Tag: ಪ್ರಹ್ಲಾದ್ ಜೋಶಿ

  • ಪ್ರಜ್ವಲ್ ರೇವಣ್ಣ ಅರೆಸ್ಟ್ ಆಗಲೇಬೇಕು: ಜೋಶಿ

    ಪ್ರಜ್ವಲ್ ರೇವಣ್ಣ ಅರೆಸ್ಟ್ ಆಗಲೇಬೇಕು: ಜೋಶಿ

    ಹುಬ್ಬಳ್ಳಿ: ವೀಡಿಯೋಗಳನ್ನು ಯಾರು ವೈರಲ್ ಮಾಡಿದ್ದಾರೆ ಎನ್ನುವುದಕ್ಕಿಂತ ಸಾರ್ವಜನಿಕ ಜೀವನದಲ್ಲಿ ಹೇಗೆ ವರ್ತಿಸುತ್ತೇವೆ ಎಂಬುದು ಮುಖ್ಯ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi ) ಹೇಳಿದ್ದಾರೆ.

    ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜ್ವಲ್ ರೇವಣ್ಣ ಅವರ ಪೆನ್‍ಡ್ರೈವ್ ಪ್ರಕರಣ (Prajwal Revanna Pendrive Case) ಹಾಗೂ ರೇವಣ್ಣ (H.D Revanna) ಬಂಧನದ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಈ ವೇಳೆ ಪ್ರಕರಣದ ತನಿಖೆಯನ್ನು ಎಸ್‍ಐಟಿ ನಡೆಸುತ್ತಿದೆ. ಗಂಭೀರ ಸೆಕ್ಷನ್‍ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿರುವುದರಿಂದ ರೇವಣ್ಣ ಬಂಧನವಾಗಿದೆ. ಈ ರೀತಿಯ ಆಗಬಾರದಿತ್ತು. ಹಲವಾರು ಮಹಿಳೆಯರು ದೂರು ಕೊಟ್ಟಿದ್ದಾರೆ. ಪ್ರಜ್ವಲ್ ರೇವಣ್ಣ ಸಹ ಅರೆಸ್ಟ್ ಆಗಲೇಬೇಕು. ಪ್ರಕರಣದ ತನಿಖೆ ಸೂಕ್ತ ರೀತಿಯಲ್ಲಿ ಆಗಬೇಕು. ಈ ವಿಚಾರದಲ್ಲಿ ನಮ್ಮ ಪಕ್ಷದ ನಿಲವು ಸ್ಪಷ್ಟವಾಗಿದೆ ಎಂದಿದ್ದಾರೆ. ಇದನ್ನೂ ಓದಿ: ಆ ಯುವತಿ ನಂಬರ್‌ಗೆ ದಿನಕ್ಕೆರಡು ಬಾರಿ ಕರೆ ಮಾಡ್ತಿದ್ದಾರಂತೆ ಪ್ರಜ್ವಲ್ – ರಹಸ್ಯ ಸ್ಫೋಟ!

    ರೇವಣ್ಣರಿಗೆ ಸಾಕಷ್ಟು ವಯಸ್ಸಾಗಿದೆ ಇದು ದುರ್ದೈವ. ಸಾರ್ವಜನಿಕ ಜೀವನದಲ್ಲಿ ಹೇಗೆ ವರ್ತನೆ ಮಾಡುತ್ತೇವೆ ಎಂಬುದು ಬಹಳ ಮುಖ್ಯ. ವೀಡಿಯೋ ರಿಲೀಸ್ ಆಗಿರುವುದು ಬೇಸರದ ವಿಚಾರ. ಈ ರೀತಿಯ ಘಟನೆ ಆಗಬಾರದಿತ್ತು. ವೀಡಿಯೋ ನನ್ನದಲ್ಲಾ ಎಂದರೆ ನಾವು ಎಫ್‍ಎಸ್‍ಎಲ್‍ಗೆ ಕಳುಹಿಸುತ್ತವೆ. ವೀಡಿಯೋ ಯಾರು ರಿಲೀಸ್ ಮಾಡಿದರು ಅನ್ನೋದು ಚರ್ಚೆ ವಿಷಯ ಅಲ್ಲ. ಮಹಿಳೆಯರ ಜೊತೆಗೆ ನಡೆದುಕೊಂಡಿರುವ ರೀತಿ ಸರಿಯಾದುದಲ್ಲ ಎಂದು ಅವರು ಹೇಳಿದ್ದಾರೆ.

    ದಿಂಗಾಲೇಶ್ವರ ಶ್ರೀಗಳ ಆರೋಪದ ವಿಚಾರವಾಗಿ, ಹುಬ್ಬಳ್ಳಿ ಧಾರವಾಡದಲ್ಲಿ ಏನೇ ಆದರೂ ಅದಕ್ಕೆ ಜೋಶಿ ಕಾರಣ ಎನ್ನುವುದು ಕೆಲವರ ಮನಸ್ಥಿತಿ. ಸದ್ಯ ಕಾಂಗ್ರೆಸ್ ಸರ್ಕಾರ ಇದೆ. ನಮ್ಮ ಸರ್ಕಾರ ಇದ್ದಾಗಲೂ ಕೂಡ ನಾನು ಅಧಿಕಾರಿಗಳ ವರ್ಗಾವಣೆ ವಿಚಾರದಲ್ಲಿ ಕೈ ಹಾಕಿಲ್ಲ. ಈಗ ದಿಂಗಾಲೇಶ್ವರ ಶ್ರೀಗಳು ನಾನು ಕಾರ್ಯಕ್ರಮ ರದ್ದು ಮಾಡಿಸಿದೆ ಎನ್ನುತ್ತಿದ್ದಾರೆ ಎಂದರು. ಇದನ್ನೂ ಓದಿ: ಏನಿದು ಲುಕ್‌ಔಟ್ ನೋಟಿಸ್, ರೆಡ್ ಕಾರ್ನರ್, ಬ್ಲೂ ಕಾರ್ನರ್ ನೋಟಿಸ್? ಇವು ಹೇಗೆ ಕೆಲಸ ಮಾಡುತ್ತವೆ?

  • ಹರ್ಷಿಕಾ ಹಲ್ಲೆ ಪ್ರಕರಣ- ಪ್ರಹ್ಲಾದ್ ಜೋಶಿ ನಿವಾಸಕ್ಕೆ ಭುವನ್ ದಂಪತಿ ಭೇಟಿ

    ಹರ್ಷಿಕಾ ಹಲ್ಲೆ ಪ್ರಕರಣ- ಪ್ರಹ್ಲಾದ್ ಜೋಶಿ ನಿವಾಸಕ್ಕೆ ಭುವನ್ ದಂಪತಿ ಭೇಟಿ

    ಹುಬ್ಬಳ್ಳಿ: ಸ್ಯಾಂಡಲ್‌ವುಡ್ ನಟಿ ಹರ್ಷಿಕಾ ಪೂಣಚ್ಚ (Harshika Poonacha) ದಂಪತಿ ಇಂದು (ಏ.24) ಸಚಿವ ಪ್ರಹ್ಲಾದ್ ಜೋಶಿ (Prahalad Joshi) ನಿವಾಸಕ್ಕೆ ಭೇಟಿಯಾಗಿದ್ದಾರೆ. ಎಲೆಕ್ಷನ್ ಮುಗಿದ ನಂತರ ಹರ್ಷಿಕಾ ದಂಪತಿ ಮೇಲಿನ ಹಲ್ಲೆಗೆ ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ ಎಂದು ಹರ್ಷಿಕಾ ತಿಳಿಸಿದ್ದಾರೆ.

