮಾಡೋದಿಲ್ಲ – ಸಿಎಂಗೆ ಜೋಶಿ ಪ್ರಶ್ನೆ!

    ಅಲ್ಪಸಂಖ್ಯಾತರು ಗಲಭೆ ಮಾಡಿದ್ರೆ ಯಾಕೆ ಖಂಡನೆ ಮಾಡೋದಿಲ್ಲ – ಸಿಎಂಗೆ ಜೋಶಿ ಪ್ರಶ್ನೆ!

    – ಚನ್ನಗಿರಿ ಪ್ರಕರಣದಲ್ಲಿ ಮಾತ್ರ ಪೊಲೀಸರ ಮೇಲೆ ಕ್ರಮ ಯಾಕೆ?
    – ರಾಜ್ಯ ಸರ್ಕಾರದ ವಿರುದ್ಧ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ

    ಹುಬ್ಬಳ್ಳಿ: ಯಾರು ಎಲ್ಲೇ ಗಲಭೆ ಮಾಡಿದರೂ ತಪ್ಪು, ಅದನ್ನು ಖಂಡಿಸಬೇಕು. ಆದ್ರೆ ಅಲ್ಪಸಂಖ್ಯಾತರು ಗಲಭೆ ಮಾಡಿದ್ರೆ ಯಾಕೆ ಖಂಡನೆ ಮಾಡೋದಿಲ್ಲ? ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ (Pralhad Joshi) ಅವರು ಸಿಎಂ ಸಿದ್ದರಾಮಯ್ಯ (Siddaramaiah) ಅವರನ್ನ ಪ್ರಶ್ನೆ ಮಾಡಿದ್ದಾರೆ.

    ಹುಬ್ಬಳ್ಳಿಯಲ್ಲಿ (Hubballi) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚನ್ನಗಿರಿ ಲಾಕಪ್‌ ಡೆತ್ (Channagiri Lockup Death) ವಿಚಾರದಲ್ಲಿ ಸಿದ್ದರಾಮಯ್ಯನವರು ತೆಗೆದುಕೊಂಡ ನಿರ್ಧಾರವನ್ನು ಈ ಹಿಂದೆ ನಡೆದ ಯಾವುದೇ ವಿಚಾರದಲ್ಲಿಯೂ ತೆಗೆದುಕೊಂಡಿಲ್ಲ. ಅಂಜಲಿ, ನೇಹಾ ಹಿರೇಮಠ ಪ್ರಕರಣದಲ್ಲಿ ಪೊಲೀಸರ ಮೇಲೆ ಕ್ರಮ ಆಗಿಲ್ಲ. ಆದರೆ ಈ ಪ್ರಕರಣದಲ್ಲಿ ಪೊಲೀಸರ ಮೇಲೆ ಕ್ರಮ ಯಾಕೆ ಅಂತ ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಜಗತ್ತನ್ನೇ ಬೆಚ್ಚಿ ಬೀಳಿಸಿದ ಸೋಂಕಿತ ರಕ್ತ ಹಗರಣ – ಯುಕೆಯಲ್ಲಿ ಡೆಡ್ಲಿ ಚಿಕಿತ್ಸೆ ತಂದ ವಿಪತ್ತು; ಏನಿದು ಹಗರಣ?