    ಪ್ರಹ್ಲಾದ್ ಜೋಶಿರನ್ನು ಭೇಟಿಯಾಗಿ ತಮ್ಮ ಮೇಲಿನ ಹಲ್ಲೆ ಬಗ್ಗೆ ವಿವರಿಸಿದ್ದಾರೆ. ದೌರ್ಜನ್ಯದ ವಿಚಾರ ತಿಳಿದ್ಮೇಲೆ ಸಚಿವ ಪ್ರಹ್ಲಾದ್ ಜೋಶಿ ಕಾನೂನು ಕ್ರಮ ಜರುಗಿಸೋದಾಗಿ ದಂಪತಿಗೆ ಭರವಸೆ ನೀಡಿದ್ದಾರೆ. ನಿಮ್ಮ ಜೊತೆ ನಾವಿದ್ದೇವೆ ಎಂದು ಧೈರ್ಯ ತುಂಬಿದ್ದಾರೆ. ಭೇಟಿಯ ಬಳಿಕ ಬಗ್ಗೆ ಹರ್ಷಿಕಾ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.

    ನೇಹಾ ಹಿರೇಮಠ ಕುಟುಂಬಕ್ಕೆ ಸಾಂತ್ವನ ಹೇಳಲು ಹುಬ್ಬಳ್ಳಿಗೆ ಬಂದಿದ್ದೇವೆ ಎಂದು ಹರ್ಷಿಕಾ ಮಾತನಾಡಿದ್ದಾರೆ. ನಮಗೆ ಆದ ತೊಂದರೆಗೆ ಪ್ರಹ್ಲಾದ್ ಜೋಶಿಯವರು ಸ್ಪಂಧಿಸಿದ್ದರು. ಇಲ್ಲಿ ಬರುವ ಮುಂಚೆಯೇ ತಮ್ಮ ಮೇಲಿನ ಹಲ್ಲೆ ಬಗ್ಗೆ ಪ್ರಹ್ಲಾದ್ ಜೋಶಿಯವರು ಸೋಶಿಯಲ್ ಮೀಡಿಯಾದಲ್ಲಿ ಬೇಸರ ವ್ಯಕ್ತಪಡಿಸಿದ್ದರು. ಇದೀಗ ಅವರಿಗೆ ಧನ್ಯವಾದ ತಿಳಿಸಲು ಮನೆಗೆ ಬಂದಿದ್ದೇವೆ ಎಂದು ನಟಿ ಮಾತನಾಡಿದ್ದಾರೆ. ಇದನ್ನೂ ಓದಿ:ಕಾಂಗ್ರೆಸ್ ಪರ ತಮ್ಮ ವಿಡಿಯೋ ದುರ್ಬಳಕೆ: ಗರಂ ಆದ ಅಲ್ಲು ಅರ್ಜುನ್

    ನಮ್ಮ ಕುಟುಂಬ ಯಾರ ತಂಟೆಗೂ ಹೋಗದೆ ನಮ್ಮ ಪಾಡಿಗೆ ನಾವಿದ್ದೇವೆ. ಬೆಂಗಳೂರಿನ ರೆಸ್ಟೋರೆಂಟ್‌ಗೆ ಹೋದಾಗ ಕೆಲವರು ತೊಂದರೆ ಮಾಡಿದ್ದಾರೆ. ಕನ್ನಡ ಮಾತಾಡಿದ್ದಕ್ಕೆ ನಮ್ಮ ಜೊತೆ ಜಗಳ ತೆಗೆದಿದ್ದಾರೆ. ನಮ್ಮ ರಾಜ್ಯದಲ್ಲಿ ನಾವು ಕನ್ನಡ ಮಾತನಾಡಿದ್ದೇ ತಪ್ಪಾ ಎಂದು ನಟಿ ಪ್ರಶ್ನಿಸಿದ್ದಾರೆ. ಅಂದು ಸಾಕಷ್ಟು ಜನರು ಜಮಾಯಿಸಿ ದೌರ್ಜನ್ಯ ಮಾಡಿದ್ದರು. ಕತ್ತಲ್ಲಿದ್ದ ಚೈನ್ ಕಿತ್ತುಕೊಳ್ಳಲು ಪ್ರಯತ್ನಿಸಿದ್ದರು. ಸೆಲೆಬ್ರಿಟಿಗಳಿಗೆ ಹೀಗಾದರೆ ಜನಸಾಮಾನ್ಯರ ಸ್ಥಿತಿಯೇನು ಎಂದ ಹರ್ಷಿಕಾ ಬೇಸರ ಹೊರಹಾಕಿದ್ದಾರೆ.

    ಈ ವೇಳೆ, ಭುವನ್ ಪೊನ್ನಣ್ಣ ಪ್ರತಿಕ್ರಿಯಿಸಿ, ಜೋಶಿ ಸರ್‌ಗೆ ಭೇಟಿಯಾಗಿ ನಮಗಾದ ತೊಂದರೆ ಬಗ್ಗೆ ಹೇಳಿದ್ದೇವೆ. ಎಲೆಕ್ಷನ್ ಆದ ಮೇಲೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಜೋಶಿ ಸರ್ ಭೇಟಿಯಾಗಿ ನಮಗೆ ಧೈರ್ಯ ಬಂದಿದೆ. ಬೆಂಗಳೂರು ಪೊಲೀಸರು ಸಮರ್ಪಕ ತನಿಖೆ ಮಾಡುತ್ತಿದ್ದಾರೆ. ಆರೋಪಿಗಳನ್ನು ಗುರುತಿಸಿದ್ದು ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ. ಈ ಪ್ರಕರಣಕ್ಕೆ ಪೊಲೀಸರು ಸಾಕಷ್ಟು ಬೆಂಬಲ ನೀಡಿದ್ದಾರೆ ಎಂದು ಮಾತನಾಡಿದ್ದಾರೆ.

  • ಜೋಶಿ ವಿರುದ್ಧ ಸ್ಪರ್ಧೆ ಇಲ್ಲ – ನಾಮಪತ್ರ ವಾಪಸ್‌ ಪಡೆದ ದಿಂಗಾಲೇಶ್ವರ ಶ್ರೀ

    ಜೋಶಿ ವಿರುದ್ಧ ಸ್ಪರ್ಧೆ ಇಲ್ಲ – ನಾಮಪತ್ರ ವಾಪಸ್‌ ಪಡೆದ ದಿಂಗಾಲೇಶ್ವರ ಶ್ರೀ

    ಧಾರವಾಡ: ಪ್ರಹ್ಲಾದ್‌ ಜೋಶಿ (Pralhad Joshi) ವಿರುದ್ಧ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಶಿರಹಟ್ಟಿಯ ಫಕೀರ ದಿಂಗಾಲೇಶ್ವರ ಸ್ವಾಮೀಜಿ (Dingaleshwar swamiji) ನಾಮಪತ್ರ ವಾಪಸ್‌ ಪಡೆದಿದ್ದಾರೆ.

    ಸ್ವಾಮೀಜಿ ಸೂಚಕರು ಧಾರವಾಡ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿ ನಾಮಪತ್ರವನ್ನು ಹಿಂದಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: ಲೋಕಸಭೆ ಚುನಾವಣೆಗೂ ಮುನ್ನವೇ ಖಾತೆ ತೆರೆದ ಬಿಜೆಪಿ 

     

    ಸ್ವಾಮೀಜಿ ಪರ ನಾಮಪತ್ರ ವಾಪಸ್ ಪಡೆಯಲು ಬಂದಿದ್ದ ಸಚಿನ್ ಪಾಟೀಲ್ ಪ್ರತಿಕ್ರಿಯಿಸಿ, ಸ್ವಾಮೀಜಿ ಅವರ ನಾಮಪತ್ರ ವಾಪಸ್‌ ಪಡೆದಿದ್ದೇವೆ. ದಿಂಗಾಲೇಶ್ವರ ಸ್ವಾಮೀಜಿ ಅವರ ಆದೇಶದಂತೆ ನಾಮಪತ್ರ ಹಿಂದಕ್ಕೆ ಪಡೆಯಲಾಗಿದೆ ಎಂದು ತಿಳಿಸಿದರು.

    ದಿಂಗಾಲೇಶ್ವರ ಶ್ರೀಗಳ ನಾಮಪತ್ರ ವಾಪಸ್‌ ಪಡೆಯುವಲ್ಲಿ ಉಸ್ತುವಾರಿ ಸಚಿವ ಸಂತೋಷ ಲಾಡ್ (Santosh Lad) ಯಶಸ್ವಿಯಾಗಿದ್ದಾರೆ. ಇಂದು ಬೆಳಗಿನ ಜಾವ ನಾಲ್ಕು ಗಂಟೆಯವರೆಗೂ ಹುಬ್ಬಳ್ಳಿ ಖಾಸಗಿ ಹೋಟೆಲಿನಲ್ಲಿ ವಚನಾನಂದ ಶ್ರೀಗಳ ಮಧ್ಯಸ್ಥಿಕೆಯಲ್ಲಿ ಮನವೊಲಿಸುವ ಕಾರ್ಯ ನಡೆದಿತ್ತು.

    ದಿಂಗಾಲೇಶ್ವರ ಶ್ರೀ ಕಣದಿಂದ ಹಿಂದಕ್ಕೆ ಸರಿದ ಕಾರಣ ಧಾರವಾಡದಲ್ಲಿ ಪ್ರಹ್ಲಾದ್‌ ಜೋಶಿ ಹಾಗೂ ವಿನೋದ್‌ ಅಸೂಟಿ (Vinod Asuti) ನಡುವೆ ನೇರ ಹಣಾಹಣಿ ನಡೆಯಲಿದೆ.

     

  • ರಾಜ್ಯದ 28 ಕ್ಷೇತ್ರಗಳಲ್ಲೂ ಗೆಲ್ಲುತ್ತೇವೆ – ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ವಿಶ್ವಾಸ

    ರಾಜ್ಯದ 28 ಕ್ಷೇತ್ರಗಳಲ್ಲೂ ಗೆಲ್ಲುತ್ತೇವೆ – ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ವಿಶ್ವಾಸ

    ಹುಬ್ಬಳ್ಳಿ: ರಾಜ್ಯದಲ್ಲಿ 28 ಕ್ಷೇತ್ರಗಳಲ್ಲೂ ಬಿಜೆಪಿ ಗೆಲ್ಲಲಿದೆ ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ್‌ ಜೋಶಿ (Pralhad Joshi) ವಿಶ್ವಾಸ ವ್ಯಕ್ತಪಡಿಸಿದರು.

    ಹುಬ್ಬಳ್ಳಿಯಲ್ಲಿಂದು (Hubballi) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಚುನಾವಣೆ ಪ್ರಚಾರದ ವೇಳೆ ಬಿಜೆಪಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು ಹೇಳಿದರು. ಇದನ್ನೂ ಓದಿ: ಮತದಾನ ವೇಳೆ ಗುಂಡಿನ ದಾಳಿ, ಇವಿಎಂ ಧ್ವಂಸ – ಮಣಿಪುರದ 11 ಮತಗಟ್ಟೆಗಳಲ್ಲಿ ಮರು ಮತದಾನ

    ನಮ್ಮ ಪರಿವಾರ ಮೋದಿ ಪರಿವಾರ, ಮನೆ ಮನೆಗೆ ಬಿಜೆಪಿ ಘೋಷವಾಕ್ಯ ಮತ್ತು ಅಭಿವೃದ್ಧಿ ವಿಷಯ ಮುಂದಿಟ್ಟುಕೊಂಡು ನಮ್ಮ ಕಾರ್ಯಕರ್ತರು ಪ್ರಚಾರಕ್ಕೆ ಇಳಿದಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ಇಂದು ಹುಬ್ಬಳ್ಳಿಗೆ ಜೆಪಿ ನಡ್ಡಾ – ನೇಹಾ ಕುಟುಂಬಸ್ಥರ ಭೇಟಿ ಸಾಧ್ಯತೆ

    ನಡ್ಡಾ ಮತಯಾಚನೆ:
    ಹುಬ್ಬಳ್ಳಿಯಲ್ಲಿಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ (JP Nadda) ಅವರು ಮತಯಾಚನೆ ನಡೆಸಲಿದ್ದಾರೆ. ಮಧ್ಯಾಹ್ನವೇ ವಿಶೇಷ ವಿಮಾನದ ಮೂಲಕ ಹುಬ್ಬಳ್ಳಿಗೆ ಧಾವಿಸಲಿದ್ದು, ಖಾಸಗಿ ಹೋಟೆಲ್‌ನಲ್ಲಿ ಶಾಸಕರು‌, ಅಭ್ಯರ್ಥಿಗಳು ಹಾಗೂ ಪ್ರಮುಖ ಕಾರ್ಯಕರ್ತರೊಂದಿಗೆ ಸಭೆ ನಡೆಸಲಿದ್ದಾರೆ. ನಂತರ ಸಂಜೆ ಹುಬ್ಬಳ್ಳಿ ಉಣಕಲ್ ಎಂ ಆರ್ ಸಾಕ್ರೆ ಸ್ಕೂಲ್ ಮೈದಾನದಲ್ಲಿ ನಡೆಯುವ ಬಹಿರಂಗ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಸಮಾವೇಶದ ಬಳಿಕ ಖಾಸಗಿ ಹೋಟೆಲ್‌ನಲ್ಲಿ ಕೋರ್‌ಕಮಿಟಿ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಸಚಿವ ಜೋಶಿ ತಿಳಿಸಿದರು.