    ಒತ್ತಡ ಹಾಕಿದ್ರೆ ಪೊಲೀಸರೇ ಓಡಿ ಹೋಗ್ತಾರೆ:
    ಸಿದ್ದರಾಮಯ್ಯನವರೇ ನೀವು ಎಷ್ಟು ತುಷ್ಟೀಕರಣದ ರಾಜಕೀಯ ಮಾಡುತ್ತಿದ್ದೀರಿ, ನಿಮ್ಮ ಈ ತುಷ್ಟಿಕರಣ ರಾಜಕೀಯದಿಂದ ಅರಾಜಕತೆ ಸೃಷ್ಟಿ ಆಗುತ್ತದೆ. ಅಲ್ಪಸಂಖ್ಯಾತರು ಗಲಭೆ ಮಾಡಿದ್ರೆ ಯಾಕೆ ಖಂಡನೆ ಮಾಡೋದಿಲ್ಲ? ಯಾರೇ ಗಲಭೆ ಮಾಡಿದ್ರೂ ತಪ್ಪು, ಅದನ್ನು ಖಂಡಿಸಲೇಬೇಕು. ಆದ್ರೆ ಈ ವಿಚಾರದಲ್ಲಿ ಪೊಲೀಸರ ನೈತಿಕತೆ ಕುಗ್ಗಿಸುವ ಪ್ರಯತ್ನ ಮಾಡಲಾಗುತ್ತಿದೆ. ಇದರಿಂದ ಪೊಲೀಸರು ಯಾವುದೇ ಕ್ರಮ ತೆಗೆದುಕೊಳ್ಳುವುದಿಲ್ಲ, ಠಾಣೆ ಬಿಟ್ಟು ಓಡಿಹೋಗ್ತಾರೆ ಎಂದು ಎಚ್ಚರಿಕೆ ನೀಡಿದ್ದಾರೆ.

    ಇನ್ನೂ ಪೊಲೀಸರು ಪ್ರತಿ 2 ಗಂಟೆಗೆ ಡ್ರಿಲ್‌ ಮಾಡಬೇಕು ಎಂಬ ಸಿಎಂ ಆದೇಶ ವಿಚಾರಕ್ಕೆ ಪ್ರತಿಕ್ರಿಯಿಸಿ, ಮೊದಲು ಸಿಎಂಗೆ ಮತ್ತು ಗೃಹಸಚಿವರಿಗೆ ಡ್ರಿಲ್‌ ಮಾಡಿಸಬೇಕು. ರಾಜ್ಯ ಪೊಲೀಸರಿಂದು ಒತ್ತಡದಲ್ಲಿ ಕೆಲಸ ಮಾಡುವ ಸ್ಥಿತಿ ನಿರ್ಮಾಣವಾಗಿದೆ. ಔರಾಧ್ ಕರ್ ವರದಿಯನ್ನೇ ಇನ್ನೂ ಜಾರಿ ಮಾಡಿಲ್ಲ, 2 ಗಂಟೆಗೊಮ್ಮೆ ಡ್ರಿಲ್‌ ಮಾಡಿ ಅಂದರೆ ಅವರು ಎಲ್ಲಿಂದ ಮಾಡಬೇಕು? ಎಂದು ಪ್ರಶ್ನೆ ಮಾಡಿದ್ದಾರೆ. ಇದನ್ನೂ ಓದಿ: ಮಹಿಳೆಯ ಧ್ವನಿಯಲ್ಲಿ ಮಾತನಾಡಿ 7 ವಿದ್ಯಾರ್ಥಿನಿಯರ ಅತ್ಯಾಚಾರ – ಆರೋಪಿ ಸಿಕ್ಕಿಬಿದ್ದಿದ್ದೇ ರೋಚಕ

    ಪೊಲೀಸರು ಹುಚ್ಚರಂತೆ ರಸ್ತೆಯಲ್ಲಿ ಓಡಾಡಬೇಕಾ? ಹೀಗೆ ಮಾಡಿದರೆ ಜನ ಏನು ಹೇಳತ್ತಾರೆ? ಕರ್ನಾಟಕ ಸರ್ಕಾರ ಮತಿಭ್ರಮಣೆಗೊಂಡಿದೆ. ಆದೇಶ ಮಾಡುವುದಕ್ಕೂ ಮುನ್ನ ಯೋಚನೆ ಮಾಡುತ್ತಿಲ್ಲ. ಪೊಲೀಸರಿಗೆ ಹೊರಡಿಸಿರುವ ಈ ಆದೇಶಕ್ಕೆ ಕವಡೆ ಕಾಸಿನ ಕಿಮ್ಮತ್ತಿಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ.  ಇದನ್ನೂ ಓದಿ: ಕುರಾನ್ ಸತ್ಯವಾಗಿ ನನ್ನ ಗಂಡನಿಗೆ ಯಾವ್ದೇ ರೋಗ ಇರಲಿಲ್ಲ, ಪೊಲೀಸರೇ ಹೊಡೆದು ಕೊಂದಿದ್ದಾರೆ: ಮೃತ ಆದಿಲ್ ಪತ್ನಿ

  • ಅಂಜಲಿ ಕುಟುಂಬಕ್ಕೆ ವೈಯಕ್ತಿಕವಾಗಿ 50 ಸಾವಿರ ಚೆಕ್ ನೀಡಿದ ಸಚಿವ ಜೋಶಿ

    ಅಂಜಲಿ ಕುಟುಂಬಕ್ಕೆ ವೈಯಕ್ತಿಕವಾಗಿ 50 ಸಾವಿರ ಚೆಕ್ ನೀಡಿದ ಸಚಿವ ಜೋಶಿ

    ಹುಬ್ಬಳ್ಳಿ: ನಗರದ ವೀರಾಪುರ ಓಣಿ ನಿವಾಸಿ ಮೃತ ಅಂಜಲಿ ಅಂಬಿಗೇರ (Anjali Ambigera) ಕುಟುಂಬಕ್ಕೆ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿಯವರು (Pralhad Joshi) ವೈಯಕ್ತಿಕವಾಗಿ 50 ಸಾವಿರ ರೂ. ಚೆಕ್‌ ಅನ್ನು ಹಸ್ತಾಂತರಿಸಿದರು.

    ಅಂಜಲಿ ಮನೆಗೆ ಭೇಟಿ ನೀಡಿದ‌ ಬಳಿಕ‌ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಬಿಹಾರದಿಂದ‌ ನೇರವಾಗಿ ಅಂಜಲಿ ಮನೆಗೆ ಭೇಟಿ ನೀಡಿದ್ದೇನೆ. ಅಂಜಲಿಯ ಅಜ್ಜಿ‌ಸಹೋದರಿಯರು‌ ಹೇಳಿದ ಮಾತು ಕೇಳಿದ್ರೆ ಭಯ ಹುಟ್ಟುತ್ತೆ. ಈ ಹಿಂದೆಯೂ ಆರೋಪಿ ಬಗ್ಗೆ ದೂರು ಕೇಳಿಬಂದಿದ್ದರೂ ನಿರ್ಲಕ್ಷ್ಯ ವಹಿಸಿದ್ದಾರೆ. ಆ ಸಂದರ್ಭ ಯಾವ ಅಧಿಕಾರಿಗಳಿದ್ದರು‌ ಅವರ ಬಗ್ಗೆಯೂ‌ ತನಿಖೆಯಾಗಬೇಕು ಎಂದು ಆಗ್ರಹಿಸಿದರು.