  • ಕಾಂಗ್ರೆಸ್‌ನವರದ್ದು ಗೂಂಡಾ ಸಂಸ್ಕೃತಿ, ನಮ್ಮ ಕಾರ್ಯಕರ್ತರ ವಾಹನ ತಡೆದಿದ್ದಾರೆ: ಜೋಶಿ ಕಿಡಿ

    ಕಾಂಗ್ರೆಸ್‌ನವರದ್ದು ಗೂಂಡಾ ಸಂಸ್ಕೃತಿ, ನಮ್ಮ ಕಾರ್ಯಕರ್ತರ ವಾಹನ ತಡೆದಿದ್ದಾರೆ: ಜೋಶಿ ಕಿಡಿ

    ಧಾರವಾಡ: ಕಾಂಗ್ರೆಸ್‌ನವರದ್ದು (Congress) ಗೂಂಡಾ ಸಂಸ್ಕೃತಿ. ಕಾಂಗ್ರೆಸ್ ಪಾರ್ಟಿಯಿಂದ ಪ್ರೇರಣೆ ಮತ್ತು ಕುಮ್ಮಕ್ಕಿನಿಂದ ನಮ್ಮ ಕಾರ್ಯಕರ್ತರ ವಾಹನಗಳನ್ನು ತಡೆಹಿಡಿದಿದ್ದಾರೆ ಎಂದು ಧಾರವಾಡ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿ (Pralhad Joshi) ಆರೋಪಿಸಿದ್ದಾರೆ.

    ಹುಬ್ಬಳ್ಳಿಯಲ್ಲಿ ಪಬ್ಲಿಕ್ ಟಿವಿ ಜೊತೆಗೆ ಮಾತನಾಡಿದ ಅವರು, ನಾಮಪತ್ರ ಮೆರವಣಿಗೆಯಲ್ಲಿ ಭಾಗವಹಿಸಲು ಬರುತ್ತಿದ್ದ ನಮ್ಮ ಕಾರ್ಯಕರ್ತರ ವಾಹನಗಳನ್ನು ತಡೆಹಿಡಿಲಾಗಿತ್ತು. ಕೆಳಮಟ್ಟದ ಅವರ ಅಧಿಕಾರಿಗಳನ್ನು ಬಳಸಿಕೊಂಡು ಕಾಂಗ್ರೆಸ್ ಈ ರೀತಿಯಲ್ಲಿ ಮಾಡಿದ್ದರು. ಇದನ್ನು ಲೆಕ್ಕಿಸದೇ ನಮ್ಮ ಮೆರವಣಿಗೆಗೆ ಕಾರ್ಯಕರ್ತರು ಬಂದಿದ್ದರು ಎಂದು ಹೇಳಿದರು.  ಇದನ್ನೂ ಓದಿ: ಕರುನಾಡಲ್ಲಿ ಈ ಬಾರಿ ವಾಡಿಕೆಗಿಂತ ಹೆಚ್ಚಿನ ಮಳೆ ಸಾಧ್ಯತೆ

     

    ಕಾಂಗ್ರೆಸ್ ಪಾರ್ಟಿಯಲ್ಲಿ ಒಗ್ಗಟ್ಟು ಇಲ್ಲ. ಗುಂಪು ರಾಜಕೀಯ ಇದೆ. ಯಾರೇ ಆಗಲಿ ಸಿದ್ಧಾಂತಿಕವಾಗಿ ಟೀಕೆ ಮಾಡಬೇಕು ಹೊರತು ವೈಯಕ್ತಿಕವಾಗಿ ಟೀಕೆ ಮಾಡಬಾರದು. ಇಂದು ದೇವೇಗೌಡರ (Deve Gowda) ಕುಟುಂಬದ ಆಸ್ತಿಯ ಬಗ್ಗೆ ಮಾತನಾಡುವ ಕಾಂಗ್ರೆಸ್ ನಾಯಕರು ಈ ಹಿಂದೆ ದೇವೇಗೌಡರ ಕಾಲಿಗೆ ಬಿದ್ದು ಕುಮಾರಸ್ವಾಮಿ (HD Kumaraswamy) ಅವರನ್ನು ಯಾಕೆ ಸಿಎಂ ಮಾಡಿದರು ಎಂದು ಪ್ರಶ್ನೆ ಮಾಡಿದರು.

    ಎಲ್ಲಾ ಸರ್ವೆಗಳಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್‌ ಎರಡು ಮೂರು ಸೀಟ್ ಗೆದ್ದರೆ ಜಾಸ್ತಿ ಎಂಬ ಫಲಿತಾಂಶ ಬಂದಿದೆ. ಇದರಿಂದ ಕಾಂಗ್ರೆಸ್‌ ಹತಾಶೆಗೊಂಡಿದೆ ಎಂದರು. ಇದನ್ನೂ ಓದಿ: ಭಾಗ್ಯಗಳನ್ನು ಕೊಟ್ಟು ರಾಜ್ಯವನ್ನ ದುಸ್ಥಿತಿಗೆ ತಂದರು: ಕಾಂಗ್ರೆಸ್ ವಿರುದ್ಧ ಸಿ.ಸಿ.ಪಾಟೀಲ ಕಿಡಿ

     

  • ಮತ್ತೆ ಮೋದಿಯನ್ನ ಪ್ರಧಾನಿ ಮಾಡೋದು ಪರಿಶಿಷ್ಟರ ಸಂಕಲ್ಪ: ಪ್ರಹ್ಲಾದ್ ಜೋಶಿ

    ಮತ್ತೆ ಮೋದಿಯನ್ನ ಪ್ರಧಾನಿ ಮಾಡೋದು ಪರಿಶಿಷ್ಟರ ಸಂಕಲ್ಪ: ಪ್ರಹ್ಲಾದ್ ಜೋಶಿ

    ಹುಬ್ಬಳ್ಳಿ: ಪರಿಶಿಷ್ಟ ಸಮುದಾಯ ಈ ಬಾರಿಯೂ ನರೇಂದ್ರ ಮೋದಿಯವರನ್ನೇ (Narendra Modi) ಪ್ರಧಾನಿ ಮಾಡಲು ಸಂಕಲ್ಪ ತೊಟ್ಟಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಹೇಳಿದ್ದಾರೆ.

    ಲೋಕಸಭಾ ಚುನಾವಣೆ (Lok Sabha Election 2024) ಹಿನ್ನಲೆಯಲ್ಲಿ ಏರ್ಪಡಿಸಿದ್ದ ಬಿಜೆಪಿ ಎಸ್‍ಸಿ ಮೋರ್ಚಾ (BJP SC Morcha )ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ನಮ್ಮ ಕೇಂದ್ರ ಸರ್ಕಾರ ಸಮಾಜದಲ್ಲಿ ಸಮಾನತೆ ತರಲೆಂದು ಸಾಕಷ್ಟು ಕ್ರಮಗಳನ್ನು ಕೈಗೊಂಡಿದೆ. ಈ ಹಿನ್ನೆಲೆಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ಜನರು ಈ ಬಾರಿಯೂ ಮೋದಿ ಬೆಂಬಲಕ್ಕೆ ನಿಂತಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

    ನರೇಂದ್ರ ಮೋದಿಯವರನ್ನು ಮೂರನೇ ಬಾರಿ ಪ್ರಧಾನಿಯನ್ನಾಗಿ ನೋಡಲು ಸಂಕಲ್ಪ ಮಾಡಿ ಬಿಜೆಪಿ ಎಸ್‌ಸಿ ಮೋರ್ಚಾ ಮುಖಂಡರು ಮತ್ತು ಪದಾಧಿಕಾರಿಗಳು ಬೃಹತ್ ಸಮಾವೇಶಕ್ಕೆ ಸಿದ್ಧತೆ ನಡೆಸಿದ್ದಾರೆ. ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಎಸ್‍ಸಿ ಮೋರ್ಚಾ ಕಾರ್ಯಕರ್ತರ ಸುಮಾವೇಶ ಹಮ್ಮಿಕೊಂಡಿದ್ದು, ಅಗತ್ಯ ಸಿದ್ಧತೆ ನಡೆದಿದೆ ಎಂದಿದ್ದಾರೆ.

    ಸಮಾವೇಶ ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಭಾನುವಾರವೂ (ಮಾ.31) ಎಲ್ಲಾ ಪದಾಧಿಕಾರಿಗಳ ಪೂರ್ವಭಾವಿ ಸಭೆ ಕರೆದು ಚರ್ಚಿಸಲಾಯಿತು. ಸಭೆಯಲ್ಲಿ ಶಾಸಕ ಮಹೇಶ್ ಟೆಂಗಿನಕಾಯಿ, ಪಕ್ಷದ ಪ್ರಮುಖರಾದ ಬಸವರಾಜ ಅಮ್ಮಿನಬಾವಿ, ಮಹೇಂದ್ರ ಕೌತಾಳ ಹಾಗೂ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

  • ಲೋಕಸಭಾ ಚುನಾವಣೆ ಬಳಿಕ ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಖಚಿತ – ಜೋಶಿ ಭವಿಷ್ಯ

    ಲೋಕಸಭಾ ಚುನಾವಣೆ ಬಳಿಕ ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಖಚಿತ – ಜೋಶಿ ಭವಿಷ್ಯ

    ಹುಬ್ಬಳ್ಳಿ: ಲೋಕಸಭಾ ಚುನಾವಣೆ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅಧಿಕಾರದಿಂದ ಇಳಿಯೋದು ಖಚಿತ ಅಂತ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Prahlad Joshi) ಭವಿಷ್ಯ ನುಡಿದಿದ್ದಾರೆ.

    ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಳೆದ ಬಾರಿ ರಾಜಸ್ಥಾನ, ಮಧ್ಯಪ್ರದೇಶ, ಗುಜರಾತ್‌ ನಲ್ಲಿ ಬಹುಮತ ಗೆದ್ದಿದ್ದೇವೆ. ಅದೇ ರೀತಿ ಕರ್ನಾಟಕದಲ್ಲೂ ಬಿಜೆಪಿ (BJP) 28 ಸ್ಥಾನ ಗೆಲ್ಲುತ್ತೆ. ಹೀಗಾಗಿ ಸಿಎಂ ಸಿದ್ದರಾಮಯ್ಯ ಅಧಿಕಾರದಿಂದ ಇಳಿಯಬೇಕಾಗುತ್ತದೆ. ಅಲ್ಲದೇ ಕಾಂಗ್ರೆಸ್‌ ಪಕ್ಷದಲ್ಲಿ (Congress Party) ಆಂತರಿಕ ಕಚ್ಚಾಟ ಹೆಚ್ಚಾಗಿದೆ. ಸಿದ್ದರಾಮಯ್ಯಗೆ ಬೇರೆ ಯಾರಿಂದಲೂ ಸಮಸ್ಯೆಯಿಲ್ಲ, ಅವರ ಪಕ್ಷದವರಿಂದಲೇ ಸಮಸ್ಯೆ ಎಂದು ಹೇಳಿದ್ದಾರೆ.

    ಇದೇ ವೇಳೆ ಈಶ್ವರಪ್ಪ ಸ್ಪರ್ಧೆ ವಿಚಾರವಾಗಿ ಮಾತನಾಡಿದ ಅವರು, ನಿಧಾನವಾಗಿ ಈಶ್ವರಪ್ಪ ಸಮಾಧಾನ ಆಗ್ತಾರೆ. ಚುನಾವಣೆಗೆ ಬಹಳ ಸಮಯ ಇರುವ ಕಾರಣಕ್ಕೆ ಕೆಲವೆಡೆ ಗೊಂದಲ ಇದೆ. ಲೋಕಸಭೆ ಚುನಾವಣೆ ಬೇರೆ, ವಿಧಾನಸಭೆ ಚುನಾವಣೆ ಬೇರೆ. ಲೋಕಸಭೆಯಲ್ಲಿ ಮೋದಿ ನೋಡಿ ಮತ ಹಾಕ್ತಾರೆ ಎಂದು ಜೋಶಿ ತಿಳಿಸಿದ್ದಾರೆ. ಇದನ್ನೂ ಓದಿ: ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆಲ್ಲದಿದ್ರೆ ಸಿಎಂ ರಾಜೀನಾಮೆ ಕೊಡ್ಬೇಕಾಗುತ್ತೆ: ಎಸ್.ಆರ್. ಶ್ರೀನಿವಾಸ್

    ಬಿಜೆಪಿ ಪ್ರಮುಖರೊಂದಿಗೆ ಜೋಶಿ ಸಭೆ
    ಸಚಿವ ಪ್ರಹ್ಲಾದ್ ಜೋಶಿ ಲೋಕಸಭಾ ಚುನಾವಣಾ ಪ್ರಚಾರಕಾರ್ಯ ಭರ್ಜರಿಯಾಗಿ ನಡೆಸುತ್ತಿದ್ದು, ಹುಬ್ಬಳ್ಳಿ ಅರವಿಂದ್ ನಗರದ ಬಿಜೆಪಿ ಕಚೇರಿಯಲ್ಲಿಂದು ಕುಂದಗೋಳ ವಿಧಾನ ಸಭಾ ಕ್ಷೇತ್ರದ ಶಾಸಕ ಎಂ.ಆರ್ ಪಾಟೀಲ್ ಮತ್ತು ಬಿಜೆಪಿ ಪ್ರಮುಖರ ಜೊತೆಗೆ ನಡೆಸಿದ್ದಾರೆ.