    ನೇಹಾ ಹತ್ಯೆಯಾದಾಗ ಬಹೊದೊಡ್ಡ ಜನಾಂದೋಲನವಾಯಿತು. ಆ ವೇಳೆ ಸಿಎಂ ಹಾಗೂ ಗೃಹ ಸಚಿವರ ಹೇಳಿಕೆ‌ ಕೃತ್ಯ ನಡೆಸುವವರಿಗೆ‌ ಪ್ರೋತ್ಸಾಹ ನೀಡಿದಂತಾಯಿತು. ಸಿಎಂ‌ ಅವರು ಹೊಣೆಗೇಡಿತನದ ಹೇಳಿಕೆ‌‌ ನೀಡಿದ್ದರ ಪರಿಣಾಮ‌ ಈ‌ ಘಟನೆಯಾಗಿದೆ. ಸರ್ಕಾರಕ್ಕೆ ಗಂಭೀರತೆ ಇಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ 490 ಕೊಲೆ 600 ರೈತರ ಆತ್ಮಹತ್ಯೆಗಳಾಗಿವೆ. ಇದನ್ನ ಪ್ರಶ್ನೆ ಮಾಡಿದ್ರೆ ಈ ಹಿಂದೆ ಎಷ್ಟು ಪ್ರಕರಣಗಳಾಗಿವೆ ಅಂತಾ ಹುಡುಕುತ್ತಾರೆ ಎಂದು ಕಾಂಗ್ರೆಸ್‌ ಸರ್ಕಾರದ ವಿರುದ್ಧ ಕಿಡಿಕಾರಿದರು. ಇದನ್ನೂ ಓದಿ: ಹುಬ್ಬಳ್ಳಿ ಅಂಜಲಿ ಹತ್ಯೆ ಪ್ರಕರಣ – ಮನನೊಂದು ಸಹೋದರಿ ಆತ್ಮಹತ್ಯೆಗೆ ಯತ್ನ

    ಟ್ರಾನ್ಸ್ ಫರ್ ಗಳಲ್ಲಿ‌‌ ಸಿಕ್ಕಾಪಟ್ಟೆ ಹಣ ತೆಗೆದುಕೊಳ್ತಾರೆ. ಗಾಂಜಾ‌ ಅಫೀಮು‌ ಚಟುವಟಿಕೆಗಳಿಗೆ‌ ಕಡಿವಾಣ ಹಾಕಲು ಆಗ್ತಿಲ್ಲ. ಕಾನೂನು‌ ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ. ಈ‌ ಸರ್ಕಾರದಲ್ಲಿ‌‌ ಹತ್ಯೆ ಹಾಗೂ ಆತ್ಮಹತ್ಯೆ ಸೇರಿದಂತೆ‌ ಅಭಿವೃದ್ದಿಯ ಸಮಾಧಿಯಾಗಿದೆ. ಅನೇಕ‌ ಬಡ‌ಜನರು ತಮ್ಮ‌ ಮಕ್ಕಳನ್ನ ಕಾಲೇಜಿಗೆ ಶಾಲೆಗೆ ಕಳುಹಿಸಲು ಭಯಪಡುತ್ತಿದ್ದಾರೆ. ಯಾರೋ ಒಬ್ಬ ಅಧಿಕಾರಿ‌ ಸಸ್ಪೆಂಡ್ ಮಾಡಿ‌ ಕೈತೊಳೆದುಕೊಳ್ಳಬಾರದು. ಜನರು ಗಾಬರಿಗೊಂಡಿದ್ದಾರೆ ಎಂದರು.

    ಜನರೇ ಬಂದು‌ ಹೋರಾಟ ಮಾಡುವ ಪರಿಸ್ಥಿತಿಯನ್ನ‌ ಸರ್ಕಾರ ತಂದುಕೊಳ್ಳಬಾರದು. ಡ್ರಗ್ಸ್, ಗಾಂಜಾ ಅಫೀಮು‌ ಚಟುವಟಿಕೆಗಳಿಗೆ ಕಡಿವಾಣ ಹಾಕಬೇಕು. ಈ‌ ಪ್ರಕರಣದ ಸಂಪೂರ್ಣ ತನಿಖೆ‌ಗೆ ಫಾಸ್ಟ್ ಟ್ರ್ಯಾಕ್‌ ಕೋರ್ಟ್ ತೆರೆಯಬೇಕು. ಈ‌ಘಟನೆಗಳಿಗೆ ಸರ್ಕಾರ ಹಾಗೂ‌ ಗೃಹ‌ ಸಚಿವರ ನಿರ್ಲಕ್ಷ್ಯವೇ ಕಾರಣ ಎಂದು ಜೋಶಿ ಗರಂ ಆದರು.