    ಬಳಿಕ ಮಹಿಳಾ ಮೋರ್ಚಾ ಜೊತೆಗೆ ಸಂವಾದ ನಡೆಸಿದ ಜೋಶಿ, ವಿಕಸಿತ ಭಾರತದ ರಕ್ಷಣೆಗಾಗಿ ನರೇಂದ್ರ ಮೋದಿ ಅವರನ್ನು ಮತ್ತೆ ಪ್ರಧಾನಿ ಮಾಡಬೇಕಾದ ಜವಾಬ್ದಾರಿ ನಮ್ಮ ಮೇಲಿದೆ. ಹೀಗಾಗಿ ಬೂತ್ ಮಟ್ಟದ ಕಾರ್ಯಕರ್ತರು ಜನರಿಗೆ ನಮ್ಮ ಸರ್ಕಾರದ ಸಾಧನೆಗಳನ್ನು ಜಾಗೃತಿ ಮೂಡಿಸಿ, ಬಿಜೆಪಿ ಬೆಂಬಲಿಸಬೇಕೆಂದು ಮನವಿ ಮಾಡಿದ್ದಾರೆ. ಇದನ್ನೂ ಓದಿ: ಒನ್ ವೇನಲ್ಲಿ ಲಾರಿ ಚಾಲಕನ ಎಡವಟ್ಟು- ಮಹಿಳೆ ಸಾವು, ಎಎಸ್‍ಪಿ ಗನ್‍ಮ್ಯಾನ್ ಗಂಭೀರ

  • ಈಶ್ವರಪ್ಪ ಹಿರಿಯ ನಾಯಕರು, ಅವರ ಮನವೊಲಿಸುತ್ತೇವೆ: ಪ್ರಹ್ಲಾದ್ ಜೋಶಿ

    ಈಶ್ವರಪ್ಪ ಹಿರಿಯ ನಾಯಕರು, ಅವರ ಮನವೊಲಿಸುತ್ತೇವೆ: ಪ್ರಹ್ಲಾದ್ ಜೋಶಿ

    – ಬಿಜೆಪಿ ರಾಷ್ಟ್ರೀಯ ನಾಯಕರು ಮಾತುಕತೆ ನಡೆಸಲಿದ್ದಾರೆ ಎಂದ ಕೇಂದ್ರ ಸಚಿವ

    ಹುಬ್ಬಳ್ಳಿ: ಲೋಕಸಭೆ (Lok Sabha) ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಈಶ್ವರಪ್ಪ (KS Eshwarappa) ಅವರಿಗೆ ಬೇಸರ ಆಗಿರಬಹುದು. ಅವರ ಮನವೊಲಿಸುವ ಪ್ರಯತ್ನ ಮಾಡಲಾಗುವುದು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಹೇಳಿದರು.

    ಹುಬ್ಬಳ್ಳಿಯಲ್ಲಿ (Hubballi) ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈಶ್ವರಪ್ಪ ಅವರ ಜೊತೆ ಪಕ್ಷದ ರಾಷ್ಟ್ರೀಯ ನಾಯಕರು ಮತ್ತು ಸ್ಥಳೀಯ ನಾಯಕರು ಮಾತುಕತೆ ನಡೆಸಿ ಬೇಸರ ದೂರ ಮಾಡಲಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ಮೈಸೂರಿನಿಂದ ಲಕ್ಷ್ಮಣ್‌, ಚಾಮರಾಜನಗರದಿಂದ ಹೆಚ್.ಸಿ.ಮಹದೇವಪ್ಪ ಪುತ್ರನಿಗೆ ʼಕೈʼ ಟಿಕೆಟ್ ಫೈನಲ್?

    ನಾನೂ ಭೇಟಿ ಮಾಡುವೆ:
    ಈಶ್ವರಪ್ಪ ಅವರು ಅತ್ಯಂತ ಹಿರಿಯ ನಾಯಕರು. ನನಗಿಂತ ಮೊದಲೇ ಬಿಜೆಪಿ (BJP) ರಾಜ್ಯಾಧ್ಯಕ್ಷರಾಗಿ ಇದ್ದವರು. ಟಿಕೆಟ್ ಸಿಗಲಿಲ್ಲ ಎಂಬ ಕಾರಣಕ್ಕೆ ಅನ್ಯ ಯೋಚನೆ ಮಾಡಲಾರರು. ಈಶ್ವರಪ್ಪ ಅವರನ್ನು ಸದ್ಯದಲ್ಲೇ ಭೇಟಿ ಮಾಡಿ ಮಾತನಾಡುವೆ. ಅವರ ಮನವೊಲಿಸುವ ವಿಶ್ವಾಸವಿದೆ. ಪಕ್ಷದ ಹಿರಿಯ ನಾಯಕರಾಗಿ ಅವರು ದುಡುಕಿನ ನಿರ್ಧಾರ ತೆಗೆದುಕೊಳ್ಳುವುದಿಲ್ಲ ಎಂಬ ವಿಶ್ವಾಸ ನನಗಿದೆ ಎಂದು ಹೇಳಿದರು. ಇದನ್ನೂ ಓದಿ: ಸಿಎಂ ಕೇಜ್ರಿವಾಲ್‌ಗೆ ಬಿಗ್ ರಿಲೀಫ್ – ಹೊಸ ಅಬಕಾರಿ ನೀತಿ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು

    ಟಿಕೆಟ್ ಸಿಗದೇ ಇದ್ದಾಗ ಸಹಜವಾಗಿಯೇ ಎಲ್ಲರಿಗೂ ಬೇಸರ ಆಗುತ್ತದೆ. ಹಾಗಾಗಿ ಪರ-ವಿರೋಧ ಅಭಿಪ್ರಾಯ ಸಾಮಾನ್ಯವಾಗಿರುತ್ತದೆ. ಆದರೆ ಪಕ್ಷದ ಹೈಕಮಾಂಡ್ ಅದೆಲ್ಲವನ್ನೂ ಸರಿಪಡಿಸುತ್ತದೆ ಎಂದು ತಿಳಿಸಿದರು. ಇದನ್ನೂ ಓದಿ: ಈಶ್ವರಪ್ಪ ವೈಯಕ್ತಿಕವಾಗಿ ನನ್ನ ಮೇಲೆ ಆರೋಪ ಮಾಡ್ತಿದ್ದಾರೆ: ಬಿಎಸ್‌ವೈ

  • ಹುಬ್ಬಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಕಾಮಗಾರಿ 2 ವರ್ಷದಲ್ಲಿ ಪೂರ್ಣ – ಜೋಶಿ ವಿಶ್ವಾಸ

    ಹುಬ್ಬಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಕಾಮಗಾರಿ 2 ವರ್ಷದಲ್ಲಿ ಪೂರ್ಣ – ಜೋಶಿ ವಿಶ್ವಾಸ

    – ಹುಬ್ಬಳ್ಳಿ ವಿಮಾನ ನಿಲ್ದಾಣದ 2ನೇ ಟರ್ಮಿನಲ್‌ಗೆ ಭಾನುವಾರ ಚಾಲನೆ

    ಹುಬ್ಬಳ್ಳಿ: ವಿಶ್ವದರ್ಜೆ ಮಟ್ಟದಲ್ಲಿ ನಿರ್ಮಿಸಲು ಭಾನುವಾರ (ಇಂದು) ಚಾಲನೆ ನೀಡಿರುವ ವಾಣಿಜ್ಯ ನಗರಿ ಹುಬ್ಬಳಿ ವಿಮಾನ ನಿಲ್ದಾಣ ಕಾಮಗಾರಿ ಇನ್ನೆರೆಡು ವರ್ಷದಲ್ಲಿ ಪೂರ್ಣಗೊಳ್ಳಲಿದೆ ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ್‌ ಜೋಶಿ (Pralhad Joshi) ವಿಶ್ವಾಸ ವ್ಯಕ್ತಪಡಿಸಿದರು.

    ಹುಬ್ಬಳ್ಳಿ ವಿಮಾನ ನಿಲ್ದಾಣದ 2ನೇ ಟರ್ಮಿನಲ್ (Hubli International Airport Terminal) ನಿರ್ಮಾಣಕ್ಕೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಭಾನುವಾರ ವರ್ಚುವಲ್‌ ಮೂಲಕ ಶಂಕುಸ್ಥಾಪನೆ ನೆರವೇರಿಸಿದ ವೇಳೆ ಅವರು ಮಾತನಾಡಿದರು. ಇದನ್ನೂ ಓದಿ: ಮೋದಿ ಜಪಿಸ್ತಿರೋ ಗಂಡಂದಿರಿಗೆ ಊಟ ಬಡಿಸ್ಬೇಡಿ- ಮಹಿಳೆಯರಿಗೆ ಕೇಜ್ರಿವಾಲ್ ಕರೆ

    ಸುಮಾರು 340 ಕೋಟಿ ರೂಪಾಯಿ ವೆಚ್ಚದಲ್ಲಿ ಹುಬ್ಬಳ್ಳಿ ವಿಮಾನ ನಿಲ್ದಾಣದ 2ನೇ ಟರ್ಮಿನಲ್ ಅನ್ನು ನಿರ್ಮಾಣ ಮಾಡಲಾಗುತ್ತಿದೆ. ಅತ್ಯಂತ ವೇಗವಾಗಿ ಕಾಮಗಾರಿ ನಿರ್ವಹಿಸಲಾಗುತ್ತದೆ. 2 ವರ್ಷಗಳ ನಂತರ ಇಲ್ಲಿ 4 ರಿಂದ 10 ವಿಮಾನಗಳ ಪಾರ್ಕಿಂಗ್ (Airport  Parking) ವ್ಯವಸ್ಥೆ ಸಾಧ್ಯವಾಗಲಿದೆ. ನಿತ್ಯ 2,400 ಪ್ರಯಾಣಿಕರ ಸಂಚಾರಕ್ಕೆ ಅನುಕೂಲವಾಗಲಿದೆ ಎಂದು ತಿಳಿಸಿದರು.

    ಭಾನುವಾರ ಪ್ರಧಾನಿ ಮೋದಿಯವರು ಭಾರತದಾದ್ಯಂತ 15 ವಿಮಾನ ನಿಲ್ದಾಣಗಳ ಹೊಸ ಟರ್ಮಿನಲ್ ಕಟ್ಟಡಗಳ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದರು. ಇದರಲ್ಲಿ ಹುಬ್ಬಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ಕಟ್ಟಡ ಕಾಮಗಾರಿಯೂ ಒಂದಾಗಿತ್ತು. 350 ಕೋಟಿ ವೆಚ್ಚದಲ್ಲಿ ಅಂತಾರಾಷ್ಟ್ರೀಯ ದರ್ಜೆಯ ಮೂಲಸೌಕರ್ಯದೊಂದಿಗೆ ಹುಬ್ಬಳ್ಳಿ ಹೊಸ ಟರ್ಮಿನಲ್ ಕಂಗೊಳಿಸಲಿದೆ ಎಂದು ಸಂತಸ ವ್ಯಕ್ತಪಡಿಸಿದರು. ಇದನ್ನೂ ಓದಿ: ಪಶ್ಚಿಮ ಬಂಗಾಳ ಉಳಿಸಿ- ಪ್ರಧಾನಿಗೆ ರಕ್ತದಲ್ಲಿ ಪತ್ರ ಬರೆದ ಕೌಸ್ತವ್ ಬಾಗ್ಚಿ

    ಅಭಿವೃದ್ಧಿ ಹೊಂದುತ್ತಿರುವ ಅವಳಿ ನಗರಗಳಿಗೆ ಈ ಹೊಸ ಕಾಮಗಾರಿ ಹೆಮ್ಮೆಯ ಗರಿಯಾಗಲಿದ್ದು, ವಿಕಸಿತ ಭಾರತಕ್ಕೆ (Vikasit Bharat) ತನ್ನದೆ ಆದ ಕೊಡುಗೆ ನೀಡಲಿದೆ. ಹುಬ್ಬಳ್ಳಿ ವಿಮಾನ ನಿಲ್ದಾಣ ಅಭಿವೃದ್ಧಿ ಕಾರ್ಯಕ್ಕೆ ಚಾಲನೆ ನೀಡಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಕೇಂದ್ರ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾಧಿತ್ಯ ಸಿಂಧಿಯಾ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಶ್ಲಾಘಿಸಿದರು.

    ಕಾರ್ಯಕ್ರಮದಲ್ಲಿ ಶಾಸಕರಾದ ಅರವಿಂದ ಬೆಲ್ಲದ್‌, ಮಹೇಶ್ ಟೆಂಗಿನಕಾಯಿ, ಎಮ್.ಆರ್ ಪಾಟೀಲ್, ಪ್ರಸಾದ ಅಬ್ಬಯ್ಯ, ಹು-ಧಾ ಮಹಾನಗರ ಪಾಲಿಕೆ ಮೇಯರ್ ವೀಣಾ ಭಾರದ್ವಾಡ ಹಾಗೂ ವಿಮಾನ ನಿಲ್ದಾಣದ ಅಧಿಕಾರಿಗಳು ಉಪಸ್ಥಿತರಿದ್ದರು. ಇದನ್ನೂ ಓದಿ: ಪ್ರತಾಪ್ ಸಿಂಹ 10 ವರ್ಷದಲ್ಲಿ ಉತ್ತಮವಾದ ಕೆಲಸ ಮಾಡಿದ್ದಾರೆ, ಟಿಕೆಟ್ ಸಿಗುವ ವಿಶ್ವಾಸವಿದೆ: ಜಿಟಿಡಿ

  • ಅಯೋಧ್ಯೆ ಮಾದರಿ ಮಹಾಶಿವರಾತ್ರಿಗೆ ಶಿವಶರಣರ ನಾಡು ಅಣಿ

    ಅಯೋಧ್ಯೆ ಮಾದರಿ ಮಹಾಶಿವರಾತ್ರಿಗೆ ಶಿವಶರಣರ ನಾಡು ಅಣಿ

    – ಸಿದ್ಧಾರೂಢರ ನೆಲದಲ್ಲಿ ಶ್ರೀ ರಾಮೇಶ್ವರನ ದರ್ಶನಕ್ಕೆ ಪ್ರಹ್ಲಾದ್ ಜೋಶಿ ಸಂಕಲ್ಪ

    ಹುಬ್ಬಳ್ಳಿ: ಮಹಾಶಿವರಾತ್ರಿ (Maha Shivaratri) ದಿನ ಶಂಕರನ ಆರಾಧಕರಿಗೆ ಅಯೋಧ್ಯೆ ಶ್ರೀರಾಮ ಮಂದಿರ (Ram Mandir) ಮಾದರಿಯಲ್ಲಿ ಶ್ರೀ ರಾಮೇಶ್ವರ ಶಿವಲಿಂಗ ದರ್ಶನ ಭಾಗ್ಯ ಕರುಣಿಸಲು ಹುಬ್ಬಳ್ಳಿ (Hubballi) ಸಜ್ಜುಗೊಂಡಿದೆ.

    ವಾಣಿಜ್ಯ ನಗರಿ ಹುಬ್ಬಳ್ಳಿ ಶಿವರಾತ್ರಿಯಂದು ಭೋಲೆ ಶಂಕರನನ್ನು ವಿಭಿನ್ನ ರೀತಿಯಲ್ಲಿ ಸ್ತುತಿಸಲು ಸಜ್ಜಾಗುತ್ತಿದೆ. ಹುಬ್ಬಳ್ಳಿ ದೇಶಪಾಂಡೆ ನಗರದ ಜಿಮ್ ಖಾನ ಮೈದಾನದಲ್ಲಿ ಅದ್ಧೂರಿ ತಯಾರಿ ನಡೆದಿದ್ದು, ದಿನವಿಡೀ ಶಿವಸ್ಮರಣೆ ಕಾರ್ಯಕ್ರಮ ನಡೆಯಲಿದೆ.

    ಹಿಂದುಗಳ ಪವಿತ್ರ ಕ್ಷೇತ್ರ ಅಯೋಧ್ಯಾ ಶ್ರೀರಾಮ ಮಂದಿರದ ಮಾದರಿಯಲ್ಲೇ ಶ್ರೀ ರಾಮೇಶ್ವರ ಶಿವಲಿಂಗ ಮಂಟಪ ಮತ್ತು ಬೃಹತ್ ಗಾತ್ರದ ಶಿವನ ಮೂರ್ತಿ, ಲಿಂಗ ಅತ್ಯಾಕರ್ಷಕವಾಗಿ ಭಕ್ತ ಗಣವನ್ನು ಸೆಳೆಯುವಂತಿದೆ.

     

    ಶಿವ-ಸಂಗೀತ ಸಮ್ಮಿಲನ:
    ಮೂರುಸಾವಿರ ಮಠ, ಸಿದ್ಧಾರೂಢ, ಮುರುಘರಾಜೇಂದ್ರರಂಥ ತಪೋ ಶಿವಯೋಗಿಗಳ, ಶಿವಶರಣರ ನಾಡಿನಲ್ಲಿ ಇದೊಂದು ಐತಿಹಾಸಿಕ ಕಾರ್ಯಕ್ರಮವಾಗಿ ಹೊರಹೊಮ್ಮಲಿದೆ. ಭೀಮಸೇನ್ ಜೋಶಿ, ಗಂಗೂಬಾಯಿ ಹಾನಗಲ್, ಪುಟ್ಟರಾಜ ಗವಾಯಿ ಅವರಂಥ ಸಂಗೀತ ದಿಗ್ಗಜರ ನೆಲದಲ್ಲಿ ಮಹಾ ಶಿವರಾತ್ರಿಯಂದು ಶಿವ-ಸಂಗೀತ ಸಮ್ಮಿಲನ ಎಂಬಂತೆ ಅಯೋಧ್ಯೆ ಮಾದರಿ ಶ್ರೀ ರಾಮೇಶ್ವರ ಶಿವಲಿಂಗ ದರ್ಶನದ ಜೊತೆಗೆ ಶಿವಸ್ಮರಣೆ ಸಂಗೀತ ಕಾರ್ಯಕ್ರಮವೂ ಭಕ್ತರಿಗೆ ಆಹ್ಲಾದಕರವಾಗಿರಲಿದೆ.

    ಪ್ರಹ್ಲಾದ್ ಜೋಶಿ ಸಂಕಲ್ಪ:
    ಅಯೋಧ್ಯೆ ಮಾದರಿಯಲ್ಲಿ ಶ್ರೀ ರಾಮೇಶ್ವರ ಶಿವಲಿಂಗ ಪ್ರತಿಷ್ಠಾಪನೆ ಮೂಲಕ ಮಹಾಶಿವರಾತ್ರಿಯಂದು ಅವಳಿ ನಗರದ ಸರ್ವ ಶಿವಭಕ್ತರಿಗೆ ಶಿವನ ದರ್ಶನ ಮತ್ತು ಶಿವನಾಮ ಸ್ಮರಣೆಯಲ್ಲಿ ತೊಡಗಿಸಬೇಕೆಂಬ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಅವರ ಸಂಕಲ್ಪ ಈಗ ಈಡೇರುತ್ತಿದೆ.

    ಅಯೋಧ್ಯೆ (Ayodhya) ಮಾದರಿ ರಾಮೇಶ್ವರನನ್ನು ಪ್ರತಿಷ್ಠಾಪನೆ ಜೊತೆಗೆ ಝಗಮಗಿಸುವ ವಿದ್ಯುತ್ ದೀಪಾಲಂಕಾರ ಸಹ ಮಾಡಲಾಗಿದೆ. ಭಕ್ತರಿಗೆ ಅಹೋರಾತ್ರಿ ಪ್ರಸಾದ ವಿನಿಯೋಗ ಮತ್ತು ಉಚಿತವಾಗಿ ಪಂಚಮುಖಿ ರುದ್ರಾಕ್ಷಿ ವಿತರಣೆ ವ್ಯವಸ್ಥೆ ಕಲ್ಪಿಸಲಾಗಿದೆ.

    ಶಿವರಾತ್ರಿ ದಿನ ಮಾ.8ರ ಬೆಳಗ್ಗೆ ಹಿರೇಮಠದ ಪಂಡಿತ ರುದ್ರಮುನಿ ಮಹಾಸ್ವಾಮಿಗಳ ದಿವ್ಯ ಸಮ್ಮುಖದಲ್ಲಿ ಮಹಾಶಿವನ ಪೂಜಾ ಕೈಂಕರ್ಯ ನೆರವೇರಲಿದೆ.

    ಪ್ರಹ್ಲಾದ್ ಜೋಶಿ ಅವರಿಂದ ಸಂಗೀತ-ಶಿವನಾಮ ಸ್ಮರಣೆ ಉದ್ಘಾಟನೆ:
    ಶುಕ್ರವಾರ ಸಂಜೆ 6:30ಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ‘ಸಂಗೀತದೊಂದಿಗೆ ಶಿವನಾಮ ಸ್ಮರಣೆ’ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ನಾಡಿನ ಹೆಸರಾಂತ ಕಲಾವಿದರಿಂದ ಭಕ್ತಿ ಸಂಗೀತದ ರಸದೌತಣ ಏರ್ಪಡಿಸಲಾಗಿದೆ.

    ಸಂಗೀತ ಶಿವಾರಾಧನೆಯ ಈ ವಿಶಿಷ್ಟ ಕಾರ್ಯಕ್ರಮದಲ್ಲಿ ರಾತ್ರಿ 8 ಗಂಟೆಯಿಂದ ಗಾಯಕ ಯವ ಕಲಾವಿದ ಸಿದ್ಧಾರ್ಥ ಬೆಳ್ಳಣ್ಣು, ಸುಜಯ ಶಾನ್‌ಭಾಗ್ ಹಾಗೂ ತಂಡದಿಂದ ‘ಶಿವ ಸಂಗೀತ’ ಹಾಗೂ ಹುಬ್ಬಳ್ಳಿಯ ಕಲಾಸುಜಯ ತಂಡದಿಂದ ಸಂಜೆ 7 ರಿಂದ 8 ಗಂಟೆವರೆಗೆ ‘ಶಿವತಾಂಡವ’ ನೃತ್ಯ ಪ್ರದರ್ಶನ ಏರ್ಪಡಿಸಲಾಗಿದೆ.